Tag: Private Transport

  • ಅವೈಜ್ಞಾನಿಕ, ಅರೆಬೆಂದ ಶಕ್ತಿ ಯೋಜನೆಯಿಂದಾಗಿ ಖಾಸಗಿ ಸಂಚಾರ ವ್ಯವಸ್ಥೆ ಬುಡಮೇಲಾಗಿದೆ: ಹೆಚ್‌ಡಿಕೆ

    ಅವೈಜ್ಞಾನಿಕ, ಅರೆಬೆಂದ ಶಕ್ತಿ ಯೋಜನೆಯಿಂದಾಗಿ ಖಾಸಗಿ ಸಂಚಾರ ವ್ಯವಸ್ಥೆ ಬುಡಮೇಲಾಗಿದೆ: ಹೆಚ್‌ಡಿಕೆ

    ಬೆಂಗಳೂರು: ಖಾಸಗಿ ಸಾರಿಗೆಯನ್ನೇ (Private Transport) ನಂಬಿ ಜೀವನ ನಡೆಸುತ್ತಿರುವವರ ನೆರವಿಗೆ ಸರ್ಕಾರ ಧಾವಿಸಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅವರು ರಾಜ್ಯ ಸರ್ಕಾರಕ್ಕೆ ಒತ್ತಾಯ ಮಾಡಿದ್ದಾರೆ.

    ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು ರಾಜ್ಯ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿಗಳ ಅಡ್ಡ ಪರಿಣಾಮದ ತೀವ್ರತೆ ಜನರಿಗೆ ತಟ್ಟುತ್ತಿದೆ. ಸರ್ಕಾರಿ ಸೌಲಭ್ಯಗಳ ಹಂಚಿಕೆಯಲ್ಲಿನ ಅಸಮಾನತೆ, ಪಕ್ಷಪಾತವು ಅರಾಜಕತೆ ಸೃಷ್ಟಿಸಿದೆ. ಅವೈಜ್ಞಾನಿಕ, ಅರೆಬೆಂದ ‘ಶಕ್ತಿ’ ಯೋಜನೆಯ ಫಲವಾಗಿ ಇವತ್ತು ಖಾಸಗಿ ಸಂಚಾರ ವ್ಯವಸ್ಥೆ ಬುಡಮೇಲಾಗಿದೆ. ಬದುಕಿಗೆ ಗ್ಯಾರಂಟಿ ಕೊಡಿ ಎಂದು ಅವರು ಆಗ್ರಹಪಡಿಸಿದ್ದಾರೆ.

    ಸಾಲಸೋಲ ಮಾಡಿ ಕ್ಯಾಬ್, ಆಟೋ ಓಡಿಸಿಕೊಂಡು ಬದುಕುತ್ತಿದ್ದವರು ಬೀದಿ ಪಾಲಾಗಿದ್ದಾರೆ. ನಿತ್ಯದ ಬದುಕು ಸಾಗಿಸುವುದೇ ದುಸ್ತರ ಎನ್ನುವ ಸ್ಥಿತಿಯಲ್ಲಿ ಅವರಿದ್ದಾರೆ. ಸರ್ಕಾರಿ ಸಾರಿಗೆಯಷ್ಟೇ ಉತ್ತಮವಾಗಿ ಸೇವೆ ಒದಗಿಸುತ್ತಿರುವ ಖಾಸಗಿ ಬಸ್ ಜಾಲವನ್ನು ಸರ್ಕಾರ ಹಾಳು ಮಾಡಿದೆ. ಅನೇಕರ ಬದುಕಿಗೆ ಗ್ಯಾರಂಟಿ ಇಲ್ಲದಂತೆ ಮಾಡಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಓಲಾ, ಊಬರ್ ಚಾಲಕರ ಪ್ರತಿಭಟನೆ ರಾಜಕೀಯ ಪ್ರೇರಿತ: ಡಿಕೆಶಿ

    ಈ ಬಂದ್ ನಿಂದ ಸರ್ಕಾರಿ ಸಾರಿಗೆಗೆ ಪರ್ಯಾಯವಾಗಿದ್ದ ಖಾಸಗಿ ಸಾರಿಗೆ ಜಾಲ ಸಂಪೂರ್ಣ ಸ್ಥಗಿತವಾಗಿದೆ. ಶಾಲಾ ಮಕ್ಕಳು, ಸಾರ್ವಜನಿಕರು, ವಿಮಾನ ನಿಲ್ದಾಣಕ್ಕೆ ತೆರಳುವವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಹಣ್ಣು, ತರಕಾರಿ ಸೇರಿ ಅಗತ್ಯ ವಸ್ತುಗಳ ಸಾಗಣೆಯಲ್ಲಿ ವ್ಯತ್ಯಯ ಆಗಿದೆ.

    ಸರ್ಕಾರವು ಖಾಸಗಿ ಸಾರಿಗೆ ಒಕ್ಕೂಟದವರ ಬೇಡಿಕೆಗಳನ್ನು ಪ್ರತಿಷ್ಠೆ ಪಕ್ಕಕ್ಕಿಟ್ಟು ಮಾನವೀಯತೆಯಿಂದ ಪರಿಶೀಲಿಸಬೇಕು. ಅವರ ಬೇಡಿಕೆಗಳು ಈಡೇರಿಸಲಾಗದ ಅಸಾಧ್ಯ ಡಿಮ್ಯಾಂಡ್‌ಗಳಲ್ಲ. ಅವರಿಗೂ ಕುಟುಂಬಗಳಿವೆ, ತಂದೆತಾಯಿ, ಮಕ್ಕಳು ಇರುತ್ತಾರೆ ಎನ್ನುವುದನ್ನು ಸರ್ಕಾರ ಮರೆಯಬಾರದು ಎಂದು ತಿಳಿಸಿದ್ದಾರೆ.

    ಹೋರಾಟ ಮಾಡುತ್ತಿರುವವರನ್ನು ಕಾಟಾಚಾರಕ್ಕೆ ಕರೆದು ಮಾತನಾಡುವುದಲ್ಲ. ವಾಸ್ತವತೆಗೆ ತಕ್ಕಂತೆ ಕಷ್ಟದಲ್ಲಿರುವ ಅವರಿಗೆ ನೆರವಾಗಬೇಕು. ನುಡಿದಂತೆಯೇ ನಡೆದು, ‘ಗ್ಯಾರಂಟಿ ಬಾಧಿತರ’ ಬದುಕಿಗೆ ಪರಿಹಾರ ಒದಗಿಸಬೇಕು ಎನ್ನುವುದು ನನ್ನ ಆಗ್ರಹ. ತಕ್ಷಣವೇ ಬಂದ್ ನಿರತರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಕರೆದು ಮಾತನಾಡಬೇಕು ಎಂದು ಅವರು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಸರ್ಕಾರದಿಂದ ಬೇಡಿಕೆ ಈಡೇರಿಸುವ ಭರವಸೆ – ಬೆಂಗಳೂರು ಬಂದ್ ವಾಪಸ್

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಖಾಸಗಿ ಸಾರಿಗೆ ಒಕ್ಕೂಟದ ಬೇಡಿಕೆ ಈಡೇರಿಸಲು ಸರ್ಕಾರಕ್ಕೆ 5,500 ಕೋಟಿ ಬೇಕು: ರಾಮಲಿಂಗಾ ರೆಡ್ಡಿ

    ಖಾಸಗಿ ಸಾರಿಗೆ ಒಕ್ಕೂಟದ ಬೇಡಿಕೆ ಈಡೇರಿಸಲು ಸರ್ಕಾರಕ್ಕೆ 5,500 ಕೋಟಿ ಬೇಕು: ರಾಮಲಿಂಗಾ ರೆಡ್ಡಿ

    ಬೆಂಗಳೂರು: ಖಾಸಗಿ ಸಾರಿಗೆ (Private Transport) ಒಕ್ಕೂಟಗಳ ಬೇಡಿಕೆ ಈಡೇರಿಸಲು ಸರ್ಕಾರಕ್ಕೆ 5,500 ಕೋಟಿ ರೂ. ಬೇಕು. ಇದನ್ನು ಮಾಡಲು ಸಾಧ್ಯವೇ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಪ್ರಶ್ನಿಸಿದ್ದಾರೆ.

    ಖಾಸಗಿ ಸಾರಿಗೆ ಒಕ್ಕೂಟ ಸೋಮವಾರ ಬೆಂಗಳೂರಿನಲ್ಲಿ ಮುಷ್ಕರ (Strike) ನಡೆಸುತ್ತಿರುವ ಹಿನ್ನೆಲೆ ನಗರದಲ್ಲಿ ಪಬ್ಲಿಕ್ ಟಿವಿಯೊಂದಿಗೆ ಮಾತನಾಡಿದ ಅವರು, ಒಕ್ಕೂಟ ಬೇಡಿಕೆ ಈಡೇರಿಸಲು 5,500 ಕೋಟಿ ರೂ. ಸರ್ಕಾರಕ್ಕೆ ಬೇಕಾಗುತ್ತದೆ. ಇದನ್ನು ಮಾಡೋಕೆ ಸಾಧ್ಯಾನಾ? ಖಾಸಗಿ ಸಾರಿಗೆಯವರ ಬೇಡಿಕೆಗಳಲ್ಲಿ 2 ಸಮಸ್ಯೆಗಳು ಮಾತ್ರ ನಮಗೆ ಸೇರಿದ್ದು, ಉಳಿದ ಸಮಸ್ಯೆಗಳು 4-5 ವರ್ಷಗಳಿಂದ ಇದೆ ಎಂದರು.

    ಬಿಜೆಪಿ ರಾಜಕೀಯಕ್ಕಾಗಿ ಮುಷ್ಕರಕ್ಕೆ ಬೆಂಬಲ ಕೊಟ್ಟಿದೆ. ಬಿಜೆಪಿಯವರ ಸರ್ಕಾರ ಇದ್ದಾಗ ಯಾಕೆ ಸಮಸ್ಯೆ ಪರಿಹಾರ ಮಾಡಲಿಲ್ಲ? ಸರ್ಕಾರ ಪ್ರಾಕ್ಟಿಕಲ್ ಆಗಿ ಇರೋ ಸಮಸ್ಯೆಗೆ ಪರಿಹಾರ ಕೊಡುತ್ತದೆ. ಸಿಎಂ ಜೊತೆ ಮಾತನಾಡಿ ಪರಿಹಾರ ಮಾಡುತ್ತೇವೆ ಎಂದು ತಿಳಿಸಿರು. ಇದನ್ನೂ ಓದಿ: ಪ್ರತಿಭಟನೆ ಮಧ್ಯೆ ಬಂದ ರ‍್ಯಾಪಿಡೋ ಬೈಕ್ ಸವಾರನಿಗೆ ಬಿತ್ತು ಗೂಸಾ

    ಮುಷ್ಕರದ ಹಿನ್ನೆಲೆ ಪ್ರಯಾಣಿಕರಿಗೆ ತೊಂದರೆ ಆಗದಂತೆ ಹೆಚ್ಚುವರಿ ಬಸ್ ಸೇವೆಗಳನ್ನು ನೀಡಿದ್ದೇವೆ. ಪ್ರಯಾಣಿಕರು, ಜನರು ಯಾರೂ ಆತಂಕ ಪಡುವುದು ಬೇಡ. ಆದರೆ ಯಾರಾದರೂ ಕಲ್ಲು ಹೊಡೆಯುವುದು, ಪ್ರಯಾಣಿಕರಿಗೆ ತೊಂದರೆ ಕೊಡುವುದು ಮಾಡಿದರೆ ಪೊಲೀಸರು ಕ್ರಮ ತೆಗೆದುಕೊಳ್ಳುತ್ತಾರೆ. ಪ್ರಯಾಣಿಕರು ದೂರು ನೀಡಿದರೆ ಕ್ರಮ ಆಗುತ್ತದೆ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ನಾಳೆಯಿಂದ ಬೆಂಗಳೂರಿನ ಗಾರ್ಡನ್‌ ಟರ್ಮಿನಲ್‌ನಿಂದ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳ ಟೇಕಾಫ್‌, ಲ್ಯಾಂಡಿಂಗ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪ್ರತಿಭಟನೆ ಮಧ್ಯೆ ಬಂದ ರ‍್ಯಾಪಿಡೋ ಬೈಕ್ ಸವಾರನಿಗೆ ಬಿತ್ತು ಗೂಸಾ

    ಪ್ರತಿಭಟನೆ ಮಧ್ಯೆ ಬಂದ ರ‍್ಯಾಪಿಡೋ ಬೈಕ್ ಸವಾರನಿಗೆ ಬಿತ್ತು ಗೂಸಾ

    ಬೆಂಗಳೂರು: ಶಕ್ತಿ ಯೋಜನೆಯಿಂದ ತಮಗಾಗುತ್ತಿರುವ ನಷ್ಟಕ್ಕೆ ಪರಿಹಾರ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಸೋಮವಾರ ಬೆಂಗಳೂರಿನಾದ್ಯಂತ (Bengaluru) ಖಾಸಗಿ ಸಾರಿಗೆ (Private Transport) ನೌಕರರು, ರಿಕ್ಷಾ, ಕ್ಯಾಬ್ ಚಾಲರು ಭಾರೀ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ವೇಳೆ ಪ್ರತಿಭಟನೆ ಮಧ್ಯೆ ಬಂದಿದ್ದ ರ‍್ಯಾಪಿಡೋ ಬೈಕ್ ಸವಾರನಿಗೆ ಪ್ರತಿಭಟನಾ ನಿರತರು ಥಳಿಸಿರುವ ಘಟನೆ ನಡೆದಿದೆ.

    ಪ್ರತಿಭಟನಾ ನಿರತರು ಬೈಕ್, ಟ್ಯಾಕ್ಸಿಗಳ ಮೇಲೆ ಕೆಂಗಣ್ಣು ತೋರುತ್ತಿದ್ದಾರೆ. ಮೈಸೂರು ಬ್ಯಾಂಕ್ ಸರ್ಕಲ್‌ನಲ್ಲಿ ಪ್ರಯಾಣಿಕನನ್ನು ಕೂರಿಸಿಕೊಂಡು ಸಾಗುತ್ತಿದ್ದ ರ‍್ಯಾಪಿಡೋ ಬೈಕ್ ಸವಾರನನ್ನು ತಡೆದು, ಪ್ರತಿಭಟನಾಕಾರರು ಥಳಿಸಿದ್ದಾರೆ. ಮಾತ್ರವಲ್ಲದೇ ದ್ವಿಚಕ್ರ ವಾಹನ ಸವಾರರ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

    ಮತ್ತೊಂದೆಡೆ ಜಾಥಾ ಹೊರಟಿದ್ದ ಆಟೋ ಚಾಲಕರ ವಿರುದ್ಧ ದ್ವಿಚಕ್ರ ವಾಹನ ಸವಾರ ಆಕ್ರೋಶ ವ್ಯಕ್ತಪಡಿಸಿದ್ದ. ಈ ವೇಳೆ ದ್ವಿಚಕ್ರ ವಾಹನ ಸವಾರನ ಹೆಲ್ಮೆಟ್ ಕಿತ್ತು ಆಟೋ ಚಾಲಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ನಾಗರಹೊಳೆ ಸಫಾರಿ ವಾಹನದ ಮೇಲೆ ಆನೆ ದಾಳಿ

    ಪ್ರತಿಭಟನಾ ನಿರತರು ನಗರದಲ್ಲಿ ಸಂಚಾರ ಮಾಡುತ್ತಿರುವ ಆಟೋ ಚಾಲಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆಟೋ ಚಾಲಕರಿಗೆ ಬುದ್ದಿ ಹೇಳಿ ಕಳುಹಿಸುತ್ತಿದ್ದಾರೆ. ಮೈಸೂರು ಬ್ಯಾಂಕ್ ಸರ್ಕಲ್ ಬಳಿಕ ಆಟೋಗಳು ಜಮಾವಣೆಗೊಳ್ಳುತ್ತಿದ್ದು, ನೂರಾರು ಆಟೋಗಳು ಫ್ರೀಡಂ ಪಾರ್ಕ್ ಕಡೆ ತೆರಳುತ್ತಿವೆ.

    ನಮ್ಮ ಬೇಡಿಕೆಗಳನ್ನು ಈಡೇರಿಸಿ, ಇಲ್ಲದೇ ಹೋದಲ್ಲಿ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಆಟೋ ಚಾಲಕರು ಎಚ್ಚರಿಕೆ ನೀಡಿದ್ದಾರೆ. ಯಾವ ಸರ್ಕಾರವೂ ನಮ್ಮ ಸಮಸ್ಯೆ ಬಗೆಹರಿಸಿಲ್ಲ. ನಮ್ಮ ತಾಳ್ಮೆಯ ಕಟ್ಟೆ ಒಡೆದಿದೆ. ಇವತ್ತಿನ ಬಂದ್ ನಂತರವೂ ನಮ್ಮ ಹೋರಾಟ ಮುಂದುವರಿಯಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ನಾಳೆಯಿಂದ ಬೆಂಗಳೂರಿನ ಗಾರ್ಡನ್‌ ಟರ್ಮಿನಲ್‌ನಿಂದ ಎಲ್ಲಾ ಅಂತಾರಾಷ್ಟ್ರೀಯ ವಿಮಾನಗಳ ಟೇಕಾಫ್‌, ಲ್ಯಾಂಡಿಂಗ್‌

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ, ಹೋರಾಟ ಮಾಡೋದು ನೌಕರರ ಹಕ್ಕು: ರಾಮಲಿಂಗಾ ರೆಡ್ಡಿ

    ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ, ಹೋರಾಟ ಮಾಡೋದು ನೌಕರರ ಹಕ್ಕು: ರಾಮಲಿಂಗಾ ರೆಡ್ಡಿ

    ವಿಜಯನಗರ: ಖಾಸಗಿ ಸಾರಿಗೆ ಸಂಸ್ಥೆಯವರು ಮುಷ್ಕರಕ್ಕೆ (Private Transport Strike) ಕರೆ ಕೊಟ್ಟಿದ್ದಾರೆ, ಹೋರಾಟ ಮಾಡೋದು ಅವರ ಹಕ್ಕು, ಮಾಡಲಿ ಎಂದು ಸೋಮವಾರ ನಡೆಯಲಿರುವ ಖಾಸಗಿ ಸಾರಿಗೆ ಮುಷ್ಕರ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ (Ramalinga Reddy) ಪ್ರತಿಕ್ರಿಯೆ ನೀಡಿದ್ದಾರೆ.

    ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿಯಲ್ಲಿ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಬಳಿಕ ಮಾತನಾಡಿದ ಅವರು, ಖಾಸಗಿ ಸಾರಿಗೆ ನೌಕರರ ಹಲವಾರು ಬೇಡಿಕೆಗಳು ಇವೆ. ಸುಮಾರು 20-22 ಬೇಡಿಕೆಗಳಿವೆ. ಅದರಲ್ಲಿ 2 ಪ್ರಮುಖವಾಗಿವೆ. ಶಕ್ತಿ ಯೋಜನೆ ವಿಚಾರದಲ್ಲಿ ಅವರ ಬೇಡಿಕೆ ಇದೆ. ಎರಡನೆಯದು ಸ್ವಲ್ಪ ಟ್ಯಾಕ್ಸ್ ಹೆಚ್ಚಳವಾಗಿರೋದು ಎಂದು ತಿಳಿಸಿದರು.

    ಇನ್ನು ಆಟೋ ಚಾಲಕರು ಕೆಲವು ವಿಚಾರಗಳು ಹೇಳಿದ್ದಾರೆ. ಇನ್ನೂ ಟ್ಯಾಕ್ಸ್ ವಿಚಾರದಲ್ಲಿ ಕೆಲವು ಬೇಡಿಕೆಗಳಿವೆ. ಈ 2 ಬೇಡಿಕೆಗಳು ಅಷ್ಟೇ ನಮ್ಮ ಸರ್ಕಾರದ್ದು. ಉಳಿದ ಎಲ್ಲಾ ಬೇಡಿಕೆಗಳು ಹಳೆಯ ಬಿಜೆಪಿ ಸರ್ಕಾರದ ಬೇಡಿಕೆಗಳು ಎಂದು ಹೇಳಿದರು. ಇದನ್ನೂ ಓದಿ: ಬಿಜೆಪಿ-ಜೆಡಿಎಸ್ ಮೈತ್ರಿ ಸುದೀರ್ಘ ಚೆರ್ಚೆ ಆಗಬೇಕು: ಬೊಮ್ಮಾಯಿ

    ಅವರು ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ, ಹೋರಾಟ ಮಾಡೋದು ಅವರ ಹಕ್ಕು, ಮಾಡಲಿ. ಸರ್ಕಾರ ಈ ಬಗ್ಗೆ ಸೂಕ್ತವಾದ ನಿರ್ಧಾರ ತೆಗೆದುಕೊಳ್ಳಲಿದೆ. ನಾನು ಅವರಿಗೆ ಮುಷ್ಕರ ಮಾಡುವುದು ಬೇಡ ಎನ್ನಲ್ಲ ಎಂದಿದ್ದಾರೆ. ಇದನ್ನೂ ಓದಿ: ಬೆಂಗಳೂರು ಬಂದ್‌ಗೆ ಉತ್ತರ ಕನ್ನಡ ಜಿಲ್ಲೆಯ ಚಾಲಕರ ಸಂಘ ಬೆಂಬಲ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೆ.11ಕ್ಕೆ ಬೆಂಗಳೂರು ಬಂದ್ – ಸರ್ಕಾರದ ವಿರುದ್ಧ ಸಿಡಿದ ಖಾಸಗಿ ಸಾರಿಗೆ ಒಕ್ಕೂಟ

    ಸೆ.11ಕ್ಕೆ ಬೆಂಗಳೂರು ಬಂದ್ – ಸರ್ಕಾರದ ವಿರುದ್ಧ ಸಿಡಿದ ಖಾಸಗಿ ಸಾರಿಗೆ ಒಕ್ಕೂಟ

    ಬೆಂಗಳೂರು: ಶಕ್ತಿ ಯೋಜನೆ (Shakti Scheme) ಜಾರಿಯಾಗಿರುವ ಬಳಿಕ ಖಾಸಗಿ ಸಾರಿಗೆ (Private Transport)ಉದ್ಯಮಕ್ಕೆ ಭಾರೀ ಹೊಡೆತ ಬಿದ್ದಿದೆ. ಈ ಸಮಸ್ಯೆಗೆ ಪರಿಹಾರ ನೀಡುವಂತೆ ಖಾಸಗಿ ಸಾರಿಗೆ ಒಕ್ಕೂಟ ಸರ್ಕಾರಕ್ಕೆ 10 ದಿನಗಳ ಗಡುವು ನೀಡಿತ್ತು. ಆದರೂ ಕೂಡಾ ಸಮಸ್ಯೆಗೆ ಸರ್ಕಾರ ಯಾವುದೇ ಸ್ಪಂದನೆ ನೀಡದೇ ಹೋಗಿರುವ ಹಿನ್ನೆಲೆ ಸೆಪ್ಟೆಂಬರ್ 11 ರಂದು ಬೆಂಗಳೂರು ಬಂದ್‌ಗೆ (Bengaluru Bandh) ಖಾಸಗಿ ಸಾರಿಗೆ ಒಕ್ಕೂಟ ಕರೆ ನೀಡಿದೆ.

    32 ಸಂಘಟನೆಗಳಿರುವ ರಾಜ್ಯದ ಖಾಸಗಿ ಸಾರಿಗೆ ಒಕ್ಕೂಟ ಸುದ್ದಿಗೋಷ್ಠಿ ನಡೆಸಿ ಬೆಂಗಳೂರು ಬಂದ್ ನಡೆಸುವುದಾಗಿ ತಿಳಿಸಿದೆ. ಸೆಪ್ಟೆಂಬರ್ 11 ಸೋಮವಾರ ಆಟೋ, ಟ್ಯಾಕ್ಸಿ, ಏರ್ ಪೋರ್ಟ್ ಟ್ಯಾಕ್ಸಿ, ಮ್ಯಾಕ್ಸಿ ಕ್ಯಾಬ್, ಕಾರ್ಪೋರೇಟ್ ವಾಹನಗಳು, ಸ್ಕೂಲ್ ಬಸ್ ಚಾಲಕರು, ಫ್ಯಾಕ್ಟರಿ ವಾಹನ, ಸ್ಟೇಜ್ ಗ್ಯಾರೇಜ್ ಬಸ್‌ಗಳು ಇರುವುದಿಲ್ಲ. ಭಾನುವಾರ ಮಧ್ಯರಾತ್ರಿಯಿಂದಲೇ ಬೆಂಗಳೂರು ಬಂದ್ ಇರಲಿದೆ ಎಂದು ತಿಳಿಸಿದೆ. ಇದನ್ನೂ ಓದಿ: One Nation, One Election – ಮಾಜಿ ರಾಷ್ಟ್ರಪತಿ ಕೋವಿಂದ್‌ ನೇತೃತ್ವದಲ್ಲಿ ಸಮಿತಿ ರಚನೆ

    ಖಾಸಗಿ ಸಾರಿಗೆ ಬೇಡಿಕೆಗಳೇನು?
    * ಚಾಲಕರಿಗೆ 10 ಸಾವಿರ ಮಾಸಿಕ ಪರಿಹಾರ ಧನ
    * ಬೈಕ್, ರ್ಯಾಪಿಡ್ ಟ್ಯಾಕ್ಸಿಗಳ ಸಂಪೂರ್ಣ ನಿಷೇಧ
    * ಅಸಂಘಟಿತ ವಾಣಿಜ್ಯ ಚಾಲಕರ ಮತ್ತು ಸಾರಿಗೆ ಅಭಿವೃದ್ಧಿ ನಿಗಮ ಸ್ಥಾಪನೆ
    * ಸೌಲಭ್ಯ ಯೋಜನೆಯಡಿ ಆಟೋ, ಟ್ಯಾಕ್ಸಿ ಚಾಲಕರಿಗೆ ಕಡಿಮೆ ಬಡ್ಡಿ ಸಾಲ
    * ವೈಟ್ ಬೋರ್ಡ್ ವಾಹನದಲ್ಲಿ ಬಾಡಿಗೆ ಮಾಡುವುದಕ್ಕೆ ಬ್ರೇಕ್ ಹಾಕಬೇಕು
    * ಚಾಲಕರ ಮಕ್ಕಳಿಗೆ ವಿದ್ಯಾರ್ಥಿ ವೇತನ
    * ಓಲಾ, ಊಬರ್ ಆ್ಯಪ್ ಆಧಾರಿತ ಸೇವೆಗಳ ನಿರ್ಬಂಧ
    * ಖಾಸಗಿ ಬಸ್‌ಗಳಿಗೂ ಶಕ್ತಿ ಯೋಜನೆ ಅಡಿ ಸೇವೆಗೆ ಅವಕಾಶ
    * ಖಾಸಗಿ ವಾಹನಗಳನ್ನು ಕಿ.ಮೀ ಆಧಾರದಲ್ಲಿ ಸರ್ಕಾರ ಬಾಡಿಗೆಗೆ ಪಡೆಯುವುದು
    * ನಿಯಮ ಬಾಹಿರವಾಗಿ ವಾಹನ ವಶಕ್ಕೆ ಪಡೆಯುವ ಫೈನಾನ್ಸ್ ಕಂಪನಿಗಳ ವಿರುದ್ಧ ಕ್ರಮ ಇದನ್ನೂ ಓದಿ: ಜಿಡಿಪಿ ಬೆಳವಣಿಗೆಯಲ್ಲಿ ಮೊದಲ ಸ್ಥಾನದಲ್ಲೇ ಮುಂದುವರಿದ ಭಾರತ – ಯಾವ ದೇಶದ್ದು ಎಷ್ಟು?

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]