Tag: publictv

  • ವಿರಾಟ್ ಕೊಹ್ಲಿಯ 9 ತಿಂಗಳ ಮಗಳಿಗೆ ಅತ್ಯಾಚಾರ ಬೆದರಿಕೆ

    ವಿರಾಟ್ ಕೊಹ್ಲಿಯ 9 ತಿಂಗಳ ಮಗಳಿಗೆ ಅತ್ಯಾಚಾರ ಬೆದರಿಕೆ

    ಮುಂಬೈ: ಭಾರತೀಯ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಮತ್ತು ಬಾಲಿವುಡ್ ನಟಿ ಅನುಷ್ಕಾ ಶರ್ಮಾ ಅವರ ಪುತ್ರಿ ಮೇಲೆ ಆನ್‍ಲೈನ್‍ಲ್ಲಿ ಬಂದಿರುವ ಅತ್ಯಾಚಾರದ ಬೆದರಿಕೆಗಳ ಕುರಿತು ದೆಹಲಿ ಮಹಿಳಾ ಆಯೋಗವು ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ.

    ದುಬೈನಲ್ಲಿ ನಡೆದ ಟಿ20 ವಿಶ್ವಕಪ್‍ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ಸೋತ ನಂತರ ವಿರಾಟ್ ಕೊಹ್ಲಿ ಮಗಳ ವಿರುದ್ಧ ದ್ವೇಷಪೂರಿತ ಕಾಮೆಂಟ್‍ಗಳು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಳ್ಳಲು ಪ್ರಾರಂಭಿಸಿದವು. ಈ ಪಂದ್ಯದ ಟೀಮ್ ಇಂಡಿಯಾ ವೇಗಿ ಮೊಹಮ್ಮದ್ ಶಮಿ ವಿರುದ್ದ ಕಿಡಿಗೇಡಿಗಳು ಸೋಷಿಯಲ್ ಮೀಡಿಯಾದಲ್ಲಿ ಕೋಮು ದಾಳಿ ನಡೆಸಿದ್ದರು. ಈ ಬಗ್ಗೆ ಸಚಿನ್ ತೆಂಡೂಲ್ಕರ್, ಹರ್ಭಜನ್ ಸಿಂಗ್, ಸೆಹ್ವಾಗ್ ಸೇರಿದಂತೆ ಅನೇಕರು ವಿರೋಧ ವ್ಯಕ್ತಪಡಿಸಿ ಶಮಿ ಪರವಾಗಿ ನಿಂತಿದ್ದರು. ಇದನ್ನೂ ಓದಿ: ಗೂಗಲ್ ಸರ್ಚ್‍ನಲ್ಲಿ ಸಿಕ್ಕ ಫ್ಲಿಪ್ಕಾರ್ಟ್ ನಂಬರ್ – ಕರೆ ಮಾಡಿ 2 ಲಕ್ಷ ಕಳ್ಕೊಂಡ

    ನ್ಯೂಜಿಲೆಂಡ್ ವಿರುದ್ದದ ಪಂದ್ಯಕ್ಕೂ ಮುನ್ನ ನಡೆದ ಸುದ್ದಿಗೋಷ್ಠಿಯಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇದೇ ವಿಷಯವನ್ನು ಪ್ರಸ್ತಾಪಿಸಿದ್ದರು. ಶಮಿ ವಿರುದ್ದದ ಕೋಮು ನಿಂದನೆಯನ್ನು ಖಂಡಿಸಿದ ಕೊಹ್ಲಿ, ಒಂದು ಧರ್ಮವನ್ನು ಗುರಿಯಾಗಿಸಿ ಆಕ್ರಮಣ ಮಾಡುವುದು ಒಬ್ಬ ಮನುಷ್ಯ ಮಾಡಬಹುದಾದ ಅತ್ಯಂತ ಹೀನಾಯ ಕೃತ್ಯ. ಏಕೆಂದರೆ ಧರ್ಮ ಎಂಬುದು ಅತ್ಯಂತ ಪವಿತ್ರ ಮತ್ತು ವೈಯಕ್ತಿಕ ವಿಷಯವಾಗಿದೆ. ಯಾವುದೇ ವ್ಯಕ್ತಿಯನ್ನು ಅವರ ಧರ್ಮದ ಆಧಾರದ ಮೇಲೆ ಗುರಿಯಾಗಿಸಬಾರದು ಎಂದು ವಿರಾಟ್ ಕೊಹ್ಲಿ ಸ್ಪಷ್ಟವಾಗಿ ಹೇಳಿದರು. ಇದನ್ನೂ ಓದಿ: ಅಪ್ಪು ಜೊತೆಗಿನ ಲಾಸ್ಟ್ ಸೆಲ್ಫಿ ಶೇರ್ ಮಾಡಿದ ರಾಘಣ್ಣ

    ಮೊಹಮ್ಮದ್ ಶಮಿ ಟೀಮ್ ಇಂಡಿಯಾದ ಪ್ರಮುಖ ಭಾಗ. ಅವರು ಭಾರತಕ್ಕಾಗಿ ಹಲವು ಪಂದ್ಯಗಳನ್ನು ಗೆಲ್ಲಿಸಿದ್ದಾರೆ. ಇಂತಹ ಟೀಕೆಗಳನ್ನು ಮಾಡುವವರಿಗಾಗಿ ನನ್ನ ಸಮಯವನ್ನು ವ್ಯರ್ಥ ಮಾಡಲು ನಾನು ಬಯಸುವುದಿಲ್ಲ. ನಾವು ಶಮಿ ಜೊತೆ ಶೇಕಡಾ 200 ರಷ್ಟು ನಿಲ್ಲುತ್ತೇವೆ. ತಂಡದಲ್ಲಿನ ನಮ್ಮ ಸಹೋದರತ್ವ ಬಾಂದವ್ಯವನ್ನು ಅಲುಗಾಡಿಸಲು ಸಾಧ್ಯವಿಲ್ಲ ಎಂದು ಕೊಹ್ಲಿ ಖಾರವಾಗಿ ಹೇಳಿದ್ದರು. ಇದನ್ನೂ ಓದಿ:  ಪಂಜಾಬ್ ಲೋಕ್ ಕಾಂಗ್ರೆಸ್ -ಅಮರಿಂದರ್ ಸಿಂಗ್ ಹೊಸ ಪಕ್ಷ

    ಕೊಹ್ಲಿಯ ಈ ಹೇಳಿಕೆಯ ಬೆನ್ನಲ್ಲೇ ಇದೀಗ ವಿಕೃತರು ಟೀಮ್ ಇಂಡಿಯಾ ನಾಯಕನ ವಿರುದ್ದ ತಿರುಗಿದ್ದಾರೆ. ಅನ್ಯಧರ್ಮೀಯನ ಪರ ನಿಂತಿದ್ದಕ್ಕಾಗಿ ಸೋಷಿಯಲ್ ಮೀಡಿಯಾ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಷ್ಟೇ ಅಲ್ಲದೆ ಕೊಹ್ಲಿಯ 9 ತಿಂಗಳ ಮಗುವಿನ ಮೇಲೆ ಅತ್ಯಾಚಾರ ಎಸೆಗುವುದಾಗಿ ಬೆದರಿಕೆಗಳ ಕಮೆಂಟ್ ಮಾಡುತ್ತಿದ್ದಾರೆ. ಈ ಕಮೆಂಟ್‍ಗಳು ಈಗ ವೈರಲ್ ಆಗುತ್ತಿದ್ದು, ಪಾಕ್ ಆಟಗಾರ ಮೊಹಮ್ಮದ್ ಅಮೀರ್ ಸೇರಿದಂತೆ ಅನೇಕರು ಇಂತಹ ನೀಚ ನಡೆಯ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:  ಅಪ್ಪು ಕೊನೆ ಕ್ಷಣದ ವಿಡಿಯೋ ಲಭ್ಯ

    ವಿರಾಟ್ ಗೆ ಬೆಂಬಲ ಸೂಚಿಸಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಟ್ವೀಟ್ ಮಾಡಿದ್ದಾರೆ. ಪ್ರಿಯ ವಿರಾಟ್, ಈ ಜನರು ದ್ವೇಷದಿಂದ ತುಂಬಿದ್ದಾರೆ ಏಕೆಂದರೆ ಯಾರೂ ಅವರಿಗೆ ಯಾರೂ ಪ್ರೀತಿಯನ್ನು ನೀಡುವುದಿಲ್ಲ. ಅವರನ್ನು ಕ್ಷಮಿಸಿ. ತಂಡವನ್ನು ರಕ್ಷಿಸಿ ಎಂದು ರಾಹುಲ್ ಗಾಂಧಿ  ಟ್ವೀಟ್ ಮಾಡಿದ್ದಾರೆ.

  • ಪಂಜಾಬ್ ಲೋಕ್ ಕಾಂಗ್ರೆಸ್ -ಅಮರಿಂದರ್ ಸಿಂಗ್ ಹೊಸ ಪಕ್ಷ

    ಪಂಜಾಬ್ ಲೋಕ್ ಕಾಂಗ್ರೆಸ್ -ಅಮರಿಂದರ್ ಸಿಂಗ್ ಹೊಸ ಪಕ್ಷ

    ಚಂಡೀಗಢ: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಸುಮಾರು ಒಂದೂವರೆ ತಿಂಗಳ ಬಳಿಕ ಪಂಜಾಬ್‍ನ ಹಿರಿಯ ರಾಜಕೀಯ ನಾಯಕ ಕ್ಯಾಪ್ಟನ್ ಅಮರಿಂದರ್ ಸಿಂಗ್ ಕಾಂಗ್ರೆಸ್‍ಗೆ ರಾಜೀನಾಮೆ ನೀಡಿದ್ದಾರೆ. ಈ ಬೆನ್ನಲ್ಲೆ ಹೊಸ ಪಕ್ಷವನ್ನು ಘೋಷಣೆ ಮಾಡಿದ್ದಾರೆ.

    ಕಾಂಗ್ರೆಸ್ ತೊರೆದ ಒಂದು ತಿಂಗಳ ನಂತರ, ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಇಂದು ತಮ್ಮ ಹೊಸ ಪಕ್ಷದ ಹೆಸರನ್ನು ಪಂಜಾಬ್ ಲೋಕ ಕಾಂಗ್ರೆಸ್ ಎಂದು ಬಹಿರಂಗಪಡಿಸಿದ್ದಾರೆ. ಪಕ್ಷದ ನೋಂದಣಿಯು ಭಾರತದ ಚುನಾವಣಾ ಆಯೋಗದ ಅನುಮೋದನೆಗೆ ಬಾಕಿ ಇದೆ. ಇದನ್ನೂ ಓದಿ: ಗೂಗಲ್ ಸರ್ಚ್‍ನಲ್ಲಿ ಸಿಕ್ಕ ಫ್ಲಿಪ್ಕಾರ್ಟ್ ನಂಬರ್ – ಕರೆ ಮಾಡಿ 2 ಲಕ್ಷ ಕಳ್ಕೊಂಡ

    ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಇಂದು ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ. ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ ಪಂಜಾಬ್ ಲೋಕ್ ಕಾಂಗ್ರೆಸ್ ಎನ್ನುವ ಹೊಸ ಪಕ್ಷವನ್ನು ಕಟ್ಟಿದ್ದಾರೆ. ಪಂಜಾಬ್ ಮಾಜಿ ಸಿಎಂ ಅಮರಿಂದರ್ ಸಿಂಗ್ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಬಗ್ಗೆ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರಿಗೆ ಬರೆದ ಪತ್ರದಲ್ಲಿ ಸಿಂಗ್, ನನ್ನ ತೀವ್ರವಾದ ಸಂಯಮದ ಹೊರತಾಗಿಯೂ ಮತ್ತು ಪಂಜಾಬ್‍ನ ಬಹುತೇಕ ಎಲ್ಲಾ ಸಂಸದರ ಒಮ್ಮತದ ಸಲಹೆಯ ಹೊರತಾಗಿಯೂ, ನೀವು ಪಾಕಿಸ್ತಾನದ ಸೇನಾ ಮುಖ್ಯಸ್ಥ ಜನರಲ್ ಬಾಜ್ವಾ ಮತ್ತು ಪ್ರಧಾನಿ ಇಮ್ರಾನ್ ಖಾನ್ ಅವರನ್ನು ಸಾರ್ವಜನಿಕವಾಗಿ ಅಪ್ಪಿಕೊಂಡಿದ್ದ ನವಜೋತ್ ಸಿಂಗ್ ಸಿಧು ಅವರನ್ನು ಪಂಜಾಬ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರನ್ನಾಗಿ ನೇಮಿಸಲು ಆಯ್ಕೆ ಮಾಡಿಕೊಂಡಿದ್ದೀರಿ. ಇದನ್ನೂ ಓದಿ: ಅಪ್ಪು ಜೊತೆಗಿನ ಲಾಸ್ಟ್ ಸೆಲ್ಫಿ ಶೇರ್ ಮಾಡಿದ ರಾಘಣ್ಣ

    1954ರಲ್ಲಿ ನಾವು ಶಾಲೆಯಲ್ಲಿ ಜತೆಯಾಗಿದ್ದೆವು, ಅಂದರೆ ಈಗ 67 ವರ್ಷಗಳು. ನಾನು ನನ್ನ ಮಕ್ಕಳಂತೆ ತೀವ್ರವಾಗಿ ಪ್ರೀತಿಸುವ ನಿಮ್ಮ ಮಕ್ಕಳ ಅಪ್ಪನನ್ನು ಚೆನ್ನಾಗಿ ಬಲ್ಲೆ. ನಿಮ್ಮ ನಡತೆಯಿಂದ ನನಗೆ ನೋವಾಗಿದೆ ಎಂದು ಪತ್ರದಲ್ಲಿ ಬರೆಯಲಾಗಿದೆ. ನನ್ನ ರಾಜ್ಯ ಮತ್ತು ನನ್ನ ದೇಶದ ಹಿತದೃಷ್ಟಿಯಿಂದ ನಾನು ಈ ಮೂಲಕ ಇಂಡಿಯನ್ ನ್ಯಾಷನಲ್ ಕಾಂಗ್ರೆಸ್‍ಗೆ ರಾಜೀನಾಮೆ ನೀಡುತ್ತೇನೆ ಎಂದು ಸಿಂಗ್ ಹೇಳಿದ್ದಾರೆ.

  • ಅಪ್ಪು ಜೊತೆಗಿನ ಲಾಸ್ಟ್ ಸೆಲ್ಫಿ ಶೇರ್ ಮಾಡಿದ ರಾಘಣ್ಣ

    ಅಪ್ಪು ಜೊತೆಗಿನ ಲಾಸ್ಟ್ ಸೆಲ್ಫಿ ಶೇರ್ ಮಾಡಿದ ರಾಘಣ್ಣ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಪುನೀತ್ ರಾಜ್‍ಕುಮಾರ್ ಅವರನ್ನು ಕಳೆದುಕೊಂಡು 5 ದಿನವಾಗಿದೆ. ಅಪ್ಪು ಇಲ್ಲದ ದಿನ, ಮತ್ತು ಅವರ ಜೊತೆಗೆ ತೆಗೆದುಕೊಂಡಿರುವ ಕೊನೆಯ ಫೋಟೋವನ್ನು ರಾಘವೇಂದ್ರ ರಾಜ್‍ಕುಮಾರ್ ಸೋಶಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ.

    ಪುನೀತ್ ರಾಜಕುಮಾರ್, ರಾಘವೇಂದ್ರ ರಾಜಕುಮಾರ್ ಜೊತೆಗೆ ತೆಗೆದುಕೊಂಡಂತಹ ಸೆಲ್ಫಿ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ. ಜೊತೆಗೆ ಭಾವುಕ ನುಡಿಗಳನ್ನು ಕೂಡ ಬರೆದುಕೊಂಡಿದ್ದಾರೆ ರಾಘವೇಂದ್ರ ರಾಜಕುಮಾರ್. ಇತ್ತೀಚಿಗೆ ನನಗೆ ದಾದಾಸಾಹೇಬ್ ಫಾಲ್ಕೆ ಎಂಎಸ್‍ಕೆ ಟ್ರಸ್ಟ್ ವತಿಯಿಂದ ಜೀವನ ಸಾಧನೆ ಪ್ರಶಸ್ತಿ ಬಂದಿತ್ತು. ಅದು ಅಪ್ಪುಗೆ ಎಲ್ಲಿಲ್ಲದ ಸಂತಸವನ್ನು ತಂದುಕೊಟ್ಟಿತ್ತು. ನನ್ನನ್ನು ತಕ್ಷಣ ಭೇಟಿ ಮಾಡಿ ರಾಘಣ್ಣ ನೀವು ಕೂಡ ಈ ಮೂರ್ತಿಯ ಹಾಗೆಯೇ ಅಪ್ಪಾಜಿಯವರ ಮೂರ್ತಿಯನ್ನು ಮಾಡಿ ಎಂದಿನಂತೆ ಡಾಕ್ಟರ್ ರಾಜಕುಮಾರ್ ಟ್ರಸ್ಟ್ ವತಿಯಿಂದ ನೀಡುವ ಪ್ರಶಸ್ತಿಯನ್ನು ಇದೇ ರೂಪದಲ್ಲಿ ಮಾಡೋಣ ಎಂದು ಹೇಳಿದನು. ಅಪ್ಪು ನಿನ್ನ ಆಲೋಚನೆಗೆ ನನ್ನದೊಂದು ನಮನ. ಲವ್ ಯು ಮಗನೇ ಎಂದು ರಾಘವೇಂದ್ರ ರಾಜ್‍ಕುಮಾರ್ ಬರೆದುಕೊಂಡು ಅಪ್ಪುನನ್ನು ನೆನಪು ಮಾಡಿಕೊಂಡಿದ್ದಾರೆ. ಇದನ್ನೂ ಓದಿ:  ಅಪ್ಪು ಕೊನೆ ಕ್ಷಣದ ವಿಡಿಯೋ ಲಭ್ಯ

    ಅಪ್ಪು ಕಂಡರೆ ಇಡೀ ಕರುನಾಡಿಗೆ ಅಚ್ಚುಮೆಚ್ಚು. ಮನೆಯಲ್ಲೂ ಕೂಡ ಅಪ್ಪು ಎಲ್ಲರ ಮುದ್ದಿನ ಮಗ. ರಾಘವೇಂದ್ರ ರಾಜ್‍ಕುಮಾರ್ ಅವರ ಶಕ್ತಿಯಾಗಿದ್ದರು ಪುನೀತ್ ರಾಜ್‍ಕುಮಾರ್. ಶಿವಣ್ಣಗೂ ಪುನೀತ್ ರಾಜ್‍ಕುಮಾರ್ ಅಷ್ಟೇ ಪ್ರೀತಿ ಇತ್ತು. ಇದ್ದರೆ ಇವರ ರೀತಿ ಸಹೋದರರಿರಬೇಕು ಎಂದು ಎಲ್ಲರೂ ಹೇಳುತ್ತಿದ್ದರು. ಪುನೀತ್ ಸಿನಿಮಾ ರಂಗದಲ್ಲಿಯಾಗಲಿ, ವೈಯಕ್ತಿಕ ಜೀವನದಲ್ಲಿ ಆಗಲಿ ಒಂದು ಸಣ್ಣ ಕಾಂಟ್ರವರ್ಸಿ ಕೂಡ ಮಾಡಿಕೊಂಡವರಲ್ಲ. ಸದಾ ನಗುಮುಖದಿಂದಲೇ ಬಂದವರನ್ನು ಮಾತನಾಡಿಸುತ್ತಿದರು. ಆದರೆ ಇನ್ನೂ ಮುಂದೆ ಆ ಅಪ್ಪು ನಗು ನೆನಪು ಮಾತ್ರ. ಈ ಕಹಿ ಸತ್ಯ ಅರಗಿಸಿಕೊಳ್ಳಲಾಗದಿದ್ದರೂ ಸತ್ಯವೇ. ಇದನ್ನೂ ಓದಿ: ಶಿವಮೊಗ್ಗದಲ್ಲಿ ರಸ್ತೆಗೆ ಪುನೀತ್ ರಾಜ್‍ಕುಮಾರ್ ಹೆಸರಿಟ್ಟ ಸ್ಥಳೀಯರು

  • ಶಿವಮೊಗ್ಗದಲ್ಲಿ ರಸ್ತೆಗೆ ಪುನೀತ್ ರಾಜ್‍ಕುಮಾರ್ ಹೆಸರಿಟ್ಟ ಸ್ಥಳೀಯರು

    ಶಿವಮೊಗ್ಗದಲ್ಲಿ ರಸ್ತೆಗೆ ಪುನೀತ್ ರಾಜ್‍ಕುಮಾರ್ ಹೆಸರಿಟ್ಟ ಸ್ಥಳೀಯರು

    ಶಿವಮೊಗ್ಗ: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಕಾಲಿಕ ನಿಧನದಿಂದ ಅಭಿಮಾನಿಗಳು, ಕುಟುಂಬಸ್ಥರು, ಕಲಾವಿದರು ಸೇರಿದಂತೆ ಪ್ರತಿಯೋಬ್ಬರಿಗೂ ನೋವು ತರಿಸಿದೆ. ಪುನೀತ್ ಅವರು ಮರಣ ಹೊಂದಿದ ನಂತರ ಹಲವು ಮಂದಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. ಆದರೆ ಶಿವಮೊಗ್ಗ ನಗರದ ಜನತೆ ಒಂದು ಹೆಜ್ಜೆ ಮುಂದೆ ಹೋಗಿ ಪುನೀತ್ ಮೇಲಿನ ಅಭಿಮಾನವನ್ನು ವಿಭಿನ್ನವಾಗಿ ಮೆರೆದಿದ್ದಾರೆ.

     Shivamogga

    ನಗರದ ಹೃದಯ ಭಾಗದಲ್ಲಿರುವ ಲಕ್ಷ್ಮಿ ಚಿತ್ರಮಂದಿರದ ಬಳಿಯ ನಿವಾಸಿಗಳು, ಚಿತ್ರಮಂದಿರ ಇರುವ ಸುಮಾರು 1 ಕಿ.ಮೀ ಉದ್ದದ ಲಕ್ಷ್ಮೀ ಟಾಕೀಸ್ ಹತ್ತಿರದ ಚಾನೆಲ್ ರಸ್ತೆಗೆ ಪುನೀತ್ ರಾಜಕುಮಾರ್ ರಸ್ತೆ ಎಂದು ನಾಮಕರಣ ಮಾಡಿದ್ದಾರೆ. ಆ ಮೂಲಕ ಸಾರ್ವಜನಿಕರು ತಮ್ಮ ಅಭಿಮಾನವನ್ನು ಎತ್ತಿ ಹಿಡಿದು ಸ್ಥಳೀಯ ಮಹನಾಗರ ಪಾಲಿಕೆಗೆ ಅಧಿಕೃತಗೊಳಿಸಲು ಒತ್ತಾಯಿಸಿದ್ದಾರೆ. ಇದನ್ನೂ ಓದಿ:  ಅಪ್ಪು ಕೊನೆ ಕ್ಷಣದ ವಿಡಿಯೋ ಲಭ್ಯ


    ಕನ್ನಡ ಸಾಂಸ್ಕೃತಿಕ ಲೋಕದ ರಾಯಭಾರಿ ಪುನೀತ್ ರಾಜಕುಮಾರ್ ನಾಡಿಗೆ ಕಲಾದೇವಿ ಸೇವಿಯನ್ನು ಬಾಲ್ಯದಿಂದಲೇ ನೀಡಿದವರು. ಅಲ್ಲದೇ ಅವರು ತಮ್ಮ ನಟನೆ ಹಾಗೂ ಸಹೃದಯಿತನದಿಂದ ಜನರ ಮನಸ್ಸಿನಲ್ಲಿ ನೆಲೆಯೂರಿ ಮಾದರಿಯಾಗಿದ್ದರು. ಅವರ ಅಗಲಿಕೆ ಅತೀವ ನೋವುಂಟು ಮಾಡಿದ್ದು, ಅವರ ಕಲಾ ಹಾಗೂ ಸಾಮಾಜಿಕ ಜೀವನ ನಿರ್ವಹಣೆ ಕೋಟಿ, ಕೋಟಿ ಕನ್ನಡಿಗರಿಗೆ ಮಾದರಿಯಾಗಿವೆ. ಇದನ್ನೂ ಓದಿ: ಪುನೀತ್ ಸಮಾಧಿಗೆ ಹಾಲು ತುಪ್ಪ ಕಾರ್ಯ ನೆರವೇರಿಸಿದ ಕುಟುಂಬಸ್ಥರು

    PUNEET

    ಶಿವಮೊಗ್ಗ ನಗರದಲ್ಲಿಯೂ ಸುಮಾರು ಒಂದು ಕಿ.ಮೀ ಉದ್ದದ ರಸ್ತೆಗೆ ಸಾರ್ವಜನಿಕರೇ ಖುದ್ದು ಸೇರಿ ಪುನೀತ್ ರಾಜಕುಮಾರ್ ರಸ್ತೆ ಎಂದು ನಾಮ ಫಲಕವನ್ನು ಸ್ಥಾಪಿಸಿ ಉದ್ಘಾಟನೆ ನೆರವೇರಿಸಿರುವುದು ಶ್ಲಾಘನೀಯವಾಗಿದೆ.

  • ರೈತರ ನೋವನ್ನು ಅರ್ಥಮಾಡಿಕೊಳ್ಳಲು ಅವರ ಮಾತನ್ನು ಆಲಿಸಬೇಕು: ವರುಣ್ ಗಾಂಧಿ

    ರೈತರ ನೋವನ್ನು ಅರ್ಥಮಾಡಿಕೊಳ್ಳಲು ಅವರ ಮಾತನ್ನು ಆಲಿಸಬೇಕು: ವರುಣ್ ಗಾಂಧಿ

    ನವದೆಹಲಿ: ರೈತರ ನೋವನ್ನು ಅರ್ಥಮಾಡಿಕೊಳ್ಳಲು ಮೊದಲು ಅವರ ಮಾತನ್ನು ಆಲಿಸಬೇಕು ಎಂದು ಪಕ್ಷದ ವಿರುದ್ಧ ಬಿಜೆಪಿಯ ಲೋಕಸಭಾ ಸಂಸದ ವರುಣ್ ಗಾಂಧಿ ಮತ್ತೆ ಕಿಡಿಕಾರಿದ್ದಾರೆ.

    ಇಂದು ಲಖಿಂಪುರ ಮತ್ತು ಪಿಲಿಭಿತ್ ಗಡಿಭಾಗದ ರೈತರೊಂದಿಗೆ ಅವರ ಸಮಸ್ಯೆಗಳ ಕುರಿತು ಚರ್ಚಿಸಿದರು. ರೈತರ ನೋವಿಗೆ ಕಿವಿಗೊಡಬೇಕು. ರೈತರ ಕಷ್ಟಗಳನ್ನು ತಿಳಿದುಕೊಳ್ಳಲು ಮೊದಲು ಅವರ ಮಾತುಗಳನ್ನು ಕೇಳಿಸಿಕೊಳ್ಳಬೇಕು. ಕನಿಷ್ಠ ಬೆಂಬಲ ಬೆಲೆ ಸಿಗಲಿದೆ ಎಂಬುದಕ್ಕೆ ಕಾನೂನು ರಕ್ಷಣೆ ಬೇಕಾಗಿದೆ. ಇದರಿಂದ ಮಾತ್ರವೇ ಸಗಟು ಮಾರುಕಟ್ಟೆಯಲ್ಲಿ ರೈತರ ಶೋಷಣೆ ತಪ್ಪಲಿದೆ ಎಂದು ಹೇಳಿದರು. ಇದನ್ನೂ ಓದಿ:  ಪಾಕ್ ಪರ ಘೋಷಣೆ- ದೇಶದ್ರೋಹ ಪ್ರಕರಣ ದಾಖಲಿಸಿ ಯುವಕನ ಬಂಧನ

    ಕಳೆದ ಕೆಲವು ದಿನಗಳಿಂದ ವರುಣಗಾಂಧಿ ಸತತವಾಗಿ ರೈತರ ಬೇಡಿಕೆಗಳಿಗೆ ಬೆಂಬಲ ನೀಡುತ್ತಿದ್ದಾರೆ. ಇದಕ್ಕೂ ಮುನ್ನ ಅಕ್ಟೋಬರ್ 29ರಂದು ಮಂಡಿಗೆ ಭೇಟಿ ನೀಡಿ ಪರಿಸ್ಥಿತಿ ಅವಲೋಕಿಸಿದ್ದರು. ಪಿಲಿಭಿತ್ ಸೇರಿದಂತೆ 17 ಜಿಲ್ಲೆಗಳಲ್ಲಿ ರೈತ ತನ್ನ ಭತ್ತದ ಬೆಳೆಗೆ ತಾನೇ ಬೆಂಕಿ ಹಚ್ಚುತ್ತಿದ್ದಾನೆ ಎಂದು ಮಂಡಿ ನೌಕರರಿಗೆ ಹೇಳಿದ್ದರು. ಇದು ಇಡೀ ರಾಜ್ಯಕ್ಕೆ ದೊಡ್ಡ ಅವಮಾನ ಎಂದು ಪಕ್ಷದ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ನೀಟ್ ಫಲಿತಾಂಶ ಪ್ರಕಟ- ಇ-ಮೇಲ್‍ಗೇ ರಿಸಲ್ಟ್

  • ಹೆಂಡತಿಯನ್ನು ಆಕೆಯ ಪ್ರೇಮಿಯೊಂದಿಗೆ ಮದುವೆ ಮಾಡಿಸಿದ ಪತಿ

    ಹೆಂಡತಿಯನ್ನು ಆಕೆಯ ಪ್ರೇಮಿಯೊಂದಿಗೆ ಮದುವೆ ಮಾಡಿಸಿದ ಪತಿ

     ಲಕ್ನೋ: ಐದು ತಿಂಗಳ ಹಿಂದೆ ಮದುವೆಯಾದ ವ್ಯಕ್ತಿ ತನ್ನ ಹೆಂಡತಿಯನ್ನು ಆಕೆಯ ಪ್ರಿಯಕರನೊಂದಿಗೆ ಮದುವೆ ಮಾಡಿಸಿರುವ ವಿಚಿತ್ರ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ.

    ಗುರುಗ್ರಾಮನಲ್ಲಿ ಖಾಸಗಿ ಸಂಸ್ಥೆಯಲ್ಲಿ ಅಕೌಂಟೆಂಟ್ ಆಗಿ ಕೆಲಸ ಮಾಡುವ ಪಂಕಜ್ ಶರ್ಮಾ ಮೇ ತಿಂಗಳಲ್ಲಿ ಕೋಮಲ್‍ಳನ್ನು ಮದುವೆಯಾಗಿದ್ದರು. ಆದರೆ ಮದುವೆಯಾದ ನಂತರ ಆಕೆ ಬೇರೆಯವನನ್ನು ಪ್ರೀತಿಸುತ್ತಿದ್ದಳು ಎನ್ನುವ ವಿಚಾರ ಶರ್ಮಾನಿಗೆ ತಿಳಿದಿದೆ. ನಂತರ ಮದುವೆಯಾದ ದಿನದಿಂದಲೂ ಆಕೆ ಗಂಡ ಜೊತೆಗಾಗಲಿ, ಗಂಡನ ಮನೆಯವರೊಂದಿಗಾಗಲಿ ಮಾತನಾಡಿರಲಿಲ್ಲ. ಇದರಿಂದ ಆತನಿಗೆ ಬಹಳ ಗೊಂದಲವಾಗಿತ್ತು. ಇದನ್ನೂ ಓದಿ: ನೀಟ್ ಫಲಿತಾಂಶ ಪ್ರಕಟ- ಇ-ಮೇಲ್‍ಗೇ ರಿಸಲ್ಟ್

    ಮದುವೆಯಾದ ಮೇಲೂ ತನ್ನ ಪ್ರೇಮಿ ಪಿಂಟು ಜೊತೆ ಜೀವನ ನಡೆಸಬೇಕು ಅಂದುಕೊಂಡಿದ್ದಳು. ಇದನ್ನು ತಿಳಿದ ಆಕೆಯ ಗಂಡ ಪಂಕಜ್ ಶರ್ಮ ಈ ವಿಷಯವನ್ನು ಕೋಮಲ್‍ಳ ತಂದೆ, ತಾಯಿಗೆ ಹೇಳಿದರು. ಅವರು ತಮ್ಮ ಮಗಳಿಗೆ ಬುದ್ಧಿ ಹೇಳಲು ಸಾಕಷ್ಟು ಪ್ರಯತ್ನಿಸಿದರು. ಆದರೆ ಆಕೆ ತನ್ನ ಪ್ರೇಮಿಯನ್ನು ಮರೆಯಲು ಸಾಧ್ಯವಿಲ್ಲ ಎಂದು ಹಠ ಹಿಡಿದಿದ್ದಾಳೆ. ಇದನ್ನೂ ಓದಿ:  ಪಾಕ್ ಪರ ಘೋಷಣೆ- ದೇಶದ್ರೋಹ ಪ್ರಕರಣ ದಾಖಲಿಸಿ ಯುವಕನ ಬಂಧನ

    ಪಂಕಜ್, ಕೋಮಲ್ ಹಾಗೂ ಪಿಂಟುವನ್ನು ಕರೆಸಿ ಮಾತನಾಡಿದ್ದಾನೆ. ಆಗ ಕೋಮಲ್ ತಾನು ಪಂಕಜ್ ಜೊತೆ ಜೀವನ ನಡೆಸಲು ಸಾಧ್ಯವಿಲ್ಲ ಎಂದು ಕೋಮಲ್ ಸ್ಪಷ್ಟವಾಗಿ ಹೇಳಿದ್ದರಿಂದ ಪಂಕಜ್ ತಾನೇ ಮುಂದೆ ನಿಂತು ಕೋಮಲ್ ಹಾಗೂ ಪಿಂಟುವಿನ ಮದುವೆ ಮಾಡಿಸುವುದಾಗಿ ಹೇಳಿದರು. ಮರುದಿನವೇ ಆಕೆಯ ಪ್ರೇಮಿಯ ಜೊತೆ ಮದುವೆ ಮಾಡಿಸಿದ್ದಾನೆ.

  • ನೀಟ್ ಫಲಿತಾಂಶ ಪ್ರಕಟ – ಇಮೇಲ್‍ಗೆ ರಿಸಲ್ಟ್

    ನೀಟ್ ಫಲಿತಾಂಶ ಪ್ರಕಟ – ಇಮೇಲ್‍ಗೆ ರಿಸಲ್ಟ್

    ನವದೆಹಲಿ: 2021ನೇ ಸಾಲಿನ ನೀಟ್ ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾರ್ಥಿಗಳ ಇಮೇಲ್‍ಗೆ ನೇರವಾಗಿ ರಿಸಲ್ಟ್ ಕಳಿಸಲಾಗುತ್ತಿದೆ.

    ನ್ಯಾಷನಲ್ ಟೆಸ್ಟಿಂಗ್ ಏಜಿನ್ಸಿ(ಎನ್‍ಡಿಎ) ವೈದ್ಯಕೀಯ ಕೋರ್ಸ್ ಪ್ರವೇಶಕ್ಕಾಗಿ ನಡೆಸಿದ್ದ ರಾಷ್ಟ್ರೀಯ ಅರ್ಹತಾ ಪರೀಕ್ಷೆ (ನೀಟ್) ಫಲಿತಾಂಶವನ್ನು ಇಂದು ಪ್ರಕಟಿಸಿದೆ. ಆದರೆ ಇದನ್ನು ತನ್ನ ಅಧಿಕೃತ ವೆಬ್‍ಸೈಟ್‍ನಲ್ಲಿ ಪ್ರಕಟಿಸದೇ ವಿದ್ಯಾರ್ಥಿಗಳ ಇಮೇಲ್‍ಗೆ ನೇರವಾಗಿ ಕಳಿಸಿರುವುದು ತಿಳಿದುಬಂದಿದೆ. ಇದನ್ನೂ ಓದಿ: T20 ವಿಶ್ವಕಪ್‍ನಲ್ಲಿ ಟೀಂ ಇಂಡಿಯಾ ಸೋತಿದ್ದು ಎಲ್ಲಿ? ಕಳಪೆ ಪ್ರದರ್ಶನಕ್ಕೆ ಕಾರಣ ಏನು?

    ಅಧಿಕೃತವಾಗಿ ವೆಬ್‍ಸೈಡ್ www.neet.nta.nic.in ನಲ್ಲೂ ಶೀಘ್ರದಲ್ಲೇ ಫಲಿತಾಂಶ ಪ್ರಕಟಿಸಲಿದ್ದು, ವಿದ್ಯಾರ್ಥಿಗಳು ತಮ್ಮ ನೋಂದಣಿ ಸಂಖ್ಯೆ ಹಾಗೂ ಜನ್ಮದಿನಾಂಕ ನಮೂದಿಸಿ ಫಲಿತಾಂಶ ತುಳಿದುಕೊಳ್ಳಬಹುದು. ಇದನ್ನೂ ಓದಿ:  ಪಾಕ್ ಪರ ಘೋಷಣೆ- ದೇಶದ್ರೋಹ ಪ್ರಕರಣ ದಾಖಲಿಸಿ ಯುವಕನ ಬಂಧನ

    16 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು:
    ಪದವಿಪೂರ್ವ ವೈದ್ಯಕೀಯ ಕೋರ್ಸ್‍ಗಳಿಗೆ ಪ್ರವೇಶಕ್ಕಾಗಿ ಪ್ರವೇಶ ಪರೀಕ್ಷೆಗಳನ್ನು 12 ಸೆಪ್ಟೆಂಬರ್ 2021 ರವರೆಗೆ ನಡೆಸಲಾಗಿತ್ತು. ಈ ವರ್ಷ ಸುಮಾರು 16 ಲಕ್ಷ ಅಭ್ಯರ್ಥಿಗಳು ನೀಟ್ ಯುಜಿ ಪರೀಕ್ಷೆಗೆ ಹಾಜರಾಗಿದ್ದರು. ಅಕ್ಟೋಬರ್ 15  ರಂದು ತಾತ್ಕಾಲಿಕ ಉತ್ತರ ಕೀಯನ್ನು ಬಿಡುಗಡೆ ಮಾಡಿತ್ತು. ಇದನ್ನೂ ಓದಿ: 5-6 ದಿನ ಪುನೀತ್ ಸಮಾಧಿ ಬಳಿ ಯಾರನ್ನೂ ಬಿಡಲ್ಲ: ಅರಗ ಜ್ಞಾನೇಂದ್ರ

    28 ಅಕ್ಟೋಬರ್ 2021 ರಂದು ಸುಪ್ರೀಂ ಕೋರ್ಟ್ NEET 2021 ಪರೀಕ್ಷೆಯ ಫಲಿತಾಂಶಗಳನ್ನು ಘೋಷಿಸಲು NTAಗೆ ಅನುಮತಿ ನೀಡಿತ್ತು. ಇದಾದ ಬಳಿಕ ಇಂದು NTA NEET ಫಲಿತಾಂಶದೊಂದಿಗೆ ಫೈನಲ್ ಅನ್ಸರ್ ಕೀ ಅನ್ನು ಸಹ ಬಿಡುಗಡೆ ಮಾಡಿದೆ.

    NEET ಫಲಿತಾಂಶ ಬಿಡುಗಡೆಯಾದ ನಂತರ ವಿದ್ಯಾರ್ಥಿಗಳು ಕೌನ್ಸೆಲಿಂಗ್‌ಗೆ ಹಾಜರಾಗಬೇಕಾಗಲಿದೆ. ಇದಕ್ಕಾಗಿ, ಅಭ್ಯರ್ಥಿಗಳಿಗೆ NEET 2021 ಪ್ರವೇಶ ಪತ್ರ, NEET ಫಲಿತಾಂಶ ಶ್ರೇಣಿಯ ಪತ್ರ ಅಥವಾ ಅಂಕಪಟ್ಟಿ, 10, 12 ತರಗತಿ ಪ್ರಮಾಣಪತ್ರ, ಯಾವುದಾದರೂ ಒಂದು ಐಡಿ, ಪಾಸ್‌ಪೋರ್ಟ್ ಗಾತ್ರದ ಫೋಟೋ ಅಗತ್ಯವಿದೆ.

  • ರಾಜ್ಯದಲ್ಲಿ ಕೊರೊನಾ ಭಾರೀ ಇಳಿಕೆ – ಬೆಂಗಳೂರಿನಲ್ಲಿ ಶೂನ್ಯ ಸಾವು

    ರಾಜ್ಯದಲ್ಲಿ ಕೊರೊನಾ ಭಾರೀ ಇಳಿಕೆ – ಬೆಂಗಳೂರಿನಲ್ಲಿ ಶೂನ್ಯ ಸಾವು

    ಬೆಂಗಳೂರು: ರಾಜ್ಯದಲ್ಲಿ ಇಂದು 188 ಒಟ್ಟು ಹೊಸ ಕೊರೊನಾ ಪ್ರಕರಣ ದಾಖಲಾಗಿದ್ದು, 2 ಮಂದಿ ಸಾವನ್ನಪ್ಪಿದ್ದಾರೆ. ಬೆಂಗಳೂರು ನಗರದಲ್ಲಿ 95 ಮಂದಿಗೆ ಪಾಸಿಟಿವ್ ವರದಿಯಾಗಿದ್ದು, 148 ಮಂದಿ ಆಸ್ಪತ್ರೆಯಿಂದ ಬಿಡುಗಡೆಗೊಂಡು, ಇಂದು ಕೊರೊನಾದಿಂದ ಯಾರು ಮರಣ ಹೊಂದಿಲ್ಲ.

    ರಾಜ್ಯದಲ್ಲಿ 318 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು 8,512 ಸಕ್ರಿಯ ಪ್ರಕರಣಗಳು ಇದ್ದು, ಈವರೆಗೆ ರಾಜ್ಯದಲ್ಲಿ ಒಟ್ಟು 29,88,521 ಮಂದಿಗೆ ಕೊರೊನಾ ಬಂದಿದೆ. 29,41,896 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.1.06 ರಷ್ಟಿದ್ದರೇ, ಪಾಸಿಟಿವಿಟಿ ರೇಟ್ ಶೇ.0.06 ರಷ್ಟಿದೆ.

    ಇಂದು ರಾಜ್ಯದಲ್ಲಿ ಒಟ್ಟು 28,115 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 73,924 ಸ್ಯಾಂಪಲ್ ( RTPCR 64,418 + 9,506 ರ‍್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ. ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ, 11 ಜಿಲ್ಲೆಗಳಲ್ಲಿ ಶೂನ್ಯ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಇನ್‍ಸ್ಟಾದಿಂದ ಮದುವೆ ಫೋಟೋ ಡಿಲೀಟ್ ಮಾಡಿದ ಸಮಂತಾ

    ಬಾಗಲಕೋಟೆ 0, ಬಳ್ಳಾರಿ 4, ಬೆಳಗಾವಿ 3, ಬೆಂಗಳೂರು ಗ್ರಾಮಾಂತರ 1, ಬೆಂಗಳೂರು ನಗರ 95, ಬೀದರ್ 0, ಚಾಮರಾಜನಗರ 0, ಚಿಕ್ಕಬಳ್ಳಾಪುರ 2, ಚಿಕ್ಕಮಗಳೂರು 2, ಚಿತ್ರದುರ್ಗ 4, ದಕ್ಷಿಣ ಕನ್ನಡ 12, ದಾವಣಗೆರೆ 1, ಧಾರವಾಡ 0, ಗದಗ 0, ಹಾಸನ 11, ಹಾವೇರಿ 0, ಕಲಬುರಗಿ 2, ಕೊಡಗು 10, ಕೋಲಾರ 1, ಕೊಪ್ಪಳ 0, ಮಂಡ್ಯ 4, ಮೈಸೂರು 16, ರಾಯಚೂರು 0, ರಾಮನಗರ 0, ಶಿವಮೊಗ್ಗ 1, ತುಮಕೂರು 5, ಉಡುಪಿ 6, ಉತ್ತರ ಕನ್ನಡ 7, ವಿಜಯಪುರ 1, ಮತ್ತು ಯಾದಗಿರಿಯಲ್ಲಿ ಇಂದು ಕೂಡ ಶೂನ್ಯ ಪ್ರಕರಣ ದಾಖಲಾಗಿದೆ.

  • ಟೋಂಗಾ ದೇಶದಲ್ಲಿ ಮೊದಲ ಬಾರಿ ಕೊರೊನಾ ಕೇಸ್ ಪತ್ತೆ

    ಟೋಂಗಾ ದೇಶದಲ್ಲಿ ಮೊದಲ ಬಾರಿ ಕೊರೊನಾ ಕೇಸ್ ಪತ್ತೆ

    ಟೋಂಗಾ: ಕೊರೊನಾ ವೈರಸ್‍ನಿಂದ ದೂರ ಉಳಿದಿದ್ದ ವಿಶ್ವದ ಕೆಲವೇ ಕೆಲವು ರಾಷ್ಟ್ರಗಳಲ್ಲಿ ಒಂದಾಗಿದ್ದ ಟೋಂಗಾ ದೇಶದಲ್ಲಿ ಮೊಟ್ಟ ಮೊದಲ ಬಾರಿಗೆ ಸೋಂಕು ಪತ್ತೆಯಾಗಿದೆ.

    ನ್ಯೂಜಿಲೆಂಡ್‍ನಿಂದ ಬಂದ ಪ್ರಯಾಣಿಕರೊಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಪೂರ್ಣ ಪ್ರಮಾಣದ ಲಸಿಕೆ ಪಡೆದ 215 ಮಂದಿ ನ್ಯೂಜಿಲೆಂಡ್‍ನಿಂದ ಟೋಂಗಾಕ್ಕೆ ಬಂದಿಳಿದಿದ್ದಾರೆ. ಈ ಪೈಕಿ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. ಇದರ ಬೆನ್ನಲ್ಲೇ ದೇಶದಲ್ಲಿ ಲಾಕ್‍ಡೌನ್ ಹೇರುವ ಸಾಧ್ಯತೆ ಇದೆ ಎನ್ನಲಾಗಿದೆ. ಇದನ್ನೂ ಓದಿ: ಗೌಪ್ಯವಾಗಿ ಬೂಸ್ಟರ್ ಡೋಸ್  ಪಡೆಯುತ್ತಿರುವ ಆರೋಗ್ಯ ಸಿಬ್ಬಂದಿ

    ನ್ಯೂಜಿಲೆಂಡ್‍ನಿಂದ ಟೋಂಗಾಕ್ಕೆ ಬಂದಿಳಿದ ಎಲ್ಲಾ ಪ್ರಯಾಣಿಕರನ್ನು ಕ್ವಾರಂಟೈನ್‍ಗೆ ಒಳಗಾಗುವಂತೆ ಸೂಚಿಸಲಾಗಿದೆ ಎಂದು ವರದಿಯಾಗಿದೆ. ಈ ನಡುವೆ ಪ್ರಧಾನಿ ಪೊಹಿವಾ ಅವರು ಭವಿಷ್ಯದಲ್ಲಿ ಟೋಂಗಾ ದೇಶದಲ್ಲಿ ಲಾಕ್‍ಡೌನ್ ಜಾರಿಮಾಡಬೇಕಾಗಬಹುದು ಎಂದು ಎಚ್ಚರಿಸಿದ್ದಾರೆ. ಕೇವಲ 1.06ಲಕ್ಷ ಜನಸಂಖ್ಯೆ ಇರುವ ಪುಟ್ಟ ರಾಷ್ಟ್ರದಲ್ಲಿ ಈವರೆಗೆ ಮೂರನೇ ಒಂದರಷ್ಟು ಜನರು ಮಾತ್ರ ಕೋವಿಡ್ ಲಸಿಕೆ ಪಡೆದಿದ್ದಾರೆ. ಇದನ್ನೂ ಓದಿ: 5-6 ದಿನ ಪುನೀತ್ ಸಮಾಧಿ ಬಳಿ ಯಾರನ್ನೂ ಬಿಡಲ್ಲ: ಅರಗ ಜ್ಞಾನೇಂದ್ರ

  • ಅನ್ಯ ಭಾಷಿಗರು ಕನ್ನಡ ಭಾಷೆ ಕಲಿಯಬೇಕು- ಅಶ್ವಥ್ ನಾರಾಯಣ್

    ಅನ್ಯ ಭಾಷಿಗರು ಕನ್ನಡ ಭಾಷೆ ಕಲಿಯಬೇಕು- ಅಶ್ವಥ್ ನಾರಾಯಣ್

    – ಸರಳ, ಸುಂದರ, ಸಂಸ್ಕೃತಿಯ ಭಾಷೆ ನಮ್ಮದು

    ಬೆಂಗಳೂರು: ಅನ್ಯ ಭಾಷಿಗರು ಕನ್ನಡ ಭಾಷೆ ಕಲಿಯಬೇಕು. ಸರಳ, ಸುಂದರ, ಸಂಸ್ಕೃತಿಯ ಭಾಷೆ ನಮ್ಮದು ಎಂದು ಸಚಿವ ಅಶ್ವಥ್ ನಾರಾಯಣ್ ಹೇಳಿದ್ದಾರೆ.

    ಗೋಕಾಕ್ ಚಳುವಳಿಯ ಸ್ಮರಣಾರ್ಥ ಉದ್ಯಾನವನದಲ್ಲಿ 66ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ನಡೆಸಲಾಗಿದೆ. ಬಿಜೆಪಿ ಯುವ ಮುಖಂಡರಾದ ವಿಶಾಲ್‍ರವರು ಕನ್ನಡ ಧ್ವಜಾರೋಹಣ ಮಾಡಿ ನಂತರ ತಾಯಿ ಭುವನೇಶ್ವರಿ ಬಾವಚಿತ್ರಕ್ಕೆ ಮತ್ತು ಮೇರುನಟ ಡಾ. ರಾಜ್‍ಕುಮಾರ್ ಪ್ರತಿಮೆಗೆ ಮತ್ತು ಪುನೀತ್ ರಾಜ್‍ಕುಮಾರ್ ಬಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಕನ್ನಡಾಭಿಮಾನಿಗಳು ಮತ್ತು ಬಿ.ಜೆ.ಪಿ.ಪ್ರಮುಖರು ಪಾಲ್ಗೊಂಡಿದ್ದರು. ಇದನ್ನೂ ಓದಿ: ಪುನೀತ್ ಓದಿಸುತ್ತಿದ್ದ 1,800 ಮಕ್ಕಳ ಜವಾಬ್ದಾರಿ ಹೊತ್ತ ನಟ ವಿಶಾಲ್

    ಡಾ.ಸಿ.ಎನ್.ಅಶ್ವಥ್ ನಾರಾಯಣ್ ರವರು ಮಾತನಾಡಿ ಕನ್ನಡ ಭಾಷೆ 2500ವರ್ಷಗಳ ಇತಿಹಾಸವಿರುವ ಪ್ರಾಚಿನ ಭಾಷೆಯಾಗಿದೆ. ಕನ್ನಡ ಭಾಷೆಗೆ 8ಜ್ಞಾನಪೀಠ ಪ್ರಶಸ್ತಿ ಲಭಿಸಿದೆ. ಅನ್ಯ ಭಾಷಿಗರು ಕನ್ನಡ ಕಲಿಯಬೇಕು. ನಮ್ಮ ಭಾಷೆ ಸರಳ, ಸುಂದರ ಮತ್ತು ಸಂಸ್ಕೃತಿವುಳ್ಳ ಭಾಷೆ ಕಲಿಯುವುದು ಸುಲಭ.ಕನ್ನಡ ಭಾಷೆ ಉಳಿಸಿ, ಬೆಳಸುವುದಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಹೇಳಿದರು. ಇದನ್ನೂ ಓದಿ: ಪುನೀತ್ ರಾಜ್‍ಕುಮಾರ್ ಸ್ಮರಣಾರ್ಥ – ಅಭಿಮಾನಿಗಳಿಗಾಗಿ ಥಿಯೇಟರ್‌ಗೆ ಬಂದ `ರಾಜಕುಮಾರ’

    ಕಾರ್ಯಕ್ರಮದಲ್ಲಿ ಸ್ಥಳೀಯ ಶಾಸಕರು, ಸಚಿವರಾದ ಡಾ. ಸಿ.ಎನ್.ಅಶ್ವಥ್ ನಾರಾಯಣ್, ಅರಮನೆನಗರ ವಾರ್ಡ್ ನಿಕಟಪೂರ್ವ ಬಿ.ಬಿ.ಎಂ.ಪಿ.ಸದಸ್ಯರಾದ ಶ್ರೀಮತಿ ಸುಮಂಗಲ ಕೇಶವ್, ಬೆಂಗಳೂರು ಉತ್ತರ ಜಿಲ್ಲಾ ಬಿ.ಜೆ.ಪಿ.ವಿಶೇಷ ಆಹ್ವಾನಿತರಾದ ಕೇಶವ್ ಐತಾಳ್ ಮತ್ತು ಮಲ್ಲೇಶ್ವರಂ ಮಂಡಲ ಬಿ.ಜೆ.ಪಿ.ಅಧ್ಯಕ್ಷರಾದ ಕಾವೇರಿ ಕೇದರನಾಥ್‍ರವರು ಭಾಗಿಯಾಗಿದ್ದರು. ಇದನ್ನೂ ಓದಿ: ಆಸ್ಪತ್ರೆಯಿಂದ ರಜನಿಕಾಂತ್ ಡಿಸ್ಚಾರ್ಜ್ – ಮನೆಗೆ ಆಗಮಿಸಿ ದೇವರಿಗೆ ಪ್ರಾರ್ಥನೆ