Tag: punjab election

  • ಕಾಂಗ್ರೆಸ್‌ ಸೇರಲು ಪ್ರಶಾಂತ್‌ ಕಿಶೋರ್‌ ನನ್ನ 70 ಬಾರಿ ಭೇಟಿಯಾಗಿದ್ದಾರೆ: ನವಜೋತ್‌ ಸಿಧು

    ಕಾಂಗ್ರೆಸ್‌ ಸೇರಲು ಪ್ರಶಾಂತ್‌ ಕಿಶೋರ್‌ ನನ್ನ 70 ಬಾರಿ ಭೇಟಿಯಾಗಿದ್ದಾರೆ: ನವಜೋತ್‌ ಸಿಧು

    ಚಂಡೀಗಢ: ಚುನಾವಣಾ ತಂತ್ರಗಾರ ಪ್ರಶಾಂತ್‌ ಕಿಶೋರ್‌ ಅವರು ನನ್ನನ್ನು ಸುಮಾರು 70 ಬಾರಿ ಭೇಟಿಯಾಗಿದ್ದು, ಕಾಂಗ್ರೆಸ್‌ ಸೇರುವುದಾಗಿ ತಿಳಿಸಿದ್ದಾರೆ ಎಂದು ಪಂಜಾಬ್‌ ಕಾಂಗ್ರೆಸ್‌ ಅಧ್ಯಕ್ಷ ನವಜೋತ್‌ ಸಿಂಗ್‌ ಸಿಧು ತಿಳಿಸಿದ್ದಾರೆ.

    ಕಿಶೋರ್‌ ಅವರು ಪಕ್ಷದ ಭವಿಷ್ಯದ ಬಗ್ಗೆ ಭಯಭೀತರಾಗಿದ್ದರು. ಅವರ ಸೇರ್ಪಡೆಯಿಂದ ಪಕ್ಷಕ್ಕೆ ಮತಗಳಿಕೆಗೆ ಸಹಾಯವಾಗಲಿದೆ ಎಂದು ಸಿಧು ಹೇಳಿದ್ದಾರೆ. ಇದನ್ನೂ ಓದಿ: ಬಿಜೆಪಿ ಭರವಸೆಗಳಿಗೆ ಮರುಳಾಗಬೇಡಿ, ಸಮಾಜವಾದಿ ಪಕ್ಷ ಗೆಲ್ಲಿಸಿ: ಮಮತಾ ಬ್ಯಾನರ್ಜಿ

    ಪ್ರಶಾಂತ್‌ ಕಿಶೋರ್‌ ಅವರು ಕಳೆದ ವರ್ಷ ಪಂಜಾಬ್‌ ಸಿಎಂ ಆಗಿದ್ದ ಅಮರೀಂದರ್‌ ಸಿಂಗ್‌ ಅವರ ಸಲಹೆಗಾರ ಹುದ್ದೆಯನ್ನು ತ್ಯಜಿಸಿದ್ದರು. ಅದಾದ ಬಳಿಕ ಅಮರೀಂದರ್‌ ಸಿಂಗ್‌ ಮತ್ತು ನವಜೋತ್‌ ಸಿಂಗ್‌ ಸಿಧು ಅವರ ನಡುವೆ ಕಾಂಗ್ರೆಸ್‌ನಲ್ಲಿ ಮನಸ್ತಾಪ ಉಂಟಾಯಿತು. ಕಾಂಗ್ರೆಸ್‌ ಒಳಜಗಳದಿಂದಾಗಿ ಅಮರೀಂದರ್‌ ಸಿಂಗ್‌ ಮುಖ್ಯಮಂತ್ರಿ ಸ್ಥಾನವನ್ನು ತೊರೆಯಬೇಕಾಯಿತು.

    ಪಂಜಾಬ್‌ ವಿಧಾನಸಭಾ ಚುನಾವಣೆ ಸಮೀಪಿಸಿರುವ ಹೊತ್ತಿನಲ್ಲಿ ಪ್ರಶಾಂತ್‌ ಕಿಶೋರ್‌, ಕಾಂಗ್ರೆಸ್‌ ಸೇರಲಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದ್ದವು. ಈ ನಡುವೆಯೇ ಕಿಶೋರ್‌ ಕಾಂಗ್ರೆಸ್‌ ಸೇರಲಿಚ್ಛಿಸಿದ್ದಾರೆ ಎಂದು ಸಿಧು ಅವರು ಹೇಳಿಕೆ ನೀಡಿದ್ದಾರೆ. ಇದನ್ನೂ ಓದಿ: ರಾಜವಂಶದ ಆಚೆಗೆ ಕಾಂಗ್ರೆಸ್ ಯೋಚಿಸಲು ಸಾಧ್ಯವಿಲ್ಲ: ಮೋದಿ ವಾಗ್ದಾಳಿ

  • ದೆಹಲಿ ನಾಯಕರು ಪಂಜಾಬ್ ಲೂಟಿ ಮಾಡಲು ಬಂದಿದ್ದಾರೆ: ಚರಂಜಿತ್ ಚನ್ನಿ

    ದೆಹಲಿ ನಾಯಕರು ಪಂಜಾಬ್ ಲೂಟಿ ಮಾಡಲು ಬಂದಿದ್ದಾರೆ: ಚರಂಜಿತ್ ಚನ್ನಿ

    ಚಂಡೀಗಢ: ದೆಹಲಿ ನಾಯಕರು ಪಂಜಾಬ್‍ನ್ನು ಲೂಟಿ ಮಾಡಲು ಬಂದಿದ್ದಾರೆ ಎಂದು ಎಎಪಿ ವಿರುದ್ಧ ಪಂಜಾಬ್ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ ವಾಗ್ದಾಳಿ ನಡೆಸಿದರು.

    ವರ್ಚುವಲ್ ರ‍್ಯಾಲಿಯಲ್ಲಿ ಮಾತನಾಡಿದ ಅವರು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪಂಜಾಬ್‍ಗೆ ಭೇಟಿ ನೀಡಿದಾಗಲೆಲ್ಲಾ ದುಬಾರಿ ಹೋಟೆಲ್‍ಗಳಲ್ಲಿ ತಂಗಿರುತ್ತಾರೆ. ಅವರು ತಮ್ಮನ್ನು ತಾವು ಸಾಮಾನ್ಯ ವ್ಯಕ್ತಿಗಳೆಂದು ಹೇಗೆ ಕರೆದುಕೊಳ್ಳುತ್ತಾರೆ ಎಂದು ಟೀಕಿಸಿದರು.

    ಇತರ ಪಕ್ಷಗಳಿಂದ ಟಿಕೆಟ್ ನಿರಾಕರಿಸಿದ ಕನಿಷ್ಠ 40 ಜನರಿಗೆ ಎಎಪಿ ಟಿಕೆಟ್ ನೀಡಿದೆ. ಅಂಥವರು ಇಲ್ಲಿ ಯಾವ ರೀತಿಯ ಬದಲಾವಣೆಯನ್ನು ತರಲು ಬಯಸುತ್ತಾರೆ ಎಂದು ಪ್ರಶ್ನಿಸಿ, ಅವರು ಪಂಜಾಬ್ ಅನ್ನು ಲೂಟಿ ಮಾಡಲು ಇಲ್ಲಿಗೆ ಬಂದಿದ್ದಾರೆ ಎಂದು ಆರೋಪಿಸಿದರು. ಇದನ್ನೂ ಓದಿ: ಮರಕ್ಕೆ ಕಾರು ಡಿಕ್ಕಿ – ಕಂದಮ್ಮ ಸೇರಿ ಒಂದೇ ಕುಟುಂಬದ ಮೂವರು ದುರ್ಮರಣ

    ಪಂಜಾಬ್‍ನಲ್ಲಿ ಜಾಹೀರಾತುಗಳಿಗಾಗಿ ಎಎಪಿ 500 ಕೋಟಿ ಖರ್ಚು ಮಾಡಿದೆ. ಈ ಹಣ ಎಲ್ಲಿಂದ ಬಂತು? ಭಗವಂತ್ ಮಾನ್ ಬಳಿ ಅಷ್ಟು ಹಣವಿದೆಯೇ ಎಂದ ಅವರು, ಎಎಪಿ ದೆಹಲಿಯನ್ನು ಲೂಟಿ ಮಾಡಿ ಹಣವನ್ನು ಪಡೆಯುತ್ತಿದ್ದಾರೆ. ಇದೇ ಪರಿಸ್ಥಿತಿ ಪಂಜಾಬ್‍ಗೂ ಬರುತ್ತದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಸಮಾಜವಾದಿ ಪಕ್ಷ ಅಧಿಕಾರಕ್ಕೆ ಬಂದರೆ ಉದ್ಯೋಗ ಖಚಿತ: ಅಖಿಲೇಶ್ ಯಾದವ್

  • Punjab Election: ಚನ್ನಿ ಕಾಂಗ್ರೆಸ್‌ ಸಿಎಂ ಅಭ್ಯರ್ಥಿ – ರಾಹುಲ್‌ ಗಾಂಧಿ ಅಧಿಕೃತ ಘೋಷಣೆ

    Punjab Election: ಚನ್ನಿ ಕಾಂಗ್ರೆಸ್‌ ಸಿಎಂ ಅಭ್ಯರ್ಥಿ – ರಾಹುಲ್‌ ಗಾಂಧಿ ಅಧಿಕೃತ ಘೋಷಣೆ

    ಚಂಡೀಗಢ: ಪಂಜಾಬ್‌ ಚುನಾವಣೆಯ ಕಾಂಗ್ರೆಸ್‌ ಮುಖ್ಯಮಂತ್ರಿ ಅಭ್ಯರ್ಥಿ ಚರಣ್‌ಜಿತ್‌ ಸಿಂಗ್‌ ಚನ್ನಿ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅಧಿಕೃತವಾಗಿ ಘೋಷಿಸಿದ್ದಾರೆ.

    ಪಂಜಾಬ್‌ನ ಲೂದಿಯಾನದಲ್ಲಿ ನಡೆದ ಸಮಾರಂಭದಲ್ಲಿ ಈ ಸಂಬಂಧ ರಾಹುಲ್‌ ಗಾಂಧಿ ಅಧಿಕೃತ ಘೋಷಣೆ ಹೊರಡಿಸಿದ್ದಾರೆ. ಪಂಜಾಬ್‌ ಮುಖ್ಯಮಂತ್ರಿ ಬಡತನದ ಕುಟುಂಬದಿಂದ ಬಂದವರು. ಮುಂಬರುವ ಪಂಜಾಬ್‌ ಚುನಾವಣೆಗೆ ಚನ್ನಿ ಅವರು ಕಾಂಗ್ರೆಸ್‌ ಸಿಎಂ ಅಭ್ಯರ್ಥಿ ಎಂದು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ: ಇಡಿ ಅಧಿಕಾರಿಗಳಿಂದ ಚರಣ್‍ಜಿತ್ ಸಿಂಗ್ ಚನ್ನಿ ಸೋದರಳಿಯನ ಬಂಧನ

    ಈ ಕುರಿತು ಪ್ರತಿಕ್ರಿಯಿಸಿರುವ ಸಿಎಂ ಚನ್ನಿ, ಎಲ್ಲರಿಗೂ ನನ್ನ ಕೃತಜ್ಞತೆಗಳು. ಇದು ನಾನು ಒಬ್ಬಂಟಿಯಾಗಿ ಹೋರಾಡಲು ಸಾಧ್ಯವಾಗದ ದೊಡ್ಡ ಯುದ್ಧ. ನನ್ನಲ್ಲಿ ಹಣವಿಲ್ಲ, ಹೋರಾಡಲು ಧೈರ್ಯವಿಲ್ಲ. ಪಂಜಾಬ್‌ನ ಜನರು ಈ ಯುದ್ಧದಲ್ಲಿ ಹೋರಾಡುತ್ತಾರೆ ಎಂದು ತಿಳಿಸಿದ್ದಾರೆ.

    ಇದಕ್ಕೂ ಮೊದಲು ಮಾತನಾಡಿದ್ದ ಪಂಜಾಬ್‌ ಕಾಂಗ್ರೆಸ್‌ ಅಧ್ಯಕ್ಷ ನವಜೋತ್‌ ಸಿಂಗ್‌ ಸಿಧು, ರಾಹುಲ್‌ ಗಾಂಧಿಯವರ ನಿರ್ಧಾರವನ್ನು ಒಪ್ಪಿಕೊಂಡಿದ್ದೇನೆ. ಅಧಿಕಾರ ಕೊಟ್ಟರೆ ಮಾಫಿಯಾ ಮುಗಿಸುತ್ತೇನೆ, ಜನಜೀವನ ಸುಧಾರಿಸುತ್ತೇನೆ. ಅಧಿಕಾರ ನೀಡದಿದ್ದರೆ ಯಾರನ್ನು ಸಿಎಂ ಮಾಡುತ್ತೀರೋ ಅವರ ಜೊತೆಯೇ ನಗುನಗುತ್ತಾ ಸಾಗುತ್ತೇನೆ ಎಂದು ಹೇಳಿದ್ದರು. ಇದನ್ನೂ ಓದಿ: ನಮ್ಮಣ್ಣ ಒಬ್ಬ ಕ್ರೂರಿ ಮನುಷ್ಯ -ನವಜೋತ್ ಸಿಂಗ್ ಸಹೋದರಿ ಸುಮನ್

    ಫೆಬ್ರವರಿ 20 ರಂದು ಪಂಜಾಬ್‌ ಚುನಾವಣೆ ನಡೆಯಲಿದೆ. ನಂತರ ಮಾರ್ಚ್‌ 10ರಂದು ಚುನಾವಣಾ ಫಲಿತಾಂಶ ಹೊರಬೀಳಲಿದೆ.

  • ಮತಾಂತರ ತಡೆಗೆ ಕಾನೂನು ಅಗತ್ಯ, ಅದು ದುರುಪಯೋಗವಾಗ್ಬಾರ್ದು: ಕೇಜ್ರಿವಾಲ್

    ಮತಾಂತರ ತಡೆಗೆ ಕಾನೂನು ಅಗತ್ಯ, ಅದು ದುರುಪಯೋಗವಾಗ್ಬಾರ್ದು: ಕೇಜ್ರಿವಾಲ್

    ಚಂಡೀಗಢ: ಮತಾಂತರದ ಕುರಿತು ಕಾನೂನು ರಚಿಸಬೇಕು. ಆದರೆ ಅದರ ಹೆಸರಿನಲ್ಲಿ ಯಾರಿಗೂ ಕಿರುಕುಳ ನೀಡಬಾರದು ಎಂದು ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ತಿಳಿಸಿದರು.

    ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಧರ್ಮವು ಪ್ರತಿಯೊಬ್ಬರ ಖಾಸಗಿ ವಿಷಯವಾಗಿದೆ. ಪ್ರತಿಯೊಬ್ಬರಿಗೂ ಅವರವರ ಧರ್ಮವನ್ನು ಪೂಜಿಸುವ ಹಕ್ಕಿದೆ. ಆದರೆ ಒತ್ತಾಯಪೂರ್ವಕವಾಗಿ ಮತಾಂತರ ಮಾಡುವುದು ತಪ್ಪು. ಅಂತಹ ಮತಾಂತರ ತಡೆಗೆ ಕಾನೂನು ರಚಿಸುವುದು ಅತ್ಯವಶ್ಯವಾಗಿದೆ ಎಂದು ಹೇಳಿದರು.

    ಮತಾಂತರದ ಹೆಸರಲ್ಲಿ ಯಾರಿಗೂ ಕಿರುಕುಳ ನೀಡಬಾರದು. ಅವರನ್ನು ಹೆದರಿಸಿ ಮತಾಂತರ ಮಾಡುವುದು ತಪ್ಪು. ಇದರ ತಡೆಗೆ ಉತ್ತರಪ್ರದೇಶ, ಹಿಮಾಚಲ ಪ್ರದೇಶ ಮತ್ತು ಮಧ್ಯಪ್ರದೇಶ ಸೇರಿದಂತೆ ಹಲವು ರಾಜ್ಯಗಳಲ್ಲಿ ಕಾನೂನು ಜಾರಿಯಲ್ಲಿದೆ ಎಂದರು. ಇದನ್ನೂ ಓದಿ: ಗಾಡಿ ಟೋಯಿಂಗ್ ಮಾಡ್ತಿದ್ದ ASIಗೆ ಕಲ್ಲೇಟು- ವಿಕಲಚೇತನ ಮಹಿಳೆಗೆ ಬೂಟಿನಿಂದ ಒದ್ದ ನಾರಾಯಣ್

    ಸರ್ಕಾರವು ಅಧಿಕಾರಕ್ಕೆ ಬಂದರೆ ಮನೆ ಬಾಗಿಲಿಗೆ ತಲುಪಿಸುವ ಸೇವೆ ಹಾಗೂ ಚಿಕಿತ್ಸಾಲಯಗಳನ್ನು ಪ್ರಾರಂಭಿಸುತ್ತೇವೆ. ಜೊತೆಗೆ ಪಂಜಾಬ್‍ನಲ್ಲಿ 16000 ಕ್ಲಿನಿಕ್‍ಗಳನ್ನು ನಿರ್ಮಿಸುತ್ತೇವೆ ಮತ್ತು ಆಸ್ಪತ್ರೆಗಳನ್ನು ನವೀಕರಿಸುತ್ತೇವೆ ಎಂದು ಭರವಸೆ ನೀಡಿದರು. ಇದನ್ನೂ ಓದಿ: ರಾಹುಲ್ ಗಾಂಧಿ ಜೇಬಿಗೆ ಕತ್ತರಿ ಹಾಕಿದ್ದು ಯಾರು?: ಹರ್ಸಿಮ್ರತ್ ಕೌರ್ ಬಾದಲ್

  • ಪಂಜಾಬ್ ಚುನಾವಣೆ: ನವಜೋತ್ ಸಿಂಗ್ ಸಿಧು ವಿರುದ್ಧ ಬಿಕ್ರಮ್ ಸಿಂಗ್ ಕಣಕ್ಕೆ

    ಪಂಜಾಬ್ ಚುನಾವಣೆ: ನವಜೋತ್ ಸಿಂಗ್ ಸಿಧು ವಿರುದ್ಧ ಬಿಕ್ರಮ್ ಸಿಂಗ್ ಕಣಕ್ಕೆ

    ಚಂಡೀಗಢ: ಪಂಜಾಬ್ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಅಮೃತಸರ ಪೂರ್ವ ಕ್ಷೇತ್ರದಿಂದ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ವಿರುದ್ಧ ಶಿರೋಮಣಿ ಅಕಾಲಿದಳ (ಎಸ್‍ಎಡಿ) ನಾಯಕ ಬಿಕ್ರಮ್ ಸಿಂಗ್ ಮಜಿಥಿಯಾ ಸ್ಪರ್ಧಿಸಲಿದ್ದಾರೆ.

    ಅಕಾಲಿದಳದ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ಅವರು, ಬಿಕ್ರಮ್ ಸಿಂಗ್ ಮಜಿಥಿಯಾ ಅವರು ಸಿಧು ಅವರ ದುರಹಂಕಾರವನ್ನು ಅಡಗಿಸಲಿದ್ದಾರೆ ಎಂದು ಹೇಳಿದ್ದಾರೆ. ಸುಖಬೀರ್ ಸಿಂಗ್ ಬಾದಲ್ ಅವರು ಬಿಕ್ರಮ್ ಸಿಂಗ್ ಮಜಿಥಿಯಾ ಅವರ ಸೋದರ ಮಾವ ಆಗಿದ್ದಾರೆ. ಇದನ್ನೂ ಓದಿ: ನೈಟ್ ಕರ್ಫ್ಯೂ ನಡುವೆ ಸಿಲಿಕಾನ್ ಸಿಟಿಯಲ್ಲಿ ಭೀಕರ ಅಪಘಾತ

    ಅಮೃತಸರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸುಖಬೀರ್ ಸಿಂಗ್ ಬಾದಲ್, ಸಿಧು ಅವರ ಭದ್ರತಾ ಠೇವಣಿಯನ್ನು ಮುಟ್ಟುಗೋಲು ಹಾಕಿಕೊಳ್ಳುವುದನ್ನು ಮಜಿಥಿಯಾ ಖಚಿತಪಡಿಸಿಕೊಳ್ಳುತ್ತಾರೆ. ಎಸ್‍ಎಡಿ ಮುಖ್ಯಸ್ಥರು ಮುಂದಿನ ತಿಂಗಳ ಚುನಾವಣೆಯಲ್ಲಿ ಮಜಿತಾ ಕ್ಷೇತ್ರದಿಂದ ಸ್ಪರ್ಧಿಸುತ್ತಿದ್ದಾರೆ. ಇದನ್ನೂ ಓದಿ: ಬಾಲಕಿ ಮೇಲೆ ಅತ್ಯಾಚಾರ ಎಸಗಿ ಮನೆಯ ಹೊರಗೆ ಎಸೆದ – ಆರೋಪಿ ಅರೆಸ್ಟ್

    ಡ್ರಗ್ಸ್ ಪ್ರಕರಣದಲ್ಲಿ ಬಿಕ್ರಮ್ ಸಿಂಗ್ ಮಜಿಥಿಯಾ ಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಇತ್ತೀಚೆಗಷ್ಟೇ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಬಿಕ್ರಮ್ ಸಿಂಗ್ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ರದ್ದುಗೊಳಿಸಿತ್ತು. ಆದರೆ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಕಾರಣ ಮೂರು ದಿನಗಳ ಕಾಲ ರಕ್ಷಣೆ ನೀಡಲಾಗಿತ್ತು.

  • ಸೂಪರ್ ಹೀರೋ ರೂಪತಾಳಿದ ಚರಣ್‍ಜಿತ್ ಸಿಂಗ್ ಚನ್ನಿ

    ಸೂಪರ್ ಹೀರೋ ರೂಪತಾಳಿದ ಚರಣ್‍ಜಿತ್ ಸಿಂಗ್ ಚನ್ನಿ

    ಚಂಡೀಗಢ: ಪಂಜಾಬ್‍ನಲ್ಲಿ ವಿಧಾನಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ಮುಖ್ಯಮಂತ್ರಿ ಚರಣ್‍ಜಿತ್ ಸಿಂಗ್ ಚನ್ನಿ ಸೂಪರ್ ಹೀರೋ ಆಗಿ ಕಾಣಿಸಿಕೊಂಡಿದ್ದಾರೆ.

    ಚರಣ್‍ಜಿತ್ ಸಿಂಗ್ ಸೂಪರ್ ಹೀರೋ ಆಗಿ ಕಾಣಿಸಿಕೊಂಡಿರುವ ವೀಡಿಯೋವನ್ನು ಪಂಜಾಬ್ ಕಾಂಗ್ರೆಸ್ ಟ್ಟಿಟ್ಟರ್‌ನಲ್ಲಿ ಟ್ವೀಟ್ ಮಾಡಿದೆ. ಅವೆಂಜರ್ಸ್‍ನಲ್ಲಿ ಕಾಣುವಂತೆ ಚನ್ನಿ, ರಾಹುಲ್ ಗಾಂಧಿ,  ನವಜೋತ್ ಸಿಂಗ್ ಸಿಧು, ನರೇಂದ್ರ ಮೋದಿ, ಕೇಜ್ರಿವಾಲ್ ಸೇರಿದಂತೆ ಹಲವು ನಾಯಕರ ಮುಖಗಳನ್ನು ಈ ವೀಡಿಯೋದಲ್ಲಿ ನೋಡಬಹುದಾಗಿದೆ. ನವಜೋತ್ ಸಿಂಗ್ ಸಿಧು ಜೊತೆಗೆ ಚರಣ್‌ಜಿತ್‌ ಸಿಂಗ್ ಚನ್ನಿಯವರ ಮುಖಗಳನ್ನು ಥಾರ್, ಬ್ರೂಸ್ ಬ್ಯಾನರ್ ಮತ್ತು ಕ್ಯಾಪ್ಟನ್ ಅಮೆರಿಕಾ ಪಾತ್ರಗಳಲ್ಲಿ ತೋರಿಸಲಾಗಿದೆ. ಏಲಿಯನ್ಸ್ ಶತ್ರುಗಳ ಪಾತ್ರಗಳಲ್ಲಿ ನರೇಂದ್ರ ಮೋದಿ, ಕೇಜ್ರಿವಾಲ್, ಅಮರಿಂದರ್‌ ಸಿಂಗ್‌ ಅವರ ಮುಖಗಳನ್ನು ಕಾಣಬಹುದಾಗಿದೆ. ಇದನ್ನೂ ಓದಿ: ರಾಜಕೀಯ ಪಕ್ಷಗಳಿಂದ ಉಚಿತ ಯೋಜನೆಗಳ ಭರವಸೆ – ಸುಪ್ರೀಂಕೋರ್ಟ್‍ಗೆ ಪಿಐಎಲ್ ಸಲ್ಲಿಕೆ, ಚು.ಆಯೋಗಕ್ಕೆ ನೋಟಿಸ್

    ಅವೆಂಜರ್ಸ್‍ಗಳ ಫೈಟ್‍ನಲ್ಲಿ ಮೊದಲು ಕಾಂಗ್ರೆಸ್ ನಾಯಕರಮೇಲೆ ದಾಳಿ ನಡೆದಾಗ ಚನ್ನಿ ಚೂಪರ್ ಹೀರೋ ಆಗಿ ಬಂದು ಕಾಪಾಡುವ ಸನ್ನಿವೇಶ ಈ ವೀಡಿಯೋದಲ್ಲಿದೆ. ಈ ಬಗ್ಗೆ ಬರೆದುಕೊಂಡಿರುವ ಪಂಜಾಬ್ ಕಾಂಗ್ರೆಸ್, ಪಂಜಾಬ್ ಮತ್ತು ಇಲ್ಲಿನ ಜನರ ವಿರುದ್ಧ ಹಿಡಿತ ಸಾಧಿಸಲು ಯತ್ನಿಸುವವರ ವಿರುದ್ಧ ಹೋರಾಡಿ ನಮ್ಮ ರಾಜ್ಯವನ್ನು ರಕ್ಷಿಸಲು ನಾವು ಸದಾ ಸಿದ್ಧರಿರುವುದಾಗಿ ಈ ವೀಡಿಯೋದಲ್ಲಿ ತಿಳಿಸಿದೆ. ಇದನ್ನೂ ಓದಿ: ಆತ್ಮನಿರ್ಭರ್ ಭಾರತಕ್ಕೆ ಹೊಸ ರೂಪ ನೀಡಿದ ದೆಹಲಿ ಮೆಟ್ರೋ

    ಪಂಜಾಬ್ ಕಾಂಗ್ರೆಸ್ ಒಳಜಗಳದ ಬಳಿಕ ಕ್ಯಾಪ್ಟನ್ ಅಮರಿಂದರ್ ಸಿಂಗ್ ಪಕ್ಷ ತೊರೆದು ಬಳಿಕ ಚನ್ನಿ ಮುಖ್ಯಮಂತ್ರಿ ಪಟ್ಟಕ್ಕೇರಿದ್ದರು. ಇದೀಗ ಮತ್ತೊಮ್ಮೆ ಪಟ್ಟಕ್ಕೇರುವ ಇರಾದೆಯಲ್ಲಿ ಪಂಜಾಬ್ ಕಾಂಗ್ರೆಸ್ ಇದೆ. ಪಂಜಾಬ್‍ನಲ್ಲಿ ಫೆಬ್ರವರಿ 20 ರಂದು ಚುನಾವಣೆ ಆರಂಭವಾಗಲಿದ್ದು, ಮಾರ್ಚ್ 10 ರಂದು ಫಲಿತಾಂಶ ಹೊರಬಿಳಲಿದೆ.

  • ಚುನಾವಣೆ ಮುಂದೂಡುವಂತೆ ಆಯೋಗಕ್ಕೆ ಪಂಜಾಬ್‌ ಸಿಎಂ ಮನವಿ ಪತ್ರ

    ಚುನಾವಣೆ ಮುಂದೂಡುವಂತೆ ಆಯೋಗಕ್ಕೆ ಪಂಜಾಬ್‌ ಸಿಎಂ ಮನವಿ ಪತ್ರ

    ಚಂಡೀಗಢ: ಗುರು ರವಿದಾಸ್‌ ಜಯಂತಿ ಇರುವುದರಿಂದ ಫೆಬ್ರವರಿ 14ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯನ್ನು ಆರು ದಿನಗಳ ಕಾಲ ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ಪಂಜಾಬ್‌ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್‌ ಚನ್ನಿ ಮನವಿ ಮಾಡಿದ್ದಾರೆ.

    ಮುಖ್ಯ ಚುನಾವಣಾ ಆಯುಕ್ತ ಸುಶೀಲ್‌ ಚಂದ್ರ ಅವರಿಗೆ ಪತ್ರ ಬರೆದಿರುವ ಪಂಜಾಬ್‌ ಸಿಎಂ, ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇ.32 ರಷ್ಟು ಇರುವ ಪರಿಶಿಷ್ಟ ಜಾತಿ ಸಮುದಾಯದ ಕೆಲವು ಪ್ರತಿನಿಧಿಗಳು, ಗುರು ರವಿದಾಸ್‌ ಅವರ ಜನ್ಮದಿನ ಫೆಬ್ರವರಿಯಲ್ಲೇ ನಡೆಯಲಿದೆ ಎಂದು ನನ್ನ ಗಮನಕ್ಕೆ ತಂದಿದ್ದಾರೆ. ಹೀಗಾಗಿ ಚುನಾವಣೆಯನ್ನು ಮುಂದೂಡಬೇಕು ಎಂದು ಒತ್ತಾಯಿಸಿದ್ದಾರೆ. ಇದನ್ನೂ ಓದಿ: ಮಿಸ್ ಬಿಕಿನಿ ಇಂಡಿಯಾ ಅರ್ಚನಾ ಕಾಂಗ್ರೆಸ್‍ನಿಂದ ಚುನಾವಣಾ ಅಭ್ಯರ್ಥಿ- ರಾಜಕೀಯಕ್ಕೆ ನನ್ನ ವೃತ್ತಿ ಬೆಸೆಯಬೇಡಿ

    ಗುರು ರವಿದಾಸ್‌ ಅವರ ಜಯಂತಿ ಹಿನ್ನೆಲೆಯಲ್ಲಿ ಪರಿಶಿಷ್ಟ ಸಮುದಾಯದ ಲಕ್ಷಾಂತರ ಜನರು ಉತ್ತರ ಪ್ರದೇಶದ ಬನಾರಸ್‌ಗೆ ಫೆಬ್ರವರಿ 10ರಿಂದ 16ರವರೆಗೆ ಭೇಟಿ ನೀಡುವ ಸಾಧ್ಯತೆ ಇದೆ. ಇಂತಹ ಪರಿಸ್ಥಿತಿಯಲ್ಲಿ ಈ ಸಮುದಾಯದ ಅನೇಕ ಜನರು ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮತ ಚಲಾಯಿಸಲು ಸಾಧ್ಯವಾಗುವುದಿಲ್ಲ. ಮತದಾನ ಅವರ ಸಂವಿಧಾನಬದ್ಧ ಹಕ್ಕು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

    ಫೆಬ್ರವರಿ 10ರಿಂದ 16ರವರೆಗೆ ಬನಾರಸ್‌ಗೆ ಭೇಟಿ ನೀಡಲು ಮತ್ತು ವಿಧಾನಸಭಾ ಚುನಾವಣೆಯಲ್ಲಿ ಭಾಗವಹಿಸಲು ಸಾಧ್ಯವಾಗುವ ರೀತಿಯಲ್ಲಿ ಮತದಾನದ ದಿನಾಂಕವನ್ನು ವಿಸ್ತರಿಸಬಹುದು ಎಂದು ಸಮುದಾಯದ ಪ್ರತಿನಿಧಿಗಳು ಮನವಿ ಮಾಡಿದ್ದಾರೆಂದು ಸಿಎಂ ತಿಳಿಸಿದ್ದಾರೆ. ಇದನ್ನೂ ಓದಿ: ಅಯೋಧ್ಯೆ ಅಲ್ಲ, ಗೋರಖ್‌ಪುರ ಕ್ಷೇತ್ರದಿಂದ ಯೋಗಿ ಆದಿತ್ಯನಾಥ್ ಸ್ಪರ್ಧೆ

    2022ರ ಪಂಜಾಬ್‌ ವಿಧಾನಸಭಾ ಚುನಾವಣೆಯ ಮತದಾನದ ದಿನಾಂಕವನ್ನು ಕನಿಷ್ಠ 6 ದಿನಗಳವರೆಗೆ ಮುಂದೂಡಿ ಫೆ.20ಕ್ಕೆ ನಿಗದಿಪಡಿಸಬಹುದು. ಆ ಮೂಲಕ ಸುಮಾರು 20 ಲಕ್ಷ ಜನತೆ ಮತದಾನ ಮಾಡಲು ಅನುವು ಮಾಡಿಕೊಡುವುದು ನ್ಯಾಯಯುತ ಮತ್ತು ಸೂಕ್ತ ಎಂದು ಅಭಿಪ್ರಾಯಪಟ್ಟಿದ್ದಾರೆ.

    ಪಂಜಾಬ್‌ನ 117 ವಿಧಾನಸಭಾ ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಫೆ.14ರಂದು ಮತದಾನ ನಡೆಯಲಿದೆ. ಮಾ.10 ರಂದು ಫಲಿತಾಂಶ ಹೊರಬೀಳಲಿದೆ ಎಂದು ಚುನಾವಣಾ ಆಯೋಗ ಘೋಷಿಸಿತ್ತು.

  • ಪಂಜಾಬ್‌ ಚುನಾವಣೆ – ನಟ ಸೋನು ಸೂದ್‌ ಸಹೋದರಿ ಕಾಂಗ್ರೆಸ್‌ ಸೇರ್ಪಡೆ

    ಪಂಜಾಬ್‌ ಚುನಾವಣೆ – ನಟ ಸೋನು ಸೂದ್‌ ಸಹೋದರಿ ಕಾಂಗ್ರೆಸ್‌ ಸೇರ್ಪಡೆ

    ನವದೆಹಲಿ: ಬಾಲಿವುಡ್‌ ನಟ ಸೋನು ಸೂದ್‌ ಅವರ ಸಹೋದರಿ ಮಾಲವಿಕಾ ಸೂದ್‌ ಅವರು ಕಾಂಗ್ರೆಸ್‌ ಸೇರಿದ್ದು, ಪಂಜಾಬ್‌ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ.

    ಪಂಜಾಬ್‌ ಕಾಂಗ್ರೆಸ್‌ ಸಮಿತಿಯ ಮುಖ್ಯಸ್ಥ ನವಜೋತ್‌ ಸಿಂಗ್‌ ಸಿಧು, ರಾಜ್ಯ ಚುನಾವಣೆಗೆ ಮುಂಚಿತವಾಗಿ ನಡೆದ ಈ ಬೆಳವಣಿಗೆಯನ್ನು ʻಗೇಮ್‌ ಚೇಂಜರ್‌ʼ ಎಂದು ಬಣ್ಣಿಸಿದ್ದಾರೆ. ಇದನ್ನೂ ಓದಿ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆ – ಫೆ.10ರಿಂದ ಮತದಾನ, ಮಾ.10ರಂದು ಮತ ಎಣಿಕೆ

    ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್‌ ಚೆನ್ನಿ ಮತ್ತು ನವಜೋತ್‌ ಸಿಧು ಅವರ ಸಮ್ಮುಖದಲ್ಲಿ ಮಾಳವಿಕಾ ಸೂದ್‌ ಅವರು ಕಾಂಗ್ರೆಸ್‌ ಸೇರಿದ್ದಾರೆ. ಜನರ ಸೇವೆ ಮಾಡಲು ನಾನು ರಾಜಕೀಯ ಪ್ರದೇಶಿಸಿದ್ದೇನೆ ಎಂದು ಹೇಳಿಕೊಂಡಿದ್ದಾರೆ.

    ಮಾಳವಿಕಾ ಅವರು ಯುವ ಹಾಗೂ ಶಿಕ್ಷಿತ ಮಹಿಳೆ. ಯುವ ಮಹಿಳೆಯೊಬ್ಬರು ನಮ್ಮ ಪಕ್ಷಕ್ಕೆ ಸೇರಿರುವುದು ಸಂತಸ ತಂದಿದೆ. ಜನರ ಸೇವೆ ಮಾಡಲು ಅವರು ನಮ್ಮ ಪಕ್ಷಕ್ಕೆ ಸೇರಿರುವುದು ಖುಷಿ ತಂದಿದೆ ಎಂದು ನವಜೋತ್‌ ಸಿಧು ಪ್ರತಿಕ್ರಿಯಿಸಿದ್ದಾರೆ. ಇದನ್ನೂ ಓದಿ: ಪಂಜಾಬ್‌ ʻಸ್ಟೇಟ್‌ ಐಕಾನ್‌ʼ ಸ್ಥಾನದಿಂದ ಹೊರಗುಳಿದ ನಟ ಸೋನು ಸೂದ್‌

    ಕಳೆದ ವರ್ಷ ನವೆಂಬರ್‌ನಲ್ಲಿ ತನ್ನ ಸಹೋದರಿ ಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ ಎಂದು ನಟ ಸೋನು ಸೂದ್‌ ಘೋಷಿಸಿದ್ದರು. ಆದರೆ ಯಾವ ಪಕ್ಷ ಆಯ್ಕೆ ಮಾಡಿಕೊಳ್ಳಲಿದ್ದಾರೆ ಎಂಬುದನ್ನು ಸ್ಪಷ್ಟಪಡಿಸಿರಲಿಲ್ಲ.

    ಕೊರೊನಾ ಸಾಂಕ್ರಾಮಿಕ ಸಂದರ್ಭದಲ್ಲಿ ಬಡಜನರಿಗೆ ಸೋನು ಸೂದ್‌ ಅವರು ಅಪಾರ ನೆರವು ಒದಗಿಸುವ ಮೂಲಕ ನಿಜಜೀವನದಲ್ಲೂ ಹೀರೋ ಎನಿಸಿಕೊಂಡಿದ್ದಾರೆ. ಸಹೋದರಿ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ ಕಾರಣ ಸೋನು ಸೂದ್‌, ಈಚೆಗಷ್ಟೇ ಪಂಜಾಬ್‌ ಸ್ಟೇಟ್‌ ಐಕಾನ್‌ ಸ್ಥಾನದಿಂದ ಹೊರಬಂದರು. ಇದನ್ನೂ ಓದಿ: ಆಂಧ್ರಪ್ರದೇಶದಲ್ಲಿ ಪ್ರವಾಹಪೀಡಿತ ಜನರ ನೆರವಿಗೆ ನಿಂತ ಸೋನು ಸೂದ್‌

    ಪಂಚ ರಾಜ್ಯಗಳಿಗೆ ಫೆ.10ರಿಂದ ಚುನಾವಣೆ ನಡೆಯಲಿದೆ. ಫೆ.14ರಂದು ಪಂಜಾಬ್‌ ರಾಜ್ಯಕ್ಕೆ ಒಂದೇ ಹಂತದಲ್ಲಿ ಮತದಾನ ನಡೆಯಲಿದೆ. ಚುನಾವಣೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ಮಾಳವಿಕಾ ಸೂದ್‌ ಕಾಂಗ್ರೆಸ್‌ ಸೇರಿದ್ದಾರೆ.

    2017ರಲ್ಲಿ ನಡೆದ ಪಂಜಾಬ್‌ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ 77 ಸ್ಥಾನಗಳನ್ನು ಗೆಲ್ಲುವ ಮೂಲಕ ಸರ್ಕಾರ ರಚಿಸಿತ್ತು. 10 ವರ್ಷಗಳ ಬಳಿಕ ಎಸ್‌ಎಡಿ-ಬಿಜೆಪಿ ಸರ್ಕಾರ ಹೊರದೂಡಲ್ಪಟ್ಟಿತು. 117 ಸದಸ್ಯ ಬಲದ ವಿಧಾನಸಭಾ ಚುನಾವಣೆಯಲ್ಲಿ 20 ಸ್ಥಾನಗಳನ್ನು ಗೆಲ್ಲುವ ಮೂಲಕ ಎಎಪಿ ಎರಡನೇ ಅತಿದೊಡ್ಡ ಪಕ್ಷವಾಗಿ ಪಂಜಾಬ್‌ನಲ್ಲಿ ನೆಲೆಯೂರಿದೆ. ಆಗ ಶಿರೋಮಣಿ ಅಕಾಲಿ ದಳ (ಎಸ್‌ಎಡಿ) 15 ಸ್ಥಾನಗಳನ್ನೂ, ಬಿಜೆಪಿ ಕೇವಲ 3 ಸ್ಥಾನಗಳಿಗೆ ತೃಪ್ತಿಪಟ್ಟಿದ್ದವು.

  • ಪಂಜಾಬ್‌ ʻಸ್ಟೇಟ್‌ ಐಕಾನ್‌ʼ ಸ್ಥಾನದಿಂದ ಹೊರಗುಳಿದ ನಟ ಸೋನು ಸೂದ್‌

    ಪಂಜಾಬ್‌ ʻಸ್ಟೇಟ್‌ ಐಕಾನ್‌ʼ ಸ್ಥಾನದಿಂದ ಹೊರಗುಳಿದ ನಟ ಸೋನು ಸೂದ್‌

    ಚಂಡೀಗಢ: ಕೊರೊನಾ ಸಾಂಕ್ರಾಮಿಕದಿಂದಾಗಿ ಸಂಕಷ್ಟಕ್ಕೊಳಗಾಗಿದ್ದ ಜನತೆಗೆ ನೆರವಾಗುವ ಮೂಲಕ ರಿಯಲ್‌ ಹೀರೋ ಎನಿಸಿಕೊಂಡಿದ್ದ ಬಾಲಿವುಡ್‌ ನಟ ಸೋನು ಸೂದ್‌ ಅವರು ಶುಕ್ರವಾರ ಸ್ವಯಂಪ್ರೇರಿತರಾಗಿ ಪಂಜಾಬ್‌ನ ʻಸ್ಟೇಟ್‌ ಐಕಾನ್‌ʼ ಸ್ಥಾನದಿಂದ ಕೆಳಗಿಳಿದಿದ್ದಾರೆ. ಪಂಜಾಬ್‌ ರಾಜ್ಯ ಚುನಾವಣೆಗೂ ಮುನ್ನ ಅವರು ಈ ನಿರ್ಧಾರ ಕೈಗೊಂಡಿದ್ದಾರೆ.

    ಸ್ಟೇಟ್‌ ಐಕಾನ್‌ ಸ್ಥಾನದಿಂದ ಹೊರಬಂದಿರುವ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಎಲ್ಲಾ ಒಳ್ಳೆಯ ವಿಷಯಗಳಂತೆ ಈ ಪ್ರಯಾಣವೂ ಕೊನೆಗೊಂಡಿದೆ. ನಾನು ಸ್ವಯಂಪ್ರೇರಣೆಯಿಂದ ಪಂಜಾಬ್‌ನ ಸ್ಟೇಟ್‌ ಐಕಾನ್‌ ಸ್ಥಾನದಿಂದ ಕೆಳಗಿಳಿದಿದ್ದೇನೆ. ಪಂಜಾಬ್‌ ವಿಧಾನಸಭಾ ಚುನಾವಣೆಯಲ್ಲಿ ನನ್ನ ಕುಟುಂಬದ ಸದಸ್ಯರು ಸ್ಪರ್ಧಿಸುತ್ತಿರುವ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದೊಂದಿಗೆ ಚರ್ಚಿಸಿ ನಾನು ಈ ನಿರ್ಧಾರ ತೆಗೆದುಕೊಂಡಿದ್ದೇನೆ. ಅವರ ಮುಂದಿನ ಪ್ರಯತ್ನಗಳಿಗೆ ಶುಭ ಹಾರೈಸುತ್ತೇನೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಡ್ರ್ಯಾಗನ್ ಫ್ರೂಟ್‍ನಲ್ಲಿ ಕೊರೊನಾ!

    ಬಾಲಿವುಡ್‌ ನಟನ ನೇಮಕಾತಿಯನ್ನು ಹಿಂಪಡೆದಿರುವುದಾಗಿ ಚುನಾವಣಾ ಆಯೋಗ ಟ್ವೀಟ್‌ ಮಾಡಿ ತಿಳಿಸಿದೆ. ಪಂಜಾಬ್‌ನ ಮೋಗಾ ಜಿಲ್ಲೆಯವರಾದ ಸೋನು ಸೂದ್‌ ಅವರನ್ನು ಕಳೆದ ವರ್ಷ ಚುನಾವಣೆ ಸಂಸ್ಥೆ ʻಸ್ಟೇಟ್‌ ಐಕಾನ್‌ʼ ಎಂದು ಆಯ್ಕೆ ಮಾಡಿತ್ತು.

    ಪಂಜಾಬ್‌ ವಿಧಾನಸಭಾ ಚುನಾವಣೆಯಲ್ಲಿ ಸೋನು ಸೂದ್‌ ಅವರ ಸಹೋದರಿ ಮಾಳಿವಕಾ ಸೂದ್‌ ಸ್ಪರ್ಧಿಸುತ್ತಿದ್ದಾರೆ. ಆದರೆ ಯಾವ ಪಕ್ಷದಿಂದ ಕಣಕ್ಕಿಳಿಯಲಿದ್ದಾರೆ ಎಂಬ ವಿಚಾರ ಇನ್ನೂ ಸ್ಪಷ್ಟವಾಗಿಲ್ಲ. ಎಎಪಿ ಅಥವಾ ಕಾಂಗ್ರೆಸ್‌ ಎರಡರಲ್ಲಿ ಒಂದು ಪಕ್ಷದಿಂದ ಕಣಕ್ಕಿಳಿಯುವ ಸಾಧ್ಯತೆ ಇದೆ ಎನ್ನಲಾಗಿದೆ. ಪಂಜಾಬ್‌ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್‌ ಅವರೊಂದಿಗೆ ಸೋನು ಸೂದ್‌ ಸಭೆ ನಡೆಸಲಿದ್ದಾರೆಂಬ ಮಾತುಗಳಿವೆ. ಇದನ್ನೂ ಓದಿ: ಆಸ್ಕರ್‌ ವಿಜೇತ ಮೊದಲ ಕಪ್ಪುವರ್ಣೀಯ ಸಿಡ್ನಿ ಪೊಯ್ಟಿಯರ್‌ ನಿಧನ

    ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌, ಶಾಲಾ ಮಕ್ಕಳಿಗಾಗಿ ಆಯೋಜಿಸಿದ್ದ ʻದೇಶ್‌ ಕಿ ಮೆಂಟರ್‌ʼ ಕಾರ್ಯಕ್ರಮದ ರಾಯಭಾರಿಯಾಗಿ ಸೋನ್‌ ಸೂದ್‌ ಅವರನ್ನು ಆಯ್ಕೆ ಮಾಡಿದ್ದರು.

  • ಬಿಜೆಪಿಯೊಂದಿಗೆ ಮೈತ್ರಿ – ಅಮರೀಂದರ್‌ ಸಿಂಗ್‌ ಅಧಿಕೃತ ಘೋಷಣೆ

    ಬಿಜೆಪಿಯೊಂದಿಗೆ ಮೈತ್ರಿ – ಅಮರೀಂದರ್‌ ಸಿಂಗ್‌ ಅಧಿಕೃತ ಘೋಷಣೆ

    ಚಂಡೀಗಢ: ಪಂಜಾಬ್‌ ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿರುವುದಾಗಿ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರೀಂದರ್‌ ಸಿಂಗ್‌ ಇಂದು ಅಧಿಕೃತವಾಗಿ ಘೋಷಿಸಿದ್ದಾರೆ.

    ದೆಹಲಿಯಲ್ಲಿ ಬಿಜೆಪಿ ನಾಯಕರೊಂದಿಗೆ ಸಭೆ ನಡೆಸಿದ ಬಳಿಕ ಅಮರೀಂದರ್‌ ಸಿಂಗ್‌ ಮೈತ್ರಿ ಕುರಿತು ಸ್ಪಷ್ಟಪಡಿಸಿದ್ದಾರೆ. ಅಲ್ಲದೇ ಕೇಂದ್ರ ಸಚಿವ ಹಾಗೂ ಪಂಜಾಬ್‌ ಬಿಜೆಪಿ ಉಸ್ತುವಾರಿ ಗಜೇಂದ್ರ ಸಿಂಗ್‌ ಶೇಖಾವತ್‌ ಅವರನ್ನು ಆಲಂಗಿಸಿರುವ ಫೋಟೊವನ್ನು ಕ್ಯಾಪ್ಟನ್‌ ಟ್ವಿಟರ್‌ನಲ್ಲಿ ಪೋಸ್ಟ್‌ ಮಾಡಿದ್ದಾರೆ. ಇದನ್ನೂ ಓದಿ: ಮೈತ್ರಿ ಬಗ್ಗೆ ಪ್ರಧಾನಿ ಮೋದಿ, ಅಮಿತ್‌ ಶಾ ಜೊತೆ ಮಾತನಾಡಿದ್ದೇನೆ: ಅಮರೀಂದರ್‌ ಸಿಂಗ್‌

    ಬಿಜೆಪಿಯೊಂದಿಗೆ ಮೈತ್ರಿ ಆಗಿದೆ. ಚುನಾವಣೆಗಾಗಿ ಸೀಟುಗಳ ಹಂಚಿಕೆ ಸಂಬಂಧ ಮಾತುಕತೆ ನಡೆಯುತ್ತಿದೆ. ಯಾರು ಎಲ್ಲಿ ಸ್ಪರ್ಧಿಸುತ್ತಾರೆ ಎಂಬುದು ಮುಂದೆ ತಿಳಿಯಲಿದೆ. ಸೀಟು ಆಯ್ಕೆಯ ಮಾನದಂಡವು ಗೆಲುವಿಗೆ ಪೂರಕವಾಗಿರಲಿದೆ ಎಂದು ಅಮರೀಂದರ್‌ ತಿಳಿಸಿದ್ದಾರೆ.

    ಮೈತ್ರಿ ಆಗಿರುವುದರಿಂದ ಚುನಾವಣೆಯಲ್ಲಿ ನಾವೇ ಗೆಲ್ಲುತ್ತೇವೆಂಬ 101 ಪರ್ಸೆಂಟ್‌ ಭರವಸೆ ಇದೆ ಎಂದು ಆಶಯ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಅಮರೀಂದರ್‌ ಹೊಸ ಪಕ್ಷ ಸ್ಥಾಪನೆ – ರೈತರ ಸಮಸ್ಯೆ ಪರಿಹಾರವಾದರೆ ಬಿಜೆಪಿ ಜೊತೆ ಮೈತ್ರಿ

    ಪಂಜಾಬ್‌ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿದ ನಂತರ ಕಾಂಗ್ರೆಸ್‌ ತೊರೆದಿದ್ದ ಕ್ಯಾಪ್ಟನ್‌ ಅಮರೀಂದರ್‌ ಸಿಂಗ್‌ ಅವರು ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಸುಳಿವು ನೀಡಿದ್ದರು. ವಿವಾದಿತ ಮೂರು ಕೃಷಿ ಕಾಯ್ದೆಗಳನ್ನು ಕೇಂದ್ರ ಸರ್ಕಾರ ಹಿಂಪಡೆದರೆ ಪಂಜಾಬ್‌ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಳ್ಳಲಾಗುವುದು ಎಂದು ಸಿಂಗ್‌ ಹೇಳಿದ್ದರು. ಅಂತೆಯೇ ಈಗ ಬಿಜೆಪಿ ವರಿಷ್ಠರೊಂದಿಗೆ ಮಾತುಕತೆ ನಡೆಸಿದ್ದರು.

    ಪ್ರಸ್ತುತ ರಾಜಕೀಯ ಪರಿಸ್ಥಿತಿಯಲ್ಲಿ ಎಲ್ಲಾ ಕಡೆ ಬಿಜೆಪಿ ಕಡೆಗಿನ ಒಲವು ಹೆಚ್ಚಾಗಿದೆ. ಮೈತ್ರಿ ಆಗುವುದರಿಂದ ಅನೇಕ ಹಿಂದೂಗಳು ಬಿಜೆಪಿ ಮತ್ತು ನಮ್ಮ ಪಕ್ಷವನ್ನು ಬೆಂಬಲಿಸುತ್ತಾರೆ. ಪಂಜಾಬ್‌ನಲ್ಲಿ ಶೇ. 36ರಷ್ಟು ಹಿಂದೂಗಳಿದ್ದು, ರೈತರ ಬೆಂಬಲವೂ ನಮಗೆ ಸಿಗಲಿದೆ. ಹೀಗಾಗಿ ನಾವು ಕಾಂಗ್ರೆಸ್‌ ಪಕ್ಷಕ್ಕಿಂತ ಹೆಚ್ಚಿನ ಸ್ಥಾನಗಳನ್ನು ಮುಂದಿನ ಚುನಾವಣೆಯಲ್ಲಿ ಗೆಲ್ಲಲಿದ್ದೇವೆ ಎಂಬುದು ಅಮರೀಂದರ್‌ ಅವರ ಯೋಜನೆ.