Tag: Prithvi Amber

  • ‘ಚೌಕಿದಾರ್’ ಅಡ್ಡಾಗೆ ಡೈಲಾಗ್ ಕಿಂಗ್ ಸಾಯಿಕುಮಾರ್ ಎಂಟ್ರಿ

    ‘ಚೌಕಿದಾರ್’ ಅಡ್ಡಾಗೆ ಡೈಲಾಗ್ ಕಿಂಗ್ ಸಾಯಿಕುಮಾರ್ ಎಂಟ್ರಿ

    ಟೈಟಲ್ ಮೂಲಕ ಪ್ರೇಕ್ಷಕರನ್ನು ಒಂಟಿಗಾಲಲ್ಲಿ ನಿಲ್ಲಿಸಿರುವ ದಿಯಾ ಖ್ಯಾತಿಯ ಪೃಥ್ವಿ ಅಂಬಾರ್ ನಟಿಸುತ್ತಿರುವ ಚೌಕಿದಾರ್ (Chowkidar) ಸಿನಿಮಾ ತಂಡದಿಂದ ಮತ್ತೊಂದು ಹೊಸ ಅಪ್ ಡೇಟ್ ಸಿಕ್ಕಿದೆ. ಇತ್ತೀಚೆಗಷ್ಟೇ ಟೈಟಲ್ ಬಿಡುಗಡೆ ಮಾಡಿದ್ದ ಚಿತ್ರತಂಡವೀಗ ಡೈಲಾಗ್ ಕಿಂಗ್ ಸಾಯಿಕುಮಾರ್ ಅವರನ್ನು ತಮ್ಮ ಬಳಗಕ್ಕೆ ಸ್ವಾಗತಿಸಿದೆ. ಚೌಕಿದಾರ್ ಸಿನಿಮಾಕ್ಕೀಗ ಬಹುಭಾಷಾ ನಟ ಸಾಯಿಕುಮಾರ್ ಎಂಟ್ರಿ ಕೊಟ್ಟಿದ್ದಾರೆ. ಆದ್ರೆ ಡೈಲಾಗ್ ಕಿಂಗ್ ಪಾತ್ರದ ಬಗ್ಗೆ ಚಿತ್ರತಂಡ ಗುಟ್ಟುಬಿಟ್ಟುಕೊಟ್ಟಿಲ್ಲ.

    ಕನ್ನಡದಲ್ಲಿ ‘ಆನೆ ಪಟಾಕಿ’ ಸಿನಿಮಾ ಮೂಲಕ ಸ್ಯಾಂಡಲ್‌ವುಡ್‌ಗೆ ಎಂಟ್ರಿಯಾಗಿ, ‘ರಥಾವರ’, ‘ತಾರಕಾಸುರ’ ಸಿನಿಮಾಗಳನ್ನು ನಿರ್ದೇಶಿಸಿ ಯಶಸ್ವಿಯಾಗಿರುವ ನಿರ್ದೇಶಕ ಚಂದ್ರಶೇಖರ್‌ ಬಂಡಿಯಪ್ಪ ಚೌಕಿದಾರ ಸಿನಿಮಾದ ಸೂತ್ರಧಾರರು. ಈವರೆಗೆ ಸಿನಿಮಾದಲ್ಲಿ ಲವರ್‌ ಬಾಯ್‌ನಂತೆ ಕಾಣಿಸಿಕೊಂಡಿರುವ ಪೃಥ್ವಿ ಅಂಬಾರ್‌ ಈ ಚಿತ್ರದಲ್ಲಿ ಆಕ್ಷನ್ ಸೀಕ್ವೆನ್ಸ್ ಮೂಲಕ ಪ್ರೇಕ್ಷಕರನ್ನು ರಂಜಿಸಲಿದ್ದಾರೆ, ಹಾಗಂತ ಚೌಕಿದಾರ್ ಕಂಪ್ಲೀಟ್ ಆಕ್ಷನ್ ಸಿನಿಮಾವಲ್ಲ. ಪಕ್ಕ ಫ್ಯಾಮಿಲಿ ಎಂಟರ್ ಟೈನರ್.

    ವಿದ್ಯಾ ಶೇಖರ್ ಎಂಟರ್ಟೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ಕಲ್ಲಹಳ್ಳಿ ಚಂದ್ರಶೇಖರ್ ಚೌಕಿದಾರ್ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಸಚಿನ್‌ ಬಸ್ರೂರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದು, ವಿ. ನಾಗೇಂದ್ರ ಪ್ರಸಾದ್‌, ಪ್ರಮೋದ್‌ ಮರವಂತೆ ಹಾಡುಗಳಿಗೆ ಸಾಹಿತ್ಯ ಬರೆಯುತ್ತಿದ್ದಾರೆ. ಜುಲೈ ಮೊದಲ ವಾರ ಚೌಕಿದಾರ್ ಸಿನಿಮಾ ಮುಹೂರ್ತ ನೆರವೇರಿಸಲು ಚಿತ್ರತಂಡ ಯೋಜನೆ ಹಾಕಿದೆ.

  • ಪೃಥ್ವಿ ಅಂಬಾರ್ ಚಿತ್ರಕ್ಕೆ ರಥಾವರ ಚಂದ್ರಶೇಖರ್ ಬಂಡಿಯಪ್ಪ ಡೈರೆಕ್ಟರ್

    ಪೃಥ್ವಿ ಅಂಬಾರ್ ಚಿತ್ರಕ್ಕೆ ರಥಾವರ ಚಂದ್ರಶೇಖರ್ ಬಂಡಿಯಪ್ಪ ಡೈರೆಕ್ಟರ್

    ಥಾವರ ಕನ್ನಡ ಚಿತ್ರರಂಗದಲ್ಲಿ ಹೊಸ ಅಲೆ ಎಬ್ಬಿಸಿದ್ದ ಸಿನಿಮಾ. 2015ರಲ್ಲಿ ತೆರೆಗೆ ಬಂದಿದ್ದ ಈ ಚಿತ್ರದಲ್ಲಿ ರೋರಿಂಗ್ ಸ್ಟಾರ್ ಶ್ರೀಮುರಳಿ ಹೊಸ ಅವತಾರದಲ್ಲಿ ಘರ್ಜಿಸಿದ್ದರು. ಬಾಕ್ಸಾಫೀಸ್ ನಲ್ಲಿಯೂ ಒಳ್ಳೆ ಬೆಳೆ ತೆಗೆದಿದ್ದ ರಥಾವರ ಸಿನಿಮಾ ಮೂಲಕ ವಿಶಿಷ್ಟ ಕಥೆ ಹೇಳಿ ನಿರ್ದೇಶನದಲ್ಲಿಯೂ ಗೆದ್ದವರು ಚಂದ್ರಶೇಖರ್ ಬಂಡಿಯಪ್ಪ. ಆನೆ ಪಟಾಕಿ ಮೂಲಕ ಸ್ಯಾಂಡಲ್ ವುಡ್ ಗೆ ಹೆಜ್ಜೆ ಇಟ್ಟಿದ್ದ ಅವರು ಆ ಬಳಿಕ ರಥಾವರ, ತಾರಕಾಸುರ ಸಿನಿಮಾ ಮಾಡಿ ಗೆದ್ದರು. ಈ ಚಿತ್ರಗಳ ಸಕ್ಸಸ್ ಬಳಿಕ ಬಾಲಿವುಡ್ ಗೆ ಹಾರಿರುವ ಚಂದ್ರಶೇಖರ್ ಬಂಡಿಯಪ್ಪ ರೆಡ್ ಕಾಲರ್ ಎಂಬ ಸಿನಿಮಾಗೆ ಆಕ್ಷನ್ ಕಟ್ ಹೇಳಿದ್ದಾರೆ. ಈ ಸಿನಿಮಾದಲ್ಲಿ ಕನ್ನಡದ ಕಿಶೋರ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರದ ಕೆಲಸ ಮುಗಿಸಿರುವ ಅವರು ಗುರುದತ್ ಗಾಣಿಗ ನಿರ್ದೇಶನದ ಕರಾವಳಿ ಚಿತ್ರಕ್ಕೂ ಕಥೆ ಬರೆದಿದ್ದಾರೆ. ಇದೀಗ ಚಂದ್ರಶೇಖರ್ ಬಂಡಿಯಪ್ಪ ಹೊಸ ಕಥೆ ಹೇಳೋದಿಕ್ಕೆ ನಿಮ್ಮ ಮುಂದೆ ಬರ್ತಿದ್ದಾರೆ.

    ದಿಯಾ ಖ್ಯಾತಿಯ ಪೃಥ್ವಿ ಅಂಬಾರ್ (Pruthvi ambaar) ಜೊತೆ ಚಂದ್ರಶೇಖರ್ ಬಂಡಿಯಪ್ಪ (Chandrasekhar Bandiappa)  ಕೈ ಜೋಡಿಸಿದ್ದಾರೆ. ಕಲ್ಟ್ ಕಥೆಗಳನ್ನು ಹೇಳಿ ಸಕ್ಸಸ್ ಕಂಡಿರುವ ಅವರೀಗ ಫ್ಯಾಮಿಲಿ ಕತೆಯತ್ತ ವಾಲಿದ್ದಾರೆ. ಹೌದು ಈ ಬಾರಿ ಚಂದ್ರಶೇಖರ್ ಬಂಡಿಯಪ್ಪ ಫ್ಯಾಮಿಲಿ ಎಂಟರ್ ಟೈನರ್ ಸಿನಿಮಾ ಮಾಡುತ್ತಿದ್ದಾರೆ. ಸಹಜ ನಟನೆಯಿಂದಲೇ ಹೆಸರು ಮಾಡಿದವರು ಪೃಥ್ವಿ..ದಿಯಾ ಸಿನಿಮಾ ಮೂಲಕ ಖ್ಯಾತಿ ಗಳಿಸಿರುವ ಕರಾವಳಿ ಕುವರ ಪರಭಾಷೆಯಲ್ಲಿಯೂ ಮಿಂಚುತ್ತಿದ್ದು, ಇದೀಗ ರಥಾವರ ಡೈರೆಕ್ಟರ್ ಜೊತೆ ಸಿನಿಮಾ ಮಾಡುತ್ತಿರುವುದು ಸಹಜವಾಗಿ ನಿರೀಕ್ಷೆ ಹೆಚ್ಚಿಸಿದೆ.

    ಚಂದ್ರಶೇಖರ್ ಬಂಡಿಯಪ್ಪ ಪ್ರತಿ ಸಿನಿಮಾದಲ್ಲಿಯೂ ಹೊಸ ಕಥೆಯೊಂದಿಗೆ ಬರ್ತಾರೆ. ಆನೆ ಪಟಾಕಿಯಲ್ಲಿ ಕಾಮಿಡಿ, ರಥಾವರದಲ್ಲಿ ಕಲ್ಟ್, ತಾರಕಾಸುರದಲ್ಲೊಂದು ಬಗೆ, ರೆಡ್ ಕಾಲರ್ ನಲ್ಲಿ ಕ್ರೈಮ್ ಥ್ರಿಲ್ಲರ್, ಕರಾವಳಿಯಲ್ಲಿ ಕರಾವಳಿ ಸೊಡಗನ್ನು ಕಟ್ಟಿಕೊಟ್ಟಿರುವ ಅವರು ಹೊಸ ಸಿನಿಮಾದಲ್ಲಿ ಯಾವ ರೀತಿ ಕಥೆಯನ್ನು ಹೇಳಿದ್ದಾರೆ ಎಂಬ ಕುತೂಹಲ ಕೆರಳಿಸಿದೆ.

    ಪೃಥ್ವಿ-ಚಂದ್ರಶೇಖರ್ ಬಂಡಿಯಪ್ಪ ಜೋಡಿಯ ಸಿನಿಮಾವನ್ನು ವಿದ್ಯಾ ಶೇಖರ್ ಎಂಟರ್ಪ್ರೈಸಸ್ ಬ್ಯಾನರ್ ಅಡಿಯಲ್ಲಿ ಕಲ್ಲಹಳ್ಳಿ ಚಂದ್ರಶೇಖರ್ ನಿರ್ಮಾಣ ಮಾಡುತ್ತಿದ್ದಾರೆ. ಸಚಿನ್ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಇನ್ನೂ ಹೆಸರಿಡದ ಈ ಚಿತ್ರದ ಉಳಿದ ತಾರಾಬಳಗ ಹಾಗೂ ತಾಂತ್ರಿಕ ಬಳಗವನ್ನು ಚಿತ್ರತಂಡದ ಒಂದೊಂದಾಗಿ ಮಾಹಿತಿ ನೀಡಲಿದೆ.

  • ಪೃಥ್ಬಿ ಅಂಬರ್ ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್

    ಪೃಥ್ಬಿ ಅಂಬರ್ ಹೊಸ ಸಿನಿಮಾದ ಫಸ್ಟ್ ಲುಕ್ ರಿಲೀಸ್

    ದಿಯಾ ಸಿನಿಮಾ ಮೂಲಕ ಕನ್ನಡಿಗರ ಹೃದಯ ಕದ್ದ ಕರಾವಳಿ ಕುವರ ಪೃಥ್ವಿ ಅಂಬರ್  (Prithvi Amber)  ಸಾಲು ಸಾಲು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಕನ್ನಡದ ಜೊತೆಗೆ ತಮಿಳಿಗೂ ಪಾದರ್ಪಣೆ ಮಾಡಿರುವ ಪೃಥ್ವಿ, ಹೊಸ ಸಿನಿಮಾಕ್ಕೆ ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ. ಯುವ ಪ್ರತಿಭೆ ವೈಭವ್ ಮಹಾದೇವ್ ಸಾರಥ್ಯ ‘ಜೂನಿ’ (Juni) ಸಿನಿಮಾದಲ್ಲಿ ಪೃಥ್ವಿ ನಾಯಕನಾಗಿ ನಟಿಸುತ್ತಿದ್ದಾರೆ.

    ‘ಜನ್ನಿ’ ಎಂಬ ಕಿರುಚಿತ್ರ ನಿರ್ದೇಶಿಸಿದ್ದ ವೈಭವ್ ಮಹಾದೇವ್ (Vaibhav Mahadev) ಜೂನಿ ಸಿನಿಮಾ ಮೂಲಕ ನಿರ್ದೇಶಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ. ಪ್ರಾಗ್ ಫಿಲ್ಮ್ ಸ್ಕೂಲ್  ನಲ್ಲಿ ನಿರ್ದೇಶಕರ ಕೋರ್ಸ್ ಮುಗಿಸಿರುವ ಅವರೀಗ ಈ ಚಿತ್ರಕ್ಕೆ ಕಥೆ ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ವಿಭಿನ್ನ ಟೈಟಲ್ ನ ಜೂನಿ ಫಸ್ಟ್ ಲುಕ್ (First Look) ರಿಲೀಸ್ ಆಗಿದ್ದು, ಪೃಥ್ವಿ ಅಂಬಾರ್ ಜೊತೆಗೆ ನಾಯಕಿ ರಿಷಿಕಾ ನಾಯಕ್ ಡಿಫರೆಂಟ್ ಅವತಾರದಲ್ಲಿ ಕಾಣಿಸಿಕೊಂಡಿದ್ದಾರೆ.

    ‘ಜೂನಿ’ ರೋಮ್ಯಾಂಟಿಕ್ ಕಥಾಹಂದರದ ಸಿನಿಮಾ. ದಿಯಾ ಬಳಿಕ ಪೃಥ್ವಿ ಮತ್ತೊಮ್ಮೆ ಪ್ರೇಮಕಥೆಗೆ ಬಣ್ಣ ಹಚ್ಚಿದ್ದಾರೆ. ಯಾರ ಮೇಲೆ ಪ್ರೀತಿ ಹುಟ್ಟುತ್ತೋ ಅವರ ಮೇಲೆ ಪ್ರೀತಿ ಆಗುತ್ತಾ? ಎಂಬ ಕಥೆಯ ಎಳೆ ಇಟ್ಕೊಂಡು ಚಿತ್ರ ಹೆಣೆಯಲಾಗಿದೆ. ತ್ರಿಶೂಲ ಕ್ರಿಯೇಷನ್ ನಡಿ ಮೋಹನ್ ಕುಮಾರ್ ಎಸ್ ಹಣ ಹಾಕಿದ್ದು, ಶ್ರೇಯಸ್ ವೈ ಎಸ್ ಸಹ ನಿರ್ಮಾಪಕರಾಗಿ ಜವಾಬ್ದಾರಿ ಹೊತ್ತಿದ್ದಾರೆ.

    ಸದ್ದಿಲ್ಲದೇ ಬೆಂಗಳೂರು ಸುತ್ತಮುತ್ತ ಶೂಟಿಂಗ್ ಮುಗಿಸಿರುವ ಜೂನಿ ಚಿತ್ರತಂಡ ಜನವರಿಗೆ ಸಿನಿಮಾವನ್ನು ತೆರೆಗೆ ತರುವ ಯೋಜನೆ ಹಾಕಿಕೊಂಡಿದೆ. ನಕುಲ್ ಅಭ್ಯಂಕರ್ ಸಂಗೀತ, ಶಶಾಂಕ್ ನಾರಾಯಣ ಸಂಕಲನ, ಅಜಿನ್ ಬಿ, ಜಿತಿನ್ ದಾಸ್ ಛಾಯಾಗ್ರಹಣ, ನವೀನ್ ಕಲಾ ನಿರ್ದೇಶನ ಚಿತ್ರಕ್ಕಿದೆ. ಫಸ್ಟ್ ಲುಕ್ ರಿಲೀಸ್ ಮಾಡಿರುವ ಜೂನಿ ಬಳಗ ಟೀಸರ್, ಟ್ರೇಲರ್ ಹಾಡುಗಳು ಹೀಗೆ ಒಂದೊಂದಾಗಿ ರಿಲೀಸ್ ಮಾಡಲು ಸಜ್ಜಾಗಿದೆ.

  • ಮೈಸೂರು ದಸರಾದಲ್ಲಿ ‘F0R REGN’ ಚಿತ್ರದ ಪೋಸ್ಟರ್ ರಿಲೀಸ್

    ಮೈಸೂರು ದಸರಾದಲ್ಲಿ ‘F0R REGN’ ಚಿತ್ರದ ಪೋಸ್ಟರ್ ರಿಲೀಸ್

    ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈಗ ದಸರಾ ಸಡಗರ. ಇದೇ ಸಂದರ್ಭದಲ್ಲಿ ಪೃಥ್ವಿ ಅಂಬರ್ (Prithvi Amber) ಹಾಗೂ ಮಿಲನ ನಾಗರಾಜ್ ನಾಯಕ – ನಾಯಕಿಯಾಗಿ ನಟಿಸಿರುವ  ‘F0R REGN’ (ಫಾರ್ ರಿಜಿಸ್ಟರೇಷನ್) ಚಿತ್ರದ  ‘ಲವ್ ಗಳ್  ಸುಮಧುರ ಹಾರ್ಟ್ ಗಳ್ ಗಿರಗಿರ’ ಎಂಬ ಟ್ರಾವೆಲ್ ವಿಡಿಯೋ ಸಾಂಗ್ ಹಾಗೂ ನೂತನ ಪೋಸ್ಟರ್ ಬಿಡುಗಡೆಯಾಯಿತು. ‘ಮಾಲ್ ಆಫ್ ಮೈಸೂರು’ ಮಲ್ಟಿಪ್ಲೆಕ್ಸ್ ನಲ್ಲಿ ಪ್ರವಾಸೋದ್ಯಮ ಇಲಾಖೆಯ ಜಾಯಿಂಟ್ ಕಮೀಷನರ್ ಕೆ.ಎಂ.ಸವಿತಾ ಅವರು ಹಾಡು ಹಾಗು ಪೋಸ್ಟರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.

    ಚಿತ್ರದ ನಾಯಕಿ ಮಿಲನಾ ನಾಗರಾಜ್ (Milana Nagaraj), ನಿರ್ದೇಶಕ ನವೀನ್ ದ್ವಾರಕನಾಥ್ (Naveen Dwarkanath) ಹಾಗೂ ನಿರ್ಮಾಪಕ ನವೀನ್ ರಾವ್ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮಾಲ್ ನಲ್ಲಿ ಮೊಳಗಿದ ಈ ಸುಮಧುರ ಗೀತೆಗೆ ಅಭಿಮಾನಿಗಳು ಫಿದಾ ಆದರು.  ಇದನ್ನೂ ಓದಿ:ನವೆಂಬರ್ ನಲ್ಲಿ ಅಜಯ್ ರಾವ್ ನಟನೆಯ ‘ಮನ್ ರೇ’ ಶೂಟಿಂಗ್

    ನಾಗಾರ್ಜುನ ಶರ್ಮ ಈ ಹಾಡನ್ನು ಬರೆದಿದ್ದು, ಆರ್ ಕೆ ಹರೀಶ್ ಸಂಗೀತ ನೀಡಿದ್ದಾರೆ. ಐರಾ ಉಡುಪಿ ಹಾಗೂ ದೀಪಕ್ ದೊಡ್ಡೇರ ಈ ಹಾಡನ್ನು ಹಾಡಿದ್ದಾರೆ. ಸದ್ಯದಲ್ಲೇ ನಮ್ಮ ಚಿತ್ರವನ್ನು ಪ್ರಾದೇಶಿಕ ಸೆನ್ಸಾರ್ ಮಂಡಳಿ ವೀಕ್ಷಿಸಲಿದೆ. ಚಿತ್ರದ ನಾಯಕ ಪೃಥ್ವಿ ಅಂಬರ್ ವಿದೇಶ ಪ್ರವಾಸದಲ್ಲಿದ್ದು, ನವೆಂಬರ್ ನಲ್ಲಿ ಬರಲಿದ್ದಾರೆ. ಅವರು ಬಂದ ಕೂಡಲೆ ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡುವುದಾಗಿ ನಿರ್ದೇಶಕರು ತಿಳಿಸಿದ್ದಾರೆ.

    ನಿಶ್ಚಲ್ ಫಿಲಂಸ್ ಮೂಲಕ  ಎನ್ .ನವೀನ್ ರಾವ್ ನಿರ್ಮಿಸಿರುವ ಈ ಚಿತ್ರವನ್ನು  ನವೀನ್ ದ್ವಾರಕನಾಥ್ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆಯನ್ನು ನಿರ್ದೇಶಕರೆ ಬರೆದಿದ್ದಾರೆ. ಹರೀಶ್ ಸಂಗೀತ ನಿರ್ದೇಶನ,  ಅಭಿಷೇಕ್ ಕಲ್ಲತ್ತಿ- ಅಭಿಷೇಕ್ ಕಾಸರಗೋಡು  ಛಾಯಾಗ್ರಹಣ ಹಾಗೂ ಮನು ಶೆಡ್ಗಾರ್ ಅವರ ಸಂಕಲನವಿದೆ. ಪೃಥ್ವಿ ಅಂಬರ್, ಮಿಲನ‌ ನಾಗರಾಜ್, ರವಿಶಂಕರ್, ಬಾಬು ಹಿರಣ್ಣಯ್ಯ, ಸ್ವಾತಿ, ಸುಧಾ ಬೆಳವಾಡಿ, ತಬಲನಾಣಿ, ರಮೇಶ್ ಭಟ್, ಸಿಹಿಕಹಿ ಚಂದ್ರು ಮುಂತಾದವರು  ತಾರಾಬಳಗದಲ್ಲಿದ್ದಾರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪೆಂಟಗನ್ ಟೀಸರ್: ನಿರ್ದೇಶಕರ ಕಚೇರಿಗೆ ಕರವೇ ಮುತ್ತಿಗೆ ಬೆದರಿಕೆ

    ಪೆಂಟಗನ್ ಟೀಸರ್: ನಿರ್ದೇಶಕರ ಕಚೇರಿಗೆ ಕರವೇ ಮುತ್ತಿಗೆ ಬೆದರಿಕೆ

    ರಡು ದಿನಗಳ ಹಿಂದೆಯಷ್ಟೇ ರಿಲೀಸ್ ಆಗಿರುವ ‘ಪೆಂಟಗನ್’ (Pentagon) ಸಿನಿಮಾದ ಟೀಸರ್‍ನಲ್ಲಿ (Teaser) ಕನ್ನಡಪರ ಹೋರಾಟಗಾರರಿಗೆ ರೋಲ್‍ಕಾಲ್ ಎಂದು ಕರೆದಿರುವ ಕುರಿತು ಕನ್ನಡಪರ ಸಂಘಟನೆಗಳು ತೀವ್ರ ಆಕ್ಷೇಪ ವ್ಯಕ್ತ ಪಡಿಸಿವೆ. ಕರ್ನಾಟಕ ರಕ್ಷಣಾ ವೇದಿಕೆ (Karave) ಯುವ ಘಟಕ ಈ ಕುರಿತು ವಿಡಿಯೋವೊಂದನ್ನು ರಿಲೀಸ್ ಮಾಡಿದ್ದು, ರೋಲ್‍ಕಾಲ್ ಪದವನ್ನು ಟೀಸರ್‍ನಿಂದ ಕಿತ್ತುಹಾಕದೇ ಇದ್ದರೆ ನಿರ್ದೇಶಕ ಗುರು ದೇಶಪಾಂಡೆ ಕಚೇರಿಗೆ ಮುತ್ತಿಗೆ ಹಾಕುವುದಾಗಿ ತಿಳಿಸಿದೆ.

    ಕಿಶೋರ್ ನಾಯಕ ನಟಿಸಿರುವ ‘ಪೆಂಟಗನ್’ ಸಿನಿಮಾದ 5ನೇ ಕಥೆಯ ಟೀಸರ್ ಬಿಡುಗಡೆಯ ವೇದಿಕೆಯಲ್ಲೇ ಕನ್ನಡಪರ ಹೋರಾಟಗಾರರಿಗೆ ಅವಮಾನ ಮಾಡಲಾಗಿದೆ ಎಂದು ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ (Rupesh Rajanna) ವಿರೋಧ ವ್ಯಕ್ತಪಡಿಸಿದ್ದರು. ಜೊತೆಗೆ ಕನ್ನಡ ರಕ್ಷಣಾ ವೇದಿಕೆಯ ಅಶ್ವಿನಿ ಗೌಡ ಕೂಡ ಧ್ವನಿಗೂಡಿಸಿದರು. ಇಬ್ಬರೂ ಒಟ್ಟಾಗಿ ವಿರೋಧಿಸಿದ್ದರಿಂದ ನಿರ್ದೇಶಕ ಗುರು ದೇಶಪಾಂಡೆ (Guru Deshpande) ಅದೇ ವೇದಿಕೆಯಲ್ಲೇ ಸ್ಪಷ್ಟನೆ ಕೂಡ ನೀಡಿದ್ದರು. ಇದನ್ನೂ ಓದಿ:ʻಸೂರರೈ ಪೊಟ್ರುʼ ನಾಯಕಿ ಅಪರ್ಣಾ ಜೊತೆ ಕಾಲೇಜು ವಿದ್ಯಾರ್ಥಿಯ ಅನುಚಿತ ವರ್ತನೆ

    ಈ ಕುರಿತು ಮಾತನಾಡಿದ ನಿರ್ದೇಶಕ ಗುರು ದೇಶಪಾಂಡೆ, ‘ಟೀಸರ್ ನೋಡಿ ಎಲ್ಲವನ್ನೂ ತೀರ್ಮಾನ ಮಾಡಬೇಡಿ. ಸಿನಿಮಾ ರಿಲೀಸ್ ಆದ ನಂತರ ಮಾತನಾಡಿ. ಟೀಸರ್ ನಲ್ಲಿ ಏನೇ ಮಾತನಾಡಿಸಿದ್ದರು. ಅದಕ್ಕೆ ಸಿನಿಮಾದಲ್ಲಿ ಉತ್ತರ ಕೊಟ್ಟಿದ್ದೇವೆ. ಸಿನಿಮಾ ನೋಡಿದ ನಂತರ ನಿಮ್ಮಲ್ಲಿ ಪ್ರಶ್ನೆಗಳು ಉಳಿದರೆ, ಆಗ ಪ್ರತಿಭಟಿಸಿ’ ಎಂದು ರೂಪೇಶ್ ರಾಜಣ್ಣ ಅವರನ್ನು ಸಮಾಧಾನಿಸಿದರು.

    ಟೀಸರ್ ನಲ್ಲಿ ನಟ ಪೃಥ್ವಿ ಅಂಬರ್ ಆಡುವ ಡೈಲಾಗ್ ಒಂದೊಂದು ಕನ್ನಡ ಸಂಘಟನೆಯ ಮುಖಂಡನನ್ನು ನೆನಪಿಸುವುದಂತೂ ಸತ್ಯ. ಅದರಲ್ಲೂ ರೋಲ್ ಕಾಲ್, ರೌಡಿ, ‘ಅ’ಕಾರ-‘ಹಕಾರ’, ಮಾಜಿ ರೌಡಿ, ಮಾಜಿ ಭೂಗತ ದೊರೆ ಹೀಗೆ ಸೂಚ್ಯವಾಗಿ ಅನೇಕ ಮಾತುಗಳನ್ನು ಆಡಿಸುವ ಮೂಲಕ ಗುರು ದೇಶಪಾಂಡೆ ಅಚ್ಚರಿ ಮೂಡಿಸಿದ್ದಾರೆ. ಕನ್ನಡ ಪರ ಸಂಘಟನೆಗಳ ಮುಖಂಡರ ಬಗ್ಗೆ ಅನುಮಾನ ಮೂಡುವ ರೀತಿಯಲ್ಲಿ ಟೀಸರ್ ತಯಾರಾಗಿದೆ.

    ಅಷ್ಟೇ ಅಲ್ಲ, ಪ್ರತಿಭಟನೆಯ ನೆಪದಲ್ಲಿ ಹೋರಾಟ, ಬ್ಯಾನ್ ಅಂತ ಹೇಳಿ ಆಮೇಲೆ ಮೌನ ತಾಳುವ ಹೋರಾಟಗಾರರ ಚಳಿಯನ್ನೂ ನಿರ್ದೇಶಕರು ಬಿಡಿಸಿದ್ದಾರೆ. ನೇರವಾಗಿ ರಜನಿಕಾಂತ್ ಸಿನಿಮಾ ಬಿಡುಗಡೆಯ ಹೋರಾಟದ ವಿಷಯವನ್ನು ತಂದಿದ್ದಾರೆ. ಹೀಗಾಗಿ ಒಂದಷ್ಟು ಹೋರಾಟಗಳನ್ನು ಈ ಟೀಸರ್ ನೆನಪಿಸುತ್ತದೆ. ಈ ಟೀಸರ್ ಅನ್ನು ಕನ್ನಡ ಪರ ಹೋರಾಟಗಾರರು ಯಾವ ರೀತಿಯಲ್ಲಿ ತಗೆದುಕೊಳ್ಳುತ್ತಾರೆ ಎನ್ನುವುದೇ ಸದ್ಯಕ್ಕಿರುವ ಪ್ರಶ್ನೆ.

    ಗುರು ದೇಶಪಾಂಡೆ ನಿರ್ದೇಶನದಲ್ಲಿ ಈ ಅಧ್ಯಾಯದ ಮುಖ್ಯ ಭೂಮಿಕೆಯಲ್ಲಿ ಕಿಶೋರ್ ಕಾಣಿಸಿಕೊಂಡಿದ್ದಾರೆ. ಪ್ರಮುಖ ಪಾತ್ರಗಳಲ್ಲಿ ಪೃಥ್ವಿ ಅಂಬರ್, ರೂಪೇಶ್ ರಾಜಣ್ಣ, ಅಶ್ವಿನಿ ಗೌಡ ಸೇರಿದಂತೆ ಹಲವು ಅನುಭವಿ ಕಲಾವಿದರು ಇದ್ದಾರೆ. ಇದು ಕನ್ನಡಪರ ಹೋರಾಟಗಾರನೊಬ್ಬನ ಕಥೆಯೂ ಆಗಿರುವುದರಿಂದ ಕನ್ನಡ ಸಂಘಟನೆಗಳ ಸದಸ್ಯರನ್ನೂ ಈ ಸಿನಿಮಾದಲ್ಲಿ ಬಳಸಿಕೊಂಡಿದ್ದಾರೆ ನಿರ್ದೇಶಕರು.

    ಈ ಕುರಿತು ನಿರ್ದೇಶಕ ಗುರು ದೇಶಪಾಂಡೆ, “ಈ ಕಥೆಯು ಕನ್ನಡದ ಹೋರಾಟಗಾರನೊಬ್ಬನ ಕುರಿತಾಗಿದ್ದು, ಅವನ ವ್ಯಕ್ತಿತ್ವವನ್ನು ವೈಭವೀಕರಿಸದೇ ಅಥವಾ ಅವನ ಕ್ರಿಯಾಶೀಲತೆಯ ಬಗ್ಗೆ ನಕಾರಾತ್ಮಕವಾಗಿ ಹೇಳದೇ, ಹೋರಾಟಗಾರನೊಬ್ಬನ ಒಳತುಮುಲು ಹಾಗೂ ಅವನ ಜೀವನ ಸುತ್ತ ನಡೆಯುವ ಘಟನೆಗಳನ್ನು ತೋರಿಸಲಾಗಿದೆ. ಇದೊಂದು ಸೂಕ್ಷ್ಮ ರೀತಿಯ ಕಥೆಯಾಗಿದ್ದು, ಅದನ್ನು ಅಷ್ಟೇ ನಾಜೂಕಾಗಿ ಹಿಡಿದಿಡುವ ಪ್ರಯತ್ನ ಮಾಡಿದ್ದೇವೆ. ಹೋರಾಟಗಾರನೊಬ್ಬನ ಸಕಾರಾತ್ಮಕ ಮತ್ತು ನಕಾರಾತ್ಮಕ ಅಂಶಗಳನ್ನು ಚರ್ಚಿಸುತ್ತಲೇ, ಹೋರಾಟಗಾರರ ಮೇಲಿನ ಹಲವು ಅನುಮಾನಗಳನ್ನು ನಿವಾರಿಸುವ ಪ್ರಯತ್ನವನ್ನು ಮಾಡಲಾಗಿದೆ,” ಎನ್ನುತ್ತಾರೆ.

    ಈ ಅಧ್ಯಾಯಕ್ಕೆ ಅಭಿಲಾಷ್ ಕಲ್ಲಟ್ಟಿ ಸಿನಿಮಾಟೋಗ್ರಫಿ ಮಾಡಿದ್ದು, ಮಣಿಕಾಂತ್ ಕದ್ರಿ ಅವರ ಸಂಗೀತ ಸಂಯೋಜನೆಯಿದೆ. ಪೆಂಟಗನ್ ಸಿನಿಮಾದಲ್ಲಿ ಒಟ್ಟು ಐದು ಕಥೆಗಳಿದ್ದು, ಆಕಾಶ್ ಶ್ರೀವತ್ಸ (ಶಿವಾಜಿ ಸುರತ್ಕಲ್) ಚಂದ್ರಮೋಹನ್ (ಬ್ರಹ್ಮಚಾರಿ), ರಾಘು ಶಿವಮೊಗ್ಗ (ಚೂರಿಕಟ್ಟೆ), ಕಿರಣ್ ಕುಮಾರ್ (Debut) ಹಾಗೂ ಗುರು ದೇಶಪಾಂಡೆ ತಲಾ ಒಂದೊಂದು ಕಥೆಯನ್ನು ನಿರ್ದೇಶನ ಮಾಡಿದ್ದಾರೆ. ಜಿ ಸಿನಿಮಾಸ್ ಬ್ಯಾನರ್ ನಲ್ಲಿ ಮೂಡಿ ಬಂದಿರುವ ಈ ಸಿನಿಮಾಗೆ ಕ್ರಿಯೇಟಿವ್ ಹೆಡ್ ಮತ್ತು ನಿರ್ಮಾಪಕರು ಗುರು ದೇಶಪಾಂಡೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಪೆಂಟಗನ್’ ಟೀಸರ್ ರಿಲೀಸ್ : ವೇದಿಕೆಯ ಮೇಲೆ ವಿರೋಧಿಸಿದ ರೂಪೇಶ್ ರಾಜಣ್ಣ

    ‘ಪೆಂಟಗನ್’ ಟೀಸರ್ ರಿಲೀಸ್ : ವೇದಿಕೆಯ ಮೇಲೆ ವಿರೋಧಿಸಿದ ರೂಪೇಶ್ ರಾಜಣ್ಣ

    ಕಿಶೋರ್ ನಾಯಕನಾಗಿ ನಟಿಸಿರುವ ‘ಪೆಂಟಗನ್’ (Pentagon) ಸಿನಿಮಾದ 5ನೇ ಕಥೆಯ ಟೀಸರ್ (Teaser) ನಿನ್ನೆ ಬಿಡುಗಡೆ ಆಗಿದೆ. ಕನ್ನಡಪರ ಹೋರಾಟಗಾರನ ಕುರಿತಾದ ಈ ಕಥೆಯಲ್ಲಿ ಕನ್ನಡಪರ ಹೋರಾಟಗಾರರಿಗೆ ಅವಮಾನ ಮಾಡಲಾಗಿದೆ ಎಂದು ವೇದಿಕೆಯ ಮೇಲೆಯೇ ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ (Rupesh Rajanna) ವಿರೋಧಿಸಿದ ಘಟನೆ ನಡೆದಿದೆ. ಕನ್ನಡಪರ ಹೋರಾಟಗಾರರಿಗೆ ರೋಲ್ ಕಾಲ್ ಸೇರಿದಂತೆ ಹಲವು ಶಬ್ದಗಳನ್ನು ಟೀಸರ್ ನಲ್ಲಿ ಬಳಸಲಾಗಿದೆ ಎಂದು ಅವರು ವಿರೋಧಿಸಿದರು. ಜೊತೆಗೆ ಕನ್ನಡ ರಕ್ಷಣಾ ವೇದಿಕೆಯ ಅಶ್ವಿನಿ ಗೌಡ ಕೂಡ ಧ್ವನಿಗೂಡಿಸಿದರು.

    ಈ ಕುರಿತು ಮಾತನಾಡಿದ ನಿರ್ದೇಶಕ ಗುರು ದೇಶಪಾಂಡೆ (Guru Deshpande), ‘ಟೀಸರ್ ನೋಡಿ ಎಲ್ಲವನ್ನೂ ತೀರ್ಮಾನ ಮಾಡಬೇಡಿ. ಸಿನಿಮಾ ರಿಲೀಸ್ ಆದ ನಂತರ ಮಾತನಾಡಿ. ಟೀಸರ್ ನಲ್ಲಿ ಏನೇ ಮಾತನಾಡಿಸಿದ್ದರು. ಅದಕ್ಕೆ ಸಿನಿಮಾದಲ್ಲಿ ಉತ್ತರ ಕೊಟ್ಟಿದ್ದೇವೆ. ಸಿನಿಮಾ ನೋಡಿದ ನಂತರ ನಿಮ್ಮಲ್ಲಿ ಪ್ರಶ್ನೆಗಳು ಉಳಿದರೆ, ಆಗ ಪ್ರತಿಭಟಿಸಿ’ ಎಂದು ರೂಪೇಶ್ ರಾಜಣ್ಣ ಅವರನ್ನು ಸಮಾಧಾನಿಸಿದರು. ಇದನ್ನೂ ಓದಿ: ಕಿಚ್ಚ ಅಭಿಮಾನಿಗಳಿಗೆ ಸಿಹಿಸುದ್ದಿ: ಸುದೀಪ್ ಸಿನಿಮಾ ಬಗ್ಗೆ ಸಿಕ್ತು ಬಿಗ್ ಅಪ್‌ಡೇಟ್

    ಟೀಸರ್ ನಲ್ಲಿ ನಟ ಪೃಥ್ವಿ ಅಂಬರ್ ಆಡುವ ಡೈಲಾಗ್ ಒಂದೊಂದು ಕನ್ನಡ ಸಂಘಟನೆಯ ಮುಖಂಡನನ್ನು ನೆನಪಿಸುವುದಂತೂ ಸತ್ಯ. ಅದರಲ್ಲೂ ರೋಲ್ ಕಾಲ್, ರೌಡಿ, ‘ಅ’ಕಾರ-‘ಹಕಾರ’, ಮಾಜಿ ರೌಡಿ, ಮಾಜಿ ಭೂಗತ ದೊರೆ ಹೀಗೆ ಸೂಚ್ಯವಾಗಿ ಅನೇಕ ಮಾತುಗಳನ್ನು ಆಡಿಸುವ ಮೂಲಕ ಗುರು ದೇಶಪಾಂಡೆ ಅಚ್ಚರಿ ಮೂಡಿಸಿದ್ದಾರೆ. ಕನ್ನಡ ಪರ ಸಂಘಟನೆಗಳ ಮುಖಂಡರ ಬಗ್ಗೆ ಅನುಮಾನ ಮೂಡುವ ರೀತಿಯಲ್ಲಿ ಟೀಸರ್ ತಯಾರಾಗಿದೆ.

    ಅಷ್ಟೇ ಅಲ್ಲ, ಪ್ರತಿಭಟನೆಯ ನೆಪದಲ್ಲಿ ಹೋರಾಟ, ಬ್ಯಾನ್ ಅಂತ ಹೇಳಿ ಆಮೇಲೆ ಮೌನ ತಾಳುವ ಹೋರಾಟಗಾರರ ಚಳಿಯನ್ನೂ ನಿರ್ದೇಶಕರು ಬಿಡಿಸಿದ್ದಾರೆ. ನೇರವಾಗಿ ರಜನಿಕಾಂತ್ ಸಿನಿಮಾ ಬಿಡುಗಡೆಯ ಹೋರಾಟದ ವಿಷಯವನ್ನು ತಂದಿದ್ದಾರೆ. ಹೀಗಾಗಿ ಒಂದಷ್ಟು ಹೋರಾಟಗಳನ್ನು ಈ ಟೀಸರ್ ನೆನಪಿಸುತ್ತದೆ. ಈ ಟೀಸರ್ ಅನ್ನು ಕನ್ನಡ ಪರ ಹೋರಾಟಗಾರರು ಯಾವ ರೀತಿಯಲ್ಲಿ ತಗೆದುಕೊಳ್ಳುತ್ತಾರೆ ಎನ್ನುವುದೇ ಸದ್ಯಕ್ಕಿರುವ ಪ್ರಶ್ನೆ.

    ಗುರು ದೇಶಪಾಂಡೆ ನಿರ್ದೇಶನದಲ್ಲಿ ಈ ಅಧ್ಯಾಯದ ಮುಖ್ಯ ಭೂಮಿಕೆಯಲ್ಲಿ ಕಿಶೋರ್ ಕಾಣಿಸಿಕೊಂಡಿದ್ದಾರೆ. ಪ್ರಮುಖ ಪಾತ್ರಗಳಲ್ಲಿ ಪೃಥ್ವಿ ಅಂಬರ್, ರೂಪೇಶ್ ರಾಜಣ್ಣ, ಅಶ್ವಿನಿ ಗೌಡ ಸೇರಿದಂತೆ ಹಲವು ಅನುಭವಿ ಕಲಾವಿದರು ಇದ್ದಾರೆ. ಇದು ಕನ್ನಡಪರ ಹೋರಾಟಗಾರನೊಬ್ಬನ ಕಥೆಯೂ ಆಗಿರುವುದರಿಂದ ಕನ್ನಡ ಸಂಘಟನೆಗಳ ಸದಸ್ಯರನ್ನೂ ಈ ಸಿನಿಮಾದಲ್ಲಿ ಬಳಸಿಕೊಂಡಿದ್ದಾರೆ ನಿರ್ದೇಶಕರು.

    ಈ ಕುರಿತು ನಿರ್ದೇಶಕ ಗುರು ದೇಶಪಾಂಡೆ, “ಈ ಕಥೆಯು ಕನ್ನಡದ ಹೋರಾಟಗಾರನೊಬ್ಬನ ಕುರಿತಾಗಿದ್ದು, ಅವನ ವ್ಯಕ್ತಿತ್ವವನ್ನು ವೈಭವೀಕರಿಸದೇ ಅಥವಾ ಅವನ ಕ್ರಿಯಾಶೀಲತೆಯ ಬಗ್ಗೆ ನಕಾರಾತ್ಮಕವಾಗಿ ಹೇಳದೇ, ಹೋರಾಟಗಾರನೊಬ್ಬನ ಒಳತುಮುಲು ಹಾಗೂ ಅವನ ಜೀವನ ಸುತ್ತ ನಡೆಯುವ ಘಟನೆಗಳನ್ನು ತೋರಿಸಲಾಗಿದೆ. ಇದೊಂದು ಸೂಕ್ಷ್ಮ ರೀತಿಯ ಕಥೆಯಾಗಿದ್ದು, ಅದನ್ನು ಅಷ್ಟೇ ನಾಜೂಕಾಗಿ ಹಿಡಿದಿಡುವ ಪ್ರಯತ್ನ ಮಾಡಿದ್ದೇವೆ. ಹೋರಾಟಗಾರನೊಬ್ಬನ ಸಕಾರಾತ್ಮಕ ಮತ್ತು ನಕಾರಾತ್ಮಕ ಅಂಶಗಳನ್ನು ಚರ್ಚಿಸುತ್ತಲೇ, ಹೋರಾಟಗಾರರ ಮೇಲಿನ ಹಲವು ಅನುಮಾನಗಳನ್ನು ನಿವಾರಿಸುವ ಪ್ರಯತ್ನವನ್ನು ಮಾಡಲಾಗಿದೆ,” ಎನ್ನುತ್ತಾರೆ.

    ಈ ಅಧ್ಯಾಯಕ್ಕೆ ಅಭಿಲಾಷ್ ಕಲ್ಲಟ್ಟಿ ಸಿನಿಮಾಟೋಗ್ರಫಿ ಮಾಡಿದ್ದು, ಮಣಿಕಾಂತ್ ಕದ್ರಿ ಅವರ ಸಂಗೀತ ಸಂಯೋಜನೆಯಿದೆ. ಪೆಂಟಗನ್ ಸಿನಿಮಾದಲ್ಲಿ ಒಟ್ಟು ಐದು ಕಥೆಗಳಿದ್ದು, ಆಕಾಶ್ ಶ್ರೀವತ್ಸ (ಶಿವಾಜಿ ಸುರತ್ಕಲ್) ಚಂದ್ರಮೋಹನ್ (ಬ್ರಹ್ಮಚಾರಿ), ರಾಘು ಶಿವಮೊಗ್ಗ (ಚೂರಿಕಟ್ಟೆ), ಕಿರಣ್ ಕುಮಾರ್ (Debut) ಹಾಗೂ ಗುರು ದೇಶಪಾಂಡೆ ತಲಾ ಒಂದೊಂದು ಕಥೆಯನ್ನು ನಿರ್ದೇಶನ ಮಾಡಿದ್ದಾರೆ. ಜಿ ಸಿನಿಮಾಸ್ ಬ್ಯಾನರ್ ನಲ್ಲಿ ಮೂಡಿ ಬಂದಿರುವ ಈ ಸಿನಿಮಾಗೆ ಕ್ರಿಯೇಟಿವ್ ಹೆಡ್ ಮತ್ತು ನಿರ್ಮಾಪಕರು ಗುರು ದೇಶಪಾಂಡೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಕನ್ನಡಪರ ಹೋರಾಟಗಾರರ ಕೋಪಕ್ಕೆ ಕಾರಣವಾಗುತ್ತಾ ಪೆಂಟಗನ್ ಟೀಸರ್: ವಿವಾದ ಎಬ್ಬಿಸುವ ವಿಚಾರ

    ಕನ್ನಡಪರ ಹೋರಾಟಗಾರರ ಕೋಪಕ್ಕೆ ಕಾರಣವಾಗುತ್ತಾ ಪೆಂಟಗನ್ ಟೀಸರ್: ವಿವಾದ ಎಬ್ಬಿಸುವ ವಿಚಾರ

    ಗುರು ದೇಶಪಾಂಡೆ ನಿರ್ಮಾಣದಲ್ಲಿ ಮೂಡಿ ಬಂದಿರುವ ‘ಪೆಂಟಗನ್’ ಸಿನಿಮಾದ 5ನೇ ಕಥೆಯ ಟೀಸರ್ ರಿಲೀಸ್ ಆಗಿದ್ದು, ಹತ್ತು ಹಲವು ವಿಚಾರಗಳನ್ನು ಅದು ಹೊತ್ತು ತಂದಿದೆ. ಒಟ್ಟು ಐದು ಕಥೆಗಳ ಸಂಕಲನದಂತಿರುವ ‘ಪೆಂಟಗನ್’ ಸಿನಿಮಾದ ಐದನೇ ಕಥೆಯ ಟೀಸರ್ ಇದಾಗಿದ್ದು ಕನ್ನಡಪರ ಹೋರಾಟಗಾರರೊಬ್ಬರ ಕಥೆಯನ್ನು ಇದು ಒಳಗೊಂಡಿದೆ ಎನ್ನುವ ಅನುಮಾನ ಮೂಡಿಸುತ್ತದೆ. ಟೀಸರ್ ನಲ್ಲಿ ಬಳಸಲಾದ ಸಂಭಾಷಣೆ ಕೇಳಿದರೆ, ಕನ್ನಡ ಪರ ಸಂಘಟನೆಯ ಅನೇಕ ಹೋರಾಟಗಾರರನ್ನು ಅದು ನೆನಪಿಸುತ್ತದೆ.

    ಟೀಸರ್ ನಲ್ಲಿ ನಟ ಪೃಥ್ವಿ ಅಂಬರ್ ಆಡುವ ಡೈಲಾಗ್ ಒಂದೊಂದು ಕನ್ನಡ ಸಂಘಟನೆಯ ಮುಖಂಡನನ್ನು ನೆನಪಿಸುವುದಂತೂ ಸತ್ಯ. ಅದರಲ್ಲೂ ರೋಲ್ ಕಾಲ್, ರೌಡಿ, ‘ಅ’ಕಾರ-‘ಹಕಾರ’, ಮಾಜಿ ರೌಡಿ, ಮಾಜಿ ಭೂಗತ ದೊರೆ ಹೀಗೆ ಸೂಚ್ಯವಾಗಿ ಅನೇಕ ಮಾತುಗಳನ್ನು ಆಡಿಸುವ ಮೂಲಕ ಗುರು ದೇಶಪಾಂಡೆ ಅಚ್ಚರಿ ಮೂಡಿಸಿದ್ದಾರೆ. ಕನ್ನಡ ಪರ ಸಂಘಟನೆಗಳ ಮುಖಂಡರ ಬಗ್ಗೆ ಅನುಮಾನ ಮೂಡುವ ರೀತಿಯಲ್ಲಿ ಟೀಸರ್ ತಯಾರಾಗಿದೆ.

    ಅಷ್ಟೇ ಅಲ್ಲ, ಪ್ರತಿಭಟನೆಯ ನೆಪದಲ್ಲಿ ಹೋರಾಟ, ಬ್ಯಾನ್ ಅಂತ ಹೇಳಿ ಆಮೇಲೆ ಮೌನ ತಾಳುವ ಹೋರಾಟಗಾರರ ಚಳಿಯನ್ನೂ ನಿರ್ದೇಶಕರು ಬಿಡಿಸಿದ್ದಾರೆ. ನೇರವಾಗಿ ರಜನಿಕಾಂತ್ ಸಿನಿಮಾ ಬಿಡುಗಡೆಯ ಹೋರಾಟದ ವಿಷಯವನ್ನು ತಂದಿದ್ದಾರೆ. ಹೀಗಾಗಿ ಒಂದಷ್ಟು ಹೋರಾಟಗಳನ್ನು ಈ ಟೀಸರ್ ನೆನಪಿಸುತ್ತದೆ. ಈ ಟೀಸರ್ ಅನ್ನು ಕನ್ನಡ ಪರ ಹೋರಾಟಗಾರರು ಯಾವ ರೀತಿಯಲ್ಲಿ ತಗೆದುಕೊಳ್ಳುತ್ತಾರೆ ಎನ್ನುವುದೇ ಸದ್ಯಕ್ಕಿರುವ ಪ್ರಶ್ನೆ. ಇದನ್ನೂ ಓದಿ: ತಾಯಿಯಾಗುತ್ತಿರುವ ಗುಡ್‌ ನ್ಯೂಸ್‌ ಕೊಟ್ರು ʻಯೇ ಜವಾನಿ ಹೇ ದಿವಾನಿ’ ನಟಿ

    ಗುರು ದೇಶಪಾಂಡೆ ನಿರ್ದೇಶನದಲ್ಲಿ ಈ ಅಧ್ಯಾಯದ ಮುಖ್ಯ ಭೂಮಿಕೆಯಲ್ಲಿ ಕಿಶೋರ್ ಕಾಣಿಸಿಕೊಂಡಿದ್ದಾರೆ. ಪ್ರಮುಖ ಪಾತ್ರಗಳಲ್ಲಿ ಪೃಥ್ವಿ ಅಂಬರ್, ರೂಪೇಶ್ ರಾಜಣ್ಣ, ಅಶ್ವಿನಿ ಗೌಡ ಸೇರಿದಂತೆ ಹಲವು ಅನುಭವಿ ಕಲಾವಿದರು ಇದ್ದಾರೆ. ಇದು ಕನ್ನಡಪರ ಹೋರಾಟಗಾರನೊಬ್ಬನ ಕಥೆಯೂ ಆಗಿರುವುದರಿಂದ ಕನ್ನಡ ಸಂಘಟನೆಗಳ ಸದಸ್ಯರನ್ನೂ ಈ ಸಿನಿಮಾದಲ್ಲಿ ಬಳಸಿಕೊಂಡಿದ್ದಾರೆ ನಿರ್ದೇಶಕರು.

    ಈ ಕುರಿತು ನಿರ್ದೇಶಕ ಗುರು ದೇಶಪಾಂಡೆ, “ಈ ಕಥೆಯು ಕನ್ನಡದ ಹೋರಾಟಗಾರನೊಬ್ಬನ ಕುರಿತಾಗಿದ್ದು, ಅವನ ವ್ಯಕ್ತಿತ್ವವನ್ನು ವೈಭವೀಕರಿಸದೇ ಅಥವಾ ಅವನ ಕ್ರಿಯಾಶೀಲತೆಯ ಬಗ್ಗೆ ನಕಾರಾತ್ಮಕವಾಗಿ ಹೇಳದೇ, ಹೋರಾಟಗಾರನೊಬ್ಬನ ಒಳತುಮುಲು ಹಾಗೂ ಅವನ ಜೀವನ ಸುತ್ತ ನಡೆಯುವ ಘಟನೆಗಳನ್ನು ತೋರಿಸಲಾಗಿದೆ. ಇದೊಂದು ಸೂಕ್ಷ್ಮ ರೀತಿಯ ಕಥೆಯಾಗಿದ್ದು, ಅದನ್ನು ಅಷ್ಟೇ ನಾಜೂಕಾಗಿ ಹಿಡಿದಿಡುವ ಪ್ರಯತ್ನ ಮಾಡಿದ್ದೇವೆ. ಹೋರಾಟಗಾರನೊಬ್ಬನ ಸಕಾರಾತ್ಮಕ ಮತ್ತು ನಕಾರಾತ್ಮಕ ಅಂಶಗಳನ್ನು ಚರ್ಚಿಸುತ್ತಲೇ, ಹೋರಾಟಗಾರರ ಮೇಲಿನ ಹಲವು ಅನುಮಾನಗಳನ್ನು ನಿವಾರಿಸುವ ಪ್ರಯತ್ನವನ್ನು ಮಾಡಲಾಗಿದೆ,” ಎನ್ನುತ್ತಾರೆ.

    ಈ ಅಧ್ಯಾಯಕ್ಕೆ ಅಭಿಲಾಷ್ ಕಲ್ಲಟ್ಟಿ ಸಿನಿಮಾಟೋಗ್ರಫಿ ಮಾಡಿದ್ದು, ಮಣಿಕಾಂತ್ ಕದ್ರಿ ಅವರ ಸಂಗೀತ ಸಂಯೋಜನೆಯಿದೆ. ಪೆಂಟಗನ್ ಸಿನಿಮಾದಲ್ಲಿ ಒಟ್ಟು ಐದು ಕಥೆಗಳಿದ್ದು, ಆಕಾಶ್ ಶ್ರೀವತ್ಸ (ಶಿವಾಜಿ ಸುರತ್ಕಲ್) ಚಂದ್ರಮೋಹನ್ (ಬ್ರಹ್ಮಚಾರಿ), ರಾಘು ಶಿವಮೊಗ್ಗ (ಚೂರಿಕಟ್ಟೆ), ಕಿರಣ್ ಕುಮಾರ್ (Debut) ಹಾಗೂ ಗುರು ದೇಶಪಾಂಡೆ ತಲಾ ಒಂದೊಂದು ಕಥೆಯನ್ನು ನಿರ್ದೇಶನ ಮಾಡಿದ್ದಾರೆ. ಜಿ ಸಿನಿಮಾಸ್ ಬ್ಯಾನರ್ ನಲ್ಲಿ ಮೂಡಿ ಬಂದಿರುವ ಈ ಸಿನಿಮಾಗೆ ಕ್ರಿಯೇಟಿವ್ ಹೆಡ್ ಮತ್ತು ನಿರ್ಮಾಪಕರು ಗುರು ದೇಶಪಾಂಡೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ‘ಪೆಂಟಗನ್’ ಸಿನಿಮಾದ 5ನೇ ಕಥೆ ಟೀಸರ್ ಜನವರಿ 18ಕ್ಕೆ ರಿಲೀಸ್

    ‘ಪೆಂಟಗನ್’ ಸಿನಿಮಾದ 5ನೇ ಕಥೆ ಟೀಸರ್ ಜನವರಿ 18ಕ್ಕೆ ರಿಲೀಸ್

    ದು ಕಥೆಗಳನ್ನು ಒಳಗೊಂಡ, ಐವರು ನಿರ್ದೇಶಕರು ನಿರ್ದೇಶನ ಮಾಡಿರುವ ಪೆಂಟಗನ್ (Pentagon) ಸಿನಿಮಾದ ಬಗ್ಗೆ ಸ್ಯಾಂಡಲ್ ವುಡ್ ನಲ್ಲಿ ಈಗಾಗಲೇ ಸಾಕಷ್ಟು ಚರ್ಚೆ  ಆಗಿದೆ. ಈಗಾಗಲೇ ಈ ಸಂಕಲನದ ಫಸ್ಟ್ ಲುಕ್, ಮೋಷನ್ ಪೋಸ್ಟರ್ ಗಳು ಬಿಡುಗಡೆಯಾಗಿ ಜನ ಮೆಚ್ಚುಗೆ ಪಡೆದಿವೆ.  ಇದೀಗ ಈ ಚಿದ್ರದಲ್ಲಿನ ಐದನೇ ಕಥೆಯ ಟೀಸರ್ (Teaser) ಅನ್ನು ಜನವರಿ 18 ರಂದು ಸಂಜೆ 6.04ಕ್ಕೆ ಬಿಡುಗಡೆ ಮಾಡಲಾಗುತ್ತಿದೆ. ಪೆಂಟಗನ್ ಸಿನಿಮಾದ ಈ ಕಥೆಯಲ್ಲಿ ಕನ್ನಡ ಹೋರಾಟಗಾರನೊಬ್ಬನ ವಿರೋಧಾಭಾಸ ಜೀವನವನ್ನು ಕಟ್ಟಿಕೊಡುವ ಪ್ರಯತ್ನ ಮಾಡಲಾಗಿದೆ. ಹಾಗಾಗಿ ಈ ಸಿನಿಮಾದೊಳಗಿನ ಈ ಕತೆಯು ಅತ್ಯಂತ ಕುತೂಹಲ ಮೂಡಿಸುವಂಥದ್ದು.

    ಗುರು ದೇಶಪಾಂಡೆ (Guru Deshpande) ನಿರ್ದೇಶನದಲ್ಲಿ ಈ ಅಧ್ಯಾಯದ ಮುಖ್ಯ ಭೂಮಿಕೆಯಲ್ಲಿ ಕಿಶೋರ್ (Kishor) ಕಾಣಿಸಿಕೊಂಡಿದ್ದಾರೆ. ಪ್ರಮುಖ ಪಾತ್ರಗಳಲ್ಲಿ ಪೃಥ್ವಿ ಅಂಬರ್ (Prithvi Amber), ರೂಪೇಶ್ ರಾಜಣ್ಣ(Rupesh Rajanna), ಅಶ್ವಿನಿ ಗೌಡ ಸೇರಿದಂತೆ ಹಲವು ಅನುಭವಿ ಕಲಾವಿದರು ಇದ್ದಾರೆ. ಇದು ಕನ್ನಡಪರ ಹೋರಾಟಗಾರನೊಬ್ಬನ ಕಥೆಯೂ ಆಗಿರುವುದರಿಂದ ಕನ್ನಡ ಸಂಘಟನೆಗಳ ಸದಸ್ಯರನ್ನೂ ಈ ಸಿನಿಮಾದಲ್ಲಿ ಬಳಸಿಕೊಂಡಿದ್ದಾರೆ ನಿರ್ದೇಶಕರು. ಇದನ್ನೂ ಓದಿ: ಸಚಿವ ಸುಧಾಕರ್‌ರನ್ನ ಹಾಡಿ ಹೊಗಳಿದ ರಮ್ಯಾ: ಕೈಗೆ ನಟಿ ಬೈ ಹೇಳಿ ಬಿಜೆಪಿ ಸೇರ್ಪಡೆ?

    ಈ ಕುರಿತು ನಿರ್ದೇಶಕ ಗುರು ದೇಶಪಾಂಡೆ, “ಈ ಕಥೆಯು ಕನ್ನಡದ ಹೋರಾಟಗಾರನೊಬ್ಬನ ಕುರಿತಾಗಿದ್ದು, ಅವನ ವ್ಯಕ್ತಿತ್ವವನ್ನು ವೈಭವೀಕರಿಸದೇ ಅಥವಾ ಅವನ ಕ್ರಿಯಾಶೀಲತೆಯ ಬಗ್ಗೆ ನಕಾರಾತ್ಮಕವಾಗಿ ಹೇಳದೇ, ಹೋರಾಟಗಾರನೊಬ್ಬನ ಒಳತುಮುಲು ಹಾಗೂ ಅವನ ಜೀವನ ಸುತ್ತ ನಡೆಯುವ ಘಟನೆಗಳನ್ನು ತೋರಿಸಲಾಗಿದೆ. ಇದೊಂದು ಸೂಕ್ಷ್ಮ ರೀತಿಯ ಕಥೆಯಾಗಿದ್ದು, ಅದನ್ನು ಅಷ್ಟೇ ನಾಜೂಕಾಗಿ ಹಿಡಿದಿಡುವ ಪ್ರಯತ್ನ ಮಾಡಿದ್ದೇವೆ. ಹೋರಾಟಗಾರನೊಬ್ಬನ ಸಕಾರಾತ್ಮಕ ಮತ್ತು ನಕಾರಾತ್ಮಕ ಅಂಶಗಳನ್ನು ಚರ್ಚಿಸುತ್ತಲೇ, ಹೋರಾಟಗಾರರ ಮೇಲಿನ ಹಲವು ಅನುಮಾನಗಳನ್ನು ನಿವಾರಿಸುವ ಪ್ರಯತ್ನವನ್ನು ಮಾಡಲಾಗಿದೆ,” ಎನ್ನುತ್ತಾರೆ.

    ಈ ಅಧ್ಯಾಯಕ್ಕೆ ಅಭಿಲಾಷ್ ಕಲ್ಲಟ್ಟಿ ಸಿನಿಮಾಟೋಗ್ರಫಿ ಮಾಡಿದ್ದು, ಮಣಿಕಾಂತ್ ಕದ್ರಿ ಅವರ ಸಂಗೀತ ಸಂಯೋಜನೆಯಿದೆ. ಪೆಂಟಗನ್ ಸಿನಿಮಾದಲ್ಲಿ ಒಟ್ಟು ಐದು ಕಥೆಗಳಿದ್ದು, ಆಕಾಶ್ ಶ್ರೀವತ್ಸ (ಶಿವಾಜಿ ಸುರತ್ಕಲ್) ಚಂದ್ರಮೋಹನ್ (ಬ್ರಹ್ಮಚಾರಿ), ರಾಘು ಶಿವಮೊಗ್ಗ (ಚೂರಿಕಟ್ಟೆ), ಕಿರಣ್ ಕುಮಾರ್ (Debut) ಹಾಗೂ ಗುರು ದೇಶಪಾಂಡೆ ತಲಾ ಒಂದೊಂದು ಕಥೆಯನ್ನು ನಿರ್ದೇಶನ ಮಾಡಿದ್ದಾರೆ. ಜಿ ಸಿನಿಮಾಸ್ ಬ್ಯಾನರ್ ನಲ್ಲಿ ಮೂಡಿ ಬಂದಿರುವ ಈ ಸಿನಿಮಾಗೆ ಕ್ರಿಯೇಟಿವ್ ಹೆಡ್ ಮತ್ತು ನಿರ್ಮಾಪಕರು ಗುರು ದೇಶಪಾಂಡೆ.

    ತಮ್ಮ ಬ್ಯಾನರ್ ಅಡಿಯಲ್ಲಿ ಈಗಾಗಲೇ ಅನೇಕ ನಿರ್ದೇಶಕರನ್ನು ಪರಿಚಯಿಸಿರುವ ಗುರು ದೇಶಪಾಂಡೆ, ಜಂಟಲ್ ಮನ್ ಮೂಲಕ ಜಡೇಶ್ ಹಂಪಿ, ಲವ್ ಯೂ ರಚ್ಚು ಮೂಲಕ ಶಂಕರ್ ಅವರನ್ನು ಸಿನಿಮಾ ರಂಗಕ್ಕೆ ನಿರ್ದೇಶಕರಾಗಿ ಪರಿಚಯಿಸಿದ್ದಾರೆ. ರಾಜಾ ಹುಲಿ ಹಾಗೂ ಜಾನ್ ಜಾನಿ ಜನಾರ್ದನ್ ಗಳಂತ ಚಿತ್ರಗಳ ನಿರ್ದೇಶಕರಾದ ಗುರು ದೇಶಪಾಂಡೆ ಮೂರು ವರ್ಷಗಳ ನಂತರ ಮತ್ತೆ ನಿರ್ದೇಶನಕ್ಕೆ ಮರಳಿದ್ದಾರೆ.

    ತಮ್ಮ ಬ್ಯಾನರ್ ಬಗ್ಗೆ ಗುರು ದೇಶಪಾಂಡೆ, “ನಮ್ಮ ಜಿ ಸಿನಿಮಾಸ್ ಕೇವಲ ಮನರಂಜನೆಯ ಸಿನಿಮಾಗಳನ್ನು ಮಾತ್ರ ಮಾಡದೇ, ಚಿಂತನೆ- ಪ್ರಚೋದನೆ ಹಾಗೂ ಪ್ರಚಲಿತ ವಿಷಯಗಳನ್ನು ಸಿನಿಮಾವಾಗಿಸುವ ಪ್ರಯತ್ನಗಳನ್ನು ಮಾಡುತ್ತಿದೆ. ಈಗಾಗಲೇ ಹಲವು ನಿರ್ದೇಶಕರನ್ನು, ತಂತ್ರಜ್ಞರನ್ನು ಮತ್ತು ಹೊಸ ಹೊಸ ಕಲಾವಿದರನ್ನು ಸಿನಿಮಾ ರಂಗಕ್ಕೆ ಪರಿಚಯಿಸಿದೆ. ಪೆಂಟಗನ್ ಸಿನಿಮಾದಲ್ಲೂ ಇದನ್ನು ಮುಂದುವರೆಸಿದೆ,” ಎನ್ನುತ್ತಾರೆ.

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • MOCOBOT ಕ್ಯಾಮೆರಾ ಬಳಸಿ ‘F0R REGN’ ಸಿನಿಮಾದ ಅಂಡರ್ ವಾಟರ್ ಸಾಂಗು ಶೂಟ್

    MOCOBOT ಕ್ಯಾಮೆರಾ ಬಳಸಿ ‘F0R REGN’ ಸಿನಿಮಾದ ಅಂಡರ್ ವಾಟರ್ ಸಾಂಗು ಶೂಟ್

    ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ನಾಯಕ – ನಾಯಕಿಯಾಗಿ ನಟಿಸಿರುವ  “F0R REGN”. (ಫಾರ್ ರಿಜಿಸ್ಟರೇಷನ್) ಚಿತ್ರದ ಚಿತ್ರೀಕರಣ ಹಾಡೊಂದರ‌ ಚಿತ್ರೀಕರಣದೊಂದಿಗೆ ಮುಕ್ತಾಯವಾಗಿದೆ. ಅಂಡರ್ ವಾಟರ್ ನಲ್ಲಿ ಈ ಹಾಡಿನ ಚಿತ್ರೀಕರಣ ನಡೆದಿದೆ.

    ಈ ಹಾಡಿನ ಚಿತ್ರೀಕರಣಕ್ಕಾಗಿ  “ಮೋಕೊ ಬೋಟ್” ಕ್ಯಾಮರಾ ಬಳಸಲಾಗಿದೆ.‌ ನನಗೆ ತಿಳಿದ ಕನ್ನಡ ಚಿತ್ರರಂಗದಲ್ಲಿ ಹಾಡೊಂದರ ಚಿತ್ರೀಕರಣಕ್ಕಾಗಿ ಈ ಕ್ಯಾಮೆರಾ ಬಳಸಿರುವುದು ಇದೇ ಮೊದಲು ಎನ್ನುತ್ತಾರೆ ನಿರ್ದೇಶಕ ನವೀನ್ ದ್ವಾರಕನಾಥ್.  ಛಾಯಾಗ್ರಾಹಕ ಅಭಿಷೇಕ್ ಕಾಸರಗೋಡು ಈ ಹಾಡನ್ನು ಅದ್ಭುತವಾಗಿ ಸೆರೆ ಹಿಡಿದಿದ್ದಾರೆ. ಇಮ್ರಾನ್ ಸರ್ದಾರಿಯಾ ನೃತ್ಯ ನಿರ್ದೇಶನವಿರುವ ಈ ಹಾಡಿನಲ್ಲಿ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಅಭಿನಯಿಸಿದ್ದಾರೆ‌. ಇದನ್ನೂ ಓದಿ: `ಅವತಾರ್ 2′ ಚಿತ್ರದ ಬಗ್ಗೆ ಭಾರಿ ನಿರೀಕ್ಷೆ: 2 ಕೋಟಿ ಟಿಕೆಟ್ ಸೋಲ್ಡ್ ಔಟ್

    ಇತ್ತೀಚಿಗೆ ಬಿಡುಗಡೆಯಾಗಿರುವ ಚಿತ್ರದ ಫಸ್ಟ್ ಲುಕ್ ಗೆ ಅಪಾರ ಮೆಚ್ಚುಗೆ ವ್ಯಕ್ತವಾಗಿದೆ. ಪ್ರೇಮಿಗಳ ದಿನಾಚರಣೆಯ ಸಂದರ್ಭದಲ್ಲಿ ಈ ಚಿತ್ರ ತೆರೆಗೆ ಬರುವ ನಿರೀಕ್ಷೆಯಿದೆ. ನಿಶ್ಚಲ್ ಫಿಲಂಸ್ ಮೂಲಕ ಎನ್ .ನವೀನ್ ರಾವ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ.  ನವೀನ್ ದ್ವಾರಕನಾಥ್ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆಯನ್ನು ನಿರ್ದೇಶಕರೆ ಬರೆದಿದ್ದಾರೆ. ಹರೀಶ್ ಸಂಗೀತ ನಿರ್ದೇಶನ,  ಅಭಿಷೇಕ್ ಕಲ್ಲತ್ತಿ- ಅಭಿಷೇಕ್ ಕಾಸರಗೋಡು  ಛಾಯಾಗ್ರಹಣ ಹಾಗೂ ಮನು ಶೆಡ್ಗಾರ್ ಅವರ ಸಂಕಲನವಿದೆ.

    ಪೃಥ್ವಿ ಅಂಬರ್, ಮಿಲನ‌ ನಾಗರಾಜ್, ರವಿಶಂಕರ್, ಬಾಬು ಹಿರಣ್ಣಯ್ಯ, ಸ್ವಾತಿ, ಸುಧಾ ಬೆಳವಾಡಿ, ತಬಲನಾಣಿ, ರಮೇಶ್ ಭಟ್, ಸಿಹಿಕಹಿ ಚಂದ್ರು ಮುಂತಾದವರು  ತಾರಾಬಳಗದಲ್ಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಕಾಂಬಿನೇಷನ್ ಸಿನಿಮಾ ಫೆ.10ಕ್ಕೆ ರಿಲೀಸ್

    ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ಕಾಂಬಿನೇಷನ್ ಸಿನಿಮಾ ಫೆ.10ಕ್ಕೆ ರಿಲೀಸ್

    ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ನಾಯಕ – ನಾಯಕಿಯಾಗಿ ನಟಿಸಿರುವ  “F0R REGN”. (ಫಾರ್ ರಿಜಿಸ್ಟರೇಷನ್) ಚಿತ್ರ 2023 ರ ಫೆಬ್ರವರಿ 10ರಂದು ಬಿಡುಗಡೆಯಾಗಲಿದೆ. ಕರ್ನಾಟಕ ರಾಜ್ಯೋತ್ಸವದ ಶುಭದಿನದಂದು ಚಿತ್ರದ ಬಿಡುಗಡೆ ದಿನಾಂಕ ಹಾಗೂ ಫಸ್ಟ್ ಲುಕ್ ಅನಾವರಣಗೊಂಡಿದೆ. ನಿರ್ಮಾಪಕ ನವೀನ್ ರಾವ್  ಹಾಗೂ  ನಿರ್ದೇಶಕ ನವೀನ್ ದ್ವಾರಕನಾಥ್ ಅವರ ಪೋಷಕರು ಫಸ್ಟ್ ಲುಕ್ ಹಾಗೂ ಬಿಡುಗಡೆ ದಿನಾಂಕವನ್ನು ಅನಾವರಣಗೊಳಿಸಿದರು‌.

    ನಾನು ಹಾಗೂ ನಿರ್ಮಾಪಕ ನವೀನ್ ರಾವ್ ಸಹಪಾಠಿಗಳು. ಕಿರುಚಿತ್ರಗಳನ್ನು ನಿರ್ದೇಶಿಸುತ್ತಿದ್ದ ನನಗೆ ಒಂದು ದಿನ ನನ್ನ ಸ್ನೇಹಿತ ನವೀನ್ ರಾವ್ ಈ ಚಿತ್ರವನ್ನು ನಿರ್ದೇಶಿಸಲು ಪ್ರೇರೇಪಿಸಿದರು. ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ನಾಯಕ – ನಾಯಕಿ ಅಂತ ನಿರ್ಧರಿಸಲಾಯಿತು. ಆಗ ಅವರಿಬ್ಬರ ” ದಿಯಾ” ಹಾಗೂ “ಲವ್ ಮಾಕ್ಟೇಲ್” ಸಿನಿಮಾಗಳು ಯಶಸ್ವಿಯಾಗಿದ್ದವು. ಹೀಗೆ ಚಿತ್ರ ಆರಂಭವಾಗಿ ಈಗ ಬಿಡುಗಡೆ ಹಂತಕ್ಕೆ ತಲುಪಿದೆ. ಫೆಬ್ರವರಿ ಹತ್ತರಂದು ಚಿತ್ರ ಬಿಡುಗಡೆಯಾಗುತ್ತಿದೆ ಎಲ್ಲರ ಪ್ರೋತ್ಸಾಹವಿರಲಿ ಎಂದರು ನಿರ್ದೇಶಕ ನವೀನ್ ದ್ವಾರಕನಾಥ್. ಇದನ್ನೂ ಓದಿ:‘ಕರ್ನಾಟಕ ರತ್ನ’ ಪ್ರಶಸ್ತಿಯನ್ನು ಅಪ್ಪುಗೆ ಅರ್ಪಿಸಿದ ಪುನೀತ್ ಪತ್ನಿ ಅಶ್ವಿನಿ

    ಚಿತ್ರೀಕರಣದಲ್ಲಿ ಭಾಗಿಯಾಗುತ್ತಿದಾಗ ನನಗೆ ಅನಿಸಿದ್ದು, ನಿರ್ಮಾಪಕ ಹಣ ಒದಗಿಸಿಕೊಡತ್ತಾನೆ.‌ ಆದರೆ ಇಡೀ ತಂಡ ಚಿತ್ರಕ್ಕಾಗಿ ಎಷ್ಟು ಕಷ್ಟ ಪಡುತ್ತದೆ ಎಂದು.  ಅವರೆಲ್ಲರ ಶ್ರಮದಿಂದ ಉತ್ತಮ ಚಿತ್ರವೊಂದು ನಿರ್ಮಾಣವಾಗಿದೆ. ನೋಡಿ ಹಾರೈಸಿ ಎಂದರು ನಿರ್ಮಾಪಕ ನವೀನ್ ರಾವ್. ನಾನು ತುಳು ಸಿ‌ನಿಮಾ ಒಂದನ್ನು ಆಗಷ್ಟೇ ಮುಗಿಸಿದೆ. ಮಂಗಳೂರಿನಲ್ಲಿ ನಿರ್ದೇಶಕರು ಈ ಚಿತ್ರದ ಕಥೆ ಹೇಳಿದರು. ಇಷ್ಟವಾಯಿತು. ಎಲ್ಲದ್ದಕ್ಕೂ ರಿಜಿಸ್ಟ್ರೇಷನ್ ಕಡ್ಡಾಯ. ನಾವು ಪ್ರೀತಿಗೂ ರಿಜಿಸ್ಟ್ರೇಷನ್ ಕಡ್ಡಾಯವಾದರೆ ಹೇಗೆ ಎಂಬುದನ್ನು ತೋರಿಸಿದ್ದೇವೆ ಎನ್ನುತ್ತಾರೆ ನಾಯಕ ಪೃಥ್ವಿ ಅಂಬರ್.

    ಒಳ್ಳೆಯ ತಂಡದೊಂದಿಗೆ ಒಳ್ಳೆಯ ಚಿತ್ರ ಮಾಡಿದ್ದು ಖುಷಿಯಾಗಿದೆ. ನನ್ನ ಪಾತ್ರ ಕೂಡ ಚೆನ್ನಾಗಿದೆ. ಫೆಬ್ರವರಿ ತಿಂಗಳು ನನಗೆ ಲಕ್ಕಿ. ಈ ಚಿತ್ರ ಕೂಡ ಅದೇ ತಿಂಗಳಲ್ಲಿ ತೆರೆಗೆ ಬರುತ್ತಿರುವುದು ಮತ್ತಷ್ಟು ಖುಷಿಯಾಗಿದೆ ಎಂದರು ನಾಯಕಿ ಮಿಲನ ನಾಗರಾಜ್. ಸಂಗೀತ ನಿರ್ದೇಶಕ ಹರೀಶ್ ಹಾಗೂ ಕಾರ್ಯಕಾರಿ ನಿರ್ಮಾಪಕ ನಿರಂಜನ್ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಪೃಥ್ವಿ ಅಂಬರ್, ಮಿಲನ‌ ನಾಗರಾಜ್, ರವಿಶಂಕರ್, ಬಾಬು ಹಿರಣ್ಣಯ್ಯ, ಸ್ವಾತಿ, ಸುಧಾ ಬೆಳವಾಡಿ, ತಬಲನಾಣಿ, ರಮೇಶ್ ಭಟ್, ಸಿಹಿಕಹಿ ಚಂದ್ರು ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

    Live Tv
    [brid partner=56869869 player=32851 video=960834 autoplay=true]