Tag: Private college

  • ಕಾಲೇಜಿನಲ್ಲೇ ಹೆಣ್ಣು ಮಗುವಿಗೆ ಜನ್ಮವಿತ್ತ ಅಪ್ರಾಪ್ತೆ – ಮಗು ಕರುಣಿಸಿದ ಭೂಪನಿಗಾಗಿ ಹುಡುಕಾಟ!

    ಕಾಲೇಜಿನಲ್ಲೇ ಹೆಣ್ಣು ಮಗುವಿಗೆ ಜನ್ಮವಿತ್ತ ಅಪ್ರಾಪ್ತೆ – ಮಗು ಕರುಣಿಸಿದ ಭೂಪನಿಗಾಗಿ ಹುಡುಕಾಟ!

    ಕೋಲಾರ: ಅಪ್ರಾಪ್ತೆಯೊಬ್ಬಳು ಕಾಲೇಜಿನಲ್ಲೇ ಮಗುವಿಗೆ ಜನ್ಮ ನೀಡಿರುವ ಘಟನೆ ಕೋಲಾರ ಹೊರವಲಯದಲ್ಲಿರುವ ಖಾಸಗಿ ಕಾಲೇಜಿನಲ್ಲಿ (Kolara Private College) ನಡೆದಿದೆ.

    ಪ್ರಥಮ ಪಿಯುಸಿ ವಿದ್ಯಾರ್ಥಿನಿ (PUC Student) ಕಾಲೇಜು ಶೌಚಾಲಯದಲ್ಲಿ ಹೆಣ್ಣು ಮಗುವಿಗೆ ಅಪ್ರಾಪ್ತೆ ಜನ್ಮ ನೀಡಿದ್ದಾಳೆ. ಈ ಸಂಭಂಧ ಪ್ರಕರಣ ದಾಖಲಿಸಿಕೊಂಡಿರುವ ಕೋಲಾರ ಮಹಿಳಾ ಪೊಲೀಸರು (Kolara Women Police) ಬಾಲಕಿ ಸ್ಥಿತಿಗೆ ಕಾರಣನಾದ ಭೂಪನಿಗಾಗಿ ಹುಡುಕಾಟ ನಡೆಸಿದ್ದಾರೆ. ಇದನ್ನೂ ಓದಿ: ಹಂಪಿ ವಿರೂಪಾಕ್ಷ ಸನ್ನಿಧಿಯಲ್ಲಿ ಸೆಟ್ಟೇರಿತು ರಾಮ್ ಚರಣ್ ನಿರ್ಮಾಣದ ‘ದಿ ಇಂಡಿಯಾ ಹೌಸ್’ ಸಿನಿಮಾ

    ಏನಿದು ಘಟನೆ?
    ಪೊಲೀಸರಿಗೆ ಸಿಕ್ಕ ಪ್ರಾಥಮಿಕ ಮಾಹಿತಿ ಪ್ರಕಾರ, ಬಾಲಕಿಯು ಯುವಕನೊಂದಿಗೆ ಪ್ರೀತಿಯಲ್ಲಿದ್ದಳು. ಆದ್ರೆ ಆತ ಅದೇ ಕಾಲೇಜಿನ ಯುವಕನಾ ಅಥವಾ ಹೊರಗಿನವನಾ ಎಂಬುದು ಸದ್ಯಕ್ಕೆ ತಿಳಿದುಬಂದಿಲ್ಲ. ಬಾಲಕಿ ಸ್ಥಿತಿ ಕಾರಣನಾದ ಯುವಕನಿಗಾಗಿ ಹುಟುಕಾಟ ನಡೆಸಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಬಾರ್ಬಡೋಸ್‌ನಲ್ಲೇ ಸಿಲುಕಿದ ಟೀಂ ಇಂಡಿಯಾ – ಜಿಂಬಾಬ್ವೆ ಸರಣಿಗೆ ಸುದರ್ಶನ್‌, ರಾಣಾ, ಜಿತೇಶ್‌ ಆಯ್ಕೆ!

    ಮಂಗಳವಾರ ಶೌಚಾಲಯಕ್ಕೆ ತೆರಳಿದಾಗ ಬಾಲಕಿ ಅಲ್ಲಿಯೇ ಗಂಡುಮಗುವಿಗೆ ಜನ್ಮ ನೀಡಿದ್ದಾಳೆ. ಸದ್ಯ ಬಾಲಕಿಯನ್ನ ಆರ್.ಎಲ್.ಜಾಲಪ್ಪ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದ್ರೆ ಇಷ್ಟು ದಿನ ಯಾರಿಗೂ ಗೊತ್ತಿರಲಿಲ್ಲವೇ? ಅಥವಾ ಸ್ನೇಹಿತರಿಗೆ ಗೊತ್ತಿದ್ದೂ ವಿಚಾರ ಮುಚ್ಚಿಟ್ಟಿದ್ದರಾ? ಅನ್ನೋ ಬಗ್ಗೆಯೂ ತನಿಖೆ ನಡೆಯುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಇದನ್ನೂ ಓದಿ: 17% ಭಾರತೀಯರ ಬ್ಯಾಂಕಿಂಗ್ ಪಾಸ್‌ವರ್ಡ್ ಅಸುರಕ್ಷಿತವಾಗಿವೆ – ಸಮೀಕ್ಷೆ

  • ಕಾಲೇಜಿನ ಆರನೇ ಮಹಡಿಯಿಂದ ಜಿಗಿದು ಬಿಬಿಎ ವಿದ್ಯಾರ್ಥಿ ಸಾವು

    ಕಾಲೇಜಿನ ಆರನೇ ಮಹಡಿಯಿಂದ ಜಿಗಿದು ಬಿಬಿಎ ವಿದ್ಯಾರ್ಥಿ ಸಾವು

    ಆನೇಕಲ್: ಖಾಸಗಿ ಕಾಲೇಜಿನ (Private College) ಆರನೇ ಮಹಡಿಯಿಂದ ಬಿಬಿಎ (BBA) ವಿದ್ಯಾರ್ಥಿ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನೇಕಲ್‌ನಲ್ಲಿ  (Anekal) ಮಂಗಳವಾರ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ಹೊಂಗಸಂದ್ರದ ರಾಘವೇಂದ್ರ ಲೇಔಟ್ ನಿವಾಸಿ ವಿಘ್ನೇಶ್.ಕೆ (19) ಆತ್ಮಹತ್ಯೆಗೆ ಶರಣಾದ ವಿದ್ಯಾರ್ಥಿ. ವಿಘ್ನೇಶ್ ಖಾಸಗಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಬಿಎ ವ್ಯಾಸಂಗ ಮಾಡುತ್ತಿದ್ದನು. ಮಂಗಳವಾರ ಕಾಲೇಜಿನ ಇಂಜಿನಿಯರಿಂಗ್ ವಿಭಾಗದ ಆರನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ:ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕನಿಂದ ಬಾಂಬ್‌ ಬೆದರಿಕೆ – ಆಸಾಮಿ ಅಂದರ್‌!

    ಸದ್ಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಘಟನೆ ಕುರಿತು ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:ಮಣಿಪುರದಲ್ಲಿ ಮತ್ತೆ ಗುಂಡಿನ ಸುರಿಮಳೆ – ಇಬ್ಬರು ಸಾವು, ಓರ್ವ BJP ಮುಖಂಡನಿಗೆ ಗಂಭೀರ ಗಾಯ

  • ಉಪನ್ಯಾಸಕನ ವಿರುದ್ಧ ಕಿರುಕುಳದ ಆರೋಪ- ವಿದ್ಯಾರ್ಥಿ ಆತ್ಮಹತ್ಯೆ

    ಉಪನ್ಯಾಸಕನ ವಿರುದ್ಧ ಕಿರುಕುಳದ ಆರೋಪ- ವಿದ್ಯಾರ್ಥಿ ಆತ್ಮಹತ್ಯೆ

    ಚಿಕ್ಕಬಳ್ಳಾಪುರ: ಉಪನ್ಯಾಸಕನ ವಿರುದ್ಧ ವಿದ್ಯಾರ್ಥಿಯೊಬ್ಬ ಸೆಲ್ಫಿ ವೀಡಿಯೋ ಮೂಲಕ ಗಂಭೀರ ಆರೋಪ ಮಾಡಿ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ಮಲ್ಲಹಳ್ಳಿ ಗ್ರಾಮದಲ್ಲಿ ನಡೆದಿದೆ.

    ಮಲ್ಲಹಳ್ಳಿ ಗ್ರಾಮದ ಲಲಿತಮ್ಮ ಹಾಗೂ ದೇವರಾಜು ದಂಪತಿಯ ಪುತ್ರ ಗಜೇಂದ್ರ ಆತ್ಮಹತ್ಯೆ ಮಾಡಿಕೊಂಡಿರುವಾತ. ಈತ ಚಿಕ್ಕಬಳ್ಳಾಪುರ ನಗರದ ಖಾಸಗಿ ಕಾಲೇಜಿನಲ್ಲಿ ಡಿಪ್ಲೊಮಾ ಮೆಕ್ಯಾನಿಕಲ್ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಾನೆ. ಇದೀಗ ಈತ ಉಪನ್ಯಾಸಕ ಮುಂಜುನಾಥ್ ವಿರುದ್ಧ ಕಿರುಕುಳದ ಆರೋಪ ಮಾಡಿ ಸೂಸೈಡ್ ಮಾಡಿಕೊಂಡಿದ್ದಾನೆ.

    ಆರೋಪವೇನು?: ಗಜೇಂದ್ರನಿಗೆ ಉಪನ್ಯಾಸಕ ಮಂಜುನಾಥ್ ವಿನಾಕಾರಣ ವೈಯಕ್ತಿಕವಾಗಿ ಟಾರ್ಗೆಟ್ ಮಾಡಿ ಕಿರುಕುಳ ಕೊಡುತ್ತಿದ್ದರು. ಅಲ್ಲದೇ ಪದೇ ಪದೇ ಹಲ್ಲೆ ಮಾಡುವುದು, ಅಸೈನ್ ಮೆಂಟ್ ಬುಕ್ ಹರಿದು ಹಾಕಿ ಉಳಿದ ವಿದ್ಯಾರ್ಥಿಗಳ ಎದುರೇ ಮರ್ಯಾದೆ ತೆಗೆದಿರುವುದಾಗಿ ಗಜೇಂದ್ರ ಸೆಲ್ಫಿ ವಿಡಿಯೋದಲ್ಲಿ ಆರೋಪಿಸಿದ್ದಾನೆ. ನನ್ನ ಸಾವಿಗೆ ಮಂಜುನಾಥ್ ಕಾರಣ. ನನ್ನ ಮರ್ಯಾದೆ ಹೋಯ್ತು. ಅದೇ ಕಾರಣಕ್ಕೆ ನಾನು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಅಂತ ವೀಡಿಯೋದಲ್ಲಿ ಗಜೇಂದ್ರ ತಿಳಿಸಿದ್ದಾನೆ. ಇದನ್ನೂ ಓದಿ: ಕಾಂಗ್ರೆಸ್ ಮುಸ್ಲಿಂ ಸಮಾಜಕ್ಕೆ ಕೊಟ್ಟಿರುವ ಗೌರವದ ಬಗ್ಗೆ ಮಾತನಾಡಿದ್ದೇನೆ: ಜಮೀರ್

    ಬುಧವಾರ ರಾತ್ರಿ ಒಂದು ವೀಡಿಯೋ ಹಾಗೂ ಗುರುವಾರ ಬೆಳಗ್ಗೆ ಮತ್ತೊಂದು ವೀಡಿಯೋ ಸೇರಿದಂತೆ ಎರಡು ವೀಡಿಯೋ ಮಾಡಿ ಗಜೇಂದ್ರ ಮನೆಯ ಮುಂಭಾಗದ ಹಳೆಯ ಮನೆಯೊಂದರಲ್ಲಿ ನೇಣಿಗೆ ಶರಣಾಗಿದ್ದಾನೆ. ಇತ್ತ ಮಗ ಆತ್ಮಹತ್ಯೆ ಯಾಕೆ ಮಾಡಿಕೊಂಡ ಎಂಬುದನ್ನು ಅರಿಯದ ಪೋಷಕರು, ಗಜೇಂದ್ರನನ್ನು ಮಣ್ಣು ಮಾಡಿ ಸುಮ್ಮನಾಗಿದ್ದಾರೆ. ಆದರೆ ಇಂದು ಬೆಳಗ್ಗೆ ಗಜೇಂದ್ರ ಮೊಬೈಲ್ ಪರಿಶೀಲನೆ ಮಾಡಿದಾಗ ಸೆಲ್ಫಿ ವೀಡಿಯೋ ಪತ್ತೆಯಾಗಿದ್ದು ಸಾವಿನ ಸತ್ಯ ಬಯಲಾಗಿದೆ.

    ವಿಚಾರ ತಿಳಿಯುತ್ತಿದ್ದಂತೆಯೇ ಗಜೇಂದ್ರ ಪೊಷಕರು ಹಾಗೂ ಸಂಬಂಧಿಕರು ಪಾಲಿಟೆಕ್ನಿಕ್ ಕಾಲೇಜಿಗೆ ಮುತ್ತಿಗೆ ಹಾಕಿ ಪ್ರಾಂಶುಪಾಲರನ್ನ ತರಾಟೆಗೆ ತೆಗೆದುಕೊಂಡಿದ್ದಾರೆ. ಈ ವೇಳೆ ನಂದಿಗಿರಿಧಾಮ ಪೊಲೀಸರು ಹಾಗೂ ಪ್ರತಿಭಟನಕಾರರ ವಾಗ್ವಾದ ನಡೆದಿದೆ.

  • ಮಂಗಳೂರು ಹಾಸ್ಟೆಲ್‌ನ ಕಿಟಕಿ ರಾಡ್ ಮುರಿದು ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆ

    ಮಂಗಳೂರು ಹಾಸ್ಟೆಲ್‌ನ ಕಿಟಕಿ ರಾಡ್ ಮುರಿದು ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನ್ನೈನಲ್ಲಿ ಪತ್ತೆ

    ಮಂಗಳೂರು: ಮಂಗಳೂರಿನ (Mangaluru) ಖಾಸಗಿ ಕಾಲೇಜಿನ ಹಾಸ್ಟೆಲ್‌ನಿಂದ ಪರಾರಿಯಾಗಿದ್ದ ಮೂವರು ವಿದ್ಯಾರ್ಥಿನಿಯರು ಚೆನೈ (Chennai) ನಲ್ಲಿ ಪತ್ತೆಯಾಗಿದ್ದಾರೆ.

    ಚೆನ್ನೈನಲ್ಲಿ ಪತ್ತೆಯಾದ ಮೂವರು ವಿದ್ಯಾರ್ಥಿನಿಯರನ್ನು ಮಂಗಳೂರು ಪೊಲೀಸರು ಮಂಗಳೂರಿಗೆ ಕರೆತಂದಿದ್ದಾರೆ. ವಿದ್ಯಾರ್ಥಿನಿಯರ ತಂಡ ಮಂಗಳೂರಿನಿಂದ ರೈಲಿನ ಮೂಲಕ ಕೊಯಂಬತ್ತೂರು ತೆರಳಿದ್ದರು. ಕೊಯಂಬತ್ತೂರಿನಿಂದ ಬಸ್ ಮೂಲಕ ಪಾಂಡಿಚೇರಿಗೆ ಪ್ರಯಾಣ ಬೆಳಸಿ, ಮತ್ತೆ ಪಾಂಡಿಚೇರಿಯಿಂದ ವಾಪಸ್ ಚೆನೈಗೆ ಬಂದಿದ್ದರು. ದೂರದ ಊರು ಸುತ್ತಾಡಿ ಮರಳಿ ಮನೆ ಸೇರಲು ವಿದ್ಯಾರ್ಥಿನಿಯರು ನಿರ್ಧರಿಸಿದ್ದರು ಎಂಬ ವಿಷಯ ಇದೀಗ ಬಯಲಾಗಿದೆ. ಇದನ್ನೂ ಓದಿ: ಹಿರಿಯ ಕಾಂಗ್ರೆಸ್ ಮುಖಂಡ ಬಿ.ಕೆ.ಪುಟ್ಟಸ್ವಾಮಿ ನಿಧನಕ್ಕೆ ಡಿಕೆಶಿ ಸಂತಾಪ

    ಸೆ. 21ರಂದು ನಗರದ ಖಾಸಗಿ ಕಾಲೇಜೊಂದರ (Private College) ಹಾಸ್ಟೆಲ್‍ನಲ್ಲಿದ್ದ (Hostel) ಮೂವರು ವಿದ್ಯಾರ್ಥಿನಿಯರು (Students) ಹಾಸ್ಟೆಲ್ ಕಿಟಕಿಯ ರಾಡ್ ಮುರಿದು ಪರಾರಿಯಾಗಿದ್ದರು. ನಗರದ ಪ್ರತಿಷ್ಠಿತ ಖಾಸಗಿ ಕಾಲೇಜಿನ ಮೂವರು ವಿದ್ಯಾರ್ಥಿನಿಯರಾದ ಯಶಸ್ವಿನಿ, ದಕ್ಷತಾ, ಸಿಂಚನಾ ಪಿಯುಸಿ ವಿದ್ಯಾರ್ಥಿಗಳಾಗಿದ್ದು, ಹಾಸ್ಟೆಲ್‍ನಲ್ಲಿ ಇದ್ದು ವ್ಯಾಸಂಗ ಮಾಡುತ್ತಿದ್ದರು. ನಾವು ಹೋಗುತ್ತಿದ್ದೇವೆ, ಕ್ಷಮಿಸಿ ಎಂದು ಪತ್ರ ಬರೆದಿಟ್ಟು ಹಾಸ್ಟೆಲ್‍ನ ಕಿಟಕಿಯ ರಾಡ್ ಮುರಿದು ಪರಾರಿಯಾಗಿದ್ದರು. ಇದನ್ನೂ ಓದಿ: ಹಾಸ್ಟೆಲ್‍ನ ಕಿಟಕಿ ರಾಡ್ ಮುರಿದು ಮೂವರು ವಿದ್ಯಾರ್ಥಿನಿಯರು ಪರಾರಿ

    Live Tv
    [brid partner=56869869 player=32851 video=960834 autoplay=true]

  • ಭಾರತವನ್ನು ಅಂತಾರಾಷ್ಟ್ರೀಯ ಸಂಶೋಧನಾ ಕೇಂದ್ರವಾಗಿ ರೂಪಿಸಿ – ಗೆಹ್ಲೋಟ್

    ಭಾರತವನ್ನು ಅಂತಾರಾಷ್ಟ್ರೀಯ ಸಂಶೋಧನಾ ಕೇಂದ್ರವಾಗಿ ರೂಪಿಸಿ – ಗೆಹ್ಲೋಟ್

    ಬೆಂಗಳೂರು: ದೇಶವು 75ನೇ ಸ್ವಾತಂತ್ರ್ಯೋತ್ಸವವನ್ನು (Independence Day) ಅಮೃತ ಮಹೋತ್ಸವವೆಂದು ಆಚರಿಸುತ್ತಿದೆ. ಈ ಅಮೃತ ಕಾಲದಲ್ಲಿ ಭಾರತವನ್ನು ಅಂತಾರಾಷ್ಟ್ರೀಯ ಸಂಶೋಧನೆಯ ಕೇಂದ್ರವನ್ನಾಗಿ (International Research Center) ರೂಪಿಸಲು, ನಾವು ಏಕಕಾಲದಲ್ಲಿ ಅನೇಕ ರಂಗಗಳಲ್ಲಿ ಕೆಲಸ ಮಾಡಬೇಕು ಎಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಕರೆ ನೀಡಿದರು.

    ಬೆಂಗಳೂರಿನಲ್ಲಿ ವಿಟಿಯು (VTU) ನೇತೃತ್ವದಲ್ಲಿ ಆಯೋಜಿಸಿರುವ 3ನೇ ಟೆಕ್ ವಿಸಿ ಕಾನ್ಕ್ಲೇವ್ ಅನ್ನು ಉದ್ಘಾಟಿಸಿ ಮಾತನಾಡಿದ ಅವರು, 2014 ರಿಂದ ದೇಶದಲ್ಲಿ ವಿಜ್ಞಾನ (Science) ಮತ್ತು ತಂತ್ರಜ್ಞಾನದಲ್ಲಿನ ಹೂಡಿಕೆ ಗಮನಾರ್ಹವಾಗಿ ಹೆಚ್ಚಾಗಿದೆ. ಕೇಂದ್ರ ಸರ್ಕಾರದ ಪ್ರಯತ್ನದಿಂದಾಗಿ, ಇಂದು ಭಾರತವು ಅಂತಾರಾಷ್ಟ್ರೀಯ ಸಂಶೋಧನಾ ಸೂಚ್ಯಂಕದಲ್ಲಿ 46ನೇ ಸ್ಥಾನದಲ್ಲಿದೆ. 2015ರಲ್ಲಿ 81ನೇ ಸ್ಥಾನದಲ್ಲಿತ್ತು ಎಂದು ಹೇಳಿದರು.

    ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯ (NEP) ಉದ್ದೇಶವು ನಮ್ಮ ದೇಶವನ್ನು ವಿಶ್ವ ಮಟ್ಟದಲ್ಲಿ ಶೈಕ್ಷಣಿಕ ಶಕ್ತಿಯನ್ನಾಗಿ ಮಾಡುವ ಉದ್ದೇಶ ಹೊಂದಿದೆ. ಅದಕ್ಕಾಗಿ ಹೊಸ ಶಿಕ್ಷಣ ನೀತಿಯಲ್ಲಿ (National Education Policy), 21ನೇ ಶತಮಾನದ ಅಗತ್ಯಗಳನ್ನು ಪೂರೈಸಲು ಮತ್ತು ಸ್ವಾವಲಂಬಿ ಭಾರತವನ್ನು ನಿರ್ಮಿಸಲು ಹಲವು ನಿಬಂಧನೆಗಳನ್ನು ಮಾಡಲಾಗಿದೆ. ಎನ್‌ಇಪಿಯು ನಮ್ಮ ಪ್ರಸ್ತುತ ಮತ್ತು ಭವಿಷ್ಯದ ಪೀಳಿಗೆಯನ್ನು ಉಜ್ವಲಗೊಳಿಸುವ ಜೊತೆಗೆ ಸುರಕ್ಷಿತವಾಗಿಯೂ ಇರಿಸುತ್ತದೆ. ನವಭಾರತ ನಿರ್ಮಾಣದಲ್ಲಿ ಇದರ ಪಾತ್ರ ನಿರ್ಣಾಯಕವಾಗಿರುತ್ತದೆ. ಈ ಶಿಕ್ಷಣ ನೀತಿಯನ್ನು ಜಾರಿಗೊಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲೂ ಇದೆ ಎಂದು ಎಚ್ಚರಿಸಿದರು.

    ಸಾಂದರ್ಭಿಕ ಚಿತ್ರ

    ಮುಖ್ಯವಾಗಿ ಎನ್‌ಇಪಿ ಮಾತೃಭಾಷೆಯಲ್ಲಿ ಅಧ್ಯಯನದೊಂದಿಗೆ ಆದ್ಯತೆಯ ವಿಷಯವನ್ನು ಆಯ್ಕೆ ಮಾಡುವ ಸ್ವಾತಂತ್ರ‍್ಯ ನೀಡುತ್ತದೆ. ಎಲ್ಲರಿಗೂ ಉನ್ನತ ಶಿಕ್ಷಣ ಒದಗಿಸುತ್ತದೆ. ಇಂತಹ ನೀತಿಯನ್ನು ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕ. ಹಾಗಾಗಿ ತಾಂತ್ರಿಕ ಶಿಕ್ಷಣ ಸಂಸ್ಥೆಗಳಲ್ಲಿ ಪ್ರಾದೇಶಿಕ ಭಾಷೆಯನ್ನು ಉತ್ತೇಜಿಸುವ ಸಲುವಾಗಿ, 2021-22 ಶೈಕ್ಷಣಿಕ ವರ್ಷದಿಂದ ಕನ್ನಡ ಮಾಧ್ಯಮದ ಮೂಲಕ ಇಂಜಿನಿಯರಿಂಗ್ ಶಿಕ್ಷಣ ನೀಡಲು ವಿಶ್ವವಿದ್ಯಾಲಯವು ಕಾಲೇಜುಗಳಿಗೆ ಅನುಮತಿ ನೀಡಿದೆ ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಸಚಿವ ಅಶ್ವಥ್ ನಾರಾಯಣ್, ನ್ಯಾಕ್ ಅಧ್ಯಕ್ಷ ಪ್ರೊ.ಭೂಷಣ್ ಪಟವರ್ಧನ್, ಎನ್‌ಬಿಎ ಅಧ್ಯಕ್ಷ ಪ್ರೊ.ಕೆ.ಕೆ.ಅಗರ್ವಾಲ್, ವಿಟಿಯು ಕುಲಪತಿ ಕರಿಸಿದ್ದಪ್ಪ ಸೇರಿದಂತೆ ಇತರ ಗಣ್ಯರು ಉಪಸ್ಥಿತರಿದ್ದರು.

    Live Tv
    [brid partner=56869869 player=32851 video=960834 autoplay=true]

  • ಯಾರೂ ಯಾಕೆ ನನ್ನ ಅರ್ಥ ಮಾಡಿಕೊಳ್ಳುತ್ತಿಲ್ಲ- ನೋವನ್ನು ಅಕ್ಷರ ರೂಪಕ್ಕಿಳಿಸಿದ ಚಂದನಾ ಹೇಳಿದ್ದೇನು..?

    ಯಾರೂ ಯಾಕೆ ನನ್ನ ಅರ್ಥ ಮಾಡಿಕೊಳ್ಳುತ್ತಿಲ್ಲ- ನೋವನ್ನು ಅಕ್ಷರ ರೂಪಕ್ಕಿಳಿಸಿದ ಚಂದನಾ ಹೇಳಿದ್ದೇನು..?

    ಚಾಮರಾಜನಗರ: ಖಾಸಗಿ ಕಾಲೇಜಿನ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದ ಚಂದುಳ್ಳಿ ಚೆಲುವೆಯ ಸಾವು ಎಲ್ಲರಿಗೂ ಶಾಕ್ ತಂದುಕೊಟ್ಟಿದೆ. ಈಕೆಯ ಸಾವಿನ ಸುದ್ದಿ ತಿಳಿದು ನೂರಾರು ವಿದ್ಯಾರ್ಥಿಗಳು, ಸಹೋದ್ಯೋಗಿಗಳು ಎಲ್ಲದಕ್ಕಿಂತ ಹೆಚ್ಚಾಗಿ ಪಾಲಕರು ಮರುಗಿದ್ದಾರೆ.

    ಆಕೆ ಬಾಳಿ ಬದುಕಬೇಕಿದ್ದ ಯುವತಿ. ಆದ್ರೆ ಆಕೆಗೆ ಏನಾಯ್ತೋ ಏನೋ ತನ್ನ ಹುಟ್ಟುಹಬ್ಬದ ದಿನವೇ ತನ್ನ ಜೀವನವನ್ನು ಕೊನೆಗಾಣಿಸಿಕೊಂಡಿದ್ದಾಳೆ. ಯಳಂದೂರು ತಾಲೂಕಿನ ಅಂಬಳೆ ಗ್ರಾಮದ ಉಪನ್ಯಾಸಕಿ ಚಂದನಾ(26) ಆತ್ಮಹತ್ಯೆ ಮಾಡಿಕೊಂಡ ಚೆಲುವೆ. ಚಂದನಾ ಚಾಮರಾಜನಗರದ ಜೆಎಸ್‍ಎಸ್ ಕಾಲೇಜಿನಲ್ಲಿ ಸಸ್ಯಶಾಸ್ತ್ರ ಉಪನ್ಯಾಸಕಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಜೆಎಸ್‍ಎಸ್ ಕಾಲೇಜಿನ ಹಾಸ್ಟೆಲ್‍ನಲ್ಲೇ ವಾಸ್ತವ್ಯ ಹೂಡಿದ್ದಳು. ಇದನ್ನೂ ಓದಿ: ಪಾಕ್ ರಾಜಕಾರಣಿ ಸಂಬಂಧಿ ಕಾರ್ ಓವರ್‌ಟೇಕ್ – ಹಿಂದೂ ಕುಟುಂಬದ ಮೇಲೆ ದಾಳಿ

    ಈಕೆ ಎಲ್ಲರ ಜೊತೆಯಲ್ಲೂ ಉತ್ತಮ ಬಾಂದವ್ಯ ಹೊಂದಿದ್ರು. ಇವತ್ತು ಆಕೆಯ ಹುಟ್ಟುಹಬ್ಬ ಇತ್ತು. ಹೀಗಾಗಿ ಆಕೆಯ ಸ್ನೇಹಿತರು, ವಿದ್ಯಾರ್ಥಿಗಳು ಶುಭಾಶಯ ಕೋರಿದ್ರು. ಆದ್ರೆ ಇದಾದ ನಂತರ ಆಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ತನ್ನ ಜೊತೆ ಕೊಠಡಿಯಲ್ಲಿದ್ದ ಸ್ನೇಹಿತರು ಹೊರಹೋದ ನಂತರ ತನ್ನ ಕೊಠಡಿಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

    ಡೆತ್ ನೋಟ್‍ನಲ್ಲಿ ಬಯಲಾದ ಸತ್ಯ
    ಆತ್ಮಹತ್ಯೆಗೂ ಮುನ್ನ ಚಂದನಾ ಡೆತ್‍ನೋಟ್ ಬರೆದಿಟ್ಟಿದ್ದು, ಯಾಕೆ ಯಾರೂ ನನ್ನ ಅರ್ಥ ಮಾಡಿಕೊಳ್ಳುತ್ತಿಲ್ಲ ಎಂದು ಪ್ರಾರಂಭಿಸಿದ್ದು, ತನ್ನ ಮನದಾಳದ ನೋವನ್ನು ಅಕ್ಷರ ರೂಪ ನೀಡಿ ಕೊನೆಗೆ ನನ್ನ ಸಾವಿಗೆ ಯಾರು ಕಾರಣರಲ್ಲ. ನನ್ನ ಸಾವಿಗೆ ನಾನೇ ಕಾರಣ ಎಂದು ಬರೆದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

    ತನ್ನ ಇಬ್ಬರು ಅಕ್ಕಂದಿರಿಗೆ ಸಾರಿ ಕೇಳಿರುವ ಚಂದನಾ, ತಂಗಿಯನ್ನು ಉದ್ದೇಶಿಸಿ ಯಾವುದೇ ಕಾರಣಕ್ಕೂ ಉಪನ್ಯಾಸಕಿ ಹುದ್ದೆಗೆ ಬರಬೇಡ ಎಂದು ತನ್ನ ಕೊನೆಯ ಸಲಹೆಯನ್ನು ಕೊಟ್ಟಿದ್ದಾರೆ.

    ತಂದೆ ಜೊತೆ ಕೊನೆಯ ಬಾರಿ ಪಾನಿಪೂರಿ
    ಇಂದು ಚಂದನಾಳ ಹುಟ್ಟುಹಬ್ಬವಾಗಿದ್ದು, ಆಕೆಯ ತಂದೆ ಕೇಕ್ ಕಟ್ ಮಾಡಿಸಲು ಸಕಲ ಸಿದ್ಧತೆಯನ್ನು ನಡೆಸಿದ್ದರು. ಸೋಮವಾರ ಸಂಜೆ ಅಷ್ಟೇ ಮಗಳೊಟ್ಟಿಗೆ ಪಾನಿಪೂರಿ ಸೇವಿಸಿ ಊರಿಗೆ ಬರುವಂತೆ ಹೇಳಿದ್ದರಂತೆ, ಬೆಳಗ್ಗೆ ಕರೆ ಮಾಡಿದಾಗ ಫೋನ್ ಸ್ವಿಚ್ ಆಫ್ ಆಗಿತ್ತು. ಕೂಡಲೇ ಅವರ ತಂದೆ ಹಾಸ್ಟೆಲ್‍ನ ಸೆಕ್ಯೂರಿಟಿಗೆ ಕರೆ ಮಾಡಿ ಚಂದನಾ ಫೋನ್ ತೆಗೆಯುತ್ತಿಲ್ಲವೆಂದು ತಿಳಿಸಿದ್ದಾರೆ. ಈ ವೇಳೆ ಚಂದನಾ ಕೊಠಡಿ ಬಳಿ ಹೋದ ವಾರ್ಡನ್ ಚಂದನಾ ನೇಣು ಬಿಗಿದುಕೊಂಡಿರುವುದು ಕಂಡುಬಂದಿದೆ. ಇದನ್ನೂ ಓದಿ:  ಮೊಹರಂ ಹಬ್ಬದಲ್ಲೂ ಅಪ್ಪು – ಹೊಂಡದಲ್ಲಿ ಪುನೀತ್ ಫೋಟೋ ಹಿಡಿದು ಬಂದ ಬಾಲಕ 

    ಕೂಡಲೇ ಆತ ಹಾಸ್ಟೆಲ್‍ನ ಅಧಿಕಾರಿಗಳಿಗೆ ವಿಷಯ ತಿಳಿಸಿದ್ದಾನೆ. ನಂತರ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಚಾಮರಾಜನಗರ ಪಟ್ಟಣ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಹಿಜಬ್ ವಿವಾದ: ಖಾಸಗಿ ಕಾಲೇಜಿನ ಅರೆಕಾಲಿಕ ಉಪನ್ಯಾಸಕಿ ರಾಜೀನಾಮೆ!

    ಹಿಜಬ್ ವಿವಾದ: ಖಾಸಗಿ ಕಾಲೇಜಿನ ಅರೆಕಾಲಿಕ ಉಪನ್ಯಾಸಕಿ ರಾಜೀನಾಮೆ!

    ತುಮಕೂರು: ಹಿಜಬ್ ತೆಗೆದು ತರಗತಿಯೊಳಗೆ ಬರಬೇಕು ಎಂಬ ನಿಯಮ ಜಾರಿಯಾಗಿದ್ದರಿಂದ ಖಾಸಗಿ ಕಾಲೇಜಿನ ಅರೆಕಾಲಿಕ ಉಪನ್ಯಾಸಕಿ ರಾಜೀನಾಮೆ ಕೊಟ್ಟ ಘಟನೆ ತುಮಕೂರಿನಲ್ಲಿ ನಡೆದಿದೆ.

    ತುಮಕೂರು ನಗರದ ಪುಟ್ಟಸ್ವಾಮಯ್ಯನ ಪಾಳ್ಯದ ಜೈನ್ ಪಿಯು ಕಾಲೇಜಿನ ಇಂಗ್ಲೀಷ್ ಉಪನ್ಯಾಸಕಿ ಚಾಂದಿನಿ ನಯಾಜ್ ರಾಜೀನಾಮೆ ಕೊಟ್ಟವರು. ಕಳೆದ ಮೂರು ವರ್ಷಗಳಿಂದ ಜೈನ್ ಕಾಲೇಜು, ವಿದ್ಯಾವಾಹಿನಿ ಕಾಲೇಜು ಸೇರಿದಂತೆ ಹಲವು ಕಾಲೇಜಿನಲ್ಲಿ ಅರೆಕಾಲಿಕ ಉಪನ್ಯಾಸಕರಾಗಿ ಕೆಲಸ ಮಾಡುತ್ತಿದ್ದರು. ಇದನ್ನೂ ಓದಿ: ಹಿಜಬ್ ವಿವಾದ: ಬುರ್ಕಾನೇ ಮುಖ್ಯ, ಸಿಂಧೂರ ತೆಗೆಸಿ ಎಂದ ವಿದ್ಯಾರ್ಥಿನಿಯರು!

    ಹಿಜಬ್ ವಿವಾದದಿಂದಾಗಿ ತಮ್ಮ ಧರ್ಮಕ್ಕೆ ಹೆಚ್ಚು ಅಧ್ಯತೆ ಕೊಟ್ಟು, ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದಾರೆ. ಇವರು ಮಾತ್ರವಲ್ಲ ಕಾಲೇಜಿನ ವಿದ್ಯಾರ್ಥಿನಿಯರು ಧರ್ಮವೇ ಮುಖ್ಯ ಎಂದು ಕಾಲೇಜನ್ನೆ ಬಿಟ್ಟು ಹೋಗುತ್ತಿದ್ದಾರೆ. ಆದರೆ ನ್ಯಾಯಾಲಯವು ಮಕ್ಕಳಲ್ಲಿ ಒಂದೇ ರೀತಿ ನಿಯಮವಿರಬೇಕು ಎಂದು ಈ ನಿರ್ಧಾರ ಮಾಡಿದ್ದು, ಇದಕ್ಕೆ ಪರ-ವಿರೋಧ ಕೇಳಿಬರುತ್ತಿದೆ.

  • ನಮಗೂ ಉಚಿತ ಲ್ಯಾಪ್‍ಟಾಪ್ ಕೊಡಿ – ಪ್ರತಿಭಟನೆಗಿಳಿದ ಖಾಸಗಿ ಕಾಲೇಜು ವಿದ್ಯಾರ್ಥಿಗಳು

    ನಮಗೂ ಉಚಿತ ಲ್ಯಾಪ್‍ಟಾಪ್ ಕೊಡಿ – ಪ್ರತಿಭಟನೆಗಿಳಿದ ಖಾಸಗಿ ಕಾಲೇಜು ವಿದ್ಯಾರ್ಥಿಗಳು

    ಯಾದಗಿರಿ: ಸರ್ಕಾರಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ನೀಡುತ್ತಿರುವ ಉಚಿತ ಲ್ಯಾಪ್‍ಟಾಪ್ ಯೋಜನೆಯನ್ನು, ಖಾಸಗಿ ಪದವಿ ಕಾಲೇಜು ವಿದ್ಯಾರ್ಥಿಗಳಿಗೆ ವಿಸ್ತರಣೆ ಮಾಡುವಂತೆ ಒತ್ತಾಯಿಸಿ, ಯಾದಗಿರಿ ಜಿಲ್ಲಾ ಖಾಸಗಿ ಪದವಿ ಕಾಲೇಜು ಆಡಳಿತ ಮಂಡಳಿಗಳ ಒಕ್ಕೂಟ ಮತ್ತು ನೂರಾರು ಪದವಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

    ನಗರದ ತಹಶೀಲ್ದಾರ್ ಕಚೇರಿ ಎದುರು ನಡೆದ ಈ ಪ್ರತಿಭಟನೆಯಲ್ಲಿ ಜಿಲ್ಲೆಯ ವಿವಿಧ ಖಾಸಗಿ ಕಾಲೇಜಿನ ಪದವಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕೇವಲ ಸರ್ಕಾರಿ ಕಾಲೇಜುಗಳಲ್ಲಿ ಮಾತ್ರ ಬಡ ವಿದ್ಯಾರ್ಥಿಗಳು ಇರುವುದಿಲ್ಲ. ಖಾಸಗಿ ಕಾಲೇಜುಗಳಲ್ಲೂ ಸಹ ಬಡ ವಿದ್ಯಾರ್ಥಿಗಳು ಅಭ್ಯಾಸ ಮಾಡುತ್ತಿದ್ದಾರೆ. ನಮಗೂ ಸರ್ಕಾರದಿಂದ ಉಚಿತ ಲ್ಯಾಪ್‍ಟಾಪ್ ನೀಡಿ ಎಂದು ಪ್ರತಿಭಟನೆ ಮಾಡಿದರು.

    ಸರ್ಕಾರ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಿಗೆ ಮಲತಾಯಿ ಧೋರಣೆ ತೋರಿಸುತ್ತಿದೆ. ಸರ್ಕಾರಿ ಪದವಿ ವಿದ್ಯಾರ್ಥಿಗಳಂತೆ ಖಾಸಗಿ ಕಾಲೇಜಗಳ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್‍ಟಾಪ್ ರಾಜ್ಯ ಸರ್ಕಾರ ನೀಡಬೇಕು ಎಂದು ಪ್ರತಿಭಟನಾ ನಿರತರು ಆಗ್ರಹಿಸಿದರು.

  • ಕೈ ನಾಯಕ, ಪುತ್ರನ ದಾಸ್ಯಕ್ಕೆ ಒಳಗಾದ್ರಾ ಕಲಬುರಗಿ ಪೊಲೀಸರು?

    ಕೈ ನಾಯಕ, ಪುತ್ರನ ದಾಸ್ಯಕ್ಕೆ ಒಳಗಾದ್ರಾ ಕಲಬುರಗಿ ಪೊಲೀಸರು?

    ಕಲಬುರಗಿ: ಪ್ರಾಂಶುಪಾಲರ ಮೇಲೆ ಹಲ್ಲೆ ಮಾಡಿದ್ದ ಕಾಂಗ್ರೆಸ್ ನಾಯಕ ಹಾಗೂ ಮಗನ ವಿರುದ್ಧ ಎರಡೂ ದಿನ ಕಳೆದರೂ ಯಾವುದೇ ಪ್ರಕರಣ ದಾಖಲಾಗದೇ ಪೊಲೀಸರೇ ಅವರ ಬೆನ್ನಿಗೆ ನಿಂತಿದ್ದಾರಾ ಎನ್ನುವ ಪ್ರಶ್ನೆ ಎದ್ದಿದೆ.

    ಖಾಸಗಿ ಕಾಲೇಜಿನ ಪ್ರಾಂಶುಪಾಲ ಮಹೇಶ್ ರಾಥೋಡ್ ಮೇಲೆ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಜಗದೇವಯ್ಯ ಗುತ್ತೆದಾರ್ ಹಾಗೂ ಅವರ ಪುತ್ರ ಜಿಲ್ಲಾ ಪಂಚಾಯತ್ ಸದಸ್ಯ ರಾಜೇಶ್ ಗುತ್ತೆದಾರ್ ಹಲ್ಲೆ ಮಾಡಿದ್ದಾರೆ. ಕಲಬುರಗಿಯ ಗಣೇಶ್ ನಗರದಲ್ಲಿ ಸೋಮವಾರ ಈ ಘಟನೆ ನಡೆದಿದ್ದು, ದೂರು ದಾಖಲಾಗಿದ್ದರೂ ಪೊಲೀಸರು ಇದೂವರೆಗೂ ಯಾವುದೇ ಪ್ರಕರಣ ದಾಖಲಾಗಿಲ್ಲ.

    ಗಣೇಶ್ ನಗರದ ಖಾಸಗಿ ಕಾಲೇಜು ಸಮೀಪ ಜಗದೇವಯ್ಯ ಗುತ್ತೆದಾರ್ ಮನೆಯ ಮುಂದೆ ವಿದ್ಯಾರ್ಥಿಗಳು ಬೈಕ್ ನಿಲ್ಲಿಸಿದ್ದರು. ಜಗದೇವಯ್ಯ ಮನೆಗೆ ಮರಳುತ್ತಿದ್ದಾಗ ಬೈಕ್‍ಗಳು ಅಡ್ಡ ನಿಂತಿದ್ದರಿಂದ ಹಾರ್ನ್ ಹಾಕಿದ್ದಾರೆ. ಆದರೆ ವಿದ್ಯಾರ್ಥಿಗಳು ಬೈಕ್ ತೆಗೆಯಲು ತಡ ಮಾಡಿದ್ದಾರೆ. ತಮಗಾದ ತೊಂದರೆಯಿಂದ ವಿದ್ಯಾರ್ಥಿಗಳನ್ನು ಜಗದೇವಯ್ಯ ಅವಾಚ್ಯ ಪದಗಳಿಂದ ನಿಂದಿಸಿದ್ದಾರೆ. ಇದೇ ವೇಳೆ ಕಾಲೇಜಿನಿಂದ ಪ್ರಾಶುಪಾಲ ಮಹೇಶ್ ಹೊರಗೆ ಬರುತ್ತಿದ್ದಂತೆ ಅವರಿಗೂ ಬೈದು, ಜಾತಿ ನಿಂದನೆ ಮಾಡಿದ್ದಾರೆ.

    ತಂದೆ ಜಗಳವಾಡುತ್ತಿರುವ ಧ್ವನಿ ಕೇಳಿಸಿಕೊಂಡ ರಾಜೇಶ್ ಸ್ಥಳಕ್ಕೆ ಬಂದಿದ್ದಾರೆ. ಪ್ರಾಂಶುಪಾಲ ಮಹೇಶ್ ಜೊತೆಗೆ ವಗ್ದಾಳಿ ನಡೆಸಿ ಹಲ್ಲೆ ಮಾಡಿದ್ದಾರೆ. ಇದನ್ನು ಖಂಡಿಸಿ ವಿದ್ಯಾರ್ಥಿಗಳು ಗಲಾಟೆ ಮಾಡಿದ್ದಕ್ಕೆ ಕೋಪಗೊಂಡ ರಾಜೇಶ್, ನಾನು ಜಿಲ್ಲಾ ಪಂಚಾಯತ್ ಸದಸ್ಯ ಗೊತ್ತಲ್ವಾ. ನನ್ನ ವಿರುದ್ಧ ನಿಮಗೆ ಏನು ಮಾಡಿಕೊಳ್ಳಲು ಆಗುವುದಿಲ್ಲ ಎಂದು ಅವಾಜ್ ಹಾಕಿದ್ದಾರೆ.

    ಈ ಪ್ರಕರಣ ಸಂಬಂಧ ಸ್ಟೇಷನ್ ಬಜಾರ್ ಠಾಣೆಗೆ ಸೋಮವಾರ ದೂರು ನೀಡಿದ್ದೆ. ಆದರೆ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದೇ ಸುಮ್ಮನಾಗಿದ್ದರು. ಅಷ್ಟೇ ಅಲ್ಲದೆ ಎರಡು ದಿನಗಳು ಕಳೆದರೂ ಎಫ್‍ಐಆರ್ ದಾಖಲಾಗಿಲ್ಲ ಎಂದು ಪ್ರಾಂಶುಪಾಲ ಮಹೇಶ್ ಆರೋಪಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv