ಭೋಪಾಲ್: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮತ್ತು ಸಹೋದರಿ, ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ಬಾಂಧವ್ಯದ ಬಗ್ಗೆ ಮಧ್ಯಪ್ರದೇಶ ನಗಾರಾಭಿವೃದ್ಧಿ ಸಚಿವ, ಬಿಜೆಪಿ ನಾಯಕ ಕೈಲಾಶ್ ವಿಜಯವರ್ಗೀಯ ನಾಲಿಗೆ ಹರಿಬಿಟ್ಟಿದ್ದಾರೆ.
ಭೋಪಾಲ್‌ನಲ್ಲಿ ನಡೆದ ಪಂಡಿತ್ ದೀನದಯಾಳ್ ಉಪಾಧ್ಯಾಯರ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಮಾತಾಡಿ, ನಮ್ಮ ಸಹೋದರಿಯರ ಹಳ್ಳಿಯಲ್ಲಿ ನಾವು ನೀರನ್ನು ಕೂಡ ಕುಡಿಯಲ್ಲ. ಆದರೆ, ಇಂದಿನ ವಿರೋಧ ಪಕ್ಷದ ನಾಯಕರು ತಮ್ಮ ತಂಗಿಯನ್ನು ರಸ್ತೆಯಲ್ಲಿ ಮುದ್ದಿಸುತ್ತಾರೆ. ನಮ್ಮಲ್ಲಿ ಯಾರಾದರೂ ಈ ರೀತಿ ಮಾಡ್ತಾರಾ..? ಅದು ಅವರ ವಿದೇಶಿ ಮೌಲ್ಯಗಳನ್ನು ತೋರಿಸುತ್ತೆ ಅಂದಿದ್ದಾರೆ.
ಇದಕ್ಕೆ ಕಾಂಗ್ರೆಸ್ ಕಿಡಿಕಾರಿದೆ. ಕೈಲಾಶ್ ವಿಜಯವರ್ಗೀಯವರು ಪವಿತ್ರ ಸಹೋದರ-ಸಹೋದರಿಯರ ಬಾಂಧವ್ಯವನ್ನು ಅವಮಾನಿಸಿದ್ದಾರೆ. ಇಂತಹ ನಾಚಿಕೆಯಿಲ್ಲದ ಹೇಳಿಕೆಗೆ ಪ್ರತಿಕ್ರಿಯಿಸಲು ನಮಗೆ ನಾಚಿಕೆಯಾಗುತ್ತದೆ ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಜಿತು ಪಟ್ವಾರಿ ಕಿಡಿಕಾರಿದ್ದಾರೆ.
ನವದೆಹಲಿ: ಬಿಹಾರದಲ್ಲಿ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ವಿರೋಧಿಸಿ ಸಂಸತ್ ಭವನದ ಸಂಕೀರ್ಣದಲ್ಲಿ ಇಂಡಿ ಒಕ್ಕೂಟದ ಸಂಸದರು ‘ಟಿ-ಶರ್ಟ್ ಪ್ರತಿಭಟನೆ’ (T Shirt Protest) ನಡೆಸಿದರು. ಪ್ರತಿಭಟನೆ ವೇಳೆ ಟೀ ಶರ್ಟ್ ಮೇಲೆ ಮುದ್ರಿಸಿದ್ದ 124 ವರ್ಷದ ಮತದಾರರು ಎನ್ನಲಾದ ಮಹಿಳೆ ಪ್ರತ್ಯಕ್ಷವಾಗಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಆಕೆ ತನ್ನ ನಿಜ ವಯಸ್ಸನ್ನ ಬಹಿರಂಗಪಡಿಸಿದ್ದಾರೆ. ಜೊತೆಗೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿಗೆ (Priyanka Gandhi) ತರಾಟೆ ತೆಗೆದುಕೊಂಡಿದ್ದಾರೆ.
ವಿಪಕ್ಷಗಳ ಆಕ್ರೋಶ ಏನು?
ಬಿಹಾರದಲ್ಲಿ ಚುನಾವಣಾ ಆಯೋಗದ ಮತದಾರರ ಪಟ್ಟಿಯ (Voter List) ಪರಿಷ್ಕರಣೆ ವಿರುದ್ಧ ‘ಇಂಡಿಯಾ’ ಮೈತ್ರಿಕೂಟದ ಹಲವು ಸಂಸದರು ಸಂಸತ್ ಭವನದ ಸಂಕೀರ್ಣದಲ್ಲಿ ಮಕರದ್ವಾರದ ಎದುರು ʻಟೀ ಶರ್ಟ್ʼ ಪ್ರತಿಭಟನೆ ನಡೆಸಿದರು. ಬಿಹಾರದ ಮತದಾರರ ಪಟ್ಟಿಯಲ್ಲಿ ಕಂಡು ಬಂದಿದೆ ಎನ್ನಲಾದ 124 ವರ್ಷದ ಮತದಾರೆಯ ಹೆಸರನ್ನು ಬರೆದ ಬಿಳಿ ʻಟಿ ಶರ್ಟ್ʼ ಧರಿಸಿದ್ದರು. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಪ್ರಿಯಾಂಕಾ ಗಾಂಧಿ ವಾದ್ರಾ, ಟಿಎಂಸಿಯ ಡೆರಿಕ್ ಒಬ್ರಿಯಾನ್, ಡಿಎಂಕೆಯ ಟಿ.ಆರ್ ಬಾಲು, ಎನ್‌ಸಿಪಿ (SP)ಯ ಸುಪ್ರಿಯಾ ಸುಳೆ ಸೇರಿದಂತೆ ಇಂಡಿ ಒಕ್ಕೂಟದ ಅನೇಕ ಸಂಸದರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ಧರ್ಮಸ್ಥಳ ಬುರುಡೆ ರಹಸ್ಯ – 13ನೇ ಸ್ಥಳದಲ್ಲಿ ಮೂಳೆ ಸಿಗದೇ ಇದ್ರೆ ತನಿಖೆ ಸ್ಥಗಿತ?
ಪ್ರಿಯಾಂಕಾ ಗಾಂಧಿ ಸೇರಿದಂತೆ ಹಲವು ಸಂಸದರು ‘ಮಿಂತಾ ದೇವಿ’ ಎಂದು ಬರೆದಿದ್ದ ಹಾಗೂ ಅವರ ಭಾವಚಿತ್ರವಿದ್ದ ಟಿ-ಶರ್ಟ್ ಧರಿಸಿದ್ದರು. ಈ ಟಿ ಶರ್ಟ್ ನ ಹಿಂಬದಿ ‘124 ನಾಟೌಟ್’ ಎಂದು ಬರೆಯಲಾಗಿತ್ತು. ಇಂಡಿ ಒಕ್ಕೂಟದ ಪ್ರತಿಭಟನೆ ಬೆನ್ನಲ್ಲೇ ಮಾಧ್ಯಮಗಳು ಟೀ ಶರ್ಟ್ ಮೇಲೆ ಭಾವಚಿತ್ರವಿದ್ದ ಮಹಿಳೆಗಾಗಿ ಹುಡುಕಾಟ ನಡೆಸಿದ್ದವು. ಕೊನೆಗೂ ಆ ಮಹಿಳೆ ಪ್ರತ್ಯಕ್ಷವಾಗಿದ್ದು, ಮಾಧ್ಯಮ ಹೇಳಿಕೆ ನೀಡಿದ್ದಾರೆ. ಇದರಿಂದ ಇಂಡಿ ಒಕ್ಕೂಟಕ್ಕೆ ಮುಖಭಂಗ ಆದಂತಾಗಿದೆ.
ನಾನೊಬ್ಬಳು ಗೃಹಿಣಿ, ನನಗೀಗ 35 ವರ್ಷ. ನನ್ನನ್ನ ರಾಜಕೀಯವಾಗಿ ಬಳಸಿಕೊಂಡಿರೋದು ಬೇಸರ ತಂದಿದೆ. ನನ್ನ ಕುಟುಂಬಕ್ಕೂ ಇದು ಮಾನಸಿಕ ಹಿಂಸೆಯಾಗಿದೆ. ನನ್ನ ಫೋಟೋವನ್ನ ಟೀ ಶರ್ಟ್ ಮೇಲೆ ಮುದ್ರಿಸಲು ಪ್ರಿಯಾಂಕಾ ಗಾಂಧಿ, ರಾಹುಲ್ ಗಾಂಧಿ ಯಾರು? ನನ್ನ ಚಿತ್ರವಿರುವ ಟೀ ಶರ್ಟ್ ಧರಿಸುವ ಹಕ್ಕನ್ನ ಅವರಿಗೆ ಯಾರು ಕೊಟ್ಟರು? ಬೆಳಗ್ಗೆಯಿಂದಲೂ ತುಂಬಾ ಜನ ನನಗೆ ಕರೆ ಮಾಡ್ತಿದ್ದಾರೆ. ಮಾಧ್ಯಮಗಳು ನನ್ನ ಬೆನ್ನುಬಿದ್ದಿವೆ ಅಂತ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಸಿದ್ದರಾಮಯ್ಯನವರ ಕೈ ಬಲಪಡಿಸುವ ಕಡೆಗೆ ನಮ್ಮ ಚಿಂತನೆ ಇರಲಿ: ಅಭಿಮಾನಿಗಳಿಗೆ ರಾಜಣ್ಣ ಭಾವುಕ ಪತ್ರ
ಮತದಾರರ ಪಟ್ಟಿಯಲ್ಲಿ ದೋಷವಿದ್ದರೆ, ಅದನ್ನ ಸರಿಪಡಿಸುವುದನ್ನ ಬಿಟ್ಟು ಯಾಕೆ ದೂಷಿಸಬೇಕು? ಯಾರಾದ್ರೂ ಕಣ್ಮುಚ್ಚಿಕೊಂಡು ಹಾಗೆ ಮಾಡ್ತಾರಾ? ಸರ್ಕಾರದ ದೃಷ್ಟಿಯಲ್ಲಿ ನನಗೆ 124 ವರ್ಷ ವಯಸ್ಸಾಗಿದ್ದರೆ, ವೃದ್ಧಾಪ್ಯ ಪಿಂಚಣಿ ಏಕೆ ಕೊಡ್ತಿಲ್ಲ? ನನ್ನ ಆಧಾರ್‌ನಲ್ಲಿ ಜನ್ಮ ದಿನಾಂಕ 1990 ಇದೆ. ಆದ್ರೆ ವೋಟರ್ ಐಡಿನಲ್ಲಿ 1900 ಅಂತ ದಾಖಲಿಸಲಾಗಿದೆ. ಇದರಿಂದ ನನ್ನನ್ನ 124 ವರ್ಷದ ಮತದಾರರೆಂದು ಪಟ್ಟಿ ಮಾಡಲಾಗಿದೆ. ಕೆಲ ದಿನಗಳ ಹಿಂದಷ್ಟೇ ನನಗೆ ಇದರ ಬಗ್ಗೆ ತಿಳಿಯಿತು. ಇದನ್ನ ಸರಿಪಡಿಸಬೇಕೆಂದು ಆಯೋಗಕ್ಕೆ ಮನವಿ ಮಾಡಿಕೊಳ್ತೇನೆ ಎಂದು ಅಲವತ್ತುಕೊಂಡಿದ್ದಾರೆ.
– ಮತಗಳ್ಳತನ ಆರೋಪ; ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ‍್ಯಾಲಿ
ನವದೆಹಲಿ: ಮತಗಳ್ಳತನ ಆರೋಪ ಮಾಡಿ ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ‍್ಯಾಲಿ ಹೊರಟಿದ್ದ ರಾಹುಲ್ ಗಾಂಧಿ (Rahul Gandhi), ಪ್ರಿಯಾಂಕಾ ಗಾಂಧಿ ಸೇರಿದಂತೆ 30 ಸಂಸದರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಚುನಾವಣಾ ಆಯೋಗದ (Election Commission) ತಟಸ್ಥತೆಯ ವಿರುದ್ಧ ಸಾರ್ವಜನಿಕ ಪ್ರತಿಭಟನೆ ನಡೆಸಲಾಯಿತು. ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂಡಿಯಾ ಒಕ್ಕೂಟದ ಸಂಸದರು, ಸಂಸತ್ ಭವನದಿಂದ ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ‍್ಯಾಲಿ ನಡೆಸಲು ಮುಂದಾಗಿದ್ದರು. ದೆಹಲಿ ಪೊಲೀಸರು ಎಲ್ಲರನ್ನೂ ವಶಕ್ಕೆ ಪಡೆದಿದ್ದಾರೆ. ಇದನ್ನೂ ಓದಿ: ರಾಹುಲ್ ಗಾಂಧಿಗೆ ನೋಟಿಸ್ ಕೊಡೋಕೆ ಚುನಾವಣೆ ಆಯೋಗ ಯಾರು: ಡಿಕೆಶಿ ಪ್ರಶ್ನೆ
ಸಂಸತ್ತಿನ ಕಟ್ಟಡದ ಹೊರಗೆ ರಾಜಕಾರಣಿಗಳು ಮತ್ತು ಪಕ್ಷದ ಕಾರ್ಯಕರ್ತರು ಜಮಾಯಿಸಿದ್ದರು. ಹಲವರು ರಸ್ತೆಗಳಲ್ಲಿ ಕುಳಿತಿದ್ದರು. ಧ್ವಜಗಳು ಮತ್ತು ಬ್ಯಾನರ್‌ಗಳನ್ನು ಹಿಡಿದು ಘೋಷಣೆ ಕೂಗುತ್ತಾ ಬ್ಯಾರಿಕೇಡ್ ತಳ್ಳಲು ಮುಂದಾದರು.
– ಪಹಲ್ಗಾಮ್ ದಾಳಿ ನಡೆದಿದ್ದೇಕೆ? ಈಗಲೂ ನನ್ನನ್ನು ಕಾಡುತ್ತಿದೆ; ಸಂಸದೆ ಕಳವಳ
ನವದೆಹಲಿ: ಆಪರೇಷನ್ ಸಿಂಧೂರ (Operation Sindoor) ಕಾರ್ಯಾಚರಣೆಯಲ್ಲಿ ಸೇನೆಯು ದೇಶಕ್ಕಾಗಿ ಹೋರಾಡಿತು. ಆದ್ರೆ ಅದರ ಕ್ರೆಡಿಟ್ ಅನ್ನು ಪ್ರಧಾನಿ ಮೋದಿ ಬಯಸುತ್ತಿದ್ದಾರೆ. ನಿಮಗೆ ದೊಡ್ಡ ನಮಸ್ಕಾರ ಅಂತ ಸಂಸದೆ ಪ್ರಿಯಾಂಕಾ ಗಾಂಧಿ (Priyanka Gandhi) ವಾದ್ರಾ ತಿವಿದರು.
ಪಹಲ್ಗಾಮ್ ಭಯೋತ್ಪಾದಕ ದಾಳಿ (Pahalgam Terror Attack) ಮತ್ತು ಆಪರೇಷನ್ ಸಿಂಧೂರ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ನೀವು 11 ವರ್ಷದಿಂದ ಅಧಿಕಾರದಲ್ಲಿದ್ದೀರಿ. ನಿನ್ನೆ ಗೌರವ್ ಗೊಗೊಯ್ ಅವರು ಜವಾಬ್ದಾರಿ ಬಗ್ಗೆ ಮಾತನಾಡುತ್ತಿದ್ದಾಗ ರಾಜನಾಥ್ ಸಿಂಗ್ ತಲೆಯಾಡಿಸುತ್ತಿದ್ದರು, ಗೃಹ ಸಚಿವರು ನಗುತ್ತಿದ್ದರು. ಮುಂಬೈ ದಾಳಿ ನಡೆದಾಗ ಮನಮೋಹನ್ ಸಿಂಗ್ ಸರ್ಕಾರ ಏನೂ ಮಾಡಲಿಲ್ಲ ಅಂತ ಹೇಳಿದ್ರು. ಆದ್ರೆ ಅವರಿಗೆ ನೆನಪಿಲ್ಲ ಅನ್ನಿಸುತ್ತೆ, ದಾಳಿ ನಡೆಯುತ್ತಿದ್ದಾಗಲೇ ಮೂವರು ಉಗ್ರರು ಹತರಾದರು, ಬದುಕುಳಿದ ಒಬ್ಬನನ್ನು ಹಿಡಿದು ಗಲ್ಲಿಗೇರಿಸಲಾಯಿತು. ಆ ಸಂದರ್ಭದಲ್ಲಿ ಮಹಾರಾಷ್ಟ್ರದ ಸಿಎಂ, ದೇಶದ ಗೃಹ ಸಚಿವರಾಗಿದ್ದವರು ರಾಜೀನಾಮೆ ಕೊಟ್ಟರು. ಆದ್ರೆ ಉರಿ-ಪುಲ್ವಾಮಾ ದಾಳಿ ರಾಜನಾಥ್ ಸಿಂಗ್ ಗೃಹ ಸಚಿವರಾಗಿದ್ದರು, ಈಗ ರಕ್ಷಣಾ ಸಚಿವರಾಗಿದ್ದಾರೆ. ಅಮಿತ್ ಶಾ ಅವರ ಅಧಿಕಾರವಧಿಯಲ್ಲಿ ಮಣಿಪುರ ಹೊತ್ತಿ ಉರಿಯುತ್ತಿದೆ. ದೆಹಲಿಯಲ್ಲಿ ಗಲಭೆಗಳು ನಡೆಯುತ್ತಿವೆ. ಅದೇ ಹಾದಿಯಾಗಿ ಪಹಲ್ಗಾಮ್ ದಾಳಿಯೂ ನಡೆಯಿತು. ರಾಜೀನಾಮೆ ಕೊಡದೇ ಈಗಲೂ ಗೃಹಸಚಿವರಾಗಿಯೇ ಇದ್ದಾರೆ ಎಂದು ಕುಟುಕಿದರು.
#WATCH | Union Home Minister Amit Shah says, “I remember one morning during breakfast, I saw Salman Khurshid crying on the TV. He was coming out of Sonia Gandhi’s residence… He said that Sonia Gandhi was sobbing at the Batla House incident. She should have cried for Shaheed… pic.twitter.com/aaX5d90dmh
ಪಹಲ್ಗಾಮ್ ದಾಳಿಯನ್ನ ಖಂಡಿಸಲು ಇಡೀ ದೇಶವೇ ಒಗ್ಗಟ್ಟಾಗಿ ನಿಂತಿತು. ದೇಶದ ಮೇಲೆ ದಾಳಿ ನಡೆದರೆ ನಾವೆಲ್ಲರೂ ಸರ್ಕಾರದ ಜೊತೆ ಒಟ್ಟಾಗಿ ನಿಲ್ಲುತ್ತೇವೆ ಅನ್ನೋದನ್ನ ತೋರಿಸಿಕೊಟ್ಟಿತು. ಅದರಂತೆ ಆಪರೇಷನ್ ಸಿಂಧೂರಲ್ಲಿ ಸೇನೆಯು ಧೈರ್ಯದಿಂದ ಹೋರಾಡಿತು. ಆದ್ರೆ ಅದರ ಕ್ರೆಡಿಟ್ ಮೋದಿ ಬಯಸುತ್ತಿದ್ದಾರೆ ಎಂದು ಅಮಾಧಾನ ಹೊರಹಾಕಿದರು.
ಈಗಲೂ ನನ್ನನ್ನು ಕಾಡುತ್ತಿದೆ:
ಸಚಿವರು ಎಲ್ಲಾ ಅಂಶಗಳನ್ನು ನೀಡಿದ್ರು, ಆದ್ರೆ ಪಹಲ್ಗಾಮ್ ದಾಳಿ ಹೇಗೆ ಮತ್ತು ಏಕೆ ಆಯಿತು? ಈ ಪ್ರಶ್ನೆ ನನ್ನನ್ನ ಇನ್ನೂ ಕಾಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಜನ ಸರ್ಕಾರವನ್ನ ನಂಬಿ ಪಹಲ್ಗಾಮ್‌ಗೆ ಹೋಗಿದ್ದರು. ಆದ್ರೆ ಸರ್ಕಾರ ಏನು ಮಾಡಿತು? ದಾಳಿಗೆ ಯಾರು ಹೊಣೆ? ನಾಗರಿಕರ ಸುರಕ್ಷತೆ ರಕ್ಷಣಾ ಸಚಿವರ ಜವಾಬ್ದಾರಿಯಲ್ಲವೇ, ಗೃಹ ಸಚಿವರ ಜವಾಬ್ದಾರಿಯಲ್ಲವೇ? ಎಂದು ಪ್ರಶ್ನೆಗಳ ಮಳೆ ಸುರಿಸಿದರಲ್ಲೇ ಟಿಆರ್‌ಎಫ್ ಭಯಾನಕ ದಾಳಿಯನ್ನ ಹೇಗೆ ಯೋಜಿಸುತ್ತಿದೆ ಅನ್ನೋದರ ಪರಿಕಲ್ಪನೆ ಸರ್ಕಾರದ ಯಾವುದೇ ಸಂಸ್ಥೆಗೆ ಇಲ್ಲದಂತಾಗಿದೆ. ಇದು ಏಜೆನ್ಸಿಗಳ ವೈಫಲ್ಯ ಅಲ್ಲವೇ? ಖಂಡಿತಾ ಇದು ಭದ್ರತಾ ಸಂಸ್ಥೆಗಳ ಬಹುದೊಡ್ಡ ವೈಫಲ್ಯ ಎಂದು ಆಕ್ರೋಶ ಹೊರಹಾಕಿದರು.
– ಸಿಎಂ ಆಗಲು ಯೋಗ ಮಾತ್ರ ಅಲ್ಲ ಯೋಗ್ಯತೆ ಬೇಕು: ಡಿಕೆಶಿಗೆ ಟಾಂಗ್
ಬೆಂಗಳೂರು: ಪ್ರಿಯಾಂಕಾ ಗಾಂಧಿಯನ್ನು (Priyanka Gandhi) ರಾಣಿ ಚೆನ್ನಮ್ಮಗೆ (Chennamma) ಹೋಲಿಸುವ ಮೂಲಕ ಚೆನ್ನಮ್ಮಗೆ ಅಪಮಾನ ಮಾಡಲಾಗಿದೆ ಎಂದು ಪರಿಷತ್ ಸದಸ್ಯ ಸಿ.ಟಿ ರವಿ (CT Ravi) ಮಲ್ಲಿಕಾರ್ಜುನ ಖರ್ಗೆ ವಿರುದ್ಧ ಕಿಡಿಕಾರಿದ್ದಾರೆ.
ಪ್ರಿಯಾಂಕಾ ಗಾಂಧಿಯನ್ನು ರಾಣಿ ಚೆನ್ನಮ್ಮಗೆ ಹೋಲಿಸಿದ ವಿಚಾರವಾಗಿ ಬಿಜೆಪಿ (BJP) ಕಚೇರಿಯಲ್ಲಿ ಮಾತನಾಡಿದ ಅವರು, ಹೊಗಳುವ ಭರದಲ್ಲಿ ಮಾನಸಿಕ ಗುಲಾಮಗಿರಿ ತೋರಿಸಿದ್ದಾರೆ. ಇದು ಭಟ್ಟಂಗಿತನದ ಹೇಳಿಕೆ. ರಾಷ್ಟ್ರೀಯ ವ್ಯಕ್ತಿತ್ವಕ್ಕೂ ಈ ಮೂಲಕ ಅವಮಾನ ಮಾಡಲಾಗಿದೆ. ನಾಡಿನ ಜನತೆಗೆ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಕ್ಷಮೆ ಕೋರಬೇಕು ಎಂದು ಆಗ್ರಹಿಸಿದರು. ಇದನ್ನೂ ಓದಿ: ಸಭೆಯಲ್ಲಿ ನನಗೆ ಅಪಮಾನ ಮಾಡಿದ್ದಾರೆ – ರಾಧಾಮೋಹನ್ ದಾಸ್ ವಿರುದ್ಧ ರಾಮುಲು ಗರಂ
ಡಿಕೆಶಿ ಸಿಎಂ ಆಗುವ ಕುರಿತು ಜೈನಗುರು ಭವಿಷ್ಯವಾಣಿ ನುಡಿದ ವಿಚಾರವಾಗಿ ಪ್ರತಿಕ್ರಿಯಿಸಿದ ಅವರು, ಯೋಗ ಇದ್ದರೆ ಯಾರು ಬೇಕಾದರೂ ಸಿಎಂ ಆಗಬಹುದು. ಆದರೆ ಯೋಗ್ಯತೆ ಇದ್ದವರು ಮಾತ್ರ ಒಳ್ಳೆಯ ಮುಖ್ಯಮಂತ್ರಿ ಆಗುತ್ತಾರೆ. ಸಿಎಂ ಆಗಲು ಯೋಗ್ಯತೆ ಬೇಕು ಎಂದು ಡಿಸಿಎಂ ಡಿಕೆ ಶಿವಕುಮಾರ್‌ಗೆ ಟಾಂಗ್ ಕೊಟ್ಟರು. ಇದನ್ನೂ ಓದಿ: ಸಿದ್ದಗಂಗಾ ಶ್ರೀಗಳ ಪ್ರತಿಮೆ ನಿರ್ಮಾಣಕ್ಕೆ ಬಜೆಟ್‌ನಲ್ಲಿ ಅನುದಾನ ಮೀಸಲು: ಪರಮೇಶ್ವರ್
ಕಾಂಗ್ರೆಸ್ ಅಧಿವೇಶನದಲ್ಲಿ ಗಾಂಧೀಜಿ ಸ್ಮರಣೆ ಮಾಡಿದ್ದಾರೆ. ಕಾಂಗ್ರೆಸ್ ವಿಸರ್ಜಿಸಿ ಎಂಬ ಗಾಂಧಿ ಮಾತನ್ನು ಅವರೆಲ್ಲ ನೆನಪಿಸಿಕೊಳ್ಳಬೇಕಿತ್ತು. ಸ್ವಾತಂತ್ರ‍್ಯಾ ನಂತರ ಕಾಂಗ್ರೆಸ್‌ನವರು ಭ್ರಷ್ಟಾಚಾರ ಮಾಡಿ ಎಂದು ಗಾಂಧಿ ಹೇಳಲಿಲ್ಲ. ಭ್ರಷ್ಟಾಚಾರಕ್ಕೆ ಸಮಾವೇಶದಲ್ಲಿ ಕಾಂಗ್ರೆಸ್‌ನವರು ಪ್ರಾಯಶ್ಚಿತ್ತ ಮಾಡಿಕೊಳ್ಳಬೇಕಿತ್ತು. ಅಂಬೇಡ್ಕರ್‌ರನ್ನ ಚುನಾವಣೆಯಲ್ಲಿ ಸೋಲಿಸಿ ಸಮಾವೇಶದಲ್ಲಿ ಜಪ ಮಾಡಿದ್ದಾರೆ. ಅಂಬೇಡ್ಕರ್‌ಗೆ ಕಾಂಗ್ರೆಸ್ ಮಾಡಿದ ಎಲ್ಲಾ ಮೋಸಕ್ಕೂ ಪ್ರಾಯಶ್ಚಿತ್ತ ಮಾಡಿಕೊಳ್ಳಬೇಕಿತ್ತು. ಅಂಬೇಡ್ಕರ್ ಮನೆಯನ್ನು ಸ್ಮಾರಕ ಮಾಡಿದ್ದು ಬಿಜೆಪಿ. ಅವರ ಅಂತ್ಯಸಂಸ್ಕಾರ ಜಾಗದಲ್ಲಿ ಬಿಜೆಪಿ ಪ್ರತಿಮೆ ನಿರ್ಮಿಸುತ್ತಿದೆ. ಅಂಬೇಡ್ಕರ್ ಕರ್ಮಭೂಮಿ ಅಭಿವೃದ್ಧಿ ಪಡಿಸುತ್ತಿರುವುದು ಬಿಜೆಪಿ. ತುರ್ತು ಪರಿಸ್ಥಿತಿ ಹೇರಿದ ಇಂದಿರಾಗಾಂಧಿ, ಪ್ರಜಾಪ್ರಭುತ್ವವನ್ನು ಆಗ ಅಪಾಯಕ್ಕೆ ದೂಡಲಾಯಿತು ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕಾಡು ರಕ್ಷಕನಿಂದಲೇ ಆನೆ ದಂತ ಸಾಗಾಟ – ಫಾರೆಸ್ಟ್ ವಾಚರ್, ಸಂಬಂಧಿ ಬಂಧನ
ಸಿದ್ದರಾಮಯ್ಯ ಎದುರೇ ಡಿಕೆಶಿ ಸಿಎಂ ಆಗಲಿ ಎಂಬ ಘೋಷಣೆ ಮೊಳಗಿಸುತ್ತಾರೆ. ಸಿದ್ದರಾಮಯ್ಯಗೆ ಇದು ದೊಡ್ಡ ಅಪಮಾನ. ಇದಕ್ಕಿಂತ ದೊಡ್ಡ ಅಪಮಾನ ಇಲ್ಲ. ರಾಹುಲ್ ಗಾಂಧಿ, ಮನಮೋಹನ್ ಸಿಂಗ್ ಸಂಪುಟ ನಿರ್ಣಯದ ಪ್ರತಿ ಹರಿದು ಹಾಕಿದ್ದರು. ಕರ್ನಾಟಕದಲ್ಲಿ ಏನು ಕತೆ ಇದು? ಸಿದ್ದರಾಮಯ್ಯ ಅವರನ್ನು ಎದುರು ಕೂರಿಸಿಕೊಂಡೇ ಅಪಮಾನ ಮಾಡಿದ್ದಾರಲ್ಲ. ಸಿದ್ದರಾಮಯ್ಯ ಸ್ವಾಭಿಮಾನಿ ಎಂದು ನಾನು ಅಂದುಕೊಂಡಿದ್ದೆ. ಅವರದ್ದು ಸ್ವಾಭಿಮಾನದ ರಾಜಕಾರಣ ಅಂದುಕೊಂಡಿದ್ದೆ. ನನ್ನಂಥವನು ಸಿಎಂ ಆಗಿ ಹೀಗೆಲ್ಲ ಆಗಿದ್ದರೆ ಒಂದು ಕ್ಷಣವೂ ನಾನು ಅಪಮಾನ ಸಹಿಸುತ್ತಿರಲಿಲ್ಲ. ಸಿದ್ದರಾಮಯ್ಯ ಅದು ಹೇಗೆ ಈ ಅಪಮಾನ ಸಹಿಸಿಕೊಂಡರೋ ಗೊತ್ತಿಲ್ಲ. ಇದು ನನಗೆ ಈಗಲೂ ಅರ್ಥವಾಗುತ್ತಿಲ್ಲ ಎಂದು ಟೀಕಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿರಲು ನಾಲಾಯಕ್: ಜೆಡಿಎಸ್ ಕಿಡಿ
– ಮೋದಿ ಪೂಜಿಸೋದು ಗಾಂಧಿ ಕೊಂದ ಗೋಡ್ಸೆಯನ್ನೇ
– ನಾವು ಬೆಂಕಿ ಇದ್ದಂತೆ, ನಮ್ಮನ್ನ ಕೆಣಕ್ಕಿದ್ರೆ ಸುಟ್ಟು ಹೋಗ್ತೀರಿ
– ಬಿಜೆಪಿ, ಆರ್ಎಸ್ಎಸ್ ವಿರುದ್ಧ ಖರ್ಗೆ ತೀವ್ರ ವಾಗ್ದಾಳಿ
ಬೆಳಗಾವಿ: ಬಿಜೆಪಿ, ಆರ್ಎಸ್ಎಸ್ (BJP, RSS) ವಿರುದ್ಧ ಹೋರಾಡುವ ಶಕ್ತಿ ಇರುವ ಹೆಣ್ಣು ಪ್ರಿಯಾಂಕಾ ಗಾಂಧಿ. ಅವರು ನೋಡಲು ಮೆತ್ತಗೆ ಕಾಣಬಹುದು, ಸ್ವಲ್ಪ ಮುಟ್ಟಿ ನೋಡಿದ್ರೆ ಗೊತ್ತಾಗುತ್ತೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರು ಕಾಂಗ್ರೆಸ್ ಸಂಸದೆಯ ಗುಣಗಾನ ಮಾಡಿದರು.
1924ರಲ್ಲಿ ಮಹಾತ್ಮ ಗಾಂಧೀಜಿ ಅಧ್ಯಕ್ಷತೆಯಲ್ಲಿ ನಡೆದ ಕಾಂಗ್ರೆಸ್ ಅಧಿವೇಶನಕ್ಕೆ ಬೆಳಗಾವಿ ಸಾಕ್ಷಿಯಾಗಿತ್ತು. ಈಗ ಅಧಿವೇಶನದ ಶತಮಾನೋತ್ಸವದ ಭಾಗವಾಗಿ ಸಮಾವೇಶ ನಡೆಯುತ್ತಿದ್ದು, ಇದರ ವೇದಿಕೆ ಕಾರ್ಯಕ್ರಮದಲ್ಲಿ ಖರ್ಗೆ ಅವರು ಮಾತನಾಡಿದರು. ಇದನ್ನೂ ಓದಿ: ಐತಿಹಾಸಿಕ ಸಮಾವೇಶ – ಬೆಳಗಾವಿ ಸುವರ್ಣಸೌಧದ ಎದುರು ಗಾಂಧಿ ಪ್ರತಿಮೆ ಲೋಕಾರ್ಪಣೆ
ಬಿಜೆಪಿ, ಆರ್ಎಸ್ಎಸ್ ವಿರುದ್ಧ ಹೋರಾಡುವ ಶಕ್ತಿ ಇರುವ ಹೆಣ್ಣು ಪ್ರಿಯಾಂಕಾ ಗಾಂಧಿ (Priyanka Gandhi ). ಅವರು ನೋಡಲು ಮೆತ್ತಗೆ ಕಾಣಬಹುದು, ಸ್ವಲ್ಪ ಮುಟ್ಟಿನೋಡಿದ್ರೆ ಗೊತ್ತಾಗುತ್ತೆ. ತಂದೆ ಕಳೆದುಕೊಂಡು ಬೆಳೆದು ಬಂದವರು ಪ್ರಿಯಾಂಕಾ, ಎಂದಿಗೂ ತಮ್ಮ ಕೊರತೆ ತೋರಿಸಲಿಲ್ಲ. ಆದ್ರೆ ಮೋದಿ ಅಮಿತ್ ಶಾ ಅವರ ಚಮಚಾಗಳು ಪ್ರಿಯಾಂಕಾಗೆ ಬೈತಾರೆ. ಹಾಗೆ ಮಾತನಾಡೋದಕ್ಕೆ ಮುಂಚೆ, ನಾವು ಮಾಡಿದ್ದನ್ನು ಅವರು ಮಾಡಿತೋರಿಸಲಿ ಎಂದು ಸವಾಲು ಹಾಕಿದರು. ಇದನ್ನೂ ಓದಿ: ರಾಜ್ಯದಲ್ಲಿ ತೆಂಗು ಬೆಳೆಗಾರರ ಸಮಾವೇಶ – ಅಡಿಕೆ, ಕೊಬ್ಬರಿ ಬೆಳೆಗಾರರ ಸಮಸ್ಯೆ ಪರಿಹಾರದ ಬಗ್ಗೆ ಸಚಿವರ ಚರ್ಚೆ
ಸೋನಿಯಾ ಗಾಂಧಿ ಅವ್ರ ಕೃಪೆಯಿಂದ ಅಧ್ಯಕ್ಷನಾಗಿದ್ದೇನೆ:
ಹೊಸ ವರ್ಷದ ʻಜೈ ಬಾಪು, ಜೈ ಭೀಮ್, ಜೈ ಸಂವಿಧಾನʼ ಕಾರ್ಯಕ್ರಮ ಬೆಳಗಾವಿಯಲ್ಲಿ ನಡೆಯುತ್ತಿದೆ. ವಿರೋಧಿ ಬಣದವರು ಕಾಂಗ್ರೆಸ್ ವಿರುದ್ಧ ಟೀಕೆ ಮಾಡ್ತಿದ್ದಾರೆ. 2004 ರಲ್ಲಿ ಸೋನಿಯಾ ಗಾಂಧಿ ದೇಶದ ಪ್ರಧಾನಿಯಾಗಬೇಕಿತ್ತು. ಆದರೆ ಅವರು ಅಧಿಕಾರ ಸ್ವೀಕರಿಸಿದೇ ಮನಮೋಹನ್ ಸಿಂಗ್‌ಗೆ ತ್ಯಾಗ ಮಾಡಿದರು. ಸೋನಿಯಾ ಗಾಂಧಿ ಅವರ ಕೃಪೆಯಿಂದ ನಾನು ಎಐಸಿಸಿ ಅಧ್ಯಕ್ಷನಾಗಿದ್ದೇನೆ. ಈಗ ನಾವು ಅಂತಹ ತ್ಯಾಗ ಮಾಡಲು ಸಿದ್ಧರಿದ್ದೀವಾ? ಅಂತ ಪ್ರಶ್ನೆ ಮಾಡಿದರು. ಇದನ್ನೂ ಓದಿ: Kotekar Bank Robbery | ಬ್ಯಾಂಕ್‌ನಲ್ಲಿ ಚಿನ್ನ ದೋಚಲು ನಮಾಜ್ ಟೈಂ ಸೂಚಿಸಿದ್ದೇ ಆ ಸ್ಥಳೀಯ ವ್ಯಕ್ತಿ – ರಹಸ್ಯ ಸ್ಫೋಟ
ಇಂದಿರಾ ಗಾಂಧಿ, ಸೋನಿಯಾ ಗಾಂಧಿ, ರಾಜೀವ್ ಗಾಂಧಿ, ಮನಮೋಹನ್ ಸಿಂಗ್ ದೇಶಕ್ಕಾಗಿ ಬಹಳಷ್ಟು ತ್ಯಾಗ ಮಾಡಿದ್ದಾರೆ. ಆದ್ರೂ ಬಿಜೆಪಿ ನಾವು ಕೊಟ್ಟ ಕಾರ್ಯಕ್ರಮಗಳನ್ನ ಟೀಕೆ ಮಾಡಿ, ನಮನ್ನ ಹೀಯಾಳಿಸಿ ಅಧಿಕಾರಕ್ಕೆ ಬಂದಿದೆ. ಬಿಜೆಪಿ ಅಧಿಕಾರದಲ್ಲೇ ಇದ್ದರೂ ಸುಮ್ಮನೆ ಮಾತನಾಡುತ್ತಾರೆ ಹೊರತು ಯಾರಿಗೆ ಏನೂ ಮಾಡಿಲ್ಲ. ಏಕೆಂದರೆ ಈ ದೇಶದ ಬಡವರ ಬಗ್ಗೆ ಬಿಜೆಪಿ ಅವರಿಗೆ ಚಿಂತೆ ಇಲ್ಲ, ರೈತರ ಬಗ್ಗೆ ಚಿಂತೆ ಇಲ್ಲ. ಮೋದಿ ಈ ಬಗ್ಗೆ ಎಂದಿಗೂ ಗಮನ ಕೊಟ್ಟಿಲ್ಲ, ಕೋಡೋದೂ ಇಲ್ಲ. ಬಿಜೆಪಿ, ಆರ್‌ಎಸ್‌ಎಸ್, ಹಿಂದೂಮಹಾಸಭಾ ಯಾವಾಗಲೂ ದಲಿತ ವಿರೋಧಿಗಳು. ಆದ್ರೆ ಕಾಂಗ್ರೆಸ್ ಯಾವತ್ತಿಗೂ ಬಡವರ ಪರ ಇರುತ್ತದೆ ಎಂದು ನುಡಿದರು.
ಗಾಂಧಿಗೆ ಗುಂಡು ಹಾರಿಸಿ ಕೊಂದಿದ್ದು ಯಾರು?
ಮಹಾತ್ಮ ಗಾಂಧೀಜಿಗೆ ಗುಂಡು ಹಾರಿಸಿ ಕೊಂದದ್ದು ಯಾರು? ಆ ಗೋಡ್ಸೆ ಸಾರ್ವಕರ್ ಶಿಷ್ಯ. ಗಾಂಧಿ ಗುಜರಾತ್‌ನವರೇ ಆದರೂ ಮೋದಿಗೆ ಗೌರವ ಇಲ್ಲ. ಏಕೆಂದರೆ ಮೋದಿ ಪೂಜೆ ಮಾಡೋದು ಗಾಂಧಿಗೆ ಗುಂಡು ಹಾರಿಸಿದ ಗೋಡ್ಸೆಯನ್ನೇ ಎಂದು ಕುಟುಕಿದರು.
ಅಂಬೇಡ್ಕರ್ ಅವರನ್ನು ಆಯ್ಕೆ ಮಾಡಿದ್ದು ಕಾಂಗ್ರೆಸ್, ಆದ್ರೆ ಸಂವಿಧಾನ ಸುಟ್ಟವರು, ಅಂಬೇಡ್ಕರ್ ಪೋಟೋ ಸುಟ್ಟವರು ಬಿಜೆಪಿಯವರು. ನಮ್ಮನ್ನ ಕೆಣಕಲು ಹೋಗಬೇಡಿ, ನಾವು ಬೆಂಕಿ ಇದ್ದಂತೆ, ನಮ್ಮನ್ನ ಕೆಣಕ್ಕಿದ್ರೆ ನೀವು ಸುಟ್ಟು ಹೋಗ್ತೀರಿ ಎಂದು ಎಚ್ಚರಿಕೆ ಕೊಟ್ಟ ಖರ್ಗೆ ಅವರು, ಈ ದೇಶದ ತಿರಂಗಾ ಆರ್‌ಎಸ್‌ಎಸ್ ಕಚೇರಿ ಮೇಲೆ ಇಂದಿಗೂ ಹಾರಿಸಿಲ್ಲ. ಈಗ ಸಂವಿಧಾನ ಅಂತಾರೆ. ಸಂವಿಧಾನ ಸುಟ್ಟೋರು, ಮುಗಿಸೋರು ಬಿಜೆಪಿಯವರಾದ್ರೆ, ಸಂವಿಧಾನವನ್ನ ಎಂದಿಗೂ ಕಾಪಾಡುವವರು ಕಾಂಗ್ರೆಸ್‌ನವರು ಎಂದು ಹೇಳಿದರು.
ಬೆಳಗಾವಿ: ಮಹಾತ್ಮಾ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ 1924ರಲ್ಲಿ ಬೆಳಗಾವಿಯಲ್ಲಿ ಜರುಗಿದ ಕಾಂಗ್ರೆಸ್ ಅಧೀವೇಶನದ ಶತಮಾನೋತ್ಸವದ ಸವಿನೆನಪಿಗಾಗಿ ಇಲ್ಲಿನ ಸುವರ್ಣ ವಿಧಾನಸೌಧದ ಆವರಣದಲ್ಲಿ ಮಹಾತ್ಮಾ ಗಾಂಧೀಜಿಯವರ ಬೃಹತ್ ಪ್ರತಿಮೆಯನ್ನಿಂದು (Gandhi Statue) ಮಂಗಳವಾರ ರಾಜ್ಯಸಭೆಯ ಪ್ರತಿಪಕ್ಷದ ನಾಯಕ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚರಕ ತಿರುಗಿಸುವ ಮೂಲಕ ಲೋಕಾರ್ಪಣೆಗೊಳಿಸಿದರು.
ಸಮಾರಂಭದಲ್ಲಿ ಕಾಂಗ್ರೆಸ್ ನಾಯಕಿ, ಲೋಕಸಭೆ ಸದಸ್ಯೆ ಪ್ರಿಯಾಂಕಾ ಗಾಂಧಿ, ಮುಖ್ಯಮಂತ್ರಿ ಸಿದ್ಧರಾಮಯ್ಯ (Siddaramaiah) ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದು, ಮುಖ್ಯ ಅತಿಥಿಗಳಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ (DK Shivakumar), ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಯು.ಟಿ ಖಾದರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಪಾಲ್ಗೊಂಡಿದ್ದರು.
ಶ್ರೀರಾಮನಂತ ಮಗ ಇರಬೇಕು:
ಪ್ರತಿಮೆ ಅನಾವರಣಗೊಳಿಸಿದ ಬಳಿಕ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಅವರು, ಗಾಂಧೀಜಿ ಹೇಳಿದ ಹೇಳಿದ ರಾಮರಾಜ್ಯ ಹಾಗೂ ಗ್ರಾಮ ರಾಜ್ಯ ಆಗಬೇಕಾದರೆ, ಪ್ರತಿ ಮನೆಯಲ್ಲಿ ತಂದೆಯ ಮಾತಿಗೆ ಕಟ್ಟು ಬಿದ್ದು ಎಲ್ಲಾ ಸೌಕರ್ಯ ಬಿಟ್ಟು ಕಾಡಿಗೆ ಹೊರಟ ಶ್ರೀ ರಾಮನಂತ ಮಗ ಇರಬೇಕು. ಎಲ್ಲ ಸುಖ ತೊರೆದು ಅಣ್ಣನ ಜೊತೆ ಕಾಡಿಗೆ ಹೊರಟ ಲಕ್ಷ್ಮಣ ನಂತ ಸಹೋದರ ಇರಬೇಕು. ಕಷ್ಟವಾದರೂ ನನ್ನ ಪತಿಯ ಜೊತೆ ಹೋಗುತ್ತೇನೆ ಎಂದು ಹೊರಟ ಸೀತಾ ಮಾತೆಯಂತ ಮಡದಿ ಇರಬೇಕು. ರಾಮನ ಪಾದುಕೆ ಇಟ್ಟು ಪೂಜಿಸಿದ ಭರತನಂತ ಸಹೋದರನಿರಬೇಕು. ಆಗ ದೇಶ ʻಗ್ರಾಮ ರಾಜ್ಯ – ರಾಮ ರಾಜ್ಯʼ ಎರಡೂ ಆಗಲಿದೆ ಎಂದು ನುಡಿದರು.
ನವದೆಹಲಿ: ಚುನಾವಣೆಯಲ್ಲಿ ಗೆದ್ದರೆ ಪ್ರಿಯಾಂಕ ಕೆನ್ನಯಂತೆ (Priyanka Gandhi Cheeks) ನಯವಾದ ರಸ್ತೆಗಳನ್ನು ನಿರ್ಮಿಸುತ್ತೇನೆ ಎಂದು ಕಲ್ಕಾಜಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ (Ramesh Bidhuri) ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.
ನವದೆಹಲಿ ವಿಧಾನಸಭೆ ಚುನಾವಣೆ ಪ್ರಯುಕ್ತ ಪ್ರಚಾರ ನಡೆಸಿದ ವೇಳೆ ಈ ಹೇಳಿಕೆ ನೀಡಿದ್ದಾರೆ. ಬಿಹಾರದಲ್ಲಿ ಹೇಮಾಮಾಲಿನಿಯ ಕೆನ್ನೆಯಂತೆ ರಸ್ತೆಗಳನ್ನು ಸುಗಮಗೊಳಿಸುವುದಾಗಿ ಲಾಲು ಹೇಳಿದರು. ಆದರೆ ಲಾಲು ಸುಳ್ಳು ಹೇಳಿದ್ದರು. ನಾನು ನಿಮಗೆ ಭರವಸೆ ನೀಡುತ್ತೇನೆ. ಓಖ್ಲಾ ಮತ್ತು ಸಂಗಮ್ ವಿಹಾರ್‌ನಲ್ಲಿ ನಿರ್ಮಿಸಿರುವಂತೆ, ಕಲ್ಕಾಜಿಯಲ್ಲೂ ಪ್ರಿಯಾಂಕ ಗಾಂಧಿಯವರ ಕೆನ್ನಯಂತಹ ರಸ್ತೆಗಳನ್ನು ನಿರ್ಮಿಸುತ್ತೇನೆ ಎಂದರು. ಸದ್ಯ ಈ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡಿದೆ. ಇದನ್ನೂ ಓದಿ: ದರ ಏರಿಕೆ; ಟಿಕೆಟ್ ತೆಗೆದುಕೊಳ್ಳದೇ ಬಸ್‌ನಲ್ಲಿ ಪ್ರಯಾಣಿಸಿ ವಾಟಾಳ್ ಪ್ರತಿಭಟನೆ
ಪ್ರಿಯಾಂಕಾ ಗಾಂಧಿ ಬಗ್ಗೆ ರಮೇಶ್ ಬಿಧುರಿ ಅವರ ಹೇಳಿಕೆ ನಾಚಿಕೆಗೇಡಿನ ಸಂಗತಿ ಮಾತ್ರವಲ್ಲದೆ ಮಹಿಳೆಯರ ಬಗ್ಗೆ ಅವರ ಅಸಹ್ಯ ಮನಸ್ಥಿತಿಯನ್ನು ತೋರಿಸುತ್ತದೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ. ಬಳಿಕ ಮತ್ತೊಮ್ಮೆ ಸ್ಪಷ್ಟನೆ ನೀಡಿದ ಬಿಧುರಿ, ಹೇಮಾ ಮಾಲಿನಿ ಕೂಡ ಮಹಿಳೆಯೇ. ತಪ್ಪು ಮಾಡಿದವರು ಮೊದಲು ಕ್ಷಮೆ ಕೇಳಲಿ. ಅವರು ಸರಳ ಕುಟುಂಬದಿಂದ ಬಂದವರು. ಕಾಂಗ್ರೆಸ್ ಮೊದಲು ಸರಿದಾರಿಗೆ ತರಲಿ. 140 ಕೋಟಿ ಜನ ಸಾಮಾನ್ಯರಿದ್ದಾರೆ ಅಲ್ಲವೇ? ಹೇಮಾ ಮಾಲಿನಿ ಅವರ ವಿರುದ್ಧ ಕಾಮೆಂಟ್ ಮಾಡಿದಾಗ ಅವರು ಮಹಿಳೆ ಅಲ್ಲ ಎಂದರ್ಥನಾ ಎಂದು ಪ್ರಶ್ನಿಸಿದ್ದಾರೆ. ಇದನ್ನೂ ಓದಿ: ಸ್ವಾಮಿ ಅವಧೇಶಾನಂದ ಗಿರಿ, ಸದ್ಗುರು ಭೇಟಿಯಾದ ಅಮಿತ್ ಶಾ
ಮುಂಬೈ: ಕೇರಳವು ಮಿನಿ ಪಾಕಿಸ್ತಾನವಾಗಿದೆ (Pakistan) ಎಂದು ಹೇಳುವ ಮೂಲಕ ಮಹಾರಾಷ್ಟ್ರದ ಸಚಿವ ನಿತೀಶ್ ರಾಣೆ (Nitesh Rane) ವಿವಾದ ಸೃಷ್ಟಿಸಿದ್ದಾರೆ. ಸಚಿವರ ಹೇಳಿಕೆ ರಾಜಕೀಯ ಕೋಲಾಹಲಕ್ಕೆ ಕಾರಣವಾಗಿದೆ.
ಪುಣೆ ಜಿಲ್ಲೆಯ ಪುರಂದರ ತಾಲೂಕಿನಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಸಚಿವ, ಕೇರಳವು (Kerala) ಮಿನಿ ಪಾಕಿಸ್ತಾನವಾಗಿದೆ. ಆದ್ದರಿಂದಲೇ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ (Rahul Gandhi And Priyanka Gandhi) ಅಲ್ಲಿಂದ ಆಯ್ಕೆಯಾಗಿದ್ದಾರೆ. ಕೇರಳ ಮಿನಿ ಪಾಕಿಸ್ತಾನವಾಗಿದ್ದರಿಂದಲೇ ಗಾಂಧಿಗಳು ಗೆಲ್ಲುತ್ತಿದ್ದಾರೆ. ಏಕೆಂದರೆ ಎಲ್ಲಾ ಭಯೋತ್ಪಾದಕರು ಅವರಿಗೆ ಮತ ಹಾಕುತ್ತಾರೆ. ಇದು ಸತ್ಯ… ಸತ್ಯ… ಸತ್ಯ… ಎಂದು ನಾಲಿಗೆ ಹರಿಬಿಟ್ಟಿದ್ದಾರೆ. ಇದನ್ನೂ ಓದಿ: ಚಿನ್ನ ವಂಚನೆ ಕೇಸ್ – ಐಶ್ವರ್ಯಗೌಡ ವಿರುದ್ಧ ಪೊಲೀಸ್ ಆಯುಕ್ತರಿಗೆ ಡಿ.ಕೆ ಸುರೇಶ್ ದೂರು
ರಾಣೆ ವಿರುದ್ಧ ನಿಗಿನಿಗಿ ಕೆಂಡ:
ವಿವಾದಿತ ಹೇಳಿಕೆ ಬೆನ್ನಲ್ಲೇ ಸಚಿವ ನಿತೀಶ್ ರಾಣೆ ವಿರುದ್ಧ ಮಹಾ ವಿಕಾಸ್ ಅಘಾಡಿ ಒಕ್ಕೂಟ ಕೆರಳಿ ಕೆಂಡವಾಗಿದೆ. ಶಿವಸೇನೆ (ಉದ್ಧವ್ ಠಾಕ್ರೆ ಬಣ) ನಾಯಕ ಆನಂದ್ ದುಬೆ ಮಾತನಾಡಿ, ಪ್ರಧಾನಿ ಮೋದಿ ಕೇವಲ 1 ಲಕ್ಷ ಮತಗಳ ಅಂತರದಿಂದ ಗೆದ್ದಿದ್ದರಿಂದ ಬಿಜೆಪಿ ನಾಯಕರು ಚಿಂತಿತರಾಗಿದ್ದಾರೆ. ಪ್ರಿಯಾಂಕಾ ಗಾಂಧಿ ಅವರು 4 ಲಕ್ಷಕ್ಕೂ ಅಧಿಕ ಮತಗಳ ಅಂತರದಲ್ಲಿ ಗೆಲುವು ಸಾಧಿಸಿರುವುದು ಅವರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
ಕೇರಳ ಭಾರತದ ಭಾಗ, ಅಲ್ಲಿ ವಾಸಿಸುತ್ತಿರುವ ಜನ ನಮ್ಮವರು. ಪಾಕಿಸ್ತಾನದಂತೆ ಆಗುತ್ತಿದೆ ಅನ್ನೋದಾದ್ರೆ ಅಮಿತ್ ಶಾ ಅವರಿಗಾಗಲಿ, ರಾಜ್ಯಪಾಲರಿಗಾಗಲಿ ಏಕೆ ದೂರು ನೀಡಿಲ್ಲ. ಇದು ನೀಚತನದ ರಾಜಕೀಯ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಅರ್ಚಕರಿಗೆ ಪ್ರತಿ ತಿಂಗಳು 18 ಸಾವಿರ ಸಹಾಯಧನ: ಕೇಜ್ರಿವಾಲ್ ಘೋಷಣೆ
ವಿವಾದದ ಬೆನ್ನಲ್ಲೇ ಸ್ಪಷ್ಟನೆ:
ಇನ್ನೂ ವಿವಾದದ ಬೆನ್ನಲ್ಲೇ ನಿತೀಶ್ ರಾಣೆ ಸ್ಪಷ್ಟನೆ ನೀಡಿದ್ದು, ಕೇರಳದ ಜನರನ್ನಲ್ಲ ಪರಿಸ್ಥಿತಿಯನ್ನ ಪಾಕಿಸ್ತಾನದೊಂದಿಗೆ ಹೋಲಿಕೆ ಮಾಡಿರುವುದಾಗಿ ಉಲ್ಟಾ ಹೊಡೆದಿದ್ದಾರೆ.
ಈ ಬೆನ್ನಲ್ಲೇ ಕೇಂದ್ರ ಸಚಿವ ನಾರಾಯಣ ರಾಣೆ ಮಾತನಾಡಿದ್ದು, ಕೇರಳ ಭಾರತದ ಭಾಗವೇ ಆದರೂ ಅಲ್ಲಿ ಹಿಂದೂಗಳ ಸಂಖ್ಯೆ ಕಡಿಮೆಯಾಗುತ್ತಿರುವುದು ಎಲ್ಲರೂ ಚಿಂತಿಸಬೇಕಾದ ವಿಷಯ. ಹಿಂದೂಗಳನ್ನು ಮುಸ್ಲಿಂ ಮತ್ತು ಕ್ರೈಸ್ತರನ್ನಾಗಿ ಪರಿವರ್ತನೆ ಮಾಡುತ್ತಿರುವುದು ಅಲ್ಲಿ ದಿನನಿತ್ಯದ ವಿಷಯವಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಡಾಕಿಂಗ್ ಸಾಹಸಕ್ಕೆ ಇಸ್ರೋ ರೆಡಿ – ಏನಿದು ಪ್ರಯೋಗ? ಇಷ್ಟೊಂದು ಮಹತ್ವ ಯಾಕೆ?
ನವದೆಹಲಿ: ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ನೀಡಿದ ಹೇಳಿಕೆ ಬಿಜೆಪಿ-ಕಾಂಗ್ರೆಸ್ ನಡುವೆ ಕಿಚ್ಚುಹೊತ್ತಿಸಿದೆ. ಚಳಿಗಾಲ ಅಧಿವೇಶನ ಕೊನೆಯ ದಿನವಾದ ಇಂದೂ ಬಿಜೆಪಿ-ಕಾಂಗ್ರೆಸ್ ಪ್ರತಿಭಟನೆಗಿಳಿದಿವೆ. ಈ ಹಿನ್ನೆಲೆಯಲ್ಲಿ ಕೊನೆಯ ದಿನದ ಕಲಾಪವನ್ನು ಮಧ್ಯಾಹ್ನ 12 ಗಂಟೆ ವರೆಗೆ ಮುಂದೂಡಲಾಗಿದೆ.
INDIA bloc MPs condemn BJP for INSULTING Baba Saheb Ambedkar, the architect of our Constitution!
We demand an APOLOGY from Home Minister Amit Shah and his RESIGNATION for his derogatory remarks. Insulting Ambedkar ji is an insult to India’s very fabric!
ಗುರುವಾರ ಸಂಸತ್ ಆವರಣದ ಮಕರ ದ್ವಾರದಲ್ಲಿ ಬಿಜೆಪಿ ಪ್ರತಿಭಟನೆ ವೇಳೆ ಕಂಡುಬಂದ ನಾಟಕೀಯ ಬೆಳವಣಿಗೆಗಳ ಒಂದು ದಿನದ ನಂತರ ಇಂಡಿಯಾ ಒಕ್ಕೂಟ ವಿಜಯ್ ಚೌಕ್‌ನಿಂದ ಸಂಸತ್ತಿನವರೆಗೆ ಪ್ರತಿಭಟನಾ ಮೆರವಣಿಗೆ ನಡೆಸುತ್ತಿದೆ. ಅಮಿತ್ ಶಾ ಅವರು ಕ್ಷಮೆ ಕೇಳಬೇಕು ಇಲ್ಲವೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ. ಮತ್ತೊಂದೆಡೆ ಬಿಜೆಪಿ ಸದಸ್ಯರು ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದ ಅಧಿವೇಶನದ ಕೊನೆಯ ದಿನ ಗದ್ದಲದಲ್ಲೇ ಸಮಾಪ್ತಿಯಾಗುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಅಮಿತ್ ಶಾ ರಾಜೀನಾಮೆಗೆ ಪಟ್ಟು
ಚಳಿಗಾಲದ ಅಧಿವೇಶನದಲ್ಲಿ ʻಸಂವಿಧಾನʼ ಕುರಿತ ಚರ್ಚೆ ವೇಳೆ ರಾಜ್ಯಸಭೆಯಲ್ಲಿ ಅಮಿತ್ ಶಾ ಅವರು ಮಾತನಾಡುತ್ತಾ, ʻಅಂಬೇಡ್ಕರ್ ಅಂಬೇಡ್ಕರ್ ಅಂಬೇಡ್ಕರ್ ಇದೊಂದು ಫ್ಯಾಷನ್ ಆಗಿಬಿಟ್ಟಿದೆ. ಇಷ್ಟು ಬಾರಿ ದೇವರ ಹೆಸರು ಹೇಳಿದ್ದರೆ ಅವರಿಗೆ ಸ್ವರ್ಗದಲ್ಲಿ ಸ್ಥಾನವಾದರೂ ಸಿಗುತ್ತಿತ್ತುʼ ಎಂದು ಹೇಳಿದ್ದರು. ಈ ಕುರಿತ ವೀಡಿಯೋಗಳನ್ನು ವಿಪಕ್ಷ ನಾಯಕರು ತಮ್ಮ ಸೋಷಿಯಲ್ ಮೀಡಿಯಾ ಖಾತೆಗಳಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಕೇಂದ್ರ ಗೃಹ ಸಚಿವರು ರಾಜೀನಾಮೇ ನೀಡಬೇಕು, ಅಂಬೇಡ್ಕರ್ ವಿರುದ್ಧದ ಟೀಕೆಗೆ ಕ್ಷಮೆಯಾಚಿಸಬೇಕು ಎಂದು ಪಟ್ಟು ಹಿಡಿದಿದ್ದಾರೆ.
ಸಾರಂಗಿಗೆ ಪೆಟ್ಟು:
ಅಮಿತ್ ಶಾ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ಖಂಡಿಸಿ ಇತ್ತ ಸಂಸತ್ ಆವರಣದಲ್ಲಿ ಬಿಜೆಪಿ ಸಹ ಪ್ರತಿಭಟನೆ ನಡೆಸುತ್ತಿತ್ತು.ಈ ವೇಳೆ ಬಿಜೆಪಿ ಸಂಸದ ಪ್ರತಾಪ್ ಸಾರಂಗಿ (Pratap Chandra Sarangi) ಕುಸಿದುಬಿದ್ದು, ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ (Rahul Gandhi) ತಳ್ಳಿದರೆಂದು ಆರೋಪ ಮಾಡಿದ್ದರು. ಇದಕ್ಕೆ ರಾಹುಲ್‌ಗಾಂಧಿ ಸಹ ಸ್ಪಷ್ಟನೆ ನೀಡಿದರು. ಈ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆ ಸಹ ತಮ್ಮನ್ನು ದೈಹಿಕವಾಗಿ ಬಿಜೆಪಿ ಸಂಸದರು ತಳ್ಳಿದ್ದಾರೆ, ಇದರ ವಿರುದ್ಧ ತನಿಖೆ ನಡೆಸುವಂತೆ ಲೋಕಸಭೆ ಸ್ಪೀಕರ್‌ಗೆ ಪತ್ರ ಬರೆದಿದ್ದರು.