Tag: pro pakistan slogans

  • ಬೆಳಗಾವಿಯಲ್ಲಿ ಪಾಕ್ ಪರ ಘೋಷಣೆ – ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಕೇಸ್ ದಾಖಲು

    ಬೆಳಗಾವಿಯಲ್ಲಿ ಪಾಕ್ ಪರ ಘೋಷಣೆ – ಪೊಲೀಸ್ ಠಾಣೆಯಲ್ಲಿ ಸ್ವಯಂಪ್ರೇರಿತ ಕೇಸ್ ದಾಖಲು

    ಬೆಳಗಾವಿ: ಕುಂದಾನಗರಿ ಬೆಳಗಾವಿಯಲ್ಲಿ (Belagavi) ಚುನಾವಣಾ ಫಲಿತಾಂಶದ ದಿನ ಪಾಕ್ ಪರ ಘೋಷಣೆ (Pro Pakistan Slogans) ಕೂಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಳಕವಾಡಿ ಪೊಲೀಸ್ ಠಾಣೆಯಲ್ಲಿ (Tilakwadi Police Station) ಸ್ವಯಂಪ್ರೇರಿತ ದೂರು ದಾಖಲಾಗಿದೆ.

    ಬೆಳಗಾವಿ ನಗರದ ಟಿಳಕವಾಡಿ ಠಾಣೆ ಸಿಪಿಐ ದಯಾನಂದ ಶೇಗುಣಸಿಯಿಂದ ಸ್ವಯಂಪ್ರೇರಿತ ದೂರು ದಾಖಲಿಸಲಾಗಿದೆ. ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದಾಗ ಮುಸ್ಲಿಂ ಹುಡುಗರಿಂದ ಪಾಕಿಸ್ತಾನ ಪರವಾಗಿ ಘೋಷಣೆ ಆರೋಪ ಕೇಳಿಬಂದಿತ್ತು. ಕಾಂಗ್ರೆಸ್ ಪಕ್ಷದ ಸುಮಾರು ಮುಸ್ಲಿಂ ಬೆಂಬಲಿಗರಿಂದ ಘೋಷಣೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಪಾಕ್ ಪರ ಘೋಷಣೆ ಕೂಗಿದ ಆರೋಪದಡಿ ಐಪಿಸಿ ಕಲಂ 153, 153(ಬಿ)ರ ಅಡಿ ಪ್ರಕರಣ ದಾಖಲಾಗಿದೆ.

    ಮೇ 13ರ ಮಧ್ಯಾಹ್ನ 2:30ರ ಸುಮಾರಿಗೆ ಆರ್‌ಪಿಡಿ ವೃತ್ತದಲ್ಲಿ ಘಟನೆ ನಡೆದಿತ್ತು. ಬೆಳಗಾವಿ ನಗರದ ಆರ್‌ಪಿಡಿ ಕಾಲೇಜಿನಲ್ಲಿ ಮತಎಣಿಕೆ ಪ್ರಕ್ರಿಯೆ ನಡೆದಿತ್ತು. ಜಿಲ್ಲೆಯ ವಿವಿಧ ಕ್ಷೇತ್ರಗಳ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ ವೇಳೆ ಸಂಭ್ರಮಾಚರಣೆಯಲ್ಲಿ ಬೆಂಬಲಿಗರು ತೊಡಗಿದ್ದರು. ಕಾಂಗ್ರೆಸ್ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದಾಗ ಪಾಕ್ ಪರ ಘೋಷಣೆ ಕೂಗಿರುವುದಾಗಿ ಆರೋಪಿಸಲಾಗಿದೆ. ಇದನ್ನೂ ಓದಿ: ಸರ್ಕಾರ ರಚಿಸುವ ಮೊದಲೇ ಕಾಂಗ್ರೆಸ್ಸಿನಿಂದ ಹತ್ಯೆಯ ಗ್ಯಾರಂಟಿ – ಬಿಜೆಪಿ ಕಾರ್ಯಕರ್ತನ ಕೊಲೆಗೆ ಅಶ್ವಥ್ ನಾರಾಯಣ ಆಕ್ರೋಶ

    ಪಾಕ್ ಪರ ಘೋಷಣೆ ಕೂಗಿದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡಿತ್ತು. ವೈರಲ್ ಆದ ವೀಡಿಯೋ ಫೇಕ್ ಎಂದು ಕಾಂಗ್ರೆಸ್ ಶಾಸಕ ಆಸೀಫ್ ಸೇಠ್ ವೀಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದರು. ಮಾತ್ರವಲ್ಲದೇ ಬಿಜೆಪಿಯವರು ಈ ರೀತಿ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ಕೇಸ್ ಹಾಕುವುದಾಗಿ ತಿಳಿಸಿದ್ದರು. ಇದನ್ನೂ ಓದಿ: ನನ್ನ ಶ್ರಮಕ್ಕೆ ಫಲ ಕೇಳುತ್ತಿದ್ದೇನೆ ಅಷ್ಟೇ: ಸಿಎಂ ಹುದ್ದೆಗೆ ಡಿಕೆಶಿ ಪಟ್ಟು

  • ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸುವಾಗ ಪಾಕಿಸ್ತಾನ ಜಿಂದಾಬಾದ್ ಎಂದ ಟಿಸಿ ಅರೆಸ್ಟ್

    ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸುವಾಗ ಪಾಕಿಸ್ತಾನ ಜಿಂದಾಬಾದ್ ಎಂದ ಟಿಸಿ ಅರೆಸ್ಟ್

    ಮುಂಬೈ: ಪುಲ್ವಾಮದಲ್ಲಿ ಉಗ್ರರ ದಾಳಿಗೆ ಹುತಾತ್ಮರಾದ ಸಿಆರ್‌ಪಿಎಫ್ ಯೋಧರಿಗೆ ಶ್ರದ್ಧಾಂಜಲಿ ಸಲ್ಲಿಸಲು ನಡೆದಿದ್ದ ಸಭೆಯಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ ರೈಲ್ವೆ ಇಲಾಖೆಯ ಟಿಕೆಟ್ ಕಲೆಕ್ಟರ್ (ಟಿಸಿ) ನನ್ನು ಪುಣೆ ಗ್ರಾಮಾಂತರ ಪೊಲೀಸರು ಬಂಧಿಸಿದ್ದಾರೆ.

    ಲೋನಾವಾಲ ರೈಲು ನಿಲ್ದಾಣದ ಉಪೇಂದ್ರಕುಮಾರ್ ಶ್ರೀವೀರ್ ಬಹಾದೂರ್ ಸಿಂಗ್ (39) ಬಂಧಿತ ಟಿಸಿ. ಲೋನಾವಾಲದ ಶಿವಾಜಿ ಚೌಕ್‍ನಲ್ಲಿ ಸ್ಥಳೀಯರು ಶುಕ್ರವಾರ ಆಯೋಜಿಸಿದ್ದ ಶ್ರದ್ಧಾಂಜಲಿ ಸಭೆಯಲ್ಲಿ ಉಪೇಂದ್ರಕುಮಾರ್ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದಾನೆ. ಈ ವೇಳೆ ಸ್ಥಳದಲ್ಲಿದ್ದ ಪುಣೆ ಗ್ರಾಮಾಂತರ ಠಾಣೆಯ ಪೊಲೀಸರು ಉಪೇಂದ್ರಕುಮಾರ್ ನನ್ನು ಬಂಧಿಸಿದ್ದಾರೆ. ಇದನ್ನು ಓದಿ : ಶ್ರದ್ಧಾಂಜಲಿ ವೇಳೆ ಪಾಕ್ ಪರ ಘೋಷಣೆ – ಗ್ರಾಮಸ್ಥರಿಂದ ಥಳಿತ, ಯುವಕ ಅರೆಸ್ಟ್

    ಉಪೇಂದ್ರಕುಮಾರ್ ವಿರುದ್ಧ ಐಪಿಸಿ ಸೆಕ್ಷನ್ 153 (ಬಿ) ರಾಷ್ಟ್ರೀಯ ಸಮಗ್ರತೆಗೆ ಧಕ್ಕೆ ತರುವ ಹೇಳಿಕೆ ಆರೋಪದ ಅಡಿ ಪ್ರಕರಣ ದಾಖಲಾಗಿದೆ. ಆತನನ್ನು ಪೊಲೀಸರು ಕೋರ್ಟ್ ಗೆ ಹಾಜರು ಪಡಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಾಲಯವು ಫೆಬ್ರವರಿ 18ರ ವರೆಗೆ ಉಪೇಂದ್ರಕುಮಾರ್‍ನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

    ರೈಲ್ವೇ ಇಲಾಖೆಯ ಮುಂಬೈ ವಿಭಾಗದ ಸಾರ್ವಜನಿಕ ಸಂಪರ್ಕಾಧಿಕಾರಿ ಕೆ.ಜೈನ್ ಅವರು, ಉಪೇಂದ್ರ ಕುಮಾರ್ ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

    ಲೋನಾವಾಲ ನಗರ ಪೊಲೀಸ್ ಇನ್ಸ್‍ಪೆಕ್ಟರ್ ಬಲ್ವಂತ್ ಪಾಟೀಲ್, ಶ್ರದ್ಧಾಂಜಲಿ ಸಭೆಗೆ ಸಾವಿರಾರು ಜನರು ಸೇರುತ್ತಿದ್ದ ಹಿನ್ನಲೆಯಲ್ಲಿ ಭದ್ರತೆಗಾಗಿ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿತ್ತು. ಕಾರ್ಯಕ್ರಮದ ವೇಳೆ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಉಪೇಂದ್ರಕುಮಾರ್ ನನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ರೈಲ್ವೇ ಇಲಾಖೆಗೂ ಮಾಹಿತಿ ನೀಡಿದ್ದೇವೆ ಎಂದು ತಿಳಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

  • ಶ್ರದ್ಧಾಂಜಲಿ ವೇಳೆ ಪಾಕ್ ಪರ ಘೋಷಣೆ – ಗ್ರಾಮಸ್ಥರಿಂದ ಥಳಿತ, ಯುವಕ ಅರೆಸ್ಟ್

    ಶ್ರದ್ಧಾಂಜಲಿ ವೇಳೆ ಪಾಕ್ ಪರ ಘೋಷಣೆ – ಗ್ರಾಮಸ್ಥರಿಂದ ಥಳಿತ, ಯುವಕ ಅರೆಸ್ಟ್

    ಹಾವೇರಿ: ಹುತಾತ್ಮರಾದ ಸಿಆರ್‍ಪಿಎಫ್ ಯೋಧರ ಶ್ರದ್ಧಾಂಜಲಿ ಸಭೆಯಲ್ಲಿ ಪಾಕಿಸ್ತಾನ ಪರ ಜೈಕಾರ ಹಾಕಿದ ಯುವಕನಿಗೆ ಸ್ಥಳೀಯರು ಧರ್ಮದೇಟು ನೀಡಿ, ಪೊಲೀಸರಿಗೆ ಒಪ್ಪಿಸಿದ ಘಟನೆ ಹಾವೇರಿ ತಾಲೂಕಿನ ದೇವಗಿರಿ ಗ್ರಾಮದಲ್ಲಿ ನಡೆದಿದೆ.

    ದೇವಗಿರಿ ಗ್ರಾಮದ ಮೊಹಮ್ಮದ್ ಅಲಿ ಕೆರಿಮತ್ತಿಹಳ್ಳಿ (35) ಬಂಧಿತ ಆರೋಪಿ. ಹಾವೇರಿ ಗ್ರಾಮಾಂತರ ಪೊಲೀಸರು ಆರೋಪಿ ಮೊಹಮ್ಮದ್ ಅಲಿಯನ್ನು ಇಂದು ಜಿಲ್ಲಾ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು. ವಿಚಾರಣೆ ನಡೆಸಿದ ಕೋರ್ಟ್ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

    ಆಗಿದ್ದೇನು?:
    ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರ ದಾಳಿಗೆ ಹುತಾತ್ಮರಾದ ಸೈನಿಕರಿಗೆ ದೇವಗಿರಿ ಗ್ರಾಮಸ್ಥರು ಶುಕ್ರವಾರ ರಾತ್ರಿ ಶ್ರದ್ಧಾಂಜಲಿ ಸಭೆ ಆಯೋಜಿಸಿದ್ದರು. ಈ ವೇಳೆ ಮೊಹಮ್ಮದ್ ಅಲಿ ಪಾಕಿಸ್ತಾನ ಜಿಂದಾಬಾದ್ ಎಂದು ಕೂಗಿದ್ದಾನೆ. ಇದರಿಂದ ಕೋಪಗೊಂಡ ಸ್ಥಳೀಯರು ಆತನನ್ನು ಹಿಗ್ಗಾಮುಗ್ಗಾ ಥಳಿಸಿ ಕಟ್ಟಿಹಾಕಿದ್ದರು. ಬಳಿಕ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ತಕ್ಷಣವೇ ದೇವಗಿರಿ ಗ್ರಾಮಕ್ಕೆ ಆಗಮಿಸಿದ ಪೊಲೀಸರು ಮೊಹಮ್ಮದ್ ಅಲಿಯನ್ನು ಬಂಧಿಸಿದ್ದರು.

    ಈ ಸಂಬಂಧ ಹಾವೇರಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಮೊಹಮ್ಮದ್ ಅಲಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv