Tag: punjab

  • ಪಂಜಾಬ್‌ನಲ್ಲಿ ಸಿಎಂ ನಿವಾಸದ ಮುಂದೆ ಪ್ರತಿಭಟನೆ – ರೈತರ ಮೇಲೆ ಲಾಠಿ ಪ್ರಹಾರ

    ಪಂಜಾಬ್‌ನಲ್ಲಿ ಸಿಎಂ ನಿವಾಸದ ಮುಂದೆ ಪ್ರತಿಭಟನೆ – ರೈತರ ಮೇಲೆ ಲಾಠಿ ಪ್ರಹಾರ

    ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್(Bhagwant Mann) ಅವರು ಗುಜರಾತ್‌ನಲ್ಲಿ ವಿಧಾನಸಭೆ ಚುನಾವಣೆಗೆ (Gujarat Election) ಎಎಪಿ (AAP) ಅಭ್ಯರ್ಥಿಗಳ ಪರ ಭರ್ಜರಿ ಪ್ರಚಾರದಲ್ಲಿ ತೊಡಗಿದ್ದರೆ, ಇತ್ತ ಸಂಗ್ರೂರ್‌ನಲ್ಲಿರುವ ಅವರ ಮನೆಯ ಹೊರಗೆ ಪ್ರತಿಭಟನೆಯ ಕಿಚ್ಚು ಹೊತ್ತಿದೆ.

    ಕೃಷಿ ಕಾರ್ಮಿಕರು ಹಾಗೂ ವ್ಯಾಪಾರಿ ಒಕ್ಕೂಟಗಳು ಸಿಎಂ ನಿವಾಸದ ಎದುರು ಪ್ರತಿಭಟನೆ (Protest) ನಡೆಸುತ್ತಿದ್ದು, ಅದು ಪೊಲೀಸರ (Police) ಜೊತೆಗಿನ ಸಂಘರ್ಷಕ್ಕೆ ತಿರುಗಿದೆ. ಪ್ರತಿಭಟನಾಕಾರರ ಗುಂಪನ್ನು ಚದುರಿಸಿ ಪರಿಸ್ಥಿತಿ ನಿಯಂತ್ರಣಕ್ಕೆ ತರಲು ಪೊಲೀಸರು ಲಾಠಿ ಪ್ರಹಾರ (Police Lathicharge) ನಡೆಸಿದ್ದಾರೆ.

    ಸುಮಾರು 8 ಕೃಷಿ ಕಾರ್ಮಿಕ ಸಂಘಟನೆಗಳ ನೇತೃತ್ವದಲ್ಲಿ ನೂರಾರು ರೈತರು ತಮ್ಮ ಬೇಡಿಕೆಗಳನ್ನ ಈಡೇರಿಸುವಂತೆ ಸಿಎಂ ಭಗವಂತ್ ಮಾನ್ ಅವರ ನಿವಾಸದ ಎದುರು ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ರೈತರು (Farmers) ರೊಚ್ಚಿಗೇಳುವ ಮುನ್ನವೇ ಪೊಲೀಸರು ಲಾಠಿ ಪ್ರಹಾರ ನಡೆಸಿ ಪ್ರತಿಭಟನಾಕಾರರ ಗುಂಪನ್ನು ಚದುರಿಸಿದ್ದಾರೆ. ಇದನ್ನೂ ಓದಿ: ಪಾಕ್ ಕದನಕ್ಕೂ ಮುನ್ನವೇ ಇಂಗ್ಲೆಂಡ್‌ಗೆ ಆಘಾತ – ಹೆಸರಿಲ್ಲದ ವೈರಸ್‌ಗೆ ತುತ್ತಾದ ಸ್ಟೋಕ್ಸ್ ಪಡೆ

    ಮಹಾತ್ಮಗಾಂಧಿ ನರೇಗಾ ಯೋಜನೆ – 2005ರ (MGNAREGA) ಅಡಿಯಲ್ಲಿ ದಿನನಿತ್ಯದ ಕೂಲಿಯನ್ನು 700 ರೂಪಾಯಿಗಳಿಗೆ ಹೆಚ್ಚಿಸಬೇಕು. ದಲಿತರಿಗಾಗಿ ಮಾರ್ಲಾ ಭೂಮಿ ಯೋಜನೆಯನ್ನು ಜಾರಿಗೆ ತರಬೇಕು ಹಾಗೂ ಪಂಚಾಯ್ತಿ ಭೂಮಿಯ ಮೂರನೇ ಒಂದು ಭಾಗವನ್ನು ದಲಿತ ಸಮುದಾಯದವರಿಗೆ (Dalits Community) ಗುತ್ತಿಗೆಗೆ ನೀಡಬೇಕು ಎಂದು ರೈತರು ಆಗ್ರಹಿಸಿದ್ದಾರೆ. ಇದನ್ನೂ ಓದಿ: PFI ಬ್ಯಾನ್ – ಕೇಂದ್ರದ ಆದೇಶ ಪ್ರಶ್ನಿಸಿದ್ದ ಅರ್ಜಿ ವಜಾ

    ಬುಧವಾರ ಬೆಳಿಗ್ಗೆ ಆರಂಭವಾದ ಪ್ರತಿಭಟನೆಯು, ಪಟಿಯಾಲಾ ಬೈಪಾಸ್‌ನಿಂದ ಮುಖ್ಯಮಂತ್ರಿ ನಿವಾಸದ ಕಡೆ ಮೆರವಣಿಗೆ ಮೂಲಕ ತೆರಳಿತ್ತು. ನಂತರ ಪೊಲೀಸರು ಪ್ರತಿಭಟನಾಕಾರರನ್ನು ತಡೆದಾಗ ಘರ್ಷಣೆ ಆರಂಭವಾಯಿತು. ಬಳಿಕ ಘೋಷಣೆ ಕೂಗುತ್ತಿದ್ದ ರೈತರ ಮೇಲೆ ಲಾಠಿ ಚಾರ್ಜ್ ಮಾಡಿದ್ದಾರೆ. ಈ ಸಂದರ್ಭದಲ್ಲಿ ಕೆಲವು ಕಾರ್ಮಿಕರು ಗಾಯಗೊಂಡಿದ್ದಾರೆ.

    ಈ ಹಿಂದೆ 19 ದಿನಗಳ ಪ್ರತಿಭಟನೆ ನಡೆಸಿದಾಗ ರೈತರ ಬೇಡಿಕೆಗಳನ್ನು ಈಡೇರಿಸುವುದಾಗಿ ಸರ್ಕಾರ ಭರವಸೆ ನೀಡಿತ್ತು. ಈಗ ಕಾರ್ಮಿಕರು ಗೇಟ್ ಹೊರಗೆ ಧರಣಿ ಕುಳಿತು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಅಮೃತಸರದಲ್ಲಿ ಪಾಕಿಸ್ತಾನದ ಡ್ರೋನ್ ಅನ್ನು ಹೊಡೆದುರುಳಿಸಿದ ಬಿಎಸ್‌ಎಫ್

    ಅಮೃತಸರದಲ್ಲಿ ಪಾಕಿಸ್ತಾನದ ಡ್ರೋನ್ ಅನ್ನು ಹೊಡೆದುರುಳಿಸಿದ ಬಿಎಸ್‌ಎಫ್

    ಚಂಡೀಗಢ: ಭಾರತದ ಗಡಿ ಭದ್ರತಾ ಪಡೆ (BSF) ಭಯೋತ್ಪಾದನಾ ಚಟುವಟಿಕೆಗಳ ಮೇಲಿನ ತನ್ನ ದಮನವನ್ನು ಮುಂದುವರಿಸಿದೆ. ಪಾಕಿಸ್ತಾನದಿಂದ (Pakistan) ಭಾರತಕ್ಕೆ (India) ಪ್ರವೇಶಿಸಲು ಪ್ರಯತ್ನಿಸುತ್ತಿದ್ದ ಡ್ರೋನ್ (Drone) ಒಂದನ್ನು ಬಿಎಸ್‌ಎಫ್ ಅಧಿಕಾರಿಗಳು ಹೊಡೆದುರುಳಿಸಿದ್ದಾರೆ. ಕೇವಲ 2 ದಿನಗಳ ಹಿಂದೆಯೂ ಇಂತಹುದೇ ಘಟನೆ ನಡೆದಿತ್ತು.

    ಚಹರ್‌ಪುರ್ ಗ್ರಾಮದ ಬಳಿ ಭಾರತದ ಭೂಪ್ರದೇಶಕ್ಕೆ ನುಸುಳುತ್ತಿದ್ದ ಡ್ರೋನ್ ಅನ್ನು ಗಮನಿಸಿದ ಸೈನಿಕರು ಅದರ ಮೇಲೆ ಗುಂಡು ಹಾರಿಸಿದ್ದಾರೆ. ಈ ಮೂಲಕ ಪಾಕಿಸ್ತಾನದ ಮತ್ತೊಂದು ಕಳ್ಳಸಾಗಣೆ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

    ವರದಿಗಳ ಪ್ರಕಾರ ಪಾಕಿಸ್ತಾನದಿಂದ ಭಾರತಕ್ಕೆ ಪ್ರವೇಶಿಸಲು ಪ್ರಯತ್ನಿಸುತ್ತಿದ್ದ ಡ್ರೋನ್‌ನ ಶಬ್ಧ ಕೇಳಿ ಬಿಎಸ್‌ಎಫ್ ಅಧಿಕಾರಿಗಳು ಗುಂಡು ಹಾರಿಸಿದ್ದಾರೆ. ಗುಂಡು ಶಂಕಿತ ಡ್ರೋನ್‌ಗೆ ಬಡಿದು, ಅದು ನೆಲಕ್ಕೆ ಉರುಳಿದೆ. ತಕ್ಷಣ ಪಡೆಗಳು ಸ್ಥಳವನ್ನು ಸುತ್ತುವರಿದಿದ್ದು, ಸಂಬAಧಪಟ್ಟ ಸಂಸ್ಥೆಗಳಿಗೆ ಎಚ್ಚರಿಕೆ ನೀಡಿದ್ದಾರೆ. ಇದನ್ನೂ ಓದಿ: ತಡರಾತ್ರಿ ಎಟಿಎಂಗೆ ಪೂಜೆ – ಕಳ್ಳತನಕ್ಕೆ ಯತ್ನವೋ, ವಾಮಾಚಾರವೋ!?

    ಸೈನಿಕರು ಹೊಡೆದುರುಳಿಸಿದ ಡ್ರೋನ್ ಚಹರ್‌ಪುರ್ ಗ್ರಾಮದಲ್ಲಿ ಗಡಿ ಬೇಲಿಯ ಬಳಿ ದೊರಕಿದೆ. ಡ್ರೋನ್ ಪತ್ತೆಯಾದಾಗ ಅದು ಭಾಗಶಃ ಹಾನಿಯಾದ ಸ್ಥಿತಿಯಲ್ಲಿತ್ತು. ಡ್ರೋನ್ ಕೆಳಗಡೆ ಬಿಳಿ ಬಣ್ಣದ ಪಾಲಿಥಿನ್‌ನಲ್ಲಿ ಶಂಕಿತ ವಸ್ತುವನ್ನು ಅಳವಡಿಸಲಾಗಿದ್ದು, ಅದನ್ನು ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

    ನವೆಂಬರ್ 26ರಂದು ಪಂಜಾಬ್‌ನ ಅಮೃತಸದರದಲ್ಲಿ ಭಾರತ-ಪಾಕಿಸ್ತಾನ ಗಡಿಯಲ್ಲಿ ಬಿಎಸ್‌ಎಫ್ ಸೈನಿಕರು ಪಾಕಿಸ್ತಾನದ ಡ್ರೋನ್ ಅನ್ನು ಹೊಡೆದುರುಳಿಸಿದೆ. ಅದೇ ದಿನ ಪಂಜಾಬ್‌ನ ಪಠಾಣ್‌ಕೋಟ್ ಗಡಿ ಬಳಿ ಭಾರತವನ್ನು ಪ್ರವೇಶಿಸಲು ಪ್ರಯತ್ನಿಸುತ್ತಿದ್ದ ಇಬ್ಬರು ಶಂಕಿತರನ್ನು ತಡೆಹಿಡಿಯಲಾಗಿದೆ. ಇದನ್ನೂ ಓದಿ: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಾಯ್ತು ಫುಟ್‍ಬಾಲ್ ಫಿವರ್ – ಫಿಫಾ ಮಾದರಿ ಆ್ಯಂಥಮ್ ಸಾಂಗ್ ಮಾಡಿದ ವಿದ್ಯಾರ್ಥಿಗಳು

    Live Tv
    [brid partner=56869869 player=32851 video=960834 autoplay=true]

  • ಆಟವಾಡುತ್ತಿದ್ದಾಗ ರೈಲು ಡಿಕ್ಕಿ- ವಲಸೆ ಕಾರ್ಮಿಕರ ಮೂವರು ಮಕ್ಕಳು ದುರ್ಮರಣ

    ಆಟವಾಡುತ್ತಿದ್ದಾಗ ರೈಲು ಡಿಕ್ಕಿ- ವಲಸೆ ಕಾರ್ಮಿಕರ ಮೂವರು ಮಕ್ಕಳು ದುರ್ಮರಣ

    ಚಂಡೀಗಢ: ರೈಲ್ವೇ ಹಳಿ (Railway track) ಮೇಲೆ ಆಟವಾಡುತ್ತಿದ್ದಾಗ ವಲಸೆ ಕಾರ್ಮಿಕರ ಮೂವರು ಮಕ್ಕಳಿಗೆ (Children) ರೈಲು (Train) ಡಿಕ್ಕಿ ಹೊಡೆದು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಪಂಜಾಬ್‌ನ (Punjab)ಕಿರಾತ್‌ಪುರ ಸಾಹಿಬ್ ಬಳಿ ನಡೆದಿದೆ. ಘಟನೆಯ ಕುರಿತು ಪಂಜಾಬ್ ಸರ್ಕಾರ ತನಿಖೆಗೆ ಆದೇಶಿಸಿದೆ.

    ನಗರದ ಸಟ್ಲೆಜ್ ನದಿಯ ಸೇತುವೆ ಸಮೀಪವಿರುವ ರೈಲ್ವೇ ಹಳಿ ಮೇಲೆ ವಲಸೆ ಕಾರ್ಮಿಕರ 4 ಮಕ್ಕಳು ಆಟವಾಡುತ್ತಿದ್ದಾಗ ದುರ್ಘಟನೆ ನಡೆದಿದೆ. ನಾಲ್ಕನೇ ಮಗು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ರಾಜ್ಯ ಕಾಂಗ್ರೆಸ್‍ನಲ್ಲಿ ಟಿಕೆಟ್ ಫೈಟ್- ಕೊಡಗಿನಲ್ಲಿ 2 ಕ್ಷೇತ್ರಗಳಿಗೆ 9 ಜನರಿಂದ ಅರ್ಜಿ

    train

    ಸಾವನ್ನಪ್ಪಿರುವ ಮಕ್ಕಳು 7 ರಿಂದ 11 ವರ್ಷದೊಳಗಿನವರು ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಯ ಬಗ್ಗೆ ಪಂಜಾಬ್ ಶಾಲಾ ಶಿಕ್ಷಣ ಸಚಿವ ಹರ್ಜೋತ್ ಸಿಂಗ್ ಬೈನ್ಸ್ ದುಃಖ ವ್ಯಕ್ತಪಡಿಸಿದ್ದಾರೆ. ಘಟನೆಯ ಬಗ್ಗೆ ತನಿಖೆಗೆ ಆದೇಶಿಸಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಕುಕ್ಕರ್ ಬಾಂಬರ್ ಶಾರೀಕ್ ಹತ್ಯೆಗೆ ಸಂಚು ಶಂಕೆ- ಆಸ್ಪತ್ರೆ ಸುತ್ತ ಹೆಚ್ಚಿದ ಭದ್ರತೆ

    ಅಪಘಾತದಲ್ಲಿ ಮಕ್ಕಳನ್ನು ಕಳೆದುಕೊಂಡ ಕುಟುಂಬಗಳಿಗೆ ಪರಿಹಾರ ನೀಡುವಂತೆ ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಕೋರಿದ್ದಾರೆ.

    Live Tv
    [brid partner=56869869 player=32851 video=960834 autoplay=true]

  • ಪ್ರಿಯಕರನೊಂದಿಗೆ ಸರಸವಾಡಲು ಪತಿಯನ್ನೇ ಕೊಂದ್ಲು – 25 ಅಡಿ ಆಳದ ಶೌಚಾಲಯದ ಗುಂಡಿಯಲ್ಲಿ ಹೂತಿಟ್ಳು

    ಪ್ರಿಯಕರನೊಂದಿಗೆ ಸರಸವಾಡಲು ಪತಿಯನ್ನೇ ಕೊಂದ್ಲು – 25 ಅಡಿ ಆಳದ ಶೌಚಾಲಯದ ಗುಂಡಿಯಲ್ಲಿ ಹೂತಿಟ್ಳು

    ಚಂಡೀಗಢ: ಪ್ರಿಯಕರನ ಜೊತೆ ಸೇರಿ ಮಹಿಳೆಯೊಬ್ಬಳು ತನ್ನ ಪತಿಯ ಕತ್ತು ಹಿಸುಕಿ ಕೊಂದು 25 ಅಡಿ ಆಳದ ಶೌಚಾಲಯದ ಗುಂಡಿಯಲ್ಲಿ ಶವವನ್ನು ಹೂತು ಹಾಕಿರುವ ಘಟನೆ ಪಂಜಾಬ್‍ನ (Punjab) ಸಂಗ್ರೂರ್ (Sangrur) ಜಿಲ್ಲೆಯಲ್ಲಿ ನಡೆದಿದೆ.

    ಬಕ್ಷೀವಾಲಾ ನಿವಾಸಿ ಅಮ್ರಿಕ್ ಸಿಂಗ್ ಮೃತ ದುರ್ದೈವಿಯಾಗಿದ್ದು, ಸುಮಾರು ಒಂದು ತಿಂಗಳ ಬಳಿಕ ಈ ಪ್ರಕರಣ ಬೆಳಕಿಗೆ ಬಂದಿದ್ದು, ಶನಿವಾರ ಮೃತದೇಹವನ್ನು ಶೌಚಾಲಯದ ಗುಂಡಿಯಿಂದ ಹೊರ ತೆಗೆಯಲಾಗಿದೆ. ಇದನ್ನೂ ಓದಿ: ತುಂಗಾತೀರದಲ್ಲಿ ಮಾತ್ರವಲ್ಲ, ಚಾರ್ಮಾಡಿ ತಪ್ಪಲಿನಲ್ಲೂ ನಡೀತಾ ಟ್ರಯಲ್ ಬ್ಲಾಸ್ಟ್?

    ಆರೋಪಿಯನ್ನು 35 ವರ್ಷದ ರಜ್ಜಿ ಕೌರ್ ಅಲಿಯಾಸ್ ಜಸ್ವಿರ್ ಕೌರ್ ಎಂದು ಗುರುತಿಸಲಾಗಿದ್ದು, ತನ್ನ 13 ಮತ್ತು 11 ವರ್ಷದ ಇಬ್ಬರು ಗಂಡು ಮಕ್ಕಳೊಂದಿಗೆ ವಾಸಿಸುತ್ತಿದ್ದಳು. ನವೆಂಬರ್ 20 ರಂದು ತನ್ನ ಪತಿ ನಾಪತ್ತೆಯಾಗಿರುವುದಾಗಿ ಪತಿಗೆ ದೂರು ನೀಡಿದ್ದಾಳೆ. ಪ್ರಕರಣ ಸಂಬಂಧ ತನಿಖೆ ವೇಳೆ ಕೌರ್ ಅದೇ ಪ್ರದೇಶದ ನಿವಾಸಿ ಸುರ್ಜಿತ್ ಸಿಂಗ್ ಬಗ್ಗಾ ಎಂಬಾತನೊಂದಿಗೆ ಅಕ್ರಮ ಸಂಬಂಧ ಹೊಂದಿದ್ದ ವಿಚಾರ ಬಯಲಾಗಿದೆ. ಪ್ರಿಯಕರ ಸುರ್ಜಿತ್ ಜೊತೆ ಸೇರಿ ತನ್ನ ಪತಿಯನ್ನು ಅಕ್ಟೋಬರ್ 27ರಂದು ಕೊಂದಿರುವುದಾಗಿ ಮಹಿಳೆ ತಪ್ಪೊಪ್ಪಿಕೊಂಡಿದ್ದಾಳೆ ಎಂದು ಸಂಗ್ರೂರ್ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‍ಎಸ್‍ಪಿ) ಸುರೇಂದ್ರ ಲಂಬಾ ತಿಳಿಸಿದ್ದಾರೆ.

    ಅಕ್ಟೋಬರ್ 27ರ ಸಂಜೆ ತನ್ನ ಪತಿ ಅಮ್ರಿಕ್‍ಗೆ ಕೋಳಿ ಸಾಂಬಾರ್‍ನಲ್ಲಿ ನಿದ್ದೆ ಮಾತ್ರೆಗಳನ್ನು ಬೆರೆಸಿ ಊಟ ಮಾಡಿಸಿದ್ದಾಳೆ. ನಂತರ ಅಮ್ರಿಕ್ ಪ್ರಜ್ಞಾಹೀನ ಸ್ಥಿತಿಗೆ ತಲುಪಿದ ಬಳಿಕ ಪ್ರಿಯಕರನನ್ನು ಮನೆಗೆ ಕರೆಸಿ ಇಬ್ಬರು ಸೇರಿ ಆತನ ಕತ್ತು ಹಿಸುಕಿ ಕೊಂದಿದ್ದಾರೆ. ಬಳಿಕ 25 ಅಡಿ ಆಳದ ಶೌಚಾಲಯದ ಗುಂಡಿಯಲ್ಲಿ ಶವವನ್ನು ಹೂತು ಹಾಕಿದ್ದಾರೆ. ಕೊನೆಗೆ ಯಾವುದೇ ಅನುಮಾನ ಬರದಂತೆ 20 ದಿನಗಳ ನಂತರ ನಾಪತ್ತೆ ದೂರು ನೀಡಿದ್ದಾಳೆ. ಈ ಸಂಬಂಧ ಕೊಲೆ ಪ್ರಕರಣ ದಾಖಲಿಸಲಾಗಿದ್ದು, ಶನಿವಾರ ಶವವನ್ನು ಹೊರತೆಗೆಯಲಾಗಿದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆಯಲ್ಲಿ ರಾಹುಲ್ ಗಾಂಧಿ ಬುಲೆಟ್ ಸವಾರಿ – ವೀಡಿಯೋ ವೈರಲ್

    Live Tv
    [brid partner=56869869 player=32851 video=960834 autoplay=true]

  • ಪಾಕಿಸ್ತಾನದಲ್ಲಿ ದಿ ಮೋಸ್ಟ್ ವಾಟೆಂಡ್ ಭಯೋತ್ಪಾದಕ ಹತ್ಯೆ

    ಪಾಕಿಸ್ತಾನದಲ್ಲಿ ದಿ ಮೋಸ್ಟ್ ವಾಟೆಂಡ್ ಭಯೋತ್ಪಾದಕ ಹತ್ಯೆ

    ಚಂಡೀಗಢ: ಅನೇಕ ಭಯೋತ್ಪಾದನೆ ಪ್ರಕರಣಗಳಲ್ಲಿ ಹೆಸರು ಕೇಳಿಬರುತ್ತಿದ್ದ ದಿ ಮೋಸ್ಟ್ ವಾಟೆಂಡ್ ಖಲಿಸ್ತಾನಿ ಭಯೋತ್ಪಾದಕ ಹರ್ವಿಂದರ್ ಸಿಂಗ್ ರಿಂದಾ ಪಾಕಿಸ್ತಾನದಲ್ಲಿ (Pakistan) ಸಾವನ್ನಪ್ಪಿದ್ದಾನೆ ಎಂದು ಪಂಜಾಬ್ ಪೊಲೀಸ್ ಮೂಲಗಳು (Punjab Police sources) ತಿಳಿಸಿವೆ.

    ಹರ್ವಿಂದರ್ ಸಿಂಗ್ ರಿಂದಾನ್ನನ್ನು ಪಾಕಿಸ್ತಾನದಲ್ಲಿ ಗುಂಡು ಹಾರಿಸಿ ಹತ್ಯೆಗೈಯಲಾಗಿದೆ ಎಂದು ದ್ಯಾವಿಂದರ್ ಭಂಬಿಹಾ ಎಂಬ ದರೋಡೆಕೋರರ ಗ್ಯಾಂಗ್ ಸೋಶಿಯಲ್ ಮೀಡಿಯಾದಲ್ಲಿ ಹೇಳಿಕೊಂಡಿದೆ. ಇದನ್ನೂ ಓದಿ: ಪಂಚಾಯತ್ ಚುನಾವಣೆಯಲ್ಲಿ ಸೋತ ವ್ಯಕ್ತಿಗೆ ಗ್ರಾಮಸ್ಥರೇ 2 ಕೋಟಿ ನಗದು, ಕಾರು ಉಡುಗೊರೆ ಕೊಟ್ರು

    ಮೇ ತಿಂಗಳಲ್ಲಿ ಪಂಜಾಬ್ ಪೊಲೀಸ್ ಗುಪ್ತಚರ ಕೇಂದ್ರ ಕಚೇರಿಯ ಮೇಲೆ ರಾಕೆಟ್ ಪ್ರೊಪೆಲ್ಡ್ ಗ್ರೆನೇಡ್ (ಆರ್‌ಪಿಜಿ) ದಾಳಿ ಮತ್ತು ಲುಧಿಯಾನ ಕೋರ್ಟ್ ಸ್ಫೋಟಕದ ಮಾಸ್ಟರ್ ಮೈಂಡ್ ಹರ್ವಿಂದರ್ ಸಿಂಗ್ ರಿಂದಾ ಆಗಿದ್ದನು. ಅಲ್ಲದೇ ಖ್ಯಾತ ಪಂಜಾಬಿ ಗಾಯಕ ಸಿಧು ಮೂಸ್ ವಾಲಾ ಅವರ ಹತ್ಯೆ ಪ್ರಕರಣದಲ್ಲೂ ಇವನ ಹೆಸರು ಕೇಳಿಬಂದಿತ್ತು. ಈತ ಅನೇಕ ಭಯೋತ್ಪಾದನೆ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಮತ್ತು ನಿಷೇಧಿತ ಖಲಿಸ್ತಾನಿ ಸಂಘಟನೆ ಬಬ್ಬರ್ ಖಾಲ್ಸಾ ಇಂಟರ್‍ನ್ಯಾಶನಲ್ ಸದಸ್ಯನಾಗಿದ್ದ. ಇದನ್ನೂ ಓದಿ: ಮಗನಿಂದಲೇ ಮಾಜಿ ನೌಕಾಪಡೆ ಅಧಿಕಾರಿಯ ಹತ್ಯೆ – ದೇಹದ ಭಾಗಗಳು ಕೊಳದಲ್ಲಿ ಪತ್ತೆ

    ಹರ್ವಿಂದರ್ ಸಿಂಗ್ ರಿಂದಾ ಯಾರು?
    ದರೋಡೆಕೋರರು ಮತ್ತು ಪಾಕಿಸ್ತಾನಿ ಮೂಲದ ಭಯೋತ್ಪಾದಕ ಗುಂಪುಗಳ ನಡುವಿನ ಪ್ರಮುಖ ಕೊಂಡಿಯಾಗಿದ್ದ ಹರ್ವಿಂದರ್ ಸಿಂಗ್ ರಿಂದಾ ರಾಷ್ಟ್ರೀಯ ಸುರಕ್ಷತೆಗೆ ಬೆದರಿಕೆಯೊಡ್ಡಿದ್ದ. ಡ್ರಗ್ಸ್ ಮತ್ತು ದೊಡ್ಡ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಗಡಿಯಿಂದ ಆಚೆಗೆ ಕಳ್ಳಸಾಗಾಟಣೆ ಮಾಡುತ್ತಿದ್ದ. ಮೇ ತಿಂಗಳಿನಲ್ಲಿ ಹರಿಯಾಣದಲ್ಲಿ ವಾಹನದಿಂದ ಶಸ್ತ್ರಾಸ್ತ್ರ ಮತ್ತು ಸ್ಫೋಟಕಗಳನ್ನು ವಶಪಡಿಸಿಕೊಂಡು ಈತನ ವಿರುದ್ಧ ಚಾರ್ಜ್ ಶೀಟ್ ಸಲ್ಲಿಸಲಾಗಿತ್ತು.

    Live Tv
    [brid partner=56869869 player=32851 video=960834 autoplay=true]

  • ಪಂಜಾಬ್‌ನಲ್ಲಿ ಬೆಳ್ಳಂಬೆಳಗ್ಗೆ 4.1 ತೀವ್ರತೆಯ ಭೂಕಂಪ

    ಪಂಜಾಬ್‌ನಲ್ಲಿ ಬೆಳ್ಳಂಬೆಳಗ್ಗೆ 4.1 ತೀವ್ರತೆಯ ಭೂಕಂಪ

    ಚಂಡೀಗಢ: ಪಂಜಾಬ್‌ನ (Punjab) ಅಮೃತಸರದಲ್ಲಿ (Amritsar) ಸೋಮವಾರ ಮುಂಜಾನೆ 4.1 ತೀವ್ರತೆಯ ಭೂಕಂಪ (Earthquake) ಸಂಭವಿಸಿದೆ ಎಂದು ಭಾರತದ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.

    ಮುಂಜಾನೆ 3:42ರ ವೇಳೆಗೆ ಪಂಜಾಬ್‌ನ ಅಮೃತಸರದಲ್ಲಿ ಭೂಕಂಪ ಉಂಟಾಗಿದ್ದು, ಅದರ ಕೇಂದ್ರ ಬಿಂದುವನ್ನು ನೆಲದಿಂದ 120 ಕಿ.ಮೀ ಆಳದಲ್ಲಿ ಪತ್ತೆಹಚ್ಚಲಾಗಿದೆ.

    ಕಳೆದ ಕೆಲ ದಿನಗಳಿಂದ ಉತ್ತರ ಭಾರತದಾದ್ಯಂತ ಒಂದಾದಮೇಲೊಂದರಂತೆ ಭೂಕಂಪಗಳು ಸಂಭವಿಸುತ್ತಲೇ ಇದೆ. ಇದರಿಂದ ಜನರಲ್ಲಿ ಆತಂಕ ಮೂಡಿದೆ. ಭಾನುವಾರ ದೆಹಲಿ-ಎನ್‌ಸಿಆರ್‌ನಲ್ಲಿ ಪ್ರಬಲವಾದ ಭೂಕಂಪ ಸಂಭವಿಸಿದೆ. ನ್ಯೂ ತೆಹ್ರಿ, ಪಿಥೋರಗಢ, ಬಾಗೇಶ್ವರ್, ಪೌರಿ ಹಾಗೂ ಇತರ ನಗರಗಳು ಸೇರಿದಂತೆ ಉತ್ತರಾಖಂಡದ ಕೆಲ ಭಾಗಗಳಲ್ಲಿ ಕಂಪನದ ಅನುಭವವಾಗಿದೆ. ಇದನ್ನೂ ಓದಿ:  ಮಂಡ್ಯದಲ್ಲಿ ರಸ್ತೆ ಗುಂಡಿಗೆ ನಿವೃತ್ತ ಯೋಧ ಬಲಿ

    ನೆರೆಯ ನೇಪಾಳದಲ್ಲಿ ಒಂದೇ ವಾರದಲ್ಲಿ 2 ಬಾರಿ ತೀವ್ರಗತಿಯ ಭೂಕಂಪ ಉಂಟಾಗಿದೆ. ಶನಿವಾರ ನೇಪಾಳದಲ್ಲಿ 5.4 ತೀವ್ರತೆಯ ಭೂಕಂಪ ಉಂಟಾಗಿದೆ. ಬುಧವಾರವೂ 6.3 ತೀವ್ರತೆಯ ಭೂಕಂಪ ಉಂಟಾಗಿದ್ದು, 6 ಮಂದಿ ಸಾವನ್ನಪ್ಪಿದ್ದಾರೆ. ಹಲವೆಡೆ ಕಟ್ಟಡ, ಭೂಕುಸಿತಗಳೂ ಸಂಭವಿಸಿದೆ. ಇದನ್ನೂ ಓದಿ: ಶಿರಾಡಿ ಘಾಟ್ ರಸ್ತೆ ದುರಸ್ಥಿಗೆ ಮನವಿ- ಉದ್ಯಮಿಗಳಿಂದ ಸಂಸದ ವೀರೇಂದ್ರ ಹೆಗ್ಡೆಗೆ ಪತ್ರ

    Live Tv
    [brid partner=56869869 player=32851 video=960834 autoplay=true]

  • ಪಂಜಾಬ್‌ನಲ್ಲಿ ಶಸ್ತ್ರಾಸ್ತ್ರ ನಿಯಂತ್ರಣ ಬಿಗಿ – ಹಿಂಸೆ ವೈಭವೀಕರಿಸುವ ಹಾಡುಗಳು ಬ್ಯಾನ್

    ಪಂಜಾಬ್‌ನಲ್ಲಿ ಶಸ್ತ್ರಾಸ್ತ್ರ ನಿಯಂತ್ರಣ ಬಿಗಿ – ಹಿಂಸೆ ವೈಭವೀಕರಿಸುವ ಹಾಡುಗಳು ಬ್ಯಾನ್

    ಚಂಡೀಗಢ: ಪಂಜಾಬ್ (Punjab) ಸರ್ಕಾರ ರಾಜ್ಯದ ಕುಖ್ಯಾತ ಬಂದೂಕು ಸಂಸ್ಕೃತಿಗೆ (Gun Culture) ಕಡಿವಾಣ ಹಾಕಿದ್ದು, ಶಸ್ತ್ರಾಸ್ತ್ರ (Arms)ನಿಯಂತ್ರಣವನ್ನು ಬಿಗಿಗೊಳಿಸಿದೆ. ಮುಖ್ಯಮಂತ್ರಿ ಭಗವಂತ್ ಮಾನ್ (Bhagwant Mann) ಅವರು ಆನ್‌ಲೈನ್ ಮತ್ತು ಆಫ್‌ಲೈನ್‌ನಲ್ಲಿ ಸಾರ್ವಜನಿಕ ಶಸ್ತ್ರಾಸ್ತ್ರಗಳ ಪ್ರದರ್ಶನವನ್ನು ನಿಷೇಧಿಸುವುದು ಸೇರಿದಂತೆ ಗನ್ ಮಾಲೀಕತ್ವ ಮತ್ತು ಪ್ರದರ್ಶನಕ್ಕೆ ಸಂಬಂಧಿಸಿದಂತೆ ಕಟ್ಟುನಿಟ್ಟಿನ ಸೂಚನೆಗಳನ್ನು ನೀಡಿದ್ದಾರೆ. ಶಸ್ತ್ರಾಸ್ತ್ರಗಳು ಅಥವಾ ಹಿಂಸೆಯನ್ನು ವೈಭವೀಕರಿಸುವ ಹಾಡುಗಳನ್ನು (Songs) ಕೂಡಾ ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

    ಮೂಲಗಳ ಪ್ರಕಾರ ಇದುವರೆಗೆ ನೀಡಲಾದ ಎಲ್ಲಾ ಶಸ್ತ್ರಾಸ್ತ್ರ ಪರವಾನಗಿಗಳನ್ನು ಮುಂದಿನ 3 ತಿಂಗಳೊಳಗೆ ಕೂಲಂಕುಷವಾಗಿ ಪರಿಶೀಲಿಸಲಾಗುವುದು. ಪರವಾನಗಿದಾರರಲ್ಲಿ ಶಸ್ತ್ರಾಸ್ತ್ರ ಹೊಂದಿರಲು ಜಿಲ್ಲಾಧಿಕಾರಿಗಳಿಗೆ ತೃಪ್ತಿದಾಯಕ ಕಾರಣಗಳು ಸಿಗಲಿಲ್ಲವೆಂದಾದರೆ ಹೊಸ ಪರವಾನಗಿಯನ್ನು ನೀಡಲಾಗುವುದಿಲ್ಲ ಎಂದು ಸೂಚನೆಯಲ್ಲಿ ತಿಳಿಸಲಾಗಿದೆ.

    ಮಾನವನ ಜೀವನಕ್ಕೆ, ವೈಯಕ್ತಿಕ ಸುರಕ್ಷತೆಗೆ ಅಪಾಯವನ್ನುಂಟುಮಾಡುವ ಶಸ್ತ್ರಾಸ್ತ್ರಗಳನ್ನು ಅಜಾಗರೂಕರಾಗಿ ಬಳಕೆ ಮಾಡುವುದು ಅಥವಾ ಸಂಭ್ರಮಾಚರಣೆಯ ವೇಳೆ ಗುಂಡು ಹಾರಿಸುವುದು ಶಿಕ್ಷಾರ್ಹ ಅಪರಾಧವಾಗಿದೆ. ಈ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಪ್ರಕರಣಗಳನ್ನು ದಾಖಲಿಸಲಾಗುತ್ತದೆ. ಇದನ್ನೂ ಓದಿ: ಅಯೋಧ್ಯೆ ಮಸೀದಿ ನಿರ್ಮಾಣ ಕಾರ್ಯ 2023ಕ್ಕೆ ಪೂರ್ಣ ಸಾಧ್ಯತೆ – ಟ್ರಸ್ಟ್‌

    ಭಗವಂತ್ ಮಾನ್ ಅವರು ಮೇ ತಿಂಗಳಿನಲ್ಲಿಯೇ ಹಾಡುಗಳ ಮೂಲಕ ಶಸ್ತ್ರಾಸ್ತ್ರಗಳನ್ನು ಅಥವಾ ಹಿಂಸೆಯನ್ನು ವೈಭವೀಕರಿಸುವ ಗಾಯಕರಿಗೆ ಎಚ್ಚರಿಕೆ ನೀಡಿದ್ದರು. ಅಂತಹ ಪ್ರವೃತ್ತಿಯನ್ನು ಬೆಂಬಲಿಸುವುದಕ್ಕೆ ಅವರು ಅಸಮ್ಮತಿ ಸೂಚಿಸಿದರು. ಇಂತಹ ಕೆಲಸಗಳಲ್ಲಿ ಭಾಗಿಯಾಗುವವರೊಂದಿಗೆ ಕಠಿಣವಾಗಿ ವ್ಯವಹರಿಸಲಾಗುವುದು ಎಂದು ಹೇಳಿದ್ದರು.

    ಇಂತಹ ಹಾಡುಗಳ ಮೂಲಕ ಸಮಾಜ ವಿರೋಧಿ ಚಟುವಟಿಕೆಗಳಿಗೆ ಉತ್ತೇಜನ ನೀಡುವ ಬದಲು ಸಹೋದರತ್ವ, ಶಾಂತಿ ಮತ್ತು ಸೌಹಾರ್ದತೆಯ ಬಂಧಗಳನ್ನು ಬಲಪಡಿಸುವ ಮೂಲಕ ಪಂಜಾಬ್‌ನ ನೀತಿಗಳನ್ನು ಅನುಸರಿಸುವಂತೆ ಮಾನ್ ಗಾಯಕರಿಗೆ ಕರೆ ನೀಡಿದ್ದರು. ಇದನ್ನೂ ಓದಿ: ತನ್ನ ಹೆಂಡತಿಯನ್ನ ಭಾರೀ ಮೊತ್ತಕ್ಕೆ ಮಾರಾಟ ಮಾಡಿದ ಗಂಡ – ಮದುವೆನೂ ಮಾಡಿಸಿದ

    Live Tv
    [brid partner=56869869 player=32851 video=960834 autoplay=true]

  • ಪ್ರತಿಭಟನೆ ವೇಳೆ ಶಿವಸೇನೆ ಮುಖಂಡ ಗುಂಡಿನ ದಾಳಿಗೆ ಬಲಿ

    ಪ್ರತಿಭಟನೆ ವೇಳೆ ಶಿವಸೇನೆ ಮುಖಂಡ ಗುಂಡಿನ ದಾಳಿಗೆ ಬಲಿ

    ಚಂಡೀಗಢ: ಪ್ರತಿಭಟನೆ ವೇಳೆ ಶಿವಸೇನೆಯ ಮುಖಂಡ (Shiv Sena Leader) ಸುಧೀರ್ ಸೂರಿ (Sudhir Suri) ಅವರ ಮೇಲೆ ದುಷ್ಕರ್ಮಿಯೊಬ್ಬ ಗುಂಡಿನ ದಾಳಿ ನಡೆಸಿದ್ದು, ಅವರು ಸಾವನ್ನಪ್ಪಿರುವ ಘಟನೆ ಪಂಜಾಬ್‌ನ (Punjab) ಅಮೃತಸರದಲ್ಲಿ (Amritsar) ಶುಕ್ರವಾರ ನಡೆದಿದೆ.

    ವರದಿಗಳ ಪ್ರಕಾರ ಪಂಜಾಬ್‌ನ ಅಮೃತಸರದಲ್ಲಿ ಶಿವಸೇನೆಯ ಮುಖಂಡರು ದೇವಸ್ಥಾನದ ಹೊರಗಡೆ ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಗುಂಪಿನಲ್ಲಿದ್ದ ಅಪರಿಚಿತ ವ್ಯಕ್ತಿಯೊಬ್ಬ ಗುಂಡು ಹಾರಿಸಿದ್ದಾನೆ. ಇದನ್ನೂ ಓದಿ: ಗುಜರಾತ್‌ ಚುನಾವಣೆ – ಮಾಜಿ ಪತ್ರಕರ್ತ, ಟಿವಿ ಆ್ಯಂಕರ್‌ ಇಸುದನ್‌ ಗಧ್ವಿ ಎಎಪಿ ಸಿಎಂ ಅಭ್ಯರ್ಥಿ

    ಈ ವರ್ಷ ಜುಲೈನಲ್ಲಿ ನಿರ್ದಿಷ್ಟ ಸಮುದಾಯದ ಬಗ್ಗೆ ಆಕ್ಷೇಪಾರ್ಹ ಭಾಷಣ ಮಾಡಿ, ಧಾರ್ಮಿಕ ಭಾವನೆಯನ್ನು ಕೆರಳಿಸಿರುವ ಆರೋಪದ ಮೇಲೆ ಸೂರಿ ಬಂಧನಕ್ಕೊಳಗಾಗಿ ಬಿಡುಗಡೆಯೂ ಆಗಿದ್ದರು. ಆಗಿನಿಂದ ಸುಧೀರ್ ಸೂರಿ ಅವರು ಸುದ್ದಿಯಲ್ಲಿದ್ದರು. ಇದನ್ನೂ ಓದಿ: ಮನೆಯಲ್ಲಿದ್ದ ಫ್ರಿಡ್ಜ್ ಬ್ಲಾಸ್ಟ್ – ಮೂವರು ಸಾವು, ಇಬ್ಬರಿಗೆ ಗಾಯ

    ಇದು 2 ದಿನಗಳ ಅವಧಿಯಲ್ಲಿ ಶಿವಸೇನೆ ನಾಯಕರ ಮೇಲೆ ನಡೆದಿರುವ 2ನೇ ದಾಳಿಯಾಗಿದೆ. ಗುರುವಾರ ಮುಂಜಾನೆ ಟಿಬ್ಬಾ ರಸ್ತೆಯಲ್ಲಿರುವ ಗ್ರೆವಾಲ್ ಕಾಲೋನಿಯಲ್ಲಿ ಪಂಜಾಬ್ ಶಿವಸೇನೆಯ ನಾಯಕ ಅಶ್ವನಿ ಚೋಪ್ರಾ ಅವರ ಮನೆ ಬಳಿ ಇಬ್ಬರು ಸೈಕಲ್‌ನಲ್ಲಿ ಬಂದ ವ್ಯಕ್ತಿಗಳು ಗುಂಡು ಹಾರಿಸಿದ್ದರು.

    Live Tv
    [brid partner=56869869 player=32851 video=960834 autoplay=true]

  • ಹತ್ಯೆ ತನಿಖೆ ಬಗ್ಗೆ ಅಸಮಾಧಾನ – ದೇಶ ತೊರೆಯುವುದಾಗಿ ಸಿಧು ಮೂಸೆವಾಲಾ ತಂದೆ ಹೇಳಿಕೆ

    ಹತ್ಯೆ ತನಿಖೆ ಬಗ್ಗೆ ಅಸಮಾಧಾನ – ದೇಶ ತೊರೆಯುವುದಾಗಿ ಸಿಧು ಮೂಸೆವಾಲಾ ತಂದೆ ಹೇಳಿಕೆ

    ಚಂಡೀಗಢ: ಶೂಟೌಟ್‌ಗೆ ಬಲಿಯಾಗಿದ್ದ ಪಂಜಾಬ್‌ನ ಖ್ಯಾತ ಗಾಯಕ (Punjabi Singer) ಸಿಧು ಮೂಸೆವಾಲಾ (Sidhu Moosewala) ಅವರ ತಂದೆ ಬಲ್ಕೌರ್ ಸಿಂಗ್ (Balkaur Singh) ಹತ್ಯೆಯ ತನಿಖೆಯ ಬಗ್ಗೆ ಭಾನುವಾರ ಅಸಮಾಧಾನ ಹೊರಹಾಕಿದ್ದಾರೆ. ಇದು ಯೋಜಿತ ಕೊಲೆ. ಆದರೆ ಗ್ಯಾಂಗ್ ವಾರ್ ಎಂದು ತೋರಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಆರೋಪಿಸಿದ್ದು, ತಾವು ದೇಶ ತೊರೆಯುವುದಾಗಿ ಹೇಳಿದ್ದಾರೆ.

    ನನ್ನ ಮಗನನ್ನು ಯೋಜಿತ ರೀತಿಯಲ್ಲಿ ಹತ್ಯೆ ಮಾಡಲಾಗಿದೆ. ಪೊಲೀಸರು ಇದನ್ನು ಗ್ಯಾಂಗ್ ವಾರ್ ಎಂದು ತೋರಿಸಲು ಪ್ರಯತ್ನಿಸುತ್ತಿದ್ದಾರೆ. ನನ್ನ ಸಮಸ್ಯೆಯನ್ನು ಆಲಿಸಲು ಡಿಜಿಪಿ ಬಳಿ ಸಮಯ ಕೇಳಿದ್ದೇನೆ. ಕೊಲೆಯ ತನಿಖೆ ಸರಿಯಾದ ರೀತಿಯಲ್ಲಿ ನಡೆಯುತ್ತದೆಯೇ ಎಂಬುದನ್ನು ನಾನು 1 ತಿಂಗಳು ಕಾದು ನೋಡುತ್ತೇನೆ. ಅಲ್ಲಿಯವರೆಗೆ ಯಾವ ಪರಿಹಾರವೂ ಸಿಕ್ಕಿಲ್ಲ ಎಂದಾದರೆ, ಎಫ್‌ಐಆರ್ ಅನ್ನು ಹಿಂತೆಗೆದುಕೊಂಡು ದೇಶವನ್ನೇ ತೊರೆಯುತ್ತೇನೆ ಎಂದು ಬಲ್ಕೌರ್ ಸಿಂಗ್ ಬೆದರಿಕೆ ಹಾಕಿದ್ದಾರೆ. ಇದನ್ನೂ ಓದಿ: ಮತ್ತೆ 40% ಸದ್ದು- ಗುತ್ತಿಗೆದಾರನಿಂದ ದಯಾಮರಣ ಕೋರಿ ರಾಷ್ಟ್ರಪತಿಗೆ ಅರ್ಜಿ

    ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಭದ್ರತೆಯನ್ನು ಎಎಪಿ ಸರ್ಕಾರ ರದ್ದು ಮಾಡಿದ 1 ದಿನದ ಬಳಿಕ ಈ ವರ್ಷ ಮೇ 29 ರಂದು ಅವರ ಹತ್ಯೆ ನಡೆದಿತ್ತು. ಕೆಲ ಕಿಡಿಗೇಡಿಗಳು ಮೂಸೆವಾಲಾ ಅವರ ಮೇಲೆ ಗುಂಡಿನ ದಾಳಿ ಮಾಡಿ ಹತ್ಯೆ ನಡೆಸಿದ್ದರು. ಘಟನೆಗೆ ಸಂಬಂಧಿಸಿದಂತೆ ಪಂಜಾಬ್ ಹಾಗೂ ದೆಹಲಿ ಪೊಲೀಸರು ಲಾರೆನ್ಸ್ ಬಿಷ್ಣೋಯ್ ಹಾಗೂ ಅವನ ಕೆಲ ಸಹಚರರನ್ನು ಬಂಧಿಸಿದ್ದರು. ಇದನ್ನೂ ಓದಿ: ಗಾಂಧಿ ಪ್ರತಿಮೆಯನ್ನು ಹಾನಿಗೊಳಿಸಿದ ದುಷ್ಕರ್ಮಿಗಳು

    Live Tv
    [brid partner=56869869 player=32851 video=960834 autoplay=true]

  • ಉಗ್ರರನ್ನು ಮಟ್ಟ ಹಾಕಲು ಉತ್ತರ ಭಾರತದ ಹಲವೆಡೆ NIA ರೇಡ್

    ಉಗ್ರರನ್ನು ಮಟ್ಟ ಹಾಕಲು ಉತ್ತರ ಭಾರತದ ಹಲವೆಡೆ NIA ರೇಡ್

    ನವದೆಹಲಿ: ಭಾರತ (India) ಮತ್ತು ವಿದೇಶಗಳಲ್ಲಿ ನೆಲೆಸಿರುವ ಭಯೋತ್ಪಾದಕರು (Terrorists), ಗ್ಯಾಂಗ್‌ಸ್ಟರ್‌ಗಳು (Gangsters), ಮಾದಕವಸ್ತು ಕಳ್ಳಸಾಗಣೆದಾರರ (Smugglers) ಸಂಪರ್ಕವನ್ನು ಕೆಡವಲು ರಾಷ್ಟ್ರೀಯ ತನಿಖಾ ದಳ (NIA) ಮಂಗಳವಾರ ಪಂಜಾಬ್, ಹರಿಯಾಣ, ರಾಜಸ್ಥಾನ ಹಾಗೂ ದೆಹಲಿ-ಎನ್‌ಸಿಆರ್ ಪ್ರದೇಶಗಳಲ್ಲಿ ದಾಳಿ ನಡೆಸಿದೆ.

    ಇಂದು ಬೆಳಗ್ಗೆ ಎನ್‌ಐಎ ಉತ್ತರ ಭಾರತದ ಹಲವು ಭಾಗಗಳಲ್ಲಿ ತನ್ನ ಕಾರ್ಯಾಚರಣೆಯನ್ನು ಪ್ರಾರಂಭಿಸಿದೆ. ಸದ್ಯ ಇಲ್ಲಿಯವರೆಗೆ ಯಾವುದೇ ಬಂಧನ ವರದಿಯಾಗಿಲ್ಲ. ಇದನ್ನೂ ಓದಿ: ತಾಯಿ ಸನ್‍ಸ್ಕ್ರೀನ್ ಕಳಿಸಿದ್ರು, ನಾನು ಬಳಸಲ್ಲ: ರಾಹುಲ್ ಗಾಂಧಿ

    ಈ ಹಿಂದೆ ಅಕ್ಟೋಬರ್ 14 ರಂದು, ಡ್ರೋನ್ ಡೆಲಿವರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆ ಸೇರಿದಂತೆ ಹಲವು ಸ್ಥಳಗಳಲ್ಲಿ ಎನ್‌ಐಎ ಶೋಧ ನಡೆಸಿತ್ತು.

    ಕಳೆದ 9 ತಿಂಗಳುಗಳಲ್ಲಿ, ನೆರೆಯ ಪಾಕಿಸ್ತಾನದಿಂದ 191 ಡ್ರೋನ್‌ಗಳು ಭಾರತದ ಭೂಪ್ರದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿರುವುದನ್ನು ಭದ್ರತಾ ಪಡೆಗಳು ಗಮನಿಸಿವೆ. ಸೋಮವಾರ ಮುಂಜಾನೆಯೂ ಭಾರತ – ಪಾಕಿಸ್ತಾನ ಗಡಿಯಲ್ಲಿ ಪಂಜಾಬ್ ಅಮೃತಸರ ಸೆಕ್ಟರ್‌ನಲ್ಲಿ ಭಾರತವನ್ನು ಪ್ರವೇಶಿಸಲು ಯತ್ನಿಸುತ್ತಿದ್ದ ಸುಮಾರು 12 ಕೆಜಿ ಸರಕನ್ನು ಒಯ್ಯುತ್ತಿದ್ದ ಡ್ರೋನ್ ಅನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದಾರೆ. ಇದನ್ನೂ ಓದಿ: ನನಗೆ AAP ತೊರೆಯುವಂತೆ ಒತ್ತಡ ಹೇರಿದ್ದಾರೆ – ಸಿಸೋಡಿಯಾ ಆರೋಪ, CBI ಪ್ರತಿಕ್ರಿಯೆ

    Live Tv
    [brid partner=56869869 player=32851 video=960834 autoplay=true]