Tag: Puneet fan

  • ಪುನೀತ್ ನೆನಪಿಗಾಗಿ ಎದೆ ಮೇಲೆ ಹಚ್ಚೆ ಹಾಕಿಸಿಕೊಂಡ ಅಭಿಮಾನಿ

    ಪುನೀತ್ ನೆನಪಿಗಾಗಿ ಎದೆ ಮೇಲೆ ಹಚ್ಚೆ ಹಾಕಿಸಿಕೊಂಡ ಅಭಿಮಾನಿ

    ಹುಬ್ಬಳ್ಳಿ: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಪುಣ್ಯಸ್ಮರಣೆ ಹಿನ್ನೆಲೆ ಅವರ ಅಭಿಮಾನಿಯೊಬ್ಬರು ಎದೆ ಮೇಲೆ ಪುನೀತ್ ಭಾವಚಿತ್ರದ ಟ್ಯಾಟೋ ಹಾಕಿಸಿಕೊಳ್ಳುವ ಮೂಲಕ ಅಭಿಮಾನ ಮೆರೆದಿದ್ದಾರೆ.

    ದೊಡ್ಮನೆ ಹುಡುಗ ನಟ ಪುನೀತ್ ರಾಜ್‍ಕುಮಾರ್ ಅಗಲಿ ಇಂದಿಗೆ 12 ದಿನ ಕಳೆದಿದೆ. ಪುನೀತ್ ಇಲ್ಲ ಎಂಬ ಸತ್ಯವನ್ನು ಜನ ಈಗಲೂ ಸಹ ಅರಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನೆಚ್ಚಿನ ನಟ ಅಪ್ಪು ನಿಧನ ಬಳಿಕ ಅನೇಕ ಮಂದಿ ತಮ್ಮ ಕಣ್ಣುಗಳನ್ನು ದಾನ ಮಾಡಲು ಮುಂದಾಗಿದ್ದಾರೆ. ಇನ್ನೂ ಕೆಲವರು ಪುನೀತ್ ಸವಿನೆನಪಿನಲ್ಲಿ ಅನ್ನಸಂತರ್ಪಣೆ ಮಾಡಿದ್ದರೆ, ವೃದ್ಧೆಯೊಬ್ಬರು ಪುನೀತ್‍ಗಾಗಿ ಮಂಡಕ್ಕಿಯಲ್ಲಿ ಹಾರ ಮಾಡಿಕೊಂಡು ಪುನೀತ್ ಸಮಾಧಿ ಬಳಿ ಆಗಮಿಸಿದ್ದರು. ಹೀಗೆ ನಾನಾ ರೀತಿಯಲ್ಲಿ ಅಭಿಮಾನಿಗಳು ತಮ್ಮ ಅಭಿಮಾನವನ್ನು ವ್ಯಕ್ತಪಡಿಸುತ್ತಿದ್ದಾರೆ.  ಇದನ್ನೂ ಓದಿ: ಅನ್ನ ಸಂತರ್ಪಣೆ ವೇಳೆ ಪುನೀತ್ ನೆನೆದು ಕಣ್ಣೀರಿಟ್ಟ ಅಶ್ವಿನಿ

    ಇಂದಿಗ ರಾಘವೇಂದ್ರ ವದ್ದಿ ಎಂಬ ಅಭಿಮಾನಿ ಎದೆಯ ಮೇಲೆ ಪುನೀತ್ ರಾಜ್‍ಕುಮಾರ್ ಅವರ ಭಾವಚಿತ್ರ ಹಾಗೂ ಜೈ ರಾಜವಂಶ ಎನ್ನುವ ಟ್ಯಾಟೋವನ್ನು ಎದೆಯ ಮೇಲೆ ಹಾಕಿಸಿಕೊಂಡು ಅಭಿಮಾನ ಮೆರೆದಿದ್ದಾರೆ. ಇದನ್ನೂ ಓದಿ: ಖುದ್ದು ರಕ್ತದಾನ ಮಾಡಿ ಮಾದರಿಯಾದ ನಟ ಶಿವರಾಜ್ ಕುಮಾರ್

    ಪುನೀತ್ ರಾಜ್‍ಕುಮಾರ್ ಅವರ ಚಿತ್ರಕ್ಕೆ ಮಾತ್ರವಲ್ಲದೇ ರಾಜವಂಶದ ಯಾವುದೇ ಚಿತ್ರದ ಬಿಡುಗಡೆ ಸಂದರ್ಭದಲ್ಲಿ ಕೂಡ ಅದ್ದೂರಿಯಾಗಿ ಸ್ವಾಗತಿಸುವ ರಾಘವೇಂದ್ರ ಅವರು, ಪುನೀತ್ ಅಗಲಿಕೆಯಿಂದ ಅವರ ನೆನಪು ಸದಾ ಹಸಿರಾಗಿರಲಿ ಎಂದು ಈ ನಿರ್ಧಾರ ಕೈಗೊಂಡಿದ್ದಾರೆ.

  • ಸಾವಿನಲ್ಲೂ ಸಾರ್ಥಕತೆ – ಕಣ್ಣು ದಾನ ಮಾಡಿದ ಅಪ್ಪು ಅಭಿಮಾನಿ

    ಸಾವಿನಲ್ಲೂ ಸಾರ್ಥಕತೆ – ಕಣ್ಣು ದಾನ ಮಾಡಿದ ಅಪ್ಪು ಅಭಿಮಾನಿ

    ಹಾಸನ: ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿಮಾನಿ ಸಾವಿನಲ್ಲೂ ಸಾರ್ಥಕತೆ ಮೆರೆದ ಘಟನೆ ಹಾಸನದಲ್ಲಿ ನಡೆದಿದೆ.

    ಎಚ್.ಟಿ.ರವಿ ಮೃತಪಟ್ಟ ವ್ಯಕ್ತಿ. ಹಾಸನ ಜಿಲ್ಲೆ, ಬೇಲೂರು ಪಟ್ಟಣದ ನಿವಾಸಿಯಾದ ರವಿ ಅವರು ಬೆಂಗಳೂರಿಗೆ ಬಂದು ಅಪ್ಪುವಿನ ಪಾರ್ಥಿವ ಶರೀರದ ದರ್ಶನ ಪಡೆದು ಬಂದಿದ್ದರು. ಆದರೆ ನಿನ್ನೆ ರವಿ ಅವರಿಗೂ ಎದೆನೋವು ಕಾಣಿಸಿಕೊಂಡಿದ್ದು, ಕೂಡಲೇ ಹಾಸನದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆ ಕೊಡಿಸಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ನಿನ್ನೆಯೇ ರವಿ ಸಾವನ್ನಪ್ಪಿದ್ದಾರೆ.

    ನಾನು ಬದುಕುವುದಿಲ್ಲ ಎಂದು ಅರಿತ ರವಿ ಅವರು, ನನ್ನ ಎರಡು ಕಣ್ಣುಗಳನ್ನು ದಾನ ಮಾಡಿ ಎಂದು ಸಹೋದರ ಎಚ್.ಟಿ.ಕುಮಾರಸ್ವಾಮಿ ಅವರಿಗೆ ಸಾಯುವ ಮುನ್ನಾ ತಿಳಿಸಿದ್ದರು. ಸಹೋದರನ ಕೊನೆಯ ಆಸೆಯಂತೆ ಕುಟುಂಬಸ್ಥರು ರವಿ ಅವರ ಎರಡು ಕಣ್ಣುಗಳನ್ನು ಬೆಂಗಳೂರಿನ ಮಿಂಟೋ ಆಸ್ಪತ್ರೆಗೆ ದಾನ ಮಾಡಿದ್ದಾರೆ. ರವಿ ಅವರ ಅಂತ್ಯಕ್ರಿಯೆಯನ್ನು ಬೇಲೂರಿನ ಹಿಂದೂ ರುದ್ರಭೂಮಿಯಲ್ಲಿ ನೆರವೇರಿಸಲಾಗಿದೆ. ಇದನ್ನೂ ಓದಿ: ಭೋಜನಪ್ರಿಯ ಅಪ್ಪುಗೆ ಯಾವ ಯಾವ ಫುಡ್ ಇಷ್ಟ? ಯಾವೆಲ್ಲ ಹೋಟೆಲ್‍ಗೆ ಹೋಗ್ತಿದ್ರು?

    ರವಿ ಅವರು ಪುನೀತ್ ಅಂತಿಮ ದರ್ಶನಕ್ಕೂ ಹೋಗಿ ಬಂದಿದ್ದು, ಕಸಬಾ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್ ನ ನಿರ್ದೇಶಕರು ಹಾಗೂ ತಾಲೂಕು ಕಟ್ಟಡ ಕಾರ್ಮಿಕ ಸಂಘದ ಅಧ್ಯಕ್ಷರಾಗಿದ್ದರು.