Tag: Puneet

  • ಅಪ್ಪು ಅಗಲಿ ಇಂದಿಗೆ 7 ತಿಂಗಳು : ಸಮಾಧಿ ಮುಂದೆ ಜನಸಾಗರ

    ಅಪ್ಪು ಅಗಲಿ ಇಂದಿಗೆ 7 ತಿಂಗಳು : ಸಮಾಧಿ ಮುಂದೆ ಜನಸಾಗರ

    ನ್ನಡದ ಹೆಸರಾಂತ ನಟ ಪುನೀತ್ ರಾಜ್ ಕುಮಾರ್ ಅಗಲಿ ಇಂದಿಗೆ ಏಳು ತಿಂಗಳು ಕಳೆದವು. ಏಳು ತಿಂಗಳು ಕಳೆದರೂ, ಅಪ್ಪು ಸಮಾಧಿಗೆ ಹರಿದು ಬರುತ್ತಿರುವ ಜನ ಸಾಗರ ಮಾತ್ರ ಕಿಂಚಿತ್ತೂ ಕಡಿಮೆ ಆಗಿಲ್ಲ. ಅದರಲ್ಲೂ ವೀಕೆಂಡ್ ನಲ್ಲಿ ಸಾವಿರಾರು ಜನರು ಅಪ್ಪು ಸಮಾಧಿಗೆ ಬಂದು ದರ್ಶನ ಪಡೆದುಕೊಂಡು ಹೋಗುತ್ತಿದ್ದಾರೆ. ಇದನ್ನೂ ಓದಿ : ರೆಬೆಲ್ ಅಂಬಿಗೆ ಇಂದು 70ನೇ ಹುಟ್ಟು ಹಬ್ಬ : ಭಾವುಕರಾಗಿ ಕವನ ಬರೆದ ಸುಮಲತಾ ಅಂಬರೀಶ್

    ಇಂದು ಏಳು ತಿಂಗಳ ನಿಮಿತ್ತ ಅಪ್ಪು ಕುಟುಂಬ ಕಂಠೀರವ ಸ್ಟುಡಿಯೋಗೆ ಆಗಮಿಸಿ, ಅಪ್ಪು ಸಮಾಧಿಗೆ ಪೂಜೆ ಸಲ್ಲಿಸಿದ್ದಾರೆ. ಅಲ್ಲದೇ, ಇಂದು ಅಂಬರೀಶ್ ಅವರ ಹುಟ್ಟು ಹಬ್ಬವೂ ಇರುವುದರಿಂದ, ಅಪ್ಪು ಸಮಾಧಿಯ ಕೂಗಳತೆಯ ದೂರದಲ್ಲಿರುವ ಅಂಬರೀಶ್ ಅವರ ಸಮಾಧಿಗೂ ಅಪ್ಪು ಕುಟುಂಬ ನಮನ ಸಲ್ಲಿಸಿದೆ. ಇದನ್ನೂ ಓದಿ : ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ನೂತನ ಸಾರಥಿ ಭಾ.ಮಾ. ಹರೀಶ್

    ಅಪ್ಪು ಅಗಲಿಕೆಯನ್ನು ಇಂದಿಗೂ ಅಭಿಮಾನಿಗಳು ಅರಗಿಸಿಕೊಳ್ಳುವುದಕ್ಕೆ ಆಗುತ್ತಿಲ್ಲ. ಅದರಲ್ಲೂ ಪುನೀತ್ ರಾಜ್ ಕುಮಾರ್ ಸಹೋದರ ರಾಘವೇಂದ್ರ ರಾಜ್ ಕುಮಾರ್ ದಿನವೂ ಅಪ್ಪು ಅವರನ್ನು ನೆನಪಿಸಿಕೊಳ್ಳುತ್ತಲೇ ಇರುತ್ತಾರೆ. ಇಂದು ಅಪ್ಪು ಅವರ ವಿಶೇಷ ವಿಡಿಯೋವೊಂದನ್ನು ರಾಘವೇಂದ್ರ ರಾಜ್ ಕುಮಾರ್ ಸೋಷಿಯಲ್ ಮೀಡಿಯಾದಲ್ಲಿ ಶೇರ್ ಮಾಡಿದ್ದಾರೆ. ಎಂದೆಂದಿಗೂ ಅಪ್ಪು ನನ್ನ ಹೃದಯದಲ್ಲಿ ಇರುತ್ತಾರೆ ಎಂದು ತೋರಿಸಿದ್ದಾರೆ. ಓದಿ : ಶಾರುಖ್ ಖಾನ್ ಮನೆ ‘ಮನ್ನತ್’ ನೇಮ್ ಪ್ಲೇಟ್ ನಾಪತ್ತೆ: ಇದರ ಹಿಂದಿದೆ ಭಾರೀ ರಹಸ್ಯ

    ಅಂಬರೀಶ್ ಅವರ ಹುಟ್ಟು ಹಬ್ಬ ಮತ್ತು ಪುನೀತ್ ಅವರ ಅಗಲಿಕೆಯ 7ನೇ ತಿಂಗಳು ಕಾರ್ಯಕ್ರಮ ಒಂದೇ ಸ್ಥಳದಲ್ಲೇ ನಡೆಯುತ್ತಿರುವುದರಿಂದ ಕಂಠೀರವ ಸ್ಟುಡಿಯೋ ಇಂದು ಇಬ್ಬರ ಅಭಿಮಾನಿಗಳಿಂದ ತುಂಬಿ ಹೋಗಿದೆ. ಒಂದು ಕಡೆ ಇಬ್ಬರೂ ಕಲಾವಿದರ ಅಗಲಿಕೆ ನೋವು ಮತ್ತು ಅಂಬಿ ಹುಟ್ಟು ಹಬ್ಬದ ಸಡಗರಕ್ಕೆ ಕಂಠೀರವ ಸ್ಟುಡಿಯೋ ಸಾಕ್ಷಿಯಾಗಿದೆ.

  • ಪುನೀತ್‌ಗೆ ಅವಮಾನ: ತಿರುಪತಿ ತಿರುಮಲ ದೇವಸ್ಥಾನಕ್ಕೆ ಅಭಿಮಾನಿಗಳು ಮುತ್ತಿಗೆ

    ಪುನೀತ್‌ಗೆ ಅವಮಾನ: ತಿರುಪತಿ ತಿರುಮಲ ದೇವಸ್ಥಾನಕ್ಕೆ ಅಭಿಮಾನಿಗಳು ಮುತ್ತಿಗೆ

    ತಿರುಪತಿ ತಿರುಮಲ ದೇವಸ್ಥಾನಕ್ಕೆ ಹೋಗುವಾಗ ಕಾರಿನ ಮೇಲಿದ್ದ ಪುನೀತ್ ರಾಜ್ ಕುಮಾರ್ ಫೋಟೋ ಮತ್ತು ನಾಡಧ್ವಜವನ್ನು ತೆರುವುಗೊಳಿಸಿರುವ ಟಿಟಿಡಿ ನಡೆಗೆ ಕರ್ನಾಟಕ ರಾಜ್ಯ ಪುನೀತ್ ರಾಜ್ ಕುಮಾರ್ ಅಭಿಮಾನಿಗಳು ಮತ್ತು ದೊಡ್ಮನೆ ಅಭಿಮಾನಿಗಳು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಈ ಕುರಿತು ಸ್ಪಷ್ಟನೆಗಾಗಿ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ತಿರುಪತಿ ತಿರುಮಲ ದೇವಸ್ಥಾನಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ. ಇದನ್ನೂ ಓದಿ : ಖ್ಯಾತ ನಿರ್ದೇಶಕ ಅರವಿಂದ್ ಕೌಶಿಕ್ ಅರೆಸ್ಟ್

    ಕಾರಿನ ಮೇಲಿದ್ದ ಅಪ್ಪು ಫೋಟೋ ಮತ್ತು ನಾಡಧ್ವಜವನ್ನು ತೆಗೆಸುತ್ತಿರುವ ವಿಡಿಯೋ ಹಲವು ದಿನಗಳಿಂದ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿತ್ತು. ಇದಕ್ಕೆ ಸೋಷಿಯಲ್ ಮೀಡಿಯಾದಲ್ಲೇ ಅಕ್ಷರ ರೂಪದ ಪ್ರತಿಭಟನೆಯ ದಾಖಲಿಸಲಾಗುತ್ತಿತ್ತು. ಇದೀಗ ದೇವಸ್ಥಾನಕ್ಕೆ ಮುತ್ತಿಗೆ ಹಾಕುವ ಮೂಲಕ ಪ್ರತಿಭಟನೆ ಮಾಡಲಾಗುತ್ತಿದೆ. ಇದನ್ನೂ ಓದಿ : ವಾಮನ ತೆಕ್ಕೆಗೆ ತುಳುನಾಡ ಬೆಡಗಿ ರಚನಾ ರೈ

    ಪುನೀತ್ ರಾಜ್ ಕುಮಾರ್ ಅವರನ್ನು ಅಭಿಮಾನಿಗಳು ದೇವರ ರೀತಿಯಲ್ಲೇ ಆರಾಧಿಸುತ್ತಿದ್ದಾರೆ. ಅವರು ಮಾಡಿದ ಪುಣ್ಯದ ಕೆಲಸಗಳು ದೇವರಿಗೆ ಮಾಡಿದ ಸೇವೆಯಷ್ಟೇ ಪವಿತ್ರವಾಗಿವೆ. ಹೀಗಿದ್ದಾಗಲೂ ಅವರ ಫೋಟೋವನ್ನು ತಗೆದರೆ ಮಾತ್ರ ದೇವಸ್ಥಾನಕ್ಕೆ ಹೋಗಬಹುದು ಎನ್ನುವ ನಡೆ ಸರಿಯಾದದ್ದಲ್ಲ. ಇದನ್ನು ಪ್ರಶ್ನಿಸಿ, ಸ್ಪಷ್ಟನೆಗಾಗಿ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಟಿಟಿಡಿ ದೇವಸ್ಥಾನಕ್ಕೆ ಅಭಿಮಾನಿಗಳು ಮುತ್ತಿಗೆ ಹಾಕುತ್ತಿದ್ದಾರೆ.

  • ‘ಗುರು’ ಹೆಸರು ‘ಯುವ’ ರಾಜಕುಮಾರ್ ಬದಲಾಗಿದ್ದು ಹೇಗೆ? : ನಾಮಬಲ ನಂಬಿಕೆಯ ಡಾ.ರಾಜ್ ಕುಟುಂಬ

    ‘ಗುರು’ ಹೆಸರು ‘ಯುವ’ ರಾಜಕುಮಾರ್ ಬದಲಾಗಿದ್ದು ಹೇಗೆ? : ನಾಮಬಲ ನಂಬಿಕೆಯ ಡಾ.ರಾಜ್ ಕುಟುಂಬ

    ಹೊಂಬಾಳೆ ಫಿಲ್ಮ್ಸ್ ಮೂಲಕ ಇಂದು ಸಿನಿಮಾ ಜಗತ್ತಿಗೆ ಲಾಂಚ್ ಆಗಿರುವ ಯುವ ರಾಜ್ ಕುಮಾರ್, ಈ ಮೊದಲು ಗುರು ಎಂದೇ ಗುರುತಿಸಿಕೊಂಡಿದ್ದರು. ಇವತ್ತಿಗೂ ಡಾ.ರಾಜ್ ಕುಟುಂಬದಲ್ಲಿ ಇವರನ್ನು ಕರೆಯುವುದು ಗುರು ಅಂತಾನೆ. ಆದರೆ, ಯುವ ರಾಜ್ ಕುಮಾರ್ ಎಂದು ಹೆಸರು ಬದಲಾಯಿಸಿಕೊಂಡಿದ್ದಕ್ಕೆ ಕಾರಣವೂ ಇದೆ.  ಇದನ್ನೂ ಓದಿ : ಹೊಂಬಾಳೆ ಫಿಲ್ಮ್ಸ್‌ನಿಂದ ಯುವರಾಜ್ ಕುಮಾರ್ ಲಾಂಚ್: ನಿನ್ನೆಯೇ ಬ್ರೇಕ್ ಮಾಡಿತ್ತು ಪಬ್ಲಿಕ್ ಟಿವಿ

    ಡಾ.ರಾಜ್ ಕುಟುಂಬದಲ್ಲಿ ಹೆಸರನ್ನು ಬದಲಾಯಿಸಿಕೊಂಡಿರುವುದು ಇದೇ ಮೊದಲೇನೂ ಅಲ್ಲ. ಸ್ವತಃ ಡಾ.ರಾಜ್ ಕುಮಾರ್ ಅವರೇ ತಮ್ಮ ಮೂಲ ಹೆಸರು ಮುತ್ತುರಾಜ್ ಎಂದಿದ್ದನ್ನು ರಾಜ್ ಕುಮಾರ್ ಆಗಿ ಬದಲಾದರು. ಅದನ್ನು ಅವರೇ ಮಾಡಿಕೊಳ್ಳದಿದ್ದರೆ, ಸಿನಿಮಾಗಾಗಿ ರಾಜ್ ಕುಮಾರ್ ಎಂದು ಬದಲಾಯಿತು. ಇದನ್ನೂ ಓದಿ : ದಕ್ಷಿಣದ ಸಿನಿಮಾ ನೋಡಲ್ಲ: ವಿವಾದಕ್ಕೆ ಕಾರಣವಾದ ಬಾಲಿವುಡ್ ಖ್ಯಾತ ನಟ ನವಾಜುದ್ಧೀನ್ ಸಿದ್ದಿಕಿ

    ಆನಂತರ ಡಾ.ರಾಜ್ ಹಿರಿಯ ಪುತ್ರ, ನಟ ಶಿವರಾಜ್ ಕುಮಾರ್ ಹೆಸರು ಕೂಡ ಸಿನಿಮಾಗಾಗಿಯೇ ಬದಲಾಯಿತು. ನಾಗರಾಜು ಶಿವ ಪುಟ್ಟಸ್ವಾಮಿ ಎಂದಿದ್ದ ಜನ್ಮನಾಮವನ್ನು ಶಿವರಾಜ್ ಕುಮಾರ್ ಆಗಿ ಬದಲಾಯಿಸಿಕೊಂಡರು ಶಿವಣ್ಣ. ಈಗ  ಇದೇ ಹೆಸರಿನಿಂದಲೇ ಅವರು ಫೇಮಸ್. ಇದನ್ನೂ ಓದಿ : ಕರ್ನಾಟಕದಲ್ಲೇ ನಡೆಯಿತು ತಮಿಳು ಸಿನಿಮಾಗೆ ಮುಹೂರ್ತ: ಬೆಂಗಳೂರಿಗೆ ಬಂದಿಳಿದ ತಮಿಳು ನಟ

    ಆನಂತರ ಪುನೀತ್ ಅವರ ಸರದಿ. ಅಪ್ಪು ಜನ್ಮನಾಮ ಲೋಹಿತ್‍. ಹಿರಿಕರೊಬ್ಬರು ಲೋಹಿತ್ ಹೆಸರಿನವರಿಗೆ ಅಲ್ಪಾಯುಷ್ಯವೆಂದು ತಿಳಿಸಿ, ಪುನೀತ್ ಎಂದು ಹೆಸರನ್ನು ಬದಲಾಯಿಸಿದರು. ಅಪ್ಪು ಸಿನಿಮಾದಿಂದಾಗಿ ಪ್ರೀತಿಯಿಂದಲೇ ಅವರನ್ನು ಬಹುತೇಕರು ಅಪ್ಪು ಎಂದೇ ಕರೆದು ಅಭಿಮಾನಿಸುತ್ತಿದ್ದರು. ಇದನ್ನೂ ಓದಿ : ಮಸಾಜ್ ಪಾರ್ಲರ್ ಹುಡುಗಿ ಪಾತ್ರದಲ್ಲಿ ಅದಿತಿ ಪ್ರಭುದೇವ್

    ಇದೀಗ ಗುರು ತಮ್ಮ ಹೆಸರನ್ನು ಬದಲಾಯಿಸಿಕೊಂಡಿದ್ದಾರೆ. ಈ ಕುರಿತು ಅವರು ಸಂದರ್ಶನವೊಂದರಲ್ಲಿ ಹೇಳುತ್ತಾ, ‘ನಮ್ಮ ಕುಟುಂಬದಲ್ಲಿ ಹೆಸರು ಬದಲಾಯಿಸಿಕೊಂಡಿರುವುದು ಇದೇ ಮೊದಲೇನೂ ಅಲ್ಲ. ನನ್ನ ಜನ್ಮನಾಮದ ಬಗ್ಗೆ ವಿಚಾರಿಸಿದಾಗ ‘ಯ’ ಅಕ್ಷರ ಅದೃಷ್ಟವೆಂದು ಹೇಳಿದರು. ಹಾಗಾಗಿ ಯುವರಾಜ್ ಎಂದು ಬದಲಾಯಿಸಲಾಯಿತು’ ಎಂದಿದ್ದರು.

  • ಹೊಂಬಾಳೆ ಫಿಲ್ಮ್ಸ್‌ನಿಂದ ಯುವರಾಜ್ ಕುಮಾರ್ ಲಾಂಚ್: ನಿನ್ನೆಯೇ ಬ್ರೇಕ್ ಮಾಡಿತ್ತು ಪಬ್ಲಿಕ್ ಟಿವಿ

    ಹೊಂಬಾಳೆ ಫಿಲ್ಮ್ಸ್‌ನಿಂದ ಯುವರಾಜ್ ಕುಮಾರ್ ಲಾಂಚ್: ನಿನ್ನೆಯೇ ಬ್ರೇಕ್ ಮಾಡಿತ್ತು ಪಬ್ಲಿಕ್ ಟಿವಿ

    ನ್ನಡದ ಹೆಮ್ಮೆಯ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್ ‘ಬೆಳ್ಳಿ ಪರದೆಗೆ ಹೊಸದೊಂದು ಪರ್ವ’ ಎನ್ನುವ ಹೊಸ ಪೋಸ್ಟರ್ ವೊಂದನ್ನು ತನ್ನ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ಹಾಕಿ ಕುತೂಹಲ ಮೂಡಿಸಿತ್ತು. ಏ.27 ರಂದು ಬೆಳಗ್ಗೆ 9.50ಕ್ಕೆ ಹೊಸ ಪರ್ವದ ಮಾಹಿತಿಯನ್ನು ಹಂಚಿಕೊಳ್ಳುವುದಾಗಿ ತಿಳಿಸಿತ್ತು. ಈ ಸುದ್ದಿಯ ಜಾಡು ಹಿಡಿದು ಹೊರಟ ಪಬ್ಲಿಕ್ ಟಿವಿ ಡಿಜಿಟಲ್ ತಂಡಕ್ಕೆ ಹಲವು ಮಾಹಿತಿಗಳೂ ದೊರೆತವು. ಹಾಗಾಗಿ ನೆನ್ನೆಯೇ ಪಬ್ಲಿಕ್ ಟಿವಿಯಲ್ಲಿ ಯುವರಾಜ್ ಕುಮಾರ್ ಲಾಂಚ್ ಮಾಡುತ್ತಿರುವ ಕುರಿತು ಎರಡು ವರದಿಗಳನ್ನು ಮಾಡಲಾಗಿತ್ತು. ಅದೀಗ ನಿಜವಾಗಿದೆ.  ಇದನ್ನೂ ಓದಿ : ದಕ್ಷಿಣದ ಸಿನಿಮಾ ನೋಡಲ್ಲ: ವಿವಾದಕ್ಕೆ ಕಾರಣವಾದ ಬಾಲಿವುಡ್ ಖ್ಯಾತ ನಟ ನವಾಜುದ್ಧೀನ್ ಸಿದ್ದಿಕಿ

    ಪುನೀತ್ ರಾಜ್ ಕುಮಾರ್ ಅವರ ನಿನ್ನೆಂದಲೇ ಸಿನಿಮಾದ ಮೂಲಕ ಹೊಂಬಾಳೆ ಫಿಲ್ಮ್ಸ್ ಲಾಂಚ್ ಆಗಿತ್ತು. ಈಗ ಪುನೀತ್ ಅವರ ಸಹೋದರನ ಪುತ್ರ ಯುವರಾಜ್ ಕುಮಾರ್ ಲಾಂಚ್ ಮಾಡುವ ಮೂಲಕ ಆ ಪ್ರೀತಿಯ ಕೊಡುಕೊಳ್ಳುವಿಕೆ ಅರ್ಥಪೂರ್ಣ ಮುನ್ನುಡಿ ಬರೆದಿದೆ ಹೊಂಬಾಳೆ ಫಿಲ್ಮ್ಸ್. ಇದನ್ನೂ ಓದಿ : ಕರ್ನಾಟಕದಲ್ಲೇ ನಡೆಯಿತು ತಮಿಳು ಸಿನಿಮಾಗೆ ಮುಹೂರ್ತ: ಬೆಂಗಳೂರಿಗೆ ಬಂದಿಳಿದ ತಮಿಳು ನಟ

    ಪುನೀತ್ ರಾಜ್ ಕುಮಾರ್ ಉತ್ತರಾಧಿಕಾರಿ ಎಂದೇ ಬಿಂಬಿತವಾಗುತ್ತಿರುವ, ರಾಘವೇಂದ್ರ ರಾಜ್ ಕುಮಾರ್ ಪುತ್ರ ಯುವರಾಜ್ ಕುಮಾರ್ ಲಾಂಚ್ ಮಾಡುವ ಮೂಲಕ ಹೊಸ ಪರ್ವವನ್ನು ಹೊಂಬಾಳೆ ಫಿಲ್ಮ್ಸ್ ಮಾಡಿದೆ. ಈ ಚಿತ್ರಕ್ಕೆ ಸಂತೋಷ್ ಆನಂದ್ ರಾಮ್ ನಿರ್ದೇಶನ ಮಾಡಲಿದ್ದಾರೆ ಎನ್ನುವ ಮಾಹಿತಿಯನ್ನೂ ಅದು ನೀಡಿದೆ. ಇದನ್ನೂ ಓದಿ : ಮಸಾಜ್ ಪಾರ್ಲರ್ ಹುಡುಗಿ ಪಾತ್ರದಲ್ಲಿ ಅದಿತಿ ಪ್ರಭುದೇವ್

    ನಿರ್ದೇಶಕ ಸಂತೋಷ್ ಆನಂದ್ ರಾಮ್ ಮತ್ತು ಯುವರಾಜ್ ಕಾಂಬಿನೇಷನ್ ನಲ್ಲಿ ಹೊಂಬಾಳೆ ಫಿಲ್ಮ್ಸ್ ಹಲವು ಸಿನಿಮಾಗಳನ್ನು ಮಾಡಲಿದೆ ಎನ್ನುವ ಸುದ್ದಿಯಿತ್ತು. ಅದು ಈಗ ನಿಜವಾಗಿದೆ.  ಅಂದುಕೊಂಡಂತೆ ಆಗಿದ್ದರೆ ಏಪ್ರಿಲ್ 24 ರಂದು ಡಾ.ರಾಜ್ ಹುಟ್ಟು ಹಬ್ಬದಂದೇ ಈ ಹೊಸ ಸಿನಿಮಾದ ಘೋಷಣೆ ಆಗಲಿದೆ ಎಂದು ಸುದ್ದಿಯಿತ್ತು. ಅದು ಏ.27ಕ್ಕೆ ಆಗಿದೆ.

  • ಹೊಂಬಾಳೆ ಫಿಲ್ಮ್ಸ್: ಡಾ.ರಾಜ್ ಸ್ಮಾರಕ ಮುಂದೆ ಯುವರಾಜ್ ಕುಮಾರ್ ಲಾಂಚ್?

    ಹೊಂಬಾಳೆ ಫಿಲ್ಮ್ಸ್: ಡಾ.ರಾಜ್ ಸ್ಮಾರಕ ಮುಂದೆ ಯುವರಾಜ್ ಕುಮಾರ್ ಲಾಂಚ್?

    ‘ಬೆಳ್ಳಿ ಪರದೆಗೆ ಹೊಸದೊಂದು ಪರ್ವ’ ಎನ್ನುವ ಹೊಸ ಪೋಸ್ಟರ್ ವೊಂದನ್ನು ತನ್ನ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ಹಾಕಿಕೊಳ್ಳುವ ಮೂಲಕ ಹೊಂಬಾಳೆ ಫಿಲ್ಮ್ಸ್ ಕುತೂಹಲ ಮೂಡಿಸಿದೆ.  ನಾಳೆ ಬೆಳಗ್ಗೆ 9.50ಕ್ಕೆ ಹೊಸ ಪರ್ವದ ಮಾಹಿತಿಯನ್ನು ಹಂಚಿಕೊಳ್ಳುವುದಾಗಿ ತಿಳಿಸಿದೆ. ಅದಕ್ಕೂ ಮುನ್ನ ಯುವರಾಜ್ ಕುಮಾರ್ ಫ್ಯಾನ್ಸ್ ಪೇಜ್ ನಲ್ಲಿ ಹಲವು ವಿಚಾರಗಳು ಹರಿದಾಡುತ್ತಿವೆ. ಇದನ್ನೂ ಓದಿ : ದಕ್ಷಿಣದ ಸಿನಿಮಾ ನೋಡಲ್ಲ: ವಿವಾದಕ್ಕೆ ಕಾರಣವಾದ ಬಾಲಿವುಡ್ ಖ್ಯಾತ ನಟ ನವಾಜುದ್ಧೀನ್ ಸಿದ್ದಿಕಿ

    ಈ ಪೋಸ್ಟರ್ ಅನ್ನು ಅವರು ಪೋಸ್ಟ್ ಮಾಡುತ್ತಿದ್ದಂತೆಯೇ ನಾನಾ ರೀತಿಯ ಕಾಮೆಂಟ್ ಗಳು ಬರುತ್ತಿವೆ. ಹೊಸ ಪರ್ವ ಅಂದರೆ ಏನು? ಎನ್ನುವ ಚರ್ಚೆ ಕೂಡ ಮಾಡಲಾಗುತ್ತಿದೆ. ಈಗಿರುವ ಸಿನಿಮಾಗಳ ಮಾಹಿತಿಯನ್ನೇ ಅದು ಹಂಚಿಕೊಳ್ಳಲಿದೆಯಾ ಅಥವಾ ಕೆಜಿಎಫ್ 3 ಸಿನಿಮಾದ ಮಾಹಿತಿ ಏನಾದರೂ ಕೊಡಲಿದ್ದಾರೆ ಅನ್ನುವ ಕುತೂಹಲವನ್ನೂ ಹಲವರು ಹಂಚಿಕೊಂಡಿದ್ದಾರೆ. ಇದನ್ನೂ ಓದಿ : ಕರ್ನಾಟಕದಲ್ಲೇ ನಡೆಯಿತು ತಮಿಳು ಸಿನಿಮಾಗೆ ಮುಹೂರ್ತ: ಬೆಂಗಳೂರಿಗೆ ಬಂದಿಳಿದ ತಮಿಳು ನಟ

    ಹೊಸ ಪರ್ವ ಎಂಬ ಪದವನ್ನು ಬಳಸಿರುವ ಕಾರಣಕ್ಕಾಗಿ ಹೊಸ ವಿಷಯವನ್ನೇ ಅಥವಾ ಹೊಸದಾಗಿ ಯಾರನ್ನಾದರೂ ಲಾಂಚ್ ಮಾಡುತ್ತಾರಾ ಎನ್ನುವ ಕುತೂಹಲ ಕೂಡ ಶುರುವಾಗಿದೆ. ಹಲವು ತಿಂಗಳುಗಳಿಂದ ಹೊಂಬಾಳೆ ಫಿಲ್ಮ್ಸ್ ಪುನೀತ್ ರಾಜ್ ಕುಮಾರ್ ಉತ್ತರಾಧಿಕಾರಿ ಎಂದೇ ಬಿಂಬಿತವಾಗುತ್ತಿರುವ, ರಾಘವೇಂದ್ರ ರಾಜ್ ಕುಮಾರ್ ಪುತ್ರ ಯುವರಾಜ್ ಕುಮಾರ್ ಗಾಗಿ ಸಿನಿಮಾ ಮಾಡಲಿದ್ದಾರೆ ಎನ್ನುವ ಸುದ್ದಿಯಿತ್ತು. ಬಹುಶಃ ಯುವರಾಜ್ ಕುಮಾರ್ ಲಾಂಚ್ ಮಾಡುವ ಕುರಿತಾಗಿ ಸುದ್ದಿ ಸಿಗಬಹುದಾ ಎನ್ನುವ ನಿರೀಕ್ಷೆ ಮಾಧ್ಯಮ ವಲಯದ್ದು. ಇದನ್ನೂ ಓದಿ : ಮಸಾಜ್ ಪಾರ್ಲರ್ ಹುಡುಗಿ ಪಾತ್ರದಲ್ಲಿ ಅದಿತಿ ಪ್ರಭುದೇವ್

    ನಿರ್ದೇಶಕ ಸಂತೋಷ್ ಆನಂದ್ ರಾಮ್ ಮತ್ತು ಯುವರಾಜ್ ಕಾಂಬಿನೇಷನ್ ನಲ್ಲಿ ಹೊಂಬಾಳೆ ಫಿಲ್ಮ್ಸ್ ಹಲವು ಸಿನಿಮಾಗಳನ್ನು ಮಾಡಲಿದೆ ಎನ್ನುವ ಸುದ್ದಿಯಿದೆ. ಅಂದುಕೊಂಡಂತೆ ಆಗಿದ್ದರೆ ಏಪ್ರಿಲ್ 24 ರಂದು ಡಾ.ರಾಜ್ ಹುಟ್ಟು ಹಬ್ಬದಂದೇ ಈ ಹೊಸ ಸಿನಿಮಾದ ಘೋಷಣೆ ಆಗಲಿದೆ ಎಂದು ಸುದ್ದಿಯಿತ್ತು. ಅದು ಏ.27ರಂದು ನಿಜವಾಗಲಿದೆ ಎಂದೂ ಹೇಳಲಾಗುತ್ತಿದೆ. ಇದನ್ನೂ ಓದಿ : ನಮ್ಮದು ಪ್ಯಾನ್ ಇಂಡಿಯಾ ಸಿನಿಮಾವಲ್ಲ, ಸಿನಿಮಾ ಅಷ್ಟೇ : ಬಾಲಿವುಡ್ ವಿರುದ್ಧ ಕಿಚ್ಚ ಸುದೀಪ್ ಗುಡುಗು

    ಅದಕ್ಕೂ ಮುನ್ನ ಯುವರಾಜ್ ಕುಮಾರ್ ಫ್ಯಾನ್ಸ್ ಪೇಜ್ ನಲ್ಲಿ ನಾಳೆ ಬೆಳಗ್ಗೆ 10 ಗಂಟೆಗೆ ಯುವರಾಜ್ ಕುಮಾರ್ ಹೊಸ ಸಿನಿಮಾದ ಲಾಂಚ್ ಅನ್ನು ಡಾ.ರಾಜ್ ಕುಮಾರ್ ಸ್ಮಾರಕದ ಮುಂದೆ ಮಾಡಲಾಗುವುದು ಎಂದು ಪೋಸ್ಟ್ ಮಾಡಲಾಗುತ್ತಿದೆ. ಅಭಿಮಾನಿಗಳ ಈ ನಡೆ ಮತ್ತಷ್ಟು ಕುತೂಹಲ ಹುಟ್ಟುಹಾಕಿದೆ.

  • ಹೊಂಬಾಳೆ ಫಿಲ್ಮ್ಸ್:  ಯುವರಾಜ್ ಕುಮಾರ್ ಹೊಸ ಸಿನಿಮಾ ಘೋಷಣೆ?

    ಹೊಂಬಾಳೆ ಫಿಲ್ಮ್ಸ್: ಯುವರಾಜ್ ಕುಮಾರ್ ಹೊಸ ಸಿನಿಮಾ ಘೋಷಣೆ?

    ಕೆಜಿಎಫ್ 2 ಸಿನಿಮಾದ ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ಹೊಂಬಾಳೆ ಫಿಲ್ಮ್ಸ್ ನಾಳೆ (ಏ.27) ಹೊಸ ಘೋಷಣೆಯೊಂದನ್ನು ಮಾಡಲು ಮುಹೂರ್ತ ಫಿಕ್ಸ್ ಮಾಡಿದೆ. ‘ಬೆಳ್ಳಿ ಪರದೆಗೆ ಹೊಸದೊಂದು ಪರ್ವ’ ಎನ್ನುವ ಹೊಸ ಪೋಸ್ಟರ್ ವೊಂದನ್ನು ತನ್ನ ಸೋಷಿಯಲ್ ಮೀಡಿಯಾ ಪೇಜ್ ನಲ್ಲಿ ಹಾಕಿಕೊಂಡಿದೆ. ನಾಳೆ ಬೆಳಗ್ಗೆ 9.50ಕ್ಕೆ ಹೊಸ ಪರ್ವದ ಮಾಹಿತಿಯನ್ನು ಹಂಚಿಕೊಳ್ಳುವುದಾಗಿ ತಿಳಿಸಿದೆ. ಇದನ್ನೂ ಓದಿ : ದಕ್ಷಿಣದ ಸಿನಿಮಾ ನೋಡಲ್ಲ: ವಿವಾದಕ್ಕೆ ಕಾರಣವಾದ ಬಾಲಿವುಡ್ ಖ್ಯಾತ ನಟ ನವಾಜುದ್ಧೀನ್ ಸಿದ್ದಿಕಿ

    ಈ ಪೋಸ್ಟರ್ ಅನ್ನು ಅವರು ಪೋಸ್ಟ್ ಮಾಡುತ್ತಿದ್ದಂತೆಯೇ ನಾನಾ ರೀತಿಯ ಕಾಮೆಂಟ್ ಗಳು ಬರುತ್ತಿವೆ. ಹೊಸ ಪರ್ವ ಅಂದರೆ ಏನು? ಎನ್ನುವ ಚರ್ಚೆ ಕೂಡ ಮಾಡಲಾಗುತ್ತಿದೆ. ಈಗಿರುವ ಸಿನಿಮಾಗಳ ಮಾಹಿತಿಯನ್ನೇ ಅದು ಹಂಚಿಕೊಳ್ಳಲಿದೆಯಾ ಅಥವಾ ಕೆಜಿಎಫ್ 3 ಸಿನಿಮಾದ ಮಾಹಿತಿ ಏನಾದರೂ ಕೊಡಲಿದ್ದಾರೆ ಅನ್ನುವ ಕುತೂಹಲವನ್ನೂ ಹಲವರು ಹಂಚಿಕೊಂಡಿದ್ದಾರೆ. ಇದನ್ನೂ ಓದಿ : ಕರ್ನಾಟಕದಲ್ಲೇ ನಡೆಯಿತು ತಮಿಳು ಸಿನಿಮಾಗೆ ಮುಹೂರ್ತ: ಬೆಂಗಳೂರಿಗೆ ಬಂದಿಳಿದ ತಮಿಳು ನಟ

    ಹೊಸ ಪರ್ವ ಎಂಬ ಪದವನ್ನು ಬಳಸಿರುವ ಕಾರಣಕ್ಕಾಗಿ ಹೊಸ ವಿಷಯವನ್ನೇ ಅಥವಾ ಹೊಸದಾಗಿ ಯಾರನ್ನಾದರೂ ಲಾಂಚ್ ಮಾಡುತ್ತಾರಾ ಎನ್ನುವ ಕುತೂಹಲ ಕೂಡ ಶುರುವಾಗಿದೆ. ಹಲವು ತಿಂಗಳುಗಳಿಂದ ಹೊಂಬಾಳೆ ಫಿಲ್ಮ್ಸ್ ಪುನೀತ್ ರಾಜ್ ಕುಮಾರ್ ಉತ್ತರಾಧಿಕಾರಿ ಎಂದೇ ಬಿಂಬಿತವಾಗುತ್ತಿರುವ, ರಾಘವೇಂದ್ರ ರಾಜ್ ಕುಮಾರ್ ಪುತ್ರ ಯುವರಾಜ್ ಕುಮಾರ್ ಗಾಗಿ ಸಿನಿಮಾ ಮಾಡಲಿದ್ದಾರೆ ಎನ್ನುವ ಸುದ್ದಿಯಿತ್ತು. ಬಹುಶಃ ಯುವರಾಜ್ ಕುಮಾರ್ ಲಾಂಚ್ ಮಾಡುವ ಕುರಿತಾಗಿ ಸುದ್ದಿ ಸಿಗಬಹುದಾ ಎನ್ನುವ ನಿರೀಕ್ಷೆ ಮಾಧ್ಯಮ ವಲಯದ್ದು.  ಇದನ್ನೂ ಓದಿ : ಮಸಾಜ್ ಪಾರ್ಲರ್ ಹುಡುಗಿ ಪಾತ್ರದಲ್ಲಿ ಅದಿತಿ ಪ್ರಭುದೇವ್

    ನಿರ್ದೇಶಕ ಸಂತೋಷ್ ಆನಂದ್ ರಾಮ್ ಮತ್ತು ಯುವರಾಜ್ ಕಾಂಬಿನೇಷನ್ ನಲ್ಲಿ ಹೊಂಬಾಳೆ ಫಿಲ್ಮ್ಸ್ ಹಲವು ಸಿನಿಮಾಗಳನ್ನು ಮಾಡಲಿದೆ ಎನ್ನುವ ಸುದ್ದಿಯಿದೆ. ಅಂದುಕೊಂಡಂತೆ ಆಗಿದ್ದರೆ ಏಪ್ರಿಲ್ 24 ರಂದು ಡಾ.ರಾಜ್ ಹುಟ್ಟು ಹಬ್ಬದಂದೇ ಈ ಹೊಸ ಸಿನಿಮಾದ ಘೋಷಣೆ ಆಗಲಿದೆ ಎಂದು ಸುದ್ದಿಯಿತ್ತು. ಅದು ಏ.27ರಂದು ನಿಜವಾಗಲಿದೆ ಎಂದೂ ಹೇಳಲಾಗುತ್ತಿದೆ. ಇದನ್ನೂ ಓದಿ : ನಮ್ಮದು ಪ್ಯಾನ್ ಇಂಡಿಯಾ ಸಿನಿಮಾವಲ್ಲ, ಸಿನಿಮಾ ಅಷ್ಟೇ : ಬಾಲಿವುಡ್ ವಿರುದ್ಧ ಕಿಚ್ಚ ಸುದೀಪ್ ಗುಡುಗು

    ಯುವರಾಜ್ ಗಾಗಿಯೇ ಮೂರು ಸಿನಿಮಾಗಳನ್ನು ಹೊಂಬಾಳೆ ಬ್ಯಾನರ್ ಅಡಿಯಲ್ಲಿ ವಿಜಯ್ ಕಿರಗಂದೂರು ಮಾಡಲಿದ್ದಾರೆ ಎನ್ನುವುದು ಗಾಂಧಿನಗರದ ಮೂಲಗಳ ಮಾಹಿತಿ. ಈ ಎಲ್ಲ ಊಹಾಪೋಹಗಳಿಗೆ ನಾಳೆ ತೆರೆಬೀಳಲಿದೆ.

  • ಪುನೀತ್‌ಗೆ  ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ

    ಪುನೀತ್‌ಗೆ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ

    ಟ ಪುನೀತ್ ರಾಜ್ ಕುಮಾರ್ ಅವರಿಗೆ ಮೈಸೂರು ವಿವಿ 102ನೇ ವಾರ್ಷಿಕ ಘಟಿಕೋತ್ಸವದಲ್ಲಿ ಮರಣೋತ್ತರ ಗೌರವ ಡಾಕ್ಟರೇಟ್ ಪ್ರದಾನ ಮಾಡಲಾಯಿತು. ರಾಜ್ಯಪಾಲರಿಂದ ಈ ಗೌರವನ್ನು ಪುನೀತ್ ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಇಂದು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಪುನೀತ್ ಪತ್ನಿ ಅಶ್ವಿನಿ ಭಾವುಕರಾಗಿಯೇ ಪುನೀತ್ ಪರವಾಗಿ ಗೌರವ ಡಾಕ್ಟರೇಟ್ ಸ್ವೀಕರಿಸಿದರು.

    ಮೈಸೂರು ವಿವಿಯ ಕ್ರಾಫಾರ್ಡ್ ಹಾಲ್ ನಲ್ಲಿ ನಡೆಯುತ್ತಿರುವ ಗೌರವ ಡಾಕ್ಟರೇಟ್ ಪ್ರಧಾನ ಕಾರ್ಯಕ್ರಮದಲ್ಲಿ ಡಾ. ರಾಜ್ ಕುಟುಂಬ ವರ್ಗದವರು ಹಾಜರಿದ್ದರು. ನಟ ರಾಘವೇಂದ್ರ ರಾಜ್ ಕುಮಾರ್ ಹಾಗೂ ಪತ್ನಿ, ನಟ ವಿನಯ್ ರಾಜ್ ಕುಮಾರ್, ರಾಜ್ ಕುಮಾರ್ ಮಗಳು ಲಕ್ಷ್ಮಿ ಗೋವಿಂದು ಹಾಗೂ ಮೊಮ್ಮಕ್ಕಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಇದನ್ನೂ ಓದಿ : ಅಜಿತ್ ನಟನೆ ಬ್ಲಾಕ್ ಬಸ್ಟರ್ ‘ವಲಿಮೈ’ಸಿನಿಮಾ ಒಟಿಟಿಗೆ ಎಂಟ್ರಿ

    1976 ರಲ್ಲಿ ಡಾ. ರಾಜಕುಮಾರ್ ಗೆ ಮೈಸೂರು ವಿವಿಯಿಂದ ಡಾಕ್ಟರೇಟ್ ಗೌರವ ನೀಡಲಾಗಿತ್ತು. 2022 ರಲ್ಲಿ ಪುನೀತ್ ರಾಜಕುಮಾರ್ ಗೆ ಮರಣೋತ್ತರ ಡಾಕ್ಟರೇಟ್ ಪದವಿ ಪ್ರದಾನ ಮಾಡಲಾಗಿದೆ. ಪುನೀತ್ ಅವರ ಸಮಾಜಮುಖಿ ಕೆಲಸಗಳು ಮತ್ತು ಸಿನಿಮಾ ರಂಗಕ್ಕೆ ನೀಡಿರುವ ಕೊಡುಗೆಯನ್ನು ಆಧರಿಸಿ, ಮೈಸೂರು ವಿವಿ ಈ ಗೌರವನ್ನು ನೀಡಿದೆ.

  • ಅಪ್ಪು ನೆನೆದು ನಟಿ ಪ್ರಿಯಾ ಆನಂದ್ ಕಣ್ಣೀರು

    ಅಪ್ಪು ನೆನೆದು ನಟಿ ಪ್ರಿಯಾ ಆನಂದ್ ಕಣ್ಣೀರು

    ಬೆಂಗಳೂರು: ಡಾ. ಪುನೀತ್ ರಾಜ್ ಕುಮಾರ್ ಅಭಿನಯದ ಸಿನಿಮಾ ಜೇಮ್ಸ್ ಇಂದು ರಾಜ್ಯಾದ್ಯಂತ ತೆರೆ ಕಂಡು ಹೌಸ್‍ಫುಲ್ ಪ್ರದರ್ಶನ ಕಾಣುತ್ತಿದೆ. ಈ ನಡುವೆ ಅಪ್ಪು ನೆನೆದು ಕಾಲಿವುಡ್ ನಟಿ ಪ್ರಿಯಾ ಆನಂದ್ ಬಿಕ್ಕಿ, ಬಿಕ್ಕಿ ಅತ್ತಿದ್ದಾರೆ.

    ಇಂದು ಪುನೀತ್ ಹುಟ್ಟುಹಬ್ಬದ ಹಿನ್ನೆಲೆ ಜೇಮ್ಸ್ ಸಿನಿಮಾ ರಿಲೀಸ್ ಮಾಡಿ ಅಭಿಮಾನಿಗಳಿಗೆ ಚಿತ್ರತಂಡ ರಸದೌತಣ ನೀಡಿದೆ. ಈ ನಡುವೆ ಜೇಮ್ಸ್ ಸಿನಿಮಾ ವೀಕ್ಷಿಸಲು ಜನ ಚಿತ್ರಮಂದಿರಗಳಿಗೆ ಮುಗಿಬೀಳುತ್ತಿದ್ದಾರೆ. ಸದ್ಯ ಅಭಿಮಾನಿಗಳೊಂದಿಗೆ ಕುಳಿತು ಸಿನಿಮಾ ವೀಕ್ಷಿಸಲು ನವರಂಗ್ ಚಿತ್ರಮಂದಿರಕ್ಕೆ ಭೇಟಿ ನೀಡಿದ ಜೇಮ್ಸ್ ಸಿನಿಮಾದ ನಟಿ ಪ್ರಿಯಾ ಆನಂದ್ ಕಾರಿನಲ್ಲಿ ಕುಳಿತು ಅಪ್ಪು ನೆನೆದು ಕಣ್ಣೀರು ಹಾಕಿದ್ದಾರೆ. ಅಪ್ಪು ಮೇಲೆ ಅಭಿಮಾನಿಗಳು ಹೊಂದಿರುವ ಅಪಾರ ಪ್ರೀತಿ ಹಾಗೂ ಅಭಿಮಾನವನ್ನು ನೋಡಿ ಮಾರುಹೋಗಿದ್ದಾರೆ. ಇದನ್ನೂ ಓದಿ: ಅಪ್ಪು ಸಮಾಧಿ ದರ್ಶನ ಪಡೆದ ಅಶ್ವಿನಿ ಪುನೀತ್ ರಾಜ್‍ಕುಮಾರ್

    ಈ ಹಿಂದೆ ರಾಜಕುಮಾರ ಸಿನಿಮಾದಲ್ಲಿ ಪುನೀತ್‍ಗೆ ಜೋಡಿಯಾಗಿದ್ದ ಪ್ರಿಯಾ ಆನಂದ್ ಅಭಿನಯಿಸಿದ್ದರು. ಈ ಸಿನಿಮಾ ಪ್ರಿಯಾ ಆನಂದ್ ಅವರಿಗೆ ದೊಡ್ಡ ಬ್ರೇಕ್ ತಂದು ಕೊಟ್ಟಿತ್ತು. ಇದಾದ ಬಳಿಕ ಅಪ್ಪು ಜೊತೆ ಜೇಮ್ಸ್ ಸಿನಿಮಾದಲ್ಲಿ ಪ್ರಿಯಾ ಆನಂದ್ ಮತ್ತೊಮ್ಮೆ ಬಣ್ಣ ಹಚ್ಚಿದ್ದಾರೆ. ಇದನ್ನೂ ಓದಿ: ಪುನೀತ್ ರಾಜ್‍ಕುಮಾರ್ ಹುಟ್ಟಹುಬ್ಬ- ಬಿಎಸ್‍ವೈ, ಬೊಮ್ಮಾಯಿ ಹೇಳಿದ್ದೇನು..?

  • ಪುನೀತ್ ರಾಜ್ ಕುಮಾರ್ ರಸ್ತೆಗೆ ಬಿಬಿಎಂಪಿ ಅನುಮೋದನೆ : ಮತ್ತೊಂದು ದಾಖಲೆ ಬರೆದ ಡಾ.ರಾಜ್ ಕುಟುಂಬ

    ಪುನೀತ್ ರಾಜ್ ಕುಮಾರ್ ರಸ್ತೆಗೆ ಬಿಬಿಎಂಪಿ ಅನುಮೋದನೆ : ಮತ್ತೊಂದು ದಾಖಲೆ ಬರೆದ ಡಾ.ರಾಜ್ ಕುಟುಂಬ

    ಬೆಂಗಳೂರು: ಕರ್ನಾಟಕ ರತ್ನ ಪುನೀತ್ ರಾಜ್ ಕುಮಾರ್ ಅವರ ಹೆಸರನ್ನು ಬೆಂಗಳೂರಿನ ರಸ್ತೆಯೊಂದಕ್ಕೆ ಇಡಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ಅನುಮೋದಿಸಿದೆ. ಮೈಸೂರು ರಸ್ತೆಯ ನಾಯಂಡನಹಳ್ಳಿ ಜಂಕ್ಷನ್ ನಿಂದ ಬನ್ನೇರುಘಟ್ಟ ರಸ್ತೆಯ ವೆಗಾಸಿಟಿ ಮಾಲ್ ಜಂಕ್ಷನ್‌ ವರೆಗಿನ ವರ್ತುಲ ರಸ್ತೆಗೆ “ಪುನೀತ್ ರಾಜ್ ಕುಮಾರ್ ರಸ್ತೆ’ ಎಂದು ನಾಮಕರಣ ಮಾಡುವ ಕುರಿತು ಬಿಬಿಎಂಪಿ ಸಭೆಯಲ್ಲಿ ಏಕಪಕ್ಷೀಯವಾಗಿ ನಿರ್ಣಯ ತಗೆದುಕೊಳ್ಳಲಾಗಿದೆ. ಇದನ್ನೂ ಓದಿ :ಎಂತವರಿಗೂ ಮರುಕ ಹುಟ್ಟಿಸುತ್ತೆ ಕನ್ನೇರಿ ಚಿತ್ರದ ‘ಕಾಣದ ಊರಿಗೆ ಕೂಲಿಗೆ ಹೊರಟವಳೆ’ ಹಾಡು


    ಪುನೀತ್ ರಾಜ್ ಕುಮಾರ್ ಅವರ ಹೆಸರನ್ನು ವರ್ತುಲ ರಸ್ತೆಗೆ ನಾಮಕರಣ ಮಾಡಬೇಕೆಂದು ಬಿಬಿಎಂಪಿಗೆ 700ಕ್ಕೂ ಹೆಚ್ಚು ಪುನೀತ್ ಅಭಿಮಾನಿಗಳು ಸಹಿ ಮಾಡಿದ ಮನವಿ ಪತ್ರ ನೀಡಿದ್ದರು. ಹಲವಾರು ಸಂಘ ಸಂಸ್ಥೆಗಳು ಕೂಡ ಪಾಲಿಕೆಗೆ ಪತ್ರಗಳನ್ನು ಬರೆಯುವ ಮೂಲಕ ಒತ್ತಾಯಿಸಿದ್ದವು. ಅಲ್ಲದೇ ಇದೇ ರಸ್ತೆಗೆ ಡಾ. ಅಂಬರೀಶ್ ಅವರ ಹೆಸರನ್ನು ಇಡಬೇಕು ಎಂದು ಅಂಬರೀಶ್ ಅಭಿಮಾನಿಗಳು ಕೂಡ ಮನವಿ ಪತ್ರ ಕೊಟ್ಟಿದ್ದರು. ಕೊನೆಗೂ ಬಿಬಿಎಂಪಿ ‘ಪುನೀತ್ ರಾಜ್ ಕುಮಾರ್ ರಸ್ತೆ’ಗೆ ಒಪ್ಪಿಗೆ ಕೊಟ್ಟಿದೆ. ಇದನ್ನೂ ಓದಿ : ಮೇಡ್ ಇನ್ ಚೈನಾ ಅಂತಿದ್ದಾರೆ ನಾಗಭೂಷಣ್


    ಈವರೆಗೂ ಒಂದೇ ಕುಟುಂಬದ ಮೂವರು ಕಲಾವಿದರ ಹೆಸರನ್ನು ಕರ್ನಾಟಕದ ಯಾವ ರಸ್ತೆಗೂ ನಾಮಕರಣ ಮಾಡಿಲ್ಲ. ಹಾಗಾಗಿ ಇದೊಂದು ದಾಖಲೆಯ ನಡೆ ಕೂಡ ಆಗಿದೆ. ಬೆಂಗಳೂರಿನ ಹಲವು ರಸ್ತೆಗಳಿಗೆ ಮತ್ತು ಮೇಲ್ಸೇತುವೆಗಳಿಗೆ ಡಾ.ರಾಜ್ ಕುಮಾರ್ ಹೆಸರು ಇಡಲಾಗಿದೆ. ಪಾರ್ವತಮ್ಮ ರಾಜ್ ಕುಮಾರ್ ಅವರ ಹೆಸರನ್ನು ಬೆಂಗಳೂರಿನ ಹಲವು ರಸ್ತೆಗಳಿಗೆ ನಾಮಕರಣ ಮಾಡಲಾಗಿದೆ. ಇದನ್ನೂ ಓದಿ : ಬೆಂಗಳೂರು ಅಂತರಾಷ್ಟ್ರೀಯ ಫಿಲ್ಮಂ ಫೆಸ್ಟಿವಲ್‍ನಲ್ಲಿ ಗಮನ ಸೆಳೆಯಲಿದೆ ಸೈಕಲಾಜಿಕಲ್ ಥ್ರಿಲ್ಲರ್ ‘ರುಗ್ನ’


    ಪುನೀತ್ ನಿಧನದ ನಂತರ ರಾಜ್ಯದ ಅನೇಕ ಕಡೆ ಪುನೀತ್ ಅವರ ಪುತ್ಥಳಿ ಸ್ಥಾಪಿಸಲಾಗಿದೆ. ಹಲವು ರಸ್ತೆಗಳಿಗೆ ಹೆಸರನ್ನು ಇಡಲಾಗಿದೆ. ಈ ಮೂಲಕ ನಿರಂತರವಾಗಿ ಪುನೀತ್ ಅವರಿಗೆ ಅಭಿಮಾನಿಗಳು ಅಭಿಮಾನ ತೋರಿಸುತ್ತಿದ್ದಾರೆ.

  • ನೇತ್ರದಾನಕ್ಕೆ ಸ್ಫೂರ್ತಿಯಾದ ” ರಾಜರತ್ನ” – ಅಪ್ಪು ಬಳಿಕ ಹೆಚ್ಚಾಗ್ತಿದೆ ನೇತ್ರದಾನಿಗಳ ಸಂಖ್ಯೆ

    ನೇತ್ರದಾನಕ್ಕೆ ಸ್ಫೂರ್ತಿಯಾದ ” ರಾಜರತ್ನ” – ಅಪ್ಪು ಬಳಿಕ ಹೆಚ್ಚಾಗ್ತಿದೆ ನೇತ್ರದಾನಿಗಳ ಸಂಖ್ಯೆ

    ಬೆಂಗಳೂರು: ದೊಡ್ಮನೆ ಹುಡುಗ ನಟ ಪುನೀತ್ ರಾಜ್‍ಕುಮಾರ್ ನಿಧನದ ನಂತರ ನೇತ್ರದಾನ ಮಾಡಲು ನೂರಾರು ಸಂಖ್ಯೆಯಲ್ಲಿ ಜನ ಮುಂದಾಗಿದ್ದಾರೆ.

     puneeth rajkumar

    ಪುನೀತ್ ರಾಜ್‍ಕುಮಾರ್ ಅವರು, ವಿಧಿವಶರಾದ ಬಳಿಕ ನೇತ್ರದಾನ ಮಾಡಿ ನಾಲ್ವರ ಬಾಳಿಗೆ ಬೆಳಕಾಗಿದ್ದಾರೆ. ಇದೀಗ ಪ್ರತಿದಿನ ನಾರಾಯಣ ನೇತ್ರಾಲಯದಲ್ಲಿ ನೇತ್ರದಾನ ಮಾಡಲು ಜನರ ದಂಡು ಹರಿದು ಬರುತ್ತಿದ್ದು, ಈಗಾಗಲೇ ಸಾವಿರಾರು ಸಂಖ್ಯೆಯಲ್ಲಿ ನೇತ್ರದಾನ ಮಾಡಲು ಜನ ನೊಂದಾಯಿಸಿದ್ದಾರೆ ಎಂದು ಡಾ. ಭುಜಂಗ ಶೆಟ್ಟಿ ಅವರು ತಿಳಿಸಿದ್ದಾರೆ. ಇದನ್ನೂ ಓದಿ: ನಾಲ್ವರ ಬಾಳಿಗೆ ಬೆಳಕಾದ ಅಪ್ಪು

     puneeth rajkumar

    ಈ ಕುರಿತಂತೆ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ಪುನೀತ್ ಸಮಾಧಿಗೆ ಭೇಟಿ ಕೊಟ್ಟು ಬಂದವರೆಲ್ಲ ಬಹುತೇಕರು ನೇರವಾಗಿ ನಾರಾಯಣ ನೇತ್ರಾಲಯಕ್ಕೆ ಬಂದು ಕಣ್ಣಿನ ದಾನ ಮಾಡುತ್ತಿದ್ದಾರೆ. ದಿನಕ್ಕೆ 3 ರಿಂದ 4 ಜನ ನೇತ್ರದಾನ ಮಾಡಿದರೆ ಅದೇ ದೊಡ್ಡದು. ಆದರೀಗ ನಿತ್ಯ 200 ಜನದಂತೆ ನೇತ್ರದಾನ ಮಾಡಲು ಬರುತ್ತಿದ್ದಾರೆ. ಇದು ಅಪ್ಪು ಬಿಟ್ಟು ಹೋದ ಸ್ಫೂರ್ತಿ. ಪುನೀತ್ ಸಾವಿನ ಬಳಿಕ 30 ಜನರ ಕಣ್ಣನ್ನು ನಾವು ಬೇರೆಯವರಿಗೆ ಜೋಡಿಸಿದ್ದೇವೆ. ಸಾವಿನ ಮನೆಯಿಂದಲೂ ಕರೆ ಬರುತ್ತಿದೆ. ಇಷ್ಟರಮಟ್ಟಿಗೆ ಜನ ಜಾಗೃತಿಗೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಪುನೀತ್ ಓದಿಸುತ್ತಿದ್ದ 1,800 ಮಕ್ಕಳ ಜವಾಬ್ದಾರಿ ಹೊತ್ತ ನಟ ವಿಶಾಲ್