Tag: pulti

  • ಟೈರ್ ಒಡೆದು ಬಸ್ ಪಲ್ಟಿ- 10ಕ್ಕೂ ಹೆಚ್ಚು ಜನರಿಗೆ ಗಾಯ

    ಟೈರ್ ಒಡೆದು ಬಸ್ ಪಲ್ಟಿ- 10ಕ್ಕೂ ಹೆಚ್ಚು ಜನರಿಗೆ ಗಾಯ

    – ಮದುವೆಗೆ ತೆರಳುತ್ತಿದ್ದ ಮಿನಿ ಬಸ್

    ಚಿಕ್ಕೋಡಿ/ಬೆಳಗಾವಿ: ಚಲಿಸುತ್ತಿದ್ದ ವಾಹನದ ಟೈರ್ ಒಡೆದ ಪರಿಣಾಮ ಮದುವೆಗೆ ತೆರಳುತ್ತಿದ್ದ ಮಿನಿ ಬಸ್ ಪಲ್ಟಿ ಆಗಿರುವ ಘಟನೆ ಬೆಳಗಾವಿ ಜಿಲ್ಲೆ ಹುಕ್ಕೇರಿ ತಾಲೂಕಿನ ಹಂಚನಾಳ ಕ್ರಾಸ್ ಬಳಿ ನಡೆದಿದೆ.

    ಮಿನಿ ಬಸ್ ಪಲ್ಟಿ ಆದ ಪರಿಣಾಮ ಬಸ್ ನಲ್ಲಿದ್ದ 20ಕ್ಕೂ ಹೆಚ್ಚು ಪ್ರಯಾಣಿಕರ ಪೈಕಿ 10 ಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು, ಗಂಭೀರ ಗಾಯಗೊಂಡ ಮೂವರನ್ನ ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಅಲ್ಲದೆ ಸಣ್ಣ ಪುಟ್ಟ ಗಾಯಗೊಂಡ ಗಾಯಾಳುಗಳಿಗೆ ಹುಕ್ಕೇರಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

    ಬೆಳಗಾವಿ ತಾಲೂಕಿನ ಮುಚ್ಚಂಡಿ ಗ್ರಾಮದಿಂದ ಹುಕ್ಕೇರಿ ಪಟ್ಟಣದಲ್ಲಿ ನಡೆಯುತ್ತಿದ್ದ ಮದುವೆ ಸಮಾರಂಭಕ್ಕೆ ಜನರನ್ನ ಕರೆದು ತರುತ್ತಿದ್ದ ಮಿನಿ ಬಸ್ ಟೈರ್ ಒಡೆದಿದ್ದು, ಬಳಿಕ ನಿಯಂತ್ರಣ ಸಿಗದೆ ಬಸ್ ಪಲ್ಟಿಯಾಗಿದೆ. ಸ್ಥಳಕ್ಕೆ ಯಮಕನಮರಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಗ್ರಾನೈಟ್ ತುಂಬಿದ್ದ ಲಾರಿ ಪಲ್ಟಿ- ಚಾಲಕನ ದುರ್ಮರಣ

    ಗ್ರಾನೈಟ್ ತುಂಬಿದ್ದ ಲಾರಿ ಪಲ್ಟಿ- ಚಾಲಕನ ದುರ್ಮರಣ

    ದಾವಣಗೆರೆ: ಗ್ರಾನೈಟ್ ತುಂಬಿದ್ದ ಲಾರಿಯೊಂದು ಪಲ್ಟಿಯಾದ ಘಟನೆ ಹರಿಹರ ತಾಲೂಕಿನ ಕೋಮರನಹಳ್ಳಿ ಕಣಿವೆಯಲ್ಲಿ ನಡೆದಿದೆ.

    ಘಟನೆಯಲ್ಲಿ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದು, ಕ್ಲೀನರ್ ಗೆ ಗಂಭೀರ ಗಾಯಗಳಾಗಿವೆ. ಇವರಿಬ್ಬರು ಹೊಸಪೇಟೆ ನಿವಾಸಿಗಳು ಎಂದು ಹೇಳಲಾಗುತ್ತಿದೆ. ಸದ್ಯ ಕ್ಲೀನರ್ ಹರಿಹರದ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಗ್ರಾನೈಟ್ ತುಂಬಿಕೊಂಡು ಲಾರಿ ಹೊಸಪೇಟೆ ಕಡೆಯಿಂದ ಶಿವಮೊಗ್ಗ ಕಡೆ ತೆರಳುತ್ತಿತ್ತು, ಓವರ್ ಲೋಡ್ ಆದ ಪರಿಣಾಮ ತಿರುವು ಹಾಗೂ ಇಳಿಜಾರು ಪ್ರದೇಶದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿಯಾಗಿದೆ.

    ಘಟನೆ ಸಂಬಂಧ ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

  • ಸ್ಟೇರಿಂಗ್ ಕಟ್ ಆಗಿ ಬಸ್ ಪಲ್ಟಿ – 15 ಮಂದಿಗೆ ಗಾಯ, ಮೂವರ ಸ್ಥಿತಿ ಗಂಭೀರ

    ಸ್ಟೇರಿಂಗ್ ಕಟ್ ಆಗಿ ಬಸ್ ಪಲ್ಟಿ – 15 ಮಂದಿಗೆ ಗಾಯ, ಮೂವರ ಸ್ಥಿತಿ ಗಂಭೀರ

    ಕೊಪ್ಪಳ: ಸ್ಟೇರಿಂಗ್ ಕಟ್ ಆದ ಪರಿಣಾಮ ಸರ್ಕಾರಿ ಬಸ್ಸೊಂದು ಪಲ್ಟಿಯಾಗಿ 15 ಪ್ರಯಾಣಿಕರು ಗಾಯಗೊಂಡು, ಮೂವರ ಸ್ಥಿತಿ ಗಂಭೀರವಾಗಿರೋ ಘಟನೆ ಜಿಲ್ಲೆಯ ಕುಷ್ಟಗಿ ತಾಲೂಕಿನಲ್ಲಿ ನಡೆದಿದೆ.

    ಕುಷ್ಟಗಿ ತಾಲೂಕಿನ ದೋಟಿಹಾಳ ಗ್ರಾಮದ ಬಳಿ ಬಸ್ ಪಲ್ಟಿಯಾಗಿದೆ. ತಾವರಗೇರಾದಿಂದ ಕುಷ್ಟಗಿ ಕಡೆಗೆ ಹೊರಟಿದ್ದ ಬಸ್ ನಲ್ಲಿ ಸುಮಾರು 30 ಕ್ಕೂ ಹೆಚ್ಚು ಪ್ರಯಾಣಿಕರು ಪ್ರಯಾಣಿಸ್ತಿದ್ರು. ದೋಟಿಹಾಳ ಗ್ರಾಮದ ಬಳಿ ಬಸ್ ಬರುತ್ತಿದ್ದಂತೆ ಸ್ಟೇರಿಂಗ್ ಕಟ್ ಆಗಿ ಬುಡಮೇಲಾಗಿ ಬಿದ್ದಿದೆ. ಮೂವರ ಪ್ರಯಾಣಿಕರ ಸ್ಥಿತಿ ಚಿಂತಾಜನಕವಾಗಿದೆ.

    ಘಟನೆಯಿಂದ ಕೆಲ ಪ್ರಯಾಣಿಕರು ಅದೃಷ್ಟವಶಾತ್ ಪಾರಾಗಿದ್ದಾರೆ. ಗಾಯಾಳುಗಳನ್ನು ತಕ್ಷಣವೇ ಕುಷ್ಟಗಿ ಸರ್ಕಾರಿ ಆಸ್ಪತ್ರೆ ಗೆ ದಾಖಲು ಮಾಡಲಾಗಿದೆ. ಸ್ಥಳಕ್ಕೆ ಕುಷ್ಟಗಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.