Tag: PSI

  • ಪ್ರಿಯಾಂಕ್ ಖರ್ಗೆ ಆಪ್ತರೆನ್ನಲಾದ ಕಾಂಗ್ರೆಸ್ ನಾಯಕರನ್ನ ಬಂಧಿಸಲಾಗಿದೆ: ಆರಗ

    ಪ್ರಿಯಾಂಕ್ ಖರ್ಗೆ ಆಪ್ತರೆನ್ನಲಾದ ಕಾಂಗ್ರೆಸ್ ನಾಯಕರನ್ನ ಬಂಧಿಸಲಾಗಿದೆ: ಆರಗ

    ಬೆಂಗಳೂರು: ಪಿಎಸ್‍ಐ ಹುದ್ದೆಗಳ ಅಕ್ರಮ ನೇಮಕಾತಿ ಸಂಬಂಧ ತನಿಖೆ ನಡೆಸುತ್ತಿರುವ ಸಿಐಡಿ ಪೊಲೀಸರು, ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ಅವರಿಗೆ ಆಪ್ತರೆನ್ನಲಾದ ಅವರದೇ ಪಕ್ಷದ ನಾಯಕರನ್ನು ಬಂಧಿಸಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಸ್ಪಷ್ಟಪಡಿಸಿದರು.

    ಮಾಧ್ಯಮ ಪ್ರಕಟಣೆ ಹೊರಡಿಸಿರುವ ಅವರು, ಖರ್ಗೆ ಅವರು ತಮ್ಮ ಬಳಿ ಅಕ್ರಮಕ್ಕೆ ಸಂಬಂಧಿಸಿದಂತೆ ಒಂದು ತಿಂಗಳ ಹಿಂದೆಯೇ ಸಲ್ಲಿಕೆಯಾಗಿದೆ ಎನ್ನಲಾದ ಒಂದು ಆಡಿಯೋ ರೆಕಾರ್ಡ್ ಅನ್ನು ಇಂದು ಬಿಡುಗಡೆ ಮಾಡಿದ್ದಾರೆ ಎಂದರು. ಇದನ್ನೂ ಓದಿ: ಪಿಎಸ್‌ಐ ನೇಮಕಾತಿ ಆದೇಶ ಕೈ ಸೇರುವ ಮುನ್ನವೇ ಯೂನಿಫಾರ್ಮ್‌ ಹಾಕ್ಕೊಂಡು ಬಿಲ್ಡಪ್‌

    ಪ್ರಾಮಾಣಿಕವಾಗಿ ಪರೀಕ್ಷೆ ಬರೆದರೂ, ಹುದ್ದೆಯಿಂದ ವಂಚಿತರಾದ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸಬೇಕು. ಅದಕ್ಕೆ ಸಿಐಡಿ ತನಿಖೆಗೆ ನಾನೇ ಸ್ವತಃ ಆಸಕ್ತಿ ತೋರಿಸಿದ್ದೇನೆ. ಈ ಕುರಿತು ಸಿಎಂ ಬೊಮ್ಮಾಯಿ ಅವರ ಜೊತೆ ಸಮಾಲೋಚಿಸಿ, ತನಿಖೆಗೆ ಆದೇಶ ನೀಡಿದ್ದೆ. ಆ ನಂತರ ಖರ್ಗೆ ಅವರು ಈ ಕುರಿತು ಒಂದು ಪತ್ರಿಕಾಗೋಷ್ಠಿ ಸಹ ನಡೆಸಿದ್ದರು. ಆದರೆ ಆಡಿಯೋ ರೆಕಾರ್ಡ್ ಬಗ್ಗೆ, ಮಾಹಿತಿ ನೀಡಿರಲಿಲ್ಲ. ಈಗ ಅವರ ಆಪ್ತರು ಬಂಧನವಾಗುತ್ತಿದ್ದಂತೆ ಮಾಹಿತಿ ಹೊರಹಾಕಿದ್ದಾರೆ ಅಂತೇಳಿದ್ರು ಎಂದು ಆರೋಪಿಸಿದರು.

    ಇದೇ ವೇಳೆ ಇಷ್ಟು ದಿನ ಯಾಕೆ ಸಾಕ್ಷ್ಯವನ್ನು ತಮ್ಮ ಬಳಿ, ಇಟ್ಟುಕೊಂಡಿದ್ದರು ಎಂದು ಸಾರ್ವಜನಿಕರಿಗೆ ತಿಳಿಸಬೇಕು. ತಮ್ಮ ಬೆಂಬಲಿಗರು, ಸಿಐಡಿ ತನಿಖೆಯಲ್ಲಿ, ಸಿಕ್ಕಿ ಬೀಳುವುದಿಲ್ಲ ಎಂಬ ಹುಸಿ ನಂಬಿಕೆಯೂ ಇರಬಹುದು. ಈಗಲಾದರೂ ಖರ್ಗೆ ಅವರು, ತನಿಖೆ ಕೈಗೊಂಡಿರುವ ಸಿಐಡಿ ಅಧಿಕಾರಿಗಳಿಗೆ ತಮ್ಮ ಬಳಿಯಿರುವ ದಾಖಲೆ ಹಾಗೂ ಮಾಹಿತಿಯನ್ನು ಹಂಚಿಕೊಳ್ಳಬೇಕು ಮತ್ತು ತಮ್ಮ ಹೊಣೆಗಾರಿಕೆಯನ್ನು ಅರಿಯಬೇಕು ಎಂದು ವಿನಂತಿಸುತ್ತೇನೆ ಎಂದರು.

    ತನಿಖೆಯು ನಿಷ್ಪಕ್ಷಪಾತವಾಗಿ ನಡೆಯುತ್ತಿದ್ದು, ಅಕ್ರಮಕ್ಕೆ ಒಳಗಾಗಿದವರು ಎಷ್ಟೇ ದೊಡ್ಡವರಾದರೂ ರಕ್ಷಿಸುವ ಪ್ರಶ್ನೆಯಿಲ್ಲ. ಕಾಂಗ್ರೆಸ್ ನಾಯಕರು, ತನಿಖೆಗೆ ಸಹಕರಿಸಬೇಕು ಹಾಗೂ ಯಾವುದೇ ರೀತಿಯ ರಾಜಕೀಯ ಲಾಭ ಅಪೇಕ್ಷೆ ಮಾಡದೆ, ಅಕ್ರಮ ಎಸಗಿದವರನ್ನು ಕಾನೂನಿನ ಬಲೆಗೆ ತರಲು ಮುಂದಾಗಬೇಕು ಎಂದು ಆದೇಶ ಹೊರಡಿಸಿದರು. ಇದನ್ನೂ ಓದಿ:  ಸೈನಿಕರಿಗಾಗಿ ವೈದ್ಯಕೀಯ ಸಲಕರಣೆ ರವಾನೆ ಮಾಡಿದ ಇನ್ಫೋಸಿಸ್ ಕಂಪನಿ ಸಹ-ಸಂಸ್ಥಾಪಕ ಕೆ.ದಿನೇಶ್ 

  • ಸಿಐಡಿ ತನಿಖೆ ಪೂರ್ಣವಾದ್ಮೇಲೆ 402 ಪಿಎಸ್‍ಐ ಹುದ್ದೆಗಳ ಪರೀಕ್ಷೆ

    ಸಿಐಡಿ ತನಿಖೆ ಪೂರ್ಣವಾದ್ಮೇಲೆ 402 ಪಿಎಸ್‍ಐ ಹುದ್ದೆಗಳ ಪರೀಕ್ಷೆ

    ಬೆಂಗಳೂರು: ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣ ಹಿನ್ನೆಲೆಯಲ್ಲಿ ಸಿಐಡಿ ತನಿಖೆ ಪೂರ್ಣಗೊಂಡ ನಂತರ 402 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ಪರೀಕ್ಷೆ ಮಾಡಲಾಗುವುದು ಎಂದು ಡಿಜಿಪಿ ಪ್ರವೀಣ್ ಸೂದ್ ತಿಳಿಸಿದರು

    ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಸಿಐಡಿಯಿಂದ ಪ್ರಸ್ತುತ ತನಿಖೆ ಪೂರ್ಣಗೊಂಡ ತಕ್ಷಣ 402 ಪಿಎಸ್‌ಐ ಹುದ್ದೆಗಳಿಗೆ ಲಿಖಿತ ಪರೀಕ್ಷೆಯನ್ನು ನಡೆಸಲಾಗುವುದು. ತಪ್ಪಿತಸ್ಥರನ್ನು ವಿಚಾರಣೆಗೆ ಒಳಪಡಿಸಲಾಗಿದೆ. ಅವರನ್ನು ಪ್ರಸ್ತುತ ಪಟ್ಟಿಯಿಂದ ಹೊರಗಿಡಲಾಗಿದೆ ಎಂದು ತಿಳಿಸಿದ್ದಾರೆ.

    ಖಾಲಿಯಿರುವ 402 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳ ಭರ್ತಿಗೆ ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಅರ್ಜಿ ಆಹ್ವಾನಿಸಿತ್ತು. ಇದರಲ್ಲಿ ಪುರುಷರು ಮತ್ತು ಮಹಿಳೆಯರು ಅರ್ಜಿ ಸಲ್ಲಿಸಬಹುದಾಗಿದ್ದು, ಕಲ್ಯಾಣ ಕರ್ನಾಟಕ ಪ್ರದೇಶವರಿಗೆ ಪ್ರತ್ಯೇಕ ಮೀಸಲಾತಿ ವ್ಯವಸ್ಥೆ ಕಲ್ಪಿಸಲಾಗಿತ್ತು. ಇದನ್ನೂ ಓದಿ: ಇಂದು ರಾತ್ರಿ ಬೈಯಪ್ಪನಹಳ್ಳಿ, ಎಂ.ಜಿ ರಸ್ತೆ ಮೆಟ್ರೋ ರೈಲು ಸೇವೆ ಸ್ಥಗಿತ

    ಒಟ್ಟು 402 ಹುದ್ದೆಗಳ ಪೈಕಿ 26 ಹುದ್ದೆಗಳು ಕಲ್ಯಾಣ ಕರ್ನಾಟಕಕ್ಕೆ ಮೀಸಲಾಗಿದ್ದು, ಉಳಿದ 376 ಹುದ್ದೆಗಳಿಗೆ ಕಲ್ಯಾಣ ಕರ್ನಾಟಕದವರೂ ಸೇರಿದಂತೆ ಕರ್ನಾಟಕದ ಯಾವುದೇ ಪ್ರದೇಶದವರು ಅರ್ಜಿ ಸಲ್ಲಿಸಬಹುದಾಗಿತ್ತು. ಆದರೆ ಅಕ್ಟೋಬರ್‌ನಲ್ಲಿ ನಡೆದ ಪಿಎಸ್‍ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪ ಬಂದಿದೆ. ಈ ಹಿನ್ನೆಲೆಯಲ್ಲಿ ಪಿಎಸ್‍ಐ ಹುದ್ದೆಗಳ ಭರ್ತಿಯನ್ನು ಮುಂದೂಡಲಾಗಿದೆ. ಇದನ್ನೂ ಓದಿ: ಪಿಎಸ್‍ಐ ಅಕ್ರಮ ನೇಮಕಾತಿ ಪ್ರಕರಣ – ಸ್ಫೋಟಕ ಆಡಿಯೋ ಔಟ್

  • ಪಿಎಸ್‍ಐ ಬ್ರಹ್ಮಾಂಡ ಭ್ರಷ್ಟಾಚಾರ – ಗಳಿಸಿದ್ದು 18 ಅಂಕ ಬಂದಿದ್ದು ಟಾಪ್ 15 ರ್‍ಯಾಕಿಂಗ್

    ಪಿಎಸ್‍ಐ ಬ್ರಹ್ಮಾಂಡ ಭ್ರಷ್ಟಾಚಾರ – ಗಳಿಸಿದ್ದು 18 ಅಂಕ ಬಂದಿದ್ದು ಟಾಪ್ 15 ರ್‍ಯಾಕಿಂಗ್

    ಬೆಂಗಳೂರು: ಪಿಎಸ್‍ಐ ಬ್ರಹ್ಮಾಂಡ ಭ್ರಷ್ಟಾಚಾರ ಪ್ರಕರಣ ದಿನ ದಿನ ಅನಾವರಣ ಆಗುತ್ತಲೇ ಇದೆ. ಒಬ್ಬೊಬ್ಬರದ್ದು ಒಂದೊಂದು ಸ್ಟೋರಿ. ಅದರಂತೆ ಪಿಎಸ್‍ಐ ಆಗಿಯೇ ಬಿಟ್ಟೆ ಅಂದುಕೊಂಡಿದ್ದ ಬಾವಿ ಪಿಎಸ್‍ಐ ಪೊಲೀಸರ ಖೆಡ್ಡಾಕ್ಕೆ ಬಿದ್ದಿದ್ದಾನೆ.

    ಹೌದು, ಕಲುಬುರಗಿಯ ವಿಶಾಲ್‍ಗೆ ಕಲ್ಯಾಣ ಕರ್ನಾಟಕದ ಖೋಟಾದಡಿ 15ನೇ ರ್‍ಯಾಕಿಂಗ್ ಬಂದಿತ್ತು. 15ನೇ ರ್‍ಯಾಂಕ್ ಬಂದವನು ಮೊದಲನೇ ಪೇಪರ್ ಅಲ್ಲಿ ಪಡೆದಿದ್ದು ಕೇವಲ 18 ಅಂಕಗಳನ್ನು ಮಾತ್ರ. ಮೊದಲ ಪೇಪರ್ ಅಲ್ಲಿ 18 ಅಂಕ ಪಡೆದಿದ್ದವ ಎರಡನೇ ಪೇಪರ್‌ನಲ್ಲಿ ಏಕಾಏಕಿ 123 ಅಂಕ ಪಡೆದು ಸೆಲೆಕ್ಟ್ ಆಗಿದ್ದ. ಇದನ್ನೂ ಓದಿ: ಪಿಎಸ್‌ಐ ಪರೀಕ್ಷೆಯಲ್ಲಿ ಅಕ್ರಮ – ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಅರೆಸ್ಟ್‌

    ಈ ಸೆಲೆಕ್ಷನ್ ಬಗ್ಗೆ ಅನುಮಾನ ಹೊಂದಿದ್ದ ಸಿಐಡಿ ಒಂದಷ್ಟು ಮಾಹಿತಿ ಕಲೆ ಹಾಕಿದ್ರು. ಈತನೂ ಕೂಡ ದಿವ್ಯಾ ಹಾಗರಗಿ ಕಾಲೇಜಿನಲ್ಲಿಯೇ ಎಕ್ಸಾಂ  ಬರೆದಿದ್ದು, ಇವನೂ ಕೂಡ ಅಕ್ರಮವಾಗಿಯೇ ಸೆಲೆಕ್ಟ್ ಆಗಿದ್ದಾನೆ. ಸದ್ಯ ಸಿಐಡಿ ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದು ವಿಚಾರಣೆ ಮುಂದುವರಿಸಿದ್ದಾರೆ. ಇದನ್ನೂ ಓದಿ: PSI ಅಕ್ರಮ ನೇಮಕಾತಿ: ಎಂಎಲ್‌ಎ ಮುಂದೆಯೇ ಗನ್‌ಮ್ಯಾನ್ ಅರೆಸ್ಟ್

  • ನನ್ನನ್ನು ಮಾತ್ರ ಟಾರ್ಗೆಟ್ ಮಾಡಿದ್ದಾರೆ ಬಿಜೆಪಿ ದ್ವೇಷದ ರಾಜಕೀಯ ಮಾಡುತ್ತಿದೆ: ಡಿಕೆಶಿ

    ನನ್ನನ್ನು ಮಾತ್ರ ಟಾರ್ಗೆಟ್ ಮಾಡಿದ್ದಾರೆ ಬಿಜೆಪಿ ದ್ವೇಷದ ರಾಜಕೀಯ ಮಾಡುತ್ತಿದೆ: ಡಿಕೆಶಿ

    ಬೆಂಗಳೂರು: ಬಿಜೆಪಿ ದ್ವೇಷದ ರಾಜಕಾರಣ ಮಾಡಿದೆ. ನಾವು ಪಾದಯಾತ್ರೆ ನಡೆಸಿದ್ದಕ್ಕೆ ನಮ್ಮ ಮೇಲೆ ಕೇಸ್ ಹಾಕಿ ಕೋರ್ಟ್‍ಗೆ ಅಲೆಯುವಂತೆ ಮಾಡಿದೆ. ನನ್ನನ್ನು ಮಾತ್ರ ಟಾರ್ಗೆಟ್ ಮಾಡಿದೆ. ಬಿಜೆಪಿ ದ್ವೇಷದ ರಾಜಕೀಯ ಮಾಡುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    ಕೆಪಿಸಿಸಿ ಕಚೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಿಜೆಪಿ ದ್ವೇಷದ ರಾಜಕಾರಣ ಮಾಡಿದೆ. ನಾವು ಪಾದಯಾತ್ರೆ ನಡೆಸಿದ್ದಕ್ಕೆ ನಮ್ಮ ಮೇಲೆ ಕೇಸ್ ಹಾಕಿ ಕೋರ್ಟ್‍ಗೆ ಅಲೆಯುವಂತೆ ಮಾಡಿದೆ. ಇದಕ್ಕೆಲ್ಲ ಜನ ಉತ್ತರ ಕೊಡಬೇಕು. ನಾವು ನಮಗೋಸ್ಕರ ಹೋರಾಟ ಮಾಡಿದ್ವಾ?. ನಾವು ರೈತ ಪರ ಹೋರಾಟ ಮಾಡಿದ್ದು. ಇವತ್ತು ಜನಪ್ರತಿನಿಧಿ ನ್ಯಾಯಾಲಯದಲ್ಲಿ ಸಮನ್ಸ್ ಆಗಿತ್ತು. ಕೊರೊನಾ ವೈರಸ್ ಸಂದರ್ಭದಲ್ಲಿ ಕೇಸ್ ಹಾಕಿದ್ದಾರೆ. ಹತ್ತು ಸಾವಿರ ಜನ ಸೇರಿಸಿದ್ದಾರೆ ಅಂತಾ ಕೇಸ್ ಹಾಕಿದ್ದಾರೆ. ಆರು ಜನರ ಮೇಲೆ ಕೇಸ್ ಇದೆ. ಉದ್ದೇಶಪೂರ್ವಕವಾಗಿ ಕೇಸ್ ಹಾಕಿದ್ದಾರೆ. ಪಾದಯಾತ್ರೆ ಕೇಸ್, ರಾಮನಗರ ಕೇಸ್‍ನಿಂದಾಗಿ ಕೋರ್ಟ್‍ಗೆ ಅಲೆದಾಡಬೇಕು ಅಂತಾ ಅವರ ಉದ್ದೇಶ. ಶಿವಮೊಗ್ಗದಲ್ಲಿ ಈಶ್ವರಪ್ಪ, ರಾಘವೇಂದ್ರ ಪ್ರತಿಭಟನೆ ಮಾಡಿದ್ರು ಆಗ ಕಾನೂನು ಇರಲಿಲ್ವಾ ಕೊರೊನಾ ಇರಲಿಲ್ಲವಾ?. ಇದನ್ನು ಜನರು ನೋಡಬೇಕು ಬಿಜೆಪಿಗೆ ಉತ್ತರ ನೀಡಬೇಕು. ಕೇವಲ ದ್ವೇಷದಿಂದ ಮಾಡುತ್ತಿದ್ದಾರೆ. ರೈತರ ಪರವಾಗಿ ಹೋರಾಡಿದ್ದಕ್ಕೆ ಕೇಸ್ ಹಾಕಿದ್ದಾರೆ. ಹೋರಾಟ ಹತ್ತಿಕ್ಕುತ್ತಿದ್ದಾರೆ. ನಾವು ಯಾವುದಕ್ಕೂ ಜಗ್ಗಲ್ಲ ಎಂದು ಗುಡುಗಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ದೃಷ್ಟಿಯಲ್ಲಿ ಗಲಭೆ ಆರೋಪಿಗಳಿಗೆ ಹಲಾಲ್, ಕಬಾಬ್ ನೀಡಿ ಉಪಚರಿಸಬೇಕಿತ್ತೇ?: ಬಿಜೆಪಿ ಕಿಡಿ

    ಪಿಎಸ್‍ಐ ಪರೀಕ್ಷೆ ಅಕ್ರಮದಲ್ಲಿ ಕಾಂಗ್ರೆಸ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಂಧನ ವಿಚಾರವಾಗಿ ಮಾತನಾಡಿ, ಯಾರೇ ಇರಬಹುದು ಅವರ ವಿರುದ್ಧ ಕ್ರಮಕೈಗೊಳ್ಳಿ ಹಗರಣವನ್ನು ಬಯಲಿಗೆಳೆದಿದ್ದೆ ಕಾಂಗ್ರೆಸ್ ಪ್ರಿಯಾಂಕ್ ಖರ್ಗೆ ಮೊದಲು ಹಗರಣ ಕುರಿತು ಮಾತನಾಡಿದ್ದರು ಎಂದರು. ಇದನ್ನೂ ಓದಿ: ಪರೀಕ್ಷಾ ಕೇಂದ್ರದಲ್ಲೂ ಹಿಜಬ್‌ ವಿದ್ಯಾರ್ಥಿನಿಯರ ಹೈಡ್ರಾಮಾ – ಮನೆಗೆ ನಡೆದ ವಿದ್ಯಾರ್ಥಿನಿಯರು

    52 ಸಾವಿರ ಜನ ಪಿಎಸ್‍ಐ ಪರೀಕ್ಷೆ ಬರೆದಿದ್ದಾರೆ. ಅವರಿಗೆ ಅನ್ಯಾಯವಾಗಲಿದೆ. ಪಿಎಸ್‍ಐ ಪೋಸ್ಟ್‌ಗೆ 50 ರಿಂದ 60 ಲಕ್ಷ ಲಂಚ ಕೊಟ್ಟಿದ್ದಾರೆ ಎಂಬ ಮಾತುಗಳು ಕೇಳಿ ಬರ್ತಿವೆ. ಈ ಸರ್ಕಾರ ಸಂಪೂರ್ಣ ಭ್ರಷ್ಟಾಚಾರದಲ್ಲಿ ತೊಡಗಿದೆ. ಎಲ್ಲಿ ನೋಡಿದ್ರು ಲಂಚ, ಲಂಚ ಎಂದು ಬಿಜೆಪಿ ವಿರುದ್ಧ ಕೆಂಡ ಕಾರಿದರು.

  • ಪಿಎಸ್‍ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿಲ್ಲ: ಪ್ರವೀಣ್ ಸೂದ್

    ಪಿಎಸ್‍ಐ ಪರೀಕ್ಷೆಯಲ್ಲಿ ಅಕ್ರಮ ನಡೆದಿಲ್ಲ: ಪ್ರವೀಣ್ ಸೂದ್

    ಬೆಂಗಳೂರು: ಪಿಎಸ್‍ಐ ಪರೀಕ್ಷೆಯಲ್ಲಿ ಅಕ್ರಮ ಕಂಡು ಬಂದಿಲ್ಲ. ಪರೀಕ್ಷಾ ಕೇಂದ್ರಗಳಲ್ಲಿ ಉತ್ತರ ಪ್ರತಿಗಳು ಮ್ಯಾನಿಪ್ಲೇಟ್ ಮಾಡಿರುವ ಅನುಮಾನದ ಮೇರೆಗೆ ಎಫ್‍ಐಆರ್ ದಾಖಲಿಸಿಕೊಂಡು ಪ್ರಕರಣದ ಬಗ್ಗೆ ತನಿಖೆ ಮಾಡಲು ಸಿಐಡಿಗೆ ಕೊಡಲಾಗಿದೆ ಎಂದು ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ತಿಳಿಸಿದರು.

    ಬೆಂಗಳೂರಿನ ಕೋರಮಂಗಲ ಕೆ.ಎಸ್ ಆರ್ ತುಕಡಿ ಮೈದಾನದಲ್ಲಿ ಕಾವಯತು ಕಾರ್ಯಕ್ರಮದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಐಡಿ ಅಧಿಕಾರಿಗಳು ಈಗಾಗಲೇ ಪ್ರಕರಣದ ಬಗ್ಗೆ ತನಿಖೆ ಪ್ರಾರಂಭ ಮಾಡಿದ್ದು, ಕೆಲವರನ್ನು ಬಂಧಿಸಿದ್ದಾರೆ. ಸರ್ಕಾರ 545 ಪಿಎಸ್‍ಐಗಳ ನೇಮಕಾತಿ ಆದೇಶ ಹೊರಡಿಸಿತ್ತು. ಸರ್ಕಾರದ ಆದೇಶದಂತೆ ಪರೀಕ್ಷೆ ಮಾಡಲಾಗಿದೆ. ಪರೀಕ್ಷೆಯಲ್ಲಿ ಅಕ್ರಮ ನಡೆದಿಲ್ಲ ಎಂದರು.

    ಪರೀಕ್ಷಾ ಕೇಂದ್ರಗಳಲ್ಲಿ ಉತ್ತರದ ಪ್ರತಿಗಳು ಮ್ಯಾನಿಪ್ಲೇಟ್ ಆಗಿರೋದು ಕಂಡು ಬಂದಿದೆ. ಹಾಗಾಗಿ ಸಿಐಡಿ ಅಧಿಕಾರಿಗಳು ತಾತ್ಕಾಲಿಕ ಪಟ್ಟಿಯಲ್ಲಿ ಆಯ್ಕೆ ಆಗಿರುವ ಅಭ್ಯರ್ಥಿಗಳ ತನಿಖೆ ಮಾಡುತ್ತಿದ್ದಾರೆ. ನೂರು ಮಂದಿ ಅಭ್ಯರ್ಥಿಗಳನ್ನು ತನಿಖೆ ಮಾಡಿ ಮಾಹಿತಿ ಪಡೆದುಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ ಎಂದು ಹೇಳಿದರು. ಇದನ್ನೂ ಓದಿ: ಪ್ರಧಾನಿ ಭೇಟಿಗೂ ಮುನ್ನ ಜಮ್ಮುವಿನಲ್ಲಿ ಎನ್‌ಕೌಂಟರ್ – ಇಬ್ಬರು ಉಗ್ರರ ಹತ್ಯೆ

    ಉತ್ತರ ಪತ್ರಿಕೆ ಮ್ಯಾನಿಪ್ಲೇಟ್ ಮಾಡಿರುವ ಪರೀಕ್ಷಾ ಕೇಂದ್ರಗಳ ವಿರುದ್ಧ ಕ್ರಮಕೈಗೊಳ್ಳಲಾಗುತ್ತಿದೆ. ಅದರಲ್ಲಿ ಭಾಗಿಯಾಗಿರುವ ಪರೀಕ್ಷಾ ಕೇಂದ್ರದ ಸಿಬ್ಬಂದಿಯನ್ನು ಬಂಧಿಸಿ ತನಿಖೆ ಮಾಡಲಾಗುತ್ತಿದೆ. ಅಷ್ಟೇ ಅಲ್ಲದೇ ಪ್ರಕರಣ ಹಿಂದೆ ಯಾರಿದ್ದಾರೆ ಎನ್ನವುದರ ಕುರಿತು ತನಿಖೆ ನಡೆಸಲಾಗುತ್ತಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ವ್ಯಕ್ತಿಗಳ ವಿರುದ್ಧ ಕಠಿಣವಾದ ಕ್ರಮಕೈಗೊಳ್ಳಲಾಗುತ್ತದೆ. ಜೊತೆಗೆ ಮುಂದೆ ಯಾವುದೇ ಪರೀಕ್ಷೆಗಳಲ್ಲಿ ಭಾಗಿಯಾಗಲು ಸಾದ್ಯವಾಗದ ಹಾಗೇ ಮಾಡಲಾಗುತ್ತದೆ ಎಂದು ತಿಳಿಸಿದರು. ಇದನ್ನೂ ಓದಿ: ಪರೀಕ್ಷಾ ಕೇಂದ್ರದಲ್ಲೂ ಹಿಜಬ್‌ ವಿದ್ಯಾರ್ಥಿನಿಯರ ಹೈಡ್ರಾಮಾ – ಮನೆಗೆ ನಡೆದ ವಿದ್ಯಾರ್ಥಿನಿಯರು

  • PSI ಅಕ್ರಮ ನೇಮಕಾತಿ: ಎಂಎಲ್‌ಎ ಮುಂದೆಯೇ ಗನ್‌ಮ್ಯಾನ್ ಅರೆಸ್ಟ್

    PSI ಅಕ್ರಮ ನೇಮಕಾತಿ: ಎಂಎಲ್‌ಎ ಮುಂದೆಯೇ ಗನ್‌ಮ್ಯಾನ್ ಅರೆಸ್ಟ್

    ಕಲಬುರಗಿ: ಪಿಎಸ್‌ಐ ಅಕ್ರಮ ನೇಮಕಾತಿ ವಿಚಾರಕ್ಕೆ ಸಂಬಂಧಿಸಿದಂತೆ ಅಫ್ಜಲ್‌ಪುರ ಎಂಎಲ್‌ಎ ಎಂ.ವೈ.ಪಾಟೀಲ್ ಗನ್‌ಮ್ಯಾನ್‌ನನ್ನು ಬಂಧಿಸಲಾಗಿದೆ.

    ಶಾಸಕ ಎಂ.ವೈ.ಪಾಟೀಲ್ ಅವರು ಪರಿಚಯಸ್ಥರ ಮದುವೆಗೆ ತೆರಳುತ್ತಿದ್ದ ವೇಳೆ, ಕಲಬುರಗಿ ನಗರದ ರಾಮಮಂದಿರ ಬಳಿ ಗನ್‌ಮ್ಯಾನ್ ಅಣ್ಣಯ್ಯ ದೇಸಾಯಿಯನ್ನು ಬಂಧಿಸಲಾಗಿದೆ. ಶಾಸಕರನ್ನು ಕಾರಿನಿಂದ ಇಳಿಸಿದ ಪೊಲೀಸರು, ಅವರ ಮುಂದೆಯೇ ಬಂಧಿಸಿದ್ದಾರೆ. ಬಳಿಕ ಶಾಸಕರಿಗೆ ಮತ್ತೊಬ್ಬ ಗನ್‌ಮ್ಯಾನ್‌ನನ್ನು ಕಳುಹಿಸಿಕೊಟ್ಟಿದ್ದಾರೆ. ಇದನ್ನೂ ಓದಿ: ಕಲಬುರಗಿಯಲ್ಲಿ ನಾಳೆಯಿಂದ 2 ದಿನ ಬಿಜೆಪಿ ಕೋರ್ ಕಮಿಟಿ ಸಭೆ – ಸಿಎಂ ಸೇರಿ ಹಲವರು ಭಾಗಿ

    MLA

    ಪಿಎಸ್‌ಐ ಪರೀಕ್ಷೆ ಅಕ್ರಮ ನೇಮಕಾತಿಗೆ ಸಂಬಂಧಿಸಿದಂತೆ ಈವರೆಗೆ ಮೂವರು ಕೊಠಡಿ ಮೇಲ್ವಿಚಾರಕರು, ನಾಲ್ವರು ಅಭ್ಯರ್ಥಿಗಳು ಹಾಗೂ ಜ್ಞಾನಜೋತಿ ಇಂಗ್ಲಿಷ್ ಶಾಲೆ ಅಧ್ಯಕ್ಷ ರಾಜೇಶ್ ಹಾಗರಗಿ ಸೇರಿ 8 ಮಂದಿಯನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಈ ಪೈಕಿ 6 ಆರೋಪಿಗಳನ್ನು 3 ದಿನಗಳ ಕಾಲ ವಿಚಾರಣೆ ನಡೆಸಲಾಗಿದೆ. ಆದರೂ ಅಭ್ಯರ್ಥಿಗಳು ಸತ್ಯ ಬಾಯಿಬಿಟ್ಟಿಲ್ಲ ಎನ್ನಲಾಗಿದೆ. ಇದನ್ನೂ ಓದಿ: ಬಸವಣ್ಣನಂತೆ ಬೊಮ್ಮಾಯಿ ಕೆಲಸ ಮಾಡುತ್ತಿದ್ದಾರೆ: ದೇಶಿಕೇಂದ್ರ ಮಹಾಸ್ವಾಮಿಜೀ

    Karnataka PSI exam scam (3)

    ತಮಗೇನೂ ಗೊತ್ತಿಲ್ಲ, ತಾವು ಅಕ್ರಮ ಮಾಡಿಯೇ ಇಲ್ಲ ಎಂದು ಹೇಳುತ್ತಿದ್ದಾರೆ. ಆದರೆ, ವೀರೇಶ್ ಎಂಬ ಅಭ್ಯರ್ಥಿ ಹಣ ನೀಡಿರುವ ಬಗ್ಗೆ ಹೇಳಿಕೆ ನೀಡಿದ್ದಾನೆ. ಕಿಂಗ್‌ಪಿನ್ ಮಂಜುನಾಥ ಎಂಬವನಿಗೆ 39 ಲಕ್ಷ ಹಣ ನೀಡಿರುವುದಾಗಿ ಹೇಳಿಕೆ ನೀಡಿದ್ದಾನೆ. ಅಕ್ರಮದ ಬಗ್ಗೆ ವಿವಿಧ ಆಯಾಮಗಳಲ್ಲಿ ತನಿಖೆ ನಡೆಸುತ್ತಿರುವ ಪೊಲೀಸರು, ಬಂಧಿತ ಅಭ್ಯರ್ಥಿಗಳ ಬ್ಯಾಂಕ್ ಡಿಟೈಲ್ಸ್, ಹಣದ ವರ್ಗಾವಣೆ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದಾರೆ.

  • ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ನಾಪತ್ತೆ – ಸರ್ಕಾರದ ವಿರುದ್ಧ ಕಾಂಗ್ರೆಸ್ ಆರೋಪ

    ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ನಾಪತ್ತೆ – ಸರ್ಕಾರದ ವಿರುದ್ಧ ಕಾಂಗ್ರೆಸ್ ಆರೋಪ

    ಬೆಂಗಳೂರು: ಪಿಎಸ್‍ಐ ಪರೀಕ್ಷಾ ಅಕ್ರಮದ ತನಿಖೆ ಚುರುಕುಗೊಂಡಿದೆ. ಆದರೆ ಪ್ರಕರಣದ ಪ್ರಮುಖ ಆರೋಪಿ ಎನ್ನಲಾಗಿರುವ ಬಿಜೆಪಿ ನಾಯಕಿ ದಿವ್ಯಾ ಹಾಗರಗಿಯನ್ನು ಏಳು ದಿನ ಕಳೆದ್ರೂ ಪೊಲೀಸರಿಗೆ ಬಂಧಿಸಲು ಆಗಿಲ್ಲ. ಸರ್ಕಾರವೇ ದಿವ್ಯಾ ಹಾಗರಗಿಯನ್ನು ರಕ್ಷಣೆ ಮಾಡ್ತಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

    ಪಿಎಸ್‍ಐ ಸೆಲೆಕ್ಷನ್ ಲಿಸ್ಟ್‌ನಲ್ಲಿದ್ದ ಅಭ್ಯರ್ಥಿಗಳ ವಿಚಾರಣೆಯನ್ನು ಇಂದಿನಿಂದ ಸಿಐಡಿ ಆರಂಭಿಸಿದೆ. ಕೆಪಿಎಸ್‍ಸಿ ವಶದಲ್ಲಿದ್ದ 545 ಪಿಎಸ್‍ಐ ಪರೀಕ್ಷಾರ್ಥಿಗಳ ಓಎಂಆರ್ ಶೀಟ್‍ಗಳನ್ನು ಸಿಐಡಿ ಸೀಜ್ ಮಾಡಿದೆ. ಮೊದಲ ದಿನವಾದ ಇಂದು 50 ಅಭ್ಯರ್ಥಿಗಳ ಪೈಕಿ ಐವರು ಗೈರು ಹಾಜರಾಗಿದ್ರು. ಇವರ ಮೇಲೆ ಸಿಐಡಿಗೆ ಈಗ ಅನುಮಾನ ಮೂಡಿದೆ. ವಿಚಾರಣೆಗೆ ಹಾಜರಾಗಿದ್ದ 45 ಮಂದಿಯ ಓಎಂಆರ್ ಕಾರ್ಬನ್ ಶೀಟ್‍ಗಳನ್ನು ಪರಿಶೀಲಿಸಿದೆ. ನಾಳೆ ಐವತ್ತು ಅಭ್ಯರ್ಥಿಗಳನ್ನು ಸಿಐಡಿ ವಿಚಾರಣೆಗೆ ಒಳಪಡಿಸಲಿದೆ. ಇದನ್ನೂ ಓದಿ: 35 ಲಕ್ಷ ಪಾವತಿ ಮಾಡಿ 5 ಲಕ್ಷ ಸಿಗದೇ ಪೇಚಾಡಿದ – ಆಪ್ತ ಸ್ನೇಹಿತನಿಂದಲೇ ಪಿಎಸ್‌ಐ ಅಕ್ರಮ ಲೀಕ್‌ ಆಗಿದ್ದು ಹೇಗೆ?

    ಪ್ರಕರಣ ನಡೆದು ಏಳು ದಿನ ಕಳೆದರು ದಿವ್ಯಾ ಹಾಗರಗಿ ಬಂಧನವಾಗದೆ ಇರುವುದುರಿಂದ ಪ್ರತಿಪಕ್ಷಗಳು ಸರ್ಕಾರದ ವಿರುದ್ಧ ಮುಗಿಬಿದ್ದಿವೆ. ದಿವ್ಯಾ ಹಾಗರಗಿ ರಾಜ್ಯ ಬಿಟ್ಟು ಎಲ್ಲಿಯೂ ಹೋಗಿಲ್ಲ. ಅವರು ಬೆಂಗಳೂರಿನಲ್ಲಿ ಪ್ರಭಾವಿಗಳ ರಕ್ಷಣೆಯಲ್ಲಿ ಸೇಫ್ ಆಗಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ. ಈ ನಡುವೆ ನಾಳೆ ಕಲಬುರಗಿಗೆ ಆಗಮಿಸುತ್ತಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ಹಗರಣದ ಬಿಸಿ ತಾಕುವ ಸಾಧ್ಯತೆಗಳು ಇದೆ. ಇದನ್ನೂ ಓದಿ: ಹುಬ್ಬಳ್ಳಿ ಗಲಭೆಯಲ್ಲಿ ಪೊಲೀಸರ ಹತ್ಯೆಗೆ ಸಂಚು- ಅಟ್ಟಾಡಿಸಿ ಕೊಲ್ಲಲು ಮುಂದಾಗಿದ್ದ ಗಲಭೆಕೋರರು

  • ಹರ್ಷ ಕೇಸ್‍ನ ಪ್ರಮುಖ ಆರೋಪಿಗಳು ಅರೆಸ್ಟ್: ಆರಗ ಜ್ಞಾನೇಂದ್ರ

    ಹರ್ಷ ಕೇಸ್‍ನ ಪ್ರಮುಖ ಆರೋಪಿಗಳು ಅರೆಸ್ಟ್: ಆರಗ ಜ್ಞಾನೇಂದ್ರ

    ಶಿವಮೊಗ್ಗ: ಹರ್ಷ ಕೇಸ್‍ನಲ್ಲಿ ಪ್ರಮುಖ ಆರೋಪಿಗಳ ಅರೆಸ್ಟ್ ಆಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

    ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹರ್ಷ ಕೇಸ್‍ನಲ್ಲಿ ಪ್ರಮುಖ ಆರೋಪಿಗಳ ಅರೆಸ್ಟ್ ಆಗಿದೆ. ಬಂಧಿತರ ವಿಚಾರಣೆ ನಡೆಯುತ್ತಿದೆ. ಶಿವಮೊಗ್ಗ ಶಾಂತವಾಗಿದೆ. ಶಾಲಾ ಕಾಲೇಜುಗಳು ಆರಂಭವಾಗಿವೆ. ಶಿವಮೊಗ್ಗ ಜನತೆ ತಾಳ್ಮೆ ಕಳೆದುಕೊಳ್ಳದೇ ಸಹಕರಿಸಿದ್ದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ ಎಂದಿದ್ದಾರೆ. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ಸರ್ಟಿಫಿಕೇಟ್ ನಮಗೆ ಬೇಕಾಗಿಲ್ಲ: ಹಾಲಪ್ಪ ಆಚಾರ್

    ಹರ್ಷ ಕೊಲೆ ವ್ಯರ್ಥ ಆಗಲಿಕ್ಕೆ ಬಿಡದೇ, ಯಾರು ಈ ರೀತಿಯ ಕೊಲೆ ಮಾಡುವ ಮಾನಸಿಕತೆ ಇರುವವರು ಇದ್ದಾರೆ ಅವರಿಗೆ ತಕ್ಕ ಪಾಠ ಕಲಿಸುತ್ತೇವೆ. ಎಸ್‍ಡಿಪಿಐ, ಸಿಎಫ್‍ಐ ನಿಷೇಧ ಕುರಿತ ವಿಷಯ ಚರ್ಚೆಯಲ್ಲಿದೆ. ಆ ಸಂಘಟನೆಗಳನ್ನು ಕೇಂದ್ರ ಸರ್ಕಾರ ನಿಷೇಧಿಸಬೇಕು. ಈ ಬಗ್ಗೆ ರಾಜ್ಯ ಸರ್ಕಾರದಿಂದ ಯಾವ, ಯಾವ ವರದಿ ನೀಡಬೇಕೋ ಅದಕ್ಕೆ ಎಲ್ಲಾ ತಯಾರಿ ನಡೆಯುತ್ತಿದೆ. ಹರ್ಷ ಕೊಲೆ ಪ್ರಕರಣದ ಬಗ್ಗೆ ಪೊಲೀಸರೆ ಒಳ್ಳೆಯ ರೀತಿಯಲ್ಲಿ ತನಿಖೆ ನಡೆಸುತ್ತಿದ್ದಾರೆ. ಅಗತ್ಯ ಇದ್ದರೆ ಎನ್‍ಐಎ ತನಿಖೆಗೆ ಬರೆಯುತ್ತೇವೆ. ಸದ್ಯಕ್ಕೆ ಪೊಲೀಸ್ ತನಿಖೆ ಬಿಟ್ಟು ಬೇರೆ ಯಾವುದೇ ತನಿಖೆ ಇಲ್ಲ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ರಾಜವಂಶಗಳು ತಮ್ಮ ಸ್ವಾರ್ಥಕ್ಕೆ ಉಕ್ರೇನ್ ಸಮಸ್ಯೆಯನ್ನ ಬಳಸಿಕೊಳ್ಳುತ್ತೀವೆ: ಮೋದಿ ಕಿಡಿ

    ಕಳೆದ ಮೂರು ದಿನದ ಹಿಂದೆ ಹೊಸನಗರದಲ್ಲಿ ಪಿಎಸ್‍ಐ ಹಾಗು ಕಾನ್ಸ್‌ಟೇಬಲ್‌, ಬುದ್ದಿ ಮ್ಯಾಂದನ ಮೇಲೆ ಹಲ್ಲೆ ನಡೆಸಿದ ವಿಚಾರವಾಗಿ ಮಾತನಾಡಿದ ಅವರು, ಈ ಘಟನೆಯ ವೀಡಿಯೋವನ್ನು ನೋಡಿದ್ದೇನೆ. ಮೇಲಾಧಿಕಾರಿಗಳಿಗೆ ವರದಿ ನೀಡುವಂತೆ ಸೂಚನೆ ನೀಡುತ್ತೇನೆ. ನಂತರ ಏನು ಕ್ರಮ ಕೈಗೊಳ್ಳಬಹುದು ಎಂಬುದನ್ನು ತಿಳಿಸುತ್ತೇನೆ. ಈ ಘಟನೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರ ಬಂಧನವಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್ ಮುಂದುವರಿದಿದೆ. ಶಿವಮೊಗ್ಗದಲ್ಲಿ ಗಾಂಜಾ ಹಾವಳಿ ಸ್ವಲ್ಪ ಇದೆ. ಇದಕ್ಕೆ ಸಾರ್ವಜನಿಕರು ಸಹಕಾರ ಕೊಡಬೇಕು. ಗಾಂಜಾ ಮಾರಾಟಗಾರರು, ವ್ಯವಸಿಗಳು ಕಂಡು ಬಂದರೆ ಪೊಲೀಸರಿಗೆ ಮಾಹಿತಿ ನೀಡಬೇಕು. ಸರ್ಕಾರ ಮಾದಕ ವಸ್ತುಗಳ ವಿರುದ್ಧ ದೊಡ್ಡ ಆಂದೋಲನ ಮಾಡಿದೆ. ಶಿವಮೊಗ್ಗ ನಗರದ ಎರಡು ಠಾಣೆಗಳ ವಿರುದ್ಧ ತನಿಖೆ ನಡೆಸುತ್ತಿದ್ದೇವೆ. ಪ್ರಕರಣದ ಹಿಂದೆ ಪೊಲೀಸರು ಯಾರು ಶಾಮೀಲು ಆಗಿದ್ದಾರೆ ಎಂಬುದು ಪತ್ತೆಯಾದರೆ ಬಿಡುವುದಿಲ್ಲ. ಪೊಲೀಸರಿಗೆ ಒಂದು ಕಾಯ್ದೆ, ಸಾಮಾನ್ಯ ಜನರಿಗೊಂದು ಕಾಯ್ದೆ ಇಲ್ಲ ಎಂದು ಹೇಳಿದ್ದಾರೆ.

  • ಬುದ್ಧಿಮಾಂದ್ಯನ ಮೇಲೆ ಮನಬಂದಂತೆ ಥಳಿಸಿದ PSI

    ಬುದ್ಧಿಮಾಂದ್ಯನ ಮೇಲೆ ಮನಬಂದಂತೆ ಥಳಿಸಿದ PSI

    ಶಿವಮೊಗ್ಗ: ಬುದ್ಧಿಮಾಂದ್ಯನ ಮೇಲೆ ನಡು ರಸ್ತೆಯಲ್ಲೇ ಪಿಎಸ್‍ಐ ಹಾಗೂ ಕಾನ್ಸ್‌ಟೇಬಲ್ ಮನಬಂದಂತೆ ಥಳಿಸಿರುವ ಘಟನೆ ಗೃಹ ಸಚಿವ ತವರು ಜಿಲ್ಲೆಯಲ್ಲೇ ನಡೆದಿದೆ.

    ಜಿಲ್ಲೆಯ ಹೊಸನಗರ ಠಾಣೆ ಪಿಎಸ್‍ಐ ರಾಜೇಂದ್ರ ನಾಯ್ಕ್ ಹಾಗೂ‌ ಕಾನ್ಸ್‌ಟೇಬಲ್ ಇಬ್ಬರು ಬುದ್ಧಿಮಾಂದ್ಯ ಜಟ್ಟಪ್ಪ ಎಂಬಾತನ ಮೇಲೆ ಮನಬಂದಂತೆ ಥಳಿಸುವ ಮೂಲಕ ಅಮಾನೀಯವಾಗಿ ವರ್ತಿಸಿದ್ದಾರೆ. ಇದನ್ನೂ ಓದಿ: 5 ಶಾಸಕರು, 3 ಸಚಿವರಿರುವ ದಕ್ಷಿಣ ಕನ್ನಡಕ್ಕೆ ಬೊಮ್ಮಾಯಿ ಬಜೆಟ್‍ನಲ್ಲಿ ಕೊಟ್ಟಿದ್ದೇನು: ಸೊರಕೆ ಪ್ರಶ್ನೆ

    ಜಟ್ಟಪ್ಪ ರಸ್ತೆಯಲ್ಲಿ ಓಡಾಡುವವರಿಗೆ ಸಿಕ್ಕ, ಸಿಕ್ಕವರ ಮೇಲೆ ಕಲ್ಲಿನಿಂದ ಹಲ್ಲೆ ನಡೆಸುತ್ತಿದ್ದನಂತೆ. ರೋಸಿ ಹೋದ ಸ್ಥಳೀಯರು ಈ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಹಾಗಾಗಿ ಜಟ್ಟಪ್ಪನನ್ನು ವಶಕ್ಕೆ ಪಡೆಯಲು ತೆರಳಿದ್ದ ಪಿಎಸ್‍ಐ ರಾಜೇಂದ್ರ ನಾಯ್ಕ್ ಅವರಿಗೆ ಜಟ್ಟಪ್ಪ ಹಲ್ಲಿನಿಂದ ಕಚ್ಚಿ ಗಾಯಗೊಳಿಸಿದ್ದ.  ಜಟ್ಟಪ್ಪನ ಕೃತ್ಯಕ್ಕೆ ಕೋಪಗೊಂಡ ಪಿಎಸ್‍ಐ ಹಾಗೂ ಕಾನ್ಸ್‌ಟೇಬಲ್, ಬುದ್ಧಿಮಾಂದ್ಯ ಎಂಬುದನ್ನು ಮರೆತು ಹಲ್ಲೆ ನಡೆಸಿದ್ದಾರೆ.

    ಬುದ್ಧಿಮಾಂದ್ಯನ ಮೇಲೆ ಪಿಎಸ್‍ಐ ಹಾಗೂ ಕಾನ್ಸ್‌ಟೇಬಲ್ ಹಲ್ಲೆ ಮಾಡಿರುವ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಪಿಎಸ್‍ಐ ಹಾಗೂ ಕಾನ್ಸ್‌ಟೇಬಲ್ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

  • ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯ – PSI ನೇಮಕಾತಿಗೆ ತಡೆ: ಆರಗ ಜ್ಞಾನೇಂದ್ರ

    ಕಲ್ಯಾಣ ಕರ್ನಾಟಕಕ್ಕೆ ಅನ್ಯಾಯ – PSI ನೇಮಕಾತಿಗೆ ತಡೆ: ಆರಗ ಜ್ಞಾನೇಂದ್ರ

    ಕಲಬುರಗಿ: ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ಪಿ.ಎಸ್.ಐ. ನೇಮಕಾತಿಯಲ್ಲಿ ಅನ್ಯಾಯವಾಗಿದೆ ಎಂದ ಅಲ್ಲಿನ ಜನಪ್ರತಿನಿಧಗಳ ಒತ್ತಾಯದ ಮೇರೆಗೆ ಪ್ರಸ್ತುತ ನೇಮಕಾತಿಗೆ ತಡೆ ನೀಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ.

    ಶನಿವಾರ ಕಲಬುರಗಿಯ ನಾಗನಹಳ್ಳಿ ಪೊಲೀಸ್ ತರಬೇತಿ ಮಹಾವಿದ್ಯಾಲಯದ ಅತಿಥಿಗೃಹದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದರು ಅವರು, ಈ ಕುರಿತು ಅಧ್ಯಯನಕ್ಕೆ ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದೆ. ಕಲ್ಯಾಣ ಕರ್ನಾಟಕ ಭಾಗದ ಅಭ್ಯರ್ಥಿಗಳಿಗೆ ತೊಂದರೆಯಾಗದಂತೆ 371ಜೆ ವಿಶೇಷ ಸ್ಥಾನಮಾನದ ಕಾಯ್ದೆ ಮತ್ತು ಆದೇಶಗಳನ್ನು ಸಂಪೂರ್ಣವಾಗಿ ಅಧ್ಯಯನ ಮಾಡಲು ಸಮಿತಿಗೆ ನಿರ್ದೇಶನ ನೀಡಲಾಗಿದೆ. ಸದರಿ ಸಮಿತಿಯಲ್ಲಿ ಗೃಹ ಸಚಿವಾಲಯದ ಕಾರ್ಯದರ್ಶಿಗಳು, ಡಿ.ಪಿ.ಎ.ಆರ್. ಕಾರ್ಯದರ್ಶಿ ಹಾಗೂ ಡಿ.ಜಿ.ಪಿ ಅವರು ಸಹ ಇರಲಿದ್ದಾರೆ ಎಂದರು. ಇದನ್ನೂ ಓದಿ: ಶಾಲೆಯ ಸಂಧಾನ ಯಶಸ್ವಿ – ಹಿಜಬ್ ತೆಗೆಸಲು ಒಪ್ಪಿದ ಪೋಷಕರು

    ರಾಜ್ಯದ ಪೊಲೀಸ್ ಠಾಣೆಗಳಲ್ಲಿ ಸ್ವಚ್ಛತೆ ಮತ್ತು ಶೌಚಾಲಯ ನಿರ್ವಹಣೆಗೆ ಗುತ್ತಿಗೆ ಅಧಾರದ ಮೇಲೆ ಟೆಂಡರ್ ಕರೆಯಲು ನಿರ್ಧರಿಸಲಾಗಿದೆ ಎಂದು ಮಾಹಿತಿ ಹಂಚಿಕೊಂಡರು.

    ಹಿಜಬ್ ಪ್ರಕರಣ ಕುರಿತಂತೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈ ಕುರಿತು ರಾಜ್ಯದ ಉಚ್ಛ ನ್ಯಾಯಾಲಯವು ನೀಡಿರುವ ಮಧ್ಯಂತರ ಆದೇಶವನ್ನು ಪಾಲನೆ ಮಾಡಲಾಗುತ್ತಿದೆ. ಮಕ್ಕಳ ನಡುವೆ ವಿಷ ಬೀಜ ಬಿತ್ತುವ ಕೆಲಸ ಯಾರು ಮಾಡಬಾರದು. ಕೋರ್ಟ್ ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ. ಈ ಪ್ರಕರಣದಲ್ಲಿ ಬೆರಳೆಣಿಕೆ ಕಡೆ ಅನಗತ್ಯ ಗೊಂದಲ ಮೂಡಿಸಲಾಗುತ್ತಿದೆ. ಕೆಲವು ದುಷ್ಟಶಕ್ತಿಗಳು, ಸಂಘನೆಗಳು ಈ ವಿಷಯದಲ್ಲಿ ಕಾರ್ಯನಿರ್ವಹಿಸುತ್ತಿರುವುದನ್ನು ಸರ್ಕಾರವು ಸೂಕ್ಷ್ಮವಾಗಿ ಗಮನಿಸಿದೆ. ಇಂತವರ ಮೇಲೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ಶಿವಮೊಗ್ಗ, ಉಡುಪಿಯಲ್ಲಿ ಇದೇ ವಿಷಯದಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಹಿಜಬ್‍ಗೆ ಅವಕಾಶ ನೀಡಿ – ಪ್ರತಿಭಟಿಸುತ್ತಿದ್ದ 58 ವಿದ್ಯಾರ್ಥಿಗಳು ಸಸ್ಪೆಂಡ್!