ಮುಂಬೈ: ಕೋವಿಡ್ ಲಸಿಕೆ ಪಡದುಕೊಳ್ಳುವಂತೆ ಜನರನ್ನು ಉತ್ತೇಜಿಸಲು ಮಹಾರಾಷ್ಟ್ರದ ಚಂದ್ರಾಪುರ ನಗರಸಭೆ ಲಕ್ಕಿಡ್ರಾ ಬಹುಮಾನವನ್ನು ಘೋಷಿಸಿದೆ.
ಎಲ್‍ಇಡಿ ಟಿವಿ, ರೆಫ್ರಿಜರೇಟರ್, ವಾಷಿಂಗ್ ಮಶೀನ್ ಉಡುಗೊರೆಯಾಗಿ ನೀಡಲಾಗುವುದು ಎಂದು ಘೋಷಿಸಿದೆ. ನವೆಂಬರ್ 12 ರಿಂದ 24ರವರೆಗೆ ಲಸಿಕಾ ಕೇಂದ್ರಗಳಿಗೆ ಬಂದು ಲಸಿಕೆ ಪಡೆಯುವವರು ಈ ಉಡುಗೊರೆ ಪಡೆಯಬಹುದಾದಿದೆ. ಇದನ್ನೂ ಓದಿ ಲಸಿಕೆ ಪಡೆಯದಿದ್ದರೆ ರೇಷನ್, ಗ್ಯಾಸ್, ಪೆಟ್ರೋಲ್ ಇಲ್ಲ
ಈ ಅವಧಿಯಲ್ಲಿ ಲಸಿಕೆ ಪಡೆಯುವವರು ಲಕ್ಕಿ ಡ್ರಾನಲ್ಲಿ ಭಾಗವಹಿಸಬಹುದು. ಮೊದಲ ಬಹುಮಾನವಾಗಿ ರೆಫ್ರಿಜರೇಟರ್, 2ನೇ ಬಹುಮಾನವಾಗಿ ವಾಷಿಂಗ್ ಮಶೀನ್ ಮತ್ತು ಮೂರನೇ ಬಹುಮಾನವಾಗಿ ಎಲ್‍ಇಡಿ ಟಿವಿಗಳನ್ನು ಗೆಲ್ಲಬಹುದು. ಸಮಾಧಾನಕರ ಬಹುಮಾನವಾಗಿ 10ಜನರಿಗೆ ಮಿಕ್ಸರ್-ಗ್ರೈಂಡರ್ ನೀಡಲಾಗುವುದು ಎಂದು ಚಂದ್ರಾಪುರ ನಗರಸಭೆ ಪ್ರಕಟಣೆಯಲ್ಲಿ ತಿಳಿಸಿದೆ. ಚಂದ್ರಾಪುರದಲ್ಲಿ 1.93ಲಕ್ಷ ಜನ ಮೊದಲ ಡೋಸ್, 99000 ಜನ ಎರಡೂ ಡೋಸ್ ಲಸಿಕೆ ಪಡೆದಿದ್ದಾರೆ. ಇದನ್ನೂ ಓದಿ: ಹಿಂದೂ ಪುರಾತನ ದೇವಾಲಯವನ್ನು ಪುನರ್‌ನಿರ್ಮಿಸಲು ಆದೇಶಿದ ಪಾಕ್ ನ್ಯಾಯಮೂರ್ತಿ
ಗದಗ: ಬಿಟ್‍ಕಾಯಿನ್ ಬಗ್ಗೆ ತನಿಖೆ ಆಗಬೇಕು, ತಪ್ಪಿತಸ್ಥರು ಯಾರೇ ಇರಲಿ ಶಿಕ್ಷೆಯಾಗಬೇಕು ಎಂದು ಮಾಜಿ ಡಿಸಿಎಮ್ ಡಾ. ಜಿ ಪರಮೇಶ್ವರ್ ( G Parameshwara)ಆಗ್ರಹಿಸಿದ್ದಾರೆ.
ಗದಗ ನಗರಕ್ಕೆ ಖಾಸಗಿ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಿಎಂ ತಲೆ ದಂಡ ಆಗುತ್ತೆ ಅಂತಾ ನಾವು ಹೇಳಲು ಹೇಗೆ ಸಾಧ್ಯ? ಸಿಎಮ್ ತಲೆದಂಡ ಆಗ್ಬೇಕಾದರೆ ಅವರಾಗಲಿ, ಅವರ ಕುಟುಂಬದವರಾಗಲಿ ಭಾಗಿಯಾಗಿರಬೇಕು. ತನಿಖೆ ಮಾಡಿ ಅವರ ಹೆಸರು ಬಂದರೆ ನಾವು ಹೇಳಬಹುದು. ಅವು ಕೇವಲ ಊಹೆ ಅನ್ನೋ ಮೂಲಕ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಅಸಮ್ಮತಿ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಇಸ್ಪೀಟ್ ಅಡ್ಡೆ ನಡೆಸುತ್ತಿದ್ದ ನಟ ನಾಗಶೌರ್ಯ ತಂದೆ ಬಂಧನ
ಬಿಟ್ ಕಾಯಿನ್ ವಿಚಾರವಾಗಿ ಸಮಗ್ರ ತನಿಖೆಯಾಗಬೇಕು. ಸಾವಿರಾರು ಕೋಟಿ ರೂಪಾಯಿ ಹಗರಣ ಆಗಿರುವ ಬಗ್ಗೆ ಅನುಮಾನವಿದೆ. ಯಾರು ತಪ್ಪಿತಸ್ಥರು ಅವರಿಗೆ ಶಿಕ್ಷೆ ಆಗಬೇಕು. ಹ್ಯಾಕರ್ ಶ್ರೀಕಿ ಜೊತೆ ಯಾರಿದ್ದಾರೆ ಅನ್ನೋದು ಗೊತ್ತಿಲ್ಲ. ಎಲ್ಲವೂ ಊಹಾಪೋಹ, ರಾಜಕಾರಣಿಗಳಿದ್ದಾರೆ, ಅಧಿಕಾರಿಗಳಿದ್ದಾರೆ, ಬ್ಯುಸಿನೆಸ್ ಮ್ಯಾನ್‍ಗಳಿದ್ದಾರೆ ಎನ್ನಲಾಗಿದೆ. ಅವರು ಯಾರೇ ಇರಲಿ ಅವರಿಗೆ ಸಿಕ್ಷೆಯಾಗಲೇಬೇಕು ಎಂದು ಒತ್ತಾಯಿಸಿದರು. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯೆ ಕೊಡಲ್ಲ: ಬೊಮ್ಮಾಯಿ ಗರಂ
ದಲಿತರು ಸಿಎಂ ಆದರೆ ಖುಷಿ ಪಡುತ್ತೇನೆ ಎಂಬ ಸಿದ್ದರಾಮಯ್ಯ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಮೊದಲು ಪಕ್ಷವನ್ನು ಅಧಿಕಾರಕ್ಕೆ ತರುವ ಕೆಲಸ ಆಗಬೇಕು. ನಂತರ ಶಾಸಕಾಂಗ ಸಭೆಯಲ್ಲಿ ಸಿಎಂ ಬಗ್ಗೆ ನಿರ್ಧಾರ ಆಗುತ್ತದೆ.ಯಾರನ್ನು ಸಿಎಂ ಮಾಡಬೇಕು ಎಂದು ಹೈಕಮಾಂಡ್ ತೀರ್ಮಾನ ಮಾಡುತ್ತಾರೆ. ಈಗಲೇ ಸಿಎಂ ಯಾರು ಅಂತಾ ಹೇಳಲು ಸಾಧ್ಯವಿಲ್ಲ ಎಂದಿದ್ದಾರೆ. ಇದನ್ನೂ ಓದಿ:ಬಿಟ್‌ಕಾಯಿನ್ ಹಗರಣದಲ್ಲಿ ಸಿಎಂ ತಲೆದಂಡ ಪಡೆಯಲಿದೆ: ಪ್ರಿಯಾಂಕ್ ಖರ್ಗೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ 25 ಕ್ಯಾಂಡಿಡೆಟ್ ಹಾಕುತ್ತೇವೆ. 25ರಲ್ಲಿ ಕಳೆದ ಬಾರಿ ಮೆಜಾರಿಟಿ ನಾವೇ ಗೆದ್ದಿದ್ದು, ಈ ಬಾರಿಯೂ ಗೆಲ್ಲುತ್ತೇವೆ. ಕೆಲವರು ವಿಧಾನ ಸಭೆಗೆ ಹೊಗ್ತಾರೆ. ಇನ್ನು ಕೆಲವರು ಸಂಸದರಾಗುತ್ತೇವೆ ಅಂತಿದ್ದಾರೆ ಅವರನ್ನು ಹೊರತು ಪಡಿಸಿ ಬೇರೆಯವರಿದ್ದಾರೆ. ಬೇರೆಯವರಿಗೆ ಅವಕಾಶ ಮಾಡಿಕೊಡುತ್ತೇವೆ. ಪ್ರತಿ ಚುನಾವಣೆಯಂತೆ ಈ ಚುನಾವಣೆಯನ್ನೂ ಸೀರಿಯಸ್ಸಾಗೇ ಮಾಡ್ತೀವಿ ಎಂದ್ರು. ಈ ವೇಳೆ ಮಾಜಿ ಸಂಸದ ಐ.ಜಿ ಸನದಿ ಸೇರಿದಂತೆ ಅನೇಕ ಕಾಂಗ್ರೆಸ್ ನಾಯಕರು, ಕಾರ್ಯಕರ್ತರಿದ್ದರು.
ಮುಂಬೈ: ಬಾಲಿವುಡ್ ನಟಿ ಶಿಲ್ಪಾ ಶೆಟ್ಟಿ ಪತಿ ರಾಜ್ ಕುಂದ್ರಾ ಅವರು ಜೈಲಿನಿಂದ ಬಿಡುಗಡೆ ಆದ ನಂತರ ಮೊದಲ ಬಾರಿಗೆ ಪತ್ನಿಯ ಜೊತೆಗೆ ಕಾಣಿಸಿಕೊಳ್ಳುವ ಮೂಲಕವಾಗಿ ಸುದ್ದಿಯಾಗಿದ್ದಾರೆ.
ರಾಜ್ ಕುಂದ್ರಾ ಅವರು ಜೈಲಿನಿಂದ ಬಿಡುಗಡೆಯಾದ ನಂತರ ದಂಪತಿ ಒಟ್ಟಾಗಿ ಕಾಣಿಸಿಕೊಂಡಿರಲಿಲ್ಲ. ಶಿಲ್ಪಾ ಅವರು ಪತಿ ರಾಜ್ ಕುಂದ್ರಾ ಜೊತೆ ಹಿಮಾಚಲ ಪ್ರದೇಶದ ಧರ್ಮಶಾಲಾದ ದೇವಸ್ಥಾನಕ್ಕೆ ತೆರಳಿದ್ದಾರೆ. ಈ ಫೋಟೋ, ಹಾಗೂ ವೀಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಇದನ್ನೂ ಓದಿ:ಬಿಟ್‌ಕಾಯಿನ್ ಹಗರಣದಲ್ಲಿ ಸಿಎಂ ತಲೆದಂಡ ಪಡೆಯಲಿದೆ: ಪ್ರಿಯಾಂಕ್ ಖರ್ಗೆ
ರಾಜ್ ಕುಂದ್ರಾ ಅಶ್ಲೀಲ ಸಿನಿಮಾ ನಿರ್ಮಾಣ ಪ್ರಕರಣದಲ್ಲಿ ಸಿಲುಕಿದ್ದರು. ಇದೀಗ ಜಾಮೀನು ಪಡೆದು ಜೈಲಿನಿಂದ ಹೊರ ಬಂದಿದ್ದಾರೆ. ಈ ಪ್ರಕರಣ ಶಿಲ್ಪಾ ಕುಟುಂಬಕ್ಕೆ ಸಾಕಷ್ಟು ಮುಜುಗರ ತಂದಿತ್ತು. ಪತಿ ಜೊತೆ ಅವರು ಎಂದಿಗೂ ಕಾಣಿಸಿಕೊಂಡಿರಲಿಲ್ಲ. ವಿಚ್ಛೇದನ ಪಡೆಯುತ್ತಾರೆ ಎನ್ನುವ ಸುದ್ದಿ ಹರಿದಾಡಿತ್ತು. ಆದರೆ ಇದನ್ನು ಶಿಲ್ಪಾ ಸುಳ್ಳು ಮಾಡಿದ್ದಾರೆ. ಪತಿ ರಾಜ್ ಕುಂದ್ರಾ ಜೊತೆಗೆ ಅವರು ಇದೇ ಮೊದಲ ಬಾರಿಗೆ ಒಟ್ಟಾಗಿ ಕಾಣಿಸಿಕೊಂಡಿದ್ದಾರೆ. ಈ ಮೂಲಕ ಎಲ್ಲಾ ವದಂತಿಗೆ ಬ್ರೇಕ್ ಹಾಕಿದ್ದಾರೆ. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯೆ ಕೊಡಲ್ಲ: ಬೊಮ್ಮಾಯಿ ಗರಂ
ಆರಂಭದಲ್ಲಿ ಶಿಲ್ಪಾ ಸೋಶಿಯಲ್ ಮೀಡಿಯಾದಿಂದ ಕೆಲ ದಿನ ಶಿಲ್ಪಾ ಶೆಟ್ಟಿ ದೂರ ಉಳಿದಿದ್ದರು. ಕೆಲವು ದಿನಗಳ ನಂತರ ಫಿಟ್‍ನೆಸ್ ವೀಡಿಯೋಗಳು ಮತ್ತು ಕುಟುಂಬ ಫೋಟೋವನ್ನು ಹಂಚಿಕೊಳ್ಳುವ ಮೂಲಕವಾಗಿ ಮತ್ತೆ ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ.
ಚೆನ್ನೈ: ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಆಕೆಯ ಪೋಷಕರು ಒಪ್ಪದ ಕಾರಣ ತನ್ನ ಪ್ರೇಯಸಿಯ ಕತ್ತು ಸೀಳಿ, ಆತ್ಮಹತ್ಯೆ ಮಾಡಿಕೊಳ್ಳಲು ಯತ್ನಿಸಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ.
ಅಜಿತ್ ಮತ್ತು ಯುವತಿ ಮೊಬೈಲ್ ಫೋನ್ ರಿಟೇಲ್ ಶೋರೂಮ್‍ನಲ್ಲಿ ಒಟ್ಟಿಗೆ ಕೆಲಸ ಮಾಡುತ್ತಿದ್ದರು, ಈ ಸಂದರ್ಭದಲ್ಲಿ ಇಬ್ಬರ ನಡುವೆ ಪ್ರಿತಿಯಾಗಿದೆ. ಆ ಯುವತಿಯ ಪೋಷಕರು ಇವರಿಬ್ಬರ ಸಂಬಂಧವನ್ನು ಒಪ್ಪದೆ ಬೇರೊಬ್ಬ ಪುರುಷನೊಂದಿಗೆ ಆಕೆಯ ಮದುವೆಯನ್ನು ಏರ್ಪಡಿಸಿದ್ದರು. ಇದರಿಂದ ಸಿಟ್ಟಿಗೆದ್ದ ಯುವಕ ಈ ಕೃತ್ಯ ಎಸಗಿದ್ದಾನೆ.
ನಡೆದಿದ್ದೇನು?: ಅಜಿತ್ ತನ್ನ ಪ್ರೇಯಸಿಯನ್ನು ಬೇರೆ ಯುವಕನ ಜೊತೆಗೆ ಮದುವೆ ಮಾಡುತ್ತಾರೆ ಎನ್ನುವ ವಿಚಾರವಾಗಿ ಮನನೊಂದಿದ್ದನು. ಒಂದು ದಿನ ಪ್ರೇಯಸಿಯ ಮನೆಗೆ ಹೋಗಿ ಆಕೆಗೆ ತನ್ನ ಪ್ಲಾನ್ ಹೇಳಿದ್ದಾನೆ. ಆಗ ಆಕೆ ಸಾಯಲು ಒಪ್ಪಿಲ್ಲ. ಇದರಿಂದ ತಾನೇ ಚಾಕುವಿನಿಂದ ಆಕೆಯ ಕುತ್ತಿಗೆ ಸೀಳಿ, ಬಳಿಕ ತಾನು ಕೂಡ ನೇಣು ಬಿಗಿದುಕೊಂಡು ಸಾಯಲು ಯತ್ನಿಸಿದ್ದಾನೆ. ಇದನ್ನೂ ಓದಿ:ಬಿಟ್‌ಕಾಯಿನ್ ಹಗರಣದಲ್ಲಿ ಸಿಎಂ ತಲೆದಂಡ ಪಡೆಯಲಿದೆ: ಪ್ರಿಯಾಂಕ್ ಖರ್ಗೆ
ರೂಮಿನಲ್ಲಿ ಗಲಾಟೆ ಕೇಳಿ ಬಾಗಿಲು ಒಡೆದು ಒಳಗೆ ಬಂದ ಆಕೆಯ ಮನೆಯವರಿಗೆ ರಕ್ತದ ಮಡುವಿನಲ್ಲಿ ಬಿದ್ದು ಒದ್ದಾಡುತ್ತಿದ್ದ ತಮ್ಮ ಮಗಳು ಹಾಗೂ ಅಜಿತ್ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದನ್ನು ನೋಡಿದ್ದಾರೆ. ತಕ್ಷಣ ಕಾರಿನಲ್ಲಿ ಆಸ್ಪತ್ರೆಗೆ ಕಳುಹಿಸಿದ್ದಾರೆ. ಯುವತಿಯ ಮನೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯೆ ಕೊಡಲ್ಲ: ಬೊಮ್ಮಾಯಿ ಗರಂ
ಮನೆಗೆ ಬಂದ ಅಜಿತ್ ನೀವು ಯಾರಾದರೂ ನಮ್ಮಿಬ್ಬರ ಮದುವೆ ನಿಲ್ಲಿಸಲು ಪ್ರಯತ್ನಿಸಿದರೆ ಎಲ್ಲರನ್ನೂ ಕೊಲ್ಲುವುದಾಗಿ ಅಜಿತ್ ಬೆದರಿಸಿದ್ದ. ನಂತರ ನಮ್ಮ ಮಗಳ ರೂಮಿಗೆ ಹೋಗಿ ಬಾಗಿಲು ಹಾಕಿಕೊಂಡಿದ್ದ ಎಂದು ಯುವತಿಯ ಪೋಷಕರು ದೂರಿನಲ್ಲಿ ತಿಳಿಸಿದ್ದಾರೆ. ಆಸ್ಪತ್ರೆಯಿಂದ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆದ ನಂತರ ಅಜಿತ್ ಬಂಧಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.
ಬೆಂಗಳೂರು: ಬಿಟ್ ಕಾಯಿನ್ ಹಗರಣ ಸಂಬಂಧ ಪ್ರಿಯಾಂಕ್ ಖರ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿರುದ್ಧ ಆರೋಪಿಸಿದ್ದರು. ಖರ್ಗೆ ಹೇಳಿಕೆಯನ್ನು ಮಾಧ್ಯಮಗಳು ಸಿಎಂ ಮುಂದೆ ಪ್ರಸ್ತಾಪಿಸಿದಾಗ ಬಿಟ್ ಕಾಯಿನ್ ಹಗರಣದಲ್ಲಿ ಕಾಂಗ್ರೆಸ್ ನಾಯಕರೂ ಇದ್ದಾರೆ ಎಂದು ಹೇಳುವ ಮೂಲಕ ಖರ್ಗೆ ಹೇಳಿಕೆಗೆ ಪ್ರತಿಕ್ರಿಯೆ ಕೊಡಲ್ಲ ಎಂದು ಬೊಮ್ಮಾಯಿ ಹೇಳಿದ್ದಾರೆ. ಈ ಹೇಳಿಕೆ ವಿಚಾರವಾಗಿ ಕಾಂಗ್ರೆಸ್ ಪಕ್ಷದ ನಾಯಕ ಸಿದ್ದರಾಮಯ್ಯ ಅನುಮಾನ ವ್ಯಕ್ತಪಡಿಸಿದ್ದಾರೆ.
ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಟ್‍ಕಾಯಿನ್ ಹಗರಣದಲ್ಲಿ ಕಾಂಗ್ರೆಸ್, ಜೆಡಿಎಸ್, ಬಿಜೆಪಿ ಯಾರೇ ಇರಲಿ ಕ್ರಮ ಕೈಗೊಳ್ಳಲಿ ತಪ್ಪಿಸಿಕೊಳ್ಳೋಕೆ ಎಸ್ಕೆಪಿಂಗ್ ಉತ್ತರ ಕೊಡಬಾರದು, ಸಿಎಂ ರೆಸ್ಪಾನ್ಸಿಬಲ್ ಉತ್ತರ ಕೊಡಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ:ಬಿಟ್‌ಕಾಯಿನ್ ಹಗರಣದಲ್ಲಿ ಸಿಎಂ ತಲೆದಂಡ ಪಡೆಯಲಿದೆ: ಪ್ರಿಯಾಂಕ್ ಖರ್ಗೆ
ಬಿಟ್ಕಾಯಿನ್ ಹಗರಣದಲ್ಲಿ ಯಾರೇ ಭಾಗಿಯಾಗಿರಲಿ ಅದು ಬಿಜೆಪಿ ಅವರೇ ಆಗಲಿ, ಕಾಂಗ್ರೆಸ್ ಅವರೇ ಅಗಲಿ ಮೊದಲು ಬುಕ್ ಮಾಡಲಿ. ಹೆಸರು ಹೇಳಲಿ, ಸರ್ಕಾರ ಅವರದ್ದಾಗಿದೆ. ತಪ್ಪಿಸಿಕೊಳ್ಳಲು ಎಸ್ಕೇಪ್ ಹೇಳಿಕೆ ನೀಡಬಾರದು. ಹೆಸರು ಹೇಳಲು ಆಗಿಲ್ಲ ಎಂದರೆ ಸರ್ಕಾರ ಬಿಟ್ಟು ಕೊಡಲಿ. ನಂತರ ನಾವು ಹೇಳುತ್ತೇವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಪ್ರತಿಕ್ರಿಯೆ ಕೊಡಲ್ಲ: ಬೊಮ್ಮಾಯಿ ಗರಂ
ಬಸವರಾಜ ಬೊಮ್ಮಾಯಿ ಈ ರೀತಿ ಮಾತನಾಡುವುದು ನೋಡಿದರೆ ನನಗೆ ಅನುಮಾನ ಬರುತ್ತದೆ. ಅವರೇ ಸಿಕ್ಕಿಹಾಕಿಕೊಂಡಿರುವಾಗೇ ನಡೆದುಕೊಳ್ಳುತ್ತಿದ್ದಾರೆ. ಆದರೆ ನಾನು ಎಲ್ಲೂ ಬೊಮ್ಮಾಯಿ ಅವರ ಹೆಸರು ಹೇಳಿಲ್ಲ. ಆದರೂ ಅವರ ಹೇಳಿಕೆಗಳು ನೋಡುತ್ತಿದ್ದರೇ ಅನುಮಾನ ಬರುತ್ತಿದೆ ಎಂದು ವಾಗ್ದಾಳಿ ಮಾಡಿದ್ದಾರೆ. ಇದನ್ನೂ ಓದಿ: ದೆಹಲಿ ವಿವಿ ಪ್ರೊಫೆಸರ್ ಪತ್ನಿಯನ್ನು ಕತ್ತು ಹಿಸುಕಿ ಕೊಂದ ಕಾರು ಚಾಲಕ!
ಪ್ರಿಯಾಂಕ್ ಖರ್ಗೆ ಹೇಳಿದ್ದೇನು..?: ಸದ್ಯ ರಾಜ್ಯದಲ್ಲಿ ಬಿಟ್ ಕಾಯಿನ್, ಕರೆನ್ಸಿ ಸೇರಿದಂತೆ ಹಲವು ಅಕ್ರಮ ದಂಧೆಗಳು ಬಿಂದಾಸಾಗಿ ನಡೆಯುತ್ತಿವೆ. ಇದರಲ್ಲಿ ಸಾವಿರಾರು ಕೋಟಿ ರೂಪಾಯಿಯ ವ್ಯವಹಾರ ಈಗಾಗಲೇ ಆಗಿದೆ. ಅಧಿಕಾರಿಗಳು ಹಾಗೂ ಪ್ರಭಾವಿ ನಾಯಕರು ಸಪೋರ್ಟ್ ನಿಂದ ನಡೆಯುತ್ತಿದೆ ಎಂದು ಪ್ರಿಯಾಂಕ್ ಖರ್ಗೆ ಕಲಬುರಗಿಯಲ್ಲಿ ಹೇಳಿದ್ದಾರೆ.
ಪಾರದರ್ಶಕ ತನಿಖೆ ನಡೆಸಿದರೆ ಈ ಹಗರಣದಲ್ಲಿ ಯಾರು ಭಾಗವಹಿಸಿದ್ದಾರೆ ಎನ್ನುವುದು ಒಂದೇ ಒಂದು ತಿಂಗಳಲ್ಲಿ ಹೊರಬರಲಿದೆ. ಆದರೆ ಸರ್ಕಾರಕ್ಕೆ ಈ ಬಗ್ಗೆ ಆಸಕ್ತಿ ಇದೆಯಾ ಎನ್ನುವುದು ಮುಖ್ಯವಾಗಿದೆ. ಈ ಹಗರಣದಲ್ಲಿ ಕಾಂಗ್ರೆಸ್, ಬಿಜೆಪಿ ಯಾವುದೇ ನಾಯಕರು ಇರಲಿ ಮೊದಲು ತನಿಖೆ ನಡೆಸಿ ಕ್ರಮ ಜರುಗಿಸಬೇಕಾಗಿದೆ. ಆದರೆ ಪ್ರಮುಖ ಆರೋಪಿ ಶ್ರೀಕಿಯನ್ನು ವಿಚಾರಣೆಗೆ ಬಿಡುತ್ತಿಲ್ಲ, ಆತನನ್ನು 10 ದಿನ ವಿಚಾರಣೆ ನಡೆಸಿದರೆ ಈ ಹಗರಣ ಸಂಪೂರ್ಣ ಹೊರಬರುತ್ತದೆ ಎಂದು ಸರ್ಕಾರವನ್ನು ಆಗ್ರಹಿಸಿದ್ದಾರೆ.
ಮುಂಬೈ: ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಬರೋಬ್ಬರಿ 2.1 ಕೋಟಿ ಮೊತ್ತದ ಎಂಗೇಜ್‍ಮೆಂಟ್ ರಿಂಗ್ ಹಾಗೂ ಅವರಿಗೆ ಸ್ವರ್ಗ ಎಂದು ಅನಿಸುವ ಸ್ಥಳದ ಕುರಿತಾಗಿ ಕುತೂಹಲಕರ ವಿಚಾರ ಹಂಚಿಕೊಂಡಿದ್ದಾರೆ.
ಇತ್ತೀಚೆಗಷ್ಟೇ ಲಾಸ್ ಏಂಜಲೀಸ್‍ನಲ್ಲಿ ಪತಿ ನಿಕ್ ಜೋನಾಸ್ ಜೊತೆ ಭರ್ಜರಿಯಾಗಿ ದೀಪಾವಳಿಯನ್ನು ಆಚರಿಸಿದ್ದ ಪ್ರಿಯಾಂಕಾ, ಪ್ರಸ್ತುತ ಕೆಲಸದ ಕಾರಣಕ್ಕೆ ದುಬೈಗೆ ತೆರಳಿದ್ದಾರೆ. ಅಲ್ಲಿ ಮಾಧ್ಯಮವೊಂದಕ್ಕೆ ಸಂದರ್ಶನ ನೀಡಿರುವ ಅವರು, ತಮ್ಮ ವೈಯಕ್ತಿಯ ಜೀವನದ ಹಲವು ಕುತೂಹಲಕರ ವಿಚಾರಗಳನ್ನು ತೆರೆದಿಟ್ಟಿದ್ದಾರೆ. ಸಂದರ್ಶನದಲ್ಲಿ ಇದುವರೆಗೆ ಸ್ವೀಕರಿಸಿದ ಅದ್ಭುತವಾದ ಆಭರಣ ಯಾವುದು ಎಂಬ ಪ್ರಶ್ನೆಗೆ ಪ್ರಿಯಾಂಕಾ ತಮಾಷೆ ಮಾಡುತ್ತಲೇ ಉತ್ತರ ಹೇಳಿದ್ದಾರೆ. ಇದನ್ನೂ ಓದಿ: ಅಪ್ಪು ಸರ್ ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ತಿದ್ದೇವೆ: ರಾಧಿಕಾ ಪಂಡಿತ್
ನನಗೆ ನಿಶ್ಚಿತಾರ್ಥದ ಉಂಗುರ ಬಹಳ ವಿಶೇಷವಾದದ್ದು. ಅದು ನನಗೆ ಬಹಳ ಅನಿರೀಕ್ಷಿತವಾಗಿತ್ತು. ಜೊತೆಗೆ ಜೀವನದ ವಿಶೇಷಗಳಿಗೆಯ ನೆನಪಾಗಿದೆ. ಆದ್ದರಿಂದ ಅದು ತನಗೆ ಬಹಳ ಅತ್ಯಮೂಲ್ಯವಾದದ್ದಾಗಿದೆ. ಇದೇ ವೇಳೆ ನಿಮಗೆ ಯಾವ ಸ್ಥಳ ಸ್ವರ್ಗ ಎಂದೆನಿಸುತ್ತದೆ ಎಂಬ ಪ್ರಶ್ನೆಗೆ, ತಮ್ಮ ಮನೆಯೇ ಸ್ವರ್ಗ ಎಂದು ಪ್ರತಿಕ್ರಿಯೆ ನೀಡಿದ್ದಾರೆ. ನನ್ನ ನೆಚ್ಚಿನವರ ಜೊತೆ ಇರುವುದು, ಮನೆಯಲ್ಲಿ ಇರುವುದು ನನಗೆ ಸ್ವರ್ಗದ ರೀತಿ ಭಾಸವಾಗುತ್ತದೆ ಎಂದು ಪ್ರಿಯಾಂಕಾ ತಿಳಿಸಿದ್ದಾರೆ.
ನಿಕ್ ಹಾಗೂ ಪ್ರಿಯಾಂಕಾ 2018ರಲ್ಲಿ ದಾಂಪತ್ಯಕ್ಕೆ ಕಾಲಿರಿಸಿದ್ದರು. ನಿಕ್ ರೇಡಿಯೋವೊಂದಕ್ಕೆ ಸಂದರ್ಶನ ನೀಡುತ್ತಾ, ಪ್ರಿಯಾಂಕಾಗೆ ನೀಡಿದ್ದ ಉಂಗುರದ ಬಗ್ಗೆ ಪ್ರಸ್ತಾಪಿಸಿದ್ದರು. ಅದನ್ನು ನೀಡಲು ತಮ್ಮ ಸೋದರರು ಬಹಳ ಸಹಾಯ ಮಾಡಿದ್ದರು ಎಂದು ಅವರು ತಿಳಿಸಿದ್ದರು. ಆ ಉಂಗುರದ ಬೆಲೆ ಸುಮಾರು 2.1 ಕೋಟಿ ರೂಪಾಯಿ ಎಂದು ಸುದ್ದಿಯಾಗಿದೆ.
– ಅಪ್ಪು ಕುಟುಂಬ, ಅಭಿಮಾನಿಗಳಿಗೆ ಇರುವ ನೋವು ನಮ್ಮ ಕುಟುಂಬಕ್ಕೂ ಆಗಿದೆ
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿಕೆಯ ದುಃಖವನ್ನು ಸ್ಯಾಂಡಲ್‍ವುಡ್ ನಟಿ ರಾಧಿಕಾ ಪಂಡಿತ್ 12 ದಿನಗಳ ನಂತರ ಸೋಶಿಯಲ್ ಮೀಡಿಯಾದಲ್ಲಿ ತೋಡಿಕೊಂಡಿದ್ದರು, ಆದರೆ ಈ ಪೋಸ್ಟ್ ಮಾಡುತ್ತಿದ್ದಂತೆ ಬಂದಿರುವ ಕಾಮೆಂಟ್‍ಗಳಿಗೆ ರಾಧಿಕಾ ಖಡಕ್ ಆಗಿ ಉತ್ತರ ಕೊಟ್ಟಿದ್ದಾರೆ.
ಅಪ್ಪು ಸರ್ ನೀವು ಇನ್ನು ಮುಂದೆ ಇಲ್ಲ ಎಂಬುದನ್ನು ಇನ್ನೂ ನಮ್ಮ ಮನಸ್ಸು ಒಪ್ಪಿಕೊಳ್ಳುತ್ತಿಲ್ಲ. ಇದು ನಂಬಲಾಗದ ವಿಷಯವಾಗಿದೆ. ನೀವು ಇಲ್ಲದ ಇಂಡಸ್ಟ್ರಿ ಬರಡಾಗಿದೆ. ನಿಮ್ಮೊಂದಿಗೆ ಕೆಲಸ ಮಾಡುವ ಅವಕಾಶ ನೀಡಿದ್ದಕ್ಕಾಗಿ ಧನ್ಯವಾದಗಳು. ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇವೆ ಎಂದು ಬರೆದುಕೊಂಡು ಅಪ್ಪು ಜೊತೆಗೆ ಇರುವ ಕೆಲವು ಫೋಟೋವನ್ನು ಶೇರ್ ಮಾಡಿ ಬೇಸರ ವ್ಯಕ್ತಪಡಿಸಿದ್ದರು. ಇದನ್ನು ಗಮನಿಸಿದ ನೆಟ್ಟಿಗರು, ಅಭಿಮಾನಿಗಳು ಆದರೆ ನೀವು ಯಾಕೆ ಅಪ್ಪು ಅಂತಿಮ ದರ್ಶನ ಮಾಡಲು ಬಂದಿಲ್ಲ ಎಂದು ಪ್ರಶ್ನಿಸಿ ಕಾಮೆಂಟ್ ಮಾಡುತ್ತಿದ್ದರು. ಇದಕ್ಕೆ ರಾಧಿಕಾ ಒಂದೇ ಸಂದೇಶದಲ್ಲಿ ಉತ್ತರಿಸಿದ್ದಾರೆ.
ಅಭಿಮಾನಿ ಪ್ರಶ್ನೆಗೆ ರಾಧಿಕಾ ಉತ್ತರ: ಜೀವನದಲ್ಲಿ ಆದಷ್ಟು ಒಬ್ಬರ ಮೇಲೆ ಕೋಪ ಇದ್ದರು ಪ್ರೀತಿ ಹಂಚಿ, ತಾಳ್ಮೆಯಿರಲಿ. ನಾನು ಅಂತಿಮ ದರ್ಶನ ಪಡೆದೆನೋ ಇಲ್ವೋ ಎಂಬುದು ಅವರ ಕುಟುಂಬಕ್ಕೆ ತಿಳಿದಿದೆ, ನಮಗೆ ತಿಳಿದಿದೆ. ಕ್ಯಾಮೆರಾ ಮುಂದೆ ಬಂದು ಮಾತನಾಡುವ ಶಕ್ತಿ ನನಗಿರಲಿಲ್ಲ. ಕ್ಯಾಮೆರಾ ಮುಂದೆ ಬಂದು ಮಾತನಾಡದೆ ಇರುವುದು ದೊಡ್ಡ ತಪ್ಪು ಎಂದು ನಾನು ಭಾವಿಸಲಿರಲಿಲ್ಲ. ಅವರ ಮೇಲಿರುವ ಪ್ರೀತಿಗೆ ನೀವು ಹೀಗೆ ಮಾತನಾಡುತ್ತಿರುವುದು ಸಹಜ. ಅಪ್ಪು ಸರ್ ಅಗಲಿಕೆ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಾದ ನಿಮಗೆ ಎಷ್ಟು ನೋವು ನೀಡುತ್ತಿದೆಯೋ, ಅಷ್ಟೇ ನೋವು ನನಗೂ ನಮ್ಮ ಕುಟುಂಬಕ್ಕೂ ಆಗಿದೆ. ನಮ್ಮೆಲ್ಲರ ನೆಚ್ಚಿನ ಅಪ್ಪು ಸರ್ ಅಗಲಿಕೆ ಎಂದೆಂದಿಗೂ ನಮ್ನನ್ನು ಕಾಡುತ್ತಲೇ ಇರುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಅಪ್ಪು ಸರ್ ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ತಿದ್ದೇವೆ: ರಾಧಿಕಾ ಪಂಡಿತ್
ಅಕ್ಟೋಬರ್ 29ರಂದು ಶುಕ್ರವಾರ ಬೆಳಗ್ಗೆ ಮನೆಯಲ್ಲಿ ವರ್ಕೌಟ್ ಮಾಡಿದ ಸಂದರ್ಭದಲ್ಲಿ ಅಪ್ಪುಗೆ ಆಯಾಸ ಕಾಣಿಸಿಕೊಂಡಿತು. ಹಾಗೆಯೇ ಸ್ಟೀಮ್ ಬಾತ್ ಮಾಡಿಕೊಂಡು ಪತ್ನಿ ಜೊತೆ ಸ್ಥಳೀಯ ರಮಣಶ್ರೀ ಆಸ್ಪತ್ರೆಗೆ ತೆರಳಿದ್ದಾರೆ. ಅಲ್ಲಿ ಇಸಿಜಿ ಮಾಡಿಸಿಕೊಂಡು ಇನ್ನೇನು ಹೊರಡುವಷ್ಟರಲ್ಲಿ ಅಲ್ಲಿಯೇ ಕುಸಿದುಬಿದ್ದಿದ್ದರು. ಕೂಡಲೇ ಅವರನ್ನು ಕಾರಿನಲ್ಲಿ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಾದರೂ, ಅದು ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದರು. ಇದನ್ನೂ ಓದಿ: ಈಡೇರಿತು ಕನ್ನಡಿಗರ ಕಣ್ಮಣಿಯ ಮಹದಾಸೆ – 40 ಸಾವಿರ ಅಭಿಮಾನಿಗಳಿಗೆ ಒಟ್ಟಿಗೇ ಊಟ!
ಕಂಠೀರವ ಸ್ಟುಡಿಯೋದಲ್ಲಿ ಅಂತಿಮ ವಿಧಿ ವಿಧಾನಗಳ ಮೂಲಕವಾಗಿ ಅಪ್ಪು ಅಂತ್ಯಕ್ರಿಯೆ ಮಾಡಲಾಯಿತ್ತು. ಅಪ್ಪು ಅವರ ಸಮಾಧಿ ನೋಡಲು ಸಾಗರೋಪಾದಿಯಲ್ಲಿ ಅಭಿಮಾನಿಗಳ ಸಾಗರವೇ ಹರಿದು ಬರುತ್ತಿದೆ. ನಿನ್ನೆ ಅವರ ಸ್ಮರಣಾರ್ಥಕವಾಗಿ ರಾಜ್ ಕುಟುಂಬಸ್ಥರು ಅಭಿಮಾನಿಗಳಿಗೆ ಅನ್ನಸಂತರ್ಪಣೆ ಮಾಡಿದ್ದಾರೆ.
ಅಪ್ಪು ಅಗಲಿಕೆಯ ನೋವನ್ನು ಅಭಿಮಾನಿಗಳು, ಸ್ಯಾಂಡಲ್‍ವುಡ್, ಕಲಾವಿದರು, ಕುಟುಂಬದವರಿಗೆ ಮರೆಯಲು ಸಾಧ್ಯವಾಗುತ್ತಿಲ್ಲ. ಇದೀಗ ರಾಧಿಕಾ ಪಂಡಿತ್ ಅವರು ತಮ್ಮ ನೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ತಾವು ಮಿಸ್ ಮಾಡಿಕೊಳ್ಳುತ್ತಿರುವುದಾಗಿ ಕಾಮೆಂಟ್ ಮಾಡುತ್ತಿದ್ದಾರೆ.
ಕಲಬುರಗಿ: ಬಿಟ್‌ಕಾಯಿನ್ ಹಗರಣದಲ್ಲಿ ರಾಜ್ಯದ ಹಲವು ಜನಪ್ರತಿನಿಧಿಗಳು, ಅಧಿಕಾರಿಗಳು ನೇರವಾಗಿ ಶಾಮೀಲಾಗಿದ್ದಾರೆ. ಒಂದು ವೇಳೆ ಇದರ ತನಿಖೆ ನಡೆಸಿದರೆ ಕರ್ನಾಟಕದ ಮುಖ್ಯಮಂತ್ರಿಯನ್ನು ಖಂಡಿತವಾಗಿ ಬಲಿ ತೆಗೆದುಕೊಳ್ಳಲಿದೆ ಎಂದು ಶಾಸಕರಾದ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.
ಕಲಬುರಗಿ ನಗರದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸದ್ಯ ರಾಜ್ಯದಲ್ಲಿ ಬಿಟ್‌ಕಾಯಿನ್, ಕರೆನ್ಸಿ ಸೇರಿದಂತೆ ಹಲವು ಅಕ್ರಮ ದಂಧೆಗಳು ಬಿಂದಾಸಾಗಿ ನಡೆಯುತ್ತಿವೆ. ಇದರಲ್ಲಿ ಸಾವಿರಾರು ಕೋಟಿ ರೂಪಾಯಿಯ ವ್ಯವಹಾರ ಈಗಾಗಲೇ ಆಗಿದೆ. ಅಧಿಕಾರಿಗಳು ಹಾಗೂ ಪ್ರಭಾವಿ ನಾಯಕರು ಸಪೋರ್ಟ್‌ನಿಂದ ನಡೆಯುತ್ತಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಹೊತ್ತಿ ಉರಿದ ಬಸ್- 12 ಮಂದಿ ಸಜೀವ ದಹನ
ಪಾರದರ್ಶಕ ತನಿಖೆ ನಡೆಸಿದರೆ ಈ ಹಗರಣದಲ್ಲಿ ಯಾರು ಭಾಗವಹಿಸಿದ್ದಾರೆ ಎನ್ನುವುದು ಒಂದೇ ಒಂದು ತಿಂಗಳಲ್ಲಿ ಹೊರಬರಲಿದೆ. ಆದರೆ ಸರ್ಕಾರಕ್ಕೆ ಈ ಬಗ್ಗೆ ಆಸಕ್ತಿ ಇದೆಯಾ ಎನ್ನುವುದು ಮುಖ್ಯ ವಾಗಿದೆ. ಈ ಹಗರಣದಲ್ಲಿ ಕಾಂಗ್ರೆಸ್ ಬಿಜೆಪಿ ಯಾವುದೇ ನಾಯಕರು ಇರಲಿ ಮೊದಲು ತನಿಖೆ ನಡೆಸಿ ಕ್ರಮ ಜರುಗಿಸಬೇಕಾಗಿದೆ. ಆದರೆ ಪ್ರಮುಖ ಆರೋಪಿ ಶ್ರೀಕಿಯನ್ನು ವಿಚಾರಣೆಗೆ ಬಿಡುತ್ತಿಲ್ಲ, ಆತನನ್ನು 10 ದಿನ ವಿಚಾರಣೆ ನಡೆಸಿದರೆ ಈ ಹಗರಣ ಸಂಪೂರ್ಣ ಹೊರಬರುತ್ತದೆ ಎಂದು ಪ್ರಿಯಾಂಕ್ ಖರ್ಗೆ ಸರ್ಕಾರವನ್ನು ಆಗ್ರಹಿಸಿದ್ದಾರೆ. ಇದನ್ನೂ ಓದಿ: ನ.11 ಕ್ಕೆ ರಾಜ್ಯಾದ್ಯಂತ ಒನಕೆ ಓಬವ್ವ ಜಯಂತಿ ಆಚರಣೆಗೆ ಸರ್ಕಾರ ಆದೇಶ
ಈ ಸಂದರ್ಭದಲ್ಲಿ ಮಾಜಿ ಸಚಿವರಾದ ಡಾ ಶರಣಪ್ರಕಾಶ್ ಪಾಟೀಲ್, ಡಿಸಿಸಿ ಅಧ್ಯಕ್ಷರಾದ ಜಗದೇವ ಗುತ್ತೇದಾರ, ಮಾಜಿ ಎಂ ಎಲ್ ಸಿ ತಿಪ್ಪಣ್ಣಪ್ಪ ಕಮಕನೂರು, ಮಲ್ಲಿಕಾರ್ಜುನ, ಎಪಿಎಂಸಿ ಅಧ್ಯಕ್ಷರಾದ ಸಿದ್ದು ಪಾಟೀಲ್, ಈರಣ್ಣ ಝಳಕಿ ಮತ್ತಿತರು ಇದ್ದರು.
ಜೈಪುರ್: ಖಾಸಗಿ ಬಸ್ ಮತ್ತು ಟ್ಯಾಂಕರ್ ಡಿಕ್ಕಿಯಾದ ಪರಿಣಾಮ ಬಸ್‍ಗೆ ಬೆಂಕಿ ಹೊತ್ತಿಕೊಂಡು ಸುಮಾರು 12 ಮಂದಿ ಸಜೀವ ದಹನವಾಗಿರುವ ಘಟನೆ ರಾಜಸ್ಥಾನದ ಬಾರ್ಮರ್ ಜೋಧ್‍ಪುರ ಹೆದ್ದಾರಿಯಲ್ಲಿ ನಡೆದಿದೆ.
ಈ ಬಸ್ ಬಲೋತ್ರಾದಿಂದ ಬೆಳಗ್ಗೆ 9.55 ಸುಮಾರಿಗೆ ಹೊರಟಿತ್ತು. ಟ್ಯಾಂಕರ್ ಎದುರಿನಿಂದ ಬಂದು ಡಿಕ್ಕಿಹೊಡೆದಿದೆ. ಟ್ಯಾಂಕರ್ ಚಾಲಕ ರಸ್ತೆಯ ತಪ್ಪಾದ ಬದಿಯಲ್ಲಿ ವಾಹನ ಚಲಾಯಿಸಿಕೊಂಡು ಬಂದಿದ್ದೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ. ಟ್ಯಾಂಕರ್ ಡಿಕ್ಕಿಯಾಗುತ್ತಿದ್ದಂತೆ ಒಮ್ಮೆಲೇ ಬಸ್‍ಗೆ ಬೆಂಕಿ ತಗುಲಿದೆ. ಈ ಹೆದ್ದಾರಿಯಲ್ಲಿ ಸಿಕ್ಕಾಪಟೆ ಟ್ರಾಫಿಕ್ ಜಾಮ್ ಆಗಿದೆ. ಇದನ್ನೂ ಓದಿ: ನ.11 ಕ್ಕೆ ರಾಜ್ಯಾದ್ಯಂತ ಒನಕೆ ಓಬವ್ವ ಜಯಂತಿ ಆಚರಣೆಗೆ ಸರ್ಕಾರ ಆದೇಶ
ಸ್ಥಳದಲ್ಲಿ ಅನೇಕ ಪೊಲೀಸ್ ಸಿಬ್ಬಂದಿಯಿದ್ದು, ರಕ್ಷಣಾ ಕಾರ್ಯಾಚರಣೆಯೂ ನಡೆಯುತ್ತಿದೆ. ಪಚ್ಪದ್ರ ಶಾಸಕ ಮದನ್ ಪ್ರಜಾಪತ್, ಉಸ್ತುವಾರಿ ಸಚಿವ ಸುಖರಾಮ್ ವಿಷ್ಣೋಯ್ ಇನ್ನಿತರ ಜನಪ್ರತಿನಿಧಿಗಳು ಸ್ಥಳಕ್ಕೆ ಭೇಟಿಕೊಟ್ಟು ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ: ಹಾಟ್ ಬೆಡಗಿ ಪೂನಂ ಪಾಂಡೆ ಆಸ್ಪತ್ರೆಗೆ ದಾಖಲು
बाड़मेर में हुई बस-ट्रक दुर्घटना के संबंध में जिला कलेक्टर, बाड़मेर से फोन पर वार्ता कर राहत-बचाव कार्यों के संबंध में निर्देशित किया है। घायलों का बेहतर से बेहतर इलाज सुनिश्चित किया जाएगा।
ಬಾರ್ಮರ್ ಜಿಲ್ಲಾಧಿಕಾರಿಯೊಟ್ಟಿಗೆ ಮಾತನಾಡಿದ್ದೇನೆ. ರಕ್ಷಣಾ ಕಾರ್ಯಾಚರಣೆ ಕುರಿತಾಗಿ ಅವರಿಗೆ ನಿರ್ದೇಶನ ನೀಡಲಾಗಿದೆ. ಗಾಯಾಳುಗಳಿಗೆ ಚಿಕಿತ್ಸೆ ನೀಡಲು ಎಲ್ಲ ವ್ಯವಸ್ಥೆ ಮಾಡಲಾಗುವುದು. ಅಪಘಾತದಲ್ಲಿ 12 ಮಂದಿ ಮೃತಪವರಿಗೆ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸಂತಾಪ ಸೂಚಿಸಿ ಟ್ವೀಟ್ ಮಾಡಿದ್ದಾರೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಟ್ವಿಟ್ಟರ್‌ನಲ್ಲಿ ಅತ್ಯಂತ ಪ್ರಭಾವಿಗಳ ಪಟ್ಟಿಯಲ್ಲಿ 2ನೇ ಸ್ಥಾನ ಪಡೆದುಕೊಂಡಿದ್ದಾರೆ.
ಟ್ವಿಟ್ಟರ್‌ನಲ್ಲಿ ಈ ವರ್ಷದ 50 ಅತ್ಯಂತ ಪ್ರಭಾವಿ ವ್ಯಕ್ತಿಗಳ ಸಾಲಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಎರಡನೇ ಸ್ಥಾನದಲ್ಲಿದ್ದಾರೆ ಎಂದು ಬ್ರಾಂಡ್‌ವಾಚ್ ಕಂಪನಿ ತಿಳಿಸಿದೆ. ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಅವರು 35ನೇ ಸ್ಥಾನ ಪಡೆದಿದ್ದಾರೆ. ಇದನ್ನೂ ಓದಿ: ಅಪ್ಪು ಸರ್ ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ತಿದ್ದೇವೆ: ರಾಧಿಕಾ ಪಂಡಿತ್
ಬ್ರಾಂಡ್‍ವಾಚ್ ಸಂಸ್ಥೆ ತನ್ನ ಗ್ರಾಹಕರ ಅಭಿಪ್ರಾಯವನ್ನು ಆಧರಿಸಿ ಈ ಪಟ್ಟಿ ತಯಾರಿಸಿದೆ. ಇದರಲ್ಲಿ ಅಮೆರಿಕಾದ ಖ್ಯಾತ ಗಾಯಕಿ ಟೈಲರ್ ಸ್ವಫ್ಟ್‍ಂ ನಂಬರ್ 1ನೇ ಸ್ಥಾನ ಪಡೆದುಕೊಂಡಿದ್ದಾರೆ. ಭಾತರ ಕ್ರೆಕೆಟ್ ದಂತಕಥೆ ಸಚಿನ್ ತೆಂಡೂಲಕ್ಕರ್ ಅವರು 35 ನೇ ಸ್ಥಾನಕ್ಕೆ ಭಾಜನರಾಗಿದ್ದಾರೆ.
ಅಮೆರಿಕಾದ ನಟರಾದ ಡ್ವಾಯ್ನೆ ಜಾನ್ಸನ್, ಲಿಯೋನಾರ್ಡೋ ಡಿ ಕ್ಯಾಪ್ರಿಯೋ, ಅಮೆರಿಕಾದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರ ಪತ್ನಿ ಮಿಶೆಲ್ ಒಬಾಮಾ ಸೇರಿದಂರೆ ಇನ್ನಿತರರು ಈ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.