Tag: Pune-Bengaluru National Highway

  • ಹುಬ್ಬಳ್ಳಿ ಬೈಪಾಸ್ ಬಳಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು – ಛಿದ್ರ ಛಿದ್ರವಾದ ದೇಹಗಳು

    ಹುಬ್ಬಳ್ಳಿ ಬೈಪಾಸ್ ಬಳಿ ಭೀಕರ ಅಪಘಾತ: ಇಬ್ಬರು ಸ್ಥಳದಲ್ಲೇ ಸಾವು – ಛಿದ್ರ ಛಿದ್ರವಾದ ದೇಹಗಳು

    ಹುಬ್ಬಳ್ಳಿ: ಬೈಕ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಹೊರವಲಯದಲ್ಲಿರುವ ಗೋಕುಲ ಗ್ರಾಮದ ಧಾರಾವತಿ ಹನುಮಂತ ದೇವಸ್ಥಾನದ ಬೈಪಾಸ್ ಬಳಿ ನಡೆದಿದೆ.

    ಮೃತ ವ್ಯಕ್ತಿಗಳ ಗುರುತು ಪತ್ತೆಯಾಗದ ರೀತಿಯಲ್ಲಿ ದೇಹಗಳು ಛಿದ್ರಗೊಂಡಿದ್ದು, ಸದ್ಯ ಇಬ್ಬರ ಕುರಿತು ಮಾಹಿತಿಯನ್ನು ಕಲೆ ಹಾಕುತ್ತಿದ್ದಾರೆ.ಇದನ್ನೂ ಓದಿ: ಇಂದು ಮಹಾರಾಷ್ಟ್ರ, ಜಾರ್ಖಂಡ್ ವಿಧಾನಸಭೆ ಚುನಾವಣೆ ಘೋಷಣೆ

    ಪೂನಾ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಬಳಿ ಅವಘಡ ಸಂಭವಿಸಿದ್ದು, ಅಪರಿಚಿತ ವಾಹನವೊಂದು ಬೈಕ್‌ಗೆ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಹುಬ್ಬಳ್ಳಿಯ ಉತ್ತರ ಸಂಚಾರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ.

    ಸಾವಿನ ಹೆದ್ದಾರಿಗೆ ಮತ್ತೆರಡು ಬಲಿಯಾಗಿದ್ದು, ಈ ಹೆದ್ದಾರಿಯಲ್ಲಿ ಪ್ರತಿದಿನವೂ ಸಂಚರಿಸುವಾಗ ಜೀವವನ್ನು ಕೈಯಲ್ಲಿ ಹಿಡಿದು ಸಂಚರಿಸಬೇಕು. ಹೆದ್ದಾರಿ-1400 ಹಗಲೀಕರಣವಾಗಬೇಕು. ಕಾಮಗಾರಿಗೆ ಚಾಲನೆ ಸಿಕ್ಕಿ ಮೂರು ವರ್ಷ ಕಳೆದಿದ್ದರೂ, ಇದರಿಂದ ಇನ್ನೂ ಜನರಿಗೆ ಉಪಯೋಗವಾಗಿಲ್ಲ. ಇದೇ ಕಾರಣಕ್ಕಾಗಿ ರಾಷ್ಟ್ರೀಯ ಹೆದ್ದಾರಿ ದಿನೇ ದಿನೇ ಬಲಿ ಪಡೆದುಕೊಳ್ಳುತ್ತಿದೆ ಎಂದು ಸವಾರರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.ಇದನ್ನೂ ಓದಿ: ಬಾಬಾ ಸಿದ್ದಿಕಿ ಹತ್ಯೆ ಬಳಿಕ ಸಲ್ಮಾನ್ ಖಾನ್‌ಗೆ Y+ ಭದ್ರತೆ

  • ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಬಸ್‌ಗೆ ಟ್ರಕ್ ಡಿಕ್ಕಿ; ನಾಲ್ವರು ಸಾವು, 22 ಜನರಿಗೆ ಗಾಯ

    ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಬಸ್‌ಗೆ ಟ್ರಕ್ ಡಿಕ್ಕಿ; ನಾಲ್ವರು ಸಾವು, 22 ಜನರಿಗೆ ಗಾಯ

    ಮುಂಬೈ: ಟ್ರಕ್ (Truck) ಹಾಗೂ ಖಾಸಗಿ ಬಸ್ (Bus) ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ (Accident) ನಾಲ್ವರು ಸಾವನ್ನಪ್ಪಿದ್ದು, 22 ಜನರು ಗಾಯಗೊಂಡಿರುವ ಘಟನೆ ಮಹಾರಾಷ್ಟ್ರದ (Maharashtra) ಪುಣೆಯಲ್ಲಿ ನಡೆದಿದೆ.

    ಅಂಬೇಗಾಂವ್ ಪ್ರದೇಶದ ನರ್ಹೆ ಗ್ರಾಮದಲ್ಲಿ ಪುಣೆ-ಬೆಂಗಳೂರು ಹೆದ್ದಾರಿಯ (Pune-Bengaluru National Highway) ಸ್ವಾಮಿ ನಾರಾಯಣ ದೇವಸ್ಥಾನದ ಪಕ್ಕದಲ್ಲಿರುವ ನವಲೆ ಸೇತುವೆ ಬಳಿ ಈ ಅಪಘಾತ ಸಂಭವಿಸಿದೆ.

    ವರದಿಗಳ ಪ್ರಕಾರ ಸಕ್ಕರೆ ಚೀಲಗಳನ್ನು ಹೊತ್ತೊಯ್ಯುತ್ತಿದ್ದ ಟ್ರಕ್ ಖಾಸಗಿ ಬಸ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ವಾಹನಗಳು ಪಲ್ಟಿಯಾಗಿದ್ದು, ನಜ್ಜುಗುಜ್ಜಾಗಿವೆ. ತಕ್ಷಣವೇ ಅಗ್ನಿಶಾಮಕ ದಳ ಘಟನಾ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದೆ. ಪಿಎಂಆರ್‌ಡಿಎಯಿಂದ ಒಂದು ರಕ್ಷಣಾ ವ್ಯಾನ್ ಸೇರಿದಂತೆ ಒಟ್ಟು 7 ಅಗ್ನಿಶಾಮಕ ವಾಹನಗಳು ರಕ್ಷಣಾ ಕಾರ್ಯದಲ್ಲಿ ತೊಡಗಿವೆ. ಇದನ್ನೂ ಓದಿ: 2 ಲಾರಿಗಳ ಮುಖಾಮುಖಿ ಡಿಕ್ಕಿ – ಓರ್ವ ಸಾವು, ಮೂವರಿಗೆ ಗಂಭೀರ ಗಾಯ

    ಗಾಯಾಳುಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ರವಾನಿಸಿ ಸೂಕ್ತ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಅಪಘಾತಕ್ಕೆ ಕಾರಣವೇನು ಎಂಬುದನ್ನು ತಿಳಿಯಲು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮತ್ತೆ 3 ದಿನಗಳ ಕಾಲ ಮಳೆ

  • ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ – ಒಟ್ಟಿಗೆ 48 ವಾಹನಗಳು ಜಖಂ

    ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ – ಒಟ್ಟಿಗೆ 48 ವಾಹನಗಳು ಜಖಂ

    ಮುಂಬೈ: ಪುಣೆಯಲ್ಲಿರುವ ಬೆಂಗಳೂರು ಹೆದ್ದಾರಿಯ (Pune Bengaluru National Highway) ನವಲೆ ಸೇತುವೆಯಲ್ಲಿ (Fire Brigade) ಭೀಕರ ಅಪಘಾತ ಸಂಭವಿಸಿದ್ದು, ಒಟ್ಟಿಗೆ 48 ವಾಹನಗಳು ಜಖಂಗೊಂಡಿವೆ. ಟ್ಯಾಂಕರ್‌ವೊಂದರ ಬ್ರೇಕ್ ವೈಫಲ್ಯದಿಂದಾಗಿ ಕನಿಷ್ಠ 48 ವಾಹನಗಳು ಅಪಘಾತಕ್ಕೀಡಾಗಿವೆ.

    ರಾತ್ರಿ 8:30ರ ಸುಮಾರಿಗೆ ಘಟನೆ ನಡೆದಿದ್ದು, ಹಲವರು ಗಾಯಗೊಂಡಿರುವ ಶಂಕೆ ವ್ಯಕ್ಯವಾಗಿದೆ. ಸದ್ಯ ಪುಣೆ ಅಗ್ನಿಶಾಮಕ ದಳ ಮತ್ತು ಪುಣೆ ಮೆಟ್ರೋಪಾಲಿಟನ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ (PMRDA) ರಕ್ಷಣಾ ತಂಡಗಳು ಸ್ಥಳಕ್ಕೆ ಭೇಟಿ ನೀಡಿ ಕಾರ್ಯಾಚರಣೆ ನಡೆಸುತ್ತಿವೆ. ಸಾರ್ವಜನಿಕರ ಸುರಕ್ಷತೆಗಾಗಿ ಅಂಬುಲೆನ್ಸ್‌ಗಳ ವ್ಯವಸ್ಥೆಯನ್ನು ನಿಯೋಜಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕಾಡಾನೆ ದಾಳಿಗೆ ಮಹಿಳೆ ಬಲಿ – ಮೃತದೇಹ ನೋಡಲು ಬಂದ ಶಾಸಕನ ಮೇಲೆ ಗ್ರಾಮಸ್ಥರಿಂದ ಹಲ್ಲೆ

    ಪಿಎಂಆರ್‌ಡಿಎ (PMRDA) ಅಗ್ನಿಶಾಮಕ ದಳದ ಅಧಿಕಾರಿ ಸುಜಿತ್ ಪಾಟೀಲ್ ಮಾತನಾಡಿ, ಪ್ರಾಥಮಿಕ ಮಾಹಿತಿಯ ಪ್ರಕಾರ ಟ್ಯಾಂಕರ್ ಬ್ರೇಕ್ ವೈಫಲ್ಯದ ನಂತರ ಕನಿಷ್ಠ 48 ವಾಹನಗಳು ಅಪಘಾತಕ್ಕೀಡಾಗಿವೆ. ಹಾನಿಗೊಳಗಾದ ವಾಹನಗಳಿಂದ ಗಾಯಗೊಂಡ ಕೆಲ ನಾಗರಿಕರನ್ನ ಹತ್ತಿರದ ಆಸ್ಪತ್ರೆಗಳಿಗೆ (Hospital) ಕರೆದೊಯ್ಯಲಾಗಿದೆ. ಸದ್ಯಕ್ಕೆ ಗಾಯಗೊಂಡವರ ಸಂಖ್ಯೆ ಮತ್ತು ಅವರ ಗಾಯಗಳ ಸ್ವರೂಪದ ನಮಗೆ ತಿಳಿದಿಲ್ಲ. ಅಗ್ನಿಶಾಮಕ ದಳದ ರಕ್ಷಣಾ ತಂಡಗಳು ಕಾರ್ಯಾಚರಣೆ ನಡೆಸುತ್ತಿವೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಉಗ್ರರ ಅಡಗುತಾಣವಾಗ್ತಿದ್ಯಾ ಮಂಗಳೂರು – ಕರಾವಳಿ ಜಿಲ್ಲೆಯಾದ್ಯಂತ ಹೈ ಅಲರ್ಟ್

    Live Tv
    [brid partner=56869869 player=32851 video=960834 autoplay=true]

  • ಮಳೆಯ ರಣಾರ್ಭಟ, ಚಿಕ್ಕೋಡಿಯಲ್ಲಿ ಪ್ರವಾಹ, ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತ

    ಮಳೆಯ ರಣಾರ್ಭಟ, ಚಿಕ್ಕೋಡಿಯಲ್ಲಿ ಪ್ರವಾಹ, ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸಂಚಾರ ಸ್ಥಗಿತ

    – ಚಿಕ್ಕೋಡಿ ಉಪ ವಿಭಾಗದಲ್ಲಿ ಪ್ರವಾಹ ಸೃಷ್ಟಿ

    ಚಿಕ್ಕೋಡಿ/ಬೆಳಗಾವಿ: ಮಹಾರಾಷ್ಟ್ರದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಗ್ರಾಮಗಳಿಗೆ ನೀರು ನುಗ್ಗಿದ್ದು, ವೇದಗಂಗಾ ನದಿ ತುಂಬಿ ಹರಿಯುತ್ತಿದೆ. ಅಲ್ಲದೆ ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4 ಜಲಾವೃತವಾಗಿದ್ದು, ಸಂಚಾರ ಸ್ಥಗಿತಗೊಂಡಿದೆ.

    ಜಿಲ್ಲೆಯ ನಿಪ್ಪಾಣಿ ತಾಲೂಕಿನ ಹುನ್ನರಗಿ ಗ್ರಾಮಕ್ಕೆ ನೀರು ನಿಗ್ಗಿದ್ದು, ಹುನ್ನರಗಿ ಗ್ರಾಮದ ಮನೆಗಳು, ದೇವಸ್ಥಾನ ಜಲಾವೃತವಾಗಿವೆ. ಸ್ಥಳೀಯರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಜಿಲ್ಲಾಡಳಿತ ಹರಸಾಹಸಪಡುತ್ತಿದೆ. ವೇದಗಂಗಾ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದ್ದು, ನಿಪ್ಪಾಣಿ ತಾಲೂಕಿನ ಕೋಡಣಿ ಗ್ರಾಮ ಜಲಾವೃತವಾಗಿದೆ. 200ಕ್ಕೂ ಹೆಚ್ಚು ಮನೆಗಳು ಜಲಾವೃತವಾಗಿದ್ದು, ಜನರನ್ನು ಸ್ಥಳಾಂತರಿಸಲು ಜಿಲ್ಲಾಡಳಿತ ಹರಸಾಹಸಪಡುತ್ತಿದೆ.

    ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಸ್ಥಗಿತ:
    ಮಹಾರಾಷ್ಟ್ರ ಹಾಗೂ ಕರ್ನಾಟಕದ ಗಡಿ ಭಾಗದಲ್ಲಿ ಅಪಾರ ಪ್ರಮಾಣದಲ್ಲಿ ಮಳೆಯಾದ ಪರಿಣಾಮ ವೇದ ಗಂಗಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದ್ದು, ಪುಣೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 4ರ ಸಂಚಾರ ಸ್ಥಗಿತಗೊಂಡಿದೆ.

    ಬೆಳಗಾವಿ ಜಿಲ್ಲೆಯ ನಿಪ್ಪಾಣಿ ತಾಲೂಕಿನ ಯಮಗರಣಿ ಗ್ರಾಮದ ಬಳಿ ಇರುವ ವೇದಗಂಗಾ ನದಿ ನೀರು ರಾಷ್ಟ್ರೀಯ ಹೆದ್ದಾರಿಯನ್ನು ಆವರಿಸಿದ್ದು, ಸಂಚಾರ ಸ್ಥಗಿತಗೊಂಡಿದೆ. ನಿತ್ಯ ಸಾವಿರಾರು ವಾಹನಗಳು ಓಡಾಡುವ ರಾಷ್ಟ್ರೀಯ ಹೆದ್ದಾರಿ 4 ಇದಾಗಿದೆ. ನದಿ ನೀರಿನಲ್ಲಿ ಒಂದು ಲಾರಿ, ಓಮಿನಿ ಸಿಲುಕಿದ್ದು, ಓಮಿನಿಯಲ್ಲಿದ್ದ 11 ಜನರನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ. ಮಹಾರಾಷ್ಟ್ರದಿಂದ ಕರ್ನಾಟಕ ಮೂಲಕ ತಮಿಳುನಾಡು ಹೋಗುತ್ತಿದ್ದ ಲಾರಿಯಲ್ಲಿ ಸಿಲುಕಿದ್ದ ಓರ್ವ ಚಾಲಕನನ್ನು ಪೊಲೀಸರು ರಕ್ಷಣೆ ಮಾಡಿದ್ದಾರೆ.

    ಕುಡಚಿ ಸೇತುವೆ ಜಲಾವೃತ:
    ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶ ಹಾಗೂ ಜಿಲ್ಲೆಯಾದ್ಯಂತ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ಕೃಷ್ಣಾ ನದಿಗೆ ಅಪಾರ ಪ್ರಮಾಣದ ನೀರು ಹರಿದು ಬರುತ್ತಿದೆ. ಕೃಷ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, 1.91 ಲಕ್ಷ ಕ್ಯೂಸೆಕ್ಸ್ ಗೂ ಅಧಿಕ ನೀರು ನದಿಗೆ ಹರಿದು ಬರುತ್ತಿದೆ. ನೀರು ಹೆಚ್ಚಳದಿಂದ ರಾಜ್ಯ ಹೆದ್ದಾರಿ ಸಂಪರ್ಕ ಕಡಿತಗೊಂಡಿದ್ದು, ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿ-ಉಗಾರ ಮದ್ಯದ ಸೇತುವೆ ಜಲಾವೃತವಾಗಿದೆ.

    ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಮಠಗಲ್ಲಿ ಸಂಪೂರ್ಣ ಜಲಾವೃತವಾಗಿದೆ. 150ಕ್ಕೂ ಹೆಚ್ಚು ಮನೆಗಳಿಗೆ ನೀರು ನುಗಿದ್ದು, ಹೀರಣ್ಯಕೇಶಿ ನದಿ ಅಪಾಯ ಮಟ್ಟ ಮೀರಿ ಹರಿಯುತ್ತಿದೆ. ನದಿ ತೀರದ ಐತಿಹಾಸಿಕ ಶಂಕರಲಿಂಗ ದೇವಸ್ಥಾನ ಜಲಾವೃತವಾಗಿದೆ. ಸ್ಥಳಕ್ಕೆ ಬೆಳಗಾವಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರವಾಹ ಎದುರಿಸಲು ಬೆಳಗಾವಿ ಜಿಲ್ಲಾಡಳಿತ ಸನ್ನದವಾಗಿದೆ ಎಂದಿದ್ದಾರೆ.