ಇಸ್ಲಾಮಾಬಾದ್: ಬಾಂಗ್ಲಾದೇಶದಲ್ಲಿ ನಡೆದಂತೆ ಈಗ ಪಾಕಿಸ್ತಾನದಲ್ಲೂ (Pakistan) ಪ್ರತಿಭಟನೆ ಆರಂಭವಾಗಿದೆ. ರಾಜಧಾನಿ ಇಸ್ಲಾಮಾಬಾದ್‌ನಲ್ಲಿ (Islamabad) ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ಅವರನ್ನು ಬಿಡುಗಡೆಗೊಳಿಸುವಂತೆ ಆಗ್ರಹಿಸಿ ಜನರು ಬೀದಿಗಿಳಿದಿದ್ದಾರೆ.
ಭಾನುವಾರ ಇಮ್ರಾನ್ ಖಾನ್ ಅವರ ತೆಹ್ರೀಕ್-ಎ-ಇನ್ಸಾಫ್ (PTI) ಪಕ್ಷ ಇಸ್ಲಾಮಾಬಾದ್‌ನಲ್ಲಿ ಪ್ರತಿಭಟನಾ ಸಭೆಯನ್ನು ಆಯೋಜಿಸಿತ್ತು. ಪ್ರತಿಭಟನಾ ಸಭೆಯ ಬಳಿಕ ಇಮ್ರಾನ್ ಬೆಂಬಲಿಗರು ರಾಜಧಾನಿಯಲ್ಲಿ ಪ್ರತಿಭಟನೆ (Protest) ಆರಂಭಿಸಿದ್ದಾರೆ.
ದೇಶದ ವಿವಿಧ ಭಾಗಗಳಿಂದ ಜನರು ಇಸ್ಲಾಮಾಬಾದ್‌ನತ್ತ ಆಗಮಿಸುತ್ತಿದ್ದಾರೆ. ಖಾನ್ ಜೈಲಿನಿಂದ ಬಿಡುಗಡೆಯಾಗುವವರೆಗೂ ನಾವು ವಿಶ್ರಮಿಸುವುದಿಲ್ಲ ಬೆಂಬಲಿಗರು ಘೋಷಿಸಿದ್ದಾರೆ.
ಪ್ರತಿಭಟನಾಕಾರರಿಗೆ ಇಸ್ಲಾಮಾಬಾದ್ ಪ್ರವೇಶವನ್ನು ಬಂದ್ ಮಾಡಲಾಗಿದೆ. ಗಲಾಟೆ ನಿಯಂತ್ರಿಸಲು ಭಾರೀ ಸಂಖ್ಯೆಯ ಪೊಲೀಸರನ್ನು ನಿಯೋಜಿಸಲಾಗಿದೆ. ರಸ್ತೆಯಲ್ಲಿ ಶಿಪ್ಪಿಂಗ್ ಕಂಟೈನರ್ ಇಡುವ ಮೂಲಕ ಪ್ರತಿಭಟನಾಕಾರರ ಸಂಚಾರವನ್ನು ತಡೆಯಲಾಗುತ್ತಿದೆ. ಪ್ರತಿಭಟನಾಕಾರರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಹಲವು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.
ಇಸ್ಲಾಮಾಬಾದ್: ಜೈಲಿನಲ್ಲಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ನೇತೃತ್ವದ ಪಾಕಿಸ್ತಾನ ತಹ್ರಿಕ್ ಎ ಇನ್ಸಾಫ್ (PTI) ಪಕ್ಷ ನಿಷೇಧಿಸಲು ಪಾಕಿಸ್ತಾನದ ಶೆಹಬಾಜ್ ಷರೀಫ್ ನೇತೃತ್ವದ ಸರ್ಕಾರ ನಿರ್ಧರಿಸಿದೆ ಎಂದು ಸಚಿವರೊಬ್ಬರು ಹೇಳಿದ್ದಾರೆ.
ಈ ಸಂಬಂಧ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಪಾಕ್ ಸಚಿವ ಅತ್ತಾವುಲ್ಲಾ ತರಾತ್, ಸರ್ಕಾರ ಪಿಟಿಐ ಪಕ್ಷದ ಮೇಲೆ ನಿಷೇಧ ಹೇರಲು ನಿರ್ಧರಿಸಿದೆ. ಪಿಟಿಐ ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿದೆ. ಈ ಪ್ರಕರಣವನ್ನು ಸುಪ್ರೀಂ ಕೋರ್ಟ್‌ಗೆ (Pak Supreme Court) ವಹಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: Trump Assassination Attempt | ಮನೆಯಿಂದ ಮನೆಗೆ ಟೆರೇಸ್ ಮೇಲೆ ಜಿಗಿಯುತ್ತಾ ಬಂದಿದ್ದ ಯುವಕ
ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಅವರು 1996ರಲ್ಲಿ ಪಾಕಿಸ್ತಾನ್ ತೆಹ್ರೀಕ್ ಇ ಇನ್ಸಾಫ್ ಪಕ್ಷವನ್ನು ಸ್ಥಾಪಿಸಿದ್ದರು. ಸಾಕಷ್ಟು ರಾಜಕೀಯ ಸಂಘರ್ಷಗಳ ಬಳಿಕ 2018ರಲ್ಲಿ ಅವರ ಪಕ್ಷ ಮೊದಲ ಬಾರಿಗೆ ಅಧಿಕಾರಕ್ಕೆ ಬಂದಿತ್ತು. ಇಮ್ರಾನ್ ಖಾನ್ ಪ್ರಧಾನಿಯಾಗುವುದರಲ್ಲಿ ಯಶಸ್ವಿಯಾಗಿದ್ದರು. ಇದನ್ನೂ ಓದಿ: ಬಾಲಿವುಡ್ ನಟಿ ರಕುಲ್ ಪ್ರೀತ್ ಸಿಂಗ್ ಸಹೋದರ ಅರೆಸ್ಟ್; 2 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್!
ಇದೀಗ ಪಿಟಿಐ ಪಕ್ಷ ವಿದೇಶಿ ಮೂಲಗಳಿಂದ ಅಕ್ರಮವಾಗಿ ಹಣ ಸ್ವೀಕರಿಸಿರುವ ಬಗ್ಗೆ ಪುರಾವೆಗಳಿವೆ. ಅದೂ ಅಲ್ಲದೇ ಆ ಹಣವನ್ನು ಬಳಸಿಕೊಂಡು ದೇಶ ವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿರುವುದು ಬಯಲಾಗಿದೆ. ವಿದೇಶಿ ನಿಧಿ ಪ್ರಕರಣ, ಮೇ 9 ರ ಗಲಭೆಗಳು, ಸೈಫರ್ ಎಪಿಸೋಡ್ ಮತ್ತು ಯುಎಸ್‌ನಲ್ಲಿ ಅಂಗೀಕರಿಸಿದ ನಿರ್ಣಯದ ದೃಷ್ಟಿಯಿಂದ, ಪಿಟಿಐ ಅನ್ನು ನಿಷೇಧಿಸಲು ಸಾಕಷ್ಟು ವಿಶ್ವಾಸಾರ್ಹ ಪುರಾವೆಗಳಿವೆ. ಹೀಗಾಗಿ ಅದನ್ನು ಬ್ಯಾನ್ ಮಾಡಲಾಗುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿ
2022ರಲ್ಲಿ ವಿಶ್ವಾಸ ಮತ ಕಳೆದುಕೊಂಡ ಬಳಿಕ ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ಪತನಗೊಂಡಿತ್ತು. ನವಾಜ್ ಷರೀಫ್ ಅವರ ಸಹೋದರ ಶೆಹಬಾಜ್ ಷರೀಫ್ ನೇತತ್ವದ ಸರ್ಕಾರ ರಚನೆಯಾಗಿತ್ತು. ಅದರ ಬೆನ್ನಲ್ಲೇ ಇಮ್ರಾನ್ ಖಾನ್ ಅವರನ್ನು ಸಂಪೂರ್ಣವಾಗಿ ಹಣಿಯುವ ಪ್ರಯತ್ನಗಳು ಆರಂಭವಾಗಿದ್ದವು. ಉಡುಗೊರೆಗಳ ದುರ್ಬಳಕೆ ಸೇರಿದಂತೆ ಅನೇಕ ಹಗರಣಗಳ ಅಡಿ ಇಮ್ರಾನ್ ಖಾನ್ ವಿರುದ್ಧ ಪ್ರಕರಣಗಳು ದಾಖಲಾಗಿದ್ದವು. ಪ್ರಸ್ತುತ ಅವರು ರಾವಲ್ಪಿಂಡಿಯ ಅಡಿಯಾಲಾ ಜೈಲಿನಲ್ಲಿದ್ದಾರೆ.
ಇಸ್ಲಮಾಬಾದ್: ಪಾಕಿಸ್ತಾನದಲ್ಲಿ (Pakistan) ಗುರುವಾರ ಸಾರ್ವತ್ರಿಕ ಚುನಾವಣೆ (General Election) ನಡೆಯಲಿದೆ. ಆರ್ಥಿಕ, ರಾಜಕೀಯ ಬಿಕ್ಕಟ್ಟಿನ ನಡುವೆ ವಿಪರೀತ ಹಣದುಬ್ಬರದಿಂದ ಜನ ತತ್ತರಿಸುತ್ತಿರುವ ಹೊತ್ತಲ್ಲಿ ಪಾಕ್ ಚುನಾವಣೆಗೆ ಸಾಕ್ಷಿ ಆಗುತ್ತಿದೆ.
ರಾಷ್ಟ್ರೀಯ ಅಸೆಂಬ್ಲಿಯ 336 ಸ್ಥಾನಗಳ ಪೈಕಿ 266 ಸ್ಥಾನಗಳಿಗೆ 12.85 ಕೋಟಿ ಮತದಾರರು ಮತ ಹಾಕಲಿದ್ದಾರೆ. 5121 ಅಭ್ಯರ್ಥಿಗಳು ಅದೃಷ್ಟ ಪರೀಕ್ಷೆ ಮಾಡಿಕೊಳ್ಳುತ್ತಿದ್ದಾರೆ. ಗದ್ದುಗೆಗಾಗಿ ನವಾಜ್ ಷರೀಫರ ಪಿಎಂಎಲ್ (PML), ಬಿಲಾವಲ್ ಭುಟ್ಟೋರ ಪಿಪಿಪಿ (PPP) ಫೈಟ್ ಮಾಡುತ್ತಿವೆ. ಇದನ್ನೂ ಓದಿ: ಪಾಕ್‌ನ ಸ್ವತಂತ್ರ ಅಭ್ಯರ್ಥಿಯ ಕಚೇರಿಯ ಹೊರಗೆ ಬಾಂಬ್ ಸ್ಫೋಟ: 26 ಮಂದಿ ಸಾವು
ಇಮ್ರಾನ್ ಖಾನ್ (Imran Khan) ಜೈಲಲ್ಲಿರುವ ಕಾರಣ ಅವರ ಪಕ್ಷ ಪಿಟಿಐ (PTI) ಸೈಡ್‌ಲೈನ್ ಆಗಿದೆ. ಕತ್ತೆಗಾಡಿ, ಬದನೆಕಾಯಿ, ವಾಷ್ ಬೇಸಿನ್‌ನಂತಹ ವಿಚಿತ್ರ ಗುರುತುಗಳು ಚುನಾವಣಾ ಮತಪತ್ರದಲ್ಲಿವೆ. ಚುನಾವಣೆಯ ಮುನ್ನಾ ದಿನವಾದ ಇಂದು (ಬುಧವಾರ) ಪಾಕಿಸ್ತಾನದ ವಿವಿಧೆಡೆ ಸ್ಫೋಟಗಳು ಸಂಭವಿಸಿ, ಕನಿಷ್ಠ 26 ಮಂದಿ ಬಲಿ ಆಗಿದ್ದಾರೆ. ನೂರಾರು ಮಂದಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಆಸ್ಟ್ರೇಲಿಯಾ ಸೆನೆಟರ್ ಆಗಿ ಭಗವದ್ಗೀತೆ ಹೆಸರಿನಲ್ಲಿ ಪ್ರಮಾಣವಚನ ಸ್ವೀಕರಿಸಿದ ಭಾರತ ಮೂಲದ ವರುಣ್
ಇಸ್ಲಾಮಾಬಾದ್: ಪಾಕಿಸ್ತಾನದ ಬಲೂಚಿಸ್ತಾನ ಪ್ರದೇಶದಲ್ಲಿ ಮಂಗಳವಾರ ನಡೆದ ಬಾಂಬ್ ಸ್ಫೋಟದಲ್ಲಿ (Pakistan Bomb Blast) ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ನ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (PTI) ಪಕ್ಷದ ಮೂವರು ದುರ್ಮರಣ ಹೊಂದಿದ್ದಾರೆ.
???????????? BOMB BLAST IN IMRAN KHAN PARTY RALLY
A bomb blast in Pakistan Former PM Imran Khan election rally in Quetta…
ಇಮ್ರಾನ್ ಖಾನ್‌ಗೆ (Imran Khan) 10 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದ ಕೆಲವೇ ಗಂಟೆಗಳ ನಂತರ ಪಕ್ಷದ ಬೆಂಬಲಿತ ಅಭ್ಯರ್ಥಿ ಸದ್ದಾಂ ತರೀನ್ ಆಯೋಜಿಸಿದ್ದ ರ‍್ಯಾಲಿಯಲ್ಲಿ ಸ್ಫೋಟ ಸಂಭವಿಸಿದೆ. ಘಟನೆಯಲ್ಲಿ ಪಿಟಿಐನ ಮೂವರು ಕಾರ್ಯಕರ್ತರು ಸಾವನ್ನಪ್ಪಿದ್ದು, ಬಾಂಬ್ ಬ್ಲಾಸ್ಟ್‌ನಲ್ಲಿ 7 ಮಂದಿ ಗಾಯಗೊಂಡಿದ್ದಾರೆ ಎಂದು ಪಿಟಿಐನ ಪ್ರಾಂತೀಯ ಪ್ರಧಾನ ಕಾರ್ಯದರ್ಶಿ ಸಲಾರ್ ಖಾನ್ ಕಾಕರ್ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಡ್ರೋನ್ ದಾಳಿಗೆ ಅಮೆರಿಕದ ಮೂವರು ಸೈನಿಕರು ಬಲಿ – ತಕ್ಕ ಉತ್ತರ ಕೊಡುತ್ತೇವೆ: ಬೈಡನ್ ಎಚ್ಚರಿಕೆ
ಸದ್ಯ ಘಟನೆಯಲ್ಲಿ ಗಾಯಗೊಂಡವರನ್ನ ಆಸ್ಪತ್ರೆಗೆ ದಾಖಲಿಸಲಾಗಿದೆ. 8 ಜನರಲ್ಲಿ ಮೂವರು ಸ್ಥಿತಿ ಗಂಭೀರವಾಗಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗಬಹುದು ಎಂದು ಮೂಲಗಳು ತಿಳಿಸಿವೆ.
ಫೆಬ್ರವರಿ 8ರಂದು ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯಲಿದೆ. ಈ ಸಂಬಂಧ ಚುನಾವಣಾ ರ‍್ಯಾಲಿ ಆಯೋಜಿಸಲಾಗಿತ್ತು. ಎಂದು ಹೇಳಲಾಗಿದೆ. ಸೈಫರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇಮ್ರಾನ್ ಖಾನ್‌ಗೆ ಪಾಕಿಸ್ತಾನ ನ್ಯಾಯಾಲಯ 10 ವರ್ಷಗಳ ಕಾಲ ಜೈಲು ಶಿಕ್ಷೆ ವಿಧಿಸಿದೆ.
ಇಸ್ಲಾಮಾಬಾದ್: ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ತೋಶಖಾನ ಪ್ರಕರಣದಲ್ಲಿ 3 ವರ್ಷ ಜೈಲು ಶಿಕ್ಷೆಗೆ ಗುರಿಯಾದ ಬೆನ್ನಲ್ಲೇ ಖಾನ್ ಅವರ 200ಕ್ಕೂ ಹೆಚ್ಚು ಬೆಂಬಲಿಗರನ್ನ ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಪಂಜಾಬ್‌ನಾದ್ಯಂತ ವಿವಿಧೆಡೆ ಇಮ್ರಾನ್ ಖಾನ್ ಬೆಂಬಲಿಗರನ್ನ ಬಂಧಿಸಿರುವುದಾಗಿ ಪೊಲೀಸರು (Pakistan Punjab Police) ತಿಳಿಸಿದ್ದಾರೆ.
150ಕ್ಕೂ ಹೆಚ್ಚು ಕೇಸ್‌ಗಳಲ್ಲಿ ವಾಂಟೆಡ್ ಆಗಿರುವ ಇಮ್ರಾನ್ ಖಾನ್ ಪ್ರಧಾನಿ ಹುದ್ದೆಯಲ್ಲಿದ್ದಾಗ ತಮಗೆ ಬಂದ ಉಡುಗೊರೆಗಳನ್ನ ಅಕ್ರಮವಾಗಿ ಮಾರಾಟ ಮಾಡಿಕೊಂಡಿದ್ದಾರೆ ಎಂಬ ಆರೋಪ ಸಾಬೀತಾಗಿದೆ. ಈ ಹಿನ್ನೆಲೆಯಲ್ಲಿ ಇಸ್ಲಾಮಾಬಾದ್ ವಿಚಾರಣಾ ನ್ಯಾಯಾಲಯ ಖಾನ್‌ಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿತು. ಜೊತೆಗೆ 5 ವರ್ಷ ಸಕ್ರಿಯ ರಾಜಕಾರಣದಿಂದಲೂ ಬ್ಯಾನ್ ಮಾಡಿ ಆದೇಶಿಸಿತು. ಆ ನಂತರ ಪೂರ್ವ ಪಂಜಾಬ್ ಪ್ರಾಂತ್ಯದ ಪೊಲೀಸರು ಲಾಹೋರ್‌ನಲ್ಲಿರುವ ಇಮ್ರಾನ್ ಖಾನ್ ಮನೆಯಲ್ಲೇ ಬಂಧಿಸಿದ್ದರು. ಈ ಬೆಳವಣಿಗೆ ಕಂಡುಬಂದ ಒಂದು ದಿನದ ನಂತರ ಇಮ್ರಾನ್ ಖಾನ್ ಅವ್ರನ್ನ ಪಿಟಿಐ ಅಧ್ಯಕ್ಷ ಸ್ಥಾನದಿಂದ ವಜಾಗೊಳಿಸಲಾಯಿತು. ಇದನ್ನೂ ಓದಿ: ಪಾಕ್‌ನಲ್ಲಿ ರಾಜಕೀಯ ಕೋಲಾಹಲ – ಜೈಲುಪಾಲಾದ ಕ್ರಿಕೆಟ್ ದಂತಕಥೆಯ ಜೀವಕ್ಕೆ ಇದೆಯಾ ಆಪತ್ತು?
ಪಂಜಾಬ್ ಪೊಲೀಸರ ಪ್ರಕಾರ, ಖಾನ್ ಬಂಧನದ ನಂತರ ಪಂಜಾಬ್‌ನಾದ್ಯಂತ ಇಮ್ರಾನ್ ಖಾನ್ ಬೆಂಬಲಿಗರು ವ್ಯಾಪಕ ಪ್ರತಿಭಟನೆಗೆ ಮುಂದಾಗಿದ್ದರು. ಆದ್ದರಿಂದ ಪ್ರಾಂತ್ಯದ ವಿವಿಧ ಪ್ರದೇಶಗಳಲ್ಲಿ 200ಕ್ಕೂ ಹೆಚ್ಚು ತೆಹ್ರೀಕ್-ಇ-ಇನ್ಸಾಫ್ (PTI) ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರನ್ನ ಬಂಧಿಸಲಾಗಿದೆ. ಅವರಲ್ಲಿ 10ಕ್ಕೂ ಹೆಚ್ಚು ಬೆಂಬಲಿಗರ ವಿರುದ್ಧ ಭಯೋತ್ಪಾದನೆ ಆರೋಪದ ಮೇಲೆ ಕೇಸ್ ದಾಖಲಿಸಲಾಗಿದೆ. ಖಾನ್ ಬೆಂಬಲಿಗರ ದಾಳಿ ನಡೆಸಿದ ಪೊಲೀಸರು ಶಸ್ತ್ರಾಸ್ತ್ರಗಳನ್ನ ಕಸಿದು ಪ್ರತಿಭಟನೆಯನ್ನ ಹತ್ತಿಕ್ಕಿದ್ದಾರೆ ಎಂದು ತಿಳಿದುಬಂದಿದೆ.
1992ರ ಪಾಕಿಸ್ತಾನ ವಿಶ್ವಕಪ್ ವಿಜೇತ ತಂಡದ ನಾಯಕ ಹಾಗೂ 70 ವರ್ಷದ ಹಿರಿಯ ರಾಜಕಾರಣಿ ಇಮ್ರಾನ್ ಖಾನ್, ಕೋಟ್ಯಂತರ ರೂ. ಮೌಲ್ಯದ ಉಡುಗೊರೆಯನ್ನ ರಾಜ್ಯದ ಉಡುಗೊರೆ ಭಂಡಾರಕ್ಕೆ ಠೇವಣಿ ಇಡುವ ಬದಲು ಆಭರಣ ವ್ಯಾಪಾರಿಯೊಬ್ಬರಿಗೆ ಮಾರಾಟ ಮಾಡಿರುವ ಆರೋಪದ ಮೇಲೆ ಅವರನ್ನ ಬಂಧಿಸಲಾಗಿತ್ತು. ಇಸ್ಲಾಮಾಬಾದ್ ಹೈಕೋರ್ಟ್ನಲ್ಲಿನ ಪ್ರಕರಣವನ್ನ ಮತ್ತೊಂದು ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಪಾಕಿಸ್ತಾನ ಸುಪ್ರೀಂ ಕೋರ್ಟ್ (Pakistan Supreme Court) ಇಮ್ರಾನ್ ಖಾನ್ ಮನವಿಯನ್ನ ತಿರಸ್ಕರಿಸಿತ್ತು. ಇದನ್ನೂ ಓದಿ: ಇರಾಕ್‌ನಲ್ಲಿ ಮಾರಾಟವಾದ ಭಾರತದ ಕೆಮ್ಮಿನ ಸಿರಪ್ ಅಸುರಕ್ಷಿತ – WHO ಎಚ್ಚರಿಕೆ
ಶನಿವಾರ ಇಸ್ಲಾಮಾಬಾದ್ ವಿಚಾರಣಾ ನ್ಯಾಯಾಲಯವು (Islamabad Trial Court) ತೋಶಖಾನಾ ಪ್ರಕರಣದಲ್ಲಿ ಇಮ್ರಾನ್ ಖಾನ್ ಅವರನ್ನ ತಪ್ಪಿತಸ್ಥ ಎಂದು ಘೋಷಿಸಿದೆ. ಇಸ್ಲಾಮಾಬಾದ್ ಮೂಲದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಹೆಚ್ಚುವರಿ ನ್ಯಾಯಾಧೀಶ ಹುಮಾಯೂನ್ ದಿಲಾವರ್ ಅವರು ಖಾನ್‌ಗೆ 1 ಲಕ್ಷ ರೂ. ದಂಡವನ್ನೂ ವಿಧಿಸಿದ್ದಾರೆ. ಒಂದು ವೇಳೆ ದಂಡ ಪಾವತಿಸಲು ವಿಫಲರಾದಲ್ಲಿ ಇನ್ನೂ ಹೆಚ್ಚುವರಿ 6 ತಿಂಗಳು ಜೈಲಿನಲ್ಲಿ ಇರಿಸುವುದಾಗಿ ಹೇಳಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನದ ಮಾಜಿ ಪ್ರಧಾನಿ ಅರೆಸ್ಟ್ – ಇಮ್ರಾನ್ ಖಾನ್‌ಗೆ 3 ವರ್ಷ ಜೈಲು, 5 ವರ್ಷ ರಾಜಕೀಯದಿಂದ ಬ್ಯಾನ್
ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ ಇಮ್ರಾನ್ ಖಾನ್ ತೋಷಖಾನಾ ಕೇಸ್‌ನಲ್ಲಿ (Toshakhana Case) ತಪ್ಪಿತಸ್ಥನೆಂದು ಸಾಬೀತಾಗಿದ್ದು ನ್ಯಾಯಾಲಯ ಮೂರು ವರ್ಷ ಜೈಲು ಶಿಕ್ಷೆ ವಿಧಿಸಿದೆ. ಪಾಕಿಸ್ತಾನದ ರಾಜಕೀಯ ಪಕ್ಷವಾದ PTIನ ಅಧ್ಯಕ್ಷರೂ ಆಗಿದ್ದ ಇಮ್ರಾನ್ ಖಾನ್‌ರನ್ನ, ಲಾಹೋರ್‌ನಲ್ಲಿರುವ ಜಮಾನ್ ಪಾರ್ಕ್ ಮನೆಯಲ್ಲಿ ಬಂಧಿಸಲಾಗಿದೆ ಎಂದು ಅವರ ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (PTI) ಪಕ್ಷ ಟ್ವೀಟ್ ಮೂಲಕ ತಿಳಿಸಿದೆ.
ಲಾಹೋರ್‌ನಲ್ಲಿ ಬಂಧಿಸಿದ ಬಳಿಕ ರಾಜಧಾನಿ ಇಸ್ಲಾಮಾಬಾದ್‌ಗೆ ಕರೆತರಲಾಗಿದ್ದು, ಇಸ್ಲಾಮಾಬಾದ್ ವಿಚಾರಣಾ ನ್ಯಾಯಾಲಯವು (Islamabad Trial Court) 5 ವರ್ಷಗಳ ಕಾಲ ಸಕ್ರಿಯ ರಾಜಕಾರಣದಲ್ಲಿ ಭಾಗವಹಿಸದಂತೆ ನಿರ್ಬಂಧ ಹೇರಿದೆ. ಈ ನಡುವೆ ಪಿಟಿಐ ಪ್ರಧಾನ ಕಾರ್ಯದರ್ಶಿ ಒಮರ್ ಅಯೂಬ್ ಖಾನ್, ಇಮ್ರಾನ್ ಖಾನ್ ಬಂಧನ ವಿರೋಧಿಸಿ ಶಾಂತಿಯುತ ಪ್ರತಿಭೆನಟಗೆ ಕರೆ ನೀಡಿದ್ದಾರೆ.
1992ರ ಪಾಕಿಸ್ತಾನ ವಿಶ್ವಕಪ್ ವಿಜೇತ ತಂಡದ ನಾಯಕ ಹಾಗೂ 70 ವರ್ಷದ ಹಿರಿಯ ರಾಜಕಾರಣಿ ಇಮ್ರಾನ್ ಖಾನ್, ಕೋಟ್ಯಂತರ ರೂ. ಮೌಲ್ಯದ ಉಡುಗೊರೆಯನ್ನ ರಾಜ್ಯದ ಉಡುಗೊರೆ ಭಂಡಾರಕ್ಕೆ ಠೇವಣಿ ಇಡುವ ಬದಲು ಆಭರಣ ವ್ಯಾಪಾರಿಯೊಬ್ಬರಿಗೆ ಮಾರಾಟ ಮಾಡಿರುವ ಆರೋಪದ ಮೇಲೆ ಅವರನ್ನ ಬಂಧಿಸಲಾಗಿತ್ತು. ಇಸ್ಲಾಮಾಬಾದ್ ಹೈಕೋರ್ಟ್ನಲ್ಲಿನ ಪ್ರಕರಣವನ್ನ ಮತ್ತೊಂದು ನ್ಯಾಯಾಲಯಕ್ಕೆ ವರ್ಗಾಯಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನ ಪಾಕಿಸ್ತಾನ ಸುಪ್ರೀಂ ಕೋರ್ಟ್ ಇಮ್ರಾನ್ ಖಾನ್ ಮನವಿಯನ್ನ ತಿರಸ್ಕರಿಸಿತ್ತು. ಇದನ್ನೂ ಓದಿ: ವಿಶ್ವದ ಅತಿಸಣ್ಣ ದೇಶ ಯಾವ್ದು..? ಎಲ್ಲಿದೆ ಗೊತ್ತಾ..? – ಅಚ್ಚರಿಯಾದ್ರೂ ಇದು ನಿಜ!
ಶನಿವಾರ ಇಸ್ಲಾಮಾಬಾದ್ ವಿಚಾರಣಾ ನ್ಯಾಯಾಲಯವು ತೋಷಖಾನಾ ಪ್ರಕರಣದಲ್ಲಿ ಇಮ್ರಾನ್ ಖಾನ್ ಅವರನ್ನ ತಪ್ಪಿತಸ್ಥ ಎಂದು ಘೋಷಿಸಿದೆ. ಇಸ್ಲಾಮಾಬಾದ್ ಮೂಲದ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರ ಹೆಚ್ಚುವರಿ ನ್ಯಾಯಾಧೀಶ ಹುಮಾಯೂನ್ ದಿಲಾವರ್ ಅವರು ಖಾನ್‌ಗೆ 1 ಲಕ್ಷ ರೂ. ದಂಡವನ್ನೂ ವಿಧಿಸಿದ್ದಾರೆ. ಒಂದು ವೇಳೆ ದಂಡ ಪಾವತಿಸಲು ವಿಫಲರಾದಲ್ಲಿ ಇನ್ನೂ ಹೆಚ್ಚುವರಿ 6 ತಿಂಗಳು ಜೈಲಿನಲ್ಲಿ ಇರಿಸುವುದಾಗಿ ಹೇಳಿದ್ದಾರೆ.
140ಕ್ಕೂ ಹೆಚ್ಚು ಕೇಸ್‌ಗಳಲ್ಲಿ ವಾಂಟೆಡ್:
ಮಾಜಿ ಕ್ರಿಕೆಟಿಗನೂ ಆಗಿರುವ ಇಮ್ರಾನ್ ಖಾನ್, ಭಯೋತ್ಪಾದನೆ, ಹಿಂಸಾಚಾರ, ಧರ್ಮನಿಂದನೆ, ಭ್ರಷ್ಟಾಚಾರ ಮತ್ತು ಕೊಲೆ ಆರೋಪಗಳು ಸೇರಿದಂತೆ ದೇಶಾದ್ಯಂತ 140ಕ್ಕೂ ಹೆಚ್ಚು ಕೇಸ್‌ಗಳನ್ನ ಎದುರಿಸುತ್ತಿದ್ದಾರೆ. ಕಳೆದ ಮೇ 9ರಂದು ಭ್ರಷ್ಟಾಚಾರ ಪ್ರಕರಣದಲ್ಲಿ ಅರೆಸೇನಾ ರೇಂಜರ್‌ಗಳಿಂದ ಬಂಧಿಸಲ್ಪಟ್ಟ ನಂತರ ರಾಷ್ಟ್ರವ್ಯಾಪಿ ಪ್ರತಿಭಟನೆ ನಡೆದಿತ್ತು.
ಇಸ್ಲಾಮಾಬಾದ್: ಪಾಕಿಸ್ತಾನದ (Pakistan) ಮಾಜಿ ಪ್ರಧಾನಿ ಇಮ್ರಾನ್ ಖಾನ್ (Imran Khan) ಅವರನ್ನು ಮಂಗಳವಾರ ಪ್ಯಾರಾ ಮಿಲಿಟರಿ ಪಡೆ ಬಂಧಿಸಿದ್ದು, ಇದರಿಂದ ಸಿಡಿದೆದ್ದಿರುವ ಅವರ ಬೆಂಬಲಿಗರು ಭಾರೀ ಪ್ರತಿಭಟನೆಯಲ್ಲಿ (Protest) ತೊಡಗಿದ್ದಾರೆ.
ಮಂಗಳವಾರ ಪ್ರಕರಣವೊಂದರ ವಿಚಾರಣೆಗಾಗಿ ಇಸ್ಲಾಮಾಬಾದ್‌ನ ಹೈಕೋರ್ಟ್ ತೆರಳುತ್ತಿದ್ದ ವೇಳೆಯೇ ಇಮ್ರಾನ್‌ಖಾನ್ ಅವರನ್ನು ಬಂಧಿಸಲಾಗಿತ್ತು. ಇಮ್ರಾನ್ ಖಾನ್ ಬಂಧನವನ್ನು ವಿರೋಧಿಸಿ ಬಳಿಕ ಅವರ ಬೆಂಬಲಿಗರು ಲಾಹೋರ್‌ನಲ್ಲಿರುವ ಸೇನಾ ಕಮಾಂಡರ್‌ಗಳ ನಿವಾಸದ ಆವರಣವನ್ನು ಪ್ರವೇಶಿಸಿ ದಾಂಧಲೆ ನಡೆಸಿದ್ದಾರೆ. ಪೇಶಾವರದಲ್ಲಿ ಪಾಕಿಸ್ತಾನದ ರೇಡಿಯೋ ಕಟ್ಟಡಕ್ಕೂ ಬೆಂಕಿ ಹಚ್ಚಲಾಗಿದೆ.
ಖಾನ್ ಬಂಧನದ ಬಳಿಕ ಪಾಕಿಸ್ತಾನದಾದ್ಯಂತ ಪಾಕಿಸ್ತಾನ್ ತೆಹ್ರಿಕ್-ಇ-ಇನ್ಸಾಫ್ (PTI) ಬೆಂಬಲಿಗರಿಂದ ಪ್ರತಿಭಟನೆ ಭುಗಿಲೆದ್ದಿದೆ. ಇಸ್ಲಾಮಾಬಾದ್‌ನಾದ್ಯಂತ ಜನರು ಗುಂಪಾಗಿ ಸೇರುವುದನ್ನು ನಿಷೇಧಿಸಲಾಗಿದೆ. ಸೆಕ್ಷನ್ 144 ಜಾರಿಯಲ್ಲಿದ್ದು, ಉಲ್ಲಂಘನೆಯಾದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
ಇಸ್ಲಾಮಾಬಾದ್ ಮಾತ್ರವಲ್ಲದೇ ರಾವಲ್ಪಿಂಡಿ, ಲಾಹೋರ್, ಕರಾಚಿ, ಗುಜ್ರಾನ್‌ವಾಲಾ, ಫೈಸಲಾಬಾದ್, ಮುಲ್ತಾನ್, ಪೇಶಾವರ್ ಮತ್ತು ಮರ್ದಾನ್‌ನಲ್ಲಿಯೂ ಪ್ರತಿಭಟನೆಗಳು ಪ್ರಾರಂಭವಾಗಿರುವುದಾಗಿ ವರದಿಗಳು ತಿಳಿಸಿವೆ.
ರಾವಲ್ಪಿಂಡಿಯಲ್ಲಿ ಸೇನಾ ಪ್ರಧಾನ ಕಚೇರಿಯ ಮುಖ್ಯ ಗೇಟ್ ಅನ್ನು ಪ್ರತಿಭಟನಾಕಾರರು ಒಡೆದು ಹಾಕಿದ್ದಾರೆ. ಲಾಹೋರ್‌ನಲ್ಲಿ ಕಾರ್ಪ್ಸ್ ಕಮಾಂಡರ್ ಅವರ ನಿವಾಸಕ್ಕೆ ನುಗ್ಗಿ ಗೇಟ್ ಹಾಗೂ ಕಿಟಕಿಗಳನ್ನು ಒಡೆದಿದ್ದಾರೆ. ಹಲವೆಡೆ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಘರ್ಷಣೆ ನಡೆದಿದೆ. ಗುಂಪನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿದ್ದಾರೆ ಎಂದು ವರದಿಯಾಗಿದೆ. ಇದನ್ನೂ ಓದಿ: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಅರೆಸ್ಟ್
ಇಸ್ಲಾಮಾಬಾದ್: ಪಾಕಿಸ್ತಾನದಲ್ಲಿ ಸಾರ್ವತ್ರಿಕ ಚುನಾವಣೆಗೆ (Election) ಕೆಲವೆ ತಿಂಗಳು ಬಾಕಿ ಇರುವ ಹೊತ್ತಿನಲ್ಲೇ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ (Imran Khan) ಮತ್ತೊಂದು ಸಂಕಷ್ಟ ಬಂದೊದಗಿದೆ. ಗುಂಡೇಟಿನಿಂದ ಚೇತರಿಸಿಕೊಳ್ಳುತ್ತಿದ್ದಂತೆ ಮತ್ತೊಂದು ವಿವಾದಕ್ಕೆ ಸಿಲುಕಿದ್ದಾರೆ. ಮಹಿಳೆಯೊಬ್ಬರ ಜೊತೆ ಇಮ್ರಾನ್ ಖಾನ್ ಅಶ್ಲೀಲ ಸಂಭಾಷಣೆಯಲ್ಲಿ ತೊಡಗಿದ್ದರು ಎನ್ನುವ ಆಡಿಯೋ ತುಣುಕೊಂದು ಸೋರಿಕೆಯಾಗಿದೆ (Audio Viral).
ಪಾಕಿಸ್ತಾನದ ಪತ್ರಕರ್ತ (Pakistan Journalist) ಸಯ್ಯದ್ ಅಲಿ ಹೈದರ್, ಯೂಟ್ಯೂಬ್‌ನಲ್ಲಿ (Youtube) ಈ ಆಡಿಯೋ ತುಣುಕನ್ನು ಹಂಚಿಕೊಂಡಿದ್ದಾರೆ. ಇದು ಸಾರ್ವತ್ರಿಕ ಚುನಾವಣೆಗೆ ಕೆಲವೇ ತಿಂಗಳು ಬಾಕಿ ಇರುವಾಗ ನಡೆದಿದ್ದು, ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಈ ಆಡಿಯೋ ಪಾಕಿಸ್ತಾನ ಪ್ರಧಾನಿ ಕಚೇರಿಯಿಂದಲೇ ಸೃಷ್ಟಿಯಾಗಿದೆ ಎಂದು ಕೆಲವು ವರದಿಗಳು ಆರೋಪಿಸಿವೆ. ಇದನ್ನೂ ಓದಿ: ಇಂಗ್ಲೆಂಡ್ ರಾಜನ ಮೇಲೆ ಮೊಟ್ಟೆ ಎಸೆದ ವಿದ್ಯಾರ್ಥಿಗೆ 6 ತಿಂಗಳು ಜೈಲು ಶಿಕ್ಷೆ
ಸದ್ಯ ಇಮ್ರಾನ್ ಖಾನ್ ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ಸದ್ದು ಮಾಡ್ತಿದೆ. ಇಮ್ರಾನ್ ಖಾನ್ ಈ ವರ್ಷದ ಆರಂಭದಲ್ಲಿ ಅಧಿಕಾರ ಕಳೆದುಕೊಂಡ ನಂತರ ಈ ಮಾತುಕತೆಗಳು ನಡೆದಿವೆ ಎಂದು ಹೇಳಲಾಗಿದೆ. ಇದು ಮಾಜಿ ಕ್ರಿಕೆಟಿಗರೂ ಆಗಿರುವ ಇಮ್ರಾನ್ ಖಾನ್ ಮತ್ತು ಅವರ ಪಾಕಿಸ್ತಾನ್ ತೆಹ್ರೀಕ್- ಇ- ಇನ್ಸಾಫ್ (PTI) ಪಕ್ಷಕ್ಕೆ ತೀವ್ರ ಕಸಿವಿಸಿ ಉಂಟುಮಾಡಿದೆ. ಆದ್ರೆ ಪಿಟಿಐ ಪಕ್ಷದ ಪ್ರಮುಖರು ಇದು ನಕಲಿ ಆಡಿಯೋ ಎಂದು ಪ್ರತಿಪಾದಿಸಿದ್ದಾರೆ. ಪಕ್ಷದ ಮುಖ್ಯಸ್ಥರನ್ನು ಟಾರ್ಗೆಟ್ ಮಾಡಲು ಸರ್ಕಾರವು ನಕಲಿ ವೀಡಿಯೋ ಸೃಷ್ಟಿಸಿದೆ ಎಂದು ಆರೋಪಿಸಿದ್ದಾರೆ.
ಇಮ್ರಾನ್ ಖಾನ್ ಹಾಗೂ ಮಹಿಳೆ (Women) ಜತೆ ದೂರವಾಣಿಯಲ್ಲಿ ಆಪ್ತ ಮಾತುಕತೆ ನಡೆದಿದೆ ಎಂದು ಆಡಿಯೋ ಕ್ಲಿಪ್‌ಗಳ ಮೂಲಕ ಆರೋಪಿಸಲಾಗಿದೆ. ಇದರಲ್ಲಿ ಇಮ್ರಾನ್ ಖಾನ್, ತಾವಿಬ್ಬರೂ ಭೇಟಿಯಾಗಬೇಕು ಎಂದು ಒತ್ತಾಯಿಸಿದ್ದು, ಅಶ್ಲೀಲ ಪದಗಳನ್ನು ಬಳಸಿರುವುದು ದಾಖಲಾಗಿದೆ. ಇದನ್ನೂ ಓದಿ: ಇನ್ಮುಂದೆ ಅಫ್ಘಾನ್ ವಿದ್ಯಾರ್ಥಿನಿಯರಿಗೆ ವಿಶ್ವವಿದ್ಯಾನಿಲಯ ಶಿಕ್ಷಣಕ್ಕೂ ಅವಕಾಶವಿಲ್ಲ
ಇಮ್ರಾನ್ ಖಾನ್ ಅವರ ಧ್ವನಿಯನ್ನು ಹೋಲುವ ಆಡಿಯೋದಲ್ಲಿ ಭೇಟಿಯ ಕುರಿತಂತೆ ಚರ್ಚೆ ನಡೆದಿದೆ. ಮರುದಿನ ಭೇಟಿಯಾಗುವ ಬಗ್ಗೆ ಮಾತುಕತೆ ನಡೆಸಲಾಗಿದೆ. ಆದರೆ ತನ್ನ ಕುಟುಂಬದವರನ್ನು ಭೇಟಿ ಮಾಡಿಬೇಕಿರುವುದರಿಂದ ಅದನ್ನು ನಂತರ ಖಚಿತಪಡಿಸುವುದಾಗಿ ಧ್ವನಿ ಹೇಳಿದೆ. ನನ್ನ ಕುಟುಂಬ ಹಾಗೂ ಮಕ್ಕಳು ಬರುತ್ತಿದ್ದಾರೆ. ಅವರು ತಡವಾಗಿ ಬರುವಂತೆ ಮಾಡಲು ಪ್ರಯತ್ನಿಸುತ್ತೇನೆ. ನಿನಗೆ ನಾಳೆ ಭೇಟಿಯಾಗುವ ಬಗ್ಗೆ ತಿಳಿಸುತ್ತೇನೆ’ ಎಂಬ ಸಂಭಾಷಣೆ ನಡೆದಿದೆ.
Live Tv
[brid partner=56869869 player=32851 video=960834 autoplay=true]
ಇಸ್ಲಾಮಾಬಾದ್: ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿಯಾಗಿ ಹಮ್ಜಾ ಶಹಬಾಜ್ ಅವರ ಆಯ್ಕೆಯನ್ನು ಖಂಡಿಸಿ ಪ್ರತಿಭಟನೆ ಭುಗಿಲೆದ್ದಿದೆ. ಈ ಬೆನ್ನಲ್ಲೇ ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ (PTI) ಅಧ್ಯಕ್ಷ ಮತ್ತು ಮಾಜಿ ಪ್ರಧಾನಿ ಇಮ್ರಾನ್ ಖಾನ್ ಸಹ ಶಾಂತಿಯುತ ಪ್ರತಿಭಟನೆಗೆ ಕರೆ ನೀಡಿದ್ದಾರೆ.
ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ಮುಖ್ಯಮಂತ್ರಿ ಹುದ್ದೆಗೆ ನಡೆದ ಚುನಾವಣೆಯಲ್ಲಿ ಪರ್ವೇಜ್ ಇಲಾಹಿ ವಿರುದ್ಧ ಪಾಕಿಸ್ತಾನ್ ಮುಸ್ಲಿಂ ಲೀಗ್-ನವಾಜ್ (PML-N) ನಾಯಕ ಹಮ್ಜಾ ಶಹಬಾಜ್ ಅವರು ಪಂಜಾಬ್‌ನ ಮುಖ್ಯಮಂತ್ರಿಯಾಗಿ ಮರು ಆಯ್ಕೆಯಾಗಿದ್ದಾರೆ. ಪಾಕಿಸ್ತಾನ ಮುಸ್ಲಿಂ ಲೀಗ್-ಕ್ವಾಡ್ (PML-Q) ಮತಗಳನ್ನು ಪಂಜಾಬ್ ವಿಧಾನಸಭೆ ಉಪ ಸಭಾಪತಿ ತಿರಸ್ಕರಿಸಿದ ಬಳಿಕ ಅವರು ಜಯ ಸಾಧಿಸಿದ್ದಾರೆ. ಇದನ್ನೂ ಓದಿ: 75 ವರ್ಷಗಳ ಬಳಿಕ ಪಾಕಿಸ್ತಾನದಲ್ಲಿರುವ ಮನೆಗೆ ಹೋಗಿ 90ರ ಅಜ್ಜಿ ಭಾವುಕ
ಪಿಟಿಐ ಮತ್ತು ಪಿಎಂಎಲ್-ಕ್ಯೂ ಜಂಟಿ ಅಭ್ಯರ್ಥಿ ಪರ್ವೈಜ್ ಇಲಾಹಿ 186 ಮತಗಳನ್ನು ಪಡೆದರೆ, ಹಮ್ಜಾ ಶಹಬಾಜ್ 179 ಮತಗಳನ್ನು ಪಡೆದಿದ್ದರು. ಆದರೆ ಪಿಎಂಎಲ್-ಕ್ಯೂನ 10 ಮತಗಳನ್ನು ಡೆಪ್ಯುಟಿ ಸ್ಪೀಕರ್ ದೋಸ್ತ್ ಮುಹಮ್ಮದ್ ಮಜಾರಿ ಅವರು ತಿರಸ್ಕರಿಸಿದ್ದರಿಂದಾಗಿ ಪರ್ವೈಜ್ ಇಲಾಹಿ ಅವರು 176 ಮತಗಳನ್ನು ತೆಗೆದುಕೊಂಡರು. ಇದರಿಂದಾಗಿ ಇಲಾಹಿಗೆ ಸೋಲುಂಟಾಯಿತು.
ಸಿಎಂ ಆಯ್ಕೆ ಕುರಿತು ವಾಗ್ದಾಳಿ ನಡೆಸಿರುವ ಮಾಜಿ ಪ್ರಧಾನಿ ಇಮ್ರಾನ್ ಖಾನ್, ಪಂಜಾಬ್ ಮುಖ್ಯಮಂತ್ರಿ ಚುನಾವಣೆಯ ಬೆಳವಣಿಗೆಯನ್ನು ಕುದುರೆ ವ್ಯಾಪಾರಕ್ಕೆ ಹೋಲಿಸಿ ಪಾಕಿಸ್ತಾನ್ ಪೀಪಲ್ಸ್ ಪಾರ್ಟಿ (PPP) ನಾಯಕ ಆಸಿಫ್ ಜರ್ದಾರಿ ವಿರುದ್ಧ ಕಿಡಿಕಾರಿದ್ದಾರೆ. ದೇಶದ ದೊಡ್ಡ ಡಕಾಯಿತ ಆಸಿಫ್ ಜರ್ದಾರಿ 30 ವರ್ಷಗಳಿಂದ ದೇಶವನ್ನು ದರೋಡೆ ಮಾಡುತ್ತಿದ್ದಾನೆ ದೂರಿದ್ದಾರೆ.
ಬೇರೆ ಯಾವುದೇ ಸಮಾಜದಲ್ಲಿ ಶಾಸಕರ ಕುದುರೆ ವ್ಯಾಪಾರ ನಡೆದರೆ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ. ಹಾಗಾಗಿ ಇಂದು ರಾತ್ರಿ ಪಂಜಾಬ್ ಅಸೆಂಬ್ಲಿ ಬೆಳವಣಿಗೆಗಳ ವಿರುದ್ಧ ಶಾಂತಿಯುತ ಪ್ರತಿಭಟನೆ ದಾಖಲಿಸಲು ನಾನು ರಾಷ್ಟ್ರಕ್ಕೆ ಮನವಿ ಮಾಡುತ್ತೇನೆ ಎಂದು ಕರೆ ನೀಡಿದ್ದಾರೆ.
Live Tv
[brid partner=56869869 player=32851 video=960834 autoplay=true]
ಇಸ್ಲಾಮಾಬಾದ್: ಏನು ಬೇಕಾದರೂ ಆಗಲಿ, ನಾನು ರಾಜೀನಾಮೆ ನೀಡುವುದಿಲ್ಲ ಎಂದು ಪಾಕಿಸ್ತಾನ ಪ್ರಧಾನಿ ಇಮ್ರಾನ್ ಖಾನ್ ಪಟ್ಟು ಹಿಡಿದಿದ್ದಾರೆ.
ಪಾಕ್ ಪ್ರಧಾನಿ ಇಮ್ರಾನ್‌ಖಾನ್ ತಕ್ಷಣ ರಾಜೀನಾಮೆ ಕೊಡಬೇಕು ಎಂದು ಪ್ರತಿಪಕ್ಷಗಳು ಆಗ್ರಹಿಸುತ್ತಿವೆ. ಆದರೆ, ಏನು ಬೇಕಾದರೂ ಆಗಲಿ, ನಾನು ರಾಜೀನಾಮೆ ಕೊಡುವುದಿಲ್ಲ. ಹೋರಾಟವಿಲ್ಲದೆ ನಾನು ಎಂದಿಗೂ ಶರಣಾಗುವುದಿಲ್ಲ. ಕೆಲ ದ್ರೋಹಿಗಳ ಒತ್ತಡವನ್ನು ಸುಮ್ಮನೆ ಏಕೆ ಸಹಿಸಿಕೊಳ್ಳಬೇಕು ಎಂದು ಅವರು ಪ್ರಶ್ನಿಸಿದ್ದಾರೆ.
ಅವಿಶ್ವಾಸ ಮುಂದೂಡಿಕೆ:
ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ಖಾನ್ ವಿರುದ್ಧ ನಿಗದಿಪಡಿಸಿದ್ದ ಅವಿಶ್ವಾಸ ಗೊತ್ತುವಳಿ ಅಧಿವೇಶನವು ಪಾಕಿಸ್ತಾನ್ ತೆಹ್ರೀಕ್-ಎ-ಇನ್ಸಾಫ್ ಸಂಸದ ಖಯಾಲ್ ಜಮಾನ್ ಅವರ ನಿಧನದಿಂದಾಗಿ ಮಾರ್ಚ್ 28ಕ್ಕೆ ಮುಂದೂಡಲಾಗಿದೆ ಎಂದು ರಾಷ್ಟ್ರೀಯ ಅಸೆಂಬ್ಲಿ ಸ್ಪೀಕರ್ ಅಸಾದ್ ಕೈಸರ್ ತಿಳಿಸಿದ್ದಾರೆ. ಸಂಸತ್ತಿನ ಸಂಪ್ರದಾಯದ ಪ್ರಕಾರ ಮೊದಲ ಅಧಿವೇಶನವು ಅವರಿಗೆ ಗೌರವ ಸಲ್ಲಿಸಲು ಸೀಮಿತವಾಗಿದೆ. ಇದನ್ನೂ ಓದಿ: ಹಿಜಬ್ ನಿಷೇಧಿಸಿ ಕರ್ನಾಟಕ ಹೈಕೋರ್ಟ್ ಇಸ್ಲಾಂ ಬಗ್ಗೆ ಭೀತಿ ಹುಟ್ಟುವಂತೆ ಮಾಡಿದೆ: ಇಮ್ರಾನ್ ಖಾನ್
ಇಮ್ರಾನ್ ಖಾನ್ ಅವರು ಪಾಕಿಸ್ತಾನ್ ತೆಹ್ರೀಕ್-ಇ-ಇನ್ಸಾಫ್ (ಪಿಟಿಐ) ಸರ್ಕಾರವು ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಿದೆ. ಪಾಕಿಸ್ತಾನವು ಅಳಿವಿನ ಅಂಚಿನತ್ತ ಸಾಗುತ್ತಿದೆ ಮತ್ತು ಹಣದುಬ್ಬರ ಸಮಸ್ಯೆ ಎದುರಿಸಲಾಗುತ್ತಿದೆ ಎಂದು ಆರೋಪಿಸಿ ಮಾರ್ಚ್ 8 ರಂದು ವಿರೋಧ ಪಕ್ಷಗಳು ರಾಷ್ಟ್ರೀಯ ಅಸೆಂಬ್ಲಿ ಸಚಿವಾಲಯದ ಮುಂದೆ ದೂರು ನೀಡಲಾಗಿತ್ತು. ಇದರಿಂದಾಗಿ ಮಾರ್ಚ್ 25ರಂದು ಇಮ್ರಾನ್ ಖಾನ್ ಅವರನ್ನು ಪದಚ್ಯುತಿಗೊಳಿಸಲು ಅವಿಶ್ವಾಸ ಗೊತ್ತುವಳಿ ಮಂಡಿಸಲು ದಿನಾಂಕ ನಿಗದಿಪಡಿಸಲಾಗಿತ್ತು. ಆದರೆ ಇಂದು ಖಯಾಲ್ ಜಮಾನ್ ಅವರ ನಿಧನದ ಕಾರಣದಿಂದಾಗಿ ಸಭೆಯನ್ನು ಮಾರ್ಚ್ 28ಕ್ಕೆ ಮುಂದೂಡಲಾಗಿದೆ. ಅಂದು ಸಂಜೆ 4 ಗಂಟೆಗೆ ಅಧಿವೇಶನ ನಡೆಯುವ ಸಾಧ್ಯತೆಯಿದೆ.
ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ 2018ರಲ್ಲಿ ಅಧಿಕಾರಕ್ಕೆ ಬಂದ ನಂತರ ಇದೇ ಮೊದಲ ಭಾರಿಗೆ ರಾಜಕೀಯ ಬಿಕ್ಕಟ್ಟು ಎದುರಿಸುತ್ತಿದ್ದಾರೆ. ಸ್ವಪಕ್ಷದೊಂದಿಗೆ ಪ್ರತಿಪಕ್ಷದ ನಾಯಕರೂ ಭಿನ್ನಮತ ಮರೆತು ಒಂದಾಗಿವೆ. ಕೆಲ ವೇಳೆ ಅವಿಶ್ವಾಸ ನಿರ್ಣಯ ಸಭೆಯಲ್ಲಿ ತೆಹ್ರೀಕ್-ಎ-ಇನ್ ಸಾಫ್ ನೇತೃತ್ವದ ಸರ್ಕಾರವು ಬಹುಮತ ಕಳೆದುಕೊಂಡಿದೆ ಎಂದು ಪ್ರತಿಪಕ್ಷಗಳು ದೂರಿವೆ.
ಪಾಕಿಸ್ತಾನದ ಸಂಸತ್ತು ಗುರುವಾರ ರಾತ್ರಿಯೇ 15 ಅಂಶಗಳ ಅಜೆಂಡಾ ಬಿಡುಗಡೆ ಮಾಡಿದೆ. ಇದರಲ್ಲಿ ಅವಿಶ್ವಾಸ ನಿರ್ಣಯ ಗೊತ್ತುವಳಿಯೂ ಸೇರಿದೆ. ಆರ್ಥಿಕತೆಯನ್ನೂ ಇಮ್ರಾನ್ ಖಾನ್ ಸಮರ್ಪಕವಾಗಿ ನಿರ್ವಹಿಸಿಲ್ಲ. ಹಣದುಬ್ಬರ ಪ್ರಮಾಣ ಎರಡಂಕಿಗೆ ಹೆಚ್ಚಾಗಿರುವ ಕಾರಣ ದಿನಬಳಕೆ ವಸ್ತುಗಳ ಬೆಲೆ ಹೆಚ್ಚಾಗಿದೆ. ಜನಸಾಮಾನ್ಯರಲ್ಲಿ ಸರ್ಕಾರದ ಬಗ್ಗೆ ಅಸಮಾಧಾನ ಮನೆಮಾಡಿದ್ದು, ರಾಜಕೀಯ ಭವಿಷ್ಯಕ್ಕೆ ಆತಂಕ ತಂದೊಡ್ಡಿದೆ. ವಿರೋಧ ಪಕ್ಷಗಳ ನಾಯಕರ ವಿರುದ್ಧ ಆಡಳಿತಾರೂಢ ಇಮ್ರಾನ್ ಖಾನ್ ನೇತೃತ್ವದ ಸರ್ಕಾರ ನಡೆದುಕೊಂಡ ರೀತಿಯ ಬಗ್ಗೆ ಜನರಲ್ಲಿ ಕೆಟ್ಟ ಅಭಿಪ್ರಾಯ ಮೂಡಿದೆ. ವಿರೋಧ ಪಕ್ಷಗಳು ಒಗ್ಗೂಡಲು ಸಹ ಇದು ಮುಖ್ಯಕಾರಣವಾಗಿದೆ ಎಂಬ ಅಂಶವನ್ನು ಇದರಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಇಮ್ರಾನ್ ಖಾನ್ ನೂರಕ್ಕೆ ನೂರರಷ್ಟು ತೊಂದರೆಯಲ್ಲಿದ್ದಾರೆ: ಮಿತ್ರ ಪಕ್ಷ ಹೇಳಿಕೆ
ಪಾಕಿಸ್ತಾನದ ಸಂಸತ್ತು 342 ಸದಸ್ಯಬಲ ಹೊಂದಿದೆ. ಅಧಿಕಾರಕ್ಕೆ ಬರಲು 172 ಸದಸ್ಯ ಬಲ ಅಗತ್ಯವಿದೆ. ಇಮ್ರಾನ್ ಖಾನ್‌ರ ಪಿಟಿಐ ನೇತೃತ್ವದ ಮೈತ್ರಿಕೂಟವು 179 ಸದಸ್ಯಬಲ ಹೊಂದಿದೆ. ಪಿಟಿಐ ಪಕ್ಷದ 155 ಸಂಸದರು ಸಂಸತ್ತಿನಲ್ಲಿದ್ದಾರೆ. ಅವಿಶ್ವಾಸ ಗೊತ್ತುವಳಿಯಲ್ಲಿ ಪಾಲ್ಗೊಳ್ಳುವುದಾಗಿ 3 ಪ್ರಮುಖ ಮಿತ್ರಪಕ್ಷಗಳು ಹೇಳಿಕೆ ನೀಡಿವೆ. ಪಾಕಿಸ್ತಾನದ ಸಂಸತ್ತಿನಲ್ಲಿ ವಿರೋಧ ಪಕ್ಷಗಳು 163 ಸ್ಥಾನಗಳನ್ನು ಹೊಂದಿವೆ. ಪಿಟಿಐ ಪಕ್ಷ ತೊರೆದಿರುವ ಸಂಸದರು ವಿರೋಧ ಪಕ್ಷಗಳೊಂದಿಗೆ ಕೈಜೋಡಿಸಿದರೆ ಇಮ್ರಾನ್ ಖಾನ್ ಸರ್ಕಾರ ಸುಲಭವಾಗಿ ಪತನವಾಗಲಿದೆ. ಇದನ್ನೂ ಓದಿ: 24 ಗಂಟೆಯೊಳಗೆ ಪ್ರಧಾನಿ ಸ್ಥಾನಕ್ಕೆ ರಾಜೀನಾಮೆ ನೀಡಿ: ಇಮ್ರಾನ್ ಖಾನ್‌ಗೆ ಗಡುವು
ಈ ಹಿಂದೆಯೂ ಕಾಶ್ಮೀರದಲ್ಲಿ 370ನೇ ವಿಧಿ ರದ್ದುಗೊಳಿಸಿ, ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಿದ್ದನ್ನು ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ವಿರೋಧಿಸಿದ್ದರು. ಇದೀಗ ಮತ್ತೆ ಕಾಶ್ಮೀರದ ವಿಚಾರವನ್ನು ಪಾಕಿಸ್ತಾನದಲ್ಲಿ ಪ್ರಸ್ತಾಪಿಸುತ್ತಿದ್ದಾರೆ. ಪಾಕಿಸ್ತಾನದ ಆಡಳಿತಗಾರರು ಒತ್ತಡದಲ್ಲಿದ್ದಾಗಲೆಲ್ಲಾ ಭಾರತವನ್ನು ದೂರುವ ಮೂಲಕ ತಮ್ಮ ಆಡಳಿತ ಭದ್ರಪಡಿಸಿಕೊಳ್ಳಲು ಯತ್ನಿಸುವುದು ವಾಡಿಕೆಯೇ ಆಗಿದೆ ಎಂದು ಅಂಶದಲ್ಲಿ ಉಲ್ಲೇಖಿಸಲಾಗಿದೆ.
ಪಾಕಿಸ್ತಾನದ ಯಾವುದೇ ಪ್ರಧಾನಿ ಐದು ವರ್ಷಗಳ ಅಧಿಕಾರ ಅವಧಿಯನ್ನು ಪೂರ್ಣಗೊಳಿಸಿಲ್ಲ. ಪಾಕಿಸ್ತಾನದಲ್ಲಿ ಮುಂದಿನ ಮಹಾಚುನಾವಣೆಯು 2023ರಂದು ನಡೆಯಬೇಕಿತ್ತು. ಆದರೆ ಅವಧಿಗೆ ಮೊದಲೇ ಚುನಾವಣೆ ನಡೆಯಬಹುದು ಎಂದು ಗೃಹ ಸಚಿವ ಶೇಖ್ ರಶೀದ್ ಅಹ್ಮದ್ ಹೇಳಿದ್ದಾರೆ.