Tag: PSI Recruitment

  • ಪಿಎಸ್‍ಐ ಅಕ್ರಮ ಕೇಸ್‍ಗೆ ಟ್ವಿಸ್ಟ್ – ಲಂಚ ಪಡೆದ ಬಿಜೆಪಿ ಶಾಸಕರ ಆಡಿಯೋ ವೈರಲ್

    ಪಿಎಸ್‍ಐ ಅಕ್ರಮ ಕೇಸ್‍ಗೆ ಟ್ವಿಸ್ಟ್ – ಲಂಚ ಪಡೆದ ಬಿಜೆಪಿ ಶಾಸಕರ ಆಡಿಯೋ ವೈರಲ್

    ಕೊಪ್ಪಳ: ಪಿಎಸ್‍ಐ ನೇಮಕಾತಿ ಅಕ್ರಮದ ಕೇಸ್‍ಗೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಈ ಗೋಲ್‍ಮಾಲ್‍ನಲ್ಲಿ ಇಷ್ಟು ದಿನ ಅಧಿಕಾರಿಗಳು, ಅಭ್ಯರ್ಥಿಗಳ ಹೆಸರು ಕೇಳಿ ಬಂದಿತ್ತು. ಇದೀಗ ಬಿಜೆಪಿ ಶಾಸಕರೊಬ್ಬರ ಹೆಸರು ಕೇಳಿ ಬಂದಿದೆ.

    ಪ್ರಕರಣ ಸಂಬಂಧ ಕನಕಗಿರಿಯ ಬಿಜೆಪಿ ಶಾಸಕ ಬಸವರಾಜ್ ದಡೇಸೂಗೂರ್ ಆಡಿಯೋ ವೈರಲ್ ಆಗಿದೆ. ಪಿಎಸ್‍ಐ ಮಾಡಿಸ್ತೀನಿ ಎಂದು 15 ಲಕ್ಷ ರೂಪಾಯಿ ಲಂಚ ಪಡೆದಿರುವ ಆರೋಪವನ್ನು ದಡೇಸೂಗೂರ್ ಎದುರಿಸುತ್ತಿದ್ದಾರೆ. ನಿವೃತ್ತ ಪೊಲೀಸ್ ಕಾನ್ಸ್‌ಟೇಬಲ್‌ ಪರಸಪ್ಪ ಎಂಬುವವರ ಮಗನ ನೇಮಕಾತಿಗೆ ಹಣ ಪಡೆದಿದ್ದನ್ನು, ಸರ್ಕಾರಕ್ಕೆ ಆ ಹಣ ತಲುಪಿಸಿದ್ದೇನೆ ಎಂಬುದನ್ನು ಆಡಳಿತ ಪಕ್ಷದ ಶಾಸಕರು ಫೋನ್ ಸಂಭಾಷಣೆಯಲ್ಲಿ ಒಪ್ಪಿಕೊಂಡಿದ್ದಾರೆ. ಇದನ್ನೂ ಓದಿ: ರಾಜಪಥಕ್ಕೆ ಕರ್ತವ್ಯ ಪಥ ಎಂದು ಮರುನಾಮಕರಣ ಮಾಡಲು ಕೇಂದ್ರ ನಿರ್ಧಾರ

    ಹಣಕೊಟ್ಟ ಪರಸಪ್ಪ ಹಾಗೂ ಶಾಸಕ ದಡೇಸೂಗೂರ್ ನಡುವಿನ ಸಂಭಾಷಣೆ ವೈರಲ್ ಆಗಿದೆ. ಕೆಲಸವೂ ಮಾಡಿಕೊಡದೆ ಹಣವನ್ನೂ ಕೊಡದೆ ಶಾಸಕರು ಸತಾಯಿಸುತ್ತಿದ್ದರು ಎನ್ನಲಾಗಿದೆ. ಈ ಬಗ್ಗೆ ಮಾಜಿ ಸಚಿವ ಎಂ.ಬಿ ಪಾಟೀಲ್ ತನಿಖೆಗೆ ಆಗ್ರಹಿಸಿದ್ದಾರೆ. ತಪ್ಪಿತಸ್ಥರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದಿದ್ದಾರೆ. ಆದರೆ ಬಸವರಾಜ್ ದಡೇಸೂಗೂರ್ ಮಾತ್ರ, ಆಡಿಯೋದ ಧ್ವನಿ ನನ್ನದೇ. ಆದ್ರೆ ನಾನು ಹಣ ಪಡೆದಿಲ್ಲ. ಪ್ರಕರಣದ ಮಧ್ಯಸ್ಥಿಕೆ ವಹಿಸಲು ನನ್ನೊಂದಿಗೆ ಮಾತಾಡಿದ್ರು ಅಷ್ಟೇ ಎಂದು ಪೂರ್ಣ ಮಾಹಿತಿ ನೀಡೋಕೆ ನಿರಾಕರಿಸಿದ್ದಾರೆ. ಇದನ್ನೂ ಓದಿ: ಸ್ವರೂಪ್‍ಗೆ ಟಿಕೆಟ್ ನೀಡುವಂತೆ ಒತ್ತಾಯ – ಕಾರ್ಯಕರ್ತರನ್ನು ಎದ್ದು ಹೋಗಿ ಎಂದು ಕೆಂಡಾಮಂಡಲವಾದ ರೇವಣ್ಣ

    Live Tv
    [brid partner=56869869 player=32851 video=960834 autoplay=true]

  • ಈ ಬಾರಿಯಾದ್ರೂ ಸಿಐಡಿ ವಿಚಾರಣೆಗೆ ಹಾಜರಾಗ್ತಾರಾ ಪ್ರಿಯಾಂಕ್ ಖರ್ಗೆ?

    ಈ ಬಾರಿಯಾದ್ರೂ ಸಿಐಡಿ ವಿಚಾರಣೆಗೆ ಹಾಜರಾಗ್ತಾರಾ ಪ್ರಿಯಾಂಕ್ ಖರ್ಗೆ?

    ಬೆಂಗಳೂರು: ಪಿಎಸ್‍ಐ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಅಧಿಕಾರಿಗಳು ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ವಿಚಾರಣೆಗೆ ಹಾಜರಾಗುವಂತೆ 2ನೇ ಬಾರಿಗೆ ನೋಟಿಸ್ ನೀಡಿದ್ದು, ಈ ಬಾರಿಯಾದರೂ ಪ್ರಿಯಾಂಕ್ ಖರ್ಗೆ ವಿಚಾರಣೆಗೆ ಹಾಜರಾಗುತ್ತಾರಾ ಎಂಬ ಪ್ರಶ್ನೆ ಎದ್ದಿದೆ.

    KARNATAKA PSI EXAM

    ಪಿಎಸ್‍ಐ ನೇಮಕಾತಿ ಅಕ್ರಮ ವಿಚಾರಕ್ಕೆ ಸಂಬಂಧಿಸಿದಂತೆ ಇತ್ತೀಚೆಗಷ್ಟೇ ಪ್ರಿಯಾಂಕ್ ಖರ್ಗೆ ಅವರು ಸುದ್ದಿಗೋಷ್ಠಿ ನಡೆಸಿ, ಆಡಿಯೋ ಕ್ಲಿಪ್‍ವೊಂದನ್ನು ಬಿಡುಗಡೆ ಮಾಡಿದ್ದರು. ಅಲ್ಲದೇ ಈ ಬಗ್ಗೆ ತಮ್ಮ ಬಳಿ ಕೆಲವು ಸಾಕ್ಷ್ಯಗಳು ಇರುವ ಬಗ್ಗೆ ಪ್ರಸ್ತಾಪಿಸಿದ್ದರು. ಈ ಹಿನ್ನಲೆ ತಮ್ಮ ಹೇಳಿಕೆಗೆ ಸಂಬಂಧಿಸಿದಂತೆ ಸಾಕ್ಷ್ಯ, ದಾಖಲೆಗಳನ್ನು ಒದಗಿಸುವಂತೆ ಸಿಐಡಿ ಅಧಿಕಾರಿಗಳು ಪ್ರಿಯಾಂಕ್ ಖರ್ಗೆ ಅವರಿಗೆ ಸೂಚಿಸಿದ್ದಾರೆ. ಇದನ್ನೂ ಓದಿ: ಇಲ್ಲಿ 1 ಮಾವಿನ ಹಣ್ಣಿಗೆ 2 ಸಾವಿರ – ತಿಂಗಳಿಗೆ ಮುಂಚೆಯೇ ಶುರುವಾಗಿದೆ ಬುಕ್ಕಿಂಗ್

    ಪ್ರಿಯಾಂಕ್ ಖರ್ಗೆ ಅವರು ನೀಡಿರುವ ಹೇಳಿಕೆಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದ್ದು, ಎರಡು ದಿನಗಳ ಒಳಗೆ ಸಿಐಡಿ ಡಿವೈಎಸ್ ಪಿ ನರಸಿಂಹಮೂರ್ತಿ ಅವರ ಮುಂದೆ ಬೆಂಗಳೂರಿನ ಕಾರ್ಲಟನ್ ಭವನದ ಸಿಐಡಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ಪ್ರಿಯಾಂಕ್ ಖರ್ಗೆ ಅವರಿಗೆ ನೋಟಿಸ್ ನೀಡಲಾಗಿದೆ. ಇದನ್ನೂ ಓದಿ: PSI ದೈಹಿಕ ಪರೀಕ್ಷೆಯಲ್ಲೂ ಅಕ್ರಮ, ಥರ್ಮಾಕೋಲ್, ವಿಗ್ ಧರಿಸಿ ನೇಮಕ- ಪ್ರಿಯಾಂಕ್ ಖರ್ಗೆ ಆರೋಪ

  • ಪಿಎಸ್‌ಐ ಕೇಸ್ – ಮತ್ತೊಬ್ಬ ಆರೋಪಿ ಅರೆಸ್ಟ್, 40 ಲಕ್ಷ ಡೀಲಿಂಗ್?

    ಪಿಎಸ್‌ಐ ಕೇಸ್ – ಮತ್ತೊಬ್ಬ ಆರೋಪಿ ಅರೆಸ್ಟ್, 40 ಲಕ್ಷ ಡೀಲಿಂಗ್?

    ಕಲಬುರಗಿ: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎನ್ನಲಾಗಿರುವ ಬಗ್ಗೆ ದಿನೇ ದಿನೇ ರೋಚಕ ಸಂಗತಿ ಹೊರಬರುತ್ತಿದೆ. ಮಂಗಳವಾರ ಸಿಐಡಿ ತಂಡ ಪಿಎಸ್‌ಐ ಅಕ್ರಮಕ್ಕೆ ಸಂಬಂಧಪಟ್ಟ ಆರೋಪಿ ಎನ್ ಸುನೀಲ್ ಕುಮಾರ್‌ನನ್ನು ಬಂಧಿಸಿದ್ದಾರೆ.

    ಒಟ್ಟಾರೆಯಾಗಿ ಪಿಎಸ್‌ಐ ನೇಮಕಾತಿ ಅಕ್ರಮದ ಜಾಡನ್ನು ಬೆನ್ನು ಹಿಡಿದ ಸಿಬಿಐ ತಂಡ ಇಲ್ಲಿಯವರೆಗೆ 16 ಆರೋಪಿಗಳನ್ನು ಬಂಧಿಸಿದ್ದಾರೆ. ಇದನ್ನೂ ಓದಿ: ದಿವ್ಯಾ ಹಾಗರಗಿ ವಾರದಲ್ಲಿ ಶರಣಾಗದಿದ್ದರೆ ಆಸ್ತಿ ಮುಟ್ಟುಗೋಲು – ನ್ಯಾಯಾಲಯ ಆದೇಶ

    ಕಲಬುರಗಿ ನಿವಾಸಿಯಾಗಿರುವ ಸುನೀಲ್ ಕುಮಾರ್ ಪಿಎಸ್‌ಐ ನೇಮಕಾತಿ ಪರೀಕ್ಷೆಯ ಕೇಂದ್ರ ಸ್ಥಾನವಾದ ದಿವ್ಯಾ ಹಾಗರಗಿ ಒಡೆತನದ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಪರೀಕ್ಷಾ ಕೇಂದ್ರದಲ್ಲಿಯೇ ಪರೀಕ್ಷೆ ಬರೆದಿದ್ದಾರೆ ಎಂದು ಸಿಐಡಿ ಪೊಲೀಸರು ತಿಳಿಸಿದ್ದಾರೆ.

    ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಎಲೆಕ್ಟ್ರಾನಿಕ್ ಉಪಕರಣ ಬಳಸಿ, ಉತ್ತೀರ್ಣನಾಗಿರುವ ಆರೋಪ ಸುನೀಲ್ ಮೇಲಿದೆ. ಹಗರಣದಲ್ಲಿ ದೊಡ್ಡ ಪಾತ್ರ ವಹಿಸಿದ ರುದ್ರಗೌಡ ಡಿ ಪಾಟೀಲ್ ಮುಖಾಂತರವೇ ಸುನೀಲ್ ಕುಮಾರ್ ಅಕ್ರಮದಲ್ಲಿ ಭಾಗಿಯಾಗಿದ್ದಾನೆ ಎಂದು ಸಿಐಡಿ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಬಿಜೆಪಿ ಪ್ರಮುಖರೊಂದಿಗೆ ಆರೋಪಿ ದಿವ್ಯಾ ಹಾಗರಗಿ ಫೋಟೋ ವೈರಲ್

    ಅಕ್ರಮಕ್ಕೆ ಸಂಬಂಧಿಸಿದಂತೆ ದಾಖಲೆಗಳ ಮರು ಪರಿಶೀಲನೆಗೆ ಹಾಜರಾಗಲು ಸುನೀಲ್‌ಗೆ ಕರೆ ಬಂದಿತ್ತು. ಈ ಹಿನ್ನೆಲೆಯಲ್ಲಿ ಸುನೀಲ್ ಸೋಮವಾರ ಬೆಂಗಳೂರಿನ ಸಿಐಡಿ ಕಚೇರಿಗೆ ತೆರಳಿದ್ದ. ಪರಿಶೀಲನೆ ವೇಳೆ ಅಕ್ರಮ ನಡೆದ ಸಂದೇಹ ಬಂದಿದ್ದು, ಆರೋಪಿಯನ್ನು ಅಧಿಕಾರಿಗಳು ಸ್ಥಳದಲ್ಲೇ ವಶಕ್ಕೆ ಪಡೆದರು. ಸಿಐಡಿ ಅಧಿಕಾರಿಗಳ ತಂಡ ಮಂಗಳವಾರ ಸುನೀಲ್‌ನನ್ನು ಕಲಬುರಗಿಗೆ ಕರೆತಂದರು.

    ಇದೀಗ ಸುನೀಲ್ ಪಿಎಸ್‌ಐ ಅಕ್ರಮದ ಸೂತ್ರದಾರ ಆರೋಪಿ ರುದ್ರಗೌಡನಿಗೆ 40 ಲಕ್ಷ ರೂ. ನೀಡಿದ್ದ ಎಂಬ ಸಂಶಯವಿದ್ದು, ವಿಚಾರಣೆ ಮುಂದುವರಿದಿದೆ.

  • PSI ನೇಮಕಾತಿಯಲ್ಲಿ ಅಕ್ರಮː ಪ್ರಮುಖ ಆರೋಪಿ ದಿವ್ಯಾ ಹಾಗರಗಿ – ಡಿಕೆಶಿ ಜೊತೆಗಿರುವ ಫೋಟೋ ವೈರಲ್

    PSI ನೇಮಕಾತಿಯಲ್ಲಿ ಅಕ್ರಮː ಪ್ರಮುಖ ಆರೋಪಿ ದಿವ್ಯಾ ಹಾಗರಗಿ – ಡಿಕೆಶಿ ಜೊತೆಗಿರುವ ಫೋಟೋ ವೈರಲ್

    ಬೆಂಗಳೂರು: ಪ್ರಸ್ತುತ ರಾಜ್ಯದಲ್ಲಿ ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ತನಿಖೆ ನಡೆಯುತ್ತಿದ್ದು, ದಿನಕ್ಕೊಂದು ಸ್ಪೋಟಕ ಮಾಹಿತಿಗಳು ಹೊರಬೀಳುತ್ತಿವೆ.

    ಈ ಬೆನ್ನಲ್ಲೇ ಪಿಎಸ್‌ಐ ನೇಮಕಾತಿ ಪರೀಕ್ಷಾ ಅಕ್ರಮದ ಪ್ರಮುಖ ಆರೋಪಿ ದಿವ್ಯಾ ಹಾಗರಗಿ ಅವರ ಜೊತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಮಾತನಾಡುತ್ತಿರುವ ಚಿತ್ರವನ್ನು ಟ್ವೀಟ್ ಮಾಡಿರುವ ಬಿಜೆಪಿ, ಕಾಂಗ್ರೆಸ್ ಮುಂದೆ ಹಲವು ಪ್ರಶ್ನೆಗಳನ್ನು ಇಟ್ಟಿದೆ. ಇದನ್ನೂ ಓದಿ: ರಾಜ್ಯದಲ್ಲಿ ಅವಧಿ ಪೂರ್ವ ಚುನಾವಣೆ, ಸಿಎಂ ಬದಲಾವಣೆ ಸಾಧ್ಯವೇ ಇಲ್ಲ: ಜಗದೀಶ್ ಶೆಟ್ಟರ್

    ಪ್ರಿಯಾಂಕ್ ಖರ್ಗೆಯವರೇ ಪೂರ್ಣ ಸರ್ಕಾರವೇ ದಿವ್ಯಾ ಹಾಗರಗಿ ಜೊತೆ ಇದೆ ಎಂದು ಆಪಾದಿಸಿದೀರಿ. ಆದರೆ ಇಲ್ಲಿ ನೋಡಿ… ಈ ಚಿತ್ರ ಏನು ಹೇಳುತ್ತದೆ? ಎಂದು ಬಿಜೆಪಿ ಪ್ರಶ್ನಿಸಿದೆ. ಎಷ್ಟೊಂದು ತನ್ಮಯತೆಯಿಂದ ಮಾತಾಡುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ದಿವ್ಯಾ ಹಾಗರಗಿ ಜೊತೆಗಿರುವ ಚಿತ್ರವನ್ನು ತಮ್ಮ ಬಿಜೆಪಿ ಕರ್ನಾಟಕ ಟ್ವೀಟ್ ಖಾತೆಯಲ್ಲಿ ಹಂಚಿಕೊಂಡಿದೆ.

    ನಿಮ್ಮ ಪಕ್ಷದ ಯಾರು ಯಾರು ಗೋಡಂಬಿ -ಬಾದಾಮಿ ತಿಂದಿರಬಹುದು ಎಂಬುದನ್ನು ವಿವರಿಸಬಹುದೇ? ಎಂದೂ ಬಿಜೆಪಿ ಲೇವಡಿ ಮಾಡಿ, ನೀವೆಷ್ಟೇ ರಹಸ್ಯ ಕಾರ್ಯಾಚರಣೆ ನಡೆಸಿದರೂ ಸತ್ಯ ಒಂದಿಲ್ಲೊಂದು ದಿನ ಬಯಲಾಗಲೇಬೇಕಲ್ಲವೇ? ಎಂದು ಪ್ರಶ್ನಿಸಿದೆ. ಇದನ್ನೂ ಓದಿ: ಕೋವಿಡ್ ನಿಯಮ ಉಲ್ಲಂಘಿಸಿದ್ರೆ ಬೀಳುತ್ತೆ ಭಾರೀ ದಂಡ – ಯಾವ ರಾಜ್ಯದಲ್ಲಿ ಎಷ್ಟಿದೆ ಗೊತ್ತಾ?

    ಪಿಎಸ್‌ಐ ನೇಮಕ ಹಗರಣ ಕಾಂಗ್ರೆಸ್ ಕೃಪಾಪೋಷಿತರ ನಾಟಕ ಮಂಡಳಿಯ ಟೂಲ್ ಕಿಟ್ ಎಂದು ಸಾರಿ ಸಾರಿ ಹೇಳುವುದಕ್ಕೆ ಸಾಕ್ಷ್ಯ ಇಲ್ಲಿದೆ. ಕಾಂಗ್ರೆಸ್ ಟೂಲ್ ಕಿಟ್ ಷಡ್ಯಂತ್ರಕ್ಕೆ ಕೆಪಿಸಿಸಿ ಅಧ್ಯಕ್ಷರ ಸದಾಶಿವನಗರದ ಬಂಗಲೆಯೇ ಪ್ರಮುಖ ಅಡ್ಡಾವಾಗಿದೆ. ಅಧಿಕಾರ ಇಲ್ಲದೇ ಇದ್ದರೂ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ತುರುಕುವುದಕ್ಕೆ ಕಾಂಗ್ರೆಸ್ ನಾಯಕರಿಗೆ ಮಾತ್ರ ಸಾಧ್ಯ ಎಂದೂ ಹೇಳಿದೆ. ಇದನ್ನೂ ಓದಿ: ತಾಳಿ ಭಾಗ್ಯ, ಅನ್ನ ಭಾಗ್ಯದಂತಹ ದರಿದ್ರ ಭಾಗ್ಯಗಳು ಬೇಡ: ಸಿಎಂ ಮುಂದೆ ಯತ್ನಾಳ್ ಕಿಡಿ

    ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಡಿ.ಕೆ.ಶಿವಕುಮಾರ್ ನಡೆಸುತ್ತಿರುವ ಪ್ರತಿಯೊಂದು ಷಡ್ಯಂತ್ರಕ್ಕೂ ಈಗ ದಾಖಲೆ ಲಭಿಸುತ್ತಿದೆ. ಸಿಡಿ ವಿವಾದ, ಹಿಜಾಬ್ ಸಂಘರ್ಷ, 40 ಪರ್ಸೆಂಟ್ ಕಮಿಷನ್, ಹರ್ಷನ ಕೊಲೆ, ಹುಬ್ಬಳ್ಳಿ ಗಲಭೆ, ಪಿಎಸ್‌ಐ ನೇಮಕ ಹಗರಣ ಎಲ್ಲದಕ್ಕೂ ಸೂತ್ರಧಾರ ಒಬ್ಬರೇ, ಅದು ಡಿ.ಕೆ.ಶಿವಕುಮಾರ್ ಎಂದು ಬಿಜೆಪಿ ಆರೋಪಿಸಿದೆ. ಅಲ್ಲದೆ, ಪಿಎಸ್‌ಐ ನೇಮಕಾತಿ ಪರೀಕ್ಷೆಗೆ ಬ್ಲೂಟೂತ್ ಮೂಲಕ ಉತ್ತರ ರವಾನಿಸಿದ್ದ ಕಾಂಗ್ರೆಸ್ ಮುಖಂಡನ ಬಂಧನ ಎನ್ನುವ ಪತ್ರಕಾ ವರದಿಯನ್ನೂ ಟ್ವೀಟ್ ಮಾಡಿದೆ.

    d k shivakumar

    ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧವೂ ಟ್ವೀಟ್ ವಾರ್ ನಡೆಸಿರುವ ಬಿಜೆಪಿ, ಸಿದ್ದರಾಮಯ್ಯ ಅವರೇ, ಗೋವಿಂದರಾಜ್ ಡೈರಿಯಲ್ಲಿ ನಿಮ್ಮ ಪರ್ಸಂಟೇಜ್ ವ್ಯವಹಾರದ ಲೆಕ್ಕವಿತ್ತೇ? ಅಡಿಯಿಂದ ಮುಡಿಯವರೆಗೂ ಭ್ರಷ್ಟಾಚಾರ ಹೊದ್ದು ಮಲಗಿದ ಸರ್ಕಾರ ನಿಮ್ಮದಾಗಿತ್ತು ಎಂಬುದು ಡೈರಿಯೇ ಹೇಳುತ್ತಿತ್ತು. ತಾನೇ ಕಳ್ಳ ಪರರನ್ನು ನಂಬಬೇಡ ಎನ್ನುವ ಮಾತು ಸಿದ್ದರಾಮಯ್ಯ ಅವರಿಗೆ ಹೇಳಿಮಾಡಿಸಿದಂತಿದೆ ಎಂದು ಸರಣಿ ಟ್ವೀಟ್‌ಗಳನ್ನು ಮಾಡಿದೆ.

  • ದಿವ್ಯಾ ಹಾಗರಗಿ ಬಂಧನ ಯಾವಾಗ? – ಪ್ರಭಾವಿಗಳ ಶ್ರೀರಕ್ಷೆಯಲ್ಲಿದ್ದಾರಾ ದಿವ್ಯಾ

    ದಿವ್ಯಾ ಹಾಗರಗಿ ಬಂಧನ ಯಾವಾಗ? – ಪ್ರಭಾವಿಗಳ ಶ್ರೀರಕ್ಷೆಯಲ್ಲಿದ್ದಾರಾ ದಿವ್ಯಾ

    ಕಲಬುರಗಿ: ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಪ್ರಮುಖ ಆರೋಪಿ ಎನ್ನಲಾದ ಬಿಜೆಪಿ ಮಹಿಳಾ ಘಟಕದ ಮಾಜಿ ನಾಯಕಿ ದಿವ್ಯಾ ಹಾಗರಗಿ ಬಂಧನ ಯಾವಾಗ? ಅನ್ನೋ ಪ್ರಶ್ನೆ ಎಲ್ಲಕಡೆ ಹರಿದಾಡುತ್ತಿದೆ. ದಿವ್ಯಾ ತೆಲೆ ಮರೆಸಿಕೊಂಡು 14 ದಿನ ಕಳೆದರು ಇನ್ನೂ ಪತ್ತೆ ಆಗದಿರುವುದು ಹಲವು ಚರ್ಚೆಗಳಿಗೆ ಕಾರಣವಾಗಿದೆ.

    ಪಿಎಸ್‍ಐ ನೇಮಕಾತಿ ಅಕ್ರಮದ ಕೇಂದ್ರ ಸ್ಥಾನವಾದ ಜ್ಞಾನಜ್ಯೋತಿ ಆಂಗ್ಲ ಮಾಧ್ಯಮ ಶಾಲೆಯ ಕಾರ್ಯದರ್ಶಿ, ಬಿಜೆಪಿ ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ದಿವ್ಯಾ ಹಾಗರಗಿ, ಶಾಲೆಯ ಹೆಡ್‍ಮಾಸ್ಟರ್ ಕಾಶಿನಾಥ್ ಸೇರಿ ಐವರು ತೆಲೆ ಮರೆಸಿಕೊಂಡು ಇಂದಿಗೆ 14 ದಿನಗಳು ಕಳೆದಿದೆ. ಸಿಐಡಿ ಎಷ್ಟೇ ಶೋಧ ಮಡೆಸಿದ್ರು ಐವರಲ್ಲಿ ಯಾರು ಪತ್ತೆಯಾಗಿಲ್ಲ. ರಾಜ್ಯದ ಪ್ರಭಾವಿ ಮುಖಂಡರು ದಿವ್ಯಾಳ ರಕ್ಷಣೆಗೆ ನಿಂತಿದ್ದಾರಾ? ಅವರ ಶ್ರೀರಕ್ಷೆಯಿಂದ ದಿವ್ಯಾ ಬಂಧನ ಆಗ್ತಿಲ್ವಾ? ಎಂಬ ಚರ್ಚೆ ಜೋರಾಗಿ ನಡೆದಿವೆ. ಇದನ್ನೂ ಓದಿ: ರೇವಣ್ಣನಿಗೆ ಶಿಕ್ಷಣ ಅಂದರೆ ಏನು ಅಂತ ಗೊತ್ತಿಲ್ಲ: ಅಶ್ವತ್ಥ್ ನಾರಾಯಣ್ 

    ಅಜ್ಞಾತ ಸ್ಥಳದಿಂದಲೇ ನೀರಿಕ್ಷಣಾ ಜಾಮೀನು ಕೋರಿ ದಿವ್ಯಾ ಮತ್ತು ಸಹಚರರು ಸಲ್ಲಿಸಿದ್ದ ನೀರಿಕ್ಷಣಾ ಜಾಮೀನು ಜಿಲ್ಲಾ ನ್ಯಾಯಾಲಯ ತೀರಸ್ಕರಿಸಿದೆ. ದಿವ್ಯಾ ಮತ್ತು ಅವರ ತಂಡ ಸಿಐಡಿಗೆ ಶರಣಾಗುವುದು ಬಿಟ್ಟರೆ ಬೇರೆ ದಾರಿಯಿಲ್ಲ. ಹೀಗಿದ್ರು ದಿವ್ಯಾ ಪತ್ತೆ ಆಗಿಲ್ಲದಿರುವುದು ಸಿಐಡಿಗೆ ತೆಲೆ ನೋವಾಗಿ ಕಾಡುತ್ತಿದೆ.

    ಸಿಐಡಿ ಆರು ಪ್ರತ್ಯೇಕ ತಂಡ ರಚನೆ
    ದಿವ್ಯಾ ಹಾಗರಗಿ ಮತ್ತು ಸಹಚರರ ಬಂಧನಕ್ಕೆ ಸಿಐಡಿ ತೀವ್ರ ಶೋಧ ಕಾರ್ಯ ಆರಂಭಿಸಿದೆ. ಡಿಜಿಪಿ, ಎಸ್‍ಪಿ ಕಲಬುರಗಿಯಲ್ಲಿ ಬೀಡಾರ ಹೂಡಿ ಬಂಧನಕ್ಕೆ ಆರು ಪ್ರತ್ಯೇಕ ತಂಡಗಳನ್ನು ರಚಿಸಿದ್ದಾರೆ. ಹಗಲಿರುಳು ಎನ್ನದೆ ದಿವ್ಯಾಗೆ ತೀವ್ರ ತಲಾಶ್‍ಗೆ ಕಾರ್ಯ ಸಿಐಡಿಯ ಆರು ತಂಡಗಳು ಮಾಡುತ್ತಿವೆ.

    ತೀವ್ರ ತನಿಖೆ ನಡೆಸುತ್ತಿದ್ರೂ ಇಲ್ಲಿವರೆಗೆ ದಿವ್ಯಾ ಇರುವ ಸ್ಥಳದ ಸುಳಿವು ಸಿಕ್ಕಿಲ್ಲ. ಇಷ್ಟರಲ್ಲೆ ದಿವ್ಯಾ ಮತ್ತು ತಂಡ ಬಂಧನ ಮಾಡಿಯೇ ತಿರುತ್ತೇವೆ ಎಂಬ ಆತ್ಮವಿಶ್ವಾದಲ್ಲಿ ಸಿಐಡಿ ತಂಡ ಕಾರ್ಯನಿರ್ವಹಿಸುತ್ತಿದೆ. ಇದನ್ನೂ ಓದಿ: ಬಾತ್‌ರೂಮ್‌ ಗೋಡೆಯಲ್ಲಿ ಸಿಕ್ತು 60 ವರ್ಷದ ಮೆಕ್‍ಡೊನಾಲ್ಡ್ಸ್ ಊಟ!

  • ಬರಲಿ ಚೆಂದ ಬರಲಿ ನ್ಯೂಸ್ ಹಾಕ್ರಿ – ಮಾಧ್ಯಮಗಳ ಮುಂದೆ ಆರೋಪಿಗಳ ದರ್ಪ

    ಬರಲಿ ಚೆಂದ ಬರಲಿ ನ್ಯೂಸ್ ಹಾಕ್ರಿ – ಮಾಧ್ಯಮಗಳ ಮುಂದೆ ಆರೋಪಿಗಳ ದರ್ಪ

    ಕಲಬುರಗಿ: ಪಿಎಸ್‍ಐ ನೇಮಕಾತಿ ಅಕ್ರಮ ಪ್ರಕರಣ ತನಿಖೆಯನ್ನು ಸಿಐಡಿ ಮತ್ತಷ್ಟು ತೀವ್ರಗೊಳಿಸಿದೆ. ಪ್ರಕರಣದ ಕಿಂಗ್‍ಪಿನ್ ಕಲಬುರಗಿ ಜಿಲ್ಲೆಯವನೇ ಎಂಬ ಶಂಕೆ ಹಿನ್ನೆಲೆ ಸಿಐಡಿ ಉನ್ನತ ಮಟ್ಟದ ಅಧಿಕಾರಿಗಳು ಇಲ್ಲಿಯೇ ಠಿಕಾಣಿ ಹೂಡಿ ತನಿಖೆ ಚುರುಕುಗೊಳಿಸಿದ್ದಾರೆ.

    ಸಿಐಡಿ ಡಿಜಿ ಪಿ.ಎಸ್ ಸಂದು, ಮತ್ತು ಸಿಐಡಿ ಎಸ್ಪಿ ರಾಘವೇಂದ್ರ ಹೆಗ್ಗಡೆ ಕಲಬುರಗಿಗೆ ಬಂದು ಮೊಕ್ಕಾಂ ಹೂಡಿದ್ದಾರೆ. ಸ್ವತಃ ತನಿಖೆಯ ಉಸ್ತುವಾರಿ ಸಿಐಡಿ ಡಿಜಿ ನೋಡಿಕೊಳ್ಳುತ್ತಿದ್ದಾರೆ. ನಗರದ ಸಿಐಡಿ ಕಛೇರಿಗೆ ಆಗಮಿಸಿದ ಎಸ್ಪಿ ತನಿಖೆಯ ಪ್ರಗತಿ ಪರಿಶೀಲನೆ ಮಾಡುತ್ತಿದ್ದಾರೆ. ಇದನ್ನೂ ಓದಿ : ಮಂದಣ್ಣಗಾಗಿ ಮುಂಬೈನಲ್ಲಿ ಮುಗಿಬಿದ್ದ ಫ್ಯಾನ್ಸ್ : ಬಾಲಿವುಡ್ ನಲ್ಲೂ ರಶ್ಮಿಕಾ ಹವಾ

    ಪಾಟೀಲ್ ಬ್ರದರ್ಸ್ ದರ್ಪ:
    ಇನ್ನೊಂದೆಡೆ ಪ್ರಕರಣದ ಕಿಂಗ್‍ಪಿನ್ ಎನ್ನಲಾದ ಪಾಟೀಲ್ ಬ್ರದರ್ಸ್ ಸಿಐಡಿ ವಶದಲ್ಲಿದ್ದರೂ ದರ್ಪ ಕಡಿಮೆ ಆಗುತ್ತಿಲ್ಲ. ಒಂದೆಡೆ ಆರ್.ಡಿ.ಪಾಟೀಲ್ ಕ್ಯಾಮೆರಾಗಳಿಗೆ ಬೊಟ್ಟು ತೋರಿಸಿ ಫ್ರೀ ಪ್ರಚಾರ ಮಾಡುತ್ತಿದ್ದೀರಿ ಮಾಡಿ ಅಂತ ಹೇಳುತ್ತಿದ್ದಾನೆ. ಸಿಐಡಿ ವಶದಲ್ಲಿರುವ ಕಾರಣ ರಾತ್ರಿ ಎಂ.ಬಿ ನಗರ ಠಾಣೆಯ ಕಂಬಿ ಹಿಂದೆ ಇಟ್ಟರೆ ಅಲ್ಲಿಯೂ ಕಾಲು ಮೇಲೆ ಕಾಲು ಹಾಕಿಕೊಂಡು ಕುಳಿತು ದರ್ಪ ತೋರಿದ್ದಾನೆ. ಲಾಕಪ್‍ನಲ್ಲಿ ಆರ್.ಡಿ.ಪಾಟೀಲ್‍ಗೆ ವಿಶೇಷ ಆತಿಥ್ಯ ಸಿಗುತ್ತಿದೇಯಾ ಎಂಬ ಅನುಮಾನ ಕೂಡಾ ಕಾಡುತ್ತಿವೆ. ಇದನ್ನೂ ಓದಿ : ಬಾಲಿವುಡ್ ಎಂದರೆ ಭಾರತೀಯ ಸಿನಿಮಾರಂಗವಲ್ಲ: ಮೆಗಾಸ್ಟಾರ್ ಚಿರಂಜೀವಿಗೂ ಆಗಿತ್ತು ಅವಮಾನ

    ಇದಕ್ಕೆ ಪೂರಕವಾಗಿ ಲಾಕಪ್‍ನಲ್ಲಿಯೂ ಕುಳಿತುಕೊಳ್ಳಲು ಕುರ್ಚಿ ಕೊಟ್ಟಿರುವ ಫೋಟೋ ವೈರಲ್ ಆಗಿದೆ. ಮತ್ತೊಂದೆಡೆ ಆರೋಪಿ ಮಹಾಂತೇಶ್ ಪಾಟೀಲ್ ಜಬರ್ದಸ್ತ್ ದೌಲತ್ ತೋರಿದ್ದಾನೆ. ಕ್ಯಾಮೆರಾಗಳ ಮುಂದೆ ದೌಲತ್ ತೋರಿದ ಆರೋಪಿ ಮಹಾಂತೇಶ್ ಪಾಟೀಲ್, ಹಾಕಿರಿ ಹಾಕಿರಿ ಚೆಂದ ಆಗಿ ಹಾಕಿರಿ ಟಿವಿಯಲ್ಲಿ ನ್ಯೂಸ್, ದುಡ್ಡು ಕೊಟ್ಟರು ಟಿವಿಯಲ್ಲಿ ಜಾಹೀರಾತು ಬರೋದಿಲ್ಲ. ಬರಲೀ ಚೆಂದ ಬರಲಿ ನ್ಯೂಸ್ ಅಂತಾ ಇಂದು ಮೆಡಿಕಲ್ ಟೆಸ್ಟ್ ಮಾಡಿಸಿ ಸಿಐಡಿ ಕಚೇರಿಗೆ ಕರೆತರುವಾಗ ಮಹಾಂತೇಶ್ ಇಂತಹ ಧಿಮಾಕಿನ ಮಾತು ಆಡಿದ್ದಾನೆ.

    /p>

  • ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಸರ್ಕಾರ ಶಾಮೀಲಾಗಿ ದಂಧೆ ನಡೆಸಿದೆ: ದಿನೇಶ್‌ ಗುಂಡೂರಾವ್‌

    ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಸರ್ಕಾರ ಶಾಮೀಲಾಗಿ ದಂಧೆ ನಡೆಸಿದೆ: ದಿನೇಶ್‌ ಗುಂಡೂರಾವ್‌

    ಬೆಂಗಳೂರು: ದಿವ್ಯಾ ಹಾಗರಗಿ ಬಿಜೆಪಿಯ ಸಕ್ರಿಯ ಕಾರ್ಯಕರ್ತೆ‌ ಮತ್ತು ಮುಖಂಡರಾಗಿದ್ದಾರೆ. ಪಿಎಸ್‌ಐ ನೇಮಕಾತಿ ಅಕ್ರಮದಲ್ಲಿ ಹಾಗರಗಿ ಜೊತೆ ಇಡೀ ಸರ್ಕಾರವೇ ಶಾಮೀಲಾಗಿ ದಂಧೆ ನಡೆಸಿದೆ ಎಂದು ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್‌ ಗಂಡೂರಾವ್‌ ಗಂಭೀರ ಆರೋಪ ಮಾಡಿದ್ದಾರೆ.

    ಪಿಎಸ್‌ಐ ನೇಮಕಾತಿ ಅಕ್ರಮದ ವಿರುದ್ಧ ಸರಣಿ ಟ್ವೀಟ್ ಮೂಲಕ ಹರಿಹಾಯ್ದಿರುವ ದಿನೇಶ್‌ ಗುಂಡೂರಾವ್‌, ಇಡಿ ಸರ್ಕಾರ ಹಾಗೂ ಗೃಹ ಸಚಿವರು ಇದರಲ್ಲಿ ಭಾಗಯಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಕರ್ನಾಟಕದಲ್ಲೂ ಬುಲ್ಡೋಜರ್ ಕಾರ್ಯಾಚರಣೆಗೆ ಹೆಚ್ಚಿದ ಒತ್ತಡ: ಬಿಜೆಪಿಯಲ್ಲಿ ಭಿನ್ನ ನಿಲುವು

    ಟ್ವೀಟ್‌ನಲ್ಲೇನಿದೆ?
    545 ಪಿಎಸ್‌ಐ ಅಕ್ರಮ ನೇಮಕಾತಿಯ ಕಿಂಗ್‌ಪಿನ್ ದಿವ್ಯಾ ಹಾಗರಗಿಗೂ ನಮ್ಮ ಪಕ್ಷಕ್ಕೂ ಸಂಬಂಧವಿಲ್ಲ ಎಂದು ಅರಚಿಕೊಳ್ಳುತ್ತಿರುವ ಬಿಜೆಪಿ ಸರ್ಕಾರಕ್ಕೆ ಕೆಲ ಪ್ರಶ್ನೆಗಳು. ದಿವ್ಯಾ ಹಾಗರಗಿ ಕುಟುಂಬಕ್ಕೂ ಆರಗ ಜ್ಞಾನೇಂದ್ರ ಅವರ ನಡುವೆ ಇರುವ ಲಿಂಕ್ ಏನು? ದಿವ್ಯಾ ನಿವಾಸಕ್ಕೆ ಗೃಹ ಸಚಿವರು ಯಾವ ಡೀಲ್ ಕುದುರಿಸಲು ಭೇಟಿ ಕೊಟ್ಟಿದ್ದರು?

    PSI ನೇಮಕಾತಿಯ 200 ಕೋಟಿ ಲಂಚದಲ್ಲಿ ದಿವ್ಯಾ ಹಾಗರಗಿಯಿಂದ ಗೃಹ ಸಚಿವರಿಗೆ ಬಂದ ಪಾಲೆಷ್ಟು? ಲಂಚದ ಹಣದಲ್ಲೂ ಈ ಸರ್ಕಾರಕ್ಕೆ 40 ಪರ್ಸೆಂಟ್ ಪಾಲು ಸಿಕ್ಕಿದೆಯೇ ಅಥವಾ ಡಿಸ್ಕೌಂಟ್ ಸಿಕ್ಕಿದೆಯೇ? ದಿವ್ಯಾ, ಬಿಜೆಪಿಯವರಲ್ಲದಿದ್ದರೆ ಯಡಿಯೂರಪ್ಪ ಅವರು ಸಿಎಂ ಆಗಿದ್ದಾಗ ದಿವ್ಯಾರನ್ನು ನರ್ಸಿಂಗ್ ಕೌನ್ಸಿಲ್ ಸದಸ್ಯರಾನ್ನಾಗಿ ಮಾಡಿದ್ದು ಯಾಕೆ ಎಂದು ಟ್ವಿಟ್ಟರ್‌ನಲ್ಲಿ ಸಾಲು ಸಾಲು ಪ್ರಶ್ನೆಗಳನ್ನು ಹಾಕಿದ್ದಾರೆ. ಇದನ್ನೂ ಓದಿ: ಕೆ.ಸಿ.ಜನರಲ್‍ನಲ್ಲೂ ತಾಯಿ-ಶಿಶು ಆಸ್ಪತ್ರೆ ‘ವಾಣಿ ವಿಲಾಸ’ ಮಾದರಿಯಲ್ಲಿ ನಿರ್ಮಾಣ: ಕೆ.ಸುಧಾಕರ್

  • PSI ನೇಮಕಾತಿ ಅಕ್ರಮ – ಬಿಜೆಪಿ ಮುಖಂಡೆ ದಿವ್ಯಾ ಹಾಗರಗಿ ಮನೆಗೆ ಸಿಐಡಿ ದಾಳಿ

    PSI ನೇಮಕಾತಿ ಅಕ್ರಮ – ಬಿಜೆಪಿ ಮುಖಂಡೆ ದಿವ್ಯಾ ಹಾಗರಗಿ ಮನೆಗೆ ಸಿಐಡಿ ದಾಳಿ

    ಕಲಬುರಗಿ: ಪೊಲೀಸ್ ಸಬ್ ಇನ್ಸ್‌ಪೆಕ್ಟರ್(ಪಿಎಸ್‍ಐ) ನೇಮಕಾತಿ ಅಕ್ರಮ ಕುರಿತಾಗಿ ಸಿಐಡಿ ತನಿಖೆ ಚುರುಕುಗೊಂಡಿದೆ. ಈಗಾಗಲೇ ಹಲವರನ್ನು ಬಂಧಿಸಿದ ಪೊಲೀಸರು ಇಂದು(ಭಾನುವಾರ) ಕಲಬುರಗಿ ಜಿಲ್ಲಾ ಬಿಜೆಪಿ ಮಹಿಳಾ ಮುಖಂಡೆ ದಿವ್ಯಾ ಹಾಗರಗಿ ಮನೆ ದಾಳಿ ಮಾಡಲು ಮುಂದಾಗಿದ್ದಾರೆ.

    ರಾಜ್ಯದಲ್ಲಿ 545 ಪಿಎಸ್‍ಐ ಹುದ್ದೆ ನೇಮಕಾತಿಯಲ್ಲಿ ಭಾರೀ ಅಕ್ರಮ ನಡೆದಿದೆ ಎಂಬ ಆರೋಪ ಇರುವ ಕಾರಣಕ್ಕೆ ಸಿಐಡಿ ತನಿಖೆ ನಡೆಸುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಸಿಐಡಿ ಡಿವೈಎಸ್‍ಪಿ ಶಂಕರಗೌಡ ನೇತೃತ್ವದ ತಂಡ ಬಿಜೆಪಿ ಮುಖಂಡೆ ಹಾಗೂ ಹಿಂದೂಪರ ಕಾರ್ಯಕರ್ತೆ ದಿವ್ಯಾ ಹಾಗರಗಿ ಮನೆ ತಪಾಸಣೆಗೆ ಆಗಮಿಸಿದೆ. ಇದನ್ನೂ ಓದಿ: ಹಸ್ತಮೈಥುನದಿಂದ ಶ್ವಾಸಕೋಶದ ತೊಂದರೆಗೆ ಸಿಲುಕಿದ ಯುವಕ – ಎಕ್ಸ್‌ರೇ ನೋಡಿ ಶಾಕ್‌

    ಕಲಬುರಗಿಯ ಹಳೆ ಜೇವರ್ಗಿ ರಸ್ತೆಯಲ್ಲಿರುವ ದಿವ್ಯಾ ಹಾಗರಗಿಗೆ ಸೇರಿದ್ದ ಜ್ಞಾನಜೋತಿ ಇಂಗ್ಲಿಷ್ ಮೀಡಿಯಂ ಶಾಲೆಯಲ್ಲಿ ಪರೀಕ್ಷಾ ಅಕ್ರಮ ನಡೆದಿತ್ತು. ಇದೇ ಶಾಲೆಯ ಮೂವರು ಮಹಿಳಾ ಕೊಠಡಿ ಮೇಲ್ವಿಚಾರಕರು, ಇದೇ ಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆದಿದ್ದ ನಾಲ್ವರು ಅಭ್ಯರ್ಥಿಗಳು ಸೇರಿ ಒಟ್ಟು ಏಳು ಜನರನ್ನು ಈಗಾಗಲೇ ಸಿಐಡಿ ತಂಡ ಬಂಧಿಸಿದೆ.

    ದಿವ್ಯಾ ಹಾಗರಗಿಗೆ ಶಾಲೆ ಸೇರಿದ್ದರಿಂದ ಇಂದು(ಭಾನುವಾರ) ಅವರ ಮನೆಗೆ ಸಿಐಡಿ ತಂಡ ದಾಳಿ ನಡೆಸಿದೆ. ಆದರೆ ಕಳೆದ ಮೂರ್ನಾಲ್ಕು ದಿನಗಳಿಂದ ದಿವ್ಯಾ ಹಾಗರಗಿ ನಾಪತ್ತೆಯಾಗಿದ್ದಾರೆ. ಸಿಐಡಿ ತಂಡ ದಿವ್ಯಾ ಹಾಗರಗಿ ಪತಿ ರಾಜೇಶ್‍ನನ್ನು ವಿಚಾರಣೆ ನಡೆಸುತ್ತಿದ್ದಾರೆ. ದಿವ್ಯಾ ಹಾಗರಗಿ ವಿಜಯಪುರಕ್ಕೆ ಹೋಗಿದ್ದಾರೆ ಎಂದು ರಾಜೇಶ್ ಸಿಐಡಿ ತಂಡಕ್ಕೆ ಮಾಹಿತಿ ನೀಡಿದರು. ಇದನ್ನೂ ಓದಿ: ಸಿನಿಮೀಯ ರೀತಿ ದರೋಡೆಕೋರನನ್ನೇ ಹಿಡಿದ ಮನೆಯವರು

  • ನಿಷೇಧಾಜ್ಞೆ ಜಾರಿಯಿಂದಾಗಿ ಪಿಎಸ್‍ಐ ನೇಮಕಾತಿ ಮುಂದೂಡಿಕೆ

    ನಿಷೇಧಾಜ್ಞೆ ಜಾರಿಯಿಂದಾಗಿ ಪಿಎಸ್‍ಐ ನೇಮಕಾತಿ ಮುಂದೂಡಿಕೆ

    ಹುಬ್ಬಳ್ಳಿ: ಪೌರತ್ವ ಕಾಯ್ದೆ ಜಾರಿ ವಿಚಾರವಾಗಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ನಿಷೇಧಾಜ್ಞೆ ಜಾರಿಯಾಗಿದೆ. ಆದ್ದರಿಂದ ಪಿಎಸ್‍ಐ ನೇಮಕಾತಿಯನ್ನು ಮುಂದೂಡಲಾಗಿದೆ ಎಂದು ಪೊಲೀಸ್ ಇಲಾಖೆ ಆದೇಶ ಹೊರಡಿಸಿದೆ.

    ಡಿಸೆಂಬರ್ 20ರಿಂದ 24ರವರೆಗೆ ಪಿಎಸ್‍ಐ ಹುದ್ದೆಗಳಿಗೆ ಸಂಬಂಧಿಸಿದಂತೆ ಅರ್ಹ ಅಭ್ಯರ್ಥಿಗಳ ಸಹಿಷ್ಣುತೆ ಮತ್ತು ದೇಹದಾರ್ಢ್ಯತೆ ಪರೀಕ್ಷೆ ನಡೆಯಬೇಕಾಗಿತ್ತು. ಆದರೆ ನಿಷೇಧಾಜ್ಞೆ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ಪ್ರತಿಭಟನೆ ನಡೆಯುತ್ತಿರುವುದರಿಂದ ಪಿಎಸ್‍ಐ ನೇಮಕಾತಿಯನ್ನು ಮುಂದೂಡಲಾಗಿದೆ.

    ಡಿಸೆಂಬರ್ 26ರಿಂದ ಜನವರಿ 17ರವರೆಗೆ ಪಿಎಸ್‍ಐ ನೇಮಕಾತಿ ಪ್ರಕ್ರಿಯೆ ನಡೆಸಲಾಗುವುದೆಂದು ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷನರ್ ದಿಲೀಪ್ ತಿಳಿಸಿದ್ದಾರೆ.