Tag: Pumpwell

  • ಭಾರೀ ಮಳೆಗೆ ಮಂಗಳೂರಿನ ಪಂಪ್‍ವೆಲ್ ಫ್ಲೈಓವರ್ ಕೆಳಭಾಗ ಜಲಾವೃತ!

    ಭಾರೀ ಮಳೆಗೆ ಮಂಗಳೂರಿನ ಪಂಪ್‍ವೆಲ್ ಫ್ಲೈಓವರ್ ಕೆಳಭಾಗ ಜಲಾವೃತ!

    ಮಂಗಳೂರು: ರಾಜ್ಯದ ಕರಾವಳಿಯ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆರಾಯ ಅಬ್ಬರಿಸಿದ್ದಾನೆ. ಸಂಜೆವರೆಗೂ ಸಾಧಾರಣವಾಗಿ ಸುರಿಯುತ್ತಿದ್ದ ಮಳೆ ಬಳಿಕ ಭಾರೀ ಪ್ರಮಾಣದಲ್ಲಿ ಸುರಿದಿದೆ. ಮಂಗಳೂರು ನಗರ (Rain in Mangaluru) ಸೇರಿ ಜಿಲ್ಲಾದ್ಯಂತ ಸುರಿದ ಭಾರೀ ಮಳೆಗೆ ತಗ್ಗು ಪ್ರದೇಶಗಳಲ್ಲಿ ನೀರು ತುಂಬಿ ಹರಿಯಿತು. ನಗರದೊಳಗಿನ ಪ್ರಮುಖ ರಸ್ತೆಗಳು ಕೆಲ ಕಾಲ ಜಲಾವೃತವಾಗಿ ಸಂಚಾರಕ್ಕೆ ತೊಡಕಾಯಿತು.

    ಮುಂಗಾರು ಮಳೆ ಎಂಟ್ರಿ ಕೊಟ್ರೂ ರಾಜ್ಯದ ಕರಾವಳಿಯಲ್ಲಿ ಸರಿಯಾಗಿ ಮಳೆ ಸುರಿದಿಲ್ಲ. ಕೆಲ ದಿನಗಳಿಂದ ಆಗ್ಗಾಗ್ಗೆ ಬರುತ್ತಿದ್ದ ಮಳೆ ಮತ್ತೆ ಕಣ್ಮರೆಯಾಗಿ ಬಿಸಿಲಿನ ವಾತಾವರಣವಿತ್ತು. ಜುಲೈ 3 ರಿಂದ 5 ವರೆಗೂ ಕರಾವಳಿಯಲ್ಲಿ ಭಾರೀ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ (Weather Department) ಸೂಚನೆ ನೀಡಿದೆ. ಸೋಮವಾರ ಸಂಜೆ ವೇಳೆಗೆ ಸುಮಾರು ಎರಡು ಗಂಟೆಗಳ ಕಾಲ ಸುರಿದ ಭಾರೀ ಮಳೆ ಜನ ಜೀವನವನ್ನೇ ಅಸ್ತವ್ಯಸ್ತವನ್ನಾಗಿಸಿತ್ತು. ನಗರದ ಪ್ರಮುಖ ರಸ್ತೆಗಳು ಕೆರೆಯಂತಾಗಿ ವಾಹನ ಸವಾರರು ಪರದಾಡುವಂತಾಗಿತ್ತು. ಇದನ್ನೂ ಓದಿ: ಜಸ್ಟ್‌ 999 ರೂ.ಗೆ ಜಿಯೋ ಭಾರತ್‌ 4ಜಿ ಫೋನ್‌ ಬಿಡುಗಡೆ – ಗುಣ ವೈಶಿಷ್ಟ್ಯಗಳೇನು?

    ನಗರದ ಹೆಬ್ಬಾಗಿಲು ಎಂದೆನಿಸಿಕೊಂಡಿರುವ ಪಂಪ್‍ವೆಲ್ ಸರ್ಕಲ್‍ ನಲ್ಲಿ (Pumpwell Circle) ಪಕ್ಕದ ಚರಂಡಿ ತುಂಬಿ ರಸ್ತೆ ಜಲಾವೃತವಾಗಿತ್ತು. ಸುಮಾರು ಅರ್ಧ ಗಂಟೆಗಳ ಕಾಲ ವಾಹನ ಸಂಚಾರ ಸ್ಥಗಿತಗೊಂಡಿತ್ತು. ಹೀಗಾಗಿ ಕಿಲೋ ಮೀಟರ್ ಗಟ್ಟಲೆ ವಾಹನಗಳು ನಿಂತಿದ್ದವು. ಪಂಪ್‍ವೆಲ್ ಸರ್ಕಲ್‍ನಲ್ಲಿ ರಾಷ್ಟ್ರೀಯ ಹೆದ್ದಾರಿಗೆ ಫ್ಲೈಓವರ್ ಆದಂದಿನಿಂದ ಈ ಸಮಸ್ಯೆ ಇದೆ. ಫ್ಲೈಓವರ್‍ನ ಅಡಿ ಭಾಗದಲ್ಲಿ ನಗರಕ್ಕೆ ಹೋಗೋ ವಾಹನಗಳಿಗೆ ರಸ್ತೆಯಿದ್ದು ಅಲ್ಲೇ ಸಮೀಪದಲ್ಲಿ ಚರಂಡಿ ಇದೆ.

    ಈ ಚರಂಡಿಯ ಒಂದು ಭಾಗ ಎತ್ತರವಿದ್ದು ಇನ್ನೊಂದು ಭಾಗ ಕೆಳಗಿದೆ. ಹೀಗಾಗಿ ನೀರು ಹರಿದು ಹೋಗಬೇಕಿದ್ದ ಭಾಗದಲ್ಲಿ ಎತ್ತರ ಇರೋದ್ರಿಂದ ನೀರು ರಸ್ತೆಗೆ ನುಗ್ಗಿ ಬರುತ್ತದೆ. ಕಳೆದ ಐದಾರು ವರ್ಷದಿಂದ ಈ ಸಮಸ್ಯೆ ಇದ್ದರೂ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಮಾತ್ರ ಕಣ್ಣುಮುಚ್ಚಿ ಕೂತಿದ್ದಾರೆ. ಹೀಗಾಗಿ ಈ ಸಮಸ್ಯೆ ಪ್ರತೀ ವರ್ಷದ ಮೊದಲ ಮಳೆಗೆ ಇದ್ದೇ ಇರುತ್ತದೆ. ಇದಕ್ಕೆ ಶಾಶ್ವತ ಪರಿಹಾರ ಮಾಡಬೇಕೆಂದು ಅಧಿಕಾರಿಗಳಿಗೆ ಮನವಿ ಮಾಡಿದ್ರೂ ಪ್ರಯೋಜನ ಆಗಿಲ್ಲ.

    ಈ ರೀತಿಯ ಸಮಸ್ಯೆ ನಗರದ ಹಲವು ತಗ್ಗು ಪ್ರದೇಶದಲ್ಲಿ ಇದೆ. ಕೊಟ್ಟಾರ ಚೌಕಿ, ಮಾಲೆಮಾರ್ ಸೇರಿದಂತೆ ಹಲವು ಕಡೆ ರಸ್ತೆಯಲ್ಲಿ ನೀರು ತುಂಬಿತ್ತು. ನಗರದಲ್ಲಿ ಮಾತ್ರವಲ್ಲದೆ ಜಿಲ್ಲೆಯ ಬಂಟ್ವಾಳ, ಪುತ್ತೂರು ,ಬೆಳ್ತಂಗಡಿಯಲ್ಲೂ ಭಾರೀ ಮಳೆಯಾಗಿದೆ. ಇಂದು ಮತ್ತು ನಾಳೆಯೂ ಭಾರೀ ಮಳೆಯಾಗುವ ಮುನ್ಸೂಚನೆ ಹವಾಮಾನ ಇಲಾಖೆ ನೀಡಿದ್ದು ಜನ ಎಚ್ಚರದಿಂದ ಇರುವಂತೆ ಜಿಲ್ಲಾಡಳಿತವೂ ಮನವಿ ಮಾಡಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪಂಪ್‌ವೆಲ್‌ ಫ್ಲೈ ಓವರ್‌ ಬಳಿ ಬಾಂಬ್‌ ಸ್ಟೋಟಿಸಲು ಮುಂದಾಗಿದ್ದ ಶಾರೀಕ್‌

    ಪಂಪ್‌ವೆಲ್‌ ಫ್ಲೈ ಓವರ್‌ ಬಳಿ ಬಾಂಬ್‌ ಸ್ಟೋಟಿಸಲು ಮುಂದಾಗಿದ್ದ ಶಾರೀಕ್‌

    ಮಂಗಳೂರು: ಸೆರೆಸಿಕ್ಕ ಶಾರೀಕ್‌(Shariq) ಪಂಪ್‌ವೆಲ್‌ ಫ್ಲೈ ಓವರ್‌(Pumpwell Flyover) ಬಳಿ ಕುಕ್ಕರ್‌ ಬಾಂಬ್‌ ಇಡಲು ಪ್ಲ್ಯಾನ್‌ ಮಾಡಿದ್ದ ವಿಚಾರ ಪೊಲೀಸ್‌ ಮೂಲಗಳಿಂದ ತಿಳಿದು ಬಂದಿದೆ.

    ಪಂಪ್‌ವೆಲ್‌ ಯಾಕೆ?
    ಕೇರಳಕ್ಕೆ ಹೋಗುವ ವಾಹನಗಳ ಜೊತೆ ಹಾಸನ, ಕೊಡಗು, ಚಿಕ್ಕಮಗಳೂರು ಕಡೆಗೆ ಹೋಗುವ ವಾಹನಗಳು ಪಂಪ್‌ವೆಲ್‌ ಮೂಲಕವೇ ಸಾಗುತ್ತದೆ. ವಾಹನಗಳ ಮಂಗಳೂರು ನಗರದ ಪ್ರವೇಶ ಮತ್ತು ನಿರ್ಗಮನ ಈ ರಸ್ತೆಯ ಮೂಲಕವೇ ಆಗುತ್ತದೆ.

    ಮಂಗಳೂರಿಗೆ ಹಲವು ಬಾರಿ ಬಂದಿದ್ದ ಶಾರೀಕ್‌ ನಗರದಲ್ಲಿ ಎಲ್ಲಿ ಹೆಚ್ಚು ಜನರು ಸಂಚರಿಸುತ್ತಾರೆ ಎಂಬುದನ್ನು ತಿಳಿದಿದ್ದ. ಇಲ್ಲಿ ಯಾವುದೇ ಬಸ್‌ ಸ್ಟ್ಯಾಂಡ್‌ ಇಲ್ಲ. ಸಂಜೆಯ ವೇಳೆಗೆ ಜನ ಇಲ್ಲಿ ಬಸ್‌ ಹತ್ತಲು ನಿಂತಿರುತ್ತಾರೆ. ಅದರಲ್ಲೂ ಕೋಣಾಜೆ-ತೊಕ್ಕೊಟ್ಟು-ಉಳ್ಳಾಲ ಭಾಗಕ್ಕೆ ತೆರಳುವ ಜನರು ಅತಿ ಹೆಚ್ಚು ಸಂಖ್ಯೆಯಲ್ಲಿ ಇಲ್ಲಿ ಇರುತ್ತಾರೆ. ಈ ಕಾರಣಕ್ಕೆ ಶಾರೀಕ್‌ ಪಂಪ್‌ವೆಲ್‌ ಬಳಿಯೇ ಕುಕ್ಕರ್‌ ಬಾಂಬ್‌ ಇಡಲು ಪ್ಲ್ಯಾನ್‌ ಮಾಡಿದ್ದ. ಇದನ್ನೂ ಓದಿ: ಭಾರತವನ್ನು ಇಸ್ಲಾಂ ರಾಷ್ಟ್ರ ಮಾಡುವ ಗುರಿ- ಮಂಗಳೂರು ಸ್ಫೋಟಕ್ಕೆ ಬೆಂಗಳೂರು ಲಿಂಕ್

    ಶನಿವಾರ ಸಂಜೆ 5 ಗಂಟೆಯ ವೇಳೆ ಮಂಗಳೂರಿನ(Mangaluru) ನಾಗುರಿ ಕಡೆ ಚಲಿಸುತ್ತಿದ್ದ ಆಟೋ ನಿಗೂಢ ಸ್ಫೋಟಗೊಂಡಿತ್ತು. ದಾರಿ ಮಧ್ಯೆ ಕುಕ್ಕರ್ ಹಿಡಿದುಕೊಂಡು ಆಟೋ ಹತ್ತಿದ್ದ ಶಾರೀಕ್‌ ನಾಗುರಿಗೆ ಹೋಗಲು ಚಾಲಕನಿಗೆ ಸೂಚಿಸಿದ್ದ. ಆದರೆ ಕೆಲವೇ ಕ್ಷಣಗಳಲ್ಲಿ ನಾಗುರಿಯ ಕಂಕನಾಡಿ ಪೊಲೀಸ್ (Police) ಠಾಣೆಯ ಎದುರು ಆಟೋದ ಒಳಗೆ ಸ್ಫೋಟಗೊಂಡಿದ್ದು ಶಾರೀಕ್‌ ಕೈಯಲ್ಲಿದ್ದ ಕುಕ್ಕರ್ ಛಿದ್ರಗೊಂಡಿತ್ತು.

    Live Tv
    [brid partner=56869869 player=32851 video=960834 autoplay=true]