Tag: puducheri

  • ದಿನೇಶ್ ಗುಂಡೂರಾವ್ ವಾಹನದ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ದಾಳಿ

    ದಿನೇಶ್ ಗುಂಡೂರಾವ್ ವಾಹನದ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ದಾಳಿ

    ಪುದುಚೇರಿ: ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಾಹನದ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ದಾಳಿ ನಡೆಸಿರುವ ಘಟನೆ ಪಾಂಡಿಚೇರಿ ಕಾಂಗ್ರೆಸ್ ಪಕ್ಷದ ಕಚೇರಿ ಎದುರು ನಡೆದಿದೆ.

    ಪುದುಚೇರಿ ಕಾಂಗ್ರೆಸ್ ಉಸ್ತುವಾರಿ ಆಗಿರುವ ದಿನೇಶ್ ಗುಂಡೂರಾವ್ ಅವರು, ಕಾಂಗ್ರೆಸ್ ಕಚೇರಿಯಲ್ಲಿ ಹಮ್ಮಿಕೊಂಡಿದ್ದ ಕಾಂಗ್ರೆಸ್ ಸಭೆಗೆ ಹೋಗಿದ್ದರು. ಮಾಜಿ ಸಚಿವರೊಬ್ಬರನ್ನ ಬೆಂಬಲಿಸುವ ಬಣ ನಾಯಕತ್ವ ಬದಲಾವಣೆಗೆ ಆಗ್ರಹಿಸಿ ಧರಣಿ ನಡೆಸುತ್ತಿತ್ತು. ಈ ವೇಳೆ ಸಭೆ ಮುಗಿಸಿ ಹೊರಬರುತ್ತಿದ್ದಂತೆಯೇ ಕಾಂಗ್ರೆಸ್ ಕಾರ್ಯಕರ್ತರು ದಿನೇಶ್ ಗುಂಡೂರಾವ್ ಅವರನ್ನು ಸುತ್ತುವರಿದು ತಳ್ಳಾಡಿ ಗಲಾಟೆ ಮಾಡಿದ್ದಾರೆ. ಅಲ್ಲದೇ ಕಾರಿಗೆ ಹತ್ತದಂತೆ ತಡೆದು ದಿನೇಶ್ ಗುಂಡೂರಾವ್ ಕಾರಿಗೆ ಹಾನಿ ಮಾಡಿದ್ದಾರೆ. ನಾಯಕತ್ವ ಬದಲಾವಣೆ ಕುರಿತು ಉತ್ತರ ನೀಡುವಂತೆ ದಿನೇಶ್ ಗುಂಡೂರಾವ್‍ಗೆ ಕಾರ್ಯಕರ್ತರ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ರಾಜ್ಯದಲ್ಲಿ ಮತ್ತೆ ವರುಣನ ಆರ್ಭಟ – ಕರಾವಳಿ ಭಾಗಕ್ಕೆ ಈ ವಾರ ಯೆಲ್ಲೋ ಅಲರ್ಟ್

    ಸ್ಥಳದಲ್ಲಿ ಮಾಜಿ ಸಿಎಂ ನಾರಾಯಣಸ್ವಾಮಿ ಬೆಂಬಲಿಗರು ಕೂಡ ಜಮಾಯಿಸಿದ್ದರು. ನಂತರ ಎರಡು ಗುಂಪುಗಳ ನಡುವೆ ವಾಗ್ವಾದ ನಡೆದಿದೆ. ಘಟನೆಯ ನಂತರ ಪುದುಚೇರಿ ಕಾಂಗ್ರೆಸ್ ಅಧ್ಯಕ್ಷ ಸುಬ್ರಮಣಿಯನ್ ಅವರು ಐವರು ಕೈ ಕಾರ್ಯಕರ್ತರು ಅಮಾನತುಗೊಳಿಸಲು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ಸಿಎಂ ನಿತೀಶ್ ಕುಮಾರ್ ಬೆಂಗಾವಲು ವಾಹನದ ಮೇಲೆ ಕಲ್ಲು ತೂರಾಟ – 13 ಮಂದಿ ಅರೆಸ್ಟ್

    Live Tv
    [brid partner=56869869 player=32851 video=960834 autoplay=true]

  • ಅ.23ರಿಂದ ಬೆಂಗಳೂರಿನಿಂದ ಪುದುಚೇರಿಗೆ KSRTC ಬಸ್ ಸಂಚಾರ

    ಅ.23ರಿಂದ ಬೆಂಗಳೂರಿನಿಂದ ಪುದುಚೇರಿಗೆ KSRTC ಬಸ್ ಸಂಚಾರ

    ಬೆಂಗಳೂರು: ಅಕ್ಟೋಬರ್ 23ರಿಂದ ಬೆಂಗಳೂರಿನಿಂದ ಪುದುಚೇರಿಗೆ ಸಾರಿಗೆ ಬಸ್ ಗಳು ಸಂಚಾರ ಆರಂಭ ಮಾಡಲಿವೆ. ಅನ್‍ಲಾಕ್ ಬಳಿಕ ಸಾರಿಗೆ ಸಂಸ್ಥೆ ಹಂತ ಹಂತವಾಗಿ ಸಾರಿಗೆ ಬಸ್ ಸಂಚಾರ ಆರಂಭಿಸುತ್ತಿದೆ.

    ಕೊರೊನಾ ಮತ್ತು ಲಾಕ್‍ಡೌನ್ ಬಳಿಕ ಅಂತರಾಜ್ಯ ಬಸ್ ಸಂಚಾರ ಸಂಪೂರ್ಣ ಸ್ಥಗಿತಗೊಳಿಸಲಾಗಿತ್ತು. ಇದೀಗ ಸರ್ಕಾರದ ಮಾರ್ಗಸೂಚಿಗಳ ಅನ್ವಯ ಬಸ್ ಆರಂಭಗೊಂಡಿವೆ. ಜನದಟ್ಟನೆಗೆ ಅನುಗುಣವಾಗಿ ಬಸ್ ಗಳನ್ನು ಬಿಡಲಾಗುವುದು ಎಂದು ಸಾರಿಗೆ ಸಂಸ್ಥೆ ಪ್ರಕಟನೆಯಲ್ಲಿ ತಿಳಿಸಿದೆ. ಪ್ರಯಾಣಿಕರು ಮುಂಗಡ ಟಿಕೆಟ್ ಗಳನ್ನು WWW.KSRTC.in ವೆಬ್ ಸೈಟ್ ಮೂಲಕ ಕಾಯ್ದಿರಿಸಬಹುದು. ಎಲ್ಲ ಪ್ರಯಾಣಿಕರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಕೆಎಸ್‍ಆರ್ ಟಿಸಿ ಸೂಚಿಸಿದೆ.

    ಹೊಸ ನೇಮಕ ಇಲ್ಲ: ಕೋವಿಡ್-19 ಹಿನ್ನೆಲೆ ಹುದ್ದೆಗಳ ನೇಮಕಾತಿ ಪ್ರಕ್ರಿಯೆಯನ್ನ ಕೆಎಸ್‍ಆರ್ ಟಿಸಿ ರದ್ದುಗೊಳಿಸಿದೆ. ಕೋವಿಡ್ ನಿಂದಾಗಿ ಸಾರಿಗೆ ಕಾರ್ಯಾಚರಣೆಯಲ್ಲಿ ವ್ಯತ್ಯಯ ಉಂಟಾಗಿದ್ದು, ಮುಂದಿನ ಆದೇಶದವರೆಗೆ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳ ನೇಮಕಾತಿ ರದ್ದು ಮಾಡಲಾಗಿದೆ.

  • `ಹೆಬ್ಬುಲಿ’ ನಾಯಕಿ ಅಮಲಾ ಪೌಲ್‍ರಿಂದ ನೇತ್ರದಾನ

    `ಹೆಬ್ಬುಲಿ’ ನಾಯಕಿ ಅಮಲಾ ಪೌಲ್‍ರಿಂದ ನೇತ್ರದಾನ

    ಪುದುಚೇರಿ: ದಕ್ಷಿಣ ಭಾರತದ ಖ್ಯಾತ ನಟಿ ಅಮಲಾ ಪೌಲ್ ತಮ್ಮ ಕಣ್ಣುಗಳನ್ನು ದಾನ ಮಾಡಿದ್ದಾರೆ.

    ಮಂಗಳವಾರ ನಗರದ ರಾಜೀವ್ ಗಾಂಧಿ ಸಿಗ್ನಲ್ ನಲ್ಲಿರೋ ಡಾ. ಅಗರ್ವಾಲ್ ಕಣ್ಣಿನ ಆಸ್ಪತ್ರೆಯನ್ನು ಉದ್ಘಾಟಿಸಿದ ಬಳಿಕ ತಮ್ಮ ಕಣ್ಣುಗಳನ್ನು ದಾನ ಮಾಡುವುದಾಗಿ ಘೋಷಿಸಿದ್ದಾರೆ. ಇದನ್ನೂ ಓದಿ: `ಹೆಬ್ಬುಲಿ’ ಸಿನಿಮಾದ ನಾಯಕಿ ಅಮಲಾ ಪೌಲ್ ವಿರುದ್ಧ FIR ದಾಖಲು

    “ಪಾಂಡಿಚೇರಿಯಲ್ಲಿ ಹೊಸ ಆಸ್ಪತ್ರೆ ಉದ್ಘಾಟನೆ ಮಾಡುತ್ತಿರುವುದು ನನಗೆ ಖುಷಿ ತಂದಿದೆ. ಈ ಮೂಲಕ ಭಾರತದಲ್ಲಿ ಕುರುಡತನವನ್ನು ನಿರ್ಮೂಲನೆ ಮಾಡಲಾಗುತ್ತಿರುವುದು ಸಂತಸದ ಸಂಗತಿ. ಈ ಸೌಲಭ್ಯ ಎಲ್ಲರಿಗೂ ತಲುಪುತ್ತದೆ ಎಬುವುದಾಗಿ ನಾನು ನಂಬಿದ್ದೇನೆ. ಅಲ್ಲದೇ 50ಕ್ಕೂ ಹೆಚ್ಚು ಮಂದಿಗೆ ಉಚಿತ ಕಣ್ಣಿನ ಸರ್ಜರಿ ಮಾಡಿದ ಈ ಆಸ್ಪತ್ರೆಗೆ ಧನ್ಯವಾದ ಹೇಳಲು ಬಯಸುತ್ತೇನೆ” ಅಂತಾ ತಮ್ಮ ಉದ್ಘಾಟನಾ ಭಾಷಣದಲ್ಲಿ ತಿಳಿಸಿದ್ದಾರೆ.

    ಈ ಹಿಂದೆ ಬಾಲಿವುಡ್ ನಟರಾದ ಅಮಿತಾಭ್ ಬಚ್ಚನ್, ಅಮಿರ್ ಖಾನ್, ಪ್ರಿಯಾಂಕ ಚೋಪ್ರಾ, ಐಶ್ವರ್ಯ ರೈ ಸೇರಿದಂತೆ ಹಲವು ನಟ-ನಟಿಯರು ತಮ್ಮ ಕಣ್ಣುಗಳನ್ನು ದಾನ ಮಾಡುವ ಮೂಲಕ ಅಭಿಮಾನಿಗಳಿಗೆ ಮಾದರಿಯಾಗಿದ್ದಾರೆ. ಇದನ್ನೂ ಓದಿ: ನಟಿ ಅಮಲಾ ಪೌಲ್ – ವಿಜಯ್ ವಿಚ್ಛೇದನಕ್ಕೆ ಕೋರ್ಟ್ ಅಸ್ತು

    ಕಾಲಿವುಡ್ ಮತ್ತು ಟಾಲಿವುಡ್ ನಲ್ಲಿ ಅನೇಕ ಸೂಪರ್ ಹಿಟ್ ಸಿನಿಮಾ ಮಾಡಿದ್ದ ಅಮಲಾ ಪೌಲ್ ಅವರು `ಹೆಬ್ಬುಲಿ’ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದರು. ಹೆಬ್ಬುಲಿಯಲ್ಲಿ ಕಿಚ್ಚ ಸುದೀಪ್ ಅವರಿಗೆ ನಾಯಕಿಯಾಗಿ ಅಭಿನಯಿಸಿದ್ದರು.