Tag: publictv

  • ನಮಗಿಂತ ಸಣ್ಣವನಿಗೆ ಶ್ರದ್ಧಾಂಜಲಿ ಮಾಡೋ ದಿನ ಬರುತ್ತದೆ ಅಂದುಕೊಂಡಿರಲಿಲ್ಲ: ಜನಾರ್ದನ ರೆಡ್ಡಿ

    ನಮಗಿಂತ ಸಣ್ಣವನಿಗೆ ಶ್ರದ್ಧಾಂಜಲಿ ಮಾಡೋ ದಿನ ಬರುತ್ತದೆ ಅಂದುಕೊಂಡಿರಲಿಲ್ಲ: ಜನಾರ್ದನ ರೆಡ್ಡಿ

    – ಪುನೀತ್ ಸೇವೆ ಮಾತಲ್ಲಿ ವರ್ಣನೆ ಮಾಡಲಾಗುತ್ತಿಲ್ಲ

    ಬಳ್ಳಾರಿ: ಪುನೀತ್ ರಾಜ್‍ಕುಮಾರ್ ಅವರ ಶ್ರದ್ಧಾಂಜಲಿ ಸಭೆಯಲ್ಲಿ ಮಾಜಿ ಸಚಿವ ಜನಾರ್ದನ ರೆಡ್ಡಿ ಅವರು ಅಪ್ಪು ನೆನಪುಗಳನ್ನು ಮೆಲುಕು ಹಾಕಿದ್ದಾರೆ. ನಮಗಿಂತ ಸಣ್ಣವನಿಗೆ ಶ್ರದ್ಧಾಂಜಲಿ ಮಾಡೋ ದಿನ ಬರುತ್ತದೆ ಅಂದುಕೊಂಡಿರಲಿಲ್ಲ ಎಂದು ಬೇಸರವನ್ನು ಹೊರಹಾಕಿದ್ದಾರೆ.

    ಶ್ರದ್ಧಾಂಜಲಿ ಸಭೆಯಲ್ಲಿ ಮಾತನಾಡಿದ ಅವರು, ನಮಗಿಂತ ಸಣ್ಣವನಿಗೆ ಶ್ರದ್ಧಾಂಜಲಿ ಸಭೆ ಮಾಡೋ ದಿನ ಬರುತ್ತದೆ ಅಂದುಕೊಂಡಿರಲಿಲ್ಲ. ಪುನೀತ್ ಸೇವೆ ಮಾತಲ್ಲಿ ವರ್ಣನೆ ಮಾಡಲಾಗುತ್ತಿಲ್ಲ. ಅಪ್ಪು ಸಮಾಜ ಸೇವೆ ಇಡೀ ವಿಶ್ವಕ್ಕೆ ಗೊತ್ತಾಗಿದೆ. ಪಾಕಿಸ್ತಾನದ ಅಭಿಮಾನಿಯೊಬ್ಬ ಪುನೀತ್ ಪಾಲೋ ಮಾಡುತ್ತಿದ್ದರು ಅನ್ನೋದು ಕೂಡ ವಿಶೇಷವಾಗಿದೆ. ಕೌಟುಂಬಿಕ ಚಿತ್ರದಿಂದಲೇ ಪುನೀತ್ ಫೇಮಸ್ ಆಗಿದ್ದರು. ಸಂದೇಶ ಇರುವ ಸಿನಿಮಾಗಳಲ್ಲಿ ನಟಸುತ್ತಿದ್ದರು. ನನ್ನ ಮಗನನ್ನು ಶೂಟಿಂಗ್‍ಗೆ ಕರೆದುಕೊಂಡು ಹೋಗುತ್ತಿದ್ದರು. ಹೀರೋ ಮಾಡೋ ವಿಚಾರ ನನಗೆ ಬಿಡಿ ಎಂದಿದ್ದರು. ಇದನ್ನೂ ಓದಿ:  ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ

     

     

    ರಾಜಕುಮಾರ ಪಾರ್ಕ್ ಉದ್ಘಾಟನೆ ವೇಳೆ ಇಡೀ ಕುಟುಂಬವೇ ಬಳ್ಳಾರಿಗೆ ಬಂದಿತ್ತು. ಹದಿನಾರು ವೃದ್ಧಾಶ್ರಮ, ವಿದ್ಯಾಭ್ಯಾಸ, ದಾನದರ್ಮ, ಮಾಡಿದ್ದರು ಯಾರಿಗೂ ಹೇಳುತ್ತಿರಲಿಲ್ಲ. ಇವತ್ತು ಪುನೀತ್‍ನಿಂದಾಗಿ ಸೇವೆ ಮಾಡಲು ಹೊರಗೆ ಬಂದಿದ್ದೇನೆ. ಪುನೀತ್ ಇಲ್ಲವೆನ್ನೋದು ನಂಬಲು ಆಗುತ್ತಿಲ್ಲ. ರಾಜಕೀಯದಲ್ಲಿ ಉನ್ನತ ಸ್ಥಾನ ನನಗೆ ಬೇಕಿಲ್ಲ. ಆದರೆ ಬಳ್ಳಾರಿ ಜನರಿಗೆ ಸೇವೆ ಮಾಡಬೇಕಿದೆ. ಕೊನೆಯ ಉಸಿರಿರೋವರೆಗೂ ಬಳ್ಳಾರಿಯಲ್ಲಿ ಇರಬೇಕಿದೆ. ಬಳ್ಳಾರಿ ಜನರ ಸೇವೆ ಮಾಡುತ್ತೆನೆ. ರಾಜಕುಮಾರ ಸಿನಿಮಾದ ಸ್ಪೂರ್ತಿಯಿಂದ ನಮ್ಮ ವೃದ್ದಾಶ್ರಮದಲ್ಲಿ ಇದ್ದ ತಂದೆ ತಾಯಿಯನ್ನು ಕರೆದುಕೊಂಡು ಹೋಗಿದ್ದಾರೆ ಎಂದು ಹೇಳುತ್ತಾ ಭಾವುಕರಾಗಿದ್ದಾರೆ. ಇದನ್ನೂ ಓದಿ:   ಅಪ್ಪು ಸಮಾಧಿಗೆ ಮಂಡಕ್ಕಿ ಹಾರ ಮಾಡಿಕೊಂಡು ಬಂದ ವೃದ್ಧೆ

  • ಅಪ್ಪು ಸಮಾಧಿಗೆ ಮಂಡಕ್ಕಿ ಹಾರ ಮಾಡಿಕೊಂಡು ಬಂದ ವೃದ್ಧೆ

    ಅಪ್ಪು ಸಮಾಧಿಗೆ ಮಂಡಕ್ಕಿ ಹಾರ ಮಾಡಿಕೊಂಡು ಬಂದ ವೃದ್ಧೆ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಅವರ ಸಮಾಧಿಗೆ, ಕುಂಟುಂಬ 11 ದಿನಗಳ ಕಾರ್ಯವನ್ನು ಮಾಡಿದೆ. ವೃದ್ಧೆ ಸುಮಿತ್ರ ಬಾಯಿ ಅವರು ಅಪ್ಪು ಸಮಾಧಿಗೆ ಮಂಡಕ್ಕಿ ಹಾರ ಮಾಡಿಕೊಂಡು ಬಂದಿದ್ದಾರೆ.

    ತುಮಕೂರು ಜಿಲ್ಲೆ ಗುಬ್ಬಿಯಿಂದ ಮಂಡಕ್ಕಿ ಹಾರ ತಯಾರಿಸಿಕೊಂಡು ವೃದ್ದೆ ಸುಮಿತ್ರ ಬಾಯಿ ಅಪ್ಪು ಸಮಾಧಿಯ ಬಳಿ ಬಂದಿದ್ದಾರೆ. ಡಾ. ರಾಜ್ ಕುಮಾರ್ ನಿಧನದ ದಿನದಿಂದ ಡಾ. ರಾಜ್ ಪುತಳಿಗೆ ಕಡ್ಲೆ ಪುರಿ ಹಾರ ಮಾಡಿಕೊಂಡು ಬರುತ್ತಿದ್ದರು. ಪುನೀತ್ ಮನೆಗೆ ಹೋದಾಗ ಎರಡು ಮೂರು ಬಾರಿ ರೆಷ್ಮೇ ಸ್ಯಾರಿಯನ್ನು ಪುನೀತ್ ಅವರ ಪತ್ನಿ ಉಡುಗರೆಯಾಗಿ ಸುಮಿತ್ರ ಬಾಯಿ ಕೊಟ್ಟಿದ್ದಾರೆ ಎಂದು ಹೇಳುತ್ತಾ ಕಣ್ಣಲ್ಲಿ ನೀರು ತುಂಬಿಕೊಂಡಿದ್ದಾರೆ.  ಇದನ್ನೂ ಓದಿ:  ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ

    ಪಾರ್ವತಮ್ಮ, ಅಂಬರೀಶ್ ಅವರಿಗೆ ಮಂಡಕ್ಕಿ ಹಾರ ಹಾಕುತ್ತಿದ್ದೆ. ಇದ್ದಕ್ಕಿದ್ದ ಹಾಗೇ ಇವರು ಹೋಗಿ ಬಿಟ್ಟರು. ಆಗ ರಾತ್ರೆಯೆಲ್ಲ ಕುಳಿತು ಹಾರವನ್ನು ಪೊಣಿಸಿ ಚಿಕ್ಕ ಹಾರವನ್ನು ತಂದು ಕಾಕಿದ್ದೆ. ಹಾಲು ತುಪ್ಪವಾದ ನಂತರ ಕುಣಿಗಲ್‍ಗೆ ಹೋಗಿ ಬತಾಸ್ ತಂದು ಹಾರವನ್ನು ಕೇವಲ ಮೂರು ದಿನದಲ್ಲಿ ಪೊಣಿಸಿದ್ದೆವೆ. ಇದನ್ನು ಮೂರು ದಿನಗಳಲ್ಲಿ ಮಾಡಲು ಸಾಧ್ಯವಾಗುವುದಿಲ್ಲ. ನಾನು ಸೊಸೆಯಂದಿರು ಕುಳಿತು ಪೊಣಿಸಿ ಹಾರವನ್ನು ತಯಾರಿಸಿದ್ದೆವೆ. ನಾನು ಅಪ್ಪು ಅವರ ಮನೆಗೆ ಹೋಗಿ ಬರುತ್ತಿದ್ದೆನು. ಅವರ ಮನೆಗೆ ಹೋಗಲು ಸಾಧ್ಯವಾಗಲಿಲ್ಲ. ಹೀಗಾಗಿ ನಾನು ಇಲ್ಲಿಗೆ ಬಂದೆ ಎಂದು ಹೇಳುತ್ತಾ ಕಣ್ಣೀರು ಹಾಕಿದ್ದಾರೆ.

  • ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ

    ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ಪದ್ಮಶ್ರೀ

    ನವದೆಹಲಿ: ಕಿತ್ತಳೆ ಮಾರಿ ಶಾಲೆ ಕಟ್ಟಿದ ಹರೇಕಳ ಹಾಜಬ್ಬರಿಗೆ ರಾಷ್ಟ್ರಪತಿ ರಾಮ್‍ನಾಥ್ ಕೋವಿಂದ್ ಅವರು ಪದ್ಮಶ್ರೀ ಪ್ರಶಸ್ತಿಯನ್ನು ನೀಡಿ ಗೌರವಿಸಿದ್ದಾರೆ.

    ರಾಷ್ಟ್ರಪತಿ ಭವನದಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಹರೇಕಳ ಹಾಜಬ್ಬರಿಗೆ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಈ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಸೇರಿದಂತೆ ಗಣ್ಯರು ಉಪಸ್ಥಿತರಿದ್ದರು.

    ಹಾಜಬ್ಬ ಕಳೆದ 20 ವರ್ಷಗಳಿಂದ ದಕ್ಷಿಣ ಕನ್ನಡದ ಕೊಣಾಜೆ ಸಮೀಪದ ಹರೇಕಳ ನ್ಯೂ ಪಡ್ಪು ಗ್ರಾಮದಲ್ಲಿ ಬಡ ಮಕ್ಕಳಿಗೆ ಶಿಕ್ಷಣವನ್ನು ನೀಡುತ್ತಿದ್ದಾರೆ. ವಿಶೇಷವೆಂದರೆ ತನಗಿಲ್ಲದ ಶಿಕ್ಷಣ ತನ್ನ ಊರಿನ ಮಕ್ಕಳಿಗೆ ಸಿಗಬೇಕು ಎನ್ನುವ ಮಹದಾಸೆಯಿಂದ ಕಿತ್ತಳೆ ಮಾರುತ್ತಿದ್ದ ಹರೇಕಳ ಹಾಜಬ್ಬ, ಕಿತ್ತಳೆ ಮಾರಿ ಜೀವನ ಸಾಗಿಸಿ ಉಳಿದ ಹಣದಿಂದಲೇ ಅಂಗನವಾಡಿ ಆರಂಭಿಸುವ ಮೂಲಕ ಶಿಕ್ಷಣ ನೀಡುತ್ತಿದ್ದಾರೆ.

    ಪ್ರಶಸ್ತಿ: 2004ರಲ್ಲಿ ಕನ್ನಡ ಪತ್ರಿಕೆಯೊಂದು ಹಾಜಬ್ಬರನ್ನು ವರ್ಷದ ವ್ಯಕ್ತಿ ಎಂದು ಪ್ರಶಸ್ತಿ ನೀಡಿ ಗುರುತಿಸುವ ಮೂಲಕ ಹಾಜಬ್ಬ ಬೆಳಕಿಗೆ ಬಂದಿದ್ದರು. ಬಳಿಕ ದೆಹಲಿಯ ಸಿಎನ್‍ಎನ್-ಐಬಿಎನ್ ರಿಯಲ್ ಹೀರೋ ಪ್ರಶಸ್ತಿ ನೀಡಿ ಗೌರವಿಸಿತ್ತು. ಮಂಗಳೂರು ವಿಶ್ವವಿದ್ಯಾನಿಲಯ ಇರುವ ಕೊಣಾಜೆ ಸಮೀಪದ ಹರೇಕಳದಲ್ಲಿ ಗ್ರಾಮೀಣ ಮಕ್ಕಳಲ್ಲಿ ಶಾಲೆಯ ಸೌಲಭ್ಯ ಇರಲಿಲ್ಲ. ಮಂಗಳೂರಿನ ಕೇಂದ್ರ ಪ್ರದೇಶ ಸ್ಟೇಟ್ ಬ್ಯಾಂಕ್ ಸರ್ಕಲಿನಲ್ಲಿ ಕಿತ್ತಳೆ ಹಣ್ಣು ಮಾರಾಟ ಮಾಡುವ ಕಾಯಕ ಮಾಡುತ್ತಿದ್ದ ಹಾಜಬ್ಬ ತಾವೇ ಶಾಲೆಯೊಂದನ್ನು ತನ್ನೂರಿನಲ್ಲಿ ನಿರ್ಮಿಸಿದ್ದರು.

    ಕಿತ್ತಳೆ ಮಾರಾಟ ಮಾಡುತ್ತಿದ್ದಾಗ ವಿದೇಶಿ ಮಹಿಳೆಯ ಆಂಗ್ಲ ಭಾಷೆಯ ಪ್ರಶ್ನೆಗೆ ಉತ್ತರ ನೀಡಲಾಗದ ಹಾಜಬ್ಬರಿಗೆ ಶಿಕ್ಷಣದ ಮಹತ್ವ ಅರಿವಾಗಿತ್ತು. ಈ ಹಿನ್ನೆಲೆಯಲ್ಲಿಯೇ ತನ್ನೂರಿನ ಮಕ್ಕಳಿಗೆ ಶಾಲೆ ತೆರೆಯಲು ಕಚೇರಿಯಿಂದ ಕಚೇರಿಗೆ ಅಲೆದು ಶಾಲೆ ನಿರ್ಮಾಣ ಮಾಡಿದ್ದರು. ಇವರ ಸಾಧನೆಯ ವಿಚಾರ ಮಾಧ್ಯಮಗಳಲ್ಲಿ ಪ್ರಕಟವಾಗಿದ್ದರೂ ಹೆಚ್ಚಿನ ಪ್ರಚಾರ ಪಡೆದುಕೊಂಡಿರಲಿಲ್ಲ. ಇದೀಗ ಅವರು ತನ್ನೂರಿನಲ್ಲಿ ಕಾಲೇಜು ಆರಂಭಿಸುವ ಆಶಯ ಹೊಂದಿದ್ದಾರೆ.

  • ಪುನೀತ್ ಅಗಲಿಕೆಯ ಶೋಕ ನಿರಂತರವಾಗಿರುತ್ತದೆ: ರಂಗಾಯಣ ರಘು

    ಪುನೀತ್ ಅಗಲಿಕೆಯ ಶೋಕ ನಿರಂತರವಾಗಿರುತ್ತದೆ: ರಂಗಾಯಣ ರಘು

    ಬೆಂಗಳೂರು: ಪುನೀತ್ ರಾಜ್‍ಕುಮಾರ್ ಅವರಿಗೆ 11 ದಿನದ ಕಾರ್ಯವನ್ನು ಕುಟುಂಬಸ್ಥರು ನೆರವೇರಿಸಿದ್ದಾರೆ. ಈ ವೇಳೆ ಕಡ್ಡಿಪುಡಿ ಚಂದ್ರು, ರಂಗಾಯಣ ರಘು, ರವಿಶಂಕರ್ ಗೌಡ ಅವರ ಅಪ್ಪು ಸಮಾಧಿಯ ದರ್ಶನವನ್ನು ಪಡೆದುಕೊಂಡಿದ್ದಾರೆ. ಸಮಾಧಿಗೆ ಭೇಟಿ ಕೊಟ್ಟು ಪೂಜಿಸಿ, ಸ್ವಲ್ಪ ಸಮಯ ಇಲ್ಲೇ ಕುಳಿತ ನಟರು ಅಪ್ಪು ನೆನಪುಗಳನ್ನು ಮಾಧ್ಯಮದವರ ಜೊತೆಗೆ ಮೆಲಕು ಹಾಕಿದ್ದಾರೆ.

    ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ನಟರಾದ ರಂಗಾಯಣ ರಘು , ರವಿಶಂಕರ್ ಗೌಡ , ಕಡ್ಡಿಪುಡಿ ಚಂದ್ರು ಅಪ್ಪು ಜೊತೆಗೆ ಇರುವ ಬಾಂಧವ್ಯ ಮತ್ತು ಅವರೊಂದಿಗೆ ಇರುವ ಒಡನಾಟವನ್ನು ನೆನೆದು ಭಾವುಕರಾಗಿದ್ದಾರೆ. ಇದನ್ನೂ ಓದಿ: ಆತ್ಮಹತ್ಯೆ ಮಾಡ್ಕೊಂಡ ಅಪ್ಪು ಅಭಿಮಾನಿ ಮನೆಗೆ ರಾಘಣ್ಣ ಭೇಟಿ, ಸಾಂತ್ವನ

    ಪುನೀತ್ ಅಗಲಿಕೆಯ ಶೋಕ ನಿರಂತರವಾಗಿರುತ್ತದೆ. ಕುಟುಂಬವನ್ನ ದೇವರೇ ಕಾಪಾಡಬೇಕು. ಅಶ್ವಿನಿಯವರ ದುಃಖ ನೋಡಿದರೆ ತುಂಬಾ ಕಷ್ಟ ಆಗುತ್ತದೆ ರಂಗಾಯಣ ರಘು ಎಂದು ಹೇಳುತ್ತಾ ದುಃಖಿತರಾಗಿದ್ದಾರೆ. ಇದನ್ನೂ ಓದಿ: ರಾಜ್ಯದ ಎಲ್ಲ ಥಿಯೇಟರ್‌‌ಗಳಲ್ಲಿ ಏಕಕಾಲಕ್ಕೆ ಅಪ್ಪುಗೆ ಶ್ರದ್ಧಾಂಜಲಿ

    Puneeth Rajkumar

    ಕಡ್ಡಿಪುಡಿ ಚಂದ್ರು ಮಾತನಾಡಿ, ನನಗೆ ಅಪ್ಪು ಜೊತೆ ಸಿನಿಮಾ ಹೊರತಾಗಿಯೂ ಕುಟುಂಬದ ಜೊತೆಗೆ ಬಹಳ ನಂಟಿದೆ. ಎಂಥಾ ಅದ್ಭುತ ಕಲಾವಿದನನ್ನ ನಾವು ಕಳೆದುಕೊಂಡುಬಿಟ್ವಿ. ಅವರೊಂದಿಗೆ ಕಳೆದಿರುವ ಸಾಕಷ್ಟು ನೆನಪುಗಳಿವೆ ಎಂದು ಹೇಳುತ್ತಾ ಕಣ್ಣಂಚಲಿ ನೀರು ತುಂಬಿಕೊಂಡಿದ್ದಾರೆ.

    ನಾನು ಅವರೊಂದಿಗೆ ಕಳೆದ ನೆನಪುಗಳಿಗೆ ಲೆಕ್ಕವಿಲ್ಲ. ನಾನು ಅವರನ್ನು ಚಿಕ್ಕಯಜಮಾನ್ರೆ ಎಂದು ಕರೆಯುತ್ತಿದೆ. ಅವರು ಗುಣಗಾನ ಮಾತಲ್ಲಿ ಹೇಳಲಾಗುವುದಿಲ್ಲ ಎಂದು ರವಿಶಂಕರ್ ಗೌಡ ಹೇಳಿ ಅಪ್ಪು ಅವರನ್ನುಕಳೆದು ಕೊಂಡಿರುವ ಬೇಸರವನ್ನು ತೋಡಿಕೊಂಡಿದ್ದಾರೆ.

  • ರುಚಿಯಾದ ತರಕಾರಿ ಸಾಗು ನಾಲಿಗೆಗೆ ರುಚಿ, ಆರೋಗ್ಯಕ್ಕೆ ಒಳ್ಳೆಯದು

    ರುಚಿಯಾದ ತರಕಾರಿ ಸಾಗು ನಾಲಿಗೆಗೆ ರುಚಿ, ಆರೋಗ್ಯಕ್ಕೆ ಒಳ್ಳೆಯದು

    ನಾವು ಸೇವಿಸುವ ಆಹಾರ ರುಚಿಯಾಗಿರಲಿ ಮತ್ತು ಆರೋಗ್ಯವಾಗಿರಬೇಕು ಎಂದು ಪ್ರತಿಯೊಬ್ಬರು ಅಂದುಕೊಳ್ಳುತ್ತೇವೆ. ನಾವು ಇಂದು ತಿಳಿಸುತ್ತಿರುವ ತರಕಾರಿ ಸಾಗು ಸಖತ್ ರುಚಿಯಾಗಿದೆ ಮತ್ತು ತರಕಾರಿಗಳನ್ನು ಬಳಸುತ್ತಿರುವುದರಿಂದ ಆರೋಗ್ಯಕ್ಕೆ ಬೇಕಾಗಿರುವ ಪ್ರೋಟಿನ್ ಕೂಡಾ ಸಿಗುತ್ತದೆ. ನೀವು ಸರಳವಾಗಿ ಮತ್ತು ದಿಡೀರ್ ಆಗಿ ಆಹಾರ ತಯಾರಿಸಬೇಕು ಎಂದು ಯೋಚಿಸುತ್ತಿದ್ದರ ಎಂದಾದರೆ ಇಂದು ಈ ಅಡುಗೆಯನ್ನು ಮಾಡಲು ಒಮ್ಮೆ ಟ್ರೈ ಮಾಡಿ.

    ಬೇಕಾಗುವ ಸಾಮಗ್ರಿಗಳು:
    ಬೀನ್ಸ್, ಕ್ಯಾರೆಟ್, ಬಟಾಣಿ, ಹೂಕೋಸು, ಆಲೂಗಡ್ಡೆ – 1ಕಪ್
    ಉಪ್ಪು-ರುಚಿಗೆ ತಕ್ಕಷ್ಟು
    ಈರುಳ್ಳಿ- 1
    ಟೊಮೆಟೋ- 2
    ಗೋಡಂಬಿ-ಸ್ವಲ್ಪ
    ಬೆಳ್ಳುಳ್ಳಿ- ಸ್ವಲ್ಪ
    ಹಸಿಮೆಣಸಿನ ಕಾಯಿ-6-6
    ಹುರಿಗಡಲೆ- 4 ಚಮಚ
    ದನಿಯಾ ಪುಡಿ- 1 ಚಮಚ
    ಶುಂಠಿ-ಸ್ವಲ್ಪ
    ಗಸಗಸೆ-ಸ್ವಲ್ಪ
    ಪುದೀನಾ-ಸ್ವಲ್ಪ
    ಕೊತ್ತಂಬರಿ ಸೊಪ್ಪು-ಸ್ವಲ್ಪ
    ಚಕ್ಕ,ಲವಂಗ, ಏಲಕ್ಕಿ, ಪಲಾವ್ ಎಲೆ
    ಅಡುಗೆ ಎಣ್ಣೆ- 1ಕಪ್

    ಮಾಡುವ ವಿಧಾನ:
    * ಮೊದಲಿಗೆ ಪಾತ್ರೆಯೊಂದಕ್ಕೆ ಸ್ವಲ್ಪ ನೀರು, ಉಪ್ಪು ಹಾಗೂ ತರಕಾರಿಗಳನ್ನು ಹಾಕಿ ಚೆನ್ನಾಗಿ ಬೇಯಿಸಿಕೊಳ್ಳಬೇಕು.
    * ಮಿಕ್ಸರ್ ಜಾರ್ ನಲ್ಲಿ ಈರುಳ್ಳಿ, ಟೊಮೆಟೋ, ಗೋಡಂಬಿ, ಬೆಳ್ಳುಳ್ಳಿ, ಹಸಿಮೆಣಸಿನ ಕಾಯಿ, ಹುರಿಗಡಲೆ, ದನಿಯಾ ಅಥವಾ ದನಿಯಾ ಪುಡಿ, ಶುಂಠಿ, ಗಸಗಸೆ, ಪುದೀನಾ, ಕೊತ್ತಂಬರಿ ಸೊಪ್ಪು, ಚಕ್ಕ,ಲವಂಗ, ಏಲಕ್ಕಿ, ಪಲಾವ್ ಎಲೆ ಸ್ವಲ್ಪ ನೀರು ಹಾಕಿ ನುಣ್ಣಗೆ ರುಬ್ಬಿಕೊಳ್ಳಬೇಕು. ಇದನ್ನೂ ಓದಿ: ಸ್ಪೆಷಲ್ ಪೈನಾಪಲ್ ಪಾಯಸ ಮಾಡಿ ಹಬ್ಬವನ್ನು ಸಂಭ್ರಮಿಸಿ

    * ನಂತರ ಒಲೆಯ ಮೇಲೆ ಬಾಣಲೆ ಇಟ್ಟು ಇದಕ್ಕೆ ಸ್ವಲ್ಪ ಎಣ್ಣೆ ಹಾಕಿ ಕಾದ ನಂತರ ಉಳಿದ ಈರುಳ್ಳಿ ಹಾಗೂ ಟೊಮೆಟೋವನ್ನು ಸಣ್ಣಗೆ ಕತ್ತರಿಸಿಕೊಂಡು ಬಿಸಿಯಾದ ಎಣ್ಣೆಗೆ ಹಾಕಿ ಹುರಿದುಕೊಳ್ಳಬೇಕು. ಇದನ್ನೂ ಓದಿ: ಸ್ಪೆಷಲ್ ಪೈನಾಪಲ್ ಪಾಯಸ ಮಾಡಿ ಹಬ್ಬವನ್ನು ಸಂಭ್ರಮಿಸಿ
    * ರುಬ್ಬಿಕೊಂಡ ಮಸಾಲೆಯನ್ನು ಕುದಿಸಿಕೊಳ್ಳಬೇಕು.
    * ಅರಿಶಿಣ ಪುಡಿ, ರುಚಿಗೆ ತಕ್ಕಷ್ಟು ಉಪ್ಪು, ಈಗಾಗಲೇ ಬೇಯಿಸಿಕೊಂಡ ತರಕಾರಿಗಳನ್ನು ಹಾಕಿ ಕುದಿಸಿದರೆ ರುಚಿಕರವಾದ ತರಕಾರಿ ಸಾಗು ಸವಿಯಲು ಸಿದ್ಧವಾಗುತ್ತದೆ.

  • ಸ್ವಿಗ್ಗಿ ಊಟ ತಂದು ಕೊಡದಕ್ಕೆ ಪಿಎಂ, ಸಿಎಂಗೆ ಪತ್ರ ಬರೆದ ಸಿನಿಮಾ ಸೂಪರ್ ಸ್ಟಾರ್  

    ಸ್ವಿಗ್ಗಿ ಊಟ ತಂದು ಕೊಡದಕ್ಕೆ ಪಿಎಂ, ಸಿಎಂಗೆ ಪತ್ರ ಬರೆದ ಸಿನಿಮಾ ಸೂಪರ್ ಸ್ಟಾರ್  

    ನವದೆಹಲಿ: ಸ್ವಿಗ್ಗಿಯಲ್ಲಿ ಊಟ ಸರಿಯಾಗಿ ಸಮಯಕ್ಕೆ ಬರಲಿಲ್ಲ ಎಂದರೆ ಕಂಪನಿಗೆ ಕರೆ ಮಾಡಿ ಅಥವಾ ಸಾಮಾಜಿಕ ಜಾಲತಾಣದಲ್ಲಿ ದೂರುವುದನ್ನು ನಾವು ನೋಡಿದ್ದೆವೆ. ಆದರೆ ಬೆಂಗಾಳಿ ಸಿನಿಮಾ ಸೂಪರ್ ಸ್ಟಾರ್  ಪ್ರಸೂನ್‌ಜಿತ್ ಚಟರ್ಜಿ  , ಸ್ವಿಗ್ಗಿ ವಿರುದ್ಧ ಪ್ರಧಾನಿ ಮೋದಿ ಹಾಗೂ ಬಂಗಾಳ ಮುಖ್ಯಮಂತ್ರಿ ಮಮತಾಗೆ ಬಹಿರಂಗ ಪತ್ರ ಬರೆದಿದ್ದಾರೆ.

    ತಾವು ಆರ್ಡರ್ ಮಾಡಿದ ಆಹಾರವನ್ನು ಸ್ವಿಗ್ಗಿ ತಂದುಕೊಡಲಿಲ್ಲ. ಇದರ ಕುರಿತಾಗಿ ಗಮನ ಹರಿಸಬೇಕು ಎಂದು ಒತ್ತಾಯಿಸಿ ಟ್ವೀಟ್ ಮಾಡಿದ್ದಾರೆ. ಮೋದಿ ಹಾಗೂ ಮಮತಾ ಅವರಿಗೆ ಬರೆದಿರುವ ಪತ್ರ ಇದಾಗಿದೆ.

    ಪತ್ರದಲ್ಲಿ ಏನಿದೆ?:
    ಪ್ರಧಾನಿ ನರೇಂದ್ರ ಮೋದಿ, ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಹಬ್ಬದ ಶುಭಾಶಯಗಳು. ನೀವು ಚೆನ್ನಾಗಿರುತ್ತೀರಿ ಎಂದು ಭಾವಿಸುತ್ತೇವೆ. ನಾನು ಇತ್ತೀಚೆಗೆ ಎದುರಿಸಿದ ಸಮಸ್ಯೆಯನ್ನು ನಿಮ್ಮ ಗಮನಕ್ಕೆ ತರುತ್ತೇನೆ. ನವೆಂಬರ್ 3 ರಂದು ನಾನು ಆಹಾರ ವಿತರಣಾ ಅಪ್ಲಿಕೇಶನ್ ಆಗಿರುವ ಸ್ವಿಗ್ಗಿಯಲ್ಲಿ ಊಟ ಆರ್ಡರ್ ಮಾಡಿದ್ದೆ. ಆದರೆ ನಾನು ಆಹಾರವನ್ನು ಸ್ವೀಕರಿಸಲಿಲ್ಲ. ಸ್ವಿಗ್ಗಿ ಅವರಿಗೆ ನಾನು ಆಗಿರುವ ಸಮಸ್ಯೆಯನ್ನು ಹೇಳಿಕೊಂಡೆ. ಅವರು ಆರ್ಡರ್ ಪ್ರಿಪೇಯ್ಡ್ ಆಗಿರುವುದರಿಂದ ಅವರು ನನಗೆ ಹಣವನ್ನು ಹಿಂದಿರುಗಿಸಿದ್ದಾರೆ. ಇದನ್ನೂ ಓದಿ: ಸೋನಂ, ರಿಯಾ ಫೋಟೋ ಹಾಕಿ ಮಿಸ್ ಮಾಡ್ಕೊಳ್ತಿದ್ದೀನಿ ಅಂದ್ರು ಅನಿಲ್ ಕಪೂರ್

    ಆದರೆ ಮುಂದೆ ಯಾರಾದರೂ ಈ ಸಮಸ್ಯೆಯನ್ನು ಎದುರಿಸಬಹುದು ಎಂದು ನಾನು ಭಾವಿಸುತ್ತೇನೆ. ಹೀಗಾಗಿ ಈ ವಿಚಾರವನ್ನು ನಿಮ್ಮ ಗಮನಕ್ಕೆ ತರುತ್ತಿದ್ದೆನೆ. ಯಾರಾದರೂ ತಮ್ಮ ರಾತ್ರಿಯ ಊಟಕ್ಕೆ ಈ ಫುಡ್ ಅಪ್ಲಿಕೇಶನ್‍ಗಳನ್ನು ಅವಲಂಬಿಸಿದ್ದರೆ ಏನು? ಅವರು ಹಸಿವಿನಿಂದ ಇರುತ್ತಾರೆಯೇ? ಅಂತಹ ಅನೇಕ ಸಂದರ್ಭಗಳು ಇರಬಹುದು. ಹೀಗೆ ಈ ಸಮಸ್ಯೆ ಕುರಿತಾಗಿ ಮಾತನಾಡುವುದು ಅಗತ್ಯ ಎಂದು ನನಗೆ ಅನಿಸಿತು ಎಂದು ಬರೆದುಕೊಂಡು ಮೋದಿ ಮತ್ತು ಮಮತಾ ಅವರು ಇದರ ಕುರಿತಾಗಿ ಗಮನ ಹರಿಸಬೇಕು ಎಂದು ಒತ್ತಾಯಿಸಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಭೋಜನಪ್ರಿಯ ಅಪ್ಪುಗೆ ಯಾವ ಯಾವ ಫುಡ್ ಇಷ್ಟ? ಯಾವೆಲ್ಲ ಹೋಟೆಲ್‍ಗೆ ಹೋಗ್ತಿದ್ರು?

  • ಉಗ್ರಗಾಮಿಗಳ ಗುಂಡಿಗೆ ಪೊಲೀಸ್ ಸಿಬ್ಬಂದಿ ಹುತಾತ್ಮ

    ಉಗ್ರಗಾಮಿಗಳ ಗುಂಡಿಗೆ ಪೊಲೀಸ್ ಸಿಬ್ಬಂದಿ ಹುತಾತ್ಮ

    ಶ್ರೀನಗರ: ಉಗ್ರಗಾಮಿಗಳ ಗುಂಡಿಗೆ ಜಮ್ಮು ಕಾಶ್ಮೀರದ ಪೊಲೀಸ್ ಸಿಬ್ಬಂದಿಯೊಬ್ಬರು ಹುತಾತ್ಮರಾಗಿದ್ದಾರೆ.

    ತೌಸೀಫ್ ಅಹಮದ್ ಹುತಾತ್ಮ ಪೊಲೀಸ್ ಸಿಬ್ಬಂದಿಯಾಗಿದ್ದಾರೆ. ಶ್ರೀನಗರದ ಬಾಟ್‍ಮಲೂ ಪ್ರದೇಶದಲ್ಲಿ ಭಯೋತ್ಪಾದಕರ ಗುಂಡಿಗೆ ಹುತಾತ್ಮರಾಗಿದ್ದಾರೆ.

    ಜಮ್ಮು ಕಾಶ್ಮೀರ ಪೊಲೀಸ್ ಇಲಾಖೆಯ ಕಾನ್‍ಸ್ಟೆಬಲ್ ತೌಸೀಫ್ ಅಹಮದ್ ಅವರ ಮೇಲೆ ಅವರ ಮನೆಯ ಹತ್ತಿರವೇ ರಾತ್ರಿ 8 ಗಂಟೆಗೆ ಉಗ್ರರು ಗುಂಡು ಹಾರಿಸಿದ್ದಾರೆ. ತೀವ್ರವಾಗಿ ಗಾಯಗೊಂಡ ಕಾನ್‍ಸ್ಟೆಬಲ್ ತೌಸೀಫ್ ಅವರನ್ನು ತಕ್ಷಣವೇ ಎಸ್‍ಎಂಎಚ್‍ಎಸ್ ಆಸ್ಪತ್ರೆಗೆ ಕರೆದೊಯ್ಯವ ವೇಳೆ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದರು. ಈ ಪ್ರದೇಶದಲ್ಲಿ ಸಂಪೂರ್ಣವಾಗಿ ನಿಬರ್ಂಧ ಆದೇಶ ಜಾರಿಗೊಳಿಸಲಾಗಿದ್ದು, ಭಯೋತ್ಪಾದಕನ್ನು ಪತ್ತೆಹಚ್ಚಲು ಭದ್ರತಾ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಅಧಿಕಾರಿಯೊಬ್ಬರು ಹೇಳಿದ್ದಾರೆ. ಇದನ್ನೂ ಓದಿ: ಜಿಮ್ ಮಾಡೋವ್ರಿಗೆ ಅಪ್ಪು ಸಾವು ಬಿಗ್ ಶಾಕ್ – ಜಿಮ್‍ಗೆ ಹೋಗದಂತೆ ಮಕ್ಕಳಿಗೆ ಪೋಷಕರ ಆಕ್ಷೇಪ

    ಜಮ್ಮು ಕಾಶ್ಮೀರದ ಶ್ರೀನಗರದ ಆಸ್ಪತ್ರೆಯೊಂದರಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಕೆಲ ಕಾಲ ಗುಂಡಿನ ಚಕಮಕಿ ನಡೆಯಿತು. ಆಸ್ಪತ್ರೆಯಲ್ಲೇ ಉಗ್ರರು ಗುಂಡಿನ ದಾಳಿ ನಡೆಸಿದ್ದು, ಒಬ್ಬರು ಗಾಯಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಭದ್ರತಾ ಪಡೆಗಳು ಸ್ಥಳಕ್ಕೆ ದೌಡಾಯಿಸಿವೆ. ಶ್ರೀನಗರ-ಬಾರಾಮುಲ್ಲಾ ಹೆದ್ದಾರಿಯಲ್ಲಿ ನಗರದ ಬೆಮಿನಾ ಪ್ರದೇಶದ ಎಸ್‍ಕೆಐಎಂಎಸ್ ಆಸ್ಪತ್ರೆ ಬಳಿ ಈ ಘಟನೆ ನಡೆದಿದೆ. ಬೆಮಿನಾದ  SKIMS ಆಸ್ಪತ್ರೆಯಲ್ಲಿ ಭಯೋತ್ಪಾದಕರು ಮತ್ತು ಭದ್ರತಾ ಪಡೆಗಳ ನಡುವೆ ಸ್ವಲ್ಪ ಸಮಯದ ಗುಂಡಿನ ಚಕಮಕಿ ನಡೆಯಿತು. ಆ ಆಸ್ಪತ್ರೆಯ ಸುತ್ತ ಸೇರಿದ್ದ ಜನಸಂದಣಿಯ ಲಾಭವನ್ನು ಪಡೆದುಕೊಂಡು ಭಯೋತ್ಪಾದಕರು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ ಎಂದು ಶ್ರೀನಗರ ಪೊಲೀಸರು ತಮ್ಮ ಟ್ವಿಟರ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

  • ರಾಹುಲ್ ಗಾಂಧಿ ಪ್ರಧಾನಿಯಾದ ನಂತರ ಮಾಡುವ ಮೊದಲ ಕೆಲಸವೇನು? -ವೀಡಿಯೋ

    ರಾಹುಲ್ ಗಾಂಧಿ ಪ್ರಧಾನಿಯಾದ ನಂತರ ಮಾಡುವ ಮೊದಲ ಕೆಲಸವೇನು? -ವೀಡಿಯೋ

    ನವದೆಹಲಿ: ರಾಹುಲ್ ಗಾಂಧಿ ತಮಿಳುನಾಡಿನ ಕನ್ಯಾಕುಮಾರಿ ಜಿಲ್ಲೆಯ ಶಾಲೆಯೊಂದರ ಮಕ್ಕಳಿಗಾಗಿ ದೀಪಾವಳಿ ಪ್ರಯುಕ್ತ ಔತಣಕೂಟ ಆಯೋಜಿಸಿದ್ದರು. ಈ ವೇಳೆ ರಾಹುಲ್ ಗಾಂಧಿ ಪ್ರಧಾನಿಯಾದ ನಂತರ ಮಾಡುವ ಮೊದಲ ಕೆಲಸವೇನು? ಎನ್ನುವ ಪ್ರಶ್ನಗೆ ಉತ್ತರಿಸಿದ್ದಾರೆ.

    RAHUL GANDHI

    ತಮಿಳುನಾಡಿನಲ್ಲಿ ಪ್ರಚಾರ ನಡೆಸುವಾಗ ಭೇಟಿ ನೀಡಿದ್ದ ಮುಲಗುಮೂಡು ಗ್ರಾಮದ ಸೇಂಟ್ ಜೋಸೆಫ್ ಪ್ರೌಢಶಾಲೆಗೆ ಮತ್ತೊಮ್ಮೆ ಭೇಟಿ ನೀಡಿ ವಿದ್ಯಾರ್ಥಿಗಳ ಕುಶಲ ವಿಚಾರಿಸಿದ್ದರು. ವಿದ್ಯಾರ್ಥಿಗಳ ಗುಂಪಿನೊಂದಿಗೆ ನಡೆಸಿದ ಸಂವಾದದ ಮಾಹಿತಿಯನ್ನು ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಜಿಮ್ ಮಾಡೋವ್ರಿಗೆ ಅಪ್ಪು ಸಾವು ಬಿಗ್ ಶಾಕ್ – ಜಿಮ್‍ಗೆ ಹೋಗದಂತೆ ಮಕ್ಕಳಿಗೆ ಪೋಷಕರ ಆಕ್ಷೇಪ

    ಟ್ವಿಟರ್​ನಲ್ಲಿ ಪೋಸ್ಟ್ ನಲ್ಲಿ ರಾಹುಲ್ ಗಾಂಧಿ ಅವರನ್ನು ವಿದ್ಯಾರ್ಥಿನಿಯೊಬ್ಬರು ನೀವು ಪ್ರಧಾನಿಯಾದಾಗ ಮಾಡುವ ಮೊದಲ ಆದೇಶ ಏನಾಗಿರುತ್ತೆ? ಇದಕ್ಕೆ ಉತ್ತರಿಸಿದ ರಾಹುಲ್ ನಾವು ಮಹಿಳೆಯರಿಗೆ ಮೀಸಲಾತಿ ಕೊಡಬಹುದು ಎಂದು ಹೇಳಿದ್ದಾರೆ. ನಿಮ್ಮ ಮಕ್ಕಳಿಗೆ ಏನು ಕಲಿಸುತ್ತೀರಿ ಎಂಬ ಪ್ರಶ್ನೆಗೆ, ವಿನಯ, ವಿನಯದಿಂದ ನಿಮಗೆ ವಿದ್ಯೆ ಒಲಿಯುತ್ತದೆ. ರಾಹುಲ್, ಈ ವರ್ಷದ ನನ್ನ ದೀಪಾವಳಿ ವಿಶೇಷವಾಗಿತ್ತು. ಸಾಂಸ್ಕೃತಿಕ ವೈವಿಧ್ಯ ನಮ್ಮ ದೇಶದ ದೊಡ್ಡ ಶಕ್ತಿ ಮತ್ತು ಇದನ್ನು ನಾವು ಸಂರಕ್ಷಿಸಬೇಕು ಎಂದು ಹೇಳಿದ್ದಾರೆ. ಇದನ್ನೂ ಓದಿ:  ಮೈಸೂರಲ್ಲಿ ಶಿಕ್ಷಕರಿಗೆ ಜೀನ್ಸ್ ಪ್ಯಾಂಟ್ ಬ್ಯಾನ್RAHUL GANDHI

    ರೈತರ ಹೋರಾಟಕ್ಕೆ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಬೆಂಬಲಿಸಿದ್ದನ್ನು ಔತಣಕೂಟದಲ್ಲಿ ಪಾಲ್ಗೊಂಡಿದ್ದವರೊಬ್ಬರು ಶ್ಲಾಘಿಸಿದರು. ನೀವು ಜನರೊಂದಿಗೆ ಒಂದಾಗಿ ಬೆರೆಯುವುದನ್ನು ಇದು ತೋರಿಸುತ್ತದೆ ಎಂಬ ಅವರ ಮಾತುಗಳನ್ನು ನಾವು ವೀಡಿಯೋದಲ್ಲಿ ನೋಡಬಹುದಾಗಿದೆ.

  • NCB ವಿಚಾರಣೆಯಿಂದ ಆರ್ಯನ್ ಖಾನ್ ಎಸ್ಕೇಪ್- ಶಾರೂಖ್ ಮಗ ಕೊಟ್ಟ ಕಾರಣ ಏನು?

    NCB ವಿಚಾರಣೆಯಿಂದ ಆರ್ಯನ್ ಖಾನ್ ಎಸ್ಕೇಪ್- ಶಾರೂಖ್ ಮಗ ಕೊಟ್ಟ ಕಾರಣ ಏನು?

    ಮುಂಬೈ: ಡ್ರಗ್ ಕೇಸ್‍ನಲ್ಲಿ ಸಿಕ್ಕಿ ಬಿದ್ದಿದ್ದ ಬಾಲಿವುಡ್ ನಟ ಆರ್ಯನ್‍ ಖಾನ್ ಜಾಮೀನಿನ ಮೇಲೆ ಹೊರ ಬಂದಿದ್ದಾರೆ. ಆದರೆ ಇಂದು ನಡೆಯ ಬೇಕಿದ್ದ ಎನ್‍ಸಿಬಿ ವಿಚಾರಣೆಯಿಂದ ಆರ್ಯನ್‍ಖಾನ್ ತಪ್ಪಿಸಿಕೊಂಡಿದ್ದಾರೆ.

    ARYAN

    ಕರೆದಾಗ ವಿಚಾರಣೆಗೆ ಹಾಜರಾಗಬೇಕು ಎಂದು ಸೂಚಿಸಿತ್ತು. ಆದರೆ ಈಗ ಆರ್ಯನ್‍ ಖಾನ್ ಇಂದು (ನವೆಂಬರ್ 7) ವಿಚಾರಣೆಗೆ ಹಾಜರಾಗಿಲ್ಲ. ತಾವು ವಿಚಾರಣೆಗೆ ಏಕೆ ಹಾಜರಾಗುತ್ತಿಲ್ಲ ಎಂಬುದಕ್ಕೆ ಆರ್ಯನ್‍ ಖಾನ್ ಎನ್‍ಸಿಬಿ ಅಧಿಕಾರಿಗಳಿಗೆ ಕಾರಣವನ್ನೂ ನೀಡಿದ್ದಾರೆ.

    ಡಿಡಿಜಿ ಎನ್‍ಸಿಬಿ ಸಂಜಯ್ ಸಿಂಗ್ ಅವರು ಆರ್ಯನ್‍ ಖಾನ್‍ಗೆ ಬುಲಾವ್ ನೀಡಿದ್ದರು. ಆದರೆ ಆರ್ಯನ್‍ಗೆ ಕೊರೊನಾ ಲಕ್ಷಣ ಕಾಣಿಸಿಕೊಂಡಿದೆ. ಈ ಕಾರಣಕ್ಕೆ ಅವರು ವಿಚಾರಣೆಗೆ ಹಾಜರಾಗುತ್ತಿಲ್ಲ ಎಂದು ತಿಳಿಸಿದ್ದಾರೆ. ಕೊರೊನಾ ಲಕ್ಷಣ ಕಾಣಿಸಿಕೊಂಡಿದ್ದರಿಂದ ಅದನ್ನು ನಿರ್ಲಕ್ಷ್ಯ ಮಾಡುವಂತಿಲ್ಲ. ಹೀಗಾಗಿ ವಿಚಾರಣೆಗೆ ಬೇರೊಂದು ದಿನಾಂಕ ನೀಡುವಂತೆ ಅವರು ಕೋರಿದ್ದಾರೆ. ಇದಕ್ಕೆ ಎನ್‍ಸಿಬಿ ಅಧಿಕಾರಿಗಳು ಸಮ್ಮತಿ ನೀಡಿದ್ದಾರೆ. ಪರಿಸ್ಥಿತಿ ನೋಡಿಕೊಂಡು ಮುಂದಿನ ವಿಚಾರಣೆ ದಿನಾಂಕ ನಿಗದಿ ಮಾಡಲು ನಿರ್ಧರಿಸಲಾಗಿದೆ. ಇದನ್ನೂ ಓದಿ: ಮೈಸೂರಲ್ಲಿ ಶಿಕ್ಷಕರಿಗೆ ಜೀನ್ಸ್ ಪ್ಯಾಂಟ್ ಬ್ಯಾನ್

    ARYAN

    ಆರ್ಯನ್‍ ಖಾನ್ ಭಾಗಿಯಾಗಿದ್ದರು ಎನ್ನಲಾದ ರೇವ್ ಪಾರ್ಟಿ ಮೇಲೆ ದಾಳಿ ನಡೆದ ದಿನ ಎನ್‍ಸಿಬಿ ಅಧಿಕಾರಿಗಳ ಜೊತೆ ಖಾಸಗಿ ಡಿಟೆಕ್ಟೀವ್ ಕಿರಣ್ ಗೋಸಾವಿ ಮತ್ತು ಅವರ ಬಾಡಿಗಾರ್ಡ್ ಪ್ರಭಾಕರ್ ಸೈಲ್ ಕೂಡ ಹಾಜರಿದ್ದರು. ಇವರಿಬ್ಬರು ಪ್ರಮುಖ ಸಾಕ್ಷಿಗಳಾಗಿದ್ದಾರೆ. ಇದನ್ನೂ ಓದಿ:  ಕೇರಳದಲ್ಲಿ120 ವರ್ಷಗಳಲ್ಲಿಯೇ ಅತ್ಯಧಿಕ ಮಳೆ

    ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ ಮುಖಂಡ ನವಾಬ್ ಮಲಿ ಕೂಡ ಸಮೀರ್ ವಾಂಖೆಡೆ ವಿರುದ್ಧ ಅನೇಕ ಆರೋಪಗಳನ್ನು ಹೊರಿಸಿದ್ದಾರೆ. ಇವುಗಳ ಆಧಾರದ ಮೇಲೆ ಮಹಾರಾಷ್ಟ್ರ ಸರ್ಕಾರವು ತನಿಖೆ ನಡೆಸಲು ವಿಶೇಷ ತಂಡ ರಚಿಸಿದೆ. ಇತ್ತೀಚೆಗೆ ತನಿಖಾ ನೇತೃತ್ವವೂ ಸಮೀರ್ ಅವರ ಕೈತಪ್ಪಿತ್ತು. ಶಾರುಖ್‍ಖಾನ್ ಪುತ್ರ ಆರ್ಯನ್‍ಖಾನ್ ಅವರನ್ನು ಬಂಧಿಸಿದ ಎನ್‍ಸಿಬಿ ಅಧಿಕಾರಿ ಸಮೀರ್ ವಾಂಖೆಡೆ ಮೇಲೆ ಅನೇಕ ಆರೋಪಗಳು ಕೇಳಿಬಂದಿವೆ. ಈ ಬೆನ್ನಲ್ಲೇ, ಪ್ರಕರಣದ ತನಿಖೆಯಿಂದ ಸಮೀರ್ ವಾಂಖೆಡೆಯನ್ನು ಹೊರಗಿಡಲಾಗಿದೆ. ಈ ಪ್ರಕರಣದ ಬಗ್ಗೆ ಕೇಂದ್ರದ ಉನ್ನತ ತಂಡ ತನಿಖೆ ನಡೆಸಲು ಆರಂಭಿಸಿದೆ. ಇದನ್ನೂ ಓದಿ: ಜಿಮ್ ಮಾಡೋವ್ರಿಗೆ ಅಪ್ಪು ಸಾವು ಬಿಗ್ ಶಾಕ್ – ಜಿಮ್‍ಗೆ ಹೋಗದಂತೆ ಮಕ್ಕಳಿಗೆ ಪೋಷಕರ ಆಕ್ಷೇಪ

  • ಮೈಸೂರಲ್ಲಿ ಶಿಕ್ಷಕರಿಗೆ ಜೀನ್ಸ್ ಪ್ಯಾಂಟ್ ಬ್ಯಾನ್

    ಮೈಸೂರಲ್ಲಿ ಶಿಕ್ಷಕರಿಗೆ ಜೀನ್ಸ್ ಪ್ಯಾಂಟ್ ಬ್ಯಾನ್

    ಮೈಸೂರು: ಜಿಲ್ಲೆಯ ಶಿಕ್ಷಕರಿಗೆ ಹೊಸ ವಸ್ತ್ರಸಂಹಿತೆ ಜಾರಿ ಮಾಡಲಾಗಿದ್ದು, ಶಿಕ್ಷಕರಿಗೆ ಜೀನ್ಸ್ ಪ್ಯಾಂಟ್ ಬ್ಯಾನ್ ಮಾಡಲಾಗಿದೆ.

    jeans

    ಶಿಕ್ಷಕರು ಕರ್ತವ್ಯದಲ್ಲಿರುವ ವೇಳೆ ಜೀನ್ಸ್ ಪ್ಯಾಂಟ್ ಹಾಗೂ ಟಿ-ಶರ್ಟ್ ಧರಿಸುವಂತಿಲ್ಲ ಎಂದು ಮೈಸೂರು ಡಿಡಿಪಿಐ ಶ್ರೀನಿವಾಸಮೂರ್ತಿ ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಉಪನಿರ್ದೇಶಕರ ಕಚೇರಿ ಮತ್ತು ಕಾಲೇಜುಗಳಲ್ಲಿ ಪ್ರಾಂಶುಪಾಲರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿಗೆ ಆದೇಶ ಅನ್ವಯ ಆಗಲಿದೆ. ಮೈಸೂರು ಜಿಲ್ಲಾಧಿಕಾರಿಗಳ ಮೌಖಿಕ ಸೂಚನೆ ಮೇರೆಗೆ ಡಿಡಿಪಿಐ ಈ ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಜಿಮ್ ಮಾಡೋವ್ರಿಗೆ ಅಪ್ಪು ಸಾವು ಬಿಗ್ ಶಾಕ್ – ಜಿಮ್‍ಗೆ ಹೋಗದಂತೆ ಮಕ್ಕಳಿಗೆ ಪೋಷಕರ ಆಕ್ಷೇಪ

    ಕಾಲೇಜು ವಿದ್ಯಾರ್ಥಿಗಳಿಗೆ ಕಾಲೇಜು ಆಡಳಿತ ಮಂಡಳಿ ವಸ್ತ್ರ ಸಂಹಿತೆ ಹೇರುವುದು, ಡ್ರೆಸ್ ಕೋಡ್ ಆದೇಶ ವಿವಾದಕ್ಕೆ ಗುರಿಯಾಗುವುದನ್ನು ಕೇಳಿದ್ದೆವು. ಈಗ ಕಾಲೇಜು ಶಿಕ್ಷಕರಿಗೂ ಕಾಲೇಜಿನಲ್ಲಿ ಕೆಲಸ ಮಾಡುವ ಸಿಬ್ಬಂದಿಗೂ ಡ್ರೆಸ್ ಕೋಡ್ ಬಂದಿದೆ. ಇದನ್ನೂ ಓದಿ:  ಕೇರಳದಲ್ಲಿ120 ವರ್ಷಗಳಲ್ಲಿಯೇ ಅತ್ಯಧಿಕ ಮಳೆ