Tag: punjab

  • ನಟ ಅಮನ್ ಧಾಲಿವಾಲ್ ಗೆ ಮಚ್ಚಿನಿಂದ ಹಲ್ಲೆ

    ನಟ ಅಮನ್ ಧಾಲಿವಾಲ್ ಗೆ ಮಚ್ಚಿನಿಂದ ಹಲ್ಲೆ

    ಬಾಲಿವುಡ್ (Bollywood) ಹಾಗೂ ಪಂಜಾಬಿ (Punjab) ನಟ ಅಮನ್ ಧಾಲಿವಾಲ್ (Aman Dhaliwal) ಮೇಲೆ ಮಾರಣಾಂತಿಕ ಹಲ್ಲೆ (Attack) ನಡೆದಿದೆ. ಹಲ್ಲೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಅಮನ್ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವಾಗ ಕಿಡಿಗೇಡಿಯೊಬ್ಬ ಜಿಮ್ ಗೆ ನುಗ್ಗಿ ಮಾರಕಾಸ್ತ್ರದಿಂದ ಹಲ್ಲೆ ಮಾಡಿದ್ದಾನೆ.

    ತಮ್ಮ ಪಾಡಿಗೆ ತಾವು ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವಾಗ ಅಪರಿಚಿತ ವ್ಯಕ್ತಿಯೋರ್ವ ಮಾರಕಾಸ್ತ್ರಗಳನ್ನು ಹಿಡಿದುಕೊಂಡು ಜಿಮ್ ಗೆ ನುಗ್ಗುತ್ತಾನೆ. ಅತ್ತಿತ್ತ ನೋಡಿ, ಅಲ್ಲಿಯೇ ಇದ್ದ ಅಮನ್ ಗೆ ನೀರು ಕೊಡುವಂತೆ ದಬಾಯಿಸುತ್ತಾನೆ. ಅಮನ್ ಕೇರ್ ಮಾಡದೇ ಇದ್ದಾಗ ಮಚ್ಚು ತೋರಿಸಿ ಬೆದರಿಸಲು ಪ್ರಯತ್ನಿಸುತ್ತಾನೆ. ಆ ವ್ಯಕ್ತಿಯನ್ನು ಅಮನ್ ಮಣಿಸಲು ಯತ್ನಿಸುತ್ತಾರೆ. ಈ ವೇಳೆ ಮನಸ್ಸಿಗೆ ಬಂದಂತೆ ವ್ಯಕ್ತಿ ಮಚ್ಚು ಬೀಸುತ್ತಾನೆ. ಈ ಸಮಯದಲ್ಲಿ ಅಮನ್ ಮೈತುಂಬಾ ಗಾಯಗಳಾಗುತ್ತವೆ. ಇದನ್ನೂ ಓದಿ:  ‘ಟ್ವಿಂಕಲ್’ ಹಾಡು ಹೇಳುತ್ತಾ ಬಂದ ಶಿವಾಜಿ ಸುರತ್ಕಲ್ 2

    ಜೋದಾ ಅಕ್ಬರ್, ಬಿಗ್ ಬದ್ರರ್, ಅಜ್ ದೇ ರಾಂಜಾ ಸೇರಿದಂತೆ ಹಲವು ಸಿನಿಮಾಗಳಲ್ಲಿ ನಟಿಸಿರುವ ಅಮನ್ ಧಾಲಿವಾಲ್ ಎಂದಿನಂತೆ ಜಿಮ್ ಗೆ ಬಂದ ವೇಳೆ ಈ ಘಟನೆ ನಡೆದಿದೆ. ಕೂಡಲೇ ಪೊಲೀಸ್ ಸಿಬ್ಬಂದಿಗೆ ಸುದ್ದಿ ಮುಟ್ಟಿಸಲಾಗುತ್ತದೆ. ಸ್ಥಳಕ್ಕೆ ಬಂದ ಪೊಲೀಸರು ಆ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದಾರೆ.

  • ಪಂಜಾಬ್‍ನಲ್ಲಿ ಗನ್ ಸಂಸ್ಕೃತಿ ವಿರುದ್ಧ ಕ್ರಮ – ರಾಜ್ಯದಲ್ಲಿ 813 ಗನ್ ಪರವಾನಗಿ ರದ್ದು

    ಪಂಜಾಬ್‍ನಲ್ಲಿ ಗನ್ ಸಂಸ್ಕೃತಿ ವಿರುದ್ಧ ಕ್ರಮ – ರಾಜ್ಯದಲ್ಲಿ 813 ಗನ್ ಪರವಾನಗಿ ರದ್ದು

    ಚಂಡೀಗಢ: ಪಂಜಾಬ್‍ನಲ್ಲಿ (Punjab) ಗನ್ ಸಂಸ್ಕೃತಿ (Gun Culture) ವಿರುದ್ಧ ಭಗವಂತ್ ಮಾನ್ ನೇತೃತ್ವದ ಸರ್ಕಾರ ಪ್ರಮುಖ ಕ್ರಮವನ್ನು ಕೈಗೊಂಡಿದ್ದು, ರಾಜ್ಯದಲ್ಲಿ 813 ಬಂದೂಕುಗಳ ಪರವಾನಗಿಯನ್ನು ರದ್ದುಗೊಳಿಸಿದೆ.

    ಭಗವಂತ್ ಮಾನ್ (Bhagwant Mann) ಸರ್ಕಾರವು ಲೂಧಿಯಾನ ಗ್ರಾಮಾಂತರದಿಂದ 87, ಶಹೀದ್ ಭಗತ್ ಸಿಂಗ್ ನಗರದಿಂದ 48, ಗುರುದಾಸ್‍ಪುರದಿಂದ 10, ಫರೀದ್‍ಕೋಟ್‍ನಿಂದ 84, ಪಠಾಣ್‍ಕೋಟ್‍ನಿಂದ 199, ಹೋಶಿಯಾಪುರದಿಂದ 47, ಕಪುರ್ತಲಾದಿಂದ 6, ಎಸ್‍ಎಎಸ್ ಕಸ್ಬಾದಿಂದ 235 ಮತ್ತು ಸಂಗ್ರೂರ್‍ನಿಂದ 16 ಪರವಾನಗಿಗಳನ್ನು ರದ್ದುಗೊಳಿಸಲಾಗಿದೆ. ಅಮೃತಸರ ಕಮಿಷನರೇಟ್‍ನ 27 ಮತ್ತು ಜಲಂಧರ್ ಕಮಿಷನರೇಟ್‍ನ 11 ಮತ್ತು ಇತರ ಹಲವು ಜಿಲ್ಲೆಗಳ ಶಸ್ತ್ರಾಸ್ತ್ರ ಪರವಾನಗಿಯನ್ನು (Licence) ಸಹ ರದ್ದುಗೊಳಿಸಲಾಗಿದೆ. ಪಂಜಾಬ್ ಸರ್ಕಾರ ಇದುವರೆಗೆ 2,000 ಕ್ಕೂ ಹೆಚ್ಚು ಶಸ್ತ್ರಾಸ್ತ್ರ ಪರವಾನಗಿಗಳನ್ನು ರದ್ದುಗೊಳಿಸಿದೆ.

    ಬಂದೂಕುಗಳನ್ನು ಇಟ್ಟುಕೊಳ್ಳುವವರು ನಿಯಮಗಳನ್ನು ಅನುಸರಿಸಬೇಕು. ಪಂಜಾಬ್‍ನಲ್ಲಿ ಸಾರ್ವಜನಿಕ ಕಾರ್ಯಕ್ರಮಗಳು, ಧಾರ್ಮಿಕ ಸ್ಥಳಗಳು, ಮದುವೆ ಸಮಾರಂಭಗಳು ಅಥವಾ ಇತರ ಯಾವುದೇ ಕಾರ್ಯಕ್ರಮಗಳಲ್ಲಿ ಶಸ್ತ್ರಾಸ್ತ್ರಗಳನ್ನು ಕೊಂಡೊಯ್ಯಲು ಹಾಗೂ ಪ್ರದರ್ಶಿಸುವುದಕ್ಕೆ ನಿಷೇಧ ಹೇರಲಾಗಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ.

    ಪಂಜಾಬ್‍ನಲ್ಲಿ ಒಟ್ಟು 3,73,053 ಶಸ್ತ್ರಾಸ್ತ್ರ ಪರವಾನಗಿಗಳಿವೆ. ಬಂದೂಕು ಸಂಸ್ಕøತಿಯನ್ನು ಕೊನೆಗಾಣಿಸಲು ನಿರಂತರವಾಗಿ ಕ್ರಮ ಕೈಗೊಳ್ಳುತ್ತಿರುವುದಾಗಿ ಪಂಜಾಬ್ ಸರ್ಕಾರ ಹೇಳಿದೆ. ಇದನ್ನೂ ಓದಿ: ಮಂಡ್ಯದಲ್ಲಿ ಮೋದಿ ರೋಡ್ ಶೋ – ಸ್ವಾಗತಿಸಲು ನಿಂತಿದ್ದ ಅಭಿಮಾನಿಗಳಿಗೆ ಪ್ರಧಾನಿ ಪುಷ್ಪಾರ್ಚನೆ

    ಪಂಜಾಬಿ ಗಾಯಕ ಸಿಧು ಮೂಸೆ ವಾಲಾ ಹತ್ಯೆಯು ಗನ್ ಸಂಸ್ಕೃತಿಯ ಪರ-ವಿರೋಧ ಬಗ್ಗೆ ತೀವ್ರ ಚರ್ಚೆ ನಡೆದಿತ್ತು. ಈ ಹಿನ್ನೆಲೆಯಲ್ಲಿ ನಿಯಂತ್ರಣ ಮಾಡಬೇಕು ಎಂಬುದು ಹೆಚ್ಚಾಗಿ ಕೇಳಿ ಬಂದಿತ್ತು.  ಇದನ್ನೂ ಓದಿ: ಕಾಂಗ್ರೆಸ್ ಕೌರವರನ್ನು ಪಾಂಡವರಂತೆ ಸದೆಬಡಿಯುತ್ತೇವೆ: ಶ್ರೀರಾಮುಲು

  • ಖಾಸಗಿ ಫೋಟೋ ಇಟ್ಕೊಂಡು ಬ್ಲ್ಯಾಕ್‌ಮೇಲ್ ವಿದೇಶಿ ಮಹಿಳೆ ಮೇಲೆ ನಿರಂತರ ಅತ್ಯಾಚಾರ – ಆರೋಪಿಗಾಗಿ ಪೊಲೀಸರ ಶೋಧ

    ಮುಂಬೈ: ವಿದೇಶಿ ಮಹಿಳೆಯ (Foreign Woman) ಖಾಸಗಿ ಫೋಟೋಗಳನ್ನು ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡಿ ಆಕೆಯ ಮೇಲೆ ಹಲವು ಬಾರಿ ಅತ್ಯಾಚಾರ (Rape) ಎಸಗಿದ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ಮುಂಬೈ (Mumbai) ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

    ಆರೋಪಿ ಮನೀಶ್ ಗಾಂಧಿ (Manish Gandhi) ಎಂದು ಗುರುತಿಸಲಾಗಿದೆ. ಈತ 2016ರಿಂದ 2022ರ ನಡುವೆ ಪೋಲೆಂಡ್‌ನ (Poland) ಮಹಿಳೆಯ ಮೇಲೆ ನಿರಂತರವಾಗಿ ಅತ್ಯಾಚಾರ ನಡೆಸಿದ್ದಾನೆ ಎನ್ನಲಾಗಿದೆ. ಆಕೆಯ ಖಾಸಗಿ ಫೋಟೋಗಳನ್ನು ಇಟ್ಟುಕೊಂಡು ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ. ಅಲ್ಲದೇ ಆಕೆಯ ಮೇಲೆ ಹಲವು ಬಾರಿ ಅತ್ಯಾಚಾರವೆಸಗಿದ್ದಾನೆಂದು ಆರೋಪಿಸಲಾಗಿದೆ. ಈ ವಿಚಾರವನ್ನು ಯಾರೊಂದಿಗಾದರೂ ಹೇಳಿಕೊಂಡರೆ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುವುದಾಗಿ ಬೆದರಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ವಿದೇಶಿ ಮಹಿಳೆಗೆ ಹುಟ್ಟಿದಾತ ದೇಶಭಕ್ತನಾಗಲು ಸಾಧ್ಯವಿಲ್ಲ: ರಾಹುಲ್ ಗಾಂಧಿಗೆ ಪ್ರಜ್ಞಾ ಠಾಕೂರ್ ಟಾಂಗ್

    ಈ ಕುರಿತು ಪೊಲೀಸರು ಆತನ ವಿರುದ್ಧ ಭಾರತೀಯ ದಂಡ ಸಂಹಿತೆ (ಐಪಿಸಿ) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಂಡು ಆತನನ್ನು ಬಂಧಿಸುವ ಸಲುವಾಗಿ ಶೋಧ ನಡೆಸುತ್ತಿದ್ದಾರೆ.

    ಈ ರೀತಿಯಾದ ಘಟನೆ ಪಂಜಾಬ್‌ನಲ್ಲಿಯೂ (Punjab) ನಡೆದಿದ್ದು, ವ್ಯಕ್ತಿಯೋರ್ವ ವಿಕಲಚೇತನ ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ ನಡೆಸಿದ್ದ. ಈ ಕುರಿತು ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮಹಿಳೆಯನ್ನು ಮದುವೆಯಾಗುವುದಾಗಿ ನಂಬಿಸಿ ಕಳೆದ ಐದು ತಿಂಗಳಿನಿಂದ ನಿರಂತರ ಅತ್ಯಾಚಾರವೆಸಗಿದ್ದ. ಸಖಿ ಒನ್ ಸ್ಟಾಪ್ ಸೆಂಟರ್ (ಒಎಸ್‌ಸಿ) ತಂಡವು ಅತ್ಯಾಚಾರಕ್ಕೊಳಗಾದ 26 ವರ್ಷದ ಸಂತ್ರಸ್ತೆಯನ್ನು ರಕ್ಷಿಸಿ, ಅಪರಾಧಿಯನ್ನು ಬಂಧಿಸಿದ್ದಾರೆ. ಅಲ್ಲದೇ ಸಂತ್ರಸ್ತೆಯನ್ನು ಸ್ಥಳೀಯ ಸಿವಿಲ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಇದನ್ನೂ ಓದಿ: Special- ‘ಆಸ್ಕರ್’ ಪ್ರಶಸ್ತಿ ಮೌಲ್ಯ ಕೇವಲ ರೂ.82: ಅಚ್ಚರಿಯಾದರೂ ಸತ್ಯ

    ಒಎಸ್‌ಸಿ (OSC) ಯೋಜನೆಯು 2015-16ರಲ್ಲಿ ಪಂಜಾಬ್‌ನಲ್ಲಿ ಜಾರಿಗೆ ಬಂತು. ಈ ಯೋಜನೆಯಡಿಯಲ್ಲಿ ಸರ್ಕಾರವು ಖಾಸಗಿ ಮತ್ತು ಸಾರ್ವಜನಿಕ ವಲಯದಲ್ಲಿ ಯಾವುದೇ ರೀತಿಯ ದೌರ್ಜನ್ಯದಿಂದ ನೊಂದ ಮಹಿಳೆಯರಿಗೆ ಸಮಗ್ರ ಬೆಂಬಲ ಮತ್ತು ಸಹಾಯವನ್ನು ನೀಡುತ್ತದೆ. ಸರ್ಕಾರದ ಈ ಯೋಜನೆಯಡಿಯಲ್ಲಿ ಪಂಜಾಬ್ ರಾಜ್ಯದ ಪ್ರತಿಯೊಂದು ಜಿಲ್ಲೆಯಲ್ಲೂ ಒಎಸ್‌ಸಿ ಸಂಸ್ಥೆಯನ್ನು ತೆರೆಯಲಾಗಿದೆ. ಇದನ್ನೂ ಓದಿ: ರಾಜ್ಯಕ್ಕೆ ಇಂದು ಪ್ರಧಾನಿ ಮೋದಿ ಆಗಮನ – ಮಂಡ್ಯ, ಧಾರವಾಡದಲ್ಲಿ ವಿವಿಧ ಕಾಮಗಾರಿಗಳಿಗೆ ಚಾಲನೆ

  • ಜೋರಾಗಿ ಸಂಗೀತವನ್ನು ಹಾಕದಂತೆ ಕೇಳಿದ್ದಕ್ಕೆ ಕೆನಡಾ ನಿವಾಸಿಯ ಕೊಲೆ

    ಜೋರಾಗಿ ಸಂಗೀತವನ್ನು ಹಾಕದಂತೆ ಕೇಳಿದ್ದಕ್ಕೆ ಕೆನಡಾ ನಿವಾಸಿಯ ಕೊಲೆ

    ಚಂಡೀಗಢ: ಕೆನಡಾ (Canada) ನಿವಾಸಿಯೊಬ್ಬ ಜೋರಾಗಿ ಸಂಗೀತವನ್ನು (Music) ಹಾಕದಂತೆ ಕೇಳಿದ್ದಕ್ಕೆ ಗುಂಪೊಂದು ಹತ್ಯೆಗೈದ ಘಟನೆ ಪಂಜಾಬ್‍ನ (Pubjab) ರೂಪನಗರ ಜಿಲ್ಲೆಯ ಆನಂದ್‍ಪುರ ಸಾಹಿಬ್ ಪ್ರದೇಶದಲ್ಲಿ ನಡೆದಿದೆ.

    ಪ್ರದೀಪ್ ಸಿಂಗ್ (24) ಮೃತ ವ್ಯಕ್ತಿ. ಆದರೆ ಪ್ರದೀಪ್ ಸಿಂಗ್ ಕೆನಡಾದ ಪ್ರಜೆಯಾಗಿದ್ದು ಅಲ್ಲೇ ವಾಸಿಸುತ್ತಿದ್ದ. ಈ ವರ್ಷದ ಫೆಬ್ರವರಿಯಲ್ಲಿ ಪ್ರದೀಪ್ ಸಿಂಗ್ ಭಾರತಕ್ಕೆ ಬಂದಿದ್ದ. ಪ್ರದೀಪ್ ಸಿಂಗ್ ಪೋಷಕರಿಗೆ ಒಬ್ಬನೇ ಪುತ್ರನಾಗಿದ್ದು, ಈತ ತನ್ನ ಸ್ವಂತ ಊರಿಗೆ ಬಂದಿದ್ದ.

    ನಿರಂಜನ್ ಸಿಂಗ್ ಹಾಗೂ ಇತರರು ವಾಹನದಲ್ಲಿ ತಿರುಗಾಡುತ್ತಿದ್ದರು. ಈ ವೇಳೆ ಆರೋಪಿಗಳು ದೊಡ್ಡದಾಗಿ ಹಾಡು ಹಾಕಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಪ್ರದೀಪ್ ಹಾಡಿನ ಸೌಂಡ್‍ನ್ನು ಕಡಿಮೆ ಮಾಡಲು ತಿಳೀಸಿದ್ದಾನೆ. ಈ ಹಿನ್ನೆಲೆಯಲ್ಲಿ ಪ್ರದೀಪ್ ಮೇಲೆ ಆ ಗುಂಪು ಹಲ್ಲೆ ನಡೆಸಿದೆ.

    ಘಟನೆ ವೇಳೆ ತೀವ್ರ ಗಾಯಗೊಂಡಿದ್ದ ಪ್ರದೀಪ್‍ನನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಆತ ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ಇದನ್ನೂ ಓದಿ: ಫಾಸ್ಟ್ ಟ್ಯಾಗ್‌ನಲ್ಲಿ ಹಣವಿಲ್ಲದೇ ಟೋಲ್ ಬಳಿಯೇ ನಿಂತ‌ ಇವಿ ಬಸ್‌ಗಳು

    ಘಟನೆಗೆ ಸಂಬಂಧಿಸಿ ಸ್ಥಳೀಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ವದಂತಿಗಳಿಗೆ ಯಾವುದೇ ಕಿವಿಗೊಡಬೇಡಿಮ ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವಿಧಾನಸೌಧದಲ್ಲಿನ ಎಣ್ಣೆ ಬಾಟ್ಲಿ ಹಿಂದಿನ ಕಥೆ ರಿವೀಲ್

  • ಖಲಿಸ್ತಾನಿ ಪರ ಹೋರಾಟಗಾರ ಅಮೃತ್‌ಪಾಲ್‌ ಸಿಂಗ್‌ಗೆ ಐಎಸ್‌ಐ ಬೆಂಬಲ

    ಖಲಿಸ್ತಾನಿ ಪರ ಹೋರಾಟಗಾರ ಅಮೃತ್‌ಪಾಲ್‌ ಸಿಂಗ್‌ಗೆ ಐಎಸ್‌ಐ ಬೆಂಬಲ

    ಚಂಡೀಗಢ: ಖಲಿಸ್ತಾನಿ (Khalistan) ಪರ ಹೋರಾಟಗಾರ, ವಾರೀಸ್ ಪಂಜಾಬ್ ದೇ ಧಾರ್ಮಿಕ ಸಂಸ್ಥೆಯ ಮುಖ್ಯಸ್ಥ ಅಮೃತ್‍ಪಾಲ್ ಸಿಂಗ್ (Amritpal Singh) ದೇಶಕ್ಕೆ ಕಂಟಕವಾಗುವ ರೀತಿ ಕಾಣುತ್ತಿದ್ದು ಆತನಿಗೆ ಪಾಕಿಸ್ತಾನದ ಗುಪ್ತಚರ ಇಲಾಖೆ ಐಎಸ್‌ಐ (ISI) ಬೆಂಬಲವಿದೆ ಎಂದು ಗುಪ್ತಚರ ಇಲಾಖೆ ಹೇಳಿದೆ.

    ಅಮೃತಪಾಲ್‌ ಸಿಂಗ್‌ ಜಾರ್ಜಿಯಾಕ್ಕೆ ಭೇಟಿದ್ದ. ಅಲ್ಲಿ ಆತನಿಗೆ ಬೋಧನೆ ಮಾಡಲಾಗಿದೆ. ಖಾಲಿಸ್ತಾನ ಹೋರಾಟವನ್ನು ಜೀವಂತವಾಗಿಡಲು ಭಾರತದಲ್ಲಿ ಐಎಸ್‌ಐಗೆ ವ್ಯಕ್ತಿ ಬೇಕಿತ್ತು ಎಂದು ಗುಪ್ತಚರ ಇಲಾಖೆಯ ಮೂಲಗಳನ್ನು ಉಲ್ಲೇಖಿಸಿ ಮಾಧ್ಯಮ ವರದಿ ಮಾಡಿದೆ.

    ನಾನು ಭಾರತೀಯನೇ ಅಲ್ಲ, ಪಾಸ್‍ಪೋರ್ಟ್ ಇದ್ದ ಮಾತ್ರಕ್ಕೆ ನಾನು ಭಾರತೀಯ ವ್ಯಕ್ತಿಯಾಗುವುದಿಲ್ಲ. ಅದು ಕೇವಲ ಟ್ರಾವೆಲ್ ಡಾಕ್ಯುಮೆಂಟ್ ಎಂದು ಹೇಳಿಕೊಂಡಿದ್ದಾನೆ. ಸಿದ್ದಾಂತಕ್ಕೆ ಸಾವಿಲ್ಲ. ನಮ್ಮ ಸಿದ್ದಾಂತವೂ ಅಷ್ಟೇ. ಖಲಿಸ್ತಾನ್ ತಡೆಯಲು ನೋಡಿದರೆ ಇಂದಿರಾ ಗಾಂಧಿಗೆ ಆದ ಗತಿಯೇ ಅಮಿತ್ ಶಾಗೂ ಎದುರಾಗಲಿದೆ ಎಂದು ಬಹಿರಂಗವಾಗಿ ಎಚ್ಚರಿಕೆ ನೀಡಿದ್ದಾನೆ.  ಇದನ್ನೂ ಓದಿ: ಭಾರತ ಮಾತ್ರವಲ್ಲದೇ ವಿದೇಶದಲ್ಲೂ ಅಂಬಾನಿ, ಕುಟುಂಬಕ್ಕೆ z+ ಭದ್ರತೆ ನೀಡಿ: ಸುಪ್ರೀಂ

    ಖಲಿಸ್ತಾನಿ ಪರ ಸಹಾನುಭೂತಿ ಇರುವವರು ಅಮೃತ್‍ಪಾಲ್ ಸಿಂಗ್‍ನನ್ನು ಎರಡನೇ ಬಿಂದ್ರನ್‍ವಾಲೆ ಎಂದು ಗುಣಗಾನ ಮಾಡುತ್ತಿದ್ದಾರೆ. ಅಮೃತ್‍ಪಾಲ್ ಸಿಂಗ್ ವೇಷಭೂಷಣವೂ ಬಿಂದ್ರನ್‍ವಾಲೆ ಸ್ಟೈಲ್‍ನಲ್ಲಿಯೇ ಇದೆ. ಅಮೃತ್‍ಪಾಲ್ ಸಿಂಗ್‌ಗೆ ಆಪ್‌ ಬೆಂಬಲ ನೀಡುತ್ತಿದೆ ಎಂದು ವಿರೋಧ ಪಕ್ಷಗಳು ಟೀಕೆ ಮಾಡಿವೆ.

    ಅಮಿತ್ ಶಾ (Amit Shah) ಅವರನ್ನೇ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದರೂ, ಈವರೆಗೂ ಅಮೃತ್‍ಪಾಲ್ ಸಿಂಗ್ ಮತ್ತು ಅವರ ಅನುಯಾಯಿಗಳ ವಿರುದ್ಧ ಈವರೆಗೂ ಒಂದೇ ಒಂದು ಕೇಸ್ ದಾಖಲಾಗದಿರುವುದು ಈ ಅನುಮಾನಕ್ಕೆ ಪುಷ್ಠಿ ಕೊಡುತ್ತಿದೆ. ಪಂಜಾಬ್‍ನಲ್ಲಿ ಕಳೆದ ಚುನಾವಣೆಯಲ್ಲಿ ಆಪ್ ವಿಜಯದ ಹಿಂದೆ ಖಲಿಸ್ತಾನಿ ಶಕ್ತಿಗಳ ಕೈವಾಡವಿರುವ ಬಗ್ಗೆಯೂ ಶಂಕೆ ವ್ಯಕ್ತವಾಗುತ್ತಿದೆ.

  • ಕೊಲೆ ಆರೋಪಿ ಪತ್ತೆಗೆ ನೆರವಾಯ್ತು ಆ ಒಂದು ಮಿಸ್ಡ್‌ಕಾಲ್!

    ಕೊಲೆ ಆರೋಪಿ ಪತ್ತೆಗೆ ನೆರವಾಯ್ತು ಆ ಒಂದು ಮಿಸ್ಡ್‌ಕಾಲ್!

    ನವದೆಹಲಿ: ನಂಗ್ಲೋಯ್ ಪ್ರದೇಶದ 11 ವರ್ಷದ ಬಾಲಕಿಯ ಕೊಲೆ ಪ್ರಕರಣ ಭೇದಿಸಲು ಪೊಲೀಸರಿಗೆ ನೆರವಾಗಿದ್ದು ಒಂದು ಮಿಸ್ಡ್‍ಕಾಲ್ (Missed call). ಹತ್ಯೆಯಾದ ಬಾಲಕಿ ತಾಯಿಯ ಮೊಬೈಲ್‍ಗೆ (Mobile) ಅಪರಿಚಿತ ನಂಬರ್‍ನಿಂದ ಬಂದಿದ್ದ ಮಿಸ್ಡ್‌ಕಾಲ್‌ನಿಂದ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾದರು.‌

    ಫೆ. 9ರಂದು ಮನೆಯಿಂದ ಶಾಲೆಗೆ ಹೊರಟಿದ್ದ ಬಾಲಕಿ ನಾಪತ್ತೆಯಾಗಿದ್ದಳು. ಅದೇ ದಿನ ಬೆಳಗ್ಗೆ 11:50ರ ಸಮಯಕ್ಕೆ ಬಾಲಕಿಯ ತಾಯಿಗೆ ಅಪರಿಚಿತ ಸಂಖ್ಯೆಯಿಂದ ಮಿಸ್ಡ್‌ಕಾಲ್ ಬಂದಿತ್ತು. ನಂತರ ವಾಪಸ್ ಅದೇ ನಂಬರ್‍ಗೆ ಕರೆ ಮಾಡಿದಾಗ ಸ್ವಿಚ್ ಆಫ್ (switch off) ಆಗಿತ್ತು. ಇದನ್ನೂ ಓದಿ: ಸಚಿವರು ವಿಮಾನದ ಬ್ಯುಸಿನೆಸ್‌ ಕ್ಲಾಸ್‌ನಲ್ಲಿ ಪ್ರಯಾಣಿಸುವಂತಿಲ್ಲ, 5 ಸ್ಟಾರ್‌ ಹೋಟೆಲ್‌ನಲ್ಲಿ ಉಳಿಯುವಂತಿಲ್ಲ – ಪಾಕ್‌ ಸರ್ಕಾರ

    ಕೊಲೆಯಾದ ಬಾಲಕಿಯ ಪೋಷಕರು, ಆಕೆ ನಾಪತ್ತೆಯಾದ ದಿನವೇ ಕಾಣೆಯಾಗಿರುವುದಾಗಿ ದೂರು ನೀಡಿದ್ದರು. ಮರುದಿನ ಫೆ. 10ರಂದು ಬಾಲಕಿ ಅಪಹರಣವಾಗಿರುವ ಶಂಕೆ ವ್ಯಕ್ತಪಡಿಸಿ ಮತ್ತೆ ದೂರು ದಾಖಲಿಸಿದ್ದರು. ಈ ಘಟನೆ ನಡೆದ 12 ದಿನಗಳ ಬಳಿಕ ಆರೋಪಿ ರೋಹಿತ್ ಅಲಿಯಾಸ್ ವಿನೋದ್‍ನನ್ನು (21) ಪೊಲೀಸರು ಬಂಧಿಸಿದ್ದಾರೆ.

    ಪೊಲೀಸರು ತನಿಖೆ ಕೈಗೊಂಡು ಮೊಬೈಲ್ ಟ್ರೇಸ್ ಮಾಡಿ ಪಂಜಾಬ್ (Punjab) ಮತ್ತು ಮಧ್ಯಪ್ರದೇಶದಲ್ಲಿ (Madhya Pradesh) ದಾಳಿ ನಡೆಸಿದ್ದರು. ಫೆ. 21 ರಂದು ಆರೋಪಿಯನ್ನು ಪತ್ತೆಹಚ್ಚಿ ವಿಚಾರಣೆ ನಡೆಸಿದಾಗ ಕೃತ್ಯ ಎಸಗಿರುವುದಾಗಿ ಒಪ್ಪಿಕೊಂಡಿದ್ದಾನೆ. ಬಾಲಕಿಯ ಶವವನ್ನು ಘೇವ್ರಾ ಮೋರ್ ಬಳಿ ಎಸೆದಿದ್ದಾಗಿ ತಿಳಿಸಿದ್ದಾನೆ. ಕೊಳೆತ ಸ್ಥಿತಿಯಲ್ಲಿದ್ದ ಬಾಲಕಿಯ ಶವವನ್ನು ಮುಂಡ್ಕಾ ಗ್ರಾಮದ ಬಳಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆಗೆ ಮೃತದೇಹ ಕಳುಹಿಸಲಾಗಿದೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ.

    ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಲೈಂಗಿಕ ದೌರ್ಜನ್ಯ ನಡೆದಿದ್ದರೆ ಮರಣೋತ್ತರ ಪರೀಕ್ಷೆಯ ವರದಿ ದೃಢಪಡಿಸಲಿದೆ. ಪ್ರಕರಣದ ತನಿಖೆ ಪ್ರಗತಿಯಲ್ಲಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ಮನೆ ಮಠ ಬಿಟ್ಟು ಪಕ್ಷ ಕಟ್ಟಿದ್ದಾರೆ- ಯಡಿಯೂರಪ್ಪ ಕೊಂಡಾಡಿದ ಯತ್ನಾಳ್

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಭ್ರಷ್ಟಾಚಾರ ಆರೋಪ – ಪಂಜಾಬ್ ಆಪ್ ಶಾಸಕ ಬಂಧನ

    ಭ್ರಷ್ಟಾಚಾರ ಆರೋಪ – ಪಂಜಾಬ್ ಆಪ್ ಶಾಸಕ ಬಂಧನ

    ಚಂಡೀಗಢ: ಆಡಳಿತ ಪಕ್ಷ ಆಮ್ ಆದ್ಮಿಯ ಶಾಸಕ (AAP) ಅಮಿತ್ ರತ್ತನ್ ಕೋಟ್ಛಟ್ಟಾ (Amit Rattan Kotfatta) ಅವರನ್ನು ಭ್ರಷ್ಟಾಚಾರ ಪ್ರಕರಣದಲ್ಲಿ ಪಂಜಾಬ್ ( Punjab) ವಿಜಿಲೆನ್ಸ್ ಬ್ಯುರೋ ಪಟಿಯಾಲದಲ್ಲಿ ಬಂಧಿಸಿದೆ.

     

    ಸಹಾಯಕ ನಾಲ್ಕು ಲಕ್ಷ ರೂ. ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದಿದ್ದ. ಈ ಪ್ರಕರಣದಲ್ಲಿ ಬಟಿಂಡಾ ಗ್ರಾಮೀಣ ಕ್ಷೇತ್ರದ ಪ್ರತಿನಿಧಿಯಾಗಿರುವ ಕೋಟ್ಫಟ್ಟಾ ಅವರ ಪಾತ್ರ ಇರುವುದಕ್ಕೆ ಬಲವಾದ ಸಾಕ್ಷಿಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಕೊರೊನಾಕ್ಕೆ ಹೆದರಿ 3 ವರ್ಷದಿಂದ ಮನೆಯೊಳಗೆ ಅಪ್ರಾಪ್ತ ಮಗನೊಂದಿಗೆ ತಾನು ಬಂಧಿಯಾದ ತಾಯಿ

    ಘುದ್ದಾ ಗ್ರಾಮದ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನ ಬಿಡುಗಡೆ ಮಾಡಲು ಕೋಟ್ಫಟ್ಟಾ ಮತ್ತು ಅವರ ಸಹಾಯಕ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ ಎಂದು ಬಟಿಂಡಾ ನಿವಾಸಿ ಪ್ರೀತ್ಪಾಲ್ ಕುಮಾರ್ ಆರೋಪಿಸಿದ್ದಾರೆ. ಕುಮಾರ್ ನೀಡಿದ ದೂರಿನಲ್ಲಿ ರಶಿಮ್ ಗಾರ್ಗ್ ಅವರನ್ನು ಬಟಿಂಡಾದಲ್ಲಿರುವ ಕೋಟ್ಫಟ್ಟಾ ಅವರ ನಿವಾಸಕ್ಕೆ ಆಹ್ವಾನಿಸಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾರೆ. ಈ ಕುರಿತು ವಾಯ್ಸ್ ರೆಕಾರ್ಡ್‍ನ್ನು ತಮ್ಮ ದೂರಿನೊಂದಿಗೆ ಸಲ್ಲಿಸಿದ್ದರು. ಸರ್ಕಾರದ ಅತಿಥಿ ಗೃಹದಲ್ಲಿ ಗಾರ್ಗ್ ಹಣ ಪಡೆಯುವಾಗ ಸಿಕ್ಕಿಬಿದ್ದಿದ್ದರು. ಈ ಸಂದರ್ಭದಲ್ಲಿ ಅಲ್ಲೇ ಇದ್ದ ಕೋಟ್ಫಾಟ್ಟಾ ಅವರನ್ನು ಪ್ರಶ್ನಿಸಲಾಗಿತ್ತು.

    ಕೋಟ್ಫಾಟ್ಟಾ ಪರವಾಗಿ ಅವರ ಸಹಾಯಕ ರಶೀಮ್ ಗಾರ್ಗ್ (Rashim Garg) ಲಂಚ ಸಂಗ್ರಹಿಸಿದ್ದಾರೆ ಎಂಬುದು ಸ್ಪಷ್ಟವಾಗಿ ತಿಳಿದು ಬಂದಿದೆ ಎಂದು ಹೆಸರು ಹೇಳಲಿಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಇದನ್ನೂ ಓದಿ: ʻಮಾರ್ಕ್ ಆ್ಯಂಟನಿʼ ಶೂಟಿಂಗ್‌ ವೇಳೆ ಅವಘಢ: ಅಪಘಾತದಿಂದ ಪಾರಾದ ನಟ ವಿಶಾಲ್‌

    ಬಂಧನದ ನಂತರ ಅವರನ್ನು ಬಟಿಂಡಾಗೆ ಕರೆದೊಯ್ಯಲಾಯಿತು. ಅಲ್ಲಿಂದ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ಭ್ರಷ್ಟಾಚಾರ ಆರೋಪದ ಮೇಲೆ ಬಂಧನವಾಗುತ್ತಿರುವ ಆಪ್ ಪಕ್ಷದ ಎರಡನೇ ಶಾಸಕ ಇವರಾಗಿದ್ದಾರೆ. ಕಳೆದ ಮೇ ತಿಂಗಳಲ್ಲಿ ಟೆಂಡರ್ ಹಂಚಿಕೆಯಲ್ಲಿ 1% ಕಮಿಷನ್ ಬೇಡಿಕೆ ಆರೋಪದ ಮೇಲೆ ಆರೋಗ್ಯ ಸಚಿವ ವಿಜಯ್ ಸಿಂಗ್ಲಾ (Vijay Singla) ಅವರನ್ನು ಬಂಧಿಸಲಾಗಿತ್ತು.

    LIVE TV
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಜೋಡೋ ಯಾತ್ರೆ ವೇಳೆ ಭದ್ರತಾ ಲೋಪ – ರಾಗಾ ಅಪ್ಪಿಕೊಳ್ಳಲು ಓಡಿದ ವ್ಯಕ್ತಿ

    ಜೋಡೋ ಯಾತ್ರೆ ವೇಳೆ ಭದ್ರತಾ ಲೋಪ – ರಾಗಾ ಅಪ್ಪಿಕೊಳ್ಳಲು ಓಡಿದ ವ್ಯಕ್ತಿ

    ಚಂಡೀಗಢ: ಕಾಂಗ್ರೆಸ್ (Congress) ನಡೆಸುತ್ತಿರುವ ಭಾರತ್ ಜೋಡೋ ಯಾತ್ರೆಯ (Bharat Jodo Yatra) ವೇಳೆ ಭದ್ರತಾ ಲೋಪವಾಗಿರುವ (Security Lapse) ಘಟನೆ ಮಂಗಳವಾರ ನಡೆದಿದೆ.

    ಪಂಜಾಬ್‌ನ (Punjab) ಹೋಶಿಯಾರ್‌ಪುರದಲ್ಲಿ (Hoshiarpur) ಸಾಗುತ್ತಿರುವ ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು (Rahul Gandhi) ಅಪ್ಪಿಕೊಳ್ಳಲು ವ್ಯಕ್ತಿಯೊಬ್ಬ ಅವರತ್ತ ಓಡಿರುವ ಘಟನೆ ವರದಿಯಾಗಿದೆ. ಆದರೆ ತಮ್ಮ ಸುತ್ತಲೂ ಸಾಗುತ್ತಿದ್ದ ಕಾಂಗ್ರೆಸ್‌ನ ಇತರ ಕಾರ್ಯಕರ್ತರು ಆತನನ್ನು ತಕ್ಷಣವೇ ತಡೆದಿದ್ದಾರೆ.

    ಕೆಲ ದಿನಗಳ ಹಿಂದೆಯಷ್ಟೇ ಜೋಡೋ ಪಾದಯಾತ್ರೆ ದೆಹಲಿಯಲ್ಲಿ ಸಾಗುತ್ತಿದ್ದ ಸಂದರ್ಭ ರಾಗಾ ಅವರಿಗೆ ಭದ್ರತೆ ಒದಗಿಸುವಲ್ಲಿ ದೆಹಲಿ ಪೊಲೀಸರು ಸಂಪೂರ್ಣ ವಿಫಲರಾಗಿದ್ದಾರೆ ಎಂದು ಕಾಂಗ್ರೆಸ್ ಆರೋಪಿಸಿತ್ತು. ಆದರೆ ರಾಹುಲ್ ಅವರೇ 2020 ರಿಂದ 113 ಬಾರಿ ಭದ್ರತಾ ನಿಯಮಾವಳಿಗಳನ್ನು ಉಲ್ಲಂಘಿಸಿರುವುದಾಗಿ ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ತಿರುಗೇಟು ನೀಡಿತ್ತು. ಇದನ್ನೂ ಓದಿ: ಬುದ್ಗಾಮ್ ಕೋರ್ಟ್‌ ಸಂಕೀರ್ಣದ ಬಳಿ ಎನ್‌ಕೌಂಟರ್‌ – ಇಬ್ಬರು ಉಗ್ರರ ಹತ್ಯೆ

    ಭಾರತ್ ಜೋಡೋ ಯಾತ್ರೆ ಮಂಗಳವಾರ ಬೆಳಗ್ಗೆ ಹೋಶಿಯಾರ್‌ಪುರದ ತಾಂಡಾದಿAದ ಪುನರಾರಂಭವಾಯಿತು. ಪಕ್ಷದ ಪಂಜಾಬ್ ಮುಖ್ಯಸ್ಥ ಅಮರೀಂದರ್ ಸಿಂಗ್ ರಾಜಾ ವಾರಿಂಗ್, ಹರೀಶ್ ಚೌಧರಿ, ಹಾಗೂ ರಾಜ್ ಕುಮಾರ್ ಚಬ್ಬೇವಾಲ್ ಸೇರಿದಂತೆ ಪಕ್ಷದ ಹಿರಿಯ ನಾಯಕರು ಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ. ಇದನ್ನೂ ಓದಿ: ಮೋದಿ ರೋಡ್ ಶೋ ವೇಳೆ ಭದ್ರತಾ ಲೋಪ – ಬ್ಯಾರಿಕೇಡ್ ಹಾರಿ ಕಾರಿನತ್ತ ನುಗ್ಗಿದ ಬಾಲಕ

    Live Tv
    [brid partner=56869869 player=32851 video=960834 autoplay=true]

    Join our Whatsapp group by clicking the below link
    https://chat.whatsapp.com/E6YVEDajTzH06LOh77r25k

  • ಪಂಜಾಬ್‌ ಸಿಎಂ ಭಗವಂತ್‌ ಮಾನ್‌ ಮನೆ ಸಮೀಪ ಬಾಂಬ್‌ ಪತ್ತೆ – ಸ್ಥಳಕ್ಕೆ ದೌಡಾಯಿಸಿದ ಬಾಂಬ್‌ ನಿಷ್ಕ್ರಿಯ ದಳ

    ಪಂಜಾಬ್‌ ಸಿಎಂ ಭಗವಂತ್‌ ಮಾನ್‌ ಮನೆ ಸಮೀಪ ಬಾಂಬ್‌ ಪತ್ತೆ – ಸ್ಥಳಕ್ಕೆ ದೌಡಾಯಿಸಿದ ಬಾಂಬ್‌ ನಿಷ್ಕ್ರಿಯ ದಳ

    ಚಂಡೀಗಢ: ಪಂಜಾಬ್‌ (Punjab) ಮುಖ್ಯಮಂತ್ರಿ ಭಗವಂತ್‌ ಮಾನ್‌ (Bhagwant Mann) ಅವರ ಮನೆಯ ಸಮೀಪ ಬಾಂಬ್‌ (Bomb) ಪತ್ತೆಯಾಗಿದೆ. ಮನೆ ಬಳಿಯ ಹೆಲಿಪ್ಯಾಡ್‌ನಲ್ಲಿ ಈ ಬಾಂಬ್‌ ಕಂಡುಬಂದಿದೆ.

    ಈ ಪ್ರದೇಶವು ಹೆಚ್ಚಿನ ಭದ್ರತೆಯನ್ನು ಹೊಂದಿದೆ. ಹರಿಯಾಣ ಸಿಎಂ ಮನೋಹರ್ ಲಾಲ್ ಖಟ್ಟರ್ ಅವರ ನಿವಾಸವೂ ಇದಕ್ಕೆ ಹತ್ತಿರದಲ್ಲಿದೆ. ಇದನ್ನೂ ಓದಿ: ನೋಟು ನಿಷೇಧದ ಅಧಿಸೂಚನೆಯೇ ಕಾನೂನುಬಾಹಿರ: ನ್ಯಾ.ನಾಗರತ್ನ

    ಪಂಜಾಬ್ ಮತ್ತು ಹರಿಯಾಣ ಸೆಕ್ರೆಟರಿಯೇಟ್ ಮತ್ತು ಅಸೆಂಬ್ಲಿ ಕೂಡ ಬಾಂಬ್ ಪತ್ತೆಯಾದ ಸ್ಥಳಕ್ಕೆ ಸಮೀಪದಲ್ಲಿದೆ.

    ಪಂಜಾಬ್ ಹಾಗೂ ಹರಿಯಾಣ ಸಿಎಂ ಹೌಸ್‌ನ ಹೆಲಿಪ್ಯಾಡ್‌ನಿಂದ ಸ್ವಲ್ಪ ದೂರದಲ್ಲಿರುವ ಸ್ಥಳಕ್ಕೆ ಬಾಂಬ್ ನಿಷ್ಕ್ರಿಯ ದಳವನ್ನು ತಕ್ಷಣವೇ ರವಾನಿಸಲಾಯಿತು. ಭಾರತೀಯ ಸೇನೆಯ ವೆಸ್ಟರ್ನ್ ಕಮಾಂಡ್ ಕೂಡ ತನಿಖೆಗಾಗಿ ಸ್ಥಳಕ್ಕೆ ಬಂದಿದೆ. ಇದನ್ನೂ ಓದಿ: ತುನಿಷಾಳನ್ನು ಆಕೆ ತಾಯಿ ಸರಿಯಾಗಿ ನೋಡಿಕೊಳ್ತಿರಲಿಲ್ಲ; ಅಣ್ಣನ ವಿರುದ್ಧದ ಆರೋಪಗಳು ಸುಳ್ಳು – ಶೀಜಾನ್‌ ಖಾನ್‌ ಸಹೋದರಿ

    Live Tv
    [brid partner=56869869 player=32851 video=960834 autoplay=true]

  • ಲೂಧಿಯಾನ ಕೋರ್ಟ್ ಸ್ಫೋಟದ ಆರೋಪಿ, ಭಯೋತ್ಪಾದಕ ಹರ್‌ಪ್ರೀತ್ ಸಿಂಗ್ ಬಂಧನ

    ಲೂಧಿಯಾನ ಕೋರ್ಟ್ ಸ್ಫೋಟದ ಆರೋಪಿ, ಭಯೋತ್ಪಾದಕ ಹರ್‌ಪ್ರೀತ್ ಸಿಂಗ್ ಬಂಧನ

    ನವದೆಹಲಿ: ಕಳೆದ ವರ್ಷ ಪಂಜಾಬ್‌ನ (Punjab) ಲೂಧಿಯಾನದ ಕೋರ್ಟ್‌ನಲ್ಲಿ (Ludhiana Court) ಬಾಂಬ್ ಸ್ಫೋಟಿಸಿದ (Bomb Blast) ಪ್ರಕರಣದ ಆರೋಪಿ ಹಾಗೂ ಮೋಸ್ಟ್ ವಾಂಟೆಡ್ ಭಯೋತ್ಪಾದಕ (Terrorist) ಹರ್‌ಪ್ರೀತ್ ಸಿಂಗ್‌ನನ್ನು (Harpreet Singh) ನವದೆಹಲಿಯ ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ.

    ಪಂಜಾಬ್‌ನ ಅಮೃತಸರ ನಿವಾಸಿ ಹರ್‌ಪ್ರೀತ್ ಸಿಂಗ್ ಅಲಿಯಾಸ್ ಹ್ಯಾಪಿ ಮಲೇಷ್ಯಾ ಇಂದು ಬೆಳಗ್ಗೆ ಕೌಲಾಲಂಪುರದಿಂದ ನವದೆಹಲಿ ವಿಮಾನ ನಿಲ್ದಾಣಕ್ಕೆ ಬಂದ ಕೆಲವೇ ಹೊತ್ತಿನಲ್ಲಿ ಬಂಧಿಸಲಾಗಿದೆ. ಆತನ ಬಳಿ 10 ಲಕ್ಷ ರೂ. ನಗದು ಪತ್ತೆಯಾಗಿರುವುದಾಗಿ ಎನ್‌ಐಎ ವಕ್ತಾರರು ತಿಳಿಸಿದ್ದಾರೆ.

    Ludhiana

    ಕಳೆದ ವರ್ಷ ಡಿಸೆಂಬರ್‌ನಲ್ಲಿ ಲೂಧಿಯಾನದ ಕೋರ್ಟ್ ಕಟ್ಟಡದಲ್ಲಿ ನಡೆದ ಭೀಕರ ಬಾಂಬ್ ಸ್ಫೋಟದಿಂದಾಗಿ ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದು, 6 ಮಂದಿ ಗಾಯಗೊಂಡಿದ್ದರು. ಈ ಬಾಂಬ್ ಸ್ಫೋಟದ ಹಿಂದೆ ಹರ್‌ಪ್ರೀತ್ ಸಿಂಗ್ ಪ್ರಮುಖ ಸಂಚನ್ನು ರೂಪಿಸಿದ್ದ ಎನ್ನಲಾಗಿದೆ. ಇದನ್ನೂ ಓದಿ: ಸಿಧು ಹತ್ಯೆಯ ಮಾಸ್ಟರ್ ಮೈಂಡ್ ಕ್ಯಾಲಿಫೋರ್ನಿಯಾದಲ್ಲಿ ಬಂಧನ

    ಈತ ಪಾಕಿಸ್ತಾನ ಮೂಲದ ಸ್ವಯಂಘೋಷಿತ ಇಂಟರ್‌ನ್ಯಾಷನಲ್ ಸಿಖ್ ಯೂತ್ ಫೆಡರೇಶನ್ (ಐಎಸ್‌ವೈಎಫ್) ಮುಖ್ಯಸ್ಥ ಲಖ್ಬೀರ್ ಸಿಂಗ್ ರೋಡ್‌ನ ಸಹವರ್ತಿಯಾಗಿದ್ದು, ಆತನೊಂದಿಗೆ ಸೇರಿಕೊಂಡೇ ಲೂಧಿಯಾನ ಸ್ಫೋಟದ ಸಂಚನ್ನು ರೂಪಿಸಿದ್ದ ಎಂಬುದು ತನಿಖೆಯಲ್ಲಿ ತಿಳಿದುಬಂದಿದೆ.

    ಹರ್‌ಪ್ರೀತ್ ಸಿಂಗ್ ಸ್ಫೋಟಕಗಳು, ಶಸ್ತ್ರಾಸ್ತ್ರಗಳು ಹಾಗೂ ಮಾದಕ ವಸ್ತುಗಳ ಕಳ್ಳಸಾಗಣೆ ಸೇರಿದಂತೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. ಮೋಸ್ಟ್ ವಾಂಟೆಡ್ ಭಯೋತ್ಪಾದಕ ಎಂದು ಎನ್‌ಐಎ ತಿಳಿಸಿದೆ. ಇದನ್ನೂ ಓದಿ: “ಬ್ರಾಹ್ಮಣ ಭಾರತ್ ಛೋಡೋ” – ಜೆಎನ್‍ಯು ಕ್ಯಾಂಪಸ್ ಗೋಡೆಗಳ ಮೇಲೆ ವಿವಾದಾತ್ಮಕ ಬರಹ

    Live Tv
    [brid partner=56869869 player=32851 video=960834 autoplay=true]