ನವದೆಹಲಿ: ದಸರಾ, ದೀಪಾವಳಿ ಹಬ್ಬಗಳು ಸನ್ನಿಹಿತವಾಗುತ್ತಿದ್ದಂತೆ ದೆಹಲಿ ಸರ್ಕಾರ ಮಾಲಿನ್ಯದ ಬಗ್ಗೆ ಎಚ್ಚೆತ್ತುಕೊಂಡಿದೆ. ಸಿಎಂ ಅರವಿಂದ್ ಕೇಜ್ರಿವಾಲ್ ಮೂರು ಸೂತ್ರಗಳನ್ನು ಪಾಲಿಸುವಂತೆ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ.
ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಸದ್ಯ ಮಾಲಿನ್ಯ ನಿಯಂತ್ರಣದಲ್ಲಿದ್ದರು ಕಳೆದೊಂದು ತಿಂಗಳಿನಿಂದ ಮಾಲಿನ್ಯದ ಪ್ರಮಾಣ ನಿಯಮಿತವಾಗಿ ಹೆಚ್ಚುತ್ತಿದೆ. ಮಾಲಿನ್ಯ ನಿಯಂತ್ರಣ ಮಾಡುವುದು ಎಲ್ಲರ ಜವಾಬ್ದಾರಿಯಾಗಿದ್ದು, ಈ ಹಿನ್ನಲೆ ಮೂರು ಸೂತ್ರಗಳನ್ನು ಪಾಲಿಸಬೇಕು ಎಂದು ಕರೆ ಕೊಟ್ಟಿದ್ದಾರೆ. ಇದನ್ನೂ ಓದಿ:ಮಕ್ಕಳಿಗೆ ಲಸಿಕೆ ಭಾಗ್ಯ- 2 ರಿಂದ 18 ವರ್ಷದವರಿಗೆ ಕೋವ್ಯಾಕ್ಸಿನ್ ನೀಡಲು ಅನುಮತಿ
ಅಕ್ಟೋಬರ್ 18 ರಿಂದ ರೆಡ್ ಲೈಟ್ ಆನ್, ಇಂಜಿನ್ ಆಫ್ ಎನ್ನುವ ಅಭಿಯಾನ ಆರಂಭಿಸಲಿದ್ದು, ಸಿಗ್ನಲ್‍ಗಳಲ್ಲಿ ವಾಹನಗಳನ್ನು ಆಫ್ ಮಾಡುವಂತೆ ಅವರು ಮನವಿ ಮಾಡಿದ್ದಾರೆ. ಈ ಪ್ರಕ್ರಿಯೆಯಿಂದ 13-20% ಮಾಲಿನ್ಯದ ಪ್ರಮಾಣದ ತಗ್ಗಿಸಬಹುದು ಮತ್ತು ಸುಮಾರು 250 ಕೋಟಿ ಮೌಲ್ಯದ ಇಂಧನವನ್ನು ಉಳಿಸಬಹುದು. ವಾರದಲ್ಲಿ ಒಂದು ದಿನ ಸ್ವಯಂ ವಾಹನ ಬಿಟ್ಟು ಸಾರ್ವಜನಿಕ ಸಾರಿಗೆ ಅಥಾವ ಕ್ಯಾಬ್‍ಗಳನ್ನು ಹಂಚಿಕೊಂಡು ಓಡಾಡುವಂತೆ ಕೇಜ್ರೀವಾಲ್ ತಮ್ಮ ಎರಡನೇ ಸೂತ್ರದಲ್ಲಿ ಹೇಳಿದ್ದಾರೆ. ಇನ್ನು ಮೂರನೇ ಸೂತ್ರವಾಗಿ ಕಸ ಸುಡುವ ಕೆಲಸಗಳನ್ನು ಮಾಡದಂತೆ ಅವರು ಮನವಿ ಮಾಡಿದ್ದು, ಈ ಕ್ರಮಗಳು ಮಾಲಿನ್ಯ ಪ್ರಮಾಣ ತಗ್ಗಿಸಲಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಗನ ಆರೋಗ್ಯ ವಿಚಾರಿಸುತ್ತಾ ರಾತ್ರಿಯಿಡೀ ನಿದ್ದೆಗೆಟ್ಟ ಶಾರೂಖ್ ದಂಪತಿ!
ಪ್ರತಿವರ್ಷ ಚಳಿಗಾಲದಲ್ಲಿ ದೆಹಲಿ ಗ್ಯಾಸ್ ಚೇಂಬರ್ ಆಗಿ ಬದಲಾಗುತ್ತದೆ. ಈ ಹಿನ್ನಲೆ ಈಗಾಗಲೇ ಪಟಾಕಿ ಮಾರಾಟ ಮತ್ತು ಬಳಕೆ ಎರಡು ನಿಷೇಧ ಮಾಡಿದ್ದು, ಮಾಲಿನ್ಯಕ್ಕೆ ಕಾರಣವಾಗುವ ಇತರೆ ಅಂಶಗಳನ್ನು ನಿಯಂತ್ರಿಸುವ ಪ್ರಯತ್ನಕ್ಕೆ ಕೇಜ್ರಿವಾಲ್ ಕೈ ಹಾಕಿದ್ದಾರೆ.
ಗದಗ/ಹಾಸನ: ನಿರಂತರವಾಗಿ ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಗದಗ, ಹಾಸನ ರೈತರು ಫಸಲನ್ನು ಕಳೆದುಕೊಂಡಿದ್ದಾರೆ. ಮಳೆಯ ಅವಾಂತರದಿಂದಾಗಿ ರೈತರು ಕಣ್ಣೀರು ಹಾಕುವ ಪರಿಸ್ಥಿತಿ ಎದುರಾಗಿದೆ.
ನಿನ್ನೆ ತಡರಾತ್ರಿ ಸುರಿದ ಮಳೆ ಜಿಲ್ಲೆಯ ಅನೇಕ ಕಡೆಗಳಲ್ಲಿ ಸಾಕಷ್ಟು ಅವಾಂತರ ಸೃಷ್ಟಿಸಿದೆ. ವರುಣನ ಅಟ್ಟಹಾಸಕ್ಕೆ ಜಿಲ್ಲೆಯ ಅಂತೂರು ಬೆಂತೂರ ಗ್ರಾಮದಲ್ಲಿ ಅನೇಕ ಬೆಳೆಗಳು ಹಾಳಾಗಿವೆ. ಅದರಲ್ಲಿ ಮಲ್ಲಿಕಾರ್ಜುನ ಗುಡಿಸಾಗರ್ ಜಮೀನಿನಲ್ಲಿ ಬೆಳೆದ ಶೇಂಗಾ ಬೆಳೆ ಹಾಳಾಗಿದೆ. ಮಕ್ಕಳಿಗೆ ಲಸಿಕೆ ಭಾಗ್ಯ- 2 ರಿಂದ 18 ವರ್ಷದವರಿಗೆ ಕೋವ್ಯಾಕ್ಸಿನ್ ನೀಡಲು ಅನುಮತಿ
ಮಲ್ಲಿಕಾರ್ಜುನ ಅವರ ಜಮೀನಿನಲ್ಲಿ ರಾಶಿ ಮಾಡಲು ಕಿತ್ತು ಹಾಕಿದ ಶೇಂಗಾ ಬೆಳೆ ನೀರಲ್ಲಿ ತೇಲಿ ಹೋಗಿದೆ. ಕೈಗೆ ಬಂದ ತುತ್ತು ರೈತರ ಬಾಯಿಗೆ ಬರದಂತಾಗಿದೆ. ಸಾಲಸೂಲ ಮಾಡಿ ಲಕ್ಷಾಂತರ ರೂಪಾಯಿ ಖರ್ಚುಮಾಡಿದ ಬೆಳೆಗಳೆಲ್ಲಾ ನೀರಲ್ಲಿ ಕೊಚ್ಚಿಹೋಗಿವೆ. ಸುಮಾರು 7 ಎಕರೆ ಜಮೀನಿನಲ್ಲಿ ಬೆಳೆದ ನೂರಾರು ಕ್ವಿಂಟಲ್ ಬೆಳೆ ನಷ್ಟವಾಗುತ್ತಿದೆ. ಹತ್ತಾರು ಲಕ್ಷದ ರೂಪಾಯಿ ಮೊತ್ತದ ಶೇಂಗಾ ಹಾಳಾಗಿದೆ. ಹಳ್ಳಕ್ಕೆ ತೇಲಿಬಂದ ಅಳಿದುಳಿದ ಬೆಳೆಯನ್ನು ರೈತರು ತೆಗೆದು ಹಾಕುವ ಕೆಲಸ ಮಾಡುತ್ತಿದ್ದಾರೆ. ವರುಣನ ಆರ್ಭಟಕ್ಕೆ ರೈತ ಕಣ್ಣೀರಲ್ಲಿ ಕೈ ತೊಳೆಯುವಂತಾಗಿದೆ. ಶೇಂಗಾ, ಮೆಣಸಿನ ಬೆಳೆ, ಈರುಳ್ಳಿ, ಮೆಕ್ಕೆಜೋಳ ಹೀಗೆ ಅನೇಕ ಬೆಳೆಗಳು ನೀರು ಪಾಲಾಗಿವೆ.
ಕೆರೆಯಂತಾದ ಅಡಿಕೆ ತೋಟ: ಒಂದು ವಾರದಿಂದ ಸುರಿಯುತ್ತಿರುವ ಮಳೆಯಿಂದಾಗಿ ಕೆರೆ ಕೋಡಿಬಿದ್ದ ಪರಿಣಾಮ ರೈತರ ನೂರಾರು ಎಕರೆ ಅಡಿಕೆ ತೋಟಕ್ಕೆ ನೀರು ನುಗ್ಗಿ ಜಮೀನು ನಾಶವಾಗುವ ಭೀತಿ ಎದುರಾಗಿರುವ ಘಟನೆ ಹಾಸನ ಜಿಲ್ಲೆ, ಅರಕಲಗೂಡು ತಾಲ್ಲೂಕು, ರಾಮನಾಥಪುರ ಹೋಬಳಿಯ ಕಾಳೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಕಾಳೇನಹಳ್ಳಿ ಗ್ರಾಮದ ಹಲವರು ಅಡಿಕೆ ಮತ್ತು ಎಲೆ ಅಂಬು ಬೆಳೆದು ಬದುಕು ಕಟ್ಟಿಕೊಂಡಿದ್ದಾರೆ. ಆದರೆ ಕಳೆದ ಒಂದು ವಾರದಿಂದ ಸುರಿದ ಮಳೆಗೆ ಕೆರೆ ಕೋಡಿ ಬಿದ್ದು ನೂರಾರು ಎಕರೆಗೆ ನೀರು ನುಗ್ಗಿದೆ. ಕಳೆದ ಒಂದು ವಾರದಿಂದ ತೋಟದಲ್ಲಿ ನೀರು ನಿಂತಿರುವುದರಿಂದ ಅಡಿಕೆ ಮರಗಳು ಬುಡ ಸಮೇತ ಬೀಳುವ ಹಂತ ತಲುಪಿವೆ. ಆದರೆ ಈ ಬಗ್ಗೆ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಸ್ಪಂದಿಸುತ್ತಿಲ್ಲ. ಹೀಗೆ ಆದರೆ ನಮ್ಮಜೀವನ ಬೀದಿಗೆ ಬರಲಿದೆ ಎಂದು ರೈತರು ಅಸಹಾಯಕತೆ ಹೊರಹಾಕುತ್ತಿದ್ದಾರೆ.
ನೆಲಮಂಗಲ: ಬೆಂಗಳೂರು ಹೊರವಲಯ ನೆಲಮಂಗಲ ತಾಲೂಕಿನ ತೊರೆಪಾಳ್ಯ ಗ್ರಾಮದ ರಸ್ತೆಗಾಗಿ ಅಗ್ರಹಿಸಿ ವಿನೂತನ ಪ್ರತಿಭಟನೆ ನಡೆಸಿದ್ದರು. ಈ ಹಿನ್ನಲೆ ಘಟನೆ ನಡೆದಿದ್ದ ಸ್ಥಳಕ್ಕೆ, ಪರಿಶೀಲನೆಗೆ ಬಂದ ಅಧಿಕಾರಿಗಳ ಕಾರ್ ಕೆಸರು ರಸ್ತೆಯಲ್ಲಿ ಸಿಲುಕಿಕೊಂಡು ಫಜೀತಿ ಅನುಭವಿಸಿದ್ದಾರೆ.
ಕೆಲವು ದಿನಗಳ ಹಿಂದೆ ಸುಸಜ್ಜಿತ ರಸ್ತೆ ಮಾಡುವಂತೆ ವಿನೂತನ ಪ್ರತಿಭಟನೆ ಮಾಡಿದ್ದ ಗ್ರಾಮಸ್ಥರು, ಇದೀಗ ಆ ರಸ್ತೆ ವೀಕ್ಷಿಸಲು ಬಂದ ಅಧಿಕಾರಿಗಳೆ ಕೆಸರಿನಲ್ಲಿ ಕಾಲ ಕಳೆಯುವಂತಾಗಿದೆ. ಮಳೆಯಿಂದಾಗಿ ಕೆಸರು ಗದ್ದೆಯಂತಹ ರಸ್ತೆಯಲ್ಲಿ ಸಿಲುಕಿದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿ ಅಧ್ಯಕ್ಷರ ಕಾರನ್ನು, ಗ್ರಾಮಸ್ಥರು ಟ್ರ್ಯಾಕ್ಟರ್ ಮೂಲಕ ಕಾರು ಎಳೆದು ಸಹಾಯ ಮಾಡಿದ್ದಾರೆ. ಇದನ್ನೂ ಓದಿ:ಮಕ್ಕಳಿಗೆ ಲಸಿಕೆ ಭಾಗ್ಯ- 2 ರಿಂದ 18 ವರ್ಷದವರಿಗೆ ಕೋವ್ಯಾಕ್ಸಿನ್ ನೀಡಲು ಅನುಮತಿ
ಕೆಸರು ರಸ್ತೆಯಲ್ಲಿ ಪೂಜೆ ಮಾಡಿ ಗಿಡ ನೆಟ್ಟು ಪ್ರತಿಭಟನೆ ಮಾಡಿದ್ದ ಜನರು ಇದೀಗ, ಪರಿಶೀಲನೆಗೆ ಬಂದ ಅಧಿಕಾರಿಗಳೇ ಕೆಸರು ಗದ್ದೆಯ ರಸ್ತೆಯಲ್ಲಿ ಸಿಲುಕಿ ಪರದಾಟ ನಡೆಸಿದ್ದಾರೆ. ನೋಡಿ ಸ್ವಾಮಿ ದಿನನಿತ್ಯ ನಮ್ಮ ಸಂಕಷ್ಟ ಎಂದ ಗ್ರಾಮಸ್ಥರು ತಮ್ಮ ನೋವುನ್ನು ಪ್ರಾತ್ಯಕ್ಷಿಕವಾಗಿ ತೋರಿಸಿದ್ದಾರೆ. ಇದನ್ನೂ ಓದಿ: ದೆಹಲಿಯಲ್ಲಿ ಪಾಕಿಸ್ತಾನಿ ಭಯೋತ್ಪಾದಕ ಅರೆಸ್ಟ್ – ಎಕೆ47, ಮದ್ದುಗುಂಡುಗಳು ವಶಕ್ಕೆ
ರಸ್ತಗೆ ಡಾಂಬರ್ ಹಾಕಿಸುವಂತೆ ಅಧಿಕಾರಿಗಳಿಗೆ ಗ್ರಾಮಸ್ಥರು ಮನವಿ ಮಾಡಿದ್ದಾರೆ. ನಂತರ ಪ್ರತಿಭಟನೆಯನ್ನು ಮಾಡಿದ್ದರು. ಹಾಳಾಗಿರುವ ರಸ್ತೆಯ ವರದಿ ನೋಡಿ ಗ್ರಾಮಕ್ಕೆ ಬಂದ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು, ಕೆಸರು ರಸ್ತೆಯಲ್ಲಿ ಕಾರು ಸಿಲುಕಿ ಪೇಚಿಗೆ ಸಿಲುಕಿದ ಅಧಿಕಾರಿಗಳು ಗ್ರಾಮಸ್ಥರ ನಗೆಪಾಠಲಿಗೆ ಇಡಾಗಿದ್ದಾರೆ.
ನವದೆಹಲಿ: ಮಕ್ಕಳಿಗೆ ಕೊರೊನಾ ಲಸಿಕೆ ನೀಡಲು ಅನುಮತಿ ನೀಡಲಾಗಿದೆ. 2ರಿಂದ 18 ವರ್ಷದ ಮಕ್ಕಳಿಗೆ ಭಾರತ್ ಬಯೋಟೆಕ್ ಕೋವ್ಯಾಕ್ಸಿನ್ ನೀಡಲು ತಜ್ಞರ ಸಮಿತಿ ಅನುಮತಿ ನೀಡಿದೆ.
ಮಕ್ಕಳಿಗೆ ಕೊರೊನಾ ಲಸಿಕೆ ನೀಡಲು ಗ್ರೀನ್ ಸಿಗ್ನಲ್ ಸಿಕ್ಕಿದ್ದು, ತುರ್ತು ಬಳಕೆಗೆ ಭಾರತೀಯ ಔಷಧ ನಿಯಂತ್ರಣ ಸಂಸ್ಥೆ(ಡಿಸಿಜಿಐ) ಅನುಮತಿ ನೀಡಿದೆ. ಇಂದು ನಡೆದ ವಿಷಯ ತಜ್ಞರ ಸಮಿತಿ ಸಭೆಯಲ್ಲಿ ತುರ್ತು ಬಳಕೆಗೆ ಒಪ್ಪಿಗೆ ಸಿಕ್ಕಿದೆ. ಕೊರೊನಾ ಮೂರನೇ ಅಲೆ ಮಕ್ಕಳ ಮೇಲೆ ಪರಿಣಾಮ ಬೀರುವ ಹಿನ್ನೆಲೆಯಲ್ಲಿ ಇದೀಗ ಕೊವ್ಯಾಕ್ಸಿನ್ ಲಸಿಕೆ ನೀಡಲು ಅನುಮತಿ ಸಿಕ್ಕಿರುವುದು ಸಮಾಧಾನಕರ ಸಂಗತಿಯಾಗಿದೆ. ಇದನ್ನೂ ಓದಿ:ಮಕ್ಕಳ ಮೇಲೆ ಕೋವ್ಯಾಕ್ಸಿನ್ ಲಸಿಕೆ ಪ್ರಯೋಗ ಅಂತ್ಯ – ಶೀಘ್ರದಲ್ಲಿ ಡಿಸಿಜಿಐಗೆ ವರದಿ ಸಲ್ಲಿಕೆ
ಎರಡು ವರ್ಷಕ್ಕಿಂತ ಮೇಲ್ಪಟ್ಟ ಮಕ್ಕಳಿಗೆ ಭಾರತ್ ಬಯೋಟೆಕ್‍ನ ಕೋವ್ಯಾಕ್ಸಿನ್ ಲಸಿಕೆಯ ಪರೀಕ್ಷೆ ನಡೆದಿದ್ದು, ಮಕ್ಕಳ ಮೇಲೆ ಕೋವ್ಯಾಕ್ಸಿನ್ ಲಸಿಕೆಯ ಕ್ಲಿನಿಕಲ್ ಪ್ರಯೋಗಕ್ಕೆ ಸಂಬಂಧಿಸಿದ ದತ್ತಾಂಶವನ್ನು ಭಾರತ್ ಬಯೋಟೆಕ್ ಕಂಪನಿ ಡಿಸಿಜಿಐಗೆ ಸಲ್ಲಿಸಿತ್ತು. ಐಸಿಎಂಆರ್(Indian Council of Medical Research) ಮತ್ತು ಹೈದರಾಬಾದ್ ಮೂಲದ ಲಸಿಕೆ ತಯಾರಕ ಭಾರತ್ ಬಯೋಟೆಕ್ ಕೊವಾಕ್ಸಿನ್ ಅನ್ನು ಅಭಿವೃದ್ಧಿಪಡಿಸಿದ್ದು, ಭಾರತದ ಮೊದಲ ಸ್ಥಳೀಯ ಕೋವಿಡ್ -19 ಲಸಿಕೆ ಆಗಿದೆ. 2ರಿಂದ 18 ವರ್ಷದ ಮಕ್ಕಳಿಗೆ ಲಸಿಕೆ ನೀಡಲು ತಜ್ಞರ ತಂಡ ಒಪ್ಪಿಗೆ ಸೂಚಿಸಿದೆ. ಇದನ್ನೂ ಓದಿ:ಮಕ್ಕಳ ಮೇಲೆ ಕೊರೊನಾ ಲಸಿಕೆ ಪ್ರಯೋಗ- ಮೈಸೂರಲ್ಲಿ 30 ಚಿಣ್ಣರರಿಗೆ ಕೋವ್ಯಾಕ್ಸಿನ್
ಮಕ್ಕಳಿಗೆ ಕೋವ್ಯಾಕ್ಸಿನ್ ನೀಡುವ ಬಗ್ಗೆ ಒಂದು ವಾರದ ಹಿಂದೆ ಕ್ಲಿನಿಕಲ್ ಪ್ರಯೋಗದ ವರದಿಯನ್ನು ಡಿಸಿಜಿಐಗೆ ಸಲ್ಲಿಸಲಾಗಿತ್ತು. ಈ ವರದಿ 1, 2 ಮತ್ತು 3ನೇ ಹಂತದ ಕ್ಲಿನಿಕಲ್ ಪರೀಕ್ಷೆಯ ವಿವರ, ಫಲಿತಾಂಶವನ್ನು ಒಳಗೊಂಡಿತ್ತು. ಸೆ. 21ರಂದು ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆ ನೀಡುವ 3ನೇ ಹಂತದ ಪ್ರಯೋಗ ಪೂರ್ಣಗೊಂಡಿತ್ತು. ಒಟ್ಟು 1,000 ಮಕ್ಕಳ ಮೇಲೆ ಪ್ರಯೋಗ ನಡೆಸಲಾಗಿತ್ತು. ಇದನ್ನೂ ಓದಿ: ಗಾನಗಂಧರ್ವ ಭಾಗವತ ಪದ್ಯಾಣ ಗಣಪತಿ ಭಟ್ ಇನ್ನಿಲ್ಲ
ಸ್ಪಷ್ಟನೆ: ಮಕ್ಕಳಿಗೆ ಕೊವ್ಯಾಕ್ಸಿನ್ ಲಸಿಕೆ ನೀಡುವ ಬಗ್ಗೆ ಇನ್ನೂ ಅಂತಿಮ ನಿರ್ಧಾರ ಆಗಿಲ್ಲ. ಮಾತುಕತೆ ನಡೆಯುತ್ತಿದೆ. 2-18 ವರ್ಷದ ಮಕ್ಕಳಿಗೆ ಲಸಿಕೆ ನೀಡಲು ಡಿಸಿಜಿಐ ಇನ್ನೂ ಅನುಮತಿ ನೀಡಿಲ್ಲ ಎಂದು ಕೇಂದ್ರ ಆರೋಗ್ಯ ಇಲಾಖೆ ಡಾ. ಭಾರತಿ ಪ್ರವೀಣ್ ಸ್ಪಷ್ಟನೆ ನೀಡಿದ್ದಾರೆ.
The evaluation is still going on. There is some confusion & the talks are underway with the experts' committee. Till now Drugs Controller General of India (DCGI) hasn't approved it: MoS Health, Dr Bharati Pravin Pawar on approval to Covaxin for 2-18 years age group pic.twitter.com/OKb3AJDaOQ
ಭಾರತ ಮೂಲದ ಜೈಡಸ್ ಕ್ಯಾಡಿಲಾ (Zydus Cadila) ಕಂಪನಿ ಅಭಿವೃದ್ಧಿಪಡಿಸಿರುವ ಜೈಕೊವ್-ಡಿ ಲಸಿಕೆಯ (ZyCov-D Vaccine) ತುರ್ತು ಬಳಕೆಗೆ ಈಗಾಗಲೇ ಅನುಮತಿ ಸಿಕ್ಕಿದೆ. ಮೂರು ಡೋಸ್‍ಗಳನ್ನು ಹೊಂದಿರುವ ಈ ಲಸಿಕೆಯನ್ನು ಅಕ್ಟೋಬರ್ ಬಳಿಕ 12ರಿಂದ 17 ವರ್ಷದೊಳಗಿನ ಮಕ್ಕಳಿಗೆ ನೀಡುವ ಸಾಧ್ಯತೆಯಿದೆ. ಮುಖ್ಯವಾಗಿ ಆರೋಗ್ಯ ಸಮಸ್ಯೆಗಳಿರುವ ಮಕ್ಕಳಿಗೆ ಲಸಿಕೆ ನೀಡಲು ಆದ್ಯತೆ ನೀಡಲಾಗುವುದು ಎನ್ನಲಾಗಿದೆ. 12 ವರ್ಷದಿಂದ 18 ವರ್ಷದೊಳಗಿನ ಮಕ್ಕಳಿಗೆ ಈ ಜೈಕೋವ್-ಡಿ ಲಸಿಕೆ ಬಹಳ ಪರಿಣಾಮಕಾರಿಯಾಗಲಿದೆ.
ಐಸಿಎಂಆರ್ ನಡೆಸಿದ ಸರ್ವೇಯಲ್ಲಿ, ದೇಶದಲ್ಲಿ ಸುಮಾರು ಶೇ.60 ಮಕ್ಕಳು ಕೊರೊನಾ ಸೋಂಕಿಗೆ ಒಳಗಾಗಿದ್ದಾರೆ. ಮಕ್ಕಳಲ್ಲಿ ಸೋಂಕಿನಿಂದ ಮರಣ ಪ್ರಮಾಣ ದಶಲಕ್ಷದಲ್ಲಿ ಎರಡು ಆಗಿದೆ. ಇದು ಅತಿ ಕನಿಷ್ಠವಾಗಿದೆ. ಭಾರತ್ ಬಯೋಟೆಕ್‍ನ ಕೋವ್ಯಾಕ್ಸಿನ್ ಲಸಿಕೆಯು ವಯಸ್ಕರಂತೆಯೇ ಮಕ್ಕಳಲ್ಲಿ ಕೂಡ ಪರಿಣಾಮ ತೋರುತ್ತದೆ. ಲಸಿಕೆಯ ಸುರಕ್ಷತೆ ಹಾಗೂ ರೋಗನಿರೋಧಕ ಶಕ್ತಿ ಮಕ್ಕಳಲ್ಲಿಯೂ ವಯಸ್ಕರಂತೆಯೇ ಇರಲಿದೆ ಎಂದು ಎಂದು ಏಮ್ಸ್ ಸೆಂಟರ್ ಫಾರ್ ಕಮ್ಯುನಿಟಿ ಮೆಡಿಸಿನ್ ಪ್ರೊಫೆಸರ್ ಡಾ. ಸಂಜಯ್ ಕೆ ರೈ ತಿಳಿಸಿದ್ದಾರೆ.
ಕೋವ್ಯಾಕ್ಸಿನ್ ಲಸಿಕೆಯನ್ನು ಮೂರು ವಯೋಮಾನದವರಲ್ಲಿ ನಡೆಸಲಾಗಿದೆ. ಮೊದಲು 12-18 ವಯೋಮಾನದವರಲ್ಲಿ, ಎರಡನೆಯದಾಗಿ 6-12 ವಯೋಮಾನ ಹಾಗೂ ಮೂರನೆಯದಾಗಿ 2-6 ವಯೋಮಾನದವರಲ್ಲಿ ಲಸಿಕೆ ಪ್ರಯೋಗ ನಡೆಸಲಾಗಿದೆ. ಈ ಪ್ರಯೋಗಗಳಲ್ಲಿ ಕೋವ್ಯಾಕ್ಸಿನ್ ವಯಸ್ಕರಂತೆಯೇ ಮಕ್ಕಳ ಮೇಲೂ ಪರಿಣಾಮ ಬೀರಲಿದೆ ಎಂದು ತಿಳಿದುಬಂದಿದೆ.
ಮುಂಬೈ: ನಟಿ ರಕುಲ್ ಪ್ರೀತ್ ಸಿಂಗ್ ನಿನ್ನೆ ಹುಟ್ಟುಹಬ್ಬದ ಪ್ರಯುಕ್ತ ತಮ್ಮ ಲವ್ ಸ್ಟೋರಿಯನ್ನು ಬಹಿರಂಗ ಪಡಿಸಿದ್ದರು. ಈಗ ಮುಂಬೈನ ಪಾಪರಾಜಿ ಫೋಟೋಗ್ರಾಫರ್ ಕ್ಯಾಮೆರಾ ಕಣ್ಣಿನಲ್ಲಿ ಸೆರೆಯಾಗಿದ್ದಾರೆ.
ಸದ್ಯ ಬಹುಬೇಡಿಕೆಯಲ್ಲಿ ಇರುವ ನಟಿಯ ಸಾಲಿಗೆ ರಕುಲ್ ಪ್ರೀತ್ ಸಿಂಗ್ ಕೂಡಾ ಸೇರುತ್ತಾರೆ. ಇವರು ನಿನ್ನೆ 31ನೇ ವರ್ಷದ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದ್ದಾರೆ. ಈ ವೇಳೆ ತಮ್ಮ ವೈಯಕ್ತಿಕ ಜೀವನದ ಕುರಿತಾಗಿ ಕೆಲವು ವಿಚಾರಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ತಮ್ಮ ಜನ್ಮದಿನವನ್ನು ಇಂದು ಭರ್ಜರಿಯಾಗಿ ನಟಿ ರಕುಲ್ ಪ್ರೀತ್ ಸಿಂಗ್ ಸೆಲೆಬ್ರೇಟ್ ಮಾಡಿದ್ದಾರೆ.
ಫೋಟೋಗ್ರಾಫರ್ ಮತ್ತು ಕ್ಯಾಮರಾಮ್ಯಾನ್‍ಗಳ ಜೊತೆಗೆ ಕೇಕ್ ಕತ್ತರಿಸಿ ನಟಿ ರಕುಲ್ ಪ್ರೀತ್ ಸಿಂಗ್ ಸಂಭ್ರಮಿಸಿದ್ದಾರೆ. ಸಿಂಗ್ ಇಂದು 31ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಇಂದು ಹಸಿರು ಬಣ್ಣದ ಉಡುಪು ತೊಟ್ಟಿದ್ದ ನಟಿ ರಕುಲ್ ಪ್ರೀತ್ ಸಿಂಗ್ ಮಿರಿ ಮಿರಿ ಮಿಂಚಿದ್ದಾರೆ. ಇದನ್ನೂ ಓದಿ: ಗಾನಗಂಧರ್ವ ಭಾಗವತ ಪದ್ಯಾಣ ಗಣಪತಿ ಭಟ್ ಇನ್ನಿಲ್ಲ
ರಕುಲ್ ಪ್ರೀತಿ ಸಿಂಗ್ ಅವರ ಬಾಯ್‍ಫ್ರೆಂಡ್ ನಟ, ನಿರ್ಮಾಪಕ ಜ್ಯಾಕಿ ಭಗ್ನಾನಿ ನೀನಿಲ್ಲದೆ ದಿನಗಳು ಎಂದಿನಂತೆ ದಿನಗಳಾಗಿರುವುದಿಲ್ಲ. ನೀನಿಲ್ಲದೆ ಎಂಥಾ ರುಚಿಕರ ತಿನಿಸನ್ನೂ ಆಸ್ವಾದಿಸಲಾಗುವುದಿಲ್ಲ. ನನ್ನ ಪಾಲಿಗೆ ಜಗತ್ತೇ ಆಗಿರುವ ಪ್ರೀತಿಯ ಪ್ರಿಯತಮೆಗೆ ಹುಟ್ಟುಹಬ್ಬದ ಶುಭಾಶಯಗಳು. ನಿಮ್ಮ ಈ ದಿನ ನಿಮ್ಮಂತೆಯೇ ಸುಂದರವಾಗಿರಲಿ, ನಿಮ್ಮ ನಗುವಿನಂತೆಯೇ ಪ್ರಜ್ವಲಿಸಲಿ. ಹ್ಯಾಪಿ ಬರ್ತ್‌ಡೇ ಮೈ ಲವ್ ಎಂದು ಇನ್‌ಸ್ಟಾಗ್ರಾಮ್‍ನಲ್ಲಿ ಬರೆದುಕೊಂಡಿದ್ದರು. ಇದನ್ನೂ ಓದಿ:ಸೊಸೆ ಕತ್ತು ಸೀಳಿದ ಮಾವ- 8ರ ಕಂದಮ್ಮ ಅನಾಥ
ಥ್ಯಾಂಕ್ಯು ಮೈ ಲವ್. ಈ ವರ್ಷ ನನಗೆ ಸಿಕ್ಕ ಅತ್ಯುತ್ತಮ ಉಡುಗೊರೆ ನೀವೇ. ನನ್ನ ಬದುಕಿಗೆ ಬಣ್ಣಗಳನ್ನು ತುಂಬಿದ ನಿಮಗೆ ಧನ್ಯವಾದಗಳು. ನನ್ನನ್ನ ಸದಾ ನಗುವಂತೆ ಮಾಡುವ ನಿಮಗೆ ಧನ್ಯವಾದಗಳು ಎಂದು ಜ್ಯಾಕಿ ಭಗ್ನಾನಿ ಅವರನ್ನು ಉಲ್ಲೇಖಿಸಿ ಇನ್‌ಸ್ಟಾಗ್ರಾಮ್‍ನಲ್ಲಿ ನಟಿ ರಕುಲ್ ಪ್ರೀತ್ ಸಿಂಗ್ ಬರೆದುಕೊಳ್ಳುವ ಮೂಲಕವಾಗಿ ತಮ್ಮ ಬಾಯ್ ಫ್ರೆಂಡ್ ಕುರಿತಾಗಿ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು.
ಸ್ಯಾಂಡಲ್‍ವುಡ್, ಬಾಲಿವುಡ್ ಸಿನಿಮಾಗಳಲ್ಲಿ ರಕುಲ್ ಪ್ರೀತಿ ಸಿಂಗ್ ನಟಿಸಿದ್ದಾರೆ. ಕನ್ನಡದ ಗಿಲ್ಲಿ ಚಿತ್ರದ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ನಟಿ ರಕುಲ್ ಪ್ರೀತ್ ಸಿಂಗ್ ಕಿಕ್ 2, ಸರೈನೋಡು, ನಾನಕು ಪ್ರೇಮತೋ, ಸ್ಪೈಡರ್ ಮುಂತಾದ ಹಿಟ್ ಚಿತ್ರಗಳಲ್ಲಿ ಅಭಿನಯಿಸುವ ಮೂಲಕವಾಗಿ ಅಪಾರ ಅಭಿಮಾನಿಗಳ ಪ್ರೀತಿಯನ್ನು ಸಂಪಾದಿಸಿದ್ದಾರೆ.
ಲಕ್ನೋ: ಮಗ ಆತ್ಮಹತ್ಯೆ ಮಾಡಿಕೊಂಡಿರುವ ವಿಚಾರವಾಗಿ ಮನನೊಂದಿದ್ದ ಮಾವ ಸೊಸೆಯ ಕತ್ತು ಸೀಳಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮೀರತ್ ಜಿಲ್ಲೆಯಲ್ಲಿ ನಡೆದಿದೆ.
ಪಿಂಕಿ, ಅಮಿತ್ ಬನ್ಸಾಲ್ ಮೃತರು. ರಾಮ್ ಕಿಶನ್ ಆರೋಪಿಯಾಗಿದ್ದಾನೆ. ಈತನ ಮಗ ನೇಣು ಬಿಗಿದುಕೊಂಡು ಆತ್ಮಹ್ಯೆ ಮಾಡಿಕೊಂಡಿದ್ದಾನೆ. ಮಗನನ್ನು ಕಳೆದುಕೊಂಡಿದ್ದ ಕೋಪವನ್ನು ಸೊಸೆಯ ಮೇಲೆ ತಿರಿಸಿಕೊಳ್ಳಲು ಆಕೆಯನ್ನು ಕೊಲೆ ಮಾಡಿದ್ದಾನೆ. ಇದನ್ನೂ ಓದಿ: ಗಾನಗಂಧರ್ವ ಭಾಗವತ ಪದ್ಯಾಣ ಗಣಪತಿ ಭಟ್ ಇನ್ನಿಲ್ಲ
ಮೀರತ್ನಲ್ಲಿರುವ ತನ್ನ ಕಚೇರಿಯಲ್ಲಿ ರಾಮ್ ಕಿಶನ್ ಮಗ ಆತ್ಮಹತ್ಯೆಗೆ ಶರಣಾಗಿದ್ದನು. ಮಗ ಅಮಿತ್ ಬನ್ಸಾಲ್ ಒಳಾಂಗಣ ವಿನ್ಯಾಸಕಾರನಾಗಿ( Interior Designer) ಕೆಲಸ ಮಾಡುತ್ತಿದ್ದ. ತನ್ನ ಮಗನ ಸಾವಿನಿಂದ ಕೋಪಗೊಂಡ ರಾಮ್ ಕಿಶನ್ ತನ್ನ ಸೊಸೆಯನ್ನು ಕಟ್ಟರ್ ನಿಂದ ಹೊಡೆದು ಬನ್ಸಾಲ್ ಕಚೇರಿಯಲ್ಲಿ ಗಂಭೀರವಾಗಿ ಗಾಯಗೊಳಿಸಿದ್ದನು. ಇಡೀ ಘಟನೆಯು ಕಚೇರಿಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಇದನ್ನೂ ಓದಿ: ನವರಾತ್ರಿ ಸ್ಪೆಷಲ್ ತುಪ್ಪದ ಜಿಲೇಬಿ ಮಾಡೋದು ಹೇಗೆ?
ಘಟನೆ ನಡೆದ ದಿನ ಪಿಂಕಿ ತನ್ನ ಪತಿ ಅಮಿತ್ ಬನ್ಸಾಲ್‍ಗೆ ಕರೆ ಮಾಡಿದರೂ ಆತ ಕರೆ ಸ್ವೀಕರಿಸಿರಲಿಲ್ಲ. ನಂತರ ಆತನ ಕಚೇರಿಗೆ ಹೋದಾಗ ಅಮಿತ್ ನೇಣು ಬಿಗಿದ ಸ್ಥಿತಿಯಲ್ಲಿ ಕಂಡಿದ್ದನು. ಈ ವೇಳೆ ಪಿಂಕಿ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾಳೆ. ಆಗ ಮಾವ ಕೂಡ ಕಚೇರಿಗೆ ಬಂದಿದ್ದಾನೆ. ಮಗನ ಸಾವನ್ನು ಕಂಡು ಕೆಂಡಾಮಂಡಲನಾಗಿದ್ದಾನೆ. ರಾಮ್ ಕಿಶನ್ ಕೋಪದಿಂದ ಪಿಂಕಿಯನ್ನು ಥಳಿಸಿ, ಕಟ್ಟರ್ ನಿಂದ ಅವಳ ಮೇಲೆ ಹಲ್ಲೆ ಮಾಡಿದನು. ಆಗ ಸ್ಥಳಕ್ಕೆ ನೌಚಂಡಿ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಗಾಯಗೊಂಡಿದ್ದ ಪಿಂಕಿಯನ್ನು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಪಿಂಕಿ ಸಾವನ್ನಪಿದ್ದಾಳೆ.
ಕೊಲೆ ಪ್ರಕರಣವನ್ನು ದಾಖಲಿಸಿಕೊಂಡು ರಾಮ್ ಕಿಶನ್‍ನನ್ನು ಮೀರತ್ ಪೊಲೀಸರು ಬಂಧಿಸಿದ್ದಾರೆ. ಪಿಂಕಿ ಗಾಜಿಯಾಬಾದ್ ಮೂಲದವಳಾಗಿದ್ದು, ಮೃತ ದಂಪತಿಗೆ 8 ತಿಂಗಳ ಮಗಳಿದ್ದಾಳೆ.
ಮಂಗಳೂರು: ತೆಂಕುತಿಟ್ಟು ಯಕ್ಷಗಾನ ರಂಗದ ಅಗ್ರಮಾನ್ಯ ಭಾಗವತರಾದ ಪದ್ಯಾಣ ಗಣಪತಿ ಭಟ್ ಅವರು ಇಂದು ಬೆಳಿಗ್ಗೆ ತಮ್ಮ ಮನೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ಗಣಪತಿ ಭಟ್ ಅವರಿಗೆ 66 ವರ್ಷ ವಯಸ್ಸಾಗಿತ್ತು. ಇಂದು ಸುಳ್ಯ ತಾಲೂಕಿನ ಕಲ್ಮಡ್ಕದಲ್ಲಿರುವ ಸ್ವಗೃಹದಲ್ಲಿ ಬೆಳಗ್ಗೆ 7:45ಕ್ಕೆ ಹೃದಯಾಘಾತದಿಂದ ಸಾವನ್ನಪಿದ್ದಾರೆ. ಪತ್ನಿ ಹಾಗೂ ಇಬ್ಬರು ಪುತ್ರರನ್ನು ಅಗಲಿದ್ದಾರೆ. ತಮ್ಮದೇ ಶೈಲಿಯ ಮೂಲಕ ರಂಗದಲ್ಲಿ ಹಾಡಿ ಕಲಾವಿದರನ್ನು ಹುರಿದುಂಬಿಸುತ್ತಿದ್ದ ಪದ್ಯಾಣರನ್ನು ಕಳೆದುಕೊಂಡ ಯಕ್ಷಗಾನ ರಂಗವು ಬಡವಾಗಿದೆ.
ಹಿನ್ನೆಲೆ:
ಸುಳ್ಯ ತಾಲೂಕು ಕಲ್ಮಡ್ಕ ಗ್ರಾಮದ ಗೋಳ್ತಾಜೆಯಲ್ಲಿ ಜನಿಸಿದ ಗಣಪತಿ ಭಟ್ ಮೂಲತಃ ಬಂಟ್ವಾಳ ತಾಲೂಕು ಕರೋಪಾಡಿ ಗ್ರಾಮದ ಪದ್ಯಾಣ ಕುಟಂಬದವರಾಗಿದ್ದಾರೆ. ಯಕ್ಷಗಾನ ರಂಗಕ್ಕೆ ಪದ್ಯಾಣ ಮನೆತನದ ಕೊಡುಗೆ ಅಪಾರ. ಈ ಮನೆತನದ ಪದ್ಯಾಣ ತಿರುಮಲೇಶ್ವರ ಭಟ್ಟ ಮತ್ತು ಸಾವಿತ್ರಿ ದಂಪತಿಯ ಮೂರನೇ ಮಗನಾಗಿ 1955ರಲ್ಲಿ ಗಣಪತಿ ಭಟ್ ಜನಿಸಿದ್ದರು. ಆ ಕಾಲದಲ್ಲಿ ಭಾಗವತಿಕೆಗೆ ಹೆಸರಾಗಿದ್ದ ಅಜ್ಜ ಪುಟ್ಟು ನಾರಾಯಣ ಭಟ್ಟರಿಂದಲೇ ಭಾಗವತಿಕೆಯ ಪ್ರಾಥಮಿಕ ಪಾಠ ಪಡೆದಿದ್ದರು. ಇದನ್ನೂ ಓದಿ: ನವರಾತ್ರಿ ಸ್ಪೆಷಲ್ ತುಪ್ಪದ ಜಿಲೇಬಿ ಮಾಡೋದು ಹೇಗೆ?
ಬಾಲ್ಯದಲ್ಲೇ ಯಕ್ಷಗಾನದತ್ತ ಆಸಕ್ತರಾಗಿದ್ದ ಇವರು ಧರ್ಮಸ್ಥಳದಲ್ಲಿ ಯಕ್ಷಗಾನ ತರಬೇತಿ ಕೇಂದ್ರದಲ್ಲಿ ಗುರು ಮಾಂಬಾಡಿ ನಾರಾಯಣ ಭಾಗವತರ ಬಳಿ ಭಾಗವತಿಕೆ ಅಭ್ಯಾಸ ಮಾಡಿದರು. ಬಳಿಕ ಸುಮಾರು 35 ವರ್ಷಕ್ಕೂ ಅಧಿಕ ಕಾಲ ವಿವಿಧ ಯಕ್ಷಗಾನ ಮೇಳಗಳಲ್ಲಿ ವ್ಯವಸಾಯ ಮಾಡಿದರು.
ಪ್ರಶಸ್ತಿ, ಪ್ರಸಂಗಗಳ ಜನಪ್ರಿಯತೆ:
ಸುರತ್ಕಲ್ ಮೇಳದಲ್ಲಿದ್ದಾಗ ನಾಟ್ಯರಾಣಿ ಶಾಂತಲೆ, ಪಾಪಣ್ಣ ವಿಜಯ, ಕಡುಗಲಿ ಕುಮಾರರಾಮ, ರಾಜಾ ಯಯಾತಿ ಮೊದಲಾದ ಪ್ರಸಂಗಗಳು ಜನಪ್ರಿಯವಾಗಿದ್ದವು. ಮಂಗಳಾದೇವಿ, ಕರ್ನಾಟಕ, ಹೊಸನಗರ, ಹನುಮಗಿರಿ ಮೇಳಗಳಲ್ಲಿ ಪ್ರಧಾನ ಭಾಗವತರಾಗಿ ಬಹುಬೇಡಿಕೆಯ ಕಲಾವಿದರಾಗಿದ್ದರು. ಅವರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸಹಿತ ಹಲವು ಪ್ರಶಸ್ತಿ ಸನ್ಮಾನಗಳು ಇವರಿಗೆ ಬಂದಿವೆ.
ಕಲಾ ಸೇವೆ:
ಯಕ್ಷರಂಗದ ಭೀಷ್ಮ ಎಂದು ಕರೆಸಿಕೊಂಡಿರುವ ಡಾ| ಶೇಣಿ ಗೋಪಾಲಕೃಷ್ಣ ಭಟ್ಟ, ಯಕ್ಷರಂಗದ ಮತ್ತೊಬ್ಬ ವಿದ್ವಾಂಸ ಶಂಕರನಾರಾಯಣ ಸಾಮಗ, ತೆಕ್ಕಟ್ಟೆ ಆನಂದ ಮಾಸ್ತರ್, ಕುಂಬ್ಳೆ ಸುಂದರ ರಾವ್ ಮೊದಲಾದ ಕಲಾವಿದರೊಂದಿಗೆ ಸುರತ್ಕಲ್ ಮೇಳದಲ್ಲಿ ಪದ್ಯಾಣರು ತಮ್ಮ ಇಂಪಾದ ಕಂಠ, ಏರು ಶ್ರುತಿ, ಭಾವನಾತ್ಮಕ ಗಾಯನದಿಂದ ಯಕ್ಷರಂಗಕ್ಕೆ ತಮ್ಮದೇ ಆದ ಶೈಲಿಯ ಕೊಡುಗೆ ನೀಡಿದರು. ನಾಲ್ಕು ದಶಕಗಳಿಂದ ಅವರ ಯಕ್ಷಗಾನ ಕಲಾಯಾನ ಮುಂದುವರಿದಿತ್ತು. ಸರ್ವಜನಮಾನ್ಯರಾದ, ಸಜ್ಜನ ಪದ್ಯಾಣರು ಗಾನಗಂಧರ್ವರೆಂದೇ ಖ್ಯಾತರಾದವರು. ಇಂದು ಇವರ ನಿಧನದಿಂದ ಯಕ್ಷಗಾನದ ಅಮೂಲ್ಯ ಕೊಂಡಿಯೊಂದು ಕಳಚಿಬಿದ್ದಂತಾಗಿದೆ.
ಹೈದರಾಬಾದ್: ಟಾಲಿವುಡ್ ನಟ ನಾಗಚೈತನ್ಯ, ಸಮಂತಾ ವೈವಾಹಿಕ ಸಂಬಂಧ ಮುರಿದು ಬಿದ್ದು ಹಲವು ದಿನಗಳಾಗಿವೆ. ಆದರೆ ಈ ಜೋಡಿ ಬೇರೆಯಾಗುತ್ತಿದ್ದಂತೆ ಹಲವು ವಿಚಾರಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿವೆ. ಇದಕ್ಕೆ ಇನ್ನೊಂದು ವಿಚಾರ ಸೆರ್ಪಡೆಯಾಗಿದೆ.
ವಿಚ್ಛೇದನ ಪಡೆದುಕೊಳ್ಳುತ್ತಿದ್ದಂತೆ ಟೀಕೆಗಳು ಕೇಳಿ ಬಂದಿದ್ದವು. ಆದರೆ ಇದೀಗ ಈ ಜೋಡಿ ಸಂಬಂಧ ಮುರಿದು ಬೀಳಲು ಸಮಂತಾರ ಸ್ಟೈಲಿಸ್ಟ್ ಪ್ರೀತಂ ಜುಕಾಲ್ಕರ್ ಎಂಬ ವದಂತಿ ಹಬ್ಬಿದ್ದು, ಅದರ ಬೆನ್ನಲ್ಲೆ ಪ್ರೀತಂಗೆ ಸಾಮಾಜಿಕ ಜಾಲತಾಣದಲ್ಲಿ ಜೀವ ಬೆದರಿಕೆ ಕರೆಗಳು ಬರ ತೊಡಗಿವೆಯಂತೆ.
ನಾಗಚೈತನ್ಯ ಅವರ ಅಭಿಮಾನಿಗಳು ಕೊಲೆ ಬೆದರಿಕೆ ಹಾಕುತ್ತಿದ್ದು, ಅವಹೇಳನ ಮಾಡುತ್ತಿದ್ದಾರೆ. ಇದರಿಂದ ಮಾನಸಿಕವಾಗಿ ನಾನು ಕುಗ್ಗಿದ್ದೇನೆ. ತಮ್ಮ ಅಭಿಮಾನಿಗಳಿಗೆ ಈ ರೀತಿ ಮಾಡಬೇಡಿ ಎಂದು ನಾಗಚೈತನ್ಯ ಅವರು ಸೂಚಿಸಬೇಕು ಎಂದಿದ್ದಾರೆ. ಇದನ್ನೂ ಓದಿ: ನಾನು ನನ್ನನ್ನು ಬದಲಾಯಿಸಿಕೊಳ್ಳಬೇಕು: ಸಮಂತಾ
ಜುಕಾಲ್ಕರ್ ಸ್ಟೈಲಿಸ್ಟ್ ಅಷ್ಟೇ ಅಲ್ಲದೆ ಸಮಂತಾಗೆ ಆತ್ಮೀಯ ಗೆಳಯನು ಆಗಿದ್ದಾನೆ. ಅವರಿಬ್ಬರ ಫೋಟೋಗಳಿಂದಾಗಿ ಈ ಇಬ್ಬರ ಮಧ್ಯೆ ಸಂಬಂಧವಿದೆ ಎನ್ನುವ ವಂದಂತಿ ಹಬ್ಬಿತ್ತು. ಈ ವಿಚಾರವಾಗಿ ಸಮಂತಾ ಸ್ಟೈಲಿಸ್ಟ್ ಪ್ರೀತಂ ತೆರೆ ಎಳೆದಿದ್ದಾರೆ.
ಹೈದರಾಬಾದ್: ನಟಿ ಶ್ರಿಯಾ ಶರಣ್‍ಗೆ ಹೆಣ್ಣು ಮಗು ಜನಿಸಿದೆ. ಈ ವಿಚಾರವನ್ನು 2 ವರ್ಷಗಳ ನಂತರ ಅಭಿಮಾನಿಗಳ ಜೊತೆಗೆ ಹಂಚಿಕೊಂಡಿದ್ದಾರೆ. ಇಷ್ಟು ತಡವಾಗಿ ವಿಷಯವನ್ನು ಹಂಚಿಕೊಳ್ಳಲು ಕಾರಣವೇನು ಎಂದು ಸ್ಪಷ್ಟಪಡಿಸಿದ್ದಾರೆ.
2020ರ ಕ್ವಾರಂಟೈನ್ ತುಂಬಾನೇ ಅದ್ಭುತವಾಗಿತ್ತು. ಇಡೀ ಪ್ರಪಂಚವು ಕಷ್ಟದಲ್ಲಿ ಸಾಗುತ್ತಿರುವಾಗ, ನಮ್ಮ ಪ್ರಪಂಚವು ಬದಲಾಯಿತು. ನಮಗೆ ಆ ಸಂದರ್ಭದಲ್ಲಿ ಹೆಣ್ಣುಮಗುವಾಗಿದೆ ಎಂದು ಬರೆದುಕೊಂಡು ಒಂದು ವೀಡಿಯೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಹಂಚಿಕೊಂಡಿದ್ದಾರೆ. ಈ ವಿಚಾರ ಕೇಳಿ ಅಭಿಮಾನಿಗಳು ನಿಜಕ್ಕೂ ಅಚ್ಚರಿ ವ್ಯಕ್ತಪಡಿಸಿದ್ದಾರೆ. ನಟಿಗೆ ಕೆಲವು ಪ್ರಶ್ನೆಗಳು ಎದುರಾಗಿವೆ. ಕೋವಿಡ್ ಲಾಕ್‍ಡೌನ್ ಸಮಯದಲ್ಲಿ ನಮ್ಮ ಕುಟುಂಬಕ್ಕೆ ಹೊಸ ಅತಿಥಿ ಬಂದಿರುವ ವಿಚಾರವನ್ನು ತಿಳಿಸುವುದು ಸೂಕ್ತವಾಗಿರಲಿಲ್ಲ ಎಂದು ಈ ಬಗ್ಗೆ ತಿಳಿಸದಕ್ಕೆ ಕಾರಣ ಹೇಳಿದ್ದಾರೆ. ಇದನ್ನೂ ಓದಿ: ಯಶ್ ಹೇರ್ ಸ್ಟೈಲ್‍ಗೆ ಅಭಿಮಾನಿಗಳು ಫಿದಾ
2001ರಲ್ಲಿ ಚಿತ್ರರಂಗಕ್ಕೆ ಕಾಲಿಟ್ಟ ಶ್ರಿಯಾ ಶರಣ್‍ಗೆ 2020ರ ಲಾಕ್‍ಡೌನ್ ಸಂದರ್ಭದಲ್ಲಿಯೇ ಮಗು ಜನಿಸಿತ್ತು. ಆದರೆ ಈ ವಿಚಾರವನ್ನು ಅವರು ಎಲ್ಲಿಯೂ ಹೇಳಿಕೊಂಡಿರಲಿಲ್ಲ. ಮಗು ಜನಿಸಿ ಸುಮಾರು ಎರಡು ವರ್ಷ ಆಗುತ್ತಾ ಬಂದಿದೆ. ಈಗ ಶ್ರಿಯಾ ಈ ವಿಚಾರ ಬಿಚ್ಚಿಟ್ಟಿದ್ದಾರೆ. 2 ವರ್ಷಗಳ ನಂತರ ಈ ವಿಚಾರವಾಗಿ ಬಾಯಿ ಬಿಟ್ಟಿರುವುದಕ್ಕೆ ಅಭಿಮಾನಿಗಳೂ ನಿಜಕ್ಕೂ ಆಶ್ಚರ್ಯವನ್ನು ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ:ಯಶ್ ಜೊತೆ ಸೆಲ್ಫಿಗೆ ಮುಗಿಬಿದ್ದ ಮುಂಬೈ ಅಭಿಮಾನಿಗಳು
ನಟಿ ಶ್ರಿಯಾ ಹೆಣ್ಣು ಮಗುವಿನ ತಾಯಿಯಾಗಿದ್ದಾರೆ. ರಷ್ಯಾದ ಗೆಳೆಯ ಆಂಡ್ರೆ ಕೊಶ್ಚೆವ್ ಜೊತೆ 2018ರಲ್ಲಿ ದಾಂಪತ್ಯ ಜೀವನಕ್ಕೆ ಕಾಲಿರಿಸಿದ್ದರು. ಶ್ರಿಯಾ 2020ರಲ್ಲಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಾರೆ. ಆದರೆ ಈ ವಿಚಾರವನ್ನು ಅವರು ಅಭಿಮಾನಿಗಳಿಗೆ ಇಂದು ಬಹಿರಂಗಪಡಿಸಿದ್ದಾರೆ. ಇದನ್ನೂ ಓದಿ:ಸಖತ್ ಸ್ಟೈಲಿಶ್ ಆಗಿ ಮುಂಬೈನಲ್ಲಿ ಕಾಣಿಸಿಕೊಂಡ ಯಶ್
ಶ್ರಿಯಾ ಕನ್ನಡ ಸಿನಿಮಾಗಳಲ್ಲಿಯೂ ನಟಿಸಿದ್ದಾರೆ. ಚಂದ್ರ, ಅರಸು ಸಿನಿಮಾ ಮೂಲಕವಾಗಿ ಕನ್ನಡ ಅಭಿಮಾನಿಗಳ ಪ್ರೀತಿಯನ್ನು ಸಂಪಾದಿಸಿಕೊಂಡಿದ್ದಾರೆ. ಈ ನಟಿ ಇದೀಗ ತಮ್ಮ ಮಗುವಿನ ಲಾಲನೆ ಪಾಲನೆಯಲ್ಲಿ ತೊಡಗಿಸಿಕೊಂಡಿದ್ದಾರೆ.
ದಿಸ್ಪುರ: ಉಚಿತವಾಗಿ ಕೊರೊನಾ ಲಸಿಕೆ ನೀಡುತ್ತಿರುವ ಕಾರಣ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗಿದೆ ಎಂದು ಪೆಟ್ರೋಲಿಯಂ ಖಾತೆ ರಾಜ್ಯ ಸಚಿವ ರಾಮೇಶ್ವರ್ ತೇಲಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೆಟ್ರೋಲ್ ದುಬಾರಿಯಲ್ಲ. ಕೇಂದ್ರ ಮತ್ತು ರಾಜ್ಯಗಳು ವಿಧಿಸುತ್ತಿರುವ ತೆರಿಗೆಯಿಂದಾಗಿ ದುಬಾರಿಯಾಗುತ್ತಿದೆ. ನೀವೆಲ್ಲರೂ ಉಚಿತವಾಗಿ ಕೊರೊನಾ ಲಸಿಕೆ ಪಡೆದಿದ್ದೀರಿ. ಅದನ್ನು ಪೂರೈಸಲು ಹಣ ಎಲ್ಲಿಂದ ಬಂದಿತ್ತು? ದೇಶದ 130 ಕೋಟಿ ಜನರಿಗೆ ಉಚಿತವಾಗಿ 2 ಡೋಸ್ ಲಸಿಕೆ ನೀಡಲು ಸರ್ಕಾರ ನಿರ್ಧರಿಸಿದೆ. ಪ್ರತಿ ಡೋಸ್ ಲಸಿಕೆಗೆ 1,200 ರೂ. ವೆಚ್ಚವಾಗುತ್ತದೆ. ಇದು ಸರ್ಕಾರಕ್ಕೆ ಹೊರೆಯಾಗಲಿದೆ. ಲಸಿಕೆ ಹಣವನ್ನು ಪೆಟ್ರೋಲ್ ತೆರಿಗೆ ಮೂಲಕವಾಗಿ ಪಡೆದುಕೊಳ್ಳಲಾಗುತ್ತಿದೆ ಎಂದಿದ್ದಾರೆ. ಇದನ್ನೂ ಓದಿ:ಬೆಂಗ್ಳೂರು ಮಾತ್ರವಲ್ಲ ಜಿಲ್ಲೆಗಳಲ್ಲಿಯೂ ಭಾರೀ ಮಳೆ- ಎಲ್ಲೆಲ್ಲಿ ಏನೇನಾಗಿದೆ?