Tag: punjab

  • ಟೆಂಡರ್‌ನಲ್ಲಿ 1 ಪರ್ಸೆಂಟ್‌ ಕಮಿಷನ್‌ ತೆಗೆದುಕೊಂಡಿದ್ದಕ್ಕೆ ಸಚಿವನನ್ನು ವಜಾಗೊಳಿಸಿದ ಭಗವಂತ್‌ ಮಾನ್‌

    ಟೆಂಡರ್‌ನಲ್ಲಿ 1 ಪರ್ಸೆಂಟ್‌ ಕಮಿಷನ್‌ ತೆಗೆದುಕೊಂಡಿದ್ದಕ್ಕೆ ಸಚಿವನನ್ನು ವಜಾಗೊಳಿಸಿದ ಭಗವಂತ್‌ ಮಾನ್‌

    ಚಂಡೀಗಢ: ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಇಂದು ಆರೋಗ್ಯ ಸಚಿವ ವಿಜಯ್ ಸಿಂಗ್ಲಾ ಅವರನ್ನು ಭ್ರಷ್ಟಾಚಾರದ ಆರೋಪದ ಮೇಲೆ ಸಂಪುಟದಿಂದ ವಜಾಗೊಳಿಸಿದ್ದಾರೆ ಎಂದು ವರದಿಯಾಗಿದೆ.

    ಸಿಂಗ್ಲಾ ಅವರು ಟೆಂಡರ್‌ಗಳಲ್ಲಿ ಶೇಕಡಾ ಒಂದರಷ್ಟು ಕಮಿಷನ್‌ಗೆ ಬೇಡಿಕೆ ಇಡುತ್ತಿದ್ದರು ಎನ್ನಲಾಗಿದೆ. ಅವರನ್ನು ಪದಚ್ಯುತಿಗೊಳಿಸಿದ ಕೂಡಲೇ ಪಂಜಾಬ್ ಭ್ರಷ್ಟಾಚಾರ ನಿಗ್ರಹ ದಳದಿಂದ ಬಂಧಿಸಲಾಯಿತು. ಇದನ್ನೂ ಓದಿ: ವಂದೇ ಮಾತರಂಗೂ ರಾಷ್ಟ್ರಗೀತೆಯಷ್ಟೇ ಗೌರವ ಕೋಡಿ – ದೆಹಲಿ ಹೈಕೋರ್ಟ್‌ಗೆ ಪಿಐಎಲ್

    Bhagwant Mann

    ಸಚಿವರ ವಿರುದ್ಧ ದೂರು ಬಂದ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಭಗವಂತ್ ಮಾನ್ ಈ ಕ್ರಮ ಕೈಗೊಂಡಿದ್ದಾರೆ. ಮುಖ್ಯಮಂತ್ರಿಯೊಬ್ಬರು ತಮ್ಮದೇ ಸಂಪುಟ ಸಚಿವರ ವಿರುದ್ಧ ಈ ರೀತಿಯ ಕಠಿಣ ಕ್ರಮ ಕೈಗೊಂಡಿರುವುದು ದೇಶದ ಇತಿಹಾಸದಲ್ಲಿ ಇದು ಎರಡನೇ ಬಾರಿ. ಇದಕ್ಕೂ ಮೊದಲು, ಆಮ್ ಆದ್ಮಿ ಪಕ್ಷದ ಸಂಚಾಲಕ ಮತ್ತು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು 2015 ರಲ್ಲಿ ಭ್ರಷ್ಟಾಚಾರ ಆರೋಪದ ಮೇಲೆ ತಮ್ಮ ಸಂಪುಟದ ಸಚಿವರೊಬ್ಬರನ್ನು ವಜಾಗೊಳಿಸಿದ್ದರು.

    ಭ್ರಷ್ಟಾಚಾರವನ್ನು ಸಹಿಸಲಾಗುವುದಿಲ್ಲ ಎಂದು ಸಿಎಂ ಭಗವಂತ್‌ ಮಾನ್ ವೀಡಿಯೋದಲ್ಲಿ ಸಂದೇಶ ರವಾನಿಸಿದ್ದಾರೆ. ʼಸಿಂಗ್ಲಾ ಅವರು ಭ್ರಷ್ಟಾಚಾರ ಮಾಡಿರುವುದಾಗಿ ಒಪ್ಪಿಕೊಂಡಿದ್ದಾರೆ. ಜನರು ಸಾಕಷ್ಟು ಭರವಸೆಯೊಂದಿಗೆ ಎಎಪಿಗೆ ಮತ ಹಾಕಿದ್ದಾರೆ. ನಾವು ಅದನ್ನು ಉಳಿಸಿಕೊಳ್ಳಬೇಕು. ಭಾರತ ಮಾತೆಗೆ ಅರವಿಂದ್ ಕೇಜ್ರಿವಾಲ್ ಅವರಂತಹ ಮಗ ಮತ್ತು ಭಗವಂತ್ ಮಾನ್ ಅವರಂತಹ ಸೈನಿಕ ಇರುವವರೆಗೂ ಭ್ರಷ್ಟಾಚಾರದ ವಿರುದ್ಧದ ಮಹಾಯುದ್ಧ ಮುಂದುವರಿಯುತ್ತದೆʼ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕುತುಬ್ ಮಿನಾರ್ ಬಳಿ ಪೂಜೆ ಮಾಡುವ ಹಕ್ಕು ಯಾರಿಗೂ ಇಲ್ಲ – ASI ಖಡಕ್ ಉತ್ತರ

    ಅರವಿಂದ್ ಕೇಜ್ರಿವಾಲ್ ಅವರ ಭ್ರಷ್ಟಾಚಾರ ವಿರೋಧಿ ಮಾದರಿಗೆ ಅನುಗುಣವಾಗಿ ದೊಡ್ಡ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಪಕ್ಷ ಹೇಳಿದೆ. ಸಿಂಗ್ಲಾ ವಿರುದ್ಧ ಪ್ರಕರಣ ದಾಖಲಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ.

    ಭಗವಂತ್‌ ಮಾನ್‌ ಅವರ ನಿರ್ಧಾರವನ್ನು ಪ್ರಶಂಶಿಸಿ ಟ್ವೀಟ್‌ ಮಾಡಿರುವ ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌, ನಿಮ್ಮ ಬಗ್ಗೆ ಹೆಮ್ಮೆ ಇದೆ ಭಗವಂತ್‌ ಮಾನ್. ನಿಮ್ಮ ಕಾರ್ಯ ನನ್ನ ಕಣ್ಣಲ್ಲಿ ನೀರು ತರಿಸಿದೆ. ಇಡೀ ರಾಷ್ಟ್ರ ಇಂದು ಎಎಪಿ ಬಗ್ಗೆ ಹೆಮ್ಮೆ ಪಡುತ್ತಿದೆ‌ ಎಂದು ಹೇಳಿದ್ದಾರೆ.

  • ಭಾರತದ ರೈಲು ಹಳಿಗಳನ್ನು ಸ್ಫೋಟಿಸಲು ಪಾಕಿಸ್ತಾನದ ಐಎಸ್‌ಐ ಪ್ಲಾನ್: ಗುಪ್ತಚರ ಎಚ್ಚರಿಕೆ

    ಭಾರತದ ರೈಲು ಹಳಿಗಳನ್ನು ಸ್ಫೋಟಿಸಲು ಪಾಕಿಸ್ತಾನದ ಐಎಸ್‌ಐ ಪ್ಲಾನ್: ಗುಪ್ತಚರ ಎಚ್ಚರಿಕೆ

    ನವದೆಹಲಿ: ಪಾಕಿಸ್ತಾನದ ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್(ಐಎಸ್‌ಐ) ಭಾರತದ ಪಂಜಾಬ್ ಹಾಗೂ ಸುತ್ತಮುತ್ತಲಿನ ರೈಲು ಹಳಿಗಳನ್ನು ವಿಶೇಷವಾಗಿ ಸರಕು ಸಾಗಣೆ ರೈಲುಗಳ ಹಳಿಗಳನ್ನು ಧ್ವಂಸಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಭಾರತದ ಗುಪ್ತಚರ ಇಲಾಖೆ ಎಚ್ಚರಿಸಿದೆ.

    ಪಂಜಾಬ್ ಹಾಗೂ ಅದರ ಸುತ್ತಮುತ್ತಲಿನ ರಾಜ್ಯಗಳಲ್ಲಿ ರೈಲ್ವೇ ಹಳಿಯನ್ನು ಗುರಿಯಾಗಿಸಿಕೊಂಡಿರುವ ಪಾಕಿಸ್ತಾನದ ಐಎಸ್‌ಐ ದೊಡ್ಡ ಸಂಚೊಂದನ್ನು ರೂಪಿಸಿದೆ. ರೈಲ್ವೇ ಹಳಿಗಳನ್ನು ಸ್ಫೋಟಿಸಲು ಐಎಸ್‌ಐ ಯೋಜನೆ ರೂಪಿಸಿದೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಜೈಲಿನಲ್ಲಿದ್ದ ನವಜೋತ್‌ ಸಿಂಗ್‌ ಸಿಧು ಆಸ್ಪತ್ರೆಗೆ ದಾಖಲು

    ರೈಲ್ವೇ ಹಳಿಗಳನ್ನು ಗುರಿಯಾಗಿಸಿಕೊಂಡಿರುವ ಐಎಸ್‌ಐ ಭಾರತದಲ್ಲಿ ತನ್ನ ಕಾರ್ಯಕರ್ತರಿಗೆ ಭಾರೀ ಪ್ರಮಾಣದ ಹಣ ನೀಡುತ್ತಿದೆ. ಭಾರತದಲ್ಲಿರುವ ಪಾಕಿಸ್ತಾನದ ಸ್ಲೀಪರ್ ಸೆಲ್‌ಗಳಿಗೆ ಭಯೋತ್ಪಾದನಾ ಚಟುವಟಿಕೆ ನಡೆಸಲು ಭಾರೀ ಮೊತ್ತದ ಹಣ ನೀಡಲಾಗುತ್ತಿದೆ ಎಂದಿದೆ. ಇದನ್ನೂ ಓದಿ: 154 ವರ್ಷ ಹಳೆಯ ಫೋಟೋ ಪತ್ತೆ – ಜ್ಞಾನವಾಪಿಯಲ್ಲಿ ಇದೆಯಾ ಹನುಮಂತನ ವಿಗ್ರಹ?

  • ಜೈಲಿನಲ್ಲಿದ್ದ ನವಜೋತ್‌ ಸಿಂಗ್‌ ಸಿಧು ಆಸ್ಪತ್ರೆಗೆ ದಾಖಲು

    ಜೈಲಿನಲ್ಲಿದ್ದ ನವಜೋತ್‌ ಸಿಂಗ್‌ ಸಿಧು ಆಸ್ಪತ್ರೆಗೆ ದಾಖಲು

    ಚಂಡೀಗಢ: 34 ವರ್ಷಗಳ ಹಿಂದೆ 65 ವರ್ಷದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿಂತೆ ಜೈಲು ಶಿಕ್ಷೆ ಅನುಭವಿಸುತ್ತಿರುವ ಕಾಂಗ್ರೆಸ್‌ ನಾಯಕ ನವಜೋತ್‌ ಸಿಂಗ್‌ ಸಿಧು ಆಸ್ಪತ್ರೆಗೆ ದಾಖಲಾಗಿದ್ದಾರೆ.

    ಪಟಿಯಾಲ ಸೆಂಟ್ರಲ್‌ ಜೈಲಿನಲ್ಲಿದ್ದ ಸಿಧು ಅವರನ್ನು ಪಟಿಯಾಲದಲ್ಲಿರುವ ರಾಜೇಂದ್ರ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿದೆ. ಸಿಧು ಅವರು ವೇಯ್ಟ್‌ ಅಲರ್ಜಿಯಿಂದ (Weight allergy) ಬಳಲುತ್ತಿದ್ದಾರೆ ಎಂದು ಸಿಧು ಪರ ವಕೀಲರು ತಿಳಿಸಿದ್ದಾರೆ. ಇದನ್ನೂ ಓದಿ: 154 ವರ್ಷ ಹಳೆಯ ಫೋಟೋ ಪತ್ತೆ – ಜ್ಞಾನವಾಪಿಯಲ್ಲಿ ಇದೆಯಾ ಹನುಮಂತನ ವಿಗ್ರಹ?

    SUPREME COURT

    ಏನಿದು ಪ್ರಕರಣ?
    ಸಿಧು ಮತ್ತು ಅವರ ಗೆಳೆಯ ರೂಪಿಂದರ್‌ ಸಿಂಗ್‌ ಸಂಧು ಅವರು ಪಟಿಯಾಲಾದಲ್ಲಿ 1988ರ ಡಿಸೆಂಬರ್‌ 27ರಂದು ರಸ್ತೆ ಮಧ್ಯದಲ್ಲಿ ನಿಲ್ಲಿಸಲಾಗಿದ್ದ ಜಿಪ್ಸಿಯಲ್ಲಿ ಕುಳಿತಿದ್ದರು. ಆ ಸಂದರ್ಭದಲ್ಲಿ ಗುರ್ನಾಮ್‌ ಸಿಂಗ್‌ ಮತ್ತು ಇತರ ಇಬ್ಬರು ಕಾರಿನಲ್ಲಿ ಅಲ್ಲಿಗೆ ಬಂದರು. ರಸ್ತೆ ಮಧ್ಯದಿಂದ ಜಿಪ್ಸಿ ತೆಗೆಯುವಂತೆ ಸಿಧು ಮತ್ತು ಸಂಧು ಅವರನ್ನು ಗುರ್ನಾಮ್‌ ಕೋರಿದ್ದರು. ಇದರಿಂದ ವಾಗ್ವಾದ ನಡೆದು, ಸಿಧು ಅವರು ಗುರ್ನಾಮ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಗುರ್ನಾಮ್‌ ಸಿಂಗ್‌ ಅವರು ಆಸ್ಪತ್ರೆಯಲ್ಲಿ ನಂತರ ಮೃತಪಟ್ಟರು.

    ಪ್ರಕರಣಕ್ಕೆ ಸಂಬಂಧಿಸಿದಂತೆ ಪಟಿಯಾಲದ ಸೆಷನ್ಸ್‌ ನ್ಯಾಯಾಲಯವು ಸಿಧು ಅವರನ್ನು 1999ರಲ್ಲಿ ಖುಲಾಸೆಗೊಳಿಸಿತ್ತು. ಇದನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಮೇಲ್ಮನವಿಯ ವಿಚಾರಣೆ ನಡೆಸಿದ ಪಂಜಾಬ್‌–ಹರಿಯಾಣ ಹೈಕೋರ್ಟ್‌, ಸಿಧು ಅವರಿಗೆ 2006ರಲ್ಲಿ ಮೂರು ವರ್ಷ ಶಿಕ್ಷೆ ವಿಧಿಸಿತ್ತು. ಇದನ್ನೂ ಓದಿ: ‘ಧಾಕಡ್’ ಸೋಲಿಗೆ ಕಂಗೆಟ್ಟ ಕಂಗನಾ ರಣಾವತ್ : ವೀಕೆಂಡ್ ನಲ್ಲೂ ವೀಕ್ ಕಲೆಕ್ಷನ್

    jail

    ಸಿಧು ಅವರು ಸುಪ್ರೀಂ ಕೋರ್ಟ್‌ಗೆ 2018ರಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಪ್ರಕರಣವು 30 ವರ್ಷ ಹಳೆಯದು ಮತ್ತು ಸಿಧು ಅವರು ಆಯುಧವನ್ನೇನೂ ಬಳಸಿಲ್ಲ ಎಂದು ಅಭಿಪ್ರಾಯಪಟ್ಟ ಕೋರ್ಟ್‌, ಶಿಕ್ಷೆಯನ್ನು ರದ್ದು ಮಾಡಿತು. 1,000 ದಂಡವನ್ನು ಮಾತ್ರ ವಿಧಿಸಿತು. ಈ ಆದೇಶವನ್ನು ಮರುಪರಿಶೀಲಿಸಬೇಕು ಮತ್ತು ಸಿಧು ಅವರ ವಿರುದ್ಧ ಹೆಚ್ಚು ಗುರುತರವಾದ ಆರೋಪಗಳನ್ನು ಹೊರಿಸಬೇಕು ಎಂದು ಗುರ್ನಾಮ್‌ ಅವರ ಕುಟುಂಬವು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿತ್ತು. ಈ ಅರ್ಜಿಯನ್ನು ಸಿಧು ವಿರೋಧಿಸಿದ್ದರು. ಈಗ ಅದೇ ಅರ್ಜಿಯ ಆಧಾರದಲ್ಲಿ ಸಿಧು ಅವರಿಗೆ ಈಗ ಒಂದು ವರ್ಷ ಶಿಕ್ಷೆಯಾಗಿದೆ.

  • ಕೊಳವೆಬಾವಿಗೆ ಬಿದ್ದು ಬಾಲಕ ಸಾವು

    ಕೊಳವೆಬಾವಿಗೆ ಬಿದ್ದು ಬಾಲಕ ಸಾವು

    ಚಂಡೀಗಢ: 300ಅಡಿ ಆಳದ ಕೊಳವೆ ಬಾವಿಗೆ ಬಿದ್ದ ಬಾಲಕನೊಬ್ಬ ಮೃತಪಟ್ಟ ಘಟನೆ ಪಂಜಾಬ್‍ನ ಹೋಶಿಯಾರ್‌ಪುರದ ಗಾದ್ರಿವಾಲಾ ಗ್ರಾಮದಲ್ಲಿ ನಡೆದಿದೆ.

    ರಿತೀಕ್ (6) ಕೊಳವೆಬಾವಿಗೆ ಬಿದ್ದ ಬಾಲಕ. ರಕ್ಷಣಾ ಕಾರ್ಯಾಚರಣೆಗಾಗಿ ಸೇನೆಯನ್ನು ಕರೆಸಲಾಗಿತ್ತು. ಈ ರಕ್ಷಣಾ ಕಾರ್ಯಾಚರಣೆ ಒಂಬತ್ತು ಗಂಟೆಗಳ ಕಾಲ ನಡೆಯಿತು.

    ಕೊಳವೆಬಾವಿ ಕಡೆಗೆ ಸುರಂಗ ಕೊರೆಯಲು ಜೆಸಿಬಿ ಯಂತ್ರವನ್ನು ಅಳವಡಿಸಲಾಗಿದೆ. ಬಾಲಕ ಕೊಳವೆಬಾವಿಗೆ ತಲೆಕೆಳಗಾಗಿ ಬಿದ್ದಿದ್ದರಿಂದ ಯಂತ್ರದ ಸಹಾಯದಿಂದ ಬಾಲಕನನ್ನು ಹೊರತೆಗೆಯಲು ಯತ್ನಿಸಿದ್ದಾರೆ. ಆದರೆ ಒಂದೂವರೆ ಗಂಟೆಯಲ್ಲಿ 15 ಅಡಿ ಮಾತ್ರ ಅಗೆಯಲು ಈ ಜೆಸಿಬಿಗೆ ಸಾಧ್ಯವಾಯಿತು. ಬಾಲಕ ಕೊಳವೆಬಾವಿಯಲ್ಲಿ 65 ಅಡಿಯ ಜಾಗದಲ್ಲಿ ಸಿಲುಕಿಕೊಂಡಿದ್ದನು. ಇದನ್ನೂ ಓದಿ: ಭಾರತ ಸೇರಿದಂತೆ 15 ದೇಶಗಳಿಗೆ ಪ್ರಯಾಣ ನಿಷೇಧಿಸಿದ ಸೌದಿ ಅರೇಬಿಯಾ

    ಹೆಚ್ಚಿನ ಚಿಕಿತ್ಸೆಗಾಗಿ ಚಿಕಿತ್ಸೆಗಾಗಿ ರಿತಿಕ್‍ನನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ರಿತಿಕ್ ಬೀದಿ ನಾಯಿಗಳಿಂದ ರಕ್ಷಿಸಿಕೊಳ್ಳಲು ಕೊಳವೆ ಬಾವಿಗೆ ಬಿದ್ದಿದ್ದಾನೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: ಕ್ವಾಡ್ ಸಭೆಗಾಗಿ ನರೇಂದ್ರ ಮೋದಿ ಜಪಾನ್ ಪ್ರವಾಸ

  • ಇನ್ಮುಂದೆ ಜೈಲಿನಲ್ಲಿ ವಿಐಪಿ ರೂಂ ಇರಲ್ಲ- ಪಂಜಾಬ್ ಸರ್ಕಾರ ಘೋಷಣೆ

    ಇನ್ಮುಂದೆ ಜೈಲಿನಲ್ಲಿ ವಿಐಪಿ ರೂಂ ಇರಲ್ಲ- ಪಂಜಾಬ್ ಸರ್ಕಾರ ಘೋಷಣೆ

    ಚಂಡೀಗಢ: ವಿಐಪಿ ಸಂಸ್ಕೃತಿಯನ್ನು ಕೊನೆಗೊಳಿಸುವ ಪ್ರಯತ್ನದಲ್ಲಿರುವ ಪಂಜಾಬ್‍ನ ಭಗವಂತ್ ಮಾನ್ ಸರ್ಕಾರವು ಜೈಲಿನಲ್ಲಿರುವ ಎಲ್ಲಾ ವಿಐಪಿ ಕೊಠಡಿಗಳನ್ನು ಜೈಲು ನಿರ್ವಹಣಾ ಬ್ಲಾಕ್‍ಗಳನ್ನಾಗಿ ಪರಿವರ್ತಿಸಲು ಘೋಷಿಸಿದೆ.

    ಈ ಬಗ್ಗೆ ಸಿಎಂ ಭಗವಂತ್ ಮಾನ್ ಅವರು ಮಾತನಾಡಿ, ಜೈಲು ಸಿಬ್ಬಂದಿಯ ಸುಗಮ ಕಾರ್ಯ ನಿರ್ವಹಣೆಯನ್ನು ಖಚಿತ ಪಡಿಸಿಕೊಳ್ಳಲು ಜೂಲ್ಲಿನ ಎಲ್ಲಾ ವಿಐಪಿ ಕೊಠಡಿಗಳನ್ನು ಜೈಲು ನಿರ್ವಹಣಾ ಬ್ಲಾಕ್‍ಗಳನ್ನಾಗಿ ಪರಿವರ್ತಿಸಲಾಗಿದೆ ಎಂದು ತಿಳಿಸಿದ್ದಾರೆ.

    ಈ ಹಿನ್ನೆಲೆಯಲ್ಲಿ ಜೈಲಿನಲ್ಲಿ ನಿರ್ಲಕ್ಷ್ಯ ವಹಿಸಿದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಹೊಣೆ ಮಾಡಿ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು. ಇದನ್ನೂ ಓದಿ: ಸಿಐಡಿ ಅಧಿಕಾರಿಗಳಿಂದ ಬೆಂಗ್ಳೂರಿನ 7 ಕಡೆ ದಾಳಿ – ಮಹತ್ವದ ದಾಖಲೆ ವಶಕ್ಕೆ

    Bhagwant Mann

    ಜೈಲು ಕೈದಿಗಳಿಂದ ಮೊಬೈಲ್ ಫೋನ್ ವಶಪಡಿಸಿಕೊಂಡ ಬಗ್ಗೆ ಮಾತನಾಡಿದ ಅವರು, ಜೈಲು ಆವರಣದಲ್ಲಿ ದರೋಡೆಕೋರರಿಂದ 710 ಮೊಬೈಲ್ ಫೋನ್‍ಗಳನ್ನು ವಶಪಡಿಸಿಕೊಂಡಿದ್ದೇವೆ. ಅಷ್ಟೇ ಅಲ್ಲದೇ ಫೋನ್‍ಗಳನ್ನು ಒಳಗೆ ಪಡೆದವರ ವಿರುದ್ಧವೂ ಕ್ರಮ ಕೈಗೊಂಡಿದ್ದೇವೆ ಎಂದು ಸ್ಪಷ್ಟಪಡಿಸಿದರು. ಇದನ್ನೂ ಓದಿ: ಕೆಲಸದಲ್ಲಿ ತೃಪ್ತಿ ಇಲ್ಲ – ಡೆತ್ ನೋಟ್ ಬರೆದು ಪೊಲೀಸ್ ಆತ್ಮಹತ್ಯೆ

  • ಬೇಲ್‌ನಿಂದ ಹೊರಬಂದು ಮದುವೆಯಾಗು ಎಂದ – ರೌಡಿ ಅಂತ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರೇಯಸಿಯನ್ನೇ ಕೊಂದ

    ಬೇಲ್‌ನಿಂದ ಹೊರಬಂದು ಮದುವೆಯಾಗು ಎಂದ – ರೌಡಿ ಅಂತ ರಿಜೆಕ್ಟ್‌ ಮಾಡಿದ್ದಕ್ಕೆ ಪ್ರೇಯಸಿಯನ್ನೇ ಕೊಂದ

    ಚಂಡೀಗಢ: ಕ್ರಿಮಿನಲ್‌ ಹಿನ್ನೆಲೆ ಇರುವ ನಿನ್ನನ್ನು ಮದುವೆಯಾಗಲ್ಲ ಎಂದು ನಿರಾಕರಿಸಿದ್ದಕ್ಕೆ ಪ್ರೇಯಸಿಯನ್ನೇ ಹತ್ಯೆ ಮಾಡಿರುವ ಘಟನೆ ಪಂಜಾಬ್‌ನ ಸೈನ್‌ಪುರ ಗ್ರಾಮದಲ್ಲಿ ನಡೆದಿದೆ.

    ಸೆಕ್ಷನ್ 307 ರ ಅಡಿಯಲ್ಲಿ ಬಂಧಿತನಾಗಿದ್ದ ಯುವಕ ಇತ್ತೀಚೆಗೆ ಜಾಮೀನಿನ ಮೇಲೆ ಹೊರಬಂದಿದ್ದ. ಅಪರಾಧ ಹಿನ್ನೆಲೆಯುಳ್ಳವನಾಗಿದ್ದರಿಂದ ಆತನನ್ನು ಮದುವೆಯಾಗಲು ಗೆಳತಿ ನಿರಾಕರಿಸಿದ್ದಾಳೆ. ನಿರಾಕರಣೆ ಸಹಿಸಲಾಗದೆ ಆತ ಮತ್ತು ಆತನ ಸ್ನೇಹಿತರು ಯುವತಿ ಮನೆಗೆ ನುಗ್ಗಿ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದಾರೆ. ಇದನ್ನೂ ಓದಿ: ನಾಳೆ ನೀವು ಕೋರ್ಟ್ ಚೇಂಬರ್ ಒಳಗೆ ಏನಿದೆ ಎಂದು ಕೇಳುತ್ತೀರಿ: ತಾಜ್ ಮಹಲ್ ಕುರಿತ ಅರ್ಜಿ ತಿರಸ್ಕರಿಸಿದ ಕೋರ್ಟ್

    ನನ್ನ ಸಹೋದರಿ ಪೂಜಾಳನ್ನು ಹತ್ಯೆ ಮಾಡಿರುವ ರಾಹುಲ್‌ ನಮಗೆ ಸೋದರ ಮಾವ. ಈತನಿಗೆ ಕ್ರಿಮಿನಲ್‌ ಹಿನ್ನೆಲೆಯಿತ್ತು. ಹೀಗಾಗಿ ಆತನನ್ನು ಮದುವೆಯಾಗಲು ಪೂಜಾ ನಿರಾಕರಿಸಿದ್ದಳು. ಆರೋಪಿಗಳ ವಿರುದ್ಧ ಪೊಲೀಸ್‌ ಆಡಳಿತ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮೃತ ಪೂಜಾ ಸಹೋದರಿ ರಜನಿ ಬಾಲಾ ಒತ್ತಾಯಿಸಿದ್ದಾರೆ.

    ದೀನಾನಗರ ಪೊಲೀಸ್ ಠಾಣೆಯ ಎಸ್‌ಹೆಚ್‌ಒ ಕಪಿಲ್ ಕೌಶಲ್, ಸಾಯಿನ್‌ಪುರ ಗ್ರಾಮದಲ್ಲಿ ಯುವತಿಯನ್ನು ಕೊಂದಿರುವ ಬಗ್ಗೆ ಮಾಹಿತಿ ಸಿಕ್ಕಿದೆ. ಈ ಪ್ರಕರಣದಲ್ಲಿ ಮೃತಳ ಸಹೋದರಿಯ ಹೇಳಿಕೆಯನ್ನು ದಾಖಲಿಸಿಕೊಳ್ಳಲಾಗಿದೆ. ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದ್ದು, ಆರೋಪಿಗಳು ತಲೆಮರೆಸಿಕೊಂಡಿದ್ದಾರೆ. ಅವರನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ವರ್ಷದೊಳಗೆ ಮೊಮ್ಮಗು ನೀಡಿ, ಇಲ್ಲ 5 ಕೋಟಿ ಪರಿಹಾರ ಕೊಡಿ – ಮಗ, ಸೊಸೆ ವಿರುದ್ಧ ಕೋರ್ಟ್ ಮೆಟ್ಟಿಲೇರಿದ ಅತ್ತೆ

  • ಪಂಜಾಬ್‌ನಲ್ಲಿ ಪೊಲೀಸ್ ಗುಪ್ತಚರ ಪ್ರಧಾನ ಕಚೇರಿ ಮೇಲೆಯೇ ಗ್ರೆನೇಡ್ ದಾಳಿ

    ಪಂಜಾಬ್‌ನಲ್ಲಿ ಪೊಲೀಸ್ ಗುಪ್ತಚರ ಪ್ರಧಾನ ಕಚೇರಿ ಮೇಲೆಯೇ ಗ್ರೆನೇಡ್ ದಾಳಿ

    ಚಂಡೀಗಢ: ಪೊಲೀಸ್‍ನ ಗುಪ್ತಚರ ಪ್ರಧಾನ ಕಚೇರಿ ಮೇಲೆಯೇ ರಾಕೆಟ್ ಲಾಂಚರ್ ಬಳಸಿ ಗ್ರೆನೇಡ್ ದಾಳಿ ನಡೆಸಿದ ಘಟನೆ ಪಂಜಾಬ್‍ನ ಮೊಹಾಲಿಯಲ್ಲಿ ನಡೆದಿದೆ.

    ಎಸ್‍ಎಎಸ್ ನಗರದದಲ್ಲಿರುವ ಪೊಲೀಸ್ ಇಂಟಲಿಜೆನ್ಸ್ ಹೆಡ್ ಕ್ವಾರ್ಟರ್ಸ್‍ನಲ್ಲಿ ಸಣ್ಣ ಸ್ಫೋಟ ಸಂಭವಿಸಿದೆ. ಗ್ರೆನೇಟ್ ಸ್ಫೋಟವು ಚಿಕ್ಕ ಪ್ರಮಾಣದಲ್ಲಿ ಆಗಿದ್ದು, ಸಂಪೂರ್ಣವಾಗಿ ಕಚೇರಿಯ ಗಾಜುಗಳು ಒಡೆದು ಹೋಗಿದೆ. ಘಟನೆಯಲ್ಲಿ ಯಾವುದೇ ಭಯೋತ್ಪಾದಕ ಕೃತ್ಯಗಳು ನಡೆದಿಲ್ಲ ಎಂದು ಪೊಲೀಸ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದು, ಇದನ್ನು ಆರ್‌ಪಿಜಿ ದಾಳಿ ಶಂಕಿಸಿದ್ದಾರೆ.

    ಸ್ಫೋಟದಿಂದಾಗಿ ಯಾವುದೇ ಹಾನಿ ಆಗಿಲಿಲ್ಲ. ಹಿರಿಯ ಅಧಿಕಾರಿಗಳು ಸ್ಥಳದಲ್ಲಿದ್ದು, ತನಿಖೆ ನಡೆಸುತ್ತಿದ್ದಾರೆ. ಫೋರೆನ್ಸಿಕ್ ತಂಡಗಳನ್ನು ಕರೆಸಲಾಗಿದೆ ಘಟನೆ ನಡೆದ ಪ್ರದೇಶದಲ್ಲಿ ಪೊಲೀಸರು ಸುತ್ತುವರಿದಿದ್ದಾರೆ. ವಿಧಿ ವಿಜ್ಞಾನ ಪ್ರಯೋಗಾಲಯದ ತಂಡ ಸ್ಥಳದಲ್ಲಿದೆ. ಎಂದು ಮೊಹಾಲಿ ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ದೆಹಲಿಗೆ ತೆರಳಿದ ಸಿಎಂ ಬಸವರಾಜ ಬೊಮ್ಮಾಯಿ

    ಈ ಬಗ್ಗೆ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಟ್ವೀಟ್ ಮಾಡಿದ್ದು, ಮೊಹಾಲಿಯಲ್ಲಿರುವ ಪಂಜಾಬ್ ಪೆÇಲೀಸ್‍ನ ಇಂಟೆಲಿಜೆನ್ಸ್ ವಿಂಗ್ ಪ್ರಧಾನ ಕಚೇರಿಯಲ್ಲಿ ಸ್ಫೋಟ ಸಂಭವಿಸಿದ ಕೆಲವೇ ಗಂಟೆಗಳಲ್ಲಿ ತನಿಖೆಯನ್ನು ಪ್ರಾರಂಭಿಸಲಾಗಿದೆ. ದುಷ್ಕರ್ಮಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಪಂಜಾಬ್‍ನ ವಾತಾವರಣವನ್ನು ಹಾಳುಮಾಡಲು ಪ್ರಯತ್ನಿಸಿದವರನ್ನು ಬಿಡಲಾಗುವುದಿಲ್ಲ ಎಂದು ಭರವಸೆ ನೀಡಿದ್ದಾರೆ. ಇದನ್ನೂ ಓದಿ: ಪ್ರಯಾಣಿಕರು ರಾತ್ರಿ ಮೊಬೈಲ್‍ನಲ್ಲಿ ಗಟ್ಟಿಯಾಗಿ ಮಾತನಾಡುವಂತಿಲ್ಲ: ಭಾರತೀಯ ರೈಲ್ವೆ

  • ಹುತಾತ್ಮ ಯೋಧ ಹರ್ದೀಪ್ ಸಿಂಗ್ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದ ಭಗವಂತ್ ಮಾನ್

    ಹುತಾತ್ಮ ಯೋಧ ಹರ್ದೀಪ್ ಸಿಂಗ್ ಕುಟುಂಬಕ್ಕೆ 1 ಕೋಟಿ ಪರಿಹಾರ ಘೋಷಿಸಿದ ಭಗವಂತ್ ಮಾನ್

    ಚಂಡೀಗಢ: ಅರುಣಾಚಲ ಪ್ರದೇಶದಲ್ಲಿ ಗಸ್ತು ತಿರುಗುತ್ತಿದ್ದ ವೇಳೆ ಪ್ರಾಣ ಕಳೆದುಕೊಂಡ ಯೋಧ ಸುಬೇದಾರದ ಹರ್ದೀಪ್ ಸಿಂಗ್ ಅವರ ಕುಟುಂಬದ ಒಬ್ಬ ಸದಸ್ಯರಿಗೆ ಸರ್ಕಾರಿ ಉದ್ಯೋಗದ ಜೊತೆಗೆ 1 ಕೋಟಿ ರೂ. ಪರಿಹಾರ ನೀಡುವುದಾಗಿ ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಘೋಷಿಸಿದ್ದಾರೆ.

    Bhagwant Mann

    ಅರುಣಾಚಲ ಪ್ರದೇಶದ ಜೆಸಿಒ ಆಗಿ ಕಾರ್ಯನಿರ್ವಹಿಸುತ್ತಿದ್ದ ಹುತಾತ್ಮ ಯೋಧರನ್ನು ಅಗಲಿದ ಕುಟುಂಬಕ್ಕೆ ಸಂತಾಪ ಸೂಚಿಸಿದ ಭಗವಂತ್ ಮಾನ್ ಅವರು, ಹರ್ದೀಪ್ ಸಿಂಗ್ ಅವರು ದೇಶದ ಏಕತೆಯನ್ನು ರಕ್ಷಿಸಲು ಅತ್ಯಂತ ಸಮರ್ಪಣಾಭಾವವನ್ನು ಪ್ರದರ್ಶಿಸಿದ್ದಾರೆ ಮತ್ತು ಅವರ ತ್ಯಾಗ ಇತರ ಸೈನಿಕರಿಗೆ ದೇಶ ಭಕ್ತಿಯನ್ನು ಹೆಚ್ಚಿಸುವುದರ ಜೊತೆಗೆ ಬದ್ಧತೆಯಿಂದ ತಮ್ಮ ಕರ್ತವ್ಯವನ್ನು ನಿರ್ವಹಿಸಲು ಪ್ರೇರೇಪಿಸುತ್ತದೆ ಎಂದು ಹೇಳಿದ್ದಾರೆ. ಇದನ್ನೂ ಓದಿ: ಮಲಯಾಳಿ ಯೂಟ್ಯೂಬರ್ ರಿಫಾ ಮೆಹ್ನು ದುಬೈನಲ್ಲಿ ಅನುಮಾನಾಸ್ಪದ ಸಾವು

    ಪಂಜಾಬ್‍ನ (ಪಟಿಯಾಲಾ) ಸುಬೇದಾರ್ ಹರ್ದೀಪ್ ಸಿಂಗ್ ಹೋಶಿಯಾರ್‍ಪುರ ಜಿಲ್ಲೆಯ ಗರ್‍ಡಿವಾಲಾ ತೆಹಸಿಲ್‍ನ ಬರಂಡಾ ಗ್ರಾಮದವರಾಗಿದ್ದು, ಪತ್ನಿ ರವೀಂದರ್ ಕೌರ್, ಓರ್ವ ಪುತ್ರಿ ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ. ಇದನ್ನೂ ಓದಿ: ನಡುರಸ್ತೆಯಲ್ಲಿ ಗೂಂಡಾಗಳಿಂದ 15 ಬಾರಿ ಫೈರಿಂಗ್ – ಇಬ್ಬರಿಗೆ ಗಾಯ

  • ಬಿಜೆಪಿ ಮುಖಂಡ ತಜೀಂದರ್ ಪಾಲ್ ಸಿಂಗ್ ಬಗ್ಗಾಗೆ ಸದ್ಯಕ್ಕಿಲ್ಲ ಬಂಧನ

    ಬಿಜೆಪಿ ಮುಖಂಡ ತಜೀಂದರ್ ಪಾಲ್ ಸಿಂಗ್ ಬಗ್ಗಾಗೆ ಸದ್ಯಕ್ಕಿಲ್ಲ ಬಂಧನ

    ಚಂಡೀಗಢ: ಪಂಜಾಬ್ ಹಾಗೂ ಹರಿಯಾಣ ಹೈಕೋರ್ಟ್ ಬಿಜೆಪಿ ಮುಖಂಡ ತಜೀಂದರ್ ಪಾಲ್ ಸಿಂಗ್ ಬಗ್ಗಾ ಅವರ ಬಗ್ಗೆ ಮಧ್ಯರಾತ್ರಿಯ ವಿಚಾರಣೆಯಲ್ಲಿ ಮೇ 10ರ ವರೆಗೆ ಅವರನ್ನು ಬಂಧಿಸದಂತೆ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

    ಬಗ್ಗಾ ಮನವಿ ಮೇರೆಗೆ ಪ್ರಕರಣದ ಬಗೆಗಿನ ವಿಚಾರಣೆ ಮೇ 10ರಂದು ನಡೆಯಲಿದ್ದು, ಅಲ್ಲಿಯವರೆಗೆ ಯಾವುದೇ ಬಲವಂತದ ಕ್ರಮಗಳನ್ನು ತೆಗೆದುಕೊಳ್ಳಬಾರದೆಂದು ಪಂಜಾಬ್ ಹಾಗೂ ಹರಿಯಾಣ ಹೈಕೋರ್ಟ್ ಆದೇಶ ನೀಡಿದೆ. ಇದನ್ನೂ ಓದಿ: ಮಸೀದಿಗಳ ಮೈಕ್ ತೆರವಿಗೆ ನಾಳೆಯೇ ಡೆಡ್‍ಲೈನ್ – ದೇಗುಲಗಳಲ್ಲಿ 3 ಬಾರಿ ಮಂತ್ರ ಘೋಷ

    ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಪಂಜಾಬ್‌ನ ಪೊಲೀಸರು ಬಿಜೆಪಿ ಮುಖಂಡ ತಜೀಂದರ್ ಪಾಲ್ ಸಿಂಗ್ ಬಗ್ಗಾ ಅವರನ್ನು ದೆಹಲಿಯಲ್ಲಿ ಬಂಧಿಸಿದ್ದರು. ದೆಹಲಿ ಮುಖ್ಯಮಂತ್ರಿ ಅವರಿಗೆ ಜೀವ ಬೆದರಿಕೆ ಹಾಕದ್ದ ಹಿನ್ನೆಲೆಯಲ್ಲಿ ಆಪ್ ನಾಯಕ ಸನ್ನಿಸಿಂಗ್ ಅವರು ತಜೀಂದರ್ ಪಾಲ್ ಸಿಂಗ್ ಅವರ ವಿರುದ್ಧ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿ ವದಂತಿಗಳನ್ನು ಹರಡುತ್ತಿದ್ದಾರೆ. ಧಾರ್ಮಿಕ ಮತ್ತು ಕೋಮು ದ್ವೇಷವನ್ನು ಸೃಷ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿ ಸೈಬರ್ ಸೆಲ್‌ನಲ್ಲಿ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಕಾರ್ಯದರ್ಶಿಯನ್ನು ಬಂಧಿಸಿದ್ದರು. ಇದನ್ನೂ ಓದಿ: ದಡೂತಿ ದೇಹದ ಪೊಲೀಸರಿಗೆ ಬಾಡಿ ಕರಗಿಸೋ ಟಾಸ್ಕ್ – ಬೆಸ್ಟ್ ಆಫರ್ ಕೊಟ್ಟ ಎಸ್‌ಪಿ

    ಬಗ್ಗಾ ವಿರುದ್ಧ ಭಾರತೀಯ ದಂಡಸಂಹಿತೆ 153-ಎ(ಧರ್ಮ, ಜನಾಂಗ, ಸ್ಥಳ ಮುಂತಾದವುಗಳ ಆಧಾರದ ಮೇಲೆ ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸುವುದು), 505(ಯಾವುದೇ ಹೇಳಿಕೆ, ವದಂತಿ ಅಥವಾ ವರದಿ ಮಾಡುವುದು, ಪ್ರಕಟಿಸುವುದು ಅಥವಾ ಪ್ರಸಾರ ಮಾಡುವುದು) ಹಾಗೂ 506(ಬೆದರಿಕೆ) ಸಂಬಂಧಿತ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

  • ಆಪ್ ಪಂಜಾಬ್ ಪೊಲೀಸರನ್ನು ದುರಪಯೋಗಪಡಿಸಿಕೊಂಡಿದೆ: ಬಿಜೆಪಿ ಆರೋಪ

    ಆಪ್ ಪಂಜಾಬ್ ಪೊಲೀಸರನ್ನು ದುರಪಯೋಗಪಡಿಸಿಕೊಂಡಿದೆ: ಬಿಜೆಪಿ ಆರೋಪ

    ನವದೆಹಲಿ: ಬಿಜೆಪಿ ಮುಖಂಡ ತಜೀಂದರ್ ಪಾಲ್ ಸಿಂಗ್ ಬಗ್ಗಾ ಅವರನ್ನು ಬಂಧಿಸಲು ಪಂಜಾಬ್‍ನ ಆಪ್ ನೇತೃತ್ವದ ಸರ್ಕಾರವು ರಾಜ್ಯ ಪೊಲೀಸ್ ಪಡೆಯನ್ನು ದುರುಪಯೋಗ ಪಡಿಸಿಕೊಂಡಿದೆ ಎಂದು ದೆಹಲಿ ಬಿಜೆಪಿ ಮುಖ್ಯಸ್ಥ ಆದೇಶ್ ಗುಪ್ತಾ ಆರೋಪಿಸಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಜೀಂದರ್ ಪಾಲ್ ಸಿಂಗ್ ವಾಪಸ್ ಮನೆಗೆ ಮರಳಿದ್ದಾರೆ. ಇದು ಪ್ರಜಾಪ್ರಭುತ್ವದ ಮತ್ತು ನ್ಯಾಯದ ವಿಜಯವಾಗಿದೆ. ತಜೀಂದರ್ ಸಿಂಗ್ ಬಿಡುಗೆಡೆಯಿಂದಾಗಿ ಕೇಜ್ರಿವಾಲ್ ಅವರ ದುರಹಂಕಾರ ಮುರಿದಿದೆ. ಅವರು ಬಗ್ಗಾವನ್ನು ಬಂಧಿಸಲು ಪಂಜಾಬ್ ಪೊಲೀಸ್ ಬಲವನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಅಷ್ಟೇ ಅಲ್ಲದೇ ಪೊಲೀಸರು ತಜೀಂದರ್ ಪಾಲ್ ಸಿಂಗ್‍ರನ್ನು ಬಂಧಿಸುವಾಗ ತಂದೆಯೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಎಂದು ಕಿಡಿಕಾರಿದರು.

    ರೈತರಿಗೆ ಆಗುತ್ತಿರುವ ಅನ್ಯಾಯದ ವಿರುದ್ಧ ಧ್ವನಿ ಎತ್ತುವುದು ಮತ್ತು ಕಾಶ್ಮೀರಿ ಪಂಡಿತರಿಗೆ ತೋರಿದ ಅಗೌರವಕ್ಕೆ ಕ್ಷಮೆ ಯಾಚಿಸುವುದು ಅಪರಾಧವಾಗಿದ್ದರೆ, ಪ್ರತಿಯೊಬ್ಬ ಬಿಜೆಪಿ ಕಾರ್ಯಕರ್ತನು ಈ ಅಪರಾಧವನ್ನು ಮುಂದುವರಿಸುತ್ತಾರೆ ಎಂದರು. ಇದನ್ನೂ ಓದಿ: ಕೇಜ್ರಿವಾಲ್ ವಿರುದ್ಧ ಟೀಕೆ- ಪೊಲೀಸರಿಂದ ದೆಹಲಿ ಬಿಜೆಪಿ ಮುಖಂಡ ಅರೆಸ್ಟ್

    ಯಾವುದೇ ರೀತಿಯ ಕ್ರಮಕ್ಕೂ ಬಿಜೆಪಿ ಕಾರ್ಯಕರ್ತರು ಹೆದರುವುದಿಲ್ಲ. ಕೇಜ್ರಿವಾಲ್ ಅವರ ದುರಹಂಕಾರದ ವಿರುದ್ಧ ನಾವು ಹೋರಾಡುತ್ತೇವೆ ಎಂದು ಹೇಳಿದರು. ಇದನ್ನೂ ಓದಿ: ಇದು ಸೇಡಿನ ರಾಜಕಾರಣ: ಬಿಜೆಪಿ ಮುಖಂಡನ ಬಂಧನಕ್ಕೆ ನವಜೋತ್‌ ಸಿಧು ಕಿಡಿ

    ಶುಕ್ರವಾರ ರಾಷ್ಟ್ರ ರಾಜಧಾನಿಯಲ್ಲಿ ಪಂಜಾಬ್ ಪೊಲೀಸರು ಬಂಧಿಸಿದ ನಂತರ ತಜೀಂದರ್ ಸಿಂಗ್ ಮಧ್ಯ ರಾತ್ರಿ ದೆಹಲಿಯಲ್ಲಿರುವ ಅವರ ನಿವಾಸವನ್ನು ತಲುಪಿದರು. ತಜೀಂದರ್‌ ಸಿಂಗ್ ಅವರ ಕುಟುಂಬದ ಸದಸ್ಯರು ದೆಹಲಿಯಲ್ಲಿರುವ ಅವರ ಮನೆಗೆ ಹಿಂದಿರುಗಿದ ನಂತರ ಸಂಭ್ರಮಿಸಿದ್ದರು. ಇದನ್ನೂ ಓದಿ: ಬಿಜೆಪಿ ನಾಯಕನನ್ನು ದೆಹಲಿ ಪೊಲೀಸರಿಗೆ ಮಾತ್ರ ಹಸ್ತಾಂತರಿಸುತ್ತೇವೆ: ಹರಿಯಾಣ ಗೃಹ ಸಚಿವ