Tag: Priya Hegde

  • ಉಸಿರು ಸಿನಿಮಾಗಾಗಿ ಒಂದಾದ ತಿಲಕ್ & ಪ್ರಿಯಾ

    ಉಸಿರು ಸಿನಿಮಾಗಾಗಿ ಒಂದಾದ ತಿಲಕ್ & ಪ್ರಿಯಾ

    ತ್ತೀಚಿನ ದಿನಗಳಲ್ಲಿ ಸಾಕಷ್ಟು ಜನ ನಿರ್ಮಾಪಕರು, ತಂತ್ರಜ್ಞರು ಸಿನಿಮಾಸಕ್ತಿಯಿಂದ ಕನ್ನಡ ಚಿತ್ರರಂಗಕ್ಕೆ ಬರುತ್ತಿದ್ದಾರೆ. ಅಲ್ಲದೇ ಚಿತ್ರ ನಿರ್ಮಾಣದಲ್ಲಿ ತೊಡಗಿಕೊಂಡಿದ್ದಾರೆ. ಅಂಥವರಲ್ಲಿ ಆರ್‌ಎಸ್‌ಪಿ ಪ್ರೊಡಕ್ಷನ್ಸ್ನ ಲಕ್ಷ್ಮಿ ಹರೀಶ್ ಕೂಡ ಒಬ್ಬರು. ಆರ್‌ಎಸ್‌ಪಿ ಗ್ರೂಪ್ ಆಫ್ ಕಂಪನೀಸ್ ನಡೆಸುತ್ತಿರುವ ಅವರು ತಮ್ಮ ಆರ್‌ಎಸ್‌ಪಿ ಪ್ರೊಡಕ್ಷನ್ ಮೂಲಕ ಸಸ್ಪೆನ್ಸ್, ಥ್ರಿಲ್ಲರ್ ಕಥಾಹಂದರ ಒಳಗೊಂಡ ಉಸಿರು (Usiru) ಎಂಬ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.

    ಈಗಾಗಲೇ ಚಿತ್ರದ ಚಿತ್ರೀಕರಣ ಮುಗಿದು, ಪೋಸ್ಟ್ ಪ್ರೊಡಕ್ಷನ್ ಕೊನೇ ಹಂತದಲ್ಲಿದೆ. ನಟ ತಿಲಕ್ (Tilak), ಪ್ರಿಯಾ ಹೆಗ್ಡೆ ಪ್ರಮುಖ ಪಾತ್ರಗಳಲ್ಲಿ ನಟಿಸಿರುವ ಈ ಚಿತ್ರಕ್ಕೆ ಪ್ರಭಾಕರ್ ಕಥೆ, ಚಿತ್ರಕಥೆ ಬರೆದು ಆಕ್ಷನ್ ಕಟ್ ಹೇಳಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್‌ನ್ನು ನಟ ಶ್ರೀನಗರ ಕಿಟ್ಟಿ ಹಾಗೂ ರವಿ ಆರ್.ಗರಣಿ ಬಿಡುಗಡೆಗೊಳಿಸಿ ಚಿತ್ರತಂಡಕ್ಕೆ ಶುಭ ಹಾರೈಸಿದರು. ಇದನ್ನೂ ಓದಿ: ‘ಪೆನ್‌ ಡ್ರೈವ್‌’ಗಾಗಿ ಕಿಶನ್ ಜೊತೆ ಜಬರ್ದಸ್ತ್ ಕುಣಿದ ತನಿಷಾ ಕುಪ್ಪಂಡ

    ಪೊಲೀಸ್ ಅಧಿಕಾರಿಯೊಬ್ಬ ಆತಂಕಕಾರಿ ವ್ಯಕ್ತಿಯಿಂದ ತನ್ನ ಹೆಂಡತಿಯನ್ನು ಹೇಗೆ ಕಾಪಾಡಿಕೊಳ್ಳುತ್ತಾನೆ ಎಂಬುದನ್ನು ಉಸಿರು ಚಿತ್ರದ ಮೂಲಕ ನಿರ್ದೇಶಕರು ಹೇಳಹೊರಟಿದ್ದಾರೆ. ಬೆಂಗಳೂರು, ಮಡಿಕೇರಿ, ಚಿಕ್ಕಮಗಳೂರು, ಮೂಡಿಗೆರೆ ಸುತ್ತಮುತ್ತ ಚಿತ್ರದ ಶೂಟಿಂಗ್ ನಡೆಸಲಾಗಿದೆ. ಇದನ್ನೂ ಓದಿ: ಟಾಕ್ಸಿಕ್ ನಟಿಗಾಗಿ ಬೆಂಗಳೂರಿನಿಂದ ಮುಂಬೈಗೆ ಲೊಕೇಶನ್ ಶಿಫ್ಟ್ !

    ಈ ಸಂದರ್ಭದಲ್ಲಿ ನಿರ್ಮಾಪಕಿ ಲಕ್ಷ್ಮಿ ಹರೀಶ್ ಮಾತನಾಡಿ, ಕೇಳಿದ್ದು ಸುಳ್ಳಾಗಬಹುದು, ನೋಡಿದ್ದು ಸುಳ್ಳಾಗಬಹುದು, ನಿಧಾನಿಸಿ ಯೋಚಿಸಿದಾಗ ನಿಜವು ತಿಳಿವುದು ಎಂಬ ಅಂಶವನ್ನಿಟ್ಟುಕೊಂಡು ಈ ಚಿತ್ರ ಮಾಡಿದ್ದೇವೆ. ಪ್ರಭಾಕರ್ ಅವರು ಈ ಕಥೆಯನ್ನು ನಮಗೆ ಹೇಳಿದಾಗ ಆ ಸ್ಟೋರಿಲೈನ್ ಇಷ್ಟವಾಗಿ ಸಿನಿಮಾ ಪ್ರಾರಂಭಿಸಿದೆವು. ಚಿತ್ರವೀಗ ಕೊನೇ ಹಂತದ ಡಿಐ ಕೆಲಸದಲ್ಲಿದೆ ಎಂದರು. ಇದನ್ನೂ ಓದಿ: ಏನಿಲ್ಲ ಏನಿಲ್ಲ ಅನ್ನುತ್ತಲೇ ಒಂದೇ ಕಾರ್‌ನಲ್ಲಿ ಹೊರಟ ರಶ್ಮಿಕಾ, ದೇವರಕೊಂಡ

    ನಂತರ ನಿರ್ದೇಶಕ ಪ್ರಭಾಕರ್ ಮಾತನಾಡಿ, ನಿರ್ದೇಶನ ನನ್ನ 12 ವರ್ಷಗಳ ಕನಸು. ಒಂದೆರಡು ತಮಿಳು ಸಿನಿಮಾಗಳಿಗೆ ಸಹನಿರ್ದೇಶಕನಾಗಿ ಕೆಲಸ ಮಾಡಿದ್ದು, ಇದು ನನ್ನ ನಿರ್ದೇಶನದ ಪ್ರಥಮ ಚಿತ್ರ. ಸಸ್ಪೆನ್ಸ್, ಥ್ರಿಲ್ಲರ್ ಕಥಾನಕ ಇರೋ ಚಿತ್ರಕ್ಕೆ ಉಸಿರು ಎಂಬ ಟೈಟಲ್ ಯಾಕಿಟ್ಟಿದ್ದೇವೆ ಅಂತ ಸಿನಿಮಾ ನೋಡಿದಾಗ ತಿಳಿಯುತ್ತೆ. ಒಂದೊಳ್ಳೆ ಟೀಮ್ ಕಟ್ಟಿಕೊಂಡು ದೊಡ್ಡ ಮಟ್ಟದಲ್ಲಿ ಈ ಸಿನಿಮಾ ಮಾಡಿದ್ದೇವೆ. ಚಿತ್ರದಲ್ಲಿ ಎಲ್ಲಾ ರೀತಿಯ ಎಮೋಶನ್ಸ್ ಇದ್ದು, ಚಿತ್ರದ ಪ್ರತಿ ಪಾತ್ರಕ್ಕೂ ಅದರದೇ ಆದ ಐಡೆಂಟಿಟಿ ಇರುತ್ತದೆ. ಯಾವ ಪಾತ್ರವೂ ಹೀಗೆ ಬಂದು ಹೋಗುವುದಲ್ಲ. ಗಂಡನ ಪ್ರೀತಿ, ಸ್ನೇಹಸಂಬಂಧ ಹೀಗೆ ಎಲ್ಲಾ ರೀತಿಯ ಕಂಟೆಂಟ್ ಚಿತ್ರದಲ್ಲಿದ್ದು, ಚಿತ್ರದ ಟ್ಯಾಗ್ ಲೈನ್ 07.08.09. ತಿಲಕ್ ಒಬ್ಬ ಪೊಲೀಸ್ ಅಧಿಕಾರಿಯಾಗಿದ್ದು, ಅವರ ಪತ್ನಿಯ ಪಾತ್ರದಲ್ಲಿ ಪ್ರಿಯಾ ಹೆಗ್ಡೆ ನಟಿಸಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಅಡ್ವಾನ್ಸ್‌ ಹಣ ವಾಪಸ್‌ ಕೊಡದ ಆರೋಪ – ರಚಿತಾ ರಾಮ್‌ ವಿರುದ್ಧ ಮತ್ತೊಂದು ದೂರು

    ಚಿತ್ರದ ನಾಯಕ ತಿಲಕ್ ಶೇಖರ್ ಪ್ರತಿಕ್ರಿಯಿಸಿ, ಚಿತ್ರದಲ್ಲಿ ನಾನೊಬ್ಬ ಇನ್ವೆಸ್ಟಿಗೇಶನ್ ಆಫೀಸರ್. ಈ ಥರದ ಕಾನ್ಸೆಪ್ಟ್ ಎಲ್ಲೂ ಕೇಳಿರಲಿಲ್ಲ. 07.08.09 ಎನ್ನುವ ಕೋಡ್ ವರ್ಡ್ ರೀತಿ ಚಿತ್ರದಲ್ಲಿ ತುಂಬಾ ಇಂಟರೆಸ್ಟಿಂಗ್ ಎಲಿಮೆಂಟ್‌ಗಳಿವೆ ಎಂದರು.

    ನಾಯಕಿ ಪ್ರಿಯಾ ಹೆಗ್ಡೆ ಮಾತನಾಡಿ, ಚಿತ್ರದಲ್ಲಿ ನನ್ನ ಪಾತ್ರಕ್ಕೆ ಹಲವಾರು ಶೇಡ್ಸ್ ಇದೆ. ಅದರಲ್ಲಿ ಪತ್ನಿಯ ಪಾತ್ರವೂ ಒಂದು. ನನ್ನ ಪಾತ್ರದಿಂದ ಚಿತ್ರಕಥೆಗೆ ಮೇಜರ್ ಟ್ವಿಸ್ಟ್ ಸಿಗುತ್ತದೆ. ಮಹಿಳಾ ನಿರ್ಮಾಪಕಿಯ ಜೊತೆ ಕೆಲಸ ಮಾಡುತ್ತಿರುವುದು ಖುಷಿಯ ವಿಚಾರ. ಈ ಹಿಂದೆ ನಾನು ಮಾಡಿದ್ದ ತೆಲುಗು ಸಿನಿಮಾ ನೋಡಿದ ನಿರ್ಮಾಪಕರು ನನಗೆ ಕಾಲ್ ಮಾಡಿದ್ದರು. ಸುಮಾರು ಅಡೆತಡೆಗಳನ್ನು ಎದುರಿಸಿ ಸಿನಿಮಾ ಮುಗಿಸಿದ್ದೇವೆ ಎಂದು ಹೇಳಿದರು. ಇದನ್ನೂ ಓದಿ: ʼYou Are The Bestʼ – ಜಿ-7 ಶೃಂಗಸಭೆಯಲ್ಲಿ ಮೆಲೋಡಿ ಮೊಮೆಂಟ್

    ಬಳಿಕ ಸಂಗೀತ ನಿರ್ದೇಶಕ ಆರ್.ಎಸ್ ಗಣೇಶ್ ನಾರಾಯಣನ್ ಪ್ರತಿಕ್ರಿಯಿಸಿ, ಹಾರ್ಟ್ಬೀಟ್ ಚಿತ್ರದಿಂದ ಆರಂಭವಾದ ನನ್ನ ಸಿನಿಜರ್ನಿಯ 25ನೇ ವರ್ಷದಲ್ಲಿ ಉಸಿರು ಚಿತ್ರಕ್ಕೆ ಮ್ಯೂಸಿಕ್ ಮಾಡಿದ್ದೇನೆ. ಚಿತ್ರದಲ್ಲಿ ಬೇರೆ ಬೇರೆ ಜಾನರ್‌ನಲ್ಲಿ 5 ಹಾಡುಗಳೂ ತುಂಬಾ ಚೆನ್ನಾಗಿ ಮೂಡಿಬಂದಿವೆ. ಅಭಿ ತುಂಬಾ ಚೆನ್ನಾಗಿ ಲಿರಿಕ್ ಬರೆದಿದ್ದಾರೆ. ಎಲ್ಲ ಪಾತ್ರಗಳಿಗೂ ಒಂದೊಂದು ಥೀಮ್ ಮಾಡಿದ್ದೇವೆ. ಫಾಸ್ಟ್ ಸ್ಕ್ರೀನ್ ಪ್ಲೇ ಚಿತ್ರದಲ್ಲಿದ್ದು, ಎಲ್ಲೂ ಬೋರ್ ಹೊಡೆಸುವುದಿಲ್ಲ ಎಂದರು. ಇದನ್ನೂ ಓದಿ: ಡಿಕೆ ಡಿಕೆ ಅಂತ ಕೂಗೋದಲ್ಲ, ಮುಂದೆಯೂ ನನಗೆ ಅವಕಾಶ ಕೊಡಿ: ಮತ್ತೆ ಸಿಎಂ ಆಸೆ ಬಿಚ್ಚಿಟ್ಟ ಡಿಕೆಶಿ

    ಇನ್ನು ಮತ್ತೊಬ್ಬ ನಟ ಸಂತೋಷ್, ನಟಿ ಅಪೂರ್ವ, ಖಳನಟ ಅರುಣ್, ಸಾಹಿತಿ, ಡೈಲಾಗ್ ರೈಟರ್ ಬೈರವರಾಮ ಇವರೆಲ್ಲರೂ ಚಿತ್ರದ ಕುರಿತು ಮಾತನಾಡಿದರು.

  • ಗೋಪಿನಾಥ ಬೆಟ್ಟದಲ್ಲಿ ನೆರವೇರಿತು ಧರ್ಮ ಕೀರ್ತಿರಾಜ್ ಅಭಿನಯದ ನೂತನ ಚಿತ್ರದ ಮುಹೂರ್ತ

    ಗೋಪಿನಾಥ ಬೆಟ್ಟದಲ್ಲಿ ನೆರವೇರಿತು ಧರ್ಮ ಕೀರ್ತಿರಾಜ್ ಅಭಿನಯದ ನೂತನ ಚಿತ್ರದ ಮುಹೂರ್ತ

    ಲಿತನ್ಯ ಗೋಲ್ಡ್ ಲೀಫ್ ಮೀಡಿಯಾ ವೆಂಚರ್ಸ್ ಪ್ರೈ ಲಿ ಹಾಗೂ ಸಾರ್ಥಕ್ ಕ್ರಿಯೇಟರ್ಸ್ ಲಾಂಛನದಲ್ಲಿ ಜಿ.ಹೆಚ್.ಜನಾರ್ದನ್ ಹಾಗೂ ಸಿ.ಎಲ್ ಹರ್ಷವರ್ಧನ್ ನಿರ್ಮಿಸುತ್ತಿರುವ, ರಮೇಶ್ ರಾಜ್ ಅವರ ನಿರ್ದೇಶನದಲ್ಲಿ ಧರ್ಮ ಕೀರ್ತಿರಾಜ್ (Dharma Keerthiraj) ನಾಯಕನಾಗಿ ಕಾಣಿಸಿಕೊಳ್ತಿದ್ದಾರೆ. ಈ ಸಿನಿಮಾಗೆ ಅದ್ಧೂರಿಯಾಗಿ ಚಾಲನೆ ನೀಡಲಾಗಿದೆ.

    ಧರ್ಮ ಕೀರ್ತಿರಾಜ್‌ (Dharma Keerthiraj) ನಟನೆಯ ಪ್ರೊಡಕ್ಷನ್ ನಂ 1 ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಚಿಕ್ಕಬಳ್ಳಾಪುರದ ಗೋಪಿನಾಥ ಬೆಟ್ಟದಲ್ಲಿರುವ ಶ್ರೀಲಕ್ಷ್ಮೀನರಸಿಂಹಸ್ವಾಮಿ ದೇವಸ್ಥಾನದಲ್ಲಿ ನೆರವೇರಿತು. ಮಾಜಿ ಶಾಸಕರಾದ ಕೆ.ಪಿ.ಬಚ್ಚೇಗೌಡ ಅವರು ಆರಂಭ ಫಲಕ ತೋರಿದರು. ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಕೆ.ಎಂ.ಮುನೇಗೌಡ ಕ್ಯಾಮೆರಾ ಚಾಲನೆ ಮಾಡಿದರು. ಇದನ್ನೂ ಓದಿ:ಬಾಲಿವುಡ್‌ನಲ್ಲಿ ಗೋಲ್ಡನ್ ಚಾನ್ಸ್ ಗಿಟ್ಟಿಸಿಕೊಂಡ ‘ಸೀತಾರಾಮಂ’ ಬೆಡಗಿ

    ಆ್ಯಕ್ಷನ್ ಡ್ರಾಮ ಜಾನರ್‌ನ ಈ ಚಿತ್ರಕ್ಕೆ ನಿರ್ದೇಶಕ ರಮೇಶ್ ರಾಜ್ ಅವರೆ ಕಥೆ, ಚಿತ್ರಕಥೆ ಬರೆದಿದ್ದಾರೆ. ಗ್ಯಾಂಗ್ ಲೀಡರ್, ತವರಿನ ಋಣ ಚಿತ್ರಗಳನ್ನು ನಿರ್ದೇಶಿಸಿರುವ ರಮೇಶ್ ರಾಜ್ ಅವರಿಗೆ ಇದು ಮೂರನೇ ಚಿತ್ರ. ಈಶ್ವರಿ ಸುರೇಶ್ ಛಾಯಾಗ್ರಹಣ, ಶಶಿ ಸಂಕಲನ, ಬಿ.ವಿ.ರೆಡ್ಡಿ ಸಹ ನಿರ್ದೇಶನ ಹಾಗೂ ಮಂಜುನಾಥ್ ಅವರ ನಿರ್ಮಾಣ ನಿರ್ವಹಣೆ ಈ ಚಿತ್ರಕ್ಕಿದೆ. ವಂಟೂರು ಶ್ರೀನಿವಾಸ್ ನಿರ್ದೇಶನ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ.

    ಧರ್ಮ ಕೀರ್ತಿರಾಜ್ ಅವರಿಗೆ ಪ್ರಿಯಾ ಹೆಗ್ಡೆ (Priya Hegde) ನಾಯಕಿಯಾಗಿ ನಟಿಸುತ್ತಿದ್ದಾರೆ. ಉಳಿದ ತಾರಾಬಳಗದ ಆಯ್ಕೆ ನಡೆಯುತ್ತಿದೆ. ಮುಂದಿನ ವಾರದಿಂದ ಚಿತ್ರೀಕರಣ ಆರಂಭವಾಗುತ್ತಿದೆ. ಚಿಕ್ಕಬಳ್ಳಾಪುರ, ಬೆಂಗಳೂರು, ಮಡಿಕೇರಿ ಹಾಗೂ ಚಿಕ್ಕಮಗಳೂರಿನಲ್ಲಿ ಚಿತ್ರೀಕರಣ ನಡೆಯಲಿದೆ.

  • ತಿಲಕ್ ನಟನೆಯ ಹೊಸ ಚಿತ್ರಕ್ಕೆ ‘ಉಸಿರು’ ಟೈಟಲ್

    ತಿಲಕ್ ನಟನೆಯ ಹೊಸ ಚಿತ್ರಕ್ಕೆ ‘ಉಸಿರು’ ಟೈಟಲ್

    ಆರ್‌.ಎಸ್‌.ಪಿ. ಪ್ರೊಡಕ್ಷನ್ಸ್  ಮೂಲಕ ಲಕ್ಷ್ಮಿ ಹರೀಶ್ ಅವರು ನಿರ್ಮಿಸುತ್ತಿರುವ ಉಸಿರು (Usiru) ಚಿತ್ರದ ಶೀರ್ಷಿಕೆ ಅನಾವರಣ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು. ನಟ ತಿಲಕ್, ಪ್ರಿಯಾ ಹೆಗ್ಡೆ ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಳ್ಳುತ್ತಿರುವ ಈ ಚಿತ್ರಕ್ಕೆ ಪ್ರಭಾಕರ್ ಆಕ್ಷನ್ ಕಟ್ ಹೇಳುತ್ತಿದ್ದಾರೆ. ಆರ್‌ಎಸ್‌ಪಿ ಗ್ರೂಪ್ ಆಫ್ ಕಂಪನೀಸ್ ನಡೆಸುತ್ತಿರುವ, ಲಕ್ಷ್ಮಿ ಹರೀಶ್ ಅವರು ನೂತನ ಪ್ರೊಡಕ್ಷನ್ ಹೌಸ್ ಆರಂಭಿಸಿ ಆ ಮೂಲಕ ಉಸಿರು ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ಸದ್ಯದಲ್ಲೇ  ಚಿತ್ರೀಕರಣ ಆರಂಭಿಸುತ್ತಿರುವ  ಈ ಚಿತ್ರದ ಪೋಸ್ಟರ್ ಅನಾವರಣ ಹಾಗೂ ಪತ್ರಿಕಾಗೋಷ್ಠಿ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು, ಒಬ್ಬ ಬೇಜವಾಬ್ದಾರಿ ಪೊಲೀಸ್ ಅಧಿಕಾರಿ, ತನ್ನ ಹೆಂಡತಿಗೆ ಅನಾಮಿಕ ವ್ಯಕ್ತಿಯಿಂದ ಪ್ರಾಣಕ್ಕೆ ಆಪತ್ತು ಬಂದಾಗ ಆತ ಪತ್ನಿಯನ್ನು ಹೇಗೆ ಕಾಪಾಡಿಕೊಳ್ಳುತ್ತಾನೆ, ತನ್ನ ತಾಯಿಯನ್ನು ಕೊಂದವರ ಮೇಲೆ ಹೇಗೆ ಪ್ರತೀಕಾರ ತೀರಿಸಿಕೊಳ್ಳುತ್ತಾನೆ ಎಂಬುದನ್ನು ಉಸಿರು ಚಿತ್ರದ ಮೂಲಕ ನಿರ್ದೇಶಕ ಪ್ರಭಾಕರ್ (Prabhakar) ಹೇಳಹೊರಟಿದ್ದಾರೆ, ಸುಮಾರು 6 ತಿಂಗಳವರೆಗೆ ವರ್ಕ್ ಷಾಪ್ ನಡೆಸಿ ತಯಾರಾಗಿರುವ ಚಿತ್ರತಂಡ ಇದೇ ತಿಂಗಳ 17ರಿಂದ ಮಡಿಕೇರಿಯಲ್ಲಿ  ಚಿತ್ರದ ಮುಹೂರ್ತ ನಡೆಸಿ ಶೂಟಿಂಗ್ ಆರಂಭಿಸಲಿದೆ.

    ಈ ಸಂದರ್ಭದಲ್ಲಿ ನಿರ್ಮಾಪಕಿ ಲಕ್ಷ್ಮೀ ಹರೀಶ್ ಮಾತನಾಡುತ್ತ ನಮ್ಮ ಸಂಸ್ಥೆಯ ಮೂಲಕ ನಿರ್ಮಾಣವಾಗುತ್ತಿರುವ ಪ್ರಥಮ ಚಿತ್ರವಿದು. ನಿರ್ದೇಶಕ ಪ್ರಭಾಕರ್ ನಮಗೆ ಬಹಳ ದಿನಗಳ ಪರಿಚಯ. ಅವರು ಈ ಥರ ಒಂದು ಕಥೆಯಿದೆ ಎಂದು ಹೇಳಿದ ಸ್ಟೋರಿ ಲೈನ್ ನಮಗೆ ಇಷ್ಟವಾಯ್ತು, ಹಾಗಾಗಿ ಚಿತ್ರ ನಿರ್ಮಾಣಕ್ಕೆ ಮುಂದಾದೆವು. ತಿಲಕ್ ಚಿತ್ರದ ನಾಯಕನಾಗಿ ನಟಿಸುತ್ತಿದ್ದು,  ಬೇರೆ ಶೂಟಿಂಗ್‌ನಲ್ಲಿರುವ ಕಾರಣ ಇವತ್ತು ಬಂದಿಲ್ಲ ಎಂದರು.

    ನಂತರ ನಿರ್ದೇಶಕ ಪ್ರಭಾಕರ್ ಮಾತನಾಡಿ  ನನ್ನ 12 ವರ್ಷಗಳ ಕನಸೀಗ ನನಸಾಗುತ್ತಿದೆ. ಈಗಾಗಲೇ ಒಂದೆರಡು ತಮಿಳು ಸಿನಿಮಾಗಳಿಗೆ ಸಹನಿರ್ದೇಶಕನಾಗಿ ಕೆಲಸ ಮಾಡಿದ್ದು, ಈ ಚಿತ್ರದ ಮೂಲಕ ಸ್ವತಂತ್ರ ನಿರ್ದೇಶಕನಾಗುತ್ತಿದ್ದೇನೆ. ಇದೊಂದು ಸೈಕೋ ಥ್ರಿಲ್ಲರ್ ಕಥಾಹಂದರ ಇರುವ  ಚಿತ್ರವಾಗಿದ್ದು, “ಉಸಿರು” ಟೈಟಲ್ ನಮ್ಮ ಕಥೆಗೆ ಸೂಕ್ತವಾಗುತ್ತೆ ಅಂತ ಇಡಲಾಗಿದೆ. ಒಂದೊಳ್ಳೇ ಟೀಮ್ ಕಟ್ಟಿಕೊಂಡು ಈ ಸಿನಿಮಾ ಮಾಡುತ್ತಿದ್ದೇವೆ ತಿಲಕ್ ಒಬ್ಬ ಪೊಲೀಸ್ ಅಧಿಕಾರಿಯ ಪಾತ್ರದಲ್ಲಿ ನಟಿಸುತ್ತಿದ್ದಾರೆ, ನಾಯಕಿಯಾಗಿ ಪ್ರಿಯಾ ಹೆಗ್ಡೆ ಉಳಿದಂತೆ  ರಘು ರಮಣಕೊಪ್ಪ, ರಂಗಾಯಣ ರಘು  ನಟಿಸುತ್ತಿದ್ದಾರೆ,  ಮುಖ್ಯವಾಗಿ ಒಂಬತ್ತು ಪಾತ್ರಗಳ ಮೇಲೆ ಚಿತ್ರದ ಕಥೆ ಸಾಗುತ್ತದೆ. ಮೊದಲ ಹಂತದಲ್ಲಿ  ಮಡಿಕೇರಿ ಸುತ್ತಮುತ್ತ  15 ದಿನಗಳ ಚಿತ್ರೀಕರಣ  ನಡೆಸಿ, ನಂತರ ಬೆಂಗಳೂರಲ್ಲಿ ಮುಂದುವೆಸುತ್ತೇವೆ ಎಂದು ಹೇಳಿದರು.

     

    ಸಂಗೀತ ನಿರ್ದೇಶಕ ಆರ್‌ಎಸ್‌ಜಿ ನಾರಾಯಣ ಮಾತನಾಡುತ್ತ  ನನ್ನ ಸಿನಿ ಜರ್ನಿಯ 25ನೇ ವರ್ಷವಿದು, ಕಥೆಯಲ್ಲಿರುವ ಸನ್ನಿವೇಶಗಳು ನನಗೆ ತುಂಬಾ ಇಷ್ಟವಾಯ್ತು. ಬೇರೆ ಬೇರೆ ಜಾನರ್‌ನ ನಾಲ್ಕು ಹಾಡುಗಳನ್ನು ಕಂಪೋಜ್ ಮಾಡಿದ್ದು, ತುಂಬಾ ಚೆನ್ನಾಗಿ ಮೂಡಿಬಂದಿವೆ, ಅಭಿ ಅರ್ಥಗರ್ಭಿತವಾದ  ಲಿರಿಕ್ ಬರೆದಿದ್ದಾರೆ ಎಂದರು. ಚಿತ್ರದ ನಾಯಕಿ ಪ್ರಿಯಾ ಹೆಗ್ಡೆ ಮಾತನಾಡಿ ಚಿತ್ರದ  ಕಾನ್ಸೆಪ್ಟ್, ಟೈಟಲ್  ಎರಡೂ ಚೆನ್ನಾಗಿದೆ,  ಸಿನಿಮಾದಲ್ಲಿ ನನ್ನ ಪಾತ್ರಕ್ಕೆ ಎರಡು ಶೇಡ್ಸ್ ಇದೆ. ಈಗಾಗಲೇ ಕನ್ನಡದ ಜಿಲ್ಕಾ, ಕುದ್ರು ಅಲ್ಲದೆ  ಒಂದು ತೆಲುಗು ಚಿತ್ರದಲ್ಲೂ ಸಹ ಅಭಿನಯಿಸಿದ್ದೇನೆ ಎಂದು ಹೇಳಿದರು. ಮತ್ತೊಬ್ಬ ನಟ ಸಂತೋಷ್ ಮಾತನಾಡಿ ನಾನು ರಂಗಭೂಮಿಯಿಂದ ಬಂದವನು, ಇದು ನನ್ನ ಮೊದಲ ಚಿತ್ರವಾಗಿದ್ದು, ಪಾತ್ರ ತುಂಬಾ ಎಮೋಷನಲ್ ಪಾತ್ರವಿದೆ ಎಂದರು. ನಟಿ ಅಪೂರ್ವ ಮಾತನಾಡಿ ನಾನು ಭರತನಾಟ್ಯ ಕಲಾವಿದೆ, ರಂಗಭೂಮಿ ನಟಿ, ನಿರ್ದೇಶಕಿ ಕೂಡ ಎಂದು ಹೇಳಿದರು, ಮತ್ತೊಬ್ಬನಟ ಅರುಣ್, ಸಾಹಿತಿ, ಡೈಲಾಗ್ ರೈಟರ್ ಭೈರವರಾಮ(ಅಭಿ), ಸಂಕಲನಕಾರ ಹರೀಶ್ ಕೊಮ್ಮೆ ಎಲ್ಲರೂ ಚಿತ್ರದ ಕುರಿತಂತೆ ಮಾತನಾಡಿದರು.