Tag: pulawama

  • ಪುಲ್ವಾಮಾದಲ್ಲಿ ಸೇನೆಯಿಂದ ನಾಲ್ವರು ಉಗ್ರರ ಎನ್‍ಕೌಂಟರ್!

    ಪುಲ್ವಾಮಾದಲ್ಲಿ ಸೇನೆಯಿಂದ ನಾಲ್ವರು ಉಗ್ರರ ಎನ್‍ಕೌಂಟರ್!

    ಶ್ರೀನಗರ: ಜಮ್ಮು ಕಾಶ್ಮೀರದ ಪುಲ್ವಾಮಾದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಇಂದು ಗುಂಡಿನ ಚಕಮಕಿ ನಡೆದಿದೆ.

    ಪುಲ್ವಾಮಾ ಜಿಲ್ಲೆಯ ಲಸ್ಸಿಪುರದ ಪ್ರದೇಶದಲ್ಲಿ ನಡೆದ ಈ ಗುಂಡಿನ ಕಾಳಗದಲ್ಲಿ ಲಕ್ಷರ್-ಇ- ತೊಯ್ಬಾದ ನಾಲ್ವರು ಉಗ್ರರು ಹತ್ಯೆಯಾಗಿದ್ದಾರೆ ಎಂದು ಹೇಳಲಾಗುತ್ತಿದೆ.

    2 ಎಕೆ ರೈಫಲ್ಸ್, 1 ಎಸ್‍ಎಲ್ ಆರ್ ಹಾಗೂ ಪಿಸ್ತೂಲನ್ನು ಈಗಾಗಲೇ ವಶಪಡಿಸಿಕೊಂಡಿದ್ದು, ಕಾರ್ಯಾಚರಣೆ ಮುಂದುವರಿದಿದೆ. ಒಟ್ಟಿನಲ್ಲಿ ಪದೇ ಪದೇ ಗಡಿ ಉಲ್ಲಂಘಿಸುವ ಉಗ್ರರಿಗೆ ಭಾರತೀಯ ಸೈನಿಕರು ತಕ್ಕ ಪಾಠ ಕಲಿಸುತ್ತಿದ್ದಾರೆ.

    40 ಯೋಧರು ಹುತಾತ್ಮ:
    ಫೆ. 14ರ ಪ್ರೇಮಿಗಳ ದಿನವಾದ ಗುರುವಾರ ಬೆಳಗ್ಗೆ 3.30ಕ್ಕೆ ಜಮ್ಮುವಿನಿಂದ ಶ್ರೀನಗರಕ್ಕೆ 78 ಸಿಆರ್ಪಿಎಫ್ ವಾಹನಗಳಲ್ಲಿ 2,547 ಯೋಧರು ಪ್ರಯಾಣಿಸುತ್ತಿದ್ದರು. ಶ್ರೀನಗರಕ್ಕೆ 20 ಕಿ.ಮೀ ದೂರದಲ್ಲಿದ್ದಾಗ 350 ಕೆಜಿ ಸುಧಾರಿತ ಸ್ಫೋಟಕಗಳನ್ನು ತುಂಬಿದ್ದ ಬಿಳಿ ಬಣ್ಣದ ಸ್ಕಾರ್ಪಿಯೋ ಕಾರನ್ನು ಉಗ್ರನೊಬ್ಬ ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಚಲಾಯಿಸಿಕೊಂಡು ಬಂದು ಡಿಕ್ಕಿ ಹೊಡೆದಿದ್ದನು.

    ಡಿಕ್ಕಿ ಹೊಡೆದ ರಭಸಕ್ಕೆ ಸ್ಫೋಟಕಗಳು ಸ್ಫೋಟಗೊಂಡ ಪರಿಣಾಮ 40 ಮಂದಿ ಸೈನಿಕರು ವೀರ ಮರಣವನ್ನು ಅಪ್ಪಿದ್ದರು. ಆ ಬಳಿಕ ಭಾರತ ಮತ್ತು ಪಾಕಿಸ್ತಾನದ ಮಧ್ಯೆ ಯುದ್ಧದ ವಾತಾವರಣವೇ ನಿರ್ಮಾಣವಾಗಿತ್ತು. ಅಲ್ಲದೆ ಭಾರತೀಯ ಯೋಧರು ಪಾಕ್ ಗಡಿಯೊಳಗೆ ನುಗಿ ಉಗ್ರರ ಅಡಗುತಾಣಗಳನ್ನು ಹೊಡೆದಿರುಳಿಸಿತ್ತು.