Tag: Pune Court

  • ಪೋರ್ಶೆ ಕಾರು ಅಪಘಾತ ಪ್ರಕರಣ – ಆರೋಪಿಯ ಪೋಷಕರಿಗೆ ಜೂ.5 ರವರೆಗೆ ಪೊಲೀಸ್ ಕಸ್ಟಡಿ

    ಪೋರ್ಶೆ ಕಾರು ಅಪಘಾತ ಪ್ರಕರಣ – ಆರೋಪಿಯ ಪೋಷಕರಿಗೆ ಜೂ.5 ರವರೆಗೆ ಪೊಲೀಸ್ ಕಸ್ಟಡಿ

    ಮುಂಬೈ: ಪುಣೆಯಲ್ಲಿ ಪೋರ್ಶೆ ಕಾರು ಅಪಘಾತವೆಸಗಿದ (Pune Porsche Car Crash) ಆರೋಪದ ಮೇಲೆ ಬಂಧನಕ್ಕೊಳಗಾದ ಅಪ್ರಾಪ್ತ ಬಾಲಕನ ಪೋಷಕರನ್ನು ಪುಣೆಯ ಕೋರ್ಟ್ ಸಾಕ್ಷ್ಯ ನಾಶಪಡಿಸಿದ ಪ್ರಕರಣದಲ್ಲಿ ಜೂ.5ರ ವರೆಗೆ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

    ಮೇ 19 ರಂದು ಮಹಾರಾಷ್ಟ್ರದ ಪುಣೆ ನಗರದಲ್ಲಿ ನಡೆದ ಕಾರು ಅಪಘಾತದಲ್ಲಿ ಇಬ್ಬರು ಇಂಜಿನಿಯರ್‌ಗಳು ಸಾವಿಗೀಡಾಗಿದ್ದರು. ಈ ಪ್ರಕರಣದಲ್ಲಿ ಕಾರು ಚಲಾಯಿಸುತ್ತಿದ್ದ ಅಪ್ರಾಪ್ತನ ವೈದ್ಯಕೀಯ ಪರೀಕ್ಷೆ ವೇಳೆ ರಕ್ತದ ಮಾದರಿಯನ್ನು ಬದಲಾಯಿಸಿ, ಬಾಲಕನ ತಾಯಿಯ ರಕ್ತವನ್ನು ಇರಿಸಿದ್ದು ಸಾಭೀತಾದ ಬಳಿಕ ಬಾಲಕನ ತಾಯಿ ಶಿವಾನಿ ಅಗರ್ವಾಲ್‍ನನ್ನು ಜೂ.1ರಂದು ಬಂಧಿಸಲಾಗಿತ್ತು.

    ಸಾಕ್ಷ್ಯ ನಾಶ ಆರೋಪದಲ್ಲಿ ಈ ಹಿಂದೆ ಬಂಧಿತನಾಗಿದ್ದ ಬಾಲಕನ ತಂದೆ ವಿಶಾಲ್ ಅಗರವಾಲ್‍ನನ್ನು ಹಾಗೂ ಆತನ ಪತ್ನಿಯನ್ನು ಪೊಲೀಸರು ಮಹಾರಾಷ್ಟ್ರದ ಪುಣೆಯ ನ್ಯಾಯಾಲಯದ (Pune Court) ಮುಂದೆ ಇಂದು (ಭಾನುವಾರ) ಹಾಜರುಪಡಿಸಿದ್ದರು. ಈ ವೇಳೆ ನ್ಯಾಯಾಲಯ ಜೂ.5 ರವರೆಗೆ ಅವರನ್ನು ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.

    ಮೇ 19 ರಂದು ಮುಂಜಾನೆ 3:30ರ ಸುಮಾರಿಗೆ ಕುಡಿದ ಅಮಲಿನಲ್ಲಿ ಅಪ್ರಾಪ್ತ ಆರೋಪಿಯು ತನ್ನ ಐಷಾರಾಮಿ ಪೋರ್ಶೆ ಕಾರಿನಿಂದ ಇಬ್ಬರ ಹತ್ಯೆಗೆ ಕಾರಣವಾದನು. ಆರಂಭದಲ್ಲಿ ಆರೋಪಿ ಮದ್ಯ ಸೇವಿಸಿಲ್ಲ ಎನ್ನಲಾಗಿತ್ತು. ಸಿಸಿಟಿವಿ ದೃಶ್ಯಾವಳಿಯಲ್ಲಿ ಆತ ತನ್ನ ಸ್ನೇಹಿತರೊಂದಿಗೆ ಬಾರ್‌ನಲ್ಲಿ ಮದ್ಯ ಸೇವಿಸುತ್ತಿರುವುದು ಕಂಡುಬಂದಿತ್ತು.

    ಈ ಪ್ರಕರಣದಲ್ಲಿ ಆರೋಪಿಯ ಅಜ್ಜ ಮತ್ತು ತಂದೆ ಮತ್ತು ಇಬ್ಬರು ವೈದ್ಯರು ಸೇರಿದಂತೆ ಒಟ್ಟು 9 ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ. ಇವರಲ್ಲಿ ಪಬ್ ಮಾಲೀಕರು, ಇಬ್ಬರು ವ್ಯವಸ್ಥಾಪಕರು ಮತ್ತು ಇಬ್ಬರು ಸಿಬ್ಬಂದಿ ಸೇರಿದ್ದಾರೆ. ಅವರನ್ನು ಕೋಜಿ ರೆಸ್ಟೋರೆಂಟ್‍ನ ಮಾಲೀಕ ಪ್ರಹ್ಲಾದ್, ಅವರ ಮ್ಯಾನೇಜರ್ ಸಚಿನ್ ಕಾಟ್ಕರ್, ಬ್ಲಾಕ್ ಕ್ಲಬ್ ಹೋಟೆಲ್ ಮ್ಯಾನೇಜರ್ ಸಂದೀಪ್ ಸಾಂಗ್ಲೆ ಮತ್ತು ಅವರ ಸಿಬ್ಬಂದಿ ಜಯೇಶ್ ಬೋಂಕರ್ ಮತ್ತು ನಿತೇಶ್ ಶೇವಾನಿ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಅಪ್ರಾಪ್ತ ಆರೋಪಿಗಳಿಗೆ ಮದ್ಯ ನೀಡಿದ ಆರೋಪ ಹೊತ್ತಿದ್ದಾರೆ.

  • ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ- ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

    ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣ- ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

    ಮುಂಬೈ: ಖ್ಯಾತ ವಿಚಾರವಾದಿ ಡಾ. ನರೇಂದ್ರ ದಾಭೋಲ್ಕರ್ (Narendra Dabholkar) ಅವರನ್ನು ಹತ್ಯೆಗೈದಿದ್ದ ಇಬ್ಬರಿಗೆ ಪುಣೆಯ ವಿಶೇಷ ಯುಎಪಿಎ ನ್ಯಾಯಾಲಯ (Pune court) ಜೀವಾವಧಿ ಶಿಕ್ಷೆ ವಿಧಿಸಿದೆ. ಇತರ ಮೂವರನ್ನು ಆರೋಪ ಮುಕ್ತಗೊಳಿಸಿ ಆದೇಶ ಹೊರಡಿಸಿದೆ.

    ಇಬ್ಬರು ಶೂಟರ್‌ಗಳಾದ ಶರದ್ ಕಲಾಸ್ಕರ್ ಮತ್ತು ಸಚಿನ್ ಅಂದುರೆ ತಪ್ಪಿತಸ್ಥರು ಎಂದು ನ್ಯಾಯಾಲಯ ಆದೇಶಿಸಿದೆ. ಹತ್ಯೆ ಪ್ರಕರಣದಲ್ಲಿ ಇತರ ಮೂವರು ಆರೋಪಿಗಳಾದ ವೀರೇಂದ್ರಸಿನ್ಹ ತಾವಡೆ, ಸಂಜೀವ್ ಪುನಾಲೇಕರ್ ಮತ್ತು ವಿಕ್ರಮ್ ಭಾವೆ ಎಂಬವರ ವಿರುದ್ಧ ಆರೋಪವನ್ನು ಸಾಬೀತುಪಡಿಸಲು ಪ್ರಾಸಿಕ್ಯೂಷನ್ ವಿಫಲವಾದ ಕಾರಣ ಮೂವರನ್ನು ಆರೋಪ ಮುಕ್ತಗೊಳಿಸಲಾಗಿದೆ. ಇದನ್ನೂ ಓದಿ: ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್‌ಗೆ ಜಾಮೀನು ಮಂಜೂರು

    2013 ರ ಆ.20 ರಂದು ನರೇಂದ್ರ ದಾಭೋಲ್ಕರ್ ಅವರು ಪುಣೆಯ ಓಂಕಾರೇಶ್ವರ ಸೇತುವೆಯ ಮೇಲೆ ಬೆಳಗ್ಗಿನ ಜಾವ ವಾಯುವಿಹಾರಕ್ಕೆ ತೆರಳಿದ್ದಾಗ ಗುಂಡಿಕ್ಕಿ ಹತ್ಯೆ ಮಾಡಲಾಗಿತ್ತು. ಪ್ರಕರಣದಲ್ಲಿ ಐವರನ್ನು ಆರೋಪಿಗಳೆಂದು ಹೆಸರಿಸಲಾಗಿತ್ತು. ತನಿಖೆ ನಡೆಸಿದ್ದ ಅಧಿಕಾರಿಗಳು, ದಾಭೋಲ್ಕರ್ ಅವರು ಮೂಢನಂಬಿಕೆ ವಿರುದ್ಧ ಅಭಿಯಾನ ನಡೆಸುತ್ತಿದ್ದ ಕಾರಣ ಕೊಲೆ ಮಾಡಲಾಗಿದೆ ಎಂದು ತಿಳಿಸಿದ್ದರು. ಬಳಿಕ 2014ರಲ್ಲಿ, ಬಾಂಬೆ ಹೈಕೋರ್ಟ್ ನಿರ್ದೇಶನದ ನಂತರ ಸಿಬಿಐ ತನಿಖೆಯನ್ನು ವಹಿಸಿಕೊಂಡಿತ್ತು.

    ವಿಚಾರಣೆ ವೇಳೆ, ಹಿಂದೂ ಬಲಪಂಥೀಯ ಸಂಘಟನೆಯಾದ ಸನಾತನ ಸಂಸ್ಥೆಯೊಂದಿಗೆ ಸಂಪರ್ಕ ಹೊಂದಿದ್ದ ಇಎನ್‍ಟಿ ಶಸ್ತ್ರಚಿಕಿತ್ಸಕ ಡಾ. ವೀರೇಂದ್ರಸಿನ್ಹ್ ತಾವಡೆ ಕೊಲೆಯ ಮಾಸ್ಟರ್ ಮೈಂಡ್ ಎಂದು ಪ್ರಾಸಿಕ್ಯೂಷನ್ ಹೇಳಿಕೊಂಡಿತ್ತು. ಇದನ್ನೂ ಓದಿ: ಪ್ರಜ್ವಲ್ ನನ್ನ ಸಂಪರ್ಕಕ್ಕೆ ಬಂದಿಲ್ಲ: ನಿಖಿಲ್ ಕುಮಾರಸ್ವಾಮಿ

  • ದಾಬೋಲ್ಕರ್ ಹತ್ಯೆ ಪ್ರಕರಣ: ಸನಾತನ ಸಂಸ್ಥೆ ವಕೀಲ ನ್ಯಾಯಾಂಗ ಬಂಧನಕ್ಕೆ

    ದಾಬೋಲ್ಕರ್ ಹತ್ಯೆ ಪ್ರಕರಣ: ಸನಾತನ ಸಂಸ್ಥೆ ವಕೀಲ ನ್ಯಾಯಾಂಗ ಬಂಧನಕ್ಕೆ

    ಪುಣೆ: ವಿಚಾರವಾದಿ ನರೇಂದ್ರ ದಾಬೋಲ್ಕರ್ ಹತ್ಯೆ ಪ್ರಕರಣದ ಆರೋಪಿ ಹಾಗೂ ಸನಾತನ ಸಂಸ್ಥಾದ ವಕೀಲ ಸಂಜೀವ್ ಪುನಲೇಕರ್ ಅವರನ್ನು ಪುಣೆ ನ್ಯಾಯಾಲಯ ಜುಲೈ 6ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

    ವಕೀಲ ಪುನಲೇಕರ್ ಅವರ ಲ್ಯಾಪ್‍ಟಾಪ್‍ನಲ್ಲಿ ಮಹತ್ವದ ದಾಖಲೆಗಳು ಸಿಕ್ಕಿದೆ. ಹೀಗಾಗಿ ಆರೋಪಿಯನ್ನು ವಿಚಾರಣೆ ನಡೆಸಲು ಕಸ್ಟಡಿಗೆ ನೀಡಬೇಕೆಂದು ಸಿಬಿಐ ಮನವಿ ಮಾಡಿತ್ತು. ಮನವಿಯ ಹಿನ್ನೆಲೆಯಲ್ಲಿ ವಿಶೇಷ ನ್ಯಾಯಾಧೀಶರಾದ ಆರ್.ಎಂ.ಪಾಂಡೆ ಅವರು ಜೂನ್ 23ರ ವರೆಗೆ ಸಿಬಿಐ ಕಸ್ಟಡಿಗೆ ನೀಡಿದ್ದರು.

    ವಿಚಾರಣೆ ಪೂರ್ಣಗೊಳಿಸಿದ ಬಳಿಕ ಸಿಬಿಐ ಜೂನ್ 23 ರಂದು ಮತ್ತೆ ಪುನಲೇಕರ್ ಅವರನ್ನು ವಿಚಾರಣೆ ನಡೆಸುವ ಅಗತ್ಯವಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಿತ್ತು. ಈ ಹಿನ್ನೆಲೆಯಲ್ಲಿ ನ್ಯಾಯಾಧೀಶರು ಜುಲೈ 6ವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದ್ದಾರೆ.

    ವಕೀಲ ಪುನಲೇಕರ್ ಹಾಗೂ ಈತನ ಸಹಚರ ವಿಕ್ರಮ್ ಭಾವೆಯನ್ನು ಮೇ 25ರಂದು ಸಿಬಿಐ ಬಂಧಿಸಿತ್ತು. ವಿಚಾರವಾದಿ ನರೇಂದ್ರ ದಾಬೋಲ್ಕರ್ ಅವರನ್ನು 2013ರ ಆ.20ರಂದು ಗುಂಡು ಹಾರಿಸಿ ಕೊಲೆ ಮಾಡಲಾಗಿತ್ತು.

    [wonderplugin_video iframe=”https://www.youtube.com/watch?v=7Z2BzrhFEKQ” lightbox=0 lightboxsize=1 lightboxwidth=960 lightboxheight=540 autoopen=0 autoopendelay=0 autoclose=0 lightboxtitle=”” lightboxgroup=”” lightboxshownavigation=0 showimage=”” lightboxoptions=”” videowidth=600 videoheight=400 keepaspectratio=1 autoplay=1 loop=1 videocss=”position:relative;display:block;background-color:#000;overflow:hidden;max-width:100%;margin:0 auto;” playbutton=”https://publictv.in/wp-content/plugins/wonderplugin-video-embed/engine/playvideo-64-64-0.png”]