ಬೆಳಗಾವಿ: ಸೋಶಿಯಲ್ ಮೀಡಿಯಾದಲ್ಲಿ ವೀರ ಮದಕರಿ ನಾಯಕನ ಬಗ್ಗೆ ಆಕ್ಷೇಪಾರ್ಹ ಕಾಮೆಂಟ್ ಮಾಡಿದ್ದ ಖಾಸಗಿ ಎಂಜಿನಿಯರಿಂಗ್ ಕಾಲೇಜಿನ ಪ್ರೊಫೆಸರ್ ತಮ್ಮ ತಪ್ಪನ್ನು ಒಪ್ಪಿಕೊಂಡು ಕ್ಷಮೆಯಾಚನೆ ಮಾಡಿದ್ದಾರೆ.
ಬೆಳಗಾವಿ ನಗರದ ಖಾಸಗಿ ಎಂಜಿನಿಯರಿಂಗ್ ಕಾಲೇಜು ಪ್ರೊಫೆಸರ್ ಅಭಿಜಿತ್ ಬೈಕೇರಿಕರ್ ಕ್ಷಮಾಪಣೆ ಕೇಳಿದ್ದಾರೆ. ಪ್ರಕರಣದ ಹಿನ್ನೆಲೆ ನೋಡೋದಾದ್ರೆ ಬೆಳಗಾವಿ ನಗರದ ಆರ್‌ಪಿಡಿ ವೃತ್ತಕ್ಕೆ ವೀರ ಮದಕರಿ ನಾಯಕರ ಹೆಸರಿಡುವಂತೆ ಕೆಲ ಸಂಘಟನೆಗಳು ಸರ್ಕಾರಕ್ಕೆ ಆಗ್ರಹಿಸಿದ್ದವು.
ನಡೆದಿದ್ದೇನು?
ಈ ಸಂದರ್ಭದಲ್ಲಿ ಪ್ರೊಫೆಸರ್ ಅಭಿಜಿತ್ ಅವರು ಸೋಶಿಯಲ್ ಮೀಡಿಯಾದಲ್ಲಿ ಬೆಳಗಾವಿಗೂ ವೀರಮದಕರಿ ನಾಯಕರಿಗೂ ಸಂಬಂಧ ಏನು? ಅಂತಾ ಪ್ರಶ್ನೆ ಮಾಡಿದ್ದರು. ಪ್ರೊಫೆಸರ್ ನಡೆಗೆ ಸೋಶಿಯಲ್ ಮೀಡಿಯಾದಲ್ಲಿ ಆಕ್ರೋಶಕ್ಕೆ ಗುರಿಯಾಗಿತ್ತು. ‘Remove_Abhijeet’ ಹ್ಯಾಷ್‍ಟ್ಯಾಗ್‍ನಲ್ಲಿ ನೆಟ್ಟಿಗರು ಅಭಿಯಾನ ಆರಂಭಿಸಿದ್ದರು. ಇದನ್ನೂ ಓದಿ: ಎರಡು ಸರ್ಕಾರಿ ಬಸ್‍ಗಳ ಮಧ್ಯೆ ಮುಖಾಮುಖಿ ಡಿಕ್ಕಿ – ಹತ್ತಕ್ಕೂ ಹೆಚ್ಚು ಜನರಿಗೆ ಗಾಯ
ಅಭಿಜಿತ್ ಅವರ ವಿರುದ್ಧ ಕ್ರಮಕ್ಕೆ ಕರ್ನಾಟಕ ಪರಿಶಿಷ್ಟ ಪಂಗಡ ವಾಲ್ಮೀಕಿ ನೌಕರರ ಒಕ್ಕೂಟ ಆಗ್ರಹ ಮಾಡಿತ್ತು. ಈ ಸಂಬಂಧ ಕಾಲೇಜು ಪ್ರಾಂಶುಪಾಲರನ್ನು ಭೇಟಿಯಾಗಿ ಸಂಘಟನೆ ಸದಸ್ಯರು ಮನವಿ ಮಾಡಿಕೊಂಡಿದ್ದರು. ಇತ್ತ ಸಂಘಟನೆ ಒತ್ತಾಯದ ಬೆನ್ನಲ್ಲೇ ಅಭಿಜಿತ್ ಬೈಕೇರಿಕರ್ ಕ್ಷಮೆಯಾಚಿಸಿದ್ದಾರೆ.
Live Tv
[brid partner=56869869 player=32851 video=960834 autoplay=true]
ಪಣಜಿ: ಫಿಟ್‍ನೆಸ್ ಟ್ರೈನರ್ ಒಬ್ಬ ಪ್ರಾಧ್ಯಾಪಕಿಯನ್ನು ಅಪಹರಿಸಿ ಕತ್ತು ಹಿಸುಕಿ ಕೊಂದಿದ್ದು, ನಂತರ ಶವವನ್ನು ನಿರ್ಜನ ಪ್ರದೇಶವೊಂದರಲ್ಲಿ ಎಸೆದಿರುವ ಘಟನೆ ಗೋವಾದಲ್ಲಿ ನಡೆದಿದೆ.
ಗೌರಿ ಆಚಾರಿ (35) ಮೃತ ಯುವತಿಯಾಗಿದ್ದು, ಆರೋಪಿಯನ್ನು 36 ವರ್ಷದ ಗೌರವ್ ಬಿದ್ರೆ ಎಂದು ಗುರುತಿಸಲಾಗಿದೆ. ಗೌರಿ ಆಚಾರಿ ಮತ್ತು ಗೌರವ್ ಬಿದ್ರೆ ಇಬ್ಬರು ಸರ್ಕಾರಿ ಕಾಲೇಜೊಂದರಲ್ಲಿ ಕಾರ್ಯರ್ನಿಹಿಸುತ್ತಿದ್ದರು. ಈ ವೇಳೆ ಇಬ್ಬರಿಗೂ ಪರಸ್ಪರ ಪರಿಚಯವಾಗಿದ್ದು, ನಂತರ ಸ್ನೇಹ ಬೆಳೆದಿದೆ. ಆದರೆ ಕಳೆದ ತಿಂಗಳು ಗೌರಿ ಆಚಾರಿ ಇನ್ಮುಂದೆ ಸಂಪರ್ಕದಲ್ಲಿರುವುದು ಬೇಡ ಎಂದು ಗೌರವ್ ಬಿದ್ರೆಗೆ ಹೇಳಿದ್ದಾರೆ. ಇದನ್ನೂ ಓದಿ: ಪತಿ ಜೊತೆ ಬಳೆ ಖರೀದಿಸಲು ಹೋದವಳು ಲವ್ವರ್ ಜೊತೆ ಜೂಟ್
ಜೂನ್ 23 ರಂದು ನಿವಾಸದ ಬಳಿ ಕಾರನ್ನು ಪಾರ್ಕ್ ಮಾಡುತ್ತಿದ್ದ ವೇಳೆ ಗೌರಿ ಆಚಾರಿ ಕಾರಿನೊಳಗೆ ನುಗ್ಗಿ ಗೌರವ್ ಬಿದ್ರೆ ಕತ್ತು ಹಿಸುಕಿ ಹತ್ಯೆಗೈದಿದ್ದಾನೆ. ನಂತರ ಶವವನ್ನು ತನ್ನ ಕಾರಿನೊಳಗೆ ಸಾಗಿಸಿ, ಮನೆಯಿಂದ ಸುಮಾರು 2 ಕಿಲೋಮೀಟರ್ ದೂರದಲ್ಲಿರುವ ಕದಂಬ ಬೈಪಾಸ್‍ನ ಸಮೀಪದ ಕಾಡಿನಲ್ಲಿ ಶವವನ್ನು ಎಸೆದಿದ್ದಾನೆ. ಮಗಳು ಮನೆಗೆ ಬರದೇ ಇರುವುದನ್ನು ಕಂಡು ಮೃತಳ ತಾಯಿ ಪೊಲೀಸರಿಗೆ ದೂರು ನೀಡಿದ್ದಾರೆ. ನಂತರ ವಿಚಾರಣೆ ವೇಳೆ ಗೌರಿ ಆಚಾರಿಯನ್ನು ಗೌರವ್ ಬಿದ್ರೆ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಇದು ಮಂಗಗಳ ನೃತ್ಯ – ಮಹಾರಾಷ್ಟ್ರ ಸರ್ಕಾರದ ಬಿಕ್ಕಟ್ಟಿನ ಬಗ್ಗೆ ಓವೈಸಿ ವ್ಯಂಗ್ಯ
ನವದೆಹಲಿ: ಜ್ಞಾನವಾಪಿ ಮಸೀದಿಯಲ್ಲಿ ದೊರೆತ ಶಿವಲಿಂಗದ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದ ದೆಹಲಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕನಿಗೆ ದೆಹಲಿ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. 50,000 ರೂ. ಬಾಂಡ್ ನೀಡಿದ ಬಳಿಕ ಪ್ರಾಧ್ಯಾಪಕ ಜಾಮೀನಿನ ಮೇಲೆ ಹೊರಬರಬಹುದು ಎಂದಿದೆ.
ಪ್ರಾಧ್ಯಾಪಕ ರತನ್ ಲಾಲ್ ವಾರಣಾಸಿಯ ಜ್ಞಾನವಾಪಿ ಮಸೀದಿ ಸಂಕೀರ್ಣದಲ್ಲಿ ಕಂಡುಬಂದ ಶಿವಲಿಂಗದ ಬಗ್ಗೆ ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡಿದ್ದ. ಈ ಹಿನ್ನೆಲೆಯಲ್ಲಿ ದೆಹಲಿ ಮೂಲದ ವಕೀಲ ವಿನೀತ್ ಜಿಂದಾಲ್ ಮಂಗಳವಾರ ರತನ್ ಲಾಲ್ ವಿರುದ್ಧ ದೂರು ನೀಡಿದ್ದು, ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಇದನ್ನೂ ಓದಿ: 12 ಜ್ಯೋತಿರ್ಲಿಂಗಗಳಲ್ಲಿ ಜ್ಞಾನವಾಪಿಯಲ್ಲಿ ಸಿಕ್ಕ ಶಿವಲಿಂಗವೂ ಒಂದು: ವಿಹೆಚ್‌ಪಿ
ರತನ್ ಲಾಲ್ ವಿರುದ್ಧ ಸೈಬರ್ ಪೊಲೀಸ್ ಠಾಣೆಯಲ್ಲಿ ಭಾರತೀಯ ದಂಡಸAಹಿತೆ 153ಎ(ಧರ್ಮ, ಜನಾಂಗ, ಹುಟ್ಟಿದ ಸ್ಥಳ, ವಾಸಸ್ಥಳ, ಭಾಷೆ ಇತ್ಯಾದಿಗಳ ಆಧಾರದ ಮೇಲೆ ವವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವ ಹಾಗೂ ಸೌಹಾರ್ದದ ಮೇಲೆ ಪರಿಣಾಮ ಬೀರುವ ಕೃತ್ಯಗಳು) ಹಾಗೂ 295ಎ(ಉದ್ದೇಶಪೂರ್ವಕವಾಗಿ ಯಾವುದೇ ವರ್ಗದ ಧರ್ಮವನ್ನು ಅವಮಾನಿಸುವ ಮೂಲಕ ಅವರ ಧಾಮಿಕ ಭಾವನೆಯನ್ನು ಉದ್ರೇಕಿಸುವುದು) ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಮುಂಬೈ: ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಪ್ರಾಧ್ಯಾಪಕನೊಬ್ಬನನ್ನು ಅಮಾನತುಗೊಳಿಸಿರುವ ಘಟನೆ ಮಹಾರಾಷ್ಟ್ರದ ನಾಗ್ಪುರದ ಖಾಸಗಿ ಕಾಲೇಜವೊಂದರಲ್ಲಿ ನಡೆದಿದೆ.
ದಾದಾ ರಾಮ್‍ಚಂದ್ ಬಖ್ರು ಸಿಂಧು ಮಹಾವಿದ್ಯಾಲಯದ ಕಂಪ್ಯೂಟರ್ ಸೈನ್ಸ್ ವಿಭಾಗದ ಮುಖ್ಯಸ್ಥ ಪ್ರೋಫೆಸರ್ ರಾಕೇಶ್ ಗೆಡಮ್ ಅಮಾನತುಗೊಂಡಿರುವ ಪ್ರಾಧ್ಯಾಪಕ. ತನ್ನ ವಿಭಾಗದ ವಿದ್ಯಾರ್ಥಿನಿಯರನ್ನು ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯಿಸಿದ್ದ. ಅದಕ್ಕೆ ವಿರೋಧ ವ್ಯಕ್ತಪಡಿಸಿದರೆ ಫೇಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ. ಅಲ್ಲದೇ ಕೆಲ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ಆ್ಯಸಿಡ್ ಎರಚಿದ ಕಿರಾತಕನಿಗೆ ಲುಕ್‍ಔಟ್ ನೊಟೀಸ್ ಜಾರಿ
ಶಿವಸೇನೆಯ ಯುವ ಘಟಕ ಯುವಸೇನೆಯ ಪದಾಧಿಕಾರಿಗಳು ಕಾಲೇಜು ಅಧಿಕಾರಿಗಳ ಮುಂದೆ ವಿಷಯ ಪ್ರಸ್ತಾಪಿಸಿದ್ದ ಬೆನ್ನಲ್ಲೇ ಹಲವಾರು ವಿದ್ಯಾರ್ಥಿನಿಯರು, ರಾಕೇಶ್ ವಿರುದ್ಧ ದೂರು ನೀಡಲು ಮುಂದಾದರು. ವಿದ್ಯಾರ್ಥಿನಿಯರು ಪ್ರೋಫೆಸರ್ ವಿರುದ್ಧ ನಾಗಪುರದ ಪಚ್‍ಪೋಲಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದಾಗ ವಿಷಯ ಬೆಳಕಿಗೆ ಬಂದಿದ್ದು, ಅದರ ಆಧಾರದ ಮೇಲೆ ಪ್ರಕರಣ ದಾಖಲಾಗಿದೆ.
ಪಚ್‍ಪೋಲಿ ಪೊಲೀಸ್ ಠಾಣೆಯ ಹಿರಿಯ ಇನ್ಸ್‌ಪೆಕ್ಟರ್ ಸಂಜಯ್ ಮೆಂಧೆ ಅವರು ಘಟನೆ ಕುರಿತು ಪ್ರತಿಕ್ರಿಯಿಸಿದ್ದು, ಈ ಪ್ರಕರಣದಲ್ಲಿ ಪ್ರಾದ್ಯಾಪಕನಿಂದ ಲೈಂಗಿಕ ದೌರ್ಜನ್ಯಕ್ಕೊಳಗಾದ ಮೂವರು ವಿದ್ಯಾರ್ಥಿನಿಯರ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ಇತರ ಸಂತ್ರಸ್ತರೂ ದೂರು ನೀಡಲು ಮುಂದೆ ಬರುವಂತೆ ಪೊಲೀಸರು ಮನವಿ ಮಾಡಿದ್ದಾರೆ.
ಬೆಂಗಳೂರು: ಅಸಿಸ್ಟೆಂಟ್ ಫ್ರೊಫೆಸರ್ ಪ್ರಶ್ನೆಪತ್ರಿಕೆ ಲೀಕ್ ಪ್ರಕರಣ ಸಂಬಂಧ ತನ್ನ ತಪ್ಪನ್ನು ಆರೋಪಿ ಸೌಮ್ಯಾ ಒಪ್ಪಿಕೊಂಡಿರುವ ವಿಚಾರ ಮೂಲಗಳಿಂದ ತಿಳಿದು ಬಂದಿದೆ.
ಭೂಗೋಳ ಶಾಸ್ತ್ರ ಪ್ರಶ್ನೆ ಪತ್ರಿಕೆ ಸಿದ್ಧಪಡಿಸಿದ ತಂಡದಲ್ಲಿದ್ದ ನಾಗರಾಜ್ ಮನೆಗೆ ಆಗಾಗ ಹೋಗುತ್ತಿದ್ದಾಗಿ ಆರೋಪಿ ಸೌಮ್ಯ ವಿಚಾರಣೆಯ ವೇಳೆ ಒಪ್ಪಿಕೊಂಡಿದ್ದಾಳೆ. ನಾಗರಾಜ್ ಬಳಿ ಇದ್ದ ಬುಕ್ಸ್ ಗಳನ್ನ ಓದುವುದು ಮಾಡ್ತಿದ್ದೆ. ಅವರು ಪ್ರಶ್ನೆ ಪೇಪರ್ ತಯಾರು ಮಾಡುವ ಕಮಿಟಿಯಲ್ಲಿರೋದು ಗೊತ್ತಿತ್ತು ಎಂದಿದ್ದಾಳೆ.
ನಾಗರಾಜ್ ಟೇಬಲ್ ಮೇಲೆ ಕ್ವೆಶ್ಚೆನ್ ಪೇಪರ್ ನ ಎನ್ವಲಪ್ ಇತ್ತು. ನಾನು ಯಾರಿಗೂ ಗೊತ್ತಾಗದ ಹಾಗೆ ಫೋಟೋ ತೆಗೆದುಕೊಂಡು ಬಂದಿದ್ದೆ. ಮರುದಿನ ಕಾಲೇಜಿನ ಬಳಿ ಫ್ರೊಫೆಸರ್ ತಂಗಿ ಮಗಳು ಕುಸುಮಾಗೆ ಪ್ರಶ್ನೆ ಪತ್ರಿಕೆ ಫೋಟೋ ಕಾಪಿ ಕಳಿಸುವಂತೆ ಹೇಳಿದ್ದೆ. ಆಕೆ ಕೂಡ ಕೆಲವೊಂದು ಪ್ರಶ್ನೆಗಳ ಫೋಟೋ ಕಳುಹಿಸಿದ್ದಳು. ಹೀಗೆ ಕ್ವೆಶ್ಚೆನ್ ಪೇಪರ್ ಲೀಕ್ ಹಿಂದಿನ ಇಂಚಿಂಚು ಮಾಹಿತಿಯನ್ನ ಎಳೆ ಎಳೆಯಾಗಿ ಪೊಲೀಸರ ಮುಂದೆ ಸೌಮ್ಯ ಬಿಚ್ಚಿಟ್ಟಿದ್ದಾಳೆ. ಇದನ್ನೂ ಓದಿ: ಪ್ರಶ್ನೆ ಪತ್ರಿಕೆ ಲೀಕ್ ಪ್ರಕರಣ- ಪ್ರೊಫೆಸರ್ ನಾಗರಾಜ್ ಅರೆಸ್ಟ್
ಚಂಡೀಗಢ: ಶ್ರೀರಾಮನನ್ನು ಅವಹೇಳನ ಮಾಡಿದ ಆರೋಪದ ಮೇಲೆ ಲವ್ಲಿ ಪ್ರೊಫೆಷನಲ್ ಯುನಿವರ್ಸಿಟಿ ಸಹಾಯಕ ಪ್ರಾಧ್ಯಾಪಕಿಯನ್ನು ವಜಾಗೊಳಿಸಲಾಗಿದೆ.
ಪಂಜಾಬ್‍ನ ಜಂದರ್‌ನಲ್ಲಿ ಈ ಘಟನೆ ನಡೆದಿದೆ. ಗುಸಾರ್ಂಗ್ ಪ್ರೀತ್ ಕೌರ್ ವಜಾಗೊಂಡ ಸಹಾಯಕ ಪ್ರಾಧ್ಯಾಪಕಿ. ಶ್ರೀರಾಮನಿಗೆ ಅವಹೇಳನ ಮಾಡುವ ವೀಡಿಯೋವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದರು. ಇದು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶಕ್ಕೆ ಕಾರಣವಾಗಿತ್ತು. ಜೊತೆಗೆ ಆಕೆಯನ್ನು ವಜಾಗೊಳಿಸುವಂತೆ ಒತ್ತಾಯಿಸಲಾಗಿತ್ತು.
ವೀಡಿಯೋದಲ್ಲಿ ಏನಿದೆ?: ಶ್ರೀರಾಮ ಒಳ್ಳೆಯ ವ್ಯಕ್ತಿಯಲ್ಲ. ರಾವಣ ಒಳ್ಳೆಯ ವ್ಯಕ್ತಿ. ರಾಮ ಒಬ್ಬ ಕುತಂತ್ರದ ವ್ಯಕ್ತಿ ಎಂದು ನಾನು ಕಂಡುಕೊಂಡಿದ್ದೇನೆ. ಸೀತೆಯನ್ನು ಬಲೆಗೆ ಬೀಳಿಸಲು ಎಲ್ಲಾ ಉಪಾಯ ಮಾಡಿದನು. ಅವನು ಸೀತೆಯನ್ನು ತೊಂದರೆಗೆ ಸಿಲುಕಿಸಿದನು ಮತ್ತು ರಾವಣನ ಮೇಲೆ ಎಲ್ಲಾ ದೋಷಗಳನ್ನು ಹಾಕಿದನು. ಇಡೀ ಜಗತ್ತು ರಾಮನನ್ನು ಪೂಜಿಸುತ್ತಿದೆ ಮತ್ತು ರಾವಣ ಕೆಟ್ಟ ವ್ಯಕ್ತಿ ಎಂದು ಹೇಳುತ್ತಿದೆ ಎಂದು ಹೇಳಿದ್ದಳು. ಇದನ್ನೂ ಓದಿ: ಜನರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು: ಡಾ.ಕೆ.ಸುಧಾಕರ್
ಈ ಬಗ್ಗೆ ವಿಶ್ವವಿದ್ಯಾಲಯ ಹೇಳಿಕೆಯನ್ನು ಬಿಡುಗಡೆ ಮಾಡಿದ್ದು, ಗುರ್ಸಾಂಗ್ ಪ್ರೀತ್ ನೀಡುವ ಹೇಳಿಕೆಗಳೆಲ್ಲವೂ ವೈಯಕ್ತಿಕವಾಗಿವೆ. ಇವು ಯಾವುದು ವಿಶ್ವವಿದ್ಯಾಲಯಕ್ಕೆ ಸಂಬಂಧಿಸಿಲ್ಲ. ನಾವು ಯಾವಾಗಲೂ ಜಾತ್ಯಾತೀತ ವಿಶ್ವವಿದ್ಯಾನಿಲಯವಾಗಿದ್ದೇವೆ. ಎಲ್ಲಾ ಧರ್ಮಗಳು ಮತ್ತು ನಂಬಿಕೆಯ ಜನರನ್ನು ಸಮಾನವಾಗಿ ಪ್ರೀತಿ ಮತ್ತು ಗೌರವದಿಂದ ನೋಡಲಾಗುತ್ತದೆ ಎಂದು ಸ್ಪಷ್ಟಪಡಿಸಿದೆ. ಇದನ್ನೂ ಓದಿ: ಸೂರ್ಯ- ಚಂದ್ರ ಇರೋವರೆಗೂ ಸಂವಿಧಾನ ಬದಲಾವಣೆ ಅಸಾಧ್ಯ: ಆನಂದ್ ಸಿಂಗ್
ನವದೆಹಲಿ: ವಿಧಿ ವಿಜ್ಞಾನ ತರಗತಿಯಲ್ಲಿ ಹಿಂದೂ ಪುರಾಣಗಳಲ್ಲಿನ ಅತ್ಯಾಚಾರವನ್ನು ಉದಾಹರಣೆಯಾಗಿ ಉಲ್ಲೇಖಿಸಿ ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ ಆರೋಪದಡಿ ಪ್ರಾಧ್ಯಾಪಕನನ್ನು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯ ಅಮಾನತುಗೊಳಿಸಿದೆ.
— Aligarh Muslim University (@AMUofficialPRO) April 6, 2022
ಅವರ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಸಂಬಂಧ ವಿಚಾರಣೆಗಾಗಿ ವಿಶ್ವವಿದ್ಯಾನಿಲಯ ಇಬ್ಬರು ಸದಸ್ಯರ ತನಿಖಾ ಸಮಿತಿಯನ್ನು ರಚಿಸಿದೆ. ಈ ಸಂಬಂಧ ನೋಟಿಸ್ ನೀಡಿದ್ದಲ್ಲದೇ ಈಗಾಗಲೇ ಪ್ರಾಧ್ಯಾಪಕರನ್ನು ಅಮಾನತುಗೊಳಿಸಲಾಗಿದೆ.
ನೋಟಿಸ್ ಬಂದ ಬಳಿಕ ಪ್ರಾಧ್ಯಾಪಕ ಕ್ಷಮೆಯಾಚಿಸಿದ್ದಾರೆ. ಯಾವುದೇ ನಿರ್ದಿಷ್ಟ ಧರ್ಮದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವುದು ನನ್ನ ಉದ್ದೇಶವಲ್ಲ. ಅತ್ಯಾಚಾರವು ನಮ್ಮ ಸಮಾಜದ ಒಂದು ಭಾಗವಾಗಿದೆ ಎಂಬುದನ್ನು ಹೇಳುವುದಕ್ಕಾಗಿ ಈ ವಿಷಯ ತಿಳಿಸಲಾಯಿತು ಎಂದು ಪ್ರಾಧ್ಯಾಪಕ ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ವೀರ್ಯ ದಾನ ಮಾಡಿ ಹಣ ಸಂಪಾದಿಸುತ್ತಿದ್ದ ಪತಿ- ವಿಚ್ಛೇದನಕ್ಕೆ ಮುಂದಾದ ಪತ್ನಿ
ಉಪನ್ಯಾಸದ ವಿಡಿಯೋ ತುಣುಕನ್ನು ಯಾರೋ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ ನಂತರ ವಿವಾದ ಭುಗಿಲೆದ್ದಿದೆ.
ನೀವು ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರ್ವಕವಾಗಿ ತರಗತಿಯಲ್ಲಿ ಅತ್ಯಾಚಾರ ಎಂಬ ಶೀರ್ಷಿಕೆಯಡಿ ವಿಷಯ ಮಂಡಿಸಿದ್ದೀರಿ. ಇದರಿಂದಾಗಿ ನಿರ್ದಿಷ್ಟ ಸಮುದಾಯದ ಧಾರ್ಮಿಕ ಭಾವನೆಗಳಿಗೆ ಧಕ್ಕೆಯಾಗಿದೆ ಎಂದು ಎಎಮ್‌ಯು ಕುಲಸಚಿವ ಅಬ್ದುಲ್ ಹಮೀದ್ ಎಚ್ಚರಿಸಿದ್ದಾರೆ.
ನವದೆಹಲಿ: ಭಾರತೀಯ ಕ್ರಿಕೆಟ್ ತಂಡದ ಉಪನಾಯಕನಾಗಿರುವ ಕನ್ನಡಿಗ ಕೆ.ಎಲ್.ರಾಹುಲ್ ಈ ಬಾರಿಯ ಐಪಿಎಲ್ ಆವೃತ್ತಿಯಲ್ಲಿ ನೂತನವಾಗಿ ಸೇರ್ಪಡೆಗೊಂಡಿರುವ ಲಕ್ನೋ ಸೂಪರ್ ಜೈಂಟ್ಸ್ ತಂಡದ ನಾಯಕರಾಗಿದ್ದಾರೆ. ಅಲ್ಲದೇ, ಸುಮಾರು ಮೂರು ವರ್ಷ ಕಿಂಗ್ಸ್ ಪಂಜಾಬ್ ತಂಡದ ನಾಯಕನಾಗಿ ಉತ್ತಮ ಪ್ರದರ್ಶನ ನೀಡಿದ್ದಾರೆ. ಸದಾ ಬ್ಯೂಸಿ ಶೆಡ್ಯೂಲ್‌ನಲ್ಲಿರುವ ಕೆ.ಎಲ್.ರಾಹುಲ್ ಬ್ರೇಕ್‌ಫಾಸ್ಟ್ ವಿಥ್ ಚಾಂಪಿಯನ್ಸ್ ಎಂಬ ಟಾಕ್ ಶೋ ನಲ್ಲಿ ತಮ್ಮ ಜೀವನದ ಸಿಹಿ-ಕಹಿ ಅನುಭವಗಳನ್ನು ಹಂಚಿಕೊAಡಿದ್ದಾರೆ. ಕ್ರಿಕೆಟ್ ಜೀವನಕ್ಕೆ ಕಾಲಿಟ್ಟ ಬಳಿಕ ಇದೇ ಮೊದಲ ಬಾರಿಗೆ ತಮ್ಮ ಜೀನವದಲ್ಲಿ ನಡೆದ ಇಂಟರೆಸ್ಟಿಂಗ್ ಸಂಗತಿಗಳನ್ನು ಮಾಧ್ಯಮದಲ್ಲಿ ಹೇಳಿಕೊಂಡಿದ್ದಾರೆ.
ಮಾತನಾಡುತ್ತಾ, ಒಂದೊಮ್ಮೆ ನಾನು ನನ್ನ ಅಮ್ಮನನ್ನು ಕೇಳಿದೆ ನನಗೇಕೆ ರಾಹುಲ್ ಎಂದು ಹೆಸರಿಟ್ಟಿದ್ದು? ಅಂತ, ಅದಕ್ಕೆ ನನ್ನಮ್ಮ ಒಂದು ಕಥೆಯನ್ನೇ ಹೇಳಿಬಿಟ್ಟರು. ಅವರು ಶಾರುಖ್ ಖಾನ್‌ಗೆ ದೊಡ್ಡ ಅಭಿಮಾನಿಯಾಗಿದ್ದರಂತೆ, 90ರ ದಶಕದಲ್ಲಿ ಶಾರುಖ್ ಅವರು ನಟಿಸುವ ಸಿನಿಮಾದ ಪಾತ್ರಗಳಿಗೆಲ್ಲ ರಾಹುಲ್ ಹೆಸರೇ ಬಹುತೇಕವಾಗಿ ಇರುತ್ತಿತ್ತಂತೆ. ಹಾಗಾಗಿ ನನಗೂ ಅದೇ ಹೆಸರು ಇಟ್ಟೆವು ಎಂದು ಹೇಳಿದ್ದರು. ನಾನು ಇದು ವಾಸ್ತವವೇ ಇರಬೇಕೆಂದು ನಂಬಿಕೊಂಡಿದ್ದೆ. ಈ ನಡುವೆ ನನ್ನ ಗೆಳೆಯನೊಬ್ಬ ನನ್ನ ಹೆಸರಿನ ಬಗ್ಗೆ ಕೇಳಿದಾಗ ನಾನೂ ಹೀಗೆ ಹೇಳಿದ್ದೆ. ಅವನು ಸ್ವಲ್ಪ ಶಾರುಖ್ ಖಾನ್ ಸಿನಿಮಾಗಳನ್ನೆಲ್ಲ ನೋಡಿಕೊಂಡಿದ್ದಂತೆ ಕಾಣುತ್ತದೆ. ಇದನ್ನೂ ಓದಿ: ಬ್ರಾಂಡ್ ವ್ಯಾಲ್ಯೂ ಕಡಿಮೆಯಾದರೂ ಕೊಹ್ಲಿ ನಂ.1 – ಯಾರ ಮೌಲ್ಯ ಎಷ್ಟು
ತಕ್ಷಣ ರಾಹುಲ್ ಹೆಸರಿನಲ್ಲಿ ಶಾರೂಖ್ ಪಾತ್ರ ಮಾಡಿದ್ದು 1994ರಲ್ಲಿ, ನೀನು ಹುಟ್ಟಿದ್ದು 1992ರಲ್ಲಿ. ಹೀಗಿದ್ದ ಮೇಲೆ ರಾಹುಲ್ ಹೆಸರನ್ನು ನಿನಗೆ ಇಡಲು ಹೇಗೆ ಸಾಧ್ಯವಾಯಿತು? ಎಂದು ಕೇಳಿದ. ನನಗೂ ಅದು ಹೌದೆಂದು ಖಾತ್ರಿಯಾಯಿತು. ಮತ್ತೆ ಅಮ್ಮನಿಗೊಮ್ಮೆ ಕೇಳಿದೆ. ಅದಕ್ಕವರು ಏನೋ ಇರಬಹುದು, ಅದಕ್ಕೆಲ್ಲ ಈಗ ಯಾರು ತಲೆಕೆಡಿಸಿಕೊಳ್ಳುತ್ತಾರೆ? ಎಂದುಬಿಟ್ಟರು. ಇನ್ನು ನಮ್ಮಪ್ಪನಿಗೆ ಕೇಳಿದ್ದಕ್ಕೆ ಅವರು ಇನ್ನೊಂದು ಬ್ರಹ್ಮಾಂಡ ಕಥೆಯನ್ನೇ ಹೇಳಿದರು. ಅವರು ಸುನಿಲ್ ಗಾವಸ್ಕರ್ ಅಭಿಮಾನಿಯಾಗಿದ್ದರಂತೆ. ಗಾವಸ್ಕರ್ ತಮ್ಮ ಪುತ್ರನಿಗೆ ರೋಹನ್ ಎಂದು ಹೆಸರಿಟ್ಟಿದ್ದರು. ಆದ್ದರಿಂದ ನನಗೂ ಅದೇ ಹೆಸರನ್ನಿಡಲು ಅಪ್ಪ ಬಯಸಿದ್ದರಂತೆ. ಆದರೆ ಅವರು ರೋಹನ್ ಹೆಸರನ್ನು ರಾಹುಲ್ ಎಂದು ತಪ್ಪುತಿಳಿದು ಹಾಗೆಯೇ ಇಟ್ಟುಬಿಟ್ಟರಂತೆ ಎಂದು ಮುಗುಳ್ನಕ್ಕರು.
ವಿಜ್ಞಾನ ತೆಗೆದುಕೊಂಡರೆ ಕ್ರಿಕೆಟ್ ಆಡಲು ಕಷ್ಟ
ನನ್ನ ತಂದೆ-ತಾಯಿ ವೃತ್ತಿಯಲ್ಲಿ ಪ್ರೊಫೆಸರ್. ಸಾಲದ್ದಕ್ಕೆ ಕುಟುಂಬದಲ್ಲಿ ಯಾರನ್ನೇ ನೋಡಿದರೂ ಒಂದು ವೈದ್ಯರು, ಇಲ್ಲವೇ ಎಂಜಿನಿಯರ್‌ಗಳಾಗಿದ್ದರು ಅಥವಾ ದೊಡ್ಡದೊಡ್ಡ ಉದ್ಯೋಗದಲ್ಲಿದ್ದರು. ನಾನು ಸಹ 10ನೇ ತರಗತಿಯವರೆಗೆ ಉತ್ತಮ ವಿದ್ಯಾರ್ಥಿಯೇ ಆಗಿದ್ದೆ. ಅದು ಮುಗಿದ ಕೂಡಲೇ ಮುಂದಿನ ಶಿಕ್ಷಣಕ್ಕೆ ವಿಜ್ಞಾನವೋ, ವಾಣಿಜ್ಯವೋ ಎಂಬ ಗೊಂದಲ ಶುರುವಾಗಿತ್ತು. ನನ್ನ ಕುಟುಂಬದಲ್ಲಿ ಯಾರೂ, ಎಂದೂ ವಾಣಿಜ್ಯಶಾಸ್ತ್ರ ತೆಗೆದು ಕೊಂಡಿರಲಿಲ್ಲ. ಆ ವಿಷಯ ತೆಗೆದುಕೊಂಡರೆ ಅವಮಾನವೆಂಬಂತೆ ಅವರು ಭಾವಿಸಿದ್ದರು. ಆದರೆ ನಾನು ಮಾತ್ರ ವಿಜ್ಞಾನ ತೆಗೆದುಕೊಂಡು ಜೊತೆಜೊತೆಗೇ ಕ್ರಿಕೆಟ್ ಆಡಲು ಸಾಧ್ಯವಾಗುವುದಿಲ್ಲ ಎಂದು ಹೇಳಿದೆ. ಅವರು ಅದನ್ನು ಅರ್ಥ ಮಾಡಿಕೊಂಡರು ಎಂದು ಹೇಳಿಕೊಂಡಿದ್ದಾರೆ. ಇದನ್ನೂ ಓದಿ: IPL ಮೊದಲ ಪಂದ್ಯದಲ್ಲೇ ವಿಲಿಯಮ್ಸನ್‌ಗೆ 12 ಲಕ್ಷ ದಂಡ: ಕಾರಣ ಇಷ್ಟೇ…
ಅಮ್ಮ ಈಗಲೂ ಬೈಯುತ್ತಾರೆ
ನನ್ನಮ್ಮ ಈಗಲೂ ನೀನು ಪದವಿ ಪೂರೈಸಿಲ್ಲ ಎಂದು ಬೈಯ್ಯುತ್ತಾರೆ. ಲಾಕ್‌ಡೌನ್ ಆಗಿದ್ದಾಗಲೂ ನಿನೇಕೆ ಪಟ್ಟು ಹಿಡಿದು ಓದಬಾರದು? 30 ವಿಷಯ ಓದು ಮುಗಿಸಲು ಏನು ಕಷ್ಟ? ಎಂದು ಗರಿದ್ದರು. ಅದಕ್ಕೆ ನಾನು, ಅಮ್ಮ ನಾನು ಕ್ರಿಕೆಟ್ ಆಡುತ್ತಿದ್ದೇನೆ, ಪ್ರದರ್ಶನ ಚೆನ್ನಾಗಿಯೇ ಇದೆ. ಈಗ ನಾನು 30 ಪ್ರಶ್ನೆ ಪತ್ರಿಕೆಗಳಿಗೆ ಉತ್ತರ ಬರೀಬೇಕಾ? ವಿದ್ಯೆ ನನಗೆ ಅತ್ತುತ್ತಿಲ್ಲ ಏನು ಮಾಡಲಿ ಹೇಳು? ಎಂದು ಪ್ರಶ್ನಿಸಿದ್ದೆ. ಸಹಜವಾಗಿಯೇ ಹೌದೆಂದುಬಿಟ್ಟರು ಅಮ್ಮ. ನಾನು ಭಾರತ ಕ್ರಿಕೆಟ್ ತಂಡಕ್ಕೆ ಸೇರಿದಾಗಲೂ ಅಮ್ಮನಿಗೆ ಹೆಚ್ಚೆನು ಖುಷಿಯಿರಲಿಲ್ಲ. ಅದಾದ 4 ವರ್ಷ ನಾನು ಕ್ರಿಕೆಟ್ ಆಡಿ ಹೆಸರು ಮಾಡಿದ್ದೆ. ಆಮೇಲೆ ನನಗೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ (RBI) ಕೆಲಸ ಸಿಕ್ಕಿತು. ನನಗೆ ಕೇಂದ್ರ ಸರ್ಕಾರದ ನೌಕರಿ ಸಿಕ್ಕಿದ್ದಾಗ ಅವರು ಬಹಳ ಖುಷಿಪಟ್ಟಿದ್ದರು. ಪರ್ವಾಗಿಲ್ಲ ಇನ್ನು ನಿನಗೆ ಒಳ್ಳೆಯ ಸಂಬಳ ಸಿಗುತ್ತದೆ, ಜೀವನದಲ್ಲಿ ಒಂದು ನೆಲೆ ಕಂಡುಕೊಂಡೆ ಎಂಬಂತಿತ್ತು ಅವರ ಭಾವ ಎಂದು ಭಾವುಕರಾದರು.
ಪೊಲೀಸರ ವಿಚಾರಣೆ ವೇಳೆ ಈತ ನನಗೆ ಮಾಜಿ ಪ್ರೇಮಿಯಾಗಿದ್ದು, ನನ್ನನ್ನು ಮದುವೆಯಾಗುವಂತೆ ಕಿರುಕುಳ ನೀಡುತ್ತಿದ್ದನು. ಅದು ಅಲ್ಲದೇ ನನ್ನ ಫೋಟೋಗಳನ್ನು ಆನ್‍ಲೈನ್‍ನಲ್ಲಿ ಅಪ್‍ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದಕ್ಕೆ ಕೊಲೆ ಮಾಡಲಾಗಿದೆ ಎಂದು ತಪ್ಪನ್ನು ಒಪ್ಪಿಕೊಂಡಿದ್ದಾಳೆ.
ಏನಿದು ಘಟನೆ?
26 ವರ್ಷದ ಜೆ.ದೇಸಪ್ರಿಯಾ ಒಎಂಆರ್‍ನಲ್ಲಿ ಕಳವಕ್ಕಂನ ಖಾಸಗಿ ಕಾಲೇಜಿನಲ್ಲಿ ಭೌತಶಾಸ್ತ್ರದ ವಿಷಯದಲ್ಲಿ ಪಿಎಚ್‍ಡಿ ಮಾಡುತ್ತಿದ್ದಳು. ಈಕೆ ಉಲುಂದೂರುಪೇಟೆಯ 27 ವರ್ಷದ ಎಸ್ ಅರುಣ್ ಪಾಂಡಿಯನ್‍ನ್ನು ಪ್ರೀತಿಸುತ್ತಿದ್ದಳು.
ಈತನೂ ಸಹ ಕಟ್ಟಂಕುಳತ್ತೂರಿನ ವಿಶ್ವವಿದ್ಯಾಲಯವೊಂದರಲ್ಲಿ ಸಂಶೋಧನಾ ವಿದ್ಯಾರ್ಥಿಯಾಗಿದ್ದನು. ಮೃತನಾದ ಪೆರಂಬಲೂರಿನ ಕೆ.ಸೆಂಥಿಲ್(43) ನಗರದ ಜನಪ್ರಿಯ ಇಂಜಿನಿಯರಿಂಗ್ ಕಾಲೇಜಿನಲ್ಲಿ ಭೌತಶಾಸ್ತ್ರದ ಪ್ರಾಧ್ಯಾಪಕನಾಗಿದ್ದ.
ದೇಸಪ್ರಿಯಾ ಕಟ್ಟಂಕುಳತ್ತೂರಿನ ವಿಶ್ವವಿದ್ಯಾನಿಲಯದಲ್ಲಿ ಓದುತ್ತಿದ್ದಾಗ ಸೆಂಥಿಲ್‍ನೊಂದಿಗೆ ಸಂಬಂಧ ಹೊಂದಿದ್ದಳು. ಆದರೆ ಲಾಕ್‍ಡೌನ್ ಸಮಯದಲ್ಲಿ ಇಬ್ಬರ ನಡುವೆ ಭಿನ್ನಭಿಪ್ರಾಯ ಬಂದು ಅವರ ಸಂಬಂಧ ಮುರಿದು ಬಿದ್ದಿತ್ತು. ನಂತರ ದೇಸಪ್ರಿಯಾ ಅರುಣ್ ಪಾಂಡಿಯನ್ ನನ್ನು ಪ್ರೀತಿ ಮಾಡಿದ್ದಾಳೆ. ವಿಷಯ ತಿಳಿದ ಮಾಜಿ ಪ್ರೇಮಿ ಕೆ.ಸೆಂಥಿಲ್ ದೇಸಪ್ರಿಯಾಳಿಗೆ ಕಿರುಕುಳ ನೀಡಲು ಪ್ರಾರಂಭಿಸಿದ್ದ. ನನ್ನನ್ನು ಮದುವೆಯಾಗಿಲ್ಲ ಎಂದರೆ ನಿನ್ನ ಎಲ್ಲ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್‍ಲೋಡ್ ಮಾಡುವುದಾಗಿ ಬೆದರಿಕೆ ಹಾಕಿದ್ದ.
ಗುರುವಾರ ಮಧ್ಯಾಹ್ನ 1:30 ಸುಮಾರಿಗೆ ದೇಸಪ್ರಿಯಾ ಸೆಂಥಿಲ್‍ನನ್ನು ತನ್ನ ಕಾಲೇಜಿಗೆ ಮಾತನಾಡುವುದಾಗಿ ಕರೆಸಿಕೊಂಡಿದ್ದಾಳೆ. ಆಗ ಅರುಣ್ ಪಾಂಡಿಯನ್ ಸಹ ಸೇರಿಕೊಂಡಿದ್ದಾನೆ. ನಂತರ ದೇಸಪ್ರಿಯಾ ಮತ್ತು ಅರುಣ್ ಪಾಂಡಿಯನ್ ಕತ್ತು ಸೀಳಿ ಸೆಂಥಿಲ್‍ಗೆ ಹಲವಾರು ಬಾರಿ ಚಾಕುವಿನಿಂದ ಇರಿದಿದ್ದಾರೆ. ಇಬ್ಬರೂ ಪರಾರಿಯಾಗಲು ಯತ್ನಿಸಿದ್ದು, ಸ್ಥಳದಲ್ಲಿದ್ದವರು ಇಬ್ಬರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಪೊಲೀಸರು ಇಬ್ಬರನ್ನು ವಿಚಾರಣೆಯನ್ನು ಮಾಡಿದ್ದು, ಇಬ್ಬರು ತಪ್ಪನ್ನು ಒಪ್ಪಿಕೊಂಡಿದ್ದಾರೆ. ಈ ವೇಳೆ ದೇವಪ್ರಿಯಾ, ಸೆಂಥಿಲ್‍ಗೆ ಈಗಾಗಲೇ ಮದುವೆಯಾಗಿದೆ. ಈಗ ಆತನ ಪತ್ನಿ ತವರು ಮನೆಯಲ್ಲಿದ್ದಾಳೆ. ಮದುವೆಯಾಗಿ ಏಳು ವರ್ಷಗಳಾದರೂ ಈ ದಂಪತಿಗೆ ಮಕ್ಕಳಾಗದ ಕಾರಣ ಪತ್ನಿಯನ್ನು ಒಪ್ಪಿಸಿ ಮದುವೆಯಾಗುವುದಾಗಿ ನನಗೆ ಹೇಳಿದ್ದ ಎಂದು ಪೊಲೀಸರಿಗೆ ತಿಳಿಸಿದ್ದಾಳೆ. ಇದನ್ನೂ ಓದಿ: ಅನುಮತಿ ಇಲ್ಲದೇ ಯಾರೋ ಮನೆಯೊಳಗೆ ಬಂದರೆಂದು ತಪ್ಪಾಗಿ ಭಾವಿಸಿ ಮಗಳನ್ನೇ ಕೊಂದ ತಂದೆ!
ಈ ಇಬ್ಬರೂ ಅವನನ್ನು ಬೇರೆಡೆಗೆ ಕರೆದೊಯ್ದು ಕೊಲೆ ಮಾಡಲು ಯೋಚಿಸಿದ್ದೆವು. ಆದರೆ ಆತನನ್ನು ನೋಡಿ ಸಿಟ್ಟಾಗಿ ಸ್ಥಳದಲ್ಲೇ ಕೊಲೆ ಮಾಡಿದ್ದೇವೆ ಎಂದು ಆರೋಪಿಗಳು ತಿಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದರು.
ಪ್ರಸ್ತುತ ಈ ಪ್ರಕರಣ ಕೆಲಂಬಾಕ್ಕಂ ಪೊಲೀಸರು ದಾಖಲಿಸಿಕೊಂಡಿದ್ದಾರೆ.
ಆಂಧ್ರಪ್ರದೇಶದ ಪ್ರತಿಷ್ಠಿತ ವಿವಿಯ ಪ್ರಾಧ್ಯಾಪಕ ಡಾ.ಕೊಂಡೂರು ಸುಧೀರ್ ಕುಮಾರ್ ಬಂಧಿತ ಆರೋಪಿ. ಮಂಗಳೂರಿನ ವಿದ್ಯಾರ್ಥಿನಿ ಪ್ರಾಧ್ಯಾಪಕಿಯೊಬ್ಬರ ಮಾರ್ಗದರ್ಶನದಲ್ಲಿ ಪಿಎಚ್‍ಡಿ ಮಾಡುತ್ತಿದ್ದರು, ಈ ಮಧ್ಯೆ ಪರಿಚಯವಾದ ಸುಧೀರ್ ತನ್ನನ್ನು ಮಾರ್ಗದರ್ಶಕನಾಗಿ ನೇಮಿಸುವಂತೆ ಒತ್ತಾಯಿಸಿದ್ದ. ಆದರೆ ವಿ.ವಿಯ ಅನುಮತಿ ಕೇಳಿದಾಗ ಆತನಿಗೆ ಅರ್ಹತೆಯಿಲ್ಲ ಎಂದು ನಿರಾಕರಿಸಲಾಗಿತ್ತು. ಬಳಿಕ ವಿದ್ಯಾರ್ಥಿನಿಗೆ ಕಿರುಕುಳ ನೀಡಲು ಪ್ರಾರಂಭಿಸಿದ್ದಾನೆ. ಇದನ್ನೂ ಓದಿ: ಹೈ ಪ್ರೊಫೈಲ್ ಡ್ರಗ್ಸ್ ಕೇಸ್- ಶಾರುಖ್ ಖಾನ್ ಪುತ್ರನಿಗೆ ಬಂಧನ ಭೀತಿ
ಸುಧೀರ್ ವಿದ್ಯಾರ್ಥಿನಿ ಮತ್ತು ಮನೆಯವರಿಗೆ ಕಿರುಕುಳ ನೀಡುವುದನ್ನು ಸಹಿಸಲಾಗದೆ ಪೊಲೀಸರಿಗೆ ದೂರು ನೀಡಿದ್ದರು. ವಿದ್ಯಾರ್ಥಿನಿಯ ಫೋಟೋ ಎಡಿಟ್ ಮಾಡಿ ಸಾಮಾಜಿಕ ತಾಣಗಳಲ್ಲಿ ವೈರಲ್ ಮಾಡಿದ್ದರಿಂದ ವಿದ್ಯಾರ್ಥಿನಿಯ ಮನೆಯವರ ದೂರಿನ ಹಿನ್ನೆಲೆ ಆರೋಪಿಯನ್ನು ಮಂಗಳೂರು ಸೈಬರ್ ಕ್ರೈಮ್ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ನವೆಂಬರ್ ವೇಳೆಗೆ ಮಕ್ಕಳಿಗೆ ಲಸಿಕೆ ಸಾಧ್ಯತೆ: ಸುಧಾಕರ್