Tag: private hotel

  • ಬೆಂಗಳೂರಿನಲ್ಲಿ ಪರಿಚಯಸ್ಥ ಮಹಿಳೆ ಮೇಲೆ ಗ್ಯಾಂಗ್ ರೇಪ್

    ಬೆಂಗಳೂರಿನಲ್ಲಿ ಪರಿಚಯಸ್ಥ ಮಹಿಳೆ ಮೇಲೆ ಗ್ಯಾಂಗ್ ರೇಪ್

    ಬೆಂಗಳೂರು: ಪರಿಚಯಸ್ಥ ಮಹಿಳೆ ಮೇಲೆ ನಾಲ್ವರು ಯುವಕರು ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ನಗರದ ಕೋರಮಂಗಲದಲ್ಲಿ (Koramangala) ನಡೆದಿದೆ.

    ಕೋರಮಂಗಲದ ಜ್ಯೋತಿ ನಿವಾಸ ಜಂಕ್ಷನ್‌ ಬಳಿಯಿರುವ ಖಾಸಗಿ ಹೋಟೆಲ್‌ನ (Private Hotel) ಟೆರೆಸ್‌ ಮೇಲೆ ಕಾಮುಕರು ಪರಿಚಯಸ್ಥ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ. ಈ ಕುರಿತು ಸಂತ್ರಸ್ತ ಮಹಿಳೆ ಮುಂಜಾನೆ 5 ಗಂಟೆ ಸುಮಾರಿಗೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ನನ್ನ ನಾಯಕತ್ವದಲ್ಲೇ ಚುನಾವಣೆ ನಡೆದಾಗ ಆ ಪದ ಹೇಳಿ: ಪಟ್ಟದ ಫೈಟ್‌ ವೇಳೆ ಹೊಸ ದಾಳ ಉರುಳಿಸಿದ ಡಿಕೆಶಿ

    ಬಳಿಕ ಪ್ರಕರಣ ದಾಖಲಿಸಿಕೊಂಡಿರುವ ಕೋರಮಂಗಲ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಕೃತ್ಯ ಎಸಗಿದ ಕಾಮುಕರಿಗಾಗಿ ಹುಡುಕಾಟ ನಡೆಸಿದ್ದಾರೆ. ಸದ್ಯ ಸಂತ್ರಸ್ತ ಮಹಿಳೆಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ. ಇದನ್ನೂ ಓದಿ: ಗಂಗಾ ನೀರು ಸ್ನಾನಕ್ಕೆ ಸುರಕ್ಷಿತ.. ಅದರ ಸಂಪರ್ಕದಿಂದ ಚರ್ಮ ರೋಗಗಳು ಬರಲ್ಲ: ಪದ್ಮಶ್ರೀ ಪುರಷ್ಕೃತ ವಿಜ್ಞಾನಿ ಡಾ.ಅಜಯ್ ಸೋಂಕರ್

    ಒಂದು ತಿಂಗಳ ಹಿಂದೆಯಷ್ಟೇ ನಗರದ ಕೆ.ಆರ್‌ ಮಾರ್ಕೆಟ್‌ನಲ್ಲಿ ಬಸ್‌ಗಾಗಿ ಕಾಯುತ್ತಿದ್ದ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದ ಘಟನೆ ನಡೆದಿತ್ತು.

  • Mysuru | ಥೈಲ್ಯಾಂಡ್‌ ಬ್ಯೂಟಿ ಇಟ್ಕೊಂಡು ಹೈಟೆಕ್‌ ವೇಶ್ಯಾವಾಟಿಕೆ ದಂಧೆ – ಕೇಸ್‌ ದಾಖಲು

    Mysuru | ಥೈಲ್ಯಾಂಡ್‌ ಬ್ಯೂಟಿ ಇಟ್ಕೊಂಡು ಹೈಟೆಕ್‌ ವೇಶ್ಯಾವಾಟಿಕೆ ದಂಧೆ – ಕೇಸ್‌ ದಾಖಲು

    ಮೈಸೂರು: ನಗರದಲ್ಲಿ ಥೈಲ್ಯಾಂಡ್‌ ಬ್ಯೂಟಿ (Thailand Beauty) ಇಟ್ಟುಕೊಂಡು ಹೈಟೆಕ್‌ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಜಾಲವನ್ನು ಪೊಲೀಸರು (Saraswathipuram Police) ಪತ್ತೆಹಚ್ಚಿದ್ದಾರೆ.

    ಹೌದು. ಸರ್ಕಾರಿ ನೌಕರಿಯಲ್ಲಿದ್ದ ವ್ಯಕ್ತಿಯೇ ಥೈಲ್ಯಾಂಡ್ ಯುವತಿಯನ್ನ ಕರೆತಂದು ಮೈಸೂರಿನ ಹೋಟೆಲ್‌ವೊಂದರಲ್ಲಿ (Mysuru Private Hotel) ವೇಶ್ಯೆವಾಟಿಕೆ ನಡೆಸುತ್ತಿರುವುದು ಬೆಳಕಿಗೆ ಬಂದಿದೆ. ಕೆಎಸ್‌ಆರ್‌ಟಿಸಿ ನೌಕರ ರತನ್ ಥೈಲ್ಯಾಂಡ್ ಬ್ಯೂಟಿ ಇಟ್ಕೊಂಡು ದಂಧೆ ಮಾಡ್ತಿದ್ದ. ಆರೋಪಿ ರತನ್ ಜೊತೆ ರೇವಣ್ಣ ಎಂಬಾತನೂ ಸಾಥ್ ಕೊಟ್ಟಿದ್ದ. ಥೈಲ್ಯಾಂಡ್ ಬ್ಯೂಟಿ ಬಳಸಿ ಓರ್ವ ಗಿರಾಕಿಯಿಂದ 8 ರಿಂದ 10,000 ರೂ. ವಸೂಲಿ ಮಾಡುತ್ತಿದ್ದರು ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

    ಬೋಗಾದಿ ಬಳಿ ಇರುವ ಹೋಟೆಲ್‌ನಲ್ಲಿ ವಾಸವಿದ್ದ ಥೈಲ್ಯಾಂಡ್ ಯುವತಿ ಜೊತೆ ಮತ್ತೊಬ್ಬ ಯುವತಿಯೂ ವೇಶ್ಯೆವಾಟಿಕೆಯಲ್ಲಿ ತೊಡಗಿದ್ದಳು. ವೇಶ್ಯಾವಾಟಿಕೆ ನೆಡೆಯುತಿದ್ದ ಸ್ಥಳಕ್ಕೆ ಒಡನಾಡಿ ಸೇವಾ ಸಂಸ್ಥೆ, ಪೊಲೀಸರು ದಾಳಿ ಮಾಡಿ ಇಬ್ಬರು ಯುವತಿಯರ ರಕ್ಷಣೆ ಮಾಡಿದ್ದಾರೆ. ಜೊತೆಗೆ ಪೊಲೀಸರು 7 ಜನರನ್ನ ವಶಕ್ಕೆ ಪಡೆದಿದ್ದಾರೆ.

    ಪೊಲೀಸರು ಕೇಳಿದ್ದಕ್ಕೆ ಬ್ಯುಸಿನೆಸ್ ಪರ್ಪಸ್‌ಗೆ ಬಂದಿದ್ದೇನೆ ಎಂದ ಥೈಲ್ಯಾಂಡ್ ಯುವತಿ. 1 ದಿನದ ಹಿಂದಷ್ಟೇ ಮೈಸೂರಿಗೆ ಬಂದಿದ್ದೆ ಎಂಬ ಮಾಹಿತಿ ನೀಡಿದ್ದಾಳೆ. ಸರಸ್ವತಿಪುರಂ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • 60 ಬಾರಿ ಚುಚ್ಚಿ ಚುಚ್ಚಿ ಕೊಂದ ಪಾತಕಿಗಳು- ಬುಧವಾರ ಹುಬ್ಬಳ್ಳಿಯಲ್ಲೇ ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ

    60 ಬಾರಿ ಚುಚ್ಚಿ ಚುಚ್ಚಿ ಕೊಂದ ಪಾತಕಿಗಳು- ಬುಧವಾರ ಹುಬ್ಬಳ್ಳಿಯಲ್ಲೇ ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ

    ಹುಬ್ಬಳ್ಳಿ: ಸರಳವಾಸ್ತು, ಮಾನವಗುರು ಖ್ಯಾತಿಯ ಚಂದ್ರಶೇಖರ ಗುರೂಜಿ ಅವರನ್ನು ಹುಬ್ಬಳ್ಳಿಯ ಖಾಸಗಿ ಹೋಟೆಲ್‍ನಲ್ಲಿ ಭೀಕರವಾಗಿ ಕೊಲ್ಲಲಾಗಿದೆ. ನಾಳೆ ಹುಬ್ಬಳ್ಳಿಯಲ್ಲೇ ಅಂತ್ಯಕ್ರಿಯೆ ನಡೆಯಲಿದೆ.

    58 ವರ್ಷದ ಚಂದ್ರಶೇಖರ್ ಗುರೂಜಿಯನ್ನು ಭೇಟಿ ಮಾಡಲು ಬಂದ ಅವರ ಮಾಜಿ ಆಪ್ತ ಸಹಾಯಕರು ಈ ಕೃತ್ಯ ಎಸಗಿದ್ದಾರೆ. ಮಧ್ಯಾಹ್ನ 12.23ರ ಸಮಯಲ್ಲಿ ಹೋಟೆಲ್ ರೂಂನಿಂದ ರಿಸೆಪ್ಶನ್‍ಗೆ ಬಂದ ಚಂದ್ರಶೇಖರ ಗುರೂಜಿ ಪಾದಕ್ಕೆ ಒಬ್ಬ ನಮಸ್ಕರಿಸುವ ಹೊತ್ತಲ್ಲೇ ಅಲ್ಲೇ ನಿಂತಿದ್ದ ಇನ್ನೊಬ್ಬ ಗುರೂಜಿ ಎದೆಗೆ ಚಾಕು ಹಾಕಿದ್ದ. ನಂತ್ರ ಇಬ್ರು ಸೇರಿಕೊಂಡು ಕೇವಲ 40 ಸೆಕೆಂಡ್‍ಗಳ ಅಂತರದಲ್ಲಿ 60ಕ್ಕೂ ಹೆಚ್ಚು ಬಾರಿ ಚುಚ್ಚಿ, ಕತ್ತು ಕೊಯ್ದು ಭೀಕರವಾಗಿ ಕೊಂದಿದ್ದಾರೆ.

    ರಕ್ತದ ಮಡುವಿನಲ್ಲಿ ವಿಲವಿಲ ಒದ್ದಾಡಿದ ಚಂದ್ರಶೇಖರ ಗುರೂಜಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಹತ್ಯೆ ಬೆನ್ನಲ್ಲೇ ಇಬ್ಬರು ಹಂತಕರು ಅಲ್ಲಿಂದ ಹೊರಗೆ ಓಡಿದ್ದಾರೆ. ಈ ಎಲ್ಲಾ ಭೀಕರ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿವೆ. ತಕ್ಷಣ ಕಾರ್ಯಾಚರಣೆ ನಡೆಸಿದ ಪೊಲೀಸರು, ಕಾರಲ್ಲಿ ಮುಂಬೈಗೆ ಎಸ್ಕೇಪ್ ಆಗುತ್ತಿದ್ದ ಇಬ್ಬರು ಹಂತಕರಾದ ಧಾರವಾಡದ ಮಹಂತೇಶ್ ಶಿರೂರ ಮತ್ತು ಕಲಘಟಗಿಯ ಮಂಜುನಾಥ್‍ನನ್ನು ರಾಮದುರ್ಗ ಬಳಿ ಸಿನಿಮೀಯ ರೀತಿಯಲ್ಲಿ ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದಾರೆ. ಇದನ್ನೂ ಓದಿ: ಗುರೂಜಿ ಹತ್ಯೆ ಪ್ರಕರಣ- ರಸ್ತೆಯಲ್ಲಿ ಜೆಸಿಬಿ ಅಡ್ಡ ನಿಲ್ಲಿಸಿ, ಗನ್ ತೋರಿಸಿ ಹಂತಕರಿಗೆ ಬೇಡಿ ತೊಡಿಸಿದ ಖಾಕಿ

    ಮೊಬೈಲ್ ಲೋಕೇಷನ್ ಟವರ್ ಆಧರಿಸಿ ಬೆನ್ನಟ್ಟಿದ ಪೊಲೀಸರು ಆರೋಪಿಗಳು ಎಸ್ಕೇಪ್ ಆಗದಂತೆ ಸುತ್ತುವರೆದಿದ್ದಾರೆ. ರಸ್ತೆಗೆ ಅಡ್ಡಲಾಗಿ ಜೆಸಿಬಿ ನಿಲ್ಲಿಸಿ ಕಾರನ್ನು ತಡೆದ್ರು. ಆರೋಪಿಗಳು ಓಡಲು ಪ್ರಯತ್ನಿಸಿದಾಗ ರಾಮದುರ್ಗ ಡಿವೈಎಸ್ಪಿ ಶೂಟೌಟ್ ಮಾಡೋ ಎಚ್ಚರಿಕೆ ನೀಡಿ ಅರೆಸ್ಟ್ ಮಾಡಿದ್ರು. ಇದಕ್ಕೂ ಮುನ್ನ, ಮಹಂತೇಶ್ ಶಿರೂರ ಪತ್ನಿ ವನಜಾಕ್ಷಿಯನ್ನು ಪೊಲೀಸ್ರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ರು.

    ಹಂತಕರ ಬಂಧನ ನಂತ್ರ ವನಜಾಕ್ಷಿಯನ್ನು ಬಿಟ್ಟುಕಳಿಸಿದ್ರು. ಮುಂಬೈನಿಂದ ಕುಟುಂಬಸ್ಥರು ಹುಬ್ಬಳ್ಳಿಗೆ ಧಾವಿಸಿದ್ದು, ನಾಳೆ ಹುಬ್ಬಳ್ಳಿಯ ಸುಳ್ಳ ಗ್ರಾಮದ ರಸ್ತೆಯ ಫಾರಂಹೌಸ್‍ನಲ್ಲಿ ಚಂದ್ರಶೇಖರ್ ಗುರೂಜಿ ಅಂತ್ಯಕ್ರಿಯೆ ನಡೆಯಲಿದೆ. ಸರಳವಾಸ್ತು ಸಿಬ್ಬಂದಿ ಕಣ್ಣೀರಿಟ್ಟಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಕೊಲೆ ಮಾಡಲು ಇಷ್ಟವಿಲ್ಲ, ಆದ್ರೆ ನಂಗೆ ಬೇರೆ ಆಯ್ಕೆ ಇಲ್ಲ – ಹೋಟೆಲಿನಲ್ಲಿ ಮಹಿಳೆಯ ಬರ್ಬರ ಹತ್ಯೆ

    ಕೊಲೆ ಮಾಡಲು ಇಷ್ಟವಿಲ್ಲ, ಆದ್ರೆ ನಂಗೆ ಬೇರೆ ಆಯ್ಕೆ ಇಲ್ಲ – ಹೋಟೆಲಿನಲ್ಲಿ ಮಹಿಳೆಯ ಬರ್ಬರ ಹತ್ಯೆ

    ಕೋಲ್ಕತ್ತಾ: ಖಾಸಗಿ ಹೋಟೆಲೊಂದರಲ್ಲಿ 20 ವರ್ಷದ ಮಹಿಳೆಯೊಬ್ಬಳು ಕೊಲೆಯಾಗಿರುವ ಘಟನೆ ಕೋಲ್ಕತ್ತಾದ ಪೂರ್ವ ಹೊರವಲಯದಲ್ಲಿ ನಡೆದಿದೆ.

    ಕೊಲೆಯಾಗಿರುವ ಮಹಿಳೆ ಕೊಠಡಿಯಲ್ಲಿ ಪೊಲೀಸರಿಗೆ ಬೆಂಗಾಲಿ ಭಾಷೆಯಲ್ಲಿ ಬರೆದ ಪತ್ರವೊಂದು ದೊರೆತಿದೆ. ನಿನ್ನನ್ನು ಕೊಲೆ ಮಾಡಲು ನನಗೆ ಇಷ್ಟವಿರಲಿಲ್ಲ, ಆದ್ರೆ ನನಗೆ ಬೇರೆ ಆಯ್ಕೆ ಇಲ್ಲ ಎಂದು ಸ್ಪಷ್ಟವಾಗಿ ಬರೆಯಲಾಗಿದೆ. ಅಲ್ಲದೆ ಹೊಡೆದು ಹೋದ ಮದ್ಯದ ಬಾಟ್ಲಿ ಕೂಡ ರೂಮ್‍ನಲ್ಲಿ ಪತ್ತೆಯಾಗಿದೆ.

    ಮಹಿಳೆ ತಂಗಿದ್ದ ಕೊಠಡಿಗೆ ಹೋಟೆಲ್ ಸಿಬ್ಬಂದಿಯೊಬ್ಬರು ಬಂದಿದ್ದು, ಮಹಿಳೆ ಹೆಣವಾಗಿ ಬಿದ್ದಿರುವುದನ್ನು ನೋಡಿದ್ದಾರೆ. ಕೂಡಲೇ ಪೊಲೀಸರಿಗೆ ಘಟನೆ ಕುರಿತಂತೆ ಮಾಹಿತಿ ನೀಡಿದ್ದಾರೆ.

    ತಕ್ಷಣ ಸ್ಥಳಕ್ಕೆ ಬಂದ ಪೊಲೀಸರು ತನಿಖೆ ನಡೆಸಿದಾಗ ವ್ಯಕ್ತಿಯೊಬ್ಬರ ಜೊತೆ ಮಹಿಳೆ ಹೋಟೆಲ್‍ಗೆ 1 ಗಂಟೆ ಸುಮಾರಿಗೆ ಬಂದಿದ್ದು, ಮಧ್ಯಾಹ್ನ 2 ಗಂಟೆ ಹೊತ್ತಿಗೆ ಊಟವನ್ನು ಆರ್ಡರ್ ಮಾಡಿದ್ದಾರೆ. ಹಾಗೂ 4 ಗಂಟೆಯ ಹೊತ್ತಿಗೆ ವ್ಯಕ್ತಿ ಹೋಟೆಲ್‍ನಿಂದ ಹೊರಟಿದ್ದಾನೆ. ಮಹಿಳೆ ಇದ್ದ ರೂಮ್‍ನಿಂದ ವ್ಯಕ್ತಿ ಹೊರಬಂದದ್ದನ್ನು ಮಹಿಳೆಯ ಪತಿ ನೋಡಿದ್ದಾರೆ.

    ಕೊಲೆಯಾದ ಮಹಿಳೆ ಹಾಗೂ ಆಕೆಯ ಪತಿ ಪಶ್ಚಿಮ ಮಿಡ್ನಾಪೋರ್ ಜಿಲ್ಲೆಯ ನಿವಾಸಿಗಳು ಎಂಬ ಮಾಹಿತಿ ದೊರೆತಿದ್ದು ಸದ್ಯ ಪೊಲೀಸರು ತನಿಖೆ ಆರಂಭಿಸಿದ್ದಾರೆ.