Tag: pulse polio

  • ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ

    ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮಕ್ಕೆ ಚಾಲನೆ

    ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ 2022ರ ಫೆಬ್ರವರಿ 27, ಭಾನುವಾರದಿಂದ 2022ರ ಮಾರ್ಚ್ 02 ರವರೆಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ಪಲ್ಸ್ ಪೋಲಿಯೊ ಅಭಿಯಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

    ಕಾರ್ಯಕ್ರಮಕ್ಕೆ ಮಾನ್ಯ ಸ್ಥಳೀಯ ಶಾಸಕರಾದ ಶ್ರೀ ಉದಯ್ ಬಿ ಗರುಡಾಚಾರ್, ಮಾನ್ಯ ಆಡಳಿತಗಾರರಾದ ಶ್ರೀ ರಾಕೇಶ್ ಸಿಂಗ್ ಹಾಗೂ ಮಾನ್ಯ ಮುಖ್ಯ ಆಯುಕ್ತರಾದ ಶ್ರೀ ಗೌರವ್ ಗುಪ್ತ ರವರು ಇಂದು ದಾಸಪ್ಪ ಆಸ್ಪತ್ರೆಯ ಆವರಣದಲ್ಲಿ ಮಕ್ಕಳಿಗೆ 2 ಹನಿ ಪಲ್ಸ್ ಪೋಲಿಯೊ ಹಾಕುವ ಮೂಲಕ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಇದನ್ನೂ ಓದಿ: ಸೋದರಸಂಬಂಧಿ ಮದುವೆಯಲ್ಲಿ ಯಶ್ ಫ್ಯಾಮಿಲಿ ಫುಲ್ ಮಿಂಚಿಂಗ್!

    ಈ ವೇಳೆ ವಿಶೇಷ ಆಯುಕ್ತರಾದ ಡಾ. ತ್ರಿಲೋಕ್ ಚಂದ್ರ, ಮುಖ್ಯ ಆರೋಗ್ಯಾಧಿಕಾರಿ ಡಾ. ಬಾಲಸುಂದರ್ ಹಾಗೂ ಇನ್ನಿತರ ಅಧಿಕಾರಿಗಳು ಉಪಸ್ಥಿತರಿದ್ದರು.

  • ಪೋಲಿಯೋ ಲಸಿಕೆ ಅಭಿಯಾನಕ್ಕೆ ವಿಜಯಪುರ ಜಿಲ್ಲಾಧಿಕಾರಿ ಚಾಲನೆ

    ಪೋಲಿಯೋ ಲಸಿಕೆ ಅಭಿಯಾನಕ್ಕೆ ವಿಜಯಪುರ ಜಿಲ್ಲಾಧಿಕಾರಿ ಚಾಲನೆ

    ವಿಜಯಪುರ: ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ವಿಜಯಪುರ ಜಿಲ್ಲಾಧಿಕಾರಿ ವೈ.ಎಸ್ ಪಾಟೀಲ ಚಾಲನೆ ನೀಡಿದರು.

    ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿ ನಂತರ ಮಾತನಾಡಿದ ಅವರು, ಜಿಲ್ಲೆಯಲ್ಲಿ 3.16 ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಲಾಗುವುದು. ಇದಕ್ಕಾಗಿ ಜಿಲ್ಲೆಯಲ್ಲಿ ಒಟ್ಟು 1,250 ಭೂತ್‍ಗಳನ್ನು ಸ್ಥಾಪಿಸಲಾಗಿದೆ. ಬಳಿಕ ಮೂರು ದಿನ ಆಶಾ ಕಾರ್ಯ ಕರ್ತೆಯರು ಹಾಗೂ ಸಿಬ್ಬಂದಿ ಮನೆ ಮನೆಗೆ ತೆರಳಿ ಪೋಲಿಯೋ ಲಸಿಕೆ ಹಾಕುವರು, ಜಿಲ್ಲೆಯಲ್ಲಿ ಇರುವ ಎಲ್ಲ ಮಕ್ಕಳಿಗೂ ಪೋಷಕರು ಪಲ್ಸ್ ಪೋಲಿಯೋ ಹಾಕಿಸಬೇಕು ಎಂದು ಮನವಿ ಮಾಡಿದರು.

    ಈ ಸಂದರ್ಭದಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಮಹೇಂದ್ರ ಕಾಪ್ಸೆ, ಜಿಲ್ಲಾ ಪಂಚಾಯತ್ ಸಿಇಓ ಗೋವಿಂದರೆಡ್ಡಿ, ಜಿಲ್ಲಾ ನೊಡಲ್ ಅಧಿಕಾರಿ ಡಾ.ಜಯರಾಮ್, ತಾಲ್ಲೂಕು ಅಧಿಕಾರಿ ಕವಿತಾ ಹಾಗೂ ಇತರರು ಉಪಸ್ಥಿತರಿದ್ದರು.

  • ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ಚಾಲನೆ

    ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ಬಿ. ಶ್ರೀರಾಮುಲು ಚಾಲನೆ

    -ತಡವಾಗಿ ಆಗಮಿಸಿದ ಸಚಿವರು, ಚಳಿಗೆ ನಡುಗಿದ ಪುಟ್ಟ ಮಕ್ಕಳು

    ಬೆಂಗಳೂರು: ರಾಜ್ಯಾದ್ಯಂತ ಇಂದು ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ಬಿ. ಶ್ರೀರಾಮುಲು ಚಾಲನೆ ನೀಡಿದರು.

    ಬೆಂಗಳೂರಿನ ಚಿಕ್ಕಜಾಲ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಚಿವರು ಮಕ್ಕಳಿಗೆ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ಪಬ್ಲಿಕ್ ಟಿವಿ ಜೊತೆ ಮಾತನಾಡಿದ ಅವರು, ಎಲ್ಲಾ ಮಕ್ಕಳಿಗೆ ಕಡ್ಡಾಯ ಲಸಿಕೆ ಹಾಕಲು ಸೂಚಿಸಲಾಗಿದೆ. ಈ ಬಾರಿ 100ಕ್ಕೆ 100ರಷ್ಟು ಟಾರ್ಗೆಟ್ ರೀಚ್ ಆಗಬೇಕು. ಈ ನಿಟ್ಟಿನಲ್ಲಿ ಎಲ್ಲಾ ಪಂಚಾಯ್ತಿ, ಶಾಲೆ, ಮನೆಗಳಿಗೆ ಹೋಗಿ ಲಸಿಕೆ ಹಾಕಿ ಜಾಗೃತಿ ಮೂಡಿಸೋದಕ್ಕೆ ಸೂಚನೆಯನ್ನು ನೀಡಲಾಗಿದೆ ಎಂದು ತಿಳಿಸಿದರು.

    ಕಳೆದ ವರ್ಷ 66 ಲಕ್ಷ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿಸಲಾಗಿತ್ತು. ಈ ಬಾರಿಯೂ ಉತ್ತಮ ಪ್ರಮಾಣದಲ್ಲಿ ಲಸಿಕೆ ಆಗುತ್ತೆ ಎಂಬ ವಿಶ್ವಾಸವನ್ನ ವ್ಯಕ್ತಪಡಿಸಿದರು. ಹಾಗೆಯೇ ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ಪಲ್ಸ್ ಪೋಲಿಯೋ ಲಸಿಕೆ ಬಗ್ಗೆ ಅಪಪ್ರಚಾರ ಆಗುತ್ತಿದೆ. ಇದಕ್ಕೆ ಯಾರೂ ಕಿವಿಗೊಡಬೇಡಿ. ಎಲ್ಲಾ ಖಾಯಿಲೆಗಳಿಗೆ ಲಸಿಕೆ ಅಗತ್ಯ. ಮಕ್ಕಳಿಗೆ ಲಸಿಕೆ ಹಾಕಿಸಿ ಎಂದು ಸಚಿವರು ಪೋಷಕರಲ್ಲಿ ಮನವಿ ಮಾಡಿದರು.

    ಕಾರ್ಯಕ್ರಮಕ್ಕೆ ತಡವಾಗಿ ಬಂದ ಸಚಿವರು
    ತಮ್ಮದೇ ಇಲಾಖೆಯ ಕಾರ್ಯಕ್ರಮಕ್ಕೆ ಸಚಿವರು ತಡವಾಗಿ ಆಗಮಿಸಿದರು. ಪಲ್ಸ್ ಪೋಲಿಯೋ ಕಾರ್ಯಕ್ರಮಕ್ಕೆ ಸಚಿವರು 4 ಗಂಟೆಗೆ ಚಾಲನೆ ನೀಡಬೇಕಿತ್ತು. ಸಚಿವರು ಬೇಗನೇ ಬರ್ತಾರೆ ಅಂತನೇ ಇಲಾಖೆ ಹಾಗೂ ಚಿಕ್ಕಜಾಲ ಆಸ್ಪತ್ರೆಯ ಸಿಬ್ಬಂದಿ ಬೆಳಗ್ಗಿನ ಜಾವ 4 ಗಂಟೆಗೆನೇ ಆಸ್ಪತ್ರೆಗೆ ಬಂದಿದ್ದರು. ಆಸ್ಪತ್ರೆಯನ್ನ ಸಿಂಗಾರ ಮಾಡಿದ್ದರು. ಆದರೆ ಸಚಿವರು ಮಾತ್ರ ಬರಲೇ ಇಲ್ಲ. ಚಳಿಗೆ ನಡುಗುತ್ತಾ ಹಲವು ತಾಯಂದಿರು ಪುಟ್ಟ ಪುಟ್ಟ ಮಕ್ಕಳನ್ನ ಎತ್ತಿಕೊಂಡು ಬಂದಿದ್ದರು. ಸಚಿವರ ಆಗಮನಕ್ಕಾಗಿ ಇಲಾಖೆಯ ಅಧಿಕಾರಿಗಳು ಕೂಡ ಹೂಗುಚ್ಛ ಹಿಡಿದು, ಕಾದು ನಿಂತಿದ್ದರು. ಆದರೆ ಸಚಿವರು ಮಾತ್ರ ಬರೋಬ್ಬರಿ 6:50ಕ್ಕೆ ಕಾರ್ಯಕ್ರಮ ಸ್ಥಳಕ್ಕೆ ಬಂದಿದ್ದು, ಸಚಿವರ ಈ ವರ್ತನೆಗೆ ಇಲಾಖೆಯ ಕೆಲ ಅಧಿಕಾರಿಗಳು ಬೇಸರ ವ್ಯಕ್ತಪಡಿಸಿದರು.

  • ಜ.19ಕ್ಕೆ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ- ಮಿಸ್ ಮಾಡದೆ ಲಸಿಕೆ ಹಾಕಿಸಿ

    ಜ.19ಕ್ಕೆ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ- ಮಿಸ್ ಮಾಡದೆ ಲಸಿಕೆ ಹಾಕಿಸಿ

    ಬೆಂಗಳೂರು: ಮಕ್ಕಳ ಜೀವ ಸಂಜೀವಿನಿ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ಸರ್ಕಾರ ಚಾಲನೆ ನೀಡಲಾಗಿದೆ. ಮೊದಲ ಹಂತದ ಪಲ್ಸ್ ಪೋಲಿಯೋ ಲಸಿಕೆ ಕಾರ್ಯಕ್ರಮ ಜನವರಿ 19 ರಂದು ರಾಜ್ಯಾದ್ಯಂತ ನಡೆಯಲಿದೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಆರೋಗ್ಯ ಸಚಿವ ಶ್ರೀರಾಮುಲು ಪಲ್ಸ್ ಪೋಲಿಯೋ 0-5 ವರ್ಷದ ಎಲ್ಲಾ ಮಕ್ಕಳಿಗೂ ಹಾಕಿಸಿ. ಯಾವುದೇ ಗಾಳಿ ಸುದ್ದಿಗೆ ಕಿವಿ ಕೊಡಬೇಡಿ ಎಂದು ಮನವಿ ಮಾಡಿದರು.

    ಈ ಬಾರಿ ಸುಮಾರು 64,65,561 ಮಕ್ಕಳು ಲಸಿಕೆ ಹಾಕಿಸಿಕೊಳ್ಳಲಿದ್ದಾರೆ. ಲಸಿಕೆ ಹಾಕಲು 33,021 ಬೂತ್ ಗಳು, 46,620 ತಂಡಗಳು, 1,09,554 ಕಾರ್ಯಕರ್ತರನ್ನು ನಿಯೋಜನೆ ಮಾಡಲಾಗಿದೆ. 7,105 ಮೇಲ್ವಿಚಾರಕರು, 977 ಸಂಚಾರಿ ತಂಡಗಳು, 2,111 ಟ್ರಾನ್ಸಿಟ್ ತಂಡಗಳನ್ನು ರಚನೆ ಮಾಡಲಾಗಿದೆ. ರಾಜಾದ್ಯಂತ ಬೆಳಗ್ಗೆ 8 ರಿಂದ ಸಂಜೆ 5 ವರೆಗೆ ಲಸಿಕೆ ಹಾಕಲಾಗುತ್ತೆ. ಕಿರಿಯ ಆರೋಗ್ಯ ಸಹಾಯಕರು, ಆಶಾ ಕಾರ್ಯಕರ್ತೆಯರು ಮನೆ ಮನೆಗೆ ಹೋಗಿ ಲಸಿಕೆ ಹಾಕಲಿದ್ದಾರೆ.

    ಬೀದರ್, ಕಲಬುರ್ಗಿ, ಬಾಗಲಕೋಟೆ, ರಾಯಚೂರು, ಯಾದಗಿರಿ, ಕೊಪ್ಪಳ, ಚಿತ್ರದುರ್ಗ, ಬಳ್ಳಾರಿ ವಿಜಯಪುರ, ಗದಗದಲ್ಲಿ ಹೆಚ್ಚು ಕೇಂದ್ರಗಳನ್ನು ರಚನೆ ಮಾಡಲಾಗಿದೆ. ಹೆಚ್ಚಿನ ಮಾಹಿತಿಗೆ 104ಗೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ. ಸ್ಲಮ್, ಗುಡ್ಡಗಾಡು ಪ್ರದೇಶ ಮತ್ತು ಬುಡಕಟ್ಟು ಪ್ರದೇಶದಲ್ಲೂ ಈ ಬಾರಿ ಲಸಿಕೆ ಹಾಕಲು ವ್ಯವಸ್ಥೆ ಮಾಡಲಾಗಿದೆ. ರೈಲ್ವೆ ನಿಲ್ದಾಣ, ಮೆಟ್ರೋ ನಿಲ್ದಾಣ, ವಿಮಾನ ನಿಲ್ದಾಣ, ಸರ್ಕಾರಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕಲು ಕ್ರಮವಹಿಸಲಾಗಿದೆ.

    ಇದೇ ಮೊದಲ ಬಾರಿಗೆ ಲಸಿಕೆ ಹಾಕಿಸಲು ಮೊಬೈಲ್ ಆಪ್ ಜಾರಿಗೆ ತಂದಿದ್ದಾರೆ. “Nearby vaccination center Karnataka” ಆಪ್ ಡೌನ್ ಲೋಡ್ ಮಾಡಿಕೊಂಡು ಹತ್ತಿರದ ಲಸಿಕೆ ಕೇಂದ್ರದ ಮಾಹಿತಿ ಪಡೆದು ಮಕ್ಕಳಿಗೆ ಲಸಿಕೆ ಹಾಕಿಸಬಹುದಾಗಿದೆ.

  • ಆಶಾ ಕಾರ್ಯಕರ್ತೆಯರ ಮುಷ್ಕರ ಪೋಲಿಯೋ ಕಾರ್ಯಕ್ರಮಕ್ಕೆ ಅಡ್ಡಿಯಾಗಲ್ಲ- ಆರೋಗ್ಯ ಇಲಾಖೆ

    ಆಶಾ ಕಾರ್ಯಕರ್ತೆಯರ ಮುಷ್ಕರ ಪೋಲಿಯೋ ಕಾರ್ಯಕ್ರಮಕ್ಕೆ ಅಡ್ಡಿಯಾಗಲ್ಲ- ಆರೋಗ್ಯ ಇಲಾಖೆ

    – ಜ.19 ರಂದು ಪಲ್ಸ್ ಪೋಲಿಯೋ

    ಬೆಂಗಳೂರು: ಪೊಲಿಯೋ ನಿರ್ಮೂಲನೆ ಮಾಡುವ ಲಸಿಕಾ ಕಾರ್ಯಕ್ರಮ ಪಲ್ಸ್ ಪೋಲಿಯೋ ಜನವರಿ 19 ರಂದು ರಾಜ್ಯಾದ್ಯಂತ ನಡೆಯಲಿದೆ. ಈ ಬಾರಿಯ ಪೋಲಿಯೋ ಕಾರ್ಯಕ್ರಮಕ್ಕೆ ರಾಜ್ಯಾದ್ಯಂತ ನಡೆಯುತ್ತಿರುವ ಆಶಾ ಕಾರ್ಯಕರ್ತೆಯರ ಮುಷ್ಕರ ತೊಂದರೆಯಾಗುವುದಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟನೆ ನೀಡಿದೆ.

    ಈ ಹಿಂದಿನ ಪಲ್ಸ್ ಪೋಲಿಯೋ ಕಾರ್ಯಕ್ರಮಗಳನ್ನು ಆಶಾ ಕಾರ್ಯಕರ್ತೆಯರೇ ನಿರ್ವಹಿಸುತ್ತಾ ಇದ್ದರು. ಆದರೆ ಆಶಾ ಕಾರ್ತಕರ್ತೆಯರ ಮುಷ್ಕರದಿಂದ ಸಮಸ್ಯೆ ಆಗುತ್ತಾ ಎಂದು ಊಹಿಸಲಾಗಿತ್ತು. ಆದರೆ ಯಾವುದೇ ರೀತಿಯ ಸಮಸ್ಯೆ ಆಗುವುದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಇಲಾಖೆ ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟ ಪಡಿಸಿದೆ.

    ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಕಳೆದ ಒಂದು ತಿಂಗಳಿನಿಂದ ಪೂರ್ವ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಶೇ.70 ರಷ್ಟು ಕಾರ್ಯಕರ್ತೆಯರು ಕಾರ್ಯ ನಿರ್ವಹಿಸುತ್ತಿರುವುದು ಸ್ಪಷ್ಟವಾಗಿದೆ. ಹಾಗಾಗಿ ಈ ಕಾರ್ಯಕ್ರಮಕ್ಕೆ ಸಿಬ್ಬಂದಿ ಕೊರತೆ ಇದ್ದರೆ ಆಶಾ ಕಾರ್ಯಕರ್ತೆ ಯಾರಿಗೂ ಮುಂಚೆ ಸಾಮಾಜಿಕ ಸಂಘಟನಾ ಕಾರ್ಯ ತಂತ್ರದಂತೆ ಈ ಹಿಂದೆ ಕಾರ್ಯ ನಿರ್ವಹಿಸುತ್ತಿದ್ದ ಆರೋಗ್ಯ ಇಲಾಖೆಯ ಇತರ ಸಿಬ್ಬಂದಿ ವೈದ್ಯಕೀಯ ಕಾಲೇಜುಗಳ ವಿದ್ಯಾರ್ಥಿಗಳು, ಸ್ವಯಂಸೇವಕರು, ಶುಶ್ರೂಷಕರು, ಆರೋಗ್ಯ ಇಲಾಖೆ ಸಿಬ್ಬಂದಿಯನ್ನು ಬಳಸಿಕೊಳ್ಳಲು ನಿರ್ಧಾರ ಮಾಡಿದೆ.

    ಈ ಕಾರ್ಯಕ್ರಮಕ್ಕೆ ಗ್ರಾಮ ಸಂಪನ್ಮೂಲ ವ್ಯಕ್ತಿಗಳು, ಸಾಮಾಜಿಕ ಕಳಕಳಿಯುಳ್ಳ ನಾಗರೀಕರನ್ನು ಬಳಸಿಕೊಳ್ಳಲು ಕೂಡ ಸೂಚನೆ ನೀಡಲಾಗಿದೆ. ಈ ಬಾರಿಯ ಲಸಿಕಾ ಕಾರ್ಯಕ್ರಮಕ್ಕೆ ಆಶಾ ಕಾರ್ಯಕರ್ತೆಯರ ಮುಷ್ಕರ ಯಾವುದೇ ರೀತಿಯ ಅಡ್ಡಿಯಾಗುವುದಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸ್ಪಷ್ಟಪಡಿಸಿದೆ.