Tag: Priva Vimana

  • ಖಾಸಗಿ ವಿಮಾನ ಖರೀದಿಸಿದ್ರಾ ರಿಷಬ್ ಶೆಟ್ಟಿ? ‘ಬಡವ್ರ ಮಕ್ಕಳು ಬೆಳಿಬೇಕು’ ಟ್ರೋಲ್

    ಖಾಸಗಿ ವಿಮಾನ ಖರೀದಿಸಿದ್ರಾ ರಿಷಬ್ ಶೆಟ್ಟಿ? ‘ಬಡವ್ರ ಮಕ್ಕಳು ಬೆಳಿಬೇಕು’ ಟ್ರೋಲ್

    ಕಾಂತಾರ (Kantara) ಸಿನಿಮಾ ಸಿಕ್ಕಾಪಟ್ಟೆ ಹವಾ ಕ್ರಿಯೇಟ್ ಮಾಡುತ್ತಿದೆ. ಕನ್ನಡದಲ್ಲಿ ಅಂದಾಜು ನೂರೈವತ್ತು ಕೋಟಿಗೂ ಅಧಿಕ ಹಣ ಮಾಡಿದರೆ, ಇತರ ಭಾಷೆಗಳಲ್ಲೂ ನೂರಾರು ಕೋಟಿ ಬಾಚಿದೆ. ಪ್ರತಿ ಭಾಷೆಯಲ್ಲೂ ಕನ್ನಡದ ಸಿನಿಮಾವನ್ನು ಕೊಂಡಾಡುತ್ತಿದ್ದಾರೆ. ಬಾಕ್ಸ್ ಆಫೀಸ್ ಕೂಡ ಧೂಳಿಪಟವಾಗಿದೆ. ಈ ಹೊತ್ತಿನಲ್ಲಿ ರಿಷಬ್ ಶೆಟ್ಟಿ ವಿಮಾನದಲ್ಲಿ ಓಡಾಡುತ್ತಿರುವ ಫೋಟೋವನ್ನು ಹೊಂಬಾಳೆ ಫಿಲ್ಮ್ಸ್ ಹಂಚಿಕೊಂಡಿದೆ.

    ಇತ್ತೀಚೆಗಷ್ಟೇ ರಿಷಬ್ (Rishabh Shetty) ಆಡಿ ಕಾರು ತಗೆದುಕೊಂಡಿದ್ದರು. ಆ ಫೋಟೋ ಕೂಡ ಸಖತ್ ವೈರಲ್ ಆಗಿತ್ತು. ಇದೀಗ ರಿಷಬ್ ಅವರು ವಿಮಾನದಲ್ಲಿ ಅದರಲ್ಲೂ ಖಾಸಗಿ ವಿಮಾನದಲ್ಲಿ ಪ್ರಯಾಣ ಮಾಡುತ್ತಿರುವ ಫೋಟೋ ಸೋಷಿಯಲ್ ಮೀಡಿಯಾದಲ್ಲಿ ಟ್ರೆಂಡ್ ಕ್ರಿಯೇಟ್ ಮಾಡಿದೆ. ‘ಬಡವ್ರ ಮಕ್ಕಳು ಬೆಳಿಬೇಕು’ ಹೆಸರಿನಲ್ಲಿ ಟ್ರೋಲ್ ಕೂಡ ಮಾಡಲಾಗುತ್ತಿದೆ. ಸಾಕಷ್ಟು ಜನರು ಈ ಫೋಟೋವನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ: ‘ಜುಜುಬಿ ಕರಗ’ ಪದ ಮ್ಯೂಟ್ ಮಾಡಲು ಧನಂಜಯ್ ಹಾಗೂ ಹೆಡ್ ಬುಷ್ ತಂಡ ಒಪ್ಪಿಗೆ

    ಬಡವರ ಮಕ್ಕಳು ಬೆಳಿಬೇಕು ಎನ್ನುವ ಮಾತು ಡಾಲಿ ಧನಂಜಯ್ ಅವರದ್ದು. ಆ ಮಾತನ್ನು ರಿಷಬ್ ಶೆಟ್ಟಿಗೆ ಬಳಸಿಕೊಂಡು ಡಾಲಿಗೆ ಟಾಂಗ್ ಕೊಡಲಾಗುತ್ತಿದೆ. ವಿಮಾನದಲ್ಲಿ ಪ್ರಯಾಣದ ಮಾಡುತ್ತಿರುವ ರಿಷಬ್ ಶೆಟ್ಟಿ ಫೋಟೋಗೆ ಡಾಲಿ ಹೊಡೆದ ಡೈಲಾಗ್ ಅನ್ನು ಸೇರಿಸಿ ಟ್ರೋಲ್ ಮಾಡಲಾಗುತ್ತಿದೆ.

    ಕಾಂತಾರ ಸಿನಿಮಾ ಮಾಡುತ್ತಿರುವ ಮೋಡಿ ಅಷ್ಟಿಷ್ಟಲ್ಲ. ರಿಷಬ್ ಶೆಟ್ಟಿ ಭಾರತದಾದ್ಯಂತ ಸುತ್ತುವಂತಾಗಿದೆ. ಎಲ್ಲ ಕಡೆ ಪ್ರಯಾಣ ಮಾಡಲು ಅವರಲ್ಲಿ ವೇಳೆಯಿಲ್ಲ. ಹಾಗಾಗಿ ಹೊಂಬಾಳೆ ಫಿಲ್ಮ್ಸ್ ನವರು ಬಾಡಿಗೆ ಖಾಸಗಿ ವಿಮಾನ ಬುಕ್ ಮಾಡಿ, ರಿಷಬ್ ಪ್ರಯಾಣಕ್ಕೆ ಅನುಕೂಲ ಕಲ್ಪಿಸಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದೆ ಯಶ್ (Yash) ಅವರಿಗೂ ಹಾಗೆಯೇ ಮಾಡಿತ್ತು ಹೊಂಬಾಳೆ ಫಿಲ್ಮ್ಸ್ (Hombale Films) . ಹಾಗಾಗಿ ಇದು ರಿಷಬ್ ಖರೀದಿಸಿದ ವಿಮಾನವಲ್ಲ ಎನ್ನುವುದು ಸ್ಪಷ್ಟನೆ ವಿಚಾರ.

    Live Tv
    [brid partner=56869869 player=32851 video=960834 autoplay=true]