ಹಾಸನ: ಹಿಂದೂ ಮುಖಂಡ ಪುನೀತ್ ಕೆರೆಹಳ್ಳಿಯವರಿಗೆ (Hindu leader Puneeth Kerehalli) ಸಕಲೇಶಪುರ (Sakleshpura) ಪ್ರವೇಶಕ್ಕೆ ನಿರ್ಬಂಧ ಹೇರಿ ಹಾಸನ ಡಿಸಿ ಲತಾಕುಮಾರಿ ಆದೇಶ ಹೊರಡಿಸಿದ್ದಾರೆ.
ಹಿಂದೂ ಹಿತರಕ್ಷಣಾ ಸಮಿತಿ ಆಯೋಜಿಸಿದ್ದ ಅಖಂಡ ಭಾರತ ಸಂಕಲ್ಪ ಯಾತ್ರೆಯಲ್ಲಿ (Bharat Sankalpa Yatra) ಪುನೀತ್ ಕೆರೆಹಳ್ಳಿ ದಿಕ್ಸೂಚಿ ಭಾಷಣ ಮಾಡುವವರಿದ್ದು. ಆದರೆ ಕೋಮು ಸೌಹಾರ್ದತೆಗೆ ಧಕ್ಕೆ ತರುವ ಸಾಧ್ಯತೆ ಹಿನ್ನೆಲೆಯಲ್ಲಿ ಸಕಲೇಶಪುರ ಪ್ರವೇಶಕ್ಕೆ ನಿರ್ಬಂಧ ಹೇರುವಂತೆ ಜಿಲ್ಲಾಧಿಕಾರಿಗಳಿಗೆ ಎಸ್‍ಪಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ನಿರ್ಬಂಧ ಹೇರಿ ಆದೇಶ ಹೊರಡಿಸಲಾಗಿದೆ. ಇದನ್ನೂ ಓದಿ: ನಾಳೆ ದರ್ಶನ್ ಪಾಲಿಗೆ ಬಿಗ್ ಡೇ – ಸುಪ್ರೀಂ ತೀರ್ಪಿನತ್ತ ಚಿತ್ತ, ಮತ್ತೆ ಜೈಲುಪಾಲಾಗ್ತಾರಾ ನಟ?
ರಾಜ್ಯದ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ ಕೇಸ್ ಉಲ್ಲೇಖಿಸಿ ಡಿಸಿಗೆ ಮನವಿ ಮಾಡಲಾಗಿತ್ತು. ಮನವಿ ಪತ್ರದಲ್ಲಿ ಪ್ರಚೋದನಕಾರಿ ಭಾಷಣ ಮಾಡಿ ಜನರ ಭಾವನೆಗಳಿಗೆ ಧಕ್ಕೆ ತರುವ ಸಾಧ್ಯತೆ ಇದೆ. ಇದರಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆ ತರುವ ಸಾಧ್ಯತೆ ಇದೆ ಎಂದು ಉಲ್ಲೇಖಿಸಲಾಗಿತ್ತು.
ಮಂಗಳೂರು: ಮಹೇಶ್ ಶೆಟ್ಟಿ ತಿಮರೋಡಿ, ಗಿರೀಶ್ ಮಟ್ಟಣ್ಣನವರ್ ಮತ್ತು ಪುನೀತ್ ಕೆರೆಹಳ್ಳಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ.
ಬೆಳ್ತಂಗಡಿ ನಿವಾಸಿ ಚರಣ್ ಶೆಟ್ಟಿ ಎಂಬವರ ದೂರಿನಂತೆ ಪ್ರಕರಣ ದಾಖಲಾಗಿದೆ. ಗಿರೀಶ್ ಮಟ್ಟಣ್ಣವರ್ (Girish Mattannavar) ಅಪರಾಧಿಕ ಕೃತ್ಯಗಳನ್ನು ನಡೆಸಲು ದುಷ್ಪ್ರೇರಣೆಯಾಗುವಂತೆ ಮಾತನಾಡಿದ್ದಾರೆ ಎಂದು ದೂರಿದ್ದಾರೆ. ಇದನ್ನೂಓದಿ: ಧರ್ಮಸ್ಥಳದಲ್ಲಿ ಗುಂಪು ಘರ್ಷಣೆ –ಓರ್ವ ಆರೋಪಿ ಬಂಧನ
ಮಹೇಶ್ ಶೆಟ್ಟಿ ತಿಮರೋಡಿ (Mahesh Shetty Thimarodi) ಅವರು ಪ್ರಾದೇಶಿಕವಾಗಿ ಜನರ ನಡುವೆ ವೈಮನಸ್ಸು ಉಂಟಾಗುವಂತಹ ಹೇಳಿಕೆ ನೀಡಿದ್ದಾರೆ. ಸಾರ್ವಜನಿಕರಲ್ಲಿ ಭೀತಿ ಉಂಟಾಗುವಂತೆ ಅಪಾಯಕಾರಿ ಹೇಳಿಕೆ ನೀಡಿದ್ದಾರೆ ಎಂದು ದೂರಿನಲ್ಲಿ ಚರಣ್ ಶೆಟ್ಟಿ ಉಲ್ಲೇಖಿಸಿದ್ದಾರೆ. ಇದನ್ನೂಓದಿ: ಗಿರೀಶ್ ಮಟ್ಟಣನವರ್, ಮಹೇಶ್ ಶೆಟ್ಟಿತಿಮರೋಡಿ, ಸಮೀರ್ ವಿರುದ್ಧಎಫ್ಐಆರ್ ದಾಖಲು
ಪುನೀತ್ ಕೆರೆಹಳ್ಳಿ (Puneeth Kerehalli) ಯೂಟ್ಯೂಬ್ ನಲ್ಲಿ ಅಶ್ಲೀಲವಾಗಿ ಮಾತನಾಡಿದ್ದಾರೆ ಎಂದು ಆರೋಪಿಸಿ ಬೆಳ್ತಂಗಡಿ ಗ್ರಾಮದ ನಿವಾಸಿ ಜೆರೋಮ್ ಬರ್ಬೋಝಾ ಎಂಬವರ ದೂರಿನ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು: ಸಚಿವ ಜಮೀರ್ ಅಹ್ಮದ್ ಅವರಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಹಿಂದೂಪರ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ (Puneeth Kerehalli) 14 ದಿನಗಳ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಪುನೀತ್ ಕೆರೆಹಳ್ಳಿ ವಿರುದ್ಧ ಚಾಮರಾಜಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಅದರ ಬೆನ್ನಲ್ಲೇ ಆರೋಪಿಯನ್ನು ಬಂಧಿಸಲಾಯಿತು. ಬಳಿಕ ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯಕೀಯ ತಪಾಸಣೆ ಬಳಿಕ ನ್ಯಾಯಾದೀಶರ ಮುಂದೆ ಹಾಜರು ಪಡಿಸಲಾಗಿತ್ತು. ಆರೋಪಿಗೆ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದ್ದಾರೆ. ಇದನ್ನೂ ಓದಿ: ರಾಜ್ಯದ ಜನತೆಗೆ ಸೆಸ್ ಶಾಕ್ – ನೀರಿನ ಬಿಲ್‌ನಲ್ಲೇ ʻಹಸಿರು ಸೆಸ್ʼ ಸಂಗ್ರಹಕ್ಕೆ ಮುಂದಾದ ಸರ್ಕಾರ
ಕೇಂದ್ರ ಸಚಿವ ಕುಮಾರಸ್ವಾಮಿ ಅವರಿಗೆ ಕರಿಯ ಎಂದು ಜಮೀರ್ ಅಹ್ಮದ್ (Zameer Ahmed) ನಿಂದಿಸಿದ್ದರು. ಇದೇ ಹೇಳಿಕೆಯನ್ನು ಮುಂದಿಟ್ಟು ಫೇಸ್‌ಬುಕ್ ಲೈವ್‌ನಲ್ಲಿ ಜಮೀರ್ ವಿರುದ್ಧ ಪುನೀತ್ ಕೆರೆಹಳ್ಳಿ ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಜೊತೆಗೆ ಸಚಿವರಿಗೆ ಬೆದರಿಕೆ ಹಾಕಿದ್ದ.
‘ಕುಮಾರಸ್ವಾಮಿ (H.D.Kumaraswamy) ಅವರಿಗೆ ಮತ್ತೊಮ್ಮೆ ಕರಿಯ ಎಂದು ಕರೆದರೆ ನೀನು ಹಾಸನ ಹಾಗೂ ಮಂಡ್ಯ ಜಿಲ್ಲೆಗಳ ಗಡಿ ದಾಟುವುದಿಲ್ಲ. ನಾನೇ ನಿನಗೆ ಕೊನೆಯಾಡುತ್ತೇನೆ’ ಎಂದು ಸಚಿವ ಜಮೀರ್ ಅವರಿಗೆ ಜೀವ ಬೆದರಿಕೆ ಒಡ್ಡಿದ್ದ. ಈ ಸಂಬಂಧ ಸಚಿವರ ಆಪ್ತ ಸಹಾಯ ಬಿ.ಎಸ್.ಅಶೋಕ್ ಅವರು ದೂರು ನೀಡಿದ್ದರು. ದೂರಿನ ಮೇರೆಗೆ ಕೆರೆಹಳ್ಳಿಯನ್ನು ಪೊಲೀಸರು ಬಂಧಿಸಿದ್ದರು. ಇದನ್ನೂ ಓದಿ: ಬಿಡಿಗಾಸು ಅನುದಾನ ಬಿಡುಗಡೆ ಮಾಡದೆ ಹಗರಣದ ಆರೋಪ ಮಾಡುವುದರಲ್ಲಿ ಅರ್ಥವಿಲ್ಲ: ಸುನಿಲ್ ಕುಮಾರ್ ತಿರುಗೇಟು
ಬೆಂಗಳೂರು: ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಬಿಜೆಪಿ ಮಾಜಿ ಸಂಸದ ಪ್ರತಾಪ್ ಸಿಂಹ (Pratap Simha), ಪುನೀತ್ ಕೆರೆಹಳ್ಳಿ ಸೇರಿದಂತೆ ಹಲವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ.
ಬಸವೇಶ್ವರ ನಗರ ಪೊಲೀಸ್ ಠಾಣೆ ಮುಂದೆ ಪ್ರತಾಪ್ ಸಿಂಹ ಸೇರಿದಂತೆ ಹಲವು ಬಿಜೆಪಿ ಮುಖಂಡರು ಪ್ರತಿಭಟನೆ ನಡೆಸಿದ್ದರು. ಠಾಣೆ ಮುಂದೆ ಗುಂಪುಗೂಡಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಆರೋಪದಲ್ಲಿ ಪ್ರಕರಣ ದಾಖಲಿಸಲಾಗಿದೆ. ಪುನೀತ್ ಕೆರೆಹಳ್ಳಿ ಎ1, ಪ್ರತಾಪ್ ಸಿಂಹ ಎ2 ಆರೋಪಿಗಳು ಎಂದು ಎಫ್‌ಐಆರ್‌ನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ನಮ್ಮ ಸರ್ಕಾರದಲ್ಲಿ ನಾನೇ ನ್ಯಾಯಕ್ಕಾಗಿ ಬೇಡುವ ಪರಿಸ್ಥಿತಿ ಬಂದಿದೆ: ನೇಹಾ ಪ್ರಕರಣದಲ್ಲಿ ತಂದೆ ಅಸಮಾಧಾನ
ಪುನೀತ್ ಕೆರೆಹಳ್ಳಿ ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಪ್ರತಾಪ್ ಸಿಂಹ, ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಬಿಜೆಪಿ ಹಾಗೂ ಹಿಂದೂಪರ ಸಂಘಟನೆ ಕಾರ್ಯಕರ್ತರು ಬಸವೇಶ್ವರ ನಗರ ಪೊಲೀಸ್ ಠಾಣೆ ಮುಂದೆ ಇಂದು ಪ್ರತಿಭಟನೆ ನಡೆಸಿದರು.
ದಾವಣಗೆರೆ: ರಾಜಸ್ಥಾನದಿಂದ (Rajasthan) ಬೆಂಗಳೂರಿಗೆ (Bengaluru) ಬಂದ್ದದ್ದು, ನಾಯಿ ಮಾಂಸ (Dog Meat) ಅಲ್ಲ, ಮೇಕೆಯ ಮಾಂಸ ಎಂಬುದು ವರದಿಯಲ್ಲಿ ದೃಢವಾಗಿದೆ ಎಂದು ಗೃಹಸಚಿವ ಡಾ.ಜಿ ಪರಮೇಶ್ವರ್ (G Parmeshwar) ಸ್ಪಷ್ಟಪಡಿಸಿದ್ದಾರೆ.
ದಾವಣಗೆರೆಯಲ್ಲಿ (Davanagere) ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ನಾಯಿ ಮಾಂಸ ಮಾರಾಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ್ದಾರೆ. ಲ್ಯಾಬ್‌ನಲ್ಲಿ ಅದು ಮೇಕೆ ಮಾಂಸ ಎಂದು ವರದಿ ಬಂದಿದೆ. ಅನಾವಶ್ಯಕವಾಗಿ ದುರುದ್ದೇಶದಿಂದ ದೂರು ನೀಡಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ರಾಜಸ್ಥಾನದಿಂದ ಬೆಂಗಳೂರಿಗೆ ಬಂದಿದ್ದು ಮೇಕೆ ಮಾಂಸ?
ರಾಜಸ್ಥಾನದಿಂದ ಮಾಂಸ ತಂದು ಮಾರಾಟ ಮಾಡುವುದು ಅವರ ವೃತ್ತಿ. ವಾರಕ್ಕೊಮ್ಮೆ ಅಥವಾ 15 ದಿನಕ್ಕೊಮ್ಮೆ ಮಾಂಸ ಮಾರಾಟ ಮಾಡುವುದು ವೃತ್ತಿ. ಅದು ನಾಯಿ ಮಾಂಸ ಅಲ್ಲ ಮೇಕೆ ಮಾಂಸ ಎಂಬುದು ವರದಿಯಲ್ಲಿ ದೃಢವಾಗಿದೆ ಎಂದು ತಿಳಿಸಿದರು. ಇದನ್ನೂ ಓದಿ: ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವಂತೆ ಸಚಿವರಿಗೆ ಡಿಕೆಶಿ ಮನವಿ
ರಾಜ್ಯದ ಸಂಪತ್ತು ಹಾಳಾಗುತ್ತಿದೆ, ಸಂಪತ್ತು ಲೂಟಿ ಆಗುತ್ತಿದೆ ಅಂತ ಬಿಜೆಪಿಯವರು ಪಾದಯಾತ್ರೆ ಮಾಡುತ್ತಿರುವುದಾಗಿ ಬಿಜೆಪಿಯವರು ಹೇಳಿದ್ದಾರೆ. ಅವರ ಪಾದಯಾತ್ರೆ ಅನವಶ್ಯಕವಾಗಿದೆ. ಸಿಎಂ ಮೇಲೆ ಅನಾವಶ್ಯಕ ಆರೋಪ ಮಾಡಿ ಪಾದಯಾತ್ರೆ ಮಾಡುತ್ತಿದ್ದಾರೆ. ಯಾವುದೇ ರೀತಿಯ ಕಾನೂನು ಬಾಹಿರ ಚಟುವಟಿಕೆ ಆಗಿಲ್ಲ. ಕಾನೂನು ಉಲ್ಲಂಘನೆ ಆಗಿಲ್ಲದಿದ್ದರೂ ಆಗಿದೆ ಎಂದು ಬಿಂಬಿಸಲು ಬಿಜೆಪಿಯವರು ಹೊರಟಿದ್ದಾರೆ ಎಂದು ಕಿಡಿ ಕಾರಿದ್ದಾರೆ. ಇದನ್ನೂ ಓದಿ: ಮುಡಾ ಹಗರಣ ಸಿಬಿಐ ತನಿಖೆ ಮಾಡಿದ್ರೆ ಬಿಎಸ್‌ವೈ ಇದ್ದಾನೋ, ಬಿವೈವಿ ಇದ್ದಾನೋ ಎಂದು ಗೊತ್ತಾಗುತ್ತೆ: ಯತ್ನಾಳ್
ನಾವು ರಾಜ್ಯದ ಜನತೆಗೆ ಸತ್ಯ ತಿಳಿಸುವ ಪ್ರಯತ್ನ ಮಾಡುತ್ತೇವೆ. ಅದಕ್ಕಾಗಿ ಮುಖ್ಯಮಂತ್ರಿಗಳು ಒಂದು ಆಯೋಗ ನೇಮಕ ಮಾಡಿದ್ದಾರೆ. ಮುಖ್ಯಮಂತ್ರಿ ಯಾವುದೇ ತಪ್ಪು ಮಾಡಿಲ್ಲ. ಯಾವುದೇ ಕಾನೂನು ಬಾಹಿರ ಕೆಲಸ ಆಗಿಲ್ಲ. ವಾಲ್ಮೀಕಿ ಹಗರಣವನ್ನು ನಾವು ಜಸ್ಟಿಫೈ ಮಾಡುತ್ತಿಲ್ಲ. ವಾಲ್ಮೀಕಿ ಹಗರಣದ ಬಗ್ಗೆ ಎಸ್‌ಐಟಿ, ಸಿಬಿಐ ತನಿಖೆಯಾಗುತ್ತಿದೆ. ಅದರ ವರದಿ ಬರಲಿ. ಒಂದು ವೇಳೆ ವಾಲ್ಮೀಕಿ ಹಗರಣದಲ್ಲಿ ಮಂತ್ರಿಗಳ ಅಕೌಂಟ್ ಹಣ ಹೋಗಿದೆ ಎಂದು ಸಾಬೀತಾದರೆ ಅವರ ಮೇಲೆ ಕ್ರಮ ತೆಗೆದುಕೊಳ್ಳುತ್ತೇವೆ ಎಂದರು. ಇದನ್ನೂ ಓದಿ: 2010 ರಲ್ಲೇ ಸಿಎಂ ಆಗಬೇಕಿತ್ತು, ಆಗ ಅವಕಾಶ ಕೈ ತಪ್ಪಿತ್ತು: ವಿಜಯ್ ಶಂಕರ್
ಬೆಂಗಳೂರು: ನಗರದಲ್ಲಿ (Bengaluru) ನಾಯಿ ಮಾಂಸದ (Dog Meat) ವದಂತಿ ಹರಡುತ್ತಿದ್ದಂತೆ, ಮಾಂಸ ಎಂದರೆ ಒಂದು ಕ್ಷಣ ಯೋಚಿಸುವ ಪರಿಸ್ಥಿತಿ ಜನರ ಮನಸ್ಸಲ್ಲಿ ನಿರ್ಮಾಣವಾಗಿದೆ. ಇನ್ನೂ ವದಂತಿ ಬೆನ್ನಲ್ಲೇ ಆಹಾರ ಸುರಕ್ಷತಾ ಇಲಾಖೆ (Health and Food Safety Department) ಅಗತ್ಯ ಕ್ರಮಕ್ಕೆ ಮುಂದಾಗಿದ್ದು, ಬೆಂಗಳೂರಿನ ಮಟನ್ ಅಂಗಡಿಗಳಲ್ಲಿ ಪರಿಶೀಲನೆ ನಡೆಸಲು ತೀರ್ಮಾನಿಸಿದೆ.
ಮಟನ್ ಸ್ವಚ್ಚತೆ ಮತ್ತು ಅಂಗಡಿಗಳಲ್ಲಿಡೋ ಕೋಲ್ಡ್ ಸ್ಟೋರೇಜ್‌ನಲ್ಲಿರೋ ಮಾಂಸ ಎಷ್ಟು ಸೇಫ್? ಎಂಬ ಬಗ್ಗೆ ಪರಿಶೀಲನೆ ಮಾಡಲು ಇಲಾಖೆ ಸಿದ್ಧತೆ ನಡೆಸಿದೆ. ಅದಕ್ಕಾಗಿ ಬೆಂಗಳೂರಿನ ಕೆಲವೆಡೆ ಸ್ಯಾಂಪಲ್‌ಗಳನ್ನು ಸಹ ಸಂಗ್ರಹಿಸಲಾಗಿದೆ. ಇನ್ನೂ ವದಂತಿ ಬೆನ್ನಲ್ಲೇ ಹೋಟೆಲ್ ಮಾಲೀಕರು ಕಳವಳ ವ್ಯಕ್ತಪಡಿಸಿದ್ದು, ತಾವೇ ಖುದ್ದಾಗಿ ಮಾಂಸ ಖರೀದಿಗೆ ಮುಂದಾಗಿದ್ದಾರೆ.
ರಾಜಸ್ಥಾನದ ಜೈಪುರದಿಂದ ಬೆಂಗಳೂರಿಗೆ ಸರಬರಾಜಾಗಿದ್ದ ಮಾಂಸ ನಾಯಿಯದ್ದು ಎಂಬ ಆರೋಪವನ್ನು ಹಿಂದೂ ಪರ ಹೋರಾಟಗಾರ ಪುನೀತ್ ಕೆರೆಹಳ್ಳಿ (Puneeth Kerehalli) ಹಾಗೂ ಆತನ ಸಹಚರರು ಮಾಡಿದ್ದರು. ಇದೇ ವಿಚಾರವಾಗಿ ಮೆಜೆಸ್ಟಿಕ್ ರೈಲ್ವೇ ನಿಲ್ದಾಣದಲ್ಲಿ ಮಾಂಸವಿದ್ದ ಬಾಕ್ಸ್‌ಗಳನ್ನು ತಡೆದು ಪ್ರತಿಭಟಿಸಿದ್ದರು. ಇದಾದ ಬೆನ್ನಲ್ಲೇ ಮಾಂಸದ ಕ್ವಾಲಿಟಿ ಬಗ್ಗೆ ಪ್ರಶ್ನೆ ಎದ್ದಿದೆ. ಈ ಘಟನೆಯಿಂದ ಅಲರ್ಟ್ ಆಗಿರುವ ಆಹಾರ ಮತ್ತು ಸುರಕ್ಷತಾ ಇಲಾಖೆ ಬೆಂಗಳೂರಿನಲ್ಲಿ ಮಟನ್ ಅಂಗಡಿಗಳ ಪರಿಶೀಲನೆಗೆ ಮುಂದಾಗಿದೆ.
ಬೆಂಗಳೂರಿನ ಎಲ್ಲಾ ಪ್ರದೇಶದ ಮಟನ್ ಅಂಗಡಿಗಳು, ದೊಡ್ಡ ಹೋಟೆಲ್ ಮತ್ತು ದೊಡ್ಡ ಮಟನ್ ಶಾಪ್ ಗಳಲ್ಲಿ ಮಾಂಸವನ್ನು ಕೋಲ್ಡ್ ಸ್ಟೋರೇಜ್‌ನಲ್ಲಿ ಶೇಖರಣೆ ಮಾಡ್ತಾರೆ. ಕೋಲ್ಡ್ ಸ್ಟೋರೇಜ್ ಮಾಂಸದ ಕ್ವಾಲಿಟಿ ಚೆಕ್ ಮಾಡಲಿದ್ದಾರೆ. -18 ಡಿಗ್ರಿ ಸೆಲ್ಸಿಯಸ್ ಇದ್ರೆ 8 ರಿಂದ 10 ತಿಂಗಳುಗಳ ಕಾಲ ತಿನ್ನಬಹುದಂತೆ. 4 ಡಿಗ್ರಿ ಸೆಂಟಿಗ್ರೇಡ್‌ನಲ್ಲಿ ಇದ್ರೆ ಮಾಂಸ ಚೆನ್ನಾಗಿರಲಿದೆ. ಹೀಗಾಗಿ ಕೋಲ್ಡ್ ಸ್ಟೋರೇಜ್ ಮಾಡಲಾಗುತ್ತದೆ.
ಇದೀಗ ರಾಜಸ್ಥಾನದಿಂದ ಬಂದಿರುವ ಮಾಂಸ ಯಾವ ಪ್ರಾಣಿಯದ್ದು ಎಂದು ತಿಳಿಯಲು ಹೈದರಾಬಾದ್‌ನ ಎಫ್‌ಎಸ್‌ಎಲ್ ಲ್ಯಾಬ್‌ಗೆ ಕಳುಹಿಸಲಾಗಿದೆ. ಈ ಬಗ್ಗೆ ವರದಿ ಬರಲು 10 ರಿಂದ 14 ದಿನ ಬೇಕಾಗಿದ್ದು, ಈ ಅವಧಿಯಲ್ಲಿ ನಗರದ ಮಾಂಸದಂಗಡಿಗಳ ಪರಿಶೀಲನೆ ನಡೆಯಲಿದೆ.
ಬೆಂಗಳೂರು: ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿಪಡಿಸಿದ ಹಾಗೂ ಶಾಂತಿ ಸುವ್ಯವಸ್ಥೆಗೆ ಭಂಗ ತಂದ ಆರೋಪದ ಮೇಲೆ ಬಂಧನಕ್ಕೊಳಗಾಗಿದ್ದ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿಗೆ (Puneeth Kerehalli) 14 ದಿನ ನ್ಯಾಯಾಂಗ ಬಂಧನಕ್ಕೆ 5ನೇ ಎಸಿಎಂಎಂ ಕೋರ್ಟ್ ಆದೇಶಿಸಿದೆ.
ಶನಿವಾರ ಕಾಟನ್ ಪೇಟೆ ಪೊಲೀಸರ (Cottonpet Police) ವಿಚಾರಣೆ ವೇಳೆ ಹೊಟ್ಟೆ ನೋವಿನಿಂದ ಏಕಾಏಕಿ ಕುಸಿದು ಬಿದ್ದಿದ್ದ ಪುನೀತ್ ಕೆರೆಹಳ್ಳಿಯನ್ನ, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಸಂಜೆ ವೇಳೆ ವಿಕ್ಟೋರಿಯಾ ಆಸ್ಪತ್ರೆಯಿಂದ ಕರೆತಂದಿದ್ದ ಪೊಲೀಸರು ಕೋರಮಂಗಲದ ಜ್ಯೂಡಿಷಿಯಲ್ ಬ್ಲಾಕ್ ನಲ್ಲಿರುವ ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದರು. ಈ ವೇಳೆ 5ನೇ ಎಸಿಎಂಎಂ ಕೋರ್ಟ್ (ACMM Court) ನ್ಯಾಯಾಧೀಶ ಶಿವಕುಮಾರ್ ಅವರು 14 ದಿನ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು. ಸೋಮವಾರ (ಜು.29) ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಪುನೀತ್ ಕೆರೆಹಳ್ಳಿ ಅರೆಸ್ಟ್ ಆಗಿದ್ದೇಕೆ?
ನಾಯಿ ಮಾಂಸದ ಜೊತೆಗೆ ಕುರಿ ಮಾಂಸವನ್ನು ರಾಜಸ್ಥಾನದಿಂದ ಬೆಂಗಳೂರಿಗೆ (Bengaluru) ತಂದು ಮಾರಾಟ ಮಾಡುತ್ತಿದ್ದಾರೆ ಎಂದು ಪುನೀತ್ ಕೆರೆಹಳ್ಳಿ ಹಾಗೂ ಹಿಂದೂ ಪರ ಕಾರ್ಯಕರ್ತರು ಮೆಜೆಸ್ಟಿಕ್ ರೈಲು ನಿಲ್ದಾಣದ ಬಳಿ ಪ್ರತಿಭಟಿಸಿದ್ದರು. ಈ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಳಿಕ ಮಧ್ಯರಾತ್ರಿ 12:00 ಗಂಟೆ ವೇಳೆಗೆ ಅವರನ್ನು ಕಾಟನ್ ಪೇಟೆ ಪೊಲೀಸರು (Cottonpet Police) ಬಂಧಿಸಿದ್ದರು.
ಬಂಧನವಾಗುತ್ತಿದ್ದಂತೆ ಪುನೀತ್ ಕೆರೆಹಳ್ಳಿ ಅಸ್ವಸ್ಥಗೊಂಡಿದ್ದರು. ಇನ್ನೂ ಬೆಳಗಿನ ಜಾವ 4:45ರ ವೇಳೆಗೆ ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿತ್ತು. ವೈದ್ಯರು ಆರೋಗ್ಯ ತಪಾಸಣೆ ವೇಳೆ ಎಲ್ಲಾ ನಾರ್ಮಲ್ ಇರುವುದು ತಿಳಿದುಬಂದಿತ್ತು. ಹಾಗಾಗಿ ಸಂಜೆ ವೇಳೆ ಕರೆದೊಯ್ದು ನ್ಯಾಯಾಧೀಶರ ಎದುರು ಹಾಜರುಪಡಿಸಿದ್ದರು.
ಪುನೀತ್ ಕೆರೆಹಳ್ಳಿ ವಿರುದ್ಧ ಬಿಎನ್‌ಎಸ್‌ನ 132 ಆಕ್ಟ್ (ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿ) 351 (2) ಶಾಂತಿಭಂಗ ಪ್ರಕರಣ ದಾಖಲಿಸಲಾಗಿದೆ.
ಬೆಂಗಳೂರು: ರಾಜಸ್ಥಾನದಿಂದ (Rajasthan) ಬೆಂಗಳೂರಿಗೆ (Bengaluru) ನಾಯಿ ಮಾಂಸ (Dog Meat) ಸಾಗಾಟ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪುನೀತ್ ಕೆರೆಹಳ್ಳಿ (Puneeth Kerehalli) ಮೇಲೆ ಪೊಲೀಸರು ದೌರ್ಜನ್ಯ ನಡೆಸಿದ್ದಾರೆ ಎಂದು ಆರೋಪಿಸಿ ಸಮಸ್ತ ಹಿಂದೂ ಸಂಘಟನೆಗಳ ಒಕ್ಕೂಟದಿಂದ ಶನಿವಾರ ಪೊಲೀಸ್ ಆಯುಕ್ತರಿಗೆ ದೂರು ನೀಡಲಾಯಿತು.
ಹಿಂದೂ ಸಂಘಟನೆಗಳ ಒಕ್ಕೂಟದ (Federation of Hindu Organizations) ಮೋಹನ್ ಗೌಡ ಪೊಲೀಸ್ ಆಯುಕ್ತರಿಗೆ ದೂರು ನೀಡಿದರು. ಶುಕ್ರವಾರ ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ (Mejestic Railway Station) ಟನ್‌ಗಟ್ಟಲೆ ಅಕ್ರಮವಾಗಿ ಮಾಂಸ ಬಂದಿದೆ. ಅವರ ಬಳಿ ಲೈಸೆನ್ಸ್ ಇಲ್ಲ ಎಂದು ಫುಡ್ ಕಮಿಷನರ್ ಹೇಳಿದ್ದಾರೆ. ಇದನ್ನು ಪ್ರಶ್ನೆ ಮಾಡಿದ್ದಕ್ಕೆ ಪುನೀತ್ ಕೆರೆಹಳ್ಳಿ ಮೇಲೆ 3 ಎಫ್‌ಐಆರ್ ದಾಖಲು ಮಾಡಿದ್ದಾರೆ. ಸಾಮಾಜಿಕ ಕರ್ತವ್ಯ ಮೆರೆದವರ ಮೇಲೆ ದೂರು ದಾಖಲಾಗಿದೆ. ಹಿಂದೂಗಳ ವಾಕ್ ಸ್ವಾತಂತ್ರ್ಯವನ್ನು ಸರ್ಕಾರ ಹರಣ ಮಾಡುತ್ತಿದೆ. ದೂರುದಾರರಿಂದ ರಕ್ಷಣೆ ಇಲ್ಲದಂತಾಗಿದೆ. ಈ ಕುರಿತು ಸೂಕ್ತ ತನಿಖೆ ಮಾಡಬೇಕು ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಇದನ್ನೂ ಓದಿ: ಕಮರಿಗೆ ಉರುಳಿದ ಕಾರು – ಐವರು ಮಕ್ಕಳು ಸೇರಿ ಒಂದೇ ಕುಟುಂಬದ 8 ಮಂದಿ ದುರ್ಮರಣ!
ಪ್ರಕರಣ ಏನು?
ರಾಜಸ್ಥಾನದಿಂದ ಬೆಂಗಳೂರಿಗೆ ಮೇಕೆ, ಕುರಿ ಮಾಂಸದ ಹೆಸರಿನಲ್ಲಿ ಅಕ್ರಮವಾಗಿ ನಾಯಿ ಮಾಂಸ ತರಲಾಗುತ್ತಿದೆ ಎಂಬ ಆರೋಪ ಕೇಳಿಬಂದಿತ್ತು. ಈ ಹಿನ್ನೆಲೆ ಶುಕ್ರವಾರ ರೈಲಿನಲ್ಲಿ ಬಂದ 90 ಬಾಕ್ಸ್ ಮಾಂಸವನ್ನು ತಡೆಯಲಾಗಿತ್ತು. ಇದರ ಉಸ್ತುವಾರಿ ಪುನೀತ್ ಕೆರೆಹಳ್ಳಿ ವಹಿಸಿಕೊಂಡಿದ್ದರು. ಬಳಿಕ ಪುನೀತ್ ಕೆರೆಹಳ್ಳಿ ಹಾಗೂ ಮುಸ್ಲಿಂ ಮುಖಂಡ ಅಬ್ದುಲ್ ರಜಾಕ್ ನಡುವೆ ವಾಗ್ವಾದ ಕೂಡ ನಡೆದಿತ್ತು. ಸರ್ಕಾರಿ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಿನ್ನೆಲೆ ಪುನೀತ್ ಕೆರೆಹಳ್ಳಿ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಶನಿವಾರ ಪೊಲೀಸರ ವಶದಲ್ಲಿದ್ದ ಪುನೀತ್ ತೀವ್ರ ಅಸ್ವಸ್ಥಗೊಂಡು ವಿಕ್ಟೋರಿಯ ಆಸ್ಪತ್ರೆಗೆ ದಾಖಲಾಗಿದ್ದಾರೆ. ಪುನೀತ್ ಕೆರೆಹಳ್ಳಿ ವಿರುದ್ಧ ಬಿಎನ್‌ಎಸ್‌ನ 132 ಆಕ್ಟ್ (ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿ) 351 (2) ಶಾಂತಿಭಂಗ ಪ್ರಕರಣ ದಾಖಲಿಸಲಾಗಿದೆ. ಇದನ್ನೂ ಓದಿ: ನಾಯಿ ಸ್ವಲ್ಪ ಟಚ್ ಆದ್ರೂ ಮಸೀದಿಯೊಳಕ್ಕೆ ಹೋಗಲ್ಲ, ಅಂತಹದ್ದರಲ್ಲಿ ಮಾಂಸ ತರೋಕಾಗುತ್ತಾ? – ಅಬ್ದುಲ್ ರಜಾಕ್
ಬೆಂಗಳೂರು: ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿಪಡಿಸಿದ ಹಾಗೂ ಶಾಂತಿ ಸುವ್ಯವಸ್ಥೆಗೆ ಭಂಗ ತಂದ ಆರೋಪದ ಮೇಲೆ ಬಂಧನಕ್ಕೊಳಗಾದ ಹಿಂದೂ ಕಾರ್ಯಕರ್ತ ಪುನೀತ್ ಕೆರೆಹಳ್ಳಿ (Puneeth Kerehalli) ಪೊಲೀಸರ ವಿಚಾರಣೆ ವೇಳೆ ಹೊಟ್ಟೆ ನೋವಿನಿಂದ ಏಕಾಏಕಿ ಕುಸಿದು ಬಿದ್ದಿದ್ದಾರೆ. ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.
ನಾಯಿ ಮಾಂಸದ ಜೊತೆಗೆ ಕುರಿ ಮಾಂಸವನ್ನು ರಾಜಸ್ಥಾನದಿಂದ ಬೆಂಗಳೂರಿಗೆ (Bengaluru) ತಂದು ಮಾರಾಟ ಮಾಡುತ್ತಿದ್ದಾರೆ ಎಂದು ಪುನೀತ್ ಕೆರೆಹಳ್ಳಿ ಹಾಗೂ ಹಿಂದೂ ಪರ ಕಾರ್ಯಕರ್ತರು ಮೆಜೆಸ್ಟಿಕ್ ರೈಲು ನಿಲ್ದಾಣದ ಬಳಿ ಪ್ರತಿಭಟಿಸಿದ್ದರು. ಈ ವೇಳೆ ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಆರೋಪದ ಅಡಿಯಲ್ಲಿ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಬಳಿಕ ಮಧ್ಯರಾತ್ರಿ 12:00 ಗಂಟೆ ವೇಳೆಗೆ ಅವರನ್ನು ಕಾಟನ್ ಪೇಟೆ ಪೊಲೀಸರು (Cottonpet Police) ಬಂಧಿಸಿದ್ದರು.
ಬಂಧನವಾಗುತ್ತಿದ್ದAತೆ ಪುನೀತ್ ಕೆರೆಹಳ್ಳಿ ಅಸ್ವಸ್ಥಗೊಂಡಿದ್ದರು. ಇನ್ನೂ ಬೆಳಗಿನ ಜಾವ 4:45ರ ವೇಳೆಗೆ ತೀವ್ರವಾಗಿ ಅಸ್ವಸ್ಥಗೊಂಡ ಅವರನ್ನು ಆಸ್ಪತ್ರೆಗೆ ಕೆಸಿ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗೆ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.
ವೈದ್ಯರು ಆರೋಗ್ಯ ತಪಾಸಣೆ ವೇಳೆ ಎಲ್ಲಾ ನಾರ್ಮಲ್ ಇರುವುದು ತಿಳಿದುಬಂದಿದೆ. ಅದರೆ ಇನ್ನೂ ಅವರು ಅಸ್ವಸ್ಥ ಸ್ಥಿತಿಯಲ್ಲಿದ್ದಾರೆ. ಊಟ ಮಾಡದ ಕಾರಣ ಅಸ್ವಸ್ಥರಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಯ ವೈದ್ಯರು ಚಿಕಿತ್ಸೆ ಮುಂದುವರಿಸಿದ್ದಾರೆ.
ಬೆಂಗಳೂರಿನ ಐಶಾರಾಮಿ ಹಾಗೂ ಸಾಮಾನ್ಯ ಹೋಟೆಲ್‌ಗಳಿಗೆ ರಾಜಸ್ಥಾನದಿಂದ ಬರುತ್ತಿದ್ದ ಮಾಂಸ ಸರಬರಾಜಾಗುತ್ತಿತ್ತು. ಪ್ರಕರಣ ಸಂಬಂಧ ಮಾಂಸ ಸರಬರಾಜು ಮಾಡುತ್ತಿದ್ದ ಅಬ್ದುಲ್ ರಜಾಕ್ ಎಂಬವರನ್ನು ಇಂದು (ಶನಿವಾರ) ವಿಚಾರಣೆ ಮಾಡುವ ಸಾಧ್ಯತೆ ಇದೆ.
ಪುನೀತ್ ಕೆರೆಹಳ್ಳಿ ವಿರುದ್ಧ ಬಿಎನ್‌ಎಸ್‌ನ 132 ಆಕ್ಟ್ (ಸರ್ಕಾರಿ ನೌಕರರ ಕೆಲಸಕ್ಕೆ ಅಡ್ಡಿ) 351 (2) ಶಾಂತಿಭಂಗ ಪ್ರಕರಣ ದಾಖಲಿಸಲಾಗಿದೆ.
– ಟೆಸ್ಟಿಂಗ್‌ಗೆ ಹೈದರಾಬಾದ್ ಪ್ರಯೋಗಾಲಯಕ್ಕೆ ಮಾಂಸ ಮಾದರಿ ರವಾನೆ
– ಯಾವ ಪ್ರಾಣಿಯ ಮಾಂಸ ಅಂತ ಪತ್ತೆ ಹಚ್ಚುವುದು ಹೇಗೆ?
ಬೆಂಗಳೂರು: ನಗರದಲ್ಲಿ ನಾಯಿ ಮಾಂಸ (Dog Meat) ದಂಧೆ ಆರೋಪ ಕೇಳಿ ಬಂದಿದೆ. ರಾಜಸ್ಥಾನದಿಂದ ಬೆಂಗಳೂರು ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ ಬಂದ 90 ಬಾಕ್ಸ್‌ಗಳಲ್ಲಿ ನಾಯಿ ಮಾಂಸ ಸಾಗಾಟ ಮಾಡಲಾಗ್ತಿದೆ ಎಂಬ ಆರೋಪ ಕೇಳಿಬಂದಿದೆ. ವಿಷಯ ತಿಳಿದಕೂಡಲೇ ಪೊಲೀಸರು ಹಾಗೂ ಆಹಾರ ಸುರಕ್ಷತೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದ್ದಾರೆ. ಬಾಕ್ಸ್‌ನಲ್ಲಿ ತರಿಸಲಾಗಿದ್ದ ಮಾಂಸವನ್ನ ಜಪ್ತಿ ಮಾಡಿದ್ದು, ಅಂಗಾಂಗ ಮಾದರಿಗಳನ್ನ ಹೈದರಾಬಾದ್ ಪ್ರಯೋಗಾಲಯಕ್ಕೆ ರವಾನೆ ಮಾಡಿದ್ದಾರೆ.
ಆಹಾರ ಸುರಕ್ಷತೆ ಅಧಿಕಾರಿಗಳು ಹೇಳಿದ್ದೇನು?
ಆಹಾರ ಸುರಕ್ಷತೆ ಅಧಿಕಾರಿ ಸುಬ್ರಮಣ್ಯ ಮಾತನಾಡಿ, ನಾವು ಒಟ್ಟು ನಾಲ್ಕು ಬಾಕ್ಸ್ ಗಳಿಂದ ಸ್ಯಾಂಪಲ್ ಕಲೆಕ್ಟ್ ಮಾಡಿದ್ದೇವೆ. ವಿವಿಧ ಭಾಗಗಳಿಂದ ಮಾಂಸವನ್ನು ಸ್ಯಾಂಪಲ್ ಆಗಿ ಪಡೆದಿದ್ದೇವೆ. ಇದನ್ನು ವಿಸಿಕ್ಸ್ ಎನ್ನುವ ಲ್ಯಾಬ್‌ಗೆ ರವಾನಿಸಿ ಪರೀಕ್ಷಿಸಲಾಗುತ್ತೆ. ಇದರ ವರದಿ ಬರೋದಕ್ಕೆ 14 ದಿನಗಳ ಕಾಲಾವಕಾಶ ಬೇಕು. ಮೇಲ್ನೋಟಕ್ಕೆ ನೋಡಿ ಇದು ಯಾವ ಮಾಂಸ ಎಂದು ಹೇಳಲಾಗುವುದಿಲ್ಲ. ಈ ಮಾಂಸದ ಗುಣಮಟ್ಟ ಹಾಗೂ ಯಾವುದರ ಮಾಂಸ ಎಂಬ ದೃಢೀಕರಣ ಟೆಸ್ಟಿಂಗ್ ನಲ್ಲಿ ಗೊತ್ತಾಗುತ್ತೆ. ಒಂದು ವೇಳೆ ಇದು ದೂರುದಾರರ ದೂರಿನಂತೆ ನಾಯಿ ಮಾಂಸ ಆಗಿದ್ದರೇ ಮಾಲೀಕನ ಮೇಲೆ ಕ್ರಮ ಕೈಗೊಳ್ಳಲಾಗುತ್ತದೆ. ಕುರಿ ಮಾಂಸವೇ ಆಗಿದ್ದರೆ ದೂರುದಾರನ ಮೇಲೆ ಕ್ರಮ ತೆಗೆದುಕೊಳ್ಳಲು ಕಾನೂನಿನಲ್ಲಿ ಅವಕಾಶ ಇದೆ ಎಂದು ಹೇಳಿದ್ದಾರೆ.
ಬಳಿಕ ʻಪಬ್ಲಿಕ್ ಟಿವಿʼ ಜೊತೆಗೆ ಮಾತನಾಡಿದ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ಆಯುಕ್ತರು, ಸದ್ಯಕ್ಕೆ ಬೆಂಗಳೂರಿನಲ್ಲಿ ಮಾಂಸ ಯಾವ ಪ್ರಾಣಿದು ಅಂತ ಪತ್ತೆ ಮಾಡೋಕೆ ಲ್ಯಾಬ್ ಇಲ್ಲ. ಆದಕಾರಣ ಕುರಿ ಮಾಂಸನಾ, ಬೇರೆ ಮಾಂಸನಾ? ಪತ್ತೆ ಮಾಡಲು ಹೈದರಾಬಾದ್‌ಗೆ ಮಾಂಸದ ಮಾದರಿ ಸಂಗ್ರಹವನ್ನ ರವಾನೆ ಮಾಡಲಾಗುತ್ತದೆ. ಕನಿಷ್ಠ 8 ರಿಂದ 10 ದಿನದ ಬಳಿಕ ಮಾಂಸ. ಯಾವ ಪ್ರಾಣಿಯದ್ದು ಅಂತ ಗೊತ್ತಾಗಲಿದೆ ಎಂದು ತಿಳಿಸಿದ್ದಾರೆ.
ಯಾವ ಪ್ರಾಣಿಯದ್ದು ಮಾಂಸ ಅಂತ ಹೇಗೆ ಗೊತ್ತಾಗಲಿದೆ?
* ಮಾಂಸದ ಪೀಸ್‌ಗಳಿಗೆ ಕೆಮಿಕಲ್ ಹಾಕಿದಾಗ ಕಲರ್ ಬರುತ್ತದೆ.
* ಕುರಿ ಮಾಂಸ, ಮೇಕೆ ಮಾಂಸ ಮತ್ತು ನಾಯಿ ಮಾಂಸ ಆದರೆ ಬೇರೆ ಬೇರೆ ಕಲರ್ ಬರಲಿದೆ.
* ಕಲರ್ ಮುಖಾಂತರ ಯಾವ ಪ್ರಾಣಿಯ ಮಾಂಸ ಅಂತ ತಜ್ಞರು ಪತ್ತೆಮಾಡುತ್ತಾರೆ ಎಂದು ಆಯುಕ್ತರು ಮಾಹಿತಿ ನೀಡಿದ್ದಾರೆ.
ನಾಯಿ ಮಾಂಸ ಸಾಗಾಟ ಮಾಡಲಾಗ್ತಿದೆ ಅಂತ ಹಿಂದೂ ಸಂಘಟನೆ ಕಾರ್ಯಕರ್ತ ಪುನೀತ್ ಕೆರೆಹಳ್ಳಿ ತಂಡ ಆರೋಪಿದ್ದರು. ಶುಕ್ರವಾರ ರಾತ್ರಿ ರೈಲ್ವೆ ನಿಲ್ದಾಣದ ಬಳಿ ಜಮಾಯಿಸಿ ಭಾರೀ ಹೈಡ್ರಾಮ ಸೃಷ್ಟಿಸಿದ್ದರು. ಹಿಂದೂ ಸಂಘಟನೆ ಕಾರ್ಯಕರ್ತರು ಮುಸ್ಲಿಂ ಮುಖಂಡರೊಂದಿಗೆ ಮಾತಿನ ಚಕಮಕಿ ನಡೆಸಿದ್ದರು. ಆಹಾರ ಸುರಕ್ಷತಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ ಬಳಿಕ ಪೊಲೀಸರು ಪುನೀತ್‌ರ ಕೆರೆಹಳ್ಳಿಯನ್ನ ವಶಕ್ಕೆ ಪಡೆದರು.