Tag: Progress Review Meeting

  • ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಪಿ ಪ್ರವಾಸ

    ಮುಖ್ಯಮಂತ್ರಿ ಸಿದ್ದರಾಮಯ್ಯ ಉಡುಪಿ ಪ್ರವಾಸ

    ಉಡುಪಿ: ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaih) ಇಂದು (ಮಂಗಳವಾರ) ಉಡುಪಿ (Udupi) ಪ್ರವಾಸ ಕೈಗೊಂಡಿದ್ದು, ಇವರ ಈ ಪ್ರವಾಸ ತೀವ್ರ ಕುತೂಹಲಕ್ಕೆ ಕಾರಣವಾಗಿದೆ.

    ಸಿದ್ದರಾಮಯ್ಯ ಅವರು ಪ್ರಗತಿ ಪರಿಶೀಲನಾ ಸಭೆಗೆ (Progress Review Meeting) ಉಡುಪಿಗೆ ಆಗಮಿಸುತ್ತಿದ್ದು, ಉಡುಪಿಯ ಮಣಿಪಾಲದಲ್ಲಿರುವ (Manipal) ರಜತಾದ್ರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಯಲಿದೆ. ಕೆಡಿಪಿ ಸಭೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ (Lakshmi Hebbalkar) ಭಾಗಿಯಾಗಲಿದ್ದಾರೆ. ಸದ್ಯ ರಾಜ್ಯದಲ್ಲಿ ಚರ್ಚೆಯಲ್ಲಿರುವ ಖಾಸಗಿ ಕಾಲೇಜಿನ ವಿಡಿಯೋ ಪ್ರಕರಣದ ಕುರಿತು ಪ್ರಗತಿ ಪರಿಶೀಲನಾ ಸಭೆ ನಡೆಯಲಿದ್ದು, ಸಭೆಯಲ್ಲಿ ಉಡುಪಿಯ ಐದು ಬಿಜೆಪಿ (BJP) ಶಾಸಕರು ಭಾಗಿಯಾಗಲಿದ್ದಾರೆ. ಇದನ್ನೂ ಓದಿ: ತರಕಾರಿ ಬೆಲೆಯೂ ತುಟ್ಟಿ – ಗ್ರಾಹಕರಿಗೆ ತಟ್ಟಿದ ಬೆಲೆ ಏರಿಕೆ ಬಿಸಿ; ಯಾವ ತರಕಾರಿಗೆ ಎಷ್ಟು ದರ?

    ಪ್ರಗತಿ ಪರಿಶಿಲನಾ ಸಭೆಯಲ್ಲಿ ವಿಡಿಯೋ ಪ್ರಕರಣದ ಕುರಿತು ಚರ್ಚೆಯಾಗುವ ಸಾಧ್ಯತೆಗಳಿದ್ದು, ಉಡುಪಿಯಲ್ಲಿ ಮುಂಗಾರು ಮಳೆ ಅಬ್ಬರ ಹಾನಿ ಕುರಿತಂತೆ ಚರ್ಚೆ ನಡೆಯುವ ಸಾಧ್ಯತೆಗಳಿವೆ. ಅಲ್ಲದೇ ಉಡುಪಿ ಜಿಲ್ಲೆಯ ಅಭಿವೃದ್ಧಿ ಕುರಿತಂತೆ ಸಭೆಯಲ್ಲಿ ಚರ್ಚೆಯಾಗುವ ನಿರೀಕ್ಷೆಗಳಿವೆ. ಇದನ್ನೂ ಓದಿ: ಇಂದಿನಿಂದ ಎಕ್ಸ್‌ಪ್ರೆಸ್‌ ವೇನಲ್ಲಿ ಬೈಕ್, ಆಟೋ ಸಂಚಾರಕ್ಕೆ ನಿರ್ಬಂಧ – ರೂಲ್ಸ್ ಬ್ರೇಕ್ ಮಾಡಿದ್ರೆ ದಂಡ

    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 11:30ಕ್ಕೆ ಕಾಪು (Kapu) ತಾಲೂಕಿನ ಪಡುಬಿದ್ರೆ ಬೀಚ್‌ಗೆ ಭೇಟಿ ನೀಡಲಿದ್ದಾರೆ. ಮಧ್ಯಾಹ್ನ 12:30ಕ್ಕೆ ಪ್ರಗತಿ ಪರಿಶೀಲನಾ ಸಭೆ ನಡೆಯಲಿದ್ದು, ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಇರಿಸಲಾಗಿದೆ. ಇದನ್ನೂ ಓದಿ: Commercial LPG Cylinder Price: ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್ ಬೆಲೆ 100 ರೂ. ಇಳಿಕೆ

     

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸಭೆಗೆ ಅಧಿಕಾರಿಗಳು ಗೈರು – ಸಿಬ್ಬಂದಿಯನ್ನೂ ಸಭೆಯಿಂದ ಹೊರಹಾಕಿದ ಶಾಸಕ

    ಸಭೆಗೆ ಅಧಿಕಾರಿಗಳು ಗೈರು – ಸಿಬ್ಬಂದಿಯನ್ನೂ ಸಭೆಯಿಂದ ಹೊರಹಾಕಿದ ಶಾಸಕ

    ಬೀದರ್: ಪ್ರಗತಿ ಪರಿಶೀಲನಾ ಸಭೆಗೆ ಕೆಲ ಇಲಾಖೆಗಳ ಅಧಿಕಾರಿಗಳು ತಾವು ಬಾರದೇ ತಮ್ಮ ಪರವಾಗಿ ಬೇರೊಬ್ಬ ಅಧಿಕಾರಿಯನ್ನು ಕಳುಹಿಸಿದ್ದು, ಇದರಿಂದ ಕೋಪಗೊಂಡ ಶಾಸಕ ನಾರಾಯಣರಾವ್ ಸಿಬ್ಬಂದಿಯನ್ನು ಸಭೆಯಿಂದ ಹೊರ ಹಾಕಿದ ಪ್ರಸಂಗ ನಡೆದಿದೆ.

    ಬಸವಕಲ್ಯಾಣ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಪ್ರಗತಿ ಪರಿಶೀಲನಾ ಸಭೆಗೆ ಕೆಲ ಇಲಾಖೆ ಅಧಿಕಾರಿಗಳು ತಾವು ಬಾರದೇ ತಮ್ಮ ಪರವಾಗಿ ಬೇರೊಬ್ಬ ಅಧಿಕಾರಿಯನ್ನು ಕಳುಹಿಸಿದ್ದರು. ಇದರಿಂದ ಕೋಪಗೊಂಡ ಶಾಸಕರು ಸಿಬ್ಬಂದಿಯನ್ನು ಸಭೆಯಿಂದ ಹೊರ ಹಾಕಿದ್ದಾರೆ.

    ಬೆಳಗ್ಗೆ ಆರಂಭವಾಗಬೇಕಿದ್ದ ಸಭೆ ತಡವಾಗಿ ಮಧ್ಯಾಹ್ನ ಆರಂಭವಾಯಿತು. ಈ ವೇಳೆ ಬಹುತೇಕ ಇಲಾಖೆ ಅಧಿಕಾರಿಗಳು ಗೈರಾಗಿದ್ದರು. ಅಧಿಕಾರಿಗಳ ಗೈರು ಕುರಿತು ಗಮನಿಸಿ ಗರಂ ಆದ ತಾಲೂಕು ಪಂಚಾಯಿತಿ ಅಧ್ಯಕ್ಷೆ ಯಶೋಧಾ ನೀಲಕಂಠ ರಾಠೋಡ ಅವರು, ಸಭೆ ಆರಂಭದಲ್ಲಿಯೇ ಗೈರಾಗಿದ್ದ ಅಧಿಕಾರಿಗಳಿಗೆ ನೋಟಿಸ್ ಜಾರಿ ಮಾಡಿ, ತಪ್ಪಿತಸ್ಥರ ಮೇಲೆ ಶಿಸ್ತು ಕ್ರಮ ಕೈಗೊಳ್ಳಿ ಎಂದು ತಾ.ಪಂ ಸಿಇಒ ಪಿ.ಎಸ್.ಮಡೋಳಪ್ಪ ಅವರಿಗೆ ಸೂಚಿಸಿದರು.

    ಈ ವೇಳೆ ಮಧ್ಯ ಪ್ರವೇಶಿಸಿದ ಶಾಸಕ ನಾರಾಯಣರಾವ್, ಸಭೆಯಲ್ಲಿ ತಮ್ಮ ಇಲಾಖೆಯ ಮುಖ್ಯ ಅಧಿಕಾರಿಗಳ ಪರವಾಗಿ ಪಾಲ್ಗೊಂಡಿರುವ ಸಹಾಯಕ ಸಿಬ್ಬಂದಿ ಎದ್ದು ನಿಲ್ಲಿ ಎಂದು ತಿಳಿಸಿದರು. ಆಗ ನೀರಾವರಿ, ಮೀನುಗಾರಿಕೆ, ಪಶು ಸಂಗೋಪನೆ ಸೇರಿದಂತೆ ವಿವಿಧ ಇಲಾಖೆಯ ಸಿಬ್ಬಂದಿ ಸಭೆಯಲ್ಲಿ ಎದ್ದು ನಿಂತರು. ನಿಮ್ಮ ಇಲಾಖೆ ಅಧಿಕಾರಿಗಳು ಎಲ್ಲಿಗೆ ಹೋಗಿದ್ದಾರೆ ಎಂದು ಶಾಸಕರು ಪ್ರಶ್ನಿಸಿದರು. ಸಭೆಗೆ ಬರಲು ಸಾಧ್ಯವಾಗದವರು ನಮಗೆ ಮುಂಚಿತವಾಗಿಯೇ ಮಾಹಿತಿ ನೀಡಬೇಕು ಎಂದು ಅಸಮಾಧಾನ ವ್ಯಕ್ತಪಡಿಸಿ, ಸಭೆಯಲ್ಲಿ ಪಾಲ್ಗೊಂಡಿದ್ದ ಸಹಾಯಕ ಸಿಬ್ಬಂದಿಯನ್ನು ಸಭೆಯಿಂದ ಹೊರ ಹೋಗುವಂತೆ ಸೂಚಿಸಿದರು.