Tag: publictv

  • ಮೋದಿ ಬಗ್ಗೆ ಟೀಕಿಸಲು ಕಾಂಗ್ರೆಸ್‍ಗೆ ಹಕ್ಕಿಲ್ಲ: ಶ್ರೀನಿವಾಸ್ ಪ್ರಸಾದ್

    ಮೋದಿ ಬಗ್ಗೆ ಟೀಕಿಸಲು ಕಾಂಗ್ರೆಸ್‍ಗೆ ಹಕ್ಕಿಲ್ಲ: ಶ್ರೀನಿವಾಸ್ ಪ್ರಸಾದ್

    ಚಾಮರಾಜನಗರ: ಪ್ರಧಾನಿ ಮೋದಿ ಬಗ್ಗೆ ಟೀಕಿಸಲು ಕಾಂಗ್ರೆಸ್‍ಗೆ ಹಕ್ಕೇನಿದೆ? ಎಂದು ಚಾಮರಾಜನಗರ ಲೋಕಸಭಾ ಕ್ಷೇತ್ರದ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಕಾಂಗ್ರೆಸ್ ಪಕ್ಷಕ್ಕೆ ಪ್ರಶ್ನೆ ಮಾಡಿದ್ದಾರೆ.

    ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲದಲ್ಲಿ ಮಾತನಾಡಿದ ಅವರು, ಮೋದಿಯವರ ವಿರುದ್ಧ ಹೆಬ್ಬೆಟ್ ಗಿರಾಕಿ ಎಂಬ ಪದ ಬಳಸಿ ಮಾಡಿರುವ ಟ್ವೀಟ್‍ಗೆ ತಿರುಗೇಟನ್ನು ಕೊಟ್ಟರು.

    ಕಾಂಗ್ರೆಸ್ ಪಕ್ಷ ದಿವಾಳಿಯಾಗಿದೆ. ಪಕ್ಷದಲ್ಲಿ ಸರಿಯಾದ ನಾಯಕರಿಲ್ಲ. ಪಾರ್ಲಿಮೆಂಟ್ ಹಾಗೂ ಅಸೆಂಬ್ಲಿಗಳಲ್ಲಿ ಸರಿಯಾಗಿ ಮಾತನಾಡುವವರಿಲ್ಲ. ಪರಿಸ್ಥಿತಿ ಬಹಳ ಕೆಟ್ಟದಾಗಿದೆ. ಅದರ ಬಗ್ಗೆ ಆಲೋಚಿಸಬೇಕು. ಆ ಮೂಲಕ ಪಕ್ಷ ಸಂಘಟನೆಗೆ ಒತ್ತು ಕೊಡಲಿ ಅಂತಾ ತಾಕೀತು ಮಾಡಿದರು. ಇದನ್ನೂ ಓದಿ: ಹೆಬ್ಬೆಟ್‍ಗಿರಾಕಿ ಮೋದಿ ತನ್ನ ಹೆಸರನ್ನು ‘ಮೌನೇಂದ್ರ ಮೋದಿ’ ಎಂದು ಬದಲಿಸಿಕೊಳ್ಳಲಿ: ಕಾಂಗ್ರೆಸ್

    ವಾಸ್ತವಗಳ ಬಗ್ಗೆ ಮಾತನಾಡದ ಪ್ರಧಾನಿ ತಮ್ಮ ಹೆಸರನ್ನು ಮೌನೇಂದ್ರ ಮೋದಿ ಎಂದು ಬದಲಿಸಿಕೊಳ್ಳಲಿ.
    * ಬೆಲೆ ಏರಿಕೆಯ ಬಗ್ಗೆ -ಮೌನ
    * ಕಾಶ್ಮೀರದ ದಳ್ಳುರಿಗೆ -ಮೌನ
    * ಚೀನಾ ಅತಿಕ್ರಮಣಕ್ಕೆ -ಮೌನ
    * ರೈತರ ಹತ್ಯೆಗೆ -ಮೌನ
    * ಅದಾನಿ ಡ್ರಗ್ಸ್ ದಂಧೆಯ ಬಗ್ಗೆ -ಮೌನ
    * ನಿರುದ್ಯೋಗದ ಬಗ್ಗೆ -ಮೌನ
    * ಪತ್ರಿಕಾಗೋಷ್ಠಿಗೆ -ಮೌನ
    #ಹೆಬ್ಬೆಟ್ ಗಿರಾಕಿಮೋದಿ ಎಂದು ಕಾಂಗ್ರೆಸ್ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿತ್ತು. ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ನಿಲ್ಲದ ಪುಂಡರ ಕುಚೇಷ್ಟೆ – ಕಾರಿನಲ್ಲಿ ಹೋಗ್ತಿದ್ದ ದಂಪತಿಗೆ ಅಡ್ಡಗಟ್ಟಿ ಧಮ್ಕಿ

    ಕಾಂಗ್ರೆಸ್ ಸರ್ಕಾರ ಇದ್ದಿದ್ದರೆ ಇಂದು ಪೆಟ್ರೋಲ್ 66, ಡೀಸೆಲ್ 55 ಕ್ಕೆ ದೊರಕುತ್ತಿತ್ತು. ಜನರನ್ನು ದೋಚಿ, ಉದ್ಯಮಿಗಳ ಹೊಟ್ಟೆ ತುಂಬಿಸುವ ಯೋಜನೆ ಹೊಂದಿರುವ ಬಿಜೆಪಿ ಸರ್ಕಾರದ ತೆರಿಗೆ ಭಯೋತ್ಪಾದನೆಯಿಂದ ಎಲ್ಲಾ ಅಗತ್ಯ ವಸ್ತುಗಳು ದುಬಾರಿಯಾಗಿವೆ. ಜನರ ಕಷ್ಟಗಳನ್ನು ತಿಳಿಯದ #ಹೆಬ್ಬೆಟ್ ಗಿರಾಕಿ ಮೋದಿಯಿಂದ ದೇಶ ನಲುಗುತ್ತಿದೆ ಎಂದು ಕಾಂಗ್ರೆಸ್ ಕಿಡಿಕಾರಿದೆ.

  • ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕ ಅನ್ನೋದನ್ನ ಮರೆತಿದ್ದಾರೆ: ಬಿಎಸ್‍ವೈ

    ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕ ಅನ್ನೋದನ್ನ ಮರೆತಿದ್ದಾರೆ: ಬಿಎಸ್‍ವೈ

    – ಕರ್ನಾಟಕದಲ್ಲೂ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳಲಿದೆ

    ಕೊಪ್ಪಳ: ಸಿದ್ದರಾಮಯ್ಯ ವಿರೋಧ ಪಕ್ಷದ ನಾಯಕ ಅನ್ನೋದನ್ನ ಮರೆತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಗರಂ ಆಗಿದ್ದಾರೆ.

    ಕೊಪ್ಪಳ ಜಿಲ್ಲೆ ಕುಷ್ಟಗಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಇತ್ತೀಚಿಗೆ ಏನೇನೋ ಮಾತಾಡುತ್ತಿದ್ದಾರೆ. ಅವರು ವಿರೋಧ ಪಕ್ಷದ ನಾಯಕ ಅನ್ನೋದನ್ನೆ ಮರೆತಿದ್ದಾರೆ. ನಮ್ಮ ಸರ್ಕಾರ ಅಲ್ಪ ಸಂಖ್ಯಾತರ ವಿರೋಧಿ ಅಲ್ಲ, ನನ್ನ ಅವಧಿಯಲ್ಲಿ ಅಲ್ಪ ಸಂಖ್ಯಾತರ ಪರ ಅನೇಕ ಕೆಲಸ ಮಾಡಿದ್ದೇವೆ. ಬೊಮ್ಮಾಯಿ ನೇತೃತ್ವದ ಸರ್ಕಾರಕ್ಕೆ ಫುಲ್ ಮಾರ್ಕ್ಸ್ ಕೊಟ್ಟ ಯಡಿಯೂರಪ್ಪ ರಾಜ್ಯದಲ್ಲಿ ಬೊಮ್ಮಾಯಿ ಸರ್ಕಾರ ಒಳ್ಳೆ ಕೆಲಸ ಮಾಡುತ್ತಿದೆ. ಇದನ್ನ ನಾನು ಹೇಳುತ್ತಿಲ್ಲ, ಜನರು ಹೇಳುತ್ತಿದ್ದಾರೆ ಎಂದರು. ಇದನ್ನೂ ಓದಿ:  ಭಾರೀ ಮಳೆಗೆ ಕೊಚ್ಚಿ ಹೋದ ಉತ್ತರಾಖಂಡ್ ರೈಲು ಹಳಿ

    ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸುರ್ಜೆವಾಲ್ ಏನೇನೋ ಹೇಳುತ್ತಿದ್ದಾರೆ. ದೇಶದಲ್ಲಿ ಕಾಂಗ್ರೆಸ್ ಎಲ್ಲಿದೆ ಎಂದು ಯಡಿಯೂರಪ್ಪ ಪ್ರಶ್ನೆ ಮಾಡಿದರು. ಸುರ್ಜೆವಾಲ್ ಹೀಗೆ ಮಾತಾಡಿದರೆ ಕರ್ನಾಟಕದಲ್ಲೂ ಕಾಂಗ್ರೆಸ್ ಅಸ್ತಿತ್ವ ಕಳೆದುಕೊಳ್ಳಲಿದೆ. ರಾಜ್ಯದ ಎರಡು ಕ್ಷೇತ್ರದಲ್ಲಿ ವಾತಾವರಣ ಚೆನ್ನಾಗಿದೆ. ನಾವು ಗೆಲ್ಲುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

    ಮೋದಿ ಮಾಡಿದ ಅಭಿವೃದ್ಧಿ ಕೆಲಸದಿಂದ ಮತದಾರ ನಮ್ಮ ಪರ ಇದ್ದಾರೆ. ಇನ್ನೂ ಸಲೀಂ ಹಾಗೂ ಉಗ್ರಪ್ಪ ವೀಡಿಯೋ ವಿಚಾರವಾಗಿ ಮಾಧ್ಯಮದವರು ಕೇಳಿದ ಪ್ರಶ್ನೆಗೆ ನಾನು ಈ ಬಗ್ಗೆ ಏನೂ ಮಾತನಾಡೋದಿಲ್ಲ. ಅವರ ಭ್ರಷ್ಟಾಚಾರ ಬಯಲಾಗಿದೆ ಎಂದು ಹೇಳಿ ಪರೋಕ್ಷವಾಗಿ ಡಿಕೆಶಿ ವಿರುದ್ಧ ಮಾಜಿ ಸಿಎಂ ಯಡಿಯೂರಪ್ಪ ಗಂಭೀರ ಆರೋಪ ಮಾಡಿದರು.

  • ಉತ್ತರಾಖಂಡ್ ಮಳೆ- ಮೃತರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಘೋಷಿಸಿದ CM

    ಉತ್ತರಾಖಂಡ್ ಮಳೆ- ಮೃತರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಘೋಷಿಸಿದ CM

    ಡೆಹ್ರಾಡೂನ್: ವರುಣನ ಆರ್ಭಟಕ್ಕೆ ಉತ್ತರಾಖಂಡ್ ನಲುಗಿ ಹೋಗಿದೆ. ಈ ಪ್ರವಾಹದಲ್ಲಿ ಸಾವನ್ನಪ್ಪಿದ ಕುಟುಂಬ ಹಾಗೂ ಮನೆಕಳೆದುಕೊಂಡವರಿಗೆ ಪರಿಹಾರ ನೀಡುವುದಾಗಿ ಉತ್ತರಾಖಂಡ್ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಘೋಷಣೆ ಮಾಡಿದ್ದಾರೆ.

    2-3 ದಿನಗಳಿಂದ ಸುರಿಯುತ್ತಿರುವ ಮಳೆಯಿಂದ ಉತ್ತರಾಖಂಡ್ ದಲ್ಲಿ ಪ್ರವಾಹ ಉಂಟಾಗಿದೆ. ಪ್ರವಾಹದಿಂದ ಸಾವನ್ನಪ್ಪಿದವರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ ಹಾಗೂ ಮನೆ ಕಳೆದುಕೊಂಡವರಿಗೆ 1.9 ಲಕ್ಷ ರೂ. ಪರಿಹಾರ ನೀಡುವುದಾಗಿ ಉತ್ತರಾಖಂಡ್ ಸಿಎಂ ಪುಷ್ಕರ್ ಸಿಂಗ್ ಧಾಮಿ ಘೋಷಣೆ ಮಾಡಿದ್ದಾರೆ. ಜಾನುವಾರು ಕಳೆದುಕೊಂಡವರಿಗೆ ಅಗತ್ಯ ನೆರವು ಭರವಸೆಯನ್ನೂ ರಾಜ್ಯ ಸರ್ಕಾರ ನೀಡಿದೆ. ಇದನ್ನೂ ಓದಿ:  ಭಾರೀ ಮಳೆಗೆ ಕೊಚ್ಚಿ ಹೋದ ಉತ್ತರಾಖಂಡ್ ರೈಲು ಹಳಿ

    ಪ್ರವಾಹದಿಂದ ಮುಳುಗಡೆಯಾಗಿರುವ ಸ್ಥಳಗಳಿಗೆ ಸಿಎಂ ಪುಷ್ಕರ್ ಸಿಂಗ್ ಧಾಮಿ ವೈಮಾನಿಕ ಸಮೀಕ್ಷೆ ನಡೆಸಿದ್ದಾರೆ. ಮೃತರ ಕುಟುಂಬಕ್ಕೆ ಉತ್ತರಾಖಂಡ್ ಸರ್ಕಾರ ಪರಿಹಾರ ನೀಡುವುದಾಗಿ ಹೇಳಿದೆ. ಇದನ್ನೂ ಓದಿ: ದೇವಭೂಮಿ ಉತ್ತರಾಖಂಡ್‍ನಲ್ಲಿ ಮೇಘಸ್ಫೋಟ – 12 ಮಂದಿ ಸಾವು, 20 ಮಂದಿ ನಾಪತ್ತೆ

    ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ಥವಾಗಿದೆ. ಸಾವಿನ ಸಂಖ್ಯೆ 34ಕ್ಕೆ ಏರಿಕೆಯಾಗಿದೆ. ಪ್ರವಾಹ ಮತ್ತು ಭೂಕುಸಿತದಲ್ಲಿ 5 ಜನರು ನಾಪತ್ತೆಯಾಗಿದ್ದಾರೆ. ಪ್ರಸಿದ್ಧ ಪ್ರವಾಸಿ ಸ್ಥಳವಾಗಿರುವ ನೈನಿತಾಲ್‍ನಲ್ಲಿ ಇಂದು ಮುಂಜಾನೆಯಿಂದ ಸಾಲು ಸಾಲಾಗಿ ಭೂಕುಸಿತವಾಗುತ್ತಿರುವುದರಿಂದ ರಸ್ತೆ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ. ಉತ್ತರಾಖಂಡ ರಾಜ್ಯದ ಉಳಿದ ಭಾಗಕ್ಕೂ ರಸ್ತೆಸಂಪರ್ಕ ಕಡಿತವಾಗಿದೆ. ಕಳೆದ ಮೂರು ದಿನಗಳಿಂದ ಸುರಿಯುತ್ತಿರುವ ಮಳೆಯಲ್ಲಿ ಸಿಲುಕಿರುವವರನ್ನು ರಕ್ಷಿಸಲು ಮೂರು ಹೆಲಿಕಾಪ್ಟರ್ ಬಳಕೆ ಮಾಡಲಾಗುತ್ತಿದೆ. ಇದನ್ನೂ ಓದಿ: ನಟಿ ಶ್ರೀಲೀಲಾ ನನ್ನ ಮಗಳಲ್ಲ – ವಿವಾದಾತ್ಮಕ ಹೇಳಿಕೆ ಕೊಟ್ಟ ಉದ್ಯಮಿ

  • ಭಾರೀ ಮಳೆಗೆ ಕೊಚ್ಚಿ ಹೋದ ಉತ್ತರಾಖಂಡ್ ರೈಲು ಹಳಿ

    ಭಾರೀ ಮಳೆಗೆ ಕೊಚ್ಚಿ ಹೋದ ಉತ್ತರಾಖಂಡ್ ರೈಲು ಹಳಿ

    ಡೆಹ್ರಾಡೂನ್: ವರುಣ ಆರ್ಭಟ ಉತ್ತರಾಖಂಡ್‍ನಲ್ಲಿ ಮುಂದುವರೆದಿದ್ದು, ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ರಣರಕ್ಕಸ ಮಳೆಗೆ ಉತ್ತರಾಖಂಡ್ ನಲುಗಿ ಹೋಗಿದೆ.

    Nainital

    ಬಿಟ್ಟು ಬಿಡದೇ ಸುರಿಯುತ್ತೀರುವ ಮಳೆಯಿಂದ ಜನಜೀವನ ಅಸ್ತವ್ಯಸ್ಥಗೊಂಡಿದೆ. ಮಳೆಯಾರ ಬಿಡುವಿಲ್ಲದ ನರ್ತನಕ್ಕೆ ನದಿಗಳು ಉಕ್ಕಿ ಹರಿಯುತ್ತಿವೆ . ಇದರಿಂದಾಗಿ ನೆರೆ ಪೀಡಿತ ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿ ದಿಕ್ಕು ತಪ್ಪಿದ ದೋಣಿಯಂತಾಗಿದೆ. ಹಲವರು ಪ್ರಾಣವನ್ನು ಕಳೆದುಕೊಂಡಿದ್ದಾರೆ. ಇದನ್ನೂ ಓದಿ: ನಟಿ ಶ್ರೀಲೀಲಾ ನನ್ನ ಮಗಳಲ್ಲ – ವಿವಾದಾತ್ಮಕ ಹೇಳಿಕೆ ಕೊಟ್ಟ ಉದ್ಯಮಿ

    ಪ್ರವಾಸಿಗ ನೆಚ್ಚಿನ ತಾಣವಾಗಿರುವ ನೈನಿತಾಲ್‍ನಲ್ಲಿ ಜಲ ಆರ್ಭಟಕ್ಕೆ ರೈಲು ಹಳಿ ಸಂಪೂರ್ಣವಾಗಿ ಕೊಚ್ಚಿ ಹೋಗಿದೆ. ನೈನಿತಾಲ್‍ನಿಂದಕಥ್‍ಗೋಡಂ ಪ್ರದೇಶವನ್ನು ಸಂಪರ್ಕಿಸುವ ರೈಲು ಮಾರ್ಗದ ಕೆಳಗಿನ ಮಣ್ಣು ಬೀಕರ ಮಳೆಗೆ ಕುಸಿದಿದೆ. ಈ ಪರಿಣಾಮವಾಗಿ ರೈಲು ಹಳಿ ಕೊಚ್ಚಿಕೊಂಡು ಹೋಗಿ ರೈಲು ಸಂಚಾರ ಸಂಪೂರ್ಣ ಬಂದ್ ಆಗಿದೆ. ಸದ್ಯ ಉತ್ತರಾಖಂಡ್ ಸರ್ಕಾರ ಮುಂಜಾಗೃತ ಕ್ರಮವಾಗಿ ಶಾಲಾ ಕಾಲೇಜುಗಳನ್ನ ಬಂದ್ ಮಾಡಿದೆ. ಪ್ರವಾಹ ಪೀಡಿತ ಸ್ಥಳಗಳಲ್ಲಿ ಎನ್‍ಡಿಆರ್‍ಎಫ್ ತಂಡ ರಕ್ಷಣಾ ಕಾರ್ಯಾಚರಣೆ ಮುಂದುವರೆಸಿದೆ.ಇದನ್ನೂ ಓದಿ: ದೇವಭೂಮಿ ಉತ್ತರಾಖಂಡ್‍ನಲ್ಲಿ ಮೇಘಸ್ಫೋಟ – 12 ಮಂದಿ ಸಾವು, 20 ಮಂದಿ ನಾಪತ್ತೆ

    Nainital

    ನೀರಿನ ಮಟ್ಟ ನಿರಂತರವಾಗಿ ಹೆಚ್ಚುತ್ತಲೆ ಇದೆ ಮತ್ತು ನದಿಯ ನೀರು ಮಾಲ್ ರಸ್ತೆ, ತಾಲಿಟಾಲ್ ಬಸ್ ನಿಲ್ದಾಣದ ಮೂಲಕ ಭೋವಾಲಿ ಮತ್ತು ಹಲ್ದ್ವಾನಿ ರಸ್ತೆಯ ಕಡೆಗೆ ಹಾದು ಹೋಗುತ್ತಿದೆ. ಇನ್ನೂ ಕೆಲವು ದಿನಗಳ ಕಾಲ ಉತ್ತರಾಖಂಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಉತ್ತರಾಖಂಡದಲ್ಲಿ ರೆಡ್ ಅಲರ್ಟ್ ಘೋಷಿಸಿದೆ ಇದನ್ನೂ ಓದಿ: ದಕ್ಷಿಣ ಕನ್ನಡದಲ್ಲಿ ನಿಲ್ಲದ ಪುಂಡರ ಕುಚೇಷ್ಟೆ – ಕಾರಿನಲ್ಲಿ ಹೋಗ್ತಿದ್ದ ದಂಪತಿಗೆ ಅಡ್ಡಗಟ್ಟಿ ಧಮ್ಕಿ

  • ಕಿಚ್ಚನ ವಿವಾಹ ವಾರ್ಷಿಕೋತ್ಸವಕ್ಕೆ ವಿಶೇಷ ಕವನ

    ಕಿಚ್ಚನ ವಿವಾಹ ವಾರ್ಷಿಕೋತ್ಸವಕ್ಕೆ ವಿಶೇಷ ಕವನ

    ಬೆಂಗಳೂರು: ಸ್ಯಾಂಡಲ್‍ವುಡ್ ನಟ ಸುದೀಪ್ ಮತ್ತು ಪ್ರಿಯಾ ದಾಂಪತ್ಯಕ್ಕೆ 20 ವರ್ಷ ತುಂಬಿದೆ. ಈ ಸಂಭ್ರಮವನ್ನು ಅವರು ಒಟ್ಟಾಗಿ ಆಚರಿಸಿದ್ದಾರೆ. ಆತ್ಮೀಯರು ಬರೆದ ಕವನವನ್ನು ಪ್ರಿಯಾ ಶೇರ್ ಮಾಡಿಕೊಂಡಿದ್ದಾರೆ. ಸುದೀಪ್ ಈ ಕವನಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ.

    ಸುದೀಪ್ ಮತ್ತು ಪ್ರಿಯಾ ಅವರ ವಿವಾಹ ವಾರ್ಷಿಕೋತ್ಸವಕ್ಕೆ ಆತ್ಮೀಯರು ಬರೆದ ಕವನವನ್ನು ಪ್ರಿಯಾ ಶೇರ್ ಮಾಡಿಕೊಂಡಿದ್ದಾರೆ. ಇಂಗ್ಲಿಷ್‍ನಲ್ಲಿರುವ ಈ ಕವನವನ್ನು ಅವರು ಟ್ವಿಟರ್‍ನಲ್ಲಿ ಹಂಚಿಕೊಂಡಿದ್ದಾರೆ. ಅದಕ್ಕೆ ಪ್ರತಿಕ್ರಿಯಿಸಿರುವ ಕಿಚ್ಚ ಸುದೀಪ್ ಮೆಚ್ಚುಗೆ ಸೂಚಿಸಿದ್ದಾರೆ. ಅಭಿಮಾನಿಗಳು, ಸ್ನೇಹಿತರು ಮತ್ತು ಸೆಲೆಬ್ರಿಟಿಗಳು ಈ ಜೋಡಿಗೆ ವೆಡ್ಡಿಂಗ್ ಆ್ಯನಿವರ್ಸರಿಯ ಶುಭಾಶಯ ಕೋರುತ್ತಿದ್ದಾರೆ. ಇದನ್ನೂ ಓದಿ: ಸುದೀಪ್ ದಂಪತಿಗೆ 20ನೇ ವಿವಾಹ ವಾರ್ಷಿಕೋತ್ಸವದ ಸಂಭ್ರಮ – ಅಪ್ಪ, ಅಮ್ಮನಿಗೆ ಸಾನ್ವಿ ಹೇಳಿದ್ದೇನು?

    ಈಗಾಗಲೇ 20 ವರ್ಷ ಆಯ್ತು. ಸಮಯ ತುಂಬ ಬೇಗ ಸಾಗುತ್ತಿದೆ. ಖುಷಿಯ 20 ವರ್ಷಗಳು. ಧನ್ಯವಾದಗಳು ಪ್ರಿಯಾ. ಈ ಪ್ರೀತಿಯ ಕವನಕ್ಕೂ ಧನ್ಯವಾದ ಎಂದು ಸುದೀಪ್ ಟ್ವೀಟ್ ಮಾಡಿದ್ದಾರೆ. ಪತ್ನಿಯ ಜೊತೆಗಿರುವ ಫೋಟೋವನ್ನು ಅವರು ಶೇರ್ ಮಾಡಿಕೊಂಡಿದ್ದಾರೆ. ಇದನ್ನೂ ಓದಿ: ನಟಿ ಶ್ರೀಲೀಲಾ ನನ್ನ ಮಗಳಲ್ಲ – ವಿವಾದಾತ್ಮಕ ಹೇಳಿಕೆ ಕೊಟ್ಟ ಉದ್ಯಮಿ

    2001ರ ಅಕ್ಟೋಬರ್‌ನಲ್ಲಿ ಸುದೀಪ್ ಮತ್ತು ಪ್ರಿಯಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಅವರಿಗೆ 2004ರಲ್ಲಿ ಸಾನ್ವಿ ಜನಿಸಿದರು. ಅಪ್ಪ-ಅಮ್ಮನ ವಿವಾಹ ವಾರ್ಷಿಕೋತ್ಸವಕ್ಕೆ ಮಗಳು ಸಾನ್ವಿ ಇನ್‍ಸ್ಟಾಗ್ರಾಮ್ ಸ್ಟೋರಿಯಲ್ಲಿ ಹಂಚಿಕೊಳ್ಳುವ ಮೂಲಕ ವಿಶ್ ಮಾಡಿದ್ದಾರೆ. ವೆಡ್ಡಿಂಗ್ ಆ್ಯನಿವರ್ಸರಿ ಸಂಭ್ರಮಕ್ಕೆ ಕೇಕ್ ಕತ್ತರಿಸಲಾಗಿದೆ. ಆಪ್ತರ ಜೊತೆ ಸೇರಿ ಸಂಭ್ರಮಿಸಲಾಗಿದೆ.

  • ಸಿದ್ದು, ಡಿಕೆಶಿ ಜೋಡೆತ್ತಲ್ಲ, ಕಾಡೆತ್ತು- ಕಟೀಲ್ ಲೇವಡಿ

    ಸಿದ್ದು, ಡಿಕೆಶಿ ಜೋಡೆತ್ತಲ್ಲ, ಕಾಡೆತ್ತು- ಕಟೀಲ್ ಲೇವಡಿ

    – ಕಾಂಗ್ರೆಸ್ ಸಂವಿಧಾನದ ಮೇಲಿನ ನಂಬಿಕೆ ಕಳೆದುಕೊಂಡಿದೆ

    ಹುಬ್ಬಳ್ಳಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಜೋಡೆತ್ತಲ್ಲ ಅವರು ಕಾಡೆತ್ತು ಆಗಿದ್ದಾರೆ. ಹೀಗಾಗಿ ಅವರು ಒಬ್ಬರಿಗೊಬ್ಬರು ಕಾದಾಟ ಶುರು ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳೀನ್‍ಕುಮಾರ್ ಕಟೀಲ್ ವ್ಯಂಗ್ಯವಾಡಿದರು.

    ಹುಬ್ಬಳ್ಳಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ನಮ್ಮ ಪ್ರಧಾನಿ ಸಬ್ ಕಾ ಸಾತ್ ಸಬ್ ವಿಕಾಸ್ ಅಂದ್ರೆ, ಸಿದ್ದರಾಮಯ್ಯ ನವರದ್ದು ಸಾಬರ್ ಕಾ ಸಾಥ್ ಸಾಬರ್ ಕಾ ವಿಕಾಸ್ ಆಗಿದ್ದು, ಇದೀಗ ಅವರಿಗೆ ಸೋಲೋ ಭೀತಿ ಶುರುವಾಗಿದೆ. ಅದಕ್ಕಾಗಿ ಅಲ್ಪಸಂಖ್ಯಾತ ಓಲೈಕೆ ಮಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ದೇವಭೂಮಿ ಉತ್ತರಾಖಂಡ್‍ನಲ್ಲಿ ಮೇಘಸ್ಫೋಟ – 12 ಮಂದಿ ಸಾವು, 20 ಮಂದಿ ನಾಪತ್ತೆ 

    ಕಾಂಗ್ರೆಸ್ ಸಂವಿಧಾನದ ಮೇಲಿನ ನಂಬಿಕೆ ಕಳೆದುಕೊಂಡಿದೆ. ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಯಾರು ಹೇಳಿ ಪ್ರಶ್ನಿಸಿದ ಕಟೀಲ್ ಅವರು, ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರೇ ಅಧ್ಯಕ್ಷಗಿರಿಗೆ ಪೈಪೋಟಿ ಮಾಡುತ್ತಿದ್ದಾರೆ. ಅವರಿಗೆ ಪಕ್ಷವೇ ಮುನ್ನೆಡಿಸೋಕೆ ಆಗುತ್ತಿಲ್ಲ ದೇಶ ಮುನ್ನಡೆಸುತ್ತಾರಾ, ರಾಹುಲ್ ಗಾಂಧಿ ಒರ್ವ ಡ್ರಗ್ ಅಡಿಕ್ಟ್, ಪೆಡ್ಲರ್ ಅಂತ ವರದಿ ಇವೆ ಎಂದು ರಾಹುಲ್ ವಿರುದ್ದ ವಾಗ್ದಾಳಿ ನಡೆಸಿದರು. ಇದನ್ನು ಓದಿ: ರಾಹುಲ್ ಗಾಂಧಿ ಡ್ರಗ್ ಪೆಡ್ಲರ್: ಕಟೀಲ್

    ಕಾಂಗ್ರೆಸ್ ಪಕ್ಷವು ಮುಂದಿನ ಚುನಾವಣೆಗೆ ಒಟ್ಟಾಗಿ ಹೋಗಲ್ಲ. ಮುಂದಿನ ಚುನಾವಣೆ ವೇಳೆ ಕಾಂಗ್ರೆಸ್ ಎರಡು ಹೋಳಾಗಿ ಹೋಗುತ್ತದೆ. ಜೆಡಿಎಸ್ ಕುಟುಂಬ ರಾಜಕೀಯ ಮಾಡುತ್ತಿದೆ. ಹೀಗಾಗಿ ಮುಂದಿನ ಚುನಾವಣೆಗೆ ಎರಡು ಪಕ್ಷ ಹೋಗುತ್ತವೆ ಎಂದರು. ಇದನ್ನು ಓದಿ:  ನಳಿನ್ ಕುಮಾರ್ ಕಟೀಲ್ ಒಬ್ಬ ಅವಿವೇಕಿ, ಮಾನಸಿಕ ಅಸ್ವಸ್ಥ: ದಿನೇಶ್ ಗುಂಡೂರಾವ್

    ಕೆಪಿಸಿಸಿ ರಾಜ್ಯಾಧ್ಯಕ್ಷ ತಿಹಾರ್ ಜೈಲಿಗೆ ಹೊಗಿದ್ದರು. ಇವರೇನು ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾಗವಹಿಸಿ ಜೈಲಿಗೆ ಹೋದ್ರಾ? ಇಲ್ಲಾ ಸಂಗ್ರಾಮದ ಕಥೆ ಬರೆಯಲು ಹೋಗಿದ್ರಾ? ಡಿಕೆಶಿ ಮತ್ತು ಸಿದ್ದರಾಮಯ್ಯ ಜಗಳ ಮುಂದಿನ ಚುನಾವಣೆವರೆಗೂ ಮುಂದುವರೆಯತ್ತದೆ. ಹಿರಿಯ ಕಾಂಗ್ರೆಸ್ ಮುಖಂಡ ಉಗ್ರಪ್ಪ ಜೀವಮಾನದಲ್ಲಿಯೇ ಪಿಸು ಮಾತು ಆಡಿದವರಲ್ಲ. ಅವರು ಉಗ್ರವಾಗೇ ಮಾತನಾಡುವರು. ಅವರ ಪಿಸುಮಾತಿನ ಹಿಂದೆ ಸಿದ್ದರಾಮಯ್ಯ ಕೈವಾಡವಿದೆ ಎಂದರು.

  • ಒಂದಲ್ಲ, ಎರಡಲ್ಲ, 7 ಮಕ್ಕಳಿಗೆ ಜನ್ಮಕೊಟ್ಟ ಮಹಿಳೆ

    ಒಂದಲ್ಲ, ಎರಡಲ್ಲ, 7 ಮಕ್ಕಳಿಗೆ ಜನ್ಮಕೊಟ್ಟ ಮಹಿಳೆ

    ಇಸ್ಲಾಮಾಬಾದ್: ಒಂದಲ್ಲ, ಎರಡಲ್ಲ, ಏಳು ಮಕ್ಕಳಿಗೆ ಮಹಿಳೆಯೊಬ್ಬಳು ಜನ್ಮ ನೀಡಿರುವ ಘಟನೆ ಪಾಕಿಸ್ತಾನದಲ್ಲಿ ನಡೆದಿದೆ.

    ಅಲ್ಲಿನ ಖೈಬರ್ ಫಖ್ತಂಖ್ವಾ ಅಬೋಟಾಬಾದ್‍ನ ಖಾಸಗಿ ಆಸ್ಪತ್ರೆಯಲ್ಲಿ ಮಹಿಳೆ ಏಕಕಾಲದಲ್ಲಿ 7 ಮಕ್ಕಳಿಗೆ ಜನ್ಮ ನೀಡಿದ್ದಾರೆ. ವೈದ್ಯರು 5 ಮಕ್ಕಳು ಮಹಿಳೆಯ ಹೊಟ್ಟೆಯಲ್ಲಿದ್ದಾರೆ ಎಂದು ಹೇಳಿದರು. ಆದರೆ ಹೆರಿಗೆ ವೇಳೆ 7 ಮಕ್ಕಳಿಗೆ ಜನ್ಮ ನೀಡಿದ್ದಾರೆ. ಸದ್ಯ ತಾಯಿ ಹಾಗೂ 7 ಮಕ್ಕಳು ಆರೋಗ್ಯವಾಗಿದ್ದಾರೆಂದು ತಿಳಿದುಬಂದಿದೆ. ಇದನ್ನು ಓದಿ: ರಾಹುಲ್ ಗಾಂಧಿ ಡ್ರಗ್ ಪೆಡ್ಲರ್: ಕಟೀಲ್

    8 ತಿಂಗಳ ಗರ್ಭಿಣಿಯಾಗಿದ್ದ ಮಹಿಳೆ ಶನಿವಾರ ಮೊದಲ ಬಾರಿಗೆ ಈ ಆಸ್ಪತ್ರೆಗೆ ಬಂದಿದ್ದರು. ಆ ಸಮಯದಲ್ಲಿ ಆಕೆಯ ಗರ್ಭದಲ್ಲಿ ಐದು ಮಕ್ಕಳಿದ್ದವು ಎಂದು ತಿಳಿದುಬಂತು. ಮಹಿಳೆಯ ರಕ್ತದೊತ್ತಡ ತುಂಬಾ ಹೆಚ್ಚಾಗಿತ್ತು. ಅವಳ ಹೊಟ್ಟೆಯೂ ತುಂಬಾ ಊದಿಕೊಂಡಿತ್ತು. ಆಪರೇಷನ್ ಆಯ್ಕೆಯೂ ಅಪಾಯಕಾರಿ, ಏಕೆಂದರೆ ಮಹಿಳೆ ಈ ಹಿಂದೆ ಎರಡು ಆಪರೇಷನ್‍ಗೆ ಒಳಗಾಗಿದ್ದಳು. ಆಕೆಯ ಹಳೆಯ ಹೊಲಿಗೆಗಳು ಮತ್ತು ಗರ್ಭಾಶಯಕ್ಕೆ ಹಾನಿಯಾಗಬಹುದೆಂಬ ಭಯವೂ ಇತ್ತು. ಹೀಗಾಗಿ ವೈದ್ಯರ ತಂಡವು ಒಂದು ಗಂಟೆಗೂ ಹೆಚ್ಚು ಕಾಲ ಚಿಕಿತ್ಸೆ ನೀಡಿ ನಂತರ ಮಾಡಿಸಿದರು. ಸದ್ಯ ಮಹಿಳೆಯ ICUನಲ್ಲಿ ಇದ್ದು, ಎಲ್ಲಾ ಏಳು ಮಕ್ಕಳು ಮತ್ತು ಮಹಿಳೆ ಆರೋಗ್ಯವಾಗಿದ್ದಾರೆಂದು ತಿಳಿದುಬಂದಿದೆ.  ಇದನ್ನು ಓದಿ:  ನಳಿನ್ ಕುಮಾರ್ ಕಟೀಲ್ ಒಬ್ಬ ಅವಿವೇಕಿ, ಮಾನಸಿಕ ಅಸ್ವಸ್ಥ: ದಿನೇಶ್ ಗುಂಡೂರಾವ್

    ಯಾರ್ ಮೊಹಮ್ಮದ್ ಅವರ ಪತ್ನಿಗೆ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ತಕ್ಷಣ ಅಲ್ಲಿನ ಜಿನ್ನಾ ಅಂತರಾಷ್ಟ್ರಿಯ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಈ ವೇಳೆ 7 ಮಕ್ಕಳಲ್ಲಿ ನಾಲ್ಕು ಗಂಡು ಮಕ್ಕಳು ಮತ್ತು ಮೂರು ಹೆಣ್ಣು ಮಕ್ಕಳಿಗೆ ಮೊಹಮ್ಮದ್ ಪತ್ನಿ ಜನ್ಮ ನೀಡಿದ್ದಾರೆ.

  • ರಾಹುಲ್ ಗಾಂಧಿ ಡ್ರಗ್ ಪೆಡ್ಲರ್: ಕಟೀಲ್

    ರಾಹುಲ್ ಗಾಂಧಿ ಡ್ರಗ್ ಪೆಡ್ಲರ್: ಕಟೀಲ್

    – RSS ಶಾಖೆಗೆ ಬರಲು ಕುಮಾರಸ್ವಾಮಿಗೆ ಕರೆ ಕೊಟ್ಟಿದ್ದೇವೆ
    – ಜೆಡಿಎಸ್, ಕಾಂಗ್ರೆಸ್ ಚಿಲ್ಲರೆ ರಾಜಕೀಯಕ್ಕೆ ಇಳಿದಿದ್ದಾರೆ

    ಹುಬ್ಬಳ್ಳಿ: ರಾಹುಲ್ ಗಾಂಧಿ ಡ್ರಗ್ ಪೆಡ್ಲರ್. ಇದು ನಾನು ಹೇಳ್ತಾ ಇಲ್ಲ ಮಾಧ್ಯಮಗಳೇ ಇದನ್ನು ಹೇಳುತ್ತಿವೆ. ಇತಂಹ ರಾಹುಲ್ ಗಾಂಧಿಗೆ ಪಕ್ಷವನ್ನು ಸಂಭಾಳಿಸಲು ಆಗುತ್ತಿಲ್ಲ. ಸೋನಿಯಾ ಗಾಂಧಿಗೂ ಆಗುತ್ತಿಲ್ಲ. ಇತಂಹವರು ನಮ್ಮ ಪ್ರಧಾನಿ ಬಗ್ಗೆ ಟೀಕೆ ಮಾಡುತ್ತಾರೆ ಎಂದು ಬಿಜೆಪಿ ರಾಜಾಧ್ಯಕ್ಷ ನಳಿನ್‍ಕುಮಾರ್ ಕಟೀಲ್ ಕಾಂಗ್ರೆಸ್ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

    nalin kumar kateel

    ಹುಬ್ಬಳ್ಳಿಯಲ್ಲಿಂದು ಪರಿಷತ್ ಚುನಾವಣಾ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ಮೋದಿಯವರು ಸಬ್ ಕಾ ಸಾಥ್, ಸಬ್ ಕಾ ವಿಕಾಸ ಅನ್ನೋ ಮಂತ್ರ ಜಪಿಸಿದ್ರೆ. ಸಿದ್ದರಾಮಯ್ಯನವರು ಸಾಬ್ ಕಾ ಸಾಥ ಸಾಬ್ ಕಾ ವಿಕಾಸ ಅಂತಾ ಓಲೈಕೆ ರಾಜಕಾರಣ ಮಾಡುತ್ತಿದ್ದಾರೆ. ರಾಜ್ಯದಲ್ಲಿ ಜೆಡಿಎಸ್, ಕಾಂಗ್ರೆಸ್ ಚಿಲ್ಲರೆ ರಾಜಕೀಯಕ್ಕೆ ಇಳಿದಿದ್ದಾರೆ. ಅವರಿಗೆ ಬಹುಸಂಖ್ಯಾತರ ವೋಟ್ ಸಿಗಲ್ಲ ಅನ್ನೋದು ಗೊತ್ತಾಗಿದೆ. ಹೀಗಾಗಿ RSSಗೆ ಬೈಯುವ ಕೆಲಸ ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

    ಕಾಂಗ್ರೆಸ್ ಮುಂದಿನ ಚುನಾವಣೆಗೆ ಒಟ್ಟಾಗಿ ಹೋಗಲ್ಲ. ಮುಂದಿನ ಚುನಾವಣೆ ವೇಳೆ ಕಾಂಗ್ರೆಸ್ ಎರಡು ಹೋಳಾಗಿ ಹೋಗುತ್ತದೆ. ಜೆಡಿಎಸ್ ಕುಂಟುಂಬ ರಾಜಕೀಯ ಮಾಡುತ್ತ ಹಾಳಾಗಿದೆ. ಹೀಗಾಗಿ ಮುಂದಿನ ಚುನಾವಣೆಗೆ ಎರಡು ಪಕ್ಷ ಹೋಗುತ್ತವೆ. ಮತ್ತೆ ಭಾರತೀಯ ಜನತಾ ಪಕ್ಷ ಅಧಿಕಾರಕ್ಕೆ ಬರುತ್ತದೆ. ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರ ಆಡಳಿತ ಜನರಿಗೆ ಮೆಚ್ಚುಗೆ ಸಿಕ್ಕಿದೆ. ಕಾಂಗ್ರೆಸ್ ಸಂವಿಧಾನದ ಮೇಲಿನ ನಂಬಿಕೆ ಕಳೆದುಕೊಂಡಿದೆ ಎಂದು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಅನ್ಯಧರ್ಮದ ಯುವಕನ ಜೊತೆ ಕಾಣಿಸಿಕೊಂಡಿದ್ದಕ್ಕೆ ಯುವತಿಗೆ ಥಳಿತ

    ಕುಮಾರಸ್ವಾಮಿ ಅವರಿಗೆ RSS ಏನು ಅನ್ನೋದು ತಿಳಿಯಬೇಕು. ಮೊದಲು ಕುಮಾರಸ್ವಾಮಿ ಆರ್‍ಎಸ್‍ಎಸ್ ಶಾಖೆಗೆ ಅವರು ಬರಬೇಕು. ಅವರಿಗೆ ಈಗಾಗಲೇ ಕರೆ ಕೊಟ್ಟಿದ್ದೇವೆ. ಎರಡು ದಿನ ಶಾಖೆಗೆ ಬರಲಿ, ಶಾಖೆ ಅಂದರೆ ಏನು ಕಲಿಸುತ್ತದೆ ಅನ್ನೋದು ನೋಡಲಿ. ಅವರು ಜೀವನ ಪೂರ್ತಿ, ಅವರ ತಂದೆ ಕುಟುಂಬ ರಾಜಕಾರಣಿ ಮಾಡುತ್ತಾ ಬಂದಿದ್ದಾರೆ. ಅವರ ಅಧಿಕಾರದಲ್ಲಿದ್ದ ಸಂದರ್ಭದಲ್ಲಿ ಕೆಪಿಎಸ್‍ಸಿಯಿಂದ ಹಿಡಿದು, ಯಾವುದೇ ಇಲಾಖೆ ಗುಮಾಸ್ತನವರೆಗೆ ಅವರ ಕುಟುಂಬಸ್ಥರನ್ನ ಇಟ್ಟಿದ್ದಾರೆ. ಕುಟುಂಬ ರಾಜಕಾರಣಿ ಮಾಡುತ್ತ ಬಂದವರಿಗೆ ಎಲ್ಲವೂ ಹಾಗೇಯೆ ಕಾಣಿಸುತ್ತದೆ. ಹಳದಿ ರೋಗ ಬಂದವರಿಗೆ ಹಳದಿಯೇ ಕಾಣಿಸುತ್ತದೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘ ಭಾರತವಲ್ಲದೇ ಪ್ರಪಂಚದ 150 ದೇಶದಲ್ಲಿ ಸೇವಾ ಕಾರ್ಯ ಮಾಡುತ್ತಿದೆ. ಸಂಘ ಪ್ರತಿಯೊಬ್ಬರಲ್ಲೂ ದೇಶಭಕ್ತಿಯ ಜಾಗೃತಿ ಮೂಡಿಸುತ್ತದೆ ಎಂದು ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದರು. ಇದನ್ನೂ ಓದಿ: ಎಷ್ಟು ದಿನ ಬದುಕಿರ್ತೀನೋ ಗೊತ್ತಿಲ್ಲ, ಮತಭಿಕ್ಷೆ ನೀಡಿ: ಹೆಚ್‍ಡಿಡಿ

  • ಹೆಸರುಬೇಳೆ ಪಾಯಸ ಮಾಡುವ ಸರಳ ವಿಧಾನ ನಿಮಗಾಗಿ

    ಹೆಸರುಬೇಳೆ ಪಾಯಸ ಮಾಡುವ ಸರಳ ವಿಧಾನ ನಿಮಗಾಗಿ

    ಯಾವುದೇ ವಿಶೇಷವಿಲ್ಲ. ಆದರೂ ರುಚಿಯಾಗಿ ಎನಾದರೂ ತಿನ್ನಬೇಕು ಅನ್ನಿಸುತ್ತದೆ. ಇಂದು ಸಿಹಿಯಾಗಿ ಏನಾದರೂ ಮಾಡಿ ತಿಂದರೆ ಚೆನ್ನಾಗಿರುತ್ತದೆ. ಹೀಗಾಗಿ ನೀವು ಇಂದು ಸುಲಭವಾಗಿ ಮತ್ತು ರುಚಿಯಾಗಿ ಫಟಾ ಫಟ್ ಎಂದು ತಯಾರಿಸುವ ಹೆಸರುಬೆಳೆ ಪಾಯಸ ಮಾಡಿ ಸವಿಯಿರಿ.

    ಬೇಕಾಗುವ ಸಾಮಗ್ರಿಗಳು:
    * ಹೆಸರುಬೇಳೆ – 1ಕಪ್
    * ಸಬ್ಬಕ್ಕಿ – 1ಕಪ್
    * ಬೆಲ್ಲ- 2 ಕಪ್
    * ಒಣದ್ರಾಕ್ಷಿ, ಗೋಡಂಬಿ, ಬಾದಾಮಿ- ಸ್ವಲ್ಪ
    * ಏಲಕ್ಕಿ 4 (ಕುಟ್ಟಿ ಪುಡಿ ಮಾಡಿದ್ದು)
    * ತುಪ್ಪ- ಅರ್ಧ ಕಪ್
    * ಹಾಲು- 2 ಕಪ್ ಇದನ್ನೂ ಓದಿ: ಮಂಗಳೂರು ಸ್ಟೈಲ್ ಚಿಕನ್ ಸುಕ್ಕಾ ಮಾಡೋ ಸುಲಭ ವಿಧಾನ

    ಮಾಡುವ ವಿಧಾನ:

    * ಸಬ್ಬಕ್ಕಿಯನ್ನು ಅರ್ಧ ಗಂಟೆಗಳ ಕಾಲ ನೆನೆಸಿಡಿ. ನಂತರ ಹೆಸರುಬೇಳೆ ತೊಳೆದು ಇಟ್ಟುಕೊಳ್ಳಬೇಕು.
    * ಈಗ ಸ್ಟವ್ ಮೇಲೆ ಕುಕ್ಕರ್ ಇರಿಸಿ ಅದಕ್ಕೆ ತುಪ್ಪ ಹಾಕಿ. ಅದಕ್ಕೆ ಹೆಸರುಬೇಳೆ ಹಾಕಿ ಕೆಂಬಣ್ಣ ಬರುವವರೆಗೂ ಹುರಿದುಕೊಳ್ಳಿ.

    * ಇದಕ್ಕೆ 2ಕಪ್ ನೀರು ಸೇರಿಸಿ. ನಂತರ ಅದಕ್ಕೆ ನೆನೆದ ಸಬ್ಬಕ್ಕಿ ಹಾಕಿ 4 ವಿಷಲ್ ಕೂಗಿಸಿ.
    * ಈಗ ಪಾತ್ರೆಯೊಂದಕ್ಕೆ ಬೆಲ್ಲ, 1 ಕಪ್ ನೀರು ಹಾಕಿ ಕರಗಿಸಿಕೊಳ್ಳಿ.

    * ಈಗ ಕುಕ್ಕರ್‌ಗೆ  ಹಾಲು, ಕರಗಿಸಿದ ಬೆಲ್ಲ ನೀರು, ಏಲಕ್ಕಿ ಪುಡಿ, ಸೇರಿಸಿ ಮಿಶ್ರಣ ಮಾಡಿ.
    * ಈಗ ತುಪ್ಪದಲ್ಲಿ ಒಣ ದ್ರಾಕ್ಷಿ, ಗೋಡಂಬಿ, ಬಾದಾಮಿ ಹುರಿದು ಪಾಯಸಕ್ಕೆ ಸೇರಿಸಿ ಚೆನ್ನಾಗಿ ಕುದಿಸಿದರೆ ರುಚಿಯಾದ ಪಾಯಸ ಸವಿಯಲು ಸಿದ್ಧವಾಗುತ್ತದೆ.

  • ಅಲ್ಪಸಂಖ್ಯಾತರಿಗೆ  HDK ಯಾವ ಪ್ರಾತಿನಿಧ್ಯ ನೀಡಿದ್ದಾರೆ?: ಶ್ರೀನಿವಾಸ್ ಪ್ರಶ್ನೆ

    ಅಲ್ಪಸಂಖ್ಯಾತರಿಗೆ HDK ಯಾವ ಪ್ರಾತಿನಿಧ್ಯ ನೀಡಿದ್ದಾರೆ?: ಶ್ರೀನಿವಾಸ್ ಪ್ರಶ್ನೆ

    ತುಮಕೂರು: ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ ನೀಡುವ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಮಾಡಿರುವ ಟ್ವಿಟ್ ಉದ್ದೇಶಿಸಿ ಜೆಡಿಎಸ್ ಶಾಸಕ ಎಸ್.ಆರ್ ಶ್ರೀನಿವಾಸ್, ಎಚ್.ಡಿ.ಕೆ ಬದ್ಧತೆಯನ್ನು ಪ್ರಶ್ನಿಸಿದ್ದಾರೆ.

    ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಲ್ಪಸಂಖ್ಯಾತರಿಗೆ ಪ್ರಾತಿನಿಧ್ಯ ನೀಡುವ ಬಗ್ಗೆ ಸಿದ್ದರಾಮಯ್ಯರಿಗೆ ಹೇಳುವ ಮೊದಲು ನಾವೆಷ್ಟು ಪ್ರಾತಿನಿಧ್ಯ ನೀಡಿದ್ದೇವೆ ಎಂದು ಆತ್ಮ ವಿಮರ್ಶೆ ಮಾಡಿಕೊಳ್ಳಬೇಕು. ಬದ್ಧತೆ ಬಗ್ಗೆ ನಮ್ಮ ಆತ್ಮವಿಮರ್ಶೆಯನ್ನು ನಾವು ಮಾಡಿಕೊಳ್ಳಬೇಕು. ಉಪ ಚುನಾವಣೆಯಲ್ಲಿ ಜೆ.ಡಿ.ಎಸ್ ಅಲ್ಪ ಸಂಖ್ಯಾತ ಅಭ್ಯರ್ಥಿಯನ್ನು ಕಣಕಿಳಿಸಿ ಏನು ಪ್ರಯೋಜನ ಎಂದು ಪ್ರಶ್ನಿಸಿದರು. ಇದನ್ನೂ ಓದಿ:  ನಟಿ ಶ್ರೀಲೀಲಾ ನನ್ನ ಮಗಳಲ್ಲ – ವಿವಾದಾತ್ಮಕ ಹೇಳಿಕೆ ಕೊಟ್ಟ ಉದ್ಯಮಿ

    ತುಮಕೂರು ನಗರದಲ್ಲಿ 45-50 ಸಾವಿರ ಮುಸ್ಲಿಮರ ಮತ ಇದೆ. ಆದರೂ ಕಾಂಗ್ರೆಸ್ ಅಭ್ಯರ್ಥಿ ಸೋತಿದ್ದಾರೆ. ಇಂತಹದರಲ್ಲಿ 10-15 ಸಾವಿರ ಮತ ಇರುವ ಕ್ಷೇತ್ರದಲ್ಲಿ ಅಲ್ಪ ಸಂಖ್ಯಾತರಿಗೆ ಟಿಕೆಟ್ ಕೊಟ್ಟರೆ ಯಾವ ಪ್ರಯೋಜನವೂ ಇಲ್ಲ. ಬಸವ ಕಲ್ಯಾಣದಲ್ಲಿ ಅಲ್ಪಸಂಖ್ಯಾತ ಅಭ್ಯರ್ಥಿ ಹಾಕಿ ಏನು ಪ್ರಯೋಜನವಾಯ್ತು ಎಂದು ಸ್ವಪಕ್ಷದ ನಿರ್ಧಾರವನ್ನೇ ಎಸ್.ಆರ್ ಶ್ರೀನಿವಾಸ್ ಪ್ರಶ್ನಿಸಿದರು. ಇದನ್ನೂ ಓದಿ: ಹೊಸ ಬಟ್ಟೆ ಧರಿಸಿ ವೃದ್ಧ ದಂಪತಿ ಆತ್ಮಹತ್ಯೆಗೆ ಶರಣು!