Tag: PSI Sacm

  • ಅಮೃತ್ ಪೌಲ್ ಹರಕೆಯ ಕುರಿ – PSI ಹಗರಣದ ನಿಜವಾದ ಕಿಂಗ್‍ಪಿನ್ ಮಾಜಿ ಸಿಎಂ ಮಗ: ದಿನೇಶ್ ಗುಂಡೂರಾವ್

    ಅಮೃತ್ ಪೌಲ್ ಹರಕೆಯ ಕುರಿ – PSI ಹಗರಣದ ನಿಜವಾದ ಕಿಂಗ್‍ಪಿನ್ ಮಾಜಿ ಸಿಎಂ ಮಗ: ದಿನೇಶ್ ಗುಂಡೂರಾವ್

    ಬೆಂಗಳೂರು: ಯತ್ನಾಳ್ ಆರೋಪ ಗಮನಿಸಿದರೆ ಪಿಎಸ್‍ಐ (PSI) ಹಗರಣದಲ್ಲಿ ಬಂಧಿತರಾಗಿರುವ ಅಮೃತ್ ಪೌಲ್ (Amrit Paul) ಹರಕೆಯ ಕುರಿಯಂತೆ ಭಾಸವಾಗುತ್ತಿದೆ. ಈ ಹಗರಣದ ನಿಜವಾದ ಕಿಂಗ್‍ಪಿನ್ ಮಾಜಿ ಮುಖ್ಯಮಂತ್ರಿಯ ಮಗ. ಹಾಗಾದರೆ ಅದು ಯಾರು ಎಂಬುದೇ ಯಕ್ಷಪ್ರಶ್ನೆ? ಈ ಸತ್ಯ ಜನರಿಗೆ ಗೊತ್ತಾಗಬೇಕು. ಆ ಸತ್ಯ ತಿಳಿಯಬೇಕಾದರೆ ಒಂದೋ ನ್ಯಾಯಾಂಗ ತನಿಖೆಯಾಗಬೇಕು, ಇಲ್ಲವೆ ಸಿಬಿಐ (CBI) ತನಿಖೆಯಾಗಬೇಕು ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಸರಣಿ ಟ್ವೀಟ್ ಮೂಲಕ ಒತ್ತಾಯಿಸಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?
    ಪಿಎಸ್‍ಐ ನೇಮಕಾತಿ ಅಕ್ರಮದಲ್ಲಿ ಮಾಜಿ ಮುಖ್ಯಮಂತ್ರಿಯೊಬ್ಬರ ಪುತ್ರನ ನೇರ ಕೈವಾಡವಿದೆ ಎಂದು ಯತ್ನಾಳ್ ಆರೋಪಿಸಿದ್ದಾರೆ. ಈ ಹಗರಣದ ತನಿಖೆಯನ್ನು ಈಗಾಗಲೇ ಸಿಐಡಿ ನಡೆಸುತ್ತಿದೆ. ಯತ್ನಾಳ್‍ರ ಈ ಆರೋಪ ಇದೇ ಮೊದಲಲ್ಲ. ಈ ಹಿಂದೆಯೂ ಹಲವು ಬಾರಿ ಈ ಆರೋಪ ಮಾಡಿದ್ದಾರೆ. ಆದರೂ ಸಿಐಡಿ ಅಧಿಕಾರಿಗಳು ಯತ್ನಾಳ್ ಆರೋಪದ ಬಗ್ಗೆ ಯಾಕೆ ತನಿಖೆ ನಡೆಸುತ್ತಿಲ್ಲ.?ಕಳೆದ ಅಧಿವೇಶನದಲ್ಲಿ ಪಿಎಸ್‍ಐ ಹಗರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಲು ನಾವು ಒತ್ತಾಯಿಸಿದ್ದೆವು. ಆದರೆ ಯತ್ನಾಳ್ ಈ ಹಗರಣದ ಕಿಂಗ್‍ಪಿನ್ ಎಕ್ಸ್ ಸಿಎಂ ಪುತ್ರ ಎಂದಿದ್ದಾರೆ. ಜೊತೆಗೆ ಸಿಬಿಐ ತನಿಖೆಗೆ ಒತ್ತಾಯಿಸಿದ್ದಾರೆ. ನಮ್ಮ ಒತ್ತಾಯಕ್ಕಂತೂ ಈ ಸರ್ಕಾರ ಒಪ್ಪಲಿಲ್ಲ. ಕೊನೆಯ ಪಕ್ಷ ಯತ್ನಾಳ್ ಒತ್ತಾಯಕ್ಕಾದರೂ ಬೆಲೆ ಕೊಡಲಿ. ಇದನ್ನೂ ಓದಿ: ಕಳ್ಳರ ಕೃತ್ಯಕ್ಕೆ ಬೇಸತ್ತ ಗ್ರಾಮಸ್ಥರು – ಖದೀಮರನ್ನು ಹುಡುಕಿಕೊಟ್ಟವರಿಗೆ ಬಹುಮಾನ ಜೊತೆಗೆ ಸನ್ಮಾನ

    ಯತ್ನಾಳ್ ಆರೋಪ ಗಮನಿಸಿದರೆ ಪಿಎಸ್‍ಐ ಹಗರಣದಲ್ಲಿ ಬಂಧಿತರಾಗಿರುವ ಅಮೃತ್ ಪೌಲ್ ಹರಕೆಯ ಕುರಿಯಂತೆ ಭಾಸವಾಗುತ್ತಿದೆ. ಈ ಹಗರಣದ ನಿಜವಾದ ಕಿಂಗ್‍ಪಿನ್ ಮಾಜಿ ಮುಖ್ಯಮಂತ್ರಿಯ ಮಗ. ಹಾಗಾದರೆ ಅದು ಯಾರು ಎಂಬುದೇ ಯಕ್ಷಪ್ರಶ್ನೆ? ಈ ಸತ್ಯ ಜನರಿಗೆ ಗೊತ್ತಾಗಬೇಕು. ಆ ಸತ್ಯ ತಿಳಿಯಬೇಕಾದರೆ ಒಂದೋ ನ್ಯಾಯಾಂಗ ತನಿಖೆಯಾಗಬೇಕು, ಇಲ್ಲವೆ ಸಿಬಿಐ ತನಿಖೆಯಾಗಬೇಕು. ಪಿಎಸ್‍ಐ ನೇಮಕಾತಿಯ ಅಧಿಸೂಚನೆ ಹೊರಟಿದ್ದು ಇದೇ ಸರ್ಕಾರದ ಅವಧಿಯಲ್ಲಿ. ಹಗರಣ ನಡೆದಿರುವುದೂ ಇದೇ ಅವಧಿಯಲ್ಲಿ. ಈ ಅವಧಿಯಲ್ಲೇ ಬಿಎಸ್‍ವೈ (B.S Yediyurappa) ಮುಖ್ಯಮಂತ್ರಿ ಪದವಿ ಬಿಟ್ಟು ಮಾಜಿಯಾಗಿದ್ದಾರೆ. ಹಾಗಾದರೆ ಯತ್ನಾಳ್ ಆರೋಪ ಮಾಡುತ್ತಿರುವುದು ಬಿಎಸ್‍ವೈ ಪುತ್ರನ ವಿರುದ್ಧವೇ? ಬೆಂಕಿಯಿಲ್ಲದೆ ಹೊಗೆ ಬರಲು ಸಾಧ್ಯವಿಲ್ಲವೆಂಬಂತೆ ಯತ್ನಾಳ್ ಸುಮ್ಮನೆ ಆರೋಪ ಮಾಡಲು ಸಾಧ್ಯವೇ? ಇದನ್ನೂ ಓದಿ: ವಿಜಯದಶಮಿ ಬಳಿಕ 10 ದಿನಗಳ ಕಾಲ ದೀಪಾಲಂಕಾರ ವಿಸ್ತರಣೆ: ಬೊಮ್ಮಾಯಿ

    ಪಿಎಸ್‍ಐ ಹಗರಣ ಈ ಸರ್ಕಾರದ ಅತಿ ದೊಡ್ಡ ಕಳಂಕ. ಸಿಐಡಿ ಮೂಲಕ ಕಾಟಾಚಾರದ ತನಿಖೆ ಮಾಡಿಸಿ ತನ್ನ ಮೇಲಿರುವ ಕಳಂಕ ತೊಳೆದುಕೊಳ್ಳಲು ಈ ಸರ್ಕಾರ ಯತ್ನಿಸುತ್ತಿದೆ. ಆದರೆ ಈ ಸರ್ಕಾರದ ಭಾಗವಾಗಿರುವವರೇ ಈ ಹಗರಣದಲ್ಲಿ ಪ್ರಭಾವಿಗಳ ಭಾಗಿಯ ಬಗ್ಗೆ ಅನುಮಾನ ವ್ಯಕ್ತಪಡಿಸುತ್ತಿದ್ದಾರೆ. ಈ ಸರ್ಕಾರ ಪ್ರಾಮಾಣಿಕವಾಗಿದ್ದರೆ ಈಗಲಾದರೂ ಪಾರದರ್ಶಕ ತನಿಖೆ ನಡೆಸಲಿ ಎಂದು ಒತ್ತಾಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]