Tag: Public TVNew Delhi

  • ಅರುಣ್ ಜೇಟ್ಲಿ ಬಳಿ ಕ್ಷಮಾಪಣೆ ಕೋರಿದ ಅರವಿಂದ್ ಕೇಜ್ರಿವಾಲ್

    ಅರುಣ್ ಜೇಟ್ಲಿ ಬಳಿ ಕ್ಷಮಾಪಣೆ ಕೋರಿದ ಅರವಿಂದ್ ಕೇಜ್ರಿವಾಲ್

    ನವದೆಹಲಿ: ಕಳೆದ ಕೆಲ ದಿನಗಳ ಹಿಂದೆಯಷ್ಟೇ ಕೇಂದ್ರ ಹೆದ್ದಾರಿ ಖಾತೆ ಸಚಿವ ನಿತಿನ್ ಗಡ್ಕರಿ ಹಾಗೂ ಕಾಂಗ್ರೆಸ್ ಹಿರಿಯ ನಾಯಕ, ವಕೀಲ ಕಪಿಲ್ ಸಿಬಲ್ ಅವರ ಬಳಿ ಕ್ಷಮೆಯಾಚಿಸಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಈಗ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ ಬಳಿ ಕ್ಷಮೆ ಕೇಳಿದ್ದಾರೆ.

    ಕೇಜ್ರಿವಾಲ್ ಜೊತೆ ಆಪ್ ಮುಖಂಡರಾದ ಅಶುತೋಶ್, ರಾಘವ್ ಚಾಂದಾ, ಸಂಜಯ್ ಸಿಂಗ್ ಕೂಡ ತಮ್ಮ ವಿರುದ್ಧ ಕೇಂದ್ರ ಸಚಿವ ಅರುಣ್ ಜೇಟ್ಲಿ ಅವರು 10 ಕೋಟಿ ರೂ. ಪರಿಹಾರ ಕೇಳಿ ದಾಖಲಿಸಿದ್ದ ಮಾನಹಾನಿ ಪ್ರಕರಣದಲ್ಲಿ ಕ್ಷಮೆ ಕೋರಿದ್ದಾರೆ.

    ಪಟಿಯಾಲ ಕೋರ್ಟ್ ನಲ್ಲಿ ದಾಖಲಾಗಿರುವ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪತ್ರದ ಮೂಲಕ ಕ್ಷಮೆ ಕೋರಿದ್ದು, ಆಪ್ ಪಕ್ಷದ ಎಲ್ಲಾ ನಾಲ್ವರು ಮುಖಂಡರು ಪ್ರತ್ಯೇಕ ಪತ್ರ ಬರೆಯುವ ಮೂಲಕ ಕ್ಷಮೆ ಕೇಳಿದ್ದಾರೆ. ಅಲ್ಲದೇ ಈ ಪತ್ರವನ್ನು ಪ್ರತ್ಯೇಕವಾಗಿ ನ್ಯಾಯಾಲಯಕ್ಕೂ ಸಲ್ಲಿಸಿದ್ದಾರೆ.

    ನಿಮ್ಮ ವಿರುದ್ಧ ಮಾಡಿರುವ ಆರೋಪಗಳಿಗೆ ವಿಷಾದ ವ್ಯಕ್ತಪಡಿಸಿ ಕ್ಷಮೆಯಾಚಿಸುತ್ತೇನೆ. ನನಗೆ ಆ ವೇಳೆ ಸಿಕ್ಕ ಮಾಹಿತಿಗೆ ಯಾವುದೇ ದಾಖಲೆಗಳು, ಆಧಾರಗಳು ಇಲ್ಲ. ನಾನು ತಪ್ಪು ಮಾಹಿತಿ ಪಡೆದು ಆರೋಪ ಮಾಡಿದೆ. ಇದರಿಂದ ನಿಮಗೇ ಹಾಗೂ ನಿಮ್ಮ ಕುಟುಂಬ ಸದಸ್ಯರ ಗೌರವಕ್ಕೆ ದಕ್ಕೆ ಉಂಟಾಗಿದ್ದಾರೆ ಕ್ಷಮಿಸಿ ಎಂದು ಪತ್ರದಲ್ಲಿ ಬರೆದಿದ್ದಾರೆ.

    ಅರವಿಂದ್ ಕೇಜ್ರಿವಾಲ್ ಹಾಗೂ ಆಮ್ ಆದ್ಮಿ ಪಕ್ಷದ ಮುಖಂಡರಾದ ಕುಮಾರ್ ವಿಶ್ವಾಸ್, ಸಂಜಯ್ ಸಿಂಗ್, ಅಶುತೋಷ್ ಹಾಗೂ ದೀಪಕ್ ಬಾಜ್ ಪೈ ಪೈವಿರುದ್ಧ 10 ಕೋಟಿ ರೂಪಾಯಿಗಳ ಮಾನಹಾನಿ ಪ್ರಕರಣವನ್ನು ಅರುಣ್ ಜೇಟ್ಲಿ ದಾಖಲಿಸಿದ್ದರು.

    ಮುಖ್ಯ ಮಂತ್ರಿಯಾಗಿ ಕಾರ್ಯನಿರ್ವಹಿಸಲು ಆಡಳಿತ ವಿಷಯಗಳಲ್ಲಿ ಹೆಚ್ಚು ಗಮನಹರಿಸಲು ಕ್ರೇಜಿವಾಲ್ ತಮ್ಮ ವಿರುದ್ಧದ ದಾಖಲಾಗಿದ್ದ ಎಲ್ಲಾ ಮಾನನಷ್ಟ ಮೊಕದ್ದಮೆಗಳಿಗೆ ಕ್ಷಮೆ ಕೇಳಿದ್ದಾರೆ ಎನ್ನಲಾಗಿದೆ. ಇದರೊಂದಿಗೆ ಕೇಜ್ರಿವಾಲರ ವಿರುದ್ಧ ದಾಖಲಾಗಿದ್ದ 30 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಸುಮಾರು 20 ಪ್ರಕರಣಗಳು ಬಾಕಿ ಉಳಿದಿದೆ. ಇದನ್ನೂ ಓದಿ: ಜೇಟ್ಲಿ ಕೇಸ್- ಕೇಜ್ರಿ ಪರ ವಾದದಿಂದ ರಾಮ್ ಜೇಠ್ಮಾಲನಿ, ಇನ್ನೊಬ್ಬ ವಕೀಲ ಹಿಂದಕ್ಕೆ ಸರಿದಿದ್ದು ಯಾಕೆ?

    ಏನಿದು ಪ್ರಕರಣ?
    ಅರುಣ್ ಜೇಟ್ಲಿ ದೆಹಲಿ ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಆಪ್ ಆರೋಪಿಸಿತ್ತು. ಇದರ ವಿರುದ್ಧ ಅರುಣ್ ಜೇಟ್ಲಿ, ಅರವಿಂದ ಕೇಜ್ರಿವಾಲ್, ಕುಮಾರ್ ವಿಶ್ವಾಸ್, ಸಂಜಯ್ ಸಿಂಗ್, ರಾಘವ್ ಚಡ್ಡಾ, ಅಶುತೋಶ್ ಹಾಗೂ ದೀಪಕ್ ಬಾಜ್ಪೈ ಅವರ ಮೇಲೆ ಸಿವಿಲ್ ಹಾಗೂ ಕ್ರಿಮಿನಲ್ ಸೇರಿದಂತೆ ಎರಡು ಮಾನನಷ್ಟ ಮೊಕದ್ದಮೆ ಹಾಕಿದ್ದರು. ಸುಳ್ಳು ಹೇಳಿಕೆ ನೀಡಿ ಘನತೆಗೆ ಧಕ್ಕೆ ತಂದ ಆರೋಪದ ಮೇಲೆ 10 ಕೋಟಿ ರೂ. ಪರಿಹಾರ ನೀಡುವಂತೆ ಕೇಜ್ರಿವಾಲ್ ಹಾಗೂ ಇತರೆ ಮುಖಂಡರ ಮೇಲೆ ಜೇಟ್ಲಿ ಸಿವಿಲ್ ಕೇಸ್ ಹಾಕಿದ್ದರು. ಇದನ್ನೂ ಓದಿ: ನಿತಿನ್ ಗಡ್ಕರಿ ಜೊತೆ ಕ್ಷಮೆ ಕೇಳಿದ ಕೇಜ್ರಿವಾಲ್