ಮುಂಬೈ ಬೆಡಗಿ, ಹಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಮನೆಯಲ್ಲಿ ಸಂಭ್ರಮ ಮನೆ ಮಾಡಿದೆ. ಸಹೋದರನ ಎಂಗೇಜ್‌ಮೆಂಟ್ ಸಂಭ್ರಮದಲ್ಲಿದ್ದಾರೆ ಪ್ರಿಯಾಂಕಾ. ಹೊಸ ಜೋಡಿಯ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ. ಇದನ್ನೂ ಓದಿ:ಹಿಟ್ ಚಿತ್ರ ರಿಜೆಕ್ಟ್ ಮಾಡಿ ಟ್ರೋಲ್‌ನಿಂದ ಬಚಾವ್ ಆದ ಶ್ರೀಲೀಲಾ
ವಿದೇಶದಲ್ಲಿ ಸೆಟಲ್ ಆಗಿರುವ ಪ್ರಿಯಾಂಕಾ ಚೋಪ್ರಾ ಕಳೆದ ಕೆಲದಿನಗಳ ಹಿಂದೆ ಮಗಳ ಜೊತೆ ಭಾರತಕ್ಕೆ ಎಂಟ್ರಿ ಕೊಟ್ಟಿದ್ದಾರೆ. ಬ್ಯಾಕ್ ಟು ಬ್ಯಾಕ್ ಕಾರ್ಯಕ್ರಮಗಳಿಗೆ ನಟಿ ಹಾಜರಿ ಹಾಕುತ್ತಿದ್ದಾರೆ. ಆಭರಣ ಮಳಿಗೆ ಚಾಲನೆ ಕಾರ್ಯಕ್ರಮ, ಅಂಬಾನಿ ಕುಟುಂಬದ ಪಾರ್ಟಿ, ಮನ್ನಾರಾ ಚೋಪ್ರಾ ಬರ್ತ್‌ಡೇ ಸೆಲೆಬ್ರೇಶನ್‌ಗಳಲ್ಲಿ ನಟಿ ಭಾಗಿಯಾಗುತ್ತಿದ್ದಾರೆ. ಇದನ್ನೂ ಓದಿ:10 ವರ್ಷಗಳ ನಂತರ ಮತ್ತೆ ಒಂದಾದ ‘ಒಕಾ ಲೈಲಾ ಕೋಸಂ’ ಜೋಡಿ
ಇದೀಗ ಸಹೋದರ ಸಿದ್ಧಾರ್ಥ್ ಚೋಪ್ರಾ (Siddarth Chopra) ಎಂಗೇಜ್‌ಮೆಂಟ್ (Engagement) ಮುಂಬೈನಲ್ಲಿ ಅದ್ಧೂರಿಯಾಗಿ ಜರುಗಿದೆ. ಬಹುಕಾಲದ ಗೆಳತಿ ನೀಲಂ ಜೊತೆ ಸಿದ್ಧಾರ್ಥ್ ನಿಶ್ಚಿತಾರ್ಥ ಮಾಡಿಕೊಂಡಿದ್ದಾರೆ. ಈ ವೇಳೆ, ಪ್ರಿಯಾಂಕಾ ರೆಡ್ ಕಲರ್ ಸೀರೆಯಲ್ಲಿ ಮಿಂಚಿದ್ದಾರೆ. ಪತಿ ನಿಕ್ ಮತ್ತು ಮಗಳ ಜೊತೆ ಮನೆ ಕಾರ್ಯಕ್ರಮದಲ್ಲಿ ನಟಿ ಕಂಗೊಳಿಸಿದ್ದಾರೆ.
ನಿರ್ಮಾಪಕನಾಗಿ ಗುರುತಿಸಿಕೊಂಡಿರುವ ಪ್ರಿಯಾಂಕಾ ಸಹೋದರನಿಗೆ ಬಾಲಿವುಡ್ ನಟ-ನಟಿಯರು ಶುಭಹಾರೈಸುತ್ತಿದ್ದಾರೆ.
ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಅಪರೂಪದ ಕೆಲಸಗಳನ್ನು ಮಾಡುತ್ತಲೇ ಇರುತ್ತಾರೆ. ಅದರಲ್ಲೂ ಪರಿಸರ, ಪ್ರಾಣಿ ಪಕ್ಷಿಗಳ ಬಗ್ಗೆ ಅಪಾರ ಕಾಳಜಿ ತಗೆದುಕೊಳ್ಳುತ್ತಾರೆ. ಇದರ ಭಾಗವಾಗಿಯೇ ಅವರು ಟೈಗರ್ (Tiger) ಹೆಸರಿನ ಡಾಕ್ಯುಮೆಂಟರಿಗೆ ಧ್ವನಿ (Voice) ನೀಡಿದ್ದಾರೆ. ಅತ್ಯಂತ ಅಭಿಮಾನದಿಂದ ಈ ಕೆಲಸವನ್ನು ಮಾಡಿದ್ದಾಗಿ ಹೇಳಿಕೊಂಡಿದ್ದಾರೆ.
ಬ್ರಿಟಿಷ್ ಬರಹಗಾರ, ನಿರ್ದೇಶಕ ಹಾಗೂ ನಿರ್ಮಾಪಕ ಮಾರ್ಕ್ ಲೈನ್ ಫೀಲ್ಸ್ ಅವರು ಈ ಚಿತ್ರವನ್ನು ತಯಾರಿಸಿದ್ದು, ಡಿಸ್ನಿ ಪ್ಲಸ್ ಹಾಟ್ ಸ್ಟಾರ್ ನಲ್ಲಿ ಈ ಡಾಕ್ಯುಮೆಂಟರಿ ಪ್ರಸಾರವಾಗಲಿದೆ. ಈ ಕುರಿತಂತೆ ಕೆಲವು ವಿವರಗಳನ್ನು ಪ್ರಿಯಾಂಕಾ ಚೋಪ್ರಾ ಅಭಿಮಾನಿಗಳ ಜೊತೆ ಹಂಚಿಕೊಂಡಿದ್ದಾರೆ.
ಟೈಗರ್ ಡಾಕ್ಯುಮೆಂಟರಿಗೆ ಧ್ವನಿ ನೀಡುತ್ತಾ, ನಾನು ಕಾಡನ್ನು ಎಂಜಾಯ್ ಮಾಡಿದೆ. ಸ್ಟೋರಿ ಅದ್ಭುತವಾಗಿದೆ. ಕಾಡಿನ ಹುಡುಕಾಟದ ಅನುಭವವನ್ನೂ ಕಣ್ತುಂಬಿಕೊಂಡೇ ಅನುಭವಿಸಬೇಕು ಎಂದೆಲ್ಲ ಪ್ರಿಯಾಂಕಾ ಬರೆದಿದ್ದಾರೆ.
ಮಗಳು ಮತ್ತು ಪತಿ ಜೊತೆ ಪ್ರಿಯಾಂಕಾ ಇಂಡಿಯಾದಲ್ಲಿ ಟೂರ್ ಮಾಡುತ್ತಿದ್ದಾರೆ. ಮತ್ತೆ ಭಾರತಕ್ಕೆ ಮರಳಿರುವ ಪ್ರಿಯಾಂಕಾ, ತವರು ಊರಿನಲ್ಲಿ ವೆಕೇಷನ್ ಎಂಜಾಯ್ ಮಾಡುತ್ತಿದ್ದಾರೆ. ‘ಬಿಗ್ ಬಾಸ್’ ಖ್ಯಾತಿಯ ಮನ್ನಾರಾ ಹುಟ್ಟುಹಬ್ಬದ ಪಾರ್ಟಿಯಲ್ಲಿ ಪ್ರಿಯಾಂಕಾ ಸಖತ್ ಹಾಟ್ ಆಗಿ ಕಾಣಿಸಿಕೊಂಡಿದ್ದಾರೆ. ಮನ್ನಾರಾ ಬರ್ತ್‌ಡೇ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
ಮನ್ನಾರಾ ಬರ್ತ್‌ಡೇ ಪಾರ್ಟಿಯಲ್ಲಿ ಬಿಗ್ ಬಾಸ್ ಸಹಸ್ಪರ್ಧಿಗಳು ಮತ್ತು ಕೆಲ ನಟ-ನಟಿಯರು ಭಾಗಿಯಾಗಿದ್ದು, ಅದರಲ್ಲಿ ಹೈಲೆಟ್ ಆಗಿದ್ದು ಪ್ರಿಯಾಂಕಾ ಆಗಮನ. ಬಿಳಿ ಬಣ್ಣದ ಶೋಲ್ಡರ್ ಲೆಸ್ ಡ್ರೆಸ್‌ನಲ್ಲಿ ಸಖತ್ ಹಾಟ್ & ಬ್ಯೂಟಿಫುಲ್ ಪ್ರಿಯಾಂಕಾ ಕಾಣಿಸಿಕೊಂಡಿದ್ದಾರೆ. ಬರ್ತ್‌ಡೇ ಗರ್ಲ್ ಮನ್ನಾರಾ ರೆಡ್ ಕಲರ್ ಡ್ರೆಸ್‌ನಲ್ಲಿ ಮಿಂಚಿದ್ದಾರೆ. ಇದನ್ನೂ ಓದಿ:ರಾಹುಲ್ ಮಂಗಳ ಗ್ರಹದಿಂದ ಬಂದಿದ್ದಾರೆ: ಕಂಗನಾ ಹೇಳಿಕೆಗೆ ‘ಕೈ’ ಕಾರ್ಯಕರ್ತರು ತಿರುಗೇಟು
ಅಂದಹಾಗೆ, ಇತ್ತೀಚೆಗೆ ಪ್ರಿಯಾಂಕಾ ಕುಟುಂಬ ಅಯೋಧ್ಯೆಗೆ ಭೇಟಿ ನೀಡಿದ್ದರು. ರಾಮಮಂದಿರಕ್ಕೆ ಭೇಟಿ ನೀಡಿ ದರ್ಶನ ಪಡೆದ ಫೋಟೋಗಳು ಅಭಿಮಾನಿಗಳ ಗಮನ ಸೆಳೆದಿತ್ತು. ವಿದೇಶದಲ್ಲಿ ಸೆಟಲ್ ಆಗಿದ್ರು ಕೂಡ ನಮ್ಮ ಸಂಸ್ಕೃತಿಯನ್ನು ನಟಿ ಮರೆತಿಲ್ಲ ಎಂದು ಫ್ಯಾನ್ಸ್ ಬೆನ್ನು ತಟ್ಟಿದ್ದರು.
ಹಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಅವರು ಕುಟುಂಬ ಸಮೇತ ಅಯೋಧ್ಯೆಗೆ (Ayodhya) ಭೇಟಿ ನೀಡಿದ್ದಾರೆ. ಪತಿ ನಿಕ್ ಜೋನಸ್ ಮತ್ತು ಮಗಳ ಜೊತೆ ರಾಮಮಂದಿರಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಪ್ರಿಯಾಂಕಾ ಚೋಪ್ರಾ ಅಯೋಧ್ಯೆಗೆ ಭೇಟಿ ನೀಡಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿವೆ. ಇದನ್ನೂ ಓದಿ:ಮಾಸ್ಕ್ ಮಹಿಮೆ : ಮಾಸ್ಕ್ ಇಲ್ಲದೇ ಮನೆಯಿಂದಾಚೆ ಬರಲ್ಲ ಡಿಜೆ ಅಲೆನ್ ವಾಕರ್
ಈಗ ಪತಿ ನಿಕ್ ಮತ್ತು ಪುತ್ರಿ ಜೊತೆ ಅಯೋಧ್ಯೆಗೆ (Ayodhya) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ರಾಮಮಂದಿರದಲ್ಲಿ ಕೆಲ ಸಮಯ ಕಳೆದಿದ್ದಾರೆ. ಭಾರತಕ್ಕೆ ಬಂದು ಬಿಡುವು ಮಾಡಿಕೊಂಡು ಅಯೋಧ್ಯೆಗೆ ಪ್ರಿಯಾಂಕಾ ಭೇಟಿ ಕೊಟ್ಟಿರೋದು ನೋಡಿ ಫ್ಯಾನ್ಸ್ ಮೆಚ್ಚುಗೆ ಸೂಚಿಸಿದ್ದಾರೆ.
ಕಳೆದ ವರ್ಷ ಪರಿಣಿತಿ ಚೋಪ್ರಾ ಎಂಗೇಜ್‌ಮೆಂಟ್‌ಗೆ ಹಾಜರಿ ಹಾಕಿದ ಬಳಿಕ ಇದೀಗ ಭಾರತಕ್ಕೆ ಪ್ರಿಯಾಂಕಾ ಚೋಪ್ರಾ ಬಂದಿದ್ದಾರೆ. ಪ್ರಿಯಾಂಕಾ ತವರು ಮನೆ ಮುಂಬೈನಲ್ಲಿ (Mumbai) ಸಮಯ ಕಳೆಯುತ್ತಿದ್ದಾರೆ. ಅಂಬಾನಿ ಮನೆ ಪಾರ್ಟಿ ಸೇರಿದಂತೆ ಹಲವು ಕಡೆ ಭೇಟಿ ನೀಡುತ್ತಿದ್ದಾರೆ.
ಪ್ರಿಯಾಂಕಾ ಚೋಪ್ರಾ ಸದ್ಯ ಹಾಲಿವುಡ್ ಸಿನಿಮಾದಲ್ಲಿ ಬ್ಯುಸಿಯಾಗಿದ್ದಾರೆ. ಮತ್ತೆ ಅದ್ಯಾವಾಗ ಹಿಂದಿ ಸಿನಿಮಾಗೆ ನಟಿ ಕಮ್‌ಬ್ಯಾಕ್ ಆಗುತ್ತಾರೆ ಎಂದು ಫ್ಯಾನ್ಸ್ ಎದುರು ನೋಡಿದ್ದಾರೆ.
ಹಾಲಿವುಡ್ (Hollywood) ಬೆಡಗಿ ಪ್ರಿಯಾಂಕಾ ಚೋಪ್ರಾ (Priyanka Chopra) ಇದೀಗ ಮುಂಬೈನಲ್ಲಿ ಅಂಬಾನಿ ಕುಟುಂಬದ ಪಾರ್ಟಿಯೊಂದರಲ್ಲಿ ಮಿಂಚಿದ್ದಾರೆ. ದುಬಾರಿ ನೆಕ್ಲೇಸ್ ಧರಿಸುವ ಮೂಲಕ ನಟಿ ಸದ್ದು ಮಾಡುತ್ತಿದ್ದಾರೆ. ಆ ನೆಕ್ಲೇಸ್ ಬೆಲೆ ಕೇಳಿದ್ರೆ, ನಿಜಕ್ಕೂ ನೀವು ಶಾಕ್ ಆಗುತ್ತೀರಾ.
ಬಾಲಿವುಡ್‌ನಲ್ಲಿ ಸಂಚಲನ ಮೂಡಿಸಿದ್ದ ನಟಿ ಪ್ರಿಯಾಂಕಾ ಇದೀಗ ಹಾಲಿವುಡ್ ಅಂಗಳದಲ್ಲಿ ಸದ್ದು ಮಾಡುತ್ತಿದ್ದಾರೆ. ಸದ್ಯ ಕೆಲಸಕ್ಕೆ ಬ್ರೇಕ್ ನೀಡಿ ಮುಂಬೈ ನಗರಕ್ಕೆ ನಟಿ ಲಗ್ಗೆ ಇಟ್ಟಿದ್ದಾರೆ. ಈ ಬಾರಿ ದೇಸಿ ಗರ್ಲ್ ಪ್ರಿಯಾಂಕಾ ಆಭರಣದ ವಿಚಾರವಾಗಿ ಟಾಕ್ ಆಫ್ ದಿ ಟೌನ್ ಆಗಿದ್ದಾರೆ. ಇದನ್ನೂ ಓದಿ:ಅದ್ಧೂರಿಯಾಗಿ ನಡೆಯಿತು ವೆಂಕಟೇಶ್ ದಗ್ಗುಬಾಟಿ ಪುತ್ರಿಯ ಮದುವೆ
ಅಂಬಾನಿ ಕುಟುಂಬ ಆಯೋಜಿಸಿದ್ದ ಪಾರ್ಟಿಯೊಂದರಲ್ಲಿ ಪ್ರಿಯಾಂಕಾ, ಪಿಂಕ್ ಬಣ್ಣದ ಡ್ರೆಸ್‌ನಲ್ಲಿ ಕಂಗೊಳಿಸಿದ್ದರು. ಅದಕ್ಕೆ ಆಕರ್ಷಕವಾದ 8 ಕೋಟಿ ರೂ. ಮೌಲ್ಯದ ಡೈಮೆಂಡ್ ನೆಕ್ಲೇಸ್ ಧರಿಸಿ ಬಂದಿದ್ದರು. ಈ ನೆಕ್ಲೇಸ್ ಎಲ್ಲರ ಗಮನ ಸೆಳೆದಿದೆ. ಅದರ ಬೆಲೆ ಕೇಳಿ ಮಂದಿ ಬೆಚ್ಚಿಬಿದ್ದಿದ್ದಾರೆ.
ಬಳಿಕ ಆಭರಣ ಲಾಂಚ್ ಕಾರ್ಯಕ್ರಮವೊಂದರಲ್ಲಿ ನಟಿ ಬಿಳಿ ಬಣ್ಣದ ಧಿರಿಸಿನಲ್ಲಿ ಕಾಣಿಸಿಕೊಂಡಿದ್ದರು. ಸರ್ಪದ ನೆಕ್ಲೇಸ್ ಧರಿಸಿ ನಟಿ ತುಂಬಾ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಈ ವೇಳೆ, 59 ಲಕ್ಷ ರೂ. ಮೌಲ್ಯದ ನೆಕ್ಲೇಸ್ ಧರಿಸಿ ಹೈಲೆಟ್ ಆಗಿದ್ದಾರೆ.
ಇನ್ನೂ ಪ್ರಿಯಾಂಕಾ ಚೋಪ್ರಾ ಕೈಯಲ್ಲಿ ಕೆಲ ಹಾಲಿವುಡ್ ಸಿನಿಮಾಗಳು, ವೆಬ್ ಸಿರೀಸ್ ಪ್ರಾಜೆಕ್ಟ್‌ಗಳಿವೆ ಮತ್ತೆ ಅದ್ಯಾವಾಗ ಬಾಲಿವುಡ್ ಸಿನಿಮಾ ಬರುತ್ತಾರೆ ಎಂದು ಅಭಿಮಾನಿಗಳು ಎದುರು ನೋಡ್ತಿದ್ದಾರೆ.
ಬಾಲಿವುಡ್ ಬ್ಯೂಟಿ ಮೀರಾ ಚೋಪ್ರಾ (Meera Chopra) ಅವರು ಉದ್ಯಮಿ ರಕ್ಷಿತ್ ಜೊತೆ ಮಾರ್ಚ್ 12ರಂದು ವೈವಾಹಿಕ ಜೀವನಕ್ಕೆ ಕಾಲಿಟ್ಟಿದ್ದಾರೆ. ಇದೀಗ ಸಹೋದರಿ ಮೀರಾಗೆ ಸೋಷಿಯಲ್ ಮೀಡಿಯಾದಲ್ಲಿ ಪ್ರಿಯಾಂಕಾ ಚೋಪ್ರಾ (Priyanka Chopra) ವೈವಾಹಿಕ ಜೀವನದ ಆರಂಭಕ್ಕೆ ವಿಶೇಷವಾಗಿ ಶುಭಕೋರಿದ್ದಾರೆ. ಇದನ್ನೂ ಓದಿ:ಅಣ್ಣಾಮಲೈ ನಟನೆಯ ‘ಅರಬ್ಬೀ’ ಚಿತ್ರದ ಟ್ರೈಲರ್ ರಿಲೀಸ್
ಜೈಪುರ್‌ನಲ್ಲಿ ಅದ್ಧೂರಿಯಾಗಿ ರಕ್ಷಿತ್ ಜೊತೆ ಮೀರಾ ಚೋಪ್ರಾ ಮದುವೆ ನಡೆಯಿತು. ಈ ಮದುವೆಗೆ ನಟಿ ಪ್ರಿಯಾಂಕಾ ಚೋಪ್ರಾ ಗೈರಾಗಿದ್ದರು. ಆದರೆ ಮನೆ ಮಗಳು ಮೀರಾ ಮದುವೆಗೆ ಪ್ರಿಯಾಂಕಾ ಚೋಪ್ರಾ ತಾಯಿ ಮಧು ಚೋಪ್ರಾ ಹಾಜರಿ ಹಾಕಿ ಶುಭಹಾರೈಸಿದ್ದರು. ಕೆಲಸ ಕಮೀಟ್‌ಮೆಂಟ್‌ನಿಂದ ಪ್ರಿಯಾಂಕಾ ಗೈರಾಗಿದ್ದರು.
ಇದೀಗ ಸಹೋದರಿ ಮೀರಾಗೆ ಹೊಸ ಜರ್ನಿಗೆ ಪ್ರೀತಿಯಿಂದ ಶುಭಕೋರಿದ್ದಾರೆ. ಅಭಿನಂದನೆಗಳು ಮೀರಾ ಚೋಪ್ರಾ ಮತ್ತು ರಕ್ಷಿತ್ ಎಂದು ಮನಸಾರೆ ನಟಿ ಹಾರೈಸಿದ್ದಾರೆ. ಪ್ರಿಯಾಂಕಾ ಹಾರೈಕೆಗೆ ಮೀರಾ ಪ್ರೀತಿಯಿಂದ ರಿಯಾಕ್ಟ್ ಮಾಡಿದ್ದಾರೆ. ಇದನ್ನೂ ಓದಿ:ನಾಳೆ ಅಪ್ಪು ನಟನೆಯ ‘ಜಾಕಿ’ ಸಿನಿಮಾ ರಿಲೀಸ್
ನಿಮ್ಮ ಹಾರೈಕೆಗೆ ಧನ್ಯವಾದಗಳು. ಹೊಸ ಜೀವನ ಶುರು ಮಾಡಲು ಕಾತರದಿಂದ ಕಾಯುತ್ತೇನೆ. ನಿಮ್ಮನ್ನು ಮಿಸ್ ಮಾಡಿಕೊಳ್ಳುತ್ತಿದ್ದೇನೆ. ತುಂಬು ಹೃದಯದಿಂದ ಪ್ರೀತಿ ಹಿಂದಿರುಗಿಸುತ್ತಿದ್ದೇನೆ ಎಂದು ಮೀರಾ ರಿಯಾಕ್ಟ್ ಮಾಡಿದ್ದಾರೆ. ಸದ್ಯ ಇಬ್ಬರ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದ್ದೇನೆ.
ಎಂದೆಂದಿಗೂ ಸಂತೋಷ, ಜಗಳ, ನಗು, ಕಣ್ಣೀರು, ಮತ್ತು ನೆನಪುಗಳು ಈ ಜೀವಮಾನದಲ್ಲಿ ಎಂದು ನಟಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ನಿಮ್ಮೊಂದಿಗೆ ಪ್ರತಿ ಜನ್ಮ ಬದುಕುತ್ತೇನೆ ಎಂದು ಮೀರಾ ಮದುವೆಯ ಬಗ್ಗೆ ಸಂತಸ ವ್ಯಕ್ತಪಡಿಸಿದ್ದರು.
ಕನ್ನಡದ ‘ಅರ್ಜುನ್’ (Arjun) ಸಿನಿಮಾದಲ್ಲಿ ನಟಿಸಿದ್ದ, ಬಾಲಿವುಡ್ ನಟಿ ಮೀರಾ ಚೋಪ್ರಾ ಅವರು ಮಾರ್ಚ್ 11ರಂದು ಮೆಹೆಂದಿ, ಸಂಗೀತ ಕಾರ್ಯಕ್ರಮದ ಜೊತೆ ಸೆಲೆಬ್ರೆಟಿ ಸ್ನೇಹಿತರಿಗೆ ಕಾಕ್‌ಟೈಲ್ ಪಾರ್ಟಿ ಆಯೋಜಿಸಿದ್ದರು. ಇಂದು (ಮಾ.12) ಅದ್ಧೂರಿಯಾಗಿ ಜೈಪುರನಲ್ಲಿ ಮದುವೆಯಾಗಿದ್ದಾರೆ.
ಜೈಪುರ ಮತ್ತು ದೆಹಲಿ ಹೆದ್ದಾರಿ ಬಳಿಯಿರುವ ಐಷಾರಾಮಿ ರೆಸಾರ್ಟ್‌ವೊಂದರಲ್ಲಿ ಮೀರಾ ಮದುವೆ ನಡೆದಿತ್ತು.ಮೀರಾ ಮದುವೆ ಸಂಭ್ರಮದಲ್ಲಿ ಬಾಲಿವುಡ್ ನಟ-ನಟಿಯರು ಭಾಗಿಯಾಗಿದ್ದರು. ಮೀರಾ ಚೋಪ್ರಾ ಮೂಲತಃ ಮುಂಬೈ ಹುಡುಗಿ ಆಗಿದ್ರೂ ಅವರಿಗೆ ಕನ್ನಡಕ್ಕೆ ನಂಟಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ (Darshan) ನಾಯಕಿ ನಟಿಸಿ ಸೈ ಎನಿಸಿಕೊಂಡಿದ್ದರು. ಕನ್ನಡಿಗರಿಗೆ ಅರ್ಜುನ್ (Arjun) ಚಿತ್ರದ ನಟಿ ಅಂದರೆ ಅವರು ಎಂಬುದು ನೆನಪಾಗುತ್ತಾರೆ.
ಸಹೋದರಿ ಸಂಬಂಧಿ ಪ್ರಿಯಾಂಕಾರಂತೆ ಅವರಿಗೆ ಮೀರಾ ಬಾಲಿವುಡ್‌ನಲ್ಲಿ ಗಟ್ಟಿ ನೆಲೆ ಸಿಗಲಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಇದ್ದರೂ ಕೂಡ ಸಿನಿಮಾರಂಗ ಅವರ ಕೈಹಿಡಿಯಲಿಲ್ಲ.
‘1920 ಲಂಡನ್’, ‘ಸೆಕ್ಷನ್ 375’, ‘ಕಾಮಾತಿಪುರ’ ಎಂಬ ಹಿಂದಿ ಸಿನಿಮಾಗಳಲ್ಲಿ ಮೀರಾ ಚೋಪ್ರಾ ನಟಿಸಿದ್ದಾರೆ. ‘ಸಫೇದ್’ ಸಿನಿಮಾ ಕೂಡ ಬಿಡುಗಡೆಗೆ ಸಿದ್ಧವಾಗಿದೆ.
ಹಾಲಿವುಡ್, ಹಿಂದಿ ಸಿನಿಮಾ ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಸಹೋದರಿ ಮೀರಾ ಚೋಪ್ರಾ (Meera Chopra) ಅವರು ಬಹುಕಾಲದ ಗೆಳೆಯನ ಜೊತೆ ಮದುವೆಯಾಗಿದ್ದಾರೆ. ಮಾರ್ಚ್ 12ರಂದು ರಕ್ಷಿತ್ (Rakshit) ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಮದುವೆಯ ಸುಂದರ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಮೀರಾ ಹಂಚಿಕೊಂಡಿದ್ದಾರೆ.
ಎಂದೆಂದಿಗೂ ಸಂತೋಷ, ಜಗಳ, ನಗು, ಕಣ್ಣೀರು, ಮತ್ತು ನೆನಪುಗಳು ಈ ಜೀವಮಾನದಲ್ಲಿ ಎಂದು ನಟಿ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ. ನಿಮ್ಮೊಂದಿಗೆ ಪ್ರತಿ ಜನ್ಮ ಬದುಕುತ್ತೇನೆ ಎಂದು ಮೀರಾ ಮದುವೆಯ ಬಗ್ಗೆ ಸಂತಸ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಝೈದ್ ಖಾನ್ ಚಿತ್ರಕ್ಕೆ ‘ಉಪಾಧ್ಯಕ್ಷ’ ಖ್ಯಾತಿಯ ನಿರ್ದೇಶಕನಿಂದ ಆ್ಯಕ್ಷನ್ ಕಟ್
ಕನ್ನಡದ ‘ಅರ್ಜುನ್’ ಸಿನಿಮಾದಲ್ಲಿ ನಟಿಸಿದ್ದ, ಬಾಲಿವುಡ್ ನಟಿ ಮೀರಾ ಚೋಪ್ರಾ ಅವರು ಮಾರ್ಚ್ 11ರಂದು ಮೆಹೆಂದಿ, ಸಂಗೀತ ಕಾರ್ಯಕ್ರಮದ ಜೊತೆ ಸೆಲೆಬ್ರೆಟಿ ಸ್ನೇಹಿತರಿಗೆ ಕಾಕ್‌ಟೈಲ್ ಪಾರ್ಟಿ ಆಯೋಜಿಸಿದ್ದರು. ಇಂದು (ಮಾ.12) ಅದ್ಧೂರಿಯಾಗಿ ಜೈಪುರನಲ್ಲಿ ಮದುವೆಯಾಗಿದ್ದಾರೆ.
ಮುಂಬೈ ಬೆಡಗಿ ಪ್ರಿಯಾಂಕಾ ಚೋಪ್ರಾ ಸಹೋದರಿ ಮೀರಾ ಚೋಪ್ರಾ ಉದ್ಯಮಿ ರಕ್ಷಿತ್ ಎನ್ನುವವರ ಜೊತೆ ಮದುವೆ ಆಗುತ್ತಿದ್ದಾರೆ. ಜೈಪುರ ಮತ್ತು ದೆಹಲಿ ಹೆದ್ದಾರಿ ಬಳಿಯಿರುವ ಐಷಾರಾಮಿ ರೆಸಾರ್ಟ್‌ವೊಂದರಲ್ಲಿ ಮೀರಾ ಮದುವೆ ನಡೆದಿದೆ. ಮೀರಾ ಮದುವೆ ಸಂಭ್ರಮದಲ್ಲಿ ಬಾಲಿವುಡ್ ನಟ-ನಟಿಯರು ಭಾಗಿಯಾಗಿದ್ದಾರೆ.
ಮೀರಾ ಚೋಪ್ರಾ ಮೂಲತಃ ಮುಂಬೈ ಹುಡುಗಿ ಆಗಿದ್ರೂ ಅವರಿಗೆ ಕನ್ನಡಕ್ಕೆ ನಂಟಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ (Darshan) ನಾಯಕಿ ನಟಿಸಿ ಸೈ ಎನಿಸಿಕೊಂಡಿದ್ದರು. ಕನ್ನಡಿಗರಿಗೆ ಅರ್ಜುನ್ (Arjun Kannada Film) ಚಿತ್ರದ ನಟಿ ಅಂದರೆ ಅವರು ಎಂಬುದು ನೆನಪಾಗುತ್ತಾರೆ.
ಸಹೋದರಿ ಸಂಬಂಧಿ ಪ್ರಿಯಾಂಕಾರಂತೆ ಅವರಿಗೆ ಮೀರಾ ಬಾಲಿವುಡ್‌ನಲ್ಲಿ ಗಟ್ಟಿ ನೆಲೆ ಸಿಗಲಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಇದ್ದರೂ ಕೂಡ ಸಿನಿಮಾರಂಗ ಅವರ ಕೈಹಿಡಿಯಲಿಲ್ಲ. ಇದನ್ನೂ ಓದಿ:ಪತಿ ಹುಟ್ಟುಹಬ್ಬಕ್ಕೆ ವಿಶೇಷವಾಗಿ ಶುಭಕೋರಿದ ಯಾಮಿ ಗೌತಮ್
‘1920 ಲಂಡನ್’, ‘ಸೆಕ್ಷನ್ 375’, ‘ಕಾಮಾತಿಪುರ’ ಎಂಬ ಹಿಂದಿ ಸಿನಿಮಾಗಳಲ್ಲಿ ಮೀರಾ ಚೋಪ್ರಾ ನಟಿಸಿದ್ದಾರೆ. ‘ಸಫೇದ್’ ಸಿನಿಮಾ ಕೂಡ ಬಿಡುಗಡೆಗೆ ಸಿದ್ಧವಾಗಿದೆ.
ಹಾಲಿವುಡ್, ಹಿಂದಿ ಸಿನಿಮಾ ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಸಹೋದರಿ ಮೀರಾ ಚೋಪ್ರಾ (Meera Chopra) ಮದುವೆ ಸಡಗರ ಜೋರಾಗಿದೆ. ಮಾರ್ಚ್ 12ಕ್ಕೆ ರಕ್ಷಿತ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡಲು ರೆಡಿಯಾಗಿದ್ದಾರೆ. ಸದ್ಯ ಮದುವೆ ಕಾರ್ಯಕ್ರಮದಲ್ಲಿ ಮೀರಾ ಮಿಂಚ್ತಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡುತ್ತಿದೆ.
ಕನ್ನಡದ ‘ಅರ್ಜುನ್’ (Arjun) ಸಿನಿಮಾದಲ್ಲಿ ನಟಿಸಿದ್ದ, ಬಾಲಿವುಡ್ ನಟಿ ಮೀರಾ ಚೋಪ್ರಾ ಅವರು ಮದುವೆ ಸಂಭ್ರಮದಲ್ಲಿದ್ದಾರೆ. ಮಾರ್ಚ್ 11ರಂದು ಮೆಹೆಂದಿ, ಸಂಗೀತ ಕಾರ್ಯಕ್ರಮದ ಜೊತೆ ಸೆಲೆಬ್ರೆಟಿ ಸ್ನೇಹಿತರಿಗೆ ಕಾಕ್‌ಟೈಲ್ ಪಾರ್ಟಿ ಆಯೋಜಿಸಲಾಗಿದೆ. ಮಾರ್ಚ್ 12ರಂದು ಅದ್ಧೂರಿಯಾಗಿ ಮದುವೆ (Wedding) ಜರುಗಲಿದೆ.
ಮುಂಬೈ ಬೆಡಗಿ ಪ್ರಿಯಾಂಕಾ ಚೋಪ್ರಾ ಸಹೋದರಿ ಮೀರಾ ಚೋಪ್ರಾ ಉದ್ಯಮಿ ರಕ್ಷಿತ್ ಎನ್ನುವವರ ಜೊತೆ ಮದುವೆ ಆಗುತ್ತಿದ್ದಾರೆ. ಜೈಪುರ ಮತ್ತು ದೆಹಲಿ ಹೆದ್ದಾರಿ ಬಳಿಯಿರುವ ಐಷಾರಾಮಿ ರೆಸಾರ್ಟ್‌ವೊಂದರಲ್ಲಿ ಮೀರಾ ಮದುವೆ ನಡೆಯಲಿದೆ. ಮೀರಾ ಮದುವೆ ಸಂಭ್ರಮದಲ್ಲಿ ಪ್ರಿಯಾಂಕಾ ಚೋಪ್ರಾ, ಕಿಯಾರಾ, ಪರಿಣಿತಿ ಚೋಪ್ರಾ ಸೇರಿದಂತೆ ಅನೇಕರು ಭಾಗಿಯಾಗಲಿದ್ದಾರೆ. ಇದನ್ನೂ ಓದಿ:‘ಆಡು ಜೀವಿತಂ’ ಟ್ರೈಲರ್ ನೋಡಿ ಪೃಥ್ವಿರಾಜ್‌ರನ್ನು ಹಾಡಿ ಹೊಗಳಿದ ಪ್ರಭಾಸ್
ಮೀರಾ ಚೋಪ್ರಾ ಮೂಲತಃ ಮುಂಬೈ ಹುಡುಗಿ ಆಗಿದ್ರೂ ಅವರಿಗೆ ಕನ್ನಡಕ್ಕೆ ನಂಟಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ (Darshan) ನಾಯಕಿ ನಟಿಸಿ ಸೈ ಎನಿಸಿಕೊಂಡಿದ್ದರು. ಕನ್ನಡಿಗರಿಗೆ ‘ಅರ್ಜುನ್’ ಚಿತ್ರದ ನಟಿ ಅಂದರೆ ಅವರು ಎಂಬುದು ನೆನಪಾಗುತ್ತಾರೆ.
ಸಹೋದರಿ ಸಂಬಂಧಿ ಪ್ರಿಯಾಂಕಾರಂತೆ ಅವರಿಗೆ ಮೀರಾ ಬಾಲಿವುಡ್‌ನಲ್ಲಿ ಗಟ್ಟಿ ನೆಲೆ ಸಿಗಲಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಇದ್ದರೂ ಕೂಡ ಸಿನಿಮಾರಂಗ ಅವರ ಕೈಹಿಡಿಯಲಿಲ್ಲ.
‘1920 ಲಂಡನ್’, ‘ಸೆಕ್ಷನ್ 375’, ‘ಕಾಮಾತಿಪುರ’ ಎಂಬ ಹಿಂದಿ ಸಿನಿಮಾಗಳಲ್ಲಿ ಮೀರಾ ಚೋಪ್ರಾ ನಟಿಸಿದ್ದಾರೆ. ‘ಸಫೇದ್’ ಸಿನಿಮಾ ಕೂಡ ಬಿಡುಗಡೆಗೆ ಸಿದ್ಧವಾಗಿದೆ.
ಮುಂಬೈ ಬೆಡಗಿ, ಹಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಸಹೋದರಿ ಮೀರಾ ಚೋಪ್ರಾ (Meera Chopra) ಇದೀಗ ತಮ್ಮ ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಮಾರ್ಚ್‌ನಲ್ಲಿ ಅದ್ಧೂರಿಯಾಗಿ ಮದುವೆಯಾಗಲು ರೆಡಿಯಾಗಿದ್ದಾರೆ.
ದರ್ಶನ್ (Darshan) ನಟನೆಯ ‘ಅರ್ಜುನ್’ (Arjun) ಚಿತ್ರದ ನಾಯಕಿ ಮೀರಾಗೆ ಇದೇ ಮಾರ್ಚ್ 11 ಮತ್ತು 12ರಂದು ಮದುವೆ ಸಮಾರಂಭ ನಡೆಯಲಿದೆ. ಜೈಪುರ ಮತ್ತು ದೆಹಲಿ ಹೆದ್ದಾರಿ ಬಳಿಯಿರುವ ಐಷಾರಾಮಿ ರೆಸಾರ್ಟ್‌ವೊಂದರಲ್ಲಿ ಮೀರಾ ಮದುವೆ (Wedding) ನಡೆಯಲಿದೆ. ಅದಕ್ಕಾಗಿ ಸಕಲ ಸಿದ್ಧತೆ ಕೂಡ ನಡೆಯುತ್ತಿದೆ.
ಮೀರಾ ಮದುವೆ ಆಗುತ್ತಿರುವ ವರನ ಬಗ್ಗೆ ಯಾವುದೇ ಮಾಹಿತಿ ರಿವೀಲ್ ಆಗಿಲ್ಲ. ಉದ್ಯಮಿಯ ಜೊತೆ ಮೀರಾ ಮದುವೆ ಎಂಬ ಸುದ್ದಿ ಹರಿದಾಡುತ್ತಿದೆ. ಮದುವೆ ದಿನ ರಿವೀಲ್ ಆಗಲಿರುವ ಫೋಟೋದಲ್ಲಿ ತಿಳಿಯಲಿದೆ. ಇದನ್ನೂ ಓದಿ:ನಿರ್ದೇಶಕ ಬಾಲಾ ನನಗೆ ಹೊಡೆದರು: ಖ್ಯಾತ ನಟಿಯ ಮಮಿತಾ ಆರೋಪ
ಮೀರಾ ಚೋಪ್ರಾ ಮೂಲತಃ ಮುಂಬೈ ಹುಡುಗಿ ಆಗಿದ್ರೂ ಅವರಿಗೆ ಕನ್ನಡಕ್ಕೆ ನಂಟಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್‌ಗೆ ನಾಯಕಿ ನಟಿಸಿ ಸೈ ಎನಿಸಿಕೊಂಡಿದ್ದರು. ಕನ್ನಡಿಗರಿಗೆ ಅರ್ಜುನ್ ಚಿತ್ರದ ನಟಿ ಅಂದರೆ ಅವರು ಎಂಬುದು ನೆನಪಾಗುತ್ತಾರೆ.
ಸಹೋದರಿ ಸಂಬಂಧಿ ಪ್ರಿಯಾಂಕಾರಂತೆ ಅವರಿಗೆ ಮೀರಾ ಬಾಲಿವುಡ್‌ನಲ್ಲಿ ಗಟ್ಟಿ ನೆಲೆ ಸಿಗಲಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಸಖತ್ ಆ್ಯಕ್ಟೀವ್ ಇದ್ದರೂ ಕೂಡ ಸಿನಿಮಾರಂಗ ಅವರ ಕೈಹಿಡಿಯಲಿಲ್ಲ.
‘1920 ಲಂಡನ್’, ‘ಸೆಕ್ಷನ್ 375’, ‘ಕಾಮಾತಿಪುರ’ ಎಂಬ ಹಿಂದಿ ಸಿನಿಮಾಗಳಲ್ಲಿ ಮೀರಾ ಚೋಪ್ರಾ ನಟಿಸಿದ್ದಾರೆ. ‘ಸಫೇದ್’ ಸಿನಿಮಾ ಕೂಡ ಬಿಡುಗಡೆಗೆ ಸಿದ್ಧವಾಗಿದೆ.
ಈ ಬಾರಿ ಆಸ್ಕರ್ (Oscar) ರೇಸ್ ನಲ್ಲಿರುವ ಭಾರತದ ಸಾಕ್ಷ್ಯ ಚಿತ್ರ ‘ಟು ಕಿಲ್ ಎ ಟೈಗರ್’ ಚಿತ್ರಕ್ಕೆ ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ (Priyanka Chopra) ಬೆಂಬಲವಾಗಿ ನಿಂತಿದ್ದಾರೆ. ಕಳೆದ ಬಾರಿ ಅವರು ಚೆಲ್ಲಾ ಶೋ ಚಿತ್ರದೊಂದಿಗೆ ಗುರುತಿಸಿಕೊಂಡಿದ್ದರು. ಆಸ್ಕರ್ ವೋಟರ್ ಗಳನ್ನು ತಮ್ಮ ಮನೆಗೆ ಕರೆಯಿಸಿಕೊಂಡು ಅವರಿಗೆ ಸಿನಿಮಾ ಪ್ರದರ್ಶಿಸಿ ಒಳ್ಳೆಯ ಮಾತುಗಳನ್ನು ಆಡಿದ್ದರು.
ಈ ಸಲವೂ ತಮ್ಮ ಮನೆಯಲ್ಲಿ ಟು ಕಿಲ್ ಎ ಟೈಗರ್ ಸಿನಿಮಾವನ್ನು ಪ್ರದರ್ಶನಕ್ಕೆ ವ್ಯವಸ್ಥೆ ಮಾಡಿದ್ದಾರಂತೆ. ಆಸ್ಕರ್ ವೋಟರ್ಸ್ ಗೆ ತಮ್ಮ ಮನೆಯಲ್ಲೇ ಸಿನಿಮಾ ತೋರಿಸಲಿದ್ದಾರೆ. ಅಲ್ಲದೇ ಸಿನಿಮಾ ಬಗ್ಗೆ ಅವರು ಮೆಚ್ಚುಗೆಯ ಮಾತುಗಳನ್ನು ಆಡಿದ್ದಾರೆ. ಕಥೆಯ ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಭಾರತ ಮೂಲದ ಕೆನಡಾದಲ್ಲಿ ನೆಲೆಸಿರುವ ನಿಶಾ ಪಹೂಜಾ (Nisha Pahuja) ಅವರ ‘ಟು ಕಿಲ್ ಎ ಟೈಗರ್’ (To Kill A Tiger) ಸಾಕ್ಷ್ಯಚಿತ್ರವನ್ನು ನಿರ್ದೇಶಣ ಮಾಡಿದ್ದು, ಇದು ಈ ಹಿಂದೆ ಟೊರೆಂಟೊ ಚಿತ್ರೋತ್ಸವದಲ್ಲಿ ಪ್ರದರ್ಶನಗೊಂಡಿತ್ತು.
ಕಾರ್ನಿಲಿಯಾ ಪ್ರನ್ಸಿಪೆ ಮತ್ತು ಡೇವಿಡ್ ಒಪ್ಪೆನ್ ಹಿಮ್ ನಿರ್ಮಿಸಿರುವ ಈ ಸಾಕ್ಷ್ಯಚಿತ್ರದಲ್ಲಿ 13 ವರ್ಷದ ಮಗಳನ್ನು ಅಪಹರಿಸಿ, ಲೈಂಗಿಕ ದೌರ್ಜನ್ಯ ಎಸೆಗಿರುವ ದುರುಳರ ವಿರುದ್ಧ ನ್ಯಾಯಕ್ಕಾಗಿ ಹೋರಾಟ ಮಾಡುವ ತಂದೆಯ ಕಥೆಯನ್ನು ಇದು ಹೊಂದಿದೆ. ಭಾರತದ ನೆಲದಲ್ಲೇ ಇದು ಚಿತ್ರೀಕರಣವಾಗಿದೆ.
ಕಳೆದ ಬಾರಿ ಭಾರತಕ್ಕೆ ಎರಡು ಆಸ್ಕರ್ ಪ್ರಶಸ್ತಿಗಳು ಸಂದಿದ್ದವು. ಆದರೆ, ಈ ಬಾರಿ ಆಸ್ಕರ್ ನಾಮಿನೇಟ್ ಪಟ್ಟಿಯಲ್ಲಿ ಭಾರತದ ಯಾವುದೇ ಸಿನಿಮಾಗಳು ಇರದೇ ಇರುವುದು ಸಹಜವಾಗಿಯೇ ನಿರಾಸೆ ತಂದಿದೆ.