Tag: Public Tv Zameer ahmed

  • ಕೊರೊನಾ ಲಸಿಕೆ ಪಡೆದ ಸಿದ್ದರಾಮಯ್ಯ

    ಕೊರೊನಾ ಲಸಿಕೆ ಪಡೆದ ಸಿದ್ದರಾಮಯ್ಯ

    ಬೆಂಗಳೂರು: ದೇಶದೆಲ್ಲೆಡೆ ಕೊರೊನಾ ಲಸಿಕೆಯನ್ನು ಜನಸಾಮಾನ್ಯರು ಪಡೆದುಕೊಳ್ಳುತ್ತಿದ್ದಂತೆ, ಇಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರು ತಮ್ಮ ಬೆಂಬಲಿಗರೊಂದಿಗೆ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ಆಗಮಿಸಿ ಕೊರೊನಾ ಲಸಿಕೆ ಪಡೆದುಕೊಂಡರು.

    ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಕೊರೊನಾ ಲಸಿಕೆ ಹಾಕಿಸಿಕೊಂಡು ಮಾಧ್ಯಮಗಳೊಂದಿಗೆ ಮಾತನಾಡಿದ ಸಿದ್ದರಾಮಯ್ಯ, ಕೊರೊನಾವನ್ನು ತಡೆಗಟ್ಟುವ ನಿಟ್ಟಿನಲ್ಲಿ ಪ್ರತಿಯೊಬ್ಬರು ಲಸಿಕೆಯನ್ನು ಪಡೆದುಕೊಳ್ಳಬೇಕೆಂದು ಮನವಿ ಮಾಡಿಕೊಂಡರು.

    ಲಸಿಕೆ ಹಾಕಿಸಿಕೊಳ್ಳುವ ವೇಳೆ ಮಾಜಿ ಸಚಿವ ಜಮೀರ್ ಅಹಮದ್ ಸೇರಿದಂತೆ ಹಲವು ಕಾಂಗ್ರೆಸ್ ಮುಖಂಡರು ಸಿದ್ದರಾಮಯ್ಯನವರಿಗೆ ಸಾಥ್ ನೀಡಿದರು. ಇತ್ತ ಸಿದ್ದರಾಮಯ್ಯನವರೊಂದಿಗೆ ಲಸಿಕೆಗಾಗಿ ಬೆಂಬಲಿಗರು ಹೆಚ್ಚಿನ ಸಂಖ್ಯೆಯಲ್ಲಿದ್ದ ಕಾರಣ ಸಾಮಾಜಿಕ ಜಾಲತಾಣದಲ್ಲಿ ನೆಟ್ಟಿಗರು ಸಿದ್ದರಾಮಯ್ಯನವರಿಗೆ ಹಲವು ರೀತಿಯಲ್ಲಿ ವ್ಯಂಗ್ಯವಾಡಿದ್ದಾರೆ.