Tag: Promo

  • ಪ್ರೇಮಿಗಳ ದಿನಕ್ಕೆ ‘ಯುಐ’ ತಂಡದಿಂದ ಫಸ್ಟ್ ಸಿಂಗಲ್ ಪ್ರೊಮೋ

    ಪ್ರೇಮಿಗಳ ದಿನಕ್ಕೆ ‘ಯುಐ’ ತಂಡದಿಂದ ಫಸ್ಟ್ ಸಿಂಗಲ್ ಪ್ರೊಮೋ

    ಟ, ನಿರ್ದೇಶಕ ಉಪೇಂದ್ರ ಯಾವ ಸಮಯವನ್ನು ಹೇಗೆ ತಮ್ಮ ಚಿತ್ರದ ಪ್ರಚಾರಕ್ಕಾಗಿ ಬಳಸಿಕೊಳ್ಳುತ್ತಾರೋ ಅವರಿಗಷ್ಟೇ ಗೊತ್ತು. ಅದರಲ್ಲೂ ಪ್ರೀತಿ ಪ್ರೇಮ ಪುಸ್ತಕದ ಬದ್ನೆಕಾಯಿ ಎಂದಿದ್ದ ಉಪ್ಪಿ, ಇದೀಗ ಅದೇ ಪ್ರೇಮಿಗಳ ದಿನದಂದು (Valentine’s Day) ತಮ್ಮ ಯುಐ ಸಿನಿಮಾದ ಫಸ್ಟ್ ಸಿಂಗಲ್ ಪ್ರೋಮೋ (Promo) ರಿಲೀಸ್ ಮಾಡುವುದಾಗಿ ಘೋಷಣೆ ಮಾಡಿದ್ದಾರೆ. ನಾಳೆ (ಫೆ.14) ಬೆಳಗ್ಗೆ 10 ಗಂಟೆಗೆ ಫಸ್ಟ್ ಸಿಂಗಲ್ ‍ಪ್ರೊಮೋ ರಿಲೀಸ್ ಆಗಲಿದೆ.

    ಯುಐ ತಂಡದಿಂದ ಮತ್ತೊಂದು ಅಪ್ ಡೇಟ್ ಸಿಕ್ಕಿದ್ದು, ಉಪೇಂದ್ರ ಅವರು ಯುಐ ಸಿನಿಮಾದ ಡಬ್ಬಿಂಗ್ (Dubbing) ಕೆಲಸದಲ್ಲಿ ನಿರತರಾಗಿದ್ದಾರೆ ಎಂದು ನಿರ್ಮಾಪಕರಲ್ಲಿ ಒಬ್ಬರಾದ ಕೆ.ಪಿ ಶ್ರೀಕಾಂತ್ ಸೋಷಿಯಲ್ ಮೀಡಿಯಾದಲ್ಲಿ ಮಾಹಿತಿ ನೀಡಿದ್ದಾರೆ. ಜೊತೆಗೆ ಉಪೇಂದ್ರ ಅವರು ಡಬ್ಬಿಂಗ್ ಮಾಡುತ್ತಿರುವ ವಿಡಿಯೋವನ್ನು ಅವರು ಶೇರ್ ಮಾಡಿದ್ದಾರೆ.

    ಈ ಹಿಂದೆ ಯುಐ (UI) ಸಿನಿಮಾದ ಟೀಸರ್  ರಿಲೀಸ್ ಆಗಿತ್ತು. ಅದಕ್ಕೆ  ಅದ್ಭುತ ರೆಸ್ಪಾನ್ಸ್ ಸಿಕ್ಕಿತ್ತು. ರಿಲೀಸ್ ಆದ ಕೆಲವೇ ಗಂಟೆಗಳಲ್ಲಿ 23 ಮಿಲಿಯನ್ ವೀಕ್ಷಣೆ ಪಡೆದುಕೊಂಡಿತ್ತು. ಈ ಖುಷಿಯಲ್ಲಿ ಉಪ್ಪಿ ಸೋಷಿಯಲ್ ಮೀಡಿಯಾ ಮೂಲಕ ಹಂಚಿಕೊಂಡಿದ್ದರು. ವೀಕ್ಷಣೆಗೆ ಧನ್ಯವಾದಗಳನ್ನೂ ಹೇಳಿದ್ದಾರು.

    ಟೀಸರ್ ನೋಡಿದ ಉಪ್ಪಿ (Upendra) ಅಭಿಮಾನಿಗಳು ಸಾಕಷ್ಟು ತಲೆಕೆಡಿಸಿಕೊಂಡಿದ್ದಾರೆ. ಜೊತೆಗೆ ನೂರಾರು ಪ್ರಶ್ನೆಗಳನ್ನು ಉಪ್ಪಿಗೆ ಕೇಳಿದ್ದಾರೆ. ಯಾರೇ ಪ್ರಶ್ನೆ ಮಾಡಿದರೂ ಉಪೇಂದ್ರ ಮಾತ್ರ ಟೀಸರ್ ನೋಡಿ, ಅಲ್ಲೇ ಉತ್ತರವಿದೆ ಎನ್ನುವಂತೆ ಮೌನ ತಾಳಿದ್ದಾರೆ.

     

    ತಿಂಗಳ ಹಿಂದೆಯಷ್ಟೇ ಬೆಂಗಳೂರಿನ ಪ್ರತಿಷ್ಠಿತ ಹೋಟೆಲ್ ನಲ್ಲಿ ನಡೆದ ಟೀಸರ್ ಬಿಡುಗಡೆ ಸಮಾರಂಭಕ್ಕೆ ತೆಲುಗಿನ ಖ್ಯಾತ ನಿರ್ಮಾಪಕ ಅಲ್ಲು ಅರವಿಂದ್ ಆಗಮಿಸಿದ್ದರು. ಶಿವರಾಜ್ ಕುಮಾರ್, ಪಬ್ಲಿಕ್ ಟಿವಿ ಮುಖ್ಯಸ್ಥ ಹೆಚ್.ಆರ್.ರಂಗನಾಥ್ (Shivaraj Kumar) ಸೇರಿದಂತೆ ಹಲವರು ಕಾರ್ಯಕ್ರಮಲ್ಲಿ ಭಾಗಿಯಾಗಿದ್ದರು.

  • ಕನ್ನಡ ಬಿಗ್ ಬಾಸ್ 10 : ಪ್ರಸಾರವಾಗುವ ವೇಳೆ ಯಾವುದು?

    ಕನ್ನಡ ಬಿಗ್ ಬಾಸ್ 10 : ಪ್ರಸಾರವಾಗುವ ವೇಳೆ ಯಾವುದು?

    ಬಿಗ್ ಬಾಸ್ ಕನ್ನಡ ಸೀಸನ್ 10ಕ್ಕೆ ದಿನಗಣನೆ ಶುರುವಾಗಿದೆ. ಈಗಾಗಲೇ ಹಲವು ಪ್ರೋಮೋಗಳನ್ನು ರಿಲೀಸ್ ಮಾಡುವ ಮೂಲಕ ವಾಹಿನಿಯು ಪ್ರೇಕ್ಷಕರಲ್ಲಿ ಕುತೂಹಲವನ್ನುಂಟು ಮಾಡುತ್ತಿದೆ. ಈಗಾಗಲೇ ಬಿಗ್ ಬಾಸ್ ಯಾವಾಗಿಂದ ಶುರುವಾಗುತ್ತದೆ ಎನ್ನುವ ಮಾಹಿತಿಯನ್ನು ಹಂಚಿಕೊಂಡಿದೆ. ಈಗ ಪ್ರಸಾರದ ವೇಳೆಯನ್ನೂ ಅದು ಹೇಳಿಕೊಂಡಿದೆ.

    ಅಕ್ಟೋಬರ್ 8 ರಿಂದ ಪ್ರಾರಂಭವಾಗುವ ಬಿಗ್ ಬಾಸ್ ಶೋ, ಮೊದಲ ದಿನ ಸಂಜೆ ಆರು ಗಂಟೆಗೆ ಪ್ರಸಾರವಾಗಲಿದೆ. ಮರುದಿನದಿಂದ ಪ್ರತಿ ರಾತ್ರಿ  9.30ಕ್ಕೆ ಕಾರ್ಯಕ್ರಮ ಪ್ರಸಾರವಾಗಲಿದೆ ಎಂದು ವಾಹಿನಿಯು ರಿಲೀಸ್ ಮಾಡಿದ ಪ್ರೋಮೋದಲ್ಲಿ ತಿಳಿಸಲಾಗಿದೆ. ಇದಕ್ಕಾಗಿಯೇ ವಿಶೇಷ ಪ್ರೋಮೋ ಕೂಡ ಮಾಡಿದೆ.

    ಬಿಗ್ ಬಾಸ್ ಶೋನಲ್ಲಿ ಹೊಸ ಸ್ಪರ್ಧಿ

    ಕಿರುತೆರೆ ಅತೀ ದೊಡ್ಡ ರಿಯಾಲಿಟಿ ಶೋ ಬಿಗ್ ಬಾಸ್ (Bigg Boss Kannada 10) ಯಾವಾಗ ಎಂಬುದಕ್ಕೆ ಈಗಾಗಲೇ ಉತ್ತರ ಸಿಕ್ಕಿದೆ. ಅಕ್ಟೋಬರ್ 8ರಿಂದ ‘ಬಿಗ್ ಬಾಸ್ ಕನ್ನಡ ಸೀಸನ್ 10’ ಶೋ ಶುರುವಾಗಲಿದೆ. ವಾಹಿನಿಯ ‘ಅನುಬಂಧ 2023’ ಅವಾರ್ಡ್ಸ್ ಸಮಾರಂಭದಲ್ಲಿ ಬಿಗ್ ಬಾಸ್ ಯಾವಾಗ ಶುರು ಎಂಬ ಪ್ರಶ್ನೆಗೆ ಉತ್ತರ ಸಿಕ್ಕಿದೆ. ಯಾರೆಲ್ಲಾ ಬಿಗ್ ಬಾಸ್ ಮನೆಯೊಳಗಡೆ ಹೋಗಲಿದ್ದಾರೆ ಎಂಬ ಪ್ರಶ್ನೆ ಏಳೋದು ಸಹಜ. ಮೊದಲ ಬಾರಿಗೆ ಬಿಗ್ ಬಾಸ್ ಮನೆ ಪ್ರವೇಶ ಮಾಡುವ ಮೊದಲ ಸ್ಪರ್ಧಿಯನ್ನು ಕಲರ್ಸ್ ವಾಹಿನಿ ರಿವೀಲ್ ಮಾಡಿದೆ.

    ಬಿಗ್ ಬಾಸ್ ಮನೆಗೆ ಹೋಗುವ ಮುನ್ನವೇ ವಾಹಿನಿಯಾಗಲಿ, ಬಿಗ್ ಬಾಸ್ ಮನೆ ಪ್ರವೇಶ (Bigg Boss House) ಮಾಡುವ ಸ್ಪರ್ಧಿಗಳಾಗಲೀ ಯಾವುದೇ ಕಾರಣಕ್ಕೂ ಸ್ಪರ್ಧೆ ಮಾಡುವ ವಿಚಾರವನ್ನು ರಿವೀಲ್ ಮಾಡೋದಿಲ್ಲ. ಸ್ಪರ್ಧಿಗಳು ಯಾರು ಅನ್ನೋದು ಬಿಗ್ ಬಾಸ್ ಶೋ ಲಾಂಚ್ ಆಗುವ ದಿನವೇ ಗೊತ್ತಾಗುತ್ತದೆ. ಆದರೆ ಈ ಬಾರಿ ಮೊದಲ ಬಾರಿಗೆ ಸೋಶಿಯಲ್ ಮೀಡಿಯಾದಲ್ಲಿ ಸ್ಪರ್ಧಿ ಯಾರು ಅನ್ನೋದನ್ನು ಇದೀಗ ವಾಹಿನಿ ಹೇಳಿದೆ.

     

    ಬೆಸ್ಟ್ ರೇಟೆಡ್ ಚಲನಚಿತ್ರ – 777 ಚಾರ್ಲಿ. ಬಿಗ್ ಬಾಸ್ ಕನ್ನಡ ಸೀಸನ್ 10 ಮೊದಲ ಕಂಟೆಸ್ಟೆಂಟ್ ಆಗಿ ಎಂಟ್ರಿ ಕೊಡ್ತಿರೋ ಚಾರ್ಲಿ!! ಅಭಿನಂದನೆಗಳು ಚಾರ್ಲಿ ಎಂದು ವಾಹಿನಿಯ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಈ ಮೂಲಕ ಚಾರ್ಲಿ ಮೊದಲ ಸ್ಪರ್ಧಿಯಾಗಿ ದೊಡ್ಮನೆಗೆ ಕಾಲಿಡುತ್ತಿದೆ. ಅಂದಹಾಗೆ, 777 ಚಾರ್ಲಿ (777 charlie) ಸಿನಿಮಾದಲ್ಲಿ ರಕ್ಷಿತ್ ಶೆಟ್ಟಿ (Rakshit Shetty) ಜೊತೆ ಚಾರ್ಲಿ ಕೂಡ ಮನೋಜ್ಞವಾಗಿ ಅಭಿನಯಿಸುವ ಪ್ರೇಕ್ಷಕರ ಮನಗೆದ್ದಿತ್ತು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • Bigg Boss Kannada 10: ಊರ ಹಬ್ಬಕ್ಕೆ ರೆಡಿಯಾದ ಕಿಚ್ಚ ಸುದೀಪ್

    Bigg Boss Kannada 10: ಊರ ಹಬ್ಬಕ್ಕೆ ರೆಡಿಯಾದ ಕಿಚ್ಚ ಸುದೀಪ್

    ನ್ನಡ ಬಿಗ್ ಬಾಸ್ 10 ಶೋಗೆ ಕ್ಷಣಗಣನೆ ಶುರುವಾಗಿದೆ. ಸದ್ಯದಲ್ಲೇ ಪ್ರಸಾರವಾಗಲಿರುವ ಬಿಗ್ ಬಾಸ್ ಶೋ ಕುರಿತಂತೆ ಈ ಹಿಂದೆ ಸಣ್ಣದೊಂದು ಝಲಕ್ ಬಿಟ್ಟಿದ್ದರೆ, ಉಳಿದಂತೆ ಯಾವುದೇ ಆಸಕ್ತಿ ಹುಟ್ಟಿಸುವಂತೆ ಪ್ರೊಮೋ ರಿಲೀಸ್ ಮಾಡಿರಲಿಲ್ಲ. ಹಾಗಾಗಿ ಸುದೀಪ್ (Sudeep) ಅಭಿಮಾನಿಗಳಿಗೆ ಬೇಸರವಾಗಿತ್ತು. ಆ ಬೇಸರವನ್ನು ನಿವಾರಿಸುವಂತಹ ಪ್ರೊಮೋವನ್ನು ವಾಹಿನಿ ರಿಲೀಸ್ ಮಾಡಿದೆ.

    ಈ ಬಾರಿಯ ಪ್ರೊಮೋದಲ್ಲಿ ಕಿಚ್ಚ ಸುದೀಪ್ ಕಾಣಿಸಿಕೊಂಡಿದ್ದಾರೆ. ಜೊತೆಗೊಂದು ಊರ ಹಬ್ಬದ ಕಾನ್ಸೆಪ್ಟ್ ನೊಂದಿಗೆ ವಿಡಿಯೋ ರಿಲಿಸ್ ಆಗಿದೆ. ಈ ಬಾರಿ ನೂರು ದಿನಗಳ ಹಬ್ಬವೆಂಬ ಕಾನ್ಸೆಪ್ಟ್ ನಲ್ಲಿ ಪ್ರೊಮೋ (Promo) ಮಾಡಲಾಗಿದೆ. ಈ ಹಬ್ಬಕ್ಕಾಗಿ ಯಾರೆಲ್ಲ ಕಾಯುತ್ತಿದ್ದಾರೆ ಎನ್ನುವುದನ್ನು ಹೇಳಲಾಗಿದೆ. ಈ ಪ್ರೊಮೋ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿದೆ. ಈ ಬಾರಿ ವಾಹಿನಿಯು ಒಟಿಟಿ ಬಿಗ್ ಬಾಸ್ ಯೋಜನೆಗೆ ಬ್ರೇಕ್ ಹಾಕಿ, ಬಿಗ್ ಬಾಸ್ ಸೀಸನ್ 10ಕ್ಕೆ(Bigg Boss Kannada) ತೆರೆಮರೆಯಲ್ಲಿ ಸಿದ್ಧತೆ ನಡೆಯುತ್ತಿದೆ. ಈ ಮೂಲಕ ಟಿವಿ ಬಿಗ್ ಬಾಸ್ ಅಭಿಮಾನಿಗಳಿಗೆ ಸಿಹಿಸುದ್ದಿ ಸಿಕ್ಕಿದೆ.

    ಬಿಗ್ ಬಾಸ್ ಕಾರ್ಯಕ್ರಮ ಎಲ್ಲಿ ನಡೆಯುತ್ತೆ? ಇದರಲ್ಲಿ ಭಾಗವಹಿಸುವ ಸ್ಪರ್ಧಿಗಳು ಎನ್ನುವ ಕುರಿತು ಸಾಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟಕ್ಕೆ ಚರ್ಚೆ ನಡೆಯುತ್ತಿದೆ. ಈ ಬಾರಿ ಹೊಸ ಸೀಸನ್‌ನಲ್ಲಿ ನಾಗಿಣಿ 2 (Nagini 2) ನಟಿ ನಮ್ರತಾ ಗೌಡ (Namratha Gowda), ಹುಚ್ಚ ಚಿತ್ರದ ನಾಯಕಿ ರೇಖಾ (Rekha), ಸೋಶಿಯಲ್ ಮೀಡಿಯಾ ಸ್ಟಾರ್‌ಗಳಾದ ಭೂಮಿಕಾ ಬಸವರಾಜ್(Bhoomika Basavaraj), ವರ್ಷ ಕಾವೇರಿ, ಅಗ್ನಿಸಾಕ್ಷಿ ರಾಜೇಶ್ ಧ್ರುವ, ಸೇರಿದಂತೆ ಹಲವರು ದೊಡ್ಮನೆಗೆ ಕಾಲಿಡಲಿದ್ದಾರೆ ಎನ್ನಲಾಗ್ತಿದೆ. ಇದನ್ನೂ ಓದಿ:‘ಕಂಬಳ’ ಉದ್ಘಾಟನೆಗಾಗಿ ಬೆಂಗಳೂರಿಗೆ ಆಗಮಿಸಲಿದ್ದಾರೆ ಅನುಷ್ಕಾ ಶೆಟ್ಟಿ

    ಎಲ್ಲರ ನೆಚ್ಚಿನ ಕನ್ನಡದ ಬಿಗ್ ಬಾಸ್ ಈಗ ವಾಪಸ್ಸಾಗ್ತಿದೆ. ಕಳೆದ ಸಲ ಮೊಟ್ಟಮೊದಲ ಬಾರಿಗೆ ಒಟಿಟಿಯಲ್ಲಿ ಬಂದ ಬಿಗ್ ಬಾಸ್ ಬೇರೆಯೇ ಹಂತಕ್ಕೆ ತಲುಪಿತ್ತು. ಅದೇ ಫಾರ್ಮುಲಾ ಈ ಬಾರಿನೂ ಮುಂದುವರೆಯುತ್ತೆ ಎನ್ನಲಾಗಿತ್ತು. ಆದರೆ, ಈ ಬಾರಿ ಬಿಗ್ ಬಾಸ್ ಓಟಿಟಿ (Bigg Boss 2) ಆಟಕ್ಕೆ ಬ್ರೇಕ್ ಕೊಡಲಾಗಿದೆ. ಮೊದಲು ಒಟಿಟಿ ಆ ನಂತರ ಟಿವಿಗೆ ಅನ್ನೋ ಕಾನ್ಸೆಪ್ಟ್ ಅನ್ನು ಕೈ ಬಿಟ್ಟಿದೆ ವಾಹಿನಿ.

     

    ಸೋಶಿಯಲ್ ಮೀಡಿಯಾದಲ್ಲಿ ಬಿಗ್ ಬಾಸ್ ಕಾರ್ಯಕ್ರಮದ ದಿನಾಂಕ, ಸಂಭಾವ್ಯ ಅಭ್ಯರ್ಥಿಗಳ ಪಟ್ಟಿ ಮುಂತಾದವುಗಳ ಬಗ್ಗೆ ಬಿಸಿ ಬಿಸಿ ಚರ್ಚೆ ಆರಂಭವಾಗಿದೆ. ವಾಹಿನಿಯ ಕಡೆಯಿಂದ ಬಿಗ್ ಬಾಸ್ ಸೀಸನ್ 10ಕ್ಕೆ(Bigg Boss Kannada 10) ಭರ್ಜರಿ ತಯಾರಿ ಮಾಡಿಕೊಂಡಿದೆ ಎನ್ನುವ ಮಾತುಗಳು ಕೇಳಿ ಬರುತ್ತಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಇಂದು ಚಿತ್ರೀಕರಣದಲ್ಲಿ ಭಾಗಿಯಾದ ಕಿಚ್ಚ ಸುದೀಪ್

    ಇಂದು ಚಿತ್ರೀಕರಣದಲ್ಲಿ ಭಾಗಿಯಾದ ಕಿಚ್ಚ ಸುದೀಪ್

    ಚುನಾವಣೆ ಪ್ರಚಾರ ಮುಗಿಸಿಕೊಂಡು ಅಭಿಮಾನಿಗಳಿಗೆ ಮೊನ್ನೆಯಷ್ಟೇ ಗುಡ್ ನ್ಯೂಸ್ ನೀಡಿದ್ದರು ಕಿಚ್ಚ ಸುದೀಪ್. ಮೇ 22ರಂದು ಹೊಸ ಸಿನಿಮಾದ ಪ್ರೊಮೋ ಶೂಟ್ ನಲ್ಲಿ ಭಾಗಿಯಾಗುವುದಾಗಿ ಸೋಷಿಯಲ್ ಮೀಡಿಯಾ ಮೂಲಕ ಫ್ಯಾನ್ಸ್ ಗೆ ತಿಳಿಸಿದ್ದರು. ಇಂದು ಕಿಚ್ಚ ಸುದೀಪ್ ಹೊಸ ಸಿನಿಮಾದ ಪ್ರೋಮೋ ಶೂಟ್ ನಲ್ಲಿ ಭಾಗಿಯಾಗಿದ್ದಾರೆ. ಈ ಸಿನಿಮಾದ ಕುರಿತಂತೆ ಜೂನ್ 1 ರಂದು ಮಾಹಿತಿ ಹಂಚಿಕೊಳ್ಳುವುದಾಗಿಯೂ ಅವರು ತಿಳಿಸಿದ್ದಾರೆ.

    ಈ ಹಿಂದೆಯಷ್ಟೇ ತಾವು ಮೂರು ಸಿನಿಮಾಗಳನ್ನು ಒಪ್ಪಿಕೊಂಡಿರುವ ಕುರಿತು ಕಿಚ್ಚ ಸುದೀಪ್ (Sudeep) ಬಹಿರಂಗ ಪಡಿಸಿದ್ದರು. ಮೂರು ಸಿನಿಮಾಗಳಲ್ಲಿ ಮೊದಲು ಯಾವುದು ಶುರುವಾಗಲಿದೆ ಎನ್ನುವ ಕುತೂಹಲ ಎಲ್ಲರದ್ದಾಗಿತ್ತು. ಅದಕ್ಕೂ ಒಂದಷ್ಟು ಮಾಹಿತಿ ಸಿಕ್ಕಿದೆ. ಕೈಯಲ್ಲಿರುವ ಮೂರು ಸಿನಿಮಾಗಳಲ್ಲಿ ಮೊದಲ ಶುರುವಾಗುವ ಚಿತ್ರದ ಬಗ್ಗೆ ಅವರು ಆಪ್ತರು ಕೆಲ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಪವಿತ್ರಾ ಜೊತೆಗಿನ ಸಂಬಂಧಕ್ಕೆ ಗ್ರೀನ್ ಸಿಗ್ನಲ್ ಕೊಟ್ರಿದ್ರಾ ಕೃಷ್ಣ, ಮಹೇಶ್ ಬಾಬು- ನರೇಶ್ ಹೇಳೋದೇನು?

    ಮೂರರಲ್ಲಿ ಮೊದಲ ಶುರುವಾಗುವ ಸಿನಿಮಾ ಯಾವುದು ಎನ್ನುವ ಪ್ರಶ್ನೆ ಅವರ ಅಭಿಮಾನಿಗಳದ್ದು. ಪಬ್ಲಿಕ್ ಟಿವಿ ಡಿಜಿಟಲ್ ಗೆ ಸಿಕ್ಕಿರುವ ಮಾಹಿತಿ ಪ್ರಕಾರ ಮೊದಲು ಸಿನಿಮಾವಾಗಿ ‘ಬಿಲ್ಲ ರಂಗ ಬಾಷಾ’ (Billa Ranga Basha) ಮೂಡಿ ಬರಲಿದೆ. ಈ ಸಿನಿಮಾದ ಪ್ರೊಮೋ ಮೇ 22ರಿಂದ ಶುರುವಾಗಲಿದೆ. ಈ ಸಿನಿಮಾಗೆ ಅನೂಪ್ ಭಂಡಾರಿ ನಿರ್ದೇಶನ ಮಾಡಲಿದ್ದು, ವಿಕ್ರಾಂತ್ ರೋಣದ ನಂತರ ಈ ಜೋಡಿ ಮತ್ತೆ ಒಂದಾಗುತ್ತಿದೆ.

    ನಂತರದ ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ತಮಿಳು ನಿರ್ದೇಶಕ ಚರಣ್ (Charan)  ಕನ್ನಡಕ್ಕೆ ಬರುತ್ತಿರುವುದಾಗಿ ಸುದ್ದಿ ಆಗಿದೆ. ವಿಕ್ರಾಂತ್ ರೋಣ ಚಿತ್ರದ ನಂತರ ಕಿಚ್ಚನಿಗಾಗಿ ಸಿನಿಮಾ ಮಾಡುತ್ತಿರುವುದಾಗಿ ಅನೂಪ್ ಭಂಡಾರಿ (Anoop Bhandari) ಈ ಹಿಂದೆಯೇ ಹೇಳಿಕೊಂಡಿದ್ದರು. ಅವರಿಗಾಗಿಯೇ ಕಥೆ ಬರೆಯುತ್ತಿರುವುದಾಗಿಯೂ ತಿಳಿಸಿದ್ದರು. ಅಲ್ಲದೇ, ನಂದಕಿಶೋರ್ (Nandakishore) ಕೂಡ ಕಿಚ್ಚನಿಗಾಗಿ ಸಿನಿಮಾವೊಂದನ್ನು ಮಾಡಲಿದ್ದಾರೆ. ಆ ಕಥೆಯೂ ಲಾಕ್ ಆಗಿದೆ.

    ಚರಣ್ ತಮಿಳಿನಲ್ಲಿ ಹಿಟ್ ಚಿತ್ರಗಳನ್ನು ಕೊಟ್ಟವರು. ತಮ್ಮ ಚಿತ್ರಕ್ಕಾಗಿ ರಾಷ್ಟ್ರ ಪ್ರಶಸ್ತಿಯನ್ನೂ ಅವರು ಪಡೆದಿದ್ದಾರೆ. ಸುದೀಪ್ ಗಾಗಿ ಪ್ಯಾನ್ ಇಂಡಿಯಾ ಸಿನಿಮಾವನ್ನು ಅವರು ಮಾಡಲಿದ್ದಾರಂತೆ. ಅಧಿಕೃತವಾಗಿ ಈ ವಿಷಯವನ್ನು ಚರಣ್ ಆಗಲಿ ಅಥವಾ ಸುದೀಪ್ ಆಗಲಿ ಹೇಳದೇ ಇದ್ದರೂ ಗಾಂಧಿನಗರದಲ್ಲಂತೂ ಈ ಸುದ್ದಿ ಭರ್ಜರಿಯಾಗಿ ಸೇಲ್ ಆಗುತ್ತಿದೆ.

  • ಬಿದ್ದ ಪೊಲೀಸ್ ಏಟಿಗೆ ಕ್ಷಮೆ ಇರಲಿ ಎಂದ ಕಿಚ್ಚ ಸುದೀಪ್

    ಬಿದ್ದ ಪೊಲೀಸ್ ಏಟಿಗೆ ಕ್ಷಮೆ ಇರಲಿ ಎಂದ ಕಿಚ್ಚ ಸುದೀಪ್

    ವಿಧಾನಸಭಾ ಚುನಾವಣೆ ಪ್ರಚಾರ ಮುಗಿಸಿ ಇದೀಗ ಹೊಸ  ಸಿನಿಮಾದ (New Movie) ಪ್ರೊಮೋ ಶೂಟಿಂಗ್ ಕೆಲಸದಲ್ಲಿ ಬ್ಯುಸಿಯಾಗಿರುವ ಕಿಚ್ಚ (Kiccha)ಸುದೀಪ್ (Sudeep), ಇದ್ದಕ್ಕಿದ್ದಂತೆ ಸೋಷಿಯಲ್ ಮೀಡಿಯಾದಲ್ಲಿ ಪತ್ರವೊಂದನ್ನು ಅಪ್ ಲೋಡ್ ಮಾಡಿದ್ದಾರೆ. ಪ್ರಚಾರದ ವೇಳೆಯಲ್ಲಿ ಆದ ಅನುಭವವನ್ನು ಅವರು ಅಕ್ಷರ ರೂಪದಲ್ಲಿ ಇಳಿಸಿದ್ದಾರೆ. ಜೊತೆಗೆ ಪೊಲೀಸ್ ಏಟು ತಿಂದವರ ಕ್ಷಮೆಯನ್ನೂ ಅವರು ಕೇಳಿದ್ದಾರೆ.

    ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿರುವ ಪತ್ರದಲ್ಲಿ ‘ನಿಮ್ಮ ಕಣ್ಣಲ್ಲಿ ಕಂಡ ಅಪಾರ ಪ್ರೀತಿ ನನ್ನ ಬದುಕಿನ ರೀತಿ. ನಿಮ್ಮ ನಿರಂತರ ರಣಕೇಕೆ ಸಾಕಿಷ್ಟು ಈ ಜನುಮಕೆ. ಹಣತೆ ಹೊತ್ತಿಸಿ ಆರತಿ ಎತ್ತಿದಿರಿ. ದಾರಿಯುದ್ದಕ್ಕೂ ಹೂವ ಚೆಲ್ಲಿದಿರಿ. ನಿಮ್ಮ ಎದೆಯ ಮೇಲಿನ ಹಚ್ಚೆಯಂತೆ ಸದಾ ಜೊತೆಗಿರುವ’ ಎಂದು ಅಭಿಮಾನಿಗಳಿಗೆ ಮತ್ತು ನಾಡಿನ ಜನತೆಗೆ ಅವರು ಧನ್ಯವಾದಗಳನ್ನು ಹೇಳಿದ್ದಾರೆ. ಇದನ್ನೂ ಓದಿ:ರಾಣಾ ದಗ್ಗುಭಾಟಿ ಪತ್ನಿ ಪ್ರೆಗ್ನೆಂಟ್? ಮಿಹಿಕಾ ಬಜಾಜ್ ಪ್ರತಿಕ್ರಿಯೆ

    ಮುಂದುವರೆದ ಪತ್ರದಲ್ಲಿ, ‘ಜನಸಾಗರದ ನೂಕು ನುಗ್ಗಲಿನಲ್ಲಿ ಕೆಲವರಿಗೆ ಬಿದ್ದ ಪೊಲೀಸ್ ಲಾಠಿ ಏಟಿಗೆ ಕ್ಷಮೆ ಇರಲಿ. ಸ್ನೇಹಿತರೆ, ನಿಮ್ಮ ಪ್ರತಿ ಮನದಲ್ಲಿ ಈ ಪ್ರೀತಿ ಹೀಗೇ ಇರಲಿ. ಕರುನಾಡಲ್ಲಿ ನಡೆದ ಈ ಮೆರವಣಿಗೆಯುದ್ದಕ್ಕೂ ಜೊತೆಯಾಗಿ ಸಾಗಿ ಮಾಧ್ಯಮ ಮಿತ್ರರಿಗೆ, ಕಾಳಜಿಯಿಂದ ಕಾವಲಿಟ್ಟ ಪೊಲೀಸ್ ಸಿಬ್ಬಂದಿಗೆ, ಮಿಲಿಟರಿ ಕಮಾಂಡೋ ಸಿಬ್ಬಂದಿಗೆ, ಲಕ್ಷಾಂತರ ಕಾರ್ಯಕರ್ತರಿಗೆ ಮತ್ತು ಹೃದಯಗೀತೆಯಾದ ನನ್ನ ಪ್ರೀತಿಯ ಸ್ನೇಹಿತರಿಗೆ ಚಿರಋಣಿ’ ಎಂದು ಅವರು ಬರೆದಿದ್ದಾರೆ.

    ಪ್ರಚಾರ ಕಾರ್ಯ ಮುಗಿಯುತ್ತಿದ್ದಂತೆಯೇ ಅವರು ಹೊಸ ಸಿನಿಮಾದ ಪ್ರೋಮೋ ಕೆಲಸದಲ್ಲಿ ಬ್ಯುಸಿಯಾಗಿದ್ದಾರೆ. ಇದೇ ತಿಂಗಳು ಪ್ರೋಮೋ ಶೂಟಿಂಗ್ ನಡೆಯಲಿದ್ದು, ಇದರ ಮಾಹಿತಿಯನ್ನು ಜೂನ್ 1ರಂದು ಹಂಚಿಕೊಳ್ಳುವುದಾಗಿ ಅವರು ತಿಳಿಸಿದ್ದಾರೆ. ಹೊಸ ಸಿನಿಮಾದ ಮತ್ತಷ್ಟು ಸುದ್ದಿಗಳು ಜೂನ್ ನಂತರವೇ ಅಭಿಮಾನಿಗಳಿಗೆ ಲಭ್ಯವಾಗಲಿವೆ.

  • Exclusive- ಸುದೀಪ್ ಮುಂದಿನ ಸಿನಿಮಾ ‘ಬಿಲ್ಲ ರಂಗ ಬಾಷಾ’: ಜೂನ್ 1 ರಿಂದ ಶೂಟಿಂಗ್

    Exclusive- ಸುದೀಪ್ ಮುಂದಿನ ಸಿನಿಮಾ ‘ಬಿಲ್ಲ ರಂಗ ಬಾಷಾ’: ಜೂನ್ 1 ರಿಂದ ಶೂಟಿಂಗ್

    ಕೆಲ ವಾರಗಳ ಹಿಂದೆಯಷ್ಟೇ ತಾವು ಮೂರು ಸಿನಿಮಾಗಳನ್ನು ಒಪ್ಪಿಕೊಂಡಿರುವ ಕುರಿತು ಕಿಚ್ಚ ಸುದೀಪ್ (Sudeep) ಬಹಿರಂಗ ಪಡಿಸಿದ್ದರು. ಮೂರು ಸಿನಿಮಾಗಳಲ್ಲಿ ಮೊದಲು ಯಾವುದು ಶುರುವಾಗಲಿದೆ ಎನ್ನುವ ಕುತೂಹಲ ಎಲ್ಲರದ್ದಾಗಿತ್ತು. ಇದೀಗ ಮತ್ತೆ ಸುದೀಪ್ ಟ್ವೀಟ್ ಮಾಡಿದ್ದು ಮೇ 22ರಂದು ಮೊದಲ ಸಿನಿಮಾದ ಪ್ರೊಮೋ (Promo) ಶೂಟ್ ಹಾಗೂ ಜೂನ್ 1 ರಂದು ಆ ಸಿನಿಮಾವನ್ನು ಲಾಂಚ್ ಮಾಡುವುದಾಗಿ ಬರೆದುಕೊಂಡಿದ್ದಾರೆ.

    ಮೂರರಲ್ಲಿ ಮೊದಲ ಶುರುವಾಗುವ ಸಿನಿಮಾ ಯಾವುದು ಎನ್ನುವ ಪ್ರಶ್ನೆ ಅವರ ಅಭಿಮಾನಿಗಳದ್ದು. ಪಬ್ಲಿಕ್ ಟಿವಿ ಡಿಜಿಟಲ್ ಗೆ ಸಿಕ್ಕಿರುವ ಮಾಹಿತಿ ಪ್ರಕಾರ ಮೊದಲು ಸಿನಿಮಾವಾಗಿ ‘ಬಿಲ್ಲ ರಂಗ ಬಾಷಾ’ (Billa Ranga Basha) ಮೂಡಿ ಬರಲಿದೆ. ಈ ಸಿನಿಮಾದ ಪ್ರೊಮೋ ಮೇ 22ರಿಂದ ಶುರುವಾಗಲಿದೆ. ಈ ಸಿನಿಮಾಗೆ ಅನೂಪ್ ಭಂಡಾರಿ ನಿರ್ದೇಶನ ಮಾಡಲಿದ್ದು, ವಿಕ್ರಾಂತ್ ರೋಣದ ನಂತರ ಈ ಜೋಡಿ ಮತ್ತೆ ಒಂದಾಗುತ್ತಿದೆ.

    ನಂತರದ ಸಿನಿಮಾಗೆ ರಾಷ್ಟ್ರ ಪ್ರಶಸ್ತಿ ತಮಿಳು ನಿರ್ದೇಶಕ ಚರಣ್ (Charan)  ಕನ್ನಡಕ್ಕೆ ಬರುತ್ತಿರುವುದಾಗಿ ಸುದ್ದಿ ಆಗಿದೆ. ವಿಕ್ರಾಂತ್ ರೋಣ ಚಿತ್ರದ ನಂತರ ಕಿಚ್ಚನಿಗಾಗಿ ಸಿನಿಮಾ ಮಾಡುತ್ತಿರುವುದಾಗಿ ಅನೂಪ್ ಭಂಡಾರಿ (Anoop Bhandari) ಈ ಹಿಂದೆಯೇ ಹೇಳಿಕೊಂಡಿದ್ದರು. ಅವರಿಗಾಗಿಯೇ ಕಥೆ ಬರೆಯುತ್ತಿರುವುದಾಗಿಯೂ ತಿಳಿಸಿದ್ದರು. ಅಲ್ಲದೇ, ನಂದಕಿಶೋರ್ (Nandakishore) ಕೂಡ ಕಿಚ್ಚನಿಗಾಗಿ ಸಿನಿಮಾವೊಂದನ್ನು ಮಾಡಲಿದ್ದಾರೆ. ಆ ಕಥೆಯೂ ಲಾಕ್ ಆಗಿದೆ. ಇದನ್ನೂ ಓದಿ:ನೆಗೆಟಿವ್ ರೋಲ್ ಮಾಡಿದ್ದಕ್ಕೆ ಮದುವೆ ಸಂಬಂಧ ಕ್ಯಾನ್ಸಲ್- ನಟಿ ಅನಿಕಾ ಸಿಂಧ್ಯ

    ಚರಣ್ ತಮಿಳಿನಲ್ಲಿ ಹಿಟ್ ಚಿತ್ರಗಳನ್ನು ಕೊಟ್ಟವರು. ತಮ್ಮ ಚಿತ್ರಕ್ಕಾಗಿ ರಾಷ್ಟ್ರ ಪ್ರಶಸ್ತಿಯನ್ನೂ ಅವರು ಪಡೆದಿದ್ದಾರೆ. ಸುದೀಪ್ ಗಾಗಿ ಪ್ಯಾನ್ ಇಂಡಿಯಾ ಸಿನಿಮಾವನ್ನು ಅವರು ಮಾಡಲಿದ್ದಾರಂತೆ. ಅಧಿಕೃತವಾಗಿ ಈ ವಿಷಯವನ್ನು ಚರಣ್ ಆಗಲಿ ಅಥವಾ ಸುದೀಪ್ ಆಗಲಿ ಹೇಳದೇ ಇದ್ದರೂ ಗಾಂಧಿನಗರದಲ್ಲಂತೂ ಈ ಸುದ್ದಿ ಭರ್ಜರಿಯಾಗಿ ಸೇಲ್ ಆಗುತ್ತಿದೆ.

    ಸದ್ಯ ಸುದೀಪ್ ಚುನಾವಣಾ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಅವರು ಹೇಳಿದ ಅಭ್ಯರ್ಥಿಗಳ ಪರ ಅವರು ಪ್ರಚಾರ ಮಾಡಲಿದ್ದಾರೆ. ಶಿಗ್ಗಾಂವಿಯಿಂದ ಶುರುವಾದ ಪ್ರಚಾರ ರಾಜ್ಯಾದ್ಯಂತ ಮುಂದುವರೆದಿದೆ. ಚುನಾವಣೆ ನಂತರವೇ ಅವರು ತಮ್ಮ ಸಿನಿಮಾಗಳ ಕೆಲಸದಲ್ಲಿ ತೊಡಗಿಕೊಳ್ಳಲಿದ್ದಾರೆ.

  • ರಾಮ ಸೇತುವೆ ಅಸ್ತಿತ್ವ ನಿಜ ಅಂತಿದೆ ಅಮೆರಿಕ ವಾಹಿನಿಯ ಈ ಪ್ರೋಮೋ

    ರಾಮ ಸೇತುವೆ ಅಸ್ತಿತ್ವ ನಿಜ ಅಂತಿದೆ ಅಮೆರಿಕ ವಾಹಿನಿಯ ಈ ಪ್ರೋಮೋ

    ನವದೆಹಲಿ: ರಾಮ ಸೇತುವೆ ಅಸ್ತಿತ್ವದ ಬಗ್ಗೆ ಮತ್ತೆ ಚರ್ಚೆ ಶುರುವಾಗಿದೆ. ಭಾರತ ಮತ್ತು ಶ್ರೀಲಂಕಾ ನಡುವೆ ಸಾವಿರಾರು ವರ್ಷಗಳ ಹಿಂದೆ ಕಟ್ಟಲಾಗಿರೋ ರಾಮಸೇತುವೆ ಬಗ್ಗೆ ಅಮೆರಿಕದ ವಾಹಿನಿಯೊಂದು ಕಾರ್ಯಕ್ರಮ ಮಾಡಿದೆ. ವಿಜ್ಞಾನಿಕವಾಗಿ ವಿಶ್ಲೇಷಣೆ ಮಾಡಿದಾಗ ಸೇತುವೆ ಅಸ್ತಿತ್ವದಲ್ಲಿರುವ ಸಾಧ್ಯತೆಯಿದೆ ಎಂದು ಹೇಳಿದೆ.

    ಸೈನ್ಸ್ ಚಾನೆಲ್ ಈ ಕಾರ್ಯಕ್ರಮದ ಪ್ರೋಮೋವನ್ನ ಟ್ವಿಟ್ಟರ್‍ನಲ್ಲಿ ಹಂಚಿಕೊಂಡಿದ್ದು, ಈ ಸೇತುವೆ ನೈಸರ್ಗಿಕವಾಗಿ ನಿರ್ಮಾಣವಾಗಿಲ್ಲ. ಇದು ಮಾನವ ನಿರ್ಮಿತ ಎಂದು ಹೇಳಿದೆ. ಬುಧವಾರ ರಾತ್ರಿ 7.30ಕ್ಕೆ ಡಿಸ್ಕವರಿ ಕಮ್ಯುನಿಕೇಷನ್ಸ್ ಮಾಲೀಕಕತ್ವದ ಅಮೆರಿಕದ ಸೈನ್ಸ್ ಚಾನೆಲ್‍ನಲ್ಲಿ “ಏನ್ಶಿಯಂಟ್ ಲ್ಯಾಂಡ್ ಬ್ರಿಡ್ಜ್” ಎಂಬ ಕಾರ್ಯಕ್ರಮ ಪ್ರಸಾರವಾಗಲಿದೆ.

    ನಾಸಾದ ಫೋಟೋಗಳನ್ನ ಉದಾಹರಣೆಯಾಗಿ ನೀಡಿ 50 ಕಿ.ಮೀ ಉದ್ದದ ಈ ಸೇತುವೆ ಮಾನವ ನಿರ್ಮಿತವಾದುದು ಎಂದು ಕಾರ್ಯಕ್ರಮದಲ್ಲಿ ಅಮೆರಿಕದ ಪುರಾತತ್ವಶಾಸ್ತ್ರಜ್ಞರು ಹೇಳಿದ್ದಾರೆ.

    https://twitter.com/ScienceChannel/status/940259901166600194?ref_src=twsrc%5Etfw&ref_url=http%3A%2F%2Fzeenews.india.com%2Findia%2Fram-setu-exists-us-promo-reignites-debate-on-the-mythological-bridge-2065734.html

    ಮರಳಿನ ಮೇಲಿರುವ ಕಲ್ಲುಗಳು ಮರಳಿಗಿಂತ ಹಿಂದಿನ ಕಾಲದ್ದಾಗಿರುವುದರಿಂದ, ಕಥೆಯಲ್ಲಿ ಹೆಚ್ಚಿನದ್ದೇನೋ ಇದೆ ಎಂದು ಪ್ರೋಮೋದಲ್ಲಿ ಅಮೆರಿಕದ ಪುರಾತತ್ವಶಾಸ್ತ್ರಜ್ಞರೊಬ್ಬರು ಹೇಳೋದನ್ನ ಕೇಳಬಹುದು. ಇದರ ಆಧಾರದ ಮೇಲೆ ಹೇಳುವುದಾದರೆ ಮರಳು ನೈಸರ್ಗಿಕವಾಗಿ ರಚನೆಯಾಗಿದ್ದು, 7 ಸಾವಿರ ವರ್ಷಗಳಷ್ಟು ಹಳೆಯದ್ದು ಎನ್ನಲಾದ ಕಲ್ಲುಗಳನ್ನು ಅದರ ಮೇಲೆ ಇರಿಸಲಾಗಿದೆ ಎಂದು ಹೇಳಿದ್ದಾರೆ.

    ಈ ಪ್ರೋಮೋವನ್ನ ಕೇಂದ್ರ ಸಚಿವೆ ಸ್ಮೃತಿ ಇರಾನಿ, ಪಕ್ಷದ ಮುಖಂಡರಾದ ತರುಣ್ ವಿಜಯ್ ಹಾಗೂ ಪ್ರತಾಪ್ ಸಿಂಹ ರೀಟ್ವೀಟ್ ಮಾಡಿದ್ದಾರೆ.

  • ಈ ತಿಂಗ್ಳ ಕೊನೆಯಲ್ಲಿ ಬರಲಿದೆ ಬಿಗ್ ಬಾಸ್ ಸೀಸನ್ 5- ಶೋ ನಲ್ಲಿ ಯಾರೆಲ್ಲ ಇರಲಿದ್ದಾರೆ?

    ಈ ತಿಂಗ್ಳ ಕೊನೆಯಲ್ಲಿ ಬರಲಿದೆ ಬಿಗ್ ಬಾಸ್ ಸೀಸನ್ 5- ಶೋ ನಲ್ಲಿ ಯಾರೆಲ್ಲ ಇರಲಿದ್ದಾರೆ?

    ಬೆಂಗಳೂರು: ಕನ್ನಡ ಕಿರುತೆರೆಯಲ್ಲಿ ಹೆಚ್ಚು ಜನಪ್ರಿಯವಾದ ರಿಯಾಲಿಟಿ ಶೋ ಬಿಗ್ ಬಾಸ್ ಈಗ ಮತ್ತೊಮ್ಮೆ ನಿಮ್ಮ ಮುಂದೆ ಬರಲಿದೆ. ಈ ಕಾರ್ಯಕ್ರಮ ಸೆಪ್ಟೆಂಬರ್ ಕೊನೆಯ ವಾರ ಅಥವಾ ಅಕ್ಟೋಬರ್ ಮೊದಲ ವಾರದಲ್ಲಿ ಬರುವ ಸಾಧ್ಯತೆಗಳಿವೆ ಎಂಬುವುದಾಗಿ ತಿಳಿದುಬಂದಿದೆ.

    ಈ ರಿಯಾಲಿಟಿ ಶೋನಲ್ಲಿ ಈ ಬಾರಿಯೂ ಕಿಚ್ಚ ಸುದೀಪ್ ನಿರೂಪಕರಾಗಿ ಕಾಣಿಸಿಕೊಳಲಿದ್ದಾರೆ. ಈ ಕುರಿತು ಬಿಗ್ ಬಾಸ್ ತಂಡ ಈಗಾಗಲೇ ಪ್ರೊಮೋ ಶೂಟ್ ಗಾಗಿ ಎಲ್ಲಾ ತಯಾರಿಗಳನ್ನು ನಡೆಸಿಕೊಂಡಿದ್ದು, ಸುದೀಪ್ ಅವರಿಗಾಗಿ ಕಾಯುತ್ತಿದ್ದಾರೆ. ಯಾಕಂದ್ರೆ ನಟ ಸುದೀಪ್ ಅವರು ತಮ್ಮ ಮುಂಬರುವ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಈ ಬಾರಿ ಬಿಗ್ ಬಾಸ್ ಸೀಸನ್ 5ನಲ್ಲಿ ಸಾಕಷ್ಟು ಬದಲಾವಣೆಯಾಗಿದ್ದು, ಸೆಲೆಬ್ರಿಟಿಗಳ ಜೊತೆಯಲ್ಲಿ ಕಾಮನ್ ಮ್ಯಾನ್, ಸಾಮಾಜಿಕ ಜಾಲತಾಣದಲ್ಲಿ ಪ್ರಸಿದ್ಧರಾದವರು ಕಾಣಿಸಿಕೊಳಲಿದ್ದಾರೆ ಎನ್ನಲಾಗಿದೆ.

    ಉಳಿದ 4 ಸೀಸನ್ ಗಳಿಗಿಂತ ಈ ಸೀಸನ್ ತುಂಬಾನೇ ಸ್ಪೆಷಲ್ ಆಗಿರುತ್ತದೆ. ಹೀಗಾಗಿ ಈಗಾಲೇ ಅದ್ಧೂರಿಯಾಗಿ ತಯಾರಿಗಳನ್ನು ಕೂಡ ಮಾಡಿಕೊಳ್ಳಲಾಗಿದೆ. ಪ್ರೊಮೋ ಶೂಟ್ ಗಾಗಿ ಕಿಚ್ಚ ಸುದೀಪ್ ಅವರ ಡೇಟ್ಸ್ ಪಡೆಯಲು ಅವರ ಜೊತೆ ಮಾತುಕತೆ ನಡೆದಿದೆ. ಬಿಗ್ ಬಸ್-5 ಸೀಸನ್ ನಲ್ಲಿ ಪ್ರೊಮೋ ಮಾಡುವಾಗ ಸೆಲೆಬ್ರಿಟಿಗಿಂತ ಕಾಮನ್ ಮ್ಯಾನ್ ಗಳಿಗೆ ಹೆಚ್ಚು ಆದ್ಯತೆ ನೀಡಲಾಗುತ್ತದೆ ಎಂದು ಕಲರ್ಸ್ ಕನ್ನಡ ವಾಹಿನಿಯ ಬಿಗ್ ಬಾಸ್ ನಿರ್ದೇಶಕ ಪರಮೇಶ್ವರ್ ಗುಂಡ್ಕಲ್ ತಿಳಿಸಿದ್ದಾರೆ.

    ಬಿಗ್ ಬಾಸ್ ತಂಡವು ಸ್ಪರ್ಧಿಗಳ ಆಯ್ಕೆ ಮಾಡಿ ಮುಗಿಸಿದೆ. ಇನ್ನು ಒಂದು ತಿಂಗಳಿನಲ್ಲಿ ಕಾರ್ಯಕ್ರಮ ಶುರು ಆಗಲಿದೆ ಹಾಗೂ ಆಯ್ಕೆಯಾದ ಎಲ್ಲಾ ಸೆಲೆಬ್ರಿಟಿ ಮತ್ತು ಕಾಮನ್ ಮ್ಯಾನ್ ಹೆಸರನ್ನು ತಂಡ ರಹಸ್ಯವಾಗಿ ಇಟ್ಟಿದೆ.

    ಕಿಚ್ಚ ಸುದೀಪ್ `ದಿ ವಿಲನ್’ ಚಿತ್ರದ ಚಿತ್ರಿಕರಣ ಮುಗಿಸಿ ಥಾಯ್ಲೆಂಡ್ ನಿಂದ ಬೆಂಗಳೂರಿಗೆ ಬಂದಿದ್ದಾರೆ. ಪ್ರೊಮೋ ಶೂಟ್ ಆದ ನಂತರ ಸುದೀಪ್ `ಪೈಲ್ವಾನ್’ ಹಾಗೂ `ಕೋಟ್ಟಿಗೊಬ್ಬ-3′ ಚಿತ್ರದಲ್ಲಿ ನಟಿಸಲಿದ್ದಾರೆ ಎಂದು ಹೇಳಲಾಗಿದೆ.