Tag: Public Interest Litigation

  • ಈ ಶೋಗೆ ಮಾತ್ರ ಅರ್ಜಿ ಸಲ್ಲಿಸಿದ್ದು ಯಾಕೆ? – ಮೋದಿ ರೋಡ್ ಶೋಗೆ ಹೈಕೋರ್ಟ್ ಗ್ರೀನ್ ಸಿಗ್ನಲ್: ವಾದ, ಪ್ರತಿವಾದ ಹೇಗಿತ್ತು?

    ಈ ಶೋಗೆ ಮಾತ್ರ ಅರ್ಜಿ ಸಲ್ಲಿಸಿದ್ದು ಯಾಕೆ? – ಮೋದಿ ರೋಡ್ ಶೋಗೆ ಹೈಕೋರ್ಟ್ ಗ್ರೀನ್ ಸಿಗ್ನಲ್: ವಾದ, ಪ್ರತಿವಾದ ಹೇಗಿತ್ತು?

    ಬೆಂಗಳೂರು: ಕರ್ನಾಟಕ ವಿಧಾನಸಭೆ ಚುನಾವಣೆ ( Karnataka Assembly Election) ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿ (Bengaluru) ಶನಿವಾರ ಮತ್ತು ಭಾನುವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ಅವರ 36 ಕಿ.ಮೀ ರೋಡ್ ಶೋ ತಡೆ ನೀಡಲು ಹೈಕೋರ್ಟ್ (Karnataka High Court) ಶುಕ್ರವಾರ ನಿರಾಕರಿಸಿದೆ.

    ನ್ಯಾಯಮೂರ್ತಿಗಳಾದ ಕೃಷ್ಣ ಎಸ್. ದೀಕ್ಷಿತ್ ಹಾಗೂ ವಿಜಯಕುಮಾರ್ ಎ. ಪಾಟೀಲ್ ಅವರ ಪೀಠವು ವಿಚಾರಣೆ ನಡೆಸಿ ರೋಡ್ ಶೋಗೆ ತಡೆಗೆ ಸಲ್ಲಿಸಿದ್ದ ಅರ್ಜಿಯನ್ನು ಇತ್ಯರ್ಥ ಮಾಡಿದರು. ಇದನ್ನೂ ಓದಿ: ಇವಿಎಂ ಖರೀದಿಯಲ್ಲಿ ಅಕ್ರಮ ಆರೋಪ – ಚುನಾವಣಾ ಆಯೋಗದ ವಿರುದ್ಧದ ಪಿಐಎಲ್ ವಜಾಗೊಳಿಸಿದ ಸುಪ್ರೀಂ

    ವಿಚಾರಣೆಯ ಸಂದರ್ಭದಲ್ಲಿ, ಭಾರತದಲ್ಲಿ ಚುನಾವಣೆಗಳನ್ನು ಹಬ್ಬದ ಆಚರಣೆಗಳೆಂದು ಪರಿಗಣಿಸಲಾಗಿದೆ. ಅಲ್ಲದೇ 1952 ರ ಮೊದಲ ಸಾರ್ವತ್ರಿಕ ಚುನಾವಣೆಯಿಂದಲೇ ರ‍್ಯಾಲಿ ನಡೆಸಲಾಗಿದೆ. ಇದಲ್ಲದೆ, ಕೇರಳ ಮತ್ತು ಕಲ್ಕತ್ತಾ ಹೈಕೋರ್ಟ್‍ಗಳು ಚುನಾವಣಾ ರ‍್ಯಾಲಿಗೆ ಅವಕಾಶ ನೀಡಿರುವುದನ್ನು ನಾವಿಲ್ಲಿ ಗಮನಿಸಬಹುದು ಎಂದು ನ್ಯಾಯಾಲಯ ಅಭಿಪ್ರಾಯ ವ್ಯಕ್ತಪಡಿಸಿತು.

    ನ್ಯಾಯಾಲಯದ ಪ್ರಶ್ನೆ:
    ಏಪ್ರಿಲ್‍ನಿಂದ ರೋಡ್ ಶೋಗಳು ನಡೆಯುತ್ತಿವೆ. ಆದರೆ ಈ ರೋಡ್ ಶೋಗೆ ಮಾತ್ರ ಯಾಕೆ ಪಿಎಎಲ್ (PIL) ಹಾಕಿದ್ದೀರಿ? ನಾಳೆ ರೋಡ್ ಶೋ ಇರುವಾಗ ಇಂದು ಅರ್ಜಿ ಸಲ್ಲಿಸಿದ್ದು ಯಾಕೆ? ಚುನಾವಣಾ ಆಯೋಗ ರೋಡ್ ಶೋ ಬಗ್ಗೆ ಏನಾದ್ರೂ ಮಾರ್ಗಸೂಚಿ ನೀಡಿದೆಯೇ ಎಂದು ಅರ್ಜಿದಾರರನ್ನು ಪ್ರಶ್ನಿಸಿತು.

    ನೀಟ್ ಪರೀಕ್ಷೆಗೆ ಯಾವುದೇ ತೊಂದರೆಯಾಗದಂತೆ ಕಾರ್ಯ ನಿರ್ವಹಿಸಬೇಕು. ರ‍್ಯಾಲಿಯಿಂದ ಜನರಿಗೆ ಸಮಸ್ಯೆಯಾಗದಂತೆ, ಯಾವುದೇ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದು ಕೋರ್ಟ್ ಪೊಲೀಸರಿಗೆ ಸೂಚನೆ ನೀಡಿದೆ. ಯಾವುದೇ ಅಹಿತಕರ ಘಟನೆ ನಡೆದಲ್ಲಿ ಸಂಘಟಕರು ಯಾವುದೇ ರಾಜಕೀಯ ಪಕ್ಷಕ್ಕೆ ಸೇರಿದ್ದರೂ ಅವರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ನ್ಯಾಯಾಲಯ ಎಚ್ಚರಿಕೆ ನೀಡಿದೆ.

    ಪೊಲೀಸ್ ಕಮಿಷನರ್ ಹೇಳಿದ್ದೇನು?
    ರ್ಯಾಲಿ ಇದ್ದಾಗ ಸಾರ್ವಜನಿಕರಿಗೆ ಹಿಂದಿನ ದಿನವೇ ಮಾಹಿತಿ ನೀಡುತ್ತಿದ್ದೇವೆ. ಮಾಹಿತಿ ನೀಡಲು ಸಾಮಾಜಿಕ ಜಾಲತಾಣ ಬಳಕೆ ಮಾಡುತ್ತಿದ್ದೇವೆ. ಅಹಿತಕರ ಘಟನೆ ನಡೆಯದಂತೆ ಕ್ರಮಕೈಗೊಂಡಿದ್ದೇವೆ. ವಿದ್ಯಾರ್ಥಿಗಳಿಗೆ ಸೂಕ್ತ ವ್ಯವಸ್ಥೆ ಕಲ್ಪಿಸಿದ್ದೇವೆ. ಅಂಬುಲೆನ್ಸ್ ಸಂಚಾರಕ್ಕೆ ವ್ಯವಸ್ಥೆ ಮಾಡಲಾಗುತ್ತದೆ ಎಂದು ಪೊಲೀಸ್ ಕಮೀಷನರ್ ಪರ ವಕೀಲರು ನ್ಯಾಯಾಲಯಕ್ಕೆ ತಿಳಿಸಿದರು.

    ಅರ್ಜಿದಾರರ ವಾದ ಏನಿತ್ತು?
    ಬೆಂಗಳೂರಿನಲ್ಲಿ ರೋಡ್ ಶೋ ನಡೆಸುವ ರಾಜಕೀಯ ಮುಖಂಡರು ಸಮಯವನ್ನು 5 ಗಂಟೆಗಳವರೆಗೆ ವಿಸ್ತರಿಸುತ್ತಿದ್ದಾರೆ. ಇದರಿಂದಾಗಿ ಸಾರ್ವಜನಿಕರಿಗೆ ಹೆಚ್ಚಿನ ತೊಂದರೆಯಾಗುತ್ತಿದೆ. ಮೋದಿಯವರ ರೋಡ್ ಶೋಗೆ ಬೆಂಗಳೂರಿನ ಪ್ರಮುಖ ವಾಣಿಜ್ಯ ರಸ್ತೆಗಳಲ್ಲಿ 10 ಲಕ್ಷ ಪಕ್ಷದ ಬೆಂಬಲಿಗರು ಸೇರಲಿದ್ದು ಸಾರ್ವಜನಿಕರ ಓಡಾಟಕ್ಕೆ ಅಡಚಣೆಯಾಗಲಿದೆ. ವ್ಯಾಪಾರಿಗಳಿಗೆ ತೊಂದರೆಯಾಗಲಿದೆ. ಅಂಬುಲೆನ್ಸ್ ಸಂಚಾರಕ್ಕೆ ತೊಂದೆಯಾಗಲಿದೆ. ಮೇ 13 ರಂದು ಗೆದ್ದರೆ ಮತ ಎಣಿಕೆಯ ನಂತರವೂ ರೋಡ್ ಶೋಗಳಿಗೆ ರಾಜಕೀಯ ಪಕ್ಷಗಳು ಯೋಚಿಸಿವೆ. ಹೀಗಿದ್ದರೂ, ರೋಡ್ ಶೋಗಳ ದುಷ್ಪರಿಣಾಮಗಳನ್ನು ತಡೆಯಲು ಬೆಂಗಳೂರು ಪೊಲೀಸರು ಯಾವುದೇ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು ಅರ್ಜಿದಾರರಾದ ವಕೀಲ ಅಮೃತೇಶ್ ವಾದಿಸಿದ್ದರು.

    ರಾಜ್ಯ ಸರ್ಕಾರದ ವಾದ ಏನಿತ್ತು?
    ರಾಜ್ಯದ ಪರ ವಾದ ಮಂಡಿಸಿದ ಹೆಚ್ಚುವರಿ ಅಡ್ವೊಕೇಟ್ ಜನರಲ್ ಅವರು, ಚುನಾವಣಾ ಪ್ರಚಾರದ ಉದ್ದೇಶಕ್ಕಾಗಿ ಚುನಾವಣಾ ರ‍್ಯಾಲಿಗಳನ್ನು ಬಹಳ ಹಿಂದಿನಿಂದಲೂ ನಡೆಸಲಾಗುತ್ತಿದೆ. ಇದುವರೆಗೆ ಯಾವುದೇ ಅಹಿತಕರ ಘಟನೆ ವರದಿಯಾಗಿಲ್ಲ. ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದಂತೆ, ಇಲ್ಲಿಯ ವರೆಗೂ 2,517 ರ್ಯಾಲಿಗಳನ್ನು ಯಾವುದೇ ಅಹಿತಕರ ಘಟನೆ ವರದಿಯಾಗದಂತೆ ನಡೆದಿವೆ. ಈ ಪೈಕಿ 371 ಬೆಂಗಳೂರಿನಲ್ಲಿ ನಡೆದಿವೆ ಎಂದು ವಾದಿಸಿದರು.

    ಚುನಾವಣಾ ಪ್ರಕ್ರಿಯೆಯಲ್ಲಿ ರ‍್ಯಾಲಿಗಳನ್ನು ನಡೆಸುವ ಹಕ್ಕು ಭಾರತೀಯ ಸಂವಿಧಾನದ 19 ನೇ ವಿಧಿಯ ಅಡಿಯಲ್ಲಿ ಖಾತ್ರಿಪಡಿಸಲಾದ ಭಾಷಣ, ಸಭೆ ಮತ್ತು ಚಳುವಳಿಯ ಹಕ್ಕುಗಳನ್ನು ಹೊಂದಿದೆ ಎಂದು ಅವರು ಕೋರ್ಟ್ ಗಮನಕ್ಕೆ ತಂದರು. ಇದನ್ನೂ ಓದಿ: ಕಾಂಗ್ರೆಸ್‍ದು 85 ಪರ್ಸೆಂಟ್ ಕಮಿಷನ್ ಸರ್ಕಾರ ಆಗಿತ್ತು: ನರೇಂದ್ರ ಮೋದಿ

  • ಇವಿಎಂ ಖರೀದಿಯಲ್ಲಿ ಅಕ್ರಮ ಆರೋಪ – ಚುನಾವಣಾ ಆಯೋಗದ ವಿರುದ್ಧದ ಪಿಐಎಲ್ ವಜಾಗೊಳಿಸಿದ ಸುಪ್ರೀಂ

    ಇವಿಎಂ ಖರೀದಿಯಲ್ಲಿ ಅಕ್ರಮ ಆರೋಪ – ಚುನಾವಣಾ ಆಯೋಗದ ವಿರುದ್ಧದ ಪಿಐಎಲ್ ವಜಾಗೊಳಿಸಿದ ಸುಪ್ರೀಂ

    ನವದೆಹಲಿ: ಇವಿಎಂಗಳ (EVM) ಖರೀದಿಯಲ್ಲಿ ಭಾರತ ಚುನಾವಣಾ ಆಯೋಗ (ECI) ಅಕ್ರಮ ನಡೆಸಿದೆ ಎಂದು ಆರೋಪಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (Public Interest Litigation) ಸುಪ್ರೀಂ ಕೋರ್ಟ್ (Supreme Court) ವಜಾಗೊಳಿಸಿದೆ.

    ಚುನಾವಣಾ ವೆಚ್ಚ ಹೆಚ್ಚಾದರೆ ಅದು ಪ್ರಜಾಪ್ರಭುತ್ವಕ್ಕೆ ತೆರಬೇಕಾದ ಬೆಲೆಯಾಗಿದೆ. ಅದ್ದರಿಂದ ಇವಿಎಂ ಖರೀದಿಯಲ್ಲಿ ಹೇಗೆ ಹಣ ಖರ್ಚು ಮಾಡಿದ್ದೀರಿ ಎಂದು ಕೇಳಲು ಸಾದ್ಯವಿಲ್ಲ. ಅಲ್ಲದೆ ಇವಿಎಂಗಳನ್ನು ಖರೀದಿಸುವ ವಿಷಯವು ಮೂಲಭೂತ ಹಕ್ಕುಗಳ ಜಾರಿಗಾಗಿ ಸುಪ್ರೀಂ ಕೋರ್ಟ್‍ಗೆ ತೆರಳುವ ಆರ್ಟಿಕಲ್ 32  (Article 32)ರ ವ್ಯಾಪ್ತಿಯೊಳಗೆ ಬರುವುದಿಲ್ಲ ಎಂದು ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ (CJI) ಡಿವೈ ಚಂದ್ರಚೂಡ್ (Chief Justice of India DY Chandrachud) ನೇತೃತ್ವದ ಪೀಠ ಹೇಳಿದೆ. ಇದನ್ನೂ ಓದಿ: ಕುಡಿದ ಪೊಲೀಸರಿಂದ ಹಲ್ಲೆ ಆರೋಪ – ದೇಶದ ಅತ್ಯುನ್ನತ ಪ್ರಶಸ್ತಿ ಹಿಂದಿರುಗಿಸಲು ಮುಂದಾದ ಕುಸ್ತಿಪಟುಗಳು

    ಈ ವೇಳೆ ಅರ್ಜಿದಾರರ ಪರ ವಕೀಲ, ಭಾರತ ಚುನಾವಣಾ ಆಯೋಗ ಇವಿಎಂಗಳನ್ನು ಖರೀದಿಸಿದೆ ಎಂದು ತೋರಿಸಿದೆ. ಆದರೆ ವಾಸ್ತವವಾಗಿ ಖರೀದಿಸಿಲ್ಲ ಎಂದು ಆರೋಪಿಸಿದ್ದಾರೆ. ಇದನ್ನೂ ಓದಿ: ಪಾಕಿಸ್ತಾನಕ್ಕೆ ಗುಪ್ತ ಮಾಹಿತಿ ರವಾನೆ – ರಕ್ಷಣಾ ಸಂಸ್ಥೆಯ ವಿಜ್ಞಾನಿ ಅರೆಸ್ಟ್