Tag: publictv

  • ಅಪ್ಪು ಸರ್ ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ತಿದ್ದೇವೆ: ರಾಧಿಕಾ ಪಂಡಿತ್

    ಅಪ್ಪು ಸರ್ ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ತಿದ್ದೇವೆ: ರಾಧಿಕಾ ಪಂಡಿತ್

    ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಗಲಿಕೆಯ ದುಃಖವನ್ನು ಸ್ಯಾಂಡಲ್‍ವುಡ್ ನಟಿ ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಲ್ಲಿ ತೋಡಿಕೊಂಡಿದ್ದಾರೆ.

    ಅಪ್ಪು ಸರ್ ನೀವು ಇನ್ನು ಮುಂದೆ ಇಲ್ಲ ಎಂಬುದನ್ನು ಇನ್ನೂ ನಮ್ಮ ಮನಸ್ಸು ಒಪ್ಪಿಕೊಳ್ಳುತ್ತಿಲ್ಲ. ಇದು ನಂಬಲಾಗದ ವಿಷಯವಾಗಿದೆ. ನೀವು ಇಲ್ಲದ ಇಂಡಸ್ಟ್ರಿ ಬರಡಾಗಿದೆ. ನಿಮ್ಮೊಂದಿಗೆ ಕೆಲಸ ಮಾಡುವ ಅವಕಾಶ ನೀಡಿದ್ದಕ್ಕಾಗಿ ಧನ್ಯವಾದಗಳು. ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇವೆ ಎಂದು ಬರೆದುಕೊಂಡು ಅಪ್ಪು ಜೊತೆಗೆ ಇರುವ ಕೆಲವು ಫೋಟೋವನ್ನು ಶೇರ್ ಮಾಡಿ ಬೇಸರ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಈಡೇರಿತು ಕನ್ನಡಿಗರ ಕಣ್ಮಣಿಯ ಮಹದಾಸೆ – 40 ಸಾವಿರ ಅಭಿಮಾನಿಗಳಿಗೆ ಒಟ್ಟಿಗೇ ಊಟ!

    ಅಕ್ಟೋಬರ್ 29ರಂದು ಶುಕ್ರವಾರ ಬೆಳಗ್ಗೆ ಮನೆಯಲ್ಲಿ ವರ್ಕೌಟ್ ಮಾಡಿದ ಸಂದರ್ಭದಲ್ಲಿ ಅಪ್ಪುಗೆ ಆಯಾಸ ಕಾಣಿಸಿಕೊಂಡಿತು. ಹಾಗೆಯೇ ಸ್ಟೀಮ್ ಬಾತ್ ಮಾಡಿಕೊಂಡು ಪತ್ನಿ ಜೊತೆ ಸ್ಥಳೀಯ ರಮಣಶ್ರೀ ಆಸ್ಪತ್ರೆಗೆ ತೆರಳಿದ್ದಾರೆ. ಅಲ್ಲಿ ಇಸಿಜಿ ಮಾಡಿಸಿಕೊಂಡು ಇನ್ನೇನು ಹೊರಡುವಷ್ಟರಲ್ಲಿ ಅಲ್ಲಿಯೇ ಕುಸಿದುಬಿದ್ದಿದ್ದರು. ಕೂಡಲೇ ಅವರನ್ನು ಕಾರಿನಲ್ಲಿ ನಗರದ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಯಿತು. ಅಲ್ಲಿ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಾದರೂ, ಅದು ಫಲಕಾರಿಯಾಗದೆ ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದರು. ಇದನ್ನೂ ಓದಿ:  ಅಪ್ಪುವಿನಂತೆ ಆದರ್ಶರಾದ ಅಭಿಮಾನಿ ದೇವರುಗಳು- 12 ದಿನಗಳ ಕಾರ್ಯ ನಿರ್ವಿಘ್ನ, ಎಲ್ಲವೂ ಶಾಂತ

     

    View this post on Instagram

     

    A post shared by Radhika Pandit (@iamradhikapandit)

    ಕಂಠೀರವ ಸ್ಟುಡಿಯೋದಲ್ಲಿ ಅಂತಿಮ ವಿಧಿ ವಿಧಾನಗಳ ಮೂಲಕವಾಗಿ ಅಪ್ಪು ಅಂತ್ಯಕ್ರಿಯೆ ಮಾಡಲಾಯಿತ್ತು. ಅಪ್ಪು ಅವರ ಸಮಾಧಿ ನೋಡಲು ಸಾಗರೋಪಾದಿಯಲ್ಲಿ ಅಭಿಮಾನಿಗಳ ಸಾಗರವೇ ಹರಿದು ಬರುತ್ತಿದೆ. ನಿನ್ನೆ ಅವರ ಸ್ಮರಣಾರ್ಥಕವಾಗಿ ರಾಜ್ ಕುಟುಂಬಸ್ಥರು ಅಭಿಮಾನಿಗಳಿಗೆ ಅನ್ನಸಂತರ್ಪಣೆ ಮಾಡಿದ್ದಾರೆ.

    ಅಪ್ಪು ಅಗಲಿಕೆಯ ನೋವನ್ನು ಅಭಿಮಾನಿಗಳು, ಸ್ಯಾಂಡಲ್‍ವುಡ್, ಕಲಾವಿದರು, ಕುಟುಂಬದವರಿಗೆ ಮರೆಯಲು ಸಾಧ್ಯವಾಗುತ್ತಿಲ್ಲ. ಇದೀಗ ರಾಧಿಕಾ ಪಂಡಿತ್ ಅವರು ತಮ್ಮ ನೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದು, ಅಭಿಮಾನಿಗಳು ತಾವು ಮಿಸ್ ಮಾಡಿಕೊಳ್ಳುತ್ತಿರುವುದಾಗಿ ಕಾಮೆಂಟ್ ಮಾಡುತ್ತಿದ್ದಾರೆ.

  • ಫಟಾಫಟ್ ಮಾಡಿ ರುಚಿಯಾದ ಕಡಲೆಬೇಳೆ ಚಟ್ನಿ

    ಫಟಾಫಟ್ ಮಾಡಿ ರುಚಿಯಾದ ಕಡಲೆಬೇಳೆ ಚಟ್ನಿ

    ನಿಮ್ಮ ಮನೆಯವರಿಗೂ ಸದಾ ದೋಸೆಯೊಂದಿಗೆ ಕಾಯಿಚಟ್ನಿಯನ್ನೇ ತಿಂದು ಬೇಸರವಾಗಿರಬಹುದು, ಆದರೆ ಯಾರೂ ಬಾಯಿಬಿಟ್ಟು ಹೇಳುವುದಿಲ್ಲ. ಆದರೆ ಇಂದು ನಿಮ್ಮ ಮನೆಯವರು ಕೇಳುವ ಮುನ್ನವೇ ನೀವು ಕಡಲೆಬೇಳೆ ಚಟ್ನಿ ಮಾಡಿ. ಸರಳವಾಗಿ, ಫಟಾಫಟ್ ತಯಾರಿಸುವ ಅಡುಗೆ ಎಂದರೆ ಹಲವರಿಗೆ ಇಷ್ಟವಾಗುತ್ತದೆ. ಇನ್ನೇಕೆ ತಡ..? ಮನೆಯವರ ಮಚ್ಚುಗೆ ಪಡೆಯಲು ಈ ಸ್ವಾದಿಷ್ಟ ಚಟ್ನಿಯನ್ನು ತಯಾರಿಸಿ.

    ಬೇಕಾಗುವ ಸಾಮಗ್ರಿಗಳು:
    * ಕಡಲೆಬೇಳೆ – ಅರ್ಧ ಕಪ್
    * ಕಾಯಿತುರಿ-ಅರ್ಧ ಕಪ್
    * ಕೆಂಪು ಮೆಣಸಿನ ಕಾಯಿ -ಮೂರು
    * ಹುಣಸೆ ಹುಣ್ಣು – ಸ್ವಲ್ಪ
    * ರುಚಿಗೆ ತಕ್ಕಷ್ಟು ಉಪ್ಪು
    * ಕೊತ್ತಂಬರಿ ಸೊಪ್ಪು – ಸ್ವಲ್ಪ
    * ಅಡುಗೆಎಣ್ಣೆ- 4 ಚಮಚ
    * ಸಾಸಿವೆ – ಒಂದು ಚಮಚ
    * ಉದ್ದಿನ ಬೇಳೆ – 2 ಚಮಚ
    * ಈರುಳ್ಳಿ (ಸಾಂಬಾರ್ ಈರುಳ್ಳಿ) – ಐದು
    * ಕರೀಬೇವು- ಸ್ವಲ್ಪ ಇದನ್ನೂ ಓದಿ: ಸ್ಪೆಷಲ್ ಪೈನಾಪಲ್ ಪಾಯಸ ಮಾಡಿ ಹಬ್ಬವನ್ನು ಸಂಭ್ರಮಿಸಿ


    ಮಾಡುವ ವಿಧಾನ:
    * ಒಂದು ಪಾತ್ರೆಯಲ್ಲಿ ಅಡುಗೆಎಣ್ಣೆ ಹಾಕಿ ಬಿಸಿಮಾಡಿ ಕೆಂಪುಮೆಣಸು, ಕಡಲೆ ಬೇಳೆಯನ್ನು ಚಿಕ್ಕ ಉರಿಯಲ್ಲಿ ಕೊಂಚ ಕಾಲ ಹುರಿಯಿರಿ. ಬಳಿಕ ಮೆಣಸನ್ನು ಪಕ್ಕಕ್ಕಿಡಿ.
    * ಈಗ ಉಳಿದ ಎಣ್ಣೆಯನ್ನು ಇದೇ ಪಾತ್ರೆಯಲ್ಲಿ ಹಾಕಿ ಸಾಸಿವೆ, ಉದ್ದಿನ ಬೇಳೆ, ಈರುಳ್ಳಿ ಮತ್ತು ಕರೀಬೇವಿನ ಎಲೆಗಳನ್ನು ಹಾಕಿ ಚೆನ್ನಾಗಿ ಫ್ರೈ ಮಾಡಿಕೊಳ್ಳಬೇಕು.

    * ಫ್ರೈ ಮಾಡಿಕೊಂಡ ಪದಾರ್ಥಗಳನ್ನು ಮಿಕ್ಸಿಯ ಜಾರ್‍ನೊಳಗೆ ಹಾಕಿ ರುಬ್ಬಿಕೊಳ್ಳಬೇಕು.
    * ಕೊತ್ತಂಬರಿ ಸೊಪ್ಪು, ಸಾಸಿವೆ, ಈರುಳ್ಳಿ, ಕೆಂಪು ಮೆಣಸಿನ ಕಾಯಿ ಹಾಕಿ ಒಗ್ಗರಣೆ ತಯಾರಿಸಿಕೊಂಡು ರುಬ್ಬಿದ ಮಿಶ್ರಣಕ್ಕೆ ಹಾಕಿದರೆ ಸ್ವಾದಿಷ್ಟ ಚಟ್ನಿ ತಯಾರಾಗುತ್ತದೆ.

  • ಸಮಾಜವಾದಿ ಪಕ್ಷದ ಹೆಸರಿನಲ್ಲಿ ಸುಗಂಧ ದ್ರವ್ಯ ಮಾರುಕಟ್ಟೆಗೆ

    ಸಮಾಜವಾದಿ ಪಕ್ಷದ ಹೆಸರಿನಲ್ಲಿ ಸುಗಂಧ ದ್ರವ್ಯ ಮಾರುಕಟ್ಟೆಗೆ

    ಲಕ್ನೋ: ಮುಂದಿನ ವರ್ಷದ ಉತ್ತರಪ್ರದೇಶ ವಿಧಾನ ಸಭಾ ಚುನಾವಣೆಗೆ ಸಜ್ಜಾಗುತ್ತಿರುವ ಸಮಾಜವಾದಿ ಪಕ್ಷ, ಇದೀಗ ತನ್ನ ಪಕ್ಷದ ಹೆಸರಲ್ಲೇ ಸುಗಂಧ ದ್ರವ್ಯವೊಂದನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಿದೆ.

    ಕೆಂಪು ಮತ್ತು ಹಸಿರು ಬಣ್ಣದ ಬಾಟಲಿಯಲ್ಲಿ ಬಿಡುಗಡೆಯಾಗಿರುವ ಈ ಸುಗಂಧದ್ರವ್ಯದ ಮೇಲೆ ಎಸ್‍ಪಿ ಚಿಹ್ನೆ ಮತ್ತು ಮುಖ್ಯಸ್ಥ ಅಖೀಲೇಶ್‍ಯಾದವ್ ಫೋಟೋವನ್ನು ಸಹ ಮುದ್ರಿಸಲಾಗಿದೆ. 403 ಸದಸ್ಯ ಬಲದ ಉತ್ತರಪ್ರದೇಶ ವಿಧಾನಸಭೆಗೆ 2022ರಲ್ಲಿ ಚುನಾವಣೆ ನಡೆಯಲಿದೆ.

    ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ತಮ್ಮ ಪಕ್ಷದ ಸುಗಂಧ ದ್ರವ್ಯವನ್ನು ಬಿಡುಗಡೆ ಮಾಡಿದ್ದು, ಅದಕ್ಕೆ ಸೆಂಟ್ ಆಫ್ ಸೋಶಿಯಲಿಸಂ (ಸಮಾಜವಾದಿ ಸುಗಂಧ ದ್ರವ್ಯ) ಎಂದು ಹೆಸರಿಟ್ಟಿದ್ದಾರೆ.

    ಪಕ್ಷದ ಎಂಎಲ್‍ಸಿ ಪಮ್ಮಿ ಜೈನ್ ಎನ್ನುವವರು ತಯಾರಿಸಿದ್ದು,ಪರಿಮಳ ಬೀರುವ 22 ಗಿಡಮೂಲಿಕೆಗಳನ್ನು ಬಳಸಿ ಇದನ್ನು ತಯಾರಿಸಲಾಗಿದೆ. ಇದರ ಪರಿಮಳವು ಬೇರೆ ಉತ್ಪನ್ನಗಳಿಗಿಂತಲೂ ಹೆಚ್ಚುಕಾಲ ಉಳಿಯಲಿದೆ ಎಂದು ತಿಳಿಸಿದ್ದಾರೆ.

    Akhilesh Yadav

    ರಾಜಕೀಯ ಪಕ್ಷವೊಂದು ತನ್ನದೇ ಸುಗಂಧ ದ್ರವ್ಯವನ್ನು ಪರಿಚಯಿಸುತ್ತಿರುವುದು ಇದೇ ಮೊದಲು. ಬಗ್ಗೆ ಮಾತನಾಡಿರುವ ಅಖಿಲೇಶ್ ಯಾದವ್, ಜನರು ಇದನ್ನು ಉಪಯೋಗಿಸಿದಾಗ ಸಮಾಜವಾದದ ಸುವಾಸನೆಯನ್ನು ಪಡೆಯಲಿದ್ದಾರೆ. 2022ರಲ್ಲಿ ದ್ವೇಷವನ್ನು ಕೊನೆಗಾಣಿಸಲಿದೆ ಎಂದು ಹೇಳಿದ್ದಾರೆ.

  • ಮುಂಬರುವ ಚುನಾವಣೆಗೆ ಪಕ್ಷ ಬಲಪಡಿಸುವುದಕ್ಕೆ ಜನ ಸ್ವರಾಜ್ ಯಾತ್ರೆ: ಬಿ.ಸಿ ಪಾಟೀಲ್

    ಮುಂಬರುವ ಚುನಾವಣೆಗೆ ಪಕ್ಷ ಬಲಪಡಿಸುವುದಕ್ಕೆ ಜನ ಸ್ವರಾಜ್ ಯಾತ್ರೆ: ಬಿ.ಸಿ ಪಾಟೀಲ್

    – ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದಿದ್ದರೆ, ರಾಜ್ಯವನ್ನೇ ಮಾರಿಬಿಡುತ್ತಿದ್ದರು

    ಗದಗ: ಮುಂಬರುವ ಚುನಾವಣೆಗಾಗಿ, ಪಕ್ಷ ಬಲಪಡಿವುದಕ್ಕೆ ಜನ ಸ್ವರಾಜ್ ಯಾತ್ರೆಯಾಗಿದೆ. ಜನ ಸ್ವರಾಜ್ ಯಾತ್ರೆ ಬಗ್ಗೆ ಕಾಂಗ್ರೆಸ್ ಟೀಕೆಗೆ ಕೃಷಿ ಸಚಿವ ಬಿ.ಸಿ ಪಾಟೀಲ್ ತಿರುಗೇಟು ನೀಡಿದ್ದಾರೆ.

    ಗದಗ ಜಿಲ್ಲೆ ನರಗುಂದ ತಾಲೂಕಿನಲ್ಲಿ ರೈತರೊಂದಿಗೆ ಒಂದು ದಿನ ಕಾರ್ಯಕ್ರಮಕ್ಕೆ ಆಗಮಿಸಿದ್ದರು. ನರಗುಂದ ಪಟ್ಟಣದಲ್ಲಿ ಹುತಾತ್ಮ ರೈತ ವೀರಪ್ಪ ಕಡ್ಲಿಕೊಪ್ಪ ವೀರಗಲ್ಲಿಗೆ ಮಾಲಾರ್ಪಣೆ ಮಾಡಿದ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ 2 ವರ್ಷದಲ್ಲಿ ಕೋವಿಡ್ ನಿಯಂತ್ರಣ ಮಾಡಿದ್ದೇ ಸರ್ಕಾರದ ದೊಡ್ಡ ಸಾಧನೆಯಾಗಿದೆ. ಜೊತೆಗೆ ರಾಜ್ಯದ ಯಾವುದೇ ಅಭಿವೃದ್ಧಿ ಕಾರ್ಯಗಳು ನಿಂತಿಲ್ಲ. ಕಾಂಗ್ರೆಸ್‍ನವರಿಗೆ ಕೇಳಿ ಬಿಜೆಪಿ ಜನ ಸ್ವರಾಜ್ ಕಾರ್ಯಕ್ರಮದ ಮಾಡಬೇಕಿಲ್ಲ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿರುಗೇಟು ನೀಡಿದರು. ಇದನ್ನೂ ಓದಿ: ಅನ್ನ ಸಂತರ್ಪಣೆ ವೇಳೆ ಪುನೀತ್ ನೆನೆದು ಕಣ್ಣೀರಿಟ್ಟ ಅಶ್ವಿನಿ

    ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ರಾಜಕೀಯ ಪಕ್ಷಗಳು ಜಾಥಾ, ಅಭಿಮಾನ ನಡೆಸುವುದು ಸಾಮಾನ್ಯವಾಗಿದೆ. ಆ ಮೂಲಕ ಮುಂಬರುವ ಚುನಾವಣೆಗೆ ಸಿದ್ಧತೆ ನಡೆಸಲಾಗುತ್ತದೆ. ಅಲ್ಲದೇ ಕೋವಿಡ್ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿದಿದ್ದರೆ, ರಾಜ್ಯವನ್ನೇ ಮಾರಿಬಿಡುತ್ತಿದ್ದರು. ಇಲ್ಲವೇ ಹಾದಿ ಬೀದಿಯಲ್ಲೇ ಸಾಲು ಸಾಲು ಹೆಣಗಳು ಬೀಳುತ್ತಿದ್ದವು. ಈ ಹಿಂದೆ 18 ತಿಂಗಳು ಅಧಿಕಾರ ನಡೆಸಿದ ಕಾಂಗ್ರೆಸ್- ಜೆಡಿಎಸ್ ಸಮ್ಮಿಶ್ರ ಸರಕಾರದ ಕೊಡುಗೆ ಏನು ಎಂದು ಕುಟುಕಿದರು. ಮುಂಬರುವ ತಾ.ಪಂ., ಜಿ.ಪಂ. ಚುನಾವಣೆಯಲ್ಲಿ ಮತ ಪೆಟ್ಟಿಗೆ ಮೂಲಕ ಉತ್ತರ ನೀಡುತ್ತೇವೆ ಎಂದು ಕಿಡಿಕಾರಿದ್ದಾರೆ. ಇದನ್ನೂ ಓದಿ: 46 ವರ್ಷಕ್ಕೆ ನನ್ನ ತಮ್ಮ ದೇವರಿಗೆ ತುಂಬಾ ಇಷ್ಟ ಆಗ್ಬಿಟ್ಟ: ಶಿವಣ್ಣ

    ರಮೇಶ್ ಜಾರಕಿಹೋಳಿಗೆ ಸಚಿವ ಸ್ಥಾನ ಕುರಿತು ಮಾತನಾಡಿದ್ದು, ಯಾರದ್ದೋ ಕುತಂತ್ರದಲ್ಲಿ ಸಿಲುಕಿದ್ದ ರಮೇಶ್ ಜಾರಕಿಹೊಳಿ ಅವರು ನೈತಿಕ ಹೊಣೆ ಹೊತ್ತು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಆದರೆ ಮುಂದಿನ ದಿನಗಳಲ್ಲಿ ಅವರಿಗೂ ಒಳ್ಳೆಯ ದಿನಗಳು ಬರುತ್ತವೆ ಎಂದರು.

    ಮೇಕೆದಾಟು ಯೋಜನೆ ಕೋರ್ಟ್‍ನಲ್ಲಿದ್ದು, ಅಲ್ಲಿ ಕ್ಲಿಯರೆನ್ಸ್ ದೊರಕುತ್ತಿದ್ದಂತೆ ನಾವೇ ಮಾಡುತ್ತೇವೆ. ಈ ಬಗ್ಗೆ ಕಾಂಗ್ರೆಸನವರಿಂದ ಹೇಳಿಸಿಕೊಳ್ಳಬೇಕಿಲ್ಲ. ತಮ್ಮದೇ ಯೋಜನೆ ಎಂದು ಹೇಳಿಕೊಳ್ಳುವ ಕಾಂಗ್ರೆಸ್, ತಮ್ಮ ಅಧಿಕಾರದಲ್ಲಿ ಏಕೆ ಮಾಡಲಿಲ್ಲ ಎಂದು ಲೇವಡಿ ಮಾಡಿದರು. ಈ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ್ ಸಂಸದ ಪಿ.ಸಿ.ಗದ್ದಿಗೌಡರ ಮತ್ತಿತರರು ಇದ್ದರು.

  • ಕೊಳ್ಳೇಗಾಲ ಪಟ್ಟಣದ ರಸ್ತೆಗೆ ಪುನೀತ್ ರಾಜ್‍ಕುಮಾರ್ ಹೆಸರು ನಾಮಕರಣ

    ಕೊಳ್ಳೇಗಾಲ ಪಟ್ಟಣದ ರಸ್ತೆಗೆ ಪುನೀತ್ ರಾಜ್‍ಕುಮಾರ್ ಹೆಸರು ನಾಮಕರಣ

    ಚಾಮರಾಜನಗರ: ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ರಸ್ತೆಗೆ ಪುನೀತ್ ರಾಜಕುಮಾರ್ ರಸ್ತೆ ಎಂದು ನಾಮಕರಣ ಮಾಡುವ ಮೂಲಕ ಅಗಲಿದ ಸ್ಯಾಂಡಲ್‍ವುಡ್ ನಟನಿಗೆ ತವರು ಜಿಲ್ಲೆಯಲ್ಲಿ ಗೌರವ ಸಲ್ಲಿಸಲಾಗಿದೆ.

    ಕೊಳ್ಳೇಗಾಲ ಪಟ್ಟಣದ ತಾಲೋಕು ಪಂಚಾಯ್ತಿ ಕಚೇರಿಯಿಂದ ಅಚ್ಗಾಳ್ ಯಾತ್ರಿನಿವಾಸದವರೆಗೆ ಒಂದು ಕಿಲೋಮೀಟರ್ ಉದ್ದವಿರುವ ರಸ್ತೆಗೆ ರಾಜರತ್ನ ಪುನೀತ್ ರಾಜಕುಮಾರ್ ರಸ್ತೆ ಎಂದು ನಾಮಕರಣ ಮಾಡಲಾಗಿದ್ದು, ನಾಮ ಫಲಕಕ್ಕೆ ಕೊಳ್ಳೇಗಾಲ ಶಾಸಕ ಎನ್. ಮಹೇಶ್ ಪೂಜೆ ಸಲ್ಲಿಸುವ ಮೂಲಕ ಅನಾವರಣಗೊಳಿಸಿದರು. ಇದನ್ನೂ ಓದಿ: 46 ವರ್ಷಕ್ಕೆ ನನ್ನ ತಮ್ಮ ದೇವರಿಗೆ ತುಂಬಾ ಇಷ್ಟ ಆಗ್ಬಿಟ್ಟ: ಶಿವಣ್ಣ

    ಈ ವೇಳೆ ಮಾತನಾಡಿದ ಅವರು, ಡಾ ರಾಜ್ ಕುಟುಂಬದವರು ನಮ್ಮ ದೇಶ ಹಾಗು ರಾಜ್ಯದ ಸಾಂಸ್ಕøತಿಕ, ಸಾಮಾಜಿಕ ರಾಯಭಾರಿಗಳಾಗಿದ್ದಾರೆ. ಸಮಾಜಕ್ಕೆ ದೊಡ್ಡ ಕೊಡುಗೆ ನೀಡಿದ್ದಾರೆ.ಈ ಕುಟುಂಬದ ಋಣ ತೀರಿಸಲು ಸಾಧ್ಯವಿಲ್ಲ ಎಂದರು. ಇದನ್ನೂ ಓದಿ: ಅನ್ನ ಸಂತರ್ಪಣೆ ವೇಳೆ ಪುನೀತ್ ನೆನೆದು ಕಣ್ಣೀರಿಟ್ಟ ಅಶ್ವಿನಿ

    ಇಂದು ಬೆಂಗಳೂರಿನಲ್ಲಿ ಪುನೀತ್ ರಾಜ್‍ಕುಟುಂಬಸ್ಥರು ಅನ್ನಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಿದ್ದರು. ಸಾವಿರಾರು ಅಭಿಮಾನಿಗಳು ಬಂದು ಊಟ ಮಾಡಿ ಕುಟುಂಬಕ್ಕೆ ಆಶೀರ್ವಾದಿಸಿದ್ದಾರೆ.

  • ನೇತ್ರದಾನ ಜನಾಂದೋಲನ ಆಗಬೇಕು: ಡಾ.ಕೆ.ಸುಧಾಕರ್

    ನೇತ್ರದಾನ ಜನಾಂದೋಲನ ಆಗಬೇಕು: ಡಾ.ಕೆ.ಸುಧಾಕರ್

    – ಎರಡನೇ ಡೋಸ್ ಲಸಿಕೆ ಪಡೆಯಲು ಉದಾಸೀನ ಬೇಡ

    ಬೆಂಗಳೂರು: ನೇತ್ರದಾನದ ಬಗ್ಗೆ ಸಾರ್ವಜನಿಕರಲ್ಲಿ ಹೆಚ್ಚು ಅರಿವು ಮೂಡಿಸಿ ಜನಾಂದೋಲನವಾಗುವಂತೆ ಮಾಡಬೇಕು ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಹೇಳಿದರು.

    ಮಿಂಟೋ ಕಣ್ಣಾಸ್ಪತ್ರೆಯ 125 ನೇ ವಾರ್ಷಿಕೋತ್ಸವ ಆಚರಣೆಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ನಿಧನರಾದ ನಟ ಪುನೀತ್ ರಾಜ್‍ಕುಮಾರ್ ನೇತ್ರದಾನ ಮಾಡಿ ನಾಲ್ಕು ಜನರಿಗೆ ದೃಷ್ಟಿ ನೀಡಿದ್ದಾರೆ. ತಂತ್ರಜ್ಞಾನ ವಿಶಿಷ್ಟವಾಗಿ ಬೆಳೆದಿರುವುದರಿಂದ ಒಬ್ಬರು ನಾಲ್ಕು ಜನರಿಗೆ ದೃಷ್ಟಿ ನೀಡಲು ಸಾಧ್ಯವಾಗುತ್ತದೆ. ದೇಶದಲ್ಲಿ 3-4 ಕೋಟಿ ಜನರಿಗೆ ಅಂಧತ್ವ ಇದೆ. ಆದ್ದರಿಂದ ದಾನಿಗಳ ಸಂಖ್ಯೆ ಹೆಚ್ಚಬೇಕಿದೆ. ಮರಣ ಹೊಂದಿದ ನಂತರವೂ ನಾಲ್ಕು ಜನರಿಗೆ ದೃಷ್ಟಿ ನೀಡಿ ಅವರಿಗೆ ಜಗತ್ತು ನೋಡಲು ಅವಕಾಶ ನೀಡಬೇಕು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಕೂಡ ಅಂಗಾಂಗ ದಾನಕ್ಕೆ ಪ್ರತಿಜ್ಞೆ ಮಾಡಿದ್ದಾರೆ. ನಾನು ಕೂಡ ಕಳೆದ ವರ್ಷವೇ ನೇತ್ರದಾನ ಮಾಡಲು ಪ್ರತಿಜ್ಞೆ ಮಾಡಿದ್ದೇನೆ. ಇದನ್ನು ಆಂದೋಲನದಂತೆ ನಡೆಸಿ ನೇತ್ರದಾನದ ಬಗ್ಗೆ ಅರಿವು ಮೂಡಿಸಬೇಕು ಎಂದರು.

    ಕೋವಿಡ್ ಸಮಯದಲ್ಲಿ ಮಿಂಟೋ, ವಿಕ್ಟೋರಿಯಾ ಆಸ್ಪತ್ರೆಯನ್ನು ಮೀಸಲಿಡಲಾಗಿತ್ತು. ಆದರೆ ಈಗ ಎಲ್ಲ ಬಗೆಯ ಚಿಕಿತ್ಸೆ ನೀಡಲಾಗುತ್ತಿದೆ. ಜನರು ಧೈರ್ಯವಾಗಿ ಬಂದು ಇತರೆ ಆರೋಗ್ಯ ಸಮಸ್ಯೆಗಳಿಗೆ ಚಿಕಿತ್ಸೆ ಪಡೆಯಬಹುದು ಎಂದರು. ಇದನ್ನೂ ಓದಿ: 46 ವರ್ಷಕ್ಕೆ ನನ್ನ ತಮ್ಮ ದೇವರಿಗೆ ತುಂಬಾ ಇಷ್ಟ ಆಗ್ಬಿಟ್ಟ: ಶಿವಣ್ಣ

    ಅನೇಕ ವೈದ್ಯರು, ಶುಶ್ರೂಷಕರು, ವೈದ್ಯಕೀಯೇತರ ಸಿಬ್ಬಂದಿಯ ಶ್ರಮದಿಂದಾಗಿ ಮಿಂಟೋ ಕಣ್ಣಾಸ್ಪತ್ರೆಯು 125 ನೇ ವರ್ಷಕ್ಕೆ ಕಾಲಿಟ್ಟಿದೆ. ಇಂತಹ ಸಂಸ್ಥೆ ಇರುವುದು ರಾಜ್ಯಕ್ಕೆ ಹೆಮ್ಮೆಯ ವಿಚಾರ. 1896 ರಲ್ಲಿ ಡಿಸ್ಪೆನ್ಸರಿಯಾಗಿ ಆರಂಭವಾದ ಸಂಸ್ಥೆ 125 ವರ್ಷದವರೆಗೂ ಸೇವೆ ನೀಡಿದೆ. ಪ್ಲೇಗ್ ನಿಂದ ಆರಂಭವಾಗಿ ಇತ್ತೀಚೆಗೆ ಕೋವಿಡ್ ತಡೆಗಟ್ಟುವವರೆಗೂ ಈ ಸಂಸ್ಥೆ ಕಾರ್ಯನಿರ್ವಹಿಸಿದೆ. ಇಂದು ಒಪಿಡಿಗೆ ಸುಮಾರು 800 ರೋಗಿಗಳು ಬರುತ್ತಿದ್ದಾರೆ. ವರ್ಷಕ್ಕೆ ಸುಮಾರು 10 ಸಾವಿರ ರೋಗಿಗಳಿಗೆ ಶಸ್ತ್ರಚಿಕಿತ್ಸೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

    ರಾಜ್ಯದಲ್ಲಿ ಕೊರೊನಾ ಲಸಿಕೆಯ ಮೊದಲ ಡೋಸ್ 89% ಹಾಗೂ ಎರಡನೇ ಡೋಸ್ 48% ರಷ್ಟು ಪ್ರಗತಿ ಕಂಡಿದೆ. ಎರಡನೇ ಡೋಸ್ ಪಡೆಯಲು ಜನರು ಉದಾಸೀನ ಮಾಡಬಾರದು. ಕೋವಿಡ್ ವಿರುದ್ಧ ಸಂಪೂರ್ಣ ರೋಗ ನಿರೋಧಕ ಶಕ್ತಿ ಬರಲು ಎರಡೂ ಡೋಸ್ ಪಡೆಯಬೇಕು. ಕೋವಿಡ್ ಸಂಪೂರ್ಣ ನಿರ್ಮೂಲನೆಯಾಗುವವರೆಗೂ ಎಚ್ಚರವಾಗಿರಬೇಕು ಎಂದರು. ಇದನ್ನೂ ಓದಿ: ಅನ್ನ ಸಂತರ್ಪಣೆ ವೇಳೆ ಪುನೀತ್ ನೆನೆದು ಕಣ್ಣೀರಿಟ್ಟ ಅಶ್ವಿನಿ

    ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೆ ಮಕ್ಕಳ ಲಸಿಕೆ ನೀಡಲಿದೆ. ಮಕ್ಕಳಲ್ಲಿ ಪ್ರಾಶಸ್ತ್ಯದಲ್ಲಿ ಲಸಿಕೆ ನೀಡಲಾಗುವುದು. ಆರೋಗ್ಯ ನಂದನ ಕಾರ್ಯಕ್ರಮದಡಿ ಈಗಾಗಲೇ ಆರೋಗ್ಯ ಶಿಬಿರ ಮಾಡಿ ಪಟ್ಟಿ ಮಾಡಲಾಗಿದೆ. ಮುಂದಿನ ವಾರ ಲಸಿಕೆಯನ್ನು ನಿರೀಕ್ಷಿಸುತ್ತಿದ್ದೇವೆ. ಆರೂಮುಕ್ಕಾಲು ಕೋಟಿ ಲಸಿಕೆಯನ್ನು ರಾಜ್ಯದಲ್ಲಿ ನೀಡಲಾಗಿದೆ. ಲಸಿಕೆ ವಿತರಣೆ ಈಗ ಕಷ್ಟದ ವಿಚಾರವಲ್ಲ ಎಂದರು. ಇದನ್ನೂ ಓದಿ: ಖುದ್ದು ರಕ್ತದಾನ ಮಾಡಿ ಮಾದರಿಯಾದ ನಟ ಶಿವರಾಜ್ ಕುಮಾರ್

  • 46 ವರ್ಷಕ್ಕೆ ನನ್ನ ತಮ್ಮ ದೇವರಿಗೆ ತುಂಬಾ ಇಷ್ಟ ಆಗ್ಬಿಟ್ಟ: ಶಿವಣ್ಣ

    46 ವರ್ಷಕ್ಕೆ ನನ್ನ ತಮ್ಮ ದೇವರಿಗೆ ತುಂಬಾ ಇಷ್ಟ ಆಗ್ಬಿಟ್ಟ: ಶಿವಣ್ಣ

    ಬೆಂಗಳೂರು: ನಟ ಪುನೀತ್ ರಾಜ್‍ಕುಮಾರ್ ಅವರ ನೆನಪಿನಾರ್ಥಕವಾಗಿ ಇಂದು ಅಭಿಮಾನಿಗಳಿಗೆ ಅನ್ನಸಂತರ್ಪಣೆಯನ್ನು ಆಯೋಜಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಇದೀಗ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಎಲ್ಲರಿಗೂ ಧನ್ಯವಾದ ಅರ್ಪಿಸಿದ್ದಾರೆ.

    ಕಾರ್ಯಕ್ರಮದಲ್ಲಿ ಮಾತನಾಡಿದ ಶಿವಣ್ಣ, ಸಹಕರಿಸಿದ ಅಭಿಮಾನಿಗಳು, ಸರ್ಕಾರ, ಪೊಲೀಸರಿಗೆ ಕುಟುಂಬಸ್ಥರ ಪರವಾಗಿ ಧನ್ಯವಾದವನ್ನು ಹೇಳಿದ್ದಾರೆ. ತಾವೆಲ್ಲರೂ ಬಂದು ಅಪ್ಪು ಆಸೆಯನ್ನು ಈಡೇರಿಸಿದ್ದೀರಿ. ಆದರೆ ಒಂದು ದುಃಖವೆಂದರೆ ಈ ರೀತಿ ಮಾಡಬೇಕಾಯಿತಲ್ಲ ಎನ್ನುವ ಬೇಸರ ನಮಗೆ ಇದೆ. ನನ್ನ ತಮ್ಮನಿಗೆ ಹೋಗುವಂತಹ ವಯಸ್ಸು ಆಗಿರಲಿಲ್ಲ. 46 ವರ್ಷಕ್ಕೆ ನನ್ನ ತಮ್ಮ ದೇವರಿಗೆ ತುಂಬಾ ಇಷ್ಟ ಆಗಿಬಿಟ್ಟ ಅನ್ನಿಸುತ್ತದೆ. ಆದರೆ ದೇವರು ಅವನನ್ನು ಕರೆದುಕೊಂಡು ಬಿಟ್ಟ. ತಂದೆ-ತಾಯಿ, ಜೊತೆಲಿ ಇರಲಿ ಎಂದು ಕರೆದುಕೊಂಡು ಬಿಟ್ಟಿದ್ದಾನೆ ಎಂದು ಹೇಳುತ್ತಾ ಭಾವುಕರಾಗಿದ್ದಾರೆ.  ಇದನ್ನೂ ಓದಿ: ಅನ್ನ ಸಂತರ್ಪಣೆ ವೇಳೆ ಪುನೀತ್ ನೆನೆದು ಕಣ್ಣೀರಿಟ್ಟ ಅಶ್ವಿನಿ

    ಎಲ್ಲರಿಗೂ ನೋವು ಆಗಿರುತ್ತದೆ. ಹೀಗೆ ಊಟ ಮಾಡಬೇಕಲ್ಲಾ ಎಂದು, ಆದರೂ ತಾವು ಎಲ್ಲರೂ ಬಂದು ಈ ಅನ್ನಸಂತರ್ಪಣೆಯಲ್ಲಿ ಸಹಕರಿಸಿದ್ದೀರಿ. ನಿಮ್ಮ ಆಶೀರ್ವಾದ ನಮಗೆ ಬೇಕು. ಈ ಪ್ರೀತಿ ವಿಶ್ವಾಸ ಯಾವಾಗಲೂ ನಮ್ಮ ಮನಸ್ಸಿನಲ್ಲಿ ಇರುತ್ತದೆ. ನಾನು ಜೋಗಿ ಪಾತ್ರ ಮಾಡಿದಂತೆ ತಮ್ಮೆಲ್ಲರ ಪ್ರೀತಿಯನ್ನು ಜೋಳಿಗೆಯಲ್ಲಿ ಇಟ್ಟುಕೊಂಡು ಪೂಜಿಸುತ್ತೇನೆ. ನಿಮ್ಮ ಸಹಕಾರಕ್ಕೆ ಧನ್ಯವಾದ ಎಂದು ಶಿವಣ್ಣ  ಭಾವುಕರಾಗಿಯೇ ಹೇಳಿದ್ದಾರೆ. ಇದನ್ನೂ ಓದಿ: ಖುದ್ದು ರಕ್ತದಾನ ಮಾಡಿ ಮಾದರಿಯಾದ ನಟ ಶಿವರಾಜ್ ಕುಮಾರ್

    ಸದ್ಯ 27 ಸಾವಿರ ಜನರು ಬಂದು ಊಟ ಮಾಡಿ ಹೋಗಿದ್ದಾರೆ. ಹೊರಗಡೆ ನಾಲ್ಕು ಸಾವಿರ ಜನ ಇದ್ದಾರೆ. ಅವರಿಗೆ ಊಟದ ವ್ಯವಸ್ಥೆ ಇರುತ್ತದೆ. ಖಾಲಿ ಆಗಿರೋ ಖಾದ್ಯಗಳನ್ನ ಮತ್ತೆ ಮಾಡಿಕೊಳ್ಳಲಾಗಿದೆ. ಹೊರಗಡೆ ಇರೋ ಜನ ಬಂದು ಊಟ ಮಾಡಿ ಹೋದರೆ ಒಟ್ಟು 32 ಸಾವಿರ ಜನ ಊಟ ಮಾಡಿದಂತೆ ಆಗುತ್ತದೆ. ಗ್ರೌಂಡನಲ್ಲಿ ಇರುವ ಎಲ್ಲಾರಿಗೂ ಕಡೆ ತನಕ ಊಟ ಬಡಿಸಲಾಗುತ್ತದೆ. ಇಲ್ಲಿ ತನಕ ಏಳು ಏಳು ರೌಂಡ್ ಊಟ ಬಡಿಸಲಾಗಿದೆ.

  • ಅಗ್ನಿ ಅವಘಡ-  ICUನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 4 ಶಿಶುಗಳು ಸಾವು

    ಅಗ್ನಿ ಅವಘಡ-  ICUನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 4 ಶಿಶುಗಳು ಸಾವು

    ಭೋಪಾಲ್: ಸರ್ಕಾರಿ ಸ್ವಾಮ್ಯದ ಕಮಲಾ ನೆಹರು ಮಕ್ಕಳ ಆಸ್ಪತ್ರೆಯ ಐಸಿಯು ವಿಭಾಗದಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಕನಿಷ್ಟ ನಾಲ್ವರು ಮಕ್ಕಳು ಮೃತಪಟ್ಟಿರುವ ಘಟನೆ ನಡೆದಿದೆ.

    ಅಗ್ನಿ ಅವಘಡ ಸಂಭವಿಸಿದಾಗ 50 ಮಕ್ಕಳು ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ತಿಳಿದುಬಂದಿದೆ.

    ನಿನ್ನೆ ರಾತ್ರಿ ಈ ಘಟನೆ ನಡೆದಿದ್ದು, ಮಧ್ಯಪ್ರದೇಶದ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ಈ ಬಗ್ಗೆ ಮಾತನಾಡಿದ್ದು, ಘಟನೆಯನ್ನು ದುರದೃಷ್ಟಕರವಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸುವುದಕ್ಕೆ ಹಾಗೂ ರಕ್ಷಣಾ ಕಾರ್ಯಾಚರಣೆಗೆ ತಕ್ಷಣವೇ ಅಗತ್ಯ ಕ್ರಮ ಕೈಗೊಳ್ಳಬೇಕೆಂಬ ಸೂಚನೆಯನ್ನು ಅಧಿಕಾರಿಗಳಿಗೆ ನೀಡಿದ್ದಾರೆ.  ಇದನ್ನೂ ಓದಿ: ಅನ್ನ ಸಂತರ್ಪಣೆ ವೇಳೆ ಪುನೀತ್ ನೆನೆದು ಕಣ್ಣೀರಿಟ್ಟ ಅಶ್ವಿನಿ

    ಅಗ್ನಿ ಅವಘಡದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಮೂವರು ಮಕ್ಕಳನ್ನು ರಕ್ಷಿಸಲು ಸಾಧ್ಯವಾಗಲಿಲ್ಲ. ಇದು ಅತ್ಯಂತ ನೋವಿನ ಸಂಗತಿ. ತಕ್ಷಣವೇ ರಕ್ಷಣಾ ಕಾರ್ಯಾಚರಣೆಯನ್ನು ಕೈಗೊಳ್ಳಲಾಗಿದ್ದು, ಬೆಂಕಿಯ ಕೆನ್ನಾಲಿಗೆ ತಹಬದಿಗೆ ಬಂದಿದೆ ಎಂದು ಚೌಹಾಣ್ ಟ್ವೀಟ್ ಮಾಡಿದ್ದಾರೆ.  ಇದನ್ನೂ ಓದಿ: ಖುದ್ದು ರಕ್ತದಾನ ಮಾಡಿ ಮಾದರಿಯಾದ ನಟ ಶಿವರಾಜ್ ಕುಮಾರ್

    ಈ ದುರಂತಕ್ಕೆ ಕಾರಣ ತಿಳಿಯಲು ಉನ್ನತ ಮಟ್ಟದ ತನಿಖೆಗೆ ಆದೇಶ ನೀಡಲಾಗಿದೆ. ವೈದ್ಯಕೀಯ ವಿಭಾಗ ಹಾಗೂ ವೈದ್ಯಕೀಯ ಶಿಕ್ಷಣ ವಿಭಾಗದ ಎಸಿಎಸ್ ಮೊಹಮ್ಮದ್ ಸುಲೇಮಾನ್ ಈ ತನಿಖೆಯ ನೇತೃತ್ವ ವಹಿಸಲಿದ್ದಾರೆ ಎಂದು ಸಿಎಂ ಮಾಹಿತಿ ನೀಡಿದ್ದಾರೆ. ರಾತ್ರಿ 9 ರ ವೇಳೆಗೆ ಅಗ್ನಿ ಅವಘಡ ಸಂಭವಿಸಿದ್ದು, 8-10 ಅಗ್ನಿ ಶಾಮಕ ವಾಹನಗಳು ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ತಹಬದಿಗೆ ತರುವಲ್ಲಿ ಯಶಸ್ವಿಯಾಗಿವೆ.

  • ಬ್ರಾಹ್ಮಣರು, ಬನಿಯಾಗಳು ನನ್ನ ಜೇಬಿನಲ್ಲಿದ್ದಾರೆ: ಮುರಳೀಧರ್ ರಾವ್

    ಬ್ರಾಹ್ಮಣರು, ಬನಿಯಾಗಳು ನನ್ನ ಜೇಬಿನಲ್ಲಿದ್ದಾರೆ: ಮುರಳೀಧರ್ ರಾವ್

    ಭೋಪಾಲ್: ಜಾತಿಗಳ ಹೆಸರಿನಲ್ಲಿ ಮತ ಕೇಳಲು ಕಾರಣವೇನೆಂಬ ಪ್ರಶ್ನೆಗೆ ಸೋಮವಾರ ಮಧ್ಯಪ್ರದೇಶದ ಬಿಜೆಪಿ ಉಸ್ತುವಾರಿ ಪಿ ಮುರಳೀಧರ್ ರಾವ್ ಅವರು ವಿವಾದಾದ್ಮಕ ಉತ್ತರ ನೀಡಿದ್ದಾರೆ.

    ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎಸ್‍ಟಿ, ಎಸ್‍ಸಿ ಮತ್ತು ಒಬಿಸಿ ಜನಸಂಖ್ಯೆಯನ್ನು ಕೇಂದ್ರೀಕರಿಸುವ ಬಿಜೆಪಿಯ ಭವಿಷ್ಯದ ಕಾರ್ಯತಂತ್ರದ ಕುರಿತು ರಾವ್ ಮಾತನಾಡಿದರು. ಇಲ್ಲಿಯವರೆಗೆ ಬ್ರಾಹ್ಮಣರು ಮತ್ತು ಬನಿಯಾಗಳ (ಮೇಲ್ವರ್ಗದ ವರ್ತಕ ಸಮುದಾಯ) ಪಕ್ಷ ಎಂದು ಕರೆಯಲಾಗುತ್ತಿದ್ದ ಬಿಜೆಪಿ ಈಗ ಎಸ್‍ಸಿ, ಎಸ್‍ಟಿ, ಒಬಿಸಿ ಪಕ್ಷವಾಗಲಿದೆಯೇ ಎಂಬ ಪ್ರಶ್ನೆಗೆ, ರಾವ್ ಅವರು ಹಿಂದಿಯಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಅವರ ಕುರ್ತಾದ ಎರಡು ಪಾಕೆಟ್‍ಗಳನ್ನು ತೋರಿಸುತ್ತಾ ‘ಬ್ರಾಹ್ಮಣರು’ ಮತ್ತು ‘ಬನಿಯಾಗಳು’ ನನ್ನ ಎರಡು ಜೇಬಿನಲ್ಲಿದ್ದಾರೆಂದು ಉತ್ತರ ನೀಡಿದ್ದಾರೆ. ಇದನ್ನೂ ಓದಿ: ಹಾಟ್ ಬೆಡಗಿ ಪೂನಂ ಪಾಂಡೆ ಆಸ್ಪತ್ರೆಗೆ ದಾಖಲು

    ಈ ಹೇಳಿಕೆ ವಿರುದ್ಧ ವಿಪಕ್ಷಗಳಿಂದ ಆಕ್ರೋಶ ವ್ಯಕ್ತವಾಗಿದೆ. ಮುರಳೀಧರ್ ವಿರುದ್ಧ ವಾಗ್ದಾಳಿ ನಡೆಸಿದ ಕಮಲ್ ನಾಥ್, ಸಬ್ಕಾ ಸಾಥ್ ಸಬ್ಕಾ ವಿಕಾಸ್ ಎಂಬ ಘೋಷಣೆಯನ್ನು ನೀಡುವ ಬಿಜೆಪಿಯ ಮಧ್ಯಪ್ರದೇಶದ ಉಸ್ತುವಾರಿ, ಈಗ ನಾವು ಒಂದು ಜೇಬಿನಲ್ಲಿ ಬ್ರಾಹ್ಮಣರು ಮತ್ತು ಒಂದು ಕಿಸೆಯಲ್ಲಿ ಬನಿಯಾ ಎಂದು ಹೇಳುತ್ತಿದ್ದಾರೆ. ಇದನ್ನೂ ಓದಿ: ಅಪ್ಪುನಂತ ತಮ್ಮನನ್ನು ಪಡೆಯಲು ನಾನು ಪುಣ್ಯ ಮಾಡಿದ್ದೆ: ಶಿವಣ್ಣ ಭಾವುಕ

    ಈ ಸಮುದಾಯಗಳಿಗೆ ಮಾಡಿದ ದೊಡ್ಡ ಅವಮಾನ. ಮತದಾರರು ಪಕ್ಷದ ಆಸ್ತಿಯಾಗಬೇಕು. ಆದರೆ ಬಿಜೆಪಿ ಜೇಬಿನಲ್ಲಿದ್ದಾರೆ ಎಂದು ಹೇಳುತ್ತದೆ. ಬಿಜೆಪಿಯನ್ನು ಕಟ್ಟುವಲ್ಲಿ ಪ್ರಮುಖ ಪಾತ್ರ ವಹಿಸಿದ ಸಮುದಾಯಗಳಿಗೆ ಯಾವ ರೀತಿಯ ಗೌರವವಾಗಿದೆ. ಬಿಜೆಪಿ ನಾಯಕರು ಅಧಿಕಾರ ಮತ್ತು ಅಹಂಕಾರದ ಅಮಲಿನಲ್ಲಿದ್ದಾರೆ. ಇದು ಇಡೀ ಬ್ರಾಹ್ಮಣ ಮತ್ತು ಬನಿಯಾ ಸಮುದಾಯಕ್ಕೆ ಮಾಡಿದ ಅವಮಾನವಾಗಿದ್ದು, ಬಿಜೆಪಿ ನಾಯಕತ್ವವು ತಕ್ಷಣವೇ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ.

    ಎಲ್ಲರನ್ನು ಜೊತೆಯಲ್ಲಿ ಕರೆದೊಯ್ಯುವ ಘೋಷಣೆಯನ್ನು ನೀಡುವ ಬಿಜೆಪಿ ಜನರನ್ನು ಈಗ ನಿರ್ದಿಷ್ಟ ಗುಂಪುಗಳನ್ನು ಕೇಂದ್ರೀಕರಿಸುವ ಮತ್ತು ಎರಡು ಸಮುದಾಯಗಳನ್ನು ಅವಮಾನಿಸುವ ಮಾತನಾಡುತ್ತಿದ್ದಾರೆ. ಇದು ಯಾವ ರೀತಿಯ ಮನಸ್ಥಿತಿ. ಅಧಿಕಾರದ ಹಸಿವಿನಲ್ಲಿ ಬಿಜೆಪಿ ಯಾವ ಹಂತಕ್ಕೂ ಹೋಗಬಹುದು. ಅದರ ನೀತಿಗಳು, ವರ್ತನೆ ಮತ್ತು ತತ್ವಶಾಸ್ತ್ರವು ಅಧಿಕಾರಕ್ಕೆ ಸೀಮಿತವಾಗಿದೆ” ಎಂದು ಕಮಲ್ ನಾಥ್ ಆರೋಪಿಸಿದ್ದಾರೆ.

  • ಎರಡು ಮಿಲಿಯನ್‍ಗೂ ಹೆಚ್ಚಿನ ವೀಕ್ಷಣೆ ಕಂಡ ‘100’ ಸಿನಿಮಾದ ಥ್ರಿಲ್ಲಿಂಗ್ ಟ್ರೇಲರ್

    ಎರಡು ಮಿಲಿಯನ್‍ಗೂ ಹೆಚ್ಚಿನ ವೀಕ್ಷಣೆ ಕಂಡ ‘100’ ಸಿನಿಮಾದ ಥ್ರಿಲ್ಲಿಂಗ್ ಟ್ರೇಲರ್

    ಸ್ಯಾಂಡಲ್‍ವುಡ್ ಚಿರಯುವಕ ನಟ, ನಿರ್ದೇಶಕ, ನಿರ್ಮಾಪಕ ರಮೇಶ್ ಅರವಿಂದ್ ನಿರ್ದೇಶಿಸಿ ನಟಿಸಿರುವ ‘100’ ಸಿನಿಮಾ ಬಿಡುಗಡೆಗೆ ಸಿದ್ಧವಾಗಿದೆ. ಸೈಬರ್ ಕ್ರೈಂ, ಫ್ಯಾಮಿಲಿ ಥ್ರಿಲ್ಲರ್ ಸಬ್ಜೆಕ್ಟ್ ಒಳಗೊಂಡ ಈ ಚಿತ್ರ ನವೆಂಬರ್ 19ಕ್ಕೆ ರಾಜ್ಯಾದ್ಯಂತ ತೆರೆ ಕಾಣಲು ಸಜ್ಜಾಗಿದೆ. ಸಿನಿಮಾದ ಥ್ರಿಲ್ಲಿಂಗ್ ಹಾಗೂ ರೋಚಕ ಟ್ರೇಲರ್ ಬಿಡುಗಡೆಯಾಗಿದ್ದು, ಪ್ರೇಕ್ಷಕರನ್ನು ಇನ್ನಿಲ್ಲದಂತೆ ಸೆಳೆಯುತ್ತಿದೆ. ಅಷ್ಟೇ ಅಲ್ಲ ಬಿಡುಗಡೆಯಾದ ಕೆಲ ಗಂಟೆಗಳಲ್ಲೇ 20 ಲಕ್ಷಕ್ಕೂ ಹೆಚ್ಚಿನ ಪ್ರೇಕ್ಷಕರ ವೀಕ್ಷಣೆ ಗಳಿಸಿಕೊಂಡಿದೆ.

    ‘100’ ಚಿತ್ರದ ಟ್ರೇಲರ್ ಬಿಡುಗಡೆಯಾಗಿ ಎಲ್ಲರನ್ನು ಕುತೂಹಲದ ಅಂಗಳದಲ್ಲಿ ಕೂರುವಂತೆ ಮಾಡಿದೆ. ಪ್ರತಿ ಕಥೆಯಲ್ಲೂ ಒಬ್ಬ ಹೀರೋ, ಒಬ್ಬ ವಿಲನ್ ಇರ್ತಾರೆ ಆದರೆ ನಮ್ಮ ಸಿನಿಮಾದಲ್ಲಿ ಇಬ್ಬರೂ ವಿಲನ್ನೇ ಎಂಬ ಇಂಟ್ರಸ್ಟಿಂಗ್ ಡೈಲಾಗ್ ನಿಂದ ಆರಂಭವಾಗೋ ಟ್ರೇಲರ್ ಸೀಟಿನಂಚಿನಲ್ಲಿ ಕೂರಿಸೋ ನೂರಾರು ರೋಚಕ ಟ್ವಿಸ್ಟ್, ಟರ್ನ್‍ಗಳನ್ನು ಒಳಗೊಂಡಿದೆ ಎಂಬುದನ್ನು ಸಾರಿ ಹೇಳುತ್ತಿದೆ. ಇದರ ಜೊತೆಗೆ ಫ್ಯಾಮಿಲಿ ಹಾಗೂ ಸೊಸೈಟಿಗೆ ಒಂದೊಳ್ಳೆ ಸಂದೇಶವೂ ಸಿನಿಮಾದಲ್ಲಿದೆ ಎಂಬ ಸುಳಿವು ಟ್ರೇಲರ್ ನೀಡಿದೆ. ರವಿ ಬಸ್ರೂರು ಹಿನ್ನೆಲ್ಲೆ ಸಂಗೀತವೂ ಬೇರೆಯದ್ದೇ ಲೆವೆಲ್‍ನಲ್ಲಿ ಮೂಡಿ ಬಂದಿದ್ದು, ಸಿನಿಮಾ ತಾಂತ್ರಿಕವಾಗಿಯೂ ಶ್ರೀಮಂತವಾಗಿ ಮೂಡಿ ಬಂದಿದೆ ಎನ್ನುವುದು ತಿಳಿಯುತ್ತೆ. ಒಟ್ಟಿನಲ್ಲಿ, ಟ್ರೇಲರ್ ಕಂಡು ಸಖತ್ ಥ್ರಿಲ್ ಆಗಿದ್ದಾರೆ ಪ್ರೇಕ್ಷಕರು. ಈ ರೋಚಕ ಭರಿತ ಟ್ರೇಲರ್ ಎರಡು ಮಿಲಿಯನ್‍ಗೂ ಹೆಚ್ಚು ವೀಕ್ಷಣೆ ಪಡೆದುಕೊಂಡು ಯೂಟ್ಯೂಬ್‍ನಲ್ಲಿ ಟ್ರೆಂಡಿಂಗಲ್ಲಿದ್ದು ಇನ್ನಷ್ಟು ಜನರನ್ನು ಸೆಳೆಯುತ್ತಿದೆ.

    ಚಿತ್ರದಲ್ಲಿ ರಮೇಶ್ ಅರವಿಂದ್ ಇನ್ಸ್‍ಪೆಕ್ಟರ್ ವಿಷ್ಣು ಪಾತ್ರದಲ್ಲಿ ಬಣ್ಣ ಹಚ್ಚಿದ್ದು, ಜವಾಬ್ದಾರಿಯುತ ಫ್ಯಾಮಿಲಿ ಮ್ಯಾನ್ ಆಗಿಯೂ ಕಾಣಸಿಗಲಿದ್ದಾರೆ. ಡಿಂಪಲ್ ಕ್ವೀನ್ ರಚಿತ ರಾಮ್, ಪೂರ್ಣ ಚಿತ್ರದ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದು, ಪ್ರಕಾಶ್ ಬೆಳವಾಡಿ, ಶೋಭರಾಜ್, ರಾಜು ತಾಳಿಕೋಟೆ, ಮಾಲತಿ ಸುಧೀರ್, ಬೇಬಿ ಸ್ಮಯ ಚಿತ್ರದ ತಾರಾಬಳಗದಲ್ಲಿದ್ದಾರೆ.

    ಸೂರಜ್ ಪ್ರೋಡಕ್ಷನ್ಸ್ ಬ್ಯಾನರ್ ನಡಿ ಸಿನಿಮಾ ನಿರ್ಮಾಣವಾಗಿದ್ದು, ಉಮಾ, ಎಂ.ರಮೇಶ್ ರೆಡ್ಡಿ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ರವಿ ಬಸ್ರೂರು ಸಂಗೀತ ನಿರ್ದೇಶನದಲ್ಲಿ ಸಿನಿಮಾ ಮೂಡಿ ಬಂದಿದ್ದು, ಸತ್ಯ ಹೆಗ್ಡೆ ಕ್ಯಾಮೆರಾ ಕಣ್ಣಲ್ಲಿ ಸಿನಿಮಾ ಸೆರೆಯಾಗಿದೆ. ಉಳಿದಂತೆ ಶ್ರೀನಿವಾಸ್ ಕಲಾಲ್ ಸಂಕಲನ, ಗುರು ಕಶ್ಯಪ್ ಸಂಭಾಷಣೆ, ಧನಂಜಯ್ ನೃತ್ಯ ನಿರ್ದೇಶನ, ಜಾಲಿ ಬಾಸ್ಟಿನ್, ರವಿವರ್ಮ ಸಾಹಸ ನಿರ್ದೇಶನ ಚಿತ್ರಕ್ಕಿದೆ. ಟ್ರೇಲರ್ ತುಣುಕಿನ ಮೂಲಕವೇ ಈ ಮಟ್ಟಿನ ಥ್ರಿಲ್ ನೀಡಿರುವ 100 ಸಿನಿಮಾ ಚಿತ್ರಮಂದಿರದಲ್ಲಿ ಪ್ರೇಕ್ಷಕರನ್ನು ಎಷ್ಟು ಸೆಳೆಯಲಿದೆ ಅನ್ನೋದಕ್ಕೆ ನವೆಂಬರ್ 19ಕ್ಕೆ ಉತ್ತರ ಸಿಗಲಿದೆ.