ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಮತ್ತೆ ಪರಿಷ್ಕರಣೆಗೊಂಡಿದೆ. ಇದೀಗ ಅಂತಿಮ ವೇಳಾಪಟ್ಟಿಯನ್ನು ಪಿಯುಸಿ ಬೋರ್ಡ್ ಪ್ರಕಟಿಸಿದೆ.
ಈಗಾಗಲೇ ಪಿಯುಸಿ ಬೋರ್ಡ್ ತಾಂತ್ರಿಕ ಕಾರಣ ನೀಡಿ 3-4 ಬಾರಿ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಿದೆ. ಇದೀಗ ಪರಿಷ್ಕೃತ ವೇಳಾಪಟ್ಟಿ ಪ್ರಕಟಗೊಂಡಿದ್ದು, ಏಪ್ರಿಲ್ 22 ರಿಂದ ಮೇ 18ರ ವರೆಗೆ ಪರೀಕ್ಷೆಗಳು ನಡೆಯಲಿದೆ. ಇದನ್ನೂ ಓದಿ: ಆಂಧ್ರಪ್ರದೇಶದ ಎಲ್ಲಾ ಸಚಿವರು ರಾಜೀನಾಮೆ
ಪರಿಷ್ಕೃತ ವೇಳಾಪಟ್ಟಿ ಹೀಗಿದೆ:
ಏಪ್ರಿಲ್ 22- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
ಏಪ್ರಿಲ್ 23- ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ
ಏಪ್ರಿಲ್ 25- ಅರ್ಥಶಾಸ್ತ್ರ
ಏಪ್ರಿಲ್ 26- ರಸಾಯನಶಾಸ್ತ್ರ, ಹಿಂದುಸ್ಥಾನಿ ಸಂಗೀತ, ಮನಃಶಾಸ್ತ್ರ, ಮೂಲ ಗಣಿತ
ಏಪ್ರಿಲ್ 27- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
ಏಪ್ರಿಲ್ 28- ಕನ್ನಡ, ಅರೇಬಿಕ್
ಮೇ 4- ಭೂಗೋಳಶಾಸ್ತ್ರ, ಜೀವಶಾಸ್ತ್ರ
ಮೇ 5- ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
ಮೇ 6- ಇಂಗ್ಲಿಷ್
ಮೇ 10- ಇತಿಹಾಸ, ಭೌತಶಾಸ್ತ್ರ
ಮೇ 12- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮೇ 14- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
ಮೇ 17- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
ಮೇ 18- ಹಿಂದಿ ಇದನ್ನೂ ಓದಿ: ಮಕ್ಕಳಲ್ಲಿ ಹೆಚ್ಚಿದ ಅಪೌಷ್ಟಿಕತೆ: 3 ವಾರಗಳಲ್ಲಿ ವರದಿ ಸಲ್ಲಿಸುವಂತೆ `ಹೈ’ ಸೂಚನೆ
ಬೆಂಗಳೂರು: ಕೊರೊನಾದಿಂದಾಗಿ ರಾಜ್ಯದಲ್ಲಿ ದ್ವೀತಿಯ ಪಿಯುಸಿ ಪರೀಕ್ಷೆ ರದ್ದುಗೊಂಡಿದೆ. ಪಬ್ಲಿಕ್ ಟಿವಿಯ ಸಲಗೆ ಸ್ವೀಕರಿಸಿರುವ ಶಿಕ್ಷಣ ಇಲಾಖೆ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳನ್ನು ಪಾಸ್ ಮಾಡಲು ಸರ್ಕಾರ ಹೊಸ ಮಾನದಂಡವನ್ನು ಪ್ರಕಟಿಸಿದೆ.
ನಿನ್ನೆ ಶಿಕ್ಷಣ ಸಚಿವರಾದ ಸುರೇಶ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ರಾಜ್ಯದಲ್ಲಿ ದ್ವೀತಿಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗಿದೆ. ಎಲ್ಲಾ ವಿದ್ಯಾರ್ಥಿಗಳು ಗ್ರೇಡ್ ಆಧಾರದಲ್ಲಿ ಪಾಸ್ ಮಾಡಲು ಸರ್ಕಾರ ನಿರ್ಧಾರ ಮಾಡಿದೆ ಎಂದಿದ್ದರು. ಆದರೆ ಇಂದು ಎಲ್ಲಾ ವಿದ್ಯಾರ್ಥಿಗಳ ಪಾಸ್ ಮಾಡಲು ಮಾನದಂಡದಲ್ಲಿ ಕೆಲ ಬದಲಾವಣೆಯನ್ನು ತರಲು ಸರ್ಕಾರ ನಿರ್ಧರಿಸಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು
ಇದೇ ವಿಚಾರವಾಗಿ ಪಬ್ಲಿಕ್ ಟಿವಿಯ ಮುಖ್ಯಸ್ಥರಾದ ಹೆಚ್.ಆರ್.ರಂಗನಾಥ್ ರವರು ನಡೆಸಿಕೊಡುವ ಬಿಗ್ ಬುಲೆಟಿನ್ ನಲ್ಲಿ ನಿನ್ನೆ ಪ್ರಥಮ ಪಿಯುಸಿ ಜೊತೆಗೆ ಎಸ್‌ಎಸ್‌ಎಲ್‌ಸಿ ಅಂಕಗಳನ್ನು ಪರಿಗಣಿಸಿ ಅಂತ ಸಲಹೆ ನೀಡಿದ್ರು. ಸಲಹೆಯನ್ನ ಸ್ವೀಕಾರ ಮಾಡಿರುವ ಶಿಕ್ಷಣ ಸಚಿವರು ಎಸ್‌ಎಸ್‌ಎಲ್‌ಸಿ ಅಂಕಗಳನ್ನು ಪರಿಗಣಿಸಿ ಗ್ರೇಡ್ ಮಾನದಂಡ ಸಿದ್ದ ಮಾಡಿ ಅಂತ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ. ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ, ಪಿಯುಸಿ ಬೋರ್ಡ್ ನಿರ್ದೇಕರು ಹಾಗೂ ಎಸ್ಎಸ್ಎಲ್ಸಿ ಬೋರ್ಡ್ ನಿರ್ದೇಶಕರಿಗೆ ಪತ್ರ ಬರೆದು ಮಾನದಂಡ ರೂಪಿಸಲು ಸೂಚನೆ ನೀಡಿದ್ದಾರೆ.
ಸರ್ಕಾರ ಮತ್ತು ಶಿಕ್ಷಣ ಇಲಾಖೆಯ ಪ್ರಕಾರ ದ್ವಿತೀಯ ಪಿಯುಸಿ ತೇರ್ಗಡೆ ಹೊಂದಲು ವಿದ್ಯಾರ್ಥಿಯ ಪ್ರಥಮ ಪಿಯುಸಿ ಪರೀಕ್ಷೆಯ ಅಂಕಗಳ ಜೊತೆಗೆ ಎಸ್‍ಎಸ್‍ಎಲ್‍ಸಿ ಅಂಕಗಳು ಸೇರಿ ಮಾನದಂಡ ಇಟ್ಟುಕೊಂಡು ಫಲಿತಾಂಶ ನೀಡಲು ಸರ್ಕಾರದ ತೀರ್ಮಾನಿಸಿದೆ.
ವಿದ್ಯಾರ್ಥಿಗಳ ಪ್ರಥಮ ಪಿಯುಸಿ ಮತ್ತು ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳ ಎಷ್ಟು ಪ್ರಮಾಣದಲ್ಲಿ ಅಂಕ ಪರಿಗಣನೆ ಮಾಡಬೇಕು ಎಂದು ನಿರ್ಧಾರ ವಾಗಿಲ್ಲ. ಶೀಘ್ರವೇ ಈ ಕುರಿತು ಪಿಯುಸಿ ಬೋರ್ಡ್ ಸರಿಯಾದ ನಿರ್ಧಾರ ತೆಗೆದುಕೊಂಡು ಮಾರ್ಗಸೂಚಿ ಬಿಡುಗಡೆ ಮಾಡುವುದಾಗಿ ತಿಳಿಸಿದೆ.
ಕಳೆದ ವರ್ಷ ತಜ್ಞರು ನೀಡಿದ ಸಲಹೆಯ ಆಧಾರದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ನಡೆದಿತ್ತು. ಪಿಯುಸಿ ವಿದ್ಯಾರ್ಥಿ ಜೀವನದ ಮಹತ್ವದ ಘಟ್ಟ. ಆದೆ ಕೊರೊನಾ ಕಾಲದಲ್ಲಿ ಪರೀಕ್ಷೆ ನಡೆಸುವುದು ಬಹಳ ಅಪಾಯಕಾರಿ. ಪರೀಕ್ಷೆ ನಡೆಸದೇ ಹೋದರೂ ಸರ್ಕಾರಕ್ಕೆ ಸಮಸ್ಯೆಯಾಗಲಿದೆ. ಒಟ್ಟಿನಲ್ಲಿ ಪರೀಕ್ಷೆ ಎಂಬ ಅಡಕತ್ತರಿಯಲ್ಲಿ ಶಿಕ್ಷಣ ಇಲಾಖೆ ಸಿಲುಕಿತ್ತು.
ಪರೀಕ್ಷೆ ಇಲ್ಲದೆ ಪಾಸ್ ಏನಾಗಬಹುದು?
ಶೈಕ್ಷಣಿಕ ಗುಣಮಟ್ಟಕ್ಕೆ ಭಾರೀ ಹೊಡೆತ ಬೀಳುವುದರ ಜೊತೆಗೆ ಬಡ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಬಹುದು. ನೀಟ್, ಸಿಇಟಿ ಸೀಟ್ ಹಂಚಿಕೆಯಲ್ಲಿ ಭಾರೀ ಗೊಂದಲವಾಗಲಿದೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಪರೀಕ್ಷೆಯ ಬಳಿಕ ವಿದ್ಯಾರ್ಥಿಗಳು ಕೋರ್ಟ್ ಮೆಟ್ಟಿಲು ಏರಬಹುದು. ಅತ್ಯುತ್ತಮ ಕಾಲೇಜುಗಳಲ್ಲಿ ಪ್ರವೇಶಕ್ಕೆ ಸಿಕ್ಕಾಪಟ್ಟೆ ಬೇಡಿಕೆ ಸೃಷ್ಟಿಯಾಗಬಹುದು. ಕೆಲ ವಿದ್ಯಾರ್ಥಿಗಳು ಮಾನಸಿಕ ಖಿನ್ನತೆಗೆ ಒಳಗಾಗಬಹುದು. ಇದನ್ನೂ ಓದಿ: ಸುರೇಶ್ ಕುಮಾರ್ ಆತ್ಮವಂಚನೆ ಮಾಡಿಕೊಂಡು ಪಿಯುಸಿ ಪರೀಕ್ಷೆ ರದ್ದು ಮಾಡಿದ್ದಾರೆ – ಅಮರೇಗೌಡ
ಪರೀಕ್ಷೆ ನಡೆಸಿದ್ರೆ ಏನಾಗಬಹುದು?
ಶಿಕ್ಷಕರು, ವಿದ್ಯಾರ್ಥಿಗಳಿಗೆ ಕೋವಿಡ್ ಅಪಾಯವಾಗಿ ಸೋಂಕು ಸ್ಫೋಟ ಆಗಬಹುದು. ಕೋವಿಡ್ ಸಾವು ನೋವು ಹೆಚ್ಚಾಗಬಹುದು.
ತಜ್ಞರು ಏನು ಹೇಳಿದ್ರು?
ಕೊರೊನಾ ಸಮಯದಲ್ಲಿ ಪರೀಕ್ಷೆ ನಡೆಸುವುದು ಸೂಕ್ತ ಅಲ್ಲ. ಪರೀಕ್ಷೆಗೆ ಸರ್ಕಾರ ಆತುರ ಪಡಬಾರದು. ಪರೀಕ್ಷೆ ಮಾಡಲೇಬೇಕು ಅಂದರೆ ಸೋಂಕು ನಿಯಂತ್ರಣಗೊಂಡ ಬಳಿಕ ನಡೆಸಬಹುದು. ಶಾಲಾ-ಕಾಲೇಜುಗಳ ಹಂತದಲ್ಲಿಯೇ ಆಫ್‍ಲೈನ್ ಬದಲು ಆನ್‍ಲೈನ್ ಪರೀಕ್ಷೆ ನಡೆಸಬೇಕು.
ಪರೀಕ್ಷೆ ಬೇಡ ಎನ್ನುವವರ ವಾದ ಏನು?
ಕೊರೊನಾ ಪರಿಸ್ಥಿತಿಯಲ್ಲಿ ಪರೀಕ್ಷೆ ನಡೆಸಬಾರದು. ಮಕ್ಕಳ ಶಿಕ್ಷಣಕ್ಕಿಂತ ಮಕ್ಕಳ ಜೀವ ನಮಗೆ ಮುಖ್ಯ. ಈ ಕೊರೊನಾ ವರ್ಷದಲ್ಲಿ ಪರೀಕ್ಷೆಯೇ ಬೇಡ. ಸಿಬಿಎಸ್‍ಇ ಮಾದರಿಯಲ್ಲಿ ಎಲ್ಲರನ್ನು ಪಾಸ್ ಮಾಡಿ.
ಪರೀಕ್ಷೆ ಬೇಕು ಎನ್ನುವವರ ವಾದ ಏನಿತ್ತು?
ಸರ್ಕಾರ ಪರೀಕ್ಷೆ ರದ್ದು ಮಾಡಬಾರದು. ಸೆಕೆಂಡ್ ಪಿಯುಸಿ ಪರೀಕ್ಷೆ ಮುಖ್ಯ. ಸಾಮೂಹಿಕವಾಗಿ ಪಾಸ್ ನಿರ್ಧಾರ ಸರಿಯಲ್ಲ. ಒಂದು ವೇಳೆ ಎಲ್ಲರನ್ನೂ ಪಾಸ್ ಮಾಡಿದರೆ ಅಷ್ಟು ವಿದ್ಯಾರ್ಥಿಗಳಿಗೆ ಪಿಯು ಕಾಲೇಜುಗಳಲ್ಲಿ ಸೀಟ್ ಸಿಗಲಾರದು. ಬೇಡಿಕೆ ಜಾಸ್ತಿಯಾದರೆ ಕಾಲೇಜುಗಳೇ ಪರೀಕ್ಷೆ ನಡೆಸಿ ಪ್ರವೇಶ ನೀಡಬಹುದು. ಹೀಗಾಗಿ ಸೋಂಕು ನಿಯಂತ್ರಣಕ್ಕೆ ಬಂದ ಮೇಲೆ ಪರೀಕ್ಷೆ ನಡೆಸಬೇಕಾಗುತ್ತದೆ. ಇಲ್ಲ ಅಂದ್ರೆ ನೀಟ್, ಸಿಇಟಿ ವೇಳೆ ಮಕ್ಕಳಿಗೆ ತೊಂದರೆ ಆಗುತ್ತದೆ.
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಡುವೆ ಪಿಯುಸಿ ಪೂರಕ ಪರೀಕ್ಷಾ ದಿನಾಂಕವನ್ನು ಪ್ರಕಟ ಮಾಡಿ ಪಿಯುಸಿ ಬೋರ್ಡ್ ಆದೇಶ ಹೊರಡಿಸಿದೆ.
ಜುಲೈ 16 ರಿಂದ 27ರ ಒಳಗೆ ಪರೀಕ್ಷೆ ಮುಗಿಸಲು ಪಿಯುಸಿ ಬೋರ್ಡ್ ಸೂಚನೆ ನೀಡಿದೆ. ಜಿಲ್ಲಾ ಮಟ್ಟ ಮತ್ತು ತಾಲೂಕು ಮಟ್ಟದಲ್ಲಿ ಆಯಾ ಕಾಲೇಜುಗಳಲ್ಲಿ ಪರೀಕ್ಷೆ ನಡೆಸಲು ಅನುಮತಿ ನೀಡಲಾಗಿದೆ. ಜೊತೆಗೆ ಕಾಲೇಜುಗಳು ಅಗತ್ಯ ವೇಳಾಪಟ್ಟಿ ರಚನೆ ಮಾಡಿಕೊಂಡು ಪೂರಕ ಪರೀಕ್ಷೆ ನಡೆಸಬೇಕಾಗಿದೆ. ಹೀಗಾಗಿ ಪಿಯುಸಿ ಬೋರ್ಡ್ ಘೋಷಣೆ ಮಾಡಿದ ದಿನಾಂಕದ ಒಳಗೆ ಪರೀಕ್ಷೆ ಮುಗಿಸಬೇಕು.
ಕೊರೊನಾ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮವಹಿಸಿ ಪರೀಕ್ಷೆ ನಡೆಸಲು ಪಿಯುಸಿ ಬೋರ್ಡ್ ಸೂಚನೆ ನೀಡಿದೆ.
* ಪರೀಕ್ಷಾ ಕೇಂದ್ರದಲ್ಲಿ ಅಗತ್ಯ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು
* ಕಡ್ಡಾಯವಾಗಿ ಪರೀಕ್ಷೆ ಮುಗಿದ ನಂತರ ಕೇಂದ್ರದ ಕೊಠಡಿಗೆ ಸ್ಯಾನಿಟೈಸ್ ಮಾಡಿಸಬೇಕು
* ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ಯಾನಿಂಗ್ ಕಡ್ಡಾಯವಾಗಿ ಮಾಡಬೇಕು
* ವಿದ್ಯಾರ್ಥಿಗಳು ಕೂಡ ಮಾಸ್ಕ್ ಧರಿಸಿ ಪರೀಕ್ಷೆಗೆ ಹಾಜರಾಗಬೇಕು
* ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಸ್ಯಾನಿಟೈಸ್ ಬಳಸಬೇಕು
* ಪರೀಕ್ಷಾ ಕೇಂದ್ರದಲ್ಲಿ ಗುಂಪು ಸೇರದಂತೆ ಅಗತ್ಯ ಕ್ರಮವಹಿಸಬೇಕು
* ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಬಾಕ್ಸ್ ಗಳ ವ್ಯವಸ್ಥೆ ಮಾಡಬೇಕು
* ಪೋಷಕರು ಪರೀಕ್ಷಾ ಕೇಂದ್ರದ ಬಳಿ ಸೇರದಂತೆ ಮುಂಜಾಗ್ರತಾ ಕ್ರಮವಹಿಸಬೇಕು
ಹೀಗೆ ಅನೇಕ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡ ಜುಲೈ 27ರ ಒಳಗೆ ಪ್ರಥಮ ಪಿಯುಸಿ ಪೂರಕ ಪರೀಕ್ಷೆ ಮುಗಿಸಿರಬೇಕು ಎಂದು ಪಿಯುಸಿ ಬೋರ್ಡ್ ಘೋಷಣೆ ತಿಳಿಸಿದೆ. ವಿದ್ಯಾರ್ಥಿಗಳಿಗೆ ಮಾತ್ರವಲ್ಲದೇ ಪರೀಕ್ಷಾ ಸಿಬ್ಬಂದಿ ಕೂಡ ಅಗತ್ಯ ಮುಂಜಾಗ್ರತಾ ಕ್ರಮವಹಿಸಬೇಕಾಗಿದೆ.
ಇನ್ನೂ ಕಂಟೈನ್ಮೆಂಟ್ ಝೋನ್‍ನಿಂದ ಬರುವವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಕೊಡಬೇಕು. ಬೇರೆ ಕಾಯಿಲೆ ಇರುವವರಿಗೂ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸಬೇಕು. ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಂಡು ಪರೀಕ್ಷೆ ನಡೆಸಬೇಕು ಎಂದು ಪಿಯುಸಿ ಬೋರ್ಡ್ ಆದೇಶ ಹೊರಡಿಸಿದೆ.
ಬೆಂಗಳೂರು: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟಿದ್ದ ದ್ವಿತೀಯ ಪಿಯುಸಿ ಇಂಗ್ಲೀಷ್ ಪರೀಕ್ಷೆ ಇಂದು ನಡೆಯಿತು. ಆದರೆ ಕೋವಿಡ್-19 ಭಯದಿಂದ 27,022 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರಾಗಿದ್ದಾರೆ.
ರಾಜ್ಯದಲ್ಲಿ ಒಟ್ಟು 5,95,997 ವಿದ್ಯಾರ್ಥಿಗಳು ಪರೀಕ್ಷೆ ತೆಗೆದುಕೊಂಡಿದ್ದರು. ಆದರೆ 5,68,975 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆ ಬರೆದಿದ್ದಾರೆ. ಜೊತೆಗೆ ಹೊರ ರಾಜ್ಯದ 1,889 ವಿದ್ಯಾರ್ಥಿಗಳ ಪರೀಕ್ಷೆ ಬರೆದರೆ, 18,529 ವಿದ್ಯಾರ್ಥಿಗಳು ಅಂತರ್ ಜಿಲ್ಲೆಯಲ್ಲಿ ಪರೀಕ್ಷೆ ಬರೆದಿದ್ದಾರೆ ಎಂದು ಪಿಯುಸಿ ಬೋರ್ಡ್ ಅಧಿಕೃತ ಮಾಹಿತಿ ನೀಡಿದೆ.
ಯಾವ ಜಿಲ್ಲೆ ಎಷ್ಟು ಗೈರು?:
ಕೊರೊನಾ ಭೀತಿಯಿಂದಾಗಿ ಪರೀಕ್ಷೆಗೆ ಅನೇಕ ವಿದ್ಯಾರ್ಥಿಗಳು ಗೈರಾಗಿದ್ದಾರೆ. ಅದರಲ್ಲೂ ದೇಶದಲ್ಲಿಯೇ ಕೊರೊನಾ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದ ಜಿಲ್ಲೆ ಕಲಬುರಗಿ ಹಾಗೂ ಸಿಲಿಕಾನ್ ಸಿಟಿ ಬೆಂಗಳೂರಿನ ಹೆಚ್ಚಿನ ವಿದ್ಯಾರ್ಥಿಗಳು ಪರೀಕ್ಷೆ ಗೈರಾಗಿದ್ದಾರೆ.
ಬೆಂಗಳೂರು ಉತ್ತರ – 1646
ಬೆಂಗಳೂರು ದಕ್ಷಿಣ- 1675
ಬೆಂಗಳೂರು ಗ್ರಾಮಾಂತರ- 341
ರಾಮನಗರ- 488
ಬಳ್ಳಾರಿ- 1261
ಚಿಕ್ಕೋಡಿ- 1359
ಬೆಳಗಾವಿ- 1044
ಬಾಗಲಕೋಟೆ- 696
ಉತ್ತರ ಕನ್ನಡ- 435
ಕೊಪ್ಪಳ- 463
ರಾಯಚೂರು- 1347
ದಕ್ಷಿಣ ಕನ್ನಡ- 466
ಉಡುಪಿ- 163
ಶಿವಮೊಗ್ಗ- 538
ತುಮಕೂರು- 1457
ಕೊಡಗು- 140
ಪರೀಕ್ಷೆ ಮುಕ್ತಾಯದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಪಿಯುಸಿ ನಿರ್ದೇಶಕ ಡಾ.ರೇಜು, ಮಾರ್ಚ್ ನಲ್ಲಿ ನಡೆಯಬೇಕಿದ್ದ ಪರೀಕ್ಷೆ ಇಂದು ಸುಸೂತ್ರವಾಗಿ ನಡೆದಿದೆ. ಯಾವುದೇ ಸಮಸ್ಯೆ ಆಗಿಲ್ಲ. 5.95 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದಾರೆ. ಅಗತ್ಯ ಮುಂಜಾಗ್ರತಾ ಕ್ರಮಗಳನ್ನ ಎಲ್ಲಾ ಕೇಂದ್ರದಲ್ಲಿ ಮಾಡಿದ್ದೆವು. ಸ್ಯಾನಿಟೈಸರ್, ಮಾಸ್ಕ್, ಥರ್ಮಲ್ ಸ್ಕ್ಯಾನಿಂಗ್ ಮಾಡಿದ್ದೇವೆ. ಯಾವುದೇ ಸಮಸ್ಯೆ ಇಲ್ಲದೆ ಪರೀಕ್ಷೆ ಮುಕ್ತಾಯವಾಗಿದೆ. ಪರೀಕ್ಷೆಗೆ ಗೈರಾದವರ ಬಗ್ಗೆ ಮಾಹಿತಿ ಸಂಗ್ರಹಿಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.
ಬೆಂಗಳೂರು: ದಿನೇ ದಿನೇ ರಾಜ್ಯದಲ್ಲಿ ಕೊರೊನಾ ವೈರಸ್ ಹರಡುವಿಕೆ ಹೆಚ್ಚಳ ಆಗುತ್ತಾನೆ ಇದೆ. ಕೊರೊನಾ ನಿಯಂತ್ರಣಕ್ಕೆ ಸರ್ಕಾರ ಕೂಡ ಅನೇಕ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದೆ. ಈಗಾಗಲೇ 1-6 ನೇ ತರಗತಿಗೆ ಪರೀಕ್ಷೆ ರದ್ದು ಮಾಡಿದೆ. ಮಾರ್ಚ್ 31ವರೆಗೆ 7-9 ನೇ ತರಗತಿವರೆಗಿನ ಪರೀಕ್ಷೆ ಮುಂದೂಡಿದೆ. ಈಗಾಗಲೇ ದ್ವೀತಿಯ ಪಿಯುಸಿ ಪರೀಕ್ಷೆ ನಡೆಯುತ್ತಿದ್ದು, ಕೊರೊನಾ ಸೊಂಕು ತಡೆಗೆ ಹೊಸದಾಗಿ ಹೆಚ್ಚುವರಿ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳಲು ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಪಿಯುಸಿ ಬೋರ್ಡ್ ಹೊಸದಾಗಿ ಸುತ್ತೋಲೆ ಹೊರಡಿಸಿದೆ.
ರಾಜ್ಯದಲ್ಲಿ 1016 ಕೇಂದ್ರಗಳಲ್ಲಿ ಪರೀಕ್ಷೆ ನಡೆಯುತ್ತಿದೆ. ಎಲ್ಲಾ ಕೇಂದ್ರಗಳಲ್ಲಿ ಹೆಚ್ಚುವರಿ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಪಿಯುಸಿ ಬೋರ್ಡ್ ಸುತ್ತೋಲೆ ಹೊರಡಿಸಿದೆ. 9 ಅಂಶಗಳ ಮುಂಜಾಗ್ರತಾ ಕ್ರಮಗಳನ್ನು ಇಲಾಖೆ ಹೊರಡಿಸಿದ್ದು, ಎಲ್ಲಾ ಪರೀಕ್ಷಾ ಕೇಂದ್ರಗಳು ಕಡ್ಡಾಯವಾಗಿ ಪಾಲನೆ ಮಾಡಲು ಪಿಯುಸಿ ಬೋರ್ಡ್ ಸೂಚನೆ ನೀಡಿದೆ.
ಮುನ್ನೆಚ್ಚರಿಕೆ ಕ್ರಮಗಳು
1. ಪರೀಕ್ಷಾ ಕೇಂದ್ರಕ್ಕೆ ವಿದ್ಯಾರ್ಥಿಗಳು ವಿವಿಧ ತಂಡಗಳಲ್ಲಿ ಚದುರಿದ ರೀತಿಯಲ್ಲಿ ಪ್ರವೇಶಿಸುವಂತೆ ಕ್ರಮವಹಿಸುವುದು.
2. ವಿವಿಧ ಸಮಯದಲ್ಲಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸಲು ಸಮಯ ನಿಗದಿ ಮಾಡುವುದು.
3. ವಿದ್ಯಾರ್ಥಿಗಳು ಕೊಠಡಿ ಪ್ರವೇಶಿಸುವ ಮುನ್ನ ಕೈಗಳನ್ನು ಸ್ವಚ್ಛಗೊಳಿಸಲು ಸೂಚಿಸುವುದು.
4. ಪರೀಕ್ಷಾ ಕೇಂದ್ರದಲ್ಲಿ ಸ್ಯಾನಿಟೈಸರ್, ಸಾಬೂನು, ನೀರಿನ ವ್ಯವಸ್ಥೆ ಹೆಚ್ಚು ಪ್ರಮಾಣದಲ್ಲಿ ಒದಗಿಸುವುದು.
5. ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದ ಬಳಿ ಗುಂಪು ಸೇರಿದಂತೆ ನೋಡಿಕೊಳ್ಳುವದು.
6. ಜ್ವರ, ಕೆಮ್ಮು, ನೆಗಡಿ ಇರೋ ವಿದ್ಯಾರ್ಥಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಸುವುದು.
7. ವಿದ್ಯಾರ್ಥಿಗಳು ಮಾಸ್ಕ್ ಧರಿಸಿ ಪರೀಕ್ಷೆ ಬರೆಯಲು ಅವಕಾಶ ಕೊಡುವುದು.
8. ಅಗತ್ಯ ಸಂದರ್ಭದಲ್ಲಿ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯರ ಸಲಹೆ ಪಡೆಯುವುದು.
ಬೆಂಗಳೂರು: ಪ್ರಸಕ್ತ ವರ್ಷದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ ಕರ್ನಾಟಕ ಪಿಯುಸಿ ಬೋರ್ಡ್‌ನಿಂದ ಅಧಿಕೃತವಾಗಿ ಪ್ರಕಟವಾಗಿದೆ.
ಆಕ್ಷೇಪಣೆ ಸಲ್ಲಿಸಲು ಪಿಯುಸಿ ಬೋರ್ಡ್ ಸೂಚನೆ ನೀಡಿದ್ದು, ಅಕ್ಟೋಬರ್ 31ರ ಒಳಗೆ ಆಕ್ಷೇಪಣೆ ಸಲ್ಲಿಸಲು ಅವಕಾಶವಿದೆ. 2020ರ ಮಾರ್ಚ್ 4ರಿಂದ ಮಾರ್ಚ್ 19ವರೆಗೆ ಪಿಯುಸಿ ಪರೀಕ್ಷೆ ನಡೆಯಲಿದೆ ಎಂದು ತಾತ್ಕಾಲಿಕ ವೇಳಾಪಟ್ಟಿ ಪ್ರಕಟಿಸಲಾಗಿದೆ.
ಪಿಯುಸಿ ತಾತ್ಕಾಲಿಕಾ ವೇಳಾಪಟ್ಟಿ:
ಮಾರ್ಚ್ 4 – ಇತಿಹಾಸ, ಭೌತಶಾಸ್ತ್ರ, ಬೇಸಿಕ್ ಗಣಿತ
ಮಾರ್ಚ್ 5 – ತಮಿಳು, ತೆಲುಗು, ಮಲೆಯಾಳಂ, ಮರಾಠಿ, ಅರೇಬಿಕ್, ಫ್ರೆಂಚ್
ಮಾರ್ಚ್ 6 – ಉರ್ದು, ಸಂಸ್ಕೃತ
ಮಾರ್ಚ್ 7 – ತರ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಶಿಕ್ಷಣ, ಗೃಹ ವಿಜ್ಞಾನ
ಮಾರ್ಚ್ 9 – ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಗಣಿತ
ಮಾರ್ಚ್ 10 – ಎನ್.ಎಸ್.ಕ್ಯೂ.ಎಫ್(NSQF)
ಮಾರ್ಚ್ 11 – ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
ಮಾರ್ಚ್ 12 – ವ್ಯವಹಾರ ಅಧ್ಯಯನ, ಸಮಾಜಶಾಸ್ತ್ರ, ರಸಾಯನಶಾಸ್ತ್ರ
ಮಾರ್ಚ್ 13 – ಭೂಗೋಳಶಾಸ್ತ್ರ, ಕರ್ನಾಟಿಕ್ ಸಂಗೀತ, ಹಿಂದೂಸ್ಥಾನಿ ಸಂಗೀತ
ಮಾರ್ಚ್ 14 – ಮನಃಶಾಸ್ತ್ರ, ಎಲೆಕ್ಟ್ರಾನಿಕ್ಸ್, ಗಣಕ ವಿಜ್ಞಾನ
ಮಾರ್ಚ್ 16 – ಅರ್ಥಶಾಸ್ತ್ರ, ಜೀವಶಾಸ್ತ್ರ
ಮಾರ್ಚ್ 17 – ಹಿಂದಿ
ಮಾರ್ಚ್ 18 – ಕನ್ನಡ
ಮಾರ್ಚ್ 19 – ಇಂಗ್ಲಿಷ್
ಬೆಂಗಳೂರು: ನೆರೆಯಿಂದ ಅಂಕಪಟ್ಟಿ ಕಳೆದುಕೊಂಡಿರುವ ವಿದ್ಯಾರ್ಥಿಗಳ ನೆರವಿಗೆ ಪಿಯುಸಿ ಬೋರ್ಡ್ ಧಾವಿಸಿದೆ.
ಅಂಕಪಟ್ಟಿ ಕಳೆದುಕೊಂಡ ವಿದ್ಯಾರ್ಥಿಗಳಿಗೆ ಹೊಸದಾಗಿ ಅಂಕಪಟ್ಟಿ ನೀಡಲು ಪಿಯುಸಿ ಬೋರ್ಡ್ ನಿರ್ಧಾರ ಮಾಡಿದೆ. ಈ ಸಂಬಂಧ ಆದೇಶ ಹೊರಡಿಸಿರುವ ಪಿಯುಸಿ ಬೋರ್ಡ್, ಅಂಕಪಟ್ಟಿ ಕಳೆದುಕೊಂಡಿರುವ ವಿದ್ಯಾರ್ಥಿಗಳು ಆಯಾ ಜಿಲ್ಲಾ ಉಪ ನಿರ್ದೇಶಕರ ಕಚೇರಿಗೆ ಹೋಗಿ ಹೊಸ ಅಂಕಪಟ್ಟಿಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಿದ ನಂತರ ಹೊಸ ಅಂಕಪಟ್ಟಿ ನೀಡಲಾಗುತ್ತೆ ಎಂದು ಬೋರ್ಡ್ ತಿಳಿಸಿದೆ.
ನೆರೆ ಜಿಲ್ಲೆಗಳಲ್ಲಿ ಪ್ರಥಮ ಪಿಯುಸಿಗೆ ದಾಖಲಾತಿಯಾಗುವ ದಿನಾಂಕವನ್ನು ಆಗಸ್ಟ್ 23ವರೆಗೂ ದಿನಾಂಕ ವಿಸ್ತರಣೆ ಮಾಡಿದೆ. ಇದರ ಜೊತೆಗೆ ನೆರೆ ಜಿಲ್ಲೆಗಳ ಶೈಕ್ಷಣಿಕ-ಮೂಲಭೂತ ಸೌಕರ್ಯಗಳ ಅಭಿವೃದ್ಧಿಗೆ ಪಿಯುಸಿ ಬೋರ್ಡ್ ಸಮಿತಿಗಳ ನೇಮಕ ಮಾಡಿದೆ.
ಜಿಲ್ಲೆಯ ಉಪ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಸಮತಿ ರಚನೆ ಆಗಿದ್ದು, ಸರ್ಕಾರಿ ಹಾಗೂ ಖಾಸಗಿ ಕಾಲೇಜುಗಳ 5 ಜನ ಪ್ರಾಂಶುಪಾಲರು ಸಮಿತಿಯ ಸದಸ್ಯರಾಗಲಿದ್ದಾರೆ. ಈ ಸಮಿತಿ ನೆರೆ ಜಿಲ್ಲೆಗಳ ಶೈಕ್ಷಣಿಕ, ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಅಗತ್ಯ ಕ್ರಮ ಕೈಗೊಳ್ಳಲಿದೆ ಅಂತ ಪಿಯುಸಿ ಬೋರ್ಡ್ ತಿಳಿಸಿದೆ.
ಬಳ್ಳಾರಿ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ರ್‍ಯಾಂಕ್ ಪಡೆಯುವುದು ಸಾಮಾನ್ಯ ವಿಷಯವಲ್ಲ. ಆದರೆ ಇಂದು ಕಾಲೇಜಿನಲ್ಲಿ ಪ್ರವೇಶಾತಿ ಸಿಕ್ಕರೆ ಸಾಕು ಪಿಯುಸಿ ಕಲಾ ಮಾಧ್ಯಮದಲ್ಲಿ ರ್‍ಯಾಂಕ್ ಕಟ್ಟಿಟ್ಟ ಬುತ್ತಿ.
ಹೌದು. ಪಿಯು ಬೋರ್ಡ್ ಇಂದು ಅತಿ ಹೆಚ್ಚು ಅಂಕಗಳಿಸಿದ ಟಾಪ್ 10 ವಿದ್ಯಾರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಈ ಪಟ್ಟಿಯಲ್ಲಿ 9 ಸ್ಥಾನಗಳನ್ನು ಈ ಕಾಲೇಜಿನ ವಿದ್ಯಾರ್ಥಿಗಳು ಪಡೆದುಕೊಂಡಿರುವುದು ವಿಶೇಷ. 2006ರಲ್ಲಿ ಸಣ್ಣದಾಗಿ ಆರಂಭವಾದ ಈ ಕಾಲೇಜಿನಲ್ಲಿ ಈಗ ಪ್ರವೇಶ ಪಡೆಯಲು ಕ್ಯೂ ನಿಲ್ಲಬೇಕು. ಅಷ್ಟೊಂದು ದೊಡ್ಡಮಟ್ಟದಲ್ಲಿ ರಾಜ್ಯದಲ್ಲೇ ಹೆಸರು ಮಾಡಿದೆ ಈ ಕಾಲೇಜು.
2006ರಲ್ಲಿ ಆರಂಭವಾದ ಕಾಲೇಜಿನಲ್ಲಿ ಅಂದು ಕೇವಲ 80 ವಿದ್ಯಾರ್ಥಿಗಳಿದ್ದರು. ಆದರೆ ಇಂದು ಈ ಕಾಲೇಜಿನಲ್ಲಿ ಬರೋಬ್ಬರಿ 4500 ಹೆಚ್ಚು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ನೂರಕ್ಕೂ ಹೆಚ್ಚು ನುರಿತ ಪ್ರಾಧ್ಯಾಪಕರು ವಿದ್ಯಾರ್ಥಿಗಳಿಗೆ ಇಲ್ಲಿ ಬೋಧಿಸುತ್ತಿದ್ದಾರೆ.
ಕಳೆದ 5 ವರ್ಷದಿಂದ ತಪ್ಪದೇ ಕಲಾ ಹಾಗೂ ಶಿಕ್ಷಣ ವಿಭಾಗದಲ್ಲಿ ಈ ಕಾಲೇಜಿಗೆ ರ್‍ಯಾಂಕ್ ದೊರೆಯುತ್ತಿದೆ. ಈ ವರ್ಷವು ಸಹ ಕಲಾ ವಿಭಾಗದ ಮೊದಲ ಹತ್ತು ರ್ಯಾಂಕ್‍ಗಳಲ್ಲಿ ಈ ಕಾಲೇಜಿಗೆ 9 ರ್‍ಯಾಂಕ್ ದೊರೆತಿವೆ. ಈ ವರ್ಷ 594 ಅಂಕ ಪಡೆಯುವ ಮೂಲಕ ಇಂದು ಕಾಲೇಜಿನ ವಿದ್ಯಾರ್ಥಿನಿ ಕುಸುಮಾ ಉಜ್ಜನಿ ರಾಜ್ಯಕ್ಕೆ ಮೊದಲ ರ್‍ಯಾಂಕ್ ಪಡೆದಿದ್ದಾಳೆ. ಈ ವಿದ್ಯಾರ್ಥಿನಿ ತಂದೆಯ ಜೊತೆಗೆ ಪಂಕ್ಚರ್ ಅಂಗಡಿಯಲ್ಲಿ ಕೆಲಸ ಮಾಡುತ್ತಾ ವಿದ್ಯಾಭ್ಯಾಸ ಮಾಡಿ ರಾಜ್ಯಕ್ಕೆ ಮೊದಲ ರ್‍ಯಾಂಕ್ ಪಡೆದಿರುವುದು ಮತ್ತೊಂದು ವಿಶೇಷವಾಗಿದೆ.
ಟಾಪ್ – 10 ವಿದ್ಯಾರ್ಥಿಗಳು ಮತ್ತು ಅಂಕಗಳು 1. ಕುಸುಮಾ ಉಜ್ಜಿನಿ – 594 2. ಹೊಸಮನಿ ಚಂದ್ರಪ್ಪ- 591 3. ನಾಗರಾಜ್ – 591 4. ಓಮೇಶ್ – 591 5. ಸಚಿನ್ ಕೆಜಿ – 589 6. ಸುರೇಶ್ ಎಚ್ – 589 8. ಹರಿಜನ ಸೊಪ್ಪಿನ ಉಚ್ಚಂಗೆಮ್ಮ – 588 9. ಕೋನಾಪುರ ಮಠದ ನಂದೀಶ್ – 588. 10. ಅಂಗಡಿ ಸರಸ್ವತಿ -587
ಇಂದು ಪಿಯು ಕಾಲೇಜಿನ ಓದಿದ ನೇತ್ರಾವತಿ 579 ಅಂಕ ಪಡೆದು 2015ರಲ್ಲಿ ರಾಜ್ಯಕ್ಕೆ ಪ್ರಥಮ ರ್‍ಯಾಂಕ್ ಪಡೆದಿದ್ದಳು. 2016ರಲ್ಲಿ ಅನಿತಾ ಪಿ 585 ಅಂಕ ಪಡೆದು ರಾಜ್ಯಕ್ಕೆ ಮೊದಲಿಗಳಾಗಿ ಹೊರಹೊಮ್ಮಿದ್ದಳು. 2017ರಲ್ಲಿ ಚೈತ್ರಾ 589 ಅಂಕ ಪಡೆದು ಫಸ್ಟ್ ರ್‍ಯಾಂಕ್ ಗಳಿಸಿದ್ದಳು. 2018ರಲ್ಲಿ ಸ್ವಾತಿ ಎಸ್ 595 ಅಂಕ ಪಡೆದು ಕಲಾವಿಭಾಗದಲ್ಲಿ ರಾಜ್ಯಕ್ಕೆ ಫಸ್ಟ್ ರ್‍ಯಾಂಕ್ ಪಡೆದಿದ್ದಳು.
ಈ ವರ್ಷ ಸೇರಿದಂತೆ ಕಳೆದ ಐದು ವರ್ಷದಿಂದ ಈ ಕಾಲೇಜಿನ ವಿದ್ಯಾರ್ಥಿನಿಯರೇ ರ್‍ಯಾಂಕ್ ಪಡೆದುಕೊಂಡೇ ಬರುತ್ತಿದ್ದಾರೆ. ನುರಿತ ಪ್ರಾಧ್ಯಾಪಕರು ವಿದ್ಯಾರ್ಥಿಗಳಿಗೆ ಉತ್ತಮ ರೀತಿಯಲ್ಲಿ ಪಾಠ ಮಾಡುವುದು ಹಾಗೂ ವಿದ್ಯಾರ್ಥಿಗಳಿಗೆ ಪರೀಕ್ಷೆ ಪೂರ್ವವಾಗಿ ಮೇಲಿನಿಂದ ಮೇಲೆ ಪೂರ್ವ ಪರೀಕ್ಷೆಗಳನ್ನು ನಡೆಸುವುದು. ರ್‍ಯಾಂಕ್ ಪಡೆಯಲು ಬರವಣಿಗೆ ಹೇಗಿರಬೇಕು ಅನ್ನೋ ಬಗ್ಗೆ ಮನದಟ್ಟು ಮಾಡಿಕೊಡುತ್ತಾರೆ. ಪಠ್ಯಕ್ಕೆ ಸಂಭದಿಸಿದ ವಿಷಯವಲ್ಲದೇ ಸಾಮಾನ್ಯ ಜ್ಞಾನದ ಬಗ್ಗೆಯೂ ವಿದ್ಯಾರ್ಥಿಗಳಿಗೆ ಪಾಠ ಮಾಡಿ ವಿದ್ಯಾರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಗಳ ಬಗ್ಗೆ ಮಾಹಿತಿ ನೀಡುತ್ತಿರುವುದು ಕಾಲೇಜಿನ ವಿಶೇಷವಾಗಿದೆ.
ವಿದ್ಯಾರ್ಥಿಗಳಿಗೆ ರ್‍ಯಾಂಕ್ ಕೊಡಿಸುವುದರ ಜೊತೆ ಬಡ ವಿದ್ಯಾರ್ಥಿಗಳಿಗೂ ಸಹ ಈ ಕಾಲೇಜಿನಲ್ಲಿ ಹಲವರಿಗೆ ಉಚಿತವಾಗಿ ಪ್ರವೇಶಾತಿ ನೀಡಿ ವಿದ್ಯಾರ್ಥಿಗಳ ಭವಿಷ್ಯ ರೂಪಿಸುತ್ತಿದೆ.
ಬೆಂಗಳೂರು: ಪದವಿ ಪೂರ್ವ ಕಾಲೇಜ್‍ನಲ್ಲಿ ಮೊಬೈಲ್, ಲ್ಯಾಪ್‍ಟಾಪ್ ಬ್ಯಾನ್ ನಿರ್ಧಾರವನ್ನು ಸಮ್ಮಿಶ್ರ ಸರ್ಕಾರ ಹಿಂಪಡೆದಿದೆ.
ಪಿಯು ಕಾಲೇಜು ಆವರಣದಲ್ಲಿ ವಿದ್ಯಾರ್ಥಿಗಳು ಮೊಬೈಲ್ ಫೋನ್ ಮತ್ತು ಲ್ಯಾಪ್‍ಟಾಪ್ ಬಳಕೆ ಮಾಡುವಂತಿಲ್ಲ ಎಂದು ಪಿಯುಸಿ ಬೋರ್ಡ್ ಪಿಯುಸಿ ಆದೇಶ ಹೊರಡಿಸಿತ್ತು. ಈ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾವಿ ಅವರು ಸಲಹೆ ನೀಡಿದ್ದರು. ಪಿಯುಸಿ ಬೋರ್ಡ್ ಈ ಆದೇಶ ಜಾರಿಗೆ ತರುವಂತೆ ಎಲ್ಲಾ ಉಪ ನಿರ್ದೇಶಕರಿಗೆ ಸುತ್ತೋಲೆ ಹೊರಡಿಸಲಾಗಿತ್ತು. ಆದೇಶದ ಪ್ರತಿ ಪಬ್ಲಿಕ್ ಟಿವಿ ಗೆ ಲಭ್ಯವಾಗುತ್ತಿದ್ದಂತೆ ಸುದ್ದಿ ಪ್ರಸಾರ ಮಾಡಿತ್ತು. ಇದರಿಂದ ಎಚ್ಚೆತ್ತುಕೊಂಡ ಸರ್ಕಾರ ಆದೇಶವನ್ನು ರದ್ದು ಮಾಡಿದೆ.
ಮೊಬೈಲ್ ಫೋನ್ ಮತ್ತು ಲ್ಯಾಪ್‍ಟಾಪ್ ಬ್ಯಾನ್ ಮಾಡಿರುವ ಸರ್ಕಾರ ಧೋರಣೆ ವಿರುದ್ಧ ಶಾಸಕ ಸಿ.ಟಿ.ರವಿ ಕಿಡಿಕಾರಿದ್ದರು. ಬಳಕೆಯ ಕುರಿತು ಜಾಗೃತಿ ಮೂಡಿಸಬೇಕು. ಅದನ್ನು ಬಿಟ್ಟು ಈ ನಿರ್ಧಾರ ತೆಗೆದುಕೊಂಡಿರುವುದು ಖಂಡನೀಯ ಎಂದು ಹೇಳಿದ್ದರು.
ಸರ್ಕಾರ ಹಾಗೂ ಪಿಯುಸಿ ಬೋರ್ಡ್ ನಿರ್ಧಾರಕ್ಕೆ ಸಾರ್ವಜನಿಕ ವಲಯದಲ್ಲಿಯೂ ಭಾರೀ ಚರ್ಚೆಯಾಗಿತ್ತು. ಮೊಬೈಲ್ ಓಕೆ ಲ್ಯಾಪ್‍ಟಾಪ್ ಬ್ಯಾನ್ ಯಾಕೆ ಎಂದು ಪ್ರಶ್ನೆ ಮಾಡಿ ತರಾಟೆಗೆ ತೆಗೆದುಕೊಳ್ಳುತ್ತಿದ್ದರು. ಸರ್ಕಾರವೇ ಪದವಿ ಕಾಲೇಜ್ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ನೀಡುತ್ತಿದೆ. ಆದರೆ ಪದವಿಯಲ್ಲಿ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ಬ್ಯಾನ್ ಮಾಡದೇ ಪಿಯುಸಿಯಲ್ಲಿ ಬ್ಯಾನ್ ಮಾಡಿದೆ ಎಷ್ಟು ಸರಿ ಎಂದು ಪ್ರಶ್ನಿಸಿ ಜನ ತರಾಟೆಗೆ ತೆಗೆದುಕೊಳ್ಳುತ್ತಿದ್ದರು.
ಬೆಂಗಳೂರು: ಸಮ್ಮಿಶ್ರ ಸರ್ಕಾರ ಪಿಯುಸಿ ವಿದ್ಯಾರ್ಥಿಗಳಿಗೆ ಶಾಕಿಂಗ್ ನ್ಯೂಸ್ ನೀಡಿದ್ದು, ಇನ್ನು ಮುಂದೆ ಕಾಲೇಜುಗಳಲ್ಲಿ ಮೊಬೈಲ್ ಬ್ಯಾನ್ ಮಾಡಲು ಮುಂದಾಗಿದೆ.
ಪಿಯುಸಿ ಬೋರ್ಡ್ ಪಿಯುಸಿ ವಿದ್ಯಾರ್ಥಿಗಳಿಗೆ ಮೊಬೈಲ್ ಫೋನ್ ಮತ್ತು ಲ್ಯಾಪ್‍ಟಾಪ್ ನಿಷೇಧ ಮಾಡಿದ್ದು, ಇದರಿಂದ ಪಿಯುಸಿ ಬೋರ್ಡ್ ವಿವಾದಕ್ಕೀಡಾಗಿದೆ. ಕಾಲೇಜು ಅವಧಿಯಲ್ಲಿ ಇನ್ನು ಮುಂದೆ ಮೊಬೈಲ್ ಫೋನ್ ಮತ್ತು ಲ್ಯಾಪ್‍ಟಾಪ್ ಬಳಸುವ ಹಾಗಿಲ್ಲ ಎಂದು ಪಿಯುಸಿ ಬೋರ್ಡ್ ಮಹತ್ವದ ಆದೇಶವನ್ನು ಹೊರಡಿಸಿದೆ. ಇದನ್ನೂ ಓದಿ: ದ್ವಿಚಕ್ರ ವಾಹನ, ಕಾರಿನಲ್ಲಿ ಕಾಲೇಜಿಗೆ ಹೋಗೋರಿಗೆ ಶಾಕಿಂಗ್ ನ್ಯೂಸ್!
ಸರ್ಕಾರಿ, ಅನುದಾನಿತ ಮತ್ತು ಖಾಸಗೀ ಕಾಲೇಜುಗಳಲ್ಲಿ ಮೊಬೈಲ್ ಹಾಗೂ ಲ್ಯಾಪ್‍ಟಾಪ್ ಬ್ಯಾನ್ ಮಾಡಲಾಗಿದೆ. ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸೂಚನೆ ಮೇರೆಗೆ ಪಿಯುಸಿ ಬೋರ್ಡ್ ಪ್ರಥಮ ಪಿಯುಸಿ ಹಾಗೂ ದ್ವೀತಿಯ ಪಿಯುಸಿ ವಿದ್ಯಾರ್ಥಿಗಳಿಬ್ಬರಿಗೂ ಮೊಬೈಲ್, ಲ್ಯಾಪ್‍ಟಾಪ್ ಬ್ಯಾನ್ ಮಾಡಿದೆ.
ಈಗಾಗಲೇ ಪಿಯುಸಿ ಬೋರ್ಡ್ ಆದೇಶ ಜಾರಿಗೆ ತರುವಂತೆ ಎಲ್ಲಾ ಉಪ ನಿರ್ದೇಶಕರಿಗೆ ಸುತ್ತೋಲೆ ಹೊರಡಿಸಿದೆ. ಪಿಯುಸಿ ಬೋರ್ಡ್ ಆದೇಶದ ಪ್ರತಿ ಪಬ್ಲಿಕ್ ಟಿವಿ ಗೆ ಲಭ್ಯವಾಗಿದೆ.
ಮೊಬೈಲ್ ಓಕೆ ಲ್ಯಾಪ್‍ಟಾಪ್ ಬ್ಯಾನ್ ಯಾಕೆ.? ಎಂದು ಪ್ರಶ್ನೆ ಮೂಡಿದೆ. ಸರ್ಕಾರವೇ ಪದವಿ ಕಾಲೇಜ್ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ನೀಡುತ್ತಿದೆ. ಆದರೆ ಪದವಿಯಲ್ಲಿ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ಬ್ಯಾನ್ ಮಾಡದೆ ಪಿಯುಸಿಯಲ್ಲಿ ಬ್ಯಾನ್ ಮಾಡಿದೆ. ಪಿಯುಸಿ ವಾಣಿಜ್ಯ ಶಾಸ್ತ್ರ ಮತ್ತು ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ಅವಶ್ಯಕವಾಗಿದೆ. ಹೀಗಿದರೂ ಲ್ಯಾಪ್‍ಟಾಪ್ ಪಿಯುಸಿ ಬೋರ್ಡ್ ನಿಷೇಧ ಮಾಡಿದೆ. ಈ ಮೂಲಕ ಸಮ್ಮಿಶ್ರ ಸರ್ಕಾರ ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ಯಾ ಎಂಬ ಮಾತು ಕೇಳಿ ಬರುತ್ತಿದೆ.