Tag: PUC Examination

  • ದ್ವಿತೀಯ ಪಿಯುಸಿ ಎಕ್ಸಾಂಗೂ ಸಮವಸ್ತ್ರ ಕಡ್ಡಾಯ – ಹಿಜಬ್‍ಗಿಲ್ಲ ಅವಕಾಶ

    ದ್ವಿತೀಯ ಪಿಯುಸಿ ಎಕ್ಸಾಂಗೂ ಸಮವಸ್ತ್ರ ಕಡ್ಡಾಯ – ಹಿಜಬ್‍ಗಿಲ್ಲ ಅವಕಾಶ

    ಬೆಂಗಳೂರು: ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಆಗಮಿಸುವ ಎಲ್ಲ ವಿದ್ಯಾರ್ಥಿಗಳು ಸಮವಸ್ತ್ರ ಧರಿಸಿ ಪರೀಕ್ಷೆ ಬರೆಯಬೇಕು ಎಂದು ಪಿಯುಸಿ ಬೋರ್ಡ್ ಸಮವಸ್ತ್ರ ಕಡ್ಡಾಯಗೊಳಿಸಿದೆ.

    ಈ ಹಿಂದೆ ರಾಜ್ಯದಲ್ಲಿ ಹಿಜಬ್ ವಿವಾದ ಬಳಿಕ ಶಾಲಾ-ಕಾಲೇಜ್‍ಗಳಲ್ಲಿ ಸಮವಸ್ತ್ರ ಕಡ್ಡಾಯ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿತ್ತು. ಆ ಬಳಿಕ ಇದೀಗ ದ್ವಿತೀಯ ಪಿಯುಸಿ ಎಕ್ಸಾಂಗೆ ಹಿಜಬ್ ನಿಷೇಧದ ಬಗ್ಗೆ ಪಿಯುಸಿ ಬೋರ್ಡ್ ಅಧಿಕೃತ ಆದೇಶ ಹೊರಡಿಸಿದೆ. ಸರ್ಕಾರಿ ಕಾಲೇಜುಗಳಲ್ಲಿ ಕಾಲೇಜು ಅಭಿವೃದ್ಧಿ ಸಮಿತಿ ನಿಗಧಿ ಪಡಿಸಿದ ಸಮವಸ್ತ್ರ ಧರಿಸಬೇಕು. ಖಾಸಗಿ ಕಾಲೇಜುಗಳು ಕಾಲೇಜ್ ಆಡಳಿತ ಮಂಡಳಿ ನಿರ್ಧರಿಸಿದ ಸಮವಸ್ತ್ರ ಧರಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ. ಇದನ್ನೂ ಓದಿ: ದ್ವಿತೀಯ ಪಿಯುಸಿ ಪರಿಷ್ಕೃತ ವೇಳಾಪಟ್ಟಿ ಪ್ರಕಟ

    PUC EXAM

    ಈಗಾಗಲೇ ಪಿಯುಸಿ ಬೋರ್ಡ್ ತಾಂತ್ರಿಕ ಕಾರಣ ನೀಡಿ 3-4 ಬಾರಿ ವೇಳಾಪಟ್ಟಿಯನ್ನು ಪರಿಷ್ಕರಣೆ ಮಾಡಿದೆ. ಇದೀಗ ಪರಿಷ್ಕೃತ ವೇಳಾಪಟ್ಟಿ ಪ್ರಕಟಗೊಂಡಿದ್ದು, ಏಪ್ರಿಲ್ 22 ರಿಂದ ಮೇ 18ರ ವರೆಗೆ ಪರೀಕ್ಷೆಗಳು ನಡೆಯಲಿದೆ. ಇದನ್ನೂ ಓದಿ: ಶಕ್ತಿಧಾಮ ವಿದ್ಯಾಶಾಲೆಗೆ ಶಂಕುಸ್ಥಾಪನೆ – ಜೀವ ಇರೋತನಕ ಇಲ್ಲಿನ ಮಕ್ಕಳ ಜತೆ ಇರುತ್ತೇನೆ: ಶಿವಣ್ಣ

    PUC EXAM

    ಪರಿಷ್ಕೃತ ವೇಳಾಪಟ್ಟಿ ಹೀಗಿದೆ:
    ಏಪ್ರಿಲ್ 22- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ
    ಏಪ್ರಿಲ್ 23- ಗಣಿತ ಶಾಸ್ತ್ರ, ಶಿಕ್ಷಣ ಶಾಸ್ತ್ರ
    ಏಪ್ರಿಲ್ 25- ಅರ್ಥಶಾಸ್ತ್ರ
    ಏಪ್ರಿಲ್ 26- ರಸಾಯನಶಾಸ್ತ್ರ, ಹಿಂದುಸ್ಥಾನಿ ಸಂಗೀತ, ಮನಃಶಾಸ್ತ್ರ, ಮೂಲ ಗಣಿತ
    ಏಪ್ರಿಲ್ 27- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್
    ಏಪ್ರಿಲ್ 28- ಕನ್ನಡ, ಅರೇಬಿಕ್
    ಮೇ 4- ಭೂಗೋಳಶಾಸ್ತ್ರ, ಜೀವಶಾಸ್ತ್ರ
    ಮೇ 5- ಮಾಹಿತಿ ತಂತ್ರಜ್ಞಾನ, ರಿಟೈಲ್, ಆಟೋಮೊಬೈಲ್, ಹೆಲ್ತ್ ಕೇರ್, ಬ್ಯೂಟಿ ಅಂಡ್ ವೆಲ್ ನೆಸ್
    ಮೇ 6- ಇಂಗ್ಲಿಷ್
    ಮೇ 10- ಇತಿಹಾಸ, ಭೌತಶಾಸ್ತ್ರ
    ಮೇ 12- ರಾಜ್ಯಶಾಸ್ತ್ರ, ಸಂಖ್ಯಾಶಾಸ್ತ್ರ
    ಮೇ 14- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ
    ಮೇ 17- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ, ಗೃಹ ವಿಜ್ಞಾನ
    ಮೇ 18- ಹಿಂದಿ

  • ಮಾರ್ಚ್ 1 ರಿಂದ ಪಿಯುಸಿ ಪರೀಕ್ಷೆ – ಭದ್ರತೆಯ ಸಂಪೂರ್ಣ ಮಾಹಿತಿ

    ಮಾರ್ಚ್ 1 ರಿಂದ ಪಿಯುಸಿ ಪರೀಕ್ಷೆ – ಭದ್ರತೆಯ ಸಂಪೂರ್ಣ ಮಾಹಿತಿ

    ಬೆಂಗಳೂರು: ಮಾರ್ಚ್ 1 ರಿಂದ ನಡೆಯುವ ದ್ವೀತಿಯ ಪಿಯುಸಿ ಪರೀಕ್ಷೆಗೆ ಪಿಯುಸಿ ಬೋರ್ಡ್ ಸಿದ್ಧತೆ ಪೂರ್ಣಗೊಳಿಸಿದೆ. ಪರೀಕ್ಷೆಗೆ ಸಂಬಂಧಿಸಿದ ಎಲ್ಲಾ ಸಿದ್ಧತೆ ಮುಗಿಸಿದ್ದು, ಪರೀಕ್ಷಾ ಸಿದ್ಧತೆ ಬಗ್ಗೆ ಪ್ರಾಥಮಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಸುದ್ದಿಗೋಷ್ಠಿ ನಡೆಸಿದ್ದಾರೆ.

    ಈ ವರ್ಷ ಕಳೆದ ವರ್ಷಕ್ಕಿಂತ ಸುಮಾರು 12 ಸಾವಿರ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ ಸಂಪೂರ್ಣ ಸಿಸಿಟಿವಿ ಅಳವಡಿಕೆ ಮಾಡಲಾಗುತ್ತೆ. ಪೊಲೀಸ್ ಭದ್ರತೆಯಲ್ಲಿ ಈ ಬಾರಿಯೂ ಪರೀಕ್ಷೆ ನಡೆಯುತ್ತಿದೆ. ಇನ್ನೂ ಪ್ರಶ್ನೆ ಪತ್ರಿಕೆ ಲೀಕ್ ಆಗದಂತೆ ತಡೆಯಲು ಸೂಕ್ತ ಭದ್ರತೆ ತೆಗೆದುಕೊಳ್ಳಲಾಗಿದೆ. ಹೀಗಾಗಿ ಪರೀಕ್ಷೆಯನ್ನ ನಿರಾತಂಕವಾಗಿ ಬರೆಯಲು ಪಿಯುಸಿ ಬೋರ್ಡ್ ವಿದ್ಯಾರ್ಥಿಗಳಿಗೆ ಮನವಿ ಮಾಡಿದೆ. ಪಿಯುಸಿ ಪರೀಕ್ಷೆಯ ಡಿಟೇಲ್ಸ್ ಹೀಗಿದೆ.

    ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು:
    ಒಟ್ಟು ವಿದ್ಯಾರ್ಥಿಗಳು – 6,73,606
    ವಿದ್ಯಾರ್ಥಿಗಳು – 3,38,868
    ವಿದ್ಯಾರ್ಥಿನಿಯರು – 3,34,738
    ಪರೀಕ್ಷಾ ಕೇಂದ್ರ – 1013.

    ಭದ್ರತೆ:
    ಪರೀಕ್ಷಾ ಅಕ್ರಮ ತಡೆಯಲು 2026 ವಿಶೇಷ ಮೇಲ್ವಿಚಾರಕರ ನೇಮಕ ಮಾಡಲಾಗಿದ್ದು, ಪ್ರತಿ ಜಿಲ್ಲಾ ಮಟ್ಟದಲ್ಲಿ ಸ್ಕ್ವಾಡ್ ನೇಮಕ ಮಾಡಲಾಗಿದೆ. ಇನ್ನೂ 54 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ನಡೆಯುತ್ತಿದ್ದು, ಪ್ರಥಮ ಬಾರಿಗೆ ಆನ್‍ಲೈನ್ ಮೂಲಕ ಮೌಲ್ಯಮಾಪನ ಮಾಡಿದ ಅಂಕ ಕೇಂದ್ರದಿಂದಲೇ ನೇರವಾಗಿ ಅಪ್ಲೋಡ್ ಆಗುತ್ತದೆ. ಎಲ್ಲಾ ಪರೀಕ್ಷಾ ಕೇಂದ್ರದಲ್ಲಿ ಸಿಸಿಟಿವಿ ಅಳಡಿಕೆ ಮಾಡಲಾಗಿದ್ದು, ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪ್ರಯಾಣ ವ್ಯವಸ್ಥೆ ಮಾಡಲಾಗಿದೆ. ಬಸ್ಸಿನಲ್ಲಿ ಪ್ರವೇಶ ಪತ್ರ ತೋರಿಸಿದರೆ ಪ್ರವೇಶ ಉಚಿತವಾಗಿರುತ್ತದೆ.

    ಅರ್ಥಶಾಸ್ತ್ರ, ವ್ಯವಹಾರ ಅಧ್ಯಾಯನ, ಲೆಕ್ಕಶಾಸ್ತ್ರ ವಿಷಯಗಳ ಪರೀಕ್ಷೆ ಎನ್‍ಸಿಇಆರ್ ಟಿ ಪಠ್ಯ ಅಳವಡಿಕೆ ಮಾಡಿಕೊಳ್ಳಲಾಗಿದ್ದು, ಈ ವರ್ಷ ಈ ಮಾದರಿಯಲ್ಲಿ ಪ್ರಶ್ನೆ ಪತ್ರಿಕೆ ಸಿದ್ಧತೆ ಮಾಡಲಾಗಿದೆ. ಪ್ರಶ್ನೆ ಪತ್ರಿಕೆ ಸಾಗಿಸುವ ಎಲ್ಲಾ ವಾಹನಗಳಿಗೂ ಜಿಪಿಎಸ್ ಟ್ರಾಕಿಂಗ್ ಸಿಸ್ಟಮ್ ಅಳವಡಿಕೆ ಮಾಡಲಾಗಿದ್ದು, ಉತ್ತರ ಪತ್ರಿಕೆ ಕೊಠಡಿಗೆ 24*7 ಪೊಲೀಸ್ ಭದ್ರತೆ ವ್ಯವಸ್ಥೆ ಮಾಡಲಾಗಿದೆ. ಪರೀಕ್ಷಾ ಕೇಂದ್ರದ ಸುತ್ತ ಜೆರಾಕ್ಸ್ ಅಂಗಡಿ ಕ್ಲೋಸ್ ಮಾಡುವ ಮೂಲಕ ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತ ನಿಷೇಧ ಪ್ರದೇಶ ಮಾಡಲಾಗಿದೆ.

    ಪರೀಕ್ಷಾ ಕೇಂದ್ರಕ್ಕೆ ಮೊಬೈಲ್, ಎಲೆಕ್ಟ್ರಾನಿಕ್ ಉಪಕರಣ ನಿಷೇಧಿಸಿದ್ದು, ಗೃಹ ಇಲಾಖೆಯ ಜೊತೆ ಭದ್ರತೆ ಸಂಬಂಧ ಸೂಕ್ತ ಕ್ರಮವಹಿಸಲಾಗಿದೆ. ಹಿಂದಿನ ವರ್ಷಗಳಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಕಂಡು ಬಂದ ವ್ಯಕ್ತಿಗಳ ಮೇಲೆ ವಿಶೇಷ ನಿಗಾ ಇಡಲಾಗಿದೆ. ಅವಶ್ಯಕತೆ ಬಿದ್ದರೆ ಅಂತಹ ವ್ಯಕ್ತಿ ಮೇಲೆ ಕೋಕಾ ಕಾಯ್ದೆ ಜಾರಿಗೆ ಸರ್ಕಾರ ನಿರ್ಧರಿಸಿದೆ. ವಿದ್ಯಾರ್ಥಿಗಳು ಪ್ರಶ್ನೆ ಪತ್ರಿಕೆ, ವಾಟ್ಸಪ್ ಮೆಸೇಜ್ ನಲ್ಲಿ ಪ್ರಶ್ನೆಗಳು ಸಿಕ್ಕಿದರೆ ತಕ್ಷಣ ಅವರು ದೂರು ಕೊಡಬೇಕು. ಒಂದು ವೇಳೆ ಇದನ್ನ ವಿದ್ಯಾರ್ಥಿಗಳು ಮುಚ್ಚಿಟ್ಟರೆ ಅವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತೆ ಎಂದು ಪ್ರಾಥಮಿಕ ಶಿಕ್ಷಣದ ಪ್ರಧಾನ ಕಾರ್ಯದರ್ಶಿ ಉಮಾಶಂಕರ್ ಭದ್ರತೆಯ ಬಗ್ಗೆ ವಿವರಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv