Tag: PSI recruitment case

  • ಪಿಎಸ್‌ಐ ಅಕ್ರಮ ಪ್ರಕರಣ – ಒಎಂಆರ್‌ ತಿದ್ದಲು ನೆರವಾಗಿದ್ದ ಡಿವೈಎಸ್‌ಪಿ ಶಾಂತಕುಮಾರ್‌ ಬಂಧನ

    ಪಿಎಸ್‌ಐ ಅಕ್ರಮ ಪ್ರಕರಣ – ಒಎಂಆರ್‌ ತಿದ್ದಲು ನೆರವಾಗಿದ್ದ ಡಿವೈಎಸ್‌ಪಿ ಶಾಂತಕುಮಾರ್‌ ಬಂಧನ

    ಬೆಂಗಳೂರು: ಪಿಎಸ್‌ಐ ನೇಮಕಾತಿಯಲ್ಲಿ ನಡೆದಿರುವ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿವೈಎಸ್‌ಪಿ ಶಾಂತಕುಮಾರ್‌ ಅವರನ್ನು ಬಂಧಿಸಲಾಗಿದೆ.

    ನೇಮಕಾತಿ ವಿಭಾಗದಲ್ಲಿ ಡಿವೈಎಸ್‌ಪಿಯಾಗಿದ್ದ ಶಾಂತ್‌ಕುಮಾರ್‌ ಅವರನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಎರಡು ದಿನಗಳ ಹಿಂದಷ್ಟೆ ನೇಮಕಾತಿ ವಿಭಾಗದಲ್ಲಿ ನಾಲ್ವರು ಅಧಿಕಾರಿಗಳನ್ನು ಸಿಐಡಿ ಬಂಧಿಸಿತ್ತು. ಇದನ್ನೂ ಓದಿ: ನೀನೇ ಸಾಕಿದ ಗಿಣಿ, ನಿನ್ನ ಮುದ್ದಿನ ಗಿಣಿ, ಹದ್ದಾಗಿ ಕುಕ್ಕಿತ್ತಲ್ಲೋ: ಡಿಕೆಶಿ ಕಾಲೆಳೆದ ಬಿಜೆಪಿ

    ಒಒಡಿ ಮೇಲೆ ನೇಮಕಾತಿ ವಿಭಾಗದಲ್ಲಿ ಶಾಂತಕುಮಾರ್‌ ಕರ್ತವ್ಯ ನಿರ್ವಹಿಸುತ್ತಿದ್ದರು. ಪಿಐಎಸ್‌ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಕರೆಸಿಕೊಂಡಿದ್ದ ಸಿಐಡಿ, ಶಾಂತಕುಮಾರ್‌ರನ್ನು ಬಂಧಿಸಿದೆ.

    ಶಾಂತಕುಮಾರ್ 1996 ರ ಬ್ಯಾಚ್‌ನ CAR ಕಾನ್ಸ್‌ಟೇಬಲ್ ಆಗಿದ್ದರು. ಆಗಲೇ ತಾಂತ್ರಿಕವಾಗಿ ತುಂಬಾ ಚುರುಕಾಗಿದ್ದರು. ಹೀಗಿದ್ದ ಶಾಂತಕುಮಾರ್ 2006 ರಲ್ಲಿ ಆರ್‌ಎಸ್‌ಐ ಎಕ್ಸಾಂ ಬರೆದು ನೇಮಕಗೊಂಡಿದ್ದರು. ಗುಲ್ಬರ್ಗದಲ್ಲಿ ಒಂದು ವರ್ಷ ಆರ್‌ಎಸ್‌ಐ ತರಬೇತಿ ಮುಗಿಸಿ ಬಳಿಕ ಪ್ರೊಬೆಷನರಿ ಅವಧಿಯಲ್ಲಿ ತುಮಕೂರಿನಲ್ಲಿ ಇದ್ದರು. ಇದನ್ನೂ ಓದಿ: ಹಣ ಮಾಡಲು ಸರ್ಕಾರ ನಾಲ್ಕನೇ ಅಲೆ ಬರುತ್ತದೆ ಎನ್ನುತ್ತಿದೆ: ನಲಪಾಡ್

    KARNATAKA PSI EXAM

    ಅಷ್ಟರಲ್ಲಾಗಲೇ ಪಿಎಸ್‌ಐ ನೇಮಕಾತಿ ವಿಭಾಗಕ್ಕೆ ಹಿರಿಯ ಅಧಿಕಾರಿಗಳು ಈ ಶಾಂತಕುಮಾರ್‌ರನ್ನು ಸೇರಿಸಿಕೊಳ್ಳುತ್ತಾರೆ. 2007-08 ರಿಂದ ನೇಮಕಾತಿ ವಿಭಾಗದಲ್ಲೇ ಶಾಂತಕುಮಾರ್‌ ಠಿಕಾಣಿ ಹೊಡೆದಿದ್ದರು. ನೇಮಕಾತಿಯಲ್ಲಿ ಏನೇನಾಗುತ್ತೆ ಅನ್ನೋದನ್ನು ತಿಳಿದುಕೊಂಡಿದ್ದರು. ಕಳೆದ 2 ವರ್ಷದ ಹಿಂದೆ ಇನ್ಸ್‌ಪೆಕ್ಟರ್‌ನಿಂದ ಡಿವೈಎಸ್ಪಿ ಆಗಿ ಪ್ರಮೋಷನ್ ಪಡೆದಿದ್ದರು. ಇಡೀ ನೇಮಕಾತಿ ವಿಭಾಗ ಶಾಂತಕುಮಾರ್‌ ಹಿಡಿತದಲ್ಲಿತ್ತು.

    ಒಎಂಆರ್ ತಿದ್ದಲು ಶಾಂತಕುಮಾರ್‌ ನೆರವಾಗಿದ್ದರು. ಶಾಂತಕುಮಾರ್ ಅಕ್ರಮಕ್ಕೆ ಕೈಜೋಡಿಸಿ ಒಎಂಆರ್ ತಿದ್ದಿಸಿದ್ದಾರೆ. ಈ ಬಗ್ಗೆ ಪುರಾವೆ ಸಂಗ್ರಹಿಸಿದ್ದ ಸಿಐಡಿ ಅಧಿಕಾರಿಗಳು, ವಿಚಾರಣೆಗೆ ಹಾಜರಾಗುವಂತೆ ನೋಟಿಸ್‌ ನೀಡಿದ್ದರು.

  • ಸರ್ಕಾರಕ್ಕೆ ಸವಾಲು ಹಾಕುತ್ತೇನೆ, ತಾಕತ್ತಿದ್ರೆ ನನ್ನನ್ನು ಅರೆಸ್ಟ್ ಮಾಡಲಿ: ಪ್ರಿಯಾಂಕ್ ಖರ್ಗೆ

    ಸರ್ಕಾರಕ್ಕೆ ಸವಾಲು ಹಾಕುತ್ತೇನೆ, ತಾಕತ್ತಿದ್ರೆ ನನ್ನನ್ನು ಅರೆಸ್ಟ್ ಮಾಡಲಿ: ಪ್ರಿಯಾಂಕ್ ಖರ್ಗೆ

    ಬೆಂಗಳೂರು: ಸರ್ಕಾರಕ್ಕೆ ತಾಕತ್ತಿದ್ದರೆ ಪಿಎಸ್‌ಐ ಅಕ್ರಮ ಪ್ರಕರಣದಲ್ಲಿ ನನ್ನನ್ನು ಬಂಧಿಸಲಿ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಸವಾಲು ಹಾಕಿದ್ದಾರೆ.

    ‘ಪಬ್ಲಿಕ್ ಟಿವಿ’ ಜೊತೆ ಮಾತನಾಡಿದ ಅವರು, ನನಗೆ ಸಿಐಡಿಯಿಂದ ಮೂರನೆ ನೋಟಿಸ್ ಬಂದಿದೆ. ಇದು ಹಾಸ್ಯಾಸ್ಪದವಾಗಿದೆ. ಮೂರಲ್ಲ ನೂರು ನೋಟಿಸ್ ಕೊಟ್ಟರೂ ನಾನು ಹೆದರಲ್ಲ. ಸರ್ಕಾರಕ್ಕೆ ನನ್ನ ಬಗ್ಗೆ ಇರುವ ಆಸಕ್ತಿಯನ್ನು ತನಿಖೆ ಬಗ್ಗೆ ತೋರಿಸಿದರೆ ಇನ್ನಷ್ಟು ಸತ್ಯ ಹೊರ ಬರಲಿದೆ. ಸರ್ಕಾರಕ್ಕೆ ತಾಕತ್ತಿದ್ದರೆ ನನ್ನನ್ನು ಅರೆಸ್ಟ್ ಮಾಡಲಿ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಗೌರವ್‌ ಗುಪ್ತ ಎತ್ತಂಗಡಿ – ತುಷಾರ್ ಗಿರಿನಾಥ್ ಬಿಬಿಎಂಪಿ ಮುಖ್ಯ ಆಯುಕ್ತರಾಗಿ ವರ್ಗ

    ನಿಯಮ 91 ರ ಅಡಿಯಲ್ಲಿ ನನಗೆ ನೋಟಿಸ್ ಕೊಟ್ಟಿದ್ದರು. ಅದಕ್ಕೆ ಸೂಕ್ತವಾದ ದಾಖಲೆಯನ್ನು ನಾನು ಕೊಟ್ಟಿದ್ದೇನೆ. ಬಿಜೆಪಿ ನಾಯಕರು ಮೊದಲು ಸೆಕ್ಷನ್ 91 ಅಂದರೆ ಏನು ಅಂತ ತಿಳಿದುಕೊಳ್ಳುವುದು ಒಳ್ಳೆಯದು. ಈಗ ಏನು ಮಾಡಬೇಕು ಅನ್ನೋದನ್ನು ನಮ್ಮ ಪಕ್ಷದ ವರಿಷ್ಠರ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇನೆ‌. ಸರ್ಕಾರದ ಈ ನೋಟಿಸ್‌ಗೆಲ್ಲ ಹೆದರಲ್ಲ. ಅವರ ಪಕ್ಷದ ಸಚಿವರು ಹಾಗೂ ಪರಿಷತ್ ಸದಸ್ಯರು ಮೊದಲೇ ಪತ್ರ ಬರೆದಿದ್ದರು. ಅವರಿಗೆ ಯಾಕೆ ನೋಟಿಸ್ ಕೊಟ್ಟಿಲ್ಲ ಎಂದು ಪ್ರಶ್ನಿಸಿದ್ದಾರೆ.

    ಬಳಿಕ ಕೆಪಿಸಿಸಿ‌ ಅಧ್ಯಕ್ಷ‌ ಡಿ.ಕೆ.ಶಿವಕುಮಾರ್ ಭೇಟಿ ಮಾಡಿದ ಶಾಸಕ ಪ್ರಿಯಾಂಕ್ ಖರ್ಗೆ‌, ಸಿಐಡಿ ಮೂರನೆ ನೋಟಿಸ್ ನೀಡಿದ ಬಗ್ಗೆ ಚರ್ಚೆ ನಡೆಸಿದ್ದಾರೆ. ಸಿಐಡಿ ನೋಟಿಸ್‌ಗೆ ಖುದ್ದು ಹಾಜರಾಗಬೇಕೆ ಅಥವಾ ಬೇಡವೆ ಎಂಬುದರ ಬಗ್ಗೆ ಡಿಕೆಶಿ ಜೊತೆ ಚರ್ಚೆ ನಡೆಸಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಈಗ ಒಡೆದ ಮನೆ ಒಂದಷ್ಟು ಬಣ ವಲಸೆರಾಮಯ್ಯರಿಗೆ ಜೈಕಾರ ಹಾಕುತ್ತಿದೆ: ಬಿಜೆಪಿ ವ್ಯಂಗ್ಯ

    ಆನಂತರ ಮಾತನಾಡಿದ ಅವರು, ಪಕ್ಷದ ಅಧ್ಯಕ್ಷರ ಜೊತೆ ನೋಟಿಸ್ ಬಗ್ಗೆ ಮಾತನಾಡಿದ್ದೇನೆ. ಸಿಎಲ್‌ಪಿ ನಾಯಕರ ಜೊತೆಯೂ ಮಾತನಾಡುತ್ತೇನೆ. ಕಾನೂನು ಪ್ರಕಾರ ಹೇಗೆ ನಡೆದುಕೊಳ್ಳಬೇಕೋ ಹಾಗೆ ನಡೆದುಕೊಳ್ಳುತ್ತೇನೆ ಎಂದು ತಿಳಿಸಿದ್ದಾರೆ.

  • ಕುಂಬಳಕಾಯಿ ಕಳ್ಳ ಅಂದ್ರೆ ಅಶ್ವಥ್ ನಾರಾಯಣ ಹೆಗಲು ಮುಟ್ಟಿಕೊಂಡು ನೋಡಿಕೊಂಡಿದ್ದೇಕೆ: ಡಿಕೆಶಿ ಪ್ರಶ್ನೆ

    ಕುಂಬಳಕಾಯಿ ಕಳ್ಳ ಅಂದ್ರೆ ಅಶ್ವಥ್ ನಾರಾಯಣ ಹೆಗಲು ಮುಟ್ಟಿಕೊಂಡು ನೋಡಿಕೊಂಡಿದ್ದೇಕೆ: ಡಿಕೆಶಿ ಪ್ರಶ್ನೆ

    ಬೆಂಗಳೂರು: ಕುಂಬಳಕಾಯಿ ಕಳ್ಳ ಅಂದರೆ ಅಶ್ವಥ್‌ ನಾರಾಯಣ ಹೆಗಲು ಮುಟ್ಟಿಕೊಂಡು ನೋಡಿಕೊಂಡಿದ್ದೇಕೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಪ್ರಶ್ನಿಸಿದ್ದಾರೆ.

    ಅಶ್ವಥ್ ನಾರಾಯಣ ಹೇಳಿಕೆಗೆ ತಿರುಗೇಟು ನೀಡಿದ ಡಿಕೆಶಿ, ಮಾಧ್ಯಮಗಳು ಪಿಎಸ್ಐ ನೇಮಕಾತಿ ಅಕ್ರಮದಲ್ಲಿ ಪ್ರಭಾವಿ ಸಚಿವರ ಪಾತ್ರ ಇದೆ ಎಂದು ಬಿಚ್ಚಿಟ್ಟಿದ್ದಾರೆ. ನಾನು ಅದರ ಬಗ್ಗೆ ಮಾತನಾಡಿದ್ದು. ಕುಂಬಳಕಾಯಿ ಕಳ್ಳ ಅಂದ್ರೆ ಅಶ್ವಥ್ ನಾರಾಯಣ ಹೆಗಲು ಮುಟ್ಟಿ ನೋಡಿಕೊಂಡಿದ್ದೇಕೆ? ಎಂದು ತಿರುಗೇಟು ನೀಡಿದ್ದಾರೆ. ಇದನ್ನೂ ಓದಿ: ಡಿಕೆಶಿ ಬಂಡವಾಳ ಬಿಚ್ಚಿಡ್ತೀನಿ, ಕೊಳಕಿನ ಜಾಲ ಬಿಡಿಸ್ತೀನಿ: ಅಶ್ವಥ್ ನಾರಾಯಣ ಕಿಡಿ

    ಈ ಪ್ರಕರಣದ ವಿಚಾರವಾಗಿ ನನ್ನ ವಿರುದ್ಧ ದಾಖಲೆ ಇದ್ದರೆ ಶಿವಕುಮಾರ್ ಅವರು ಪ್ರಕಟಿಸಲಿ ಎಂದು ಸಚಿವ ಅಶ್ವಥ್ ನಾರಾಯಣ ಅವರು ನೀಡಿರುವ ಹೇಳಿಕೆ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಶಿವಕುಮಾರ್, ಅವರು ದೊಡ್ಡವರು, ದೊಡ್ಡವರಾಗಬೇಕು ಎಂದುಕೊಂಡಿರುವವರು. ಅವರ ವಿಚಾರವನ್ನು ನಾನು ಬಿಚ್ಚಿಡಲಿಲ್ಲ. ಮಾಧ್ಯಮಗಳು, ಮಾಗಡಿಯ ಮೂವರು ಅಭ್ಯರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಹೇಳಿದಾಗ ಸಂತೋಷವಾಗಿತ್ತು. ಆನಂತರ ನಮ್ಮ ಪಕ್ಷದಲ್ಲಿದ್ದ ಕಾರ್ಯಕರ್ತರ ಕುಟುಂಬದವರು ಆಗಿದ್ದಾರೆ ಎಂದು ಹೇಳಿದ್ದು ಕೇಳಿ ಖುಷಿ ಆಯ್ತು. ಪರಿಸ್ಥಿತಿ ಹೀಗಿರುವಾಗ ಅನುಮಾನಗಳೆಲ್ಲವೂ ತಮ್ಮ ವಿರುದ್ಧವೇ ತಿರುಗುತ್ತಿದೆ ಎಂದು ಸಚಿವರು ಯಾಕೆ ಭಾವಿಸುತ್ತಿದ್ದಾರೆ ಎಂದು ಪ್ರಶ್ನಿಸಿದರು.

    ಅಧಿಕಾರದ ದರ್ಪ ಹಾಗೂ ಭ್ರಷ್ಟಾಚಾರ ಡಿ.ಕೆ.ಶಿವಕುಮಾರ್ ಅವರ ಕುಟುಂಬದಲ್ಲಿದೆ ಎಂಬ ಹೇಳಿಕೆ ಕುರಿತು ಪ್ರತಿಕ್ರಿಯಿಸಿ, ಹೆಣದಲ್ಲಿ ಹಣ, ಸಹಾಯಕ ಪ್ರಾಧ್ಯಾಪಕ ಹುದ್ದೆ ಅಕ್ರಮ ಇವುಗಳನ್ನೆಲ್ಲಾ ನಾನು ಮಾಡಿದ್ದೀನಾ? ಈಗ ಸಾಲು ಸಾಲು ಹಗರಣಗಳು ಬೆಳಕಿಗೆ ಬಂದವಲ್ಲಾ ಅದನ್ನು ನಾವು ಮಾಡಿದ್ದೇವಾ? ನಮ್ಮ ಸರ್ಕಾರದಲ್ಲಿ ಈ ರೀತಿ ಆಗಿದೆಯಾ? ನಾವು ಕೇಳುತ್ತಿರುವುದು ಪಿಎಸ್ಐ ಅಕ್ರಮದ ಬಗ್ಗೆ ತನಿಖೆ ಮಾಡಿ, ನಂತರ ತೀರ್ಮಾನಿಸಿ ಎಂದು. ದರ್ಶನ್ ಗೌಡಗೆ ನೋಟಿಸ್ ಜಾರಿ ಮಾಡಿದ್ದೀರಿ. ಅವನ ವಿಚಾರಣೆ ಮಾಡಿದ ವರದಿ ಬಂದಿಲ್ಲ. ಆತ ಏಕಾಏಕಿ ಬಿಡುಗಡೆಯಾದ ಎಂದರೆ ಆತ ನಿರ್ದೋಷಿ ಎಂದು ಸಾಬೀತಾಯ್ತಾ? ಅವನ ವಿರುದ್ಧ ಯಾವ ರೀತಿ ತನಿಖೆ ನಡೆದಿದೆ? ಆತ ವಿಚಾರಣೆ ಮುಕ್ತನಾಗಲು ಯಾರು ಕಾರಣ? ಇದರ ಹಿನ್ನೆಲೆ ಏನು‌, ಯಾರು? ಮಾಧ್ಯಮಗಳಿಗೆ ಮಾಹಿತಿ ಎಲ್ಲಿಂದ ಬಂದಿದೆ ಎಂದು ಮೂಲದ ಬಗ್ಗೆ ಹೇಳುತ್ತೀರಾ? ನಾವು ನಮಗೆ ಯಾರು ಕರೆ ಮಾಡಿ ಹೇಳಿದ್ದಾರೆ ಎಂದು ಹೇಳಲು ಸಾಧ್ಯವೇ? ಸಮಯ ಬಂದಾಗ ಅದನ್ನೂ ಮಾಡುತ್ತೇವೆ ಎಂದು ಟಾಂಗ್‌ ನೀಡಿದ್ದಾರೆ. ಇದನ್ನೂ ಓದಿ: ಬದಲಾವಣೆ ಕಾಲ ಪ್ರಾರಂಭವಾಗಿದೆ, ಸಬೂಬುಗಳ ಕಾಲ ಮುಗಿದಿದೆ: ಬೊಮ್ಮಾಯಿ

    ರಾಮನಗರಕ್ಕೂ ಶಿವಕುಮಾರ್ ಅವರಿಗೂ ಸಂಬಂಧವಿಲ್ಲ. ಅಮಿತ್ ಶಾ ಬರುತ್ತಾರೆ ಎಂಬ ಕಾರಣಕ್ಕೆ ಈ ರೀತಿ ಪೂರ್ವನಿಯೋಜಿತ ಷಡ್ಯಂತ್ರ ಮಾಡಲಾಗಿದೆ ಎಂಬ ಸುಧಾಕರ್ ಅವರ ಆರೋಪ ಕುರಿತು ಮಾತನಾಡಿ, ನಾನು ಹಳ್ಳಿಯವನು. ದೊಡ್ಡಾಲಹಳ್ಳಿ ಕೆಂಪೇಗೌಡನ ಮಗ ಶಿವಕುಮಾರ್. ಹಳ್ಳಿಯಿಂದ ಇಲ್ಲಿಗೆ ಬಂದು ರಾಜಕಾರಣ ಮಾಡುತ್ತಿದ್ದೇನೆ. ಅವರು ರಾಮನಗರ ಸ್ವಚ್ಛ ಮಾಡಲು ಬಂದಿದ್ದಾರೆ, ಮಾಡಲಿ ಸಂತೋಷ ಎಂದು ಕುಟುಕಿದ್ದಾರೆ.

    ಡಿಕೆಶಿ ಬಂಡವಾಳ ಬಿಚ್ಚಿಡುತ್ತೇನೆ ಎಂಬ ಸವಾಲಿಗೆ ಪ್ರತಿಕ್ರಿಯಿಸಿ, ಮೊದಲು ಅವರು ವಿವಿಧ ನೇಮಕಾತಿ ಅಕ್ರಮದಲ್ಲಿ ಯುವಕರಿಗೆ ಆಗುತ್ತಿರುವ ಅನ್ಯಾಯವನ್ನು ತಡೆಯಲಿ. ನಂತರ ಉಳಿದ ವಿಚಾರ ಮಾತನಾಡೋಣ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ನನ್ನ ಆಸ್ತಿ, ಅಶ್ವಥ್ ನಾರಾಯಣ ಆಸ್ತಿಯನ್ನು ತನಿಖೆಗೆ ಒಳಪಡಿಸಲಿ: ಉಗ್ರಪ್ಪ

  • PSI ಅಕ್ರಮ – ಮಹಿಳಾ ವಿಭಾಗದ ಟಾಪರ್ ರಚನಾ ವಿರುದ್ಧ ಎಫ್‌ಐಆರ್

    PSI ಅಕ್ರಮ – ಮಹಿಳಾ ವಿಭಾಗದ ಟಾಪರ್ ರಚನಾ ವಿರುದ್ಧ ಎಫ್‌ಐಆರ್

    ಬೆಂಗಳೂರು: ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪರೀಕ್ಷೆಯಲ್ಲಿ ಮಹಿಳೆಯರ ವಿಭಾಗದಲ್ಲಿ ಟಾಪರ್ ಆಗಿದ್ದ ಅಭ್ಯರ್ಥಿ ರಚನಾ ಹನುಮಂತ ಸೇರಿದಂತೆ 22 ಅಭ್ಯರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲಾಗಿದೆ.

    ಎಫ್‌ಐಆರ್‌ನಲ್ಲಿ ಎ 17ನೇ ಆರೋಪಿಯಾಗಿರುವ ರಚನಾ, ಮಹಿಳೆ ಎಸ್‌ಐ ಮೆರಿಟ್ ಪಟ್ಟಿಯಲ್ಲಿ ಮೊದಲನೇ ರ‍್ಯಾಂಕ್ ಪಡೆದುಕೊಂಡಿದ್ದಾರೆ. ಸಿಐಡಿ ತನಿಖೆ ವೇಳೆ ಓಎಂಆರ್ ಶೀಟ್ ಮತ್ತು ಕಾರ್ಬನ್ ಶೀಟ್‌ನಲ್ಲಿ ವ್ಯತ್ಯಾಸ ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಇದನ್ನೂ ಓದಿ: ಈಗ ಸಿಕ್ಕವರು ಕಿಂಗ್‌ಪಿನ್‌ಗಳಲ್ಲ, ಗೃಹ ಸಚಿವರ ಮೇಲೆಯೇ ನನಗೆ ಅನುಮಾನ – ಪ್ರಿಯಾಂಕ್ ಖರ್ಗೆ

    police (1)

    ಸಿಐಡಿ ಡಿವೈಎಸ್‌ಪಿ ನರಸಿಂಹಮೂರ್ತಿ ನೀಡಿದ ದೂರಿನ ಆಧಾರದ ಮೇಲೆ ಈವರೆಗೆ 22 ಅಭ್ಯರ್ಥಿಗಳ ವಿರುದ್ಧ ಎಫ್‌ಐಆರ್ ದಾಖಲು ಮಾಡಲಾಗಿದೆ. ಒಟ್ಟು 172 ಅಭ್ಯರ್ಥಿಗಳನ್ನು ಸಿಐಡಿ ವಿಚಾರಣೆಗೆ ಕರೆಯಲಾಗಿತ್ತು. 4 ಅಭ್ಯರ್ಥಿಗಳನ್ನು ಹೊರತುಪಡಿಸಿ ಉಳಿದ ಎಲ್ಲರೂ ವಿಚಾರಣೆಗೆ ಹಾಜರಾಗಿದ್ದರು.

    ಅಭ್ಯರ್ಥಿಗಳ ನಕಲಿ ಓಎಂಆರ್ ಶೀಟ್‌ಗಳನ್ನು ಪಂಚನಾಮೆ ಮಾಡಿ ವಶಕ್ಕೆ ಪಡೆದುಕೊಳ್ಳಲಾಗಿತ್ತು. ಆ ಬಳಿಕ ವೈಜ್ಞಾನಿಕವಾಗಿ ಪರಿಶೀಲಿಸಲು ಅಸಲು ಮತ್ತು ನಕಲಿ ಓಎಂಆರ್ ಪ್ರತಿಗಳನ್ನು ಎಫ್‌ಎಸ್‌ಎಲ್‌ಗೆ ಕಳಿಸಲಾಗಿತ್ತು. ಏಪ್ರಿಲ್ 28 ರಂದು ಎಫ್‌ಎಸ್‌ಎಲ್‌ನಿಂದ ವರದಿ ಬಂದಿದ್ದು, 22 ಅಭ್ಯರ್ಥಿಗಳ ಓಎಂಆರ್ ಶೀಟ್‌ನಲ್ಲಿ ವ್ಯತ್ಯಾಸವಿದೆ ಎಂದು ತಿಳಿಸಿದೆ. ಅಕ್ರಮವೆಸಗಿರೊ 22 ಅಭ್ಯರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ನೀಡಲಾಗಿತ್ತು. 22 ಅಭ್ಯರ್ಥಿಗಳು ಇತರ ವ್ಯಕ್ತಿಗಳೊಂದಿಗೆ ಸೇರಿ ಸಂಚು ರೂಪಿಸಿ ಅಕ್ರಮ ಎಸಗಿದ್ದಾರೆ. ಪ್ರಕರಣ ಸಂಬಂಧ ಈಗಾಗಲೇ 13 ಮಂದಿಯನ್ನ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: ಎರಡೂವರೆ ಗಂಟೆ ಸಭೆ – ರಾಜ್ಯದಲ್ಲೂ ಯುವ ಮುಖಗಳಿಗೆ ಮಣೆ?

    ಪ್ರಕರಣದ ಆರೋಪಿಯಾಗಿರುವ ರಚನಾ, ಆರಂಭದಲ್ಲಿ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಪ್ರಾಮಾಣಿಕರ ಜೊತೆ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ಮಾಧ್ಯಮಗಳ ಮುಂದೆ ಮಾತನಾಡುವಾಗ, ಇಡೀ ರಾಜ್ಯಕ್ಕೆ ಮಹಿಳಾ ವಿಭಾಗದಲ್ಲಿ ಪ್ರಥಮ ರ‍್ಯಾಂಕ್ ಬಂದು, ತುಂಬಾ ಖುಷಿ ಪಟ್ಟಿದ್ದೆ. ಆದರೆ ಈಗ ಮರು ಪರೀಕ್ಷೆಗೆ ಸರ್ಕಾರ ಆದೇಶ ಮಾಡಿದೆ. ಇದನ್ನು ಕೇಳಿ ತುಂಬಾ ಬೇಸರವಾಗಿದೆ. ಕಡು ಬಡತನದಿಂದ ಬಂದು ನಾನು ಓದಿದ್ದೇನೆ. ನಾನು ನಮ್ಮ ತಾಯಿ ಇಬ್ಬರೇ ಇದ್ದೇವೆ. ಹೆಣ್ಣು ಮಗು ಆಯ್ತು ಅಂತ ನಮ್ಮನ್ನು ನಮ್ಮ ತಂದೆ ಬಿಟ್ಟು ಹೋಗಿದ್ದರು. ನನಗಾಗಿ ನಮ್ಮ ತಾಯಿ 25 ವರ್ಷದಿಂದ ಕಷ್ಟ ಪಡುತ್ತಿದ್ದಾರೆ ಎಂದು ರಚನಾ ಹೇಳಿಕೊಂಡಿದ್ದರು.

    ಪಿಎಸ್ಐ ಪರೀಕ್ಷೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದ ರಚನಾ ಹನುಮಂತ, ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ಮೂಲದವರು. ರಚನಾ ತನ್ನ ತಾಯಿಯೊಂದಿಗೆ ವಾಸವಾಗಿದ್ದಾರೆ. ಬಾಗೇವಾಡಿಯ ಮಾವ, ಅಜ್ಜಿಯ ಜೊತೆಗಿದ್ದಾರೆ. ರಚನಾ ತಾಯಿ ಸಾವಿತ್ರಿ ಮುತ್ತಲಗೇರಿ ಖಾಸಗಿ ಶಾಲೆಯೊಂದರಲ್ಲಿ ಶಿಕ್ಷಕಿಯಾಗಿದ್ದಾರೆ. ಸಾವಿತ್ರಿ ಅವರು ಈ ಹಿಂದೆ ಬಸವನ ಬಾಗೇವಾಡಿಯಲ್ಲಿ ಖಾಸಗಿ ಶಾಲೆಯ ಶಿಕ್ಷಕಿಯಾದ್ದರು. ಕಳೆದ 5 ವರ್ಷದ ಹಿಂದೆ ಬೀದರ್ ಸೇರಿದ್ದರು. ಇದನ್ನೂ ಓದಿ: ಪಿಎಸ್‍ಐ ಹಗರಣದ ಮೂಲ ಕೆಪಿಸಿಸಿಯ ಭ್ರಷ್ಟಾಧ್ಯಕ್ಷ, ಖರ್ಗೆ ಕುಟುಂಬದ ಸುತ್ತ ತಿರುಗುತ್ತಿದೆ: ಬಿಜೆಪಿ

  • ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ – ಮರುಪರೀಕ್ಷೆಗೆ ಸರ್ಕಾರ ತೀರ್ಮಾನ

    ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ – ಮರುಪರೀಕ್ಷೆಗೆ ಸರ್ಕಾರ ತೀರ್ಮಾನ

    ಬೆಂಗಳೂರು: 545 ಪಿಎಸ್‌ಐ ಹುದ್ದೆಗಳ ಅಕ್ರಮ ನೇಮಕಾತಿಗೆ ಸಂಬಂಧಿಸಿದಂತೆ ಸರ್ಕಾರವು ಮಹತ್ವದ ನಿರ್ಧಾರ ಕೈಗೊಂಡಿದ್ದು, ಈ ಸಂಬಂಧ ನಡೆಸಲಾಗಿದ್ದ ಪರೀಕ್ಷೆಯನ್ನು ರದ್ದುಗೊಳಿಸಿ ಮರು ಪರೀಕ್ಷೆ ನಡೆಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

    ವಿಕಾಸಸೌಧದಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಆರಗ ಜ್ಞಾನೇಂದ್ರ, ಈ ಹಿಂದೆ ಪರೀಕ್ಷೆ ಬರೆದಿದ್ದ ಎಲ್ಲಾ 54,289 ಪರೀಕ್ಷಾರ್ಥಿಗಳು ಮತ್ತೊಮ್ಮೆ ಪರೀಕ್ಷೆ ಬರೆಯಲು ಅವಕಾಶ ಪಡೆಯಲಿದ್ದಾರೆ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಉತ್ತರ ಪತ್ರಿಕೆ ಬಂದೋಬಸ್ತ್‌ನಲ್ಲಿದ್ದ ಪೊಲೀಸ್ ಸಿಬ್ಬಂದಿ ಆತ್ಮಹತ್ಯೆ

    ಇದೇ ವೇಳೆ, ಸಿಐಡಿಯಿಂದ ಬಂಧಿತರಾದ ಅಭ್ಯರ್ಥಿಗಳನ್ನು ಮರು ಪರೀಕ್ಷೆಯಿಂದ ಹೊರಗಿಡಲಾಗುವುದು. ಮರು ಪರೀಕ್ಷೆಯ ದಿನಾಂಕವನ್ನು ಶೀಘ್ರದಲ್ಲೇ ನಿಗದಿಗೊಳಿಸಲಾಗುವುದು ಎಂದು ಗೃಹ ಸಚಿವರು ತಿಳಿಸಿದ್ದಾರೆ.

    ಮರು ಪರೀಕ್ಷೆ ನಿರ್ಧಾರದಿಂದ, ಅಕ್ರಮವಾಗಿ ನೇಮಕಾತಿ ಪಡೆದವರ ಜಾಗಕ್ಕೆ ಪ್ರತಿಭಾವಂತ ಹಾಗೂ ಪ್ರಾಮಾಣಿಕ ಅಭ್ಯರ್ಥಿಗಳಿಗೆ ಅವಕಾಶ ದೊರಕಲಿದೆ. ಪರೀಕ್ಷಾ ಅಕ್ರಮಗಳು ಒಂದಕ್ಕಿಂತ ಹೆಚ್ಚು ಕೇಂದ್ರಗಳಲ್ಲಿ ನಡೆದಿದೆ ಎಂಬ ಬಗ್ಗೆಯೂ ಅನುಮಾನಗಳಿದ್ದು, ಮರು ಪರೀಕ್ಷೆ ನಡೆಸುವ ನಿರ್ಧಾರವನ್ನು ಸರ್ಕಾರ ತೆಗೆದುಕೊಂಡಿದೆ ಎಂದು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಅಮಿತ್ ಶಾ, ಬೊಮ್ಮಾಯಿ ಜೊತೆ ಸಂಪುಟ ಪುನಾರಚನೆ, ಸಮಾಲೋಚನೆ

    ಮುಂದಿನ ದಿನಗಳಲ್ಲಿ ಇಂಥಹ ಅಕ್ರಮಗಳು ನಡೆಯದಂತೆ ತಡೆಯಲು ಕಠಿಣ ಕಾನೂನುಗಳನ್ನು ಜಾರಿಗೆ ತರುವ ಬಗ್ಗೆಯೂ ಅಲೋಚಿಸಲಾಗುವುದು ಎಂದಿದ್ದಾರೆ. ಮಾಧ್ಯಮಗೋಷ್ಠಿಯಲ್ಲಿ ರಾಜ್ಯ ಪೊಲೀಸ್ ಇಲಾಖೆ ಮುಖ್ಯಸ್ಥ ಪ್ರವೀಣ್ ಸೂದ್ ಹಾಗೂ ರಾಜ್ಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್ ಅವರು ಉಪಸ್ಥಿತರಿದ್ದರು.

    ಆದರೆ ಸರ್ಕಾರದ ಈ ಕ್ರಮಕ್ಕೆ ಕೆಲ ಅಭ್ಯರ್ಥಿಗಳು ವಿರೋಧ ವ್ಯಕ್ತಪಡಿಸಿದ್ದಾರೆ. ನಾನು ಪ್ರಮಾಣಿಕವಾಗಿ ಪರೀಕ್ಷೆ ಬರೆದು ಆಯ್ಕೆಯಾಗಿದ್ದೇವೆ. ಪರೀಕ್ಷೆಗಾಗಿ ತುಂಬಾ ಶ್ರಮವಹಿಸಿದ್ದೇವೆ. ಯಾರೋ ಮಾಡಿದ ತಪ್ಪಿಗೆ ನಾವೂ ಶಿಕ್ಷೆ ಅನುಭವಿಸುವಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.