Tag: pubic tv

  • ಕಾಫಿ ವ್ಯಾಪಾರದಲ್ಲಿ ನಷ್ಟ – ಚಿಕ್ಕಮಗಳೂರು ಮೂಲದ ಉದ್ಯಮಿ ಆತ್ಮಹತ್ಯೆ

    ಕಾಫಿ ವ್ಯಾಪಾರದಲ್ಲಿ ನಷ್ಟ – ಚಿಕ್ಕಮಗಳೂರು ಮೂಲದ ಉದ್ಯಮಿ ಆತ್ಮಹತ್ಯೆ

    ಬೆಂಗಳೂರು: ವ್ಯಾಪಾರದಲ್ಲಿ ನಷ್ಟವಾದ ಪರಿಣಾಮ ಉದ್ಯಮಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ನಡೆದಿದೆ.

    ಶಾಕೀರ್ ಅಹ್ಮದ್ ಆತ್ಮಹತ್ಯೆಗೆ ಶರಣಾದ ಉದ್ಯಮಿ. ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ನಿವಾಸಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಖಾಸಗಿ ಲಾಡ್ಜ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 1 ಕೋಟಿಗೂ ಹೆಚ್ಚು ನಷ್ಟ ಅನುಭವಿಸಿದ್ದ ಶಾಕೀರ್ ಅಹ್ಮದ್ ಜುಲೈ 13 ರಿಂದ ನಾಪತ್ತೆಯಾಗಿದ್ದಾರೆಂದು ಮೂಡಿಗೆರೆ ಠಾಣೆಯಲ್ಲಿ ದೂರು ದಾಖಲಾಗಿತ್ತು.

    ನೆಲಮಂಗಲ ನಗರದ ಕುಣಿಗಲ್ ಬೈಪಾಸ್ ಬಳಿಯ ವಜ್ರೇಶ್ವರಿ ಲಾಡ್ಜ್ ನಲ್ಲಿ ತಂಗಿದ್ದ ಶಾಕೀರ್, ಮಧ್ಯಾಹ್ನ ಊಟಕ್ಕೆ ಹೊರ ಬರದಿದ್ದಾಗ ಸಿಬ್ಬಂದಿ ಅನುಮಾನಗೊಂಡು ಪರಿಶೀಲಿಸಿದ್ದರು. ನೇಣುಬಿಗಿದ ಸ್ಥಿತಿಯಲ್ಲಿ ಶಾಕೀರ್ ಅಹ್ಮದ್ ಮೃತದೇಹ ಪತ್ತೆಯಾಗಿದ್ದು, ನೆಲಮಂಗಲ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಇನ್ನೂ ಕೆಲವು ಅನುಮಾನಗಳು ಇದು ಪೊಲೀಸರು ವಿಚಾರಣೆ ನಡೆಸಲು ಮುಂದಾಗಿದ್ದಾರೆ. ಇದನ್ನೂ ಓದಿ: ಕೊಳೆತ ಸ್ಥಿತಿಯಲ್ಲಿ ಸಹೋದರಿಯರಿಬ್ಬರ ಶವ ಪತ್ತೆ

     

  • ಬೆಂಗಳೂರಲ್ಲಿ ವಿವಾಹಿತೆಗೆ ಬಲವಂತವಾಗಿ ವಿಷ ಕುಡಿಸಿ ಹತ್ಯೆಗೆ ಯತ್ನ!

    ಬೆಂಗಳೂರಲ್ಲಿ ವಿವಾಹಿತೆಗೆ ಬಲವಂತವಾಗಿ ವಿಷ ಕುಡಿಸಿ ಹತ್ಯೆಗೆ ಯತ್ನ!

    – ಪೊಲೀಸರ ಮೇಲೆ ಗಂಭೀರ ಆರೋಪ

    ಬೆಂಗಳೂರು: ಸಿಲಿಕಾನ್ ಸಿಟಿಯ ಜ್ಞಾನಭಾರತಿ ಪೊಲೀಸ್ ಠಾಣಾ ವ್ಯಾಪ್ತಿಯ ಮರಿಯಮ್ಮನ ಪಾಳ್ಯದಲ್ಲಿ ವಿವಾಹಿತೆಗೆ ಬಲವಂತವಾಗಿ ವಿಷ ಕುಡಿಸಿ ಹತ್ಯೆ ಮಾಡಲು ಯತ್ನಿಸಿದ ಆರೋಪವೊಂದು ಕೇಳಿ ಬಂದಿದೆ.

    ಪಾವನ ಸಂತ್ರಸ್ತೆ. ಈಕೆಯನ್ನು ಪತಿ ಪ್ರದೀಪ್, ತಂದೆ- ತಾಯಿ ಹಾಗೂ ನಾದಿನಿ ಕೊಲೆ ಮಾಡಲು ಯತ್ನಿಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಅಸಿಸ್ಟೆಂಟ್ ಪ್ರೊಫೆಸರ್ ಆಗಿರುವ ಪಾವನಗೆ ಕಿರುಕುಳ ನೀಡಿದ್ದಾರೆ. ಗಂಡನ ಮನೆಯವರು ಹಲ್ಲೆ ಮಾಡಿ ವಿಷ ಕುಡಿಸಿದ್ದಾರೆ ಅಂತ ಪಾವನ ಕುಟುಂಬಸ್ಥರು ದೂರಿನಲ್ಲಿ ತಿಳಿಸಿದ್ದಾರೆ.

    ಕಳೆದ ಆರು ತಿಂಗಳ ಹಿಂದೆ ಪಾವನ ಹಾಗೂ ಪ್ರದೀಪ್ ಎಂಬವರ ವಿವಾಹವಾಗಿತ್ತು. ಪಾವನ ಬೆಂಗಳೂರಿನ ಕೆಂಪೇಗೌಡ ಕಾಲೇಜಿನಲ್ಲಿ ನರ್ಸಿಂಗ್ ಪ್ರೊಫೆಸರ್ ಆಗಿ ಕಾರ್ಯನಿರ್ವಹಿಸುತ್ತಿದ್ದರೆ, ಪತಿ ಪ್ರದೀಪ್ ಫ್ಯಾಮಿಲಿ ಕೋರ್ಟ್ ನಲ್ಲಿ ಶಿರಸ್ತೆದಾರ್ ಆಗಿದ್ದಾನೆ. ಈ ಹಿಂದೆ ಹಲವು ಬಾರಿ ಗಂಡ-ಹೆಂಡತಿ ಮಧ್ಯೆ ಜಗಳವಾಗಿತ್ತು. ಹೀಗಾಗಿ ಪಾವನ ತವರು ಮನೆ ಸೇರಿದ್ದರು. ಆದರೆ 15 ದಿನಗಳ ಒಳಗಾಗಿ ಮನೆಗೆ ವಾಪಸ್ ಬರಬೇಕು ಅಂತ ಪತ್ನಿಗೆ ಪ್ರದೀಪ್ ನೋಟಿಸ್ ಕಳಿಸಿದ್ದ. ನಿನ್ನೆ ಪತ್ನಿಗೆ ಕರೆ ಮಾಡಿ ಮನೆಗೆ ಬರುವಂತೆ ತಿಳಿಸಿದ್ದಾರೆ. ಪತಿಯ ಕರೆಯಂತೆ ನಿನ್ನೆ ಸಂಜೆ ಮರಿಯಮ್ಮನಪಾಳ್ಯದ ಪತಿ ಮನೆಗೆ ಪಾವನ ತೆರಳಿದ್ದರು. ಈ ವೇಳೆ ಪಾವನರಿಗೆ ಹಲ್ಲೆ ಮಾಡಿ ಬಲವಂತವಾಗಿ ವಿಷ ಕುಡಿಸಿದ್ದಾರೆ ಅಂತ ಪಾವನ ಕುಟುಂಬಸ್ಥರು ಆರೋಪ ಮಾಡಿದ್ದಾರೆ.

    ಸದ್ಯ ಪಾವನರ ಸ್ಥಿತಿ ಗಂಭೀರವಾಗಿದ್ದು, ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆ ಸಂಬಂಧ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆದರೆ ಹಣ ಪಡೆದು ಪ್ರದೀಪ್ ನನ್ನು ಪೊಲೀಸರು ಬಿಟ್ಟು ಕಳಿಸಿರುವ ಆರೋಪ ಕೂಡ ಕೇಳಿ ಬಂದಿದೆ. ಸದ್ಯ ಆರೋಪಿ ಪ್ರದೀಪ್ ತಲೆಮರೆಸಿಕೊಂಡಿದ್ದಾನೆ.

  • ಸ್ನಾನಕ್ಕೆಂದು ನೀರಿಗಿಳಿದ ನಟ ಶವವಾಗಿ ಪತ್ತೆ!

    ಸ್ನಾನಕ್ಕೆಂದು ನೀರಿಗಿಳಿದ ನಟ ಶವವಾಗಿ ಪತ್ತೆ!

    ತಿರುವನಂತಪುರಂ: ಖ್ಯಾತ ನಟ ಮಾಲಂಕಾರ ಡ್ಯಾಮ್ ನಲ್ಲಿ ಸ್ನಾನಕ್ಕೆ ಎಂದು ಹೋದವರು ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. ಅನಿಲ್ ನೆಡುಮಂಗಾಡ್ (48) ಮೃತಪಟ್ಟ ಮಲಯಾಳಂ ನಟ. ಇವರು ಸ್ನಾನಕ್ಕೆ ಎಂದು ಡ್ಯಾಮ್‍ಗೆ ಇಳಿದು ಸಾವನ್ನಪ್ಪಿದ್ದಾರೆ.

    ಪ್ರಾಥಮಿಕ ವಿಚಾರಣೆಯ ಪ್ರಕಾರ, ಸಂಜೆ ಸುಮಾರಿಗೆ ನಟ ಅನಿಲ್ ನೆಡುಮಂಗಾಡ್ ಅವರ ಸ್ನೇಹಿತರೊಂದಿಗೆ ಶೂಟಿಂಗ್ ವಿರಾಮದ ಸಮಯದಲ್ಲಿ ಸ್ನಾನ ಮಾಡಲು ಡ್ಯಾಮ್‍ಗೆ ಹೋಗಿದ್ದಾರೆ. ಆಗ ಅಲ್ಲಿ ಅವರು ಆಳವಾದ ನೀರಿಗೆ ಇಳಿದಾಗ ನೀರಿನ ಸೆಳೆತ ಅವರನ್ನು ಎಳೆದೊಯ್ದಿದೆ. ತಕ್ಷಣ ಅನಿಲ್ ಅವರನ್ನು ನೀರಿನಿಂದ ರಕ್ಷಿಸಿ ಹತ್ತಿರದ ಖಾಸಗಿ ಆಸ್ಪತ್ರೆಗೆ ಸಾಗಿಸಿದರೂ ಪ್ರಯೋಜನವಾಗಿಲ್ಲ. ನಟನ ಶವವನ್ನು ತೋಡುಪುಳ ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಎಂದು ಇಡುಕಿ ವಿಶೇಷ ಶಾಖೆಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

    ಅನಿಲ್ ಟಿವಿ ನಿರೂಪಕರಾಗಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು ಮತ್ತು ಕಮ್ಮಟ್ಟಿ ಪಾಡಮ್, ಎನ್ಜನ್ ಸ್ಟೀವ್ ಲೋಪೆಜ್ ಮತ್ತು ಪೊರಿಂಜು ಮರಿಯಮ್ ಜೋಸ್ ಚಿತ್ರಗಳಲ್ಲಿ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದರು. ಇತ್ತೀಚೆಗೆ ತೆರೆಕಂಡ ಅಯ್ಯಪ್ಪನುಂಕೊಶಿಯಮ್ ಚಿತ್ರದಲ್ಲಿ ಪೊಲೀಸ್ ಅಧಿಕಾರಿಯಾಗಿ ಅಭಿನಯಿಸಿದ್ದ ಅನಿಲ್, ಅಪಾರ ಜನಪ್ರಿಯತೆ ಗಳಿಸಿ ಮಲಯಾಳಂ ಚಿತ್ರರಂಗದಲ್ಲಿ ಒಳ್ಳೆಯ ಹೆಸರನ್ನು ಮಾಡಿಕೊಂಡಿದ್ದರು.

    ಘಟನೆ ಕುರಿತು ಪೊಲೀಸರು ತನಿಖೆ ಆರಂಭಿಸಿದ್ದಾರೆ. ಚಿತ್ರದ ಚಿತ್ರೀಕರಣಕ್ಕೆ ಸಂಬಂಧಿಸಿದಂತೆ ಅವರು ತೊಡುಪುಳದಲ್ಲಿದ್ದರೆಂದು ಮಾಹಿತಿ ತಿಳಿಸಿದೆ.

  • ಅತ್ತೆ, ಮಾವ, ಪತ್ನಿ, ಪ್ರಿಯಕರನೇ ಕಾರಣ – ಸೆಲ್ಫಿ ವೀಡಿಯೋ ಮಾಡಿ ವಿವಾಹಿತ ಆತ್ಮಹತ್ಯೆ

    ಅತ್ತೆ, ಮಾವ, ಪತ್ನಿ, ಪ್ರಿಯಕರನೇ ಕಾರಣ – ಸೆಲ್ಫಿ ವೀಡಿಯೋ ಮಾಡಿ ವಿವಾಹಿತ ಆತ್ಮಹತ್ಯೆ

    ತುಮಕೂರು: ಪತ್ನಿ ಅತ್ತೆ ಹಾಗೂ ಮಾವನ ಕಿರುಕುಳದಿಂದ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ತುರುವೇಕೆರೆ ತಾಲೂಕು ರಂಗನಹಳ್ಳಿ ಬೋವಿ ಕಾಲೋನಿಯಲ್ಲಿ ನಡೆದಿದೆ.

    ಲೋಕೇಶ್ (30) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ ಸೆಲ್ಫಿ ವೀಡಿಯೋ ಮಾಡಿ ಕೀಟನಾಶಕ ಸೇವಿಸಿ ಆತ್ಮಹತೆಗೆ ಶರಣಾಗಿದ್ದಾನೆ. ಈ ಘಟನೆ ನವೆಂಬರ್ 15 ರಂದು ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

    ವೀಡಿಯೋದಲ್ಲಿ ಲೋಕೇಶ್ ಹೇಳಿದ್ದೇನು..?
    ನನ್ನ ಸಾವಿಗೆ ಹೆಂಡತಿ ಹೇಮಾ, ಅತ್ತೆ ಧನಲಕ್ಷಿ, ಮಾವ ರಾಜು ಹಾಗೂ ಹೆಂಡತಿಯ ಪ್ರಿಯಕರ ಚೇತನ್ ಕಾರಣ. ಪ್ರತಿ ನಿತ್ಯ ಬ್ಲಾಕ್ ಮೇಲ್, ಕೊಲೆ ಬೆದರಿಕೆ ಹಾಕುತ್ತಿದ್ದಾರೆ. ನಾವು ಹೇಗೆ ಬದುಕಲಿ ಎಂದು ಲೋಕೇಶ್ ಅಳಲು ತೋಡಿಕೊಂಡಿದ್ದಾನೆ.

    ವಿಡಿಯೋ ಮಾಡಿಟ್ಟು ಲೋಕೇಶ್ ಕೀಟನಾಶಕ ಸೇವಿಸಿದ್ದಾನೆ. ಈ ಸಂಬಂಧ ತುರುವೇಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆದರೆ ಪೊಲೀಸರು ಪ್ರಕರಣದ ತನಿಖೆಯನ್ನೇ ಮಾಡುತ್ತಿಲ್ಲ ಅಂತ ಮೃತನ ಸಂಬಂಧಿಕರು ಆರೋಪ ಮಾಡುತ್ತಿದ್ದಾರೆ.

  • ಭದ್ರಾ ಹುಲಿ ಯೋಜನೆ: ಬಫರ್ ಝೋನ್ ವಿರುದ್ಧ ಸಿಡಿದೆದ್ದ ಅನ್ನದಾತ

    ಭದ್ರಾ ಹುಲಿ ಯೋಜನೆ: ಬಫರ್ ಝೋನ್ ವಿರುದ್ಧ ಸಿಡಿದೆದ್ದ ಅನ್ನದಾತ

    – ಚುನಾವಣೆ ಬಹಿಷ್ಕಾರ ಎಚ್ಚರಿಕೆ, ಎನ್‍ಆರ್ ಪುರ ಬಂದ್ ಯಶಸ್ವಿ

    ಚಿಕ್ಕಮಗಳೂರು: ಭದ್ರಾ ಹುಲಿ ಯೋಜನೆಯ ಬಫರ್ ಝೋನ್ ಹಾಗೂ ಪರಿಸರ ಸೂಕ್ಷ್ಮ ವಲಯದ ವಿರುದ್ಧ ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಸರ್ವ ಪಕ್ಷ, ವಿವಿಧ ಸಂಘಟನೆಗಳು ಹಾಗೂ ಮಲೆನಾಡು ಹಿತರಕ್ಷಣಾ ಸಮಿತಿ ಕರೆ ನೀಡಿದ್ದ ಎನ್.ಆರ್.ಪುರ ತಾಲೂಕು ಬಂದ್‍ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.

    ಬೆಳಗ್ಗೆ 7 ಗಂಟೆಯಿಂದಲೇ ತಾಲೂಕಿನ ಎಲ್ಲಾ ಅಂಗಡಿ-ಮುಂಗಟ್ಟುಗಳನ್ನು ಬಂದ್ ಮಾಡಿ ತಾಲೂಕಿನ ಜನರು ಬಂದ್‍ಗೆ ಬೆಂಬಲ ಸೂಚಿಸಿದ್ದರು. ಸುಮಾರು ಐದು ಸಾವಿರಕ್ಕೂ ಅಧಿಕ ಜನ ಸುರಿಯೋ ಮಳೆಯಲ್ಲೇ ನಗರದ ಸರ್ಕಾರಿ ಬಸ್ ನಿಲ್ದಾಣದಿಂದ ತಾಲೂಕು ಕಚೇರಿವರೆಗೆ ಪಾದಯಾತ್ರೆ ನಡೆಸಿ ಸರ್ಕಾರ ಹಾಗೂ ಅರಣ್ಯ ಅಧಿಕಾರಿಗಳ ವಿರುದ್ಧ ಆಕ್ರೋಶ ಹೊರಹಾಕಿದರು.

    ತಾಲೂಕಿನ ಹತ್ತಕ್ಕೂ ಹೆಚ್ಚು ಗ್ರಾಮ ಪಂಚಾಯಿತಿ ವ್ಯಾಪ್ತಿಯ 30ಕ್ಕೂ ಅಧಿಕ ಹಳ್ಳಿಗಳು ಸೇರಿದಂತೆ ದೇವಸ್ಥಾನ, ಮಠ, ಚರ್ಚ್, ಮಸೀದಿಗಳ ಜೊತೆ ಸಾವಿರಾರು ಅನ್ನದಾತರ ಬದುಕು ಕೂಡ ಇತಿಹಾಸದ ಪುಟ ಸೇರಲಿವೆ ಎಂದು ಸರ್ಕಾರದ ವಿರುದ್ಧ ಕಿಡಿಕಾರಿದರು. ಬದುಕಿನ ಉಳಿವಿಗಾಗಿ ಎನ್.ಆರ್ ಪುರ ತಾಲೂಕು ಬಂದ್ ಗೆ ಕೊಟ್ಟಿದ್ದ ಕರೆಗೆ ನಿರೀಕ್ಷೆಗೂ ಮೀರಿ ರೈತರು ಪಾಲ್ಗೊಂಡಿದ್ದು ಬಂದ್ ಯಶಸ್ವಿಯಾಗಿದೆ. ಇದೇ ಮೊದಲ ಬಾರಿಗೆ ಸಾವಿರಾರು ಸಂಖ್ಯೆಯಲ್ಲಿ ಹಳ್ಳಿ-ಹಳ್ಳಿಯಿಂದ ರೈತರು ಬಂದು ಜನವಿರೋಧಿ ನೀತಿ ವಿರುದ್ಧ ಕಿಡಿ ಕಾರಿದ್ದಾರೆ. ಸಾವಿರಾರು ಸಂಖ್ಯೆಯಲ್ಲಿ ನೆರೆದ ರೈತರು, ಭದ್ರಾ ಹುಲಿ ಯೋಜನೆಯ ಬಫರ್ ಝೋನ್ ಹಾಗೂ ಪರಿಸರ ಸೂಕ್ಷ್ಮ ವಲಯ ಯೋಜನೆಯ ವಿರುದ್ಧ ಅಸಮಾಧಾನ ಹೊರಹಾಕಿದರು.

    ಪಕ್ಷಾತೀತವಾಗಿ ನಡೆದ ಈ ಬಂದ್‍ಗೆ ಎಲ್ಲಾ ರಾಜಕೀಯ ಪಕ್ಷಗಳ ಮುಖಂಡರು, ಕಾರ್ಯಕರ್ತರು, ವಿವಿಧ ಸಂಘಟನೆ ಹಾಗೂ ರೈತರು ಭಾಗವಹಿಸಿದ್ದರು. ಮೆರವಣಿಗೆಯ ಬಳಿಕ ತಾಲೂಕು ಕಚೇರಿಯಲ್ಲಿ ಪ್ರತಿಭಟನಾ ಸಮಾವೇಶವನ್ನು ಹಮ್ಮಿಕೊಳ್ಳಲಾಗಿತ್ತು. ಯಾವುದೇ ಕಾರಣಕ್ಕೂ ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಜನವಿರೋಧಿ ಯೋಜನೆಯನ್ನು ಜಾರಿಗೆ ತಂದು ಜನರ ಬದುಕಿಗೆ ಕಲ್ಲು ಹಾಕೋ ಕೆಲಸ ಮಾಡಬಾರದು. ಒಂದು ವೇಳೆ ಆ ಪ್ರಯತ್ನಕ್ಕೆ ಮುಂದಾದರೆ ತಾಲೂಕಿನ ಜನ ಮುಂದಿನ ಎಲ್ಲಾ ಚುನಾವಣೆಗಳನ್ನ ಬಹಿಷ್ಕರಿಸುವ ಎಚ್ಚರಿಕೆ ನೀಡಿದ್ದಾರೆ. ಸಾವಿರಾರು ಜನರು ಭಾಗಿಯಾಗಿದ್ದ ಪ್ರತಿಭಟನಾ ಸಮಾವೇಶದಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಮಾಜಿ ಸಚಿವ ಡಿ.ಎನ್.ಜೀವರಾಜ್, ಶಾಸಕ ಟಿ.ಡಿ.ರಾಜೇಗೌಡ ಸೇರಿದಂತೆ ಮೂರು ಪಕ್ಷಗಳ ಮುಖಂಡರು ಭಾಗಿಯಾಗಿದ್ದರು.

  • ಹನುಮಂತು ಕುಟುಂಬಕ್ಕೆ ಪಬ್ಲಿಕ್ ಟಿವಿಯಿಂದ 14.25 ಲಕ್ಷ ರೂ. ಪರಿಹಾರ

    ಹನುಮಂತು ಕುಟುಂಬಕ್ಕೆ ಪಬ್ಲಿಕ್ ಟಿವಿಯಿಂದ 14.25 ಲಕ್ಷ ರೂ. ಪರಿಹಾರ

    ರಾಮನಗರ: ರಸ್ತೆ ಅಪಘಾತದಲ್ಲಿ ಮೃತಪಟ್ಟ ನಮ್ಮ ರಾಮನಗರ ಜಿಲ್ಲಾ ವರದಿಗಾರ ಹನುಮಂತು ಕುಟುಂಬಕ್ಕೆ ಪಬ್ಲಿಕ್ ಟಿವಿ ವತಿಯಿಂದ ಪರಿಹಾರ ಚೆಕ್ ನೀಡಲಾಯ್ತು. 14 ಲಕ್ಷದ 25 ಸಾವಿರ ರೂಪಾಯಿಯ ಪರಿಹಾರ ಚೆಕ್ ಹನುಮಂತು ಕುಟುಂಬಕ್ಕೆ ಹಸ್ತಾಂತರಿಸಲಾಯಿತು.

    ಪಬ್ಲಿಕ್ ಟಿವಿ ಆಡಳಿತ ಮಂಡಳಿಯು ಈ ಹಿಂದೆ ಘೋಷಿಸಿದಂತೆ 10 ಲಕ್ಷ ರೂಪಾಯಿ ಹಾಗೂ ಪಬ್ಲಿಕ್ ಟಿವಿ ಸಿಬ್ಬಂದಿಯ ಒಂದು ದಿನದ ಸಂಬಳ ರೂಪದಲ್ಲಿ ಸಂಗ್ರಹವಾಗಿದ್ದ 4 ಲಕ್ಷದ 25 ಸಾವಿರ ರೂಪಾಯಿ ಸೇರಿ ಒಟ್ಟು 14 ಲಕ್ಷದ 25 ಸಾವಿರ ರೂಪಾಯಿ ಆಗಿತ್ತು.

    ಹನುಮಂತು ಅವರ ಪತ್ನಿಗೆ 11 ಲಕ್ಷದ 25 ಸಾವಿರ ರೂಪಾಯಿ ಚೆಕ್ ಹಾಗೂ ಹನುಮಂತು ಅವರ ತಾಯಿಗೆ 3 ಲಕ್ಷ ರೂಪಾಯಿ ಮೌಲ್ಯದ ಚೆಕ್ ಹಸ್ತಾಂತರಿಸಲಾಯ್ತು. ಪಬ್ಲಿಕ್ ಟಿವಿ ಸಿಇಓ ಅರುಣ್ ಕುಮಾರ್, ಸಿಒಒ ಹರೀಶ್, ಕಾರ್ಯಕಾರಿ ಸಂಪಾದಕ ದಿವಾಕರ್ ಹಾಗೂ ಹೆಚ್.ಆರ್. ವಿಭಾಗದ ಮುಖ್ಯಸ್ಥರಾದ ಶಂಕರ್ ಈ ಸಂದರ್ಭದಲ್ಲಿ ಹಾಜರಿದ್ದರು.

    ಏಪ್ರಿಲ್ 21 ರಂದು ರಾಮನಗರ ಜಿಲ್ಲಾ ಕಾರಾಗೃಹದ ಸಮೀಪ ನಡೆದ ರಸ್ತೆ ಅಪಘಾತದಲ್ಲಿ ಹನುಮಂತು ವಿಧಿವಶರಾಗಿದ್ದರು.

  • ದಿನ ಭವಿಷ್ಯ: 13-05-2020

    ದಿನ ಭವಿಷ್ಯ: 13-05-2020

    ಪಂಚಾಂಗ:
    ಶ್ರೀ ಶಾರ್ವರಿನಾಮ ಸಂವತ್ಸರ,
    ಉತ್ತರಾಯಣ ಪುಣ್ಯಕಾಲ,
    ವಸಂತ ಋತು, ವೈಶಾಖ ಮಾಸ,
    ಕೃಷ್ಣ ಪಕ್ಷ, ಸಪ್ತಮಿ ತಿಥಿ,
    ಬುಧವಾರ, ಶ್ರವಣ ನಕ್ಷತ್ರ

    ರಾಹುಕಾಲ: ಮಧ್ಯಾಹ್ನ 12:20 ರಿಂದ 1:55
    ಗುಳಿಕಕಾಲ: ಬೆಳಗ್ಗೆ 10:45 ರಿಂದ 12:20
    ಯಮಗಂಡಕಾಲ: ಬೆಳಗ್ಗೆ 7:35 ರಿಂದ 9:10

    ಮೇಷ: ಮಿತ್ರರಿಂದ ಬೆಂಬಲ, ಮುಖ್ಯ ಕೆಲಸದಲ್ಲಿ ಮುನ್ನಡೆ, ಕೆಲಸ ಕಾರ್ಯಗಳಲ್ಲಿ ಜಯ, ವಿವಾಹ ಯೋಗ,
    ಸ್ತ್ರೀಯರಿಗೆ ಅನುಕೂಲ.

    ವೃಷಭ: ಹಣಕಾಸು ಮುಗ್ಗಟ್ಟು, ಆತ್ಮೀಯರಲ್ಲಿ ನಿಷ್ಠೂರ, ಮಾತಿನ ಚಕಮಕಿ, ಶತ್ರುಗಳ ಬಾಧೆ, ಸ್ತ್ರೀಯರಿಗೆ ತಾಳ್ಮೆ ಅತ್ಯಗತ್ಯ.

    ಮಿಥುನ: ಅಲ್ಪ ಆದಾಯ, ಅಧಿಕವಾದ ಖರ್ಚು, ಅತೀ ಆತ್ಮವಿಶ್ವಾಸದಿಂದ ಸಂಕಷ್ಟ, ಸಕಾಲಕ್ಕೆ ಭೋಜನ ಲಭಿಸುವುದಿಲ್ಲ, ಪರರಿಗೆ ಸಹಾಯ ಮಾಡುವಿರಿ, ಯೋಚಿಸಿ ನಿರ್ಧಾರ ಕೈಗೊಳ್ಳಿ.

    ಕಟಕ: ನಾನಾ ರೀತಿಯ ಲಾಭ, ವಿದ್ಯಾರ್ಥಿಗಳಲ್ಲಿ ಗೊಂದಲ, ಚಂಚಲ ಮನಸ್ಸು, ಆರೋಗ್ಯದ ಬಗ್ಗೆ ಕಾಳಜಿವಹಿಸಿ, ಕಾರ್ಯಗಳಲ್ಲಿ ಅಲ್ಪ ಹಿನ್ನಡೆ.

    ಸಿಂಹ: ಹಿರಿಯರಿಂದ ಮಾರ್ಗದರ್ಶನ, ಪತಿ-ಪತ್ನಿಯಲ್ಲಿ ಪ್ರೀತಿ, ಮಾನಸಿಕ ನೆಮ್ಮದಿ, ವಿಪರೀತ ಕೋಪ, ಕುಟುಂಬದಲ್ಲಿ ಸೌಖ್ಯ.

    ಕನ್ಯಾ: ಆತ್ಮೀಯರೊಂದಿಗೆ ಕಷ್ಟ ಹೇಳಿಕೊಳ್ಳುವಿರಿ, ಕುಲದೇವರ ಆರಾಧನೆಯಿಂದ ನೆಮ್ಮದಿ, ದಿನ ಬಳಕೆ ವಸ್ತುಗಳ ಖರೀದಿ, ಹಣಕಾಸು ವಿಚಾರದಲ್ಲಿ ಎಚ್ಚರ, ವ್ಯವಹಾರಗಳನ್ನು ಮುಂದೂಡುವುದು ಉತ್ತಮ.

    ತುಲಾ: ಅತಿಯಾದ ನೋವು, ಉದಾಸೀನದಿಂದ ಸಂಕಷ್ಟ, ಶತ್ರುಗಳಿಂದ ದೂರವಿರಿ, ಮಕ್ಕಳಿಂದ ಸಹಾಯ, ಆತ್ಮೀಯರಿಂದ ಸಲಹೆ, ವಿದ್ಯಾರ್ಥಿಗಳಿಗೆ ಓದಿನಲ್ಲಿ ಆಸಕ್ತಿ.

    ವೃಶ್ಚಿಕ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಅತಿಯಾದ ಆತ್ಮವಿಶ್ವಾಸ ಒಳ್ಳೆಯದಲ್ಲ, ಸುಖ ಭೋಜನ ಪ್ರಾಪ್ತಿ, ಕುಟುಂಬ ಸೌಖ್ಯ, ಮಾನಸಿಕ ನೆಮ್ಮದಿ ಲಭಿಸುವುದು.

    ಧನಸ್ಸು: ಖರ್ಚುಗಳ ಬಗ್ಗೆ ನಿಗಾವಹಿಸಿ, ಶತ್ರುಗಳ ಬಾಧೆ, ಕೆಲಸ ಕಾರ್ಯಗಳಲ್ಲಿ ಪ್ರಗತಿ, ಯಾರನ್ನೂ ಹೆಚ್ಚು ನಂಬಬೇಡಿ, ಮೋಸದ ಜಾಲಕ್ಕೆ ಸಿಲುಕುವ ಸಾಧ್ಯತೆ, ಎಚ್ಚರಿಕೆಯಲ್ಲಿರುವುದು ಉತ್ತಮ.

    ಮಕರ: ಶಕ್ತಿ ಮೀರಿ ಕೆಲಸ ಒಪ್ಪಿಕೊಳ್ಳಬೇಡಿ, ಪರಿಶ್ರಮಕ್ಕೆ ತಕ್ಕ ಫಲ, ದಾಂಪತ್ಯದಲ್ಲಿ ಕಲಹ, ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಪರಿಸ್ಥಿತಿ ಮುಗ್ಗಟ್ಟು, ವ್ಯಾಪಾರದಲ್ಲಿ ನಷ್ಟ.

    ಕುಂಭ: ಅಪರಿಚಿತರಿಂದ ತೊಂದರೆ, ಆಲಸ್ಯ ಮನೋಭಾವ, ಕೃಷಿಕರಿಗೆ ಲಾಭ, ಮಾನಸಿಕ ನೆಮ್ಮದಿ, ಕೀಲು ನೋವು.

    ಮೀನ: ವಿರೋಧಿಗಳಿಂದ ತೊಂದರೆ, ಸಾಧಾರಣ ಲಾಭ, ಋಣ ಬಾಧೆ, ಹಣಕಾಸು ನಷ್ಟ, ವಾಗ್ವಾದಗಳಲ್ಲಿ ಎಚ್ಚರಿಕೆ, ಅನ್ಯ ಜನರಲ್ಲಿ ವೈಮನಸ್ಸು.

  • 30 ಟನ್ ಕಲ್ಲಂಗಡಿ, ಪೇರಳೆ ಖರೀದಿಸಿ ಜನರಿಗೆ ಉಚಿತವಾಗಿ ಹಂಚಿದ ಸತೀಶ್ ಜಾರಕಿಹೊಳಿ

    30 ಟನ್ ಕಲ್ಲಂಗಡಿ, ಪೇರಳೆ ಖರೀದಿಸಿ ಜನರಿಗೆ ಉಚಿತವಾಗಿ ಹಂಚಿದ ಸತೀಶ್ ಜಾರಕಿಹೊಳಿ

    ಚಿಕ್ಕೋಡಿ(ಬೆಳಗಾವಿ): ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದರಿಂದ ಸರ್ಕಾರ ಹೇರಲಾದ ಲಾಕ್ ಡೌನ್ ಹಿನ್ನೆಲೆಯಲ್ಲಿ ಬೆಳೆ ಬೆಳೆದ ರೈತರ ಮಾರಲಾಗದೆ ಸಂಕಷ್ಟಕೀಡಾಗಿದ್ದು, ಇದೀಗ ರೈತರ ಬೆನ್ನಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಬೆಳಗಾವಿ ಜಿಲ್ಲೆಯ ಯಮಕನಮರಡಿ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ನಿಂತಿದ್ದಾರೆ.

    ರೈತರು ಬೆಳೆದ ತರಕಾರಿ, ಹಣ್ಣುಗಳನ್ನು ಖರೀದಿಸಿ ಸಾರ್ವಜನಿಕರಿಗೆ ಹಂಚಿದ್ದಾರೆ. ಯಮನಕಮರಡಿ ಕ್ಷೇತ್ರದ ಹೆಬ್ಬಾಳ ಜಿಲ್ಲಾ ಪಂಚಾಯ್ತಿ ವ್ಯಾಪ್ತಿಯ ಉಳ್ಳಾಗಡ್ಡಿ ಖಾನಾಪುರ ಗ್ರಾಮದ ರೈತ ಹಣುಮಂತ ಎಂಬವರು ಸುಮಾರು ಮೂರು ಎಕರೆ ಪ್ರದೇಶದಲ್ಲಿ ಬೆಳೆದ 30 ಟನ್ ಕಲ್ಲಂಗಡಿ ಹಾಗೂ ಪೇರಳೆ ಹಣ್ಣು ಖರೀದಿಸಿದ್ದಾರೆ.

    ಹೀಗೆ ಖರೀದಿಸಿದ ಹಣ್ಣುಗಳನ್ನು ಕೊರೊನಾ ವಿರುದ್ಧ ನಿರಂತರವಾಗಿ ಹೋರಾಡುತ್ತಿರುವ ಯಮಕನಮರಡಿ ಹಾಗೂ ಬೆಳಗಾವಿ ಜಿಲ್ಲಾ ವ್ಯಾಪ್ತಿಯ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತರು, ಪೊಲೀಸ್ ಸಿಬ್ಬಂದಿ, ಆರೋಗ್ಯ ಇಲಾಖೆ ಸಿಬ್ಬಂದಿಗೆ ಹಂಚಲಾಗುವುದು. ಲಾಕ್ ಡೌನ್ ನಿಂದ ರೈತರು ಬೆಳೆದ ಫಸಲು ಮಾರಾಟ ಮಾಡಲಾಗದೆ ನಾಶಪಡಿಸುತ್ತಿದ್ದು, ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಹಣ್ಣು, ತರಕಾರಿ ಖರೀದಿಸಿ ಸಾರ್ವಜನಿಕರಿಗೆ ಉಚಿತವಾಗಿ ವಿತರಿಸಲಾಗುತ್ತಿದೆ. ಪ್ರತಿಯೊಬ್ಬ ಜನಪ್ರತಿನಿಧಿಗಳು ಇದೇ ರೀತಿ ಮಾಡುವ ಮೂಲಕ ರೈತರ ಬೆನ್ನೆಲುಬಾಗಿ ನಿಲ್ಲಬೇಕು ಎಂದು ಶಾಸಕ ಸತೀಶ ಜಾರಕಿಹೊಳಿ ಅವರು ಕರೆ ನೀಡಿದ್ದಾರೆ.

    ಮೇ 3ರ ಬಳಿಕ ಲಾಕ್ ಡೌನ್ ಅನ್ನು ಹಂತ ಹಂತವಾಗಿ ತೆರವುಗೊಳಿಸಬೇಕು. ಸಂಪೂರ್ಣ ಬಂದ್ ಮಾಡಲಾಗದು, ಕಾರ್ಖಾನೆ, ಕೃಷಿ ಚಟುವಟಿಕೆಗಳು ನಡೆಯುವಂತೆ ಕ್ರಮ ಕೈಗೊಳ್ಳಬೇಕು ಎಂದರು.

    ಈ ಸಂದರ್ಭದಲ್ಲಿ ಮಾಜಿ ಜಿಪಂ ಸದಸ್ಯ ಪರೇಶಗೌಡ, ಹೆಬ್ಬಾಳ ಜಿಪಂ ಸದಸ್ಯ ಮಹಾಂತೇಶ ಮಗದುಮ, ಕಿರಣ ರಜಪೂತ, ಸುಧೀರ್ ಗಿರಿಗೌಡ, ಅಪ್ಪಾಗೌಡ ಪಾಟೀಲ್, ರಾಜು ಅವಟೆ ಸೇರಿದಂತೆ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಗ್ರಾಮ ಪಂಚಾಯಿತಿ ಸದಸ್ಯರು ಇದ್ದರು.