Tag: Prohibition order

  • ಬೆಂಗ್ಳೂರಿನಲ್ಲಿ ನಿಷೇಧಾಜ್ಞೆ ಜಾರಿ

    ಬೆಂಗ್ಳೂರಿನಲ್ಲಿ ನಿಷೇಧಾಜ್ಞೆ ಜಾರಿ

    ಬೆಂಗಳೂರು: ಮೇ 13ರಂದು ಚುನಾವಣಾ ಫಲಿತಾಂಶ (Election Result) ಪ್ರಕಟ ಹಿನ್ನಲೆಯಲ್ಲಿ ಬೆಂಗಳೂರು ನಗರದಾದ್ಯಂತ ಸೆಕ್ಷನ್ 144 ಸೆಕ್ಷನ್ ಜಾರಿ ಮಾಡಲಾಗಿದೆ.

    ಮತ ಎಣಿಕೆ ಸಮಯದಲ್ಲಿ ಸಮಾಜಘಾತುಕ ವ್ಯಕ್ತಿಗಳು, ಕಿಡಿಗೇಡಿಗಳು ಗೆದ್ದ ಹಾಗೂ ಸೋತ ಅಭ್ಯರ್ಥಿಗಳ ಪರವಾಗಿ ಪ್ರತಿಭಟನೆ ಮಾಡುವ ಸಾಧ್ಯತೆ ಇದೆ. ಹೀಗಾಗಿ ಮತ ಎಣಿಕೆ ಕೇಂದ್ರಗಳನ್ನೊಳಗೊಂಡಂತೆ ಬೆಂಗಳೂರಿನಾದ್ಯಂತ ನಿಷೇಧಾಜ್ಞೆ ಹೊರಡಿಸಲಾಗಿದೆ. ಇದನ್ನೂ ಓದಿ: ಚುನಾವಣಾ ಬೆಟ್ಟಿಂಗ್‍: 1 ಎಕರೆ 37 ಗುಂಟೆ ಜಮೀನು ಮಾರಾಟ ಮಾಡಲು ಮುಂದಾದ ಕೈ ಮುಖಂಡ!

    5 ಅಥವಾ ಅದಕ್ಕಿಂತ ಹೆಚ್ಚು ಜನರ ಗುಂಪು ಸೇರುವುದು ನಿಷೇಧ. ಮದುವೆ ಹಾಗೂ ಶವಸಂಸ್ಕಾರವನ್ನ ಹೊರತುಪಡಿಸಿ ಉಳಿದೆಲ್ಲದಕ್ಕೂ ಪ್ರತಿಬಂಧಕಾಜ್ಞೆ ಅನ್ವಯವಾಗಲಿದೆ. ಮೇ 13ರಂದು ಬೆಳಗ್ಗೆ 6 ಗಂಟೆಯಿಂದ ಮಧ್ಯರಾತ್ರಿ 12ರ ವರೆಗೆ ಈ ಆದೇಶ ಜಾರಿಯಲ್ಲಿರಲಿದೆ. ಇದನ್ನೂ ಓದಿ: ಎಕ್ಸಿಟ್ ಪೋಲ್ ನಂಬಿದ ಕಾಂಗ್ರೆಸ್‍ನಲ್ಲಿ ನಾನಾ ಲೆಕ್ಕಾಚಾರ- ಸಿಎಂ ಆಗುವ ಕನಸಲ್ಲಿ ಸಿದ್ದು, ಡಿಕೆ

  • ಯಾದಗಿರಿಯಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಗಲಾಟೆ – 2 ದಿನಗಳ ಕಾಲ ನಿಷೇಧಾಜ್ಞೆ ಜಾರಿ

    ಯಾದಗಿರಿಯಲ್ಲಿ ಕಾಂಗ್ರೆಸ್, ಬಿಜೆಪಿ ಕಾರ್ಯಕರ್ತರ ಗಲಾಟೆ – 2 ದಿನಗಳ ಕಾಲ ನಿಷೇಧಾಜ್ಞೆ ಜಾರಿ

    ಯಾದಗಿರಿ: ಯಾದಗಿರಿ (Yadgiri) ಜಿಲ್ಲೆಯಲ್ಲಿ ಮತದಾನ ಪೂರ್ಣಗೊಳ್ಳುವ ವೇಳೆ ಕಾಂಗ್ರೆಸ್ (Congress) ಮತ್ತು ಬಿಜೆಪಿ (BJP) ಕಾರ್ಯಕರ್ತರ ನಡುವೆ ಗಲಾಟೆ ನಡೆದಿದ್ದು, ಕೆಂಭಾವಿ ಮತ್ತು ಸುರಪುರ ಪಟ್ಟಣಗಳಲ್ಲಿ 2 ದಿನಗಳ ಕಾಲ ಸೆಕ್ಷನ್ 144 ಜಾರಿ ಮಾಡಲಾಗಿದೆ.

    ಜಿಲ್ಲೆಯಲ್ಲಿ ಮೇ 10ರಂದು ಬೆಳಗ್ಗೆಯಿಂದ ಸಂಜೆಯವರೆಗೆ ಶಾಂತಿಯುತವಾಗಿ ಮತದಾನ (Voting) ಪ್ರಕ್ರಿಯೆ ನಡೆದಿತ್ತು. ಮತದಾನ ಪ್ರಕ್ರಿಯೆ ಪೂರ್ಣಗೊಳ್ಳುವ ವೇಳೆ ಕೆಂಭಾವಿ (Kembhavi) ಮತ್ತು ಸುರಪುರ (Surapura) ಪಟ್ಟಣಗಳಲ್ಲಿ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಈ ಗಲಾಟೆಯಲ್ಲಿ ಮೂವರು ಕಾಂಗ್ರೆಸ್ ಕಾರ್ಯಕರ್ತರಿಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಾಗಿದ್ದಾರೆ. ಇದನ್ನೂ ಓದಿ: ಒಂದೇ ಅವಧಿಯಲ್ಲಿ ಒಬ್ಬ 2 ಅಸೆಂಬ್ಲಿ, 2 ಎಂಪಿ ಚುನಾವಣೆ ಎದುರಿಸಿದ್ರೆ ಅದು ನಾನೊಬ್ಬನೇ: ಪುಟ್ಟರಾಜು

    ಘಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿ.ಬಿ.ವೇದಮೂರ್ತಿ ಪರಿಸ್ಥಿತಿಯನ್ನು ಅವಲೋಕಿಸಿ 2 ದಿನಗಳ ಕಾಲ ಸೆಕ್ಷನ್ 144 ಜಾರಿಗೊಳಿಸಿ ಆದೇಶಿಸಿದ್ದಾರೆ. ಮೇ 10ರ ಸಂಜೆ 6 ಗಂಟೆಯಿಂದ ಮೇ 12ರ ಬೆಳಗ್ಗೆ 6 ಗಂಟೆಯವರೆಗೆ ಸೆಕ್ಷನ್ 144 ಜಾರಿಗೊಳಿಸಲಾಗಿದೆ. ಈ ಎರಡು ದಿನಗಳ ಕಾಲ ಪಟ್ರೋಲಿಂಗ್ ಮತ್ತು ಗಸ್ತು ಪಡೆ ಇಲ್ಲೇ ಠಿಕಾಣಿ ಹೂಡಲಿದೆ. ಇದನ್ನೂ ಓದಿ: ಸಿದ್ದರಾಮಯ್ಯ ನನಗಿಂತ ಗಟ್ಟಿ ಅಲ್ಲವೇ ಅಲ್ಲ: ಜಿಟಿಡಿ

    ನಿಷೇಧಾಜ್ಞೆ ಜಾರಿಯಿಂದಾಗಿ ಎರಡೂ ಪಟ್ಟಣಗಳಲ್ಲಿ 5ಕ್ಕಿಂತ ಹೆಚ್ಚು ಜನ ಗುಂಪು ಸೇರುವಂತಿಲ್ಲ. ಎಲ್ಲರೂ ಶಾಂತಿ ಹಾಗೂ ಸುವ್ಯವಸ್ಥೆಯನ್ನು ಕಾಪಾಡಬೇಕು. ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಯಾದಗಿರಿ ಎಸ್ಪಿ ಡಾ.ಸಿ.ಬಿ.ವೇದಮೂರ್ತಿ ಖಡಕ್ ಸಂದೇಶ ರವಾನಿಸಿದ್ದಾರೆ. ಇದನ್ನೂ ಓದಿ: Maharashtra political crisis: ಉದ್ಧವ್‌ ಠಾಕ್ರೆ ಸರ್ಕಾರ ಮರುಸ್ಥಾಪಿಸಲು ಸಾಧ್ಯವಿಲ್ಲ – ಶಿಂಧೆ ಬಣಕ್ಕೆ ಸುಪ್ರೀಂ ರಿಲೀಫ್‌

  • ಕೊಡಗಿನಲ್ಲಿ 4 ದಿನದ ಬಳಿಕ ನಿಷೇಧಾಜ್ಞೆ ಹಿಂಪಡೆದ ಜಿಲ್ಲಾಡಳಿತ

    ಕೊಡಗಿನಲ್ಲಿ 4 ದಿನದ ಬಳಿಕ ನಿಷೇಧಾಜ್ಞೆ ಹಿಂಪಡೆದ ಜಿಲ್ಲಾಡಳಿತ

    ಮಡಿಕೇರಿ: ಕೊಡಗಿನಲ್ಲಿ 4 ದಿನಗಳಿಂದ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಜಿಲ್ಲಾಡಳಿತ ಶನಿವಾರ ಸಂಜೆ ಹಿಂಪಡೆದಿದೆ.

    ಮಾಜಿ ಸಿಎಂ ಸಿದ್ದರಾಮಯ್ಯ ಅವರ ಕಾರಿಗೆ ಮೊಟ್ಟೆ ಎಸೆದ ಪ್ರಕರಣದ ಬಳಿಕ ಉಂಟಾದ ರಾಜಕೀಯ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಶುಕ್ರವಾರ ಕಾಂಗ್ರೆಸ್‌ನಿಂದ ಮಡಿಕೇರಿ ಚಲೋ ಮತ್ತು ಬಿಜೆಪಿಯಿಂದ ಜನ ಜಾಗೃತಿ ಸಮಾವೇಶ ಘೋಷಣೆಯಾಗಿತ್ತು. ಆದರೆ ಕೋಮು ಸೂಕ್ಷ್ಮ ಜಿಲ್ಲೆಯಾದ ಕೊಡಗಿನಲ್ಲಿ ಪರಿಸ್ಥಿತಿಯ ದುರ್ಲಾಭವನ್ನು ಹೊರಗಿನ ವ್ಯಕ್ತಿಗಳು ಪಡೆಯಲು ನಡೆಸಿರುವ ಹುನ್ನಾರ ಗೊತ್ತಾಗುತ್ತಿದ್ದಂತೆಯೇ ಎಚ್ಚೆತ್ತುಕೊಂಡ ಜಿಲ್ಲಾಡಳಿತ ಆಗಸ್ಟ್ 24ರ ಬೆಳಗ್ಗೆ 6 ರಿಂದ ಇಂದು ಸಂಜೆ 6 ಗಂಟೆ ತನಕ ನಿಷೇಧಾಜ್ಞೆ ಜಾರಿಗೊಳಿಸಿತ್ತು. ಇದನ್ನೂ ಓದಿ: ಮುಂಬರುವ ಹಬ್ಬಗಳಲ್ಲಿ ಖಾದಿ ಉತ್ಪನ್ನಗಳನ್ನೇ ಗಿಫ್ಟ್ ಕೊಡಿ – ಜನರಿಗೆ ಮೋದಿ ಕರೆ

    4 ದಿನಗಳಿಂದ 144 ಸೆಕ್ಷನ್ ಇದ್ದರೂ ಜಿಲ್ಲೆಯ ಜನಜೀವನ ಎಂದಿನಂತೆಯೇ ನಡೆಯುತ್ತಿತ್ತು. ಗಾಡಿಭಾಗದ ಎಲ್ಲಾ ಚೆಕ್‌ಪೋಸ್ಟ್‌ಗಳಲ್ಲಿಯೂ ಪೊಲೀಸ್ ಇಲಾಖೆಯಿಂದ ಹೈ ಅಲರ್ಟ್ ಮಾಡಲಾಗಿತ್ತು. ಇದೀಗ ಸಂಜೆ 6 ಗಂಟೆಯ ಬಳಿಕ ನಿಷೇಧಾಜ್ಞೆಯನ್ನು ಜಿಲ್ಲಾಡಳಿತ ಹಿಂದಕ್ಕೆ ಪಡೆದಿದ್ದು, ಜಿಲ್ಲೆಯ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಇದನ್ನೂ ಓದಿ: ಭಾರತದ 49ನೇ CJI ಆಗಿ ಯುಯು ಲಲಿತ್ ಪ್ರಮಾಣ ವಚನ ಸ್ವೀಕಾರ

    Live Tv
    [brid partner=56869869 player=32851 video=960834 autoplay=true]

  • ಗುಂಪು ಘರ್ಷಣೆಗೆ ಇಬ್ಬರು ಬಲಿ – ಕೊಪ್ಪಳದ ಹುಲಿಹೈದರ್ ಗ್ರಾಮದಲ್ಲಿ ನಿಷೇಧಾಜ್ಞೆ

    ಗುಂಪು ಘರ್ಷಣೆಗೆ ಇಬ್ಬರು ಬಲಿ – ಕೊಪ್ಪಳದ ಹುಲಿಹೈದರ್ ಗ್ರಾಮದಲ್ಲಿ ನಿಷೇಧಾಜ್ಞೆ

    ಕೊಪ್ಪಳ: ಗುಂಪು ಘರ್ಷಣೆಗೆ ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲೂಕಿನ ಹುಲಿಹೈದರ್ ಗ್ರಾಮ ಬೆಚ್ಚಿಬಿದ್ದಿದೆ.

    ಕ್ಷುಲ್ಲಕ ಕಾರಣಕ್ಕೆ ನಡೆದ ಗುಂಪು ಘರ್ಷಣೆಯಲ್ಲಿ ಯಂಕಪ್ಪ(60) ಮತ್ತು ಭಾಷಾವಲಿ(22) ಮೃತಪಟ್ಟಿದ್ದು, ಧರ್ಮಣ್ಣ ಹರಿಜನ್ ಗಂಭೀರವಾಗಿ ಗಾಯಗೊಂಡು ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ. ಇದನ್ನೂ ಓದಿ: ಸ್ಯಾಂಡಲ್‍ವುಡ್ ಹಿರಿಯ ನಿರ್ಮಾಪಕ ನರ್ಗಿಸ್ ಬಾಬು ಇನ್ನಿಲ್ಲ

    ಮುಸ್ಲಿಂ ಸಮುದಾಯದ ಹುಡುಗಿಯರನ್ನು ಎಸ್.ಟಿ ಸಮುದಾಯದವರು ಮದುವೆಯಾಗಿದ್ದಾರೆ ಎಂಬ ವಿಚಾರಕ್ಕೆ ಮಾತಿಗೆ ಮಾತು ಬೆಳೆದು ಗಲಾಟೆ ನಡೆದಿದೆ. ಮುಸ್ಲಿಂ ಸಮುದಾಯದವರೇ ಚಾಕು ಹಿಡಿದುಕೊಂಡು ಬಂದು ಹಲ್ಲೆ ಮಾಡಿದ್ದಾರೆ ಅಂತ ಮೃತ ಯಂಕಪ್ಪ ಮನೆಯವರು ಆರೋಪಿಸಿದ್ದಾರೆ. ಅಲ್ಲದೇ ಈ ಗಲಾಟೆ ಹಿಂದೆ ಮಾಜಿ ಸಚಿವ ಶಿವರಾಜ್ ತಂಗಡಗಿ ಆಪ್ತ ಹನುಮೇಶ್ ನಾಯಕ್ ಕಾರಣ ಎಂಬ ಆರೋಪವು ಕೇಳಿ ಬಂದಿದೆ. 

    ಸದ್ಯ ಎರಡು ಗುಂಪುಗಳ ನಡುವೆ ನಡೆದ ಗಲಾಟೆಗೆ ಇಡೀ ಗ್ರಾಮವೇ ಬೂದಿ ಮುಚ್ಚಿದ ಕೆಂಡದಂತಿದೆ. ಗ್ರಾಮದಲ್ಲಿ ಆಗಸ್ಟ್ 20ರವರೆಗೂ 144 ಸೆಕ್ಷನ್ ಜಾರಿ ಮಾಡಿದ್ದು, 70ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ. ಸಿಸಿ ಕ್ಯಾಮೆರಾ ಆಧರಿಸಿ ಈ ಸಂಬಂಧ ಕನಕಗಿರಿ ಠಾಣೆಯಲ್ಲಿ 58 ಮಂದಿ ವಿರುದ್ಧ ದೂರು ದಾಖಲಾಗಿದ್ದು, ಖಾದರಭಾಷಾ ಹಾಗೂ ಹಂಪಮ್ಮ ದೂರು ಪ್ರತಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಸಿಲಿಕಾನ್ ಸಿಟಿಗೆ ಮತ್ತಷ್ಟು ಎಲೆಕ್ಟ್ರಿಕ್ ಬಸ್‍ಗಳು – ಆಗಸ್ಟ್ 15ಕ್ಕೆ ಮುಖ್ಯಮಂತ್ರಿಗಳಿಂದ ಚಾಲನೆ

    Live Tv
    [brid partner=56869869 player=32851 video=960834 autoplay=true]