Tag: publictv

  • ಮೋದಿ ಸರ್ಕಾರ ನಿದ್ರಿಸುತ್ತಿದೆ- ಲಾರಿ ಚಿತ್ರ ಹಂಚಿಕೊಂಡ ತರೂರ್

    ಮೋದಿ ಸರ್ಕಾರ ನಿದ್ರಿಸುತ್ತಿದೆ- ಲಾರಿ ಚಿತ್ರ ಹಂಚಿಕೊಂಡ ತರೂರ್

    ತಿರುವನಂತಪುರಂ: ಕಾಂಗ್ರೆಸ್ ಸಂಸದ ಶಶಿ ತರೂರ್ ಲಾರಿಯೊಂದರ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡಿದ್ದು, ಕೇಂದ್ರ ಸರ್ಕಾರ ನಿದ್ರಿಸುತ್ತಿದೆ ಎಂದು ಛೇಡಿಸಿದ್ದಾರೆ.

    ಟ್ವೀಟ್‍ನಲ್ಲಿ ಏನಿದೆ?
    ಕೇಂದ್ರ ಸರ್ಕಾರ ನಿದ್ರಿಸುತ್ತಿದೆ ಎಂದು ಛೇಡಿಸಿದ್ದಾರೆ. ಲಾರಿಯೊಂದರ ಹಿಂಬರಹದಲ್ಲಿ ದಯವಿಟ್ಟು ಹಾರ್ನ್ ಮಾಡಬೇಡಿ, ಮೋದಿ ಸರ್ಕಾರ ನಿದ್ರಿಸುತ್ತಿದೆ ಎಂದು ಬರೆದಿದ್ದು, ಕೇಂದ್ರ ಸರ್ಕಾರಕ್ಕೆ ತಿವಿದಿದ್ದಾರೆ. ಆದರೆ ಇದು ನಿಜವಾದ ಚಿತ್ರವಲ್ಲ, ಫೋಟೋಶಾಪ್ ಮಾಡಿರುವ ಚಿತ್ರವೆಂದು ಅನೇಕರು ಕಮೆಂಟ್ ಮಾಡಿದ್ದಾರೆ. ಫ್ಯಾಕ್ಟ್ ಚೆಕ್ ವರದಿಗಳು ಇದನ್ನೇ ಹೇಳಿವೆ. ಇದನ್ನೂ ಓದಿ: ರಾಜ್ಯದಲ್ಲಿ ಪೆಟ್ರೋಲ್ 100.63, ಡೀಸೆಲ್ 85.03ರೂ. – ಸರ್ಕಾರದಿಂದ ಅಧಿಕೃತ ಅಧಿಸೂಚನೆ

    ಈ ಹಿಂದೆ ಇದೇ ಚಿತ್ರದ ಮೂಲಕ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ ಅವರನ್ನು ಛೇಡಿಸಲಾಗಿತ್ತು. ಡೀಸೆಲ್‍ನಿಂದ ಚಲಿಸುತ್ತೇನೆ, ಸರಿಯಾಗಿ ಶುಲ್ಕವನ್ನು ಪಾವತಿಸುತ್ತೇನೆ. ಸೋನಿಯಾ ಮತ್ತು ರಾಹುಲ್ ಗಾಂಧಿ ಅವರಂತೆ ದಳ್ಳಾಳಿತನದಿಂದ ಜನರ ದುಡ್ಡಿನಲ್ಲಿ ಮಜಾ ಮಾಡುವುದಿಲ್ಲ ಎಂದು ಹಿಂಬರಹದಲ್ಲಿ ಹೇಳಲಾಗಿತ್ತು. ಇದನ್ನೂ ಓದಿ:  ಪೆಟ್ರೋಲ್ ಬೆಲೆ ಇಳಿಸಿದ್ದು ಭಯದಿಂದ: ಪ್ರಿಯಾಂಕಾ ಗಾಂಧಿ

  • ಶಿಕ್ಷಣದಿಂದ ಜೀವನ ಕಟ್ಟುವ ಕೆಲಸವಾಗುತ್ತಿದೆ: ಬಿ.ವೈ ರಾಘವೇಂದ್ರ

    ಶಿಕ್ಷಣದಿಂದ ಜೀವನ ಕಟ್ಟುವ ಕೆಲಸವಾಗುತ್ತಿದೆ: ಬಿ.ವೈ ರಾಘವೇಂದ್ರ

    ಶಿವಮೊಗ್ಗ: ನಮ್ಮ ಬದುಕಿಗೆ ಒಂದು ಅರ್ಥ ಸಿಗುವುದು ಉತ್ತಮ ಶಿಕ್ಷಣದಿಂದ ಮಾತ್ರ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಮೌಲ್ಯಾದಾರಿತ ಶಿಕ್ಷಣ ನೀಡುವ ಕೆಲಸವನ್ನು ಮಾಡುವ ಮೂಲಕ ಜೀವನ ಕಟ್ಟುವ ಕೆಲಸವಾಗುತ್ತಿದೆ ಎಂದು ಎಂದು ಸಂಸದ ಬಿ. ವೈ. ರಾಘವೇಂದ್ರ ಹೇಳಿದ್ದಾರೆ.

    ಶಿವಮೊಗ್ಗದ ಆಯನೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ನೂತನ ಕಟ್ಟಡದ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಅಪ್ಪ ಹಾಕಿದ ಆಲದ ಮರಕ್ಕೆ ಜೋತು ಬೀಳದೇ, ಸ್ವಂತ ಪರಿಶ್ರಮದಿಂದ ವಿದ್ಯಾರ್ಥಿಗಳು ಕಲಿಯುವ ಆಧುನಿಕ ಅವಕಾಶಗಳಿವೆ. ಪುಸ್ತಕದ ಶಿಕ್ಷಣ ಜೊತೆಗೆ ಸಂಶೋಧನೆಗೆ ಹೆಚ್ಚು ತೊಡಗಿಸಿಕೊಂಡರೆ ಭವಿಷ್ಯದಲ್ಲಿ ಸ್ಪರ್ಧಾತ್ಮಕ ಯುಗದಲ್ಲಿ ಉತ್ತಮ ಅವಕಾಶ ದೊರೆಯಲಿವೆ ಎಂದರು. ಇದನ್ನೂ ಓದಿ:  ಪೆಟ್ರೋಲ್ ಬೆಲೆ ಇಳಿಸಿದ್ದು ಭಯದಿಂದ: ಪ್ರಿಯಾಂಕಾ ಗಾಂಧಿ

    ಇಡೀ ದೇಶದಲ್ಲಿ ನೂತನ ಶಿಕ್ಷಣ ನೀತಿಯನ್ನು ಜಾರಿ ಮಾಡಿರುವ ರಾಜ್ಯ ನಮ್ಮ ಕರ್ನಾಟಕ. ಇದರಿಂದ ವಿದ್ಯಾರ್ಥಿಗಳಿಗೆ ಪ್ರಾಯೋಗಿಕವಾಗಿ ಕಲಿಯುವ ಅವಕಾಶವಿದೆ ತಿಳಿಸಿದರು. ಕಾರ್ಯಕ್ರಮದಲ್ಲಿ ಶಾಸಕ ಕೆ. ಬಿ. ಅಶೋಕ್ ನಾಯ್ಕ್, ಎಂಎಲ್ ಸಿ ಆಯನೂರು ಮಂಜುನಾಥ್. ರುದ್ರೇಗೌಡ, ಆರ್. ಪ್ರಸನ್ನ ಕುಮಾರ್, ಎಸ್.ಎಲ್. ಬೊಜೇಗೌಡ, ಕಾಲೇಜಿನ ಸಿಬ್ಬಂದಿ ವರ್ಗದವರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಇದನ್ನೂ ಓದಿ: ರಾಜ್ಯದಲ್ಲಿ ಪೆಟ್ರೋಲ್ 100.63, ಡೀಸೆಲ್ 85.03ರೂ. – ಸರ್ಕಾರದಿಂದ ಅಧಿಕೃತ ಅಧಿಸೂಚನೆ

  • ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಆತ್ಮಹತ್ಯೆಗೆ ಶರಣು

    ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ಆತ್ಮಹತ್ಯೆಗೆ ಶರಣು

    ಚೆನ್ನೈ: ನೀಟ್ ಪರೀಕ್ಷೆಯಲ್ಲಿ ಕಡಿಮೆ ಅಂಕ ಬಂದಿದ್ದಕ್ಕೆ ವೈದ್ಯಕೀಯ ಆಕಾಂಕ್ಷಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಮಿಳುನಾಡಿನ ಸೇಲಂನಲ್ಲಿ ನಡೆದಿದೆ.

    ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಯಲ್ಲಿ(ನೀಟ್) ಕಡಿಮೆ ಅಂಕ ಗಳಿಸಿದ್ದರಿಂದ ಖಿನ್ನತೆಗೆ ಒಳಗಾಗಿದ್ದ 20 ವರ್ಷದ ವೈದ್ಯಕೀಯ ಆಕಾಂಕ್ಷಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

    ವಡಗುಮರೈ ನಿವಾಸಿ ಸುಭಾಶ್ಚಂದ್ರ ಬೋಸ್ ಅವರು ನಾಲ್ಕು ದಿನಗಳ ಹಿಂದಷ್ಟೇ ಫಲಿತಾಂಶ ಪ್ರಕಟವಾಗಿದ್ದ ನೀಟ್ ಪರೀಕ್ಷೆಗೆ ಹಾಜರಾಗಿದ್ದು, ಅದರಲ್ಲಿ ಕಡಿಮೆ ಅಂಕ ಗಳಿಸಿದ್ದರು. ನೀಟ್ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಾಧ್ಯವಾಗದ ಕಾರಣ ಸುಭಾಶ್ಚಂದ್ರ ಬೋಸ್ ಅವರು ಮನನೊಂದ ನವೆಂಬರ್ 2 ರಂದು ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಪೆಟ್ರೋಲ್ 100.63, ಡೀಸೆಲ್ 85.03ರೂ. – ಸರ್ಕಾರದಿಂದ ಅಧಿಕೃತ ಅಧಿಸೂಚನೆ

    ಕೀಟನಾಶಕ ಸೇವಿಸಿ ಹಾಸಿಗೆಯಲ್ಲಿ ಒದ್ದಾಡುತ್ತಿರುವುದನ್ನು ಗಮನಿಸಿದ ಪೋಷಕರು ಆತನನ್ನು ತಕ್ಷಣ ಆತೂರಿನ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ಅವರ ಸ್ಥಿತಿ ಗಂಭೀರವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಸೇಲಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದಾಗ್ಯೂ ಚಿಕಿತ್ಸೆ ಫಲಕಾರಿಯಾಗದೆ ಬೋಸ್ ಇಂದು ಬೆಳಗಿನ ಜಾವ 3.30 ರ ಸುಮಾರಿಗೆ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ:  ಮನೆಯಲ್ಲಿ ಸಿಲಿಂಡರ್ ಬ್ಲಾಸ್ಟ್ 7 ಕಾರ್ಮಿಕರಿಗೆ ಗಾಯ

    ನೀಟ್ ಪರೀಕ್ಷೆಗೆ ಹಾಜರಾಗಿದ್ದ ರಾಜ್ಯದ ಹಲವು ವೈದ್ಯಕೀಯ ಆಕಾಂಕ್ಷಿಗಳ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ. ವೈದ್ಯಕೀಯ ಆಕಾಂಕ್ಷಿಯ ಸಾವಿನ ಬಗ್ಗೆ ದುಃಖ ವ್ಯಕ್ತಪಡಿಸಿರುವ ಎಐಎಡಿಎಂಕೆ ಉನ್ನತ ನಾಯಕ ಕೆ ಪಳನಿಸ್ವಾಮಿ ಅವರು ಮೃತರ ಕುಟುಂಬಕ್ಕೆ ಸಂತಾಪ ಸೂಚಿಸಿದ್ದಾರೆ. ಇದನ್ನೂ ಓದಿ:  ಪೆಟ್ರೋಲ್ ಬೆಲೆ ಇಳಿಸಿದ್ದು ಭಯದಿಂದ: ಪ್ರಿಯಾಂಕಾ ಗಾಂಧಿ

  • ಸಮಾಧಿ ಬಳಿಯ ದೇವಸ್ಥಾನದಲ್ಲಿ ಅಪ್ಪು ಅಭಿಮಾನಿ ಮದುವೆ

    ಸಮಾಧಿ ಬಳಿಯ ದೇವಸ್ಥಾನದಲ್ಲಿ ಅಪ್ಪು ಅಭಿಮಾನಿ ಮದುವೆ

    ಬೆಂಗಳೂರು: ಕಂಠೀರವ ಸ್ಟುಡಿಯೋ ಬಳಿಯ ದೇವಸ್ಥಾನವೊಂದರಲ್ಲಿ ಅಪ್ಪು ಅಭಿಮಾನಿಗಳು ಮದುವೆಯಾಗಿದ್ದಾರೆ.

    ಗುರುರಾಜ್ ಮತ್ತು ಗಂಗಾ ವಿಶೇಷವಗಿ ಮದುವೆಯಾಗಲು ನಿರ್ಧರಿಸಿದ್ದರು. ಅಪ್ಪು ಅಭಿಮಾನಿಗಳು ಆಗಿರುವುದರಿಂದ ಅಪ್ಪು ಸಮಾಧಿ ಬಳಿ ಮದುವೆಯಾಗಿ ಗೌರವ ಸೂಚಿಸಲು ಇಚ್ಚಿಸಿದ್ದರು. ಹೀಗಾಗಿ ಈ ಜೋಡಿ ಬಳ್ಳಾರಿಯಿಂದ ಅಪ್ಪು ಸಮಾಧಿ ಇರುವ ಸ್ಥಳಕ್ಕೆ ಬಂದಿದ್ದರು.

     

    ಅಪ್ಪು ಸಮಾಧಿ ಬಳಿ ಮದುವೆಯ ಬಳಿ ಮದುವೆಯಾಗುವ ಬಗ್ಗೆ ಶಿವಣ್ಣ ಮತ್ತು ರಾಘವೇಂದ್ರ ರಾಜ್ ಕುಮಾರ್ ಜೊತೆ ಮಾತು ಕತೆಯನ್ನು ಜೋಡಿ ನಡೆಸಿದ್ದಾರೆ. ಆದರೆ ಅಪ್ಪು ಸಮಾಧಿ ಬಳಿ ಮದುವೆಯಾಗಲು ರಾಜ್ ಫ್ಯಾಮಿಲಿಯಿಂದ ಒಪ್ಪಿಗೆ ಇಲ್ಲದ ಕಾರಣ, ಕಂಠೀರವ ಸ್ಟುಡಿಯೋ ಬಳಿಯೇ ಇರುವ ಆಂಜಿನೇಯ ದೇವಸ್ಥಾನದಲ್ಲಿ ನವ ಜೋಡಿ ಸಪ್ತಪದಿ ತುಳಿದಿದ್ದಾರೆ.

    ಗೆಳೆಯರ ಸಮ್ಮುಖದಲ್ಲಿ ಈ ಜೋಡಿ ಮದುವೆಯಾಗಿದ್ದಾರೆ. ನಾಳೆ ಶಿವಣ್ಣನ ಮನೆಗೆ ಗುರುರಾಜ್ ಮತ್ತು ಗಂಗಾ ದಂಪತಿ ಹೋಗಿ ಆಶೀರ್ವಾದ ಪಡೆಯಲಿದ್ದಾರೆ. ಅಪ್ಪು ಅಭಿಮಾನಿಗಳು ಆಗಿರುವುದರಿಂದ ಕಂಠೀರವ ಸ್ಟುಡಿಯೋ ಬಳಿಯ ದೇವಸ್ಥಾನವೊಂದರಲ್ಲಿ ಮದುವೆಯಾಗಿ ಅಭಿಮಾನ ಮೆರೆದಿದ್ದಾರೆ.

  • ಮನೆಯಲ್ಲಿ ಸಿಲಿಂಡರ್ ಬ್ಲಾಸ್ಟ್ 7 ಕಾರ್ಮಿಕರಿಗೆ ಗಾಯ

    ಮನೆಯಲ್ಲಿ ಸಿಲಿಂಡರ್ ಬ್ಲಾಸ್ಟ್ 7 ಕಾರ್ಮಿಕರಿಗೆ ಗಾಯ

    ಬೆಂಗಳೂರು(ಆನೇಕಲ್): ಕಾರ್ಮಿಕರು ಬೆಳಿಗ್ಗೆ ಉಪಹಾರ ಸೇವಿಸಿ ತಮ್ಮ ಕೆಲಸಕ್ಕೆ ತೆರಳಲು ಸಿದ್ಧತೆ ನಡೆಸುತಿದ್ರು, ಇತ್ತ ಓರ್ವ ಕಾರ್ಮಿಕ ಉಪಹಾರ ತಯಾರಿಸುತ್ತಿದ್ದ ಆಗ ಇದ್ದಕಿದ್ದಂತೆ  ಸಿಲಿಂಡರ್‌ಗೆ ಬೆಂಕಿ ತಗುಲಿ ಬ್ಲಾಸ್ಟ್ ಆಗಿ ಇಡೀ ಮನೆ ಹೊತ್ತಿ ಉರಿದಿದೆ.

    ಬೆಂಗಳೂರು ಹೊರವಲಯ ಆನೇಕಲ್ ತಾಲೂಕಿನ ಜಿಗಣಿಯಲ್ಲಿ ಈ ಘಟನೆ ನಡೆದಿದೆ. ಜಿಗಣಿ ಪೊಲೀಸ್ ಠಾಣೆ ಹಿಂಬಾಗದಲ್ಲಿರುವ ಮಂಜುನಾಥ್ ರೆಡ್ಡಿ ಮನೆ ಈ ಮನೆಯಲ್ಲಿ ಕಳೆದೆರಡು ವರ್ಷಗಳಿಂದ ಆ ಮನೆಯಲ್ಲಿ ಉತ್ತರ ಭಾರತದ 3 ಮಂದಿ ಬಾಡಿಗೆ ಆಧಾರದಲ್ಲಿ ವಾಸವಿದ್ದರು. ಆದರೆ ನಿನ್ನೆ ಹಬ್ಬ ಅಂತ ಹೇಳಿ ಸಂಬಂಧಿಕರು ಸಹ ಮನೆಗೆ ಬಂದಿದ್ದರು ಇಂದು ಬೆಳಿಗ್ಗೆ ಮನೆಯಲ್ಲಿದ್ದ ಗ್ಯಾಸ್ ಸಿಲಿಂಡರ್ ಬ್ಲಾಸ್ಟ್ ಆಗಿದೆ. ಈ ವೇಳೆ ಐದು ಮಂದಿಗೆ ಗಂಭೀರ ಗಾಯವಾಗಿದ್ದು, ಇಬ್ಬರಿಗೆ ಸಣ್ಣಪುಟ್ಟ ಗಾಯವಾಗಿದ್ದು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನೂ ಓದಿ: ರಾಜ್ಯದಲ್ಲಿ ಪೆಟ್ರೋಲ್ 100.63, ಡೀಸೆಲ್ 85.03ರೂ. – ಸರ್ಕಾರದಿಂದ ಅಧಿಕೃತ ಅಧಿಸೂಚನೆ

    ಗಾಯಾಳುಗಳನ್ನು ಜಗದೀಶ್. ಶಾಂತಿಬೈ, ಪ್ರಕಾಶ್, ಕಾಡು, ಜೈಮುಲ್, ಮಂಜು ಹಾಗೂ ವಲ್ಲಿ ಎಂದು ಗುರಿತಿಸಲಾಗಿದೆ. ಇವರನ್ನು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲು ಮಾಡಲಾಗಿದೆ. ಮುಂಜಾನೆ ಕೆಲಸಕ್ಕೆ ಹೊರಡಲು ಸಿದ್ಧವಾಗುವ ವೇಳೆ ಘಟನೆ ನಡೆದಿದ್ದರಿಂದ ಪ್ರಣಾಪಯಾದಿಂದ ಪಾರಾಗಿದ್ದಾರೆ ಘಟನೆಗೆ ಕಾರಣ ಏನು ಎಂಬುದನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದು, ಅಗ್ನಿಶಾಮಕದ ಅಧಿಕಾರಿಗಳಿಂದ ತನಿಖೆ ಕೈಗೊಂಡಿದ್ದಾರೆ ಜೊತೆಗೆ ಜಿಗಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ:  ಪೆಟ್ರೋಲ್ ಬೆಲೆ ಇಳಿಸಿದ್ದು ಭಯದಿಂದ: ಪ್ರಿಯಾಂಕಾ ಗಾಂಧಿ

  • ದೇಶದ ಅತಿ ದೊಡ್ಡ ಜೇಬುಗಳ್ಳ ಅಂದ್ರೆ ಕಾಂಗ್ರೆಸ್: ಬಿಜೆಪಿ ತಿರುಗೇಟು

    ದೇಶದ ಅತಿ ದೊಡ್ಡ ಜೇಬುಗಳ್ಳ ಅಂದ್ರೆ ಕಾಂಗ್ರೆಸ್: ಬಿಜೆಪಿ ತಿರುಗೇಟು

    ನವದೆಹಲಿ: ದೇಶದ ಅತಿದೊಡ್ಡ ಜೇಬುಗಳ್ಳ ಎಂದರೆ ಅದು ಕಾಂಗ್ರೆಸ್ ಎಂದು ಆಢಳಿತ ಪಕ್ಷ ತಿರುಗೇಟು ನೀಡಿದೆ.

    ರಾಹುಲ್ ಗಾಂಧಿ ಇಂಧನ ಬೆಲೆ ಏರಿಕೆಯನ್ನು ಖಂಡಿಸಿ, ಜೇಬುಳ್ಳರ ಬಗ್ಗೆ ಎಚ್ಚರದಿಂದ ಇರಿ ಎಂದು ಟ್ವೀಟ್ ಮಾಡಿದ್ದರು. tax extortion ಎಂದು ಉಲ್ಲೇಖಿಸಿದ್ದರು. ಇದಕ್ಕೆ ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ನೀಡಿದ ಹೇಳಿಕೆಯನ್ನು ಬಿಜೆಪಿ ಪಕ್ಷದ ಅಧಿಕೃತ ಖಾತೆಯಲ್ಲಿ ಹಂಚಿಕೊಂಡು ರಾಹುಲ್ ಅವರಿಗೆ ತಿರುಗೇಟು ನೀಡಿದೆ.

    ದೇಶದಲ್ಲಿ ಕಾಂಗ್ರೆಸ್‍ಗಿಂತ ದೊಡ್ಡ ಜೇಬುಗಳ್ಳರಿಲ್ಲ. ಕಾಂಗ್ರೆಸ್ ಪಕ್ಷವೇ ಜೇಬುಗಳ್ಳ ಪಕ್ಷವಾಗಿದೆ ಎಂದು ಬಿಜೆಪಿ ಟ್ವೀಟ್ ಮಾಡಿದೆ. ಇದನ್ನೂ ಓದಿ:  ಪೆಟ್ರೋಲ್ ಬೆಲೆ ಇಳಿಸಿದ್ದು ಭಯದಿಂದ: ಪ್ರಿಯಾಂಕಾ ಗಾಂಧಿ

    ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಕೇಂದ್ರ ಸರ್ಕಾರದ ಪೆಟ್ರೋಲ್ ಬೆಲೆ ಇಳಿಕೆಯ ನಂತರ ಪ್ರತಿಕ್ರಿಯೆ ನೀಡಿದ್ದು, ತೈಲ ಬೆಲೆ ಇಳಿಕೆ ಮಾಡಿದ್ದು, ಹೃಯದದಿಂದ ಅಲ್ಲ, ಬದಲಾಗಿ ಭಯದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಲೂಟಿಕೋರ ಸರ್ಕಾರಕ್ಕೆ ಚುನಾವಣೆಯಲ್ಲಿ ಉತ್ತರ ನೀಡಬೇಕಾಗಿದೆ ಎಂದು ಟ್ವೀಟ್ ಮಾಡಿ ಆಢಳಿತ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ:  ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಿಂದ ಬೊಕ್ಕಸಕ್ಕೆ 2,100 ಕೋಟಿ ಆದಾಯ ನಷ್ಟ: ಸಿಎಂ

    ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ದರವನ್ನು ಕ್ರಮವಾಗಿ 10 ರೂ. ಹಾಗೂ 5 ರೂ. ಕ್ಕೆ ಇಳಿಸಿದ ಬೆನ್ನಲ್ಲೇ ಸರ್ಕಾರ ಆದೇಶ ಹೊರಡಿಸಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ನಿರಂತರವಾಗಿತ್ತು. ಅಕ್ಟೋಬರ್ ಒಂದೇ ತಿಂಗಳಲ್ಲಿ ಸುಮಾರು 30ಕ್ಕೂ ಅಧಿಕ ಬಾರಿ ಪೈಸೆಗಳ ಲೆಕ್ಕದಲ್ಲಿ ಬೆಲೆ ಏರಿಕೆಯಾಗಿತ್ತು. ಇದರಿಂದ ಜನ ಸಾಮಾನ್ಯರಿಗೆ ನೇರವಾಗಿ ಪರಿಣಾಮ ಬೀರುವುದಲ್ಲದೇ ಪೆಟ್ರೋಲ್, ಡೀಸೆಲ್ ಅವಲಂಬಿತ ಎಲ್ಲ ವಸ್ತುಗಳ ಬೆಲೆಯೂ ಅಧಿಕವಾಗಿತ್ತು. ಪೆಟ್ರೋಲ್, ಡೀಸೆಲ್ ಬೆಲೆ ನಿರಂತರ ಏರಿಕೆ ಸಾರ್ವಜನಿಕ ವಲಯದಲ್ಲಿ ಭಾರೀ ಟೀಕೆಗೆ ಕಾರಣವಾಗಿತ್ತು. ಜನ ಸಾಮಾನ್ಯರ ಆಕ್ರೋಶ ಎದುರಿಸಲಾಗದ ಹಲವು ರಾಜ್ಯ ಸರ್ಕಾರಗಳು ಕೇಂದ್ರ ಸರ್ಕಾರಕ್ಕೆ ಬೆಲೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಮನವಿ ಮಾಡಿದ್ದವು. ಈ ವಿಚಾರವನ್ನು ಗಣನೆಗೆ ತೆಗೆದುಕೊಂಡ ಮೋದಿ ಪೆಟ್ರೋಲ್, ಡೀಸೆಲ್ ಮೇಲಿನ ಸುಂಕ ಇಳಿಕೆ ಮಾಡಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಪೆಟ್ರೋಲ್ 100.63, ಡೀಸೆಲ್ 85.03ರೂ. – ಸರ್ಕಾರದಿಂದ ಅಧಿಕೃತ ಅಧಿಸೂಚನೆ

  • ಅಪ್ಪು ಸಣ್ಣ ವಯಸ್ಸಿನಲ್ಲಿ ನಮ್ಮನ್ನು ಬಿಟ್ಟು ಹೋದ್ರು: ಜಯಪ್ರದಾ

    ಅಪ್ಪು ಸಣ್ಣ ವಯಸ್ಸಿನಲ್ಲಿ ನಮ್ಮನ್ನು ಬಿಟ್ಟು ಹೋದ್ರು: ಜಯಪ್ರದಾ

    ಬೆಂಗಳೂರು: ನಟಿ ಜಯಪ್ರದಾ ಅವರು ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಅವರ ನಿಧನದ ಹಿನ್ನಲೆ ಅವರ ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಪ್ಪು ನಮ್ಮ ಜೊತೆಯಲ್ಲಿ ಇಲ್ಲ ಎನ್ನುವುದು ತುಂಬಾ ಕಷ್ಟವಾಗಿದೆ. ಈ ಕುಟುಂಬ ಎಂದರೆ ನನಗೆ ತುಂಬಾ ಇಷ್ಟವಾಗಿದೆ. ರಾಜ್‍ಕುಮಾರ್, ಪಾರ್ವತಮ್ಮ ರಾಜ್‍ಕುಮಾರ್ ಅವರ ಈ ಕುಟುಂಬದಲ್ಲಿ ನಾನು ಒಬ್ಬಳಾಗಿದ್ದೇನು. ಅಪ್ಪ ಇಂದು ಇಲ್ಲ ಎನ್ನುವುದು ತುಂಬಾ ಕಷ್ಟವಾಗಿದೆ ಎಂದು ಕಣ್ಣಂಚಲಿ ನೀರು ತುಂಬಿಕೊಂಡಿದ್ದಾರೆ. ಇದನ್ನೂ ಓದಿ: ಅಪ್ಪು ಸಮಾಧಿ ಬಳಿಯೇ ಮದುವೆಯಾಗಲು ಆಗಮಿಸಿದ ಪ್ರೇಮಿಗಳು

    ಸಣ್ಣ ವಯಸ್ಸಿನಲ್ಲಿ ನಮ್ಮನ್ನು ಬಿಟ್ಟು ಹೋಗಿದ್ದಾರೆ. ನಾನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇನೆ. ಕುಟುಂಬದವರು ಕಷ್ಟದಲ್ಲಿ ಧರ್ಯ ತೆಗೆದುಕೊಳ್ಳಬೇಕು. ಅಪ್ಪು ಆತ್ಮಕ್ಕೆ ಶಾಂತಿ ಸಿಗಲಿ ಎಂದು ನಾನು ಮನಸ್ಪೂರ್ತಿಯಾಗಿ ಕೇಳಿಕೊಳ್ಳುತ್ತಿದ್ದೇನೆ ಎಂದು ಹೇಳುತ್ತಾ ಅಪ್ಪು ನಿಧನದಕುರಿತಾಗಿ ಕಂಬನಿ ಮೀಡಿದಿದ್ದಾರೆ. ಇದನ್ನೂ ಓದಿ: ಒಬ್ಬ ಡ್ಯಾನ್ಸರ್ ಬರಬಹುದು, ಫೈಟರ್ ಬರಬಹುದು, ಆದ್ರೆ ಅಪ್ಪು ಬರಲ್ಲ: ರಮೇಶ್ ಅರವಿಂದ್

    ಪುನೀತ್ ರಾಜಕುಮಾರ್ ಸಮಾಧಿಯ ದರ್ಶನ ಪಡೆದು, ಚಿತ್ರರಂಗದ ಹಲವರು ನಮನ ಸಲ್ಲಿಸುತ್ತಿದ್ದಾರೆ. ಸ್ಯಾಂಡಲ್‍ವುಡ್ ಮಾತ್ರವಲ್ಲದೇ ಬೇರೆ ಭಾಷಯೆ ನಟ, ನಟಿಯರು ಅಪ್ಪು ಮನೆಗೆ ಭೇಟಿಕೊಟ್ಟು ಕುಟುಂಸ್ಥರಿಗೆ ಸಾಂತ್ವನ ಹೇಳುತ್ತಿದ್ದಾರೆ.

  • ಜಿಮ್ ಮಾಡುವ ವೇಳೆ ಕೈ ಬೆರಳು ಮುರಿದುಕೊಂಡ Junior NTR

    ಜಿಮ್ ಮಾಡುವ ವೇಳೆ ಕೈ ಬೆರಳು ಮುರಿದುಕೊಂಡ Junior NTR

    ಹೈದರಾಬಾದ್: ಟಾಲಿವುಡ್ ಚಿತ್ರರಂಗದ ಸೂಪರ್ ಸ್ಟಾರ್ ಜೂ. ಎನ್‍ಟಿಆರ್ ಜಿಮ್‍ನಲ್ಲಿ ವರ್ಕಟ್ ಮಾಡುವ ವೇಳೆ ಕೈ ಬೆರಳಿನ ಮೂಳೆ ಮುರಿದಿದೆ.

    ದೀಪಾವಳಿ ಹಬ್ಬಕ್ಕೆ ಜೂ.ಎನ್‍ಟಿಆರ್ ತಮ್ಮ ಮಕ್ಕಳೊಂದಿಗಿನ ಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದರು. ಆ ಚಿತ್ರದಲ್ಲಿ ಜೂ.ಎನ್‍ಟಿಆರ್ ಕೈಬೆರಳಿಗೆ ಬ್ಯಾಂಡೇಜ್ ಸುತ್ತಿಕೊಂಡಿರುವುದನ್ನು ಅಭಿಮಾನಿಗಳು ಗಮನಿಸಿ, ಪ್ರಶ್ನಿಸಿದ್ದರು. ಇದನ್ನೂ ಓದಿ: ಅಪ್ಪು ಜೊತೆಗಿನ ಲಾಸ್ಟ್ ಸೆಲ್ಫಿ ಶೇರ್ ಮಾಡಿದ ರಾಘಣ್ಣ

    ಜೂ.ಎನ್‍ಟಿಆರ್ ಜಿಮ್‍ನಲ್ಲಿ ವರ್ಕೌಟ್ ಮಾಡುವಾಗ ತಮ್ಮ ಬೆರಳಿಗೆ ಗಾಯ ಮಾಡಿಕೊಂಡಿದ್ದಾರೆ. ಬೆರಳಿನ ಮೂಳೆ ಮುರಿದಿದ್ದರಿಂದ ಹೈದರಾಬಾದ್‍ನಲ್ಲಿನ ಖಾಸಗಿ ಆಸ್ಪತ್ರೆಯೊಂದಕ್ಕೆ ದಾಖಲಾಗಿದ್ದರು. ಒಂದೇ ದಿನದಲ್ಲಿ ಶಸ್ತ್ರಚಿಕಿತ್ಸೆ ಮುಗಿಸಿಕೊಂಡು ಮನೆಗೆ ವಾಪಸ್ಸಾಗಿದ್ದಾರೆ. ಜೂ.ಎನ್‍ಟಿಆರ್ ಹೀಗೆ ಶಸ್ತ್ರ ಚಿಕಿತ್ಸೆಗೆ ಒಳಗಾಗುವ ಕೆಲವು ದಿನಗಳ ಮುಂಚೆಯಷ್ಟೆ ಜೂ.ಎನ್‍ಟಿಆರ್ ಅವರ ಚಿಕ್ಕಪ್ಪ ನಂದಮೂರಿ ಬಾಲಕೃಷ್ಣ ಭುಜದ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು.

     

    View this post on Instagram

     

    A post shared by Jr NTR (@jrntr)

    ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಅವರು ಮರಣಹೊಂದಿರುವ ವಿಚಾರವನ್ನು ತಿಳಿದು ಬೆಂಗಳೂರಿಗೆ ಜೂ. ಎನ್‍ಟಿಆರ್ ಬಂದಿದ್ದರು. ಈ ವೇಳೆ ಪುನೀತ್ ಅವರ ಪಾರ್ಥಿವ ಶರೀರವನ್ನು ನೋಡುತ್ತಾ ಕಣ್ಣೀರು ಹಾಕಿದ್ದರು.

  • ಉಪನ್ಯಾಸಕ ವೃತ್ತಿ ತೊರೆದು ಕುರಿ, ಕೋಳಿ ಜೊತೆಗೆ ಕೃಷಿ ಮಾಡಿದ ಬಿಎಡ್ ಪದವೀಧರ

    ಉಪನ್ಯಾಸಕ ವೃತ್ತಿ ತೊರೆದು ಕುರಿ, ಕೋಳಿ ಜೊತೆಗೆ ಕೃಷಿ ಮಾಡಿದ ಬಿಎಡ್ ಪದವೀಧರ

    ಕೋಲಾರ: ಆತ ಸಮಗ್ರ ಕೃಷಿಯಲ್ಲಿ ಲಾಭದಾಯಕ ಕಸುಬನ್ನಾಗಿ ಮಾಡಿಕೊಂಡ ಪದವೀಧರ. ಸ್ವಾವಲಂಬಿ ಜೀವನ ನಡೆಸಲು ಶಿಕ್ಷಕ ವೃತ್ತಿಯನ್ನ ತೊರೆದು ಕುರಿ, ಕೋಳಿ ಸಾಕಾಣಿಕೆ ಮಾಡಿ ಯಶಸ್ವಿಯಾದ ಉಪನ್ಯಾಸಕ. ಕೊರೊನಾ ಸಂಕಷ್ಟದಿಂದ ಬೇಸತ್ತ ಆಸಕ್ತಿಯಿಂದ ಮಾಡಿದರೆ ಎಲ್ಲವೂ ಸಾಧ್ಯ ಅನ್ನೋದನ್ನ ತೋರಿಸಿದ್ದಾರೆ.

    ಹೀಗೆ ತನಗಿರುವ ಮೂರುವರೆ ಎಕರೆ ಜಮೀನಿನಲ್ಲಿ ವಿವಿಧ ತಳಿಯ ಕುರಿ, ಕೋಳಿ ಸಾಕಾಣಿಕೆ ಮಾಡುತ್ತಿರುವ ಬಿಎಡ್ ಪದವೀಧರ, ತನ್ನ ಯಶಸ್ವಿ ಸಮಗ್ರ ಕೃಷಿ ಬಗ್ಗೆ ಇತರೆ ರೈತರಿಗೆ ಹೇಳಿಕೊಡುತ್ತಿರುವ ಉಪನ್ಯಾಸಕ, ಇವೆಲ್ಲಾ ದೃಶ್ಯಗಳು ಕಂಡು ಬಂದಿದ್ದು ಕೋಲಾರದಲ್ಲಿ. ಕೋಲಾರ ತಾಲೂಕಿನ ನೆರ್ನಹಳ್ಳಿಯ ಗ್ರೀನ್‍ವುಡ್ ಫಾರಂನಲ್ಲಿ.

    ಗ್ರಾಮದ ಉಪನ್ಯಾಸಕ ಸುರೇಶ್ ಬಾಬು ತಮಗಿರುವ ಮೂರುವರೆ ಎಕರೆ ಜಮೀನಿನಲ್ಲಿ ಸಮಗ್ರ ಕೃಷಿ ಬೇಸಾಯವನ್ನು ಮಾಡಿ ಸೈ ಎನಿಸಿಕೊಳ್ಳುವ ಜೊತೆಗೆ ಕಡಿಮೆ ಹಣದಲ್ಲಿ ಹೆಚ್ಚಿನ ಲಾಭವನ್ನು ಪಡೆಯುತ್ತಿದ್ದಾರೆ. ಸುರೇಶ್ ಬಾಬು ಈ ಹಿಂದೆ ಖಾಸಗಿ ಶಾಲೆಯಲ್ಲಿ 10 ವರ್ಷಗಳ ಕಾಲ ಮೈಸೂರು, ಬಾಗೇಪಲ್ಲಿಯಲ್ಲಿ ಪ್ರಾಂಶುಪಾಲರಾಗಿ ಕೆಲಸ ಮಾಡುತ್ತಿದ್ದರು. ಇದನ್ನೂ ಓದಿ:  ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯಿಂದ ಬೊಕ್ಕಸಕ್ಕೆ 2,100 ಕೋಟಿ ಆದಾಯ ನಷ್ಟ: ಸಿಎಂ

    ಇವರಿಗೆ ಈ ಕೆಲಸದಲ್ಲಿ ಸಂತೃಪ್ತಿ ಸಿಗದ ಕಾರಣ ಹಾಗೂ ಕೊರೊನಾದಿಂದ ಬೇಸತ್ತು ಉದ್ಯೋಗಕ್ಕೆ ಸಲಾಂ ಹೊಡೆದು ಗ್ರಾಮದದತ್ತ ಹೆಜ್ಜೆ ಹಾಕಿದರು. ಕಳೆದ ನಾಲ್ಕು ವರ್ಷಗಳಲ್ಲಿ ಕೃಷಿಯಲ್ಲಿ ನಾನಾ ರೀತಿಯ ಪ್ರಯೋಗ ಮಾಡುವ ಮೂಲಕ ಯಶಸ್ವಿ ರೈತನಾಗಿದ್ದಾನೆ. ತನಗಿರುವ 4 ಎಕರೆ ಜಮೀನಿನಲ್ಲಿ ಅರ್ಧ ಎಕರೆ ಕುರಿ ಸಾಕಾಣಿಕೆ ಶೆಡ್ ಮತ್ತು ಅದರ ಕೆಳಗೆ ನಾಟಿ ಕೋಳಿಗಳನ್ನು ಸಾಕುತ್ತಿದ್ದಾರೆ.

    ಜೊತೆಗೆ ಪೈಟರ್ ಹುಂಜುಗಳನ್ನು ಸಾಕುತ್ತಿದ್ದು, ಕಡಿಮೆ ಆದಾಯದಲ್ಲಿ ಹೆಚ್ಚು ಲಾಭ ಮಾಡುವ ಸಮಗ್ರ ಕೃಷಿಯಲ್ಲಿ ಯಶಸ್ವಿಯಾಗಿದ್ದಾರೆ ಮಾಜಿ ಉಪನ್ಯಾಸಕ ಕಮ್ ರೈತ ಸುರೇಶ್. ಸುರೇಶ್ ಬಾಬು ಅವರ ತಮ್ಮ ಈ ಸಾಹಸಕ್ಕೆ ಬೆನ್ನೆಲುಬಾಗಿ ನಿಂತಿರುವುದು ತಮ್ಮ ಸಹೋದರ ನರಸಿಂಹ ರೆಡ್ಡಿ. ತನ್ನ ತಮ್ಮನ ಕೃಷಿ ಅನುಭವವನ್ನ ಸಮರ್ಪಕವಾಗಿ ಬಳಕೆ ಮಾಡಿಕೊಳ್ಳುವ ಮೂಲಕ ಸಹೋದರರಿಬ್ಬರೆ ಇಷ್ಟೆಲ್ಲಾ ಸಾಧನೆ ಮಾಡಿದ್ದಾರೆ. ಇದನ್ನೂ ಓದಿ: ದಲಿತರ ಬಗ್ಗೆ ಮಾತನಾಡಿದ್ರೆ ಮುಂದಿನ ಚುನಾವಣೆಯಲ್ಲಿ ಬುದ್ಧಿ ಕಲಿಸಬೇಕಾಗುತ್ತೆ: ಮುನಿಸ್ವಾಮಿ

    ವರ್ಷಕ್ಕೆ 8 ರಿಂದ 10 ಲಕ್ಷ ಆದಾಯ ಪಡೆಯುತ್ತಿರುವ ಸುರೇಶ್ ಬಾಬು ತಮ್ಮ ಜಮೀನಿನಲ್ಲಿ ಕುರಿ, ಕೋಳಿ ಸಾಕಾಣಿಕೆ, ಜೇನು ಸಾಕಾಣಿಕೆ, ಪೈಟರ್ ಹುಂಜುಗಳ ಸಾಕಾಣಿಕೆ, ಮೀನು ಸಾಕಾಣಿಕೆ, ಹೆಬ್ಬೇವು, ಶ್ರೀಗಂಧ, ರಕ್ತಚಂದನ ಹೀಗೆ ಸಮಗ್ರ ಕೃಷಿ ಮೂಲಕ ಪ್ರಯೋಗ ಶಾಲೆಯನ್ನಾಗಿ ಮಾಡಿಕೊಂಡಿದ್ದಾರೆ. ಕೇವಲ ಟಗರುಗಳನ್ನು ಮಾತ್ರ ಸಾಕಾಣಿಕೆ ಮಾಡುತ್ತಿದ್ದು, ಇವುಗಳನ್ನು ಚಿತ್ರದುರ್ಗ, ಮೈಸೂರಿನ ಕಿರಗವಲ್ಲು, ಬನ್ನೂರು ಹಾಗೂ ಆಂದ್ರಪ್ರದೇಶ ಪೆನ್ನಕೊಂಡ ಗ್ರಾಮಗಳಿಂದ ತಂದು ಸಾಕಾಣಿಕೆ ಮಾಡುತ್ತಿದ್ದಾರೆ. ಇದನ್ನೂ ಓದಿ:   ಕೋಣಕ್ಕೆ 3 ಕೆಜಿ ಚಿನ್ನ ಗಿಫ್ಟ್

    ಕುರಿ ಮತ್ತು ಕೋಳಿಗಳಿಗೆ ಬೇಕಾಗಿರುವ ಆಹಾರವನ್ನ ಸಾವಯವ ಆಹಾರವನ್ನ ತಯಾರಿ ಮಾಡಿಕೊಂಡು ಹೆಬೇವು, ಸುಬಾಬುಲ್ಲ, ಅಜೋಲಾವನ್ನು ಇವರೇ ಬೆಳೆದುಕೊಳ್ಳವುದರಿಂದ ಮೇವಿನ ಸಮಸ್ಯೆ ಇಲ್ಲ. ಹೆಚ್ಚೇಚ್ಚು ಬೇಡಿಕೆ ಇರುವ ರಾಜ್ಯದ ಬೇರೆ ಭಾಗಗಳ ತಳಿಗಳೆ ಹೆಚ್ಚು, ಇದ್ರಿಂದ ನೆಮ್ಮದಿಯ ಜೀವನ ಕಂಡುಕೊಳ್ಳಬಹುದು, ಖಾಸಗಿ ಉದ್ಯೋಗಕ್ಕಿಂತ ಭೂಮಿಯನ್ನು ನಂಬಿದರೆ ಯಾವುದೇ ಮೋಸವಿಲ್ಲ ಎನ್ನುವುದು ರೈತನ ಮಾತು.

    ಒಟ್ನಲ್ಲಿ ಖಾಸಗಿ ಕಾಲೇಜಿನ ಉಪನ್ಯಾಸಕ ವೃತ್ತಿಯನ್ನ ತೊರೆದು ರೈತ ಶ್ರದ್ದಾ ಭಕ್ತಿಯಿಂದ ಮಾಡಿದ್ರೆ ಎಲ್ಲಾ ಒಲಿಯುತ್ತೆ ಅನ್ನೋದಕ್ಕೆ ಈತನೆ ಮಾದರಿ. ಕೆಲಸ ಯಾವುದೇ ಇರಲಿ ಆಸಕ್ತಯಿಂದ ಮಾಡಿದ್ರೆ ಯಶಸ್ವಿ ಕಾಣಬಹುದು ಅನ್ನುವ ಮೂಲಕ ಈಡೀ ನಿರುದ್ಯೋಗಿ ಪದವೀಧರ ಸಮುದಾಯಕ್ಕೆ ಮಾದರಿಯಾಗಿ ನಿಂತಿದ್ದಾರೆ ಈ ರೈತ.