ಮುಂಬೈ: ಔಪಚಾರಿಕ ಪಂದ್ಯದಲ್ಲಿ ಪಂಜಾಬ್ ಪರ ಕೊನೆಯ ಲೀಗ್ ಪಂದ್ಯದಲ್ಲಿ ಲಿಯಾಮ್ ಲಿವಿಂಗ್‍ಸ್ಟೋನ್ ಮತ್ತೆ ಬ್ಯಾಟಿಂಗ್‍ನಲ್ಲಿ ಮಿಂಚಿ ತಂಡಕ್ಕೆ 5 ವಿಕೆಟ್‍ಗಳ ಗೆಲುವು ತಂದುಕೊಟ್ಟಿದ್ದಾರೆ. ಈ ಮೂಲಕ ಗೆಲುವಿನೊಂದಿಗೆ ಪಂಜಾಬ್ ತಂಡ ಟೂರ್ನಿಗೆ ಅಂತ್ಯವಾಡಿದೆ.
ಟೂರ್ನಿಯುದ್ದಕ್ಕೂ ಪಂಜಾಬ್ ಪರ ಬ್ಯಾಟಿಂಗ್‍ನಲ್ಲಿ ಶೈನ್ ಆದ ಲಿವಿಂಗ್‍ಸ್ಟೋನ್ ಕೊನೆಯ ಲೀಗ್ ಪಂದ್ಯದಲ್ಲಿ ಅಜೇಯ 49 ರನ್ (22 ಎಸೆತ, 2 ಬೌಂಡರಿ, 5 ಸಿಕ್ಸ್) ಚಚ್ಚಿ ಅಬ್ಬರಿಸಿದ ಪರಿಣಾಮ ಹೈದರಾಬಾದ್ ನೀಡಿದ 158 ರನ್‍ಗಳ ಟಾರ್ಗೆಟ್ ಉಡೀಸ್ ಆಯಿತು. ಬ್ಯಾಟಿಂಗ್ ಮತ್ತು ಬೌಲಿಂಗ್‍ನಲ್ಲಿ ಉತ್ತಮ ಪ್ರದರ್ಶನ ತೋರಿದ ಪಂಜಾಬ್ ತಂಡ 15.1 ಓವರ್‌ಗಳ ಅಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 160 ರನ್ ಬಾರಿಸಿ ಇನ್ನೂ 29 ಎಸೆತ ಬಾಕಿ ಇರುವಂತೆ 5 ವಿಕೆಟ್ಗಳ ಭರ್ಜರಿ ಜಯ ದಾಖಲಿಸಿತು.
ಈ ಜಯದೊಂದಿಗೆ ಪಂಜಾಬ್ ತಂಡ ಅಂಕಪಟ್ಟಿಯಲ್ಲಿ 6 ಸ್ಥಾನಕ್ಕೆ ತೃಪಿಪಟ್ಟರೆ, ಹೈದರಾಬಾದ್ ತಂಡವನ್ನು ಸೋಲಿಸಿ 8ನೇ ಸ್ಥಾನಕ್ಕೆ ಇಳಿಸಿ ಟೂರ್ನಿಯಿಂದ ಹೊರದಬ್ಬಿದೆ.
ಈ ಮೊದಲು ಪಂದ್ಯದ ಟಾಸ್ ಗೆದ್ದ ಹೈದರಾಬಾದ್ ತಂಡದ ಹಂಗಾಮಿ ನಾಯಕ ಭುವನೇಶ್ವರ್ ಕುಮಾರ್ ಮೊದಲು ಬ್ಯಾಟಿಂಗ್ ಮಾಡುವ ಮನಸ್ಸು ಮಾಡಿದರು. ಇತ್ತ ಬ್ಯಾಟಿಂಗ್ ಆಗಮಿಸುತ್ತಿದ್ದಂತೆ ಹೈದರಾಬಾದ್ ಆರಂಭಿಕ ಆಟಗಾರ ಪ್ರಿಯಾಂ ಗಾರ್ಗ್ 4 ರನ್‍ಗಳಿಸಿ ಪೆವಿಲಿಯನ್ ಸೇರಿಕೊಂಡರು.
ಆ ಬಳಿಕ ಒಂದಾದ ಅಭಿಷೇಕ್ ಶರ್ಮಾ ಮತ್ತು ರಾಹುಲ್ ತ್ರಿಪಾಠಿ ಕೆಲಕಾಲ ಪಂಜಾಬ್ ಬೌಲರ್‌ಗಳಿಗೆ ಪ್ರತಿರೋಧ ಒಡ್ಡಿದರು. ಆದರೆ ತ್ರಿಪಾಠಿ ಆಟ 20 ರನ್ (18 ಎಸೆತ, 1 ಬೌಂಡರಿ, 1 ಸಿಕ್ಸ್) ಸಿಡಿಸಿ ಅಂತ್ಯವಾಯಿತು. ಇತ್ತ ಉತ್ತಮವಾಗಿ ಬ್ಯಾಟಿಂಗ್ ಮಾಡುತ್ತಿದ್ದ ಅಭಿಷೇಕ್ ಶರ್ಮಾ 43 ರನ್ (32 ಎಸೆತ, 5 ಬೌಂಡರಿ, 2 ಸಿಕ್ಸ್) ಚಚ್ಚಿ ಹೊರನಡೆದರು. ಆ ಬಳಿಕ ಬಂದ ಮಾರ್ಕ್ರಾಮ್ ಕೂಡ 21 ರನ್ (17 ಎಸೆತ, 2 ಬೌಂಡರಿ) ಬಾರಿಸಿ ಔಟ್ ಆದರು.
ನಾಥನ್ ಎಲ್ಲಿಸ್, ಹರ್‌ಪ್ರೀತ್ ಮಾರಕ ದಾಳಿ:
ಸ್ಲಾಗ್ ಓವರ್‌ಗಳಲ್ಲಿ ವಾಷಿಂಗ್ಟನ್ ಸುಂದರ್ 25 ರನ್ (19 ಎಸೆತ, 3 ಬೌಂಡರಿ, 1 ಸಿಕ್ಸ್) ಮತ್ತು ರೊಮಾರಿಯೋ ಶೆಫರ್ಡ್ ಅಜೇಯ 26 ರನ್ (15 ಎಸೆತ, 2 ಬೌಂಡರಿ, 2 ಸಿಕ್ಸ್) ಬಾರಿಸಿದ ನೆರವಿನಿಂದ ಒಟ್ಟು 8 ವಿಕೆಟ್ ಕಳೆದುಕೊಂಡು 157 ರನ್ ಪೇರಿಸಿತು. ಪಂಜಾಬ್ ಬೌಲರ್‌ಗಳಾದ ನಾಥನ್ ಎಲ್ಲಿಸ್ ಮತ್ತು ಹರ್‌ಪ್ರೀತ್ ಮಾರಕ ದಾಳಿ ಸಂಘಟಿಸಿ ತಲಾ 3 ವಿಕೆಟ್ ಪಡೆದು ಮಿಂಚಿದರು.
ಮುಂಬೈ: ಪ್ಲೇ ಆಫ್‍ಗೇರಲು ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಉತ್ತಮ ನಿರ್ವಹಣೆ ತೋರಿದ ಡೆಲ್ಲಿ ತಂಡ ಪಂಜಾಬ್ ವಿರುದ್ಧ 17 ರನ್ಗಳ ಅಂತರದ ಗೆಲುವು ದಾಖಲಿಸಿತು. ಈ ಮೂಲಕ ಡೆಲ್ಲಿ ಪ್ಲೇ ಆಫ್ ಕನಸನ್ನು ಜೀವಂತವಾಗಿರಿಸಿಕೊಂಡರೆ, ಇತ್ತ ಪಂಜಾಬ್ ಈ ಸೋಲಿನೊಂದಿಗೆ ಬಹತೇಕ ಟೂರ್ನಿಯಿಂದ ಹೊರಬಿದ್ದಿದೆ.
ಡೆಲ್ಲಿ ನೀಡಿದ 160 ರನ್‍ಗಳ ಗುರಿಯನ್ನು ಬೆನ್ನಟ್ಟಿದ ಪಂಜಾಬ್ ತಂಡದ ಗೆಲುವಿಗಾಗಿ ಜಿತೇಶ್ ಶರ್ಮಾ ಮತ್ತು ರಾಹುಲ್ ಚಾಹರ್ ಹೋರಾಟ ನಡೆಸಿದರು. ಕೊನೆಯಲ್ಲಿ ಡೆಲ್ಲಿ ಬೌಲರ್‌ಗಳ ವೇಗಕ್ಕೆ ಥಂಡಾ ಹೂಡಿದ ಪಂಜಾಬ್ 20 ಓವರ್‌ಗಳಲ್ಲಿ 9 ವಿಕೆಟ್ ಕಳೆದುಕೊಂಡು 142 ರನ್ ಸಿಡಿಸಲಷ್ಟೇ ಶಕ್ತವಾಗಿ ಸೋಲೊಪ್ಪಿಕೊಂಡಿತು.
ಅಲ್ಪಮೊತ್ತವನ್ನು ಬೆನ್ನಟ್ಟುವ ವಿಶ್ವಾಸದಲ್ಲಿ ಕಣಕ್ಕಿಳಿದ ಪಂಜಾಬ್‍ನ ಆರಂಭಿಕ ಆಟಗಾರರಾದ ಜಾನಿ ಬೈರ್‌ಸ್ಟೋವ್ ಮತ್ತು ಶಿಖರ್ ಧವನ್ ಉತ್ತಮ ಆರಂಭ ನೀಡುವಲ್ಲಿ ವಿಫಲರಾದರು. ಬೈರ್‌ಸ್ಟೋವ್ ಸಿಡಿಯುವ ಸೂಚನೆ ನೀಡಿ 28 ರನ್ (15 ಎಸೆತ, 4 ಬೌಂಡರಿ, 1 ಸಿಕ್ಸ್) ಬಾರಿಸಿ ವಿಕೆಟ್ ಕೈಚೆಲ್ಲಿಕೊಂಡರು. ಆ ಬಳಿಕ ವಿಕೆಟ್ ಒಂದರ ಹಿಂದೆ ಒಂದು ಬೀಳತೊಡಗಿತು. ಈ ನಡುವೆ ಉತ್ತಮವಾಗಿ ಬ್ಯಾಟ್‍ಬೀಸುತ್ತಿದ್ದ ಧವನ್ 19 ರನ್ (16 ಎಸೆತ, 3 ಬೌಂಡರಿ) ವಿಕೆಟ್ ಕಳೆದುಕೊಂಡರು. ಆ ಬಳಿಕ ಡೆಲ್ಲಿ ಚೇತರಿಸಿಕೊಳ್ಳಲಿಲ್ಲ.
ಈ ಮೊದಲು ಟಾಸ್ ಗೆದ್ದ ಪಂಜಾಬ್ ಎದುರಾಳಿ ತಂಡವನ್ನು ಬ್ಯಾಟಿಂಗ್‍ಗೆ ಆಹ್ವಾನಿಸಿತು. ಡೆಲ್ಲಿ ಆರಂಭಿಕ ಆಟಗಾರ ಡೇವಿಡ್ ವಾರ್ನರ್ ಶೂನ್ಯ ಸುತ್ತಿ ನಿರಾಸೆ ಮೂಡಿಸಿದರು. ಇನ್ನೋರ್ವ ಆರಂಭಿಕ ಆಟಗಾರ ಸರ್ಫರಾಜ್ ಖಾನ್ ಸ್ಫೋಟಕ 32 ರನ್ (16 ಎಸೆತ, 5 ಬೌಂಡರಿ, 1 ಸಿಕ್ಸ್) ಚಚ್ಚಿ ಔಟ್ ಆದರು.
ಇನ್ನೊಂದೆಡೆ ಮಿಚೆಲ್ ಮಾರ್ಷ್ ಡೆಲ್ಲಿ ರನ್ ಏರಿಸುವ ಹೊಣೆ ಹೊತ್ತರು. ಇವರಿಗೆ ಕೆಲ ಹೊತ್ತು ಲಲಿತ್ ಯಾದವ್ 24 ರನ್ (21 ಎಸೆತ, 1 ಬೌಂಡರಿ, 1 ಸಿಕ್ಸ್) ಬಾರಿಸಿ ಔಟ್ ಆದರು. ಆ ಬಳಿಕ ಪಟಪಟನೇ ವಿಕೆಟ್ ಕಳೆದುಕೊಂಡು ಸಾಗಿದ ಡೆಲ್ಲಿಗೆ ಮಾರ್ಷ್ ಮಾತ್ರ ಏಕಾಂಗಿ ಹೋರಾಟ ನಡೆಸಿ ಅರ್ಧಶತಕ ಸಿಡಿಸಿ ಮಿಂಚಿದರು.
ಪಂಜಾಬ್ ಬೌಲರ್‌ಗಳಿಗೆ ಕಾಡಿದ ಮಾರ್ಷ್ 63 ರನ್ (48 ಎಸೆತ, 4 ಬೌಂಡರಿ, 3 ಸಿಕ್ಸ್) ಬಾರಿಸಿ ವಿಕೆಟ್ ಕಳೆದುಕೊಂಡರು. ಕೊನೆಯಲ್ಲಿ ಅಕ್ಷರ್ ಪಟೇಲ್ ಅಜೇಯ 17 ರನ್ (20 ಎಸೆತ, 2 ಬೌಂಡರಿ) ಸಿಡಿಸಿ ತಂಡದ ಮೊತ್ತವನ್ನು 150ರ ಗಡಿದಾಟಿಸಿದರು.
ಅಂತಿಮವಾಗಿ ಡೆಲ್ಲಿ 7 ವಿಕೆಟ್ ಕಳೆದುಕೊಂಡು 159 ರನ್ ಒಟ್ಟುಗೂಡಿಸಿತು. ಪಂಜಾಬ್ ಪರ ಲಿವಿಂಗ್‍ಸ್ಟೋನ್ ಮತ್ತು ಅರ್ಷದೀಪ್ ಸಿಂಗ್ ತಲಾ 3 ವಿಕೆಟ್ ಕಿತ್ತು ಡೆಲ್ಲಿ ರನ್ ಓಟಕ್ಕೆ ಬ್ರೇಕ್ ಹಾಕಿದರು.
ಮುಂಬೈ: ಆರ್‌ಸಿಬಿ ಬೌಲರ್‌ಗಳನ್ನು ಚೆಂಡಾಡಿದ ಜಾನಿ ಬೈರ್‌ಸ್ಟೋವ್, ಲಿಯಾಮ್ ಲಿವಿಂಗ್‌ಸ್ಟೋನ್ ಬ್ಯಾಟಿಂಗ್ ಮೋಡಿಯ ಮುಂದೆ ಆರ್‌ಸಿಬಿ ಕಂಗಾಲಾಗಿ 54 ಗಳಿಂದ ಸೋಲುಂಡಿದೆ.
ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಆರ್‌ಸಿಬಿ 210 ರನ್‍ಗಳ ಕಠಿಣ ಗುರಿ ನೀಡಿದ ಪಂಜಾಬ್ ನಂತರ ಬೌಲಿಂಗ್‍ನಲ್ಲೂ ಆರ್‌ಸಿಬಿ ಬ್ಯಾಟ್ಸ್‌ಮ್ಯಾನ್‌ಗಳನ್ನು 20 ಓವರ್‌ಗಳಲ್ಲಿ 155 ರನ್‌ಗಳಿಗೆ ಕಟ್ಟಿ ಹಾಕುವಲ್ಲಿ ಯಶಸ್ವಿಯಾಯಿತು. ಅಂತಿಮವಾಗಿ ಆರ್‌ಸಿಬಿ ವಿರುದ್ಧ 54 ರನ್ಗಳ ಅಂತರದ ಗೆಲುವಿನೊಂದಿಗೆ ಪಂಜಾಬ್ ಪ್ಲೇ ಆಫ್ ಆಸೆಯನ್ನು ಜೀವಂತವಾಗಿರಿಸಿದೆ. ಇತ್ತ ಆರ್‌ಸಿಬಿ ಪ್ಲೇ ಆಫ್ ಹಾದಿ ಮತ್ತಷ್ಟು ಕಠಿಣ ಗೊಂಡಿದೆ.
ಪಂಜಾಬ್ ನೀಡಿದ ಬೃಹತ್ ಮೊತ್ತ ಬೆನ್ನಟ್ಟುವಲ್ಲಿ ಆರಂಭದಲ್ಲೇ ಎಡವಿದ ಆರ್‌ಸಿಬಿ ತಂಡ ವಿರಾಟ್ ಕೊಹ್ಲಿ 20 ರನ್ (14 ಎಸೆತ, 2 ಬೌಂಡರಿ, 1 ಸಿಕ್ಸ್) ಮತ್ತು ಡು ಫ್ಲೆಸಿಸ್ 10 ರನ್ (8 ಎಸೆತ, 2 ಬೌಂಡರಿ) ಸಿಡಿಸಿ ಪಂಜಾಬ್ ಬೌಲರ್‌ಗಳ ಮುಂದೆ ಮಂಡಿಯೂರಿದರು.
ನಂತರ ಜೊತೆಯಾದ ರಜತ್ ಪಾಟಿದಾರ್ ಮತ್ತು ಮ್ಯಾಕ್ಸ್‌ವೆಲ್ ಮೂರನೇ ವಿಕೆಟ್‍ಗೆ ವೇಗದ 64 ರನ್ (37 ಎಸೆತ) ಜೊತೆಯಾಟವಾಡಿ ತಂಡಕ್ಕೆ ಚೇತರಿಕೆ ನೀಡಿದರು. ಪಾಟಿದರ್ 26 ರನ್ (21 ಎಸೆತ, 1 ಬೌಂಡರಿ, 2 ಸಿಕ್ಸ್) ಮತ್ತು ಮ್ಯಾಕ್ಸ್‌ವೆಲ್ 35 ರನ್ (22 ಎಸೆತ, 3 ಬೌಂಡರಿ, 1 ಸಿಕ್ಸ್) ಸಿಡಿಸಿ ಔಟ್ ಆಗುವುದರೊಂದಿಗೆ ವೇಗ ಪಡೆದಿದ್ದ ಆರ್‌ಸಿಬಿ ಚೇಸಿಂಗ್ ಮಂಕಾಯಿತು. ಆ ಬಳಿಕ ಬಂದ ದಿನೇಶ್ ಕಾರ್ತಿಕ್ 11 ರನ್ (11 ಎಸೆತ, 1 ಬೌಂಡರಿ) ಬಾರಿಸಿ ಔಟ್ ಆಗುವುದರೊಂದಿಗೆ ಗೆಲುವಿನ ಆಸೆ ಕಮರಿತು.
ಟಾಸ್ ಗೆದ್ದ ಬೆಂಗಳೂರು ಪಂಜಾಬ್ ತಂಡವನ್ನು ಬ್ಯಾಟಿಂಗ್‍ಗೆ ಆಹ್ವಾನಿಸಿ ಕೈಸುಟ್ಟುಕೊಂಡಿತು. ಆರಂಭದಿಂದಲೇ ಆರ್‌ಸಿಬಿ ಬೌಲರ್‌ಗಳ ಮೇಲೆ ಸವಾರಿ ನಡೆಸಿದ ಪಂಜಾಬ್‍ನ ಆರಂಭಿಕ ಜೋಡಿ ಮೊದಲ ವಿಕೆಟ್‍ಗೆ 60 ರನ್ (30 ಎಸೆತ) ಚಚ್ಚಿ ಉತ್ತಮ ಜೊತೆಯಾಟವಾಡಿತು.
ಬೈರ್‌ಸ್ಟೋವ್, ಲಿವಿಂಗ್‌ಸ್ಟೋನ್ ಅಬ್ಬರ
ಜಾನಿ ಬೈರ್‌ಸ್ಟೋವ್ ಬೌಂಡರಿ, ಸಿಕ್ಸರ್‌ಗಳ ಸುರಿಮಳೆ ಸುರಿಸಿದರೆ, ಶಿಖರ್ ಧವನ್ 21 ರನ್ (15 ಎಸೆತ, 2 ಬೌಂಡರಿ, 1 ಸಿಕ್ಸ್) ಸಿಡಿಸಿ ಮ್ಯಾಕ್ಸ್‌ವೆಲ್ ಬೌಲಿಂಗ್‍ನಲ್ಲಿ ವಿಕೆಟ್ ಕೈಚೆಲ್ಲಿಕೊಂಡರು. ನಂತರ ಬೈರ್‌ಸ್ಟೋವ್ ಜೊತೆಯಾದ ಲಿವಿಂಗ್‌ಸ್ಟೋನ್ ನಿಧಾನವಾಗಿ ಅಬ್ಬರಿಸಲು ಆರಂಭಿಸಿದರು. ಆದರೆ ಇತ್ತ ಬೈರ್‌ಸ್ಟೋವ್ 66 ರನ್ (29 ಎಸೆತ, 4 ಬೌಂಡರಿ, 7 ಸಿಕ್ಸ್) ಚಚ್ಚಿ ದೊಡ್ಡ ಹೊಡೆತಕ್ಕೆ ಕೈ ಹಾಕಿ ಔಟ್ ಆದರು.
ಅಕ್ಷರ್ ಪಟೇಲ್ ಮ್ಯಾಜಿಕ್ ಬೌಲಿಂಗ್
ಬೈರ್‌ಸ್ಟೋವ್ ವಿಕೆಟ್ ಕಳೆದುಕೊಂಡ ಬಳಿಕ ಅಕ್ಷರ್ ಪಟೇಲ್ ದಾಳಿಗೆ ಪಂಜಾಬ್ ಕುಸಿತಕ್ಕೊಳಗಾಯಿತು. ಆದರೆ ಇನ್ನೊಂದು ಕಡೆ ಲಿವಿಂಗ್‌ಸ್ಟೋನ್ ಆರ್‌ಸಿಬಿ ಬೌಲರ್‌ಗಳ ಚಳಿ ಬಿಡಿಸಿದರು. ಮೈದಾನ ಅಷ್ಟ ದಿಕ್ಕುಗಳಿಗೂ ಬೌಂಡರಿ, ಸಿಕ್ಸರ್‌ಗಳ ಮೂಲಕ ಬಾಲ್ ಪರಿಚಯಿಸಿದರು. ಕೊನೆಗೆ ಅವರ ಅಬ್ಬರದಾಟ 70 ರನ್ (42 ಎಸೆತ, 5 ಬೌಂಡರಿ, 4 ಸಿಕ್ಸ್)ಗೆ ಕೊನೆಗೊಳಿಸುವಲ್ಲಿ ಅಕ್ಷರ್ ಪಟೇಲ್ ಯಶಸ್ವಿಯಾದರು.
ಅಷ್ಟೊತ್ತಿಗಾಗಲೇ ಪಂಜಾಬ್ ತಂಡ 200ರ ಗಡಿದಾಟಿತ್ತು. ಅಂತಿಮವಾಗಿ ಪಂಜಾಬ್ 9 ವಿಕೆಟ್ ನಷ್ಟಕ್ಕೆ 209 ರನ್‍ಗಳ ಬೃಹತ್ ಮೊತ್ತ ಪೇರಿಸಿತು. ಆರ್‌ಸಿಬಿ ಪರ ಬೌಲಿಂಗ್‍ನಲ್ಲಿ ಹರ್ಷಲ್ ಪಟೇಲ್ 4 ವಿಕೆಟ್ ಕಿತ್ತು ಮಿಂಚಿದರು.
ರನ್ ಏರಿದ್ದು ಹೇಗೆ?
50 ರನ್ 23 ಎಸೆತ
100 ರನ್ 54 ಎಸೆತ
150 ರನ್ 88 ಎಸೆತ
200 ರನ್ 114 ಎಸೆತ
209 ರನ್ 120 ಎಸೆತ
ಮುಂಬೈ: ಶನಿವಾರ ನಡೆದ ಪಂದ್ಯದಲ್ಲಿ ಯಶಸ್ವಿ ಜೈಸ್ವಾಲ್ ಬ್ಯಾಟಿಂಗ್ ಆರ್ಭಟ ಮತ್ತು ಯಜುವೇಂದ್ರ ಚಾಹಲ್ ಬೌಲಿಂಗ್ ಮೋಡಿಗೆ ರಾಜಸ್ಥಾನ್ ರಾಯಲ್ಸ್ ತಂಡವು ಆರು ವಿಕೆಟ್‍ಗಳ ಅಂತರದಿಂದ ಜಯಭೇರಿ ಸಾಧಿಸಿದೆ.
ಗೆಲುವಿನ ಹಾದಿಗೆ ಮರಳಿರುವ ರಾಜಸ್ಥಾನ್, ಪ್ಲೇ-ಆಫ್‍ನತ್ತ ದಿಟ್ಟ ಹೆಜ್ಜೆಯನ್ನಿಟ್ಟಿದ್ದು, ಮಯಂಕ್ ಅಗರವಾಲ್ ಪಡೆಯ ಪ್ಲೇ-ಆಫ್ ಹಾದಿ ಇನ್ನಷ್ಟೂ ಕಠಿಣವಾಗಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದ್ದ ಪಂಜಾಬ್ ತಂಡವು ಜಾನಿ ಬೆಸ್ಟೊನ ಆಕರ್ಷಕ ಅರ್ಧಶತಕದ ನೆರವಿನಿಂದ (56) ತಂಡವು ಐದು ವಿಕೆಟ್ ನಷ್ಟಕ್ಕೆ 189 ರನ್‍ಗಳ ಗುರಿ ನೀಡಿತ್ತು.
ರಾಜಸ್ಥಾನ್ ಪರ ಚಾಹಲ್ ಸ್ಪಿನ್ ಮೋಡಿ ಮಾಡಿ ಮೂರು ವಿಕೆಟ್ ಕಬಳಿಸುವ ಮೂಲಕ ಪಂಜಾಬ್‍ನ ಬ್ಯಾಟಿಂಗ್ ಕ್ರಮಾಂಕವನ್ನು ಕಟ್ಟಿ ಹಾಕಿದರು. ನಂತರದಲ್ಲಿ ಮಯಂಕ್ ಪಡೆ ನೀಡಿದ್ದ 190 ರನ್‍ಗಳ ಗುರಿ ಬೆನ್ನಟ್ಟಿದ ರಾಜಸ್ಥಾನ್, ಜೈಸ್ವಾಲ್‍ನ ಅರ್ಧಶತಕದ ನೆರವಿನಿಂದ ಇನ್ನೂ ಎರಡು ಎಸೆತಗಳು ಬಾಕಿ ಉಳಿದಿರುವಂತೆಯೇ 19.4 ಓವರ್‍ಗಳಲ್ಲಿ ನಾಲ್ಕು ವಿಕೆಟ್ ನಷ್ಟಕ್ಕೆ ಗೆಲುವು ಸಾಧಿಸಿತು.
ಇದರೊಂದಿಗೆ ರಾಜಸ್ಥಾನ ಆಡಿರುವ 11 ಪಂದ್ಯಗಳಲ್ಲಿ ಏಳನೇ ಗೆಲುವಿನೊಂದಿಗೆ ಒಟ್ಟು 14 ಅಂಕ ಸಂಪಾದಿಸಿರುವ ರಾಜಸ್ಥಾನ್, ಅಂಕಪಟ್ಟಿಯಲ್ಲಿ ಮೂರನೇ ಸ್ಥಾನವನ್ನು ಕಾಯ್ದುಕೊಂಡಿದೆ. ಪಂಜಾಬ್ 11 ಪಂದ್ಯಗಳಲ್ಲಿ ಆರನೇ ಸೋಲಿನ ಕಹಿಯುಂಡಿದ್ದು, ಏಳನೇ ಸ್ಥಾನದಲ್ಲಿದೆ.
ರಾಜಸ್ಥಾನ್‍ನ ಆರಂಭಿಕ ಬ್ಯಾಟ್ಸ್‍ಮನ್‍ಗಳಾದ ಜೋಸ್ ಬಟ್ಲರ್ ಹಾಗೂ ಯಶಸ್ವಿ ಜೈಸ್ವಾಲ್ ಬಿರುಸಿನ ಆಟವಾಡಿ ನಾಲ್ಕು ಓವರ್‍ಗಳಲ್ಲೇ 46 ರನ್ ಪೇರಿಸಿ ಗೆಲುವಿಗೆ ಬುನಾದಿ ಹಾಕಿಕೊಟ್ಟರು.
ನಾಲ್ಕನೇ ಓವರ್‍ನಲ್ಲಿ ರಬಾಡ ಬೌಲಿಂಗ್‍ಗೆ ಮೂರು ಬೌಂಡರಿ ಹಾಗೂ ಒಂದು ಸಿಕ್ಸರ್ ಸಿಡಿಸಿ ಬಟ್ಲರ್ ಅಬ್ಬರಿಸಿದರು. ಅದೇ ಓವರ್‍ನ ಕೊನೆಯ ಎಸೆತದಲ್ಲಿ ರಬಾಡಾಗೆ ವಿಕೆಟ್ ಒಪ್ಪಿಸಿದರು. ಒಟ್ಟು 16 ಎಸೆತಗಳನ್ನು ಎದುರಿಸಿದ ಬಟ್ಲರ್ ಐದು ಬೌಂಡರಿ ಹಾಗೂ ಒಂದು ಸಿಕ್ಸರ್‍ನೊಂದಿಗೆ 30 ರನ್ ಗಳಿಸಿದರು. ಈ ಮೂಲಕ ಪ್ರಸಕ್ತ ಸಾಲಿನ ಐಪಿಎಲ್‍ನಲ್ಲಿ 600 ರನ್ ಸಾಧನೆ ಮಾಡಿದರು.
ಪವರ್ ಪ್ಲೇ ಅಂತ್ಯಕ್ಕೆ ರಾಜಸ್ಥಾನ್ ಒಂದು ವಿಕೆಟ್ ನಷ್ಟಕ್ಕೆ 67 ರನ್ ಗಳಿಸಿತ್ತು. ನಾಯಕ ಸಂಜು ಸ್ಯಾಮ್ಸನ್ 23 ರನ್‍ಗಳ (12 ಎಸೆತ, 4 ಬೌಂಡರಿ) ಕಾಣಿಕೆ ನೀಡಿದರು. ನಂತರದಲ್ಲಿ ಜೊತೆಯಾದ ಯಶಸ್ವಿ ಜೈಸ್ವಾಲ್ ಹಾಗೂ ದೇವದತ್ತ ಪಡಿಕ್ಕಲ್ ಮೂರನೇ ವಿಕೆಟ್‍ಗೆ ಮಹತ್ವದ 50 ರನ್‍ಗಳ ಜೊತೆಯಾಟವನ್ನಾಡಿ ಗೆಲುವಿಗೆ ಭದ್ರ ಬುನಾದಿ ಹಾಕಿಕೊಟ್ಟರು. ಆಕರ್ಷಕ ಬ್ಯಾಟಿಂಗ್ ಮೂಲಕ ಜೈಸ್ವಾಲ್, ಕೇವಲ 33 ಎಸೆತಗಳಲ್ಲಿ ಫಿಫ್ಟಿ ಬಾರಿಸಿದರು. ಈ ಮೂಲಕ ತಮ್ಮ ಸಾಮಥ್ರ್ಯವನ್ನು ಸಾಬೀತು ಮಾಡಿದರು.
41 ಎಸೆತಗಳನ್ನು ಎದುರಿಸಿದ ಜೈಸ್ವಾಲ್ 68 ರನ್ ಗಳಿಸಿದರು. ಅವರ ಈ ಬಿರುಸಿನ ಇನ್ನಿಂಗ್ಸ್‍ನಲ್ಲಿ ಒಂಬತ್ತು ಬೌಂಡರಿ ಹಾಗೂ ಎರಡು ಸಿಕ್ಸರ್ ಸೇರಿದ್ದವು. ಅಂತಿಮ 30 ಎಸೆತಗಳಲ್ಲಿ ರಾಜಸ್ಥಾನ್ ಗೆಲುವಿಗೆ 47 ರನ್ ಬೇಕಾಗಿತ್ತು. ಈ ವೇಳೆ ಬಿರುಸಿನ ಆಟವಾಡಿದ ಶಿಮ್ರಾನ್ ಹೆಟ್ಮೆಯರ್ ಆರ್‍ಆರ್‍ಗೆ ಅರ್ಹ ಗೆಲುವು ಒದಗಿಸಿಕೊಡಲು ನೆರವಾದರು. ಅವರಿಗೆ ದೇವದತ್ತ ಪಡಿಕ್ಕಲ್ ತಕ್ಕ ಸಾಥ್ ಕೊಟ್ಟರು.
ಅಂತಿಮವಾಗಿ ನಾಲ್ಕು ವಿಕೆಟ್ ನಷ್ಟಕ್ಕೆ ಗುರಿ ತಲುಪಿತು. ಕೇವಲ 16 ಎಸೆತಗಳನ್ನು ಎದುರಿಸಿದ ಹೆಟ್ಮೆಯರ್ 31 ರನ್ (3 ಬೌಂಡರಿ, 2 ಸಿಕ್ಸರ್) ಗಳಿಸಿ ಔಟಾಗದೆ ಉಳಿದರು. ಪಡಿಕ್ಕಲ್ 32 ಎಸೆತಗಳಲ್ಲಿ 31 ರನ್ ಗಳಿಸಿದರು. ಪಂಜಾಬ್ ಪರ ಅರ್ಶದೀಪ್ ಎರಡು ವಿಕೆಟ್ ಗಳಿಸಿದರು.
ಈ ಮೊದಲು ಜಾನಿ ಬೆಸ್ಟೊನ ಆಕರ್ಷಕ ಅರ್ಧಶತಕದ ನೆರವಿನಿಂದ (56) ಪಂಜಾಬ್ ಕಿಂಗ್ಸ್ ತಂಡವು ಐದು ವಿಕೆಟ್ ನಷ್ಟಕ್ಕೆ 189 ರನ್ ಗಳಿಸಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಪಂಜಾಬ್ ಉತ್ತಮ ಆರಂಭವನ್ನು ಪಡೆದುಕೊಂಡಿತ್ತು. ಜಾನಿ ಬಿರುಸಿನ ಆಟವಾಡುವ ಮೂಲಕ ಎಲ್ಲರ ಗಮನ ಸೆಳೆದರು. ಅಲ್ಲದೆ ಮೊದಲ ವಿಕೆಟ್‍ಗೆ ಶಿಖರ್ ಧವನ್ ಜೊತೆಗೆ 5.1 ಓವರ್‍ಗಳಲ್ಲಿ 47 ರನ್‍ಗಳ ಜೊತೆಯಾಟದಲ್ಲಿ ಭಾಗಿಯಾದರು. ಧವನ್ 12 ರನ್ ಗಳಿಸಿ ಔಟ್ ಆದರು. ಭಾನುಕ ರಾಜಪಕ್ಸ 27 ರನ್‍ಗಳ (18 ಎಸೆತ, 2 ಬೌಂಡರಿ, 2 ಸಿಕ್ಸರ್) ಹೊಡೆದಿದ್ದು ಯಜುವೇಂದ್ರ ಚಾಹಲ್‍ಗೆ ತಮ್ಮ ವಿಕೆಟ್ ಒಪ್ಪಿಸಿ ಪೆವಿಲಿಯನ್ ಹಾದಿ ಹಿಡಿದರು. 15ನೇ ಓವರ್‍ನಲ್ಲಿ ನಾಯಕ ಮಯಂಕ್ ಅಗರವಾಲ್ (15) ಹಾಗೂ ಬೆಸ್ಟೊ ವಿಕೆಟ್ ಗಳಿಸಿದ ಚಾಹಲ್ ಡಬಲ್ ಆಘಾತ ನೀಡಿದರು. 40 ಎಸೆತಗಳನ್ನು ಎದುರಿಸಿದ ಬೆಸ್ಟೊ ಎಂಟು ಬೌಂಡರಿ ಹಾಗೂ ಒಂದು ಸಿಕ್ಸರ್ ನೆರವಿನಿಂದ 56 ರನ್ ಗಳಿಸಿದರು.
ಕೊನೆಯ ಹಂತದಲ್ಲಿ ಜಿತೇಶ್ ಶರ್ಮಾ ಹಾಗೂ ಲಿಯಾಮ್ ಲಿವಿಂಗ್‍ಸ್ಟೋನ್ ಅರ್ಧಶತಕದ ಜೊತೆಯಾಟ ಕಟ್ಟುವ ಮೂಲಕ ಪಂಜಾಬ್ ಸವಾಲಿನ ಮೊತ್ತವನ್ನು ಪೇರಿಸಲು ನೆರವಾದರು. ಈ ಮೂಲಕ ಪಂಜಾಬ್ ಐದು ವಿಕೆಟ್ ನಷ್ಟಕ್ಕೆ 189 ರನ್ ಗಳಿಸಿತು. 18 ಎಸೆತಗಳನ್ನು ಎದುರಿಸಿದ ಜಿತೇಶ್ 38 ರನ್ (18 ಎಸೆತ, 4 ಬೌಂಡರಿ, 2 ಸಿಕ್ಸರ್) ಗಳಿಸಿ ಔಟಾಗದೆ ಉಳಿದರು. ಮತ್ತೊಂದೆಡೆ ಲಿವಿಂಗ್‍ಸ್ಟೋನ್ 22 ರನ್ (14 ಎಸೆತ, 2 ಸಿಕ್ಸರ್) ಗಳಿಸಿದರು.
ಮುಂಬೈ: ಪಂಜಾಬ್ ಕಿಂಗ್ಸ್‌ನ ಕಗಿಸೊ ರಬಾಡ ಬೌಲಿಂಗ್ ಮೋಡಿ ಹಾಗೂ ಶಿಖರ್ ಧವನ್ ಬ್ಯಾಟಿಂಗ್ ಆರ್ಭಟಕ್ಕೆ ಗುಜರಾತ್ ಟೈಟಾನ್ಸ್ ಹೀನಾಯ ಸೋಲನುಭವಿಸಿತು. ಈ ಬಾರಿಯ ಐಪಿಎಲ್‌ನಲ್ಲಿ ಸತತ ಗೆಲುವಿನ ಮೂಲಕ ಅಶ್ವಮೇಧ ಯಾಗವನ್ನೇ ಮಾಡುತ್ತಾ ಬಂದಿರುವ ಗುಜರಾತ್ ಟೈಟಾನ್ಸ್ ಮಂಗಳವಾರದ ಪಂದ್ಯದಲ್ಲಿ ಎರಡನೇ ಬಾರಿ ಮುಖಭಂಗ ಅನುಭವಿಸಿತು.
ಮುಂಬೈನ ಇಲ್ಲಿನ ಡಿ.ವೈ.ಪಾಟೀಲ್ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಮೊದಲು ಬ್ಯಾಟಿಂಗ್ ಆಯ್ದುಕೊಂಡರೂ ಉತ್ತಮ ಪ್ರದರ್ಶನ ನೀಡುವಲ್ಲಿ ವಿಫಲವಾಯಿತು. ಆರಂಭಿಕ ಬ್ಯಾಟ್ಸ್‌ಮನ್‌ಗಳ ಕಳಪೆ ಪ್ರದರ್ಶನ ತಂಡದ ಸೋಲಿಗೆ ಕಾರಣವಾಯಿತು. ನಾಲ್ಕು ಓವರ್ ಬೌಲಿಂಗ್ ಮಾಡಿದ ಕಗಿಸೊ ರಬಾಡ, ಗುಜರಾತ್ ಟೈಟಾನ್ಸ್ ಬ್ಯಾಟರ್‌ಗಳ ಹೆಡೆಮುರಿ ಕಟ್ಟಿದರು. ಪಂದ್ಯದಲ್ಲಿ 4 ವಿಕೆಟ್ ಕಬಳಿಸಿ ಮಿಂಚಿದರು.
ಗುಜರಾತ್ ಟೈಟಾನ್ಸ್ ಆರಂಭಿಕ ಆಟಗಾರ ಶುಭಮನ್ ಗಿಲ್ ಕೇವಲ 9 ರನ್ ಗಳಿಸಿ ರನ್ ಔಟ್ ಆಗಿ ಪೆವಿಲಿಯನ್‌ನತ್ತ ಹೆಜ್ಜೆ ಹಾಕಿದರು. ಭರವಸೆಯ ಆಟ ಆರಂಭಿಸಿದ ವೃದ್ಧಿಮಾನ್ ಸಹಾ 21 ರನ್ (17 ಬಾಲ್, 3 ಫೋರ್, 1 ಸಿಕ್ಸ್) ಗಳಿಸಿ ರಬಾಡ ಬೌಲಿಂಗ್‌ನಲ್ಲಿ ಮಯಂಕ್ ಅಗರವಾಲ್‌ಗೆ ಕ್ಯಾಚ್ ನೀಡಿ ನಡೆದರು. ತಂಡದ ಕ್ಯಾಪ್ಟನ್ ಹಾರ್ದಿಕ್ ಪಾಂಡ್ಯ ಈ ಪಂದ್ಯದಲ್ಲಿ ಕೇವಲ 1 ರನ್ ಗಳಿಸಿ ಶರ್ಮಾಗೆ ಕ್ಯಾಚ್ ನೀಡಿ ಮುಖಭಂಗ ಅನುಭವಿಸಿದರು.
ಈ ವೇಳೆ ಬ್ಯಾಟರ್ ಸಾಯಿ ಸುದರ್ಶನ್ 50 ಎಸೆತಗಳಲ್ಲಿ 64 ರನ್ ಗಳಿಸಿ ( 5 ಫೋರ್, 1 ಸಿಕ್ಸ್) ಗಳಿಸುವ ಮೂಲಕ ಏಕೈಕ ಆಸರೆಯಾಗಿ ತಂಡದ ಮೊತ್ತ 143ಕ್ಕೆ ಏರಿಕೆಯಾಗುವಂತೆ ನೋಡಿಕೊಂಡರು. ಡೇವಿಡ್ ಮಿಲ್ಲರ್ ಹಾಗೂ ರಾಹುಲ್ ತೆವಾಟಿಯಾ ತಲಾ 11 ರನ್ ಗಳಿಸಲಷ್ಟೇ ಶಕ್ತರಾಗಿ ಕಳಪೆ ಪ್ರದರ್ಶನ ತೋರಿದರು. ಪ್ರಮುಖ ವಿಕೆಟ್‌ಗಳನ್ನು ಕಳೆದುಕೊಂಡು ಆರಂಭದಲ್ಲಿ ಹಿನ್ನಡೆ ಅನುಭವಿಸಿದರೂ ಕೊನೆಯ ಐದು ಓವರ್‌ಗಳಲ್ಲಿ ಅತ್ಯುತ್ತಮ ಆಟ ಪ್ರದರ್ಶಿಸಿದ ಗುಜರಾತ್ ಟೈಟನ್ಸ್, ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು 143 ರನ್ ಗಳಿಸಿತು.
ಗುಜರಾತ್ ಟೈಟಾನ್ಸ್ ನೀಡಿದ 144 ರನ್‌ಗಳ ಗುರಿ ಬೆನ್ನಟ್ಟಿದ ಪಂಜಾಬ್ ಕಿಂಗ್ಸ್ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿತು. ಪಂಜಾಬ್ ಕಿಂಗ್ಸ್‌ನ ಆರಂಭಿಕ ಆಟಗಾರ ಜಾನ್ ಬೆಸ್ಟೊ ಕೇವಲ 1 ರನ್ ಗಳಿಸಿ ಮಹಮ್ಮದ್ ಶಮಿ ಬೌಲಿಂಗ್‌ನಲ್ಲಿ ಪ್ರದೀಪ್ ಸಂಗ್ವಾನ್‌ಗೆ ಕ್ಯಾಚ್ ನೀಡಿ ಪೆವಿಲಿಯನ್‌ನತ್ತ ನಡೆದರು. ಈ ವೇಳೆ ಮೈದಾನದಲ್ಲಿ ಉತ್ತಮ ಪರ್ಫಾರ್ಮೆನ್ಸ್ ನೀಡಿದ ಶಿಖರ್ ಧವನ್ ಔಟಾಗದೆ 62 ರನ್ (53 ಬಾಲ್, 8 ಫೋರ್, 1 ಸಿಕ್ಸ್) ಗಳಿಸಿ ಗುಜರಾತ್ ಟೈಟಾನ್ಸ್ ಬೌಲರ್‌ಗಳ ಬೆವರಿಳಿಸಿದರು. ಇವರಿಗೆ ಭಾನುಕ ರಾಜಪಕ್ಸ (40 ರನ್, 28 ಬಾಲ್, 5 ಫೋರ್, 1 ಸಿಕ್ಸ್) ಸಾಥ್ ನೀಡಿದರು. ಶಿಖರ್ ಮತ್ತು ರಾಜಪಕ್ಸ್ 59 ಬಾಲ್‌ಗೆ 87 ರನ್ ಜೊತೆಯಾಟವಾಡಿ ತಂಡ ಸುಲಭ ಜಯ ಸಾಧಿಸಲು ನೆರವಾದರು.
ಅರ್ಧ ಶತಕ ವಂಚಿತರಾದ ರಾಜಪಕ್ಸ ಅವರು ಫರ್ಗ್ಯೂಸನ್ ಬೌಲಿಂಗ್‌ನಲ್ಲಿ ಎಲ್‌ಬಿಡಬ್ಲ್ಯೂ ಆಗಿ ನಡೆದರು. ನಂತರ ಶಿಖರ್‌ಗೆ ಲಿಯಾಮ್ ಲಿವಿಂಗ್‌ಸ್ಟೋನ್ ಸಾಥ್ ನೀಡಿದರು. ಲಿವಿಂಗ್‌ಸ್ಟೋನ್ ಔಟ್ ಆಗದೆ 30 ರನ್ (10 ಬಾಲ್, 2 ಫೋರ್, 3 ಸಿಕ್ಸ್) ಗಳಿಸಿ ಉತ್ತಮ ಬ್ಯಾಟಿಂಗ್ ಪ್ರದರ್ಶನ ನೀಡಿ ಬಹುಬೇಗ ತಂಡದ ಗೆಲುವಿಗೆ ನೆರವಾದರು. ಆ ಮೂಲಕ ಪಂಜಾಬ್ ಕಿಂಗ್ಸ್ 16 ಓವರ್‌ನಲ್ಲೇ ಕೇವಲ 2 ವಿಕೆಟ್ ನಷ್ಟಕ್ಕೆ 145 ರನ್ ಗಳಿಸಿ ಗುಜರಾತ್ ಟೈಟಾನ್ಸ್ ವಿರುದ್ಧ ಸುಲಭ ಜಯ ಸಾಧಿಸಿತು.
ಮುಂಬೈ: ಪಂಜಾಬ್ ಕಿಂಗ್ಸ್ ತಂಡದ ಆಲ್‍ರೌಂಡರ್ ರಿಷಿ ಧವನ್, ನಿನ್ನೆ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ ಬೌಲಿಂಗ್ ಮಾಡುವಾಗ ಮುಖ ಕವಚವನ್ನು ಧರಿಸಿ ಎಲ್ಲರ ಗಮನ ಸೆಳೆದಿದ್ದಾರೆ.
ಧವನ್ (32) ಅವರನ್ನು ಐಪಿಎಲ್ 2022ರ ಮೆಗಾ ಹರಾಜಿನಲ್ಲಿ ಪಂಜಾಬ್ ಕಿಂಗ್ಸ್ ತಂಡವು ರೂ. 55 ಲಕ್ಷಕ್ಕೆ ಆಯ್ಕೆ ಮಾಡಿಕೊಂಡಿತ್ತು. ನಿನ್ನೆ ನಡೆದ ಚೆನ್ನೈ ವಿರುದ್ಧದ ಪಂದ್ಯದಲ್ಲಿ ಅವರು ತಮ್ಮ ಎರಡನೇ ಓವರ್‍ನಲ್ಲಿ ಸಿಎಸ್‍ಕೆ ತಂಡದ ಪ್ರಮುಖ ಬ್ಯಾಟರ್ ಶಿವಂ ದುಬೆ ಅವರ (8) ವಿಕೆಟ್ ಕಿತ್ತು, ನಂತರ ಇನ್ನಿಂಗ್ಸ್‍ನ ಕೊನೆಯ ಓವರ್‍ನಲ್ಲಿ ಸಿಎಸ್‍ಕೆ ತಂಡದ ಮಾಜಿ ನಾಯಕ ಮಹೇಂದ್ರ್ ಸಿಂಗ್ ಧೋನಿಯನ್ನು ಔಟ್ ಮಾಡುವುದರೊಂದಿಗೆ ಜಡೇಜಾ ಬಳಗವನ್ನು 11 ರನ್‍ಗಳಿಂದ ಸೋಲಿಸಲು ಸಹಾಯ ಮಾಡಿದರು. ಇದನ್ನೂ ಓದಿ: ಕೊನೆಯವರೆಗೆ ಹೋರಾಡಿ ಸೋತ ಚೆನ್ನೈ – ಪಂಜಾಬ್‌ಗೆ 11 ರನ್‌ಗಳ ಜಯ
ರಿಷಿ ಧವನ್ ಮುಖ ಕವಚವನ್ನು ಹಾಕಿಕೊಂಡು ಆಟವಾಡುವುದಕ್ಕೆ ಒಂದು ಬಲವಾದ ಕಾರಣವಿದೆ. ಅದೇನೆಂದರೆ ಈ ಹಿಂದೆ ಅವರು, ರಣಜಿ ಟ್ರೋಫಿ ಆಟವಾಡುತ್ತಿದ್ದ ಸಂದರ್ಭದಲ್ಲಿ ಅವರ ಮುಖಕ್ಕೆ ಬಾಲ್ ಬಿದ್ದು, ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಹಿನ್ನೆಲೆಯಲ್ಲಿ ಅವರು ಹೆಚ್ಚುವರಿ ರಕ್ಷಣೆಗಾಗಿ ಈ ರೀತಿಯಾದ ಸೇಫ್ಟಿ ಕಿಟ್‍ಗಳನ್ನು ಧರಿಸಿ ಆಟವಾಡುತ್ತಾರೆ. ಇದನ್ನೂ ಓದಿ: ವಿಕೆಟ್ ನೀಡಿದ ಪೋಲಾರ್ಡ್‍ಗೆ ಮುತ್ತು ಕೊಟ್ಟು ಸಂಭ್ರಮಿಸಿದ ಕೃನಾಲ್ ಪಾಂಡ್ಯ
ಕೆಲವು ದಿನಗಳ ಹಿಂದೆ, ಪಂಜಾಬ್ ಕಿಂಗ್ಸ್ ತಂಡವು ಸಾಮಾಜಿಕ ಜಾಲತಾಣದಲ್ಲಿ ರಿಷಿ ಧವನ್ ಅವರು ಮುಂಬೈನ ಕ್ರಿಕೆಟ್ ಮೈದಾನವೊಂದರಲ್ಲಿ ಅಭ್ಯಾಸ ಮಾಡುತ್ತಿದ್ದ ವೀಡಿಯೋವನ್ನು ಹಂಚಿಕೊಂಡಿತ್ತು. ವೀಡಿಯೋದಲ್ಲಿ ಧವನ್ ಅವರು ಮಾತನಾಡಿ, ನಾನು 4 ವರ್ಷಗಳ ನಂತರ ಐಪಿಎಲ್‍ಗೆ ಮರಳುತ್ತಿದ್ದೇನೆ. ಆದ್ದರಿಂದ ರಣಜಿ ಟ್ರೋಫಿಯಲ್ಲಿ ನಾನು ಗಾಯಗೊಂಡಾಗ ಸ್ವಲ್ಪ ನಿರಾಶೆಯಾಯಿತು. ನಾನು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಕಾರಣ ನಾನು ಮೊದಲ ನಾಲ್ಕು ಪಂದ್ಯಗಳಲ್ಲಿ ಲಭ್ಯವಿರಲಿಲ್ಲ. ಆದರೆ ನಾನು ಈಗ ಸಂಪೂರ್ಣವಾಗಿ ಗುಣಮುಖನಾಗಿದ್ದೇನೆ. ಈಗ ತಂಡದ ಆಯ್ಕೆಗೆ ನಾನು ಲಭ್ಯವಿದ್ದೇನೆ. ನಾನು ಕಠಿಣ ಅಭ್ಯಾಸ ನಡೆಸುತ್ತಿದ್ದೇನೆ ಎಂದು ವೀಡಿಯೋದಲ್ಲಿ ಹೇಳಿದ್ದಾರೆ.
ಧವನ್ ಐಪಿಎಲ್‍ನಲ್ಲಿ ಹಿಂದಿನ ಬಾರಿ 2016ರಲ್ಲಿ ಅದೇ ಫ್ರಾಂಚೈಸಿ ಪಂಜಾಬ್ ಕಿಂಗ್ಸ್‍ನೊಂದಿಗೆ ಕಾಣಿಸಿಕೊಂಡಿದ್ದರು. ಅವರು 2014ರ ಆವೃತ್ತಿಯಲ್ಲಿ ಫೈನಲ್ ತಲುಪಿದ್ದ ಪಂಜಾಬ್ ತಂಡದ ಭಾಗವಾಗಿದ್ದರು. ಇದನ್ನೂ ಓದಿ: 3.10 ಕೋಟಿ ರೂಪಾಯಿಯ ಐಷಾರಾಮಿ ಕಾರು ಖರೀದಿಸಿದ ಹಿಟ್ ಮ್ಯಾನ್
ನಾನು ಪಂಜಾಬ್ ತಂಡಕ್ಕೆ ಮರಳಲು ತುಂಬಾ ಶ್ರಮಿಸಿದ್ದೇನೆ. ಅಂತಿಮವಾಗಿ 4 ವರ್ಷಗಳ ನಂತರ ನನಗೆ ಐಪಿಎಲ್‍ನಲ್ಲಿ ಅವಕಾಶ ಸಿಕ್ಕಿದೆ. ದೇಶೀಯ ಕ್ರಿಕೆಟ್‍ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದೇನೆ. ನಾನು ತಂಡಕ್ಕೆ ಮರಳಲು ಸುಮಾರು 3-4 ವರ್ಷಗಳ ಕಾಲ ನಿರಂತರವಾಗಿ ಪ್ರಯತ್ನಿಸಿದೆ. ಆದ್ದರಿಂದ ನನ್ನ ಗಾಯದಿಂದಾಗಿ ನಾನು ಆಟವಾಡುವುದನ್ನು ಕಳೆದುಕೊಳ್ಳುತ್ತೇನೆಯೇ ಎಂದು ನಾನು ಸ್ವಲ್ಪ ಭಯಪಟ್ಟೆ ಎಂದು ಹೇಳಿದರು.
ಮುಂಬೈ: ಪಂಜಾಬ್ ವಿರುದ್ಧ ಬ್ಯಾಟಿಂಗ್, ಬೌಲಿಂಗ್, ಫೀಲ್ಡಿಂಗ್ ಹೀಗೆ ಮೂರು ವಿಭಾಗದಲ್ಲೂ ಮೇಲುಗೈ ಸಾಧಿಸಿದ ಡೆಲ್ಲಿ 9 ವಿಕೆಟ್‌ಗಳಿಂದ ಸಲಿಸಾಗಿ ಪಂದ್ಯ ಗೆದ್ದುಕೊಂಡಿದೆ.
ಪಂಜಾಬ್ ನೀಡಿದ 116 ರನ್‍ಗಳ ಅಲ್ಪಮೊತ್ತದ ಗುರಿ ಪಡೆದ ಡೆಲ್ಲಿ ಕೇವಲ 1 ವಿಕೆಟ್ ಕಳೆದುಕೊಂಡು 10.3 ಓವರ್‌ಗಳಲ್ಲಿ ಇನ್ನೂ 57 ಎಸೆತ ಬಾಕಿ ಇರುವಂತೆ 9 ವಿಕೆಟ್ಗಳ ಭರ್ಜರಿ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ 6ನೇ ಸ್ಥಾನಕ್ಕೇರಿದೆ.
ಪಂಜಾಬ್ ನೀಡಿದ ಅಲ್ಪಮೊತ್ತವನ್ನು ಬೆನ್ನಟಿದ ಡೆಲ್ಲಿಗೆ ಆರಂಭಿಕ ಜೋಡಿ ಪೃಥ್ವಿ ಶಾ ಮತ್ತು ವಾರ್ನರ್ ನಾ ಮುಂದು ತಾ ಮುಂದು ಎಂಬಂತೆ ಬ್ಯಾಟ್ ಬೀಸಲು ಆರಂಭಿಸಿದರು. ಪಂಜಾಬ್ ಬೌಲರ್‌ಗಳ ಎಸೆತಗಳನ್ನು ಪಟಪಟನೇ ಬೌಂಡರಿಗಟ್ಟಿ ಮೆರೆದಾಡಿದ ಈ ಜೋಡಿ ಮೊದಲ ವಿಕೆಟ್‍ಗೆ 83 ರನ್ (39 ಎಸೆತ) ಚಚ್ಚಿ ಗೆಲುವು ಖಾತ್ರಿ ಪಡಿಸಿತು. ಪೃಥ್ವಿ ಶಾ 41 ರನ್ (20 ಎಸೆತ, 7 ಬೌಂಡರಿ, 1 ಸಿಕ್ಸ್) ಸಿಡಿಸಿ ದೊಡ್ಡ ಹೊಡೆತಕ್ಕೆ ಕೈ ಹಾಕಿ ವಿಕೆಟ್ ಕಳೆದುಕೊಂಡರು. ಆದರೆ ಇತ್ತ ವಾರ್ನರ್ ಮಾತ್ರ ಕಳೆದ ಪಂದ್ಯದ ಮುಂದುವರಿದ ಭಾಗ ಎಂಬಂತೆ ಬ್ಯಾಟ್‍ಬೀಸಿ ಅಜೇಯ 60 ರನ್ (30 ಎಸೆತ, 10 ಬೌಂಡರಿ 1 ಸಿಕ್ಸ್) ಸಿಡಿಸಿ ತಂಡಕ್ಕೆ ಜಯ ತಂದುಕೊಟ್ಟರು.
ಈ ಮೊದಲು ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿದ ಪಂಜಾಬ್ ತಂಡದ ಬ್ಯಾಟ್ಸ್‌ಮ್ಯಾನ್‌ಗಳು ಆರಂಭದಿಂದಲೇ ಪೆವಿಲಿಯನ್ ಪರೇಡ್ ನಡೆಸಿದರು. ಆರಂಭಿಕರಾದ ಮಯಾಂಕ್ ಅಗರ್‌ವಾಲ್ 24 ರನ್ (15 ಎಸೆತ, 4 ಬೌಂಡರಿ) ಮತ್ತು ಶಿಖರ್ ಧವನ್ 9 ರನ್ (10 ಎಸೆತ, 1 ಬೌಂಡರಿ) ಸಿಡಿಸಿ ಪೆವಿಲಿಯನ್ ಸೇರಿಕೊಂಡರು.
ನಂತರ ಆರಂಭವಾದ ಕುಸಿತದಿಂದ ಚೇತರಿಸಿಕೊಳ್ಳಲು ಪಂಜಾಬ್‍ಗೆ ಸಾಧ್ಯವಾಗಲೇ ಇಲ್ಲ. ಡೆಲ್ಲಿ ಬೌಲರ್‌ಗಳ ಕರಾರುವಾಕ್ ದಾಳಿಗೆ ನಲುಗಿದ ಪಂಜಾಬ್ ತಂಡದ ದಾಂಡಿರು ಬಂದ ಪುಟ್ಟ, ಹೋದ ಪುಟ್ಟ ಎಂಬಂತೆ ವಿಕೆಟ್ ಒಪ್ಪಿಸಿ ಹೊರ ನಡೆದರು. ಪಂಜಾಬ್ ಪರ ಜಿತೇಶ್ ಶರ್ಮಾ ಸಿಡಿಸಿದ 32 ರನ್ (20 ಎಸೆತ) ತಂಡದ ಪರ ಹೆಚ್ಚಿನ ಗಳಿಕೆಯಾಗಿದೆ. ಅಂತಿಮವಾಗಿ 20 ಓವರ್‌ಗಳ ಅಂತ್ಯಕ್ಕೆ 115 ರನ್ ಗಳಿಗೆ ಪಂಜಾಬ್ ಸರ್ವಪತನ ಕಂಡಿತು.
ಡೆಲ್ಲಿ ಪರ ಖಲೀಲ್ ಅಹಮ್ಮದ್, ಲಲಿತ್ ಯಾದವ್, ಅಕ್ಷರ್ ಪಟೇಲ್ ಮತ್ತು ಕುಲ್‍ದೀಪ್ ಯಾದವ್ ತಲಾ 2 ವಿಕೆಟ್ ಹಂಚಿಕೊಂಡರೆ, ಮುಸ್ತಫಿಜುರ್ ರೆಹಮಾನ್ 1 ವಿಕೆಟ್ ಪಡೆದು ಪಂಜಾಬ್ ಕುಸಿತಕ್ಕೆ ಕಾರಣರಾದರು.
ಮುಂಬೈ: ಐಪಿಎಲ್ 2022ರ ಆವೃತ್ತಿಗೆ ಈಗಾಗಲೇ ಕೋವಿಡ್-19ನ ಕರಿನೆರಳು ಆವರಿಸಿದ್ದು, ಕೊರೊನಾ ಭೀತಿಯಿಂದಾಗಿ ಪುಣೆಯಲ್ಲಿ ಬುಧವಾರ ನಡೆಯಬೇಕಿದ್ದ ಪಂಜಾಬ್ ಕಿಂಗ್ಸ್ ಮತ್ತು ದೆಹಲಿ ಕ್ಯಾಪಿಟಲ್ಸ್ ಪಂದ್ಯವನ್ನು ಮುಂಬೈಗೆ ಸ್ಥಳಾಂತರಿಸಲಾಗಿದೆ ಎಂದು ಬಿಸಿಸಿಐ ಮೂಲವು ತಿಳಿಸಿದೆ.
ದೆಹಲಿ ತಂಡದ ಆಟಗಾರ, ಸಿಬ್ಬಂದಿ ಸೇರಿದಂತೆ ಈಗಾಗಲೇ 5 ಮಂದಿಗೆ ಕೋವಿಡ್ ದೃಢಪಟ್ಟಿರುವ ಹಿನ್ನೆಲೆ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಬಿಸಿಸಿಐ ಮೂಲವು ತಿಳಿಸಿದೆ.
ಮೊನ್ನೆ ದೆಹಲಿ ಕ್ಯಾಪಿಟಲ್ಸ್ ತಂಡದ ಫಿಸಿಯೋ ಪ್ಯಾಟ್ರಿಕ್ ಫರ್ಹಾರ್ಟ್ ಅವರಿಗೆ ಕೋವಿಡ್ ಧೃಡವಾಗಿತ್ತು. ಈಗ ದೆಹಲಿ ಕ್ಯಾಪಿಟಲ್ಸ್‍ನ ಆಲ್‍ರೌಂಡರ್ ಮಿಚೆಲ್ ಮಾರ್ಷ್‍ಗೂ ಕೂಡಾ ಕೋವಿಡ್ ದೃಢವಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ದೆಹಲಿ ತಂಡವು ಪ್ರಸ್ತುತ ಮುಂಬೈನಲ್ಲಿ ಕ್ವಾರಂಟೈನ್‍ನಲ್ಲಿದೆ. ಮಿಚೆಲ್ ಮಾರ್ಷ್ ಅವರು ಇತ್ತೀಚಿಗಷ್ಟೇ ಗಾಯದಿಂದ ಚೇತರಿಸಿಕೊಂಡು ಐಪಿಎಲ್ 2022ಕ್ಕೆ ಪಾದಾರ್ಪಣೆ ಮಾಡಿದ್ದರು. ಫಿಸಿಯೋ ಪ್ಯಾಟ್ರಿಕ್ ಫರ್ಹಾರ್ಟ್ ಅವರೊಂದಿಗಿನ ನಿಕಟ ಸಂಪರ್ಕದಲ್ಲಿ ಸಾಕಷ್ಟು ಸಮಯ ಕಳೆಯುತ್ತಿದ್ದ ಕಾರಣ ಅವರಿಗೆ ಕೋವಿಡ್ ಸೋಂಕು ಹರಡಿರಬಹುದು ಎಂದು ಶಂಕೆ ವ್ಯಕ್ತವಾಗಿದೆ. ಒಂದು ವೇಳೆ ಯಾರಲ್ಲಾದರೂ ಕೋವಿಡ್ ಸೋಂಕು ಪತ್ತೆಯಾಗದೆ ಇದ್ದು, ಅವರು ಮುಚ್ಚಿದ ವಾತಾವರಣದಲ್ಲಿ ಪ್ರಯಾಣ ಮಾಡುವ ವೇಳೆ ಅದು ಇನ್ನೊಬ್ಬರಿಗೂ ಹರಡಿ ಸಮಸ್ಯೆ ಆಗಬಾರದು ಎನ್ನುವ ಕಾರಣಕ್ಕೆ ಬಿಸಿಸಿಐ ಈ ಕ್ರಮಕೈಗೊಂಡಿದೆ.
ಈಗಾಗಲೇ ಸೋಂಕು ದೃಢಪಟ್ಟಿರುವ ಐವರನ್ನು ಕ್ವಾರಂಟೈನ್‍ನಲ್ಲಿಡಲಾಗಿದೆ. ಅವರಿಗೆಲ್ಲಾ ಎರಡು ಬಾರಿ ಕೋವಿಡ್ ನೆಗಟಿವ್ ವರದಿ ಬಂದ ಮೇಲೆ ತಂಡದಲ್ಲಿ ಸೇರಿಸಿಕೊಳ್ಳಲಾಗುವುದು ಎಂದು ಬಿಸಿಸಿಐ ಸೂಚಿಸಿದೆ.
ಪಂಜಾಬ್ ಮತ್ತು ಹೈದರಾಬಾದ್ ನಡುವಿನ ಪಂದ್ಯದಲ್ಲಿ ಪಂಜಾಬ್ ಬ್ಯಾಟ್ಸ್‌ಮನ್ ಲಿಯಾಮ್ ಲಿವಿಂಗ್‍ಸ್ಟೂನ್ 33 ಎಸೆತಗಳನ್ನು ಎದುರಿಸಿ 60 ರನ್‍ಗಳ ಕೊಡುಗೆ ನೀಡುವ ಮೂಲಕ ಪಂಜಾಬ್ ಕಿಂಗ್ಸ್ ತಂಡವು ಸವಾಲಿನ ಮೊತ್ತವನ್ನು ಪಡೆಯಲು ಸಾಧ್ಯವಾಯಿತು. ನಂತರ ಉಮ್ರಾನ್ ಮಲಿಕ್ ಓಡನ್ ಸ್ಮಿತ್, ರಾಹುಲ್ ಚಾಹರ್ ಮತ್ತು ವೈಭವ್ ಅರೋರಾ ಅವರ ವಿಕೆಟ್ ಪಡೆಯುವ ಮೂಲಕ ಅಸಾಮಾನ್ಯ ವೇಗದ ಬೌಲಿಂಗ್ ಅನ್ನು ಪ್ರಾರಂಭಿಸಿದರು. ಸತತ ಎರಡು ಎಸೆತಗಳಲ್ಲಿ ಚಹರ್ ಮತ್ತು ಅರೋರಾ ವಿಕೆಟ್ ಪಡೆದು ಪಂಜಾಬ್‍ಗೆ ಅಘಾತ ನೀಡಿದರು. ಆ ಬಳಿಕ ಹ್ಯಾಟ್ರಿಕ್ ವಿಕೆಟ್ ಪಡೆಯುವ ಅವಕಾಶ ಪಡೆದಿದ್ದ ಉಮ್ರಾನ್ ಪಂಜಾಬ್‍ನ ಅರ್ಷದೀಪ್ ಸಿಂಗ್ ವಿಕೆಟ್ ಪಡೆಯುವಲ್ಲಿ ವಿಫಲವಾದರು. ಒಂದು ವೇಳೆ ಅವರು ಅರ್ಷದೀಪ್ ವಿಕೆಟ್ ಪಡೆದಿದ್ದರೆ. 15ನೇ ಆವೃತ್ತಿ ಐಪಿಎಲ್‍ನಲ್ಲಿ ಸತತ ನಾಲ್ಕು ವಿಕೆಟ್ ಪಡೆದ ಮೊದಲ ಬೌಲರ್ ಎನಿಸಿಕೊಳ್ಳುತ್ತಿದ್ದರು. ಇದನ್ನೂ ಓದಿ: ಉಮ್ರಾನ್ ಮಲಿಕ್, ಭುವಿ ಬೌಲಿಂಗ್ ಬಿರುಗಾಳಿ – ಪಂಜಾಬ್ ವಿರುದ್ಧ ಹೈದರಾಬಾದ್‌ಗೆ 7 ವಿಕೆಟ್‌ಗಳ ಜಯ
ಪಂದ್ಯದ ವೇಳೆ ಬಿಸಿಲಿನಲ್ಲಿ ಬೌಲಿಂಗ್ ಮಾಡುವುದು ಕಷ್ಟವೇ ಎಂದು ಕಾಮೆಂಟೇಟರ್ ಪ್ರಶ್ನೆ ಕೇಳಿದರು. ಭಾನುವಾರ ಮುಂಬೈನಲ್ಲಿ ಬಿಸಿಲಿನ ತಾಪ ಹೆಚ್ಚಾಗಿತ್ತು. ಇದು ಉಮ್ರಾನ್ ವೇಗದ ಮೇಲೆ ಯಾವುದೇ ಪರಿಣಾಮ ಬೀರಲಿಲ್ಲ ಎಂದು ಪ್ರಶ್ನಿಸಿದರು.
ಇದಕ್ಕೆ ಉತ್ತರಿಸಿದ ಅವರು, ಸರ್, ನಾನು ಜಮ್ಮುವಿನಿಂದ ಬಂದಿದ್ದೇನೆ. ಅಲ್ಲಿ ಬೇಸಿಗೆಯಲ್ಲಿ 46 ರಿಂದ 47 ಡಿಗ್ರಿ ತಾಪಮಾನವಿರುತ್ತದೆ. ನಾನು ಜಮ್ಮುವಿನಲ್ಲಿ ತರಬೇತಿ ಪಡೆದಿದ್ದೇನೆ. ನಾನು ಬಿಸಿಲಿನಲ್ಲಿ ಬೌಲಿಂಗ್ ಮಾಡುವುದನ್ನು ನಿಜವಾಗಿಯೂ ಆನಂದಿಸುತ್ತೇನೆ ಎಂದರು. ಇದನ್ನೂ ಓದಿ: IPLನಲ್ಲಿ ಪಂದ್ಯ ನೂರು, ಶತಕ ಮೂರು ಸಿಡಿಸಿ ಮೆರೆದಾಡಿದ ಕನ್ನಡಿಗ ಕೆ.ಎಲ್.ರಾಹುಲ್
This last over by #UmranMalik was surreal. A maiden with 3 wickets and a run-out. Stuffs of dream! What a tournament Umran is having in #IPL2022 Blue jersey coming soon ???????? #PBKSvSRH
— Harbhajan Turbanator (@harbhajan_singh) April 17, 2022
ಉಮ್ರಾನ್ ಅವರ ಈ ಅದ್ಬುತ ಆಟವನ್ನು ಕಂಡು ಮಾಜಿ ಕ್ರಿಕೆಟ್ ಆಟಗಾರರು ಟ್ವಿಟ್ಟರ್ ಮೂಲಕ ಮೆಚ್ಚುಗೆ ಸೂಚಿಸಿದ್ದು, ಇನ್ನಿಂಗ್ಸ್‌ನ ಕೊನೆಯ ಓವರ್‌ನಲ್ಲಿ ಉಮ್ರಾನ್ ಅವರ ಬೌಲಿಂಗ್ ಪ್ರದರ್ಶನ ಅದ್ಬುತವಾಗಿತ್ತು. ಮೆಡನ್ ಓವರ್ ಮಾಡುವುದಲ್ಲದೇ 3 ವಿಕೆಟ್‍ಗಳನ್ನು ಕಿತ್ತು ಒಂದು ರನ್ ಔಟ್ ಮಾಡಿದ್ದಾರೆ. ಶೀಘ್ರದಲೇ ಭಾರತ ತಂಡಕ್ಕೆ ಮತ್ತೊಂದು ಬ್ಲೂ ಜೆರ್ಸಿ ಸೇರ್ಪಡೆಯಾಗಲಿದೆ ಎಂದು ಹರ್ಭಜನ್ ಸಿಂಗ್ ಟ್ವೀಟ್ ಮಾಡಿದ್ದಾರೆ.
A triple wicket maiden for a final over is an outstanding effort from young Umran Malik. Skills and raw pace and great execution is gold stuff.#PBKSvSRH
ಮುಂಬೈ: ಬೌಲಿಂಗ್‍ನಲ್ಲಿ ಉಮ್ರಾನ್ ಮಲಿಕ್ ಮತ್ತು ಭುವನೇಶ್ವರ್ ಕುಮಾರ್ ಮಿಂಚಿದರೆ, ಬ್ಯಾಟಿಂಗ್‍ನಲ್ಲಿ ಸರ್ವಾಂಗೀಣ ಪ್ರದರ್ಶನ ನೀಡಿದ ಹೈದರಾಬಾದ್ ತಂಡ ಪಂಜಾಬ್ ವಿರುದ್ಧ 7 ವಿಕೆಟ್‍ಗಳ ಜಯ ಸಾಧಿಸಿದೆ.
ಹೈದರಾಬಾದ್ ಪರ ಮಾಕ್ರಾರ್ಮ್ ಅಜೇಯ 41 ರನ್ (27 ಎಸೆತ, 4 ಬೌಂಡರಿ, 1 ಸಿಕ್ಸ್) ಮತ್ತು ನಿಕೋಲಸ್ ಪೂರನ್ 35 ರನ್ (30 ಎಸೆತ, 1 ಬೌಂಡರಿ, 1 ಸಿಕ್ಸ್) ಸಿಡಿಸಿ ಇನ್ನೂ 7 ಎಸೆತ ಬಾಕಿ ಇರುವಂತೆ 7 ವಿಕೆಟ್‍ಗಳ ಜಯ ಸಾಧಿಸಿತು.
ಗೆಲ್ಲಲು 152 ರನ್ ಗುರಿ ಪಡೆದ ಹೈದರಾಬಾದ್ ತಂಡ ಉತ್ತಮ ಆರಂಭ ಪಡೆಯಲು ವಿಫಲವಾಯಿತು. ಕೇನ್ ವಿಲಿಯಮ್ಸನ್ 3 ರನ್‍ಗೆ ಸುಸ್ತಾದರು. ಅಭಿಷೇಕ್ ಶರ್ಮಾ 31 ರನ್ (25 ಎಸೆತ, 3 ಬೌಂಡರಿ, 1 ಸಿಕ್ಸ್) ಮತ್ತು ರಾಹುಲ್ ತ್ರಿಪಾಠಿ 34 ರನ್ (22 ಎಸೆತ, 4 ಬೌಂಡರಿ, 1 ಸಿಕ್ಸ್ ) ಸಿಡಿಸಿ ಕೆಲಕಾಲ ಸ್ಫೋಟಕ ಆಟಕ್ಕೆ ಸಾಕ್ಷಿಯಾದರು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಶಿಖರ್ ಧವನ್ ನೇತೃತ್ವದ ಪಂಜಾಬ್ ತಂಡಕ್ಕೆ ಹೈದರಾಬಾದ್ ಬೌಲರ್‌ಗಳು ಆರಂಭದಲ್ಲೇ ವಿಕೆಟ್ ಬೇಟೆ ಆರಂಭಿಸಿದರು. ಕೇವಲ 38 ರನ್‍ಗಳಿಗೆ 3 ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ಲಿಯಾಮ್ ಲಿವಿಂಗ್ಸ್ಟೋನ್ ಎಂದಿನಂತೆ ಬೌಂಡರಿ, ಸಿಕ್ಸರ್‌ಗಳ ಬಿರುಸಿನ ಬ್ಯಾಟಿಂಗ್‍ಗೆ ಮುಂದಾದರು.
ಇತ್ತ ವಿಕೆಟ್ ಉರುಳುತ್ತಿದ್ದರೂ ಲಿವಿಂಗ್ಸ್ಟೋನ್ ಮಾತ್ರ ತಮ್ಮ ಬ್ಯಾಟ್ ಇರುವುದು ರನ್ ಹೊಡೆಯಲು ಎಂಬಂತೆ ಮೈದಾನದ ಮೂಲೆ ಮೂಲೆಗೂ ಬೌಂಡರಿ, ಸಿಕ್ಸರ್‌ಗಟ್ಟಿದರು. ಇವರಿಗೆ ಉತ್ತಮ ಸಾಥ್ ನೀಡಿದ ಶಾರೂಖ್ ಖಾನ್ 26 ರನ್ (28 ಎಸೆತ, 1 ಬೌಂಡರಿ, 2 ಸಿಕ್ಸ್) ಸಿಡಿಸಿ ವಿಕೆಟ್ ಒಪ್ಪಿಸಿದರು. ಈ ಮೊದಲು ಈ ಜೋಡಿ 5ನೇ ವಿಕೆಟ್‍ಗೆ 71 ರನ್ (49 ಎಸೆತ) ಜೊತೆಯಾಟವಾಡಿ ಮಿಂಚಿತು. ಆ ಬಳಿಕ ಕೆಲ ಕಾಲ ಸ್ಫೋಟಿಸಿದ ಲಿವಿಂಗ್ಸ್ಟೋನ್ 60 ರನ್ (33 ಎಸೆತ, 5 ಬೌಂಡರಿ, 4 ಸಿಕ್ಸ್) ಬಾರಿಸಿ ಔಟ್ ಆದರು.
ನಂತರ ದಿಢೀರ್ ಕುಸಿತ ಕಂಡ ಪಂಜಾಬ್ 20 ಓವರ್‌ಗಳಲ್ಲಿ 151 ರನ್‍ಗಳಿಗೆ ಆಲೌಟ್ ಆಯಿತು. ಹೈದರಾಬಾದ್ ಪರ ಬೌಲಿಂಗ್‍ನಲ್ಲಿ ಮಿಂಚಿದ ಉಮ್ರಾನ್ ಮಲಿಕ್ 4 ಮತ್ತು ಭುವನೇಶ್ವರ್ ಕುಮಾರ್ 3 ವಿಕೆಟ್ ಕಿತ್ತು ಪಂಜಾಬ್ ತಂಡಕ್ಕೆ ಕಡಿವಾಣ ಹಾಕಿದರು.