Tag: PUC College

  • ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ.1 ರಿಂದ ದ್ವಿತೀಯ ಪಿಯುಸಿ ಆರಂಭಕ್ಕೆ ಜಿಲ್ಲಾಡಳಿತ ಗ್ರೀನ್ ಸಿಗ್ನಲ್

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ.1 ರಿಂದ ದ್ವಿತೀಯ ಪಿಯುಸಿ ಆರಂಭಕ್ಕೆ ಜಿಲ್ಲಾಡಳಿತ ಗ್ರೀನ್ ಸಿಗ್ನಲ್

    ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ನಿಯಮವನ್ನು ಕಟ್ಟುನಿಟ್ಟಾಗಿ ಪಾಲಿಸಿ ಸೆ.1ರಿಂದ ದ್ವಿತೀಯ ಪಿಯುಸಿ ಭೌತಿಕ ತರಗತಿ ಆರಂಭಿಸಲು ಜಿಲ್ಲಾಡಳಿತ ಗ್ರೀನ್ ಸಿಗ್ನಲ್ ನೀಡಿದ್ದು, ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ ಅದೇಶಿಸಿದ್ದಾರೆ.

    ಎಸ್.ಒ.ಪಿ ಅನುಷ್ಠಾನ ಜಾರಿಗೊಳಿಸುವ ಜವಾಬ್ದಾರಿಯನ್ನು ಕಾಲೇಜಿನ ಪ್ರಾಂಶುಪಾಲರು ವಹಿಸುವಂತೆ ಸೂಚನೆ ನೀಡಲಾಗಿದ್ದು, ಕೇರಳದಿಂದ ಬರುವ ವಿದ್ಯಾರ್ಥಿಗಳಿಗೆ ಏಳು ದಿನ ಕ್ವಾರಂಟೈನ್ ಕಡ್ಡಾಯ ಮಾಡಲು ಜಿಲ್ಲಾಡಳಿತ ಆದೇಶಿಸಿದೆ. ಕೇರಳದಿಂದ ಪ್ರತಿದಿನ ಬರುವ ವಿದ್ಯಾರ್ಥಿಗಳಿಗೆ 7 ದಿನಕ್ಕೊಮ್ಮೆ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯವಾಗಿದ್ದು, ವಿದ್ಯಾರ್ಥಿಗಳಿಗೆ ಪೋಷಕರ ಒಪ್ಪಿಗೆ ಪತ್ರ ಕಡ್ಡಾಯ ತರಬೇಕಾಗುತ್ತದೆ. ಇದನ್ನೂ ಓದಿ: ಪೊಲೀಸ್ ಇಲಾಖೆಗೆ ಸೇರಲು ಮಂಗಳೂರಿಗರ ಹಿಂದೇಟು – ಹೊಸ ಆಫರ್ ನೀಡಿದ್ರು ಎನ್. ಶಶಿಕುಮಾರ್

    ವಸತಿ ನಿಲಯ ಹಾಗೂ ಸ್ಥಳೀಯ ವಿದ್ಯಾರ್ಥಿಗಳಿಗೆ ಪ್ರತ್ಯೇಕ ತರಗತಿ ನಡೆಸಬೇಕು. ಪಾಸಿಟಿವ್ ಬಂದ ವಿದ್ಯಾರ್ಥಿಗಳಿಗೆ ಕಾಲೇಜುಗಳಲ್ಲೇ ವಸತಿ ಸಹಿತ ಪ್ರತ್ಯೇಕ ಕೊರೊನಾ ಕೇರ್ ಸೆಂಟರ್ ಮಾಡಬೇಕು. ಸಿಬ್ಬಂದಿಗಳಿಗೆ ಕೋವಿಡ್ ನೆಗೆಟಿವ್ ಸರ್ಟಿಫಿಕೇಟ್ ಕಡ್ಡಾಯಗೊಳಿಸಬೇಕು. ಜೊತೆಗೆ ಕೊರೊನಾ ಎಸ್.ಒ.ಪಿ ಪಾಲನೆಯ ಪರಿಶೀಲನೆಗೆ ಪ್ರತ್ಯೇಕ ತಂಡ ರಚನೆ ಮಾಡಬೇಕೆಂದು ಆದೇಶಿಸಲಾಗಿದೆ. ಇದನ್ನೂ ಓದಿ: ಮೈಸೂರು ಪ್ರಕರಣದ ಬಳಿಕ ಮಂಗಳೂರು ಪೊಲೀಸರು ಹೈ ಅಲರ್ಟ್- ಸುರಕ್ಷತೆಗೆ ಮಾಸ್ಟರ್ ಪ್ಲಾನ್

  • ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ತಲೆಗೆ ಡಬ್ಬ ಕಟ್ಟಿದ್ದ ಕಾಲೇಜ್

    ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ತಲೆಗೆ ಡಬ್ಬ ಕಟ್ಟಿದ್ದ ಕಾಲೇಜ್

    ಹಾವೇರಿ: ವಿದ್ಯಾರ್ಥಿಗಳು ಕಾಪಿ ಮಾಡುತ್ತಾರೆ ಎಂದು ಕಾಲೇಜು ಆಡಳಿತ ಮಂಡಳಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿರುವ ಘಟನೆ ಹಾವೇರಿಯ ಭಗತ್ ಪಿಯುಸಿ ಕಾಲೇಜಿನಲ್ಲಿ ನಡೆದಿದೆ.

    ಪರೀಕ್ಷಾ ಹಾಲ್ ನಲ್ಲಿ ವಿದ್ಯಾರ್ಥಿಗಳು ಕಾಪಿ ಹೊಡೆಯದಂತೆ ಕಾವಲುಗಾರನಾಗಿ ಸಿಸಿಟಿವಿ ಕ್ಯಾಮೆರಾ ನೋಡಿದ್ದೇವೆ. ಆದರೆ ಹಾವೇರಿಯ ನಗರದ ದನದ ಮಾರುಕಟ್ಟೆಯ ಎದುರಿಗಿರುವ ಭಗತ್ ಪಿಯುಸಿ ಕಾಲೇಜಿನಲ್ಲಿ ಮಕ್ಕಳು ಕಾಪಿ ಮಾಡಬಾರದು ಎಂದು ತಲೆಗೆ ಡಬ್ಬ ಕಟ್ಟಿ ಪರೀಕ್ಷೆ ಬರೆಸಿದ್ದಾರೆ.

    ಗುರುವಾರ ನಡೆದ ಪಿಯುಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ತಲೆಗೆ ಡಬ್ಬ ಕಟ್ಟಿ ಕಾಲೇಜು ಆಡಳಿತ ಮಂಡಳಿ ಪರೀಕ್ಷೆ ಬರೆಸಿದೆ. ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿವೆ. ಇದನ್ನು ಕಂಡ ಡಿಡಿಪಿಐ ಅಧಿಕಾರಿ ಕಾಲೇಜು ಆಡಳಿತ ಮಂಡಳಿಯ ಈ ಕ್ರಮಕ್ಕೆ ಆಕ್ರೋಶ ವ್ಯಕ್ತ ಪಡಿಸಿದ್ದು, ಇಂದು ಸಹಜ ಸ್ಥಿತಿಯಲ್ಲಿ ಆಡಳಿತ ಮಂಡಳಿ ಪರೀಕ್ಷೆಯನ್ನು ಬರೆಸುತ್ತಿದೆ