Tag: Private Job

  • ಬೈಕ್‌ಗೆ ಕ್ಯಾಂಟರ್ ಡಿಕ್ಕಿ – ಕೆಲಸಕ್ಕೆ ತೆರಳುತ್ತಿದ್ದ ಸ್ನೇಹಿತರು ಬೈಕ್ ಅಪಘಾತದಲ್ಲಿ ದುರ್ಮರಣ

    ಬೈಕ್‌ಗೆ ಕ್ಯಾಂಟರ್ ಡಿಕ್ಕಿ – ಕೆಲಸಕ್ಕೆ ತೆರಳುತ್ತಿದ್ದ ಸ್ನೇಹಿತರು ಬೈಕ್ ಅಪಘಾತದಲ್ಲಿ ದುರ್ಮರಣ

    ಚಿಕ್ಕಬಳ್ಳಾಪುರ: ಬೈಕ್‌ಗೆ ಕ್ಯಾಂಟರ್ (Canter vehicle) ಡಿಕ್ಕಿಯಾಗಿ ಇಬ್ಬರು ಸವಾರರು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ಜಿಲ್ಲೆಯ ಪೋಶೆಟ್ಟಿಹಳ್ಳಿ ಗ್ರಾಮದ ಬಳಿ ನಡೆದಿದೆ.

    ಮಂಚೇನಹಳ್ಳಿ ತಾಲೂಕಿನ ಹಳೇಬುದ್ದಿವಂತನಹಳ್ಳಿ ಹಾಗೂ ಎಂ ಗುಂಡ್ಲಹಳ್ಳಿ ಅಕ್ಕ ಪಕ್ಕದ ಗ್ರಾಮದ 24 ವರ್ಷದ ಪ್ರಕಾಶ್ ಹಾಗೂ 26 ವರ್ಷದ ಕೃಷ್ಣ ಮೃತರು. ಇದನ್ನೂ ಓದಿ: Mangaluru | ಹೆದ್ದಾರಿ ತಡೆಗೋಡೆಗೆ ಕಾರು ಡಿಕ್ಕಿ – ಇಬ್ಬರು ಯುವಕರು ಸಾವು

    ಅಂದಹಾಗೆ ಈ ಇಬ್ಬರು ಯುವಕರು ಚಿಕ್ಕಬಳ್ಳಾಪುರ ನಗರದ ಖಾಸಗಿ ಕಂಪನಿಯಲ್ಲಿ ಕೆಲಸ (Private Company Job ಮಾಡುತ್ತಿದ್ದು ಮಾರ್ನಿಂಗ್ ಶಿಫ್ಟ್ ಇದ್ದ ಕಾರಣ ಬೆಳಿಗ್ಗೆ ಜೊತೆಯಾಗಿ ಒಂದೇ ಬೈಕಿನಲ್ಲಿ ಕೆಲಸಕ್ಕೆ ಬರ್ತಿದ್ದರು. ಇದನ್ನೂ ಓದಿ: ರಾಜ್ಯದ ಹಲವೆಡೆ ಮುಂದುವರಿದ ಮಳೆ – ಕರಾವಳಿಗೆ ಆರೆಂಜ್, ಉತ್ತರ ಒಳನಾಡಿನ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಈ ವೇಳೆ ಪೋಶೆಟ್ಟಿಹಳ್ಳಿ ಬಳಿ ವೇಗವಾಗಿ ಬಂದ ಕ್ಯಾಂಟರ್ ಹಾಗೂ ಬೈಕ್ ನಡುವೆ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ತಲೆಗೆ ಗಂಭೀರವಾದ ಗಾಯಗಳಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ವರ್ಷಕ್ಕೆ 30 ದಿನ ಮಾತ್ರ ತೆರೆಯುವ ಕೊಟ್ಟಿಯೂರು ಶಿವ ದೇಗುಲಕ್ಕೆ ನಟ ದರ್ಶನ್ ಭೇಟಿ

  • ಕಲಬುರಗಿ ಜಿಲ್ಲಾಡಳಿತದಿಂದ ಉದ್ಯೋಗ ಮೇಳ – 189 ಜನರಿಗೆ ಸ್ಥಳದಲ್ಲೇ ನೇಮಕಾತಿ

    ಕಲಬುರಗಿ ಜಿಲ್ಲಾಡಳಿತದಿಂದ ಉದ್ಯೋಗ ಮೇಳ – 189 ಜನರಿಗೆ ಸ್ಥಳದಲ್ಲೇ ನೇಮಕಾತಿ

    ಕಲಬುರಗಿ: ಇಲ್ಲಿನ ತಾಲೂಕ ಪಂಚಾಯತ್ ಕಚೇರಿ ಆವರಣದಲ್ಲಿ ನಡೆದ ಜಿಲ್ಲಾ ಮಟ್ಟದ ಉದ್ಯೋಗ ಮೇಳದಲ್ಲಿ (job Fair) 189 ಜನರಿಗೆ ಸ್ಥಳದಲ್ಲಿಯೇ ನೇಮಕಾತಿ ಆದೇಶ ನೀಡಲಾಯಿತು.

    ಕಲಬುರಗಿ, ಬೆಂಗಳೂರು (Bengaluru), ಹೈದರಾಬಾದ್‌, ಪುಣೆ ಮೂಲದ ಸುಮಾರು 30 ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗವಹಿಸಿದ್ದವು, 1,349 ಉದ್ಯೋಗಾಕಾಂಕ್ಷಿಗಳು ಪಾಲ್ಗೊಂಡಿದ್ದರು. ಸ್ಥಳದಲ್ಲಿಯೇ 189 ಜನರು ನೇಮಕವಾಗಿದ್ದು, ಉಳಿದಂತೆ 300 ಅಭ್ಯರ್ಥಿಗಳನ್ನು ಕಂಪನಿಗಳು (Private Company) ಶಾರ್ಟ್ ಲಿಸ್ಟ್ ಮಾಡಿದ್ದು, ಮುಂದೆ ಅವರನ್ನು ಸಂಪರ್ಕಿಸಿ ಅಂತಿಮ ಹಂತದ ಸಂದರ್ಶನ ನಡೆಸಿ ನೇಮಕಾತಿ ಮಾಡಲಾಗುವುದೆಂದು ತಿಳಿಸಿವೆ. ಇದನ್ನೂ ಓದಿ: ವರ್ತೂರ್ ಪ್ರಕಾಶ್ ಹೆಸರಲ್ಲಿ ಶ್ವೇತಾಗೌಡ ವಂಚನೆ ಕೇಸ್ – 2.1 ಕೆಜಿ ಚಿನ್ನಾಭರಣದ ಮೂಲ ಪತ್ತೆ

    ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ರಾಷ್ಟ್ರೀಯ ಗ್ರಾಮೀಣ ಜೀವನೋಪಾಯ ಅಭಿಯಾನ, ಕಲಬುರಗಿ ಜಿಲ್ಲಾ ಪಂಚಾಯತ್ ಹಾಗೂ ದೀನ್ ದಯಾಳ್ ಉಪಾಧ್ಯಾಯ ಗ್ರಾಮೀಣ ಕೌಶಲ್ಯ ಯೋಜನೆ ಇವರ ಸಹಯೋಗದಲ್ಲಿ ನಡೆದ ಬೃಹತ್ ಉದ್ಯೋಗ ಮೇಳವನ್ನು ಜಿಲ್ಲಾ ಪಂಚಾಯ್ ಸಿಇಓ ಭಂವರ್ ಸಿಂಗ್ ಮೀನಾ ಉದ್ಘಾಟಿಸಿದರು.

    ಈ ಸಂದರ್ಭದಲಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ನಿರುದ್ಯೋಗ ಯುವಕ- ಯುವತಿಯರನ್ನು ಉದ್ಯೋಗ ಕಲ್ಪಿಸಿ ಕೊಡುವ ನಿಟ್ಟಿನಲ್ಲಿ ಈ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ಮೇಳದಲ್ಲಿ ಸುಮಾರು 30 ಕಂಪನಿಗಳು ಭಾಗವಹಿಸಿ, ಉದ್ಯೋಗಾಕಾಂಕ್ಷಿಗಳಿಗೆ ಸಂದರ್ಶನ ನಡೆಸಿದ್ದಾರೆ. ಉದ್ಯೋಗ ಪಡೆದುಕೊಂಡವರು ಸ್ವಾವಲಂಬನೆ ಬದುಕು ಕಟ್ಟಿಕೊಳ್ಳಬೇಕೆಂದು ಕರೆ ನೀಡಿದ ಅವರು, ಸಾಂಕೇತಿಕವಾಗಿ 5 ಜನ ಯುವಕ-ಯುವತಿಯರಿಗೆ ಉದ್ಯೋಗದ ಆದೇಶ ಪತ್ರ ನೀಡಿದರು. ಇದನ್ನೂ ಓದಿ: Champions Trophy | ಯಾವ ವರ್ಷ – ಯಾರು ಚಾಂಪಿಯನ್ಸ್‌? – ಭಾರತ ಕೊನೇ ಬಾರಿ ಟ್ರೋಫಿ ಗೆದ್ದಿದ್ದು ಯಾವಾಗ?

    ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ಜಗದೇವಪ್ಪ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ತಾಲೂಕ ಪಂಚಾಯತ್ ಇಓ ಎಂ.ಡಿ ಸೈಯದ್ ಪಟೇಲ್, ಸ್ಟೇಟ್ ಬ್ಯಾಂಕ್ ಇಂಡಿಯಾದ ಕಲಬುರಗಿ ಗ್ರಾಮೀಣ ಸ್ವಯಂ ಉದ್ಯೋಗ ತರಬೇತಿ ಕೇಂದ್ರದ ನಿರ್ದೇಶಕ ನಂದಕಿಶೋರ ಸೇರಿದಂತೆ ಅನೇಕರು ಇದ್ದರು. ಜಿಲ್ಲಾ ಪಂಚಾಯತಿಯ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಲೋಹಿತ್ ಕುಮಾರ್ ನಿರೂಪಿಸಿದರೆ ಅರುಣ್ ಕುಮಾರ್ ವಂದಿಸಿದರು. ಇದನ್ನೂ ಓದಿ: ಸಿಎಂ ಬದಲಾವಣೆ ವಿಚಾರ ಹೈಕಮಾಂಡ್‌ಗೆ ಬಿಟ್ಟದ್ದು: ಬಿ.ಕೆ ಹರಿಪ್ರಸಾದ್

  • ಸ್ಥಳೀಯರಿಗೆ ಖಾಸಗಿ ಕ್ಷೇತ್ರದಲ್ಲಿ ಶೇ.80 ಮೀಸಲಾತಿ, ಪ್ರತಿ ಮನೆಗೆ ಉದ್ಯೋಗ – ಗೋವಾದಲ್ಲಿ ಕೇಜ್ರಿವಾಲ್ ಘೋಷಣೆ

    ಸ್ಥಳೀಯರಿಗೆ ಖಾಸಗಿ ಕ್ಷೇತ್ರದಲ್ಲಿ ಶೇ.80 ಮೀಸಲಾತಿ, ಪ್ರತಿ ಮನೆಗೆ ಉದ್ಯೋಗ – ಗೋವಾದಲ್ಲಿ ಕೇಜ್ರಿವಾಲ್ ಘೋಷಣೆ

    ಪಣಜಿ: ಗೋವಾದಲ್ಲಿ ಆಮ್ ಅದ್ಮಿ ಪಕ್ಷ ಅಧಿಕಾರಕ್ಕೆ ಬಂದರೆ ಸ್ಥಳೀಯರಿಗೆ ಖಾಸಗಿ ಕ್ಷೇತ್ರದಲ್ಲಿ ಶೇ.80 ರಷ್ಟು ಉದ್ಯೋಗಗಳನ್ನು ಮೀಸಲಿಡುವುದಾಗಿ ರಾಷ್ಟ್ರೀಯ ಸಂಚಾಲಕ ಮತ್ತು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ.

    ವಿಧಾನಸಭೆ ಚುನಾವಣೆ ಹಿನ್ನಲೆ ಪ್ರಚಾರಕ್ಕೆ ತೆರಳಿದ್ದ ಅವರು ಯುವ ಜನತೆಗೆ ಭರಪೂರ ಕೊಡುಗೆಗಳನ್ನು ಘೋಷಿಸಿದ್ದಾರೆ. ಯುವ ಮತಗಳ ಮೇಲೆ ಕಣ್ಣಿಟ್ಟಿರುವ ಅರವಿಂದ್ ಕೇಜ್ರಿವಾಲ್ ನಿರುದ್ಯೋಗ ಸಮಸ್ಯೆಯನ್ನು ಚುನಾವಣಾ ಅಸ್ತ್ರ ಮಾಡಿಕೊಂಡಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗೋವಾದಲ್ಲಿ ಸರ್ಕಾರಿ ಉದ್ಯೋಗ ರಾಜಕಾರಣಿಗಳ ಸಂಬಂಧಿಗಳಿಗೆ ಮೀಸಲಾಗಿದೆ. ಸಾಮಾನ್ಯ ಯುವಕರು ಇಲ್ಲಿ ಸರ್ಕಾರ ನೌಕರಿ ಪಡೆಯಲು ಸಾಧ್ಯವಾಗುತ್ತಿಲ್ಲ ಎಂದು ಆರೋಪಿಸಿದರು.

    ಒಂದು ವೇಳೆ ಗೋವಾದಲ್ಲಿ ಆಮ್ ಅದ್ಮಿ ಅಧಿಕಾರಕ್ಕೆ ಬಂದಲ್ಲಿ ಸಾಮಾನ್ಯ ಯುವಕರಿಗೆ ಸರ್ಕಾರಿ ಹುದ್ದೆ ಹೊಂದಬಹುದು. ಖಾಸಗಿ ಕ್ಷೇತ್ರದ ಶೇ.80ರಷ್ಟು ನೌಕರಿಗಳನ್ನು ಸ್ಥಳೀಯರಿಗೆ ಮೀಸಲಿಡುವ ಕಾನೂನು ತರಲಾಗುವುದು ಎಂದು ಕೇಜ್ರಿವಾಲ್ ಘೋಷಿಸಿದರು.

    ಪ್ರತಿ ಮನೆಗೆ ಒಂದು ಉದ್ಯೋಗ ನೀಡಲಾಗುವುದು, ಉದ್ಯೋಗ ಸಿಗುವವರೆಗೂ 3000 ರೂ. ನಿರುದ್ಯೋಗ ಭತ್ಯೆ ನೀಡುವುದಾಗಿ ಹೇಳಿದ ಅವರು, ಕೊರೊನಾದಿಂದ ಉದ್ಯೋಗ ಕಳೆದುಕೊಂಡ ಪ್ರವಾಸೋದ್ಯಮ ವಲಯದ ಜನರಿಗೆ, ಹಾಗೂ ಗಣಿಗಾರಿಕೆ ನಿಷೇಧದಿಂದ ನಿರುದ್ಯೋಗಿಗಳಾದ ಜನರಿಗೆ 5,000 ರೂ. ನಿರುದ್ಯೋಗ ಭತ್ಯೆ ನೀಡಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ನನಗೆ ಎರಡು ಬಾರಿ ರಾಜ್ಯಸಭಾ ಸೀಟ್ ಆಫರ್ ಬಂದಿತ್ತು: ಸೋನು ಸೂದ್

    ಗೋವಾ ಸಿಎಂ ಪ್ರಮೋದ್ ಸಾವಂತ್ ದೆಹಲಿ ಸರ್ಕಾರದ ಯೋಜನೆಗಳನ್ನು ನಕಲು ಮಾಡಿ ಮನೆ ಬಾಗಿಲಿಗೆ ಸೇವೆ ಕಾರ್ಯಕ್ರಮ ಆರಂಭಿಸಿದ್ದಾರೆ. ನಕಲಿ ಸರ್ಕಾರಕ್ಕೆ ಏಕೆ ಮತ ಹಾಕುಬೇಕು ಎಂದು ಕೇಜ್ರಿವಾಲ್ ವಾಗ್ದಾಳಿ ನಡೆಸಿದರು.  ಇದನ್ನೂ ಓದಿ: ನನ್ನ ಹೆತ್ತ ತಾಯಿಯನ್ನ ಮತಾಂತರ ಮಾಡಿದ್ದಾರೆ: ಗೂಳಿಹಟ್ಟಿ ಶೇಖರ್