Tag: Puneeth Rajkumar Photo

  • ಅಪ್ಪುಗೆ ಅವಮಾನ ಮಾಡೋ ಉದ್ದೇಶ ಯಾವ ಕನ್ನಡಿಗರಿಗೂ ಇರಲ್ಲ: ರಚಿತಾ ರಾಮ್

    ಅಪ್ಪುಗೆ ಅವಮಾನ ಮಾಡೋ ಉದ್ದೇಶ ಯಾವ ಕನ್ನಡಿಗರಿಗೂ ಇರಲ್ಲ: ರಚಿತಾ ರಾಮ್

    ಬೆಂಗಳೂರು: ಅಪ್ಪು ಅವರಿಗೆ ಅವಮಾನ ಮಾಡುವ ಉದ್ದೇಶ ಮತ್ತು ಆಲೋಚನೆ ಯಾವ ಕನ್ನಡಿಗರಿಗೂ ಇರುವುದಿಲ್ಲ ಎಂದು ಸ್ಯಾಂಡಲ್‍ವುಡ್ ನಟಿ ರಚಿತಾ ರಾಮ್ ತಿಳಿದ್ದಾರೆ.

    ಏಕ್ ಲವ್ ಯಾ ಸಿನಿಮಾ ತಂಡ ಸಾಂಗ್ ರಿಲೀಸ್ ಕಾರ್ಯಕ್ರಮವನ್ನು ಆಯೋಜಿಸಿತ್ತು, ಈ ವೇಳೆ ನಟ ಪವರ್ ಪುನೀತ್ ರಾಜ್‍ಕುಮಾರ್ ಫೋಟೋ ಮುಂದೆ ಏಕ್ ಲವ್ ಯಾ ಸಿನಿಮಾ ತಂಡ ಶಾಂಪೇನ್ ಚಿಮ್ಮಿಸಿತ್ತು. ಹೀಗಾಗಿ ಇದೇನು ಶ್ರದ್ಧಾಂಜಲಿ ಕಾರ್ಯಕ್ರಮವೋ ಅಥವಾ ಸಂಭ್ರಮಾಚರಣೆಯ ಕಾರ್ಯಕ್ರಮವೋ ಎಂದು ಅಪ್ಪು ಅಭಿಮಾನಿಗಳು ರೊಚ್ಚಿಗೆದ್ದಿದ್ದಾರೆ.

    ಸದ್ಯ ಈ ನಟಿ ರಚಿತಾ ರಾಮ್ ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಫೋಸ್ಟ್‌ವೊಂದನ್ನು ಶೇರ್ ಮಾಡಿಕೊಳ್ಳುವ ಮೂಲಕ ಅಪ್ಪು ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿದ್ದಾರೆ. ‘ನಿನ್ನೆಯ ಏಕ್ ಲವ್ ಯಾ ಸಿನಿಮಾದ ಸಾಂಗ್ ಲಾಂಚ್ ಕಾರ್ಯಕ್ರಮದಲ್ಲಿ ಅಪ್ಪು ಭಾವಚಿತ್ರದ ಎದುರು ಶಾಂಪೇನ್ ಬಾಟಲ್ ಓಪನ್ ಮಾಡಿ ಹಾಡನ್ನು ಬಿಡುಗಡೆಗೊಳಿಸಿರುವ ಬಗ್ಗೆ ನಿಮ್ಮೆಲ್ಲರಿಗೆ ಅಸಮಾಧಾನವಾಗಿದೆ. ಆ ಬಗ್ಗೆ ದಯವಿಟ್ಟು ಕ್ಷಮೆ ಇರಲಿ ನಾನೂ ಕೂಡ ಚಿತ್ರದ ಭಾಗವಾಗಿರುವುದರಿಂದ, ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರಿಂದ ಕ್ಷಮೆ ಕೇಳುತ್ತೇನೆ. ಇದನ್ನೂ ಓದಿ:  ಅಪ್ಪುಗೆ ಅವಮಾನ ಮಾಡಲು ಯಾರಿಂದಲೂ ಸಾಧ್ಯವಿಲ್ಲ, ಮಾಡುವುದೂ ಇಲ್ಲ: ರಕ್ಷಿತಾ

    ಅಪ್ಪು ಅವರಿಗೆ ಅವಮಾನ ಮಾಡುವ ಉದ್ದೇಶ, ಆಲೋಚನೆ ಯಾವ ಕನ್ನಡಿಗರಿಗೂ ಇರುವುದಿಲ್ಲ. ಅದಾಗಿಯೂ ಉದ್ದೇಶಪೂರ್ವಕವಲ್ಲದ ತಪ್ಪನ್ನು ಅಭಿಮಾನಿಗಳು ಮನ್ನಿಸುತ್ತಾರೆಂದು ನಂಬಿದ್ದೇನೆ’ ಎಂದು ಕೇಳಿಕೊಂಡಿದ್ದಾರೆ. ಆದರೂ ಸಮಾಧಾನಗೊಳ್ಳದ ಅಪ್ಪು ಅಭಿಮಾನಿಗಳು ರಚಿತಾ ರಾಮ್ ಅವರಿಗೆ ಸಖತ್ ಆಗಿ ಕ್ಲಾಸ್ ತೆಗೆದುಕೊಂಡಿದ್ದಾರೆ. ಇದನ್ನೂ ಓದಿ:  ಅಪ್ಪುಗೆ ಅವಮಾನ ಮಾಡುವ ಉದ್ದೇಶ ಇರಲಿಲ್ಲ: ಪ್ರೇಮ್ ಕ್ಷಮೆ

     

    View this post on Instagram

     

    A post shared by Rachita Ram (@rachita_instaofficial)

    ಶುಕ್ರವಾರ ಏಕ್ ಲವ್ ಯಾ ಸಿನಿಮಾ ತಂಡ ಸಾಂಗ್ ರಿಲೀಸ್ ಕಾರ್ಯಕ್ರಮವನ್ನು ಏರ್ಪಡಿಸಿತ್ತು. ಈ ವೇಳೆ ಅಪ್ಪುಗೆ ಶ್ರದ್ಧಾಂಜಲಿ ಅರ್ಪಿಸಲಾಯಿತು. ಆದರೆ ಶ್ರದ್ಧಾಂಜಲಿ ವೇಳೆ ಅಪ್ಪು ಫೋಟೋ ಮುಂದೆ ನಟಿ ರಕ್ಷಿತಾ ಪ್ರೇಮ್ ಶಾಂಪೇನ್ ಚಿಮ್ಮಿಸಿದ್ದರು. ಈ ವೇಳೆ ಅಪ್ಪು ಅವರ ಫೋಟೋ ಎಲ್‍ಇಡಿ ಮೇಲೆ ಬಂದಿದೆ. ಈ ಸುದ್ದಿ ಪಬ್ಲಿಕ್ ಟಿವಿಯಲ್ಲಿ ಪ್ರಸಾರ ಆಗಿತ್ತು. ಇದನ್ನು ಗಮನಿಸಿದ ಸಾರಾ ಗೋವಿಂದ್ ಅವರು, ಅಪ್ಪು ಅಗಲಿಕೆ ನೋವಿನಿಂದ ಹೊರಬಂದಿಲ್ಲ. ಆದರೆ ಇಲ್ಲಿ ಅಪ್ಪು ಅವರಿಗೆ ಅವಮಾನ ಮಾಡಿದಂತಾಗಿದೆ. ಹೀಗಾಗಿ ಚಿತ್ರತಂಡ ಕೂಡಲೇ ಕ್ಷಮೆ ಕೇಳಬೇಕು ಎಂದು ಸೂಚನೆ ನೀಡಿದ್ದರು. ಅಂತೆಯೇ ಇದೀಗ ಪ್ರೇಮ್ ಹಾಗೂ ಅಕುಲ್ ಬಾಲಾಜಿ, ನಟಿ ರಕ್ಷಿತಾ ಪ್ರೇಮ್ ಸೇರಿದಂತೆ ಇಡೀ ಚಿತ್ರತಂಡ ಕ್ಷಮೆ ಕೇಳಿದೆ.

  • ಅಪ್ಪು ಜೊತೆಗಿನ ಸಿಹಿ ನೆನಪುಗಳನ್ನು ಮೆಲುಕು ಹಾಕುತ್ತಿರುವ ಶಿವಣ್ಣ, ರಾಘಣ್ಣ

    ಅಪ್ಪು ಜೊತೆಗಿನ ಸಿಹಿ ನೆನಪುಗಳನ್ನು ಮೆಲುಕು ಹಾಕುತ್ತಿರುವ ಶಿವಣ್ಣ, ರಾಘಣ್ಣ

    ಬೆಂಗಳೂರು: ಪುನೀತ್ ರಾಜ್‍ಕುಮಾರ್ ಜೊತೆಗೆ ಕಳೆದ ಸಿಹಿ ನೆನಪುಗಳನ್ನು ನಟ ಶಿವರಾಜ್ ಕುಮಾರ್ ಹಾಗೂ ರಾಘವೇಂದ್ರ ರಾಜ್‍ಕುಮಾರ್ ಸೋಶಿಯಲ್ ಮೀಡಿಯಾದಲ್ಲಿ ಫೋಟೋಗಳನ್ನು ಶೇರ್ ಮಾಡಿಕೊಳ್ಳುವ ಮೂಲಕ ಮೆಲುಕು ಹಾಕುತ್ತಿದ್ದಾರೆ.

    ಪುನೀತ್ ಅಗಲಿ ಇಂದಿಗೆ 9ನೇ ದಿನ ಕಳೆದಿದೆ. ಪುನೀತ್ ಅಗಲಿಕೆಯ ಅಘಾತದಿಂದ ಕರುನಾಡಿನ ಜನತೆ ಹೊರ ಬಂದಿಲ್ಲ. ಅಪ್ಪು ನೆನೆದು ಅಭಿಮಾನಿಗಳು ಶೋಕ ಸಾಗರದಲ್ಲಿ ಮುಳುಗಿದ್ದಾರೆ. ಈ ಮಧ್ಯೆ ತಮ್ಮನನ್ನು ಕಳೆದುಕೊಂಡು ಸಹೋದರ ಶಿವರಾಜ್ ಕುಮಾರ್ ಹಾಗೂ ರಾಘವೇಂದ್ರ ರಾಜ್‍ಕುಮಾರ್ ಕೂಡ ದುಃಖದಲ್ಲಿದ್ದಾರೆ. ಪ್ರತಿ ದಿನ ತಮ್ಮನೊಂದಿಗಿನ ಕಳೆದ ಹಳೆಯ ಸಿಹಿ ನೆನಪುಗಳನ್ನು ತಮ್ಮ ಇನ್‍ಸ್ಟಾಗ್ರಾಮ್‍ನಲ್ಲಿ ಫೋಟೋ ಹಂಚಿಕೊಳ್ಳುವ ಮೂಲಕ ಮೆಲುಕು ಹಾಕುತ್ತಿದ್ದಾರೆ. ಇದನ್ನೂ ಓದಿ: ಅಪ್ಪುಗೆ ಇಸಿಜಿ ಟೆಸ್ಟ್‌ನಲ್ಲಿ ಹಾರ್ಟ್ ಅಟ್ಯಾಕ್ ಸುಳಿವು: ಡಾ. ರಮಣ ರಾವ್

    ರಾಘವೇಂದ್ರ ರಾಜ್ ಕುಮಾರ್ ಅವರು, ಅಪ್ಪು ಅಪ್ಪ ಅಮ್ಮನ ಬಳಿ ಕೈ ತುತ್ತು ತಿನ್ನುತ್ತಿರುವ, ಚಿಕ್ಕವರಿದ್ದಾಗ ತಮ್ಮನನ್ನು ಮಡಿಲ ಮೇಲೆ ಕೂರಿಸಿಕೊಂಡು ಕ್ಲಿಕ್ಕಿಸಿಕೊಂಡಿರುವ ಫೋಟೋ, ಫ್ಯಾಮಿಲಿ ಫೋಟೋ, ಅಪ್ಪು ಜೊತೆಗೆ ಕ್ಲಿಕ್ಕಿಸಿಕೊಂಡಿರುವ ಕೊನೆಯ ಫೋಟೋ, ಅಪ್ಪು ಬರ್ತ್‍ಡೇ ವೀಡಿಯೋ, ಡಾ. ರಾಜ್‍ಕುಮಾರ್ ಜೊತೆಗಿರುವ ಬ್ಲ್ಯಾಕ್ ಆ್ಯಂಡ್ ವೈಟ್ ಫೋಟೋಗಳನ್ನು ಹಂಚಿಕೊಂಡಿದ್ದಾರೆ. ಇದೇ ರೀತಿ ಶಿವಣ್ಣ ಫ್ಯಾನ್ಸ್ ಪೇಜ್‍ನಲ್ಲಿ ಪುನೀತ್ ಜೊತೆ ಶಿವಣ್ಣ ಇರುವ ಹಲವಾರು ಫೋಟೋಗಳು ಪ್ರತಿ ನಿತ್ಯ ಶೇರ್ ಮಾಡಲಾಗುತ್ತಿದೆ. ಇದನ್ನೂ ಓದಿ: ನಟ ದಿ. ಪುನೀತ್ ಮನೆಗೆ ಭೇಟಿ ನೀಡಿ ಸಿಎಂ ಸಾಂತ್ವನ

    ಒಟ್ಟಾರೆ ಪುನೀತ್ ರಾಜ್ ಕುಮಾರ್ ಅವರು ದೈಹಿಕವಾಗಿ ಎಲ್ಲರೊಂದಿಗೆ ಇಲ್ಲದಿದ್ದರೂ ಅವರ ಮಾತು, ನಡತೆ, ನಟನೆ, ಡ್ಯಾನ್ಸ್, ನಗು ಎಲ್ಲವು ಎಂದಿಗೂ ಎಲ್ಲರ ಮನಸ್ಸಿನಲ್ಲಿ ಶಾಶ್ವತವಾಗಿ ಉಳಿದಿದೆ.