Tag: Pune police

  • ಪುಣೆ ಪೋರ್ಷೆ ಕೇಸ್; ಆರೋಪಿಯ ಬಾಲಾಪರಾಧಿ ಎಂದು ಪರಿಗಣಿಸಿ ವಿಚಾರಣೆ – ಬಾಲ ನ್ಯಾಯ ಮಂಡಳಿ

    ಪುಣೆ ಪೋರ್ಷೆ ಕೇಸ್; ಆರೋಪಿಯ ಬಾಲಾಪರಾಧಿ ಎಂದು ಪರಿಗಣಿಸಿ ವಿಚಾರಣೆ – ಬಾಲ ನ್ಯಾಯ ಮಂಡಳಿ

    ಪುಣೆ: ಕಳೆದ ವರ್ಷ ಪುಣೆಯಲ್ಲಿ ಕುಡಿದ ಮತ್ತಿನಲ್ಲಿ ಪೋರ್ಷೆ ಕಾರನ್ನು (Porsche Car) ಚಲಾಯಿಸಿ ಇಬ್ಬರು ವ್ಯಕ್ತಿಗಳ ಸಾವಿಗೆ ಕಾರಣನಾದ 17 ವರ್ಷದ ಬಾಲಕನನ್ನು ಬಾಲಾಪರಾಧಿ ಎಂದು ಪರಿಗಣಿಸಿ ವಿಚಾರಣೆ ನಡೆಸಲಾಗುವುದು ಎಂದು ಬಾಲ ನ್ಯಾಯ ಮಂಡಳಿ (Juvenile Justice Board) ತಿಳಿಸಿದೆ.

    ಈ ಘಟನೆ ಕಳೆದ ವರ್ಷ ಮೇ 19ರಂದು ಕಲ್ಯಾಣಿ ನಗರ  (Kalyani Nagar) ಪ್ರದೇಶದಲ್ಲಿ ನಡೆದಿತ್ತು. ಈ ಅಪಘಾತದಲ್ಲಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ಐಟಿ ಕಂಪನಿಯ ಉದ್ಯೋಗಿಗಳಾಗಿದ್ದ ಅನೀಶ್ ಅವಧಿಯಾ ಮತ್ತು ಅವರ ಸ್ನೇಹಿತೆ ಅಶ್ವಿನಿ ಕೋಸ್ಟಾ ಮೃತಪಟ್ಟಿದ್ದರು. ಇದನ್ನೂ ಓದಿ: ಯುಎಇಯಲ್ಲಿ ಕೇರಳದ ಮಹಿಳೆ ಆತ್ಮಹತ್ಯೆ; ಪತಿ, ಅತ್ತೆ-ಮಾವ ವಿರುದ್ಧ ವರದಕ್ಷಿಣೆ ಕಿರುಕುಳ ಆರೋಪ

    ಕಳೆದ ವರ್ಷ ಪುಣೆ ಪೊಲೀಸರು (Pune Police) ಆರೋಪಿಯನ್ನು ವಯಸ್ಕ ಎಂದು ಪರಿಗಣಿಸಿ ವಿಚಾರಣೆ ನಡೆಸಬೇಕೆಂದು ಕೋರಿದ್ದರು. ಅಪಘಾತ ಮಾಡಿ ಇಬ್ಬರನ್ನು ಕೊಂದಿದ್ದಲ್ಲದೇ ಸಾಕ್ಷ್ಯಗಳನ್ನು ತಿರುಚುವ ಪ್ರಯತ್ನಗಳು ನಡೆದಿವೆ ಎಂದು ಹೇಳಿದ್ದರು. ಇದನ್ನೂ ಓದಿ: ವಿದ್ಯಾರ್ಥಿನಿ ಮೇಲೆ ರೇಪ್‌,ಬ್ಲ್ಯಾಕ್‌ಮೇಲ್‌ – ಮೂಡುಬಿದಿರೆ ಕಾಲೇಜಿನ ಇಬ್ಬರು ಉಪನ್ಯಾಸಕರು, ಸ್ನೇಹಿತ ಅರೆಸ್ಟ್‌

    ಮಂಗಳವಾರ, ಬಾಲ ನ್ಯಾಯ ಮಂಡಳಿಯು ಆರೋಪಿ ಬಾಲಕನನ್ನು ವಯಸ್ಕ ಎಂದು ಪರಿಗಣಿಸಬೇಕೆಂಬ ಪೊಲೀಸರ ಮನವಿಯನ್ನು ತಿರಸ್ಕರಿಸಿದೆ ಎಂದು ವಕೀಲರು ತಿಳಿಸಿದ್ದಾರೆ. ಈ ಅಪಘಾತ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿಗೆ ಜಾಮೀನು ಸಿಕ್ಕಿತ್ತು. ಇದನ್ನೂ ಓದಿ: ಇದೇ ರೀತಿ 20 ದೇಶದ ಕಾಡಿನಲ್ಲಿ ವಾಸವಿದ್ದೆವು – ಗೋಕರ್ಣ ಗುಹೆಯಲ್ಲಿ ವಾಸವಿದ್ದ ರಷ್ಯಾ ಮಹಿಳೆ ಮಾತು

    ಜೂ.25, 2024ರಂದು, ಬಾಂಬೆ ಹೈಕೋರ್ಟ್ ಬಾಲಕನನ್ನು ತಕ್ಷಣವೇ ಬಿಡುಗಡೆ ಮಾಡುವಂತೆ ಆದೇಶ ನೀಡಿತ್ತು. ಬಾಲ ನ್ಯಾಯ ಮಂಡಳಿಯು ಅಪ್ರಾಪ್ತ ಆರೋಪಿಯನ್ನು ವೀಕ್ಷಣಾ ಗೃಹಕ್ಕೆ ಕಳುಹಿಸುವುದು ಕಾನೂನುಬಾಹಿರವಾಗಿದೆ ಎಂದು ಹೇಳಿತ್ತು.

  • Photo Gallery | ಇಂದ್ರಯಾಣಿ ನದಿಯಲ್ಲಿ ಉಕ್ಕಿ ಹರಿದ ಪ್ರವಾಹಕ್ಕೆ ಕುಸಿದ ಸೇತುವೆ

    Photo Gallery | ಇಂದ್ರಯಾಣಿ ನದಿಯಲ್ಲಿ ಉಕ್ಕಿ ಹರಿದ ಪ್ರವಾಹಕ್ಕೆ ಕುಸಿದ ಸೇತುವೆ

    ಪುಣೆಯ ಕುಂದಮಲ ಪ್ರದೇಶದಲ್ಲಿರುವ ಇಂದ್ರಯಾಣಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಹಳೆಯ ಸೇತುವೆ ಕುಸಿದಿದ್ದು ಹಲವಾರು ಪ್ರವಾಸಿಗರು ನದಿಗೆ ಬಿದ್ದಿದ್ದಾರೆ. ಮಳೆಯಿಂದ ತುಂಬಿ ಹರಿಯುತ್ತಿದ್ದ ನದಿ ಸೌಂದರ್ಯ ವೀಕ್ಷಣೆಗೆ ಬಂದವರು ನದಿಯಲ್ಲೇ ಕೊಚ್ಚಿಹೋಗಿದ್ದಾರೆಂದು ವರದಿಗಳು ತಿಳಿಸಿವೆ. ಘಟನೆ ತಿಳಿದ ಕೂಡಲೇ ದೌಡಾಯಿಸಿರುವ ಸ್ಥಳೀಯ ಅಧಿಕಾರಿಗಳು, ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿಯಿಂದ ರಕ್ಷಣಾ ಕಾರ್ಯ ಮುಂದುವರಿದಿದೆ. ಇದಕ್ಕೆ ಸ್ಥಳೀಯರೂ ಕೈಜೋಡಿಸಿದ್ದಾರೆ. ದುರ್ಘಟನೆಯನ್ನು ಬಿಚ್ಚಿಡುವ ಒಂದಿಷ್ಟು ಚಿತ್ರಗಳು ಇಲ್ಲಿವೆ ನೋಡಿ….

     

  • ಪುಣೆಯ ಇಂದ್ರಯಾಣಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಕುಸಿದು ಕನಿಷ್ಠ 20 ಮಂದಿ ನೀರುಪಾಲು

    ಪುಣೆಯ ಇಂದ್ರಯಾಣಿ ನದಿಗೆ ಅಡ್ಡಲಾಗಿ ನಿರ್ಮಿಸಿದ್ದ ಸೇತುವೆ ಕುಸಿದು ಕನಿಷ್ಠ 20 ಮಂದಿ ನೀರುಪಾಲು

    – ನದಿ ನೀರು ವೀಕ್ಷಣೆಗೆ ಬಂದವರು ನದಿಯಲ್ಲೇ ಕೊಚ್ಚಿಹೋದರು

    ಮುಂಬೈ: ಪುಣೆಯಲ್ಲಿ ಇಂದ್ರಯಾಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆ ಕುಸಿದು ಕನಿಷ್ಠ 20 ರಿಂದ 25 ಮಂದಿ ನೀರಿನಲ್ಲೇ ಕೊಚ್ಚಿಹೋಗಿದ್ದಾರೆಂದು ವರದಿಯಾಗಿದೆ.

    ತಲೆಗಾಂವ್ ಪ್ರದೇಶದ ಕುಂಡ್ಮಾಲ್ ಬಳಿ ಇಂದ್ರಯಾಣಿ ನದಿಗೆ ಕಟ್ಟಲಾಗಿದ್ದ ನಿರ್ಮಿಸಿದ್ದ ಹಳೆಯ ಸೇತುವೆ ಕೊಚ್ಚಿ ಹೋಗಿದೆ.‌ ಮಳೆಯ ಆರ್ಭಟ ಜೋರಾದ ಹಿನ್ನೆಲೆ ಪ್ರವಾಹ ಉಂಟಾಗಿದ್ದು ದುರ್ಘಟನೆ ಸಂಭವಿಸಿದೆ. ಕನಿಷ್ಠ 20 ರಿಂದ 25 ಮಂದಿಯಲ್ಲೇ ಕೊಚ್ಚಿ ಹೋಗಿದ್ದಾರೆ ಎಂದು ಜಿಲ್ಲಾಡಳಿತ ಆತಂಕ ವ್ಯಕ್ತಪಡಿಸಿದೆ. ಇದನ್ನೂ ಓದಿ: Explainer: ವಿಮಾನ ಸುಟ್ಟು ಬೂದಿಯಾದರೂ ‘ಬ್ಲ್ಯಾಕ್‌ಬಾಕ್ಸ್‌’ಗೆ ಏನಾಗಲ್ಲ – ಏನಿದು ಪೆಟ್ಟಿಗೆ? ಫ್ಲೈಟ್‌ ಆಕ್ಸಿಡೆಂಟ್‌ಗಳಲ್ಲಿ ಏಕೆ ಮುಖ್ಯ?

    ಕಳೆದ ಕೆಲವು ತಿಂಗಳಿನಿಂದ ಈ ಸೇತುವೆ ಶಿಥಿಲಾವಸ್ಥೆಯಲ್ಲಿತ್ತು. ಹಾಗಾಗಿ ಸೇತುವೆ ಮೇಲೆ ವಾಹನ ಸಂಚಾರಕ್ಕೆ ನಿರ್ಬಂಧ ಹೇರಲಾಗಿತ್ತು. ಆದ್ರೆ ಇತ್ತೀಚೆಗೆ ಭಾರೀ ಮಳೆಯಿಂದ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿತ್ತು. ಇಂದು ಇದ್ದಕ್ಕಿದ್ದಂತೆ ಪ್ರವಾಹ ಉಂಟಾಗಿದ್ದು, ಸೇತುವೆ ಕುಸಿದಿದೆ. ಈ ವೇಳೆ ಸೇತುವೆ ಮೇಲೆ ನದಿ ವೀಕ್ಷಣೆ ಮಾಡುತ್ತಿದ್ದ 20-25 ಮಂದಿ ನದಿಯಲ್ಲೇ ಕೊಚ್ಚಿ ಹೋಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಗೋಲ್ಡ್‌ ಪ್ರಿಯರಿಗೆ ಶಾಕ್‌ – 1 ವಾರದಲ್ಲಿ ಚಿನ್ನದ ದರ 3,645 ರೂ. ಏರಿಕೆ

    ಘಟನೆ ತಿಳಿದ ಕೂಡಲೇ ಸ್ಥಳೀಯ ಪೊಲೀಸ್‌ ಅಧಿಕಾರಿಗಳು ಹಾಗೂ ಜಿಲ್ಲಾಡಳಿತದ ರಕ್ಷಣಾ ತಂಡಗಳೊಂದಿಗೆ ಸ್ಥಳಕ್ಕೆ ಧಾವಿಸಿದೆ. ಸ್ಥಳೀಯರು ನದಿಯ ಬಳಿ ಸುಳಿಯದಂತೆ ಮುನ್ನೆಚ್ಚರಿಕೆ ಕೊಡಲಾಗಿದೆ. ಇದನ್ನೂ ಓದಿ: Ahmedabad Tragedy | ಡಿಎನ್‌ಎ ಮ್ಯಾಚ್ – 3 ದಿನಗಳ ಬಳಿಕ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

  • BMW ಕಾರಿನಿಂದ ಇಳಿದು ರಸ್ತೆಯಲ್ಲೇ ಮೂತ್ರ ವಿಸರ್ಜನೆ – ಬಳಿಕ ತಾನೇ ಪೊಲೀಸರಿಗೆ ಶರಣಾದ ಯುವಕ

    BMW ಕಾರಿನಿಂದ ಇಳಿದು ರಸ್ತೆಯಲ್ಲೇ ಮೂತ್ರ ವಿಸರ್ಜನೆ – ಬಳಿಕ ತಾನೇ ಪೊಲೀಸರಿಗೆ ಶರಣಾದ ಯುವಕ

    ಮುಂಬೈ: ಪುಣೆಯ ಟ್ರಾಫಿಕ್ ಜಂಕ್ಷನ್‌ನಲ್ಲಿ (Pune Traffic Junction) ಯುವಕನೊಬ್ಬ ತನ್ನ ಬಿಎಂಡಬ್ಲ್ಯೂ ಕಾರಿನಿಂದ ಇಳಿದು ಮೂತ್ರ ವಿಸರ್ಜನೆ ಮಾಡಿರುವ ಘಟನೆ ನಡೆದಿದೆ. ವಿಡಿಯೋ ವೈರಲ್‌ ಆಗುತ್ತಿದ್ದಂತೆ ಯುವಕ ವಿಡಿಯೋ ಮಾಡಿ ಕ್ಷಮೆಯಾಚಿಸಿದ್ದಾನೆ.

    ಪುಣೆಯ ಯೆರವಾಡಾದ ಶಾಸ್ತ್ರಿನಗರ ಪ್ರದೇಶದಲ್ಲಿ ಘಟನೆ ನಡೆದಿದ್ದು, ಯುವಕನನ್ನು ಗೌರವ್‌ ಅಹುಜಾ (Gaurav Ahuja) ಎಂದು ಗುರುತಿಸಲಾಗಿದೆ. ಪ್ರತ್ಯಕ್ಷದರ್ಶಿಯೊಬ್ಬರು ವಿಡಿಯೋ ಚಿತ್ರೀಕರಿಸಿ ಸೋಷಿಯಲ್‌ ಮೀಡಿಯಾದಲ್ಲಿ ಹರಿಬಿಟ್ಟಿದ್ದಾರೆ. ಸಾರ್ವಜನಿಕರಿಂದ ಭಾರೀ ಆಕ್ಷೇಪ ವ್ಯಕ್ತವಾಗುತ್ತಿದ್ದಂತೆ, ಪೊಲೀಸರು (Pune Police) ಕಿಡಿಗೇಡಿಯ ಬೆನ್ನುಬಿದ್ದಿದ್ದರು. ಅಲ್ಲದೇ ಕೃತ್ಯ ಎಸಗಿದ್ದಕ್ಕಾಗಿ ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದರು. ಅಲ್ಲದೇ ಕೃತ್ಯ ಎಸಗಿದ ವೇಳೆ ಆತ ಸಿಕ್ಕಾಪಟ್ಟೆ ಮದ್ಯ ಸೇವಿಸಿದ್ದ ಎಂದು ಶಂಕಿಸಿದ್ದರು.

    ಈ ಬೆನ್ನಲ್ಲೇ ತನ್ನ ಸೋಷಿಯಲ್‌ ಮೀಡಿಯಾ ಖಾತೆಯಲ್ಲಿ ವಿಡಿಯೋ ಹಂಚಿಕೊಂಡ ಗೌರವ್‌ ಅಹುಜಾ, ನಾನು ಮಾಡಿದ ಕೃತ್ಯ ನನಗೇ ನಾಚಿಕೆಯಾಗುತ್ತದೆ ಎಂದು ಹೇಳಿಕೊಂಡಿದ್ದಾನೆ. ಇದನ್ನೂ ಓದಿ: ಇತಿಹಾಸ ಪ್ರಸಿದ್ಧ ಕೇರಳಾಪುರದ ವೀರಭದ್ರೇಶ್ವರ ಸ್ವಾಮಿ ರಥೋತ್ಸವ ಸಂಪನ್ನ

    ನಾನು ಗೌರವ್‌ ಅಹುಜಾ, ಪುಣೆಯ ನಿವಾಸಿ. ನಾನು ಮಾಡಿದ ಕೃತ್ಯದಿಂದ ನನಗೆ ತುಂಬಾ ನಾಚಿಕೆಯಾಗುತ್ತಿದೆ. ನಾನು ಪುಣೆ, ಮಹಾರಾಷ್ಟ್ರದ ಜನತೆ ಮಾತ್ರವಲ್ಲ ಇಡೀ ದೇಶದ ಎಲ್ಲಾ ಜನರಲ್ಲಿ ನಿಜವಾಗಿಯೂ ಕ್ಷಮೆಯಾಚಿಸುತ್ತೇನೆ. ಪೊಲೀಸ್‌ ಇಲಾಖೆ, ಡಿಸಿಎಂ ಏಕನಾಥ್‌ ಶಿಂಧೆ ಅವರಿಗೂ ಕ್ಷಮೆಯಾಚಿಸುತ್ತೇನೆ. ಇದೊಂದು ಬಾರಿ ಕ್ಷಮಿಸಿ, ಮುಂದೆ ಇಂತಹ ತಪ್ಪು ಎಂದಿಗೂ ಮಾಡುವುದಿಲ್ಲ ಎಂದು ವೀಡಿಯೋನಲ್ಲಿ ಹೇಳಿಕೊಂಡಿದ್ದಾನೆ. ಇದನ್ನೂ ಓದಿ:  ‘ನಾನು ನಿನ್ನ ಪ್ರೀತಿಸುವೆ’ ಎಂದ ನಟಿ- ತನಿಷಾ ಪ್ರೀತಿಯಲ್ಲಿ ಬಿದ್ದಿರೋದು ಪಕ್ಕಾ ಎಂದ ಫ್ಯಾನ್ಸ್

    ಬಳಿಕ ತಾನೇ ಪೊಲೀಸರಿಗೆ ಶರಣಾಗಿದ್ದಾನೆ. ಈ ಸಂಬಂಧ ತನಿಖೆ ಮುಂದುವರಿದಿದೆ. ಇದನ್ನೂ ಓದಿ: 3 ವಾರಗಳ ಹಿಂದೆ ಅಪ್ರಾಪ್ತ ಬಾಲಕಿ ನಾಪತ್ತೆ – 42 ವರ್ಷದ ವ್ಯಕ್ತಿಯ ಜೊತೆ ಶವವಾಗಿ ಪತ್ತೆ

  • Pune Bus Rape Case | ಅಕ್ಕ ಅಕ್ಕ ಅಂತ ಕರೆದವನೇ ಅತ್ಯಾಚಾರ ಮಾಡಿಬಿಟ್ಟ

    Pune Bus Rape Case | ಅಕ್ಕ ಅಕ್ಕ ಅಂತ ಕರೆದವನೇ ಅತ್ಯಾಚಾರ ಮಾಡಿಬಿಟ್ಟ

    ಪುಣೆ: ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಬಸ್‌ನೊಳಗೆ 26 ವರ್ಷದ ಯುವತಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣದಲ್ಲಿ (Pune Bus Rape Case) ಸ್ಫೋಟಕ ಮಾಹಿತಿಗಳು ಬೆಳಕಿಗೆ ಬರುತ್ತಿವೆ. ಅಕ್ಕ ಅಕ್ಕ ಎಂದು ಕರೆದವನೇ ಅತ್ಯಾಚಾರ ಮಾಡಿದ ಎಂಬ ಮನಕಲುಕುವ ವಿಷಯ ಪೊಲೀಸ್‌ ಮೂಲಗಳಿಂದ ತಿಳಿದುಬಂದಿದೆ.

    ಹೌದು. ಮಂಗಳವಾರ ಮುಂಜಾನೆ 5:45 ರಿಂದ 6 ಗಂಟೆ ಸಮಯದಲ್ಲಿ 36 ವರ್ಷದ ದತ್ತಾತ್ರೆಯ ರಾಮದಾಸ್‌ ಗಾಡೆ ಈ ಕೃತ್ಯ ಎಸಗಿದ್ದಾನೆ. ಸಂತ್ರಸ್ತೆಯು ಸತಾರಾ ಜಿಲ್ಲೆಯಲ್ಲಿರುವ ತನ್ನ ಮನೆಗೆ ಹೋಗಲು ಬಸ್‌ಗಾಗಿ ಕಾಯುತ್ತಿದ್ದಳು. ಈ ವೇಳೆ ಅಲ್ಲಿಗೆ ಬಂದ ಅರೋಪಿ ಆಕೆಯನ್ನ ʻಅಕ್ಕ… ಅಕ್ಕʼ(ದೀದಿ) ಎಂದು ಕೂಗಿದ್ದಾನೆ. ನಂತರ ಆಕೆಯನ್ನ ಡಿಪೋದ ಒಂದು ಮೂಲೆಯಲ್ಲಿ ನಿಂತಿದ್ದ ಬಸ್‌ಗೆ ಕರೆದುಕೊಂಡು ಹೋಗಲು ಮುಂದಾಗಿದ್ದಾನೆ. ಆಕೆ ಬಸ್‌ ಖಾಲಿ ಇದೆಯಲ್ಲ ಎಂದು ಕೇಳಿದಾಗ.. ಇಲ್ಲ ಎಲ್ಲರೂ ಮಲಗಿದ್ದಾರೆ ಎಂದು ಸುಳ್ಳು ಹೇಳಿ ಆಕೆಯನ್ನ ಕರೆದೊಯ್ದಿದ್ದಾನೆ. ಬಸ್‌ ಹತ್ತುತ್ತಿದ್ದಂತೆ ಡೋರ್‌ ಲಾಕ್‌ ಮಾಡಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸಂತ್ರಸ್ತೆ ಪೊಲೀಸರಿಗೆ ನೀಡಿದ ದೂರಿನಲ್ಲಿ ಉಲ್ಲೇಖವಾಗಿದೆ ಎಂದು ತಿಳಿದು ಬಂದಿದೆ.

    ಪೊಲೀಸರ ತನಿಖೆ ವೇಳೆ ಸಿಸಿಟಿವಿ ದೃಶ್ಯಾವಳಿಗಳನ್ನು ಪರಿಶೀಲಿಸಿದಾಗ ಆ ಬಸ್ಸಿನೆಡೆಗೆ ಇಬ್ಬರು ನಡೆದುಕೊಂಡು ಹೋಗುತ್ತಿರುವುದು ಕಂಡುಬಂದಿದೆ. ಇದನ್ನೂ ಓದಿ: ಪುಣೆ ರೇಪ್‌ ಕೇಸ್‌ – ಬೇರೆ ಪ್ರಕರಣದಲ್ಲಿ ಜಾಮೀನಿನಲ್ಲಿದ್ದ ಕಾಮುಕ

    ಸುಳಿವು ಕೊಟ್ಟವರಿಗೆ 1 ಲಕ್ಷ ಬಹುಮಾನ:
    ಸದ್ಯ ಆರೋಪಿಯನ್ನ ಬಂಧಿಸಲು ತ್ವರಿತ ಕಾರ್ಯಾಚರಣೆ ನಡೆಸುತ್ತಿರುವ ಪೊಲೀಸ್‌ ಇಲಾಖೆ ಶ್ವಾನದಳದೊಂದಿಗೆ 13 ತಂಡಗಳನ್ನು ನಿಯೋಜಿಸಿದೆ. ‌ ಹೆಚ್ಚುವರಿಯಾಗಿ, ಆರೋಪಿ ಬಗ್ಗೆ ಮಾಹಿತಿ ನೀಡುವವರಿಗೆ 1 ಲಕ್ಷ ರೂ. ಬಹುಮಾನ ನೀಡುವುದಾಗಿ ಘೊಷಿಸಿದೆ. ಇದನ್ನೂ ಓದಿ: Bidar | ಮದ್ಯ ಸೇವಿಸಿ ಕಿರುಕುಳ – ಪೋಷಕರ ಜೊತೆ ಸೇರಿ ಪತಿಯ ಹತ್ಯೆಗೈದ ಪತ್ನಿ

    ಬೇರೆ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಕಾಮುಕ:
    ಮಂಗಳವಾರ ಬೆಳಗ್ಗೆ ಪುಣೆ ಸ್ವರ್ಗೇಟ್ ಡಿಪೋದಲ್ಲಿ ಬಸ್‌ನಲ್ಲೇ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕ ಬೇರೆ ಪ್ರಕರಣಗಲ್ಲಿ ಜಾಮೀನಿನ ಮೇಲೆ ಹೊರಗಿದ್ದ ಎಂದು ತಿಳಿದುಬಂದಿದೆ. ಈತನ ವಿರುದ್ಧ ಶಿರೂರು ಶಿಕ್ರಾಪುರ, ಸ್ವರ್ಗೇಟ್ ಪೊಲೀಸ್‌ ಠಾಣೆಗಳಲ್ಲಿ 6 ಕೇಸ್‌ ದಾಖಲಾಗಿದೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

  • ಪುಣೆ ರೇಪ್‌ ಕೇಸ್‌ – ಬೇರೆ ಪ್ರಕರಣದಲ್ಲಿ ಜಾಮೀನಿನಲ್ಲಿದ್ದ ಕಾಮುಕ

    ಪುಣೆ ರೇಪ್‌ ಕೇಸ್‌ – ಬೇರೆ ಪ್ರಕರಣದಲ್ಲಿ ಜಾಮೀನಿನಲ್ಲಿದ್ದ ಕಾಮುಕ

    – ಆರೋಪಿ ಸುಳಿವು ಕೊಟ್ಟವರಿಗೆ 1 ಲಕ್ಷ ರೂ. ಬಹುಮಾನ

    ಪುಣೆ: ಮಹಾರಾಷ್ಟ್ರ (Maharashtra) ರಾಜ್ಯ ರಸ್ತೆ ಸಾರಿಗೆ ಬಸ್‌ನೊಳಗೆ 26 ವರ್ಷದ ಯುವತಿಯೊಬ್ಬಳ ಮೇಲೆ ಅತ್ಯಾಚಾರವೆಸಗಲಾಗಿದ್ದು, ಆರೋಪಿ ಪರಾರಿಯಾಗಿದ್ದಾನೆ. ಸದ್ಯ ಆರೋಪಿಯನ್ನ ಬಂಧಿಸಲು ತ್ವರಿತ ಕಾರ್ಯಾಚರಣೆ ನಡೆಸುತ್ತಿರುವ ಪೊಲೀಸ್‌ ಇಲಾಖೆ (Pune Police Department) ಶ್ವಾನದಳದೊಂದಿಗೆ 13 ತಂಡಗಳನ್ನು ನಿಯೋಜಿಸಿದೆ. ಹೆಚ್ಚುವರಿಯಾಗಿ, ಆರೋಪಿ ಬಗ್ಗೆ ಮಾಹಿತಿ ನೀಡುವವರಿಗೆ 1 ಲಕ್ಷ ರೂ. ಬಹುಮಾನ ನೀಡುವುದಾಗಿ ಘೊಷಿಸಿದೆ.

    ಬೇರೆ ಪ್ರಕರಣದಲ್ಲಿ ಜಾಮೀನು ಪಡೆದಿದ್ದ ಕಾಮುಕ:
    ಮಂಗಳವಾರ ಬೆಳಗ್ಗೆ ಪುಣೆ ಸ್ವರ್ಗೇಟ್ ಡಿಪೋದಲ್ಲಿ ಬಸ್‌ನಲ್ಲೇ ಯುವತಿಯ ಮೇಲೆ ಅತ್ಯಾಚಾರ ಎಸಗಿದ ಕಾಮುಕನನ್ನು 36 ವರ್ಷದ ದತ್ತಾತ್ರೆಯ ರಾಮದಾಸ್‌ ಗಾಡೆ ಎಂದು ಗುರುತಿಸಲಾಗಿದೆ. ಈತ ಬೇರೆ ಪ್ರಕರಣಗಲ್ಲಿ ಜಾಮೀನಿನ ಮೇಲೆ ಹೊರಗಿದ್ದ ಎಂದು ತಿಳಿದುಬಂದಿದೆ. ಈತನ ವಿರುದ್ಧ ಶಿರೂರು ಶಿಕ್ರಾಪುರ, ಸ್ವರ್ಗೇಟ್ ಪೊಲೀಸ್‌ ಠಾಣೆಗಳಲ್ಲಿ ಹಲವು ಕೇಸ್‌ಗಳು ದಾಖಲಾಗಿವೆ ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

    ಘಟನೆ ಬಗ್ಗೆ ಮಾಹಿತಿ ಪಡೆದಿರುವ ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್‌, ಡಿಸಿಎಂ ಅಜಿತ್‌ ಪವಾರ್‌ ಆದಷ್ಟು ಬೇಗ ಆರೋಪಿಯನ್ನು ಬಂಧಿಸುವಂತೆ ಪುಣೆ ಪೊಲೀಸ್ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಇದನ್ನೂ ಓದಿ: ಏಕತೆಯ ಮಹಾ ಯಜ್ಞ ಪೂರ್ಣಗೊಂಡಿತು: ಐತಿಹಾಸಿಕ ಕುಂಭಮೇಳದ ಬಗ್ಗೆ ಮೋದಿ ಬಣ್ಣನೆ

    ಈ ಅತ್ಯಾಚಾರ ಘಟನೆಯು ಇಡೀ ನಾಗರಿಕ ಸಮಾಜವೇ ತಲೆ ತಗ್ಗಿಸುವ ಕೆಲಸ, ಅತ್ಯಂತ ನೋವಿನ ಹಾಗೂ ನಾಚಿಗೇಡಿನ ಸಂಗತಿಯೂ ಹೌದು. ಆರೋಪಿಗೆ ಮರಣ ದಂಡನೆಯೇ ಸೂಕ್ತವಾದ ಶಿಕ್ಷೆ ಎಂದು ಪವಾರ್‌ ಆಕ್ರೋಶ ಹೊರಹಾಕಿದ್ದಾರೆ. ಇದನ್ನೂ ಓದಿ: ಶಿವಗಂಗಾ ಬಸವರಾಜ್‍ಗೆ ಸಚಿವ ಸ್ಥಾನ ಸಿಗಲಿ – ಮಹಾ ಕುಂಭಮೇಳದಲ್ಲಿ ಅಭಿಮಾನಿಗಳಿಂದ ಪ್ರಾರ್ಥನೆ 

    ಠಾಣೆ ಸಮೀಪದಲ್ಲೇ ಅತ್ಯಾಚಾರ:
    ಯುವತಿ ಮೇಲೆ ನಡೆದಿರುವ ಅತ್ಯಾಚಾರ ಪ್ರಕರಣದಲ್ಲಿ ಸ್ಫೋಟಕ ವಿಚಾರಗಳು ಬೆಳಕಿಗೆ ಬರುತ್ತಿವೆ. ಪುಣೆಯ ಜನನಿಬಿಡ ಪ್ರದೇಶ ಸ್ವರ್ಗೇಟ್ ಬಸ್‌ ನಿಲ್ದಾಣದಲ್ಲಿ ಘಟನೆ ನಡೆದಿದೆಯಲ್ಲದೇ, ಬಸ್ ಪೊಲೀಸ್ ಠಾಣೆಯ 100 ಮೀ. ವ್ಯಾಪ್ತಿಯಲ್ಲೇ ನಿಂತಿತ್ತು ಎನ್ನುವ ಸಂಗತಿ ಬೆಳಕಿಗೆ ಬಂದಿದೆ. ಠಾಣೆಯಿಂದ 100 ಮೀಟರ್‌ ದೂರದಲ್ಲಿ ಖಾಲಿ ಬಸ್‌ ನಿಂತಿತ್ತು. ಬೇರೆಡೆ ನಿಂತಿದ್ದ ಬಸ್ ಒಳಗೆ ಸುಳ್ಳು ಹೇಳಿ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ ಎಂದು ವರದಿಗಳು ತಿಳಿಸಿವೆ.

  • Maharashtra | ಪುಣೆಯಲ್ಲಿ ಖಾಸಗಿ ಹೆಲಿಕಾಪ್ಟರ್‌ ಪತನ – ನಾಲ್ವರ ಪೈಕಿ ಮೂವರ ಸ್ಥಿತಿ ಗಂಭೀರ

    Maharashtra | ಪುಣೆಯಲ್ಲಿ ಖಾಸಗಿ ಹೆಲಿಕಾಪ್ಟರ್‌ ಪತನ – ನಾಲ್ವರ ಪೈಕಿ ಮೂವರ ಸ್ಥಿತಿ ಗಂಭೀರ

    ಮುಂಬೈ: ಬಿರುಗಾಳಿ ಮತ್ತು ಕೆಟ್ಟ ಹವಾಮಾನ ಪರಿಸ್ಥಿತಿಯಿಂದಾಗಿ ಪುಣೆಯ ಪೌಡ್‌ ಗ್ರಾಮದ ಬಳಿ ಖಾಸಗಿ ಹೆಲಿಕಾಪ್ಟರ್‌ವೊಂದು ಪತನಗೊಂಡಿದ್ದು (Pune Helicopter crashes), ಹೆಲಿಕಾಪ್ಟರ್‌ನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.

    AW 139 ಖಾಸಗಿ ಹೆಲಿಕಾಪ್ಟರ್‌ (Private Helicopter) ಮುಂಬೈನ ಜುಗುನಿಂದ ಹೈದರಾಬಾದ್‌ಗೆ ಹೋರಟಿತ್ತು. ಈ ವೇಳೆ ಪೌಡ್‌ ಪ್ರದೇಶದಲ್ಲಿ ಅಪಘಾತಕ್ಕೀಡಾಗಿದೆ. ಇದನ್ನೂ ಓದಿ: ಟೆಸ್ಟ್‌ ಕ್ರಿಕೆಟ್‌ ಉತ್ತೇಜಕ್ಕೆ 125 ಕೋಟಿ ಮೊತ್ತದ ನಿಧಿ ಸ್ಥಾಪನೆಗೆ ಐಸಿಸಿ ನಿರ್ಧಾರ – ಭಾರತ, ಆಸೀಸ್‌ಗಿಲ್ಲ ಲಾಭ ಏಕೆ?

    ಹೆಲಿಕಾಪ್ಟರ್‌ನಲ್ಲಿದ್ದ ನಾಲ್ವರು ಗಾಯಗೊಂಡಿದ್ದಾರೆ. ಸದ್ಯ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಮೂವರ ಸ್ಥಿತಿ ಗಂಭೀರವಾಗಿದೆ ಎಂದು ಎಸ್ಪಿ ಪಂಕಜ್ ದೇಶಮುಖ್ ಪುಣೆ ಗ್ರಾಮಾಂತರ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ನಟ ಅಕ್ಕಿನೇನಿ ನಾಗಾರ್ಜುನಗೆ ಬಿಗ್ ಶಾಕ್- ಅದ್ಧೂರಿ ಕನ್ವೆನ್ಷನ್ ಸೆಂಟರ್ ಧ್ವಂಸ

  • ಟೆಕ್ಕಿ ಯುವತಿಯನ್ನ ಗುಂಡಿಕ್ಕಿ ಹತ್ಯೆಗೈದ ಪ್ರಿಯತಮ – ಪೊಲೀಸರು ಪ್ರಕರಣ ಭೇದಿಸಿದ್ದು ಹೇಗೆ?

    ಟೆಕ್ಕಿ ಯುವತಿಯನ್ನ ಗುಂಡಿಕ್ಕಿ ಹತ್ಯೆಗೈದ ಪ್ರಿಯತಮ – ಪೊಲೀಸರು ಪ್ರಕರಣ ಭೇದಿಸಿದ್ದು ಹೇಗೆ?

    ಮುಂಬೈ: ಪುಣೆಯ (Pune) ಐಟಿ ಸಂಸ್ಥೆಯೊಂದರಲ್ಲಿ ವ್ಯವಸ್ಥಾಪಕಿಯಾಗಿ (IT Professional) ಕೆಲಸ ಮಾಡುತ್ತಿದ್ದ 26 ವರ್ಷದ ಯುವತಿಯನ್ನ ಆಕೆಯ ಪ್ರಿಯತಮನೇ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

    ಜ.28ರಂದು ಬೆಳಗ್ಗೆ ಲಕ್ಷ್ಮಿ ನಗರದ ಹಿಂಜೆವಾಡಿ ಪ್ರದೇಶದಲ್ಲಿರುವ ಹೋಟೆಲ್‌ ಕೊಠಡಿಯಲ್ಲಿ ತಲೆಗೆ ಗುಂಡಿಕ್ಕಿ ಹತ್ಯೆಗೈದಿದ್ದಾನೆ. ಮೃತ ಯುವತಿಯನ್ನು ವಂದನಾ ದ್ವಿವೇದಿ ಎಂದು ಗುರುತಿಸಲಾಗಿದೆ. ಕೊಲೆ ಆರೋಪಿ ರಿಷಬ್ ನಿಗಮ್ ಎಂದು ಗುರುತಿಸಲಾಗಿದೆ. ರಿಷಬ್‌ ಉತ್ತರ ಪ್ರದೇಶದ ಲಕ್ನೋ ನಿವಾಸಿಯಾಗಿದ್ದು, ಕೊಲೆ ಮಾಡಿ ಮುಂಬೈಗೆ ಎಸ್ಕೇಪ್‌ ಆಗುತ್ತಿದ್ದಾಗ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾನೆ ಎಂದು ಪಿಂಪ್ರಿ ಚಿಂಚ್‌ವಾಡ್ ಪೊಲೀಸರು (Pimpri Chinchwad Police) ತಿಳಿಸಿದ್ದಾರೆ.

    ಪೊಲೀಸರ ಪ್ರಕಾರ, ವಂದನಾ ಶನಿವಾರ ತನ್ನ ಪ್ರಿಯಕರನೊಂದಿಗೆ ಹೋಟೆಲ್‌ಗೆ ಬಂದಿದ್ದಳು. ಮೃತ ಯುವತಿ ಹಾಗೂ ಆರೋಪಿ ರಿಷಬ್‌ ಕಳೆದ 10 ವರ್ಷಗಳಿಂದಲೂ ಸಂಬಂಧ ಹೊಂದಿದ್ದರು. ಇತ್ತೀಚೆಗೆ ಇಬ್ಬರ ನಡುವೆ ವೈಯಕ್ತಿಕ ಕಾರಣಗಳಿಗೆ ಜಗಳವಾಗಿತ್ತು. ವಂದನಾ ನಡವಳಿಕೆಯ ಬಗ್ಗೆ ಸಂಶಯ ಪಟ್ಟಿದ್ದ ರಿಷಬ್‌ ಆಕೆಯನ್ನ ಕೊಲ್ಲಲ್ಲು ಸ್ಕೆಚ್‌ ಹಾಕಿದ್ದ. ಭಾನುವಾರವೂ ಇಬ್ಬರ ನಡುವೆ ಜಗಳ ನಡೆಯುತ್ತಿದ್ದಾಗಲೇ ರಿಷಬ್‌, ವಂದನಾ ತಲೆಗೆ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಹನುಮಧ್ವಜ ಸಂಘರ್ಷ; ರಾಜ್ಯಾದ್ಯಂತ ಹೋರಾಟದ ಕಿಚ್ಚು – ಮಂಡ್ಯದಲ್ಲಿಂದು ಹೆಚ್‌ಡಿಕೆ, ರೆಡ್ಡಿ ಪಾದಯಾತ್ರೆ

    ಘಟನೆಯ ನಂತರ ಹೋಟೆಲ್‌ನಿಂದ ಪರಾರಿಯಾಗಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ ಪೊಲೀಸರು ಆರೋಪಿಗಾಗಿ ಹುಡುಕಾಟ ನಡೆಸಿದ್ದರು. ಭಾನುವಾರ ರಿಷಬ್‌ ಮುಂಬೈಗೆ ಎಸ್ಕೇಪ್‌ ಆಗುತ್ತಿದ್ದ ವೇಳೆ ಬಂಧಿಸಿದ್ದಾರೆ. ಇದನ್ನೂ ಓದಿ: ಶಾಲಾ ಬಸ್-ಟ್ರ್ಯಾಕ್ಟರ್‌ ನಡುವೆ ಭೀಕರ ಅಪಘಾತ – ನಾಲ್ವರು ವಿದ್ಯಾರ್ಥಿಗಳ ದುರ್ಮರಣ 

    ಸದ್ಯ ವಂದನಾಳ ಶವ ಪತ್ತೆಯಾದ ಹೋಟೆಲ್ ಕೋಣೆಗೆ ಪೊಲೀಸರು ಸೀಲ್ ಹಾಕಿದ್ದಾರೆ ಮತ್ತು ರಿಷಬ್ ಅವರನ್ನು ಕೊಲ್ಲಲು ಬಳಸಿದ್ದ ಗನ್ ಎಲ್ಲಿಂದ ಬಂತು ಅನ್ನೋ ಬಗ್ಗೆಯೂ ತನಿಖೆ ನಡೆಸುತ್ತಿದ್ದಾರೆ.

  • ಮೋದಿ ಹತ್ಯೆಗೆ ಸಂಚು: ವರವರ ರಾವ್ ಬಂಧನಕ್ಕೆ ದೆಹಲಿ ಹೈಕೋರ್ಟ್ ತಡೆಯಾಜ್ಞೆ

    ಮೋದಿ ಹತ್ಯೆಗೆ ಸಂಚು: ವರವರ ರಾವ್ ಬಂಧನಕ್ಕೆ ದೆಹಲಿ ಹೈಕೋರ್ಟ್ ತಡೆಯಾಜ್ಞೆ

    ಹೈದರಾಬಾದ್: ಪ್ರಧಾನಿ ನರೇಂದ್ರ ಮೋದಿ ಹತ್ಯೆಗೆ ಸಂಚು ರೂಪಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿರಸಂ ಸಂಸ್ಥಾಪಕ ಮತ್ತು ಕ್ರಾಂತಿಕಾರಿ ಬರಹಗಾರ ವರವರ ರಾವ್ ಅವರನ್ನು ಪುಣೆ ಪೊಲೀಸರು ಬಂಧಿಸಿದ್ದು, ಈಗ ದೆಹಲಿ ಹೈಕೋರ್ಟ್ ಬಂಧನಕ್ಕೆ ತಡೆಯಾಜ್ಞೆ ನೀಡಿದೆ.

    ಇಂದು ಹೈದರಾಬಾದ್‍ಗೆ ಬಂದಿದ್ದ ಪುಣೆ ಪೊಲೀಸ್ ತಂಡವು, ಸ್ಥಳೀಯ ಪೊಲೀಸರ ಸಹಾಯ ಪಡೆದು, ನಗರದ ವಿವಿಧೆಡೆ ವರವರ ರಾವ್ ಪತ್ತೆಗಾಗಿ ಶೋಧಕಾರ್ಯ ನಡೆಸಿದ್ದರು. ಚಿಕ್ಕಡ್‍ಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಜವಾಹರ್ ನಗರದಲ್ಲಿರುವ ವರವರ ರಾವ್ ಮನೆಗೆ 20ಕ್ಕೂ ಹೆಚ್ಚು ಪುಣೆ ಮಫ್ತಿ ವೇಷದ ಪೊಲೀಸರು ಭೇಟಿ ನೀಡಿದ್ದರು. ಈ ವೇಳೆ ಕೆಲ ಹೊತ್ತು ರಾವ್ ಅವವನ್ನು ವಿಚಾರಣೆಗೆ ಒಳಪಡಿಸಿ ಬಳಿಕ ಬಂಧಿಸಿದ್ದರು.

    ವರವರ ರಾವ್ ಹಾಗೂ ಕುಟುಂಬಸ್ಥರ ಮನೆ ಮೇಲೆ ಅಷ್ಟೇ ಅಲ್ಲದೆ ಪತ್ರಕರ್ತರಾದ ಕೆ.ವಿ.ಕುಮಾರನಾಥ್, ಕ್ರಾಂತಿ ತೆಕುಲ, ಇಂಗ್ಲಿಷ್ ಮತ್ತು ವಿದೇಶಿ ಭಾಷೆಗಳ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಕೆ.ಸತ್ಯನಾರಾಯಣ ಅವರ ಮನೆ ಮೇಲೂ ಪೊಲೀಸರು ದಾಳಿ ಮಾಡಿ, ಶೋಧ ನಡೆಸಿದ್ದಾರೆ ಎಂದು ವರದಿಯಾಗಿದೆ.

    ಏನಿದು ಪ್ರಕರಣ?
    ಪ್ರಧಾನಿ ನರೇಂದ್ರ ಮೋದಿ ಹತ್ಯೆ ಸಂಚು ಪ್ರಕರಣಕ್ಕೆ ಸಂಬಂಧಿಸಿದಂತೆ ಪುಣೆ ಪೊಲೀಸರು ಚುರುಕು ಕಾರ್ಯಾಚರಣೆ ನಡೆಸಿದ್ದರು. ಇತ್ತೀಚೆಗೆ ಮಾನವಹಕ್ಕು ಕಾರ್ಯಕರ್ತ ರೋನಾ ಜಾಕೋಬ್ ವಿಲ್ಸನ್ ಅವರ ದೆಹಲಿಯ ಮನೆಯಲ್ಲಿ ಕೆಲವು ಪತ್ರಗಳನ್ನು ವಶಕ್ಕೆ ಪಡೆದಿದ್ದರು. ಆ ಪತ್ರಗಳಲ್ಲಿ ವರವರ ರಾವ್ ಹೆಸರು ಉಲ್ಲೇಖವಾಗಿದೆ. ಅವರನ್ನು ಬಂಧಿಸಲು ಅನುಮತಿ ನೀಡುವಂತೆ ಕೋರ್ಟ್‍ಗೆ ಮನವಿ ಮಾಡಿಕೊಂಡಿದ್ದರು. ಇನ್ನು ರಾವ್ ನಕ್ಸಲ್ ಸಂಘಟನೆಗಳಿಗೆ ಹಾಗೂ ಅವರು ನಡೆಸುತ್ತಿರುವ ದಾಳಿಗೆ ಆರ್ಥಿಕ ನೆರವು ನೀಡುತ್ತಿದ್ದರು ಎನ್ನುವ ಆರೋಪವೂ ಕೇಳಿ ಬಂದಿದೆ.

    ವರವರ ರಾವ್ ಬಂಧನಕ್ಕೆ ಖಂಡಿಸಿ ಎಡಪಕ್ಷಗಳ ನಾಯಕರು ಭಾರೀ ವಿರೋಧ ವ್ಯಕ್ತಪಡಿಸಿದ್ದಾರೆ.

    ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv